ಪುಣೆ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ರೋಹಿತ್ ಶೆಟ್ಟಿ ನಗ್ರಿಗುತ್ತು ನೇತೃತ್ವದಲ್ಲಿ ಡಾ. ಸುಧಾಕರ್ ಶೆಟ್ಟಿ ಸಂಯೋಜನೆಯಲ್ಲಿ ಪುಣೆಯಲ್ಲಿ ಜ. 19 ರಂದು ಮಲ್ಟಿ ಸ್ಪೆಷಾಲಿಟಿ ಉಚಿತ ಆರೋಗ್ಯ ತಪಾಸಣಾ ಶಿಬಿರ

102K Views 17 Jan 2025

ಪುಣೆ: ಬಂಟ್ಸ್ ಅಸೋಸಿ ಯೇಶನ್ ಪುಣೆ ವತಿಯಿಂದ ಸಮಾಜ ಕಲ್ಯಾಣ ಸೇವಾ ಕಾರ್ಯದ ಪ್ರಯುಕ್ತ ಪುಣೆಯ ಸಮಸ್ತ ಬಂಟ ಸಮಾಜ ಬಾಂಧವರಿಗಾಗಿ ಮಲ್ಟಿಸ್ಪೆಷಾಲಿಟಿ ಉಚಿತ ಆರೋಗ್ಯ ತಪಾಸಣ ಶಿಬಿರವು ಜ. 19ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 12ರ ವರೆಗೆ ಗುರುನಾನಕ್ ಮೆಡಿಕಲ್ ಫೌಂಡೇಶನ್‌ನ ಗುರುನಾನಕ್ ದರ್ಬಾರ್ ಹಾಲ್, ಹಾಲಿವುಡ್ ಗುರುದ್ವಾರ ಕ್ಯಾಂಪ್ ಪುಣೆ ಇಲ್ಲಿ ನಡೆಯಲಿದೆ.
ಪುಣೆ ಬಂಟ್ಸ್ ಅಸೋಸಿಯೇಶನ್ ಅಯೋಜನೆಯಲ್ಲಿ ಗುರುನಾನಕ್ ಮೆಡಿಕಲ್ ಫೌಂಡೇಶನ್ ಸಹಯೋಗ ದೊಂದಿಗೆ ನಡೆಯಲಿರುವ ಈ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಸ್ತ್ರೀರೋಗ ಶಾಸ್ತ್ರ ಮಕ್ಕಳ ರೋಗ ತಪಾಸಣೆ, ಕಣ್ಣು ಹಲ್ಲು ತಪಾಸಣೆ, ಔಷಧ ಮತ್ತು ರೋಗಶಾಸ್ತ್ರದ ಬಗ್ಗೆ ಮಾಹಿತಿ, ತುರ್ತು ರೋಗಿಗಳಿಗೆ ಉಚಿತ ಇಸಿಜಿ ಮತ್ತು ಉಚಿತ ಸಕ್ಕರೆ ತಪಾಸಣೆ ನಡೆಯಲಿದೆ.


ಪುಣೆ ಬಂಟ್ಸ್ ಅಸೋಸಿಯೇಶನ್ ಅಧ್ಯಕ್ಷ ರೋಹಿತ್ ಶೆಟ್ಟಿ ನಗ್ರಿಗುತ್ತು ಮತ್ತು ಕಾರ್ಯಕಾರಿ ಸಮಿತಿ, ಮಹಿಳಾ ವಿಭಾಗ, ಯುವ ವಿಭಾಗದವರ ಆಯೋಜನೆಯಲ್ಲಿ ನಡೆಯಲಿರುವ ಶಿಬಿರವು ಬಂಟ್ಸ್ ಅಸೋಸಿಯೇಶನ್ ಉಪಾಧ್ಯಕ್ಷ ಡಾ. ಸುಧಾಕ‌ರ್ ಶೆಟ್ಟಿ ಸಂಯೋಜನೆಯಲ್ಲಿ ನಡೆಯಲಿದೆ.
ಆರೋಗ್ಯ ತಪಾಸಣಾ ಶಿಬಿರದ ವೈದ್ಯ ಕೀಯ ಸಲಹೆಗಾರರ ಬೋರ್ಡ್‌ನ ಪ್ರಮುಖರಾದ ಡಾ. ಹಂಸರಾಜ್ ಶೆಟ್ಟಿ ಎಂಬಿಎ, ಡಾ.ಸಂಜಯ್ ಕುಲಕರ್ಣಿ, ಡಾ. ಸುಜಯ್ ಹೆಗ್ಡೆ, ಡಾ. ಜ್ಯೋತಿ ಶೆಟ್ಟಿ, ಡಾ. ಪ್ರವೀಣ್ ಆರ್. ಶೆಟ್ಟಿ, ಡಾ.ವಿವೇಕ್ ಹೆಗ್ಡೆ, ಡಾ. ಸಂಜಯ್ ತೆಕವಡೆಯವರ ಸಲಹೆಯೊಂದಿಗೆ ಪುಣೆಯ ಖ್ಯಾತ ವೈದ್ಯರಾದ ಡಾ. ಚಿತ್ತರಂಜನ್ ಶೆಟ್ಟಿ, ಡಾ. ಸುಧಾಕರ್ ಶೆಟ್ಟಿ, ಡಾ. ಉರ್ವಿ ಕೊಠಾರಿ, ಡಾ. ರೋಬರ್ಟ್ ಲೋಬೊ, ವಿಕಾಸ್ ಮಂತೋಲೆ, ಡಾ.ಸಮಿತಾ ಮೂಲಾನಿ, ಡಾ. ಸತ್ಯಶೀಲ ನ್ಯಾಕ್ ಆರೋಗ್ಯ ತಪಾಸಣೆ ನಡೆಸಿ ಸೂಕ್ತ ಸಲಹೆ ನೀಡಲಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ರೋಹಿತ್ ಶೆಟ್ಟಿ (9960337625), ಡಾ.ಸುಧಾಕರ್ ಶೆಟ್ಟಿ (9657616322), ದಿನೇಶ್ ಶೆಟ್ಟಿ (9823019020), ರೇಷ್ಮಾಆರ್. ಶೆಟ್ಟಿ (9881461181) ಅವರನ್ನು ಸಂಪರ್ಕಿಸಬಹುದು.
ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶಿಬಿರದ ಸದುಪಯೋಗ ಪಡೆದುಕೊಳ್ಳು ವಂತೆ ಪುಣೆ ಬಂಟ್ಸ್ ಅಸೋಸಿಯೇ ಶನ್ ಅಧ್ಯಕ್ಷ ರೋಹಿತ್ ಶೆಟ್ಟಿ ನಗ್ರಿ ಗುತ್ತು, ನಿಕಟಪೂರ್ವ ಅಧ್ಯಕ್ಷ ಗಣೇಶ್ ಹೆಗ್ಡೆ ಪುಣ್ಣೂರು, ಉಪಾ ಧ್ಯಕ್ಷರಾದ ಡಾ. ಸುಧಾಕರ್ ಶೆಟ್ಟಿ,ಸತೀಶ್ ರೈ ಕಲ್ಲಂಗಳಗುತ್ತು, ಪ್ರಧಾನ ಕಾರ್ಯದರ್ಶಿ ದಿನೇಶ್ ಶೆಟ್ಟಿ ಕೋಶಾಧಿಕಾರಿ ಸಿಎ ಮನೋಹರ ಶೆಟ್ಟಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರೇಷ್ಮಾ ಆರ್. ಶೆಟ್ಟಿ ಯುವ ವಿಭಾಗದ ಕಾರ್ಯಾಧ್ಯಕ್ಷ ಅದೀಪ್ ಶೆಟ್ಟಿ ಮತ್ತು ಸಮಿತಿಯ ಪದಾಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top