Author name: editor

ಕರಾವಳಿ ಸುದ್ದಿ

ರೆಡ್‌ಕ್ರಾಸ್ ಸೊಸೈಟಿಯಿಂದ ಮಹಿಳಾ ದಿನಾಚರಣೆಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವುದು ಕರ್ತವ್ಯದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ

ಮಂಗಳೂರು : ಮಕ್ಕಳಿಗೆ ಶಿಕ್ಷಣ, ಆರೋಗ್ಯದ ಜತೆ ಉತ್ತಮ ಸಂಸ್ಕಾರ ನೀಡುವುದು ನಮ್ಮೆಲ್ಲರ ಕರ್ತವ್ಯ. ಎಲ್ಲ ಸಂಕಷ್ಟಗಳನ್ನು ದಿಟ್ಟವಾಗಿ ಎದುರಿಸಿ ಸಂಸಾರದ ಜವಾಬ್ದಾರಿ ನಿರ್ವಹಿಸುವ ಮಹಿಳೆಯರು ಸಮಾಜಕ್ಕೆ ಮಾದರಿಯಾಗಿದ್ದಾರೆ ಎಂದು ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಹೇಳಿದರು.ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ವತಿಯಿಂದ ಬಲ್ಮಠದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಐಕ್ಯುಎಸಿ, ಸಮಾಜಶಾಸ್ತ್ರ ವಿಭಾಗ, ಯೂತ್ ರೆಡ್‌ಕ್ರಾಸ್ ಮತ್ತು ಎನ್‌ಎಸ್‌ಎಸ್ ಘಟಕ ಹಾಗೂ ಸುಶೇಗ್ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿಶನಿವಾರ ಬಲ್ಮಠ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ನಡೆದ ವಿಶ್ವ ಮಹಿಳಾ ದಿನಾಚರಣೆಯಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು.ಡಾ.ಲವೀನಾ ನೊರೊನ್ಹಾ ಕಾರ್ಯಕ್ರಮ ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ.ಜಗದೀಶ್ ಬಾಳ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ವಿ.ವಿ.ಯೂತ್ ರೆಡ್‌ಕ್ರಾಸ್‌ನ ನೋಡಲ್ ಅಧಿಕಾರಿ ಡಾ.ಗಾಯತ್ರಿ.ಎನ್., ಕಾಲೇಜಿನ ಐಕ್ಯುಎಸಿ ಸಂಯೋಜಕಿ ಡಾ.ಮಂಜುಳಾ ಮಲ್ಯ, ಯೂತ್ ರೆಡ್‌ಕ್ರಾಸ್ ಅಧಿಕಾರಿ ಡಾ.ರಾಜೇಶ್ ಶೆಟ್ಟಿ , ಮಹಿಳಾ ಸೆಲ್‌ನ ಸಂಯೋಜಕಿ ಸುಜಾತ.ಪಿ.ಎಸ್., ಎನ್‌ಎಸ್‌ಎಸ್ ಯೋಜನಾಧಿಕಾರಿ ಡಾ.ಮೀನಾಕ್ಷಿ ಆಚಾರ್ಯ, ರೆಡ್‌ಕ್ರಾಸ್ ಸೊಸೈಟಿಯ ಆಡಳಿತ ಮಂಡಳಿ ನಿರ್ದೇಶಕ ಗುರುದತ್ ಕಾಮತ್, ಕಾರ್ಯದರ್ಶಿ ಕಿಶೋರ್‌ಚಂದ್ರ ಶೆಟ್ಟಿ , ಕಾರ್ಯಕ್ರಮದ ಸಂಯೋಜಕಿ ಡಾ.ಸುಮನಾ.ಬಿ. ಉಪಸ್ಥಿತರಿದ್ದರು.ಕೌನ್ಸೆಲಿಂಗ್ ಮತ್ತು ಹದಿಹರೆಯದ ಮಾನಸಿಕ ಆರೋಗ್ಯ ವಿಷಯದ ಸರ್ಟಿಫಿಕೆಟ್ ಕೋರ್ಸ್ ಪೂರೈಸಿದ ಬಲ್ಮಠ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರಿಗೆ ಇದೇ ಸಂದರ್ಭ ಪ್ರಮಾಣಪತ್ರ ವಿತರಿಸಲಾಯಿತು. ಬಳಿಕ ನಡೆದ ಆತ್ಮಹತ್ಯೆ ತಡೆಗಟ್ಟುವಿಕೆ ವಿಷಯದ ಬಗ್ಗೆ ಜಾಗೃತಿ ಕಾರ್ಯಕ್ರಮದಲ್ಲಿ ಡಾ.ಝೀನಾ ಫ್ಲೇವಿಯಾ ಡಿಸೋಜ, ವೀಣಾ ಬರ್ನೆಸ್ ಮತ್ತು ಶಾಲಿನಿ ಡಿಸೋಜಾ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.

ಕರಾವಳಿ ಸುದ್ದಿ

ಇಂದು ರೆಡ್‌ಕ್ರಾಸ್ ಸೊಸೈಟಿಯಿಂದ ಮಹಿಳಾ ದಿನಾಚರಣೆ

ಮಂಗಳೂರು : ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ವತಿಯಿಂದ ಬಲ್ಮಠದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಐಕ್ಯುಎಸಿ, ಸಮಾಜಶಾಸ್ತ್ರ ವಿಭಾಗ, ಯೂತ್ ರೆಡ್‌ಕ್ರಾಸ್ ಮತ್ತು ಎನ್‌ಎಸ್‌ಎಸ್ ಘಟಕ ಹಾಗೂ ಸುಶೇಗ್ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಮಾ.8ರಂದು ಬೆಳಗ್ಗೆ 10ಕ್ಕೆ ವಿಶ್ವ ಮಹಿಳಾ ದಿನಾಚರಣೆ ಬಲ್ಮಠ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.ಅವೆ ಮರಿಯ ಪೆಲೆಟಿವ್ ಕೇರ್‌ನ ನಿರ್ದೇಶಕಿ ಡಾ.ಲವೀನಾ ನೊರೊನ್ಹಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.ಕಾಲೇಜಿನ ಪ್ರಾಂಶುಪಾಲ ಡಾ.ಜಗದೀಶ್ ಬಾಳ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ವಿ.ವಿ.ಯೂತ್ ರೆಡ್‌ಕ್ರಾಸ್‌ನ ನೋಡಲ್ ಅಧಿಕಾರಿ ಡಾ.ಗಾಯತ್ರಿ.ಎನ್., ಕಾಲೇಜಿನ ಐಕ್ಯುಎಸಿ ಸಂಯೋಜಕಿ ಡಾ.ಮಂಜುಳಾ ಮಲ್ಯ, ಯೂತ್ ರೆಡ್‌ಕ್ರಾಸ್ ಅಧಿಕಾರಿ ಡಾ.ರಾಜೇಶ್ ಶೆಟ್ಟಿ , ಮಹಿಳಾ ಸೆಲ್‌ನ ಸಂಯೋಜಕಿ ಸುಜಾತ.ಪಿ.ಎಸ್., ಎನ್‌ಎಸ್‌ಎಸ್ ಯೋಜನಾಧಿಕಾರಿ ಡಾ.ಮೀನಾಕ್ಷಿ ಆಚಾರ್ಯ ಅತಿಥಿಗಳಾಗಿಭಾಗವಹಿಸಲಿದ್ದಾರೆ.ಬಳಿಕ ಆತ್ಮಹತ್ಯೆ ತಡೆಗಟ್ಟುವಿಕೆ ವಿಷಯದ ಬಗ್ಗೆ ಜಾಗೃತಿ ಕಾರ್ಯಕ್ರಮ ನಡೆಯಲಿದ್ದು ಡಾ.ಝೀನಾ ಫ್ಲೇವಿಯಾ ಡಿಸೋಜ, ವೀಣಾ ಬರ್ನೆಸ್ ಮತ್ತು ಶಾಲಿನಿ ಡಿಸೋಜಾ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ. ಕೌನ್ಸೆಲಿಂಗ್ ಮತ್ತು ಹದಿಹರೆಯದ ಮಾನಸಿಕ ಆರೋಗ್ಯ ವಿಷಯದ ಸರ್ಟಿಫಿಕೆಟ್ ಕೋರ್ಸ್ ಪೂರೈಸಿದ ಬಲ್ಮಠ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರಿಗೆ ಇದೇ ಸಂದರ್ಭ ಪ್ರಮಾಣಪತ್ರ ವಿತರಿಸಲಾಗುವುದೆಂದು ಕಾರ್ಯಕ್ರಮದ ಸಂಯೋಜಕಿ ಡಾ.ಸುಮನಾ.ಬಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರಾವಳಿ ಸುದ್ದಿ

ಮಾಜಿ ಕೌನ್ಸಿಲರ್ ಮೊಹಮ್ಮದ್ ಕುಂಜತ್ತಬೈಲ್ ನಿಧನ: ಕೆ.ಅಶ್ರಫ್ ಸಂತಾಪ.

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕೌನ್ಸಿಲರ್ ಮತ್ತು ಒಂದು ಬಾರಿ ಉಪ ಮೇಯರ್ ಸ್ಥಾನವನ್ನು ಹೊಂದಿದ್ದ ಮೊಹಮ್ಮದ್ ಕುಂಜತ್ತಬೈಲ್ ರವರು ಇಂದು ನಿಧನರಾಗಿದ್ದು,ಅವರ ನಿಧನಕ್ಕೆ ಮಾಜಿ ಮೇಯರ್ ಕೆ.ಅಶ್ರಫ್ ತೀವ್ರ ಸಂತಾಪ ಸೂಚಿಸಿದ್ದಾರೆ.ಕೆ.ಮೊಹಮ್ಮದ್ ಕುಂಜತ್ತಬೈಲ್ ರವರು ಓರ್ವ ಕಾಂಗ್ರೆಸ್ ಮುಂದಾಳು ಆಗಿದ್ದು, ಕಾನೂನಾತ್ಮಕ ಮತ್ತು ಶಿಸ್ತು, ಶಿಷ್ಟಾಚಾರ ಬಗ್ಗೆಗಿನ ವಿಷಯಗಳಲ್ಲಿ ಹೆಚ್ಚಿನ ಜ್ಞಾನ ಹೊಂದಿದ ಓರ್ವ ನಿಷ್ಠಾವಂತ ಕಾರ್ಯಕರ್ತ ಕೂಡಾ ಆಗಿದ್ದರು. ಸರ್ವರೊಂದಿಗೆ ಮುಕ್ತವಾಗಿ ಬೆರೆಯುವ ವ್ಯಕ್ತಿತ್ವದ ಮೊಹಮ್ಮದ್ ಕುಂಜತ್ತಬೈಲುಅವರ ನಿಧನದಿಂದಾಗಿ ಪಕ್ಷದ ಓರ್ವ ಪ್ರಮುಖ ವ್ಯಕ್ತಿಯನ್ನು ಕಳೆದು ಕೊಂಡಂತಾಗಿದೆಂದುಮಾಜಿ ಮೇಯರ್ ಕೆ.ಅಶ್ರಫ್ ಸಂತಾಪ ಸೂಚಿಸಿದ್ದಾರೆ.

ಕರಾವಳಿ ಸುದ್ದಿ

ಪುರಾಣ ಕೃತಿಗಳ ಅಧ್ಯಯನದಿಂದ ಜ್ಞಾನ ಸಂಪಾದನೆಹಿರಿಯ ಸಾಹಿತಿ ಶ್ರೀಧರ ಡಿ.ಎಸ್.ಕಿನ್ನಿಗೋಳಿ ಅಭಿಮತ

ಮಂಗಳೂರು : ಬಾಲ್ಯದಲ್ಲಿ ಬೆಳೆದ ಮಲೆನಾಡಿನ ಪರಿಸರ ,ಪುಸ್ತಕ ಓದುವ ಹವ್ಯಾಸ, ಶ್ರೇಷ್ಠ ಗುರುಗಳ ಮಾರ್ಗದರ್ಶನ ,ಯಕ್ಷಗಾನದ ಆಕರ್ಷಣೆ ಇದೆಲ್ಲವೂ ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಪ್ರೇರಣೆ ನೀಡಿತು. ಪುರಾಣ ಕೃತಿಗಳ ಅಧ್ಯಯನದಆಸಕ್ತಿಯಿಂದ ಹೆಚ್ಚಿನ ಜ್ಞಾನ ಸಂಪಾದನೆ ಸಾಧ್ಯವಾಯಿತು ಎಂದು ಹಿರಿಯ ಸಾಹಿತಿ, ಪಾರ್ತಿಸುಬ್ಬ ಪ್ರಶಸ್ತಿ ಪುರಸ್ಕೃತಶ್ರೀಧರ ಡಿ.ಎಸ್.ಕಿನ್ನಿಗೋಳಿ ಹೇಳಿದರು.ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಆಯೋಜಿಸಿದ ಹಿರಿಯ ಸಾಹಿತಿಗಳ ಸಂಪರ್ಕ ಅಭಿಯಾನದಡಿ ಶುಕ್ರವಾರ ಸ್ವಗೃಹದಲ್ಲಿ ಗೌರವ ಸ್ವೀಕರಿಸಿ ಮಾತನಾಡಿದ ಅವರು ‘ಉಡುಪಿ ಮತ್ತು ಕಟೀಲು ಕ್ಷೇತ್ರದ ಪರಿಸರ ಸಾಂಸ್ಕೃತಿಕವಾಗಿ ಬೆಳೆಯಲು ಇನ್ನಷ್ಟು ಅವಕಾಶ ಕಲ್ಪಿಸಿತು’ಎಂದರು.ಪುರಾಣ ಕೃತಿಗಳು ಸೇರಿದಂತೆ ಭಾರತೀಯ ಸಂವೇದನೆಯುಳ್ಳ ಕೃತಿಗಳ ಸಂದೇಶವನ್ನು ಸಮಾಜಕ್ಕೆ ಪಸರಿಸುವುದು ಅಗತ್ಯ.ಅಖಿಲ ಭಾರತೀಯ ಸಾಹಿತ್ಯ ಪರಿಷದ್‌ನ ಇಂತಹ ಕಾರ್ಯದಲ್ಲಿ ತೊಡಗಿರುವುದು ಶ್ಲಾಘನೀಯ ಎಂದು ಅವರು ಹೇಳಿದರು.ಮುಖ್ಯ ಅತಿಥಿಯಾಗಿದ್ದ ಹಿರಿಯ ವಿದ್ವಾಂಸ ಪಶುಪತಿ ಶಾಸ್ತ್ರಿ ಶಿರಂಕಲ್ಲು ಮಾತನಾಡಿ ‘ ಬಹುಶ್ರುತ ವಿದ್ವಾಂಸರಾದ ಶ್ರೀಧರ್ ಡಿ.ಎಸ್.ಅವರು ಪುರಾಣ ಲೋಕದ ವಿಶಿಷ್ಟ ಪಾತ್ರಗಳನ್ನು ತಮ್ಮ ಕೃತಿಯ ಮೂಲಕ ಜನಮಾನಸಕ್ಕೆ ಪರಿಚಯಿಸಿದ ಅಪರೂಪದ ಸಾಹಿತಿ. 40ಕ್ಕೂ ಹೆಚ್ಚು ಪ್ರಸಂಗ ರಚಿಸಿ ಯಕ್ಷಗಾನ ಕ್ಷೇತ್ರಕ್ಕೆ ಅತ್ಯಪೂರ್ವ ಕೊಡುಗೆ ನೀಡಿದ್ದಾರೆ ಎಂದರು.ಅಭಾಸಾಪ ಮೂಲ್ಕಿ ತಾಲೂಕು ಸಮಿತಿಯ ಉಪಾಧ್ಯಕ್ಷ ವಿದ್ಯಾಧರ ಶೆಟ್ಟಿ ಕೊಲ್ನಾಡು, ಜಿಲ್ಲಾ ಸಮಿತಿಯ ಸಾಹಿತ್ಯ ಕೂಟದ ಮುಖ್ಯಸ್ಥೆ ಗೀತಾಲಕ್ಷ್ಮೀಶ್ ಉಪಸ್ಥಿತರಿದ್ದರು. ಅಭಾಸಾಪ ದ.ಕ.ಜಿಲ್ಲಾ ಘಟಕದ ಅಧ್ಯಕ್ಷ ಪಿ.ಬಿ.ಹರೀಶ್ ರೈ ಸ್ವಾಗತಿಸಿ, ಸಮಿತಿ ಸದಸ್ಯ ಡಾ.ಸುರೇಶ್ ನೆಗಳಗುಳಿ ವಂದಿಸಿದರು. ಪ್ರಧಾನ ಕಾರ್ಯದರ್ಶಿ ಸುಮಂಗಲಾ ರತ್ನಾಕರ್ ಕಾರ್ಯಕ್ರಮ ನಿರೂಪಿಸಿದರು.

ಕರಾವಳಿ ಸುದ್ದಿ

“ವೈಲ್ಡ್ ಟೈಗರ್ ಸಫಾರಿ“ ಹಿಂದಿ ಮತ್ತು ಕನ್ನಡ ಸಿನಿಮಾಕ್ಕೆ ಕದ್ರಿ ದೇವಸ್ಥಾನದಲ್ಲಿ ಮುಹೂರ್ತ

ಮಂಗಳೂರು: ಕನ್ನಡ ಮತ್ತು ಹಿಂದಿ ಭಾಷೆಯಲ್ಲಿ ತಯಾರಾಗಲಿರುವ ”ವೈಲ್ಡ್ ಟೈಗರ್ ಸಫಾರಿ“ ಸಿನಿಮಾದ ಮುಹೂರ್ತ ಕಾರ್ಯಕ್ರಮ ಶುಕ್ರವಾರ ಬೆಳಗ್ಗೆ ಕದ್ರಿ ದೇವಸ್ಥಾನದಲ್ಲಿ ಜರುಗಿತು.ಬಳಿಕ ಮಾಧ್ಯಮಗಳ ಜೊತೆ ಮಾತಾಡಿದ ಚಿತ್ರದ ನಿರ್ದೇಶಕ ಚಂದ್ರಮೌಳಿ ಅವರು, ”ಕ್ಷಣಕ್ಷಣಕ್ಕೂ ಕುತೂಹಲ ಕೆರಳಿಸುವ ಕಥಾಹಂದರವನ್ನು ಈ ಸಿನಿಮಾ ಹೊಂದಿದ್ದು ಸಿನಿಮಾದ ಮುಹೂರ್ತ ಕಾರ್ಯಕ್ರಮ ಇಂದು ನಡೆದಿದೆ. ಮಂಗಳೂರು ಮೂಲದ ಕಥೆಯಲ್ಲಿ ಹುಲಿ ವೇಷಕ್ಕೆ ಪ್ರಾಧಾನ್ಯತೆ ಇರಲಿದೆ. ಮುಂದೆ ಸಿನಿಮಾದ ಚಿತ್ರೀಕರಣ ಆರಂಭಗೊಳ್ಳಲಿದ್ದು ಶೀಘ್ರದಲ್ಲಿ ಸಿನಿಮಾ ತೆರೆಗೆ ಬರಲಿದೆ“ ಎಂದರು. ಬಳಿಕ ಮಾತಾಡಿದ ನಾಯಕ ನಟ ಶಿಥಿಲ್ ಕುಮಾರ್, ”ಸಿನಿಮಾಕ್ಕೆ ಬೇಕಾಗಿ ಸಾಕಷ್ಟು ಸಿದ್ಧತೆಯನ್ನು ಮಾಡಿಕೊಂಡಿದ್ದೇನೆ. ಲವ್, ಆಕ್ಷನ್ ಸಿನಿಮಾ ಇದಾಗಿದ್ದು ವೀಕ್ಷಕರಿಗೆ ಮನೋರಂಜನೆ ಬೇಕಾದ ಎಲ್ಲವನ್ನು ಒಳಗೊಂಡಿದೆ. ಕಥೆ ಕೇಳಿ ಥ್ರಿಲ್ ಆಗಿದ್ದೇನೆ“ ಎಂದರು.ರಾಜೇಶ್ ಭಟ್ ಸಿನಿಮಾಕ್ಕೆ ಕೆಮರಾ ಕ್ಲಾಫ್ ಮಾಡಿದರು.ಸಿನಿಮಾ ನಿರ್ಮಾಪಕ ವಿನೋದ್ ಕುಮಾರ್, ನಾಯಕಿ ನಿಮಿಕಾ ರತ್ನಾಕರ್, ಬಾಲಿವುಡ್ ನ ಖ್ಯಾತ ನೃತ್ಯ ನಿರ್ದೇಶಕರಾದ ಧರ್ಮೇಶ್, ಸುಶಾಂತ್, ಕೆಮರಾಮ್ಯಾನ್ ಎಜೆ ಶೆಟ್ಟಿ, ಕಲಾ ನಿರ್ದೇಶಕ ಶಿವು, ದೇವಳದ ಮೆನೇಜರ್ ಜಗದೀಶ್ ಕದ್ರಿ, ಕಿಶೋರ್ ಕುಮಾರ್, ರತ್ನಾಕರ ದೇವಾಡಿಗ ಮತ್ತಿತರರು ಉಪಸ್ಥಿತರಿದ್ದರು. ಚಿತ್ರಗಳು – ಸತೀಶ್ ಕಾಪಿಕಾಡ್

ಕರಾವಳಿ ಸುದ್ದಿ

ಮಾ.9 ರಂದು ಅಂಚೆ ಜನಸಂಪರ್ಕ ಅಭಿಯಾನ

ಮಂಗಳೂರು : ದ.ಕ.ಜಿಲ್ಲಾ ಶಾಲಾ ಮಕ್ಕಳ ವಾಹನ ಚಾಲಕರ ಸಂಘ ಮತ್ತು ಭಾರತೀಯ ಅಂಚೆ ಇಲಾಖೆ, ಮಂಗಳೂರು ವಿಭಾಗ ಇದರ ಸಹಯೋಗದಲ್ಲಿಅಂಚೆ ಜನಸಂಪರ್ಕ ಅಭಿಯಾನ ಮಾ.9 ರಂದು ಬೆಳಗ್ಗೆ 9ರಿಂದ ಸಾಯಂಕಾಲ 4ರವರೆಗೆ ನಗರದ ಅತ್ತಾವರ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯಲಿದೆ.‌ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.‌ದ.ಕ. ಜಿಲ್ಲಾ ಶಾಲಾ ಮಕ್ಕಳ ವಾಹನ ಚಾಲಕರ ಸಂಘದ ಅಧ್ಯಕ್ಷ ಸತೀಶ್ ಪೂಜಾರಿ ಅಧ್ಯಕ್ಷತೆ ವಹಿಸಲಿದ್ದಾರೆ.ಉದ್ಯಮಿ ರತೀಂದ್ರನಾಥ್, ದ.ಕ. ಟ್ಯಾಕ್ಸ್‌ಮೆನ್ಸ್ ಮತ್ತು ಮ್ಯಾಕ್ಸಿ ಕ್ಯಾಬ್ ಅಸೋಸಿಯೇಶನ್ ನ ಅಧ್ಯಕ್ಷ ಆನಂದ್.ಕೆ., ದ.ಕ. ಜಿಲ್ಲಾ ಶಾಲಾ ಮಕ್ಕಳ ವಾಹನ ಚಾಲಕರ ಸಂಘದ ಗೌರವಾಧ್ಯಕ್ಷ ಸುನಿಲ್ ಕುಮಾರ್ ಬಜಾಲ್, ಗೌರವ ಸಲಹೆಗಾರ ರಾಮ್ ಪ್ರಸಾದ್ , ಹಿರಿಯ ಅಂಚೆ ಅಧೀಕ್ಷಕ ಎಂ.ಸುಧಾಕರ ಮಲ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.ಅಭಿಯಾನದಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ, ಪಾಸ್ ಪೋರ್ಟ್ ನೋಂದಣಿ, ಅಪಘಾತ ವಿಮೆ ಹಾಗೂ ಪಾನ್ ಕಾರ್ಡ್ ನೋಂದಣಿಗೆ ಅವಕಾಶವಿದೆ ಎಂದು ಪ್ರಕಟಣೆ ತಿಳಿಸಿದೆ

ಕರಾವಳಿ ಸುದ್ದಿ

“ಶಿವಾಜಿಯನ್ನು ವಿರೋಧಿಸುವವರು ನಾಟಕ ನೋಡಿ!“ – ವಿಜಯ್ ಕುಮಾರ್ ಕೊಡಿಯಾಲ್ ಬೈಲ್

ಮಂಗಳೂರು: “ಶಿವಾಜಿ ಹಿಂದೂ ಧರ್ಮದ ರಕ್ಷಕ ಆದರೆ ಅನ್ಯಧರ್ಮದ ದ್ವೇಷಿಯಲ್ಲ. ಇತಿಹಾಸವನ್ನು ತಿರುಚಿದವರು ಮಾತ್ರ ಅಪಚಾರ ಮಾಡುತ್ತಿದ್ದಾರೆ ಶಿವಾಜಿಯನ್ನು ಅರಿತವರು ಅವರಂತಹ ಒಬ್ಬ ಒಳ್ಳೆಯ ಸಾಮ್ರಾಟನನ್ನು ಕೊಂಡಾಡುತ್ತಾರೆ. ಶಿವಾಜಿಯ ಸಂಪೂರ್ಣ ಕಥೆ ತಿಳಿದುಕೊಂಡರೆ ಅವರೆಂತಹ ಅನ್ಯಧರ್ಮ ಸಹಿಷ್ಣು ಎನ್ನುವುದು ತಿಳಿಯುತ್ತದೆ. ಶಿವಾಜಿಯ ಬಗ್ಗೆ ತಿಳಿಯದವರು ನಮ್ಮ ಮುಂದಿನ ಚಾರಿತ್ರಿಕ ನಾಟಕ “ಶಿವಾಜಿ”ಯನ್ನು ನೋಡಬೇಕು. ಅವರ ಶಿವಾಜಿ ಬಗೆಗಿನ ಅಭಿಪ್ರಾಯ ಬದಲಾಗುತ್ತದೆ“ ಎಂದು ಹಿರಿಯ ರಂಗಕರ್ಮ, ನಿರ್ದೇಶಕ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಪತ್ರಿಕಾಗೋಷ್ಟಿಯಲ್ಲಿ ಹೇಳಿದರು.”ಶಿವಾಜಿ ನಾಟಕ ಮಾರ್ಚ್ 6 ರಂದು ಗುರುವಾರ ಕಟೀಲು ಕ್ಷೇತ್ರದಲ್ಲಿ ಪ್ರಥಮ ಪ್ರದರ್ಶನಗೊಳ್ಳಲಿದೆ. ಮಾಚ್೯ 13 ರಂದು ಪುರಭವನದಲ್ಲಿ ಪ್ರದರ್ಶನ ಕಾಣಲಿದೆ. ನಾಟಕದ ಟೈಟಲ್ ಹಾಡು ಕನ್ನಡ ಭಾಷೆಯಲ್ಲಿದ್ದರೆ ತುಳುವಿನಲ್ಲಿ ಸಂಭಾಷಣೆ ಇರಲಿದೆ. ಹಿಂದಿ ಭಾಷೆಯನ್ನು ಕೂಡ ಬಳಕೆ ಮಾಡುವ ಮೂಲಕ ಭಾಷಾ ಸಾಮರಸ್ಯಕ್ಕೆ ಒತ್ತು ನೀಡಲಾಗಿದೆ. ಕಥೆ ರಚನೆಕಾರ ಶಶಿರಾಜ್ ರಾವ್ ಕಾವೂರು ತುಂಬಾ ಕಷ್ಟಪಟ್ಟು ಕಥೆ ರಚಿಸಿದ್ದಾರೆ. ಒಟ್ಟು 3 ಹಾಡುಗಳಿದ್ದು ಖ್ಯಾತ ಸಂಗೀತ ನಿರ್ದೇಶಕ ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನ ಮಾಡಿದ್ದಾರೆ. ಟೈಟಲ್ ಸಾಂಗ್ ಹೆಸರಾಂತ ಗಾಯಕ ಕೈಲಾಶ್ ಖೇರ್ ಹಾಡಬೇಕಿತ್ತು ಆದರೆ ಅವರು 25 ಲಕ್ಷ ರೂ. ಡಿಮ್ಯಾಂಡ್ ಮಾಡಿದ್ದರಿಂದ ಕೈಬಿಡಬೇಕಾಯಿತು. ಬೇರೆ ಪ್ರಸಿದ್ಧ ಗಾಯಕರಿಂದ ಹಾಡಿಸಲು ಪ್ರಯತ್ನ ಮುಂದುವರಿದಿದೆ“ ಎಂದರು. ”ಪ್ರೀತೇಶ್ ಬಳ್ಳಾಲ್ ಬಾಗ್ ಇತ್ತೀಚಿನ 70 ಶೋಗಳಲ್ಲಿ ಶಿವದೂತೆ ಗುಳಿಗೆ ನಾಟಕದಲ್ಲಿ ಗುಳಿಗನ ಪಾತ್ರಕ್ಕೆ ಬಣ್ಣ ಹಚ್ಚಿದ್ದು ಶಿವಾಜಿ ಪಾತ್ರದಲ್ಲೂ ಅವರೇ ಇರಲಿದ್ದಾರೆ. ಪ್ರಮೋದ್ ಮರವಂತೆ, ಶಶಿರಾಜ್ ಕಾವೂರು ಸಾಹಿತ್ಯ ಬರೆದಿದ್ದಾರೆ. ಶಿವಾಜಿ ಪಾತ್ರಕ್ಕೆ ನಟ ಪೃಥ್ವಿ ಅಂಬರ್ ಕಂಠದಾನ ಮಾಡಿದ್ದರೆ ಗುರು ದಾದಾಜಿ ಪಾತ್ರಕ್ಕೆ ನವೀನ್ ಡಿ ಪಡೀಲ್ ಧ್ವನಿ ನೀಡಿದ್ದಾರೆ. ಪಟ್ಲ ಸತೀಶ್ ಶೆಟ್ಟಿ, ಡಾ ದೇವದಾಸ್ ಕಾಪಿಕಾಡ್ ಹಾಡಿದ್ದು ಹಾಡುಗಳು ಸೊಗಸಾಗಿ ಮೂಡಿಬಂದಿದೆ“ ಎಂದರು.ಪತ್ರಿಕಾಗೋಷ್ಠಿಯಲ್ಲಿ ಮಣಿಕಾಂತ್ ಕದ್ರಿ, ಶಶಿರಾಜ್ ಕಾವೂರು, ಎ ಕೆ ವಿಜಯ್, ಪ್ರೀತೇಶ್ ಬಳ್ಳಾಲ್ ಭಾಗ್ ಉಪಸ್ಥಿತರಿದ್ದರು. ಶಿವಾಜಿಯಂತ ರಾಜ ಬೇರೆ ಇಲ್ಲ!ಶಿವಾಜಿ ಎಲ್ಲ ಜಾತಿ ಧರ್ಮದ ಜನರನ್ನು ಸಮಾನವಾಗಿ ಕಂಡವರು. ಅವರಿಗೆ ಅವರೇ ಸಾಟಿ. ಶಿವಾಜಿ ಒಬ್ಬ ದರೋಡೆಕೋರ ಅನ್ಯಧರ್ಮದ ದ್ವೇಷಿ ಎಂದೆಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಬರೆಯುತ್ತಾರೆ. ಇದು ಖಂಡಿತಾ ಸರಿಯಲ್ಲ. ಶಿವಾಜಿಯ ಬಗ್ಗೆ ಅವರ ಸಾಮ್ರಾಜ್ಯ ಮತ್ತು ಆಡಳಿತದ ಬಗ್ಗೆ ಪಟ್ಟಾಭಿಷೇಕದ ಬಗ್ಗೆ ನಾಟಕದಲ್ಲಿ ವಾಸ್ತವವನ್ನು ತೆರೆದಿಡುವ ಪ್ರಯತ್ನ ಮಾಡಲಾಗಿದೆ. ಎಲ್ಲರೂ ನಾಟಕ ನೋಡಿ”-ಶಶಿರಾಜ್ ರಾವ್ ಕಾವೂರು ಚಿತ್ರಗಳು – ಸತೀಶ್ ಕಾಪಿಕಾಡ್

ಕರಾವಳಿ ಸುದ್ದಿ

ಅಭಾಸಾಪ ಕಡಬ ತಾಲೂಕುಸಮಿತಿ ಅಧ್ಯಕ್ಷರಾಗಿ ಕರುಣಾಕರ ಗೋಗಟೆ

ಮಂಗಳೂರು : ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನ ಕಡಬ ತಾಲೂಕು ಸಮಿತಿ ಅಧ್ಯಕ್ಷರಾಗಿ ಕರುಣಾಕರ ಗೋಗಟೆ ಹೊಸಮಠ, ಉಪಾಧ್ಯಕ್ಷರಾಗಿ ಕೆ.ಎಸ್.ಬಾಲಕೃಷ್ಣ ಕೊಲ, ಕಾರ್ಯದರ್ಶಿಯಾಗಿ ಎನ್. ಕೆ.ನಾಗರಾಜ್, ಜತೆ ಕಾರ್ಯದರ್ಶಿಗಳಾಗಿಸಂಯಕ್ತ ಜೈನ್, ಸುನೀತ ಶ್ರೀರಾಮ ಕೊಲ, ಖಜಾಂಚಿಯಾಗಿ ಗಿರೀಶ, ಸದಸ್ಯರಾಗಿ ಸುಪ್ರೀತ ಬಿಳಿನೆಲೆ, ಚಂದ್ರಹಾಸಆಯ್ಕೆಯಾಗಿದ್ದಾರೆ.

Scroll to Top