Author name: editor

ಪ್ರಾದೇಶಿಕ ವಾರ್ತೆಗಳು

ನಗರದಲ್ಲಿ ಸುರಕ್ಷತಾ ಸಂಕಲ್ಪ ಜಾಥ

ಮಂಗಳೂರು,ಮೇ.26;ನಗರದ ಬೆಸೆಂಟ್ ಮಹಿಳಾ ಕಾಲೇಜಿನಿಂದ ಪಿವಿಎಸ್ ವೃತ್ತದ ವರೆಗೆ ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಮತ್ತು ಬೆಸೆಂಟ್ ಮಹಿಳಾ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ಮಂಗಳವಾರ ಸುರಕ್ಷಾ ಸಂಕಲ್ಪ ಜಾಥ ನಡೆಯಿತು.ಮಂಗಳೂರು ಪೊಲೀಸ್ ಕಮೀಷನರೇಟ್ ಸಂಚಾರ ವಿಭಾಗದ ಎಸಿಪಿ ಗೀತಾ ಕುಲಕರ್ಣಿಸುರಕ್ಷಾ ಜಾಥಾಕ್ಕೆ ಚಾಲನೆ ನೀಡಿ ಮಾತನಾ ಡುತ್ತಾ,ರಸ್ತೆ ಸಂಚಾರ ನಿಯಮದ ಪಾಲನೆ ಯಿಂದ ನಮ್ಮ ಜೀವದ ರಕ್ಷಣೆಯ ಜೊತೆ ಇತರರ ಜೀವವನ್ನು ಉಳಿಸಬಹುದು. ಸಂಚಾರ ನಿಯಮದ ಪಾಲನೆಯಲ್ಲಿ ಎಚ್ಚರ ತಪ್ಪಿದಾಗ ಅಮಾಯಕರು ವಾಹನ ಅಪಘಾತಕ್ಕೀಡಾಗಿ ಬಲಿಯಾದ ಉದಾಹರಣೆಗಳಿವೆ.ನಾಗರೀಕರಿಗೂ ರಸ್ತೆ ಸಂಚಾರ ನಿಯಮಗಳ ಬಗ್ಗೆ ಜಾಗೃತಿ ಅಗತ್ಯವಿದೆ. ಇದರಿಂದಲೂ ಸಾಕಷ್ಟು ಅಪಘಾತಗಳನ್ನು ತಪ್ಪಿಸಲು ಸಾಧ್ಯವಿದೆಈ ಹಿನ್ನೆಲೆಯಲ್ಲಿ ಸುರಕ್ಷತಾ ಜಾಥ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದರು.ಸಮಾರಂಭದಲ್ಲಿ ಮಂಗಳೂರು ರೋಟರಿ ಕ್ಲಬ್ ಸೆಂಟ್ರಲ್ ಅಧ್ಯಕ್ಷ ಭಾಸ್ಕರ ರೈ ಕಟ್ಟ ಅಧ್ಯಕ್ಷ ತೆ ವಹಿಸಿದ್ದರು.ಸಮಾರಂಭದಲ್ಲಿಬೆಸೆಂಟ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಪ್ರವೀಣ್ ಕುಮಾರ್ ಕೆ.ಸಿ,ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತ ರ ಸಂಘದ ಅಧ್ಯಕ್ಷ ಪುಷ್ಪರಾಜ್. ಬಿ.ಎನ್, ರೋಟರಿ ಜಿಲ್ಲೆ 3180 ಮಾಜಿ ಗವರ್ನರ್ ರಾಜ ಗೋಪಾಲ್ ರೈ,ರೋಟರಿ ಝೋನಲ್ ಲೆಫ್ಟಿನೆಂಟ್ ರವಿಜಲನ್,ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯ ಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ, ರೋಟರಿ ಸೆಂಟ್ರಲ್ ನಿಯೋಜಿತ ಅಧ್ಯಕ್ಷ ರವೀಂದ್ರ ಬಿ ಎನ್, ರೋಟರಿ ಪೂರ್ವಾ ಧ್ಯಕ್ಷ ರಾಜೇಶ್ ಶೆಟ್ಟಿ ಮೊದಲಾ ದವರು ಉಪಸ್ಥಿತರಿದ್ದರು.ಬೆಸೆಂಟ್ ಮಹಿಳಾ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮ ಅಧಿಕಾರಿ ದೀಕ್ಷಿತಾ ಸ್ವಾಗತಿಸಿ ದರು,ಕಾರ್ಯದರ್ಶಿ ಅಂಚಲ್ ಕೃತಜ್ಞತೆ ಸಲ್ಲಿಸಿದರು.ಎಸಿಪಿ ಗೀತಾ ಕುಲಕರ್ಣಿ ಹಾಗೂ ಟ್ರಾಫಿಕ್ ಪೊಲೀಸ್ ಸಬ್ ಇನ್ಸಪೆಕ್ಟರ್ ಮಂಜುಳಾ,ಅಸಿಸ್ಟೆಂಟ್ ಸಬ್ ಇನ್ಸಪೆಕ್ಟರ್ ಭುವನೇಶ್ , ಸುರಕ್ಷಾ ಜಾಥದ ಬಗ್ಗೆ ವಿದ್ಯಾರ್ಥಿ ಗಳಿಗೆ ಮಾರ್ಗದ ರ್ಶನ ನೀಡಿದರು.ಬೆಸೆಂಟ್ ಮಹಿಳಾ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಸದಸ್ಯರು ಜಾಥದಲ್ಲಿ ಮಾಹಿತಿ ಫಲಕದ ಜೊತೆ ಭಾಗವ ಹಿಸಿದ್ದರು

ಪ್ರಾದೇಶಿಕ ವಾರ್ತೆಗಳು

ಹಿರಿಯ ನಾಟಕಕಾರ, ಸಿನಿಮಾ ನಿರ್ಮಾಪಕ ಡಾ.ಸಂಜೀವ ದಂಡಕೇರಿ ಅವರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ

ಬೆಂಗಳೂರು: ಕಳೆದ ಬಾರಿ ಸುವರ್ಣ ಸಂಭ್ರಮವನ್ನಾಚರಿಸಿದ ಅಂತಾರಾಷ್ಟ್ರೀಯ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು ತನ್ನ 51ನೇ ವರ್ಷದ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ ಸಮಾರಂಭವನ್ನು 2026 ಮೇ 23ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಏರ್ಪಡಿಸಿತ್ತು. ಕಾರ್ಯಕ್ರಮವನ್ನು ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ನ್ಯಾಯಮೂರ್ತಿ ರಾಜೇಂದ್ರ ಬಾದಾಮಿಕರ್ ದೀಪ ಬೆಳಗಿ ಉದ್ಘಾಟಿಸಿದರು.ಸಮಾರಂಭದಲ್ಲಿ ತುಳು ರಂಗಭೂಮಿ ಸಿನಿಮಾರಂಗ, ಉದ್ಯಮ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಮಹತ್ವದ ಸೇವೆ ಸಲ್ಲಿಸಿದ ಬಯ್ಯಮಲ್ಲಿಗೆ ಖ್ಯಾತಿಯ ಹಿರಿಯ ನಾಟಕಕಾರ ಡಾ.ಸಂಜೀವ ದಂಡಕೇರಿ ಅವರಿಗೆ ಈ ಬಾರಿಯ ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ದಂಡಕೇರಿಯವರ ಪತ್ನಿ ಜಲಜಾಕ್ಷಿ ದಂಡಕೇರಿ ಮತ್ತು ಕುಟುಂಬ ಸದಸ್ಯರು ಸಮಾರಂಭದಲ್ಲಿ ಪಾಲ್ಗೊಂಡರು. ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ. ಹೆಚ್.ಎಲ್.ಎನ್. ರಾವ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಬೆಂಗಳೂರು ದೂರದರ್ಶನ ಕೇಂದ್ರದ ವಿಶ್ರಾಂತ ಹೆಚ್ಚುವರಿ ಮಹಾನಿರ್ದೇಶಕ ನಾಡೋಜ ಡಾ. ಮಹೇಶ್ ಜೋಶಿ, ಖ್ಯಾತ ವಿದ್ವಾಂಸ, ವಿದ್ಯಾ ವಾಚಸ್ಪತಿ ಡಾ.ಅರಳುಮಲ್ಲಿಗೆ ಪಾರ್ಥಸಾರಥಿ ಮುಖ್ಯ ಅತಿಥಿಗಳಾಗಿದ್ದರು. ಸ್ವಾಗತ ಸಮಿತಿಯ ಡಾ. ಕೆ.ಎನ್ ಅಡಿಗ ಅಡೂರು, ಗುರುರಾಜ್, ಡಾ. ಬಸವರಾಜು, ಎಚ್.ಎಸ್. ಹನುಮಂತ ರಾವ್, ಸುಮಾ, ವಿ.ನಾಗೇಂದ್ರ, ಮಂಗಳೂರಿನ ಪ್ರತಿನಿಧಿ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಮೊದಲಾದವರು ಉಪಸ್ಥಿತರಿದ್ದರು.ಆರ್ಯಭಟ ನೃತ್ಯೋತ್ಸವದೊಂದಿಗೆ ಜರಗಿದ ವರ್ಣರಂಜಿತ ಸಮಾರಂಭದಲ್ಲಿ ರಾಜ್ಯ,ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 72ಮಂದಿ ಹಿರಿಯ ಸಾಧಕರಿಗೆ 2025 – 26 ನೇ ಸಾಲಿನ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಯನ್ನು ವಿತರಿಸಲಾಯಿತು.ಸಂಸ್ಥೆಯ ಅಧ್ಯಕ್ಷ ಡಾ.ಎಚ್.ಎಲ್.ಯನ್.ರಾವ್ ಸ್ವಾಗತಿಸಿ ಪ್ರಸ್ತಾವನೆಗೈದರು. ಕಾರ್ಯದರ್ಶಿ ಡಾ.ಬಸವರಾಜು ವಂದಿಸಿದರು. ಸಾರ್ಥವಳ್ಳಿ ನಾರಾಯಣಸ್ವಾಮಿ ಮತ್ತು ಆರ್.ವೆಂಕಟರಾಜು ಕಾರ್ಯಕ್ರಮ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ನಿರಂತರ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮ

ಮಂಗಳೂರು : ಕೆ.ಎಸ್. ಹೆಗ್ಡೆ ವೈದ್ಯಕೀಯ ಅಕಾಡೆಮಿಯಲ್ಲಿ “ಐಡಿಯಾದಿಂದ ಪ್ರಕಟಣೆಯವರೆಗೆ” ವಿಷಯದ ಕುರಿತು ನಿರಂತರ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿದ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಪ್ರೊ.ಚಾನ್ಸೆಲರ್ ಡಾ.ಎಂ. ಶಾಂತಾರಾಮ್ ಶೆಟ್ಟಿ ಮಾತನಾಡಿ ” ಆಧುನಿಕ ವೈದ್ಯಕೀಯ ಶಿಕ್ಷಣ ಹಾಗೂ ರೋಗಿಗಳ ಆರೈಕೆಯಲ್ಲಿ ಸಂಶೋಧನೆ, ನಾವೀನ್ಯತೆ ಮತ್ತು ಗುಣಮಟ್ಟದ ವೈಜ್ಞಾನಿಕ ಪ್ರಕಟಣೆಗಳ ಪ್ರಾಮುಖ್ಯತೆ ಹೆಚ್ಚಿದೆ. ಯುವ ಸಂಶೋಧಕರು ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಶೈಕ್ಷಣಿಕ ಬರವಣಿಗೆ ಹಾಗೂ ಪುರಾವೆ ಆಧಾರಿತ ಸಂಶೋಧನಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸ ಬೇಕು’ಎಂದರು.ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಅರ್ಥೋಪೆಡಿಕ್ ಅಸೋಸಿಯೇಶನ್ ಅಧ್ಯಕ್ಷ ಡಾ.ಬಿ.ಸಚ್ಚಿದಾನಂದ ರೈ ಮಾತನಾಡಿ ” ವೈದ್ಯಕೀಯ ಸಂಶೋಧನೆ ಮತ್ತು ವೈಜ್ಞಾನಿಕ ಪ್ರಕಟಣೆಗಳಲ್ಲಿ ಆಸಕ್ತಿ ಹೊಂದಿರುವ ಅಧ್ಯಾಪಕರು, ವೈದ್ಯರು ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳನ್ನು ಒಟ್ಟುಗೂಡಿಸಲು ನಿರಂತರ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದೆ’ ಎಂದರು.ಕೆ.ಎಸ್. ಹೆಗ್ಡೆ ವೈದ್ಯಕೀಯ ಅಕಾಡೆಮಿಯ ಮೂಳೆಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ವಿಕ್ರಮ್ ಶೆಟ್ಟಿ ಸ್ವಾಗತಿಸಿದರು. ಸಂಶೋಧನಾ ವಿಧಾನ, ಹಸ್ತಪ್ರತಿ ತಯಾರಿಕೆ, ನೈತಿಕ ಪ್ರಕಾಶನ ಅಭ್ಯಾಸಗಳು ಮತ್ತು ಸೂಚ್ಯಂಕಿತ ನಿಯತಕಾಲಿಕೆಗಳಲ್ಲಿ ಯಶಸ್ವಿ ಪ್ರಕಟಣೆಗಾಗಿ ತಂತ್ರಗಳ ಕುರಿತು ತಜ್ಞರು ಮಾಹಿತಿ ನೀಡಿದರು.

ಪ್ರಾದೇಶಿಕ ವಾರ್ತೆಗಳು

ಉರ್ವದಲ್ಲಿ ಅಂಚೆ ಜನ ಸಂಪರ್ಕ ಅಭಿಯಾನ

ಮಂಗಳೂರು : ಮಂಗಳೂರು ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್ ಮತ್ತು ಭಾರತೀಯ ಅಂಚೆ ಇಲಾಖೆ ಮಂಗಳೂರು ವಿಭಾಗದ ಸಹಯೋಗದಲ್ಲಿ ನಗರದ ಉರ್ವದ ಕಬಡ್ಡಿ ಒಳಾಂಗಣ ಕ್ರೀಡಾಂಗಣದಲ್ಲಿ ಅಂಚೆ ಜನ ಸಂಪರ್ಕ ಅಭಿಯಾನ, ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರ ನಡೆಯಿತು.ಕರ್ನಾಟಕ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಅಧ್ಯಕ್ಷ ರಾಕೇಶ್ ಮಲ್ಲಿ ಕಾರ್ಯಕ್ರಮ ಉದ್ಘಾಟಿಸಿದರು. ಮಂಗಳೂರು ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್‌ನ ಅಧ್ಯಕ್ಷ ದಿನಕರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಯಾಗಿದ್ದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜ ಮಾತನಾಡಿ “ಮಂಗಳೂರು ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್ ಉರ್ವಒಳಾಂಗಣ ಕ್ರೀಡಾಂಗಣದಲ್ಲಿ ಮಕ್ಕಳಿಗೆ ಉಚಿತ ಕಬಡ್ಡಿ ತರಬೇತಿ ಶಿಬಿರ ಸಂಘಟಿಸುವ ಮೂಲಕ ಎಳೆಯ ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಿತ್ತು. ಈಗ ಸಾರ್ವಜನಿಕರಿಗೆ ಅನುಕೂಲವಾಗಲುಅಂಚೆ ಜನಸಂಪರ್ಕ ಮತ್ತು ಅಪಘಾತ ವಿಮೆ ಹಾಗೂ ಆಧಾರ್ ತಿದ್ದುಪಡಿಯ ಶಿಬಿರ ನಡೆಸುತ್ತಿರುವುದು ಶ್ಲಾಘನೀಯ ಎಂದರು.ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಶನ್‌ನ ಗೌರವ ಸಲಹೆಗಾರರಾದ ಪುರುಷೋತ್ತಮ್ ಪೂಜಾರಿ ಮತ್ತು ರತನ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಬಿಲ್ಲವ ಸಂಘದ ಉಪಾಧ್ಯಕ್ಷವೆಂಕಟೇಶ್‌ದಾಸ್ , ಯೋಗೀಶ್ ಬೋಳೂರು. ಸಚಿನ್ ಬಂಗೇರ. ಯಶವಂತ ಮಾಡ. ವಿಕ್ರಂ ಹೊಯ್ಗೆಬೈಲ್. ಜೀವನ್ ಪೂಜಾರಿ ಹೊಯ್ಗೆಬೈಲ್. ಕಬೀರ್ ಕೊಂಚಾಡಿ. ರಂಜನ್ ಶೆಟ್ಟಿ ಉಪಸ್ಥಿತರಿದ್ದರು. ಮಂಗಳೂರು ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್‌ನ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ಅಶೋಕನಗರ ಕಾರ್ಯಕ್ರಮ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ಪತ್ತನಾಜೆಯಲ್ಲಿ ಕೃಷಿ ಸಂಸ್ಕೃತಿ ಅಂತರ್ಗತ – ಯುವ ವಾಗ್ಮಿ ವಿಜೇತ್ ಶೆಟ್ಟಿ ಮಂಜನಾಡಿ

ಮಂಗಳೂರು : ಪತ್ತನಾಜೆ ಆಚರಣೆಯ ಹಿಂದೆ ಈ ನೆಲದ ನಂಬಿಕೆ ಮತ್ತು ಕೃಷಿ ಸಂಸ್ಕೃತಿ ಅಂತರ್ಗತವಾಗಿದೆ. ಸಾಂಪ್ರದಾಯಿಕ ಜಾತ್ರೆ, ಉತ್ಸವ, ದೈವಾರಾಧನೆ, ಯಕ್ಷಗಾನ ಮೇಳಗಳ ತಿರುಗಾಟಕ್ಕೆ ತೆರೆ ಎಳೆಯುವ ಕೃಷಿ ವರ್ಗದ ಜನರು ಕೃಷಿ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಗಡುವಿನಂತೆ ಪತ್ತನಾಜೆಯನ್ನು ಆಚರಿಸುತ್ತಾರೆ. ಇದೊಂದು ಕಾಲ ನಿರ್ಣಯದ ಮಹತ್ವವನ್ನು ಪಡೆದಿದೆ ಎಂದು ಯುವ ವಾಗ್ಮಿ ವಿಜೇತ್ ಶೆಟ್ಟಿ ಮಂಜನಾಡಿ ಹೇಳಿದರು.ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಮಂಗಳೂರು ತಾಲೂಕು ಸಮಿತಿ ಹಾಗೂ ಥಿಯಾಸೋಫಿಕಲ್ ಸೊಸೈಟಿ ಮಂಗಳೂರು ಸಹಯೋಗದಲ್ಲಿ ನಗರದ ಥಿಯಾಸೋಫಿಕಲ್ ಸೊಸೈಟಿ ಸಭಾಂಗಣದಲ್ಲಿನಡೆದ ಕಾರ್ಯಕ್ರಮದಲ್ಲಿ ಅವರು ಪತ್ತನಾಜೆ ಆಚರಣೆ ವಿಷಯದ ಬಗ್ಗೆ ಉಪನ್ಯಾಸ ನೀಡಿದರು.ಮುಖ್ಯ ಅತಿಥಿಯಾಗಿದ್ದ ವಿದ್ವಾನ್ ತುಪ್ಪೆಕಲ್ಲು ನರಸಿಂಹ ಶೆಟ್ಟಿ ಮಾತನಾಡಿ ” ಚೆನ್ನಾಗಿ ಫಸಲು ಬರಲು ನೈಸರ್ಗಿಕ ಕ್ರಮವನ್ನು ಅಳವಡಿಸುವ ಮಹತ್ವದ ವಿಚಾರ ಪತ್ತನಾಜೆ ಆಚರಣೆಯ ಹಿಂದೆ ಇದೆ ಎಂದರು.ಅಭಾಸಾಪ ಮಂಗಳೂರು ತಾಲೂಕು ಸಮಿತಿ ಅಧ್ಯಕ್ಷೆ ಡಾ. ಮೀನಾಕ್ಷಿ ರಾಮಚಂದ್ರ ಅಧ್ಯಕ್ಷತೆ ವಹಿಸಿದ್ದರು. ಅಭಾಸಾಪ ಮಂಗಳೂರು ವಿಭಾಗ ಸಂಯೋಜಕ ಸುಂದರ ಶೆಟ್ಟಿ, ವಿದ್ವಾಂಸ ಡಾ. ಪ್ರಭಾಕರ ಜೋಷಿಉಪಸ್ಥಿತರಿದ್ದರು. ಅಭಾಸಾಪ ಕಾರ್ಯದರ್ಶಿ ಪ್ರೊ. ಶೈಲಜಾ ಪುದುಕೋಳಿ ಸ್ವಾಗತಿಸಿ, ಯಶೋದಾ ಕುಮಾರಿ ವಂದಿಸಿದರು. ಉಷಾ ಕುಮಾರಿ ಕಾರ್ಯಕ್ರಮ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ಮಂಗಳೂರು ಸೆಂಟ್ರಲ್ ವತಿಯಿಂದ ಯುವ ಕ್ರೀಡಾ ಪ್ರತಿಭೆ ದೀಕ್ಷಿತ ರಾಮಕೃಷ್ಣ ಗೌಡಗೆ ಸನ್ಮಾನ

ಮಂಗಳೂರು,ಮೇ.24;ಮಂಗಳೂರು ರೋಟರಿ ಸೆಂಟ್ರಲ್ ವತಿಯಿಂದ ಆಳ್ವಾಸ್ ಕಾಲೇಜು ಮೂಡುಬಿದಿರೆ ಇಲ್ಲಿನ ವಿದ್ಯಾರ್ಥಿರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ ಯುವ ಕ್ರೀಡಾ ಪ್ರತಿಭೆ ಅಥ್ಲೆಟ್ ದೀಕ್ಷಿತ ರಾಮಕೃಷ್ಣ ಗೌಡ ಇವರನ್ನು ರವಿವಾರ ನಗರದ ಸಿ ವ್ಯೂವ್ ಹೊಟೇಲ್ ಸಭಾಂಗಣದಲ್ಲಿ ಸನ್ಮಾನಿಸಲಾಯಿತು.ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಅಧ್ಯಕ್ಷ ಭಾಸ್ಕರ್ ರೈ ಕಟ್ಟ , ಕಾರ್ಯದರ್ಶಿ ವಿಕಾಸ್ ಕೋಟ್ಯಾನ್ , ರೋಟರಿ 3180 ಜಿಲ್ಲಾ ಮಾಜಿ ಗವರ್ನರ್ ಡಾ ದೇವದಾಸ್ ರೈ , ಝೋನಲ್ ಲೆಫ್ಟಿನೆಂಟ್ ರವಿ ಜಲನ್ ,ಕೋಶ ಧಿಕಾರಿ ರಾಜೇಶ್ ಸೀತಾರಾಂ, ನಿಕಟ ಪೂರ್ವ ಅಧ್ಯಕ್ಷ ಬ್ರಾಯನ್ ಪಿಂಟೋ, ನಿಯೋಜಿತ ಅಧ್ಯಕ್ಷ ರವೀಂದ್ರ ಬಿ. ಎನ್. , ರೋಟರಿ ಸದಸ್ಯ ರಾದ ಗೀತಾ ಬಿ ರೈ, ರೂಪಾ ಶೆಟ್ಟಿ, , ನೀಲo ಜಲನ್ , ಆರತಿ ಶೇಟ್ ರೂಪ ಶೆಟ್ಟಿ ,ಡಾ. ಜ್ಯೋತಿ ,ವಿದ್ಯಾ.ಆರ್ ವೀಣಾ , ಪ್ರಮೀಳಾ ಶೆಟ್ಟಿ ಮತ್ತು ಇತರ ಸದಸ್ಯರು ಉಪಸ್ಥಿತರಿದ್ದರು

ಪ್ರಾದೇಶಿಕ ವಾರ್ತೆಗಳು

ಕಾಂಗ್ರೆಸ್ ನ ಮೂರು ರಾಜ್ಯಸಭಾ ಸ್ಥಾನಗಳಲ್ಲಿ ಒಂದು ಸ್ಥಾನ ಕ್ರಿಶ್ಚಿಯನ್ ಅಲ್ಪಸಂಖ್ಯಾತರಿಗೆ ಮೀಸಲು ಸಂಭವ. ನವೀನ್ ಡಿಸೋಜ ಹೆಸರು ಮುಂಚೂಣಿಯಲ್ಲಿ?

ಬೆಂಗಳೂರು: ಕಾಂಗ್ರೆಸ್ ನ ಮೂರು ರಾಜ್ಯಸಭಾ ಸ್ಥಾನಗಳು ಮುಂದಿನ ತಿಂಗಳು ತೆರವಾಗಲಿದೆ. ಈ ಪೈಕಿ ಒಂದು ಸ್ಥಾನ ಮತ್ತೊಮ್ಮೆ ಕಾಂಗ್ರೆಸ್ನ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮತ್ತೊಮ್ಮೆ ಸಿಗಲಿದೆ ಎಂಬುದು ಗ್ಯಾರಂಟಿಯಾಗಿದೆ. ಒಂದು ಸ್ಥಾನ ಕ್ರಿಶ್ಚಿಯನ್ ಅಲ್ಪಸಂಖ್ಯಾತರಿಗೆ ಈ ಬಾರಿ ಮೀಸಲಿರಿಸುವ ಸಂಭವ ಹೆಚ್ಚಿದೆ ಎಂದು ಕಾಂಗ್ರೆಸ್ ಉನ್ನತ ಮೂಲಗಳಿಂದ ತಿಳಿದು ಬಂದಿದೆ.ಕಳೆದ ಬಾರಿ ಮುಸ್ಲಿಂ ಅಲ್ಪಸಂಖ್ಯಾತರಿಗೆ ಒಂದು ರಾಜ್ಯಸಭಾ ಸದಸ್ಯ ಸ್ಥಾನ ಒಲಿದು ಬಂದಿತ್ತು. ಈ ಬಾರಿ ಕ್ರಿಶ್ಚಿಯನ್ ಅಲ್ಪಸಂಖ್ಯಾತರಿಗೆ ಒಲಿದು ಬರಲಿದೆ ಎಂದು ಉನ್ನತ ಮೂಲಗಳನ್ನು ಉಲ್ಲೇಖಿಸಿ ವರದಿಯಾಗಿದೆ.ಕರ್ನಾಟಕ ರಾಜ್ಯದಲ್ಲಿ ಅತಿ ಹೆಚ್ಚು ಕ್ರಿಶ್ಚಿಯನ್ ಸಂಖ್ಯೆಯಲ್ಲಿರುವ ದಕ್ಷಿಣ ಕನ್ನಡದ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಈ ಹುದ್ದೆ ಸಿಗಬಹುದು ಎಂದು ಕಾಂಗ್ರೆಸ್ ಮೂಲಗಳನ್ನು ಉಲ್ಲೇಖಿಸಿ ವರದಿಯಾಗಿದೆ.ಈ ಪೈಕಿ ಕಾಂಗ್ರೆಸ್ ನ ಹಲವಾರು ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿರುವ ಹಾಗೂ ಹಿರಿಯ ಕಾರ್ಪೊರೇಟರ್ ಆಗಿ ಸೇವೆ ಸಲ್ಲಿಸಿರುವ ನವೀನ್ ಡಿಸೋಜಾ ರವರ ಹೆಸರು ಮುಂಚೂಣಿಯಲ್ಲಿದೆ ಎಂದು ತಿಳಿದು ಬಂದಿದೆ.ಈ ಬಾರಿಯ ಕೇರಳದ ಚುನಾವಣೆಯಲ್ಲಿ ಸಹ ನವೀನ್ ಡಿಸೋಜ ಕಾರ್ಯನಿರ್ವಹಣೆ ಪಕ್ಷದ ಹೈಕಮಾಂಡ್ ಗಮನ ಸೆಳೆದಿದೆ ಎನ್ನಲಾಗಿದೆ. ಈ ಮೊದಲು ತನಗ ನೀಡಿರುವ ಹಲವಾರು ಜವಾಬ್ದಾರಿಗಳನ್ನು ಎಲ್ಲಿಯೂ ಪ್ರಚಾರ ಬಯಸದೆ ಚಾಚು ತಪ್ಪದೇ ನಿರ್ವಹಿಸಿದ ಕೀರ್ತಿ ನವೀನ್ ಡಿಸೋಜ ರವರಿಗೆ ಇದೆ. ಈ ಎಲ್ಲಾ ಅಂಶಗಳ ಆಧಾರದ ಮೇಲೆ ಈ ಬಾರಿ ಅವರನ್ನು ರಾಜ್ಯಸಭೆ ಕಳಿಸುವ ಬಗ್ಗೆ ಪಕ್ಷದ ಉನ್ನತ ಮೂಲಗಳು ಗಂಭೀರ ಚಿಂತನೆಯಲ್ಲಿದೆ ಎಂದು ತಿಳಿದು ಬಂದಿದೆ.ಇನ್ನೊಂದು ಸ್ಥಾನ ಯಾರ ಪಾಲಾಗಲಿದೆ ಎಂಬ ಕುತೂಹಲ ಮನೆ ಮಾಡಿದೆ. ಕಾಂಗ್ರೆಸ್ ತನ್ನ ಸ್ಥಾನಗಳ ಪೈಕಿ ಮೂರು ಸ್ಥಾನಗಳನ್ನು ಸುಲಭವಾಗಿ ಪಡೆದುಕೊಳ್ಳುವ ಸಾಮರ್ಥ್ಯವನ್ನು ಹೊಂದಿದೆ. ಕಾಂಗ್ರೆಸ್ನ ಶಾಸಕರಗಳ ಬಲ 3 ರಾಜ್ಯಸಭೆಗೆ ಆಯ್ಕೆ ಮಾಡುವ ಸಾಮರ್ಥ್ಯವನ್ನು ಹೊಂದಿದೆ.ರಾಜ್ಯಸಭಾ ಚುನಾವಣೆ ಜೂನ್ 18ರಂದು ನಡೆಯಲಿದ್ದು, ಜೂನ್ ಎಂಟಕ್ಕೆ ನಾಮಿನೇಷನ್ ಸಲ್ಲಿಸಲು ಅಂತಿಮ ದಿನಾಂಕವಾಗಿದೆ. ಈ ಬಗ್ಗೆ ಚುನಾವಣಾ ಆಯೋಗ ಮಾಹಿತಿ ನೀಡಿದೆ.

ಪ್ರಾದೇಶಿಕ ವಾರ್ತೆಗಳು

ಪುತ್ತೂರು: ದರ್ಬೆ ಜಂಕ್ಷನ್ ನಲ್ಲಿರುವ ಶಶಿಶಂಕರ ಸದನದಲ್ಲಿ ಕಾಯಕಲ್ಪ ಅರೋಗ್ಯ ಧಾಮ ಉದ್ಘಾಟನೆ.

ಪುತ್ತೂರು -ಪುತ್ತೂರಿನ ದರ್ಬೆ ಜಂಕ್ಷನ್ ನಲ್ಲಿರುವ ಶಶಿಶಂಕರ ಸದನದಲ್ಲಿ ಕಾಯಕಲ್ಪ ಅರೋಗ್ಯ ಧಾಮವನ್ನು ಪುತ್ತೂರು ನಗರ ಸಭಾ ನಿಕಟಪೂರ್ವ ಉಪಾಧ್ಯಕ್ಷೆ ವಿದ್ಯಾ ಗೌರಿಯವರು ಉದ್ಘಾಟಿಸಿ,ಕಾಯಕಲ್ಪ ಚಿಕಿತ್ಸೆಗೆ ಜಗತ್ತಿನಲ್ಲಿಯೇ ಅತೀ ಮಾನ್ಯತೆಯಿದೆಂದರು. ಈ ಸಂದರ್ಭದಲ್ಲಿ ಕುಂಬ್ರ ವರ್ತಕರ ಸಂಘದ ಸ್ಥಾಪಕ ಅಧ್ಯಕ್ಷ ಶ್ಯಾಮಸುಂದರ ರೈ ಕೊಪ್ಪಳ,ಅಧ್ಯಕ್ಷ ಪಿ. ಕೆ. ಮಹಮ್ಮದ್, ಉಪಾಧ್ಯಕ್ಷ ಸದಾಶಿವ ಸೇರಿದಂತೆ ಗಣ್ಯರನೇಕರು ಉಪಸ್ಥಿತರಿದ್ದರು. ಮಾಲಕ ಲಕ್ಷ್ಮಣ ಅವರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ವಸಂತಿ ಕೆ. ಅವರು ಸಹಕರಿಸಿದರು

ಪ್ರಾದೇಶಿಕ ವಾರ್ತೆಗಳು

ವಾಯ್ಸ್ ಆಫ್ ಎಂಪಿ ಎಂಎಲ್ ಎ ನ್ಯೂಸ್ ವಿಸ್ತೃತ ಯೋಜನೆಗೆ ಡಾ. ಎ.ಸದಾನಂದ ಶೆಟ್ಟಿ ಚಾಲನೆ.

ಮಂಗಳೂರು- ವಾಯ್ಸ್ ಆಫ್ ಎಂಪಿ ಎಂಎಲ್ ಎ ನ್ಯೂಸ್ ವಿಸ್ತೃತ ಯೋಜನೆಗೆ ನಗರದ ಕುಡ್ಲ ಕಚೇರಿಯಲ್ಲಿ ಇಂಟರ್ ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ನ ಅಧ್ಯಕ್ಷ ಎ.ಸದಾನಂದ ಶೆಟ್ಟಿ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಎಂಪಿಎಂಎಲ್ ಎ ನ್ಯೂಸ್ ಸಂಪಾದಕ ಡಾ. ಅಶೋಕ್ ಶೆಟ್ಟಿ ಬಿ. ಎನ್. ಅವರು ಉಪಸ್ಥಿತರಿದ್ದರು

Scroll to Top