Author name: editor

ಪ್ರಾದೇಶಿಕ ವಾರ್ತೆಗಳು

38ನೇ ಅಂತರ್ ವಿವಿ ಆಗ್ನೇಯ ವಲಯದ ಸಾಂಸ್ಕೃತಿಕ ಯುವಜನೋತ್ಸವ: ರನ್ನರ್ ಅಪ್. ಗೆಲುವಿನಲ್ಲಿ ಆಳ್ವಾಸ್ ವಿದ್ಯಾರ್ಥಿಗಳ ಸಿಂಹಪಾಲು

ಮೂಡುಬಿದಿರೆ: ಬೆಂಗಳೂರಿನ ಕ್ರೆöÊಸ್ಟ್ ವಿವಿಯಲ್ಲಿ ನಡೆದ 38ನೇ ಅಂತರ್ ವಿವಿ ಆಗ್ನೇಯ ವಲಯದ ಸಾಂಸ್ಕೃತಿಕ ಯುವಜನೋತ್ಸವ – ‘ಕ್ರೆಸೆಂಡೋ’ದಲ್ಲಿ ಮಂಗಳೂರು ವಿವಿ ಪ್ರತಿನಿಧಿಸಿದ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು ಸಂಗೀತ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಗಳಿಸಿ, ಸಮಗ್ರ ವಿಭಾಗದಲ್ಲಿ ರನ್ನರ್ ಅಪ್ ಸ್ಥಾನ ಪಡೆದಿದ್ದಾರೆ. ಜಾನಪದ ವಾದ್ಯ ಮೇಳ ಪ್ರಥಮ, ಭಾರತೀಯ ಶಾಸ್ತಿçÃಯ ಸ್ವರ ವಾದ್ಯ(ಬಾನ್ಸೂರಿ)ದಲ್ಲಿ ಪ್ರಥಮ, ಸಮೂಹ ಗೀತೆಯಲ್ಲಿ ದ್ವಿತೀಯ, ಜಾನಪದ ನೃತ್ಯ (ಗುಂಪು) ದ್ವಿತೀಯ, ಶಾಸ್ತಿçÃಯ ಗಾಯನ ವೈಯಕ್ತಿಕದಲ್ಲಿ ದ್ವಿತೀಯ, ಶಾಸ್ತಿçÃಯ ನೃತ್ಯದಲ್ಲಿ ತೃತೀಯ, ಭಾರತೀಯ ಲಘು ಶಾಸ್ತಿçÃಯ ಸಂಗೀತದಲ್ಲಿ ತೃತೀಯ, ಪಾಶ್ಚಾತ್ಯ ವಾದ್ಯ ವೈಯಕ್ತಿಕ- ಐದನೇ ಸ್ಥಾನ, ಪಾಶ್ಚಾತ್ಯ ಗಾಯನ ವೈಯಕ್ತಿಕ ಐದನೇ ಸ್ಥಾನ, ಪಾಶ್ಚಾತ್ಯ ಗಾಯನ ಸಮೂಹ ಐದನೇ ಸ್ಥಾನ, ಏಕಾಂಕ ನಾಟಕದಲ್ಲಿ ಐದನೇ ಸ್ಥಾನ ಪಡೆದು ರನ್ರ‍್ಸ್ ಅಪ್ ಪಟ್ಟ ತನ್ನದಾಗಿಸಿಕೊಂಡಿತು.ರಾಷ್ಟç ಮಟ್ಟಕ್ಕೆ ಆಯ್ಕೆಯಾದ ಆಳ್ವಾಸ್ ವಿದ್ಯಾರ್ಥಿಗಳುಭಾರತೀಯ ಶಾಸ್ತಿçÃಯ ಸ್ವರ ವಾದ್ಯ(ಬಾನ್ಸೂರಿ)ದಲ್ಲಿ ಸ್ವಯಂ ಪ್ರಕಾಶ ಪ್ರಭು ಪ್ರಥಮ, ಶಾಸ್ತಿçÃಯ ಗಾಯನ ವೈಯಕ್ತಿಕದಲ್ಲಿ ಅಶ್ವಿಜ ಉಡುಪ ದ್ವಿತೀಯ, ಭಾರತೀಯ ಲಘು ಶಾಸ್ತಿçÃಯ ಸಂಗೀತದಲ್ಲಿ ವಿಭಾ ನಾಯಕ್ ತೃತೀಯ, ಶಾಸ್ತಿçÃಯ ನೃತ್ಯದಲ್ಲಿ ಶ್ರೇಯಾ ಜಿ. ತೃತೀಯ ಸ್ಥಾನ, ಭಾರತೀಯ ಸಮೂಹ ಗೀತೆ ಎರಡನೇ ಸ್ಥಾನ, ಜಾನಪದ ವಾದ್ಯ ಮೇಳ ಪ್ರಥಮ, ಜಾನಪದ ನೃತ್ಯ(ಗುಂಪು)ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳು ಮಾರ್ಚ 03 ರಿಂದ 07 ವರೆಗೆ ನೋಯ್ಡಾದ ಆ್ಯಮಿಟಿ ವಿವಿಯಲ್ಲಿ ನಡೆಯುವ ರಾಷ್ಟçಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಇವರು ಮಂಗಳೂರು ವಿವಿಯನ್ನು ಪ್ರತಿನಿಧಿಸಲಿದ್ದಾರೆ.ವಿಜೇತ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರಾದ ಡಾ ಎಂ ಮೋಹನ್ ಆಳ್ವ ಅಭಿನಂದಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ಆಳ್ವಾಸ್ ಆಯುರ್ವೇದ ಕಾಲೇಜಿನಲ್ಲಿ ಇಸಿಜಿ ಕುರಿತು ರಾಷ್ಟçಮಟ್ಟದ ಕಾರ್ಯಾಗಾರ

ವಿದ್ಯಾಗಿರಿ: ಪ್ರಾಚೀನ ಮತ್ತು ಆಧುನಿಕ ವೈದ್ಯಕೀಯ ಪದ್ಧತಿಗಳಲ್ಲಿ ಹೃದಯಕ್ಕೆ ಕೇಂದ್ರ ಸ್ಥಾನವನ್ನು ನೀಡಲಾಗಿದೆ ಎಂದು ಆಳ್ವಾಸ್ ಫಾರ್ಮಾಸಿ ಕಾಲೇಜಿನ ಪ್ರಾಂಶುಪಾಲ ಡಾ. ಎಮ್. ಮಂಜುನಾಥ್ ಸೆಟ್ಟಿ ಹೇಳಿದರು.ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜುವತಿಯಿಂದ ಶನಿವಾರ ನಡೆದ ‘ಜ್ಞಾನಚಕ್ಷು-2024′- ‘ಈಸಿಜಿಯ ಮೂಲಭೂತ ಅಂಶಗಳು ಹಾಗೂ ಅದರ ವ್ಯಾಖ್ಯಾನಗಳು’ ವಿಷಯದ ರಾಷ್ಟç ಮಟ್ಟದ ಕರ‍್ಯಗಾರದಲ್ಲಿ ಮಾತನಾಡಿದರು.ಆಯುರ್ವೇದದಲ್ಲಿ ಹೃದಯವನ್ನು ಪ್ರಜ್ಞೆ ಮತ್ತು ಜೀವಿಯ ಪ್ರಮುಖ ಅಂಗವೆAದು ಪರಿಗಣಿಸಲಾಗಿದೆ. ಆಯುರ್ವೇದ ತಜ್ಞರಿಗೆ ಹೃದಯದ ಬಗ್ಗೆ ಹೆಚ್ಚಿನ ಜ್ಞಾನಗಳಿಸಲು ಎಲೆಕ್ಟ್ರೋಕಾರ್ಡಿಯೋಗ್ರಫಿ ಅಥವಾ ಇಸಿಜಿ ಉಪಯುಕ್ತವಾಗಿದೆ. 1901ರಲ್ಲಿ ಡಚ್‌ನ ವಿಲ್ಲೆಮ್ ಐಂಥೋವನ್ ಇಸಿಜಿಯನ್ನು ಕಂಡು ಹಿಡಿದರು. ಅವರ ಈ ಆವಿಷ್ಕಾರಕ್ಕಾಗಿ 1924ರಲ್ಲಿ ನೊಬೆಲ್ ಪ್ರಶಸ್ತಿಯು ಲಭಿಸಿತು. ಈ ಕಾರ್ಯಾಗಾರವು ಇಸಿಜಿಯ ತಾಂತ್ರಿಕ ಅಂಶಗಳನ್ನು ತಿಳಿದುಕೊಳ್ಳುವುದರ ಜೊತೆಗೆ ಆಯುರ್ವೇದ ವೈದ್ಯರಿಗೆ ತಮ್ಮ ವೃತ್ತಿಯಲ್ಲಿ ನಾವೀನ್ಯತೆಯನ್ನು ಪಡೆಯಲು ಸಹಕಾರಿಯಾಗಿದೆ ಎಂದರು.ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ಡಾ ವಿನಯ್ ಆಳ್ವ ಮಾತನಾಡಿ, ನಮ್ಮ ದೃಷ್ಟಿಕೋನ ಬದಲಾಯಿಸಿಕೊಂಡರೆ ಎಲ್ಲವೂ ವಿಶೇಷವಾಗಿ ಕಾಣಿಸುತ್ತದೆ. ಎಲ್ಲಾ ವಿಷಯಗಳು ಒಂದಕ್ಕೊAದು ಸಂಪರ್ಕ ಹೊಂದಿರುತ್ತವೆ. ಈ ಚಿಂತನೆ ವೈದ್ಯಕೀಯ ಕ್ಷೇತ್ರದಲ್ಲಿ ಅತ್ಯಗತ್ಯ ಎಂದರು.ಆಳ್ವಾಸ್ ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ ಸಜಿತ್ ಎಂ, ಆಳ್ವಾಸ್ ಆಯುರ್ವೇದ ಕಾಲೇಜಿನ ಸ್ನಾತಕೋತ್ತರ ವಿಭಾಗದ ಡೀನ್ ಡಾ. ಪ್ರಶಾಂತ್ ಜೈನ್, ಪದವಿ ವಿಭಾಗದ ಡೀನ್ ಡಾ ಸ್ವಪ್ನ ಕುಮಾರಿ, ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ ಮಂಜುನಾಥ್ ಭಟ್ ಇದ್ದರು. ಕಾಯಾಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ ಸುಶೀಲ್ ಸ್ವಾಗತಿಸಿ, ಪ್ರೋ ರವಿಪ್ರಸಾದ್ ಹೆಗ್ಡೆ ವಂದಿಸಿ, ಪ್ರೋ. ಗೀತಾ ಮಾರ್ಕಂಡೆ ನಿರೂಪಿಸಿದರು. ಕರ‍್ಯಗಾರದಲ್ಲಿ ದೇಶದ ವಿವಿಧ ಭಾಗಗಳಿಂದ 180 ಪ್ರತಿನಿಧಿಗಳು ಭಾಗವಹಿಸಿದ್ದರು.

ಪ್ರಾದೇಶಿಕ ವಾರ್ತೆಗಳು

ಸೌಹಾರ್ದತೆಯೇ ದೇಶದ ಭವಿಷ್ಯ: ‘ಆಳ್ವಾಸ್ ಕ್ರಿಸ್ ಮಸ್’ ಆಚರಣೆಯಲ್ಲಿ ಡಾ.ಆಳ್ವ. ಉನ್ನತ ಭರವಸೆಯೇ ಕ್ರಿಸ್ ಮಸ್ ಸಂದೇಶ: ಬಿಷಪ್

ವಿದ್ಯಾಗಿರಿ (ಮೂಡುಬಿದಿರೆ): ಗೋದಲಿಯಲ್ಲಿ ಬಾಲ ಯೇಸು ಜನನದ ದರ್ಶನ, ಕ್ಯಾರೆಲ್ ಹಾಡಿದ ವಿದ್ಯಾರ್ಥಿಗಳ ಗುಂಪು, ನಡುವೆ ಬಂದ ಸಂತ ಕ್ಲಾಸ್, ವಿದ್ಯುದ್ದೀಪಾಲಂಕಾರದಿಂದ ಕಂಗೊಳಿಸಿದ ಕ್ರಿಸ್ ಮಸ್ ಮರ- ಸಭಾಂಗಣ, ಏಂಜೆಲ್ಸ್, ಜಿಂಗಲ್ ಬೆಲ್ ಸಂಗೀತ, ಪುಟಾಣಿಗಳ ಬಾಯಿ ಸಿಹಿ ಮಾಡಿದ ಕೇಕ್…ಕರುಣಾಮಯಿ ಬಾಲಯೇಸು ಜನನದ ಕ್ರಿಸ್ ಮಸ್ ಸಂಭ್ರಮ, ಭಕ್ತಿ -ಭಾವ , ಆರಾಧನೆಯ ಸಂಪ್ರೀತಿಯು ಆಳ್ವಾಸ್ ಕಾಲೇಜಿನ ನುಡಿಸಿರಿ ಸಭಾಂಗಣದಲ್ಲಿ ಗುರುವಾರ ಸಂಜೆ ಮೂಡಿತು. ಅದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಮ್ಮಿಕೊಂಡ ‘ಆಳ್ವಾಸ್ ಕ್ರಿಸ್ ಮಸ್’ ಸಂಭ್ರಮಾಚರಣೆ.ಸಂದೇಶ ನೀಡಿದ ಮಂಗಳೂರು ಕ್ರೈಸ್ತ ಧರ್ಮ ಪ್ರಾಂತ್ಯಾಧ್ಯಕ್ಷ (ಬಿಷಪ್) ಡಾ.ಪೀಟರ್ ಪಾವ್ಲ್ ಸಲ್ಡಾನಾ, ‘ಭರವಸೆ ನಿರಾಶೆ ಮೂಡಿಸುವುದಿಲ್ಲ. ಬದುಕು ಪ್ರೀತಿಯ ಪಥ. ಜೀವನದಲ್ಲಿ ಉನ್ನತ ಭರವಸೆಯೇ ಕ್ರಿಸ್ ಮಸ್ ಸಂದೇಶ’ ಎಂದರು.‘ಹ್ಯಾಪಿ ಕ್ರಿಸ್ ಮಸ್’ ಎಂದು ಶುಭಕೋರಿ ಮಾತು ಆರಂಭಿಸಿದ ಅವರು, ‘ಇಲ್ಲಿಗೆ ಕ್ರಿಸ್ ಮಸ್ ಬಂದಿದೆ. ಸತ್ಯ ಮತ್ತು ಬದುಕು ನಮ್ಮದಾಗಲಿ. ನಮ್ಮೆಲ್ಲ ಒಳಿತಿಗಾಗಿ ದೈವಿಕ ಮನುಷ್ಯನಾದರು. ಅವರ ಅನುಸರಣೆಯಿಂದ ಮನುಷ್ಯ ದೈವಿಕ ಆಗಬಹುದು’ ಎಂದರು.‘ತಪ್ಪುನ್ನು ಅಂತ್ಯಗೊಳಿಸಲು ಯೇಸು ಶಿಲುಬೆ ಏರಿದರು. ಮತ್ತೆ ಪುನರುತ್ಥಾನಗೊಂಡರು. ಆದರೆ, ಅವರು ಅಮರ. ಕ್ಷಮೆ, ಪ್ರೀತಿ, ಕರುಣೆಯು ಯೇಸು ಸಂದೇಶ’ ಎಂದು ಉಲ್ಲೇಖಿಸಿದರು.ಒಬ್ಬರಲ್ಲಿ ಬದುಕಿನ ಭರವಸೆ ಮೂಡಿಸಿದರೂ ನಿಮ್ಮ ಬದುಕು ಸಾರ್ಥಕ. ಯೇಸು ಅವರ ಸಂದೇಶದಂತೆ ಸರ್ವರ ಜೊತೆಗಿರು, ಜೀವಿಸು, ಸಾವಿನಲ್ಲೂ ಜೊತೆಯಾಗಿರು ಎಂದರು.ಬಡವರು, ಶೋಷಿತರು, ಸಮಸ್ಯೆಗೆ ಈಡಾದವರ ಜೊತೆ ಯೇಸು ಇದ್ದಾರೆ. ಅದೇ ಭರವಸೆ ಎಂದರು.ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಮಾತನಾಡಿ, ‘ಭಾರತವು ಒಂದು ಜಾತಿ ಅಥವಾ ಧರ್ಮದ ದೇಶ ಆಗಲು ಸಾಧ್ಯ ಇಲ್ಲ. ಸಾಮರಸ್ಯ, ಸೌಹಾರ್ದತೆಯೇ ದೇಶದ ಭವಿಷ್ಯ’ ಎಂದರು.ಭಾರತೀಯರು ಭಾಗ್ಯವಂತರು. 144 ಕೋಟಿ ಜನಸಂಖ್ಯೆಯ ದೇಶ. ಹಲವು ಭಾಷೆ, ಜಾತಿ, ಧರ್ಮ ಇದ್ದರೂ ಎಲ್ಲರೂ ಒಂದಾಗಿ ಬಾಳುವ ದೇಶ. ದೇಶದ ಸಹಿಷ್ಣುತೆಗೆ ಕ್ರೈಸ್ತರು ನೀಡಿದ ಕೊಡುಗೆ ಅಪಾರ ಎಂದರು. ಶಿಕ್ಷಣ, ಆರೋಗ್ಯ, ಬಡತನ ನಿರ್ಮೂಲನೆಗೆ ಮೇಲ್ಪಂಕ್ತಿಯ ಕೊಡುಗೆ ನೀಡಿದ ಕ್ರೈಸ್ತರು, ಅಂತರಗಳನ್ನು ದೂರ ಮಾಡಿದರು ಎಂದು ಅವರು ವಿವರಿಸಿದರು.ದಯೆ, ಕರುಣೆ, ತ್ಯಾಗ, ದ್ವೇಷಿಸುವವನ್ನೂ ಪ್ರೀತಿಸು, ಯಾರಿಗೂ ನೋವು ಮಾಡಬೇಡ ಎಂಬಿತ್ಯಾದಿ ಮೌಲ್ಯಗಳನ್ನು ನೀಡಿದ ಕ್ರೈಸ್ತ ಧರ್ಮವು ಸುಧಾರಣೆಗೆ ಕೊಡುಗೆ ನೀಡಿತು ಎಂದು ಕೃತಜ್ಞತೆ ವ್ಯಕ್ತಪಡಿಸಿದರು.‘ಎಲ್ಲರ ಒಳಿತು, ಶಾಂತಿ, ಪ್ರೀತಿ, ಅಹಿಂಸಾ ಬದುಕಿನ ಪ್ರೇರಣೆಯೇ ಕ್ರಿಸ್ ಮಸ್’ ಎಂದ ಅವರು, ‘ಸರ್ವ ಧರ್ಮ ಗೌರವಿಸುವ ಮನೋಭಾವವನ್ನು ಆಳ್ವಾಸ್ ಕುಟುಂಬ ಹೊಂದಿದೆ. ನಮ್ಮದು ಮಾನವ ಧರ್ಮ. ಇಲ್ಲಿ ಜ್ಞಾನದ ಬೆಳಕು ಇದೆ. ಎಲ್ಲ ಮೌಲ್ಯಗಳ ಜೊತೆ ಜೀವದಯೆ, ಕಾರುಣ್ಯವೂ ನಮ್ಮ ಜೀವ ದ್ರವ್ಯವಾಗಿದೆ ಎಂದರು.ಸದ್ಭಾವನೆ ನಮ್ಮ ಸಂದೇಶ. ನಾವು ಮಹಾವೀರ ಜಯಂತಿ, ಕ್ರಿಸ್ ಮಸ್, ರಮ್ಜಾನ್, ದೀಪಾವಳಿ ಸೇರಿದಂತೆ ಹಬ್ಬಗಳನ್ನು ಆಚರಿಸುತ್ತೇವೆ. ನಿಮ್ಮ ಪ್ರೀತಿಗೆ ನಾವು ಚಿರ ಋಣಿ, ಕೂಡಿ ಬದುಕುವ ಎಂದರು.ಇದಕ್ಕೂ ಮೊದಲು ಪ್ರಾರ್ಥನೆ ನೆರವೇರಿಸಿದ ಮೂಡುಬಿದಿರೆ ಕೊರ್ಪುಸ್ ಕ್ರೈಸ್ತ ಚರ್ಚ್ ಧರ್ಮಗುರು ಒನಿಲ್ ಡಿಸೋಜ, ‘ವಿನಿಮಯದ ಉತ್ಸವವೇ ಕ್ರಿಸ್ ಮಸ್. ಯೇಸುಸ್ವಾಮಿ ಜಗತ್ತಿಗೆ ನೀಡಿದ ಮಾನವೀಯತೆಯೇ ಅವರ ಸಂದೇಶ. ಹಾಗಾಗಿ ಅವರ ಕೊಡುಗೆಯನ್ನು ಶಿಕ್ಷಣ, ಸಶಕ್ತೀಕರಣ, ಚಿಕಿತ್ಸೆ ಇತ್ಯಾದಿ ಸೇವೆಯಲ್ಲಿ ಕಾಣುತ್ತೇವೆ’ ಎಂದು ಹೇಳಿದರು.ಚೀನಾದ ಜೀ ಜಿಯಾಂಗ್ ಪ್ರಾಂತ್ಯದ ಟಿಯು ಕ್ರಿಸ್ ಮಸ್ ಆಚರಣೆಯ ರಾಜಧಾನಿ ಎಂದು ಕರೆಸಿಕೊಂಡಿದೆ ಎಂದರು.ಬೆಳ್ತಂಗಡಿ ಸಿಯೋನ್ ಆಶ್ರಮ ಟ್ರಸ್ಟ್ ನ ಡಾ. ಯು.ಸಿ.ಪೌಲೋಸ್ ಹಾಗೂ ಅವರ ಧರ್ಮ ಪತ್ನಿ ಮೇರಿ ಪೌಲೋಸ್ ಅವರನ್ನು 25 ಸಾವಿರ ರೂಪಾಯಿ, ಹಾರ, ಶಾಲು, ಫಲಕ, ಪ್ರಮಾಣ ಪತ್ರ ಪ್ರದಾನ ಮಾಡಿ ಸನ್ಮಾನಿಸಲಾಯಿತು.ಬಳಿಕ ಮಾತನಾಡಿದ ಡಾ. ಯು.ಸಿ.ಪೌಲೋಸ್, ಸಮಾಜದ ಅತಿ ಸಣ್ಣವರಿಗೆ ನೀಡುವ ಸ್ಪಂದನವೇ ದೇವರ ಕಾರ್ಯ. ಮೋಹನ ಆಳ್ವ ಅವರು ಅಂತಹ ಕಾರ್ಯ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.ಆಳ್ವರ ಸಾಮಾಜಿಕ ಕಾರ್ಯಗಳು ಕ್ರಿಸ್ ಮಸ್ ಸಂಭ್ರಮದಷ್ಟೇ ಪವಿತ್ರ. ನಾವೆಲ್ಲ ನಿಮ್ಮಿಂದ ಕಲಿಯಲು ಸಾಕಷ್ಟಿದೆ ಎಂದರು.ವಿದ್ಯಾಗಿರಿಯು ಸಾಧನೆಯಲ್ಲಿ ‘ವಿದ್ಯಾ ಹಿಮಾಲಯ’ ಆಗಲಿ ಎಂದು ಆಶಿಸಿದರು.500ಕ್ಕೂ ಹೆಚ್ಚಿನ ವಿದ್ಯಾರ್ಥಿಗಳ ಸಮೂಹ ತುಳು, ಕನ್ನಡ, ಕೊಂಕಣಿ, ಮಲೆಯಾಳ, ಹಿಂದೆ ಸೇರಿದಂತೆ ಹಲವು ಭಾಷೆಗಳಲ್ಲಿ ಕ್ಯಾರೆಲ್ ಹಾಡಿದರೆ, ಏಂಜೆಲ್ಸ್, ಸಂತ ಕ್ಲಾಸ್, ಬಿಳಿ- ಕೆಂಪು ಧಿರಿಸು ತೊಟ್ಟ ನೂರಾರು ವಿದ್ಯಾರ್ಥಿಗಳು ಸಂಭ್ರಮ ಹೆಚ್ಚಿಸಿದರು. ಕಲಾಂಗಣ್ ಮಾಂಡ್ ಸೋಭಾಣೆ ತಂಡದ ಸದಸ್ಯರು ಗಾಯನ ನಡೆಸಿಕೊಟ್ಟರು.ಮಾಜಿ ಸಚಿವ ಅಭಯ ಚಂದ್ರ ಜೈನ್ ಇದ್ದರು. ಆಳ್ವಾಸ್ ಹೋಮಿಯೋಪಥಿ ಕಾಲೇಜಿನ ಪ್ರಾಂಶುಪಾಲ ರೋಶನ್ ಪಿಂಟೊ ಸ್ವಾಗತಿಸಿದರು. ಉಪನ್ಯಾಸಕ ರಾಜೇಶ್ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ಡಿ.31 ರಿಂದ ಜ.03 ಆಳ್ವಾಸ್ ನಲ್ಲಿ ನೀನಾಸಂ ನಾಟಕೋತ್ಸವ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) ಮೂಡುಬಿದಿರೆ, ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಡಿಸೆಂಬರ್ 31 ಜನವರಿ 03 ರವರೆಗೆ ಪ್ರತಿದಿನ ಸಂಜೆ 6.45 ಕ್ಕೆ ಮೂಡುಬಿದ್ರೆ ವಿದ್ಯಾಗಿರಿಯ ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ನೀನಾಸಂ ತಿರುಗಾಟ ತಂಡದ ನಾಟಕೋತ್ಸವವನ್ನು ಏರ್ಪಡಿಸಲಾಗಿದೆ.ಡಿ.31 ಮತ್ತು ಜ.01 ರಂದು ಮೂಲ ಭವಭೂತಿಯ, ಅಕ್ಷರ ಕೆ.ವಿ.ಇವರು ನಿರ್ದೇಶಿಸಿದ ಮಾಲತಿ ಮಾಧವ ಹಾಗೂ ಜ.02 ಮತ್ತು 03 ರಂದು ಜಯಂತ್ ಕಾಯ್ಕಿಣಿ ಕನ್ನಡಕ್ಕೆ ಅನುವಾದಿಸಿದ, ಮೂಲ ಅಭಿರಾಮ್ ಭಡ್ಕಮ್ಕರ್ ರಚಿಸಿದ, ವಿದ್ಯಾನಿಧಿ ವನಾರಸ್ ನಿರ್ದೇಶಿಸಿದ ಅಂಕದ ಪರದೆ ನಾಟಕಗಳ ಪ್ರದರ್ಶನ ನಡೆಯಲಿದೆ. ಈ ವರ್ಷದ ಅತ್ಯುತ್ತಮ ನಾಟಕ ಎಂಬ ಹೆಗ್ಗಳಿಕೆಗೆ ಪಾತ್ರವಾದ ನೀನಾಸಂ ತಿರುಗಾಟದ ನಾಟಕಗಳ್ನು ಹೆಚ್ಚು ಜನರು ನೋಡಬೇಕೆಂಬ ಕಾರಣಕ್ಕೆ ಎರಡೆರಡು ಪ್ರದರ್ಶನವನ್ನು ಏರ್ಪಡಿಸಲಾಗಿದೆ.ಯಾವುದೇ ಸಭಾ ಕಾರ್ಯಕ್ರಮ ಇಲ್ಲದೆ ಪ್ರತಿದಿನ ನಾಟಕವು ಸಮಯಕ್ಕೆ ಸರಿಯಾಗಿ ಆರಂಭವಾಗಲಿದ್ದು ಪ್ರವೇಶ ಉಚಿತವಾಗಿರುತ್ತದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಡಾ.ಎಂ.ಮೋಹನ ಆಳ್ವರು ತಿಳಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಪುಂಜಾಲಕಟ್ಟೆ ಘಟಕ: 7ನೇ ವಾರ್ಷಿಕೋತ್ಸವ, ಸಮ್ಮಾನ, ಯಕ್ಷಗಾನ

ಬಂಟ್ವಾಳ:ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಪುಂಜಾಲಕಟ್ಟೆ ಘಟಕದ 7ನೇ ವಾರ್ಷಿಕೋತ್ಸವ ಕಾರ್ಯಕ್ರಮ ರವಿವಾರ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ನಡೆಯಿತು.ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ಸ್ಥಾಪಕಾಧ್ಯಕ್ಷ, ಖ್ಯಾತ ಭಾಗವತರಾದ ಪಟ್ಲಗುತ್ತು ಸತೀಶ್ ಶೆಟ್ಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಗೀತ,ಭರತನಾಟ್ಯ, ಯಕ್ಷಗಾನದಂತಹ ಕಲೆಯಲ್ಲಿ ಮಕ್ಕಳನ್ನು ಜೋಡಿಸಿದರೆ ಅವರು ಸುಸಂಸ್ಕೃತರಾಗುತ್ತಾರೆ. ಯಕ್ಷಗಾನದಿಂದ ದೈಹಿಕ ವ್ಯಾಯಾಮ, ಆತ್ಮಸ್ಥೈರ್ಯ, ಸಂಸ್ಕಾರ ಪಡೆಯುತ್ತಾರೆ. ಯಕ್ಷಧ್ರುವ ಪಟ್ಲ ಫೌಂಡೇಶನ್‌ನ ಯಕ್ಷ ಶಿಕ್ಷಣ ಯೋಜನೆಯಲ್ಲಿ ರಾಜ್ಯಾದ್ಯಂತ ಈ ವರ್ಷ 9 ಸಾವಿರ ವಿದ್ಯಾರ್ಥಿಗಳು ಯಕ್ಷಗಾನ ನಾಟ್ಯ ತರಬೇತಿ ಪಡೆಯುತ್ತಿದ್ದಾರೆ ಎಂದು ಹೇಳಿದರು.ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಭರತ್ ಶೆಟ್ಟಿ ಅವರ ಸಹಕಾರದಲ್ಲಿ ಡಿ.31ರಂದು ಒಡ್ಡೂರು ಫಾರ್ಮ್‌ನಲ್ಲಿ ಸರಕಾರಿ ಶಾಲಾ ಮಕ್ಕಳ ರಂಗ ಪ್ರವೇಶ ಕಾರ್ಯಕ್ರಮ ನಡೆಯಲಿದೆ ಎಂದು ಅವರು ಹೇಳಿದರು.ಬಿಜೆಪಿ ಜಿಲ್ಲಾ ಪ್ರಮುಖ್ ಸಂದೇಶ್ ಶೆಟ್ಟಿ, ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಸ್ಥಾಪಕಾಧ್ಯಕ್ಷ ಎಂ.ತುಂಗಪ್ಪ ಬಂಗೇರ, ಜಿ.ಪಂ.ಮಾಜಿ ಸದಸ್ಯ ಬಿ.ಪದ್ಮಶೇಖರ ಜೈನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಮಾಜಿ ನಿರ್ದೇಶಕ ಬಿ.ರಾಜಶೇಖರ ಶೆಟ್ಟಿ, ಮಂಗಳೂರು ಹಾಪ್ ಕಾಮ್ಸ್ ವ್ಯವಸ್ಥಾಪಕ ರವಿಚಂದ್ರ ಶೆಟ್ಟಿ, ಮಡಂತ್ಯಾರು ಚಾರ್ಟರ್ಡ್ ಆಕೌಂಟೆಂಟ್ ಹರ್ಷನಾರಾಯಣ ಶೆಟ್ಟಿ,ಪುಂಜಾಲಕಟ್ಟೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಪ್ರಕಾಶ್ ಪೂಜಾರಿ ಅನಿಲಡೆ, ಘಟಕ ಗೌರವ ಸಲಹೆಗಾರ ಜಯಂತ್ ಶೆಟ್ಟಿ ಭಂಡಾರಿಗುಡ್ಡೆ,ಗೌರವಾಧ್ಯಕ್ಷ ಪುರುಷೋತ್ತಮ ಪೂಜಾರಿ ಬುಳೆಕ್ಕಿನಕೋಡಿ, ಮಹಿಳಾ ಘಟಕದ ಗೌರವಾಧ್ಯಕ್ಷೆ ಲಕ್ಷ್ಮೀ ಸಂಜೀವ ಶೆಟ್ಟಿ, ಅಧ್ಯಕ್ಷೆ ಉಮಾ ಡಿ. ಗೌಡ ವೇದಿಕೆಯಲ್ಲಿದ್ದರು.ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗವಹಿಸಿ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಹಿರಿಯ ಯಕ್ಷಗಾನ ಕಲಾವಿದರಾದ ಜಿನೇಂದ್ರ ಜೈನ್ ಬಳ್ಳಮಂಜ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪುಂಜಾಲಕಟ್ಟೆ ಶ್ರೀ ಮುರುಘೇಂದ್ರ ಯಕ್ಷಗಾನ ತಾಳಮದ್ದಳೆ ಸಂಘ, ಪಾರೆಂಕಿ ಶ್ರೀ ಮಹಿಷಮರ್ಧಿನಿ ಯಕ್ಷಗಾನ ಸಂಘ ಅವರಿಗೆ ಗೌರವಾರ್ಪಣೆ ನಡೆಯಿತು. ಘಟಕ ಮತ್ತು ಮಹಿಳಾ ಘಟಕದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.ಘಟಕ ಅಧ್ಯಕ್ಷ ಯಶೋಧರ ಶೆಟ್ಟಿ ದಂಡೆ ಅವರು ಸ್ವಾಗತಿಸಿದರು. ಉಪಾಧ್ಯಕ್ಷ ಅಶೋಕ್ ಗುಂಡ್ಯಲ್ಕೆ ವಂದಿಸಿದರು.ಉದಯ ಕುಮಾರ್ ಶೆಟ್ಟಿ ಅಭಿನಂದನಾ ಪತ್ರ ವಾಚಿಸಿದರು. ರತ್ನದೇವ್ ಪುಂಜಾಲಕಟ್ಟೆ ಕಾರ್ಯಕ್ರಮ ನಿರೂಪಿಸಿದರು.ಬಳಿಕ ಪಾವಂಜೆ ಮೇಳದವರಿಂದ ಯಕ್ಷಗಾನ ಪ್ರದರ್ಶನ ನಡೆಯಿತು.ಮಧ್ಯಾಹ್ನ ಕಾರ್ಯಕ್ರಮವನ್ನು ಬಸವನಗುಡಿ ಶ್ರೀ ಬಸವೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಪ್ರಶಾಂತ್ ಪುಂಜಾಲಕಟ್ಟೆ ಅವರು ಉದ್ಘಾಟಿಸಿದರು. ಘಟಕದ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನ ನಡೆಯಿತು.

ಪ್ರಾದೇಶಿಕ ವಾರ್ತೆಗಳು

“ಈ ವರ್ಷ 3,000 ಕುಟುಂಬಗಳಿಗೆ 6 ಕೋಟಿ ರೂ. ಮಿಕ್ಕಿ ನೆರವು ವಿತರಣೆ”-ಡಾ.ಕೆ. ಪ್ರಕಾಶ್ ಶೆಟ್ಟಿ. ಡಿ.25: ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಪ್ರದಾನ ಸಮಾರಂಭ “ನೆರವು”

ಮಂಗಳೂರು: ಪ್ರತೀ ವರ್ಷ ಆಯೋಜಿಸಿಕೊಂಡು ಬಂದಿರುವ ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆಯ “ನೆರವು” ಸಹಾಯಹಸ್ತ ಪ್ರದಾನ ಕಾರ್ಯಕ್ರಮ ಡಿ. 25ರಂದು ಮಧ್ಯಾಹ್ನ ಗಂಟೆ 3.30ಕ್ಕೆ ಮಂಗಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಬೆಂಗಳೂರಿನ ಅದಮ್ಯ ಚೇತನ ಫೌಂಡೇಶನ್ನಿನ ಅಧ್ಯಕ್ಷರು ಹಾಗು ಸಹ- ಸಂಸ್ಥಾಪಕರೂ ಆಗಿರುವ ಡಾ. ತೇಜಸ್ವಿನಿ ಅನಂತಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ಎಂ. ಮೋಹನ ಆಳ್ವ, ಕಾಪು ವಿಧನಾಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಎಂ.ಆರ್.ಜಿ.ಗ್ರೂಪ್ ನ ಆಡಳಿತ ನಿರ್ದೇಶಕರಾದ ಗೌರವ್ ಪಿ. ಶೆಟ್ಟಿ ಮತ್ತು ಉಪಸ್ಥಿತರಿರಲಿದ್ದಾರೆ“ ಎಂದು ಎಂ.ಆರ್.ಜಿ.ಗ್ರೂಪ್ ಚೇರ್ಮನ್ ಡಾ. ಕೆ.ಪ್ರಕಾಶ್ ಶೆಟ್ಟಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.“ಈ ವರ್ಷ ಒಟ್ಟು 3,000 ಕುಟುಂಬಗಳಿಗೆ 6 ಕೋಟಿ ರೂಪಾಯಿಗೂ ಮಿಕ್ಕಿ ನೆರವನ್ನು ವಿತರಿಸಲಾಗುತ್ತಿದೆ. ಇದರಿಂದ ಸುಮಾರು ಹದಿನೈದು ಸಾವಿರ ಮಂದಿಗೆ ಪ್ರಯೋಜನವಾಗಲಿದೆ. ಫಲಾನುಭವಿಗಳ ಆಯ್ಕೆಯಲ್ಲಿ ಒಂದು ನಿಗದಿತ ಮಾನದಂಡವನ್ನು ಅನುಸರಿಸಲಾಗಿದೆ. ಅರ್ಜಿಗಳನ್ನು ಪರಿಶೀಲಿಸಿ, ಅವಶ್ಯ ಹಿಮ್ಮಾಹಿತಿಗಳನ್ನು ಪಡೆದು ಫಲಾನುಭವಿಗಳ ಆಯ್ಕೆ ಮಾಡಲಾಗಿದೆ. ಸಮಾಜದಲ್ಲಿ ಪರಿವರ್ತನೆ ತರಬಲ್ಲಂತಹ, ಸಾಮೂಹಿಕ ಹಿತದ ಕಾರ್ಯಕ್ರಮಗಳನ್ನು ಕೈಗೊಂಡ ಸಂಘ ಸಂಸ್ಥೆಗಳನ್ನು ಗುರುತಿಸಿ ಆಯ್ಕೆ ಮಾಡಲಾಗಿದೆ. ಪ್ರತೀ ವರ್ಷದ ಶಿಷ್ಟಾಚಾರದಂತೆ ಫಲಾನುಭವಿಗಳನ್ನು ಕರೆತರಲು ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಇದಕ್ಕಾಗಿ ಸ್ವಯಂಸೇವಕರ ತಂಡಗಳಿವೆ. ನೆರವು ವಿತರಣೆ ನಡೆಯುವ ಸ್ಥಳದಲಿ 25 ಕೌಂಟರ್ ಗಳನ್ನು ತೆರೆಯಲಾಗುತ್ತದೆ. ಈಗಾಗಲೇ ವಿತರಣೆ ಮಾಡಿರುವ ಟೋಕನ್ ಗಳನ್ನು ತೋರಿಸಿ ಕೌಂಟರ್ ಗಳಲ್ಲಿ ನೆರವಿನ ಚೆಕ್ ಪಡೆಯಬಹುದು. ಎಲ್ಲಿಯೂ ಅವ್ಯವಸ್ಥೆಗಳಿಗೆ ಆಸ್ಪದ ಇಲ್ಲದಂತೆ ನೋಡಿಕೊಳ್ಳಲಾಗುತ್ತದೆ. ಮಾನಸಿಕ ವಿಕಲತೆ, ಹುಟ್ಟಿನಿಂದ ಬರುವ ದೀರ್ಘಕಾಲೀನ ಚಿಕಿತ್ಸೆ ಅವಶ್ಯವಿರುವ ಖಾಯಿಲೆ ಪೀಡಿತರಿಗೆ, ಅಂಗವೈಕಲ್ಯ, ಕ್ಯಾನ್ಸರ್ ಮುಂತಾದ ಖಾಯಿಲೆಗಳಿಂದ ಬಾಧಿತರಾಗಿರುವವರಿಗೆ ಚಿಕಿತ್ಸೆಗಾಗಿ ಆದ್ಯತೆಯ ಮೇಲೆ ನೆರವು ನೀಡುವುದನ್ನು ಪರಿಗಣಿಸಲಾಗಿದೆ. ಶಿಕ್ಷಣ ಮುಂದುವರಿಸಲು ಕಷ್ಟ ಪಡುತ್ತಿರುವವರಿಗೆ, ಕ್ರೀಡಾ ಕ್ಷೇತ್ರದ ಸಾಧಕರಿಗೆ, ಉತ್ತಮ ಶೈಕ್ಷಣಿಕ ಸಾಧನೆ ಮಾಡಿದವರಿಗೆ ಉತ್ತೇಜನ ನೀಡುವುದಕ್ಕಾಗಿ ಅವರನ್ನು “ನೆರವು” ನೀಡಲು ಆಯ್ಕೆ ಮಾಡಲಾಗಿದೆ“ ಎಂದರು.ಹಿಂದಿನ ವರ್ಷಗಳಲ್ಲಿ ಸಂಘ ಸಂಸ್ಥೆಗಳಿಗೆ ನೀಡಲಾದ ನೆರವು ಆಯಾ ಪರಿಸರದಲ್ಲಿ ಧನಾತ್ಮಕ ಪರಿಣಾಮ ಬೀರಿದೆ. ಸಾರ್ವಜನಿಕ ಆಸ್ತಿಗಳ ನಿರ್ಮಾಣ ಆಗಿದೆ. ಅವಕಾಶವಂಚಿತರು ’ನೆರವು’ ಪಡೆದುಕೊಂಡು ಸ್ವಾವಲಂಬಿಯಾದ ಉದಾಹರಣೆಗಳಿವೆ. ಸಾಮಾಜಿಕ ಜವಾಬ್ದಾರಿಯ ನೆಲೆಯಲ್ಲಿ ನಾವು ಕೈಗೊಂಡ ಈ ಸೇವಾ ರೂಪದ ಕಾರ್ಯಕ್ರಮ ಸಾರ್ವಜನಿಕ ಮನ್ನಣೆ ಪಡೆದಿರುವುದು ಆಯೋಜಕರಾದ ನಮಗೆ ಸಾರ್ಥಕ್ಯ ಭಾವನೆಯನ್ನು ಮೂಡಿಸಿದೆ. ಅನುಭೂತಿ ಮತ್ತು ಬದ್ಧತೆಯಿಂದ ಕೈಗೊಂಡ “ನೆರವು” ಕಾರ್ಯಕ್ರಮ ಅನುಷ್ಠಾನದಲ್ಲಿ ನಮ್ಮ ತಂಡ ಅತ್ಯಂತ ಜವಾಬ್ದಾರಿಯಿಂದ ಕೆಲಸ ಮಾಡಿದೆ. ಶಿಕ್ಷಣ ಉಪಕ್ರಮದಡಿ ನೆರವು ಪಡೆದವರಲ್ಲಿ ಕೆಲವರು ಈಗ ಉದ್ಯೋಗಸ್ಥರಾಗಿ, ತಾವು ಇತರರಿಗೆ ಸಹಾಯ ಮಾಡುವ ಸ್ಥಿತಿಗೆ ತಲುಪಿರುವುದು ಈ ಯೋಜನೆ ತಂದ ಮಾನವೀಯ ಬದಲಾವಣೆಯಾಗಿದೆ“ ಎಂದು ಹೇಳಿದರು. ಮೊದಲ ವರ್ಷ ವಿತರಣೆ ಮಾಡಲಾದ ಮೊತ್ತ 1.25 ಕೋಟಿ ರೂಪಾಯಿ. ವರ್ಷದಿಂದ ಈ ಮೊತ್ತ ಏರುತ್ತಾ ಹೋಗಿದೆ.ವರ್ಷದಿಂದ ವರ್ಷ ಅರ್ಜಿಗಳ ಸಂಖ್ಯೆ ಹೆಚ್ಚುತ್ತಿದೆ, ಸಹಜವಾಗಿ ಮೊತ್ತವೂ ಹೆಚ್ಚಾಗಿದೆ. ಈ ಯೋಜನೆಯ ವ್ಯಾಪ್ತಿ ದಕ್ಷಿಣ ಕನ್ನಡ, ಉಡುಪಿ ಮತ್ತು ಗಡಿನಾಡು ಕಾಸರಗೋಡು ಜಿಲ್ಲೆಗಳು. (ಕೆಲವು ವಿಶೇಷ ಪ್ರಕರಣಗಳಲ್ಲಿ ಮಾನವೀಯತೆಯ ಹಿನ್ನೆಲೆಯಲ್ಲಿ ಈ ಗಡಿಯನ್ನು ದಾಟಿಯೂ ನೆರವು ನೀಡಲಾಗಿದೆ)ಪ್ರತೀ ವ್ಯಕ್ತಿಗೆ ಅವರವರ ಅವಶ್ಯಕತೆಯನ್ನು ಪರಿಗಣಿಸಿ ಕನಿಷ್ಠ 10,000 ರೂ.ಗಳಿಂದ ಗರಿಷ್ಠ 1,00,000 ರೂ.ಗಳವರೆಗೆ ನೀಡಲಾಗಿದೆ, ಆರೋಗ್ಯ ರಕ್ಷಣೆ, ಚಿಕಿತ್ಸೆಗೆ ಮೊದಲಾದ್ಯತೆ ನೀಡಲಾಗಿದೆ.ಸಂಘ ಸಂಸ್ಥೆಗಳಾದರೆ ಕನಿಷ್ಠ 1,00,000 ರೂ.ಗಳಿಂದ ಗರಿಷ್ಠ 10,00,000 ರೂ.ಗಳವರೆಗೆ ನೆರವು ನೀಡಲಾಗಿದೆ.ವೈದ್ಯಕೀಯ ಪ್ರಕರಣಗಳಲ್ಲಿ ಅವಶ್ಯ ದಾಖಲೆಗಳನ್ನು ಪಡೆದು, ಪರಿಶೀಲಿಸಿ, ಹಿಮ್ಮಾಹಿತಿ ಪಡೆದು ನೆರವು ನೀಡಲಾಗಿದೆ.ಬಹುತೇಕ ಅರ್ಜಿಗಳು ವೈದ್ಯಕೀಯ ನೆರವನ್ನು ಕೋರಿದವುಗಳಾಗಿವೆ.ಸಂಘ ಸಂಸ್ಥೆಗಳ ಸಂದರ್ಭದಲ್ಲಿ ಅವುಗಳ ಚಟುವಟಿಕೆ ಸ್ವಚ್ಚತೆ ಕಾಪಾಡುವಿಕೆ, ಮಹಿಳಾ ಸಶಕ್ತೀಕರಣ, ಯುವಜನರ ಸಬಲೀಕರಣ, ಕೌಶಲ್ಯೀಕರಣ ಸಹಿತ ಸಾಮಾಜಿಕ ಪರಿವರ್ತನೆಗೆ ಅವುಗಳ ಕೊಡುಗೆಯನ್ನು ಗಮನಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.ನಿತೇಶ್ ಶೆಟ್ಟಿ ಎಕ್ಕಾರ್ ಕಾರ್ಯಕ್ರಮ ನಿರೂಪಿಸಿದರು.ಚಿತ್ರಗಳು: ಸತೀಶ್ ಕಾಪಿಕಾಡ್

ಕರ್ನಾಟಕ ವಾರ್ತೆಗಳು

ಪ್ರತಿ ಕ್ಷೇತ್ರದಲ್ಲೂ ಕರಾವಳಿಗರ ಸಾಧನೆ: ಧರಣಿದೇವಿ. ದಕ್ಷಿಣ ಕನ್ನಡಿಗರ ಸಂಘದಿಂದ ವಿವಿಧ ಕ್ಷೇತ್ರಗಳ ಸಾಧಕರಿಗೆ ‘ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ

ಬೆಂಗಳೂರು: ಕರಾವಳಿಗರಿಗೆ ತಮ್ಮ ಜೀವನ ಶೈಲಿಯನ್ನು ಪ್ರಪಂಚದ ಎಲ್ಲಾ ಭಾಗಕ್ಕೂ ಕೊಂಡೊಯ್ಯುವ ಶಕ್ತಿ ಇದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಡಾ.ಧರಣಿದೇವಿ ಮಾಲಗತ್ತಿ ಅಭಿಪ್ರಾಯಪಟ್ಟರು. ನಯನ ಸಭಾಂಗಣದಲ್ಲಿ ದಕ್ಷಿಣ ಕನ್ನಡಿಗರ ಸಂಘದಿಂದ ಭಾನುವಾರ ನಡೆದ ‘ಕರಾವಳಿ ರತ್ನ’ ಪ್ರಶಸ್ತಿ ಮತ್ತು ಪ್ರತಿಭಾ ಪುರಸ್ಕಾರ ಪ್ರದಾನ ಕಾರ್ಯಕ್ರಮದಲ್ಲಿ ಅವರ ಮಾತನಾಡಿದರು.ಕರಾವಳಿಗರು ವಿವಿಧ ಉದ್ಯಮಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವುದಲ್ಲದೇ, ಪ್ರತಿ ಕ್ಷೇತ್ರದಲ್ಲಿಯೂ ತಮ್ಮದೇ ಛಾಪು ಮೂಡಿಸುತ್ತಾರೆ. ಸಮಾಜದ ಸಾಮರಸ್ಯಕ್ಕೆ ಹಾಗೂ ಒಗ್ಗಟ್ಟಿಗೆ ಸದಾ ಬೆಂಬಲವಾಗಿ ನಿಂತು, ವಿವಿಧ ಸಂಘ ಸಂಸ್ಥೆಗಳನ್ನು ಸ್ಥಾಪಿಸಿ ಸಮಾಜಕ್ಕೆ ತಮ್ಮದೇ ಕೊಡುಗೆ ನೀಡುತ್ತಿದ್ದಾರೆ. ಈ ಮೂಲಕ ಕರಾವಳಿಯು ಕೇವಲ ಸಮೃದ್ಧವಾದ ಪ್ರದೇಶ ಮಾತ್ರವಲ್ಲ, ಅಲ್ಲಿನವರ ಮನಸ್ಸು ಪರಿಶುದ್ಧವಾಗಿದೆ ಎಂದು ಸಾಬೀತುಪಡಿಸಿದ್ದಾರೆ ಎಂದು ಹೇಳಿದರು. ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ ಹೆಗ್ಡೆ ಮಾತನಾಡಿ, ಸಮಾಜ ಮುಖಿ ಕಾರ್ಯಗಳನ್ನು ಅಭಿನಂದಿಸುವ ಜವಾಬ್ದಾರಿ ಸಮಾಜದ್ದು. ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡಿಗರ ಸಂಘವು ಕಾರ್ಯೋ ನುಖವಾಗಿದೆ. ಸಮಾಜದಲ್ಲಿನ ಉತ್ತಮ ಕಾರ್ಯವನ್ನು ಅಭಿನಂದಿಸುವ ಮನಸ್ಥಿತಿ ರೂಢಿಸಿಕೊಳ್ಳಬೇಕು ಎಂದು ಹೇಳಿದರು. ಕರಾವಳಿ ರತ್ನ ಪ್ರಶಸ್ತಿ: 2023-24ನೇ ಸಾಲಿನ ‘ಕರಾವಳಿ ರತ್ನ’ ಪ್ರಶಸ್ತಿಯನ್ನು ಟೀಕೇಸ್ ಗ್ರೂಪ್‌ನ ಸ್ಥಾಪಕ ಉಮರ್ ಟೀಕೇ, ವರ್ಲ್ಡ್ ಫೆಡರೇಷನ ಆಫ್ ಬಂಟ್ಸ್ ಅಸೋಸಿಯೇಷನ್‌ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಕ್ಯಾಂಟರ್ಬೆರಿ ಗ್ರೂಪ್‌ನ ಅಧ್ಯಕ್ಷ ಲಿಯೋ ಕ್ವಾಡೋಸ್ ಹಾಗೂ ಆದಾಯ ತೆರಿಗೆಯ ಅಧಿಕಾರಿ ನಿವ್ಯಾ ಶೆಟ್ಟಿ ಅವರಿಗೆ බදයි ಗೌರವಿಸಲಾಯಿತು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ 13 ವಿದ್ಯಾರ್ಥಿಗಳಿಗೆ ಹಾಗೂ ದ್ವಿತೀಯ ಪಿಯುಸಿಯಲ್ಲಿ ಹೆಚ್ಚಿನ ಅಂಕ ಪಡೆದ 23 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡ ಲಾಯಿತು. ಸಂಘದ ಅಧ್ಯಕ್ಷ ಡಾ.ಕೆ.ಸಿ.ಬಲ್ಲಾಳ್ ಸಭೆಯ ಅಧ್ಯಕ್ಷತೆ ವಹಿಸಿಕೊಂಡಿದ್ದರು.

ಕರಾವಳಿ ಸುದ್ದಿ

ಎಸ್ ಡಿ ಎಂ ಯಕ್ಷೋತ್ಸವ ನೂತನ ಸಮಿತಿಗೆ ಚಾಲನೆ. ಯಕ್ಷೋತ್ಸವದಿಂದ ವಿದ್ಯಾರ್ಥಿಗಳಲ್ಲಿ ಯಕ್ಷಗಾನ ಜಾಗೃತಿ: ಭಾಸ್ಕರ ರೈ ಕುಕ್ಕುವಳ್ಳಿ

ಮಂಗಳೂರು: ‘ಶಾಲಾ ಕಾಲೇಜುಗಳಲ್ಲಿ ಯಕ್ಷಗಾನೀಯ ಚಟುವಟಿಕೆಗಳಿಗೆ ಪ್ರೋತ್ಸಾಹ ಲಭಿಸುತ್ತಿರುವುದು ಇತ್ತೀಚಿನ ಒಂದು ಉತ್ತಮ ಬೆಳವಣಿಗೆ. ಮೂರೂವರೆ ದಶಕಗಳ ಹಿಂದೆ ಎಸ್ ಡಿ ಎಂ ಲಾ ಕಾಲೇಜಿನಲ್ಲಿ ಪ್ರಾರಂಭವಾದ ಅಂತರ್ ಕಾಲೇಜು ಯಕ್ಷಗಾನ ಸ್ಪರ್ಧೆ ಯಕ್ಷೋತ್ಸವದಿಂದಾಗಿ ವಿದ್ಯಾರ್ಥಿಗಳಲ್ಲಿ ಯಕ್ಷಗಾನದ ಬಗ್ಗೆ ವಿಶೇಷ ಜಾಗೃತಿ ಉಂಟಾಗಿದೆ’ ಎಂದು ಕರ್ನಾಟಕ ಜಾನಪದ – ಯಕ್ಷಗಾನ ಮತ್ತು ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದ್ದಾರೆ. ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಕಾನೂನು ಕಾಲೇಜಿನಲ್ಲಿ 2024 – 25 ನೇ ಸಾಲಿನ ನೂತನ ಯಕ್ಷೋತ್ಸವ ಸಮಿತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ‘ಪ್ರಸ್ತುತ ಅಲ್ಲಲ್ಲಿ ನಡೆಯುವ ಯಕ್ಷಗಾನ ಪ್ರದರ್ಶನ ಮತ್ತು ಸ್ಪರ್ಧಾ ಕಾರ್ಯಕ್ರಮಗಳನ್ನು ಯಕ್ಷೋತ್ಸವ ಎಂದು ಕರೆಯುವುದು ವಾಡಿಕೆಯಾಗಿದೆ. ಧರ್ಮಸ್ಥಳ ಸಂಸ್ಥೆಯ ಯಕ್ಷೋತ್ಸವವೇ ಅದಕ್ಕೆ ಮೂಲ ಪ್ರೇರಣೆ. ವಿವಿಧ ವೃತ್ತಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಯಕ್ಷಗಾನದ ಹವ್ಯಾಸಿ ಕಲಾವಿದರಲ್ಲಿ ಹೆಚ್ಚಿನವರು ಬೇರೆ ಬೇರೆ ಕಾಲೇಜು ತಂಡಗಳ ಮೂಲಕ ಯಕ್ಷೋತ್ಸವದಲ್ಲಿ ಭಾಗವಹಿಸಿದವರೇ ಆಗಿದ್ದಾರೆ’ ಎಂದ ಅವರು ಅದಕ್ಕೆ ಕಾರಣವಾದ ಸಂಘಟನಾ ಸಮಿತಿಯನ್ನು ಅಭಿನಂದಿಸಿದರು. ಯಕ್ಷೋತ್ಸವದ ನಿರ್ದೇಶಕರಾದ ಉಪನ್ಯಾಸಕ ಪ್ರೊ. ಪುಷ್ಪರಾಜ್ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನ ಯಕ್ಷಗಾನ ತಂಡದ ಸದಸ್ಯರು, ಯಕ್ಷೋತ್ಸವ ಸಮಿತಿ ಪದಾಧಿಕಾರಿಗಳು ಮತ್ತು ವಿದ್ಯಾರ್ಥಿ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ಶಿಕ್ಷಕರೊಂದಿಗೆ ಪೋಷಕರೂ ಕೈ ಜೋಡಿಸುವುದು ಅಗತ್ಯ: ಉದ್ಯಮಿ ಬ್ಯಾಪಿಸ್ಟ್ ಕ್ರಾಸ್ತ.

ಮಂಗಳೂರು: ಕೆಲರಾಯಿ ಮಂಗಳೂರು ಇಲ್ಲಿನ ಸಂತ ಅನ್ನಾ ಆಂಗ್ಲ ಮಾದ್ಯಮ ಶಾಲೆಯ ವಾರ್ಷಿಕೋತ್ಸವ ಇತ್ತೀಚೆಗೆ ಬಹಳ ವಿಜೃಂಭಣೆಯಿಂದ ಜರುಗಿತು. ಬೆಳಿಗ್ಗೆ ಸಂತ ಅನ್ನಾ ಚರ್ಚಿನ ಸಭಾಂಗಣದಲ್ಲಿ ನಡೆದ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಉದ್ಯಮಿ ಬ್ಯಾಪ್ಟಿಸ್ಟ್ ಕ್ರಾಸ್ತ ಮಕ್ಕಳಲ್ಲಿ ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸುವ ಮೂಲಕ, ಅವರಲ್ಲಿರುವ ಸುಪ್ತ ಪ್ರತಿಭೆಗಳನ್ನು ಗುರುತಿಸಿ, ಅವರ ಸರ್ವತೋಮುಖ ಬೆಳವಣೆಗೆಗೆ ಪೂರಕವಾದ ವಾತಾವರಣವನ್ನು ಕಲ್ಪಿಸಿದಂತಾಗುತ್ತದೆಂದು ತಿಳಿಸಿದರು.ಅದೇ ದಿನ ಸಾಯಂಕಾಲದಂದು ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಲೂರ್ಡ್ಸ್ ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲರಾದ ವಂ। ಜಾನ್ಸಾನ್ ಸಿಕ್ವೇರಾವರು ಮಕ್ಕಳು ತಮ್ಮ ಹೆಚ್ಚಿನ ಅವಧಿಯನ್ನು ಶಾಲೆಯಲ್ಲಿ ಕಳೆಯುವ ಕಾರಣ, ಅವರ ಭವಿಷ್ಯವನ್ನು ರೂಪಿಸಿಕೊಳ್ಳುವಲ್ಲಿ ಶಿಕ್ಷಕರು ಪ್ರಮುಖ ಪಾತ್ರ ವಹಿಸುತ್ತಾರೆ. ಮಕ್ಕಳ ಪೋಷಕರು ಕೂಡ ಅವರೊಂದಿಗೆ ಕೈ ಜೋಡಿಸಿ ಸಕಾರಾತ್ಮಕವಾಗಿ ಸ್ಪಂದಿಸಿದರೆ, ಖಂಡಿತವಾಗಿ ಮಕ್ಕಳ ಭವಿಷ್ಯ ಉಜ್ವಲವಾಗಲು ಸಾಧ್ಯ ಎಂದು ತಿಳಿಸಿದರು.2023- 24 ನೇ ಸಾಲಿನ, 10ನೇ ತರಗತಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಅಂದು ಸನ್ಮಾನಿಸಲಾಯಿತು. ಬಳಿಕ ನಡೆದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಕಲಾ ಪ್ರತಿಭೆಯನ್ನು ಮೆರೆದರು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಿದ್ಯಾಸಂಸ್ಥೆಯ ಸಂಚಾಲಕರಾದ ವಂ| ಗುರು ಸಿಲ್ವೆಸ್ಟರ್ ಡಿ’ ಕೋಸ್ತಾ ವಹಿಸಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಯುತ ಜೋನ್ ಪಾಯ್ಸ್ ಸರ್ವರನ್ನು ಸ್ವಾಗತಿಸಿದರು. ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಐರಿನ್ ಮಿನೇಜಸ್ ವರದಿಯನ್ನು ವಾಚಿಸಿದರು. ವಿದ್ಯಾರ್ಥಿಗಳಾದ ಮಾ| ಗಲೇನ್ಸನ್ ಡಿ’ಸೋಜಾ ಹಾಗೂ ಕು| ಡೆನಿಕಾ ಡಿ’ಸೋಜಾಕಾರ್ಯಕ್ರಮವನ್ನು ನಿರೂಪಿಸಿ, ಹಿರಿಯ ಶಿಕ್ಷಕಿ ಹೇಮಾವತಿ ವಂದನಾರ್ಪಣೆಗೈದರು. ಕಾರ್ಯಕ್ರಮದಲ್ಲಿ ಗೌರವ ಅತಿಥಿಯಾಗಿ ವಂ| ಗುರು ಜೋಸೆಫ್ ಮಸ್ಕರೇನಸ್, ಶ್ರೀಯು ಸಂತೋಷ್ ಡಿ’ಕೋಸಾ, ಕಾರ್ಯದರ್ಶಿ ಶ್ರೀಮತಿ ಸೆಲಿಸ್ ಡಿ’ಮೆಲ್ಲೊ, ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಮೈಕಲ್ ಲೋಬೋ, ಶಿಕ್ಷಕ – ರಕ್ಷಕ ಸಂಘದ ಉಪಾಧ್ಯಕ್ಷರಾದ ಶ್ರೀಯುತ ವಿನೋದ್ ರೇಗೋ ಹಾಗೂ ಶಾಲಾ ನಾಯಕ ಸೋಹನ್ ಜೋಶ್ವಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Scroll to Top