Author name: editor

ಪ್ರಾದೇಶಿಕ ವಾರ್ತೆಗಳು

ಕೆರೆಕಾಡು ಶ್ರೀ ವಿನಾಯಕ ಯಕ್ಷಕಲಾ ತಂಡದಿಂದ “ತೈತತಕತ” ಯಕ್ಷಗಾನ ಕಾರ್ಯಕ್ರಮಕ್ಕೆ ಚಾಲನೆ : ಯಕ್ಷಗಾನ ಕಲೆಯ ಆರಾಧನೆಯೊಂದಿಗೆ ಪೋಷಣೆ ನಿರಂತರವಾಗಿರಲಿ : ಭುವನಾಭಿರಾಮ ಉಡುಪ

ಮೂಲ್ಕಿ: ಯಕ್ಷಗಾನ ಕಲೆಯ ಆರಾಧನೆಯೊಂದಿಗೆ ಪೋಷಣೆ ನಿರಂತರವಾಗಿರಲಿ, ವಿನಾಯಕ ಮೇಳಕ್ಕೆ ರಾಜ್ಯ ಪುರಸ್ಕಾರ ಸಿಗಲಿ ಎಂದು ಕಿನ್ನಿಗೋಳಿ ಯುಗಪುರುಷದ ಪ್ರಧಾನ ಸಂಪಾದಕ ಭುವನಾಭಿರಾಮ ಉಡುಪ ಹೇಳಿದರು.ಅವರು ಕೆರೆಕಾಡು ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂದಿರದಲ್ಲಿ ಕೆರೆಕಾಡು ಶ್ರೀ ವಿನಾಯಕ ಯಕ್ಷಕಲಾ ತಂಡದ ಸಂಯೋಜನೆಯಲ್ಲಿ ಎರಡು ದಿನಗಳ “ತೈತತಕತ” ಯಕ್ಷಗಾನ ವಿಶೇಷ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.ಶ್ರೀ ಕ್ಷೇತ್ರ ಕಾರಿಂಜದ ಆಡಳಿತಾಧಿಕಾರಿ ಚಂದ್ರಶೇಖರ ಶೆಟ್ಟಿ ಉದ್ಘಾಟಿಸಿ ಶುಭಹಾರೈಸಿದರು.ಮೂಲ್ಕಿ ಸೀಮೆಯ ಅರಸರಾದ ಎಂ. ದುಗ್ಗಣ್ಣ ಸಾವಂತರು ಅಧ್ಯಕ್ಷತೆಯನ್ನು ವಹಿಸಿ, ಶುಭಹಾರೈಸಿದರು.ಮುಖ್ಯ ಅತಿಥಿಗಳಾಗಿ ಬಪ್ಪನಾಡು ಲಯನ್ಸ್ ಬಪ್ಪನಾಡು ಇನ್ಸ್ ಪೈರ್ ನ ಉಪಾಧ್ಯಕ್ಷ ಪುಷ್ಪರಾಜ್ ಚೌಟ, ಇನ್ ಪೋಸಿಸ್ ನ ನರೇಂದ್ರ ಪ್ರಭು ಮಂಗಳೂರು, ಕಿನ್ನಿಗೋಳಿ ವಿಜಯಾ ಕಲಾವಿದರು ತಂಡದ ಅಧ್ಯಕ್ಷ ಶರತ್ ಶೆಟ್ಟಿ ಸಂಕಲಕರಿಯ, ಚಾಮರಾ ಫೌಂಡೇಶನ್ ನ ರಚನಾ, ಕೆರೆಕಾಡು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಅಧ್ಯಕ್ಷ ಅನಂತ ಪದ್ಮನಾಭ,ಮೂಲ್ಕಿ ಎಲ್ ಐಸಿಯ ಪ್ರಬಂಧಕ ಪ್ರಕಾಶ್ ಆಚಾರ್ಯ, ಮೇಳದ ಅಜಿತ್, ಪ್ರೇಮಲತಾ, ಅನ್ವಿತಾ, ರೇಷ್ಮಾ ಜಿ. ಬಂಗೇರ, ಶ್ರೇಯಸ್, ಧನಂಜಯ ಶೆಟ್ಟಿಗಾರ್, ದುರ್ಗಾ ಪ್ರಸಾದ್, ಲೋಹಿತ್, ಯಶೋದಾ, ಅಶೋಕ್ ಮತ್ತಿತರರು ಉಪಸ್ಥಿತರಿದ್ದರು.ಶ್ರೀ ವಿನಾಯಕ ಯಕ್ಷಕಲಾ ತಂಡದ ಅಧ್ಯಕ್ಷ ಜಯಂತ್ ಅಮೀನ್ ಸ್ವಾಗತಿಸಿ, ಪ್ರಸ್ತಾವನೆಗೈದರು.ಈ ಸಂದರ್ಭದಲ್ಲಿ ಶ್ರೀ ವಿನಾಯಕ ಯಕ್ಷಕಲಾ ರತ್ನ ಪ್ರಶಸ್ತಿಯನ್ನು ಮೆಸ್ಕಾಂನ ಹಿರಿಯ ಇಂಜಿನಿಯರ್ ಬಿ. ರಾಜೇಶ್ ಹಾಗೂ ಬೆಂಗಳೂರಿನ ಕರ್ನಾಟಕ ವಿದ್ಯುತ್ ನೌಕರರ ಸಂಘದ ಉಪಾಧ್ಯಕ್ಷ ಎಚ್.ಎಸ್.ಗುರುಮೂರ್ತಿಅವರಿಗೆ ನೀಡಿ ಗೌರವಿಸಲಾಯಿತು. ಕಲಾವಿದರಿಂದ ಸತ್ವಶೈಥಿಲ್ಯ ಯಕ್ಷಗಾನ ಪ್ರಸಂಗ ಪ್ರದರ್ಶನಗೊಂಡಿತು.ಅಭಿಜಿತ್ ಹಾಗೂ ವಾಣಿ ಪರಿಚಯಿಸಿದರು.ಮಾಲತಿ ಕೃಷ್ಣಮೂರ್ತಿ ವಂದಿಸಿದರು.ಉಷಾ ನರೇಂದ್ರ ಕೆರೆಕಾಡು ಕಾರ್ಯಕ್ರಮ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

Tv5 ವಿಡಿಯೋ ಜರ್ನಲಿಸ್ಟ್ ವಿರೇಶ್ ಕಡ್ಡಿಕೊಪ್ಲ ನಿಗೂಢ ಸಾವಿನ ಪ್ರಕರಣ ತನಿಖೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮನವಿಗೆ ತಕ್ಷಣ ಸ್ಪಂದಿಸಿದ ಸ್ಪೀಕರ್ ಯು ಟಿ ಖಾದರ್. ಎಸಿಪಿ ಮಟ್ಟದ ಅಧಿಕಾರಿಯಿಂದ ತನಿಖೆ ನಡೆಸುವಂತೆ ಗದಗ ಎಸ್. ಪಿ ಗೆ ಸೂಚನೆ.

Tv5 ವಿಡಿಯೋ ಜರ್ನಲಿಸ್ಟ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಸದಸ್ಯ ವಿರೇಶ್ ಕಡ್ಡಿಕೊಪ್ಲ ಅವರ ನಿಗೂಢ ಸಾವಿನ ಕುರಿತು ಹಲವಾರು ಅನುಮಾನ ಗಳು ಇದ್ದು ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಸ್ಪೀಕರ್ ಯು ಟಿ ಖಾದರ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಪರವಾಗಿ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು ಸರ್ಕ್ಯುಟ್ ಹೌಸ್ ನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು. ಮನವಿಗೆ ತಕ್ಷಣ ಸ್ಪಂದಿಸಿದ ಸ್ಪೀಕರ್ ಯು ಟಿ ಖಾದರ್ ಗದಗ ಎಸ್ ಪಿ ಅವರಿಗೆ ದೂರವಾಣಿ ಮೂಲಕ ಸಂಪರ್ಕಿಸಿ ವಿರೇಶ್ ನಿಗೂಢ ಸಾವಿನ ಪ್ರಕರಣ ವನ್ನು ಗಂಭೀರವಾಗಿ ಪರಿಗಣಿಸಬೇಕು. ಸತ್ಯಾಸತ್ಯತೆ ಅರಿಯಲು ಎಸಿಪಿ ಮಟ್ಟದ ಅಧಿಕಾರಿಯಿಂದ ತನಿಖೆ ನಡೆಸುವಂತೆ ಸೂಚನೆ ನೀಡಿದರು.ಸಂಘದ ಪ್ರಧಾನ ಕಾರ್ಯದರ್ಶಿ ಜಿತೇ0ದ್ರ ಕುಂದೇಶ್ವರ, ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ, ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ರಾಜೇಶ್ ಶೆಟ್ಟಿ, ಸಂದೇಶ್ ಜಾರ, ಸದಸ್ಯರಾದ ಉಮೇಶ್ ಕೊಟ್ಟಾರಿ,ಅಶೋಕ್, ಆದಿತ್ಯ, ಪ್ರಣಾಮ್,ನಿಖಿಲ್, ಪತ್ರಕರ್ತರಾದ ಪ್ರೀತಮ್ ರೈ, ಲಲಿತಾಶ್ರೀ ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ಜು.30ರಂದು ವಾಯು ಸೇನೆಯ ನಿವೃತ್ತ ಗ್ರೂಪ್ ಕ್ಯಾಪ್ಟನ್ ಸುಧೀರ್.ಜಿ. ಅಮೀನ್. ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ

ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಜು.30ರಂದು ಬೆಳಗ್ಗೆ 11.30 ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಭಾರತೀಯ ವಾಯು ಸೇನೆಯ ನಿವೃತ್ತ ಗ್ರೂಪ್ ಕ್ಯಾಪ್ಟನ್ ಸುಧೀರ್. ಜಿ.ಅಮೀನ್ ಭಾಗವಹಿಸಿ ಗೌರವ ಸ್ವೀಕರಿಸಲಿದ್ದಾರೆ. ಹಿರಿಯ ಪತ್ರಕರ್ತ ಪರಮಾನಂದ ಸಾಲ್ಯಾನ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸುವರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ .ಆರ್. ಉಪಸ್ಥಿತರಿರುವರು ಎಂದು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ಕಬ್ಬಿಣದ ರಾಡು ಬಿದ್ದು ನೀರಿನ ಟ್ಯಾಂಕ್ ಮತ್ತು ಮನೆಯ ಫೈಬರ್ ಶೀಟ್ ಸಂಪೂರ್ಣ ಹಾನಿ. ಮನೆ ಮಂದಿ ಪ್ರಾಣಾಪಾಯದಿಂದ ಪಾರು. ಚಿಲಿಂಬಿ ಬಳಿ ನಡೆದ ಘಟನೆ.

ಮಂಗಳೂರು : ಚಿಲಿಂಬಿ ಶಾರದಾ ನಿಕೇತನದ ಎದುರುಗಡೆ ಸಿಸ್ಟರ್ ಲೂಸಿ ಡಿಸೋಜ ಅವರು ಶ್ರೀನಿಧಿ ಅಪಾರ್ಟ್ಮೆಂಟ್ ನಲ್ಲಿ ವಾಸ್ತವ್ಯ ವಿದ್ದು ,ನಿನ್ನೆ ರಾತ್ರಿ 9.15 ಗಂಟೆ ಸುಮಾರಿಗೆ ಸುರಿದ ಬಿರುಸು ಮಳೆಗೆ ಇವರ ಪಕ್ಕದ ಕಟ್ಟಡದ ಮೇಲಿದ್ದ ಕಬ್ಬಿಣದ ಶೀಟ್ ಮತ್ತು ಕಬ್ಬಿಣದ ರಾಡು ಬಿದ್ದು ನೀರಿನ ಟ್ಯಾಂಕ್ ಮತ್ತು ಕಾಂಕ್ರೀಟ್ ಮನೆಯ ಫೈಬರ್ ಶೀಟ್ ಸಂಪೂರ್ಣ ಹಾನಿಗೊಳಗಾಗಿದ್ದು, ಮನೆ ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಂದಾಜು ನಷ್ಟ 25 ಸಾವಿರವೆಂದು ವರದಿಯಾಗಿದೆ. ಲೂಸಿ ಡಿಸೋಜ ಅವರು ನಿವೃತ್ತ ನರ್ಸ್ ಆಗಿದ್ದು, ಪಾರ್ಟ್ ಟೈಮ್ ಹೋಮ್ ನರ್ಸಿಂಗ್ ಮೂಲಕ ಜೀವನ ಸಾಗಿಸುತ್ತಿದ್ದಾರೆ. ಸಂಬಂಧ ಪಟ್ಟ ಅಧಿಕಾರಿಗಳು ತಕ್ಷಣ ಸೂಕ್ತ ಪರಿಹಾರ ದೊರಕಿಸಿ ಕೊಡಬೇಕೆಂದು Mp mla’s ನ್ಯೂಸ್ ವಿನಂತಿಸುತ್ತದೆ.

ಪ್ರಾದೇಶಿಕ ವಾರ್ತೆಗಳು

“ಪತ್ರಕರ್ತರಿಂದ ದಕ್ಷಿಣ ಕನ್ನಡ ಜಿಲ್ಲೆ ಹೆಮ್ಮೆ ಪಡುವಂತಹ ಕೆಲಸ”-ಡಿಸಿ ಮುಲ್ಲೈ ಮುಹಿಲನ್. ಶಿರೂರು ದುರಂತ: ಮಾನವೀಯ ನೆರವು ನೀಡಿದ ಪತ್ರಕರ್ತರಿಗೆ ಅಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿ

‌ಮಂಗಳೂರು: ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಮೃತಪಟ್ಟಿದ್ದ ವೃದ್ಧೆಯ ಅಂತ್ಯ ಸಂಸ್ಕಾರಕ್ಕೆ ಮಾನವೀಯತೆ ನೆಲೆಯಲ್ಲಿ ನೆರವು ನೀಡಿದ್ದ ಮಂಗಳೂರಿನ ಪತ್ರಕರ್ತರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ತಮ್ಮ ಕಚೇರಿಗೆ ಆಹ್ವಾನಿಸಿ ಸನ್ಮಾನಿಸಿದರು.ಶಿರೂರು ಗುಡ್ಡ ದುರಂತದಲ್ಲಿ ಉಳುವರೆ ಗ್ರಾಮದ ಸಣ್ಣಿ ಹನುಮಂತ ಗೌಡ ಎಂಬ ವೃದ್ಧೆಯ ಮೃತದೇಹ 8 ದಿನಗಳ ಬಳಿಕ ಮಂಗಳವಾರ ಸಿಕ್ಕಿದ್ದು ಪೋಸ್ಟ್ ಮಾರ್ಟಂ ಬಳಿಕ ಮೃತದೇಹವನ್ನು ಮನೆಯಿದ್ದ ಜಾಗಕ್ಕೆ ಸಾಗಿಸಿ ಅಂತಿಮ ಸಂಸ್ಕಾರ ನಡೆಸಲು ಪತ್ರಕರ್ತರಾದ ಶಶಿ ಬೆಳ್ಳಾಯರು, ಮೋಹನ್ ಕುತ್ತಾರ್, ಆರಿಫ್ ಯು.ಆರ್. ಗಿರೀಶ್ ಮಳಲಿ ಹಾಗೂ ಶಿವಶಂಕರ್ ನೆರವಾಗಿದ್ದರು. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದ್ದನ್ನು ಗಮನಿಸಿದ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯ್ಕ್ ಇಂದಾಜೆ ಅವರಿಂದ ಪತ್ರಕರ್ತರ ಮಾಹಿತಿ ಪಡೆದು ಕಚೇರಿಯಲ್ಲಿ ಸನ್ಮಾನಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ಇಂದಾಜೆ ಅವರು ಜಿಲ್ಲಾಧಿಕಾರಿಯವರಿಗೆ ಪತ್ರಕರ್ತರ ಪರಿಚಯ ಮಾಡಿಕೊಟ್ಟರು.ಬಳಿಕ ಮಾತಾಡಿದ ಜಿಲ್ಲಾಧಿಕಾರಿ ಅವರು, “ನಿಮ್ಮ ಈ ಕಾರ್ಯ ಶ್ಲಾಘನೀಯವಾಗಿದೆ. ಇದೊಂದು ದಕ್ಷಿಣ ಕನ್ನಡ ಜಿಲ್ಲೆಗೆ ಹೆಮ್ಮೆ ತರುವಂತಹ ಕಾರ್ಯ. ಮುಂದೆಯೂ ಇಂತಹ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಳ್ಳಿ, ಏನಾದರೂ ಅಗತ್ಯ ನೆರವು ಬೇಕಾದಲ್ಲಿ ಜಿಲ್ಲಾಡಳಿತ ನಿಮ್ಮ ಜೊತೆಗಿದೆ. ನಿಮ್ಮಂತಹ ಉತ್ಸಾಹಿ ತರುಣರ ಅವಶ್ಯಕತೆ ಸಮಾಜಕ್ಕೆ ಇದೆ“ ಎಂದು ಬೆನ್ನುತಟ್ಟಿದರು.ಶಿರೂರು ಮತ್ತು ಉಳುವರೆ ಗ್ರಾಮದ ಸದ್ಯದ ಸ್ಥಿತಿಗತಿಯ ಬಗ್ಗೆ ಪತ್ರಕರ್ತರಿಂದ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ವಾರ್ತಾಧಿಕಾರಿ ಖಾದರ್ ಶಾ, ಕಾರ್ಯನಿರತ ಪತ್ರಕರ್ತರ ಸಂಘದ ಉಳ್ಳಾಲ ತಾಲೂಕು ಅಧ್ಯಕ್ಷ ವಸಂತ್ ಎನ್. ಕೊಣಾಜೆ, ಗಣೇಶ್ ತಲಪಾಡಿ ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ಅಗಲಿದ ಪತ್ರಕರ್ತರಿಗೆ ಶ್ರದ್ಧಾಂಜಲಿ ಸಭೆ

ಮಂಗಳೂರು : ಇತ್ತೀಚೆಗೆ ನಿಧನರಾದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾದ ಹಿರಿಯ ಫೋಟೊ ಜರ್ನಲಿಸ್ಟ್ ಅಲ್ಪ್ಪ್ರೆಡ್ ಡಿಸೋಜ ಮತ್ತು ಖಾಸಗಿ ಟಿ.ವಿ.ಯ ಕ್ಯಾಮರಾಮನ್ ವೀರೇಶ್ ಕಡ್ಲಿಕೊಪ್ಪ ಅವರಿಗೆ ಶ್ರದ್ಧಾಂಜಲಿ ಸಭೆ ನಗರದ ಪತ್ರಿಕಾ ಭವನದಲ್ಲಿ ಬುಧವಾರ ನಡೆಯಿತು. ಅಗಲಿದ ಪತ್ರಕರ್ತರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮಾತನಾಡಿ ಅಗಲಿದ ಇಬ್ಬರೂ ಪತ್ರಕರ್ತರೂ ಸಜ್ಜನ ವ್ಯಕ್ತಿತ್ವ ಹೊಂದಿದ್ದರು. ಎಲ್ಲರ ಜತೆ ಮುಕ್ತವಾಗಿ ಬೆರೆಯುತ್ತಿದ್ದರು. ಅವರ ಹೆಸರನ್ನು ಶಾಶ್ವತವಾಗಿ ನೆನಪಿಸಿಕೊಳ್ಳುವ ನಿಟ್ಟಿನಲ್ಲಿ ಸಂಘ ಕಾರ್ಯೋನ್ಮುಖವಾಗಲಿದೆ ಎಂದರು.ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಮಾತನಾಡಿ, ವೀರೇಶ್ ಅವರು ಗದಗ್ ಜಿಲ್ಲೆಯಿಂದ ಮಂಗಳೂರಿಗೆ ಆಗಮಿಸಿ ಇಲ್ಲಿನ ಪತ್ರಕರ್ತರ ಜತೆ ಬೆರೆತು ಕೆಲಸ ಮಾಡಿದ್ದರು. ಕಿರಿಯ ವಯಸ್ಸಿನಲ್ಲಿ ಅವರು ಅಗಲಿರುವುದು ಆಘಾತ ತಂದಿದೆಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಕಾರ್ಯಕಾರಿ ಸಮಿತಿ ಸದಸ್ಯ ಭರತ್ ರಾಜ್, ಉಮೇಶ್ ಕೊಟ್ಟಾರಿ, ಆದಿತ್ಯ ನುಡಿ ನಮನ ಸಲ್ಲಿಸಿದರು.ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ.ಆರ್., ಪ್ರೆಸ್‌ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಹಿರಿಯ ಪತ್ರಕರ್ತರಾದ ರಮೇಶ್ ಪೆರ್ಲ, ನಂದಗೋಪಾಲ್ ಉಪಸ್ಥಿತರಿದ್ದರು.

ರಾಷ್ಟ್ರೀಯ ವಾರ್ತೆಗಳು

ಮಂಗಳೂರು- ಸುಬ್ರಹ್ಮಣ್ಯ ಮಧ್ಯೆ ಪ್ಯಾಸೆಂಜರ್ ರೈಲು ಆರಂಭಿಸಲು ಸಂಸತ್ತಿನಲ್ಲಿ ಸಂಸದ ಬ್ರಿಜೇಶ್ ಚೌಟ ಒತ್ತಾಯ

ಮಂಗಳೂರು- ಸುಬ್ರಹ್ಮಣ್ಯ ನಡುವೆ ಪ್ಯಾಸೆಂಜರ್ ರೈಲು ಆರಂಭಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಂಸತ್ತಿನಲ್ಲಿ ಒತ್ತಾಯ ಮಾಡಿದ್ದಾರೆ.ಈ ಹಿಂದೆ ಮಂಗಳೂರು- ಸುಬ್ರಹ್ಮಣ್ಯ ನಡುವೆ ಮೀಟರ್ ಗೇಜ್ ಹಳಿ ಇದ್ದಾಗ ಪ್ಯಾಸೆಂಜರ್ ರೈಲು ಓಡಾಟ ಇತ್ತು. ಬ್ರಾಡ್ ಗೇಜ್ ಹಳಿ ಮಾಡುವ ಸಲುವಾಗಿ 2005ರಲ್ಲಿ ಈ ರೈಲಿನ ಸಂಚಾರವನ್ನು ನಿಲ್ಲಿಸಲಾಗಿತ್ತು. ಆನಂತರ, ಬ್ರಾಡ್ ಗೇಜ್ ಹಳಿಯಾಗಿ ಪರಿವರ್ತನೆ ಮಾಡಲಾಗಿದೆ. ಅಂದು ಓಡುತ್ತಿದ್ದ ಪ್ಯಾಸೆಂಜರ್ ರೈಲು ಮಂಗಳೂರಿನಿಂದ ಕಬಕ- ಪುತ್ತೂರು ನಡುವೆ ಓಡಾಟ ನಡೆಸುತ್ತಿದ್ದು, ಅದನ್ನು ಸುಬ್ರಹ್ಮಣ್ಯದ ವರೆಗೆ ವಿಸ್ತರಣೆ ಮಾಡಬೇಕು.ಮಂಗಳೂರು – ಸುಬ್ರಹ್ಮಣ್ಯ ಮಧ್ಯೆ ರೈಲು ಓಡಾಟವಾದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ, ಕಾಲೇಜಿಗೆ ಹೋಗುವವರಿಗೆ ಉಪಯೋಗವಾಗಲಿದೆ. ಗ್ರಾಮಾಂತರ ಪ್ರದೇಶವಾದ ಸುಳ್ಯದಿಂದ ಮಂಗಳೂರಿಗೆ ಪ್ರತಿದಿನ ಓಡಾಟ ಮಾಡುವವರಿದ್ದಾರೆ. ಅವರಿಗೂ ಉಪಯುಕ್ತ ಆಗಲಿದೆ. ಇದು ಸೌತ್ ವೆಸ್ಟರ್ನ್ ರೈಲ್ವೇ ವಿಭಾಗದಲ್ಲಿದ್ದು, ನಮ್ಮ ಜಿಲ್ಲೆಯ ಒಳಗೆ ಸಂಚರಿಸುವ ಏಕೈಕ ಪ್ಯಾಸೆಂಜರ್ ರೈಲಾಗಿದೆ. ಜನಸಾಮಾನ್ಯರ ಹಿತದೃಷ್ಟಿಯಿಂದ ಈ ರೈಲನ್ನು ಸುಬ್ರಹ್ಮಣ್ಯದ ವರೆಗೂ ವಿಸ್ತರಣೆ ಮಾಡಬೇಕು ಎಂದು ರೈಲ್ವೇ ಸಚಿವರನ್ನು ಮನವಿ ಮಾಡಿದ್ದಾರೆ. ಇದಕ್ಕುತ್ತರಿಸಿದ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್, ಸೇನೆಯಿಂದ ನಿವೃತ್ತಿ ಪಡೆದು ಸಂಸದರಾಗಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ ಬಗ್ಗೆ ಗೌರವ ಹೊಂದಿದ್ದು, ರೈಲ್ವೇ ವಿಚಾರಗಳ ಬಗ್ಗೆ ಯಾವುದೇ ಮನವಿಯಿದ್ದರೂ ನನ್ನ ಕಚೇರಿಗೆ ಬಂದು ವೈಯಕ್ತಿಕವಾಗಿ ಚರ್ಚಿಸಬಹುದು. ಪರಿಹರಿಸಲು ಮುಕ್ತನಿದ್ದೇನೆ ಎಂದು ಹೇಳಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ಸ್ಪೆಲ್ ಬೀ ರಾಜ್ಯಮಟ್ಟದ ಗ್ರ್ಯಾಂಡ್ ಫಿನಾಲೆ: ಮೇರಿಹಿಲ್ ಮೌಂಟ್ ಕಾರ್ ಮೆಲ್ ಸೆಂಟ್ರಲ್ ಸ್ಕೂಲ್ ನ ವಿದ್ಯಾರ್ಥಿನಿ ಸಿಯೆಲ್ ಮರ್ಲಿನ್ ಮೊಂತೇರೊ ಪ್ರಥಮ ರ‍್ಯಾಂಕ್

ಮಂಗಳೂರು: ಭಾರತದ ನಂ.1 ಸ್ಪೆಲ್ ಬೀ ವಿಜ್ ನ್ಯಾಷನಲ್ ಸ್ಪೆಲ್ ಬೀ ನಡೆಸಿದ 2023-24ನೇ ಸಾಲಿನ ರಾಜ್ಯಮಟ್ಟದ ಗ್ರ್ಯಾಂಡ್ ಫಿನಾಲೆಯಲ್ಲಿ ನಗರದ ಮೇರಿಹಿಲ್ ನ ಮೌಂಟ್ ಕಾರ್ ಮೆಲ್ ಸೆಂಟ್ರಲ್ ಸ್ಕೂಲ್ ನ 9ನೇ ತರಗತಿ ವಿದ್ಯಾರ್ಥಿನಿ ಸಿಯೆಲ್ ಮರ್ಲಿನ್ ಮೊಂತೇರೊ ಅವರು ಪ್ರಥಮ ರ‍್ಯಾಂಕ್ ಪಡೆದಿದ್ದಾರೆ.ಸಿಯೆಲ್ ಮರ್ಲಿನ್ ಮೊಂತೇರೊ ಅವರು ಬಜಪೆ ಕರಂಬಾರಿನ ವಾಲ್ಟರ್ ಮೊಂತೇರೊ ಹಾಗೂ ಕಿರಣ್ ಶರ್ಲಿ ಡಿಸೋಜ ಅವರ ಪುತ್ರಿ. Mangalore, July 23, 2024 — Ciel Merlyn Monteiro, a class 9 student of Mount Carmel Central School, Maryhill in the city, has secured the first rank in the 2023-24 state level grand finale conducted by India’s No.1 Spell Bee WIZ National Spell Bee competition. Ciel Merlyn Monteiro is the daughter of Walter Monteiro of Bajpe Karambara and Kiran Shirley D’Souza.

ರಾಷ್ಟ್ರೀಯ ವಾರ್ತೆಗಳು

2024ರ ಬಜೆಟ್ ‘ನವಯುಗ-ನವಪಥ’ ಕಾರ್ಯಸೂಚಿಗೆ ಮುನ್ನುಡಿಯಾಗಿದೆ. ವಿಕಸಿತ ಭಾರತಕ್ಕೆ ಈ ಬಜೆಟ್ ದಾರಿದೀಪವಾಗಲಿದೆ – ಕ್ಯಾಪ್ಟನ್ ಬ್ರಿಜೇಶ್ ಚೌಟ

ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿಕಸಿತ ಭಾರತದ ಕುರಿತು ಅವರಿಗಿರುವ ಬದ್ಧತೆಯನ್ನು ಮತ್ತಷ್ಟು ಹೆಚ್ಚಿಸಿದೆ.ಮೋದಿ 3.0 ನ ಸಂಕಲ್ಪ ಪತ್ರದಲ್ಲಿ ಮಾಡಲಾದ ಎಲ್ಲಾ ಭರವಸೆಗಳನ್ನು ಪೂರ್ಣಗೊಳಿಸಲು ಇಟ್ಟಿರುವ ಮೊದಲ ಹೆಜ್ಜೆಯಾಗಿದೆಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದ್ದಾರೆ.ದಕ್ಷಿಣ ಕನ್ನಡಕ್ಕೆ ಸಂಬಂಧಿಸಿದಂತೆ ಕೇಂದ್ರ ಬಜೆಟ್‌ನ ಒಂಬತ್ತು ಆದ್ಯತೆಗಳು ನಾನು ಹಾಕಿಕೊಂಡಿರುವ ಕಾರ್ಯಸೂಚಿ ‘ನವಯುಗ-ನವಪಥ’ಕ್ಕೆ ಪೂರಕವಾಗಲಿದೆ. ನಮ್ಮ 9 ಆದ್ಯತೆಗಳ ಗುರಿಯನ್ನು ಸಮರ್ಥವಾಗಿ ಪೂರ್ಣಗೊಳಿಸಲು ಈ ಬಜೆಟ್ ಸಹಕಾರಿಯಾಗಲಿದೆ. ಬಜೆಟ್ ನ ಒಂಬತ್ತು ಆದ್ಯತೆಗಳು:1) ಕೃಷಿಯಲ್ಲಿನ ಉತ್ಪಾದಕತೆ ಮತ್ತು ಚೇತರಿಕೆ.2) ಉದ್ಯೋಗ ಮತ್ತು ಕೌಶಲ್ಯ ಅಭಿವೃದ್ಧಿ3) ಅಂತರ್ಗತ ಮಾನವ ಸಂಪನ್ಮೂಲ ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯ4) ಉತ್ಪಾದನೆ ಮತ್ತು ಸೇವೆಗಳು5) ನಗರಾಭಿವೃದ್ಧಿ6) ಇಂಧನ ಭದ್ರತೆ7) ಮೂಲಸೌಕರ್ಯ8) ಆವಿಷ್ಕಾರ, ಸಂಶೋಧನೆ ಮತ್ತು ಅಭಿವೃದ್ಧಿ9) ಮುಂದಿನ ಪೀಳಿಗೆಯ ಸುಧಾರಣೆಗಳು . ನರೇಂದ್ರ ಮೋದಿಯವರ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ನ ದೃಷ್ಟಿಕೋನಕ್ಕೆ ಅನುಗುಣವಾಗಿ ಆಂತರಿಕ ಬೆಳವಣಿಗೆಗೆ ಸಹಕಾರಿಯಾಗುವ ಮೂಲಕ ವಿವಿಧ ವಲಯಗಳಿಗೆ, ವಿವಿಧ ಪ್ರದೇಶಗಳಲ್ಲಿ ಹೊಸ ಅವಕಾಶಗಳನ್ನು ಸೃಷ್ಟಿ ಮಾಡಲು ಈ ಬಜೆಟ್ ಸಹಕಾರಿಯಾಗಲಿದೆ.ಪಿ ಎಂ ನರೇಂದ್ರ ಮೋದಿ ಅವರು ಹೇಳಿದಂತೆ “ಇಂದಿನ ಬಜೆಟ್ ಭಾರತವನ್ನು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕ ಶಕ್ತಿಯನ್ನಾಗಿ ಮಾಡುವಲ್ಲಿ ವೇಗವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಅಭಿವೃದ್ಧಿ ಹೊಂದಿದ ಭಾರತಕ್ಕೆ ದೃಢವಾದ ಅಡಿಪಾಯವನ್ನು ಹಾಕುತ್ತದೆ”. ಎಂಬ ಅವರ ಮಾತು ಭವ್ಯ ಭಾರತದ ಭವಿಷ್ಯವನ್ನು ರೂಪಿಸಲಿದೆ.ಸ್ಟಾರ್ಟ್-ಅಪ್‌ಗಳು ಮತ್ತು ನಾವಿನ್ಯತೆ ಪರಿಸರದ ವ್ಯವಸ್ಥೆಯ ಮೇಲೆ ಗಮನ ಕೇಂದ್ರೀಕರಿಸುವುದು, MSME ಮತ್ತು ಉತ್ಪಾದನೆಗೆ ಬೆಂಬಲ ನೀಡುವುದು – ಉತ್ಪಾದನಾ ವಲಯದಲ್ಲಿ ಹೆಚ್ಚುವರಿ ಉದ್ಯೋಗಕ್ಕೆ ಸಹಾಯ ಮಾಡುವುದು, ನಗರಗಳನ್ನು ಬೆಳವಣಿಗೆಯ ಕೇಂದ್ರಗಳನ್ನಾಗಿ ಅಭಿವೃದ್ಧಿಪಡಿಸುವ ಕಾರ್ಯಕ್ರಮ, ಮೊದಲ ಬಾರಿಗೆ ಉತ್ಪಾದನಾ ವಲಯಕ್ಕೆ ಉದ್ಯೋಗಿಗಳು ಪ್ರವೇಶ ಮಾಡಲು ಉತ್ತೇಜಿಸುವುದು ಮುಂತಾದವುಗಳ ಮೂಲಕ ಈ ಬಜೆಟ್ ಹೊಸ ದಾರಿಯನ್ನು ತೆರೆದಿದೆ.ಯುವಕರಿಗೆ ಮತ್ತು ಮಹಿಳೆಯರಿಗೆ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳು, ಶೈಕ್ಷಣಿಕ ಸಾಲಗಳು, ಸೀಗಡಿ ಕೃಷಿ ಮತ್ತು ಸಂಸ್ಕರಣೆಗೆ ಬೆಂಬ, ತರಕಾರಿ ಉತ್ಪಾದನಾ ಕ್ಲಸ್ಟರ್, ಮುದ್ರಾ ಸಾಲ ಮಿತಿಯನ್ನು 20 ಲಕ್ಷಕ್ಕೆ ಹೆಚ್ಚಿಸಿರುವುದು, ಹೂಡಿಕೆಗೆ ಸಿದ್ಧವಾದ “ಪ್ಲಗ್ ಆಂಡ್ ಪ್ಲೇ”ಕೈಗಾರಿಕಾ ಪಾರ್ಕುಗಳ ಅಭಿವೃದ್ಧಿಯ ಪ್ರಯತ್ನಗಳು ನಮ್ಮ ಕ್ಷೇತ್ರದಲ್ಲಿಯೂ ಅಳವಡಿಸಿಕೊಂಡು ನಮ್ಮ ನವಪಥದ ಕಾರ್ಯ ಸೂಚಿಗೆ ಮೈಲುಗಲ್ಲಾಗಲಿದೆ‌.ಪ್ರಧಾನ ಮಂತ್ರಿಗಳು ಹೇಳಿದಂತೆ “ಇಂದಿನ ಬಜೆಟ್ ಹೊಸ ಅವಕಾಶಗಳನ್ನು, ಹೊಸ ಉದ್ಯೋಗ ಮತ್ತು ಸ್ವಯಂ ಉದ್ಯೋಗದ ಅವಕಾಶಗಳನ್ನು ತಂದಿದೆ”. ಭಾರತವು ಸ್ವಯಂ ಚಾಲಿತ, ಸುಸ್ಥಿರ ಮತ್ತು ಸಮಗ್ರವಾಗಿ ಬೆಳೆದು ಜಗತ್ತಿಗೆ ಮಾದರಿಯಾಗಿ ವಿಶ್ವ ನಾಯಕನಾಗಲಿದೆ.ಈ ಬಜೆಟ್ ನ ಪ್ರಯೋಜನಗಳನ್ನು ನಮ್ಮ ಕ್ಷೇತ್ರದಲ್ಲಿ ಹೇಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬಹುದು ಎಂಬುದರ ಕುರಿತಾಗಿ ಮುಂದಿನ ದಿನಗಳಲ್ಲಿ ವಿಶೇಷವಾಗಿ ಗಮನಹರಿಸಲಾಗುವುದೆಂದು ಕ್ಯಾಪ್ಟನ್ ಬ್ರಿಜೇಶ್ ಚೌಟ ತಿಳಿಸಿದ್ದಾರೆ

ರಾಷ್ಟ್ರೀಯ ವಾರ್ತೆಗಳು

ಎಲ್ಲ ವರ್ಗದ ಜನತೆಯ ಹಿತ ಕಾಯುವ ಬಜೆಟ್ : ನಳಿನ್ ಕುಮಾರ್ ಕಟೀಲ್.

ನವದೆಹಲಿ : ರೈತರು, ಮಹಿಳೆಯರು, ಉದ್ದಿಮೆದಾರರ ಸಹಿತ ಎಲ್ಲ ವರ್ಗದ ಜನತೆಯ ಹಿತ ಕಾಯುವ ಬಜೆಟ್ ಮಂಡನೆಯಾಗಿದೆ. ಕೇಂದ್ರ ಸರ್ಕಾರದ ವಿಕಸಿತ ಭಾರತ ಸಂಕಲ್ಪಕ್ಕೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ಭದ್ರ ತಳಪಾಯ ಹಾಕಿದೆ. ಗ್ರಾಮೀಣಾಭಿವೃದ್ಧಿಗೆ 2.66 ಲಕ್ಷ ಕೋಟಿ ರೂ., ಶಿಕ್ಷಣ,ಉದ್ಯೋಗ ಮತ್ತು ಕೌಶಲಾಭಿವೃದ್ಧಿಗೆ 1.48 ಲಕ್ಷ ಕೋಟಿ ರೂ., ಮಹಿಳೆಯರ ಅಭಿವೃದ್ಧಿಗೆ 3 ಲಕ್ಷ ಕೋಟಿ ರೂ., ಕೃಷಿ ವಲಯಕ್ಕೆ 1.52 ಲಕ್ಷ ರೂ. ಮೀಸಲಿರಿಸುವ ಮೂಲಕ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ದಿಟ್ಟ ಕ್ರಮ ಕೈಗೊಳ್ಳಲಾಗಿದೆ. ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಮುದ್ರಾ ಯೋಜನೆಯ ಸಾಲದ ಮಿತಿ ಏರಿಕೆ ಸ್ವಾಗತಾರ್ಹವೆಂದು , ಮಾಜಿ ಸಂಸದ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕೇಂದ್ರ ಬಜೆಟ್ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.

Scroll to Top