Author name: editor

ಪ್ರಾದೇಶಿಕ ವಾರ್ತೆಗಳು

‘ಸಚ್ಚಾರಿತ್ರೃ ಬೆಳೆಸುವುದು ಸಾಹಿತ್ಯದ ಉದ್ದೇಶವಾಗಲಿ’ ಸ್ವಾತಂತ್ರೃ ಹೋರಾಟಗಾರ ಮಟ್ಟಾರ ವಿಟ್ಠಲ ಕಿಣಿ ಆಶಯ

ಮಂಗಳೂರು : ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನ ದ.ಕ.ಜಿಲ್ಲಾ ಸಮಿತಿ ವತಿಯಿಂದ ಸ್ವಾತಂತ್ರೃ ಹೋರಾಟಗಾರ, ಹಿರಿಯ ಸಾಹಿತಿ ಮಟ್ಟಾರ ವಿಟ್ಠಲ ಕಿಣಿ ಅವರ 96ನೇ ಹುಟ್ಟುಹಬ್ಬದ ಅಂಗವಾಗಿ ಗುರುವಾರ ನಗರದ ಅಳಕೆಯಲ್ಲಿರುವ ಸ್ವಗೃಹದಲ್ಲಿ ಅವರನ್ನು ಸನ್ಮಾನಿಸಲಾಯಿತು.ಸನ್ಮಾನ ಸ್ವೀಕರಿಸಿದ ಮಟ್ಟಾರ ವಿಟ್ಠಲ ಕಿಣಿ ಮಾತನಾಡಿ ‘ಯುವ ಸಮುದಾಯದಲ್ಲಿ ಸಚ್ಚಾರಿತ್ರೃ ಮತ್ತು ದೇಶಾಭಿಮಾನ ರೂಪಿಸಿ ಬೆಳೆಸುವುದು ಕೂಡಾ ಭಾರತೀಯ ಸಾಹಿತ್ಯದ ಉದ್ದೇಶವಾಗಿದೆ. ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ನೀಡಿದರೆ ಮಾತ್ರ ದೇಶದ ಉನ್ನತಿಸಾಧ್ಯ. ಸಾವಿರಾರು ದೇಶ ಭಕ್ತರ ಬಲಿದಾನದಿಂದ ದೇಶ ಸ್ವಾತಂತ್ರೃ ಪಡೆದಿದೆ ಎನ್ನುವುದು ಸದಾ ನಮ್ಮ ಸ್ಮರಣೆಯಲ್ಲಿರಬೇಕು ಎಂದರು.ಸನ್ಮಾನ ನೆರವೇರಿಸಿದ ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಮಾತನಾಡಿ ‘ ವಿದ್ಯಾರ್ಥಿ ದೆಸೆಯಲ್ಲಿಯೇ ಕ್ವಿಟ್ ಇಂಡಿಯಾ ಚಳವಳಿ ಬಳಿಕ ಗೋವಾ ವಿಮೋಚನೆ ಹೋರಾಟದಲ್ಲಿ ಭಾಗವಹಿಸಿದ ಮಟ್ಟಾರ ವಿಟ್ಠಲ ಕಿಣಿ ಅವರ ಅಪ್ರತಿಮ ರಾಷ್ಟ್ರಭಕ್ತಿ , ಸಾಹಿತ್ಯ ಸೇವೆ ಸಮಾಜಕ್ಕೆ ಸದಾ ಪ್ರೇರಣೆಯಾಗಿದೆ ಎಂದರು.ಹಿರಿಯ ಪರ್ತಕರ್ತ ಕೆ.ಆನಂದ ಶೆಟ್ಟಿ, ಅಭಾಸಾಪ ದ.ಕ.ಜಿಲ್ಲಾ ಸಮಿತಿಯ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಜತೆ ಕಾರ್ಯದರ್ಶಿಲತೇಶ್ ಬಾಕ್ರಬೈಲ್, ಸಮಿತಿ ಸದಸ್ಯ ಡಾ.ಸುರೇಶ್ ನೆಗಳಗುಳಿ ಉಪಸ್ಥಿತರಿದ್ದರು. ಜಿಲ್ಲಾ ಸಮಿತಿಯ ಖಜಾಂಜಿ ಭಾಸ್ಕರ ರೈ ಕಟ್ಟಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಸುಮಂಗಲಾ ರತ್ನಾಕರ ವಂದಿಸಿದರು. ಫೋಟೋ : ಮಟ್ಟಾರ ವಿಠಲ ಕಿಣಿ……………………..

ಪ್ರಾದೇಶಿಕ ವಾರ್ತೆಗಳು

ಸರಕಾರಿ ಶಾಲೆಯಲ್ಲಿ ಬೆಳೆಸಿದ ತರಕಾರಿ ಜಿಲ್ಲಾಧಿಕಾರಿಗೆ ಕೊಡುಗೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿ ವಿದ್ಯಾರ್ಥಿನಿಯರು ಬುಧವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನು ಭೇಟಿ ಮಾಡಿ ಮಕ್ಕಳು ಬೆಳೆಸಿದ ತರಕಾರಿಯನ್ನು ನೀಡಿದರು. ಮಕ್ಕಳೊಂದಿಗೆ ಕೆಲ ಕಾಲ ಸಂವಾದ ನಡೆಸಿದ ಜಿಲ್ಲಾಧಿಕಾರಿಗಳು ಶಾಲೆಯಲ್ಲಿ ಮಕ್ಕಳು ನಡೆಸುವ ಕೃಷಿ ಚಟುವಟಿಕೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಶೀಘ್ರವೇ ಶಾಲೆಗೂ ಭೇಟಿ ನೀಡುವುದಾಗಿ ತಿಳಿಸಿದರು. ಈ ವೇಳೆ ಶಾಲಾಭಿವೃದ್ಫಿ ಸಮಿತಿ ಅಧ್ಯಕ್ಷ ರಾಮಚಂದ್ರ ಭಟ್, ಶಾಲಾ ಮುಖ್ಯೋಪಾಧ್ಯಾಯಿನಿ ಜ್ಯೋತಿ ಎ. ಎನ್, ಹಳೆ ವಿದ್ಯಾರ್ಥಿ ಸಂಘದ ಶಿವರಾಜ್, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಹಾಗೂ ಶಾಲೆಯ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.ಬಳಿಕ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಯತೀಶ್ ಅವರನ್ನು ಭೇಟಿ ಮಾಡಿ ಅವರಿಗೂ ವಿದ್ಯಾರ್ಥಿಗಳು ತರಕಾರಿ ನೀಡಿದರು.ವಾರದ ಹಿಂದೆ ಈ ಶಾಲೆಯ ಮಕ್ಕಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್ ಮೂಲಕ ಭೇಟಿ ಮಾಡಿ ಶಾಲೆಯಲ್ಲಿ ಬೆಳೆದ ತರಕಾರಿ ನೀಡಿದ್ದರು. ಮುಖ್ಯಮಂತ್ರಿ ಅವರು ಶಾಲೆಗೆ 2 ಕಂಪ್ಯೂಟರ್ ಹಾಗೂ ಒಂದು ಪ್ರೊಜೆಕ್ಟರ್ ಗಿಫ್ಟ್ ನೀಡಿದ್ದರು.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸಹಾಭಾಗೀತ್ವದಲ್ಲಿ ಅಕ್ಟೋಬರ್ 23,2018 ರಂದು ಈ ಶಾಲೆಯಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ಹಮ್ಮಿಕೊಂಡಿತ್ತು. ಈ ಶಾಲೆಯಲ್ಲಿ ಆಗ ವಿದ್ಯಾರ್ಥಿಗಳ ಸಂಖ್ಯೆ 38 ಇದ್ದು ಈಗ 100 ಸನಿಹದಲ್ಲಿದೆ.

ಪ್ರಾದೇಶಿಕ ವಾರ್ತೆಗಳು

Blood Donation Camp at P.A. College

On 15 April 2025, Youth Red Cross, NSS, and IQAC, of PA First Grade College in collaboration with the Red Cross Society Blood Bank, Government Lady Goschen Hospital, Mangalore organised a Blood Donation Camp. Dr. Sukhesh, Medical Officer of Dakshina Kannada Indian Red Cross Society was the chief guest. He stated that among all forms of donations, blood donation is the greatest, as it not only saves lives but also plays a crucial role in maintaining our own health. Dr. Sarfraz J. Hasim, Principal of P.A. First Grade College, presided over the event and delivered the presidential address. The event was attended by several distinguished guests, including Mr Praveen Kumar, Coordinator, Indian Red Cross Society, Dakshina Kannada District; Mr. Abbas Uchchil, Former Sales and Marketing Manager, Eco-Lab K.S.E.; Dr. Ramiz M. K., Principal, P.A. College of Engineering; Ms. Afeef, Principal, P.A. Institute of Physiotherapy; Prof. Ismail Khan, Vice Principal, P.A. Polytechnic; Mr. Harris T.D., Purchase Manager, P.A.E.T.; Heads of various departments. Youth Red Cross Coordinators, Mr. Saara Maskurunnis and Dr. Shijin N., NSS Coordinators, Ms. Chaitra N.V. and Ms. Itashree, and IQAC Coordinator,Ms. Vanishree V., were also seated on the dais.Ms. Shafna Shireen, from 3rd year BCA welcomed the gathering while Ms Fowz Fatima from 2nd year BCA proposed vote of thanks. Ms Hiba Mariam served as the MC for the program. A total of 150 students voluntarily donated blood during the camp

ಪ್ರಾದೇಶಿಕ ವಾರ್ತೆಗಳು

ಪಿ.ಎ ಕಾಲೇಜಿನ ಬ್ಲಡ್ ಡೊನೇಶನ್ ಕ್ಯಾಂಪ್

ಯೂತ್ ರೆಡ್ ಕ್ರಾಸ್, ಎನ್.ಎಸ್.ಎಸ್. ಮತ್ತು ಐ.ಕ್ಯೂ.ಎ.ಸಿ ಅಂಗವಾಗಿ ರೆಡ್ ಕ್ರಾಸ್ ಸೊಸೈಟಿ ಬ್ಲಡ್ ಬ್ಯಾಂಕ್ ಸರಕಾರಿ ಲೇಡಿಗೋಶನ್ ಹಾಸ್ಪಿಟಲ್, ಮಂಗಳೂರು ಇದರ ಸಹಭಾಗಿತ್ವದಲ್ಲಿ ಪಿ.ಎ. ಪ್ರಥಮ ದರ್ಜೆ ಕಾಲೇಜಿನಲ್ಲಿ ಬ್ಲಡ್ ಡೊನೇಶನ್ ಕ್ಯಾಂಪ್ ಎಪ್ರಿಲ್ 15, 2025 ರಂದು ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ನೆರವೇರಿತು‌. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ದ.ಕ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ವೈದ್ಯಕೀಯ ಅಧಿಕಾರಿಗಳಾದ ಡಾ. ಸುಖೇಶ್ ಮಾತನಾಡಿ “ದಾನಗಳಲ್ಲಿ ಶ್ರೇಷ್ಠದಾನ ರಕ್ತದಾನ ಆದರೂ ಅದು ಇನ್ನೊಂದು ಜೀವ ಉಳಿಸುವುದಲ್ಲದೆ ರಕ್ತದಾನ ನಮ್ಮ ಆರೋಗ್ಯವನ್ನು ಕಾಪಾಡುವಲ್ಲಿ ಮಹತ್ತರ ಪಾತ್ರ ವಹಿಸುವುದು” ಎಂದರು. ಪಿ.ಎ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಸರ್ಫ್ರಾಜ್ ಜೆ ಹಾಸಿಂ ಅಧ್ಯಕ್ಷೀಯ ನುಡಿಗಳನ್ನಾಡಿದರು. ಅತಿಥಿಗಳಾದ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದ.ಕ. ಜಿಲ್ಲೆಯ ನಿರೂಪಕರಾದ ಪ್ರವೀಣ್ ಕುಮಾರ್, ಇಕೋಲಾಬ್ ಕೆ.ಎಸ್‌.ಎ. ಇದರ ಮಾಜಿ ಸೇಲ್ಸ್ ಎಂಡ್ ಮಾರ್ಕೆಟಿಂಗ್ ಮ್ಯಾನೇಜರ್ ಅಬ್ಬಾಸ್ ಉಚ್ಚಿಲ್, ಪಿ.ಎ ಕಾಲೇಜ್ ಆಫ್ ಇಂಜಿನಿಯರಿಂಗ್ ನ ಪ್ರಾಂಶುಪಾಲರಾದ ಡಾ.ರಮೀಝ್ ಎಂ ಕೆ, ಪಿ.ಎ ಇನ್ಸ್ಟಿಟ್ಯೂಟ್ ಆಫ್ ಪಿಸಿಯೋಥೆರಪಿಯ ಪ್ರಾಂಶುಪಾಲರಾದ ಅಫೀಫ, ಪಿ.ಎ ಪಾಲಿಟೆಕ್ನಿಕ್ ಉಪಪ್ರಾಂಶುಪಾಲರಾದ ಪ್ರೊ. ಇಸ್ಮಾಯಿಲ್ ಖಾನ್, ಪಿ.ಎ.ಇ.ಟಿಯ ಖರೀದಿ ವ್ಯವಸ್ಥಾಪಕರಾದ ಹಾರೀಸ್ ಟಿ.ಡಿ ಮತ್ತು ವಿವಿಧ ವಿಭಾಗದ ಮುಖ್ಯಸ್ಥರು, ಯೂತ್ ರೆಡ್ ಕ್ರಾಸಿನ ನಿರ್ವಾಹಕರಾದ ಸಾರ ಮಸ್ಕುರುನ್ನೀಸ ಮತ್ತು ಡಾ. ಶಿಜಿನ್ ಎನ್, ಎನ್.ಎಸ್‌.ಎಸ್‌ ನಿರ್ವಾಹಕರಾದ ಚೈತ್ರಾ ಎನ್‌‌.ವಿ‌. ಮತ್ತು ಇತಾಶ್ರೀ, ಹಾಗೂ ಐ.ಕ್ಯೂ.ಎ.ಸಿ ಯ ನಿರೂಪಕರಾದ ವಾಣಿಶ್ರೀ ವೈ ವೇದಿಕೆಯಲ್ಲಿ ಆಸೀನರಾಗಿದ್ದರು.ವಿದ್ಯಾರ್ಥಿಗಳಾದ ಶಫ್ನಾ ಶಿರೀನ್ ಸ್ವಾಗತಿಸಿದರೆ ಫೌಝ ಫಾತಿಮ ವಂದಿಸಿದರು‌. ಹಿಬಾ ಮರಿಯಂ ಕಾರ್ಯಕ್ರಮವನ್ನು ನಿರೂಪಿಸಿದರು.೧೫೦ ದಾನಿಗಳಿಂದ ರಕ್ತವನ್ನು ಸಂಗ್ರಹಿಸಲಾಯಿತು.

ಪ್ರಾದೇಶಿಕ ವಾರ್ತೆಗಳು

ಗಾಯನ ಮಂಡಳಿಯಿಂದ ಸುಶ್ರಾವ್ಯ ಭಕ್ತಿ ಗೀತೆ

ಮಂಗಳೂರು: ಮಂಗಳೂರಿನ ಕಳವಾರು ಪೆಜಾರ್‌ ಸಂತ ಜೋಸೆಫರ ಚರ್ಚ್ ವತಿಯಿಂದ ಮಂಗಳವಾರ ನಡೆದ 241 ನೇ ಶಿಲುಬೆಯ ಹಾದಿ ಕಾರ್ಯಕ್ರಮದ ಬಲಿಪೂಜೆಯ ವೇಳೆ ಚರ್ಚ್ ನ ಗಾಯನ ಮಂಡಳಿಯ ಸದಸ್ಯರು ಸುಶ್ರಾವ್ಯ ಭಕ್ತಿ ಗೀತೆಗಳನ್ನು ಪ್ರಸ್ತುತ ಪಡಿಸಿ ಮೆಚ್ಚುಗೆಗೆ ಪಾತ್ರರಾದರು. ಗಾಯನ ತಂಡದಲ್ಲಿ ಅಧ್ಯಕ್ಷೆ ಸೆಲಿನ್‌ ಕೊರೆಯಾ, ಸದಸ್ಯರಾದ ಪ್ರೀತಂ ಡಿ’ಸೋಜಾ, ಪ್ರೀವಲ್‌ ಡಿ’ಸೋಜಾ, ಡಯಾನಾ ಪಿರೇರಾ, ಜನೀಶಾ ಸಿಕ್ವೇರಾ, ಲೀಶಾ ಪಿರೇರಾ, ಕೆನಿತ್‌ ಕ್ರಾಸ್ತಾ, ಮೆಟಿಲ್ಡಾ ಕ್ರಾಸ್ತಾ, ಮರಿಯಾ ಪಿರೇರಾ, ಅನ್ಸ್‌ಯಾ ಫೆರಾವೊ, ಅನಿತಾ ಪೆರಿಸ್‌, ರೋಶಲ್‌ ಡಿ’ಸೋಜಾ, ಸ್ವೀಡಲ್‌ ಡಿ’ಸೋಜಾ ಅವರಿದ್ದರು. ಆಲ್ವಿನ್‌ ನೊರೊನ್ಹಾ ಅವರು ಕೀ ಬೋರ್ಡ್‌ ನಲ್ಲಿ ಸಹಕರಿಸಿದರು.

ಪ್ರಾದೇಶಿಕ ವಾರ್ತೆಗಳು

ಅಂಬೇಡ್ಕರ್ ದಿನಾಚರಣೆ ಪ್ರಯುಕ್ತ ಬಂಟ್ವಾಳದ ಸರಕಾರಿ ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ (ರಿ.) ಬಂಟ್ವಾಳ ತಾಲೂಕು ಸಮಿತಿ ಇದರ ಆಶ್ರಯದಲ್ಲಿ ತಾ. 14-04-2025ನೇ ಸೋಮವಾರ ಡಾ| ಬಿ. ಆರ್. ಅಂಬೇಡ್ಕರ್ ರವರ 134ನೇ ಜನ್ಮದಿನಾಚರಣೆ ಪ್ರಯುಕ್ತ ಬಂಟ್ವಾಳ ಸರಕಾರಿ ಆಸ್ಪತ್ರೆ ಯ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ವೈದ್ಯರು ಸಮೀಕ್ಷಾ, ಶ್ರೀಮತಿ ವಾಣಿ ಕೆ. ಮತ್ತು ಸಿಬ್ಬಂದಿ ವರ್ಗ, ತಾಲೂಕು ಅಧ್ಯಕ್ಷರಾದ ಸಂತೋಷ್ ಭಂಡಾರಿಬೆಟ್ಟು, ಗೌರವಾಧ್ಯಕ್ಷರು ಧರ್ಣಪ್ಪ ಬಡಗಬೆಳ್ಳೂರು, ಗೌರವ ಸಲಹೆಗಾರರಾದ ರಾಜ ಚೆಂಡ್ತಿಮಾರ್, ಮೋಹನ್ ಬಡಗಬೆಳ್ಳೂರು, ಉಪಾಧ್ಯಕ್ಷರಾದ ಚಂದ್ರಹಾಸ್ ಅರ್ಬಿಗುಡ್ಡೆ, ಕೋಶಾಧಿಕಾರಿ ಜಯಂತಿ ವಾಮದಪದವು, ಸಂಘಟನ ಕಾರ್ಯದರ್ಶಿ ನಾರಾಯಣ ಬೊಂಡಲ, ಜಾನಕಿ ವಾಮದಪದವು ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ಚಿಂತೆಯ ಬದಲು ಧನಾತ್ಮಕ ಚಿಂತನೆ ಅಗತ್ಯ: ಕಯ್ಯೂರು ನಾರಾಯಣ ಭಟ್

ಹಿರಿಯರ ಸೇವಾ ಪ್ರತಿಷ್ಠಾನವು ಸೇವಾ ಚಟುವಟಿಕೆಗಳೊಂದಿಗೆ ಹಿರಿಯರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹರಿಸಲು ಸದಾ ಸಿದ್ದವಿದೆ.ಪ್ರತಿಷ್ಠಾನದ ಸ್ಥಳೀಯ ಸಭೆಗಳಲ್ಲಿ ಭಾಗವಹಿಸುವ ಮೂಲಕ ಹಿರಿಯರು ಧನಾತ್ಮಕ ಚಿಂತನೆಯನ್ನು ಮೈ ಗೂಡಿಸಿಕೊಳ್ಳಬೇಕೆಂದು ಹಿರಿಯರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಕಯ್ಯೂರು ನಾರಾಯಣ ಭಟ್ ತಿಳಿಸಿದರು.ಪುತ್ತೂರು ಪರ್ಲಡ್ಕ ಅಗಸ್ತ್ಯ ನಿವಾಸದಲ್ಲಿ ಜರಗಿದ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ರಿ.ಮೆಲ್ಕಾರು ಬಂಟ್ವಾಳ ಕೇಂದ್ರ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಪ್ರೊ ವಿ. ಬಿ ಆರ್ತಿಕಜೆ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಪ್ರತಿಷ್ಠಾನದ ಉಪಾಧ್ಯಕ್ಷ ಲೋಕೇಶ್ ಹೆಗ್ಡೆ ಪುತ್ತೂರು ಮುಂದಿನ ಕಾರ್ಯ ಯೋಜನೆಗಳ ಬಗ್ಗೆ ಮಾಹಿತಿನೀಡಿದರು.ಪ್ರತಿಷ್ಠಾನದ ಪುತ್ತೂರು ತಾಲೂಕು ಘಟಕದ ಅಧ್ಯಕ್ಷ ಚಂದ್ರಶೇಖರ ಆಳ್ವ ಪಡುಮಲೆ, ಬಂಟ್ವಾಳ ಘಟಕದ ಕೃಷ್ಣಶರ್ಮ ಅನಾರು ಚಟುವಟಿಕೆಗಳ ಮಾಹಿತಿ ನೀಡಿದರು.ಗುಂಡ್ಯಡ್ಕ ಈಶ್ವರ ಭಟ್, ಸೀತಾರಾಮ ಸಾಲೆತ್ತೂರು, ಭವಾನಿ ಶಂಕರ ಶೆಟ್ಟಿ ಪುತ್ತೂರು, ಪದ್ಮನಾಭ ನಾಯಕ್, ಚಂಚಲಾಕ್ಷಿ, ಸ್ವರ್ಣಲತಾ ಭಾಸ್ಕರ್,ಗೀತಾ ಕೆ ಭಟ್, ಕುಸುಮ ಎಸ್ ಭಟ್, ಕೃಷ್ಣ ಭಟ್ ಚೇಕೊಡು, ಡಾ. ಆದಿತ್ಯ ತಂತ್ರಿ, ರಂಗನಾಥರಾವ್ ಬೊಳುವಾರು ಉಪಸ್ಥಿತರಿದ್ದರು.ಕೃಷ್ಣವೇಣಿ ಎಸ್ ಭಟ್ ಪ್ರಾರ್ಥಿಸಿದರು. ಕೇಂದ್ರ ಸಮಿತಿಯ ಸಂಚಾಲಕ ಭಾಸ್ಕರ ಬಾರ್ಯ ಸ್ವಾಗತಿಸಿ ಕೋಶಾಧಿಕಾರಿ ಕೃಷ್ಣಶರ್ಮ ವಂದಿಸಿದರು.ಪ್ರತಿಷ್ಠಾನದ ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

M.C.C. Bank records INR 13.00 cr profit, 20th Branch at Byndoor, Udupi District

MCC Bank Ltd, popularly known as MCC Bank, is set to complete 113 years of devoted service this year, having accomplished noteworthy progress across all business metrics for the financial year ending 31st March 2025.The Bank recorded an exceptional Gross Profit of INR 13.00 Crore for the fiscal year, consistently striving to reduce the Net NPA, and successfully decreasing it to 1.30% of the total advances. The Bank reached a milestone of INR 1240 Crore in total business turnovers showing a growth of 15%. Boasting an enhanced net worth of INR 86.68 Crore compared to the previous INR 76.00 Crore, the Bank continues to benefit from NRI support. Initially serving only the twin districts of coastal Karnataka—Dakshina Kannada and Udupi—the Bank expanded its operations statewide. During the financial year, the Bank opened its 18th branch in Belthangady and 19th Branch at Belman. The 2nd Urban Co. operative Bank in Karnataka having NRI facility.The bank’s operations have expanded across Karnataka. It operates fully on core banking and offers all the products and services available in other private and public sector banks. The bank is also working on expanding its branches across Karnataka state.During the FY 2024-25 the bank has recorded gross Profit of Rs. 13 Crore, with a total deposit of Rs.705.40 crore recording an increase of 11% over the previous year; the total advances of Rs.535.49 crore recording an increase of 20.37% over the previous year; working capital of Rs.836.73 crore (growth of 11.13%) and share capital of Rs.32.43 crore. The provision coverage ratio stood at 72.02% of the total NPAs. The bank is adequately maintaining the CRAR (Capital to Risk Assets Ratio), which stood at 22.81% as of 31st March 2025, well above the required level of 12.00% as per the Reserve Bank of India. The bank’s business turnover increased to Rs 1240 crore as of 31st March 2025. Upcoming projects:1.20th branch at Byndoor, Udupi District by July End2.Shifting of Kulshekar Branch to own premises by June End3.Google Pay, PhonePe, UPI Services4.Business turnover of Rs. 1500 Crore by March endThe bank has been providing various financial products, including locker facilities at low costs, affordable education loans for domestic and international studies, MSME loans, vehicle loans, housing loans, loans for house repairs, wedding, and purchase of household items. It offers gold loans without processing fees and provides ATM and mobile banking services free of charge. Deposits in the bank are insured by the Deposit Insurance and Credit Guarantee Corporation (DICGC), as per the guidelines of the Reserve Bank of India (RBI).Achieving such impressive growth can be attributed primarily to the unwavering support from members, customers trust, and dedicated efforts of employees. Looking ahead, the Bank aims to attain even greater success in the current financial year with continued backing from esteemed members and clients along with committed staff members. Present in the meeting:Anil Lobo – Chairman, Jerald Jude D’Silva – Vice Chairman, Andrew D’Souza, Dr Gerald Pinto, Anil Patrao, J.P. Rodrigues, David D’Souza, Elroy Kiran Crasto, Herald Monteiro, Roshan D’Souza, Melvyn Vas, Vincent Lasrado, C.G. Pinto, Sushanth Saldanha, Irene Rebello, Dr Freeda D’Souza, Alwyn Monteiro, Felix D’Cruz, Sharmila Menezes – Directors and Sunil Menezes – General Manager were present.Photos: Sathish Kapikad

ಪ್ರಾದೇಶಿಕ ವಾರ್ತೆಗಳು

ಎಮ್.ಸಿ.ಸಿ. ಬ್ಯಾಂಕ್ 2024–25 ವಿತ್ತೀಯ ವರ್ಷದಲ್ಲಿ 13.00 ಕೋಟಿ ಲಾಭ, ಶೀಘ್ರದಲ್ಲೇ ಬೈಂದೂರಿನಲ್ಲಿ 20ನೇ ಶಾಖೆ

ಕರ್ನಾಟಕದ ಸಹಕಾರಿ ಬ್ಯಾಂಕಿAಗ್ ಕ್ಷೇತ್ರದಲ್ಲಿ 113 ವರ್ಷಗಳ ಇತಿಹಾಸವಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಎಮ್.ಸಿ.ಸಿ ಬ್ಯಾಂಕ್ ಲಿಮಿಟೆಡ್ 31 ಮಾರ್ಚ್ 2025 ರಂದು ಮುಕ್ತಾಯಗೊಂಡ ವಿತ್ತೀಯ ವರ್ಷದಲ್ಲಿ ಒಟ್ಟು 13.00 ಕೋಟಿ ರೂಪಾಯಿ ವ್ಯವಹಾರಿಕ ಲಾಭಗಳಿಕೆಯನ್ನು ದಾಖಲಿಸಿದೆ. ಸತತವಾಗಿ ಎನ್.ಪಿ.ಎ. ಪ್ರಮಾಣವನ್ನು ಕಡಿಮೆ ಗೊಳಿಸಲು ಬ್ಯಾಂಕ್ ಶ್ರಮಿಸುತ್ತಿದ್ದು, ಪ್ರಸ್ತುತ ವರ್ಷದಲ್ಲಿ 1.30% ಎನ್.ಪಿ.ಎ. ದಾಖಲಿಸಿದೆ.ದಾಖಲೆಯ ಲಾಭ ಮತ್ತು ಕನಿಷ್ಠ ಎನ್.ಪಿ.ಎ. ಜೊತೆಗೆ, 2024–2025ನೇ ವಿತ್ತೀಯ ವರ್ಷದಲ್ಲಿ, ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ ನೇತೃತ್ವದ ಆಡಳಿತ ಮಂಡಳಿ, ಅಧಿಕಾರಿ ವರ್ಗ ಮತ್ತು ಸಿಬ್ಬಂದಿಯ ಶ್ರಮದಿಂದ, ಬ್ಯಾಂಕ್ ಸ್ಥಾಪನೆಯಾದಂದಿನಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿದ್ದ ಬ್ಯಾಂಕಿನ ಕಾರ್ಯವ್ಯಾಪ್ತಿಯನ್ನು ಇಡೀ ಕರ್ನಾಟಕ ರಾಜ್ಯಕ್ಕೆ ವಿಸ್ತರಿಸಿದ್ದು, ವಿತ್ತೀಯ ವರ್ಷದಲ್ಲಿ ಬೆಳ್ತಂಗಡಿ ಮತ್ತು ಬೆಳ್ಮಣ್’ನಲ್ಲಿ ಕ್ರಮವಾಗಿ 18ನೇ ಮತ್ತು 19ನೇ ಶಾಖೆಯನ್ನು ತೆರೆದಿದ್ದು, ಬೈಂದೂರ್‌ನಲ್ಲಿ ಶೀಘ್ರದಲ್ಲೇ ಶಾಖೆಯನ್ನು ತೆರೆಯಲಾಗುವುದು. ಅನಿವಾಸಿ ಭಾರತೀಯರಿಗೆ (ಎನ್‌ಆರ್‌ಐ) ಸೇವಾ ಸೌಲಭ್ಯವನ್ನು ನೀಡುವ ಕರ್ನಾಟಕದ ಪಟ್ಟಣ ಸಹಕಾರಿ ಬ್ಯಾಂಕುಗಳ ಪೈಕಿ ಎರಡನೇ ಬ್ಯಾಂಕ್ ಆಗಿರುತ್ತದೆ. ಬ್ಯಾಂಕಿನ ವ್ಯವಹಾರವು ರೂ. 1240 ಕೋಟಿ ತಲುಪಿದ್ದು, ಈ ಆರ್ಥಿಕ ವರ್ಷದ ಇನ್ನೊಂದು ಮಹತ್ವದ ಸಾಧನೆಯಾಗಿರುತ್ತದೆ. ಕರ್ನಾಟಕ ರಾಜ್ಯದ್ಯಾಂತ ಕಾರ್ಯವ್ಯಾಪ್ತಿ ಹೊಂದಿರುವ ಎಮ್.ಸಿ.ಸಿ. ಬ್ಯಾಂಕ್, ಮಂಗಳೂರಿನಲ್ಲಿ ನವೀಕೃತಗೊಂಡ ಸುಸಜ್ಜಿತ ಆಡಳಿತ ಕಛೇರಿಯೊಂದಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 19 ಶಾಖೆಗಳನ್ನು ಹೊಂದಿದ್ದು, 2024–25 ವಿತ್ತೀಯ ವರ್ಷದಲ್ಲಿ ದಾಖಲೆಯ ರೂ. 13.00 ಕೋಟಿ ವ್ಯವಹಾರಿಕ ಲಾಭವನ್ನು ಗಳಿಸಿದೆ. 2024–25 ವಿತ್ತೀಯ ವರ್ಷದಲ್ಲಿ ಗಣನೀಯ ಪ್ರಮಾಣದಲ್ಲಿ ಬ್ಯಾಂಕಿನ ವ್ಯವಹಾರ ಪ್ರಗತಿಯನ್ನು ದಾಖಲಿಸಿದ್ದು, ಬ್ಯಾಂಕಿನ ನಿವ್ವಳ ಮೌಲ್ಯ (Net Worth) ರೂ. 76.00 ಕೋಟಿಯಿಂದ ರೂ.86.68 ಕೋಟಿಗೆ ತಲುಪಿದೆ. ಬ್ಯಾಂಕಿನ ವ್ಯವಹಾರ ರೂ. 1240 ಕೋಟಿ ದಾಟಿದ್ದು ಕಳೆದ ವರ್ಷಕ್ಕಿಂತ ಶೇಕಡಾ 15 ಏರಿಕೆಯಾಗಿದೆ. ಒಟ್ಟು ಠೇವಣಿಯಲ್ಲಿ ಶೇಕಡಾ 11.00 ಪ್ರಗತಿ ಸಾಧಿಸಿದ್ದು, ರೂ.705.40 ಕೋಟಿ ಠೇವಣಿ, ಒಟ್ಟು ಮುಂಗಡದಲ್ಲಿ ಶೇಕಡಾ 20.37 ಪ್ರಗತಿ ಸಾಧಿಸಿದ್ದು ರೂ.535.49 ಕೋಟಿ ಮುಂಗಡಗಳು, ದುಡಿಯುವ ಬಂಡವಾಳ ರೂ.836.73 ಕೋಟಿ (ಪ್ರಗತಿ ಶೇಕಡಾ 11.13) ಮತ್ತು ಶೇರು ಬಂಡವಾಳ ರೂ.32.43 ಕೋಟಿ (ಪ್ರಗತಿ ಶೇಕಡಾ 3.91) ಆಗಿರುತ್ತದೆ. ಬ್ಯಾಂಕಿನ CRAR (Capital to Risk Assets Ratio) ಪ್ರಮಾಣವು ಶೇಕಡಾ 22.81 ಇದ್ದು ನಿಗದಿತ ಕನಿಷ್ಟ ಪ್ರಮಾಣ ಶೇಕಡಾ 12ಕ್ಕಿಂತ ಜಾಸ್ತಿಯಿರುತ್ತದೆ. ಬ್ಯಾಂಕಿನ ಕಾರ್ಯವ್ಯಾಪ್ತಿಯು ಇಡೀ ಕರ್ನಾಟಕ ರಾಜ್ಯಕ್ಕೆ ವಿಸ್ತರಿಸಿದೆ. ಬ್ಯಾಂಕಿನ ವ್ಯವಹಾರವನ್ನು ಸಂಪೂರ್ಣ ಕೋರ್ ಬ್ಯಾಂಕಿಂಗ್ ಮುಖಾಂತರ ನಡೆಸುತ್ತಿದ್ದು, ಇತರ ಖಾಸಗಿ ಮತ್ತು ವಾಣಿಜ್ಯ ಬ್ಯಾಂಕುಗಳು ನೀಡುವ ಎಲ್ಲಾ ಸೇವೆ ಮತ್ತು ಸೌಲಭ್ಯಗಳು ಎಮ್.ಸಿ.ಸಿ. ಬ್ಯಾಂಕಿನಲ್ಲೂ ದೊರೆಯುತ್ತವೆ. ಗ್ರಾಹಕರಿಗೆ ಕಡಿಮೆ ಬಾಡಿಗೆಯಲ್ಲಿ ಲಾಕರ್ ಸೌಲಭ್ಯ, ಕಡಿಮೆ ದರದಲ್ಲಿ ದೇಶ ವಿದೇಶ ವಿಧ್ಯಾ ಭವಿಷ್ಯ ಶಿಕ್ಷಣ ಸಾಲ, ಎಮ್.ಎಸ್.ಎಮ್.ಇ ವ್ಯವಹಾರ ಸಾಲ, ವಾಹನ ಸಾಲ, ವಸತಿ ಸಾಲ, ಮನೆ ಖರೀದಿ, ದುರಸ್ತಿ, ಮದುವೆ, ಗ್ರಹ ಉಪಯೋಗಿ ವಸ್ತು ಖರೀದಿ ಸಾಲವನ್ನು ತ್ವರಿತವಾಗಿ ನೀಡುತ್ತಿದೆ. ಸೇವಾ ಶುಲ್ಕವಿಲ್ಲದೆ ಚಿನ್ನಾಭರಣ ಸಾಲವನ್ನು ನೀಡುತ್ತಿದೆ. ಏಟಿಎಮ್ ಮತ್ತು ಮೊಬೈಲ್ ಬ್ಯಾಂಕಿಂಗ್ ಸೌಲಭ್ಯವನ್ನು ಉಚಿತವಾಗಿ ನೀಡುತ್ತಿದೆ. ಬ್ಯಾಂಕಿನಲ್ಲಿರುವ ಠೇವಣಿಗಳಿಗೆ ಖಾಸಗಿ ಮತ್ತು ವಾಣಿಜ್ಯ ಬ್ಯಾಂಕುಗಳಂತೆಯೇ ಭಾರತೀಯ ರಿಸರ್ವ್ ಬ್ಯಾಂಕಿನ ಡಿಪಾಜಿಟ್ ಇನ್ಸೂರೆನ್ಸ್ ಆ್ಯಂಡ್ ಕ್ರೆಡಿಟ್ ಗ್ಯಾರಂಟಿ ಕಾರ್ಪೊರೇಶನ್‌ನಿಂದ (DICGC) ವಿಮಾ ಸೌಲಭ್ಯವಿದೆ. ಮುಂದಿನ ಕಾರ್ಯಯೋಜನೆಗಳು:1) ಜುಲೈ ಅಂತ್ಯದೊಳಗೆ ಬೈಂದೂರಿನಲ್ಲಿ 20ನೇ ಶಾಖೆ2) ಜೂನ್ ಅಂತ್ಯದೊಳಗೆ ಸ್ವಂತ ಕಟ್ಟಡಕ್ಕೆ ಕುಲಶೇಖರ ಶಾಖೆಯ ಸ್ಥಳಾಂತರ3) ಗೂಗಲ್ ಪೇ, ಫೊನ್ ಪೇ, ಯುಪಿಎ ಸೌಲಭ್ಯಗಳು4) ಮಾರ್ಚ್ ಅಂತ್ಯದೊಳಗೆ ರೂ. 1500 ಕೋಟಿ ವ್ಯವಹಾರದ ಗುರಿಬ್ಯಾಂಕಿನ ಸದಸ್ಯರು ಬ್ಯಾಂಕಿನ ಪ್ರಸಕ್ತ ಆಡಳಿತ ಮಂಡಳಿಗೆ ನೀಡಿದ ಬೆಂಬಲ, ಗ್ರಾಹಕರ ವಿಶ್ವಾಸ ಮತ್ತು ಅಧಿಕಾರಿವರ್ಗ ಹಾಗೂ ಸಿಬ್ಬಂದಿಯ ಶ್ರಮದಿಂದ ಇದು ಸಾಧ್ಯವಾಗಿದೆ. ಜೊತೆಗೆ ಸಾಕಷ್ಟು ಅನಿವಾಸಿ ಭಾರತೀಯರು ಬ್ಯಾಂಕಿನಲ್ಲಿ ವ್ಯವಹಾರ ಮತ್ತು ಹೂಡಿಕೆಯನ್ನು ಮಾಡಿರುತ್ತಾರೆ.ಪತ್ರಿಕಾ ಗೋಷ್ಠಿಯಲ್ಲಿ ಹಾಜರಿರುವವರುಅನಿಲ್ ಲೋಬೊ – ಅಧ್ಯಕ್ಷರು, ಜೆರಾಲ್ಡ್ ಜೂಡ್ ಡಿಸಿಲ್ವ – ಉಪಾಧ್ಯಕ್ಷರು, ನಿರ್ದೇಶಕರಾದ – ಆಂಡ್ರ್ಯೂ ಡಿಸೊಜಾ, ಡಾ| ಜೆರಾಲ್ಡ್ ಪಿಂಟೊ, ಅನಿಲ್ ಪತ್ರಾವೊ, ಜೆ.ಪಿ. ರೊಡ್ರಿಗಸ್, ಡೇವಿಡ್ ಡಿಸೊಜಾ, ಎಲ್ರೊಯ್ ಕಿರಣ್ ಕ್ರಾಸ್ಟೊ, ಹೆರಾಲ್ಡ್ ಮೊಂತೇರೊ, ರೋಶನ್ ಡಿಸೊಜಾ, ಮೆಲ್ವಿನ್ ವಾಸ್, ವಿನ್ಸೆಂಟ್ ಲಸ್ರಾದೊ, ಸಿ.ಜಿ. ಪಿಂಟೊ, ಸುಶಾಂತ್ ಸಲ್ಡಾನ್ಹಾ, ಐರಿನ್ ರೆಬೆಲ್ಲೊ, ಡಾ| ಫ್ರೀಡಾ ಡಿಸೊಜಾ, ಆಲ್ವಿನ್ ಪಿ. ಮೊಂತೆರೊ, ಫೆಲಿಕ್ಸ್ ಡಿಕ್ರೂಜ್, ಶರ್ಮಿಳಾ ಮಿನೇಜಸ್ ಹಾಗೂ ಮಹಾ ಪ್ರಬಂದಕರು – ಸುನಿಲ್ ಮಿನೇಜಸ್ ಉಪಸ್ಥಿತರಿದ್ದರು.ಚಿತ್ರಗಳು: ಸತೀಶ್ ಕಾಪಿಕಾಡ್

ಪ್ರಾದೇಶಿಕ ವಾರ್ತೆಗಳು

ಶಿವಬಾಗ್‌ನಲ್ಲಿ ರೋಹನ್ ಗಾರ್ಡನ್ ಅಪಾರ್ಟ್‌ಮೆಂಟ್‌ಗೆ ಭೂಮಿಪೂಜೆ

ಮಂಗಳೂರು: ರೋಹನ್ ಕಾರ್ಪೋರೇಶನ್‌ನ ಮತ್ತೊಂದು ವಸತಿ ಸಮುಚ್ಚಯ ರೋಹನ್ ಗಾರ್ಡನ್ ಯೋಜನೆಗೆ ನಗರದ ಕದ್ರಿ ಶಿವಬಾಗ್ 2ನೇ ಕ್ರಾಸ್‌ನಲ್ಲಿ ಶನಿವಾರ ಭೂಮಿಪೂಜೆ ನಡೆಯಿತು.ಬೆಂದೂರ್ ಸೈಂಟ್ ಸೆಬಾಸ್ಟಿಯನ್ ಚರ್ಚ್ ನ ಧರ್ಮಗುರುಗಳಾದ ಫಾದರ್ ವಾಲ್ಟರ್ ಡಿಸೋಜ ಭೂಮಿ ಪೂಜೆ ನೆರವೇರಿಸಿ, ದೇವರ ಮೇಲೆ ಅಚಲ ವಿಶ್ವಾಸ ಮತ್ತು ಕಠಿಣ ಪರಿಶ್ರಮದಿಂದ ಮಹತ್ಸಾಧನೆ ಮಾಡಿ ಸಮಾಜ ಸೇವೆ ಮಾಡುವ ಕನಸಿಗೆ ರೋಹನ್ ಮೊಂತೇರೊ ನಿದರ್ಶನ. ಅವರ ಎಲ್ಲ ಕನಸುಗಳೂ ನನಸಾಗಲಿ ಎಂದು ಆಶೀರ್ವಚನ ನೀಡಿದರು. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿ, ರೊಹನ್ ಮೊಂತೇರೊ ಜನರ ಅಪೇಕ್ಷೆಗೆ ಪೂರಕ ಗುಣಮಟ್ಟದ ಕಟ್ಟಡಗಳನ್ನು ನಿರ್ಮಿಸಿ, ಗ್ರಾಹಕರು ಸಂತೃಪ್ತರಾಗಿದ್ದರಿಂದ 15 ದಿನದಲ್ಲಿ ಮೂರನೇ ಯೋಜನೆಗೆ ಶಿಲಾನ್ಯಾಸ ನಡೆದಿದೆ. ಶೀಘ್ರ 50ನೇ ಯೋಜನೆ ಪೂರೈಸಲಿ ಎಂದು ಹಾರೈಸಿದರು.ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಕಿಯೊನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಮಾಜಿ ಕಾರ್ಪೊರೇಟರ್ ನವೀನ್ ಡಿಸೋಜ, ಎಸ್‌ಸಿಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ದೇವಿಪ್ರಸಾದ್ ಶೆಟ್ಟಿ ಬೆಳಪು, ಶಶಿಕುಮಾರ್ ರೈ ಬಾಲ್ಯೊಟ್ಟು, ದಾಯ್ಜಿವಲ್ಡ್ ನಿರ್ದೇಶಕ ವಾಲ್ಟರ್ ನಂದಳಿಕೆ, ಯುವ ಉದ್ಯಮಿ ಮೇಘರಾಜ್ ಜೈನ್ ಮುಖ್ಯ ಅತಿಥಿಗಳಾಗಿದ್ದರು.ರೋಹನ್ ಕಾರ್ಪೊರೇಷನ್‌ನ ವ್ಯವಸ್ಥಾಪಕ ನಿರ್ದೇಶಕ ರೋಹನ್ ಮೊಂತೇರೊ ಸ್ವಾಗತಿಸಿ, ವಂದಿಸಿದರು. ಸಾಹಿಲ್ ಝಹೀರ್ ಕಾರ್ಯಕ್ರಮ ನಿರೂಪಿಸಿದರು. ರೋಹನ್ ಗಾರ್ಡನ್ ವೈಶಿಷ್ಟ್ಯ:ರೋಹನ್ ಗಾರ್ಡನ್ ಆಧುನಿಕ ವಸತಿ ಸಮುಚ್ಚಯವು ಪ್ರಕೃತಿ ಮತ್ತು ಅನುಕೂಲತೆಗಳ ಸಮ್ಮಿಲನವಾಗಿದ್ದು, ಐಶಾರಾಮಿ, ಸುರಕ್ಷತೆ ಮತ್ತು ಪರಿಸರ ಸ್ನೇಹಿ ವಾಸಯೋಗ್ಯ ವ್ಯವಸ್ಥೆ ಒದಗಿಸಲಿದೆ.ಐದಂತಸ್ತುಗಳ ಕಟ್ಟಡದಲ್ಲಿ 28 ಅಪಾರ್ಟ್ಮೆಂಟ್‌ಗಳಿರಲಿವೆ. ಜಿಮ್ನೇಶಿಯಂ, 24/7 ಸಿಸಿಟಿವಿ ಮತ್ತು ಸ್ಮಾರ್ಟ್ ಸೆನ್ಸರ್ ದೀಪಗಳಂತಹ ಪ್ರೀಮಿಯಂ ಸೌಲಭ್ಯಗಳಿವೆ. ಎಲೆಕ್ಟಿçಕ್ ವಾಹನ ಚಾರ್ಜಿಂಗ್ ಪಾಯಿಂಟ್ಸ್, ವಿಶಾಲ ಪಾರ್ಕಿಂಗ್, ಮಕ್ಕಳ ಆಟದ ಸ್ಥಳ ಮತ್ತು ಹಿರಿಯರಿಗಾಗಿ ವಿಶ್ರಾಂತಿ ಸ್ಥಳ ಇದೆ. ಫೈರ್ ಫೈಟಿಂಗ್ ವ್ಯವಸ್ಥೆ, ವೀಡಿಯೊ ಡೋರ್ ಫೋನ್ ಮತ್ತು ಎಆರ್‌ಡಿ ಅಟ್ಯಾಚ್ಡ್ ಲಿಫ್ಟ್ಗಳ ಸುರಕ್ಷತೆ ಒದಗಿಸಿದೆ.1,105 ರಿಂದ 1,550 ಚದರ ಅಡಿಗಳ 2 ಮತ್ತು 3 ಬಿಎಚ್‌ಕೆ ಅಪಾರ್ಟ್ಮೆಂಟ್ ಒಳಗೊಂಡಿದ್ದು, ವಿಟ್ರಿಫೈಡ್ ಫ್ಲೋರಿಂಗ್, ಪ್ರೀಮಿಯಂ ಸ್ಯಾನಿಟರಿ ವೇರ್ ಮತ್ತು ಯುಪಿವಿಸಿ/ಅಲ್ಯೂಮಿನಿಯಂ ಕಿಟಕಿಗಳೊಂದಿಗೆ ಉತ್ತಮ ಗುಣಮಟ್ಟದ ನಿರ್ಮಾಣ ಹೊಂದಿದೆ. ವಿಶಾಲವಾದ ಒಳಾಂಗಣ, ಸೊಗಸಾದ ಬಾಲ್ಕನಿಗಳು ಮತ್ತು ಸಮಕಾಲೀನ ವಾಸ್ತುಶಿಲ್ಪ ಹೊಂದಿದೆ.ಹೆಚ್ಚಿನ ಮಾಹಿತಿ ಅಥವಾ ಬುಕಿಂಗ್‌ಗಾಗಿ, ರೋಹನ್ ಕಾರ್ಪೊರೇಶನ್ ದೂರವಾಣಿ ಸಂಖ್ಯೆ: 98454 90100, ಈಮೇಲ್: info@rohancorporation.in, ಜಾಲತಾಣ: www.rohancorporation.in ಅಥವಾ ರೋಹನ್ ಕಾರ್ಪೋರೇಶನ್, ರೋಹನ್ ಸಿಟಿ, ಬಿಜೈ, ಮಂಗಳೂರು 575004 ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

Scroll to Top