Author name: editor

ಪ್ರಾದೇಶಿಕ ವಾರ್ತೆಗಳು

ಪತ್ರಕರ್ತರಿಗೆ 10 ಲಕ್ಷ ರೂಪಾಯಿ ವಿಮಾ ಯೋಜನೆಯ ನೋಂದಾವಣೆ ಶಿಬಿರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್ ಸಹಯೋಗದಲ್ಲಿ ಅಂಚೆ ಇಲಾಖೆ ಸಹಾಭಾಗಿತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಸದಸ್ಯರಿಗೆ 10 ಲಕ್ಷ ರೂಪಾಯಿ ಉಚಿತ ವಿಮಾ ಯೋಜನೆಯ ನೋಂದಾವಣೆ ಶಿಬಿರ ಸೆಪ್ಟೆಂಬರ್ 1 ರಂದು ಬೆಳಿಗ್ಗೆ 10 ಗಂಟೆಗೆ ಮಂಗಳೂರು ಪತ್ರಿಕಾ ಭವನದಲ್ಲಿ ನಡೆಯಲಿದೆ.ಕಾರ್ಯಕ್ರಮದ ಉದ್ಘಾಟನೆಯನ್ನು ಅಂಚೆ ಇಲಾಖೆಯ ಮಂಗಳೂರು ವಿಭಾಗದ ಹಿರಿಯ ಅಧೀಕ್ಷಕ ರಾಗಿರುವ ಎಂ ಸುಧಾಕರ ಮಲ್ಯ ನೆರವೇರಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಸ್ಥಾಪಕ ಅಧ್ಯಕ್ಷ ಆನಂದ್ ಶೆಟ್ಟಿ, ಮಂಗಳೂರು ಪ್ರೆಸ್ ಕ್ಲಬ್ ನಿಕಟಪೂರ್ವ ಅಧ್ಯಕ್ಷ ಅನ್ನು ಮಂಗಳೂರು ಮುಖ್ಯ ಅತಿಥಿ ಗಳಾಗಿ ಭಾಗವಹಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ ಬಿ ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ. ಆರ್ ಅವರು ಗೌರವ ಉಪಸ್ಥಿತರಿರುತ್ತಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ತಿಳಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ಸೆ.1-30ರವರೆಗೆ ಜಮಾಅತೆ ಇಸ್ಲಾಮಿ ಹಿಂದ್ ಮಹಿಳಾ ವಿಭಾಗದಿಂದ ಅಭಿಯಾನ

ಮಂಗಳೂರು: “ಕಲ್ಕತ್ತಾದಲ್ಲಿ ನಡೆದಿರುವ ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಹತ್ಯೆ ಘಟನೆಯಿಂದ ಹಿಡಿದು ಕಾರ್ಕಳದಲ್ಲಿ ನಡೆದಿರುವ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣದವರೆಗೆ ದೇಶದಲ್ಲಿ ಹೆಣ್ಣುಮಕ್ಕಳಿಗೆ ರಕ್ಷಣೆ ಎನ್ನುವುದೇ ಇಲ್ಲವಾಗಿದೆ. ಹೆಣ್ಣನ್ನು ಕೇವಲ ಭೋಗದ ವಸ್ತುವಾಗಿ ನೋಡಲಾಗುತ್ತದೆ. ಇದೆಲ್ಲದಕ್ಕೂ ಕಾರಣ ಮದ್ಯ ಮತ್ತು ಮಾದಕ ವಸ್ತುಗಳ ಬಳಕೆ ಮಾರಾಟವೇ ಆಗಿದೆ. ಇಷ್ಟೇ ಅಲ್ಲದೆ ಅಶ್ಲೀಲ ವೆಬ್ ಸೈಟ್, ಗಳ ವೀಕ್ಷಣೆ ಹಾಗೂ ಸಾಮಾಜಿಕ ಜಾಲತಾಣಗಳು ಯುವಜನತೆಯನ್ನು ದಾರಿ ತಪ್ಪಿಸುತ್ತಿವೆ. ಇಂತಹ ಪರಿಸ್ಥಿತಿಯನ್ನು ಗಮನದಲ್ಲಿರಿಸಿಕೊಂಡು ಜಮಾಅತೆ ಇಸ್ಲಾಮಿ ಹಿಂದ್ ಮಹಿಳಾ ವಿಭಾಗವು ದೇಶಾದ್ಯಂತ ಒಂದು ತಿಂಗಳ ಕಾಲ ಅಭಿಯಾನವನ್ನು ಆಯೋಜಿಸಲಾಗುವುದು. ಸೆ.1ರಿಂದ 30ರವರೆಗೆ ನೈತಿಕತೆಯೇ ಸ್ವಾತಂತ್ರ್ಯ ಎಂಬ ಧ್ಯೇಯ ವಾಕ್ಯದಡಿಯಲ್ಲಿ ಅಭಿಯಾನ ನಡೆಸಲಾಗುವುದು“ ಎಂದು ಅಭಿಯಾನದ ರಾಜ್ಯ ಸಮಿತಿ ಸದಸ್ಯೆ ಸಬೀಹಾ ಫಾತಿಮಾ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. ಸಂಘಟನೆಯ ಸಲಹಾ ಸಮಿತಿ ಸದಸ್ಯೆ ಶಮಿರಾ ಜಹಾನ್ ಮಾತನಾಡಿ, ”ಯುವ ಪೀಳಿಗೆಯನ್ನು ಸ್ವಾತಂತ್ರ್ಯದ ತಪ್ಪು ಕಲ್ಪನೆಯಿಂದ ಜಾಗೃತಗೊಳಿಸುವುದು ಮತ್ತು ಅದರಿಂದ ರಕ್ಷಿಸುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ.ವಿಶೇಷವಾಗಿ ಮುಸ್ಲಿಂ ಸಮುದಾಯದಲ್ಲಿ ಕುರ್‌ ಆನ್ ಮತ್ತು ಸುನ್ನತ್‌ ಬೆಳಕಿನಲ್ಲಿ ಇಸ್ಲಾಮಿನ ಸರಿಯಾದ ಅರಿವನ್ನು ಉಂಟು ಮಾಡುವುದು ಹಾಗೂ ತಮ್ಮ ಜೀವನವನ್ನು ಅದರ ಮಾನದಂಡದಲ್ಲಿ ಎರಕಹೊಯ್ಯುವಂತೆ ಪ್ರೇರೇಪಿಸುವುದರ ಕಡೆಗೆ ಗಮನವೀಯಲಾಗುವುದು.ಅಭಿಯಾನದ ಸಂದರ್ಭದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಉದಾಹರಣೆಗೆ,‘ಧರ್ಮದಲ್ಲಿ ನೈತಿಕತೆಯ ಕಲ್ಪನೆ’ ಶೀರ್ಷಿಕೆಯಲ್ಲಿ ಅಂತರ್‌ ಧರ್ಮೀಯ ವಿಚಾರಗೋಷ್ಠಿ, ಮಹಿಳಾ ಸಮಾವೇಶ, ಶಾಲಾ-ಕಾಲೇಜುಗಳಲ್ಲೂ ಉಪನ್ಯಾಸ, ವೈಯಕ್ತಿಕ ಭೇಟಿ, ಸಮಾಜದ ಪ್ರಸಿದ್ಧ ವ್ಯಕ್ತಿಗಳ ಸಂದರ್ಶನ ನಡೆಸುವುದು ಅದರ ಪ್ರಮುಖ ಅಂಶಗಳನ್ನು ಆಯ್ದು ಸೋಶಿಯಲ್ ಮೀಡಿಯಾದ ಮೂಲಕಪ್ರಚಾರ ಮಾಡುವುದು. ಲೇಖನ, ಭಾಷಣ ಸ್ಪರ್ಧೆ, ಪೋಸ್ಟರ್ ಡಿಸೈನಿಂಗ್, ಕಥೆ ಮುಂತಾದವುಗಳ ಸ್ಪರ್ಧೆಗಳನ್ನು ನಡೆಸಲಾಗುವುದು. ಕರ್ನಾಟಕದಲ್ಲಿ ಈ ಅಭಿಯಾನದ ಉದ್ಘಾಟನೆಯು ಸೆಪ್ಟೆಂಬರ್ 1ರಂದು ನೆರವೇರಲಿರುವುದು. ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕ ರಾಜ್ಯ ಅಧ್ಯಕ್ಷರಾದ ಡಾಕ್ಟರ್ ಮುಹಮ್ಮದ್ ಸಅದ್ ಬೆಳಗಾವಿಯವರುಇದರ ಅಧ್ಯಕ್ಷತೆ ವಹಿಸಲಿದ್ದಾರೆ“ ಎಂದರು.ಪತ್ರಿಕಾಗೋಷ್ಟಿಯಲ್ಲಿ ಸಂಘಟನೆಯ ನಗರ ಸಂಚಾಲಕಿ ಸುಮಯ್ಯ ಹಮೀದುಲ್ಲ, ಶಹಿದಾ ಉಮರ್ ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ಕನ್ನಡದಲ್ಲೇ ವೆಬ್ಸೈಟ್ ಡಿಸೈನಿಂಗ್ ಕಲಿಯಲು ನಿಮಗಿದು ಸುವರ್ಣಾವಕಾಶ

ಸುಲಭವಾಗಿ, ಸರಳವಾಗಿ ಕನ್ನಡದಲ್ಲೇ ವೆಬ್ ಡಿಸೈನಿಂಗ್ ಕಲಿಯಲು ನಾವು ನಾಳೆಯಿಂದ ವೆಬ್ ಡಿಸೈನ್ ಕೋರ್ಸ್ ಪ್ರಾರಭಿಸುತ್ತಿದ್ದೇವೆ. ಯಾವುದೇ ಕೋಡಿಂಗ್ ಜ್ಞಾನದ ಅಗತ್ಯವಿಲ್ಲ. ಬೇಸಿಕ್ ಕಂಪ್ಯೂಟರ್ ಗೊತ್ತಿದ್ದರೆ ಸಾಕು. 10 ವರ್ಷ ಮೇಲ್ಪಟ್ಟವರು ಕಲಿಯಬಹುದು.ಏನು ಲಾಭ?1.ನಮ್ಮ ವ್ಯವಹಾರಕ್ಕೆ ಬೇಕಾದ ಸ್ವಂತ ವೆಬ್ಸೈಟ್ ನಾವೇ ನಮಗೆ ಬೇಕಾದ ರೀತಿಯಲ್ಲಿ ರಚಿಸಬಹುದು ಅಥವಾ ನಮ್ಮಲ್ಲಿ ಈಗಾಗಲೇ ಇರುವ ಸ್ವಂತ ವೆಬ್ಸೈಟ್ ನಿರ್ವಹಿಸಲು ಯಾರ ಮೇಲೂ ಡಿಪೆಂಡ್ ಆಗಬೇಕಿಲ್ಲ.2.ವೆಬ್ಸೈಟ್ ಡಿಸೈನಿಂಗ್ ಬ್ಯುಸಿನೆಸ್ ಪ್ರಾರಂಭಿಸಬಹುದು. ಅಥವಾ ಮನೆಯಲ್ಲೇ ಕೂತು ಕೆಲಸ ಮಾಡಿ ಸಂಪಾದಿಸಬಹುದು.3.ಡಿಜಿಟಲ್ ಮಾರ್ಕೆಟಿಂಗ್ ನ ಪ್ರಮುಖ ಭಾಗವಾಗಿರುವ SEO (Serach Engine Optimization) ಮಾಡಿ ನಮ್ಮ ವ್ಯವಹಾರ ವ್ಯಾಪ್ತಿಯನ್ನು ವಿಸ್ತರಿಸಬಹುದು.4.ಮುಂದಿನ ದಿನಗಳಲ್ಲಿ ಅತ್ಯಂತ ಅಗತ್ಯವಾದ ಡಿಜಿಟಲ್ ನೆಟ್ವರ್ಕ್ ನ ಸಂಪೂರ್ಣ ಸಾಕ್ಷರತೆಗೆ ಇದು ಪೂರಕವಾಗಿದೆ.5.ಸೋಶಿಯಲ್ ಮೀಡಿಯಾ ಮಾರ್ಕೆಟಿಂಗ್ ಗೆ ಬೇಕಾದ ಲ್ಯಾಂಡಿಂಗ್ ಪೇಜ್ ನೀವೇ ರಚಿಸಬಹುದು.ಕೋರ್ಸ್ ಜೊತೆಗೆ ಏನೆಲ್ಲಾ ಸಿಗುತ್ತದೆ?1.ಸುಮಾರು 50ಕ್ಕೂ ಅಧಿಕ ವಿಡಿಯೋ ಲೆಕ್ಚರ್ಗಳಿದ್ದು, ಪ್ರತಿದಿನದ ಅಭ್ಯಾಸದ ಬಳಿಕ ಸಂದೇಹಗಳನ್ನು ಚಾಟ್ ಸಪೋರ್ಟ್ ಮೂಲಕ ಬಗೆಹರಿಸಿಕೊಳ್ಳಬಹುದು.2.ಕಲಿಯಲು ಸುಮಾರು 2000 ರೂಪಾಯಿಗಳವರೆಗಿನ ಹೋಸ್ಟಿಂಗ್ ಸರ್ವರ್ ಉಚಿತವಾಗಿ ನೀಡಲಾಗುವುದು.3.ಕಲಿಯಲು ಬೇಕಾದ ಪ್ರಮುಖ ಎಲ್ಲಾ Professional Pluginಗಳು GPL lisence ಮೂಲಕ ನೀಡುತ್ತೇವೆ. ಇದು ಸುಮಾರು 4000 ರೂಪಾಯಿಗಳಷ್ಟು ಮೌಲ್ಯದ್ದಾಗಿದ್ದು ಕಲಿಯಲು ತಮಗೆ ಉಚಿತವಾಗಿ ನೀಡಲಾಗುತ್ತದೆ.4.Static webiste to dynamic website ಎಲ್ಲಾ ಪ್ರಮುಖ ತರಬೇತಿ ನೀಡಲಾಗುತ್ತದೆ. ಉದಾಹರಣೆಗೆ: ನ್ಯೂಸ್ ವೆಬ್ಸೈಟ್ ಮಾಡುವುದು ಹೇಗೆ? ಆನ್ಲೈನ್ ಶಾಪಿಂಗ್, Matrimony, Real estate, Job search, Cinema OTT, LMS* ಹೀಗೆ ಬ್ಯುಸಿನೆಸ್ ರಿಲೇಟೆಡ್ ವೆಬ್ ಡಿಸೈನ್ ತರಬೇತಿ ನೀಡಲಾಗುವುದು.5.ಸುಮಾರು 3000 ರೂಪಾಯಿ ಬೆಲೆಬಾಳುವ GPL lisenced Professional Theme ಗಳು ಕೂಡ ಉಚಿತವಾಗಿ ನೀಡಲಾಗುವುದು.6.ಕೋರ್ಸ್ ಮುಗಿದ ನಂತರ ಆನ್ಲೈನ್ ಎಕ್ಸಾಮ್ ನಡೆಸಲಾಗುತ್ತದೆ. ಕೊನೆಯ ಭಾಗವಾಗಿ ಸರ್ಟಿಫಿಕೆಟ್ ನೀಡಲಾಗುತ್ತದೆ.ಕೋರ್ಸ್ ಬೆಲೆ ಕೇವಲ 2499/-. ಕೋರ್ಸ್ Validity ಒಂದು ವರ್ಷಗಳವರೆಗೆ ಇರುತ್ತದೆ. ಸಾಧಾರಣ ಕಂಪ್ಯೂಟರ್ ಅಥವಾ Laptop ಬಳಸಬಹುದು.Limited Hosting ಇರುವುದರಿಂದ limited Admission ಇರುತ್ತದೆ. ತಕ್ಷಣವೇ ನೋಂದಾಯಿಸಬಹುದು.ಹೆಚ್ಚಿನ ಮಾಹಿತಿಗಾಗಿ: 6363426084Graphic AcademyG-Space.cloud

ಪ್ರಾದೇಶಿಕ ವಾರ್ತೆಗಳು

ಮಂಗಳೂರು ವಿವಿಯನ್ನು ಅಧೋಗತಿಗಿಳಿಸಿದ ರಾಜ್ಯ ಸರ್ಕಾರದ ಗ್ಯಾರಂಟಿ ; ಬಡವರ ಶಿಕ್ಷಣಕ್ಕೂ ಹಣ ಇಲ್ಲದ ಸ್ಥಿತಿ, ವಿವಿ ಕಾಲೇಜನ್ನೇ ಮುಚ್ಚುವ ಹುನ್ನಾರದಲ್ಲಿ ಕಾಂಗ್ರೆಸ್ ಸರ್ಕಾರ:- ಶಾಸಕ ವೇದವ್ಯಾಸ ಕಾಮತ್ ಆಕ್ರೋಶ

ಮಂಗಳೂರು: ಶಿಕ್ಷಣ ಮೂಲಭೂತ ಹಕ್ಕಾದರೂ, ಗ್ಯಾರಂಟಿ ಹಿಂದೆ ಬಿದ್ದಿರುವ ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರವನ್ನೂ ನಿರ್ಲಕ್ಷ್ಯ ಮಾಡಿದೆ. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಒಂದೆಡೆ ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಆರ್ಥಿಕ ದುರ್ಗತಿ ಒದಗಿದ್ದರೆ, ರಾಜ್ಯ ಸರ್ಕಾರಕ್ಕೆ ಅನುದಾನ ಕೊಟ್ಟು ಮಕ್ಕಳ ಶಿಕ್ಷಣಕ್ಕೆ ಆಸರೆಯಾಗುವುದಕ್ಕೂ ಗತಿ ಇಲ್ಲದ ಸ್ಥಿತಿ. ವಿವಿಯಲ್ಲಿ ಆರ್ಥಿಕ ದುಸ್ಥಿತಿಯಿಂದಾಗಿ ಸಿಬ್ಬಂದಿ ವೇತನಕ್ಕೂ ಪರದಾಡುವ ಸ್ಥಿತಿಯಾಗಿದೆ. ಇದಲ್ಲದೆ, ಮಂಗಳೂರು ವಿವಿಯ ಆಡಳಿತ ಸಂಧ್ಯಾ ಕಾಲೇಜು ಸೇರಿದಂತೆ ಕೆಲವು ವಿಭಾಗಗಳನ್ನೇ ಮುಚ್ಚುವುದಕ್ಕೆ ಮುಂದಾಗಿದ್ದು ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಕನ್ನಡಿ ಹಿಡಿಯುತ್ತದೆ ಎಂದು ಶಾಸಕ ವೇದವ್ಯಾಸ ಕಾಮತ್ ಪತ್ರಿಕಾ ಹೇಳಿಕೆಯಲ್ಲಿ ಟೀಕಿಸಿದ್ದಾರೆ. ‌ಮಂಗಳೂರು ವಿವಿಯಲ್ಲಿ ಮಿತಿಮೀರಿದ ಭ್ರಷ್ಟಾಚಾರದಿಂದಾಗಿಯೇ ಇಂತಹ ಸ್ಥಿತಿ ಬಂದೊದಗಿದೆ ಎಂದು ಅಲ್ಲಿನ ನಿವೃತ್ತ ಪ್ರಾಧ್ಯಾಪಕರೇ ಹೇಳುತ್ತಿದ್ದಾರೆ. ವಿವಿಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಅತಿಥಿ ಉಪನ್ಯಾಸಕರಿಗೆ ಕಳೆದ ನಾಲ್ಕು ತಿಂಗಳಿನಿಂದ ವೇತನ ಪಾವತಿಯಾಗಿಲ್ಲ. ಒಂದು ತಿಂಗಳು ವೇತನ ವಿಳಂಬವಾದರೂ ಜೀವನ ನಡೆಸುವುದು ಕಷ್ಟಕರವಾಗಿರುವ ಇಂದಿನ ದಿನಗಳಲ್ಲಿ ನಾಲ್ಕೈದು ತಿಂಗಳ ಕಾಲ ವೇತನ ಬಾಕಿ ಉಳಿಸಿಕೊಂಡರೆ ಅವರ ಕುಟುಂಬ ನಿರ್ವಹಣೆ ಹೇಗೆ ಸಾಧ್ಯ? ಒಂದು ಕಾಲದಲ್ಲಿ ಪ್ರತಿಷ್ಠಿತ ವಿಶ್ವವಿದ್ಯಾನಿಲಯ ಎಂಬ ಹೆಸರು ಪಡೆದುಕೊಂಡಿದ್ದ ಮಂಗಳೂರು ವಿವಿ ಭ್ರಷ್ಟಾಚಾರದಿಂದಾಗಿ ಅಕ್ಷರಶಃ ತನ್ನ ಘನತೆಯನ್ನು ಹಾಳು ಮಾಡಿಕೊಂಡಿದೆ.ವಿವಿಯ ಆಡಳಿತದ ನಿರ್ಲಕ್ಷ್ಯದಿಂದಾಗಿ ಯುಜಿಸಿ ಮಾನ್ಯತೆ ಬಿ ಗ್ರೇಡ್ ಗೆ ಇಳಿದಿದೆ. ಇದರ ನಡುವೆ, ವಿದ್ಯಾರ್ಥಿಗಳ ಅಡ್ಮಿಶನ್ ಕಡಿಮೆಯಾದ ನೆಪದಲ್ಲಿ ಅನೇಕ ಪದವಿ, ಸ್ನಾತಕೋತ್ತರ ವಿಭಾಗಗಳನ್ನು ಮುಚ್ಚಲಾಗುತ್ತಿದೆ. ಮಂಗಳೂರಿನ ಸಂಧ್ಯಾ ಕಾಲೇಜಿನಲ್ಲಿ ಪದವಿ ವಿಭಾಗಕ್ಕೆ ಅಡ್ಮಿಷನ್ ನಿಲ್ಲಿಸಿದ್ದು ಇದಕ್ಕೆ ಸಾಕ್ಷಿ. ಹಗಲಿನಲ್ಲಿ ಕೆಲಸ ನಿರ್ವಹಿಸುತ್ತ ಸಂಜೆಯ ವೇಳೆ ಶಿಕ್ಷಣ ಪಡೆಯುತ್ತಿದ್ದ ಬಡ ವಿದ್ಯಾರ್ಥಿಗಳ ಹೊಟ್ಟೆಗೆ ಬಡಿದಂತಾಗಿದೆ. ಖಾಸಗಿ ಕಾಲೇಜುಗಳ ಭರಾಟೆ ನಡುವೆ ಸರ್ಕಾರದ ಶಿಕ್ಷಣ ವ್ಯವಸ್ಥೆಯನ್ನು ಚೆನ್ನಾಗಿಟ್ಟುಕೊಂಡರೆ, ವಿದ್ಯಾರ್ಥಿಗಳಿಗೆ ಕೊರತೆಯಾಗಲ್ಲ. ಕಡಿಮೆ ಶುಲ್ಕದಲ್ಲಿ ಶಿಕ್ಷಣ ಸಿಗುತ್ತೆ ಎನ್ನುವ ಕನಸಿನೊಂದಿಗೆ ಬರುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವೇ ಬಾಗಿಲು ಮುಚ್ಚಿದಂತಾಗಿದ್ದು ನಗರದ ಹೃದಯಭಾಗದಲ್ಲಿರುವ ಏಕೈಕ ಸರ್ಕಾರಿ ಕಾಲೇಜನ್ನೇ ಮುಚ್ಚುವ ಹುನ್ನಾರದಂತೆ ಕಾಣುತ್ತಿದೆ. ಸಂಧ್ಯಾ ಕಾಲೇಜಿನಲ್ಲಿ ಪದವಿ ಪ್ರವೇಶ ನಿಲ್ಲಿಸಿದ್ದರಿಂದ ಹಲವಾರು ಮಂದಿ ಉಪನ್ಯಾಸಕರು, ಸಿಬ್ಬಂದಿಯ ಉದ್ಯೋಗಕ್ಕೂ ಕತ್ತರಿ ಹಾಕಿದಂತಾಗಿದೆ. ಇದಕ್ಕೆಲ್ಲ ರಾಜ್ಯ ಸರ್ಕಾರ ತನ್ನ ಅವೈಜ್ಞಾನಿಕ ಗ್ಯಾರಂಟಿ ಯೋಜನೆಗಳ ನೆಪದಲ್ಲಿ ಶಿಕ್ಷಣದ ಉನ್ನತೀಕರಣಕ್ಕೂ ಅನುದಾನವನ್ನು ಒದಗಿಸಲಾಗದೆ, ಕೈಲಾಗದಿದ್ದರೆ ಮುಚ್ಚಿಬಿಡಿ ಎನ್ನುವ ಮನಸ್ಥಿತಿಗೆ ಬಂದಿರುವುದನ್ನು ತೋರಿಸುತ್ತಿದೆ. ಗ್ಯಾರಂಟಿ ಯೋಜನೆ ಹೆಸರಲ್ಲಿ ರಾಜ್ಯ ಸರ್ಕಾರವೇ ಮಂಗಳೂರು ವಿವಿಯನ್ನು ಅಧೋಗತಿಗೆ ತಳ್ಳಿದ್ದು ಸಾವಿರಾರು ಬಡವರ ಮಕ್ಕಳಿಗೆ ಅನ್ಯಾಯ ಮಾಡಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ಮಂಗಳೂರು ಹೋಬಳಿ ಮಟ್ಟದ ಕಬ್ಬಡ್ಡಿ ಪಂದ್ಯಾಟ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮಂಗಳೂರು ಉತ್ತರ ವಲಯ ಹಾಗೂ ದ. ಕ. ಜಿ. ಪಂ. ಹಿ. ಪ್ರಾ. ಶಾಲೆ ಕಾವೂರು ಇವುಗಳ ಸಂಯುಕ್ತ ಆಶ್ರಯದಲ್ಲಿ 2024-2025 ನೇ ಸಾಲಿನ ಮಂಗಳೂರು ಹೋಬಳಿ ಮಟ್ಟದ ಕಬ್ಬಡ್ಡಿ ಪಂದ್ಯಾಟ ದಿನಾಂಕ 28ರಂದು ಶಾಲಾ ಮೈದಾನದಲ್ಲಿ ನಡೆಯಿತು.ಸ್ಥಳೀಯ ಕಾರ್ಪೋರೇಟರ್ ಸುಮಂಗಲಾ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಜೇಮ್ಸ್ ಕುಟಿನೋ, ದೈಹಿಕ ಶಿಕ್ಷಣಾಧಿಕಾರಿಗಳಾದ ಭರತ್, ಕರ್ನಾಟಕ ರಾಜ್ಯ ಸರಕಾರದ ಆಹಾರ ಆಯೋಗದ ಸದಸ್ಯ ಸುಮಂತ್ ರಾವ್, ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿ ನಿತೇಶ್ ಕೊಂಡೆ, ದಕ್ಷಿಣ ಕನ್ನಡ ಜಿಲ್ಲಾ ಸರಕಾರಿ ನೌಕರ ಸಂಘದ ಸಾಂಸ್ಕೃತಿಕ ಕಾರ್ಯದರ್ಶಿ ವಾಣಿ, CRP ದೀಪಿಕಾ, ದೈಹಿಕ ಶಿಕ್ಷಣ ಶಿಕ್ಷಕ ಸಂಘದ ಅಧ್ಯಕ್ಷರಾದ ಚೆಲುವಮ್ಮ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಲಕ್ಷ್ಮಣ ಛಲವಾದಿ, ಶಾಲಾ ಹಳೆ ವಿದ್ಯಾರ್ಥಿ ಹಸನಬ್ಬ, ಪ್ರವೀಣ್ ಲೋಬೊ, ನಿವೃತ್ತ ಮುಖ್ಯ ಶಿಕ್ಷಕಿ ಚಂದ್ರಾವತಿ, ಮುಖ್ಯ ಶಿಕ್ಷಕಿ ಸೀತಮ್ಮ. ಜೆ ಸಮಾರಂಭದಲ್ಲಿ ಉಪಸ್ಥಿತರಿದ್ದರು.ಈ ಕಬಡ್ಡಿ ಪಂದ್ಯಾಟದಲ್ಲಿ 28 ಶಾಲೆಗಳು ಭಾಗವಹಿಸಿದ್ದವು. ಬಾಲಕರ ವಿಭಾಗ- MGC ಬೋಂದೆಲ್( ಪ್ರಥಮ.)ವಿದ್ಯಾಜ್ಯೋತಿ ಕಾವೂರು( ದ್ವಿತೀಯ)ಬಾಲಕಿಯರ ವಿಭಾಗ – B.E. M ಕಾರ್ ಸ್ಟ್ರೀಟ್ (ಪ್ರಥಮ ) ವಿದ್ಯಾ ಆಂಗ್ಲ ಮಾಧ್ಯಮ ಹಿ. ಪ್ರಾಥಮಿಕ ಶಾಲೆ ಕೊಂಚಾಡಿ (ದ್ವಿತೀಯ ) ಶಾಲಾ ಮುಖ್ಯ ಶಿಕ್ಷಕಿ ಸೀತಮ್ಮ. ಜೆ ಸ್ವಾಗತಿಸಿದರು. ಸುನೀತಾ ಪ್ಲಾವಿಯಾ ಡಿಕೋಸ್ತಾ ನಿರೂಪಿಸಿದರು. ಕೋಕಿಲವಾಣಿ ವಂದಿಸಿದರು. ಶಿಕ್ಷಕಿ ಆಶಾ ಮತ್ತು ದೈಹಿಕ ಶಿಕ್ಷಕಿ ವಿಜಯಲಕ್ಷ್ಮಿ ಹಾಗೂ SDMC ಸದಸ್ಯರು ಸಹಕರಿಸಿದರು.

ಪ್ರಾದೇಶಿಕ ವಾರ್ತೆಗಳು

ದಕ್ಷಿಣ ಕನ್ನಡ ಜಿಲ್ಲೆಯ” ಪಿಲಿಕುಳ ನಿಸರ್ಗಧಾಮದಲ್ಲಿ ನವೆಂಬರ್ 14ರಿಂದ 18ರವರೆಗೆ ಪಿಲಿಕುಳೋತ್ಸವ” ಜಿಲ್ಲಾಧಿಕಾರಿಗಳೊಂದಿಗೆ ಮಂಜುನಾಥ ಭಂಡಾರಿ ಸಮಾಲೋಚನೆ

ಮಂಗಳೂರು, ಆಗಸ್ಟ್ 29.ದಶಕದಿಂದ ಮಂಗಳೂರಿನ ಪಿಳಿಕುಲ ನಿಸರ್ಗಧಾಮದಲ್ಲಿ ನಡೆಯುತ್ತಿದ್ದ ಕಂಬಳ ಸ್ಥಗಿತಗೊಂಡಿದ್ದು ಆ ಪರಿಸರದಲ್ಲಿ ಜರುಗುತ್ತಿದ್ದ ವಿವಿಧ ಕಾರ್ಯಕ್ರಮಗಳು ಕಳೆಗುಂದಿರುತ್ತದೆ. ಆ ವೈಭವವನ್ನು ಮರು ಸ್ಥಾಪಿಸಲು ಈ ಕಾರ್ಯಕ್ರಮಗಳನ್ನು ರೂಪಿಸುವುದು ಸಮಯೋಚಿತವಾಗಿದೆ.ಈ ವರ್ಷದ ನವಂಬರ್ 14 ರಿಂದ 18ರವರೆಗೆ “ಪಿಲಿಕುಳೋತ್ಸವ” ಹೆಸರಿನಲ್ಲಿ ಯುವಜನ ಮತ್ತು ಕ್ರೀಡಾ ಇಲಾಖೆ, ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಈ ಕೆಳಗಿನಂತೆ ಜಿಲ್ಲಾ ಸಾಂಸ್ಕೃತಿಕ ಉತ್ಸವ, ಕಾರ್ಯಕ್ರಮ ನಡೆಸಲು ಚಿಂತನೆ ನಡೆಸಲಾಗಿದೆ. ಈ ಸಂಬಂಧ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಜಿಲ್ಲಾಧಿಕಾರಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರುನವೆಂಬರ್ 14ರಂದು ಕಾರ್ಯಕ್ರಮದ ಉದ್ಘಾಟನೆ ಮಕ್ಕಳಿಗಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ಮೇಳ ಹಾಗೂ ಮಕ್ಕಳ ಹಬ್ಬ ಆಯೋಜಿಸುವುದು.•ನವೆಂಬರ್ 15ರಿಂದ ಕೃಷಿ ಮತ್ತು ಜಾನುವಾರು ಮೇಳ ಆಯೋಜಿಸುವುಸುನವೆಂಬರ್ 16 ರಂದು ಕೆಸರು ಗದ್ದೆಯಲ್ಲಿ ಜಿಲ್ಲಾ ಮಟ್ಟದ ಜಾನಪದ ಕ್ರೀಡಾ ಕಾರ್ಯಕ್ರಮಗಳನ್ನು ಆಯೋಜಿಸುವುದು.ನವೆಂಬರ್ 17 ಮತ್ತು 18ರಂದು ಕಂಬಳ ನಡೆಸುವುದು ಹಾಗೂ ಪ್ರತೀ ದಿನ ಸಂಜೆ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವುದುದಕ್ಷಿಣ ಕನ್ನಡ ಜಿಲ್ಲೆಯ ವಿನೂತನವಾದ ಈ ಕಾರ್ಯಕ್ರಮಕ್ಕೆ ಮಾನ್ಯ ಕರ್ನಾಟಕ ವಿಧಾನ ಸಭಾಧ್ಯಕ್ಷರು. ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಎಲ್ಲಾ ಶಾಸಕರು, ಚುನಾಯಿತ ಪ್ರತಿನಿಧಿಗಳು ಮತ್ತು ಕಂಬಳ ಸಮಿತಿಯೊಂದಿಗೆ ಚರ್ಚಿಸಿ ಕಾರ್ಯಕ್ರಮದ ರೂಪುರೇಖೆ ರಚಿಸಸಲಾಗುವುದು ಎಂದು ಮಂಜುನಾಥ ಭಂಡಾರಿ ತಿಳಿಸಿದರು.

ಪ್ರಾದೇಶಿಕ ವಾರ್ತೆಗಳು

ಸುಸಜ್ಜಿತ ಸಮುದಾಯ ವಾಚನಾಲಯ ನಿರ್ಮಿಸಲು ಮಾಸ್ಟರ್ ಪ್ಲಾನ್-ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್

ಮಂಗಳೂರು : ವೆನ್ಲಾಕ್ ಜಿಲ್ಲಾಸ್ಪತ್ರೆ ಆವರಣದಲ್ಲಿ ಸುಸಜ್ಜಿತ ಸಮುದಾಯ ವಾಚನಾಲಯ ನಿರ್ಮಿಸುವ ನಿಟ್ಟಿನಲ್ಲಿ ಮಾಸ್ಟರ್ ಪ್ಲಾನ್ ಸಿದ್ದಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದರು.ನಗರದ ವೆನ್ಲಾಕ್ ಜಿಲ್ಲಾಸ್ಪತ್ರೆಯ ಸಮುದಾಯ ವಾಚನಾಲಯದ ಎರಡನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ‘ ವೆನ್ಲಾಕ್ ಆಸ್ಪತ್ರೆಯಲ್ಲಿ ರೆಡ್‌ಕ್ರಾಸ್ ಸಂಸ್ಥೆ, ಜಿಲ್ಲಾ ಪತ್ರಕರ್ತರ ಸಂಘ ಸಹಿತ ವಿವಿಧ ಸಂಘ ಸಂಸ್ಥೆಗಳು ಮುತುವರ್ಜಿ ವಹಿಸಿ ಸಮುದಾಯ ವಾಚನಾಲಯ ಸೇವೆ ಒದಗಿಸಿರುವುದು ರಾಜ್ಯಕ್ಕೆ ಮಾದರಿಯಾಗಿದೆ ಎಂದರು.ಆರೋಗ್ಯ ಸಚಿವನಾಗಿದ್ದ ಸಂದರ್ಭದಲ್ಲಿ ವೆನ್ಲಾಕ್ ಆಸ್ಪತ್ರೆಯ ಕೊರತೆ ನಿವಾರಣೆಗೆ ಸಾಕಷ್ಟು ಶ್ರಮಿಸಿದ್ದೇನೆ. ಖಾಸಗಿ ಮೆಡಿಕಲ್ ಕಾಲೇಜ್ ಆಸ್ಪತ್ರೆಗಳಿಗೆ ಸಮನಾದ ಸೇವೆಯನ್ನು ಇಂದು ವೆನ್ಲಾಕ್ ಆಸ್ಪತ್ರೆ ನೀಡುತ್ತಿದೆ. ನೆರೆಯ 7-8 ಜಿಲ್ಲೆಗಳ ರೋಗಿಗಳು ರೋಗಿಗಳು ಚಿಕಿತ್ಸೆಗೆ ವೆನ್ಲಾಕ್ ಆಸ್ಪತ್ರೆಗೆ ಬರುತ್ತಿದ್ದಾರೆ. ರೋಗಿಗಳು ಮತ್ತು ಅವರ ಸಹಾಯಕರಿಗೆ ವಾಚನಾಲಯ ಆರಂಭಿಸಿರುವುದು ಶ್ಲಾಘನೀಯ. ಈ ಕೇಂದ್ರವನ್ನುಇನ್ನಷ್ಟು ಸುವ್ಯವಸ್ಥಿತಗೊಳಿಸಲು ಮಾಸ್ಟರ್ ಪ್ಲಾನ್ ಸಿದ್ದ ಪಡಿಸುವ ಅಗತ್ಯ ಇದೆ ಎಂದು ಯು.ಟಿ.ಖಾದರ್ ಹೇಳಿದರು.ವೆನ್ಲಾಕ್ ಲಯನ್ಸ್ ಲಿಂಬ್ ಸೆಂಟರ್‌ನ ಸಂಚಾಲಕ ಡಾ.ಕೆ.ಆರ್.ಕಾಮತ್ ಮಾತನಾಡಿ ‘ವಿವಿಧ ಕಾಲೇಜುಗಳ ಯುವ ರೆಡ್‌ಕ್ರಾಸ್ ವಿದ್ಯಾರ್ಥಿ ಗಳಿಗೆ ವೆನ್ಲಾಕ್‌ನ ಸಮುದಾಯ ಸೇವಾ ಕೇಂದ್ರದ ಮೂಲಕ ಪ್ರತಿ ವಾರ ತರಬೇತಿ ನೀಡಲಾಗುತ್ತಿದೆ. ಪ್ರತಿ ತಿಂಗಳು ಸುಮಾರು 6ಸಾವಿರ ಮಂದಿ ವಾಚನಾಲಯ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.ವೆನ್ಲಾಕ್ ಜಿಲ್ಲಾಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ. ಜೆಸಿಂತಾ ಡಿಸೋಜ,ಆರ್‌ಎಂಒ ಡಾ.ಸುಧಾಕರ್, ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಅಧ್ಯಕ್ಷ ಸಿಎ ಶಾಂತಾರಾಮ ಶೆಟ್ಟಿ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ್ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಖಾದರ್ ಷಾ,ವೆನ್ಲಾಕ್ ಲಯನ್ಸ್ ಲಿಂಬ್ ಸೆಂಟರ್‌ನ ವ್ಯವಸ್ಥಾಪಕ ಸುರೇಶ್ ಶೆಟ್ಟಿ, ರೆಡ್‌ಕ್ರಾಸ್ ಸೊಸೈಟಿಯ ಕಾರ್ಯದರ್ಶಿ ಕಿಶೋರ್‌ಚಂದ್ರ ಹೆಗ್ಡೆ, ಸಲಹೆಗಾರರಾದ ಪ್ರಭಾಕರ ಶರ್ಮ, ರವೀಂದ್ರನಾಥ ಉಚ್ಚಿಲ್, ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ಮಹಮ್ಮದ್ ಆರಿಫ್ ಪಡುಬಿದ್ರೆ,ರಾಜೇಶ್ ದಡ್ಡಂಗಡಿ ಉಪಸ್ಥಿತರಿದ್ದರು. ಇದೇ ಸಂದರ್ಭ ಯು.ಟಿ.ಖಾದರ್ ಅವರು ವಾಚನಾಲಯಕ್ಕೆ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದರು.ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸ್ವಾಗತಿಸಿ, ಕೋಶಾಧಿಕಾರಿ ಪುಷ್ಪರಾಜ್.ಬಿ.ಎನ್. ವಂದಿಸಿದರು. ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ ಕಾರ್ಯಕ್ರಮ ನಿರೂಪಿಸಿದರು.

ಕರ್ನಾಟಕ ವಾರ್ತೆಗಳು

ಬೆಂಗಳೂರು ದೆಹಲಿ ಪಬ್ಲಿಕ್ ಸ್ಕೂಲ್ ನಲ್ಲಿ ಅಂತರ್ ಶಾಲಾ “ಮಾದರಿ ಸಂಸತ್ತು” ಸ್ಪರ್ಧೆಗೆ ಚಾಲನೆ. ಸ್ಪೀಕರ್ ಯು. ಟಿ. ಖಾದರ್ ರವರ ವಿದ್ಯಾರ್ಥಿ ನಾಯಕತ್ವ ಬೆಳವಣಿಗೆಯ ಆಶಯಕ್ಕೆ ಇಂತಹ ಸ್ಪರ್ಧೆಗಳು ಪೂರಕ : ಮೀಫ್ ಉಪಾಧ್ಯಕ್ಷ ಕೆ. ಎಂ. ಮುಸ್ತಫ ಸುಳ್ಯ

ಬೆಂಗಳೂರು ದೆಹಲಿ ಸ್ಕೂಲ್ ನಲ್ಲಿ ಎರಡು ದಿನಗಳ ಅಂತರ್ ಶಾಲಾ ಮಾದರಿ ಸಂಸತ್ತು ಸ್ಪರ್ಧೆ ಏರ್ಪಡಿಸಲಾಗಿತ್ತು. ಸ್ಪರ್ಧೆಗೆ ಚಾಲನೆ ನೀಡಿದ ಮೀಫ್ ಉಪಾಧ್ಯಕ್ಷ ಮಾತನಾಡಿ ಯು. ಟಿ. ಖಾದರ್ ರವರು ಕರ್ನಾಟಕ ವಿಧಾನ ಸಭೆಯ ಸ್ಪೀಕರ್ ಆದ ನಂತರ ತನ್ನ ಪರಿಕಲ್ಪನೆ ಯಂತೆ ನೂರಾರು ವಿದ್ಯಾ ಸಂಸ್ಥೆಗಳ ಸಾವಿರಾರು ವಿದ್ಯಾರ್ಥಿ ಗಳು ಅಧಿವೇಶನ ವೀಕ್ಷಣೆ ಮಾಡಿರುವುದು ಇಂತಹ ಕಾರ್ಯಕ್ರಮ ಗಳಿಗೆ ಪ್ರೇರಣೆ ಎಂದರು.ಸಂಪನ್ಮೂಲ ವ್ಯಕ್ತಿ ಅಡ್ವೋಕೇಟ್ ಹರೀಶ್ ರವರು ಮಾತನಾಡಿ ಚರ್ಚೆ ಯ ಸ್ವರೂಪಗಳು ರಚನಾ ತ್ಮಕ ವಾಗಿರಲಿ ಎಂದರು.ವಿದ್ಯಾ ಸಂಸ್ಥೆಯ ಉಪ ಪ್ರಾoಶುಪಾಲೆ ಪ್ರೀತಿ, ಕಾರ್ಯಕ್ರಮ ಸಂಯೋಜಕರುಗಳಾದ ಸೋಶಿಯಲ್ ಸಯನ್ಸ್ ಮುಖ್ಯಸ್ಥ ಚಂದ್ರಶೇಖರ್ ಶ್ರೀಮತಿ ಹಂಸ ಮೊದಲಾದವರು ಉಪಸ್ಥಿತರಿದ್ದರುತೀರ್ಪು ಗಾರರಾಗಿ ಆನಂದ್ ಮತ್ತು ಹರ್ಷಿತ ಭಾಗವಹಿಸಿದ್ದರು. ಕಾರ್ಯಕ್ರಮದ ಪ್ರಮುಖಾoಶಗಳುಪ್ರಾರಂಭದಲ್ಲಿ ಮಾದರಿ ಸಂಸತ್ತಿನ ರಾಷ್ಟ್ರಪತಿಗಳು ಶಿಷ್ಟಾಚಾರದಂತೆ ಆಗಮಿಸಿ ಅಧಿವೇಶನಕ್ಕೆ ಆಗಮಿಸಿದಾ ರಾಷ್ಟ್ರಗೀತೆಯೊಂದಿಗೆ ಪ್ರಾರಂಭಿಸಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿ ನಿರ್ಗಮಿಸಿದ ನಂತರ ಮಾದರಿ ಲೋಕಸಭೆ ಅಧಿವೇಶನ ಪ್ರಾರಂಭ ಗೊಂಡಿತು.ಆಡಳಿತ ಪಕ್ಷದ ಸದಸ್ಯರಿಂದ ಸರ್ಕಾರ ದ ಜನಪರ ಕಾರ್ಯಕ್ರಮ ಗಳ ಪ್ರಕಟಣೆ ಪ್ರತಿಪಕ್ಷದ ಸದಸ್ಯರು ಶಿಕ್ಷಣ, ಫಸಲ್ ಭೀಮಾ ಯೋಜನೆ, ತನಿಖಾ ಸಂಸ್ಥೆಗಳಲ್ಲಿ ಹಸ್ತಕ್ಷೇಪ, ಆರ್ಥಿಕತೆ, ಉದ್ಯೋಗ ವಕಾಶ,ಮೊದಲಾದ ವಿಷಯಗಳಲ್ಲಿ ಕೇಳಿದ ಪ್ರಶ್ನೆ ಗಳಿಗೆ ಆಡಳಿತ ಪಕ್ಷದ ಕೌನ್ಸಿಲ್ ಮಿನಿಸ್ಟರ್ ಗಳು ಉತ್ತರ ನೀಡಿದರು.ಆತ್ಮ ನಿರ್ಭರ, ಮೇಕ್ ಇನ್ ಇಂಡಿಯಾ, ಅಂತ್ಯೋದಯ ಅನ್ನ ಯೋಜನೆ ಮೊದಲಾದ ಜನ ಪರ ಕಾರ್ಯಕ್ರಮ ಗಳ ಬಗ್ಗೆ ವಿವರಿಸಲಾಯಿತು.

ಪ್ರಾದೇಶಿಕ ವಾರ್ತೆಗಳು

ವಿಶ್ವ ಹಿಂದೂ ಪರಿಷತ್ ಷಷ್ಠಿಪೂರ್ತಿ ಸಂಭ್ರಮ. ಹಿಂದೂ ಸಮಾವೇಶ, ಸಮ್ಮೇಳನ ಸಹಿತ ವಿವಿಧ ಕಾರ್ಯಕ್ರಮಗಳ ಆಯೋಜನೆ.

ಮಂಗಳೂರು: “ಭಾರತೀಯ ಧರ್ಮ, ಸಂಸ್ಕೃತಿ ಹಿಂದೂ ಜೀವನ ಮೌಲ್ಯಗಳು, ನಂಬಿಕೆ ಮತ್ತು ಸ್ವಾಭಿಮಾನವನ್ನುರಕ್ಷಿಸಲು ಪ್ರಾರಂಭಗೊಂಡ ವಿಶ್ವದ ಅತೀ ದೊಡ್ಡ ಸಂಘಟನೆ ವಿಶ್ವ ಹಿಂದೂ ಪರಿಷತ್. 1964 ಆಗಸ್ಟ್ 29ರಂದು ಮುಂಬೈಯ ಸಾಂದೀಪಿನಿ ಆಶ್ರಮದಲ್ಲಿ ಪ್ರಾರಂಭಗೊಂಡ ವಿಶ್ವ ಹಿಂದೂ ಪರಿಷತ್ತಿಗೆ ಈ ವರ್ಷ ಷಷ್ಠಿಪೂರ್ತಿ ಸಂಭ್ರಮ. ಕಳೆದ 60 ವರ್ಷಗಳಲ್ಲಿ ಜಗತ್ತಿನ ಹಿಂದುಗಳನ್ನು ಸಂಘಟಿಸುವ ಕಾರ್ಯದೊಂದಿಗೆ ಹಿಂದೂ ಧರ್ಮದ ಆಚರಣೆ, ಪ್ರಚಾರ, ರಕ್ಷಣೆಯ ಉದ್ದೇಶವನ್ನು ಇಟ್ಟುಕೊಂಡು, ಕೆಲಸಕಾರ್ಯಗಳನ್ನು ಮಾಡುತ್ತ ಬಂದಿದೆ“ ಎಂದು ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಹೇಳಿದರು.”ಭಾರತ ಮಾತ್ರವಲ್ಲದೆ ಅಮೇರಿಕ,ಕನಡಾ, ಆಫ್ರಿಕಾ, ಇಂಗ್ಲೆಂಡ್, ಹಂಗೇರಿ, ಜರ್ಮನಿ, ಫ್ರಾನ್ಸ್ ಕಿನ್ಯ, ಫಿಜಿ, ಶ್ರೀಲಂಕಾ, ಇಂಡೋನೇಷ್ಯಾ, ಮಾರಿಷಸ್, ಥಾಯ್ಲೆಾಂಡ್, ಮಲೇಷಿಯಾ, ಜಪಾನ್ ಸೇರಿದಂತೆ 50 ಕ್ಕೂ ಹೆಚ್ಚು ದೇಶಗಳಲ್ಲಿ ವಿಶ್ವ ಹಿಂದೂ ಪರಿಷತ್ತಿನ ಕಾರ್ಯ ನಡೆಯುತ್ತಿದೆ. ಮೊದಲನೆಯ ರಾಷ್ಟ್ರೀಯ ಅಧ್ಯಕ್ಷರಾದ ಮೈಸೂರಿನ ಮಹಾರಾಜರಾದ ಜಯಚಾಮರಾಜ ಒಡೆಯರ್ಇವರ ನೇತೃತ್ವದೊಂದಿಗೆ ದೇಶದಲ್ಲಿ ವಿವಿಧ ಮತಪಂಥಗಳ ಪೂಜ್ಯ ಸಾಧು ಸಂತರು, ಧರ್ಮಾಚಾರ್ಯರು, ಧಾರ್ಮಿಕ ರಾಷ್ಟ್ರೀಯ ಚಿಂತಕರು, ವಿದ್ವಾಂಸರು ಒಳಗೊಂಡ ಮಾರ್ಗದರ್ಶಕ ಮಂಡಳಿಯ ಮಾರ್ಗದರ್ಶನದ ಮೂಲಕ ಪ್ರಾರಂಭಗೊಂಡ ವಿಶ್ವ ಹಿಂದೂ ಪರಿಷದ್ ಹಲವಾರು ಕಾರ್ಯಕ್ರಮಗಳನ್ನು ಕೈಗೆತ್ತಿಕೊಂಡು ಅದನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ, ಇದೀಗ ನಮ್ಮ ದೇಶದ ಸುಮಾರು 90 ಸಾವಿರಕ್ಕೂ ಹೆಚ್ಚು ಸ್ಥಾನಗಳಲ್ಲಿ ವಿಶ್ವ ಹಿಂದೂ ಪರಿಷತ್ ಸಮಿತಿಗಳ ಮೂಲಕ ಕಾರ್ಯ ಚಟುವಟಿಕೆಗಳನ್ನು ನಡೆಸುತ್ತಿದೆ. ಗೋವುಗಳ ರಕ್ಷಣೆಯ ಜೊತೆಗೆ ಪಾಲನೆಯನ್ನು ಮಾಡಿಕೊಂಡು ಬರುತ್ತಿದೆ. ಅಯೋಧ್ಯೆ ಶ್ರೀರಾಮ ಜನ್ಮಭೂಮಿ ಆಂದೋಲನ, ಅಮರನಾಥ, ರಾಮಸೇತು, ತಿರುಪತಿ ಉಳಿಸಿ ಆಂದೋಲನ, ಕರ್ನಾಟಕದ ಪವಿತ್ರ ಕ್ಷೇತ್ರ ದತ್ತಪೀಠದ ಮುಕ್ತಿಗೋಸ್ಕರ ಹೋರಾಟವನ್ನು ಕೈಗೆತ್ತಿಕೊಂಡು ಶ್ರದ್ಧಾಕೇಂದ್ರಗಳನ್ನು ಉಳಿಸುವುದರಲ್ಲಿ ಯಶಸ್ವಿಯಾಗಿದೆ. ಬಜರಂಗದಳ, ದುರ್ಗಾವಾಹಿನಿ ಮುಖಾಂತರ ಯುವಕ ಯುವತಿಯರಲ್ಲಿ ರಾಷ್ಟ್ರ ಭಕ್ತಿಯನ್ನು ಮೂಡಿಸಿ, ಅವರನ್ನು ರಾಷ್ಟ್ರರಕ್ಷಣೆಯ ಕಾರ್ಯದಲ್ಲಿ ಕೈಜೋಡಿಸುವಂತೆ ಮಾಡಿದೆ. ಮಾತೃಶಕ್ತಿ ಮೂಲಕ ಮಹಿಳಾಕಾರ್ಯ, ಬಾಲಸಂಸ್ಕಾರ, ಸತ್ಸಂಗಗಳ ಮೂಲಕ ಸಂಸ್ಕಾರ ಕೇಂದ್ರಗಳು ಪ್ರಾರಂಭಗೊಂಡಿದೆ“ ಎಂದವರು ಹೇಳಿದರು.ಬಳಿಕ ಮಾತಾಡಿದ ವಿಭಾಗ ಸಹ ಕಾರ್ಯದರ್ಶಿ ಶಿವಾನಂದ ಮೆಂಡನ್ ಅವರು, ”ಷಷ್ಠಿಪೂರ್ತಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಆಗಸ್ಟ್ 25ರಿಂದ ಸೆಪ್ಟೆಂಬರ್ 1ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯ 21 ಪ್ರಖಂಡಗಳಲ್ಲಿ ಹಿಂದೂ ಸಮಾವೇಶ, ಸಮ್ಮೇಳನ, ಶೋಭಾಯಾತ್ರೆ ಮೆರವಣಿಗೆ, ಕ್ರೀಡಾಕೂಟಗಳು, ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಹಿಂದೂ ಬಾಂಧವರು ಪಾಲ್ಗೊಳ್ಳುವ ನಿರೀಕ್ಷೆಯಿದೆ“ ಎಂದರು.ಪತ್ರಿಕಾಗೋಷ್ಟಿಯಲ್ಲಿ ಜಿಲ್ಲಾಧ್ಯಕ್ಷ ಹೆಚ್.ಕೆ.ಪುರುಷೋತ್ತಮ್, ಜಿಲ್ಲಾ ಉಪಾಧ್ಯಕ್ಷ ಮನೋಹರ್ ಸುವರ್ಣ, ಜಿಲ್ಲಾ ಕಾರ್ಯದರ್ಶಿ ರವಿ ಅಸೈಗೋಳಿ, ಪುನೀತ್ ಅತ್ತಾವರ, ಭುಜಂಗ ಕುಲಾಲ್, ಗುರುಪ್ರಸಾದ್ ಉಳ್ಳಾಲ್, ರವಿ ಕಡೆಗೋಳಿ ಮತ್ತಿತರರು ಉಪಸ್ಥಿತರಿದ್ದರು.

Scroll to Top