Author name: editor

ಪ್ರಾದೇಶಿಕ ವಾರ್ತೆಗಳು

ಪೋಪ್ ಫ್ರಾನ್ಸಿಸ್ ಅವರಿಗೆ ಶ್ರದ್ಧಾಂಜಲಿ ಸಭೆ

ಮಂಗಳೂರು, ಎ. ೨೫: ಮಂಗಳೂರು ಧರ್ಮಪ್ರಾಂತ್ಯದ ವತಿಯಿಂದ ಕೆಥೋಲಿಕರ ಪರಮೋಚ್ಛ ಜಗದ್ಗುರು ಪೋಪ್ ಫ್ರಾನ್ಸಿಸ್ ಅವರಿಗೆ ಶ್ರದ್ಧಾಂಜಲಿ ಸಭೆ ಶುಕ್ರವಾರ ನಗರದ ಮಿಲಾಗ್ರಿಸ್ ಚರ್ಚ್ ವಠಾರದಲ್ಲಿ ನಡೆಸಲಾಯಿತು.ಮಂಗಳೂರು ಬಿಷಪ್ ಅ|ವಂ|ಡಾ| ಪೀಟರ್ ಪಾವ್ಲ್ ಸಲ್ಡಾನ್ಹಾ ಅವರು ಶ್ರದ್ದಾಂಜಲಿ ಅರ್ಪಿಸಿ ಮಾತನಾಡಿ, ಪೋಪ್ ಫ್ರಾನ್ಸಿಸ್ ಅವರು ಜಗತ್ತಿಗೆ ಬೆಳಕಾಗಿದ್ದಾರೆ. ಮಕ್ಕಳು, ಯುವಕರು, ಬಡವರು, ದೀನರು ಮತ್ತು ವಲಸಿಗರಿಗೆ ಹತ್ತಿರವಾಗಿದ್ದರು. ಪೋಪ್ ಫ್ರಾನ್ಸಿಸ್ ನಮಗೆ ಸಹೋದರತ್ವವನ್ನು ಕಲಿಸಿದ್ದಾರೆ ಎಂದರು.ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ| ಎಂ. ಮೋಹನ್ ಆಳ್ವ ಮಾತನಾಡಿ, ಪೋಪ್ ಫ್ರಾನ್ಸಿಸ್ ಅವರು ಪ್ರೀತಿ, ಸರಳತೆಯ ಜೀವನದಿಂದಾಗಿ ಜಾಗತಿಕ ಸುಧಾರಣಾವಾದಿಯಾಗಿ ಗುರುತಿಸಿಕೊಂಡಿದ್ದಾರೆ. ಜಗತ್ತಿಗೆ ಪರಿಸರ ಪ್ರೀತಿ, ಸಹಬಾಳ್ವೆಯ ಪಾಠ ಮಾಡಿದ್ದಾರೆ. ಸಂಪ್ರದಾಯವಾದಿಯಾಗದೆ ಪವಿತ್ರಸಭೆಯಲ್ಲಿ ಬದಲಾವಣೆ, ನವೀನತೆಯೊಂದಿಗೆ ಜನರ ಪೋಪ್ ಎಂದೇ ಕರೆಯಲ್ಪಟ್ಟವರು. ಚರ್ಚ್ ಬಡವರ ಪರ ಇರಬೇಕೆಂದು ಹೇಳಿದರು. ರೋಮಿನಲ್ಲಿ ಕೈದಿಗಳ ಪಾದ ತೊಳೆದು ಜಗತ್ತಿಗೆ ಸರಳತೆಯನ್ನು ತೋರಿದವರು. ಧರ್ಮ ಸರಳೀಕರಣಗೊಳಿಸಿ ಜನರ ಪ್ರೀತಿ ಗಳಿಸಿ, ಯುವಜನತೆಯನ್ನು ಚರ್ಚ್‌ಗಳತ್ತ ಆಕರ್ಷಿಸಿದರು. ಸಾಮಾಜಿಕ ನ್ಯಾಯಕ್ಕಾಗಿ ಶ್ರಮಿಸಿದ್ದಾರೆ. ಪೋಪ್ ಅವರ ಅಗಲಿಕೆ ಜಗತ್ತಿಗೆ ಅಪಾರ ನಷ್ಟವನ್ನುಂಟು ಮಾಡಿದೆ ಎಂದರು.ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಮಹಮ್ಮದ್ ಮೋನು ಮಾತನಾಡಿ, ವಿಶ್ವದಲ್ಲಿ ಪ್ರೀತಿಯ ಹೃದಯ ತೆರೆದವರಾಗಿದ್ದಾರೆ. ಬಡವರ ಕಣ್ಣೀರು ಒರೆಸಿ ಅವರನ್ನು ಮುನ್ನಡೆಸಿದ್ದಾರೆ. ಜಗತ್ತಿನ ಮಾನವ ಸಂಕುಲಕ್ಕೆ ಅವರ ನಿಧನ ನಷ್ಟವಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ ಎಂದರು.ಸಾಹಿತಿ ಜ್ಯೋತಿ ಚೇಳಾರು ಉಪನ್ಯಾಸ ನೀಡಿದರು.ಮಂಗಳೂರು ಧರ್ಮಪ್ರಾಂತ್ಯದ ವಿಶ್ರಾಂತ ಬಿಷಪ್ ಅ|ವಂ|ಡಾ| ಅಲೋಶಿಯಸ್ ಪಾವ್ಲ್ ಡಿ’ಸೋಜಾ, ಸಂಸದ ಕ್ಯಾ| ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ್ ಕಾಮತ್, ಹರೀಶ್ ಪೂಂಜಾ, ಮಾಜಿ ಸಚಿವ ಬಿ. ರಮಾನಾಥ ರೈ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಪೂಜಾರಿ, ಮಾಜಿ ಶಾಸಕ ಜೆ.ಆರ್. ಲೋಬೊ, ಬಿಜೆಪಿ ಯುವ ಮೋರ್ಚ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಮಂಗಳೂರು ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿಗಳಾದ ವಂ| ಜೆ.ಬಿ. ಸಲ್ಡಾನ್ಹಾ, ರೋಯ್ ಕ್ಯಾಸ್ತಲಿನೊ, ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಟ್ಯಾನಿ ಆಳ್ವಾರಿಸ್, ಪ್ರಮುಖರಾದ ಎಂ . ಪಿ.ನೊರೋನ್ಹಾ,ಎಲಿಯಾಸ್ ಫೆರ್ನಾಂಡಿಸ್, ವಂ| ಫಾವುಸ್ತಿನ್ ಲೋಬೊ, ಜೋಯ್ಲಾಸ್ ಪಿಂಟೊ, ವಂ| ಡಾ| ಡೇನಿಯಲ್ ವೇಗಸ್, ವಂ| ಡಾ| ಜೋಸೆಫ್ ಮಾರ್ಟಿಸ್, ಶ್ರೀಕಾಂತ್ ಕಾಸರಗೋಡು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ಕಾಶ್ಮೀರ ಪಹಲ್ಗಾಮ್‌ ದುಷ್ಕೃತ್ಯ: ಬಿಷಪ್‌ ಖಂಡನೆ

ಮಂಗಳೂರು, ಎ.೨೪ಭಾರತದ ಮುಕುಟಮಣಿ ಎನ್ನಿಸಿರುವ ಕಾಶ್ಮೀರದಲ್ಲಿ ಪ್ರವಾಸಕ್ಕಾಗಿ ತೆರಳಿದ್ದ  ಅಮಾಯಕ ನಾಗರಿಕರನ್ನು ಹತ್ಯೆ ಮಾಡಿದ ಉಗ್ರಗಾಮಿಗಳ ಕೃತ್ಯ ಅತ್ಯಂತ ಖಂಡನೀಯ, ಯಾವುದೇ ತಪ್ಪೆಸಗದವರ ಮೇಲೆ ಏಕಾಏಕಿ ಗುಂಡಿಟ್ಟು ಕೊಂದಿರುವುದು ಮಾನವತೆಗೆ ಕಳಂಕ ಎಂದು ಮಂಗಳೂರು ಧರ್ಮಪ್ರಾಂತ್ಯದ ಬಿಷಪ್‌ ಅತಿ ವಂದನೀಯ ಡಾ.ಪೀಟರ್‌ ಪಾವ್ಲ್‌ ಸಾಲ್ಡನ್ಹಾ ಅವರು ಖೇದ ವ್ಯಕ್ತಪಡಿಸಿದ್ದಾರೆ.ರಜೆಯಲ್ಲಿ ಕುಟುಂಬಗಳು, ಮಹಿಳೆಯರು ಮಕ್ಕಳ ಸಹಿತ ಕಾಶ್ಮೀರ ಪಹಲ್ಗಾಮ್‌ಗೆ ಪ್ರವಾಸ ತೆರಳಿದ್ದರು. ಅಲ್ಲಿ ಮುಖ್ಯವಾಗಿ ಪುರುಷರನ್ನೇ ಗುರಿಯಾಗಿಸಿ ಉಗ್ರರು 26 ಮಂದಿಯ ತಲೆಗೇ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಇಂತಹ ಪಾಪಕೃತ್ಯ ಯಾವುದೇ ನಾಗರಿಕರು ಒಪ್ಪುವಂಥದ್ದಲ್ಲ.ಜೀವ ಕಳೆದುಕೊಂಡವರಿಗೆ ಚಿರಶಾಂತಿ ಲಭಿಸಲಿ, ಗಾಯಗೊಂಡವರು ಬೇಗನೆ ಚೇತರಿಸಿಕೊಳ್ಳಲಿ. ಮೃತರ ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ.ಇದಕ್ಕೆ ಕಾರಣರಾದ ಯಾರನ್ನೂ ಬಿಡದೆ ಸರಕಾರ ಕ್ರಮ ಜರಗಿಸುವಂತೆ ಆಗ್ರಹಿಸುವುದಾಗಿ ಬಿಷಪ್‌ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ಕನ್ನಗುಡ್ಡೆ ಹದಗೆಟ್ಟ ರಸ್ತೆಗೆ ಕಾಯಕಲ್ಪ ಯಾವಾಗ?

ಪ್ರತ್ಯಕ್ಷ ವರದಿ. ಮಂಗಳೂರು -ಕನ್ನಗುಡ್ಡೆ ನೂಜಿ ಸರಿಪಲ್ಲ ಹೈವೇ ಕ್ರಾಸಿಂಗ್ ಕಾಮಗಾರಿ ಇನ್ನೂ ಅಪೂರ್ಣಗೊಂಡಿದೆ. ಚುನಾವಣೆ ವೇಳೆ ತ್ವರಿತಗತಿಯಲ್ಲಿ ಸಾಗುತ್ತಿದ್ದ ರಸ್ತೆ ಕಾಮಗಾರಿ, ಬಳಿಕ ಅರ್ಧಕ್ಕೆ ನಿಂತಿದೆ. ರಸ್ತೆ ಅಗೆದು ಜಲ್ಲಿ ಹಾಕಿಸಿ ಹೋದ ಗುತ್ತಿಗೆದಾರ ನಂತರ ಈ ಕಡೆ ಮರಳಿಲ್ಲ. ಸ್ಥಳೀಯ ಜನಪ್ರತಿನಿಧಿಗಳು ಗುತ್ತಿಗೆದಾರನಿಗೆ, ಇಂಜಿನಿಯರ್‌ಗೆ ಫೋನ್‌ ಮಾಡಿದರೆ ಸ್ವೀಕರಿಸುತ್ತಿಲ್ಲ, ಇದರಿಂದ ನಿವಾಸಿಗಳಿಗೆ ಸಂಚಾರ ಸಂಕಷ್ಟ ಎದುರಾಗಿದ್ದು, ಈ ರಸ್ತೆಯಲ್ಲಿ ಯಾವುದಾದರೂ ದೊಡ್ಡ ವಾಹನ ಬಂದರೆ ಜನಸಾಮಾನ್ಯರೂ ಪಕ್ಕದ ಚರಂಡಿಗೆ ಇಳಿದು ನಿಲ್ಲುವ ಪರಿಸ್ಥಿತಿ ಎದುರಾಗಿದೆ.ರಸ್ತೆ ಸಂಪೂರ್ಣ ಹಾಳಾಗಿದ್ದು, ವಾಹನಗಳು ಇಲ್ಲಿ ಸಂಚರಿಸುವುದೇ ಒಂದು ದೊಡ್ಡ ಸವಾಲಾಗಿದೆ. ಬೈಕ್ ಸವಾರರು ಸ್ವಲ್ಪ ನಿರ್ಲಕ್ಷ್ಯ ಮಾಡಿದರೆ ಆಸ್ಪತ್ರೆ ಪಕ್ಕಾ ಎನ್ನುವಂತಿದೆ.ರಸ್ತೆಗಳ ತುಂಬಾ ತಗ್ಗು ದಿಣ್ಣೆಗಳು, ರಸ್ತೆಯಲ್ಲಿ ಗುಂಡಿಗಳಿವೆಯೋ, ಗುಂಡಿಯಲ್ಲಿಯೇ ರಸ್ತೆಗಳಿವೆಯೋ ಎನ್ನುವ ಅನುಮಾನ ಕಾಡುತ್ತದೆ. ಪ್ರತಿನಿತ್ಯ ಈ ದಾರಿಯಲ್ಲಿ ನೂರಾರು ವಾಹನಗಳು ಸಂಚಾರ ನಡೆಸುತ್ತವೆ,ಆದರೂ ರಸ್ತೆ ಕಾಮಗಾರಿ ಸಾರ್ವಜನಿಕರ ಓಡಾಟಕ್ಕೆ ಅನುಕೂಲಕರವಾದಂತಿಲ್ಲ. ಕಾಮಗಾರಿ ಆರಂಭವಾದರೂ ಸಹ ಇನ್ನೂ ಪೂರ್ಣಗೊಂಡಿಲ್ಲ. ಜನರು ವಾಹನ ಬಿಟ್ಟು ವಿಮಾನದಲ್ಲಿ ಸಂಚಾರ ನಡೆಸಬೇಕೆ? ಎಂದು ಜನ ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ. ಈ ರಸ್ತೆಯಲ್ಲಿ ಘಾಟ್ ಇದೆ. ಇಲ್ಲಿ ರಸ್ತೆ ಹಾಗೂ ತಿರುವುಗಳು ಹೊಸ ಸೇತುವೆ ನಿರ್ಮಾಣ, ಕಾರ್ಯ ನಡೆಯದೆ ಇರುವುದರಿಂದ ಮಂಗಳೂರಿನ ಕಡೆಗೆ ವಾಹನ ಕಳಿಸಿದರೆ ಮುಂಗಡವಾಗಿ ಟಯರ್ ಬುಕ್ ಮಾಡಿ ಇಡಬೇಕಾದ ಪರಿಸ್ಥಿತಿ ಇದೆ” ಎಂದು ಸ್ಥಳೀಯರು ರಸ್ತೆಯ ಸ್ಥಿತಿಯ ವಿವರ ನೀಡಿದ್ದಾರೆ.ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಸಚಿವರುಗಳು ದಯಮಾಡಿ ಆ ರಸ್ತೆಯಲ್ಲಿ ತಮ್ಮ (ಖಾಸಗಿ ವಾಹನ) ವಾಹನದಲ್ಲಿ ಸಂಚಾರ ನಡೆಸಿ ರಸ್ತೆಯನ್ನು ಒಮ್ಮೆ ನೋಡಿ ಬರಲಿ. ರಸ್ತೆ ಬಳಕೆ ಮಾಡುವವರ ಮೇಲೆ ಸ್ವಲ್ಪ ಆದರೂ ಇವರಿಗೆ ಕಳಕಳಿ ಇರಲಿ. ರಸ್ತೆ ಅವ್ಯವಸ್ಥೆ ಬಗ್ಗೆ ಏಕೆ ಅವರು ಮಾತನಾಡುತ್ತಿಲ್ಲ” ಎಂದು ಪ್ರಶ್ನೆಮಾಡಿದ್ದಾರೆ.ಈಗ ಬಾಕಿ ಇರುವ ಕಾಮಗಾರಿಗಳನ್ನು ಯಾವಾಗ ಪೂರ್ಣ ಮಾಡುತ್ತೀರಿ. ಹೊಸ ರಸ್ತೆ ನಿರ್ಮಾಣ ಮಾಡುವ ಬದಲು ಈಗಿರುವ ರಸ್ತೆಯನ್ನು ವಾಹನ ಸವಾರರಿಗೆ ಅನುಕೂಲವಾಗುವಂತೆ ಮಾಡಿ ಎಂದು ಒತ್ತಾಯಿಸಲಾಗಿದೆ.ಕ್ಷೇತ್ರದಲ್ಲಿ ಸಾವಿರಾರು ಕೋಟಿ ಅನುದಾನದ ಕಾಮಗಾರಿಯಾಗಿದೆ ಎನ್ನುವ ಶಾಸಕರು ಇಂತಹ ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆ ಹದಗೆಟ್ಟಿರುವ ಬಗ್ಗೆ ತಕ್ಷಣ ಸ್ಪಂದಿಸಿ ಜನರ ಸಮಸ್ಯೆಗೆ ಉತ್ತರ ನೀಡಬೇಕಾಗಿದೆ. ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಬೇಸತ್ತು ಗ್ರಾಮಸ್ಥರೇ ನಾವೇ ರಸ್ತೆ ದುರಸ್ಥಿಗೆ ಮುಂದಾಗಬೇಕೋ ಎನ್ನುತ್ತಿದ್ದಾರೆ. ಇನ್ನಾದರೂ ಸರಕಾರ ಹಾಗೂ ಮುಖ್ಯ ಜನಪ್ರತಿನಿಧಿಗಳು ಇದರ ಕಾಮಗಾರಿ ಪೂರ್ಣಗೊಳ್ಳುವಂತೆ ಸಹಕರಿಸಬೇಕು ಎಂದು ಗ್ರಾಮಸ್ಥರು ಮನವಿ ಮಾಡಿಕೊಂಡಿದ್ದಾರೆ. ಇದರಲ್ಲಿ ಯಾವುದೇ ಮತ ಜಾತಿ ಭೇದ ಪಕ್ಷ ಸಂಘಟನೆ ರಾಜಕೀಯ ಮಾಡದೆ ಈ ಕಾಮಗಾರಿಯ ಪ್ರಗತಿಗೆ ನಿಷ್ಪಕ್ಷಪಾತವಾಗಿ ಸಹಕರಿಸಬೇಕೆಂದು ಗ್ರಾಮಸ್ಥರು ಮನವಿ ಮಾಡಿಕೊಳ್ಳುತ್ತಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ : ಹವ್ಯಾಸಿ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶ್ ಟ್ರಸ್ಟ್ ನ ಹವ್ಯಾಸಿ ಘಟಕದ ಸಭೆ ಬಲ್ಲಾಲ್ ಬಾಗ್‌ನಲ್ಲಿರುವ ಪತ್ತುಮುಡಿ ಸೌಧದಲ್ಲಿ ನಡೆಯಿತು.ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿಯವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹವ್ಯಾಸಿ ಘಟಕದ ನೂತನ ಪದಾಧಿಕಾರಿಗಳ ನೇಮಕ ನಡೆಯಿತು.ಗೌರವಾಧ್ಯಕ್ಷರಾಗಿ ಮಧುಕರ ಭಾಗವತ ಕುಳಾಯಿ, ಅಧ್ಯಕ್ಷರಾಗಿ ರಾಜಾರಾಮ ಹೊಳ್ಳ ಕೈರಂಗಳ, ಉಪಾಧ್ಯಕ್ಷರಾಗಿ ತೋನ್ಸೆ ಪುಷ್ಕಳ ಕುಮಾರ್, ದಿವಾಕರ ಆಚಾರ್ಯ ಗೇರುಕಟ್ಟೆ, ಕಾರ್ಯದರ್ಶಿಯಾಗಿ ವಿನಯ ಆಚಾರ್ ಹೊಸಬೆಟ್ಟು, ಸಂಚಾಲಕರಾಗಿ ಸದಾಶಿವ ಆಳ್ವ ತಲಪಾಡಿ, ಕೋಶಾಧಿಕಾರಿಯಾಗಿ ವಿಜಯ ಶಂಕರ ಆಳ್ವ ಮಿತ್ತಳಿಕೆ,ಸಹ ಕಾರ್ಯದರ್ಶಿಗಳಾಗಿ ಮಧುಸೂಧನ ಅಲೆವೂರಾಯ ಮತ್ತು ಕುಂಜತ್ತೂರು ಗಣೇಶ್, ಸಹ ಸಂಚಾಲಕರಾಗಿ ಚಂದ್ರಶೇಖರ ಕೊಂಕಣಾಜೆ ಮತ್ತು ಹರಿಶ್ಚಂದ್ರನಾಯ್ಕ ಮಾಡೂರು ಆಯ್ಕೆಯಾದರು. ಗೌರವ ಸಲಹೆಗಾರರಾಗಿ ಡಾ ಎಂ ಪ್ರಭಾಕರ ಜೋಶಿ, ಜಬ್ಬಾರ್ ಸಮೋ ಸಂಪಾಜೆ, ಹರೀಶ್ ಬಳಂತಿಮೊಗರು, ಸುಬ್ರಹ್ಮಣ್ಯ ಬೈಪಡಿತ್ತಾಯ, ಪ್ರೊ ಭಾಸ್ಕರ್ ರೈ ಕುಕ್ಕುವಳ್ಳಿ, ಸುಂದರ ಶೆಟ್ಟಿ ಬೆಟ್ಟಂಪಾಡಿ ಆಯ್ಕೆಯಾದರು.ಇದೇ ಸಂದರ್ಭದಲ್ಲಿ ಜೂನ್ 1 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ ಪಟ್ಲ ಸಂಭ್ರಮದ ದಶಮ ಸಂಭ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು.

ಪ್ರಾದೇಶಿಕ ವಾರ್ತೆಗಳು

ಪಹಲ್ಗಾಮಿನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿದ ಕಥೊಲಿಕ್ ಸಭಾ ಕೇಂದ್ರೀಯ ಅಧ್ಯಕ್ಷ ಹಾಗೂ AICU ರಾಜ್ಯಾಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್

ಪಹಲ್ಗಾಮಿನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಮೃತರಿಗೆ ಸಂತಾಪ ಸೂಚಿಸುತ್ತೇವೆ. ಭಯೋತ್ಪಾದನೆ ವಿರುದ್ಧ ಹೋರಾಟದಲ್ಲಿ ಕಥೊಲಿಕ್ ಸಭಾ ಕೂಡ ಜೊತೆಗಿರಲಿದೆ. ಭಾರತದ ಪ್ರತಿ ಜನರಿಗೆ ನಮ್ಮ ಸಂಪೂರ್ಣ ಬೆಂಬಲವಿದೆ. ಭಯೋತ್ಪಾದನೆ ದಾಳಿ ಕ್ರೂರ ಅಪರಾಧ. ಇದಕ್ಕೆ ಯಾವುದೇ ಸಮರ್ಥನೆ ಇಲ್ಲ.ಭಯೋತ್ಪಾದಕರನ್ನು ನಿರ್ಮೂಲನೆ ಗೊಳಿಸುವ ಮೂಲಕ, ದೇಶದ ಜನರಿಗೆ ಭದ್ರತೆ ನೀಡುವ ಕಾರ್ಯವನ್ನು ಕೇಂದ್ರ ಸರ್ಕಾರ ಸಮರ್ಥವಾಗಿ ನಿರ್ವಹಿಸಬೇಕು. ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಧರ್ಮದ ಹೆಸರಿನಲ್ಲಿ ಭಯೋತ್ಪಾದಕ ದಾಳಿ ನಡೆದಿರುವುದು ನಿಜಕ್ಕೂ ಕೆಟ್ಟ ಬೆಳವಣಿಗೆ. ಇದನ್ನು ಸಹಿಸಲು ಸಾಧ್ಯವೇ ಇಲ್ಲ. ಈ ಸಂದರ್ಭದಲ್ಲಿ ಮ್ರತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬದವರಿಗೆ ಭಗವಂತನು ಕೊಡಲಿ. ಅವರ ಅಕಾಲಿಕ ಮರಣ ಅವರ ಕುಟುಂಬಕ್ಕೆ ಮಾತ್ರವಲ್ಲದೆ ಇಡೀ ದೇಶಕ್ಕೆ ದೊಡ್ಡ ನಷ್ಟವನ್ನುಂಟು ಮಾಡಿದೆ.ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಹಾಗೂ ಅಖಿಲ ಭಾರತ ಕ್ರೈಸ್ತ ಒಕ್ಕೂಟ ಇದನ್ನು ಖಂಡಿಸುತ್ತದೆ. ಇಂತಹ ಭಯೋತ್ಪಾದಕ ಸಂಘಟನೆಗಳ ವಿರುದ್ಧ ನಿರ್ಧಾಕ್ಷಣ್ಯ ಕ್ರಮ ಕೈಗೊಳ್ಳಬೇಕು. ಭಯೋತ್ಪಾದಕರನ್ನು ಸದೆಬಡೆಯಬೇಕು. ಇಂತಹ ಸಂಘಟನೆಗಳು ಯಾವುದೇ ದೇಶಕ್ಕೆ ಸಂಬಂಧಿಸಿದರು ಆಗಲಿ ಇವುಗಳನ್ನು ಬುಡ ಸಮೇತ ಕಿತ್ತೊಗೆಯಬೇಕು. ಆತ್ಮಗಳಿಗೆ ಶಾಂತಿ ಕೋರುತ್ತೇವೆ ಗಾಯಾಳುಗಳ ಚೇತರಿಕೆಗೆ ಪ್ರಾರ್ಥಿಸುತ್ತೇವೆ ಎಂದು ಪತ್ರಿಕಾ ಪ್ರಕಟನೆಯಲ್ಲಿ ಕಥೊಲಿಕ್ ಸಭಾ ಕೇಂದ್ರೀಯ ಅಧ್ಯಕ್ಷ ಹಾಗೂ AICU ರಾಜ್ಯಾಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ತಿಳಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ವಿದ್ವಾನ್ ರಾಮಚಂದ್ರ ಉಚ್ಚಿಲ್ ಜನ್ಮ ಶತಮಾನೋತ್ಸವ ಸಂಸ್ಮರಣೆ – ಕೃತಿ ಸಂಚಯ ಬಿಡುಗಡೆ.’ಚರಾ ಬದುಕು-ಬರಹಗಳ ದಾಖಲೀಕರಣ ಶ್ರೇಷ್ಠ ಕಾರ್ಯ’: ಡಾ. ಬನಾರಿ

ಮಂಗಳೂರು: ‘ಚರಾ ಎಂಬ ಅಭಿಧಾನದಲ್ಲಿ ಬರೆಯುತ್ತಿದ್ದ ರಾಮಚಂದ್ರ ಉಚ್ಚಿಲರ ಲೇಖನಗಳು ವಿಡಂಬನಾತ್ಮಕವಾಗಿದ್ದು ಓದುಗರನ್ನು ಬಡಿದೆಬ್ಬಿಸುವ ಕೆಲಸ ಮಾಡುತ್ತಿದ್ದವು. ಅವರು ಮುಂಬೈ ಬಿಟ್ಟು ಊರಲ್ಲಿ ನೆಲೆಸಿದ 25 ವರ್ಷಗಳಲ್ಲಿ ತಾವಿಬ್ಬರೂ ಅತ್ಯಂತ ಆಪ್ತರಾಗಿದ್ದೆವು’ ಎಂದು ಹಿರಿಯ ವೈದ್ಯ ಮತ್ತು ಸಾಹಿತಿ ಡಾ. ರಮಾನಂದ ಬನಾರಿ ಹೇಳಿದ್ದಾರೆ. ವಿದ್ವಾನ್ ರಾಮಚಂದ್ರ ಉಚ್ಚಿಲ್ ಜನ್ಮ ಶತಮಾನೋತ್ಸವ ಸಂಸ್ಮರಣ ಸಮಿತಿ, ಗುರು ಶಿಷ್ಯ ಒಕ್ಕೂಟ ಮತ್ತು ಚ.ರಾ. ಪ್ರಕಾಶನ ಇವರ ಆಶ್ರಯದಲ್ಲಿ ಸೋಮೇಶ್ವರ ಉಚ್ಚಿಲದ ಬೋವಿ ಹಿರಿಯ ಪ್ರಾಥಮಿಕ ಶಾಲೆಯ ವಜ್ರ ಮಹೋತ್ಸವ ಸ್ಮಾರಕ ಕಟ್ಟಡ ಸಭಾಗೃಹದಲ್ಲಿ ಏಪ್ರಿಲ್ 20 ಭಾನುವಾರ ಜರಗಿದ ವಿದ್ವಾನ್ ರಾಮಚಂದ್ರ ಉಚ್ಚಿಲ್ ಜನ್ಮ ಶತಮಾನೋತ್ಸವ ಸಂಸ್ಮರಣೆ, ತಾಳಮದ್ದಳೆ ಮತ್ತು ಕೃತಿ ಬಿಡುಗಡೆ ಸಮಾರಂಭವನ್ನು ದೀಪೋಜ್ವಲನೆಯೊಂದಿಗೆ ಉದ್ಘಾಟಿಸಿ ಅವರು ಮಾತನಾಡಿದರು.‘ಮುಂಬೈಯ ಮರ್ಕೆಂಟೈಲ್ ಬ್ಯಾಂಕ್ ನಲ್ಲಿ ಉದ್ಯೋಗಕ್ಕೆ ನಿಷ್ಠರಾಗಿದ್ದು ಪತ್ರಿಕಾ ಅಂಕಣಕಾರರಾಗಿ, ರಾತ್ರಿ ಶಾಲೆಯ ಅಧ್ಯಾಪಕರಾಗಿ ಅಪಾರ ಶಿಷ್ಯ ಸಂಪತ್ತನ್ನು ಹೊಂದಿದ್ದ ಉಚ್ಚಿಲರು ತಮ್ಮ ಜ್ಞಾನ ಶಕ್ತಿ, ಸ್ಮರಣ ಶಕ್ತಿ ಮತ್ತು ಇಚ್ಛಾಶಕ್ತಿಗೆ ಹೆಸರಾಗಿದ್ದರು. ಅವರ ಬದುಕು – ಬರಹಗಳನ್ನು ದಾಖಲೀಕರಿಸಿದ ಪುತ್ರಿ ಡಾ. ವಾಣಿ ಉಚ್ಚಿಲ್ಕರ್ ಅವರದು ಶ್ರೇಷ್ಠ ಕಾರ್ಯ’ ಎಂದು ಡಾ. ಬನಾರಿ ನುಡಿದರು. ಹಿರಿಯ ಸಾಹಿತಿ, ಸಂಶೋಧಕ ಹಾಗೂ ಮುಂಬೈ ವಿಶ್ವವಿದ್ಯಾನಿಲಯ ಕನ್ನಡ ವಿಭಾಗದ ಮುಖ್ಯಸ್ಥ ಡಾ. ತಾಳ್ತಜೆ ವಸಂತಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ‘ವಜ್ರಕುಸುಮ’ ಉಚ್ಚಿಲ್: ಡಾ.ಜೋಶಿಸಂಸ್ಮರಣ ಭಾಷಣ ಮಾಡಿದ ಹಿರಿಯ ವಿದ್ವಾಂಸ ಮತ್ತು ಯಕ್ಷಗಾನ ಅರ್ಥಧಾರಿ ಡಾ.ಎಂ.ಪ್ರಭಾಕರ ಜೋಶಿ ‘ರಾಮಚಂದ್ರ ಉಚ್ಚಿಲ್ ಬದುಕಿದ್ದಾಗ ಪ್ರೊ. ಅಮೃತ ಸೋಮೇಶ್ವರರ ಸಂಪಾದಕತ್ವದಲ್ಲಿ ‘ವಜ್ರ ಕುಸುಮ’ ಎಂಬ ಅಭಿನಂದನಾ ಗ್ರಂಥ ಸಮರ್ಪಣೆಯಾಗಿತ್ತು; ಅವರು ಹಾಗೆಯೇ ಬದುಕಿದವರು. ಮುಂಬೈಯಲ್ಲಿ ಖ್ಯಾತ ವಿಮರ್ಶಕರಾಗಿ, ಪತ್ರಕರ್ತರಾಗಿ ಅವರು ದೀರ್ಘಕಾಲ ದುಡಿದಿದ್ದಾರೆ. ಯಕ್ಷಗಾನದ ವಿಶೇಷ ಅಭಿಮಾನಿಯಾಗಿ ಅದರ ಲೋಪ ದೋಷಗಳನ್ನು ತಿದ್ದುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಯಕ್ಷಗಾನ ತನ್ನ ಪರಂಪರೆಯನ್ನು ಬಿಟ್ಟು ಬೇರೆ ದಾರಿ ಹಿಡಿದಾಗ ಕಪ್ಪು ಬಾವುಟ ಹಿಡಿದು ಪ್ರತಿಭಟಿಸಿದ ಛಾತಿ ಅವರದು. ಕಾಲ್ಚೆಂಡಿನ ತರಬೇತುದಾರರಾಗಿ ಕ್ರೀಡಾ ಮನೋಭಾವ ಹೊಂದಿದ್ದ ಉಚ್ಚಿಲ್ ತಮ್ಮ ನಡೆ ನುಡಿಗಳಲ್ಲಿ ನಿರ್ಭಿಡೆ ಹಾಗೂ ಕಾಠಿಣ್ಯ ತೋರಿದರೂ ಸ್ನೇಹ ವಿಶ್ವಾಸಗಳಿಗೆ ತೆರೆದುಕೊಳ್ಳುವ ಹೂವಿನಂತಹ ಹೃದಯ ಹೊಂದಿದ್ದರು’ ಎಂದರು. ಚರಾ ನೆನಪಿನ ಸಂಪುಟ ಅನಾವರಣ:ದಿ| ರಾಮಚಂದ್ರ ಉಚ್ಚಿಲರ ನೆನಪಿನ 4 ಸಂಪುಟಗಳು ಸೇರಿದಂತೆ ಒಟ್ಟು ಎಂಟು ಕೃತಿಸಂಚಯಗಳನ್ನು ಸಮಾರಂಭದಲ್ಲಿ ಅನಾವರಣಗೊಳಿಸಲಾಯಿತು. ಚರಾ ನೆನಪಿನ ಸಂಪುಟ ೧,೨,೩ ಮತ್ತು ೪ ಕೃತಿಗಳನ್ನು ಡಾ‌.ರಮಾನಂದ ಬನಾರಿ ಬಿಡುಗಡೆಗೊಳಿಸಿದರು. ಇದರೊಂದಿಗೆ ಡಾ.ವಾಣಿ ಎನ್.ಉಚ್ಙಿಲ್ಕರ್ ಅವರ ‘ಭಾವ ತರಂಗ’ ಕವನ ಸಂಕಲನ, ‘ಜ್ಞಾನ ದರ್ಶನ’ ಪ್ರಬಂಧ ಸಂಗ್ರಹ, ‘ನನ್ನ ಚೇತನ’ ಸಂಸ್ಮರಣ ಲೇಖನಗಳು ಹಾಗೂ ನವೀನ್ ಎನ್.ಉಚ್ಚಿಲ್ಕರ್ ಮತ್ತು ನವನೀತ ಎನ್.ಉಚ್ಚಿಲ್ಕರ್ ಸಂಪಾದಿಸಿದ ‘ಎಲೆಮರೆಯ ಬರಹಗಾರ ದಿವಂಗತ ನಾರಾಯಣ ಕೆ. ಉಚ್ಚಿಲ್ಕರ್’ ಕೃತಿಗಳನ್ನು ಡಾ. ತಾಳ್ತಜೆ ವಸಂತ ಕುಮಾರ್ ಬಿಡುಗಡೆಗೊಳಿಸಿದರು.ಕೃತಿ ವಿಮರ್ಶೆ ಅಗತ್ಯ: ಡಾ. ತಾಳ್ತಜೆಸಮಾರಂಭದ ಅಧ್ಯಕ್ಷತೆ ವಹಿಸಿದ ಡಾ.ತಾಳ್ತಜೆ ವಸಂತ ಕುಮಾರ್ ಮಾತನಾಡಿ ‘ಮುಂಬೈಯಲ್ಲಿ ಸಾಹಿತಿಯಾಗಿ ಹಾಗೂ ಸಂಘಟಕರಾಗಿ ಅತ್ಯಂತ ಕ್ರಿಯಾಶೀಲರಾಗಿದ್ದ ರಾಮಚಂದ್ರ ಉಚ್ಚಿಲರು ಉತ್ತಮ ವಾಗ್ಮಿ ಮತ್ತು ಅಧ್ಯಯನಶೀಲ ಬರಹಗಾರರು. ಅವರ ಚಿಂತನಾರ್ಹವಾದ ಭಾಷಣ ಮತ್ತು ಪ್ರಬಂಧಗಳು ಪುನ: ಪುನ: ಕೇಳುವಂತಿರುತ್ತಿದ್ದವು. ಚರಾ ಅವರ ಸಮಗ್ರ ಕೃತಿಗಳ ವಿಮರ್ಶೆ ಸರಿಯಾದ ರೀತಿಯಲ್ಲಿ ಆಗಬೇಕಿದೆ’ ಎಂದು ಅಭಿಪ್ರಾಯಪಟ್ಟರು.ಚರಾ ಜನ್ಮ ಶತಮಾನೋತ್ಸವ ಸಲಹಾ ಸಮಿತಿ ಸದಸ್ಯ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಸ್ವಾಗತಿಸಿದರು. ಗ್ರಂಥ ಸಂಪಾದಕಿ ಹಾಗೂ ಚರಾ ಪ್ರಕಾಶನದ ಕಾರ್ಯದರ್ಶಿ ಡಾ.ವಾಣಿ ಎನ್. ಉಚ್ಚಿಲ್ಕರ್ ಪ್ರಾಸ್ತಾವಿಕ ಮಾತುಗಳನ್ನಾಡಿ ಕೃತಿ ಪರಿಚಯ ನೀಡಿದರು. ಕಲಾ ಗಂಗೋತ್ರಿಯ ಕೆ.ಸದಾಶಿವ ಮಾಸ್ಟರ್ ವಂದಿಸಿದರು. ಅಡ್ಕ ಭಗವತಿ ಕ್ಷೇತ್ರದ ಮೂಲ್ಯಚ್ಚ ರವೀಂದ್ರನಾಥ ಆರ್‌.ಉಚ್ಚಿಲ್, ಕಾರ್ಯಕಾರಿ ಸಮಿತಿಯ ಚಿದಾನಂದ ಆರ್. ಉಚ್ಚಿಲ್, ರಾಜಶೇಖರ ಆರ್. ಉಚ್ಚಿಲ್, ನವನೀತ ಎನ್. ಉಚ್ಚಿಲ್ಕರ್, ವಾಸುದೇವ ಉಚ್ಚಿಲ್, ನಿಧೀಶ್ ಉಪಸ್ಥಿತರಿದ್ದರು.‘ಕರ್ಣ ಪರ್ವ’ ತಾಳಮದ್ದಳೆ : ಕಾರ್ಯಕ್ರಮದ ಅಂಗವಾಗಿ ಹಿರಿಯ ಕಲಾವಿದರಿಂದ ‘ಕರ್ಣ ಪರ್ವ’ ಯಕ್ಷಗಾನ ತಾಳಮದ್ದಳೆ ಜರಗಿತು. ಡಾ. ಎಂ.ಪ್ರಭಾಕರ ಜೋಶಿ, ಭಾಸ್ಕರ ರೈ ಕುಕ್ಕುವಳ್ಳಿ, ಸದಾಶಿವ ಆಳ್ವ ತಲಪಾಡಿ, ವಿನಯ ಆಚಾರ್ಯ ಹೊಸಬೆಟ್ಟು, ಪ್ರವೀಣ್ ರೈ ಎಲಿಯಾರ್ ಅರ್ಥಧಾರಿಗಳಾಗಿದ್ದರು. ರಾಜಾರಾಮ ಹೊಳ್ಳ ಕೈರಂಗಳ ಭಾಗವತಿಕೆ ಹಾಗೂ ಮಯೂರ್ ನಾಯಗ ಮಾಡೂರು ಮತ್ತು ಸ್ಕಂದ ಪ್ರಸಾದ್ ಮಯ್ಯ ವರ್ಕಾಡಿ ಹಿಮ್ಮೇಳದಲ್ಲಿ ಭಾಗವಹಿಸಿದ್ದರು.

ಪ್ರಾದೇಶಿಕ ವಾರ್ತೆಗಳು

ಸುರತ್ಕಲ್‌-ಬಿ.ಸಿ.ರೋಡ್‌ ಹೈವೇ ಅಭಿವೃದ್ಧಿ ಕಾಮಗಾರಿಗಳಿಗೆ ನಾಳೆ ಸಂಸದ ಕ್ಯಾ. ಚೌಟ ನೇತೃತ್ವದಲ್ಲಿ ಚಾಲನೆ. 28.58 ಕೋಟಿ ರೂ. ವೆಚ್ಚದಲ್ಲಿ ಒಟ್ಟು 37.42 ಕಿಮೀ. ದೂರದ ಹೆದ್ದಾರಿ ರಿಪೇರಿ ಕೆಲಸ ಆರಂಭ

ಮಂಗಳೂರು: ನವ ಮಂಗಳೂರು ಬಂದರು ವ್ಯಾಪ್ತಿ (NMPRCL)ಗೆ ಸೇರಿದ ಸುರತ್ಕಲ್‌-ಬಿ.ಸಿ. ರೋಡ್‌ವರೆಗಿನ ರಾಷ್ಟ್ರೀಯ ಹೆದ್ದಾರಿಗಳ ನಿರ್ವಹಣೆ, ಮರು ಡಾಂಬರೀಕರಣ ಹಾಗೂ ಸುರಕ್ಷತಾ ವ್ಯವಸ್ಥೆ ಅಳವಡಿಕೆ ಸಂಬಂಧಪಟ್ಟ ಕಾಮಗಾರಿಗಳ ಆರಂಭಕ್ಕೆ ನಾಳೆ(ಏ. 24) ಸಂಜೆ 3.30ಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನೇತೃತ್ವದಲ್ಲಿ ಚಾಲನೆ ದೊರೆಯಲಿದೆ.ಸುರತ್ಕಲ್ ನ ಗೋವಿಂದದಾಸ್ ಕಾಲೇಜಿನ ಸಮೀಪದ ಹೆದ್ದಾರಿ ಬಳಿ ನಡೆಯುವ ಕಾರ್ಯಕ್ರಮದಲ್ಲಿ ಬಹುಬೇಡಿಕೆ ಹಾಗೂ ನಿರೀಕ್ಷೆಯ ಕಾಮಗಾರಿಗೆ ಚಾಲನೆ ದೊರೆಯಲಿದೆ. ಈ ಕಾರ್ಯಕ್ರಮದಲ್ಲಿ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ ಜತೆಗೆ ಶಾಸಕರಾದ ಡಾ.ಭರತ್ ಶೆಟ್ಟಿ ವೈ. ವೇದವ್ಯಾಸ್ ಕಾಮತ್, ರಾಜೇಶ್ ನಾಯ್ಕ್ ಹಾಗೂ ನವ ಮಂಗಳೂರು ಬಂದರು ರಸ್ತೆ ಕಂಪೆನಿ ಲಿಮಿಟೆಡ್‌(ಎನ್‌ಎಂಪಿಆರ್‌ಸಿಎಲ್‌)ನ ಅಧಿಕಾರಿಗಳು ಭಾಗವಹಿಸಲಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಯ ಅದರಲ್ಲೂ ಮಂಗಳೂರು ನಗರ ವ್ಯಾಪ್ತಿಯಲ್ಲಿ ಹಾದು ಹೋಗುವ ಸುರತ್ಕಲ್‌-ನಂತೂರು, ಬಿಸಿ.ರೋಡ್‌-ಪಡೀಲ್‌ ಹಾಗೂ ನಂತೂರು ಜಂಕ್ಷನ್‌ನಿಂದ ಪಡೀಲ್‌ವರೆಗಿನ ಬೈಪಾಸ್‌ ರಸ್ತೆ ಸೇರಿದಂತೆ ಒಟ್ಟು 37.42 ಕಿಮೀ. ದೂರದ ಹೆದ್ದಾರಿಗಳ ರಿಪೇರಿ, ಮರುಡಾಂಬರೀಕರಣ ಹಾಗೂ ನಿರ್ವಹಣೆ ಕೆಲಸಗಳಿಗಾಗಿ ನವ ಮಂಗಳೂರು ಬಂದರು ರಸ್ತೆ ಕಂಪೆನಿ ಲಿಮಿಟೆಡ್‌(ಎನ್‌ಎಂಪಿಆರ್‌ಸಿಎಲ್‌) ಒಟ್ಟು 28.58 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗಳು ನಡೆಯಲಿವೆ. ಮುಗ್ರೋಡಿ ಕನ್ಸ್‌ಸ್ಟ್ರಕ್ಷನ್‌ ಈ ಎಲ್ಲ ಹೆದ್ದಾರಿ ಕಾಮಗಾರಿಗಳ ಗುತ್ತಿಗೆಯನ್ನು ಪಡೆದುಕೊಂಡಿದೆ.ಒಟ್ಟು 28.58 ಕೋಟಿ ರೂ. ವೆಚ್ಚದಲ್ಲಿ ಸುರತ್ಕಲ್‌ನಿಂದ ಎಪಿಎಂಸಿ, ಕೂಳೂರಿನಿಂದ ಎಜೆ ಆಸ್ಪತ್ರೆ ಹಾಗೂ ನಂತೂರಿನಿಂದ ಪಡೀಲ್‌ವರೆಗಿನ 11.084 ಕಿಮೀ. ಉದ್ದದ ರಸ್ತೆಯ ಡಾಂಬರೀಕರಣ ನಡೆಯಲಿದೆ. ಅಲ್ಲದೆ, ಹೆದ್ದಾರಿ ಬದಿ ಬೆಳೆದಿರುವ ಗಿಡ-ಗಂಟಿ ತೆಗೆಯುವ ಹಾಗೂ ಸ್ವಚ್ಛತಾ ಕಾರ್ಯ ನಡೆಯಲಿದೆ. ಜತೆಗೆ ರಸ್ತೆ ಬದಿ ಜಾಗದ ನಿರ್ವಹಣೆ, ಇತರ ನಿರ್ವಹಣಾ ಕಾಮಗಾರಿ ಹಾಗೂ ಹೆದ್ದಾರಿಯ ಸುರಕ್ಷತಾ ಕ್ರಮಗಳ ಅಳವಡಿಕೆ ಕಾರ್ಯ ಕೂಡ ನಡೆಯಲಿದೆ.ನವಮಂಗಳೂರು ಬಂದರು ಸಂಪರ್ಕಿಸುವ ಹೆದ್ದಾರಿಗಳ ನವೀಕರಣ ಹಾಗೂ ಸುರಕ್ಷತಾ ಕ್ರಮ ಅಳವಡಿಕೆ ಕಾರ್ಯವು ಅನುದಾನದ ಕೊರತೆಯಿಂದಾಗಿ ಬಹು ದಿನಗಳಿಂದ ಬಾಕಿಯಾಗಿತ್ತು. ಆದರೆ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ ಅವಿರತ ಪರಿಶ್ರಮದ ಫಲವಾಗಿ ಈ ಹೆದ್ದಾರಿಗಳಿಗೆ ಇದೀಗ ಕಾಯಕಲ್ಪ ದೊರೆಯುತ್ತಿರುವುದು ಗಮನಾರ್ಹ.

ಕರ್ನಾಟಕ ವಾರ್ತೆಗಳು

ವಾರ್ತಾ ಇಲಾಖೆಯಿಂದ ಡಿಜಿಟಲ್‌ ಜಾಹೀರಾತಿಗೆ ಮಾಧ್ಯಮ, ಏಜೆನ್ಸಿಗಳ ನೊಂದಣಿಗೆ ಅರ್ಜಿ ಆಹ್ವಾನ

ಬೆಂಗಳೂರು, ಏಪ್ರಿಲ್‌ 23 (ಕರ್ನಾಟಕ ವಾರ್ತೆ) :ಸರ್ಕಾರದ ನೀತಿ ಮತ್ತು ಯೋಜನೆಗಳನ್ನು ಅಂತರ್ಜಾಲ ಬಳಸುವ ಜನರಿಗೆ ಡಿಜಿಟಲ್‌ ಜಾಹೀರಾತುಗಳ ಮೂಲಕ ತಲುಪಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕರ್ನಾಟಕ ಡಿಜಿಟಲ್‌ ಜಾಹೀರಾತು ಮಾರ್ಗಸೂಚಿ – 2024 ಅನ್ನು ಜಾರಿಗೆ ತಂದಿದೆ ಎಂದು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಕರ್ನಾಟಕ ಸರ್ಕಾರವು ಡಿಜಿಟಲ್‌ ಜಾಹೀರಾತಿಗಾಗಿ ಡಿಜಿಟಲ್‌ ಜಾಹೀರಾತು ಏಜೆನ್ಸಿ ಮತ್ತು ಡಿಜಿಟಲ್‌ ಮಾಧ್ಯಮಗಳನ್ನು ಎಂಪ್ಯಾನಲ್‌ಮೆಂಟ್‌ ಮಾಡಿಕೊಳ್ಳುತ್ತಿದೆ. ದೇಶದಲ್ಲಿಯೇ ಮೊದಲ ಬಾರಿಗೆ ಡಿಜಿಟಲ್‌ ಏಜೆನ್ಸಿ ಮತ್ತು ಮಾಧ್ಯಮಗಳನ್ನು ನೊಂದಾಯಿಸಿಕೊಳ್ಳಲಾಗುತ್ತಿದೆ ಎಂದು ಮಾನ್ಯ ಮುಖ್ಯಮಂತ್ರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಕೆಲವು ವರ್ಷಗಳಿಂದ ಮಾಧ್ಯಮದ ವ್ಯಾಪ್ತಿ ಮತ್ತು ಸ್ವರೂಪ ಬದಲಾಗಿದೆ. ಅಂತರ್ಜಾಲ, ಖಾಸಗಿ ಕಂಪ್ಯೂಟರ್‌, ಸ್ಮಾರ್ಟ್‌ ಟಿವಿ ಹಾಗೂ ಸ್ಮಾರ್ಟ್‌ ಫೋನ್‌, ಸಾಮಾಜಿಕ ಜಾಲತಾಣಗಳ ಬಳಕೆ ಹೆಚ್ಚಾಗಿದೆ. ಸಾಂಪ್ರದಾಯಿಕ ಜಾಹೀರಾತುಗಳಿಗಿಂತ ಡಿಜಿಟಲ್‌ ಜಾಹೀರಾತು ಹೆಚ್ಚು ಪ್ರಭಾವಶಾಲಿಯಾಗಿದೆ. ಜೊತೆಗೆ, ಹೆಚ್ಚು ವ್ಯಾಪ್ತಿ ಮತ್ತು ನಿರ್ದಿಷ್ಟ ಜನರನ್ನು ತಲುಪುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಕಾರ್ಯಕ್ರಮಗಳು ಮತ್ತು ನೀತಿಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಹಾಗೂ ಮಾಹಿತಿ, ಶಿಕ್ಷಣ ಮತ್ತು ಸಂವಹನ (ಐಇಸಿ) ಮಾದರಿಯಲ್ಲಿ ಡಿಜಿಟಲ್‌ ಜಾಹೀರಾತು ನೀಡಲು ಕರ್ನಾಟಕ ಡಿಜಿಟಲ್‌ ಜಾಹೀರಾತು ಮಾರ್ಗಸೂಚಿಯನ್ನು ಸರ್ಕಾರ ಹೊರತಂದಿದೆ ಎಂದು ಮುಖ್ಯಮಂತ್ರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಹೊಸ ಕರ್ನಾಟಕ ಡಿಜಿಟಲ್‌ ಜಾಹೀರಾತು ಮಾರ್ಗಸೂಚಿ ಅನ್ವಯ ಎಲ್ಲಾ ಇಲಾಖೆಗಳು, ನಿಗಮಗಳು, ಪ್ರಾಧಿಕಾರಗಳು, ಮಂಡಳಿಗಳು, ಸ್ಥಳೀಯಾಡಳಿತಗಳು, ಪುರಸಭೆಗಳು, ನಗರ ಪಾಲಿಕೆಗಳು ಮೊದಲಾದವುಗಳಲ್ಲಿ ಡಿಜಿಟಲ್‌ ಜಾಹೀರಾತುಗಳನ್ನು ಕಡ್ಡಾಯವಾಗಿ ಈ ಮಾರ್ಗಸೂಚಿಗೆ ಅನುಸಾರವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮೂಲಕ ಬಿಡುಗಡೆ / ಪೂರೈಸಬೇಕಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.ಕರ್ನಾಟಕ ಡಿಜಿಟಲ್‌ ಜಾಹೀರಾತು ಮಾರ್ಗಸೂಚಿ ಅನ್ವಯ ವೀಡಿಯೊ ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್‌ಗಳಾದ ಗೂಗಲ್‌ (ಯೂಟ್ಯೂಬ್‌), ಮೆಟಾ (ಫೇಸ್‌ಬುಕ್, ಇನ್‌ಸ್ಟಾಗ್ರಾಂ, ವಾಟ್ಸಾಪ್‌ ಬಿಸಿನೆಸ್‌, ವಾಟ್ಸಾಪ್‌ ಚಾನಲ್), ಸರ್ಚ್ ಇಂಜಿನ್‌ಗಳಾದ ಗೂಗಲ್‌, ಬಿಂಗ್‌, ಸಾಮಾಜಿಕ ಜಾಲತಾಣಗಳಾದ ಎಕ್ಸ್‌ (ಈ ಹಿಂದೆ ಟ್ವಿಟರ್‌), ಫೇಸ್‌ಬುಕ್‌, ಇನ್‌ಸ್ಟಾಗ್ರಾಂ, ಲಿಂಕ್‌ಡ್‌ಇನ್‌, ವಾಟ್ಸಾಪ್‌, ಸ್ನಾಪ್‌ಚಾಟ್‌, ಟೆಲಿಗ್ರಾಂ, ಒಟಿಟಿ ಪ್ಲಾಟ್‌ಫಾರ್ಮ್‌ಗಳಾದ ನೆಟ್‌ಫ್ಲಿಕ್ಸ್‌, ಅಮೇಜಾನ್‌ ಫ್ರೈಮ್‌, ಡಿಸ್ನಿ ಹಾಟ್‌ಸ್ಟಾರ್‌ ಸೋನಿಲೈವ್‌, ಜಿಯೋ ಸಿನಿಮಾ, ಜೀ 5, ವೂಟ್‌, ಸನ್‌ ನೆಕ್ಸ್ಟ್‌ ಮತ್ತು ಟಾಕೀಸ್, ಫಿನ್‌ಟೆಕ್‌ ಪ್ಲಾಟ್‌ಫಾರ್ಮ್‌ಗಳಾದ ಪೇಟಿಎಂ, ಪೋನ್‌ಪೇ ಮತ್ತು ಜಿಪೇ ಸೇರಿದಂತೆ ಇನ್ನಿತರ ಡಿಜಿಟಲ್‌ ವೇದಿಕೆಗಳಡಿ ಜಾಹೀರಾತು ಅರ್ಹ ಏಜೆನ್ಸಿಗಳ ಮೂಲಕ ನೀಡಲು ಅವುಗಳನ್ನು ಎಂಪ್ಯಾನಲ್‌ ಮಾಡಿಕೊಳ್ಳಲು ವಾರ್ತಾ ಇಲಾಖೆಯು ಉದ್ದೇಶಿಸಿದೆ.ಹಾಗೆಯೇ, ಅಪ್ಲಿಕೇಶನ್ ಡೌನ್‌ಲೋಡ್ ಪ್ಲಾಟ್‌ಫಾರ್ಮ್ ಅಡಿಯಲ್ಲಿ ಬರುವ ವೀಡಿಯೊ, ಡಿಸ್‌ಪ್ಲೇ ಮತ್ತು ಸರ್ಚ್‌ ಸೇರಿದಂತೆ ವಿವಿಧ ವೇದಿಕೆಗಳಡಿ ಜಾಹೀರಾತು ನೀಡಿಕೆ, ಗೂಗಲ್‌ ಪ್ಲೇ ಸ್ಟೋರ್‌ ಅಥವಾ ಆಪಲ್‌ ಆಪ್‌ ಸ್ಟೋರ್‌ನಲ್ಲಿ ಕನಿಷ್ಠ 1 ಲಕ್ಷ ಡೌನ್‌ಲೋಡ್‌ ಹೊಂದಿರುವ ಯಾವುದೇ ಆಪ್‌ ಮತ್ತು ಸುದ್ದಿಗಳನ್ನು ಪ್ರಸಾರ ಮಾಡುವ ಯಾವುದೇ ಡಿಜಿಟಲ್ ಘಟಕ-ವೆಬ್ ಅಪ್ಲಿಕೇಶನ್ ಅಥವಾ ಮೊಬೈಲ್ ಅಪ್ಲಿಕೇಶನ್ ಸೇರಿದಂತೆ ವಿವಿಧ ಮೂಲಗಳಿಂದ ಸುದ್ದಿಗಳನ್ನು ಸಂಗ್ರಹಿಸಿ ಜನರಿಗೆ ನೀಡುವ ವೇದಿಕೆಗಳು. ಇನ್‌ಶಾರ್ಟ್‌ ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಫಾಲೋವರ್‌ಗಳನ್ನು ಹೊಂದಿರುವ ಇನ್‌ಫ್ಲ್ಯುಯೆನ್ಸರ್‌ಗಳು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನೋಂದಾಯಿಸಿಕೊಂಡು ಜಾಹೀರಾತು ಪಡೆಯಲು ಅರ್ಹತೆ ಹೊಂದುತ್ತವೆ. ಡಿಜಿಟಲ್ ಜಾಹೀರಾತಿಗಾಗಿ ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯೊಂದಿಗೆ ಸಹಯೋಗ ಹೊಂದಲು ಬಯಸುವ ಏಜೆನ್ಸಿಗಳು ಭಾರತ ಸರ್ಕಾರದ ರಿಜಿಸ್ಟ್ರಾರ್‌ ಆಫ್‌ ಕಂಪನೀಸ್‌ನಲ್ಲಿ ನೋಂದಣಿಯಾದ ಪ್ರೈವೇಟ್‌ ಲಿಮಿಟೆಡ್‌ ಕಂಪನಿ, ಪಬ್ಲಿಕ್‌ ಲಿಮಿಟೆಡ್‌ ಕಂಪನಿ, ಪಾಲುದಾರಿಕೆ, ಲಿಮಿಟೆಡ್‌ ಲಯಬಿಲಿಟಿ ಪಾಲುದಾರಿಕೆ ಹೊಂದಿರಬೇಕು. ಎಂಪ್ಯಾನೆಲಿಂಗ್‌ ಸಮಯದಲ್ಲಿ ಕನಿಷ್ಠ ಎರಡು ವರ್ಷವಾಗಿರಬೇಕು. ಜಿಎಸ್‌ಟಿ ನೋಂದಣಿ ಇರಬೇಕು. ಕರ್ನಾಟಕದಲ್ಲಿ ಕಾರ್ಯನಿರ್ವಹಿಸುತ್ತಿರಬೇಕು ಅಥವಾ ಕರ್ನಾಟಕದಲ್ಲಿ ಪೂರ್ಣ ಪ್ರಮಾಣದ ಕಚೇರಿ ಇರಬೇಕು. ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಪ್ರಾವೀಣ್ಯತೆ ಇರಬೇಕು. ಡಿಜಿಟಲ್ ಜಾಹೀರಾತು ಮತ್ತು ಸಾಮಾಜಿಕ ಜಾಲತಾಣದ ಬಗ್ಗೆ ಆಳವಾದ ಜ್ಞಾನವಿರಬೇಕು. ಸರ್ಕಾರಗಳಿಗೆ ಪ್ಲಾಟ್‌ಫಾರ್ಮ್‌ಗಳಲ್ಲಿ ಡಿಜಿಟಲ್ ಜಾಹೀರಾತು ನೀಡಲು ಗೂಗಲ್‌ ಅಥವಾ ಮೆಟಾ ಜೊತೆಗೆ ಮಾನ್ಯವಾದ ಒಪ್ಪಂದ/ಒಡಂಬಡಿಕೆ ಹೊಂದಿರಬೇಕು. ತಮ್ಮ ಪ್ಲಾಟ್‌ಫಾರ್ಮ್‌ಗಳಲ್ಲಿ ಸರ್ಕಾರದ ಜಾಹೀರಾತು ನೀಡಲು ಗೂಗಲ್‌ ಅಥವಾ ಮೆಟಾದಿಂದ ಅನುಮತಿ ಪಡೆದುಕೊಂಡಿರಬೇಕು ಎಂದು ಷರತ್ತುಗಳನ್ನು ನಿಗದಿ ಪಡಿಸಿದೆ.ಡಿಜಿಟಲ್‌ ಮಾಧ್ಯಮ ಘಟಕಕ್ಕೆ ಅರ್ಹತೆವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯೊಂದಿಗೆ ಡಿಜಿಟಲ್‌ ಜಾಹೀರಾತು ನೀಡಲು ಎಂಪ್ಯಾನೆಲ್‌ಮೆಂಟ್‌ಗಾಗಿ ಡಿಜಿಟಲ್‌ ಮಾಧ್ಯಮ ಘಟಕವು ಭಾರತದ ಸರ್ಕಾರದ ರಿಜಿಸ್ಟ್ರಾರ್‌ ಆಫ್‌ ಕಂಪನೀಸ್‌ನಲ್ಲಿ ನೋಂದಣಿಯಾದ ಕಾನೂನುಬದ್ಧ ಸಂಘಟಿತ ಘಟಕವಾಗಿರಬೇಕು. ಕನಿಷ್ಠ ಒಂದು ವರ್ಷ ಕಾಲ ಯಾವುದೇ ಸಮಯದ ಅಂತರವಿಲ್ಲದೆ ನಿರಂತರವಾಗಿ ಕಂಟೆಂಟ್‌ ಪ್ರಕಟಿಸಿರಬೇಕು.

ಪ್ರಾದೇಶಿಕ ವಾರ್ತೆಗಳು

ನಿವೃತ್ತ ಸರಕಾರಿ ನೌಕರರ ವೇತನ ನಷ್ಟದ ಬೇಡಿಕೆಗೆ ಪೂರಕ ಸ್ಪಂದನೆ. ಎಂಎಲ್‌ಸಿ ಐವನ್ ಡಿಸೋಜ ಜತೆಗೆ ನಿಯೋಗ ಸಿಎಂ ಭೇಟಿ

ಮಂಗಳೂರು: ಕರ್ನಾಟಕ ನಿವೃತ್ತ ಸರಕಾರಿ ನೌಕರರ ವೇದಿಕೆ ಕಳೆದ ಕೆಲವು ತಿಂಗಳುಗಳಿಂದ ತಮ್ಮ ಬೇಡಿಕೆಯ ಈಡೇರಿಸಲು ಹೋರಾಟ ನಡೆಸುತ್ತಿದ್ದು, ಇತ್ತೀಚೆಗೆ ಎಂಎಲ್‌ಸಿ ಐವನ್ ಡಿಸೋಜ ಅವರ ಜತೆಗೆ ವೇದಿಕೆಯ ಪದಾಧಿಕಾರಿಗಳು ಬೆಂಗಳೂರಿನ ಮುಖ್ಯಮಂತ್ರಿ ಅವರ ಗೃಹಕಚೇರಿ ಕಾವೇರಿ ಭವನದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು. 7 ನೇ ವೇತನ ಆಯೋಗದಲ್ಲಿ ಜು.1,2022ರಿಂದ ಜು.31,2024ರ ಅವಧಿಯಲ್ಲಿ ನಿವೃತ್ತರಾದ ಕರ್ನಾಟಕ ರಾಜ್ಯ ಸರಕಾರಿ ನೌಕರರಿಗೆ ಡಿ.ಸಿ.ಆರ್.ಜಿ. ಕಮ್ಯೂಟೇಶನ್ ಹಾಗೂ ಗಳಿಕೆ ರಜೆ ನಗದೀಕರಣಗಳನ್ನು ಆರನೇ ವೇತನ ಆಯೋಗದ ಅನ್ವಯ ನೀಡಿದ್ದು, ಇದರಿಂದ ನೌಕರರಿಗೆ ಆರ್ಥಿಕ ನಷ್ಟ ಉಂಟಾಗಿರುವುದನ್ನು ಗಮನಕ್ಕೆ ತರಲಾಯಿತು. ಮುಖ್ಯಮಂತ್ರಿ ಯವರು ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ನಿವೃತ್ತ ಸರಕರಿ ನೌಕರರ ವೇದಿಕೆಯ ರಾಜ್ಯ ಮಹಾಪ್ರಧಾನ ಸಂಚಾಲಕ ಎಂ.ಪಿ.ಎಂ.ಷಣ್ಮುಗಯ್ಯ, ಸಂಚಾಲಕರಾದ ಸ್ಟ್ಯಾನಿ ತಾವ್ರೋ, ಸುಜಾತ, ಜಲಜ,ರಂಗಣ್ಣ, ಸಿರಿಲ್ ರಾಬರ್ಟ್ ಡಿಸೋಜ, ಜಗದೀಶ್ ರಾವ್, ಮುಬಾರಕ್, ಮಂಜುಳಾರಾಣಿ ಹಾಗೂ ಮಹೇಶ್ ಉಪಸ್ಥಿತರಿದ್ದರು.ಎಂಎಲ್‌ಸಿ ಐವನ್ ಡಿಸೋಜ ಅವರು ಕರ್ನಾಟಕ ರಾಜ್ಯ ನಿವೃತ್ತ ಸರಕಾರಿ ನೌಕರರ ವೇದಿಕೆಯ ಬೇಡಿಕೆ ಈಡೇರಿಸುವ ಕೆಲಸದಲ್ಲಿ ಸಾಕಷ್ಟು ಮುತುವರ್ಜಿ ವಹಿಸಿದ್ದು ವೇದಿಕೆಯ ಪದಾಧಿಕಾರಿಗಳು ಕೃತಜ್ಞತೆ ಸಲ್ಲಿಸಿದ್ದಾರೆ. ಮುಂದೆ ನಿರಂತರವಾಗಿ ಸಿಎಂ ಅವರ ಗಮನಕ್ಕೆ ವಿಚಾರವನ್ನು ತರುವ ಮೂಲಕ ಬೇಡಿಕೆ ಈಡೇರಿಸಲು ಸತತ ಪ್ರಯತ್ನ ಪಡಲಾಗುವುದು ಎಂದು ಸಂಚಾಲಕ ಸ್ಟ್ಯಾನಿ ತಾವ್ರೋ ಮಾಹಿತಿ ನೀಡಿದ್ದಾರೆ.ಚಿತ್ರö: 23ಎಂ- ಐವನ್

ಪ್ರಾದೇಶಿಕ ವಾರ್ತೆಗಳು

KANACHUR empowers the graduates of MANGALORE UNIVERSITY with CPR & First Aid skills.

Mangalore, 22nd April : In a first of its kind skill empowerment program at Mangalore University, the leadership team lead by Dr PL Dharma – Hon’ble VC, Mangalore University & Dr Jayaraj Amin – Hon’ble Chairman, Dept of Political Science, Mangalore University inaugurated a ‘CPR & FIRST AID’ program, in association with Kanachur Institute of Medical Sciences, Natekal, Mangaluru. Dr. Rohan Monis – Cheif Administrative Officer, Kanachur Hospital & Research Centre was the Guest of Honor; Dr Srinivas (JR III) & Dr Ubedulla (JR I) from Dept of Emergency Medicine, KIMS were the resource persons. In his welcome address, Dr Jayaraj Amin expressed his gratefulness to Kanachur Institute for bringing together a team & a program for empowering their graduates with a community based essential skill. Dr Rohan lauded the efforts of the leadership team of Mangalore University for taking this leap into empowering the graduates with a life saving skill that will improve social well-being; also educating them that India’s Emergency Helpline no is 112. Dr PL Dharma expressed that emergencies happen everywhere but are we equipped with the basics? encouraging the students to do more and be more with no gender and religious boundaries, in their minds.Dr Srinivas & Dr Ubedulla did a didactic session with hands on demonstration of CPR skills. The graduates were thrilled and feedback was great.Cardio Pulmonary Resuscitaiton (CPR) is an emergency procedure that is done when someone’s heartbeat has stopped. Kanachur Institute of Medical Sciences advocates CPR skills – a vital life saving procedure.

Scroll to Top