Author name: editor

ಪ್ರಾದೇಶಿಕ ವಾರ್ತೆಗಳು

ನೀರುಪಾಲಾಗಿದ್ದ ವೃದ್ಧೆಯ ಶವಕ್ಕೆ ಹೆಗಲು ಕೊಟ್ಟ ಮಂಗಳೂರಿನ ಪತ್ರಕರ್ತರು!. ಶಿರೂರು ಗುಡ್ಡ ಕುಸಿತ ಪ್ರಕರಣ.

ಶಿರೂರು: ಶಿರೂರು ಗುಡ್ಡ ಕುಸಿತ ದುರಂತದಲ್ಲಿ ನೀರುಪಾಲಾಗಿದ್ದ ಉಳವರೆ ಗ್ರಾಮದ ನಿವಾಸಿ ಸಣ್ಣಿ ಹನುಮಂತ ಗೌಡ ಎಂಬ ವೃದ್ಧೆಯ ಮೃತದೇಹ ಮಂಗಳವಾರ ಬೆಳಗ್ಗೆ ಗಂಗಾವಳಿ ನದಿಯ ತೀರದಲ್ಲಿ ಪತ್ತೆಯಾಗಿದ್ದು, ಪೋಸ್ಟ್ ಮಾರ್ಟಂ ನಡೆಸಿದ ಬಳಿಕ ಕುಟುಂಬಿಕರಿಗೆ ಹಸ್ತಾಂತರ ಮಾಡಲಾಯಿತು.ದುರಂತದಲ್ಲಿ ಉಳವರೆ ಗ್ರಾಮದ 6 ಮನೆಗಳು ಸಂಪೂರ್ಣ ನಾಮಾವಶೇಷವಾಗಿದೆ. 18ರಷ್ಟು ಮನೆಗಳು ಭಾಗಶ: ಹಾನಿಗೊಳಗಾಗಿದೆ.ಬೇಸರದ ಸಂಗತಿ ಎಂದರೆ ಮೃತದೇಹವನ್ನು ಕುಟುಂಬಿಕರಿಗೆ ಹಸ್ತಾಂತರ ಮಾಡುವ ಸಂದರ್ಭದಲ್ಲಿ ಜಿಲ್ಲಾಡಳಿತದ ಅಧಿಕಾರಿಗಳು, ಕಂದಾಯ ಇಲಾಖೆ, ಸ್ಥಳೀಯ ಆಡಳಿತ, ಶಾಸಕರು ಹೀಗೆ ಯಾರೆಂದರೆ ಯಾರೂ ಇರಲಿಲ್ಲ. ಗ್ರಾಮದ ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ ಮಹಿಳೆಯರು ಗಂಜಿ ಕೇಂದ್ರದಲ್ಲಿದ್ದಾರೆ. ಹೊರುವವರಿಲ್ಲದೆ ರಸ್ತೆಯೂ ಸರಿಯಿಲ್ಲದೇ ವೃದ್ಧೆಯ ಶವ ಆಂಬುಲೆನ್ಸ್ ನಲ್ಲಿ ಉಳಿದಿದ್ದು ಕೊಳೆತ ವಾಸನೆಯಿಂದಾಗಿ ಯಾರೂ ಹೊರಲು ಸಿದ್ಧರಿರಲಿಲ್ಲ. ಈ ವೇಳೆ ಸ್ಥಳದಲ್ಲಿದ್ದ ಮಂಗಳೂರಿನ ಪತ್ರಕರ್ತರು ಮೃತದೇಹವನ್ನು ತಾವೇ ಹೊತ್ತುಕೊಂಡು ಸಾಗಿ ಮನೆಯವರಿಗೆ ಒಪ್ಪಿಸಿ ಮುಂದಿನ ಅಂತಿಮ ಸಂಸ್ಕಾರ ನಡೆಸಲು ನೆರವಾಗಿ ಮಾನವೀಯತೆ ಮೆರೆದಿದ್ದಾರೆ. ನಿರಾಶ್ರಿತರು ಮತ್ತು ಘಟನೆಯಲ್ಲಿ ಸಂತ್ರಸ್ತರಾದವರಿಗೆ ಸಾಂತ್ವನ ನೀಡಲು ಮಂಗಳೂರಿನಿಂದ ತೆರಳಿದ್ದ ಪತ್ರಕರ್ತರ ಚಾರಣ ತಂಡದ ಸದಸ್ಯರಾದ ಮೋಹನ್ ಕುತ್ತಾರ್, ಶಶಿ ಬೆಳ್ಳಾಯರು, ಆರಿಫ್ ಯುಆರ್ ಕಲ್ಕಟ್ಟ, ಗಿರೀಶ್ ಮಳಲಿ, ಶಿವಶಂಕರ್ ಅವರು ಶವಸಂಸ್ಕಾರದಲ್ಲಿ ಸಹಕರಿಸಿದರು.ಟ್ಯಾಂಕರ್ ಸ್ಫೋಟವೇ ಘಟನೆಗೆ ಕಾರಣ!ಶಿರೂರು ಗುಡ್ಡ ಕುಸಿತ ಉಂಟಾದಾಗ ಹೆದ್ದಾರಿಯಲ್ಲಿದ್ದ ಗ್ಯಾಸ್ ಟ್ಯಾಂಕರ್ ನೀರಿಗೆ ಬಿದ್ದು ಭಾರೀ ಸದ್ದಿನೊಂದಿಗೆ ಸ್ಫೋಟ ಸಂಭವಿಸಿತ್ತು. ಇದರಿಂದಲೇ ಉಳವರೆ ಗ್ರಾಮ ನಾಶಗೊಂಡು ಹಲವರು ಪ್ರಾಣ ಕಳೆದುಕೊಳ್ಳುವಂತಾಯ್ತು ಎನ್ನುವ ಅಭಿಪ್ರಾಯ ಸ್ಥಳೀಯರಿಂದ ವ್ಯಕ್ತವಾಗಿದೆ. ನೀರು‌ ಚಿಮ್ಮುತ್ತಿದ್ದಂತೆ ಬಾಂಬ್‌ನಂತೆ ಸ್ಫೋಟದ ಸದ್ದು ಕೇಳಿದ್ದಾಗಿ ಸ್ಥಳೀಯರು ಮಾಹಿತಿ ನೀಡಿರುವುದರಿಂದ ಈ ಸಂಶಯ ಬಲವಾಗಿದೆ. ಈ ನಡುವೆ ಕೇರಳ ಟ್ಯಾಂಕರ್ ಡ್ರೈವರ್ ಅರ್ಜುನನಿಗಾಗಿ‌ ಶೋಧ ಮುಂದುವರಿದಿದೆ. ಮೋಹನ್ ಕುತ್ತಾರ್, ಶಶಿ ಬೆಳ್ಳಾಯುರ್, ಗಿರೀಶ್ ಮಳಲಿ, ಆರಿಫ್ ಯು ಆರ್, ಶಿವರಾಜ್ ಪತ್ರಕರ್ತರ ಶೌರ್ಯ ತಂಡ ದಲ್ಲಿದ್ದರು.

ಪ್ರಾದೇಶಿಕ ವಾರ್ತೆಗಳು

ಚೆನ್ನೈ ಯಲ್ಲಿ ಜನ ಮನ ಸೂರೆಗೊಂಡ ವಿಭಾ ಶ್ರೀನಿವಾಸ್ ನಾಯಕ್ ಸಂಗೀತ ಕಾರ್ಯಕ್ರಮ

ಮಂಗಳೂರು, ಜುಲೈ 22,ಚೆನ್ನೈ ಟಿ ನಗರದ ಮ್ಯೂಸಿಕ್ ಹಾಲ್ ನಲ್ಲಿ ಸಂಯುಕ್ತ ಗೌಡ ಸಾರಸ್ವತ ಸಭಾ ವತಿಯಿಂದ ಶ್ರೀ ಜೆ. ಎಸ್. ಪ್ರಭು ಹಾಗೂ ಶ್ರೀಮತಿ ರಮಾಬಾಯಿ ಪ್ರಭು ಸ್ಮರಣಾರ್ಥ ವಿಭಾ ಶ್ರೀನಿವಾಸ್ ನಾಯಕ್ ತಂಡ ದಿಂದ ನಡೆದ ಸಂಗೀತ ಕಾರ್ಯಕ್ರಮ ಜನ ಮನ ಸೂರೆಗೊಳಿಸಿತು.ಶಿರಸಿಯ ಭರತ್ ಹೆಗ್ಡೆ ಹಾರ್ಮೋನಿಯಂ,ಮೂಡಬಿದಿರೆಯ ವಿಗ್ನೇಶ್ ಪ್ರಭು ತಬಲ ದಲ್ಲಿ ಹಾಗೂ ಚೆನ್ನೈ ನ ಪ್ರಮೋದ್ ಕಾಮತ್ ತಾಳದಲ್ಲಿ ಸಾಥ್ ನೀಡಿದರು .ಸಂಯುಕ್ತ ಗೌಡ ಸಾರಸ್ವತ ಸಭಾ ಅಧ್ಯಕ್ಷ ಡಾ. ಎಸ್. ದಿನೇಶ್ ನಾಯಕ್ ಅವರು ಸಂಗೀತ ಕಲಾವಿದರನ್ನು ಸನ್ಮಾನಿಸಿದರು.

ಪ್ರಾದೇಶಿಕ ವಾರ್ತೆಗಳು

ಕಲ್ಲಬೆಟ್ಟು ಸೇವಾ ಸಹಕಾರಿ ಸಂಘದ ಆಶ್ರಯದಲ್ಲಿ ಖ್ಯಾತ ಮಕ್ಕಳ ತಜ್ಞ ಡಾ. ಸುಧಾಕರ್ ಶೆಟ್ಟಿಯವರಿಂದ ಮಕ್ಕಳ ಉಚಿತ ಆರೋಗ್ಯ ತಪಾಸಣೆ ಮತ್ತು ಅಪೌಷ್ಟಿಕತೆ ನಿವಾರಣೆ ಶಿಬಿರ ನಡೆಯಿತು

ಮಂಗಳೂರು : ಕಲ್ಲಬೆಟ್ಟು ಸೇವಾ ಸಹಕಾರಿ ಸಂಘದ ಆಶ್ರಯದಲ್ಲಿ ಖ್ಯಾತ ಮಕ್ಕಳ ತಜ್ಞ, ದ.ಕ.ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಹಾಗೂ ಹೊರನಾಡ ಕನ್ನಡ ರತ್ನ ಪ್ರಶಸ್ತಿ ಪುರಸ್ಕೃತ ಡಾ‌.ಸುಧಾಕರ ಶೆಟ್ಟಿ ಅವರಿಂದ ಮಕ್ಕಳ ಉಚಿತ ಆರೋಗ್ಯ ತಪಾಸಣೆ ಮತ್ತು ಅಪೌಷ್ಟಿಕತೆ ನಿವಾರಣಾ ಶಿಬಿರವು ಕಲ್ಲಬೆಟ್ಟು ಸೇವಾ ಸಹಕಾರಿ ಸಂಘದ ಅಕ್ಷಯಧಾಮದಲ್ಲಿ ಜುಲೈ 14 ರಂದು ನಡೆಯಿತು. ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ12 ರ ವರೆಗೆ ನಡೆದ ಈ ಶಿಬಿರದ ಪ್ರಯೋಜನವನ್ನು ಕಲ್ಲಬೆಟ್ಟು ಮತ್ತು ಆಸುಪಾಸಿನ ಗ್ರಾಮಗಳ ಮಕ್ಕಳು ಪಡೆದುಕೊಂಡರೆಂದು ಸಂಘದ ಅಧ್ಯಕ್ಷ ಸುರೇಶ್ ಕೋಟ್ಯಾನ್, ಉಪಾಧ್ಯಕ್ಷ ದಿಲೀಪ್ ಕುಮಾರ್ ಶೆಟ್ಟಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿತಾ ಆರ್.ಶೆಟ್ಟಿ ಅವರು ತಿಳಿಸಿದ್ದಾರೆ .ಈ ಶಿಬಿರಕ್ಕೆ ಆಳ್ವಾಸ್ ಎಜುಕೇಶನ್ ಫೌಂಡೇಶನ್ ನ ಸಹಕಾರವಿತ್ತು.

ಕರ್ನಾಟಕ ವಾರ್ತೆಗಳು

ಶ್ರೀ ಕ್ಷೇತ್ರ ಕರ್ಕಿಯ ದೈವಜ್ಞ ಬ್ರಾಹ್ಮಣ ಮಠಾಧೀಶರಾದ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತಿ ಮಹಾಸ್ವಾಮಿಗಳವರ 39ನೇ ವರ್ಷದ ಚಾತುರ್ಮಾಸ್ಯ ಹಾಗೂ ಕಿರಿಯ ಶ್ರೀಗಳಾದ ಸುಜ್ಞಾನೇಶ್ವರ ಭಾರತಿ ಸ್ವಾಮಿಗಳವರು ಪ್ರಥಮ ವರ್ಷದ ಚಾತುರ್ಮಾಸ್ಯ ವೃತಾಚರಣೆ ಸಂಕಲ್ಪ ಶಿರಸಿಯ ದೈವಜ್ಞ ಕಲ್ಯಾಣ ಮಂಟಪದಲ್ಲಿ ರವಿವಾರ ಗುರುಪೂರ್ಣಿಮೆ ದಿನದಂದು ನೆರವೇರಿತು.

ಶಿರಸಿ: ಬೆಳಿಗ್ಗೆ ದೇವತಾ ಪ್ರಾರ್ಥನೆ, ಶ್ರೀಗಳವರಿಂದ ವ್ಯಾಸ ಪಂಚಕ, ಆದಿಶಂಕರಚಾರ್ಯರ ಪೂಜೆ ಮೂಲಕ ಚಾತುರ್ಮಾಸ್ಯ ವೃತಾಚರಣೆ ಸಂಕಲ್ಪಿಸಿದರು.ಬಳಿಕ ದೈವಜ್ಞ ಬ್ರಾಹ್ಮಣ ಸಮಾಜದ ವತಿಯಿಂದ ಕುಲಗುರುಗಳ ಪಾದುಕಾ ಪೂಜೆ, ಸಭಾ ಕಾರ್ಯಕ್ರಮ, ಶ್ರೀಗಳಿಂದ ಆಶೀರ್ವಚನ, ವ್ಯಾಸಕ್ಷತೆ ನಡೆಯಿತು. 12.30ಕ್ಕೆ ಶ್ರೀಗಳ ಪಟ್ಟದ ದೇವರ ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಯಿತು.ಸೆ. 18ರಂದು ಚಾತುರ್ಮಾಸ್ಯದ ಸೀಮೋಲ್ಲಂಘನ ಕಾರ್ಯಕ್ರಮ ನಡೆಯಲಿದೆ ಎಂದು ಶ್ರೀ ಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.ಸತೀಶ್ ಕಾಪಿಕಾಡ್.

ಪ್ರಾದೇಶಿಕ ವಾರ್ತೆಗಳು

ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ವಿಶ್ವ ಮೆದುಳಿನ ದಿನಾಚರಣೆ. ವೆನ್ಲಾಕ್ ಆಸ್ಪತ್ರೆಯ ಆವರಣದಲ್ಲಿ, ಬೆಂಗಳೂರಿನ ನಿಮಾನ್ಸ್ ಸಹಯೋಗದ ಕರ್ನಾಟಕ ಬ್ರೈನ್ ಹೆಲ್ತ್ ಇನಿಶಿಯೇಟಿವ್ ಸಿಬ್ಬಂದಿಗಳ ವತಿಯಿಂದ ವಿಶ್ವಮೆದುಳಿನ ದಿನದ ಅಂಗವಾಗಿ ಮೆದುಳಿನ ಆರೋಗ್ಯದ ಬಗ್ಗೆ ಸಾರ್ವಜನಿಕರಿಗೆ ವಿಶೇಷ ಮಾಹಿತಿ ಹಾಗೂ ಮಾರ್ಗದರ್ಶನ ನೀಡಲಾಯಿತು.

ಮಂಗಳೂರು: ಕರ್ನಾಟಕ ಮೆದುಳಿನ ಆರೋಗ್ಯ ಉಪಕ್ರಮ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕುಷ್ಠ ರೋಗ ನಿರ್ಮೂಲನಾಧಿಕಾರಿಗಳ ಕಚೇರಿ, ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮೆದುಳು ದಿನ  ಕಾರ್ಯಕ್ರಮವನ್ನು ಜುಲೈ 22ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಆವರಣದಲ್ಲಿ ಹಮ್ಮಿಕೊಳ್ಳಲಾಯಿತು.ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ನಿವಾಸಿ ವೈದ್ಯಧಿಕಾರಿಗಳಾದ ಡಾ. ಸುಧಾಕರ ಟಿ ಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ವಿಶ್ವ ಮೆದುಳು ದಿನ ಆಚರಿಸುವ ಉದ್ದೇಶವನ್ನು ಕುರಿತು ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಹಿರಿಯ ವೈದ್ಯಧಿಕಾರಿಗಳಾದ ಮತ್ತು ಜಿಲ್ಲಾ ಆಸ್ಪತ್ರೆಯ ಮಟ್ಟದಲ್ಲಿ ಬ್ರೈನ್ ಹೆಲ್ತ್ ಕ್ಲಿನಿಕ್ ನ ನೋಡೆಲ್ ಆಫೀಸರ್ ಆದ ಡಾ. ಗಿರೀಶ್ ಕುಮಾರ್ ರವರು ಮಾತನಾಡಿ ನಮ್ಮ ದೇಹದಲ್ಲಿ ಮೆದುಳು ಯಾವ ರೀತಿ ಕಾರ್ಯ ನಿರ್ವಹಿಸುತ್ತದೆ ಮತ್ತು ಮೆದುಳಿನ ಆರೋಗ್ಯವನ್ನು ನಾವು ಕಾಪಾಡಿಕೊಂಡು ಬರದಿದ್ದರೆ ಯಾವ ರೀತಿಯ ನರಕೋಶದ ತೊಂದರೆಗಳು ಬರುತ್ತದೆ ಎನ್ನುವುದನ್ನು ವಿವರಿಸಿದರು. Palliative care ನ Incharge ಮತ್ತು ಐಎಂಎ ಕುಟುಂಬ ವೈದ್ಯರ ವಿಭಾಗದ ರಾಜ್ಯಧ್ಯಕ್ಷರಾದ ಡಾ. ಅಣ್ಣಯ್ಯ ಕುಲಾಲ್ ರವರು, ಮೂಳೆರೋಗ ವಿಭಾಗದ ಮುಖ್ಯಸ್ಥರಾದ ಡಾ. ಕೆ. ಆರ್ ಕಾಮತ್ ರವರು, ಮನೋವೈದ್ಯಕೀಯ ರೋಗ ವಿಭಾಗದ ಮುಖ್ಯಸ್ಥರಾದ ಡಾ. ಸುನಿಲ್ ಕುಮಾರ್ ರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಅದೇ ರೀತಿ ಈ ಕಾರ್ಯಕ್ರಮದಲ್ಲಿ ವೈದ್ಯಕೀಯ ಅಧಿಕಾರಿಗಳಾದ ಡಾ. ಮನೀಶ್, ಡಾ. ಅಶ್ವಿನ್, ಡಾ. Thafsiya ರವರು ಮತ್ತು ಬ್ರೈನ್ ಹೆಲ್ತ್ ಕ್ಲಿನಿಕ್ ನ ವೈದ್ಯರಾದ ಡಾ. ವಂಶಿ ಕೃಷ್ಣ ರೆಡ್ಡಿ ಯವರು ಮತ್ತು ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಬ್ರೈನ್ ಹೆಲ್ತ್ ಕ್ಲಿನಿಕ್ ನ ಮನಶಾಸ್ತ್ರಜ್ಞಾರಾದ ಕುಮಾರಿ ನಿಶ್ಚಿತ ಬಿ ಎಲ್ ರವರು ಪ್ರಾರ್ಥಿಸಿದರು. ಜಿಲ್ಲಾ ಸಂಯೋಜಕರಾದ ಶ್ರೀಮತಿ ಸೌಮ್ಯ ಆರ್ ಕೆ ರವರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. Physiotherapist ಆದ ಕುಮಾರಿ ಐಶ್ವರ್ಯ ಎಮ್ ಬಿ ಮತ್ತು ಸ್ಟಾಫ್ ನರ್ಸ್ ಆದ ಶ್ರೀಮತಿ ದಿವ್ಯ ಕುಮಾರಿ ಜಿ ಯವರು ಕಾರ್ಯಕ್ರಮ ಆಯೋಜಿಸುವಲ್ಲಿ ಸಹಕರಿಸಿದರು. NTCP ಯ ಆಪ್ತಸಮಾಲೋಚಕರಾದ ವಿಜಯ್ ಕುಮಾರ್ ರವರು ವಂದಿಸಿದರು.

ಪ್ರಾದೇಶಿಕ ವಾರ್ತೆಗಳು

ಮಾತಾ ಅಮೃತಾನಂದಮಯಿ ಮಠದ ವತಿಯಿಂದ ಗುರು ಪೂರ್ಣಿಮಾ ಉತ್ಸವ.

ಮಂಗಳೂರು : ಗುರುಪೂರ್ಣಿಮೆಯು ವ್ಯಕ್ತಿಯೊಳಗಿನ ದೋಷಗಳನ್ನೆಲ್ಲ ಪರಿಹರಿಸಿ ಆತನನ್ನು ಸ್ವಯಂಪೂರ್ಣ ಮತ್ತು ಸರ್ವಾಂಗೀಣ ವ್ಯಕ್ತಿಯಾಗಿ ರೂಪಿಸುವ ದಿವ್ಯದಿನವಾಗಿದೆ. ಗುರು ಮತ್ತು ಗುರಿ ಎರಡೂ ಆತನನ್ನು ಗೊಂದಲರಹಿತನನ್ನಾಗಿ ಮಾಡುತ್ತದೆ ಎಂದು ಮಾತಾ ಅಮೃತಾನಂದಮಯಿ ಮಠದ ಸ್ವಾಮಿನಿ ಮಂಗಳಾಮೃತ ಪ್ರಾಣ ಅವರು ಹೇಳಿದರು. ನಗರದ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದ ಸಭಾಭವನದಲ್ಲಿ ಮಾತಾ ಅಮೃತಾನಂದಮಯಿ ಮಠದ ವತಿಯಿಂದ ಜುಲೈ21 ರಂದು ಭಾನುವಾರ ಗುರು ಪೂರ್ಣಿಮೆಯನ್ನು ಶ್ರದ್ಧಾ ಭಕ್ತಿಗಳಿಂದ ಆಚರಿಸಲಾಯಿತು. ಮಠದ ಮುಖ್ಯಸ್ಥರಾದ ಸಂಪೂಜ್ಯ ಸ್ವಾಮಿನಿ ಮಂಗಳಾಮೃತ ಪ್ರಾಣರವರು ಆಶೀರ್ವಚನವಿತ್ತು ಇಂದು ಶಾಂತಿ, ಸಮಾಧಾನ ಮತ್ತು ತೃಪ್ತಿಯ ಬದುಕನ್ನು ಬಾಳಬೇಕಾದ ಅಗತ್ಯವಿದೆ. ಇಂದಿನ ಬದುಕಿನ ಅವಶ್ಯಕತೆಯನ್ನು ಮನಗಂಡು ಗುರು ಪೂರ್ಣಿಮೆಯನ್ನು ರೂಪಿಸಿದಂತಿದೆ ಎಂದರು. ಕಾರ್ಯಕ್ರಮದ ಅಂಗವಾಗಿ ಶ್ರೀಗುರು ಪಾದುಕಾ ಪೂಜೆ, ದೇವೀಪೂಜೆ, ಸರ್ವೈಶ್ವರ್ಯ ಪೂಜೆ, ಆರತಿ, ಭಕ್ತರಿಂದ ಕ್ಷೀರಾಭಿಷೇಕ, ಪ್ರಸಾದ ವಿತರಣೆ ಹಾಗೂ ಮಹಾ ಪ್ರಸಾದ ವಿತರಣೆ ಜರುಗಿತು.ಗುರು ಪೂರ್ಣಿಮಾ ದಿನದ ಶುಭ ಸಂದರ್ಭದಲ್ಲಿ ಭಾಗವಹಿಸಿದ ಭಕ್ತರ ಹಾಗೂ ಸಮಾಜದ ಸ್ವಾಸ್ಥ್ಯ ಸಂರಕ್ಷಣೆಗಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು. ಪೂರ್ವಾಹ್ನ ಬೋಳೂರಿನ ಶ್ರೀ ಬ್ರಹ್ಮಸ್ಥಾನ ಕ್ಷೇತ್ರದಲ್ಲಿ ಗುರು ಹೋಮ ಮತ್ತು ಮಹಾ ಮೃತ್ಯುಂಜಯ ಹೋಮ ನೆರವೇರಿಸಲಾಯಿತು.ಈ ಸಂದರ್ಭದಲ್ಲಿ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶ್ರೀ ಲಕ್ಷ್ಮಣ ಅಮೀನ್ ಮತ್ತು ಪದಾಧಿಕಾರಿಗಳು, ಮಾತಾ ಅಮೃತಾನಂದಮಯಿ ಸೇವಾ ಸಮಿತಿಯ ಪೂರ್ವಾಧ್ಯಕ್ಷ ಡಾ. ಜೀವರಾಜ್ ಸೊರಕೆ, ಅಧ್ಯಕ್ಷ ಡಾ. ವಸಂತಕುಮಾರ ಪೆರ್ಲ, ಉಪಾಧ್ಯಕ್ಷ ಸುರೇಶ್ ಅಮೀನ್, ಕಾರ್ಯದರ್ಶಿ ಡಾ. ಕೆ. ಅಶೋಕ್ ಶೆಣೈ, ಯುವಘಟಕ ಆಯುಧ್ ನ ಪದಾಧಿಕಾರಿಗಳು, ಉಡುಪಿ – ಕುಂದಾಪುರ ಘಟಕಗಳಪದಾಧಿಕಾರಿಗಳು, ಸದಸ್ಯರು, ಅಮ್ಮನ ಭಕ್ತರು, ವಿವಿಧ ಜಿಲ್ಲೆಗಳಿಂದ ಆಗಮಿಸಿದ ಭಕ್ತರು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.ಸತೀಶ್ ಕಾಪಿಕಾಡ್.

ಪ್ರಾದೇಶಿಕ ವಾರ್ತೆಗಳು

“ಸ್ವಚ್ಛ ಪರಿಸರವಿದ್ದಲ್ಲಿ ಸ್ವಚ್ಛಂದ ಬದುಕು ಸಾಧ್ಯ“ -ಕರುಣಾಕರ ಎಂ.ಶೆಟ್ಟಿ. ಸುರತ್ಕಲ್ ಬಂಟರ ಸಂಘದಲ್ಲಿ ಸಸಿ ವಿತರಣೆ, ಸಾಧಕರಿಗೆ ಸನ್ಮಾನ

ಸುರತ್ಕಲ್: ಬಂಟರ ಸಂಘ (ರಿ) ಸುರತ್ಕಲ್, ರೋಟರಿ ಕ್ಲಬ್ ಬೈಕಂಪಾಡಿ ಹಾಗೂ ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಷನ್ ಸುರತ್ಕಲ್ ಇದರ ಸಹಯೋಗದಲ್ಲಿ ಮೇಬೈಲು ಸದಾಶಿವ ಶೆಟ್ಟಿ ನೇತೃತ್ವದಲ್ಲಿ 15ನೇ ವರ್ಷದ ಸಸಿ ವಿತರಣಾ ಕಾರ್ಯಕ್ರಮ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದವರಿಗೆ ಗೌರವಾರ್ಪಣೆ ಕಾರ್ಯಕ್ರಮ ಆದಿತ್ಯವಾರ ಇಲ್ಲಿನ ಬಂಟರ ಭವನದಲ್ಲಿ ಜರುಗಿತು.ಉದ್ಘಾಟನೆಯನ್ನು ನೆರವೇರಿಸಿ ಮಾತಾಡಿದ ವಿ.ಕೆ ಸಮೂಹ ಸಂಸ್ಥೆ ಮುಂಬಯಿ ಇದರ ಸಿಎಂಡಿ ಕರುಣಾಕರ ಎಂ. ಶೆಟ್ಟಿ ಮಧ್ಯಗುತ್ತು ಅವರು, “ಸಸಿ ವಿತರಣೆ ಬರೀ ಕಾಟಾಚಾರದ ಕಾರ್ಯಕ್ರಮವಾಗಬಾರದು. ಮನೆಗೆ ಕೊಂಡೊಯ್ದ ಗಿಡವನ್ನು ಮಕ್ಕಳ ಕೈಯಲ್ಲಿ ನೆಡುವಂತೆ ಸಲಹೆ ನೀಡಬೇಕು. ಇದರಿಂದ ಅವರಿಗೂ ಪ್ರಕೃತಿ ಮತ್ತು ಪರಿಸರ ರಕ್ಷಣೆಯ ಕಾಳಜಿ ಮತ್ತು ಪ್ರೀತಿ ಬೆಳೆಯುತ್ತದೆ. ಯಾವ ಗಿಡವೂ ಸಾಯದಂತೆ ನೋಡಿಕೊಳ್ಳಬೇಕು. ಮರಗಳನ್ನು ಬೇಕಾಬಿಟ್ಟಿ ಕಡಿಯುತ್ತಿರುವ ಈ ವೇಳೆಯಲ್ಲಿ ಇದೊಂದು ಸಾರ್ಥಕ ಕಾರ್ಯಕ್ರಮವಾಗಿದೆ. ಸ್ವಚ್ಛ ಪರಿಸರ ಇದ್ದಲ್ಲಿ ನಾವೆಲ್ಲರೂ ಸ್ವಚ್ಛಂದವಾಗಿ ಬದುಕಲು ಸಾಧ್ಯ. ಎಲ್ಲರೂ ಈ ಕಾರ್ಯದಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳೋಣ“ ಎಂದರು. ದಿಕ್ಸೂಚಿ ಮಾತನ್ನಾಡಿದ ಎಕ್ಕಾರು ಬಂಟರ ಸಂಘದ ಅಧ್ಯಕ್ಷ ರತ್ನಾಕರ್ ಶೆಟ್ಟಿ ಅವರು, “ಸುರತ್ಕಲ್ ಬಂಟರ ಸಂಘದ ಆಶ್ರಯದಲ್ಲಿ ಹತ್ತು ಹಲವಾರು ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ. ಇಂದಿನ ಈ ಕಾರ್ಯಕ್ರಮ ಇತರ ಸಂಘಟನೆಗಳಿಗೆ ಮಾದರಿಯಾಗಿದೆ. ಹಣ್ಣುಗಳ ಗಿಡಗಳನ್ನು ನೆಡುವ ಮೂಲಕ ಪ್ರಾಣಿ ಪಕ್ಷಿಗಳ ಬದುಕಿಗೆ ನಾವು ಸಹಕಾರ ನೀಡಿದಂತಾಗುತ್ತದೆ. ಇದರಿಂದ ಅವುಗಳು ಬೆಳೆ ನಾಶ ಮಾಡುವುದಿಲ್ಲ. ಇಂತಹ ಕಾರ್ಯಕ್ರಗಳು ಹೆಚ್ಚೆಚ್ಚು ನಡೆಯುವ ಮೂಲಕ ಪರಿಸರಸ್ನೇಹಿಗಳಾಗಿ ಬದುಕೋಣ” ಎಂದರು.ಸಮಾರಂಭದ ಅಧ್ಯಕ್ಷತೆಯನ್ನು ಬಂಟರ ಸಂಘ ಸುರತ್ಕಲ್ ಇದರ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು ವಹಿಸಿದ್ದರು. ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆಂಪೇಗೌಡ, ಸಂಘದ ಮಾಜಿ ಅಧ್ಯಕ್ಷ ಉಲ್ಲಾಸ್ ಆರ್. ಶೆಟ್ಟಿ ಪೆರ್ಮುದೆ, ರೋಟರಿ ಕ್ಲಬ್ ಬೈಕಂಪಾಡಿ ಇದರ ಅಧ್ಯಕ್ಷ ಹರೀಶ್ ಶೆಟ್ಟಿ, ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಷನ್ ಇದರ ಅಧ್ಯಕ್ಷ ರಮೇಶ್ ಶೆಟ್ಟಿ, ಕೃಷಿ ಸಮಿತಿ ಸಂಚಾಲಕ ಮೇಬೈಲು ಸದಾಶಿವ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಭಾರತೀಯ ವಾಯುಸೇನೆ ಮಾಜಿ ಯೋಧ ಜೆಡಬ್ಲ್ಯೂ ಮಹಾಬಲ ಭಂಡಾರಿ, ಅರಣ್ಯ ಇಲಾಖೆ ಎಸಿಎಫ್ಓ ಪಿ. ಶ್ರೀಧರ್, ನಾಗರಿಕ ಸಮಿತಿ (ರಿ) ಮಂಗಳೂರು ತಾಲೂಕು ಇದರ ಅಧ್ಯಕ್ಷ ಶುಭಾಶ್ಚಂದ್ರ ಶೆಟ್ಟಿ ಹೊಸಬೆಟ್ಟು, ಮೂಡಬಿದ್ರಿಯ ಸಸ್ಯ ಸಾಮ್ರಾಜ್ನಿ ಅಸ್ಮಭಾನು, ಸಮಾಜ ಸೇವಕ ಸತೀಶ್ ಸದಾನಂದ, ಕೃಷಿಕ ಸತೀಶ್ ಎಂ ಶೆಟ್ಟಿ ಪಂಜ ಬೈಲಗುತ್ತು ಅವರಿಗೆ ಗೌರವಾರ್ಪಣೆ ಸಲ್ಲಿಸಲಾಯಿತು.ಸಂಘದ ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಅತಿಥಿಗಳನ್ನು ಸ್ವಾಗತಿಸಿದರು. ಕೃಷಿ ಸಮಿತಿ ಸಂಚಾಲಕ ಮೇಬೈಲು ಸದಾಶಿವ ಶೆಟ್ಟಿ ಪ್ರಾಸ್ತಾವಿಕ ಮಾತನ್ನಾಡಿದರು. ಹರೀಶ್ ಶೆಟ್ಟಿ ಇಡ್ಯ ವಂದಿಸಿದರು. ಅರ್ಪಿತಾ ಶಿಶಿರ್ ಶೆಟ್ಟಿ ಕಾರ್ಯಕ್ರಮ‌ ನಿರ್ವಹಿಸಿದರು.

ಪ್ರಾದೇಶಿಕ ವಾರ್ತೆಗಳು

ಜು.28ರಂದು ಕಿನ್ನಿಗೋಳಿಯಲ್ಲಿ “ಮುದುಕನ ಮದುವೆ” ಶ್ರೀ ನಂದಿಕೇಶ್ವರ ನಾಟಕ ಸಂಘದ 40ನೇ ವಾರ್ಷಿಕೋತ್ಸವ ಸಂಭ್ರಮ

ಮಂಗಳೂರು: ಜುಲೈ 28ರಂದು ಭಾನುವಾರ ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ಶ್ರೀ ನಂದಿಕೇಶ್ವರ ನಾಟಕ ಸಂಘದ 40ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಸಂಜೆ 5 ಗಂಟೆಯಿಂದ ರಾತ್ರಿ 10ರವರೆಗೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು ಬಳಿಕ “ಮುದುಕನ ಮದುವೆ” ತುಳು ಕನ್ನಡ ಮಿಶ್ರಿತ ಹಾಸ್ಯ ನಾಟಕದ ಉಚಿತ ಪ್ರದರ್ಶನ ನಡೆಯಲಿದೆ ಎಂದು ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.ಯುಗಪುರುಷ ಪತ್ರಿಕೆ ಸಂಪಾದಕ ಭುವನಾಭಿರಾಮ ಉಡುಪ ಮಾತನಾಡಿ, “ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲದೆ ರಾಜ್ಯದಾದ್ಯಂತ ಹೆಸರುವಾಸಿಯಾಗಿರುವ ಶ್ರೀ ನಂದಿಕೇಶ್ವರ ನಾಟಕ ಸಂಘವು ದಿ. ಪಿ.ಬಿ. ರೈ ಅವರ ಸವಿನೆನಪಿಗಾಗಿ 40ನೇ ವರ್ಷದ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಮುದುಕನ ಮದುವೆ ಅನ್ನುವ ನಾಟಕವನ್ನು ಆಯೋಜಿಸಿದ್ದಾರೆ. ಹಿಂದೆ ಈ ನಾಟಕ ಜನರ ಮನಸ್ಸನ್ನು ಗೆದ್ದಿದ್ದು ಈಗ ಮತ್ತೊಮ್ಮೆ ಗ್ರಾಮೀಣ ಭಾಗದಲ್ಲಿ ಜನರನ್ನು ಸೆಳೆಯುವಲ್ಲಿ ಯಾವುದೇ ಸಂಶಯವಿಲ್ಲ. ಈ ಕಾರ್ಯಕ್ರಮಕ್ಕೆ ಪ್ರೇಕ್ಷಕರ ಸಹಕಾರ ಖಂಡಿತ ಬೇಕು“ ಎಂದರು.ಬಳಿಕ ಮಾತಾಡಿದ ಶೋಭಾ ರೈ ಅವರು, ”ಹಿಂದೆ ಮುದುಕನ ಮದುವೆ ನಾಟಕದಲ್ಲಿ ಅಭಿನಯಿಸಿದ್ದ ಬಹುತೇಕ ಕಲಾವಿದರು ನಾಡಿದ್ದು ನಡೆಯಲಿರುವ ನಾಟಕದಲ್ಲಿ ಬಣ್ಣ ಹಚ್ಚಲಿದ್ದಾರೆ. ದೀಪಕ್ ರೈ ಪಾಣಾಜೆ, ರಾಘವೇಂದ್ರ ರೈ, ಕವಿತಾ ಚನ್ನಪಟ್ಟಣ ಪ್ರಮುಖ ಪಾತ್ರದಲ್ಲಿ ಇರಲಿದ್ದಾರೆ“ ಎಂದರು.ಪತ್ರಿಕಾಗೋಷ್ಟಿಯಲ್ಲಿ ರಾಘವೇಂದ್ರ ರೈ, ಶಿಲ್ಪಾ, ಪತ್ರಕರ್ತ ಶರತ್ ಶೆಟ್ಟಿ ಕಿನ್ನಿಗೋಳಿ ಮತ್ತಿತರರು ಉಪಸ್ಥಿತರಿದ್ದರು.

ಕರ್ನಾಟಕ ವಾರ್ತೆಗಳು

ಬಾರಕೂರು ದೀಪಕ್ ಶೆಟ್ಟಿಯವರು ಯಕ್ಷಗಾನ ಕ್ಷೇತ್ರದ ಆರ್ಥಿಕ ಸ್ಥಿತಿಗಳ ಮೌಲ್ಯೀಕರಣ ಬಗ್ಗೆ ಮಂಡಿಸಿದ ಮಹಾಪ್ರಬಂಧಕ್ಕೆ ಪಿ.ಎಚ್ ಡಿ ಪದವಿ.

ಬೆಂಗಳೂರು :ವಿದ್ಯಾಭ್ಯಾಸ ಮೆಕ್ಯಾನಿಕಲ್ ಎಂಜಿನಿಯರಿಂಗ್. ವೃತ್ತಿಯಲ್ಲಿ ಬೆಂಗಳೂರಿನ ಪ್ರತಿಷ್ಠಿತ ಟೊಯೊಟಾ ಕಂಪನಿಯಲ್ಲಿ ಡೆಪ್ಯುಟಿ ಜನರಲ್ ಮ್ಯಾನೇಜರ್. ಆದರೆ, ತುಡಿತ ಕರಾವಳಿಯ ಗಂಡು ಕಲೆ ಖ್ಯಾತಿಯ ಯಕ್ಷಗಾನದಲ್ಲಿ ಸುಸ್ಥಿರತೆ. ಇದಕ್ಕಾಗಿ ವಿಭಿನ್ನ ರೀತಿಯಲ್ಲಿ ಪ್ರಯತ್ನಿಸುತ್ತಿರುವವರು ಬೆಂಗಳೂರು ಬಂಟರ ಸಂಘದ ಮಾಜಿ ಕೋಶಾಧಿಕಾರಿ ಬಾರ್ಕೂರು ದೀಪಕ್ ಶೆಟ್ಟಿ. ಯಕ್ಷಗಾನ ಕ್ಷೇತ್ರದ ಆರ್ಥಿಕ ಸ್ಥಿತಿಗತಿಗಳ ಮೌಲ್ಯೀಕರಣ ಎನ್ನುವ ವಿಷಯದ ಕುರಿತು ಇವರು ಮಂಡಿಸಿದ ಮಹಾಪ್ರಬಂಧಕ್ಕೆ ಡಾ| ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿ.ವಿ. ಪಿ.ಎಚ್‌ಡಿ ಪದವಿ ನೀಡಿದೆ. ಇದಕ್ಕಾಗಿ ಯಕ್ಷಗಾನದ ಇತಿಹಾಸ, ಪೌರಾಣಿಕೆ ಹಿನ್ನಲೆ, ರೂಪಾಂತರವನ್ನು ಅಭ್ಯಸಿಸಿ ಪ್ರಬಂಧದಲ್ಲಿ ಮಂಡಿಸಿದ್ದಾರೆ. ಹತ್ತಾರು ಹಿರಿಯ ಕಲಾವಿದರನ್ನು ಸಂದರ್ಶಿಸಿ, ಕ್ಷೇತ್ರದಲ್ಲಿ ಆಳವಾದ ಅಧ್ಯಯನ ನಡೆಸಿದ್ದಾರೆ. ಸುಮಾರು 3 ತಲೆಮಾರಿನ ಅನುಭವವನ್ನು ಸಂಗ್ರಹಿಸಿದ್ದಾರೆ. ಮುಖ್ಯ ಉದ್ದೇಶ: ಆರ್ಥಿಕವಾಗಿ ಸದೃಢವಿದ್ದಾಗ ಕಲಾವಿದರು ಉಳಿಯುತ್ತಾರೆ. ಕಲಾ ಪ್ರಕಾರ ಉಳಿಯುತ್ತದೆ. ಯಕ್ಷಗಾನ ಕ್ಷೇತ್ರದಲ್ಲಿ ಆರ್ಥಿಕ ಸುಸ್ಥಿರತೆ ಕಾಪಾಡುವ ಮುಖ್ಯ ಉದ್ದೇಶದಿಂದ ವಿಚಾರ ಮಂಡಿಸಿದ್ದಾರೆ. ಈ ಸುಸ್ಥಿರತೆಯಲ್ಲಿ ಕಲಾವಿದರು, ಮೇಳದ ಯಜಮಾನರು, ಸಂಘಟಕರು, ಪ್ರೇಕ್ಷಕರು ಹಾಗೂ ಪ್ರಾಮುಖ್ಯವಾಗಿ ಸರಕಾರದ ಪಾತ್ರವನ್ನು ಒತ್ತಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದೀಕ್ಷಾ ಕನ್ವೆನ್ಷನ್ ಹಾಲ್ ಹೊಂದಿರುವ ಶ್ರೀಯುತರು ಯುವ ಉದ್ಯಮಿಯಾಗಿ, ಸಮಾಜ ಸೇವಕರಾಗಿಯೂ ಗುರುತಿಸಿಕೊಂಡಿರುರುವ ಬಾರ್ಕೂರು ದೀಪಕ್ ಶೆಟ್ಟಿಯವರ ಸಾಧನೆಗೆ Mp mla’s ನ್ಯೂಸ್ ಶುಭ ಹಾರೈಸುತ್ತದೆ.

ಪ್ರಾದೇಶಿಕ ವಾರ್ತೆಗಳು

ರೆಡ್‌ಕ್ರಾಸ್‌ನ ಸೇವಾ ಕಾರ್ಯಗಳಿಗೆ ಸಹಕಾರ-ಸಂಸದ ಕ್ಯಾ.ಬ್ರಿಜೇಶ್ ಚೌಟ

ಮಂಗಳೂರು : ಮಾನವೀಯ ಸೇವೆ ಮತ್ತು ಸಮಾಜ ಸೇವಾ ಕಾರ್ಯದಲ್ಲಿ ಪರಿಪೂರ್ಣವಾಗಿ ತೊಡಗಿಸಿ ಕೊಂಡಿರುವ ರೆಡ್‌ಕ್ರಾಸ್ ಸೊಸೈಟಿಯ ಬಲವರ್ಧನೆಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ದ.ಕ.ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದರು.ರೆಡ್‌ಕ್ರಾಸ್ ಸೊಸೈಟಿಯ ದ.ಕ. ಜಿಲ್ಲಾ ಘಟಕದ ವತಿಯಿಂದ ಸಂಸದರ ಕಚೇರಿಯಲ್ಲಿ ಶನಿವಾರ ಗೌರವ ಸ್ವೀಕರಿಸಿದ ಅವರುರೆಡ್‌ಕ್ರಾಸ್ ಸೊಸೈಟಿಯ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದರು.ದ.ಕ.ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ 6 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ರೆಡ್‌ಕ್ರಾಸ್ ಶತಮಾನೋತ್ಸವ ಕಟ್ಟಡಕ್ಕೆ ಅಗತ್ಯ ನೆರವು ಒದಗಿಸಲಾಗುವುದು. ಕಟ್ಟಡದ ಉದ್ಘಾಟನಾ ಸಮಾರಂಭಕ್ಕೆ ರಾಷ್ಟ್ರಪತಿ ಅವರನ್ನು ಅಥವಾ ಕೇಂದ್ರದ ಆರೋಗ್ಯ ಸಚಿವರನ್ನು ಆಹ್ವಾನಿಸಲು ಪ್ರಯತ್ನಿಸುವುದಾಗಿ ಸಂಸದರು ತಿಳಿಸಿದರು.ರೆಡ್‌ಕ್ರಾಸ್ ಸೊಸೈಟಿಯ ದ.ಕ. ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಅವರು ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಗೌರವಿಸಿದರು. ಆಡಳಿತ ಮಂಡಳಿ ನಿರ್ದೇಶಕರಾದ ಡಾ.ಬಿ.ಸಚ್ಚಿದಾನಂದ ರೈ, ಪುಷ್ಪರಾಜ್ ಜೈನ್, ಪಿ.ಬಿ.ಹರೀಶ್ ರೈ, ಗುರುದತ್ತ್ ಎಂ.ನಾಯಕ್, ವಿಠಲ ಎ. , ಕಾರ್ಯದರ್ಶಿ ಕಿಶೋರ್‌ಚಂದ್ರ ಹೆಗ್ಡೆ, ಮೈಸೂರು ಇಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಮಾಜಿ ಅಧ್ಯಕ್ಷ ಸಂತೋಷ್‌ಕುಮಾರ್ ರೈ ಬೋಳಿಯಾರ್ ಉಪಸ್ಥಿತರಿದ್ದರು.

Scroll to Top