ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆಗಳ ಹಾಗು ಮಹಿಳಾ ಸಂಘಟನೆಗಳ ಒಕ್ಕೂಟ ರಿ. ಮಂಗಳೂರು
ಇದರ ಕೋರಿಕೆಯ ಮೇರೆಗೆ ಮಂಗಳೂರು ಉತ್ತರದ ಶಾಸಕರಾದ ಡಾ ಭರತ್ ಶೆಟ್ಟಿ ಹಾಗು ಮನಪಾ ಶಿಫಾರಸ್ಸಿನಂತೆ , ಮಂಗಳೂರು ನಗರಾಭಿವೃದಿ ಪ್ರಾಧಿಕಾರದ ವತಿಯಿಂದ ನಿರ್ಮಿಸಿದ ಬೋಂದೆಲ್ ಏರ್ ಪೋರ್ಟ್ ರಸ್ತೆಯಲ್ಲಿರುವ ಸಂತ ಕವಿ ಸರ್ವಜ್ಞ ವೃತ್ತದ ನಿರ್ವಹಣೆಯನ್ನು ಮಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ಮಾಡಬೇಕು ಎಂದು ಮಹಾನಗರ ಪಾಲಿಕೆ ಮೇಯರ್ ಮನೋಜ್ ಕುಮಾರ್ ಕೋಡಿಕಲ್ ಅವರಿಗೆ ಮನವಿಯನ್ನು ನೀಡಿ
ವಿನಂತಿಸಲಾಯಿತು.

ಇದಕ್ಕೆ ಸ್ಪಂದಿಸಿದ ಮೇಯರ್ ಅವರು, ಈ ತಿಂಗಳ ಸಾಮಾನ್ಯ ಸಭೆಯಲ್ಲಿ ಇದರ ಬಗೆ ಚರ್ಚಿಸಿ, ಶೀಘ್ರದಲ್ಲಿ ಈಗಿರುವ ಸಮಸ್ಯೆಯನ್ನು ಪರಿಹರಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ.

ಹಾಗೆಯೇ ಮಂಗಳೂರು ಉತ್ತರ ವಿಧಾನ ಸಭಾ ಶಾಸಕರಾದ ಭರತ್ ಶೆಟ್ಟಿ, ಮಂಗಳೂರು ನಗರಾಭಿವೃದ್ದಿ ಪ್ರಾಧಿಕಾರ ಅಧ್ಯಕ್ಷರಾದ ಸದಾಶಿವ ಉಳ್ಳಾಲ್, ಸ್ಥಳೀಯ ಮಹಾನಗರ ಪಾಲಿಕೆ ಸದಸ್ಯರಾದ ಲೋಹಿತ್ ಅಮೀನ್ ಮತ್ತು ಸಂಗೀತ ನಾಯಕ್ ಅವರಿಗೂ ಮನವಿ ಪತ್ರ ನೀಡಿ ಈ ಸಮಸ್ಯೆಯನ್ನು ಪರಿಹರಿಸಲು ವಿನಂತಿ ಮಾಡಲಾಯಿತು.
ಈ ಸಂದರ್ಭದಲ್ಲಿ ಕುಲಾಲ/ ಕುಂಬಾರ ಯುವ ವೇದಿಕೆ ರಾಜ್ಯಾಧ್ಯಕ್ಷರು, ಕಾರ್ಯದರ್ಶಿ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.



















































































































































































