Author name: editor

ಪ್ರಾದೇಶಿಕ ವಾರ್ತೆಗಳು

ಡಿ.28-29ರಂದು ಬೀಚ್ ಉತ್ಸವ.

ಮಂಗಳೂರು: ಕರಾವಳಿ ಉತ್ಸವದ ಅಂಗವಾಗಿ ತಣ್ಣೀರುಬಾವಿ ಬೀಚ್‌ನಲ್ಲಿ ಡಿ. 28 ಮತ್ತು 29ರಂದು ಆಯೋಜಿಸಲಾಗಿರುವ ಬೀಚ್ ಉತ್ಸವಕ್ಕೆ ಸಿದ್ಧತೆ ನಡೆಸಲಾಗಿದ್ದು, ಸ್ಥಳೀಯ ಕಲಾವಿದರ ಕಲಾ ಪ್ರದರ್ಶನದೊಂದಿಗೆ ಉತ್ಸವಕ್ಕೆ ಚಾಲನೆ ದೊರೆಯಲಿದೆ ಎಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ತಿಳಿಸಿದರು.ಜಿಲ್ಲಾಧಿಕಾರಿ ಕಚೇರಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ಡಿ. 28ರಂದು 6.30ಕ್ಕೆ ವಿಧಾನಸಭೆ ಸ್ಪೀಕರ್ ಬೀಚ್ ಉತ್ಸವವನ್ನು ಅಧಿಕೃತವಾಗಿ ಉದ್ಘಾಟಿಸುವರು ಎಂದರು.7.30ರಿಂದ ಕದ್ರಿ ಮಣಿಕಂಠರವರಿಂದ ಕಾರ್ಯಕ್ರಮ ನಡೆಯಲಿದ್ದು, ವಿವಿಧ ರೀತಿಯ ಜಲ ಸಾಹಸ ಕ್ರೀಡೆಗಳು ಹಾಗೂ ಆಹಾರ ಮಳಿಗೆಗಳು ಪ್ರವಾಸಿಗರು ಸೇರಿದಂತೆ ವರ್ಷಾಂತ್ಯವನ್ನು ಸಂಭ್ರಮಿಸಲು ಭೇಟಿ ನೀಡುವ ಸ್ಥಳೀಯರಿಗೆ ಎಲ್ಲಾ ರೀತಿಯ ಮನರಂಜನೆಯನ್ನು ಒದಗಿಸಲಿದೆ ಎಂದು ಅವರು ಹೇಳಿದರು.ಬೀಚ್ ಉತ್ಸವ ಸಮಿತಿಯ ಅಧ್ಯಕ್ಷರೂ ಹಾಗೂ ಪೊಲೀಸ್ ಆಯುಕ್ತರೂ ಆಗಿರುವ ಅನುಪಮ್ ಅಗ್ರವಾಲ್ ಮಾತನಾಡಿ, ಬೀಚ್ ಉತ್ಸವ ನಡೆಯಲಿರುವ ತಣ್ಣೀರುಬಾವಿ ರಸ್ತೆಯುದ್ದಕ್ಕೂ ನಿಲ್ಲಿಸಲಾಗುವ ಘನ ವಾಹನಗಳನ್ನು ಉತ್ಸವದ ದಿನಗಳಂದು ತೆರವುಗೊಳಿಸಲು ಸೂಚಿಸಲಾಗಿದೆ. ಬೀಚ್‌ನ ದಾರಿಯಲ್ಲಿ ಐದಾರು ಕಡೆಗಳಲ್ಲಿ ದ್ವಿಚಕ್ರ, ಚತುಷ್ಚಕ್ರ ಹಾಗೂ ಇತರ ವಾಹನಗಳ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.ಸುಲ್ತಾನ್ ಬತ್ತೇರಿಯಿಂದ ತಣ್ಣೀರುಬಾವಿಗೆ ಉತ್ಸವದ ದಿನಗಳಲ್ಲಿ ಫರ‍್ರಿ ಸೇವೆಯನ್ನು ಹೆಚ್ಚುಗೊಳಿಸಲು ಕ್ರಮ ವಹಿಸಲಾಗಿದೆ. ಫರ‍್ರಿಯಲ್ಲಿ ಆಗಮಿಸುವವರಿಗೆ ಅಲ್ಲಿಂದ ತಣ್ಣೀರುಬಾವಿವರೆಗಿನ ಸುಮಾರು ಒಂದು ಕಿ.ಮೀ. ರಸ್ತೆಗೆ ಮಿನಿ ಬಸ್ ಸೇವೆ ಒದಗಿಸಲು ಕ್ರಮ ವಹಿಸಲಾಗಿದೆ. ಉತ್ಸವದ ಸಂದರ್ಭ ಬೀಚ್‌ನಲ್ಲಿ ಹೆಚ್ಚಿನ ಸಿಬ್ಬಂದಿ ಮೂಲಕ ಭದ್ರತಾ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಹೇಳಿದರು.ಗೋಷ್ಟಿಯಲ್ಲಿ ಮುಡಾ ಆಯುಕ್ತೆ ನೂರ್ ಜಹರಾ ಖಾನಂ, ವಾರ್ತಾಧಿಕಾರಿ ಖಾದರ್ ಷಾ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಉಪಸ್ಥಿತರಿದ್ದರು.ವರ್ಷಾಂತ್ಯದಲ್ಲಿ ಊರ ಹಾಗೂ ಪರವೂರವರು ಸೇರಿದಂತೆ ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಈ ಬೀಚ್ ಉತ್ಸವದೊಂದಿಗೆ ಕರಾವಳಿ ಉತ್ಸವವನ್ನು ವಾರ್ಷಿಕ ಕಾರ್ಯಕ್ರಮವಾಗಿ ನಿರಂತರವಾಗಿ ಮುಂದುವರಿಸುವ ನಿಟ್ಟಿನಲ್ಲಿ ಜಿಲ್ಲೆಯ ಜನರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಕರೆ ನೀಡಿದರು.ಮಂಗಳೂರು ನಗರ ವೇಗವಾಗಿ ಬೆಳೆಯುತ್ತಿದ್ದು, ನಗರಕ್ಕೆ ಪ್ರವಾಸಿಗರನ್ನು ಆಕರ್ಷಿಸುವ ಹಾಗೂ ಬ್ರಾಂಡ್ ಮಂಗಳೂರು ಆಗಿ ನಗರವನ್ನು ಪ್ರೋತ್ಸಾಹಿಸುವ ಈ ಬೀಚ್ ಉತ್ಸವಕ್ಕೆ ಬೆಂಬಲ ನೀಡಲಾಗುತ್ತಿದೆ ಎಂದು ಬೀಚ್ ಉತ್ಸವದ ಪ್ರಾಯೋಜಕತ್ವ ವಹಿಸಿರುವ ರೋಹನ್ ಕಾರ್ಪೊರೇಶನ್ ಮುಖ್ಯಸ್ಥ ರೋಹನ್ ಮೊಂತೆರೋ ತಿಳಿಸಿದರು.

ಪ್ರಾದೇಶಿಕ ವಾರ್ತೆಗಳು

ಡಿ.28ರಂದು ಗೋಲ್ಡ್ ಫಿಂಚ್ ಸಿಟಿಯಲ್ಲಿ 8ನೇ ವರ್ಷದ “ಮಂಗಳೂರು ಕಂಬಳ”

ಮಂಗಳೂರು: ಕಳೆದ 7 ವರ್ಷಗಳಿಂದ ಮಂಗಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ಎಂ.ಆರ್.ಜಿ. ಗ್ರೂಪ್‌ನ ಚೇರ್ಮನ್ ಡಾ.ಕೆ.ಪ್ರಕಾಶ್ ಶೆಟ್ಟಿಯವರ ಗೌರವ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಮಂಗಳೂರು ಕಂಬಳವು ಡಿಸೆಂಬರ್ 28ರ ಶನಿವಾರ ಬೆಳಗ್ಗೆ 8.30ಕ್ಕೆ ಪ್ರಾರಂಭಗೊಂಡು ಅದೇ ದಿನ ಸಂಜೆ 6.00ಕ್ಕೆ ಸಭಾ ಕಾರ್ಯಕ್ರಮ ಹಾಗೂ ಮರುದಿನ ಡಿಸೆಂಬರ್ 29ರ ಭಾನುವಾರ ಬೆಳಗ್ಗೆ 08.00ಕ್ಕೆ ಬಹುಮಾನ ವಿತರಣಾ ಸಮಾರಂಭದ ಮೂಲಕ ಸಂಪನ್ನಗೊಳ್ಳಲಿದೆ“ ಎಂದು ದಕ್ಷಿಣ ಕನ್ನಡ ಜಿಲ್ಲಾ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. ”ಎಳೆ ಮನಸ್ಸುಗಳನ್ನು ನಮ್ಮ ಈ ಆಚರಣೆಯ ಭಾಗವಾಗಿಸುವ ಸದುದ್ದೇಶದಿಂದ ‘ಕಲರ್ ಕೂಟ’ ಚಿತ್ರಕಲೆ ಸ್ಪರ್ಧೆಯನ್ನು ಆಯೋಜಿಸಲಾಗುತ್ತದೆ. ಮೂರು ವಿಭಾಗಗಳಲ್ಲಿ 6 ವರ್ಷ ಮೇಲ್ಪಟ್ಟ ಮಕ್ಕಳಿಂದ ಎಲ್ಲರೂ ಈ ಸ್ಪರ್ಧೆಯಲ್ಲಿ ಪಾಲ್ಗೊಳ್ಳಬಹುದು. ಭಾಗವಹಿಸಿದ ಎಲ್ಲರಿಗೂ ನೆನಪಿನ ಕಾಣಿಕೆ ಹಾಗೂ ಆಕರ್ಷಕ ಬಹುಮಾನಗಳನ್ನು ನೀಡಿ ಗೌರವಿಸಲಾಗುತ್ತದೆ. ನಮ್ಮ ಕಂಬಳದ ಅನುಭವವನ್ನು ಪುಟ್ಟ ಹಾಗೂ ಯುವ ಪ್ರತಿಭೆಗಳು ತಮ್ಮ ಕುಂಚದಿಂದ ತಮ್ಮ ಹಾಳೆ ಹಾಗೂ ಮನಸ್ಸುಗಳಲ್ಲಿ ಸೃಷ್ಟಿಸಿ ಈ ಮಣ್ಣಿನ ಸಾಂಸ್ಕೃತಿಕ ಸಂಪತ್ತಿನ ರಾಯಭಾರಿಗಳಾಗಲಿ ಎಂಬ ಆಶಯ ನಮ್ಮದು“ ಎಂದರು. ಬಳಿಕ ಮಾತಾಡಿದ ಈಶ್ವರ್ ಪ್ರಸಾದ್ ಅವರು, ”ಸಾಮಾಜಿಕ ಜಾಲತಾಣಗಳ ಈ ಯುಗದಲ್ಲಿ ಹಿಂದಿನಿಂದ ನಡೆದು ಬಂದ ನಮ್ಮ ಈ ಆಚರಣೆಯನ್ನು ಮುಂದಿನ ಪೀಳಿಗೆಯು ಹೆಮ್ಮೆ ಹಾಗೂ ಆಸಕ್ತಿಯಿಂದ ವಾರೀಸುದಾರರಾಗಿಸುವತ್ತ ರೀಲ್ಸ್ ಹಾಗೂ ಫೋಟೋಗ್ರಾಪಿ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಅದೇ ದಿನ ಸಂಜೆ 6.30ಕ್ಕೆ ನಾಡಿನ ಧಾರ್ಮಿಕ, ಶೈಕ್ಷಣಿಕ, ರಾಜಕೀಯ, ಕ್ರೀಡೆ, ಚಲನಚಿತ್ರ ಕ್ಷೇತ್ರದ ಸಾಧಕರ, ಹಿರಿಯರ, ಗಣ್ಯ ಮಾನ್ಯ ಅತಿಥಿಗಳ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಮರುದಿನ ಬೆಳಿಗ್ಗೆ ಬಹುಮಾನ ವಿತರಣಾ ಸಮಾರಂಭದ ಮೂಲಕ ಕಂಬಳ ಸಂಪನ್ನಗೊಳ್ಳಲಿದೆ“ ಎಂದರು. ವೇದಿಕೆಯಲ್ಲಿ ಮಂಗಳೂರು ಕಂಬಳ ಸಮಿತಿ ಪ್ರಧಾನ ಕಾರ್ಯದರ್ಶಿ ಸುಜಿತ್ ಪ್ರತಾಪ್ ಮಂಗಲ್ಪಾಡಿ, ಸಂಚಾಲಕರಾದ ಸಾಂತ್ಯಗುತ್ತು ಸಚಿನ್ ಶೆಟ್ಟಿ, ಕಿರಣ್ ಕೋಡಿಕಲ್, ಪ್ರಸಾದ್ ಕುಮಾರ್ ಶೆಟ್ಟಿ, ಸುಕುಮಾರ್ ಶೆಟ್ಟಿ, ವಿಜಯ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.ಚಿತ್ರಗಳು: ಸತೀಶ್ ಕಾಪಿಕಾಡ್

ಪ್ರಾದೇಶಿಕ ವಾರ್ತೆಗಳು

“ನೆರವು ಪಡೆದ ಕೈಗಳು ಮುಂದೊಂದು ದಿನ ಸಮಾಜಕ್ಕೆ ತಮ್ಮಿಂದಾದ ನೆರವನ್ನು ನೀಡಬೇಕು”-ಡಾ.ಕೆ.ಪ್ರಕಾಶ್ ಶೆಟ್ಟಿ. ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಪ್ರದಾನ ಸಮಾರಂಭ “ನೆರವು”

ಮಂಗಳೂರು: 2019ರಿಂದ ಆಯೋಜಿಸಿಕೊಂಡು ಬಂದಿರುವ ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆಯ “ನೆರವು” ಸಹಾಯಹಸ್ತ ಪ್ರದಾನ ಕಾರ್ಯಕ್ರಮ ಬುಧವಾರ ಸಂಜೆ ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆಯಿತು.ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಎಂ.ಆರ್.ಜಿ.ಗ್ರೂಪ್ ಚೇರ್ಮನ್ ಡಾ.ಕೆ.ಪ್ರಕಾಶ್ ಶೆಟ್ಟಿ ಅವರು, “ನನ್ನ 60ನೇ ವರ್ಷದ ಹುಟ್ಟುಹಬ್ಬದ ಸಂದರ್ಭದಲ್ಲಿ ಸಮಾಜಕ್ಕೆ ನನ್ನಿಂದ ಕಿಂಚಿತ್ತು ನೆರವು ನೀಡುವ ಉದ್ದೇಶದಿಂದ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಅಂದಿನಿಂದ ಸತತವಾಗಿ ಈ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತಿದೆ. ಇಂದು ನನ್ನ ಬಾಳಿನಲ್ಲಿ ಅತ್ಯಂತ ಖುಷಿಯ ದಿನ. ನನ್ನ ಈ ಕಾರ್ಯಕ್ಕೆ ನನ್ನ ಪತ್ನಿ ಮಗ ಸೊಸೆ ಸಹಿತ ಕುಟುಂಬದ ಸದಸ್ಯರು ಸಹಕಾರ ನೀಡುತ್ತಿದ್ದಾರೆ. ಮೊದಲ ವರ್ಷದಲ್ಲಿ 1 ಕೋಟಿ 25 ಲಕ್ಷ ರೂ. ನೆರವು ನೀಡಿದ್ದು ಅದು ಇಂದು 6 ಕೋಟಿ ರೂ. ಗಡಿಯನ್ನು ದಾಟಿದೆ. ಇಂದು ಇಲ್ಲಿ ಸಮಾರಂಭ ನಡೆಸಿ ನೆರವು ನೀಡುವ ಉದ್ದೇಶ ಇಷ್ಟೇ. ಇಂತಹ ಕಾರ್ಯಕ್ರಮ ಇಂದು ಸಹಾಯ ಪಡೆದ ಕೈಗಳಿಗೆ ಸ್ಫೂರ್ತಿಯಾಗಬೇಕು. ಮುಂದೊಂದು ದಿನ ಅವರು ಕೂಡಾ ಸಮಾಜದಲ್ಲಿ ಒಂದಷ್ಟು ಮಂದಿಗೆ ನೆರವು ನೀಡಲು ಮುಂದೆ ಬರಬೇಕು. ಕಷ್ಟ ಎಲ್ಲರಿಗೂ ಬರುತ್ತದೆ, ಆದರೆ, ಧೃತಿಗೆಡದೆ ಅದನ್ನು ಎದುರಿಸುವ ಛಲ ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ನಿಮ್ಮ ತಂದೆ ತಾಯಿ ಗೌರವ ಪಡುವಂತೆ ಸಾಧನೆ ಮಾಡಿ ದೇಶದಲ್ಲಿ ಗುರುತಿಸುವಂತಾಗಬೇಕು“ ಎಂದರು. ಬಳಿಕ ಮಾತಾಡಿದ ಬೆಂಗಳೂರಿನ ಅದಮ್ಯ ಚೇತನ ಫೌಂಡೇಶನ್ನಿನ ಅಧ್ಯಕ್ಷೆ ಹಾಗೂ ಸಹ- ಸಂಸ್ಥಾಪಕಿ ಡಾ. ತೇಜಸ್ವಿನಿ ಅನಂತಕುಮಾರ್ ಅವರು, “ಶಿಕ್ಷಣದಲ್ಲಿ ಸಾಧನೆ ಮಾಡಿರುವ ವಿದ್ಯಾರ್ಥಿಗಳು, ವಿಶೇಷ ಚೇತನ ಮಕ್ಕಳು, ಸಾಮಾಜಿಕ ಸಂಘಟನೆಗಳಿಗೆ ಬೆಂಬಲ ನೀಡುತ್ತಿರುವ ಪ್ರಕಾಶ್ ಶೆಟ್ಟಿಯವರ ನೆರವು ಕಾರ್ಯಕ್ರಮ ಶ್ಲಾಘನೀಯವಾದುದು. ನಾವೇ ಹುಡುಕಿಕೊಂಡು ಹೋಗಿ ಅರ್ಹರಿಗೆ ನೆರವು ನೀಡುವ ಮಾದರಿ ಕಾರ್ಯಕ್ರಮ ಇದಾಗಿದೆ. ಇಲ್ಲಿ ಆರ್ಥಿಕ ಸಹಾಯ ಪಡೆದಿರುವ ಮಕ್ಕಳು ಮುಂದಿನ ದಿನಗಳಲ್ಲಿ ಇನ್ನಷ್ಟು ಸಾಧನೆಯನ್ನು ಮಾಡಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಳ್ಳುವ ವಿಶ್ವಾಸವಿದೆ“ ಎಂದರು.ಪ್ರಾಸ್ತಾವಿಕ ಮಾತನಾಡಿದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು, “ಬೆಂಗಳೂರು ಹುಬ್ಬಳ್ಳಿ ಗುಲ್ಬರ್ಗದಲ್ಲಿ ಲಕ್ಷಾಂತರ ಮಕ್ಕಳಿಗೆ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಅದಮ್ಯ ಫೌಂಡೇಶನ್ ನ ಸಂಸ್ಥಾಪಕಿ ತೇಜಸ್ವಿನಿ ಅನಂತ ಕುಮಾರ್ ಅವರು ಮಾಡುತ್ತ ಬಂದಿದ್ದಾರೆ. ಎಲ್ಲೂ ತಮ್ಮ ಸಹಾಯವನ್ನು ಹೊರಗಡೆ ತೋರಿಸದೆ ಎಲ್ಲರೊಳಗೆ ಒಂದಾಗಿ ಬದುಕುತ್ತಿರುವ ಅವರು ಇಂದಿನ ಕಾರ್ಯಕ್ರಮಕ್ಕೆ ಆಗಮಿಸಿರುವುದು ಸಂತಸ ತಂದಿದೆ. ಅದೇ ರೀತಿ ಪ್ರಕಾಶ್ ಶೆಟ್ಟಿಯವರ ಪ್ರತೀ ಕಾರ್ಯದ ಹಿಂದೆ ಶ್ರೀಮತಿ ಆಶಾ ಪ್ರಕಾಶ್ ಶೆಟ್ಟಿ ಅವರ ಸ್ಫೂರ್ತಿ ತುಂಬುವ ವ್ಯಕ್ತಿತ್ವ ಇದೆ. ಅವರ ಪುತ್ರ ಗೌರವ್ ಅವರು ತಂದೆ ತಾಯಿಯ ಪ್ರೀತಿಯ ಪುತ್ರನಾಗಿ ಸರಳ ಸಜ್ಜನಿಕೆಯಿಂದ ಗುರುತಿಸಲ್ಪಡುತ್ತಿದ್ದಾರೆ. ಇಂತಹ ಪುಣ್ಯ ಕಾರ್ಯಕ್ಕೆ ಒತ್ತಾಸೆಯಾಗಿ ನಿಂತ ಪ್ರಕಾಶ್ ಶೆಟ್ಟಿಯವರ ಕುಟುಂಬಕ್ಕೆ ನಿಮ್ಮೆಲ್ಲರ ಹಾರೈಕೆಯಿರಲಿ“ ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಮಾತನಾಡಿ, “ಪ್ರಕಾಶ್ ಶೆಟ್ಟಿ ಅವರಂತಹ ಪುಣ್ಯಾತ್ಮನ ಜೊತೆಯಲ್ಲಿ ಇರುವುದೇ ನಮ್ಮ ಭಾಗ್ಯ. ಹುಟ್ಟುವಾಗ ಶ್ರೀಮಂತಿಕೆ ಇಲ್ಲದಿದ್ದರೂ ತಮ್ಮ ಕಾರ್ಯ ಸಾಧನೆಯಿಂದ ಹಂತಹಂತವಾಗಿ ಯಶಸ್ವಿ ಹೋಟೆಲ್ ಉದ್ಯಮಿಯಾಗಿ ಗುರುತಿಸಿಕೊಂಡು ಬಂದಿರುವ ಪ್ರಕಾಶ್ ಶೆಟ್ಟಿ ಅವರ ವ್ಯಕ್ತಿತ್ವ ನಮಗೆಲ್ಲ ಮಾದರಿ. ಅವರ ದಾನ ಧರ್ಮದ ಸಮಾಜಮುಖಿ ಕಾರ್ಯ ಇದೇ ರೀತಿ ಮುಂದುವರಿಯಲಿ“ ಎಂದರು.ಬಳಿಕ ವೇದಿಕೆಯಲ್ಲಿ ಶಿಕ್ಷಣ, ಮನೆ ನಿರ್ಮಾಣ, ವೈದ್ಯಕೀಯ ಚಿಕಿತ್ಸೆ, ವಿಶೇಷ ಚೇತನ ಮಕ್ಕಳು ಹಾಗೂ ಸಾಮಾಜಿಕ ಸಂಘಟನೆಗಳಿಗೆ ಸಾಂಕೇತಿಕವಾಗಿ “ನೆರವು” ಸಹಾಯಹಸ್ತವನ್ನು ವಿತರಿಸಲಾಯಿತು. ಅನುಷ್ಕಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.ಒಟ್ಟು 3,000 ಕುಟುಂಬಗಳಿಗೆ 6 ಕೋಟಿ ರೂಪಾಯಿಗೂ ಮಿಕ್ಕಿ ನೆರವು ವಿತರಣೆ:ಈ ವರ್ಷ ಒಟ್ಟು 3,000 ಕುಟುಂಬಗಳಿಗೆ 6 ಕೋಟಿ ರೂಪಾಯಿಗೂ ಮಿಕ್ಕಿ ನೆರವನ್ನು ವಿತರಿಸಲಾಗಿದ್ದು ಇದರಿಂದ ಸುಮಾರು ಹದಿನೈದು ಸಾವಿರ ಮಂದಿಗೆ ಪ್ರಯೋಜನವಾಗಲಿದೆ. ಫಲಾನುಭವಿಗಳ ಆಯ್ಕೆಯಲ್ಲಿ ಒಂದು ನಿಗದಿತ ಮಾನದಂಡವನ್ನು ಅನುಸರಿಸಲಾಗಿದೆ. ಅರ್ಜಿಗಳನ್ನು ಪರಿಶೀಲಿಸಿ, ಅವಶ್ಯ ಹಿಮ್ಮಾಹಿತಿಗಳನ್ನು ಪಡೆದು ಫಲಾನುಭವಿಗಳ ಆಯ್ಕೆ ಮಾಡಲಾಗಿದೆ. ಸಮಾಜದಲ್ಲಿ ಪರಿವರ್ತನೆ ತರಬಲ್ಲಂತಹ, ಸಾಮೂಹಿಕ ಹಿತದ ಕಾರ್ಯಕ್ರಮಗಳನ್ನು ಕೈಗೊಂಡ ಸಂಘ ಸಂಸ್ಥೆಗಳನ್ನು ಗುರುತಿಸಿ ಆಯ್ಕೆ ಮಾಡಲಾಗಿದೆ. ಪ್ರತೀ ವರ್ಷದ ಶಿಷ್ಟಾಚಾರದಂತೆ ಫಲಾನುಭವಿಗಳನ್ನು ಕರೆತರಲು ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಇದಕ್ಕಾಗಿ ಸ್ವಯಂಸೇವಕರ ತಂಡಗಳಿವೆ. ನೆರವು ವಿತರಣೆ ನಡೆಯುವ ಸ್ಥಳದಲಿ 25 ಕೌಂಟರ್ ಗಳನ್ನು ತೆರೆಯಲಾಗುತ್ತದೆ. ಈಗಾಗಲೇ ವಿತರಣೆ ಮಾಡಿರುವ ಟೋಕನ್ ಗಳನ್ನು ತೋರಿಸಿ ಕೌಂಟರ್ ಗಳಲ್ಲಿ ನೆರವಿನ ಚೆಕ್ ಪಡೆಯಬಹುದು. ಎಲ್ಲಿಯೂ ಅವ್ಯವಸ್ಥೆಗಳಿಗೆ ಆಸ್ಪದ ಇಲ್ಲದಂತೆ ನೋಡಿಕೊಳ್ಳಲಾಗುತ್ತದೆ. ಮಾನಸಿಕ ವಿಕಲತೆ, ಹುಟ್ಟಿನಿಂದ ಬರುವ ದೀರ್ಘಕಾಲೀನ ಚಿಕಿತ್ಸೆ ಅವಶ್ಯವಿರುವ ಖಾಯಿಲೆ ಪೀಡಿತರಿಗೆ, ಅಂಗವೈಕಲ್ಯ, ಕ್ಯಾನ್ಸರ್ ಮುಂತಾದ ಖಾಯಿಲೆಗಳಿಂದ ಬಾಧಿತರಾಗಿರುವವರಿಗೆ ಚಿಕಿತ್ಸೆಗಾಗಿ ಆದ್ಯತೆಯ ಮೇಲೆ ನೆರವು ನೀಡುವುದನ್ನು ಪರಿಗಣಿಸಲಾಗಿದೆ. ಶಿಕ್ಷಣ ಮುಂದುವರಿಸಲು ಕಷ್ಟ ಪಡುತ್ತಿರುವವರಿಗೆ, ಕ್ರೀಡಾ ಕ್ಷೇತ್ರದ ಸಾಧಕರಿಗೆ, ಉತ್ತಮ ಶೈಕ್ಷಣಿಕ ಸಾಧನೆ ಮಾಡಿದವರಿಗೆ ಉತ್ತೇಜನ ನೀಡುವುದಕ್ಕಾಗಿ ಅವರನ್ನು “ನೆರವು” ನೀಡಲು ಆಯ್ಕೆ ಮಾಡಲಾಗಿದೆ. ಮೊದಲ ವರ್ಷ ವಿತರಣೆ ಮಾಡಲಾದ ಮೊತ್ತ 1.25 ಕೋಟಿ ರೂಪಾಯಿ. ವರ್ಷದಿಂದ ಈ ಮೊತ್ತ ಏರುತ್ತಾ ಹೋಗಿದೆ.ವರ್ಷದಿಂದ ವರ್ಷ ಅರ್ಜಿಗಳ ಸಂಖ್ಯೆ ಹೆಚ್ಚುತ್ತಿದೆ, ಸಹಜವಾಗಿ ಮೊತ್ತವೂ ಹೆಚ್ಚಾಗಿದೆ. ಈ ಯೋಜನೆಯ ವ್ಯಾಪ್ತಿ ದಕ್ಷಿಣ ಕನ್ನಡ, ಉಡುಪಿ ಮತ್ತು ಗಡಿನಾಡು ಕಾಸರಗೋಡು ಜಿಲ್ಲೆಗಳು. (ಕೆಲವು ವಿಶೇಷ ಪ್ರಕರಣಗಳಲ್ಲಿ ಮಾನವೀಯತೆಯ ಹಿನ್ನೆಲೆಯಲ್ಲಿ ಈ ಗಡಿಯನ್ನು ದಾಟಿಯೂ ನೆರವು ನೀಡಲಾಗಿದೆ)ಪ್ರತೀ ವ್ಯಕ್ತಿಗೆ ಅವರವರ ಅವಶ್ಯಕತೆಯನ್ನು ಪರಿಗಣಿಸಿ ಕನಿಷ್ಠ 10,000 ರೂ.ಗಳಿಂದ ಗರಿಷ್ಠ 1,00,000 ರೂ.ಗಳವರೆಗೆ ನೀಡಲಾಗಿದೆ, ಆರೋಗ್ಯ ರಕ್ಷಣೆ, ಚಿಕಿತ್ಸೆಗೆ ಮೊದಲಾದ್ಯತೆ ನೀಡಲಾಗಿದೆ.ಸಂಘ ಸಂಸ್ಥೆಗಳಾದರೆ ಕನಿಷ್ಠ 1,00,000 ರೂ.ಗಳಿಂದ ಗರಿಷ್ಠ 10,00,000 ರೂ.ಗಳವರೆಗೆ ನೆರವು ನೀಡಲಾಗಿದೆ.ವೈದ್ಯಕೀಯ ಪ್ರಕರಣಗಳಲ್ಲಿ ಅವಶ್ಯ ದಾಖಲೆಗಳನ್ನು ಪಡೆದು, ಪರಿಶೀಲಿಸಿ, ಹಿಮ್ಮಾಹಿತಿ ಪಡೆದು ನೆರವು ನೀಡಲಾಗಿದೆ.ಬಹುತೇಕ ಅರ್ಜಿಗಳು ವೈದ್ಯಕೀಯ ನೆರವನ್ನು ಕೋರಿದವುಗಳಾಗಿವೆ.ಸಂಘ ಸಂಸ್ಥೆಗಳ ಸಂದರ್ಭದಲ್ಲಿ ಅವುಗಳ ಚಟುವಟಿಕೆ ಸ್ವಚ್ಚತೆ ಕಾಪಾಡುವಿಕೆ, ಮಹಿಳಾ ಸಶಕ್ತೀಕರಣ, ಯುವಜನರ ಸಬಲೀಕರಣ, ಕೌಶಲ್ಯೀಕರಣ ಸಹಿತ ಸಾಮಾಜಿಕ ಪರಿವರ್ತನೆಗೆ ಅವುಗಳ ಕೊಡುಗೆಯನ್ನು ಗಮನಕ್ಕೆ ತೆಗೆದುಕೊಳ್ಳಲಾಗಿದೆ.ಚಿತ್ರಗಳು: ಸತೀಶ್ ಕಾಪಿಕಾಡ್

ಪ್ರಾದೇಶಿಕ ವಾರ್ತೆಗಳು

ಪಾಲ್ದನೆ ಚರ್ಚ್ ನಲ್ಲಿ ಕ್ರಿಸ್ಮಸ್ ಕ್ಯಾರೊಲ್ ಗಾಯನ

ಮಂಗಳೂರು: ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಕ್ರಿಸ್ಮಸ್ ಹಬ್ಬದ ಬಲಿಪೂಜೆ ಸಂದರ್ಭ ಗಾಯನ ಮಂಡಳಿಯ ಮುಖ್ಯಸ್ಥೆ ಲಿಝಿ ಫೆರ್ನಾಂಡಿಸ್ ನೇತೃತ್ವದಲ್ಲಿ ಕ್ರಿಸ್ಮಸ್ ಗೀತೆಗಳನ್ನು ಅಂದರೆ ಕ್ಯಾರೊಲ್ ಗಳನ್ನು ಸುಶ್ರಾವ್ಯವಾಗಿ ಪ್ರಸ್ತುತ ಪಡಿಸಲಾಯಿತು. ಗಾಯನ ತಂಡದಲ್ಲಿ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಚಾರ್ಲ್ಸ್ ಡಿಮೆಲ್ಲೊ, ಲ್ಯಾನಿಶ್ ಡಿ ಸೋಜಾ, ಮಾರಿಯೋ ರೇಗೊ, ಮಿಶಲ್ ರೇಗೊ, ರೀಶಲ್ ಡಿ ಸೋಜಾ, ಜೋಯಲ್ ಫೆರ್ನಾಂಡಿಸ್, ಜೆಸಿಂತಾ ಕ್ರಾಸ್ತಾ, ಅಲೀಶಾ ಮೊಂತೇರೊ, ರೆ ನಿಶಾ ಡಿ ಸೋಜಾ, ಅಲಿಟಾ ಟೆಲ್ಲಿಸ್, ಈತನ್ ಮೊಂತೆರೋ, ಓಶಿನ್ ಮೊರಾಸ್, ಜನಿಶಾ ಫೆರ್ನಾಂಡಿಸ್, ಅಲ್ವೀರಾ ಮೊಂತೆರೋ, ಸ್ಟಾನ್ ಝಾ ಕ್ರಾಸ್ತಾ ಮತ್ತು ಎಲ್ದನ್ ಮೊಂತೆರೋ ಅವರು ಗಾಯನ ತಂಡದಲ್ಲಿದ್ದರು.

ಪ್ರಾದೇಶಿಕ ವಾರ್ತೆಗಳು

ಸಂಸ್ಕೃತಿಯಿಂದ ವಿಮುಖವಾಗದಂತೆ ಅರಿವು ಮೂಡಿಸಬೇಕು: ಎಡನೀರು ಶ್ರೀಗಳು

ಪುತ್ತೂರು: ಸಮಾಜದ ಮುಖ್ಯವಾಹಿನಿಯಾದ ಯುವ ಜನಾಂಗವು ಸಂಸ್ಕೃತಿಯಿಂದ ವಿಮುಖವಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಹಿರಿಯರಿಗಿದೆ. ಹಿರಿಯರ ಪ್ರಯತ್ನದಿಂದ ಮರೆಯಾಗುತ್ತಿರುವ ಸಂಸ್ಕಾರಗಳನ್ನು ಮರುಕಳಿಸುವಂತೆ ಮಾಡಲು ಸಾಧ್ಯವೆಂದು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ತಿಳಿಸಿದರು.ಪುತ್ತೂರಿನ ಕಲ್ಲೇಗ ಭಾರತ ಮಾತಾ ಸಮುದಾಯ ಭವನದಲ್ಲಿ ಜರಗಿದ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ. ರಿ ಇದರ ತೃತೀಯ ವಾರ್ಷಿಕೋತ್ಸವವನ್ನು ಅವರು ದೀಪ ಬೆಳಗಿಸಿ ಉದ್ಘಾಟಿಸಿ ಆಶೀರ್ವಚನ ನೀಡಿದರು.ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಪ್ರೊ ಎ.ವಿ. ನಾರಾಯಣ ಅವರು ಅಧ್ಯಕ್ಷತೆ ವಹಿಸಿದ್ದರು.ಮುಂಬೈ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ನಿವೃತ್ತ ಮುಖ್ಯಸ್ಥರಾದ ಡಾ. ವಸಂತಕುಮಾರ ತಾಳ್ತಜೆ ವಿಶೇಷ ಉಪನ್ಯಾಸ ನೀಡಿದರು.ಪುತ್ತೂರು ಮಹಾವೀರ ಆಸ್ಪತ್ರೆಯ ಡಾ. ಸುರೇಶ್ ಪುತ್ತೂರಾಯ ಹಿರಿಯರಿಗೆ ಆರೋಗ್ಯ ಸಲಹೆಗಳನ್ನು ನೀಡಿದರು.ಸನ್ಮಾನ ಮತ್ತು ಗೌರವಾರ್ಪಣೆ : ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಅಪೂರ್ವ ಸಾಧನೆ ಮಾಡಿದ ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೆ. ಕೃಷ್ಣಕುಮಾರ ಪೂಂಜ,ಕರ್ನಾಟಕ ಸರಕಾರದಿಂದ ಕನಕ ಪ್ರಶಸ್ತಿ ಪುರಸ್ಕೃತರಾದ ತಾಳ್ತಜೆ ವಸಂತಕುಮಾರ ಇವರನ್ನು ಸನ್ಮಾನಿಸಲಾಯಿತು.ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಪ್ರೂ ಎ. ವಿ. ನಾರಾಯಣ,ಸಾಮಾಜಿಕ ಕಾರ್ಯಕರ್ತರಾದ ಸಿ.ಎಚ್ ಬಾಲಕೃಷ್ಣ ಶೆಟ್ಟಿ ಮಂಗಳೂರು ಮತ್ತು ಪ್ರೇಮಲತಾ ಟಿ.ರಾವ್ ಪುತ್ತೂರು, ಮಹಾಬಲ ರೈ ಒಳತಡ್ಕ ಇವರನ್ನು ಗೌರವಿಸಲಾಯಿತು.ಕೇಂದ್ರ ಸಮಿತಿ ಮತ್ತು ತಾಲೂಕು ಘಟಕಗಳ ನೂತನ ಪದಾಧಿಕಾರಿಗಳ ವಿವರವನ್ನು ಪ್ರಧಾನ ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ನೀಡಿದರು.ಸೇವಾ ಕೊಡುಗೆಗಳ ಹಸ್ತಾಂತರ : ಪ್ರತಿಷ್ಠಾನದ ಬಂಟ್ವಾಳ ಘಟಕದಿಂದ ಧೀರಜ್ ನಾಯ್ಕ್ ಪುಚ್ಛಕೆರೆ ಮಂಚಿ, ಗಣಪ ಪೂಜಾರಿ ಅಬ್ಬೆಟ್ಟು,ವಾಮನ ಪೂಜಾರಿ ಪರಂಗಿಪೇಟೆ ಮತ್ತು ಪುತ್ತೂರು ಘಟಕದಿಂದ ಹೊನ್ನಮ್ಮ ಬಲ್ನಾಡು ಇವರಿಗೆ ಆರ್ಥಿಕ ಸಹಾಯವನ್ನು ವಿತರಿಸಲಾಯಿತು.ಸಂಚಾಲಕ ಭಾಸ್ಕರ ಬಾರ್ಯ, ಪುತ್ತೂರು ಘಟಕದ ಅಧ್ಯಕ್ಷ ಚಂದ್ರಶೇಖರ ಆಳ್ವ ಪಡುಮಲೆ, ಮಂಗಳೂರು ಘಟಕದ ಅಧ್ಯಕ್ಷ ಭರತ್.ಕೆ , ಬೆಳ್ತಂಗಡಿ ಘಟಕದ ಅಧ್ಯಕ್ಷ ಸೀತಾರಾಮ ಶೆಟ್ಟಿ ಉಜಿರೆ, ಬಂಟ್ವಾಳ ಘಟಕದ ಅಧ್ಯಕ್ಷ ಸುಬ್ರಾಯ ಮಡಿವಾಳ ಬಿ.ಸಿ ರೋಡು, ಪುತ್ತೂರು ಘಟಕದ ಜಿಲ್ಲಾ ಪ್ರತಿನಿಧಿ ಸಂಜೀವ ನಾಯಕ್ ಕಲ್ಲೇಗ, ಮಹಿಳಾ ಘಟಕದ ಸಂಚಾಲಕಿ ವತ್ಸಲಾ ರಾಜ್ನಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಪ್ರತಿಷ್ಠಾನದ ಟ್ರಸ್ಟಿಗಳಾದ ಲೋಕೇಶ್ ಹೆಗ್ಡೆ ಪುತ್ತೂರು, ಎಂ. ಜಯರಾಮ ಭಂಡಾರಿ ಧರ್ಮಸ್ಥಳ, ಅನಾರು ಕೃಷ್ಣಶರ್ಮ, ಪದಾಧಿಕಾರಿಗಳಾದ ಭವಾನಿ ಶಂಕರ ಶೆಟ್ಟಿ ಪುತ್ತೂರು, ಕೆ.ರಾಮಕೃಷ್ಣ ನಾಯಕ್ ಬಂಟ್ವಾಳ, ಜಯಾನಂದ ಪೆರಾಜೆ, ವಸಂತ ಸುವರ್ಣ ಬೆಳ್ತಂಗಡಿ, ಕೆ.ವಾರಿಜ ಬೆಳ್ತಂಗಡಿ, ಚಂಚಲಾಕ್ಷಿ ಪುತ್ತೂರು, ಪ್ರೊ ವಿ. ಜಿ ಭಟ್ ಪುತ್ತೂರು,ಪದ್ಮಯ್ಯ, ರಾಜಮಣಿ ರಾಮಕುಂಜ,ಗಣೇಶ್ ಭಟ್ ಬೆಳ್ತಂಗಡಿ, ಗುಂಡ್ಯಡ್ಕ ಈಶ್ವರ ಭಟ್ ವಿವಿಧ ಕಾರ್ಯಕ್ರಮಗಳನ್ನು ನಿರ್ವಹಿಸಿದರು.ಪ್ರತಿಷ್ಠಾನದ ಅಧ್ಯಕ್ಷ ಕಯ್ಯೂರು ನಾರಾಯಣ ಭಟ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಜೊತೆ ಕಾರ್ಯದರ್ಶಿ ಡಾ.ಬಿ. ಎನ್ ಮಹಾಲಿಂಗ ಭಟ್ ಅಭಿನಂದನ ನುಡಿಗಳನ್ನಾಡಿದರು. ಸಹ ಸಂಚಾಲಕ ಪ್ರೊ. ವೇದವ್ಯಾಸ ರಾಮಕುಂಜ ಪ್ರಾರ್ಥಿಸಿದರು.ಟ್ರಸ್ಟಿ ದುಗ್ಗಪ್ಪ.ಎನ್ ಪುತ್ತೂರು ವಂದಿಸಿದರು. ಟ್ರಸ್ಟಿ ಜಯರಾಮ ಪೂಜಾರಿ ಬಂಟ್ವಾಳ ಕಾರ್ಯಕ್ರಮ ನಿರೂಪಿಸಿದರು.ಸಾಂಸ್ಕೃತಿಕ ಕಾರ್ಯಕ್ರಮವಾಗಿ ಭಾಸ್ಕರ ಬಾರ್ಯ ಸಂಯೋಜನೆಯಲ್ಲಿ ಹಿರಿಯರ ಸೇವಾ ಪ್ರತಿಷ್ಠಾನದ ಸದಸ್ಯರಿಂದ ಪಾರ್ಥಸಾರಥ್ಯ ತಾಳ ಮದ್ದಳೆ ಜರಗಿತು.

ಪ್ರಾದೇಶಿಕ ವಾರ್ತೆಗಳು

ಸಂಸ್ಕೃತಿಯಿಂದ ವಿಮುಖವಾಗದಂತೆ ಅರಿವು ಮೂಡಿಸಬೇಕು: ಎಡನೀರು ಶ್ರೀಗಳು

ಪುತ್ತೂರು: ಸಮಾಜದ ಮುಖ್ಯವಾಹಿನಿಯಾದ ಯುವ ಜನಾಂಗವು ಸಂಸ್ಕೃತಿಯಿಂದ ವಿಮುಖವಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಹಿರಿಯರಿಗಿದೆ. ಹಿರಿಯರ ಪ್ರಯತ್ನದಿಂದ ಮರೆಯಾಗುತ್ತಿರುವ ಸಂಸ್ಕಾರಗಳನ್ನು ಮರುಕಳಿಸುವಂತೆ ಮಾಡಲು ಸಾಧ್ಯವೆಂದು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ತಿಳಿಸಿದರು.ಪುತ್ತೂರಿನ ಕಲ್ಲೇಗ ಭಾರತ ಮಾತಾ ಸಮುದಾಯ ಭವನದಲ್ಲಿ ಜರಗಿದ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ. ರಿ ಇದರ ತೃತೀಯ ವಾರ್ಷಿಕೋತ್ಸವವನ್ನು ಅವರು ದೀಪ ಬೆಳಗಿಸಿ ಉದ್ಘಾಟಿಸಿ ಆಶೀರ್ವಚನ ನೀಡಿದರು.ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಪ್ರೊ ಎ.ವಿ. ನಾರಾಯಣ ಅವರು ಅಧ್ಯಕ್ಷತೆ ವಹಿಸಿದ್ದರು.ಮುಂಬೈ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ನಿವೃತ್ತ ಮುಖ್ಯಸ್ಥರಾದ ಡಾ. ವಸಂತಕುಮಾರ ತಾಳ್ತಜೆ ವಿಶೇಷ ಉಪನ್ಯಾಸ ನೀಡಿದರು.ಪುತ್ತೂರು ಮಹಾವೀರ ಆಸ್ಪತ್ರೆಯ ಡಾ. ಸುರೇಶ್ ಪುತ್ತೂರಾಯ ಹಿರಿಯರಿಗೆ ಆರೋಗ್ಯ ಸಲಹೆಗಳನ್ನು ನೀಡಿದರು.ಸನ್ಮಾನ ಮತ್ತು ಗೌರವಾರ್ಪಣೆ : ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಅಪೂರ್ವ ಸಾಧನೆ ಮಾಡಿದ ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೆ. ಕೃಷ್ಣಕುಮಾರ ಪೂಂಜ,ಕರ್ನಾಟಕ ಸರಕಾರದಿಂದ ಕನಕ ಪ್ರಶಸ್ತಿ ಪುರಸ್ಕೃತರಾದ ತಾಳ್ತಜೆ ವಸಂತಕುಮಾರ ಇವರನ್ನು ಸನ್ಮಾನಿಸಲಾಯಿತು.ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಪ್ರೂ ಎ. ವಿ. ನಾರಾಯಣ,ಸಾಮಾಜಿಕ ಕಾರ್ಯಕರ್ತರಾದ ಸಿ.ಎಚ್ ಬಾಲಕೃಷ್ಣ ಶೆಟ್ಟಿ ಮಂಗಳೂರು ಮತ್ತು ಪ್ರೇಮಲತಾ ಟಿ.ರಾವ್ ಪುತ್ತೂರು, ಮಹಾಬಲ ರೈ ಒಳತಡ್ಕ ಇವರನ್ನು ಗೌರವಿಸಲಾಯಿತು.ಕೇಂದ್ರ ಸಮಿತಿ ಮತ್ತು ತಾಲೂಕು ಘಟಕಗಳ ನೂತನ ಪದಾಧಿಕಾರಿಗಳ ವಿವರವನ್ನು ಪ್ರಧಾನ ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ನೀಡಿದರು.ಸೇವಾ ಕೊಡುಗೆಗಳ ಹಸ್ತಾಂತರ : ಪ್ರತಿಷ್ಠಾನದ ಬಂಟ್ವಾಳ ಘಟಕದಿಂದ ಧೀರಜ್ ನಾಯ್ಕ್ ಪುಚ್ಛಕೆರೆ ಮಂಚಿ, ಗಣಪ ಪೂಜಾರಿ ಅಬ್ಬೆಟ್ಟು,ವಾಮನ ಪೂಜಾರಿ ಪರಂಗಿಪೇಟೆ ಮತ್ತು ಪುತ್ತೂರು ಘಟಕದಿಂದ ಹೊನ್ನಮ್ಮ ಬಲ್ನಾಡು ಇವರಿಗೆ ಆರ್ಥಿಕ ಸಹಾಯವನ್ನು ವಿತರಿಸಲಾಯಿತು.ಸಂಚಾಲಕ ಭಾಸ್ಕರ ಬಾರ್ಯ, ಪುತ್ತೂರು ಘಟಕದ ಅಧ್ಯಕ್ಷ ಚಂದ್ರಶೇಖರ ಆಳ್ವ ಪಡುಮಲೆ, ಮಂಗಳೂರು ಘಟಕದ ಅಧ್ಯಕ್ಷ ಭರತ್.ಕೆ , ಬೆಳ್ತಂಗಡಿ ಘಟಕದ ಅಧ್ಯಕ್ಷ ಸೀತಾರಾಮ ಶೆಟ್ಟಿ ಉಜಿರೆ, ಬಂಟ್ವಾಳ ಘಟಕದ ಅಧ್ಯಕ್ಷ ಸುಬ್ರಾಯ ಮಡಿವಾಳ ಬಿ.ಸಿ ರೋಡು, ಪುತ್ತೂರು ಘಟಕದ ಜಿಲ್ಲಾ ಪ್ರತಿನಿಧಿ ಸಂಜೀವ ನಾಯಕ್ ಕಲ್ಲೇಗ, ಮಹಿಳಾ ಘಟಕದ ಸಂಚಾಲಕಿ ವತ್ಸಲಾ ರಾಜ್ನಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಪ್ರತಿಷ್ಠಾನದ ಟ್ರಸ್ಟಿಗಳಾದ ಲೋಕೇಶ್ ಹೆಗ್ಡೆ ಪುತ್ತೂರು, ಎಂ. ಜಯರಾಮ ಭಂಡಾರಿ ಧರ್ಮಸ್ಥಳ, ಅನಾರು ಕೃಷ್ಣಶರ್ಮ, ಪದಾಧಿಕಾರಿಗಳಾದ ಭವಾನಿ ಶಂಕರ ಶೆಟ್ಟಿ ಪುತ್ತೂರು, ಕೆ.ರಾಮಕೃಷ್ಣ ನಾಯಕ್ ಬಂಟ್ವಾಳ, ಜಯಾನಂದ ಪೆರಾಜೆ, ವಸಂತ ಸುವರ್ಣ ಬೆಳ್ತಂಗಡಿ, ಕೆ.ವಾರಿಜ ಬೆಳ್ತಂಗಡಿ, ಚಂಚಲಾಕ್ಷಿ ಪುತ್ತೂರು, ಪ್ರೊ ವಿ. ಜಿ ಭಟ್ ಪುತ್ತೂರು,ಪದ್ಮಯ್ಯ, ರಾಜಮಣಿ ರಾಮಕುಂಜ,ಗಣೇಶ್ ಭಟ್ ಬೆಳ್ತಂಗಡಿ, ಗುಂಡ್ಯಡ್ಕ ಈಶ್ವರ ಭಟ್ ವಿವಿಧ ಕಾರ್ಯಕ್ರಮಗಳನ್ನು ನಿರ್ವಹಿಸಿದರು.ಪ್ರತಿಷ್ಠಾನದ ಅಧ್ಯಕ್ಷ ಕಯ್ಯೂರು ನಾರಾಯಣ ಭಟ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಜೊತೆ ಕಾರ್ಯದರ್ಶಿ ಡಾ.ಬಿ. ಎನ್ ಮಹಾಲಿಂಗ ಭಟ್ ಅಭಿನಂದನ ನುಡಿಗಳನ್ನಾಡಿದರು. ಸಹ ಸಂಚಾಲಕ ಪ್ರೊ. ವೇದವ್ಯಾಸ ರಾಮಕುಂಜ ಪ್ರಾರ್ಥಿಸಿದರು.ಟ್ರಸ್ಟಿ ದುಗ್ಗಪ್ಪ.ಎನ್ ಪುತ್ತೂರು ವಂದಿಸಿದರು. ಟ್ರಸ್ಟಿ ಜಯರಾಮ ಪೂಜಾರಿ ಬಂಟ್ವಾಳ ಕಾರ್ಯಕ್ರಮ ನಿರೂಪಿಸಿದರು.ಸಾಂಸ್ಕೃತಿಕ ಕಾರ್ಯಕ್ರಮವಾಗಿ ಭಾಸ್ಕರ ಬಾರ್ಯ ಸಂಯೋಜನೆಯಲ್ಲಿ ಹಿರಿಯರ ಸೇವಾ ಪ್ರತಿಷ್ಠಾನದ ಸದಸ್ಯರಿಂದ ಪಾರ್ಥಸಾರಥ್ಯ ತಾಳ ಮದ್ದಳೆ ಜರಗಿತು.

ಕರಾವಳಿ ಸುದ್ದಿ

Grand Launching of Rohan Estate Mukka Riverside

Rohan Estate Mukka is a residential layout developed along the banks of the Nandini River, offering a perfect blend of natural beauty and security. This layout is designed for a comfortable lifestyle, harmonizing with nature, and has evolved into a resort-style residential development. The design and surroundings offer a peaceful retreat, ideal for luxurious living. Luxury Resort-Style Residential DevelopmentRohan Estate Mukka is not a resort itself but a residential layout designed in a resort style. It stands tall in the lap of nature, providing a high-end, luxurious living experience similar to that of a resort. This layout offers residents the opportunity to experience an elite resort-style life.The development is strategically located between the river, sea, and national highway, taking full advantage of the natural environment. The construction integrates natural wealth with luxurious amenities, creating a resort-like residential area. The riverfront has been developed with a specially designed boundary wall, adding to the aesthetic appeal and tourism potential of the area.Such a luxurious layout is unprecedented in the coastal region. The rare combination of riverfront location and an attractive development in a prime area makes Rohan Estate Mukka a highly sought-after residential community. Rohan Corporation’s developments stand out for their unique design and appeal compared to other real estate companies. Rohan Corporation: A Leader in Real EstateRohan Corporation, a pioneering name in Mangaluru’s real estate sector, is known for creating attractive and high-quality residential layouts in prestigious locations. The company emphasizes site selection before finalizing any project, ensuring the location is ideal for future developments.Rohan Corporation revolutionized the real estate market, especially during the COVID-19 pandemic, by introducing Rohan Square in Kapitanio, a massive project that attracted buyers quickly, selling up to 90% of homes and commercial spaces within a month. This innovative approach brought significant profits to investors. Later, the company created a massive residential development in Pakshikere, completing sales within the stipulated time. Rohan City near Bijai, offering 7.5% annual guaranteed returns, is another example of the corporation’s successful ventures. Through these projects, Rohan Corporation has been reshaping the cityscape of Mangaluru. Special Features of Rohan Estate Mukka:• Riverfront residential layout• Gated community for enhanced security• International-quality clubhouse• Marina for recreational boating activities (boating and kayaking)• Infinity swimming pool• Separate swimming pool for children• Family restaurant within the community• Cycling track• Walking track• Outdoor gym• Yoga lawn• Meditation center• Spa• Life-size chessboard• Children’s playground• Skating rink• Badminton court• Billiards• Multipurpose hall• Lodging facilities• Amphitheater• Security features: CCTV cameras, large compound wall, and secure entrance gate• 40-foot concrete main road• 30-foot concrete internal roads• Attractive solar street lighting• 24/7 security at the main entrance• Aesthetic landscaping• Vastu-compliant plots• Rainwater harvesting and water purification plant• Underground drainage system• Suitable for both investment and home construction• Bank loan facilities• Supermarket within the community• Special emphasis on greenery• Future layout management by the corporation itselfRohan Estate Mukka is not only an excellent residential option but also a prime investment opportunity. For more information please contact:ROHAN CORPORATIONRohan City, Main Road Bejai, Mangalore 575004Ph: 98456 07725, 98454 90100, 90363 92628, 98456 07724www.rohancorporation.in

ಪ್ರಾದೇಶಿಕ ವಾರ್ತೆಗಳು

ರೋಹನ್ ಎಸ್ಟೇಟ್ ಮುಕ್ಕ, ಮಾರುಕಟ್ಟೆಗೆ ಬಿಡುಗಡೆ

ನಂದಿನಿ ನದಿಯ ಹಿನ್ನೀರಿನ ತಟದಲ್ಲಿ ರೋಹನ್ ಎಸ್ಟೇಟ್ ಮುಕ್ಕ ಬಡಾವಣೆ ನಿರ್ಮಾಣವಾಗಿದೆ. ಪರಿಸರದ ಶ್ರೀಮಂತಿಕೆಯ ಜತೆಗೆ ಅತ್ಯಂತ ಸುರಕ್ಷಿತ ಹಾಗೂ ಆಕರ್ಷಕವಾಗಿ ಬಡಾವಣೆಯು ಮೂಡಿ ಬಂದಿದೆ. ಪ್ರಕೃತಿ ಜತೆಗೆ ಮಿಳಿತವಾದ ಆರಾಮದಾಯಕ ಬದುಕಿಗಾಗಿ ಈ ಬಡಾವಣೆಯನ್ನು ವಿನ್ಯಾಸಗೊಳಿಸಲಾಗಿದೆ. ಇದೊಂದು ಪರಿಪೂರ್ಣವಾದ ರೆಸಾರ್ಟ್ ಮಾದರಿಯ ಬಡಾವಣೆಯಾಗಿ ರೂಪುಗೊಂಡಿದೆ.ರೆಸಾರ್ಟ್ ಮಾದರಿಯ ಐಶಾರಾಮಿ ಬಡಾವಣೆರೋಹನ್ ಎಸ್ಟೇಟ್ ಮುಕ್ಕ. ಇದು ರೆಸಾರ್ಟ್ ಅಲ್ಲ. ರೆಸಾರ್ಟ್ ಶೈಲಿಯ ವಸತಿ ಬಡಾವಣೆ. ಶ್ರೀಮಂತಿಕೆ, ಐಶಾರಾಮಿ ಮಾದರಿ ಎಂಬಂತೆ ಪ್ರಕೃತಿಯ ಮಡಿಲಿನಲ್ಲಿ ತಲೆ ಎತ್ತಿ ನಿಂತಿರುವ ವಸತಿ ಬಡಾವಣೆಯಾಗಿದೆ. ಇಲ್ಲಿ ವಾಸಿಸುವವರಿಗೆ ಆಭಿಜಾತ ರೆಸಾರ್ಟ್ ಶೈಲಿಯ ಜೀವನದ ಅನುಭವ ಸಿಗಲಿದೆ.ನದಿ, ಸಮುದ್ರ ಹಾಗೂ ರಾಷ್ಟ್ರೀಯ ಹೆದ್ದಾರಿಯ ನಡುವೆ ವಸತಿ ಬಡಾವಣೆ ನಿರ್ಮಾಣವಾಗುತ್ತಿದೆ. ನೈಸರ್ಗಿಕವಾಗಿರುವ ಶ್ರೀಮಂತಿಕೆಯನ್ನೇ ಬಂಡವಾಳವಾಗಿಸಿಕೊಂಡು ನಿರ್ಮಾಣ ಮಾಡಲಾಗಿದ್ದು, ಸಕಲ ಐಶಾರಾಮಿ ಸೌಲಭ್ಯದೊಂದಿಗೆ ರೆಸಾರ್ಟ್ ಮಾದರಿಯಲ್ಲಿ ಬಡಾವಣೆ ನಿರ್ಮಾಣವಾಗುತ್ತಿದೆ. ನದಿ ಕಿನಾರೆಯಲ್ಲಿ ಸೂಕ್ತ ರೀತಿಯ ತಡೆ ಗೋಡೆಯನ್ನು ಪ್ರವಾಸೋದ್ಯಮದ ನೆಲೆಯಲ್ಲಿ ಆಕರ್ಷಕವಾಗಿ ನಿರ್ಮಾಣ ಮಾಡಲಾಗಿದೆ ಈ ರೀತಿಯ ಶ್ರೀಮಂತಿಕೆಯ ಲೇಔಟ್ ಇಂದಿನವರೆಗೆ ಕರಾವಳಿ ಭಾಗದಲ್ಲಿ ನಿರ್ಮಾಣವಾಗಲಿಲ್ಲ ಎಂಬಂತೆ ತಲೆ ಎತ್ತಿದೆ. ಈ ರೀತಿಯ ನದಿ ಕಿನಾರೆಯು ಸಿಗುವುದೇ ಅಪರೂಪ. ಈ ರೀತಿಯ ಅಪರೂಪದ ಸ್ಥಳ, ಪ್ರಮುಖ ಸ್ಥಳದಲ್ಲಿ ಆಕರ್ಷಕವಾಗಿ ನಿರ್ಮಾಣ ಮಾಡುವುದರಿಂದಾಗಿಯೇ ರೋಹನ್ ಕಾರ್ಪೋರೇಷನ್ನ ಪ್ರತಿಯೊಂದು ವಸತಿ ಸಮುಚ್ಚಯ ಹಾಗೂ ಬಡಾವಣೆಗೆ ಅತ್ಯಂತ ಹೆಚ್ಚಿನ ಬೇಡಿಕೆ ಇರುತ್ತದೆ. ಇತರ ರಿಯಲ್ ಎಸ್ಟೇಟ್ ಕಂಪನಿಗಳಿಗೆ ಹೋಲಿಸಿದರೆ ಶ್ರೇಷ್ಠತೆಯಿಂದ ಭಿನ್ನವಾಗಿ ಕಾಣಸಿಗುತ್ತದೆ. ರಿಯಲ್ ಎಸ್ಟೇಟ್ ಉದ್ಯಮದಲ್ಲಿ ಹೊಸ ಮನ್ವಂತರವನ್ನು ಸೃಷ್ಟಿಸಿರುವ ಮಂಗಳೂರಿನ ರೋಹನ್ ಕಾರ್ಪೋರೇಷನ್, ನಗರದ ಪ್ರತಿಷ್ಠಿತ ಪ್ರದೇಶದಲ್ಲಿ, ಅತಿ ಹೆಚ್ಚು ವಸತಿ ಸಮುಚ್ಚಯ ಹಾಗೂ ವಸತಿ ಬಡಾವಣೆಯನ್ನು ಆಕರ್ಷಕವಾಗಿ ನಿರ್ಮಾಣ ಮಾಡಿದ ಸಂಸ್ಥೆ ಎಂದು ಖ್ಯಾತಿಗೆ ಪಾತ್ರವಾಗಿದೆ. ಮಂಗಳೂರು ನಗರದ ಯಾವುದೇ ಪ್ರಮುಖ ಬೀದಿಗಳಲ್ಲಿ ರೋಹನ್ ಕಾರ್ಪೋರೇಷನ್ ಹೆಸರು ರಾರಾಜಿಸುತ್ತಿರಬೇಕು ಎಂಬ ಕನಸಿನಿಂದ ಯೋಜನೆಗಳನ್ನು ಕೈಗೆತ್ತಿಕೊಳ್ಳುವ ಮೊದಲೇ ಸ್ಥಳಕ್ಕೆ ಪ್ರಮುಖ ಒತ್ತು ನೀಡುತ್ತಾರೆ. ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಹೊಸ ವಿಚಾರವನ್ನು ತಂದು ಆ ಮೂಲಕ ಕ್ರಾಂತಿ ಮಾಡಿದ ಸಂಸ್ಥೆ ಎಂದರೆ ಕರಾವಳಿಯ ರೋಹನ್ ಕಾರ್ಪೋರೇಷನ್. ಕೋವಿಡ್ 19ರಿಂದ ಇಡೀ ಮಾರುಕಟ್ಟೆ ಗಣನೀಯವಾಗಿ ಕುಸಿದ ಸಂದರ್ಭದಲ್ಲಿ ಕಪಿತಾನಿಯೋ ಬಳಿ ರೋಹನ್ ಸ್ಕ್ವೇರ್ ಎಂಬ ಬೃಹತ್ ಯೋಜನೆ ಕೈಗೆತ್ತಿಕೊಂಡು ಗ್ರಾಹಕರಿಗೆ ಆಕರ್ಷಕ ಕೊಡುಗೆ ನೀಡಿ ತಿಂಗಳಿನೊಳಗೆ ಶೇ. 90ರಷ್ಟು ಮನೆ ಹಾಗೂ ವಾಣಿಜ್ಯ ಮಳಿಗೆಗಳನ್ನು ಮಾರಾಟ ಮಾಡಿ ಕ್ರಾಂತಿಯನ್ನೇ ಮಾಡಿದರು. ಇದು ಹೂಡಿಕೆಯ ಉದ್ದೇಶದಿಂದ ಖರೀದಿ ಮಾಡಿದ ಗ್ರಾಹಕರಿಗೆ ಹೆಚ್ಚಿನ ಲಾಭವಾಗಿದೆ. ಬಳಿಕ ಪಕ್ಷಿಕೆರೆಯಲ್ಲಿ ಬೃಹತ್ ವಸತಿ ಬಡಾವಣೆ ನಿರ್ಮಾಣ ಮಾಡಿ, ಎಲ್ಲವನ್ನೂ ದಾಖಲೆ ಅವಧಿಯಲ್ಲಿ ಮಾರಾಟ ಮಾಡಿದ ಹೆಗ್ಗಳಿಕೆ ರೋಹನ್ ಕಾರ್ಪೋರೇಷನ್ಗೆ ಸಲ್ಲುತ್ತದೆ. ಈ ನಡುವೆ ಬಿಜೈ ಬಳಿ ರೋಹನ್ ಸಿಟಿ ಎಂಬ ಬೃಹತ್ ಯೋಜನೆ ಕೈಗೆತ್ತಿಕೊಂಡು ವಾರ್ಷಿಕವಾಗಿ ಶೇ. 7.5ರಷ್ಟು ಖಾತರಿ ರಿಟರ್ನ್ ಅನ್ನು ಗ್ರಾಹಕರಿಗೆ ನೀಡುತ್ತಿರುವ ಹೆಗ್ಗಳಿಕೆಯಾಗಿದೆ. ಮಂಗಳೂರು ನಗರದ ಪ್ರಮುಖ ಪ್ರದೇಶದಲ್ಲಿ ಆಕರ್ಷಕ ವಸತಿ ಸಮುಚ್ಚಯ ನಿರ್ಮಾಣ ಮಾಡಿ, ನಗರಕ್ಕೆ ಹೊಸ ರೂಪವನ್ನು ಸಂಸ್ಥೆಯು ನೀಡುತ್ತಿದೆ. ರೋಹನ್ ಎಸ್ಟೇಟ್ ಮುಕ್ಕ – ವಿಶೇಷತೆಗಳು:• ನದಿ ತೀರದಲ್ಲಿನ ವಸತಿ ಬಡಾವಣೆ• ಗೇಟೆಡ್ ಕಮ್ಯೂನಿಟಿ• ಅಂತಾರಾಷ್ಟ್ರೀಯ ಗುಣಮಟ್ಟದ ಕ್ಲಬ್ ಹೌಸ್• ಮರೀನಾ-ಮನರಂಜನಾ ಬೋಟಿಂಗ್ ಚಟುವಟಿಕೆಗಳ ತಾಣ (ಬೋಟಿಂಗ್ ಮತ್ತು ಕಯಾಕಿಂಗ್)• ಇನ್ಫಿನಿಟಿ ಈಜುಕೊಳ• ಮಕ್ಕಳಿಗೆ ಪ್ರತ್ಯೇಕ ಈಜುಕೊಳ• ಬಡಾವಣೆಯೊಳಗೆ ಫ್ಯಾಮಿಲಿ ರೆಸ್ಟೋರೆಂಟ್• ಸೈಕ್ಲಿಂಗ್ ಟ್ರ್ಯಾಕ್• ವಾಕಿಂಗ್ ಟ್ರ್ಯಾಕ್• ಔಟ್ಡೋರ್ ಜಿಮ್• ಯೋಗ ಲಾನ್• ಮೆಡಿಟೇಷನ್ ಸೆಂಟರ್• ಸ್ಪಾ• ಲೈಫ್ ಸೈಜ್ ಚೆಸ್• ಮಕ್ಕಳಿಗೆ ಆಟದ ಮೈದಾನ• ಸ್ಕೇಟಿಂಗ್ ರಿಂಕ್• ಬ್ಯಾಡ್ಮಿಂಟನ್ ಕೋರ್ಟ್• ಬಿಲಿಯಡ್ರ್ಸ್• ಸಭಾಂಗಣ• ಲಾಡ್ಜಿಂಗ್• ಆ್ಯಂಪಿಥಿಯೇಟರ್• ಸುರಕ್ಷತೆ ದೃಷ್ಟಿಯಿಂದ ಬಡಾವಣೆಯಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ, ಬೃಹತ್ ಕಾಂಪೌಂಡ್ ಮತ್ತು ಸುರಕ್ಷತಾ ಗೇಟ್• 40 ಅಡಿ ಕಾಂಕ್ರೀಟ್ ಮುಖ್ಯ ರಸ್ತೆ• 30 ಅಡಿ ಕಾಂಕ್ರೀಟ್ ಒಳ ರಸ್ತೆ• ಆಕರ್ಷಕ ಸೋಲಾರ್ ಬೀದಿ ದೀಪ ಅಳವಡಿಕೆ• ಪ್ರಧಾನ ದ್ವಾರದಲ್ಲಿ ದಿನದ 24 ಗಂಟೆಯೂ ಸೆಕ್ಯೂರಿಟಿ ವ್ಯವಸ್ಥೆ• ಆಕರ್ಷಕ ಲ್ಯಾಂಡ್ ಸ್ಕೇಪಿಂಗ್• ವಾಸ್ತು ಪ್ರಕಾರ ಪ್ರತಿ ನಿವೇಶನಕ್ಕೂ ಸಂಪರ್ಕ• ಮಳೆ ನೀರು ಕೊಯ್ಲು, ನೀರು ಶುದ್ಧೀಕರಣ ಘಟಕ• ಭೂಗತ ಒಳಚರಂಡಿ ಪೈಪ್ಲೈನ್• ಹೂಡಿಕೆ ಮತ್ತು ಮನೆ ನಿರ್ಮಾಣ ಎರಡಕ್ಕೂ ಯೋಗ್ಯ• ಬ್ಯಾಂಕ್ ಸಾಲ ಸೌಲಭ್ಯ• ಸೂಪರ್ ಮಾರ್ಕೆಟ್• ಹಸಿರೀಕರಣಕ್ಕೆ ವಿಶೇಷ ಒತ್ತು• ಭವಿಷ್ಯದಲ್ಲೂ ಸಂಸ್ಥೆಯಿಂದಲೇ ಲೇ ಔಟ್ ನಿರ್ವಹಣೆ ರೋಹನ್ ಎಸ್ಟೇಟ್ ಮುಕ್ಕ ಕೇವಲ ಅತ್ಯುನ್ನತ ಬಡಾವಣೆ ಮಾತ್ರ ಅಲ್ಲ, ಅತ್ಯುತ್ತಮ ಹೂಡಿಕೆಯ ಅವಕಾಶ ಕೂಡಾ.ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಿ:ROHAN CORPORATIONRohan City, Main Road Bejai, Mangalore 575004Ph: 98456 07725, 98454 90100, 90363 92628, 98456 07724www.rohancorporation.in

ಪ್ರಾದೇಶಿಕ ವಾರ್ತೆಗಳು

ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು- ವಿಶ್ವ ಧ್ಯಾನ ದಿನ ಆಚರಣೆ

ಮೂಡುಬಿದಿರೆ: ಚೊಚ್ಚಲ ವಿಶ್ವ ಧ್ಯಾನ ದಿನದ ಪ್ರಯುಕ್ತ ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನವತಿಯಿಂದ ಧ್ಯಾನ ದಿನವನ್ನು ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ರಾಜ್ಯ ಬಿಜೆಪಿ ಕಾರ್ಯದರ್ಶಿ ಶರಣು ಬಿ ತಲ್ಲಿಕೇರಿ ಹಾಗೂ ಗೌರವ ಅತಿಥಿಯಾಗಿ ಖ್ಯಾತ ಯೋಗ ಮತ್ತು ಜಲಚಿಕಿತ್ಸಕ ಡಾ ಗುಲಾಬ್ ರೈ ತೆವಾನಿ ಮತ್ತು ರಿಸರ್ಚ್ ಆಫೀಸರ್ ಡಾ ನಿತೇಶ್ ಆಗಮಿಸಿದ್ದರು. ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ಪ್ರಾಂಶುಪಾಲೆ ಡಾ ವನಿತಾ ಎಸ್ ಶೆಟ್ಟಿ ಹಾಗೂ ಕಾಲೇಜಿನ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ೨೦೦ ಕ್ಕೂ ಅಧಿಕ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಆಳ್ವಾಸ್ ಆರೋಗ್ಯಧಾಮದ ಸಾಧಕರು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಭಟ್ಕರ್ ಸಾಕ್ಷಿ ಸಂಜು ನಿರೂಪಿಸಿದರು.

Scroll to Top