Author name: editor

ಪ್ರಾದೇಶಿಕ ವಾರ್ತೆಗಳು

ಚಿನ್ನ ಸೇರಿದಂತೆ ಖನಿಜ ಸಂಪತ್ತಿನ ಅಗರ, ವನ್ಯ ಜೀವಿಗಳ ನೆಚ್ಚಿನ ತಾಣ, ಪ್ರವಾಸಿಗರ ಸ್ವರ್ಗ “ಕಪ್ಪತ್ತಗುಡ್ಡ” ರಕ್ಷಿಸೋಣ ಅಭಿಯಾನಕ್ಕೆ ಚಾಲನೆ

ಗದಗ : ತೋಂಟದಾರ್ಯ ಮಠದ ಶ್ರೀಗಳಾದ ಡಾ.ಸಿದ್ದರಾಮ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದಂತಹ ಪತ್ರಕರ್ತರಿಂದ ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೆ ಪ್ರಖ್ಯಾತವಾಗಿರುವ ಗದಗ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣ ಕಪ್ಪತ್ತಗುಡ್ಡ ಉಳಿಸಿ, ರಕ್ಷಿಸೋಣ ಎಂಬ ಅಭಿಯಾನ ಆಗಸ್ಟ್ 11ರಂದು ಬಾನುವಾರ ಕಪ್ಪತ್ತಗುಡ್ಡದ ಮೇಲೆ ನಡೆಯಿತು.ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೆ ಪ್ರಖ್ಯಾತವಾಗಿರುವ ಕಪ್ಪತಗುಡ್ಡ ಗದಗ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣವಾಗಿದೆ. ಪ್ರವಾಸಿಗರನ್ನು ಕೈಬೀಸಿ ಕರೆವ ಕಪ್ಪತ್ತಗುಡ್ಡಕ್ಕೆ ದಿನನಿತ್ಯ ನೂರಾರು ಪ್ರವಾಸಿಗರು ಆಗಮಿಸಿ ಇಲ್ಲಿನ ಪ್ರಕೃತಿ ಸೌಂದರ್ಯಕ್ಕೆ ಮೈಮರೆಯುತ್ತಾರೆ. ನೈಋತ್ಯ ಮುಂಗಾರು ಮಳೆ ಅವಧಿಯಲ್ಲಿ ಸಾವಿರಾರು ಜನರು ಕಪ್ಪತಗುಡ್ಡ ಪ್ರವಾಸಕ್ಕೆ ಹೋಗುತ್ತಾರೆ. ಕಪ್ಪತಗುಡ್ಡ ಚಾರಣಕ್ಕೆ ನೂರಾರು ಮಂದಿ ಆಗಮಿಸುತ್ತಿದ್ದು, ಇದು ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗಿದೆ.ಗದಗ ಜಿಲ್ಲೆಯಲ್ಲಿ ಉತ್ತರ ಕರ್ನಾಟಕದ ಪಶ್ಚಿಮಘಟ್ಟ ಮತ್ತು ಮಧ್ಯ ಕರ್ನಾಟಕದ ಹೃದಯ ಭಾಗ ಎಂದು ಖ್ಯಾತಿ ಪಡೆದ ಗದಗ ತಾಲೂಕು ಬಿಂಕದ ಕಟ್ಟೆ ಗ್ರಾಮದಿಂದ ಮುಂಡರಗಿ ತಾಲೂಕಿನ ಶಿಂಗಟಾಲೂರ ಕ್ಷೇತ್ರ – ಬಳ್ಳಾರಿ ಜಿಲ್ಲಾ ಹೋವಿನ ಹಡಗಲಿಯವರೆಗೆ ಉತ್ತರದಿಂದ ದಕ್ಷಿಣಕ್ಕೆ 80 ಸಾವಿರ ವಿಸ್ತಿರ್ಣದ 63 ಕಿಲೋ ಮೀಟರ್ ಉದ್ದದ ಸುತ್ತಲೂ ಹಸಿರಿನಿಂದ ಕೂಡಿರುವ ಚಿಕ್ಕ-ದೊಡ್ಡ ಗುಡ್ಡದ ಸಾಲುಗಳೇ ಕಪ್ಪತ್ತಗುಡ್ಡಗಳು. ಡೋಣಿ ಗ್ರಾಮದಿಂದ 4 ಕಿ.ಮೀ ಗಳಷ್ಟು ಅಂತರದಲ್ಲಿ ಬೃಹದಾಕಾರದ ಶಿಖರಗಳನ್ನೊಳಗೊಂಡು ಬೆಟ್ಟಗಳ ಸಮ್ಮುಚ್ಛಯವಾದ ಕಪ್ಪತಗುಡ್ಡ ಖನಿಜ ಸಂಪತ್ತಿನ ಅಗರ. ಈ ಮಣ್ಣಿನಲ್ಲಿ ಚಿನ್ನವಿದೆ. ಮ್ಯಾಂಗನೀಜ್ , ಕಬ್ಬಿಣದ ಅದಿರು, ತಾಮ್ರ, ಕ್ಯಾಲ್ಸಿಯಂ ಮುಂತಾದ 18 ಪ್ರಕರದ ಅಮೂಲ್ಯವಾದ ಖನಿಜ ಸಂಪತ್ತು ಇದೆ. ಇಂತಹ ಖನಿಜ ಭರಿತ ಭೂಮಿಯಲ್ಲಿ 300ಕ್ಕೂ ಹೆಚ್ಚು ಜಾತಿಯ ಔಷಧಿ ಸಸ್ಯಗಳು ಇವೆ. ಇದನ್ನು ರಾಷ್ಟ್ರೀಯ ಅಯುರ್ವೇದಿಕ ಸಂಶೋಧನ ಸಂಸ್ಥೆ ಜಯನಗರ, ಬೆಂಗಳೂರು ಇದು ವರದಿ ಮಾಡಿದೆ. ಆದರೇ ಸ್ಥಳಯರ ಪ್ರಕಾರ ಇಲ್ಲಿ 800ಕ್ಕೂ ಹೆಚ್ಚು ಜಾತಿಯ ಔಷಧಿ ಸಸ್ಯಗಳು ಇವೆ ಎನ್ನಲಾಗಿದೆ.ಮಾತ್ರವಲ್ಲದೇ ಕೆರೆಗಳು, ಹಳ್ಳಗಳು, ಝರಿಗಳು, ಕೊಳ್ಳಗಳು ಇಲ್ಲಿ ಜನ್ಮ ತಾಳಿದ್ದು, ಇವುಗಳು ಅಂತ್ಯದಲ್ಲಿ ತುಂಗಭದ್ರ ನದಿ ಸೇರುತ್ತವೆ. ಈ ಗುಡ್ಡದಲ್ಲಿ ವಿವಿಧ ಪ್ರಭೇಧದ ಪ್ರಾಣಿ ಪಕ್ಷಿಗಳು ಸೇರಿದಂತೆ ಕೃಷ್ಣ ಮೃಗ, ಕಾಡುಕುರಿ, ಚುಕ್ಕೆ ಜಿಂಕೆ, ಕರಡಿ, ತೋಳ, ನರಿ, ಕತ್ತೆ ಕಿರುಬ, ಕಾಡ ಬೆಕ್ಕು, ಈ ರೀತಿ ಅನೇಕ ರೀತಿಯ ವನ್ಯ ಜೀವಿಗಳು ಇವೆ. ಮಾತ್ರವಲ್ಲದೇ ಈ ಭಾಗದಲ್ಲಿ 700 ರಿಂದ 1000 ವರೆಗೆ ನವಿಲುಗಳು, ಹೈನಾ, ಸಾರಾಂಗ, ಮತ್ತು ಅಸಂಖ್ಯಾತ ದನಕರುಗಳು, ಕುರಿಗಳು ಇರುತ್ತವೆ. ಮುಖ್ಯವಾಗಿ ಇಲ್ಲಿ ವಿದ್ಯುತ್ ಇದೆ. ಇಡೀ ರಾಜ್ಯದಲ್ಲೇ ಈ ಗುಡ್ಡದಲ್ಲಿ ಮಾತ್ರ ಶುದ್ಧ ಗಾಳಿ ಇದೆ ಎಂದು ಪ್ರಮಾಣೀಕರಿಸಲಾಗಿದೆ.ಈಗಾಗಲೇ ಈ ಗುಡ್ಡದಲ್ಲಿ ಕೆಲವು ವರ್ಷಗಳ ಹಿಂದೆ ವಿಶಾಲವಾದ ಸ್ಥಳದಲ್ಲಿ ಮೈನಿಂಗ್ ನಡೆಸಲಾಗಿದ್ದು, ಇದರಿಂದ ಈ ಪ್ರದೇಶದ ಗುಡ್ಡವೇ ಕುಸಿದು ಬೀಳುವ ಸಾಧ್ಯತೆಗಳು ಇವೆ. ಇಂತಹ ಕಪ್ಪತ್ತಗುಡ್ಡದ ಮೇಲೆ ಇದೀಗ ಮತ್ತೊಮ್ಮೆ ದುಷ್ಕರ್ಮಿಗಳ ಕಣ್ಣು ಬಿದ್ದಿದ್ದು, ಮುಖ್ಯವಾಗಿ ರಾಜಕೀಯ ಮುಖಂಡರು ಹಾಗೂ ಕೆಲವೊಂದು ಕಂಪನಿಗಳು ಈ ಗುಡ್ಡವನ್ನು ತಮ್ಮ ವಶಕ್ಕೆ ಪಡೆದು ಇಲ್ಲಿರುವ ಖನಿಜ ಸಂಪತ್ತುಗಳನ್ನು ಲೂಟಿ ಮಾಡಿ ಈ ಅಪರೂಪದ ಗುಡ್ಡವನ್ನೇ ನಾಶ ಪಡಿಸಲು ಯತ್ನಿಸುತ್ತಿರುವ ಬಗ್ಗೆ ಮಾಹಿತಿಗಳು ಲಭಿಸಿದ್ದು, ಈ ಹಿನ್ನೆಲೆಯಲ್ಲಿ ತೋಂಟದಾರ್ಯ ಮಠದ ಶ್ರೀಗಳಾದ ಡಾ.ಸಿದ್ದರಾಮ ಸ್ವಾಮಿಜಿಯವರ ಮಾರ್ಗದರ್ಶನದಲ್ಲಿ ಕರ್ನಾಟಕ ಪತ್ರಕರ್ತರ ಸಂಘ ( KJU)ದ ಆಶ್ರಯದಲ್ಲಿ ಗದಗ ಜಿಲ್ಲಾ ಅರಣ್ಯ ಇಲಾಖೆಯ ಸಂಯೋಗದೊಂದಿಗೆ ಕಪ್ಪತ್ತಗುಡ್ಡ ಉಳಿಸಿ, ರಕ್ಷಿಸೋಣ ಎಂಬ ಅಭಿಯಾನ ಆಗಸ್ಟ್ 11ರಂದು ಬಾನುವಾರ ಕಪ್ಪತ್ತಗುಡ್ಡದ ಮೇಲೆ ನಡೆಯಿತು.ಇದೇ ವೇಳೆ ಅಗಮಿಸಿದಂತಹ ಎಲ್ಲಾ ಪತ್ರಕರ್ತರು ಕಪ್ಪತ್ತಗುಡ್ಡದ ಮೇಲೆ ಮಾನವ ಸರಪಣಿ ನಿರ್ಮಿಸುವ ಮೂಲಕ ಕಪ್ಪತ್ತಗುಡ್ಡ ರಕ್ಷಣೆಗೆ ತಮ್ಮ ಬೆಂಬಲವಿದೆ ಎಂಬ ಸ್ಪಷ್ಟ ಸಂದೇಶವನ್ನು ಸರ್ಕಾರಕ್ಕೆ ನೀಡಿದರು.ಈ ವೇಳೆ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ತೋಂಟದಾರ್ಯ ಮಠದ ಶ್ರೀಗಳಾದ ಡಾ.ಸಿದ್ದರಾಮ ಸ್ವಾಮಿಜಿಯವರು, ವಿವಿಧ ಜೀವ ವೈವಿಧ್ಯತೆ ಹಾಗೂ ಪರಿಸರ ವೈವಿಧ್ಯತೆಯನ್ನು ಹೊಂದಿರುವ ಕಪ್ಪತ್ ಗುಡ್ಡವನ್ನು ರಕ್ಷಿಸಬೇಕಾಗಿರುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಕರ್ನಾಟಕ ಪತ್ರಕರ್ತರ ಸಂಘದಿಂದ ಇಂದು ಕಪ್ಪತ್ ಗುಡ್ಡ ವೀಕ್ಷಣೆ ಹಾಗೂ ಕಪ್ಪತ್ ಗುಡ್ಡದ ರಕ್ಷಣೆಯ ಕುರಿತಂತೆ ಆಗಮಿಸಿದಕ್ಕೆ ತುಂಬಾ ಸಂತೋಷವಾಗಿದೆ ಎಂದು ಪತ್ರಕರ್ತರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.ಕಪ್ಪತ ಗುಡ್ಡವು ಪರಿಸರ ವೈವಿಧ್ಯತೆಯಿಂದ ಕೂಡಿದ್ದು ಪರಿಸರವನ್ನು ಉಳಿಸಲು ನಾವೆಲ್ಲರೂ ಪಣತೊಡಬೇಕು. ಪರಿಸರವನ್ನು ಉಳಿಸೋಣ ವನ್ಯಜೀವಿಗಳನ್ನು ಸಂರಕ್ಷಿಸೋಣ. ಕಪ್ಪತ್ ಗುಡ್ಡದಲ್ಲಿ ವಿಂಡ್ ಫ್ಯಾನುಗಳು ಬಂದಿರುವುದರಿಂದ ಹಾಗೂ ಗಣಿಗಾರಿಕೆಗಳು ನಡೆಯುತ್ತಿರುವುದರಿಂದ ಇಲ್ಲಿನ ಪರಿಸರ ಹಾಳಾಗುತ್ತಿದೆ ಇದನ್ನು ಗಮನಿಸಿ ಇಲ್ಲಿಯ ಪರಿಸರವನ್ನು ಹಾಳು ಮಾಡದಂತೆ ಕಾಪಾಡೋಣ. ಇಲ್ಲಿನ ಜನರು ಸಹ ಅರಣ್ಯವನ್ನು ನಂಬಿ ಜೀವನವನ್ನು ಸಾಗಿಸುತ್ತಾ ಅವಲಂಬಿಸಿದ್ದಾರೆ. ಆದ್ದರಿಂದ ಪತ್ರಕರ್ತರಾದ ನೀವು ನೆಲ ಜಲ ರಕ್ಷಣೆಗಾಗಿ ಜೀವದ ಹಂಗು ತೊರೆದು ಕೆಲಸವನ್ನು ಮಾಡುತ್ತೀರಿ. ಇಂತಹ ಕಪ್ಪತ ಗುಡ್ಡವನ್ನು ಉಳಿಸಿ ಬೆಳೆಸಲು ತಮ್ಮ ಸಹಕಾರ ಅಗತ್ಯವಾಗಿದೆ ಎಂದು ಹೇಳಿದರು.ಕರ್ನಾಟಕ ಪತ್ರಕರ್ತರ ಸಂಘದ ಅಧ್ಯಕ್ಷರಾದ ಮುರುಗೇಶ್ ಶಿವಪೂಜೆ, ಗದಗ್ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷರಾದ ರಮೇಶ್ ಭಜಂತ್ರಿ, ಕರ್ನಾಟಕ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುದೇಶ್ ಕುಮಾರ್, ಕಾರ್ಯದರ್ಶಿ ಸತೀಶ್ ಕಾಪಿಕಾಡ್, ಅರಣ್ಯ ಇಲಾಖೆಯ ಅಧಿಕಾರಿಗಳು, ಕರ್ನಾಟಕ ಪತ್ರಕರ್ತರ ಸಂಘದ ಪದಾಧಿಕಾರಿಗಳು, ವಿವಿಧ ಜಿಲ್ಲೆಯ ವರದಿಗಾರರು, ಸಂಪಾದಕರು, ಸಿಬ್ಬಂದಿಗಳು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ 85ಕ್ಕೂ ಹೆಚ್ಚು ಪತ್ರಕರ್ತರು ಈ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.ವರದಿ ಹಾಗೂ ಚಿತ್ರ: ಸತೀಶ್ ಕಾಪಿಕಾಡ್

ಹೊರ ರಾಜ್ಯ ವಾರ್ತೆಗಳು

ಗೋಪಾಲಕೃಷ್ಣ ಅಸ್ರಣ್ಣರ ಸಂಸ್ಮರಣ ಕಾರ್ಯಕ್ರಮ. ಐಕಳ ಹರೀಶ್ ಶೆಟ್ಟಿಯವರಿಗೆ ಸನ್ಮಾನ

ಮುಂಬೈ: ಶ್ರೀ ಕ್ಷೇತ್ರ ಕಟೀಲಿನ ಗೋಪಾಲಕೃಷ್ಣ ಅಸ್ರಣ್ಣರ 24ನೇ ವರ್ಷದ ಸಂಸ್ಮರಣ ಕಾರ್ಯಕ್ರಮವು ಬಂಟರ ಸಂಘ ಮುಂಬೈಯ ಬಂಟರ ಭವನದಲ್ಲಿ ಶ್ರೀ ಕ್ಷೇತ್ರ ಕಟೀಲಿನ ಶ್ರೀ ಲಕ್ಷ್ಮೀನಾರಾಯಣ ಅಸ್ರಣ್ಣರ ದಿವ್ಯ ಉಪಸ್ಥಿತಿಯಲ್ಲಿ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ವಹಿಸಿದ್ದರು. ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿಯವರು ಉದ್ಘಾಟಿಸಿದರು.ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಕಟೀಲಿನ ಒಳಿತಿಗಾಗಿ ಶ್ರಮಿಸಿದ ಐಕಳ ಹರೀಶ್ ಶೆಟ್ಟಿಯವರನ್ನು ಶ್ರೀ ಲಕ್ಷ್ಮೀನಾರಾಯಣ ಅಸ್ರಣ್ಣರು ಗಣ್ಯರ ಉಪಸ್ಥಿತಿಯಲ್ಲಿ ಸನ್ಮಾನಿಸಿದರು. ಅಲ್ಲದೆ ಹಲವಾರು ಕಲಾವಿದರಿಗೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಹಾಗೂ “ಶ್ರೀ ದೇವಿ ಮಹಾತ್ಮೆ” ಯಕ್ಷಗಾನ ಬಯಲಾಟವು ಜರಗಿತು.ಈ ಸಂದರ್ಭದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ದಾನಿಗಳಾದ ಡಾ. ಆರ್. ಕೆ. ಶೆಟ್ಟಿ, ರತ್ನಾಕರ್ ಶೆಟ್ಟಿ ಮುಂಡ್ಕೂರು, ಕೋಶಾಧಿಕಾರಿ ಉಳ್ತೂರು ಮೋಹನದಾಸ್ ಶೆಟ್ಟಿ,ಪದ್ಮನಾಭ ಕಟೀಲು ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ಒಲಿಂಪಿಕ್ಸ್ ವಿಜೇತರನ್ನು ಅಭಿನಂದಿಸಿದ ಭಾರತೀಯ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿ ಬಿ. ಗುಣರಂಜನ್ ಶೆಟ್ಟಿ

ಪುತ್ತೂರು: ಪ್ಯಾರಿಸ್‌ನಲ್ಲಿ ನಡೆಯುತ್ತಿರುವ 2024ರ ಒಲಿಂಪಿಕ್ ಕ್ರೀಡಾಕೂಟದ 57 ಕೆ.ಜಿ. ಫ್ರೀ ಸ್ಟ್ರೈಲ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಭಾರತದ ಕುಸ್ತಿಪಟು ಅಮನ್ ಅವರನ್ನು ಭಾರತ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿಗಳಾದ ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿಯವರು ಭಾರತೀಯ ಕುಸ್ತಿ ಸಂಘದ ಅಧ್ಯಕ್ಷ ಸಂಜಯ್ ಸಿಂಗ್ ಅವರೊಂದಿಗೆ ಪ್ಯಾರಿಸ್ ಒಲಿಂಪಿಕ್ಸ್ ನ ಇಂಡಿಯಾ ಹೌಸ್‌ನಲ್ಲಿ ಅಭಿನಂದಿಸಿದರು. ಇವರೊಂದಿಗೆ ಪ್ಯಾರಿಸ್ ಒಲಿಂಪಿಕ್ಸ್ ಇಂಡಿಯಾ ಹೌಸ್‌ನಲ್ಲಿ ಬೆಳ್ಳಿ ಮತ್ತು ಕಂಚಿನ ಪದಕಗಳ ವಿಜೇತರಾದ ನೀರಜ್ ಚೋಪ್ರಾ, ಮನುಬಾಕರ್ ಮತ್ತು ಭಾರತೀಯ ಒಲಿಂಪಿಕ್ ಸಂಸ್ಥೆಯ ಅಧ್ಯಕ್ಷೆ ಪಿಟಿ ಉಷಾ ಅವರನ್ನು ಸನ್ಮಾನಿಸಿ ಗೌರವಿಸಿದರು.ಬಳಿಕ ಗುಣರಂಜನ್ ಶೆಟ್ಟಿಯವರು ರಿಪಬ್ಲಿಕ್ ಆಫ್ ಫ್ರಾನ್ಸ್ ನ ಭಾರತದ ರಾಯಭಾರಿ ಜಾವೇದ್ ಅಶ್ರಫ್ ಮತ್ತು ಜೆ.ಎಸ್.ಡಬ್ಲೂ ಗ್ರೂಫ್‌ನ ಬಿಸಿನೆಸ್ ಟೈಕೂನ್ ಪಾರ್ಥ್ ಜಿಂದಾಲ್ ಹಾಗೂ ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿ ಸದಸ್ಯೆ ಮತ್ತು ರಿಲಯನ್ಸ್ ಫೌಂಡೇಶನ್‌ನ ಅಧ್ಯಕ್ಷೆ ನೀತಾ ಅಂಬಾನಿ ಅವರನ್ನು ಭೇಟಿಯಾದರು.ಕರ್ನಾಟಕ ಕುಸ್ತಿ ಸಂಘದ ಉಪಾಧ್ಯಕ್ಷ ಪ್ರಸಾದ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜೆ.ಶ್ರೀನಿವಾಸ್, ಕಾರ್ಯದರ್ಶಿ ಕುಮಾರ್ ಜಯರಾಮ್ ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ಇನ್ನು ಶನಿವಾರ ಪೂರ್ತಿ ಶಾಲೆ ನಿರ್ಧಾರಕ್ಕೆ ಹೆತ್ತವರ ತೀವ್ರ ಅಸಮಾಧಾನ.

ವಿಶೇಷ ವರದಿ: ಡಾ. ಅಶೋಕ್ ಶೆಟ್ಟಿ ಬಿ. ಎನ್.ಮಂಗಳೂರು: ಈ ಮಳೆಗಾಲದಲ್ಲಿ 13 ರಜೆಗಳನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತ ಶಾಲೆ, ಕಾಲೇಜ್ ಗಳಿಗೆ ನೀಡಿದ್ದು, ಇದನ್ನು ಭರ್ತಿ ಮಾಡಲು ಶೈಕ್ಷಣಿಕ ಇಲಾಖೆ ಮುಂದಿನ 26 ಶನಿವಾರಗಳನ್ನು ದಿನವಿಡೀ ತರಗತಿ ನಡೆಸಲು ನಿರ್ಧರಿಸಿರುವ ಬಗ್ಗೆ ಸುದ್ದಿ ಬಂದಿದೆ. ಈ ಬಗ್ಗೆ ಮಕ್ಕಳ ಹೆತ್ತವರು ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ಲಯನ್ಸ್ ಕ್ಲಬ್ ಮಂಗಳೂರು ಸ್ಮಾರ್ಟ್ ಸಿಟಿಯಿಂದ ತುಳುನಾಡು ಪ್ರತಿಷ್ಠಾನದ ಅಧ್ಯಕ್ಷ ರಾಜೇಶ್ ಅಮೀನ್ ಮುಲ್ಕಿ ಅವರಿಗೆ ಸನ್ಮಾನ.

ಮಂಗಳೂರು: ಲಯನ್ಸ್ ಕ್ಲಬ್ ಮತ್ತು ಲಿಯೋ ಕ್ಲಬ್ ಮಂಗಳೂರು ಸ್ಮಾರ್ಟ್ ಸಿಟಿ ಹಾಗೂ ಲಯನ್ಸ್ ಕ್ಲಬ್ ಮಂಗಳೂರು ಮಿಡ್ ಟೌನ್ ನ 2024-25 ರ ಸಾಲಿನ ಪದಾಧಿಕಾರಿಗಳ ಮತ್ತು ನೂತನ ಸದಸ್ಯರ ಪದಗ್ರಹಣ ಸಮಾರಂಭವು ಕದ್ರಿ ಪಾರ್ಕ್ ಹತ್ತಿರದ ಲಯನ್ಸ್ ಅಶೋಕ್ ಭವನದಲ್ಲಿ ಇತ್ತೀಚೆಗೆ ಜರಗಿತು. ಪದಗ್ರಹಣ ಸಮಾರಂಭದ ಅಧಿಕಾರಿಯಾಗಿ ಲಯನ್ಸ್ ಕ್ಲಬ್ ಅಂತರರಾಷ್ಟ್ರೀಯ 317ಡಿ ಯ ನಿಕಟಪೂರ್ವ ಜಿಲ್ಲಾ ರಾಜಪಾಲರಾದ ಲಯನ್ ಡಾ. ಮೇಲ್ವಿನ್ ಡಿಸೋಜಾ ಅವರು 2024-25 ರ ಸಾಲಿನ ನೂತನ ಪದಾಧಿಕಾರಿಗಳಿಗೆ ಮತ್ತು ನೂತನ ಸದಸ್ಯರಿಗೆ ಪ್ರಮಾಣ ವಚನ ತತ್ವ ಸಿದ್ಧಾಂತದ ಬಗ್ಗೆ ಬೋಧಿಸಿದರು. ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಮಂಗಳೂರು ಸ್ಮಾರ್ಟ್ ಸಿಟಿ ಅಧ್ಯಕ್ಷರಾದ ಜಿ ಕೆ ಹರಿಪ್ರಸಾದ ರೈ ಕಾರಮೊಗರು ಅವರು ವಹಿಸಿದ್ದರು. ವೇದಿಕೆಯಲ್ಲಿ ಲಯನ್ಸ್ ಜಿಲ್ಲಾ ಕ್ಯಾಬಿನೆಟ್ ಕಾರ್ಯದರ್ಶಿ ಗೀತಾ ರಾವ್, ಪ್ರಾಂತೀಯ ಅಧ್ಯಕ್ಷ ವೇಣಿ ಮರೋಳಿ. ಗುರುಪೀತ ಆಳ್ವ ವಲಯ ಅಧ್ಯಕ್ಷ ಚಂದ್ರಕಲ ರಾವ್ ಉಪಸ್ಥಿತರಿದ್ದರು ಕಾರ್ಯಕ್ರಮದ ಸ್ವಾಗತವನ್ನು ವಿಜಯಕುಮಾರ್ ಶೆಟ್ಟಿ ಸ್ವಾಗತಿಸಿ ವಿಮಲಾ ತುಳಸಿ ರಾಜ್ ಧನ್ಯವಾದಗೈದರು.ಸನ್ಮಾನ: ಈ ಸಂದರ್ಭದಲ್ಲಿ ತುಳುನಾಡು ಪ್ರತಿಷ್ಠಾಪನದ ಅಧ್ಯಕ್ಷ, ಪತ್ರಕರ್ತ ರಾಜೇಶ್ ಅಮೀನ್ ಮುಲ್ಕಿ ಅವರನ್ನು ಸಮಾಜ ಸೇವೆಗಾಗಿ ಸನ್ಮಾನಿಸಲಾಯಿತು.

ಪ್ರಾದೇಶಿಕ ವಾರ್ತೆಗಳು

ವಿಶ್ವ ಬಂಟ ಪ್ರತಿಷ್ಠಾನ ಪ್ರಶಸ್ತಿ ಪ್ರದಾನ ಸಮಾರಂಭ. ಮೇಜರ್ ಜನರಲ್ ಸತೀಶ್ ಭಂಡಾರಿ ಅವರಿಗೆ ಎಮಿನೆಂಟ್ ಬಂಟ್ ಪರ್ಸನಾಲಿಟಿ ಅವಾರ್ಡ್

ಮಂಗಳೂರು: ಭಾರತೀಯ ಸೇನೆ ಇಂದು ಸಶಕ್ತವಾಗಿದ್ದು ಯಾವುದೇ ಶತ್ರುರಾಷ್ಟ್ರವನ್ನು ಬಗ್ಗು ಬಡಿಯಲು ಸಮರ್ಥವಾಗಿದೆ. ಸೇನಾ ಸಾಧನಗಳ ತಯಾರಿಯ ಸಂಶೋಧನೆ , ಅಭಿವೃದ್ಧಿ ಹಾಗೂ ಉತ್ಪಾದನೆಯಲ್ಲಿ ದೇಶ ಶೇ.75ರಷ್ಟು ಸ್ವಾವಲಂಬಿಯಾಗಿದೆ ಎಂದು ಮೇಜರ್ ಜನರಲ್ ಸತೀಶ್ ಭಂಡಾರಿ ಹೇಳಿದರು.ನಗರದ ಹೋಟೆಲ್ ಮೋತಿ ಮಹಲ್ ಸಭಾಂಗಣದಲ್ಲಿ ಶನಿವಾರ ನಡೆದ ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್‌ನ 28ನೇ ವಾರ್ಷಿಕ ಮಹಾಸಭೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಎಮಿನೆಂಟ್ ಬಂಟ್ ಪರ್ಸನಾಲಿಟಿ ಅವಾರ್ಡ್ ಸ್ವೀಕರಿಸಿ ಮಾತನಾಡಿದ ಅವರು ‘ಸೇನೆಯಲ್ಲಿ ಕರ್ತವ್ಯ ನಿರ್ವಹಿಸುವಾಗ ಸಹಜವಾಗಿಯೇ ಕಠಿಣ ಸವಾಲುಗಳನ್ನು ಎದುರಿಸಬೇಕಾಗುತ್ತಿದೆ. ಆದರೆ ದೇಶಕ್ಕಾಗಿ ಸೇವೆ ಸಲ್ಲಿಸಿದ ಅನುಭವ ಸದಾ ಸ್ಮರಣೀಯ ಎಂದರು.ಮಂಗಳೂರು ವಿ.ವಿ.ಯಿಂದ ಗೌರವ ಡಾಕ್ಟರೇಟ್ ಪುರಸ್ಕೃತರಾದ ಉದ್ಯಮಿ ಡಾ.ಕೆ.ಪ್ರಕಾಶ್ ಶೆಟ್ಟಿ ಅವರನ್ನು ಪ್ರತಿಷ್ಠಾನದವತಿಯಿಂದ ಸನ್ಮಾನಿಸಲಾಯಿತು. ಬಂಟ ಸಮಾಜದ ಹಿರಿಯರ ಸಾಧನೆಯಿಂದ ಪ್ರೇರಿತನಾಗಿ ನಾನು ಕೂಡಾ ಜೀವನದಲ್ಲಿ ಏನಾದರೂ ಸಾಧಿಸಬೇಕೆಂದು ಬಯಸಿದ್ದೆ. ಹಾದಿ ಕಠಿಣವಾಗಿತ್ತು. ಆದರೆ ಇಂದು ಕನಸು ನನಸಾಗಿದೆ. ಕೇವಲ ಅದೃಷ್ಟವನ್ನು ನಂಬಿದರೆ ಸಾಲದು ಅದನ್ನು ಸಾಧನೆಯಾಗಿ ಪರಿವರ್ತಿಸಬೇಕು ಎಂದು ಸನ್ಮಾನ ಸ್ವೀಕರಿಸಿದ ಡಾ.ಕೆ.ಪ್ರಕಾಶ್ ಶೆಟ್ಟಿ ಹೇಳಿದರು.ಯಕ್ಷಗಾನ ರಂಗದಲ್ಲಿ 55 ವರ್ಷ ಮಿಕ್ಕಿ ಸೇವೆ ಸಲ್ಲಿಸಿದ ಹಳ್ಳಾಡಿ ಜಯರಾಮ ಶೆಟ್ಟಿ ಅವರಿಗೆ ದಿ.ಡಿ.ಕೆ.ಚೌಟ ದತ್ತಿನಿಧಿಯಿಂದ 25 ಸಾವಿರ ರೂ.ನಗದು, ಫಲಕ ನೀಡಿ ಗೌರವಿಸಲಾಯಿತು. ಕೃಷಿ ಕ್ಷೇತ್ರದ ಸಾಧನೆಗಾಗಿ ಪುಷ್ಪ ಶೆಟ್ಟಿ ಅವರಿಗೆ ದಿ.ಎಣ್ಮಕಜೆ ಕಲಾವತಿ ಶೆಟ್ಟಿ ದತ್ತಿನಿಧಿ ಪ್ರಶಸ್ತಿ , ಸಿಎ ಮನೀಶ್ ಶೆಟ್ಟಿ ಅವರಿಗೆ ಸಿಎ ವೈ.ಆರ್.ಶೆಟ್ಟಿ ದತ್ತಿನಿಧಿ ಪ್ರಶಸ್ತಿ , ಸಿಎ ರೋಶನ್ ಶೆಟ್ಟಿ ಅವರಿಗೆ ಸಿಎ ಗೋಪಾಲ್.ಬಿ.ಶೆಟ್ಟಿ ದತ್ತಿನಿಧಿ ಪ್ರಶಸ್ತಿ ವಿತರಿಸಲಾಯಿತು.ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್ ಅಧ್ಯಕ್ಷ ಡಾ.ಎ.ಜೆ.ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಸಿಎ ಸುಧೀರ್ ಕುಮಾರ್ ಶೆಟ್ಟಿ , ಉಪಾಧ್ಯಕ್ಷರಾದ ಕುಶಲ್.ಎಸ್.ಹೆಗ್ಡೆ, ಕೆ.ಎಸ್.ಹೆಗ್ಡೆ, ಯೋಜನಾ ನಿರ್ದೇಶಕ ಡಾ.ಬಿ. ಸಂಜೀವ ರೈ, ಖಜಾಂಚಿ ಸಿಎ ಸುದೇಶ್ ಕುಮಾರ್ ರೈ , ಪ್ರೊ.ಜಿ.ಆರ್.ರೈ, ಪಳ್ಳಿ ಕಿಶನ್ ಹೆಗ್ಡೆ ಉಪಸ್ಥಿತರಿದ್ದರು. ಭಾಸ್ಕರ .ರೈ.ಕುಕ್ಕುವಳ್ಳಿ, ಜ್ಯೋತಿ ಪ್ರಸಾದ್ ಹೆಗ್ಡೆ, ಜೈರಾಜ್.ಬಿ.ರೈ ಮತ್ತು ಆರ್ತಿ ಶೆಟ್ಟಿ ಸನ್ಮಾನಿತರನ್ನು ಪರಿಚಯಿಸಿದರು. ಕಳ್ಳಿಗೆ ತಾರನಾಥ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ಯೆನೆಪೊಯ ಇನ್‌ಸ್ಟಿಟ್ಯೂಟ್‌ನಲ್ಲಿ ಸೈಬರ್ ಕ್ರೈಮ್ ಮತ್ತು ಹೊಸ ಕ್ರಿಮಿನಲ್ ಕಾನೂನುಗಳ ಕುರಿತು ಜಾಗೃತಿ ಅಧಿವೇಶನ

ಮಂಗಳೂರು, ಆಗಸ್ಟ್ 9, 2024 – ಯೆನೆಪೊಯ ಇನ್‌ಸ್ಟಿಟ್ಯೂಟ್ ಆಫ್ ಆರ್ಟ್ಸ್, ಸೈನ್ಸ್, ಕಾಮರ್ಸ್ ಮತ್ತು ಮ್ಯಾನೇಜ್‌ಮೆಂಟ್ ನಲ್ಲಿ ವಿಧಿವಿಜ್ಞಾನ ವಿಭಾಗವು ಸೈಬರ್ ಕ್ರೈಮ್ ಮತ್ತು ಹೊಸ ಕ್ರಿಮಿನಲ್ ಕಾನೂನುಗಳ ಕುರಿತು ಒಳನೋಟವುಳ್ಳ ಜಾಗೃತಿ ಅಧಿವೇಶನವನ್ನು ನಡೆಸಿತು. ಇತ್ತೀಚೆಗೆ ಜಾರಿಗೆ ತಂದ ಭಾರತೀಯ ನ್ಯಾಯದ ಸಂಹಿತಾ, 2023; ಭಾರತೀಯ ಸಾಕ್ಷಿ ಅಧಿನಿಯಮ, 2023; ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ, 2023 ಮೇಲೆ ವಿಶೇಷ ಗಮನ ಹರಿಸಿತು. ಕಾರ್ಯಕ್ರಮದಲ್ಲಿ ಸೈಬರ್‌ಕ್ರೈಮ್‌ನ ಮೂಲಕ ಹೆಚ್ಚುತ್ತಿರುವ ಬೆದರಿಕೆ ಮತ್ತು ಕ್ರಿಮಿನಲ್ ಕಾನೂನುಗಳಲ್ಲಿನ ಇತ್ತೀಚಿನ ಬದಲಾವಣೆಗಳ ಮೇಲೆ ಕೇಂದ್ರೀಕರಿಸುವ ವಿಶೇಷ ಭಾಷಣಕಾರರು ಮತ್ತು ಅತಿಥಿಗಳ ಶ್ರೇಣಿಯನ್ನು ಒಳಗೊಂಡಿತ್ತು. ಸಂಸ್ಥೆಯ ವಿಧಿವಿಜ್ಞಾನ ವಿಭಾಗವು ಭಾರತೀಯ ನ್ಯಾಯಾ ಸಂಹಿಥೆ ಮಾರ್ಗಸೂಚಿಗಳ ಆಧಾರದ ಮೇಲೆ ಪಠ್ಯಕ್ರಮವನ್ನು ಅಳವಡಿಸಿಕೊಳ್ಳಲು ಆಯ್ದ ಸಂಸ್ಥೆಗಳಲ್ಲಿ ಒಂದಾಗಿದೆ ಎಂದು ಹೆಮ್ಮೆ ಪಡುತ್ತದೆ. ಈ ಪ್ರಗತಿಪರ ಪಠ್ಯಕ್ರಮವು ವಿಧಿವಿಜ್ಞಾನದ ಶಿಕ್ಷಣದಲ್ಲಿ ಮುಂಚೂಣಿಯಲ್ಲಿ ಇರಿಸುತ್ತದೆ, ವಿದ್ಯಾರ್ಥಿಗಳು ಕ್ಷೇತ್ರದ ಇತ್ತೀಚಿನ ಮಾನದಂಡಗಳು ಮತ್ತು ಪ್ರಗತಿಗೆ ಹೊಂದಿಕೆಯಾಗುವ ತರಬೇತಿಯನ್ನು ಪಡೆಯುವುದನ್ನು ಖಾತ್ರಿಪಡಿಸುತ್ತದೆ.ಶ್ರೀ ಅನುಪಮ ಅಗರವಾಲ್, IPS, ಪೊಲೀಸ್ ಆಯುಕ್ತರು, ಮಂಗಳೂರು ಇವರು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಮತ್ತು ಸಂಪನ್ಮೂಲ ವ್ಯಕ್ತಿಯಾಗಿ ಸೇವೆ ಸಲ್ಲಿಸಿದರು. ತಮ್ಮ ಮುಖ್ಯ ಭಾಷಣದಲ್ಲಿ, ಶ್ರೀ ಅಗರವಾಲ ಅವರು ವಿಕಸನಗೊಳ್ಳುತ್ತಿರುವ ಸೈಬರ್ ಕ್ರೈಮ್ ಲ್ಯಾಂಡ್‌ಸ್ಕೇಪ್ ಮತ್ತು ಈ ಬೆದರಿಕೆಗಳನ್ನು ಎದುರಿಸಲು ಪರಿಚಯಿಸಲಾದ ಕಾನೂನು ಚೌಕಟ್ಟುಗಳ ಆಳವಾದ ವಿಶ್ಲೇಷಣೆಯನ್ನು ಒದಗಿಸಿದರು. ಸೈಬರ್ ಬೆದರಿಕೆಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸುವಲ್ಲಿ ಸಾರ್ವಜನಿಕ ಜಾಗೃತಿ ಮತ್ತು ಅಂತರ ವಲಯದ ಸಹಯೋಗದ ಮಹತ್ವವನ್ನು ಅವರು ಒತ್ತಿ ಹೇಳಿದರು. “ಸೈಬರ್ ಕ್ರೈಮ್ ಇನ್ನು ಮುಂದೆ ಸ್ಥಾಪಿತ ಸಮಸ್ಯೆಯಾಗಿಲ್ಲ; ಇದು ಜಾಗತಿಕವಾಗಿ ವ್ಯಕ್ತಿಗಳು, ಸಂಸ್ಥೆಗಳು ಮತ್ತು ರಾಷ್ಟ್ರಗಳ ಮೇಲೆ ಪರಿಣಾಮ ಬೀರುವ ವ್ಯಾಪಕ ಸವಾಲಾಗಿದೆ. ಡಿಜಿಟಲ್ ಜಗತ್ತಿನಲ್ಲಿ ಸುರಕ್ಷಿತವಾಗಿರುವುದು ಬಹಳ ಮುಖ್ಯ ಮತ್ತು ಚಿಕಿತ್ಸೆಗಿಂತ ಮುನ್ನೆಚ್ಚರಿಕೆ ಉತ್ತಮವಾಗಿದೆ. ಯಾವುದೇ ಸೈಬರ್ ಅಪರಾಧದ ಸಮಸ್ಯೆಗಳ ಸಂದರ್ಭದಲ್ಲಿ ಜನರು 1930 ಅನ್ನು ಸಂಪರ್ಕಿಸಬಹುದು” ಎಂದು ಅವರು ಹೇಳಿದರು.ಗೌರವ ಅತಿಥಿಗಳಾಗಿ ಆಗಮಿಸಿದ ದಕ್ಷಿಣ ಕನ್ನಡದ ಎಸಿಪಿ ಸಿಸಿಬಿ ಮಂಗಳೂರು ನಗರದ ಶ್ರೀಮತಿ ಗೀತಾ ಕುಲಕರ್ಣಿ ಅವರ ಉಪಸ್ಥಿತಿಯಿಂದ ಅಧಿವೇಶನವನ್ನು ಮತ್ತಷ್ಟು ಶ್ರೀಮಂತಗೊಳಿಸಲಾಯಿತು. ಶ್ರೀಮತಿ ಕುಲಕರ್ಣಿ ಅವರು ಮಂಗಳೂರಿನಲ್ಲಿ ಸೈಬರ್ ಕ್ರೈಮ್‌ನೊಂದಿಗೆ ವ್ಯವಹರಿಸುವಾಗ ತಮ್ಮ ಕ್ಷೇತ್ರದ ಅನುಭವಗಳನ್ನು ಹಂಚಿಕೊಂಡರು ಮತ್ತು ಅಂತಹ ಪ್ರಕರಣಗಳನ್ನು ಪರಿಹರಿಸುವಲ್ಲಿ ಕಾನೂನು ಜಾರಿ ಎದುರಿಸುತ್ತಿರುವ ಸವಾಲುಗಳನ್ನು ಎತ್ತಿ ತೋರಿಸಿದರು. “ಸೈಬರ್ ಕ್ರೈಮ್ ಕಂಟ್ರೋಲ್ ಬ್ಯೂರೋ (ಸಿಸಿಬಿ) ಈಗ ಸೈಬರ್ ಅಪರಾಧ-ಸಂಬಂಧಿತ ಸಮಸ್ಯೆಗಳಿಗೆ ಸಹಾಯ ಮಾಡಲು ಗಡಿಯಾರದ ಸುತ್ತಲೂ ಲಭ್ಯವಿದೆ” ಎಂದು ಅವರು ಹೇಳಿದರು.ಡಾ.ಬಿ.ಎಚ್. ಶ್ರೀಪತಿ ರಾವ್, ಗೌರವಾನ್ವಿತ ಪ್ರೊ ಉಪಕುಲಪತಿಗಳಾದ ಯೆನೆಪೊಯ (ಡೀಮ್ಡ್ ಟು ಯುನಿವರ್ಸಿಟಿ) ಅಧಿವೇಶನದ ಅಧ್ಯಕ್ಷತೆ ವಹಿಸಿದ್ದರು. ಡಾ. ರಾವ್ ಅವರು ತಮ್ಮ ಭಾಷಣದಲ್ಲಿ ಸೈಬರ್ ಭದ್ರತಾ ವಿಷಯಗಳ ಬಗ್ಗೆ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಶಿಕ್ಷಣ ನೀಡುವಲ್ಲಿ ಶೈಕ್ಷಣಿಕ ಸಂಸ್ಥೆಗಳು ಪೂರ್ವಭಾವಿ ಪಾತ್ರವನ್ನು ವಹಿಸುವ ಅಗತ್ಯವನ್ನು ಒತ್ತಿ ಹೇಳಿದರು. ಡಾ.ಅರುಣ್ ಎ.ಭಾಗವತ್, ಪ್ರಾಂಶುಪಾಲರು ಮತ್ತು ವಿಜ್ಞಾನ ವಿಭಾಗದ ಡೀನ್ ಅವರು ಮುಖ್ಯ ಭಾಷಣ ಮಾಡಿ ವಿಭಾಗದ ಪ್ರಯತ್ನ ಮತ್ತು ಉಪಕ್ರಮಕ್ಕಾಗಿ ಅಭಿನಂದಿಸಿದರು. ಉಪಪ್ರಾಂಶುಪಾಲರಾದ ಡಾ.ಶರೀನಾ ಪಿ., ಡಾ.ಜೀವನ್ ರಾಜ್ ಮತ್ತು ಶ್ರೀ ನಾರಾಯಣ್ ಸುಕುಮಾರ ಎ. ಮತ್ತು ಡಾ ರಿಜೆಕ್ಟ್ ಪಾಲ್ M.P, ಮುಖ್ಯಸ್ಥ, ವಿಧಿವಿಜ್ಞಾನ ವಿಜ್ಞಾನ ವಿಭಾಗ ಅವರು ಕಾರ್ಯಕ್ರಮವನ್ನು ಆಯೋಜಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು.ಈ ಸಂದರ್ಭದಲ್ಲಿ ಫೋರೆನ್ಸಿಕ್ ವಿಭಾಗದ ನಾಲ್ವರು ವಿದ್ಯಾರ್ಥಿಗಳಾದ ಅನೋವಾ ಸುನಿಲ್, ದೇವಪ್ರಿಯಾ ಬಿ ಎಸ್, ಭಾಗ್ಯ ಮಿತ್ರ, ಮತ್ತು ಶಾನಿ ಕೆಪಿ ಅವರನ್ನು ಇತ್ತೀಚೆಗೆ ಸಾರ್ವಜನಿಕ ಘಟನೆಯಲ್ಲಿ ಧೈರ್ಯಶಾಲಿ ಕಾರ್ಯಗಳಿಗಾಗಿ ಗೌರವಿಸಲಾಯಿತು. ಸಾರ್ವಜನಿಕ ಬಸ್‌ನಲ್ಲಿ ಬಾಲಕಿಯನ್ನು ಆಸ್ಪತ್ರೆಗೆ ಸೇರಿಸಲು ತ್ವರಿತವಾಗಿ ಸಹಾಯ ಮಾಡುವ ಮೂಲಕ ಅವರ ಧೈರ್ಯಕ್ಕಾಗಿ ಅವರನ್ನು ಗುರುತಿಸಲಾಯಿತು ಮತ್ತು ಪ್ರಶಸ್ತಿ ನೀಡಲಾಯಿತು.ಸುಮಾರು 1500 ವಿದ್ಯಾರ್ಥಿಗಳು ಅಧಿವೇಶನದ ಪ್ರಯೋಜನ ಪಡೆದರು. ಯೆನೆಪೊಯ ಇನ್‌ಸ್ಟಿಟ್ಯೂಟ್ ಆಫ್ ಆರ್ಟ್ಸ್, ಸೈನ್ಸ್, ಕಾಮರ್ಸ್ ಮತ್ತು ಮ್ಯಾನೇಜ್‌ಮೆಂಟ್‌ನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕವು ಜಾಗೃತಿ ಅಧಿವೇಶನವನ್ನು ತಡೆರಹಿತವಾಗಿ ನಿರ್ವಹಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿತು.ಸಂವಾದಾತ್ಮಕ ಪ್ರಶ್ನೋತ್ತರ ವಿಭಾಗದೊಂದಿಗೆ ಜಾಗೃತಿ ಅಧಿವೇಶನವು ಮುಕ್ತಾಯವಾಯಿತು, ಇದರಲ್ಲಿ ಭಾಗವಹಿಸುವವರು ತಜ್ಞರೊಂದಿಗೆ ತೊಡಗಿಸಿಕೊಳ್ಳಲು ಮತ್ತು ಸೈಬರ್ ಅಪರಾಧದ ಸಂಕೀರ್ಣತೆಗಳು ಮತ್ತು ಅದನ್ನು ನಿಗ್ರಹಿಸುವ ಉದ್ದೇಶದಿಂದ ಇತ್ತೀಚಿನ ಕಾನೂನು ಬೆಳವಣಿಗೆಗಳ ಕುರಿತು ಹೆಚ್ಚಿನ ಒಳನೋಟಗಳನ್ನು ಪಡೆಯಲು ಅವಕಾಶವನ್ನು ಹೊಂದಿದ್ದರು.ಡಿಜಿಟಲ್ ಯುಗದ ಸವಾಲುಗಳನ್ನು ಎದುರಿಸುವ ಮಟ್ಟಿನಲ್ಲಿಅಗತ್ಯವಾದ ಜ್ಞಾನ ಮತ್ತು ಸಾಧನಗಳೊಂದಿಗೆ ತನ್ನ ವಿದ್ಯಾರ್ಥಿಗಳು ಮತ್ತು ಸಮುದಾಯವನ್ನು ಬಲಪಡಿಸುವಲ್ಲಿ ಯೆನೆಪೊಯ ಇನ್‌ಸ್ಟಿಟ್ಯೂಟ್‌ನ ಪ್ರಯತ್ನವು ಶ್ಲಾಘನೀಯವಾಗಿದೆ. ವಿದ್ಯಾರ್ಥಿಗಳು ಮತ್ತು ಸಂಸ್ಥೆಯ ಇತರ ಅಧ್ಯಾಪಕರ ಸಕ್ರಿಯ ಭಾಗವಹಿಸುವಿಕೆಯೊಂದಿಗೆ ಅಧಿವೇಶನವು ಉತ್ತಮ ಯಶಸ್ಸನ್ನು ಕಂಡಿತು. ಪಿನಾಕಿನಿ ಶೆಟ್ಟಿ, ಉಪನ್ಯಾಸಕಿ, ನಿರ್ವಹಣಾ ವಿಭಾಗ ಕಾರ್ಯಕ್ರಮವನ್ನು ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ಲಯನ್ಸ್ ಕ್ಲಬ್ ಮತ್ತು ಲಿಯೋ ಕ್ಲಬ್ ಮಂಗಳೂರು ಸ್ಮಾರ್ಟ್ ಸಿಟಿ ಹಾಗೂ ಲಯನ್ಸ್ ಕ್ಲಬ್ ಮಂಗಳೂರು ಮಿಡ್ ಟೌನ್ ನ 2024-25 ರ ಸಾಲಿನ ಪದಾಧಿಕಾರಿಗಳ ಮತ್ತು ನೂತನ ಸದಸ್ಯರ ಪದಗ್ರಹಣ ಸಮಾರಂಭ.

ಮಂಗಳೂರು: ಲಯನ್ಸ್ ಕ್ಲಬ್ ಮತ್ತು ಲಿಯೋ ಕ್ಲಬ್ ಮಂಗಳೂರು ಸ್ಮಾರ್ಟ್ ಸಿಟಿ ಹಾಗೂ ಲಯನ್ಸ್ ಕ್ಲಬ್ ಮಂಗಳೂರು ಮಿಡ್ ಟೌನ್ ನ 2024-25 ರ ಸಾಲಿನ ಪದಾಧಿಕಾರಿಗಳ ಮತ್ತು ನೂತನ ಸದಸ್ಯರ ಪದಗ್ರಹಣ ಸಮಾರಂಭವು ಕದ್ರಿ ಪಾರ್ಕ್ ಹತ್ತಿರದ ಲಯನ್ಸ್ ಅಶೋಕ್ ಭವನದಲ್ಲಿ ಇತ್ತೀಚೆಗೆ ಜರಗಿತು. ಪದಗ್ರಹಣ ಸಮಾರಂಭದ ಅಧಿಕಾರಿಯಾಗಿ ಲಯನ್ಸ್ ಕ್ಲಬ್ ಅಂತರರಾಷ್ಟ್ರೀಯ 317ಡಿ ಯ ನಿಕಟಪೂರ್ವ ಜಿಲ್ಲಾ ರಾಜಪಾಲರಾದ ಲಯನ್ ಡಾ. ಮೇಲ್ವಿನ್ ಡಿಸೋಜಾ ಅವರು 2024-25 ರ ಸಾಲಿನ ನೂತನ ಪದಾಧಿಕಾರಿಗಳಿಗೆ ಮತ್ತು ನೂತನ ಸದಸ್ಯರಿಗೆ ಪ್ರಮಾಣ ವಚನ ತತ್ವ ಸಿದ್ಧಾಂತದ ಬಗ್ಗೆ ಬೋಧಿಸಿದರು. ಲಯನ್ಸ್ ಕ್ಲಬ್ ಮಂಗಳೂರು ಸ್ಮಾರ್ಟ್ ಸಿಟಿಯ ನೂತನ ಅಧ್ಯಕ್ಷ ಶಾಲಿನಿ ಪ್ರಶಾಂತ್ ಸುವರ್ಣ, ಕಾರ್ಯದರ್ಶಿ ವಿಮಲಾ ತುಳಸಿ ರಾಜ್,, ಕೋಶಾಧಿಕಾರಿ ದಿವ್ಯ ಎಚ್ ಪಿ ರೈ , ಲಿಯೋ ಕ್ಲಬ್ಬಿನ ಅಧ್ಯಕ್ಷ ಲಯನ್ಸ್ ಕ್ಲಬ್ ಮಂಗಳೂರು ಮಂಗಳೂರು ಮಿಡ್ ಟೌನ್ ಅಧ್ಯಕ್ಷ ವಿಜಯ್ ಕುಮಾರ್ ಶೆಟ್ಟಿ, ಗಣೇಶ್ ಶೇಟ್, ಶಿವರಾಜ್ ಸಾಮಾನಿ , ನೂತನ ಪದಾಧಿಕಾರಿಗಳಾಗಿ ಚಂದ್ರಹಾಸ ಎನ್, ರಂಜಿತ್ ಶೆಟ್ಟಿ, ಉಷಾ ಶೆಟ್ಟಿ, ಅಂಜನ , ರಾಜೇಶ್, ಕಿಶೋರ್ ಆಚಾರ್ಯ, ರವಿಂದ್ರ, ಎಂ ,ಶೀಲಾ ಪಡೀಲ್, ಪ್ರಶಾಂತ ಸುವರ್ಣ, ಮುಂತಾದವರು ಪ್ರಮಾಣವಚನ ಸ್ವೀಕರಿಸಿದರು. ಪದಗ್ರಹಣ ಸಮಾರಂಭದ ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಮಂಗಳೂರು ಸ್ಮಾರ್ಟ್ ಸಿಟಿ ಅಧ್ಯಕ್ಷರಾದ ಜಿ ಕೆ ಹರಿಪ್ರಸಾದ ರೈ ಕಾರಮೊಗರುರವರ ಅಧ್ಯಕ್ಷತೆಯಲ್ಲಿ ನಡೆಯಿತು. ವೇದಿಕೆಯಲ್ಲಿ ಲಯನ್ಸ್ ಜಿಲ್ಲಾ ಕ್ಯಾಬಿನೆಟ್ ಕಾರ್ಯದರ್ಶಿ ಗೀತಾ ರಾವ್, ಪ್ರಾಂತೀಯ ಅಧ್ಯಕ್ಷ ವೇಣಿ ಮರೋಳಿ. ಗುರುಪೀತ ಆಳ್ವ ವಲಯ ಅಧ್ಯಕ್ಷ ಚಂದ್ರಕಲ ರಾವ್ ವೇದಿಕೆಯಲ್ಲಿ ಉಪಸ್ಥಿತರಿದ್ದರು ಕಾರ್ಯಕ್ರಮದ ಸ್ವಾಗತವನ್ನು ವಿಜಯಕುಮಾರ್ ಶೆಟ್ಟಿ ಸ್ವಾಗತಿಸಿ ವಿಮಲಾ ತುಳಸಿ ರಾಜ್ ಧನ್ಯವಾದಗೈದರು.ಸನ್ಮಾನ: ಈ ಸಂದರ್ಭದಲ್ಲಿ ತುಳುನಾಡು ಪ್ರತಿಷ್ಠಾಪನದ ಅಧ್ಯಕ್ಷ, ಪತ್ರಕರ್ತ ರಾಜೇಶ್ ಅಮೀನ್ ಮುಲ್ಕಿ ಅವರನ್ನು ಸನ್ಮಾನಿಸಲಾಯಿತು.

ಕರ್ನಾಟಕ ವಾರ್ತೆಗಳು

ಹುಬ್ಬಳ್ಳಿ ಧಾರವಾಡ ಬಂಟರ ಸಂಘದ ನೂತನ ಅಧ್ಯಕ್ಷರಾಗಿ ವಿಜಯಾನಂದ ಶೆಟ್ಟಿ ಹಾಗೂ ಉಪಾಧ್ಯಕ್ಷರಾಗಿ ರಾಜೇಂದ್ರ ವಿ. ಶೆಟ್ಟಿಯವರು ಅವಿರೋಧವಾಗಿ ಆಯ್ಕೆ

ಪ್ರತಿಷ್ಠಿತ ಹುಬ್ಬಳ್ಳಿ ಧಾರವಾಡ ಬಂಟರ ಸಂಘದ ನೂತನ ಅಧ್ಯಕ್ಷರಾಗಿ ವಿಜಯಾನಂದ ಶೆಟ್ಟಿ ಹಾಗೂ ಉಪಾಧ್ಯಕ್ಷರಾಗಿ ರಾಜೇಂದ್ರ ವಿ ಶೆಟ್ಟಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಮಾಜಸೇವಕ, ರಾಜಕೀಯ ಧುರೀಣ ವಿಜಯಾನಂದ ಶೆಟ್ಟಿಯವರು ಧಾರವಾಡದಲ್ಲಿ ಕಾರ್ಪೊರೇಟರ್ ಆಗಿದ್ದಾರೆ. ಸಮಾಜಸೇವೆಯೇ ಸರ್ವಸ್ವ ಎಂದು ನಂಬಿರುವ ರಾಜೇಂದ್ರ ವಿ ಶೆಟ್ಟಿಯವರು ಪಂಜುರ್ಲಿ ಗ್ರೂಪ್ ಆಫ್ ಹೋಟೆಲ್ಸ್ ನ ಆಡಳಿತ ನಿರ್ದೇಶಕರಾಗಿದ್ದಾರೆ. ಬಂಟ್ಸ್ ನೌ ಮಾಧ್ಯಮ ಸಂಸ್ಥೆ ಕೊಡಲ್ಪಡುವ 2024 ರ ಸಾಲಿನ ಬಂಟ ವಿಭೂಷಣ ಪ್ರಶಸ್ತಿ ಸೇರಿದಂತೆ ಹಲವಾರು ಸಂಘ ಸಂಸ್ಥೆಗಳು ಇವರನ್ನು ಸನ್ಮಾನಿಸಿವೆ.

Scroll to Top