Author name: editor

ಕರ್ನಾಟಕ ವಾರ್ತೆಗಳು

ಸುಧಾಕರ್ ಹೆಗ್ಡೆ ಕೋಟೆಬಾಗಿಲು ಅವರಿಗೆ ಕರ್ನಾಟಕ ಮುಕುಟಮಣಿ ರಾಜ್ಯ ಪ್ರಶಸ್ತಿ.

ದಾವಣಗೆರೆ: ಶ್ರೀನಿಧಿ ಕ್ಯಾಟರರ್ಸ್ ಅಂಡ್ ಇವೆಂಟ್ ಮ್ಯಾನೇಜ್ಮೆಂಟ್ ಕೋಟೆಬಾಗಿಲು ಇದರ ಮಾಲಕರಾಗಿರುವ ಸುಧಾಕರ್ ಹೆಗ್ಡೆ ಅವರಿಗೆ ಉಧ್ಯಮ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಸಲ್ಲಿಸಿರುವ ಅನನ್ಯ ಸಾಧನೆಗಾಗಿ ದಾವಣಗೆರೆ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯು ಡಿಸೆಂಬರ್ 1 ರಂದು ದಾವಣಗೆರೆಯಲ್ಲಿ ನಡೆಯಲಿರುವ 69 ನೇ ಕನ್ನಡ ರಾಜ್ಯೋತ್ಸವದ ಸಮಾರಂಭದಲ್ಲಿ ಕರ್ನಾಟಕ ಮುಕುಟಮಣಿ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಿದೆಂದು ಸಂಘಟಕರ ಪ್ರಕಟಣೆ ತಿಳಿಸಿದೆ

ಪ್ರಾದೇಶಿಕ ವಾರ್ತೆಗಳು

ನ.27 ರಂದು ಡಾ.ಕೆ.ಚಿನ್ನಪ್ಪ ಗೌಡ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ

ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ನ.27ರಂದು ಬೆಳಗ್ಗೆ 11.30ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ವಿಶ್ರಾಂತ ಕುಲಪತಿ , ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಡಾ.ಕೆ.ಚಿನ್ನಪ್ಪ ಗೌಡ ಭಾಗವಹಿಸಿ ಸಂವಾದ ನಡೆಸಲಿದ್ದಾರೆ. ಹಿರಿಯ ಛಾಯಾಗ್ರಾಹಕ ಚಂದ್ರಹಾಸ ಕೋಟೆಕಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸುವರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ .ಆರ್. ಉಪಸ್ಥಿತರಿರುವರು ಎಂದು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ನ.27 ರಂದು ಡಾ.ಕೆ.ಚಿನ್ನಪ್ಪ ಗೌಡಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ

ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ನ.27ರಂದು ಬೆಳಗ್ಗೆ 11.30ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ವಿಶ್ರಾಂತ ಕುಲಪತಿ , ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಡಾ.ಕೆ.ಚಿನ್ನಪ್ಪ ಗೌಡ ಭಾಗವಹಿಸಿ ಸಂವಾದ ನಡೆಸಲಿದ್ದಾರೆ. ಹಿರಿಯ ಛಾಯಾಗ್ರಾಹಕ ಚಂದ್ರಹಾಸ ಕೋಟೆಕಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸುವರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ .ಆರ್. ಉಪಸ್ಥಿತರಿರುವರು ಎಂದು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ವಾರ್ತೆಗಳು

ಪ್ರಶಸ್ತಿ ವಿಜೇತ ನಿರ್ದೇಶಕ ವೆಂಕಟ್ ಭಾರಧ್ವಜ್ ನಿರ್ದೇಶನದ ‘ಹೇ ಪ್ರಭು’ ಬಹುಭಾಷಾ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಅಭಿನಯಿಸಿರುವ ಪುಣೆಯ ಖ್ಯಾತ ಮಕ್ಕಳ ತಜ್ಞ ಡಾ ಸುಧಾಕರ್ ಶೆಟ್ಟಿ.

ಬೆಂಗಳೂರು: ವೆಂಕಟ್ ಭಾರಧ್ವಜ್ ನಮ್ಮ ದೇಶ ಕಂಡ ಪ್ರತಿಭಾವಂತ ಪ್ರಶಸ್ತಿ ವಿಜೇತ ನಿರ್ದೇಶಕರಾಗಿದ್ದಾರೆ. ಇವರ ನಿರ್ದೇಶನದ ಭಾರೀ ನಿರೀಕ್ಷೆಯ ಹೇ ಪ್ರಭು ಬಹುಭಾಷಾ ಚಿತ್ರವಾಗಿದೆ. ಇದರಲ್ಲಿ ಮೂಡಬಿದ್ರೆ ಮೂಲದ ಪುಣೆಯ ಹೊರನಾಡ ಕನ್ನಡ ರತ್ನ,ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಖ್ಯಾತ ಮಕ್ಕಳ ತಜ್ಞ ಡಾ. ಸುಧಾಕರ್ ಶೆಟ್ಟಿಯವರು ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದು, ಇದು ಗ್ರಾಮೀಣ, ಆರೋಗ್ಯ ಮತ್ತು ವೈದ್ಯಕೀಯ ಸಂದೇಶ ಸಾರುವ ಚಿತ್ರವಾಗಿರುವುದ್ದರಿಂದ ಪ್ರತಿಯೊಬ್ಬರು ನೋಡಲೇಬೇಕಾದ ಚಿತ್ರವಾಗಿದೆ. ಪ್ರಸಿದ್ದ ವೈದ್ಯ ಡಾ. ಸುಧಾಕರ್ ಶೆಟ್ಟಿಯವರು ಅಭಿನಯಿಸಿರುವುದ್ದರಿಂದ ವೈದ್ಯಕಿಯ ಜಗತ್ತು ಸೇರಿದತೆ ಕರ್ನಾಟಕ, ಮಹಾರಾಷ್ಟ್ರದ ಜನ ‘ಹೇ ಪ್ರಭು’ ಚಿತ್ರ ವೀಕ್ಷಿಸಲು ಕಾತರದಿಂದ ಕಾಯುತ್ತಿದ್ದಾರೆ. ಈ ಚಿತ್ರಕ್ಕೆ Mpmla’s ನ್ಯೂಸ್ ಶುಭ ಹಾರೈಸುತ್ತದೆ

ಕರ್ನಾಟಕ ವಾರ್ತೆಗಳು

ಡಾ. ಅಗರಿ ನವೀನ ಭಂಡಾರಿಯವರಿಗೆ ಬಾಗಲಕೋಟದಲ್ಲಿ ಕರ್ನಾಟಕ ರಾಜ್ಯ ಸಹಕಾರ ರತ್ನ ಪ್ರಶಸ್ತಿ ಪ್ರದಾನ.

ಮಂಗಳೂರು:ಸಹಕಾರ ಕ್ಷೇತ್ರದ ಸಾಧನೆಗಾಗಿ ನೀಡಲಾಗುವ ರಾಜ್ಯ ಸಹಕಾರ ರತ್ನ ಪುರಸ್ಕಾರವನ್ನು ಭಾರತೀಯ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಉತ್ತರ ವಲಯದ ಮಾಜಿ ನಿರ್ದೇಶಕ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿರುವ ಪುತ್ತೂರು ಮೂಲದ ಹಿರಿಯ ಸಮಾಜ ಸೇವಕ ಡಾ. ಅಗರಿ ನವೀನ್ ಭಂಡಾರಿರವರಿಗೆ ನ. 17 ರಂದು ಬಾಗಲಕೋಟೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಹಕಾರ ಸಚಿವ ಕೆ.ಎನ್. ರಾಜಣ್ಣರವರು ಪ್ರಶಸ್ತಿ ಪ್ರದಾನ ಮಾಡಿದರು. ಅಗರಿ ನವೀನ್ ಭಂಡಾರಿಯವರು ಈಗಾಗಲೇ ಬೆಂಗಳೂರು ನಗರದ ಬೊಮ್ಮನಹಳ್ಳಿಯಲ್ಲಿ 111 ಎಕ್ರೆ ಪ್ರದೇಶದಲ್ಲಿ ಸುಸಜ್ಜಿತವಾದ ಮೂಲ್ಕಿ ಸುಂದರರಾಮ್ ಶೆಟ್ಟಿ ಬಡಾವಣೆ ನಿರ್ಮಾಣಕ್ಕೆ ಕಾರಣರಾಗಿದ್ದಾರೆ. ಇಲ್ಲಿ 535 ಅಪಾರ್ಟ್‌ಮೆಂಟ್‌ನ್ನು ಇವರ ನೇತೃತ್ವದಲ್ಲಿ ನಿರ್ಮಿಸಲಾಗಿದೆ. ಇದು ಬೆಂಗಳೂರಿನಲ್ಲೇ ಮಾದರಿ ಬಡಾವಣೆಯಾಗಿ ಬೆಳೆದಿದೆ. ಇದರ ಬೆಳವಣಿಗೆ. ಅಭಿವೃದ್ಧಿ ಹಿಂದೆ ಅಗರಿ ನವೀನ್ ಭಂಡಾರಿಯವರ ಪರಿಶ್ರಮವಿದೆ.ಅಗರಿ ನವೀನ್ ಭಂಡಾರಿಯವರು ಮೂಲ್ಕಿ ಸುಂದರರಾಮ್ ಶೆಟ್ಟಿ ನಗರ ಸೌಹಾರ್ದ ಸಹಕಾರಿ ಸಂಘದಲ್ಲಿ ಕಳೆದ 19 ವರ್ಷಗಳಿಂದ ಅಧ್ಯಕ್ಷರಾಗಿ, ಸಹಕಾರ ಸಂಘವನ್ನು ಮಾದರಿಯಾಗಿ ಬೆಳೆಸಿದ್ದಾರೆ. ಸಹಕಾರ ಕ್ಷೇತ್ರಕ್ಕೆ ತನ್ನದೇ ಆದ ಕೊಡುಗೆಯನ್ನು ನೀಡಿರುವ ನವೀನ್ ಭಂಡಾರಿಯವರು ಮೂಲ್ಕಿ ಸುಂದರರಾಮ್ ಶೆಟ್ಟಿ ನಗರ ಕ್ಷೇಮಾಭಿವೃದ್ಧಿ ಸಂಘದ ಸ್ಥಾಪಕಾಧ್ಯಕ್ಷರಾಗಿರುತ್ತಾರೆ. ಪ್ರಸ್ತುತ ಸುಂದರರಾಮ್ ಶೆಟ್ಟಿ ನಗರ ಕ್ಲಬ್ ಸಮಿತಿಯ ಅಧ್ಯಕ್ಷರಾಗಿದ್ದಾರೆ.ರಾಜ್ಯ ಸಹಕಾರ ರತ್ನ ಪ್ರಶಸ್ತಿಗೆ ಪಾತ್ರರಾದ ಡಾ. ಅಗರಿ ನವೀನ್ ಭಂಡಾರಿಯವರಿಗೆ Mp mla’s news ಶುಭ ಹಾರೈಸುತ್ತದೆ.

ಅಂತಾರಾಷ್ಟ್ರೀಯ ವಾರ್ತೆಗಳು

ನಾಳೆ(ನ. 24) ಯುಎಇ ಗಲ್ಫ್ ಬಂಟೋತ್ಸವ: ಡಾ| ಕೆ ಪ್ರಕಾಶ್ ಶೆಟ್ಟಿಯವರಿಗೆ ಬಂಟ ವಿಭೂಷಣ ಪ್ರಶಸ್ತಿ ಪ್ರದಾನ.

ಯುಎಇ ಬಂಟ್ಸ್ ಆಶ್ರಯದಲ್ಲಿ ಇದೇ ಬರುವ 24 ರಂದು ಭಾನುವಾರ 47 ನೇ ವರ್ಷದ ಬಂಟರ ಸ್ನೇಹ ಸಮ್ಮಿಲನ “ಗಲ್ಫ್ ಬಂಟೋತ್ಸವ” ಆಯೋಜಿಸಲ್ಪಟ್ಟಿದ್ದು, ಅಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 7 ರ ತನಕ ನಡೆಯಲಿರುವ ಕಾರ್ಯಕ್ರಮ ವೈವಿಧ್ಯದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ, ಗಣ್ಯರಿಂದ ಭಾಷಣ, ಸಭಾ ಕಾರ್ಯಕ್ರಮ, ಪ್ರಶಸ್ತಿ ಪ್ರದಾನ, ಮನರಂಜನಾ ಕಾರ್ಯಕ್ರಮ, ನಂತರ ಪ್ರೀತಿ ಭೋಜನ ವ್ಯವಸ್ಥೆ ಮಾಡಲಾಗಿದ್ದು ಅಂದು ಗಲ್ಫ್ ರಾಷ್ಟ್ರಗಳಲ್ಲಿ ನೆಲೆ ನಿಂತ ಬಂಟ ಬಾಂಧವರು ಒಂದು ಕಡೆ ಸಮಾವೇಶಗೊಳ್ಳುವ ಸಂಭ್ರಮಕ್ಕೆ ಸ್ನೇಹ ಸಮ್ಮಿಲನ ಸಾಕ್ಷಿಯಾಗಲಿದೆ. ಅಲ್ ನಝೀರ್ ಲೀಝರ್ ಲ್ಯಾಂಡ್ ಐಸ್ ಪಾರ್ಕ್ ಇಲ್ಲಿ ನಡೆಯಲಿರುವ ಅದ್ದೂರಿ ಸ್ನೇಹ ಕೂಟದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಮಧ್ಯಂತರ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಎಂ ಆರ್ ಜಿ ಗ್ರೂಪ್ ಬೆಂಗಳೂರು ಇದರ ಫೌಂಡರ್ ಛೇರ್ಮನ್ ಡಾ| ಕೆ ಪ್ರಕಾಶ್ ಶೆಟ್ಟಿ ಅವರಿಗೆ ಗಣ್ಯಾತಿ ಗಣ್ಯ ಆಹ್ವಾನಿತರ ಸಮ್ಮುಖದಲ್ಲಿ ಬಂಟ ವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಗಲ್ಫ್ ಬಂಟ ಬಾಂಧವರಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳು ಸಮಾರಂಭಕ್ಕೆ ಕಳೆಯೇರಿಸಲಿದ್ದು, ಮುಖ್ಯ ಅತಿಥಿಯಾಗಿ ನಟ ಪ್ರಮೋದ್ ಶೆಟ್ಟಿ ಹಾಗೂ ಬಿಗ್ ಬಾಸ್ ಖ್ಯಾತಿಯ ಕಿರಿಕ್ ಕೀರ್ತಿ, ಕಾರ್ಯಕ್ರಮದ ಸಂಪೂರ್ಣ ನಿರ್ವಹಣೆ ನಿರೂಪಣೆಗಳಿಗೆ ವಿಶೇಷ ಆಹ್ವಾನಿತರಾಗಿ ಅಂತಾರಾಷ್ಟ್ರೀಯ ಖ್ಯಾತಿ ಪಡೆದ ಡಾ| ಪ್ರಿಯಾ ಹರೀಶ್ ಶೆಟ್ಟಿ ಮತ್ತು ನಿತೀಶ್ ಶೆಟ್ಟಿ ಎಕ್ಕಾರ್ ಅವರು ಆಗಮಿಸಲಿದ್ದಾರೆ. ಈ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲು ಸಮಸ್ತ ಬಂಟ ಬಾಂಧವರ ಪ್ರೋತ್ಸಾಹ ಹಾಗೂ ಹೆಚ್ಚಿನ ಸಂಖ್ಯೆಯ ಉಪಸ್ಥಿತಿಯನ್ನು ನಿರೀಕ್ಷಿಸಲಾಗಿದೆ ಎಂದು ಯುಎಇ ಬಂಟ್ಸ್ ನ ಅಧ್ಯಕ್ಷ ಸರ್ವೋತ್ತಮ ಶೆಟ್ಟಿಯವರು ಪತ್ರಿಕಾ ಪ್ರಕಟನೆಯಲ್ಲಿ ವಿನಂತಿಸಿಕೊಂಡಿದ್ದಾರೆ.

ಕ್ರೀಡಾಂಗಣ

ಪ್ರತಿಷ್ಠಿತ ಗೋರಿ ಯಂಗ್ ಬಾಯ್ಸ್ ಪಾಂಡೇಶ್ವರ ತಂಡದ ನಾಯಕ ನಾಗಿ ರಿಯಾಝ್ ಗೋರಿ ಆಯ್ಕೆ

ಮಂಗಳೂರಿನ ಅಂಡರ್ ಆರ್ಮ್ ಕ್ರಿಕೆಟ್ ನ ಪ್ರತಿಷ್ಠಿತ ತಂಡವಾದ 35 ವರ್ಷ ಇತಿಹಾಸ ಇರುವಂತಹ ದಿವಂಗತ ಸುರೇಶ್ ಬಿ.ಎನ್.ರವರ ಗೋರಿ ಯಂಗ್ ಬಾಯ್ಸ್ ಪಾಂಡೇಶ್ವರ ತಂಡದ 2024-25 ರ ಸಾಲಿನ ನಾಯಕನಾಗಿ ಅಂಡರ್ ಆರ್ಮ್ ಕ್ರಿಕೆಟ್‌ ಇತಿಹಾಸದಲ್ಲಿ ಸರಣಿ ಶ್ರೇಷ್ಠ ನಾಗಿ ಎರಡು ಬಾರಿ ದ್ವಿಚಕ್ರ(ಬೈಕ್) ವಾಹನವನ್ನು ತನ್ನದಾಗಿಸಿದ ಏಕೈಕ ಆಟಗಾರ ರಿಯಾಝ್ ಗೋರಿ ಹಾಗೂ ಉಪನಾಯಕನಾಗಿ ಪಯಾಝ್ ಅಡ್ಡೂರ್ ಆಯ್ಕೆ ಯಾಗಿದ್ದಾರೆ. ನಗರದ ಹೋಟೆಲ್ ತಾಜ್ ಮಹಲ್ ಸಭಾಂಗಣದಲ್ಲಿ ನಡೆದ ವಾರ್ಷಿಕ ಮಹಾ ಸಭೆ ಹಾಗೂ ಸಮವಸ್ತ್ರ ಬಿಡುಗಡೆ ಸಮಾರಂಭದಲ್ಲಿ ಈ ಆಯ್ಕೆ ಮಾಡಲಾಯಿತು. ಈ ಸಭೆಯಲ್ಲಿ ತಂಡದ ಮಾಲಕರು, ವ್ಯವಸ್ಥಾಪಕರು, ಹಿರಿಯ ಆಟಗಾರರು ಹಾಗೂ ತಂಡದ ಎಲ್ಲಾ ಸದಸ್ಯರು ಹಾಜರಿದ್ದರು.

ರಾಜಕೀಯ ವಾರ್ತೆಗಳು

ಕರ್ನಾಟಕದ ಉಪ ಚುನಾವಣೆಯಲ್ಲಿ ನೆಲ ಕಚ್ಚಿದ ಎನ್ ಡಿಎ ಮೈತ್ರಿ ಕೂಟ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ವಿಫಲ.

ವಿಶೇಷ ವರದಿ: ಡಾ. ಅಶೋಕ್ ಶೆಟ್ಟಿ. ಬಿ. ಎನ್.ಬೆಂಗಳೂರು: ಕರ್ನಾಟಕ ಉಪ ಚುನಾವಣೆಯು ಚನ್ನಪಟ್ಟಣ, ಶಿಗ್ಗಾoವಿ, ಸಂಡೂರ್ ಕ್ಷೇತ್ರಗಳಲ್ಲಿ ನಡೆದಿದ್ದು, ಈ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ್ದು, ಬಿಜೆಪಿ -ಜೆಡಿಎಸ್ ಅಂದರೆ ಎನ್ ಡಿಎ ಮೈತ್ರಿ ಕೂಟ ನೆಲ ಕಚ್ಚಿದೆ.ಇದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರ ದುರ್ಬಲ ನಾಯಕತ್ವ, ಪಕ್ಷದೊಳಗೆ ವಿಜಯೇಂದ್ರ ಸೃಷ್ಟಿಸಿದ ಗುಂಪುಗಾರಿಕೆಯೇ ಪ್ರಮುಖ ಕಾರಣವೆಂದು ವಿಶ್ಲೇಷಿಸಲಾಗುತ್ತಿದೆ. ಈ ಸಲದ ಲೋಕಸಭಾ ಚುನಾವಣೆಯಲ್ಲಿ ಕೂಡಾ ಬಿ ಎಸ್ ವೈ ಮತ್ತು ವಿಜಯೇಂದ್ರ ಇಬ್ಬರು ಸೇರಿಕೊಂಡು ಪಕ್ಷದ ಟಿಕೆಟ್ ಹಂಚುವಿಕೆ ಸಂದರ್ಭದಲ್ಲಿ ನಳಿನ್ ಕುಮಾರ್ ಕಟೀಲು, ಡಿವಿಎಸ್, ಪ್ರತಾಪ್ ಸಿಂಹ ಅವರಂಥ ಸಮರ್ಥರಿಗೆ ಟಿಕೆಟ್ ನೀಡದೆ ಜನ ಟೀಕೆಗೆ ಒಳಗಾಗಿದ್ದರು. ನಳಿನ್ ಕುಮಾರ್ ಕಟೀಲು ಅವರು ರಾಜ್ಯಾಧ್ಯಕ್ಷರಾಗಿದ್ದಾಗ ರಾಜ್ಯದಾದ್ಯoತ ಹಲವು ಬಾರಿ ಪ್ರವಾಸ ಮಾಡಿ ಪಕ್ಷವನ್ನು ಬೇರುಮಟ್ಟದಲ್ಲಿ ಸಂಘಟಿಸಿದ್ದರು. ಇವರ ನಾಯಕತ್ವದಲ್ಲಿ ಬಿಜೆಪಿ ಬಲಿಷ್ಠವಾಗಿತ್ತು. ಆದರೆ, ವಿಜಯೇಂದ್ರ ಪೇಪರ್ ಟೈಗರ್ ಆಗಿದ್ದು, ಈ ಉಪ ಚುನಾವಣೆಯಲ್ಲಿ ಫ್ಲಾಪ್ ಹೀರೋ ಆಗಿ ಹೊರಹೊಮ್ಮಿದ್ದಾರೆ. ವಿಜಯೇಂದ್ರರ ಸರ್ವಾಧಿಕಾರಿ ಧೋರಣೆ ಬಿಜೆಪಿ ಪಕ್ಷವನ್ನು ರಾಜ್ಯದಲ್ಲಿ ದುರ್ಬಲಗೊಳಿಸುತ್ತಿದೆ ಇದಲ್ಲದೆ,ಎಚ್ ಡಿಕೆ ಜೊತೆಗಿನ ಮೈತ್ರಿ ಬಿಜೆಪಿಗೆ ಮುಳುವಾಗಿ ಪರಿಣಮಿಸಿದೆ ವಿಜಯೇಂದ್ರರನ್ನು ಕೂಡಲೇ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆದು ಆ ಜಾಗದಲ್ಲಿ ಸಮರ್ಥರಿಗೆ ಅವಕಾಶ ನೀಡಬೇಕೆಂಬ ಕೂಗು ಪಕ್ಷದೊಳಗೆ ಕೇಳಿ ಬರುತ್ತಿದೆ.

ಪ್ರಾದೇಶಿಕ ವಾರ್ತೆಗಳು

ಕನ್ಯಾನ ಸದಾಶಿವ ಶೆಟ್ಟಿಯವರಿಗೆ ಸುರತ್ಕಲ್ ಬಂಟರ ಸಂಘದಿಂದ ಸನ್ಮಾನ

ಸುರತ್ಕಲ್: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ಆಶ್ರಯದಲ್ಲಿ ಮಂಗಳೂರು ಪುರಭವನದಲ್ಲಿ ಕರ್ನಾಟಕ ಸುವರ್ಣ ಪ್ರಶಸ್ತಿ ಪುರಸ್ಕೃತರಾದ ಕನ್ಯಾನ ಸದಾಶಿವ ಶೆಟ್ಟಿ ಅವರಿಗೆ ನಡೆದ ಸನ್ಮಾನ ಸಮಾರಂಭದಲ್ಲಿ ಸುರತ್ಕಲ್ ಬಂಟರ ಸಂಘವು ಸುರತ್ಕಲ್ ಬಂಟರ ಸಂಘದ ಕಟ್ಟಡ ಸಮಿತಿಯ ಅಧ್ಯಕ್ಷರಾದ ಕರುಣಾಕರ ಎಂ ಶೆಟ್ಟಿ ಮಧ್ಯಗುತ್ತು ಅವರ ನೇತೃತ್ವದಲ್ಲಿ ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು, ಪಟ್ಲ ಫೌಂಡೇಶನ್ ಸುರತ್ಕಲ್ ಘಟಕದ ಅಧ್ಯಕ್ಷ ಸುಧಾಕರ ಪೂಂಜ ಅವರು ಕನ್ಯಾನ ಸದಾಶಿವ ಶೆಟ್ಟಿ ಅವರನ್ನು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು. ಸಂಘದ ಉಪಾಧ್ಯಕ್ಷ ಪುಷ್ಪರಾಜ ಶೆಟ್ಟಿ ಕುಡುಂಬೂರು, ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಕಟ್ಲ, ಪಟ್ಲ ಫೌಂಡೇಶನ್ ಟ್ರಸ್ಟ್ ನ ಟ್ರಸ್ಟಿಗಳಾದ ಸಹನಾ ರಾಜೇಶ್ ರೈ, ಸವಿತಾ ಭವಾನಿ ಶಂಕರ್ ಶೆಟ್ಟಿ, ಕೇಸರಿ ಎಸ್ ಪೂಂಜ, ಪಟ್ಲ ಟ್ರಸ್ಟ್ ನ ಕೇಂದ್ರೀಯ ಸಮಿತಿಯ ಸಂಘಟನಾ ಕಾರ್ಯದರ್ಶಿ ಬಾಳ ಜಗನ್ನಾಥ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Scroll to Top