ಜನವರಿ 14 ರಿಂದ ಜನವರಿ 24 ರವರೆಗೆ ನಡೆಯಲಿದೆ ಕದ್ರಿ ಶ್ರೀ ಕ್ಷೇತ್ರದ ವರ್ಷಾವಧಿ ಜಾತ್ರೆ

114.5K Views 13 Jan 2025

ಮಂಗಳೂರು: ಇತಿಹಾಸ ಪ್ರಸಿದ್ದ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೆಯು ಇಂದಿನಿಂದ (ಜ.14) ಆರಂಭಗೊಳ್ಳಲಿದೆ.
ಜನವರಿ 24ರ ವರೆಗೆ ನಡೆಯಲಿರುವ ವಾರ್ಷಿಕ ಮಹೋತ್ಸವವು ತಾ.13ರಂದು ರಾತ್ರಿ ಮಹಾಪೂಜೆಯ ಬಳಿಕ ಮುಹೂರ್ತ ಬಲಿ, ದೇವರ ಪ್ರಾರ್ಥನೆಯೊಂದಿಗೆ ತಂತ್ರಿಗಳ ಯಾಗಶಾಲಾ ಪ್ರವೇಶದೊಂದಿಗೆ ಪ್ರಾರಂಭವಾಗುವುದು.


ಇಂದು ಮಂಗಳವಾರ ಮುಂಜಾನೆ ತೀರ್ಥ ಸ್ನಾನ ಆರಂಭಗೊಂಡು, ಕದ್ರಿ ಶ್ರೀ ಯೋಗೀಶ್ವರ ಮಠಾಧಿಪತಿ ಶ್ರೀ ರಾಜಾ ನಿರ್ಮಲ್ ನಾಥಜೀಯವರಿಂದ ತೀರ್ಥ ಸ್ನಾನ ನೆರವೇರುವುದು. ಸಂಜೆ ಗಂಟೆ 6ಕ್ಕೆ ಏಳುಪಟ್ಟಣ ಮೊಗವೀರ ಮಹಾ ಸಭಾದವರಿಂದ ಧ್ವಜಸ್ತಂಭದ ಆರೋಹಣ, ಮಹಾಪೂಜೆ ಬಳಿಕ ಶ್ರೀ ಮಲರಾಯ ದೈವದ ಭಂಡಾರದ ಆಗಮನವಾಗುವುದು. ರಾತ್ರಿ 10ಕ್ಕೆ ಧ್ವಜಬಲಿ, ಕದ್ರಿ ಹತ್ತು ಸಮಸ್ತರಿಂದ ಗರುಡಾರೋಹಣ, ಉತ್ಸವಬಲಿ,ಭೂತಬಲಿ, ಕದ್ರಿ ಕೆಳಗಿನ ಮನೆಯವರಿಂದ ಕಂಚುದೀಪ ಬೆಳಗುವುದು, ದೀಪದಬಲಿ ಉತ್ಸವ , ಸಣ್ಣ ರಥೋತ್ಸವ, ತಪ್ಪಂಗಾಯಿ ನಡೆಯುವುದು.
15, ಬುಧವಾರ ರಾತ್ರಿ ಉತ್ಸವಬಲಿ,ದೀಪದಬಲಿ ಉತ್ಸವ,ಸಣ್ಣ ರಥೋತ್ಸವ ಜರಗಲಿರುವುದು.


ಜ. 16 ರಂದು ಸಂಜೆ ಬಿಕರ್ನಕಟ್ಟೆ ಸವಾರಿ ಬಲಿ, ಜ.17 ರಂದು ಮಲ್ಲಿಕಟ್ಟೆ ಸವಾರಿ ಬಲಿ, ಜ.18 ರಂದು ಮುಂಡಾಣಕಟ್ಟೆ ಸವಾರಿ ಬಲಿ, ಜ.19ರಂದು ಕೊಂಚಾಡಿ ಸವಾರಿ ಬಲಿ, ಅಲ್ಲದೆ ಜ.20 ರಂದು ಏಳನೇ ದೀಪೋತ್ಸವ, ಮಧ್ಯಾಹ್ನ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಲಿದ್ದು , ಜ.21 ರಂದು ಸಂಜೆ ” ಶ್ರೀ ಮನ್ಮಹಾರಥೋತ್ಸವ, ಬೆಳ್ಳಿರಥೋತ್ಸವ, ಚಂದ್ರಮಂಡಲ ಉತ್ಸವದ ಬಳಿಕ ಮಹಾಪೂಜೆ, ಭೂತಬಲಿ ಹಾಗೂ ಕವಾಟ ಬಂಧನ ನೆರವೇರುವುದು.
ಜ..22 ಕವಾಟೋದ್ಘಾಟನೆ, ತುಲಾಭಾರ ಸೇವೆಗಳು ನಡೆಯಲಿದ್ದು, ರಾತ್ರಿ ಚಂದ್ರಮಂಡಲ ಉತ್ಸವ ಬಳಿಕ ಕದ್ರಿ ಹತ್ತು ಸಮಸ್ತರಿಂದ ಧ್ವಜಾವರೋಹಣಗೊಳ್ಳಲಿದೆ.
ಜ.24 ರಂದು‌ ಶ್ರೀ ಮಲರಾಯ ಹಾಗೂ ಪರಿವಾರ ದೈವಗಳ ನೇಮದೊಂದಿಗೆ ವರ್ಷಾವಧಿ ಜಾತ್ರೆ ಸಂಪನ್ನಗೊಳ್ಳಲಿದೆ ಎಂದು ಎ.ಜೆ.ಶೆಟ್ಟಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ರಾಜ್ಯ ಧಾರ್ಮಿಕ ಪರಿಷತ್ ಅಧ್ಯಕ್ಷೆ ಮಲ್ಲಿಕಾ ಪಕಳ, ಜಿಲ್ಲಾ ಧಾರ್ಮಿಕ ಪರಿಷತ್ ಅಧ್ಯಕ್ಷ ಪುಷ್ಪಲತಾ, ಕದ್ರಿ ಕ್ಷೇತ್ರದ ಕಾರ್ಯನಿರ್ವಹಣಾಧಿಕಾರಿ ಪುಷ್ಪಲತಾ, ನಿಕಟಪೂರ್ವ ಕಾರ್ಯನಿರ್ವಾಹಣಾಧಿಕಾರಿ ಪ್ರವೀಣ್, ಕ್ಷೇತ್ರದ ಪರ್ಯಾಯ ಅರ್ಚಕರಾದ ರಾಘವೇಂದ್ರ ಅಡಿಗ, ಪ್ರಮುಖರಾದ ಎಸ್. ಪ್ರದೀಪ ಕುಮಾರ ಕಲ್ಕೂರ, ಸುಧಾಕರ ರಾವ್ ಪೇಜಾವರ ಉಪಸ್ಥಿತರಿದ್ದರು.
ಚಿತ್ರಗಳು :ಸತೀಶ್ ಕಾಪಿಕಾಡ್

Read More News

Scroll to Top