Author name: editor

ಪ್ರಾದೇಶಿಕ ವಾರ್ತೆಗಳು

ಡಾ. ಎನ್.ವಿನಯ ಹೆಗ್ಡೆ ಅವರ ಜನ್ಮ ವಾರ್ಷಿಕೋತ್ಸವದ ಅಮೃತ ಮಹೋತ್ಸವದ ಪ್ರಯುಕ್ತ ಸಂವಾದ ಕಾರ್ಯಕ್ರಮ

ಡಾ. ಎನ್ ವಿನಯ ಹೆಗ್ಡೆ ಅವರ ಜನ್ಮ ವಾರ್ಷಿಕೋತ್ಸವದ ಅಮೃತ ಮಹೋತ್ಸವದ ನಿಮಿತ್ತ ನಡೆದ ಸಂವಾದ ಕಾರ್ಯಕ್ರಮ ಏಪ್ರಿಲ್ 3, 2026 ಶುಕ್ರವಾರದಂದು ಮಂಗಳೂರು ರಾಮಕೃಷ್ಣ ಮಠದ ಅಮೃತ ಭವನದಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ಹ್ಯಾಂಗೊ ಐಸ್ ಕ್ರೀಮ್ಸ್ ಪ್ರೈವೇಟ್ ಲಿಮಿಟೆಡ್‌ನ ಎಂ.ಡಿ ಶ್ರೀ ಪ್ರದೀಪ್ ಜಿ ಪೈ, ಮತ್ತು ಯೆನೆಪೋಯಾ ವಿಶ್ವವಿದ್ಯಾಲಯದ ಪ್ರೊ. ಚಾನ್ಸಲರ್ ಶ್ರೀ ಮೊಹಮ್ಮದ್ ಫರ್ಹಾದ್, ನಿಟ್ಟೆ ವಿಶ್ವವಿದ್ಯಾಲಯದ ಶ್ರೀ ಎನ್. ವಿಶಾಲ್ ಹೆಗ್ಡೆ ಅವರು ಮುಖ್ಯ ಅತಿಥಿಗಳಾಗಿ ಮತ್ತು ಆಳ್ವಾಸ ಎಜುಕೇಷನ್ ಫೌಂಡೇಶನ್ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವಾ ಅವರು ಗೌರವ ಅತಿಥಿಗಳಾಗಿ ಭಾಗವಹಿಸಿದರು.ಸಮಾರಂಭದಲ್ಲಿ ಮಂಗಳೂರು ರಾಮಕೃಷ್ಣ ಮಠದ ಅಧ್ಯಕ್ಷ ಪೂಜ್ಯ ಸ್ವಾಮಿ ಜಿತಕಾಮನಂದಜಿ ಮಹಾರಾಜ್ ಅವರು ಮಾತನಾಡುತ್ತಾ ನಿಟ್ಟೆ ವಿನಯ ಹೆಗಡೆ ಅವರ ಜೀವನ ಚರಿತ್ರೆ, ಪಠ್ಯಕ್ರಮ ರೀತಿಯಲ್ಲಿ ಪ್ರಕಟವಾಗಿ ಮುಂದಿನ ಪೀಳಿಗೆಗೆ ಅವರು ಬದುಕಿದ ಶೈಲಿ ತಿಳಿಯಬೇಕೆಂದು ಈ ಸಂಧರ್ಭದಲ್ಲಿ ಹೇಳಿದರು. ಕಾರ್ಯಕ್ರಮದಲ್ಲಿ ರಂಜನ್ ಬೆಳ್ಳರ್ಪಾಡಿ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ದಿಲ್ ರಾಜ್ ಆಳ್ವಾ,ಉಪಸ್ಥಿತರಿದ್ದರು. ಸಂತೋಷ ಆಳ್ವಾ ಕಾರ್ಯಕ್ರಮ ನಿರ್ವಹಿಸಿದರು.ಸಾಮಾಜಿಕ ಉದ್ಯಮಶೀಲತೆ ಕುರಿತಾದ ಸಂವಾದ ಕಾರ್ಯಕ್ರಮದಲ್ಲಿ ಯೆನೆಪೋಯಾ ವಿಶ್ವವಿದ್ಯಾಲಯದ ಪ್ರೊ. ಚಾನ್ಸಲರ್ ಶ್ರೀ ಮೊಹಮ್ಮದ್ ಫರ್ಹಾದ್,ಮತ್ತು ಗಣೇಶ್ ಕಾರ್ಣಿಕ್,ಮಾತನಾಡಿದರು. ಸಂವಹನಕಾರರಾಗಿ ರಂಜನ್ ಬೆಳ್ಳರ್ಪಾಡಿ ನಿರ್ವಹಿಸಿದರು.

ಪ್ರಾದೇಶಿಕ ವಾರ್ತೆಗಳು

ರಾಜೇಶ್ ಶೆಟ್ಟಿ ದೋಟ ಅವರಿಗೆ ಕೆಯುಡಬ್ಲ್ಯುಜೆ ಪ್ರಶಸ್ತಿ

ಮಂಗಳೂರು: ಬೆಂಗಳೂರಿನಲ್ಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯುಜೆ )2024ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಘೋಷಿಸಿದ್ದು, ಶೋಷಿತ ಸಮುದಾಯದ ಕುರಿತ ಅತ್ಯುತ್ತಮ ವರದಿಗೆ ನೀಡಲಾಗುವ ಬಿ.ಜಿ.ತಿಮ್ಮಪ್ಪಯ್ಯ ಪ್ರಶಸ್ತಿಗೆ ವಿಜಯವಾಣಿ ದಿನಪತ್ರಿಕೆಯ ಮಂಗಳೂರು ಬ್ಯೂರೋ ಮುಖ್ಯ ಉಪ ಸಂಪಾದಕ ರಾಜೇಶ್ ಶೆಟ್ಟಿ ದೋಟ ಭಾಜನರಾಗಿದ್ದಾರೆ.ಬೀದರ್‌ನಲ್ಲಿ ಏಪ್ರಿಲ್ 11 ಮತ್ತು 12ರಂದು ನಡೆಯಲಿರುವ 40ನೇ ರಾಜ್ಯಮಟ್ಟದ ಪತ್ರಕರ್ತರ ಸಮಾವೇಶದಲ್ಲಿ ಪ್ರಶಸ್ತಿ ಪ್ರದಾನಿಸಲಾಗುವುದು ಎಂದು ಅಧ್ಯಕ್ಷರು ತಿಳಿಸಿದ್ದಾರೆ.ಬಂಟ್ವಾಳ ತಾಲೂಕಿನ ವಾಮದಪದವು ನಿವಾಸಿಯಾಗಿರುವ ರಾಜೇಶ್ ಶೆಟ್ಟಿ ದೋಟ ಅವರು ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ 2024ನೇ ಸಾಲಿನ ಪ್ರತಿಷ್ಠಿತ ಪ.ಗೋ(ಪದ್ಯಾಣ ಗೋಪಾಲಕೃಷ್ಣ) ಪ್ರಶಸ್ತಿ ಪುರಸ್ಕೃತರಾಗಿದ್ದಾರೆ. ‘ಮುಗದಾರಗೆ’ ಎಂಬ ಕವನ ಸಂಕಲನಕ್ಕೆ 2022ನೇ ಸಾಲಿನ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಪುಸ್ತಕ ಪ್ರಶಸ್ತಿ ಅವರಿಗೆ ಸಂದಿದೆ.

ಪ್ರಾದೇಶಿಕ ವಾರ್ತೆಗಳು

ಆರ್.ರಾಮಕೃಷ್ಣ ಅವರಿಗೆ ‘ಗರುಡನಗಿರಿ ನಾಗರಾಜ್’ ಪ್ರಶಸ್ತಿ

ಮಂಗಳೂರು, ಎ.2- ಬೆಂಗಳೂರಿನಲ್ಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂ ಜೆ )2024 ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಘೋಷಿಸಿದ್ದು ಮಂಗಳೂರಿನ ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ ಮಂಗಳೂರು ಇದರ ಬ್ಯೂರೋ ಚೀಫ್ ಆರ್. ರಾಮಕೃಷ್ಣ ಅವರು ಕೆಯುಡಬ್ಲ್ಯೂಜೆ ಇದರ 2024 ನೇ ಸಾಲಿನ ‘ಗರುಡನಗಿರಿ ನಾಗರಾಜ್’ ಪ್ರಶಸ್ತಿಯನ್ನು ಪಡೆದಿರುತ್ತಾರೆ. ಬೀದರ್‌ನಲ್ಲಿ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ 40ನೇ ರಾಜ್ಯಮಟ್ಟದ ಪತ್ರಕರ್ತರ ಸಮಾವೇಶದಲ್ಲಿ ಪ್ರಶಸ್ತಿಯನ್ನು ಪ್ರದಾನಿಸಲಾಗುವುದು ಎಂದು ಅಧ್ಯಕ್ಷರು ತಿಳಿಸಿದ್ದಾರೆ. ಆರ್. ರಾಮಕೃಷ್ಣ ಅವರು 2020ರ ಕರ್ನಾಟಕ ಮಾಧ್ಯಮ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಯನ್ನೂ ಈಗಾಗಲೇ ಪಡೆದಿರುತ್ತಾರೆ.

ಪ್ರಾದೇಶಿಕ ವಾರ್ತೆಗಳು

“ರಂಗಮಂಟಪ “ದಲ್ಲಿ ಕಲೆಯ ವಿಸ್ಮಯ ಜಗತ್ತು: ಜನಪದ ವಿದ್ವಾಂಸ ಡಾ.ಕೆ.ಚಿನ್ನಪ್ಪ ಗೌಡ ಅಭಿಪ್ರಾಯ

ಮಂಗಳೂರು: ಪತ್ರಕರ್ತೆ ಕೋಡಿಬೆಟ್ಟು ರಾಜಲಕ್ಷ್ಮಿ ಬರೆದಿರುವ ಪ್ರಸಿದ್ಧ ನೃತ್ಯ ಕಲಾವಿದರ ಸಂದರ್ಶನಗಳ `ಲಲಿತ ಮಂಟಪ’ ಕೃತಿ ಬಿಡುಗಡೆ ಸಮಾರಂಭ ನಗರದ ಸಪ್ನ ಬುಕ್ ಹೌಸ್‌ನಲ್ಲಿ ಬುಧವಾರ ನಡೆಯಿತು.ಕೃತಿ ಬಿಡುಗಡೆಗೊಳಿಸಿದ ಜನಪದ ವಿದ್ವಾಂಸ ಡಾ.ಕೆ.ಚಿನ್ನಪ್ಪ ಗೌಡ ಮಾತನಾಡಿ ” ದೇಶದ ಪ್ರಮುಖ ನೃತ್ಯ ಕಲಾವಿದರ ಸಂದರ್ಶನ ಲೇಖನಗಳು ಲಲಿತ ಮಂಟಪದಲ್ಲಿ ಸುಂದರವಾಗಿ ಮೂಡಿ ಬಂದಿದೆ. ಪ್ರತಿಯೊಬ್ಬರ ಕಲಾವಿದರ ಬದುಕು ಕೂಡಾ ಅದ್ಭುತ. ಅವರ ಬದುಕು ಮತ್ತು ಕಲಾ ಪ್ರಕಾರವನ್ನು ರಾಜಲಕ್ಷ್ಮಿ ಅವರು ಮನೋಜ್ಞವಾಗಿ ತೆರೆದಿಟ್ಟಿದ್ದಾರೆ. ಕಲೆಯ ವಿಸ್ಮಯ ಜಗತ್ತು ತೆರೆದುಕೊಂಡಿದೆ. ಲಲಿತ ಮಂಟಪದಲ್ಲಿ ನಾಟ್ಯ ಪರಂಪರೆ, ಕಲಾವಿದರ ತ್ಯಾಗ, ಸವಾಲುಗಳ ಸಮಗ್ರ ಮಾಹಿತಿ ಇದೆ ಎಂದರು.ಮಾಜಿ ಶಾಸಕಿ ಶಕುಂತಳಾ ಟಿ.ಶೆಟ್ಟಿ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಮುಖ್ಯ ಅತಿಥಿಗಳಾಗಿದ್ದರು. ಕೃತಿಕರ್ತೆ ರಾಜಲಕ್ಷ್ಮಿ ಕೋಡಿಬೆಟ್ಟು ಸ್ವಾಗತಿಸಿದರು. ಲೇಖಕಿ ದೇವಿಕಾ ನಾಗೇಶ್ ಕಾರ್ಯಕ್ರಮ ನಿರೂಪಿಸಿದರು.*ವಿನೂತನ ರಂಗ ಪ್ರಯೋಗರಂಗ ಮಂಟಪ ಕೃತಿ ಆಧರಿಸಿದ ವಿನೂತನ ರಂಗ ಪ್ರಯೋಗ ಗೆಜ್ಜೆ ಬರೆದ ಅಕ್ಷರವನ್ನು ವಿದುಷಿ ಮಂಜುಳಾ ಸುಬ್ರಹ್ಮಣ್ಯ ಪ್ರಸ್ತುತಪಡಿಸಿದರು. ಪವಿತ್ರಾ ಮಯ್ಯ ಹಾಡುಗಾರಿಕೆಯಲ್ಲಿ ಹಾಗೂ ರಾಕೇಶ್ ಹೊಸಬೆಟ್ಟು ಮೃದಂಗ ಮತ್ತು ತಬ್ಲಾದಲ್ಲಿ ಸಹಕರಿಸಿದರು.

ಪ್ರಾದೇಶಿಕ ವಾರ್ತೆಗಳು

ದ.ಕ.ಜಿಲ್ಲಾ ರೆಡ್‌ಕ್ರಾಸ್ ಚೇರ್ಮನ್ ಆಗಿ ಸಿಎ ಶಾಂತಾರಾಮ ಶೆಟ್ಟಿ ಪುನರಾಯ್ಕೆ

ಮಂಗಳೂರು: ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ೨೦೨೬-೨೯ನೇ ಸಾಲಿನ ಚೇರ್ಮನ್ ಆಗಿ ಸಿಎ ಶಾಂತಾರಾಮ ಶೆಟ್ಟಿ ಆಯ್ಕೆಯಾಗಿದ್ದಾರೆ.ವೈಸ್ ಚೇರ್ಮನ್ ಆಗಿ ಡಾ. ಬಿ.ಸಚ್ಚಿದಾನಂದ ರೈ, ಖಜಾಂಜಿಯಾಗಿ ಗುರುದತ್ ನಾಯಕ್ ಆಯ್ಕೆಯಾಗಿದ್ದಾರೆ.ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ದರ್ಶನ್.ಎಚ್.ವಿ. ಅವರು ಆಡಳಿತ ಮಂಡಳಿ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿ ಶುಭ ಹಾರೈಸಿದರು.ನೂತನವಾಗಿ ಚುನಾಯಿತರಾದ ಸಿಎ ಶಾಂತಾರಾಮ ಶೆಟ್ಟಿ, ಡಾ. ಬಿ.ಸಚ್ಚಿದಾನಂದ ರೈ, ಗುರುದತ್ ನಾಯಕ್, ಡಾ.ಸತೀಶ್ ರಾವ್, ಯತೀಶ್ ಬೈಕಂಪಾಡಿ, ಪುಷ್ಪರಾಜ್ ಜೈನ್,ಡಾ.ಸುಮನ.ಬಿ., ಪಿ.ಬಿ.ಹರೀಶ್ ರೈ ,ಸಚೇತ್ ಸುವರ್ಣ ಮತ್ತು ರಾಘವೇಂದ್ರ ರಾವ್ ಪ್ರಮಾಣ ವಚನ ಸ್ವೀಕರಿಸಿದರು. ಬಳಿಕ ಚೇರ್ಮನ್ ಹಾಗೂ ವಿವಿಧ ಉಪಸಮಿತಿಗಳಿಗೆ ನಿರ್ದೇಶಕರನ್ನು ಆಯ್ಕೆ ಮಾಡಲಾಯಿತು.ಸಿಎ ಶಾಂತಾರಾಮ ಶೆಟ್ಟಿ ಅವರು ಸತತ ೪ನೇ ಅವಧಿಗೆ ರೆಡ್‌ಕ್ರಾಸ್ ದ.ಕ.ಜಿಲ್ಲಾ ಘಟಕದ ಚೇರ್ಮನ್ ಆಗಿ ಆಯ್ಕೆಯಾಗಿದ್ದು, ಪ್ರಸ್ತುತ ಅವರು ನವ ದೆಹಲಿಯ ರೆಡ್‌ಕ್ರಾಸ್ ಸಂಸ್ಥೆಯ ರಾಷ್ಟ್ರೀಯ ನಿರ್ವಹಣಾ ಮಂಡಳಿ ಸದಸ್ಯರಾಗಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ತೆಲುಗು ಕಲಾ ಸಮಿತಿಯಿಂದ ಯುಗಾದಿ ಆಚರಣೆ

ಮಂಗಳೂರು,ಮಾ.23;ಮಂಗಳೂರಿನ ತೆಲುಗು ಕಲಾ ಸಮಿತಿಯು ಲಯನ್ಸ್ ಕ್ಲಬ್, ಸುರತ್ಕಲ್‌ನಲ್ಲಿ “ಶ್ರೀ ಪರಾಭವ ನಾಮ ಸಂವತ್ಸರ ಉಗಾದಿ”ಯನ್ನು ಅದ್ದೂರಿಯಾಗಿ ಆಚರಿಸಲಾಯಿತುಬಳಿಕ ನೆಡೆದ ವಾರ್ಷಿಕ ಮಹಾ ಸಭೆಯಲ್ಲಿ 2026-28 ಕ್ಕೆ ಹೊಸ ಸಮಿತಿಯನ್ನು ಆಯ್ಕೆ ಮಾಡಲಾಯಿತು ನಳಿನಿ ಚೆರುಕೂರಿ ನೂತನ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ನಾಗವರಪು ಶ್ರೀನಿವಾಸ ರಾವ್ ಪ್ರಧಾನ ಕಾರ್ಯದರ್ಶಿಯಾಗಿ, ನಾದೆಳ್ಳ ವೆಂಕಟ ಫಣಿ, ರಾವೂರಿ ನಾಗಫಣಿ ಕುಮಾರ್ ಅವರನ್ನು ಉಪಾಧ್ಯಕ್ಷರಾಗಿ ಮುಂದುವರಿಸಲಾಯಿತು. ಶ್ರೀ ಕುಮಾರ್ ರಾವ್ ಅಮರ ಅವರನ್ನು ಖಜಾಂಚಿಯಾಗಿ ಮತ್ತು ಚಂದ್ರಶೇಖರ್ ಅವರನ್ನು ಜಂಟಿ ಖಜಾಂಚಿಯಾಗಿ ಆಯ್ಕೆ ಮಾಡಲಾಯಿತು. ಪ್ರಭು ನಾಯ್ಡು ಮತ್ತು ರಾಮಕೃಷ್ಣ ಅವರನ್ನು ಜಂಟಿ ಕಾರ್ಯದರ್ಶಿಗಳಾಗಿ ಆಯ್ಕೆ ಮಾಡಲಾಯಿತು.ಹಿಂದಿನ ಅಧ್ಯಕ್ಷ ಪ್ರೊ. ಕರ್ರಾ ರಾಮಚಂದ್ರರ್ ಮತ್ತು ನಿರ್ಗಮಿತ ಕಾರ್ಯದರ್ಶಿ ಇನುಮಲ ಶ್ರೀನಿವಾಸ ರಾವ್ ಅವರನ್ನು ಸನ್ಮಾನಿಸಲಾಯಿತು.ಗೌರವ ಅಧ್ಯಕ್ಷ ಶ್ರೀ ನಾದೆಳ್ಳ ಸಾಂಬಶಿವ ರಾವ್ ಮತ್ತು ಸಂಸ್ಥಾಪಕ ಅಧ್ಯಕ್ಷ ಡಾ. ಜಿ.ಆರ್. ಕೃಷ್ಣ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಮಂಗಳೂರು ಮತ್ತು ಸುತ್ತಮುತ್ತಲಿನ 200 ಕ್ಕೂ ಹೆಚ್ಚು ತೆಲುಗು ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಸಮಾರಂಭದಲ್ಲಿ ಸದಸ್ಯರು ಮತ್ತು ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Scroll to Top