Author name: editor

ಪ್ರಾದೇಶಿಕ ವಾರ್ತೆಗಳು

ಪೊಲೀಸ್ ಆಯುಕ್ತರನ್ನು ಭೇಟಿಮಾಡಿ ಅಭಿನಂದಿಸಿದ ಐಕಳ ಹರೀಶ್ ಶೆಟ್ಟಿ

ಮಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಸುಧೀರ್ ಕುಮಾರ್ ರೆಡ್ಡಿ ಅವರು ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಿಕೊಂಡು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಹರೀಶ್ ಶೆಟ್ಟಿ ಅವರು ತಿಳಿಸಿದ್ದಾರೆ. ದಕ್ಷ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಅವರನ್ನು ಭೇಟಿ ಮಾಡಿ ಅಭಿನಂದಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ಶ್ರೀ ಈಶ್ವರೀ ಭಜನಾ ಮಂಡಳಿ ಕಾಂಜಿಲಕೋಡಿ ದಶಮ ಸಂಭ್ರಮ

ಅಡ್ಡೂರು: ಶ್ರೀ ಈಶ್ವರೀ ಭಜನಾ ಮಂಡಳಿಯ ದಶಮ ಸಂಭ್ರಮವು ಫೆಬ್ರವರಿ 6 ರಿಂದ 8 ರವರೆಗೆ ಶ್ರೀ ಮುಖ್ಯ ಪ್ರಾಣ ದೇವಸ್ಥಾನ ದಲ್ಲಿ ನಡೆಯಲಿದೆ. ಫೆಬ್ರವರಿ 6 ರಂದು ಸಂಜೆ 5 ಗಂಟೆಗೆ ಕಾಂಜಿಲ ಕೋಡಿ ನಮ್ಮ ಮಂಡಳಿ ಯಿಂದ ಮೆರವಣಿಗೆ ಮೂಲಕ ಶ್ರೀ ಮುಖ್ಯ ಪ್ರಾಣ ದೇವರಿಗೆ ರಜತ ಗದೆ ಸಮರ್ಪಣೆ ನಡೆಯಲಿದೆ. ಅದೇ ದಿನ ಸಂಜೆ 6:30 ರಿಂದ ಏಕಹಾ ಭಜನಾ ಪ್ರಾರಂಭವಾಗಿ ಮರುದಿನ ಸಂಜೆ ಸೂರ್ಯಾಸ್ತ ದವರೆಗೆ ಭಜನಾ ಮಂಗಳೋತ್ಸವ ಸಮಾಪ್ತಿ ಗೊಳ್ಳಲಿದೆ. ಫೆಬ್ರವರಿ 7 ರಂದು ಶ್ರೀ ಮುಖ್ಯ ಪ್ರಾಣ ದೇವರಿಗೆ 108 ಸೀಯಾಳ ಅಭಿಷೇಕ, ಪವನಮಾನ ಅಭಿಷೇಕ, ಪವಮಾನ ಹೋಮ, ರಂಗಪೂಜೆ ಯು ನಡೆಯಲಿದೆ. ಫೆಬ್ರವರಿ 8 ರಂದು ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಸೇರಿದಂತೆ ಅಂತರ್ ಜಿಲ್ಲಾ ಮಟ್ಟದ ಹಾಗೂ ಗ್ರಾಮೀಣ ಮಟ್ಟದ ಕುಣಿತ ಭಜನಾ ಸ್ಪರ್ಧೆ ನಡೆಯಲಿದೆ. ಬೆಳಿಗ್ಗೆ 9 ಗಂಟೆಗೆ ನಡೆಯುವ ಉದ್ಘಾಟನೆ ಸಮಾರಂಭದಲ್ಲಿ ದ್ವೀಪ ಪ್ರಜ್ವಲನೆ ಯನ್ನು ಮಾಧವ ಭಟ್ ಪೊಳಲಿ, ಚಂದ್ರಶೇಖರ ಭಟ್ ನಡು ಮನೆ ನೆರೆವೇರಿಸಲ್ಲಿದ್ದಾರೆ. ಆಶೀರ್ವಾಚನವನ್ನು ಶ್ರೀ ರಾಮಕೃಷ್ಣ ತಪೋವನದ ಶ್ರೀ ವಿವೇಕಾ ಚೈತನ್ಯಾನಂದ ಸ್ವಾಮೀಜಿ, ನಳಿನ್ ಕುಮಾರ್ ಕಟೀಲ್, ರವಿಶಂಕರ್ ರಾವ್ ನೂಯಿ, ಧನಂಜಯ್ ಭಟ್ ಗಂದಾಡಿ, ನೂಯಿ ಬಾಲಕೃಷ್ಣ ರಾವ್, ಯಶವಂತ್ ಕುಮಾರ್ ಶೆಟ್ಟಿ, ವೆಂಕಟೇಶ್ ನಾವಡ ಪೊಳಲಿ, ಗುಣಾಕರ ಎಂ ಸಾಲ್ಯಾನ್, ಜಿ. ಎಂ ಉದಯಭಟ್, ನವೀನ್ ಮೂಡು ಶೆಡ್ಡೆ, ಪವನ್ ಆಮೀನ್ ಬರ್ಕೆ,ಮತ್ತಿತರು ಭಾಗವಹಿಸಿಲಿದ್ದಾರೆ. ಸಂಜೆ 6 ರಿಂದ ನಡೆಯುವ ಸಮಾರೋಪ ಸಮಾರಂಭದಲ್ಲಿ ಶ್ರೀ ಕ್ಷೇತ್ರ ಒಡಿಯೂರು ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಆಶೀರ್ವಾಚನ ನೀಡಲಿದ್ದಾರೆ. ಅಧ್ಯಕ್ಷತೆ ಯನ್ನು ಶಾಸಕರಾದ ವೈ. ಭರತ್ ಶೆಟ್ಟಿಯವರು ವಹಿಸಲ್ಲಿದ್ದಾರೆ..ದಾಮೋದರ ಶರ್ಮರವರು ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.. ಮುಖ್ಯ ಅತಿಥಿಯಾಗಿ ಸಂಸದ ರಾದ ಬ್ರಿಜೇಶ್ ಚೌಟ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ,ಮಾಜಿ ಸಚಿವರಾದ ರಮಾನಾಥ ರೈ, ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪಾಡಿ ಗುತ್ತು, ಶ್ರೀ ಮುಖ್ಯ ಪ್ರಾಣ ದೇವಸ್ಥಾನದ ವ್ಯವಸ್ಥಾನ ಸಮಿತಿಯ ಅಧ್ಯಕ್ಷರಾದ ಹರಿಶ್ಚಂದ್ರ ಆಮೀನ್ ಬರ್ಕೆ, ಮಾದುಕೋಡಿ ಸ್ವಾಮಿ ಕೊರಗಜ್ಜ ದೈವ ಸಾನಿಧ್ಯ ದ ವಿಜಯ ಸುವರ್ಣ ಗುರೂಜಿ, ಗುರುಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಓಂ ಪ್ರಕಾಶ್ ಶೆಟ್ಟಿ, ಲಂಚು ಲಾಲ್ ಕೆ ಎಸ್, ಚಂದ್ರಹಾಸ್ ಪಲ್ಲಿಪಾಡಿ, ಭುವನೇಶ್ ಪಚಿನಡ್ಕ, ಚಂದ್ರಹಾಸ್ ನಾರಾಳ, ಕಿರಣ್ ಪಕ್ಕಳ ಪೆರ್ಮೆoಕಿ ಗುತ್ತು, ಬಜಪೆ ಪೊಲೀಸ್ ನಿರೀಕ್ಷಕ ರಾದ ಸಂದೀಪ್ ಜಿ ಎಸ್, ಸಂತೋಷ್ ಶೆಟ್ಟಿ ಕಾಂಜಿಲ ಕೋಡಿ ಭಾಗವಹಿಸಲ್ಲಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ಉಡುಪಿಯಲ್ಲಿ ಸೌದಾಮಿನಿ ರಾವ್ ಕಟಪಾಡಿಯವರಿಂದ ಏಕವ್ಯಕ್ತಿ ನೃತ್ಯ ಪ್ರದರ್ಶನ

ಮಂಗಳೂರು,ಫೆ.4;ಶ್ರೀ ಶಿರೂರು ಪರ್ಯಾಯದ ಭಾಗವಾಗಿ ಇತ್ತೀಚೆಗೆ ಉಡುಪಿ ರಾಜಾಂಗಣದಲ್ಲಿ ಸೌದಾಮಿನಿ ರಾವ್ ಕಟಪಾಡಿಯವರಿಂದ ಏಕವ್ಯಕ್ತಿ ನೃತ್ಯ ಪ್ರದರ್ಶನ ನಡೆಯಿತು.ನಟುವಾoಗದಲ್ಲಿ ಆಚಾರ್ಯ ಶ್ರೀಮತಿ ಇಂದಿರಾ ಕಡoಬಿ,ಗಾಯನ ಶ್ರೀ ವಿಶ್ವೇಶ್ ಸ್ವಾಮಿನಾಥನ್,ಮೃದಂಗ ಶ್ರೀ ವಿದ್ಯಾಶಂಕರ್ ಎನ್,ಕೊಳಲು ಶ್ರೀ ವಿವೇಕ್ ವಿ ಕೃಷ್ಣ ಸಹಕರಿಸಿದರು.

ಪ್ರಾದೇಶಿಕ ವಾರ್ತೆಗಳು

ಫೆ.7-8;ಉಚಿತ ಶ್ರವಣ ತಪಾಸಣಾ ಶಿಬಿರ

ಮಂಗಳೂರು, ಫೆ.3; ಟೀಮ್ ಈಶ್ವರ್ ಮಲ್ಪೆ ಅವರ ವೈದ್ಯಕೀಯ ತಂಡ ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತ ರ ಸಂಘದ ಸಹಯೋಗದೊಂದಿಗೆ ಮಂಗಳೂರು ಪ್ರೆಸ್ ಕ್ಲಬ್ ,ಪತ್ರಿಕಾ ಭವನ ಟ್ರಸ್ಟ್ ಸಹಕಾರ ದೊಂದಿಗೆ ಕಳೆದ ಸಲದಂತೆ ಈ ಬಾರಿಯೂ ದಿನಾಂಕ 7-02-2026. ಮತ್ತು 8-02-2026 ‌‌‌‌‌ರಂದು ಉಚಿತ ಶ್ರವಣ ತಪಾಸಣಾ ಶಿಬಿರ (ಸಮಯ ಬೆಳಗ್ಗೆ 9.30ರಿಂದ ಸಂಜೆ 4.30ರವರೆಗೆ ಮಂಗಳೂರಿನ ಪತ್ರಿಕಾ ಭವನದಲ್ಲಿ ನಡೆಸಲಿದೆ.ಈ ಶಿಬಿರದಲ್ಲಿ ಉಚಿತವಾಗಿ ಕಿವಿಯ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ಕಾರ್ಯಕ್ರಮ ಹಾಗೂ ವಿತರಣೆ ನಡೆಯಲಿದೆ ಎಂದು ತಂಡದ ಸಂಚಾಲಕ ಲವ ಬಂಗೇರಾ ಸುದ್ದಿಗೋಷ್ಢಿಯಲ್ಲಿಂದು ತಿಳಿಸಿದ್ದಾರೆ.ಈ ಶಿಬಿರದಲ್ಲಿ ಪತ್ರಕರ್ತರ ಕುಟುಂಬದ ಸದಸ್ಯರ ಜೊತೆ ಹಿರಿಯ ನಾಗರಿಕರು ಸೇರಿದಂತೆ ಎಲ್ಲಾ ಸಾರ್ವಜ ನಿಕರು ಉಚಿತ ತಪಾಸಣೆ ಮಾಡಿಕೊಳ್ಳಬಹುದಾಗಿದೆ.ಈ ಬಗ್ಗೆ ಮಾಧ್ಯಮದ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಬೇಕಾಗಿ ವಿನಂತಿ.ಟೀಮ್ ಈಶ್ವರ್ ಮಲ್ಪೆಯವರು ಅನೇಕ ಸಾಮಾಜಿಕ ಕಾರ್ಯವನ್ನು ಮುಂದುವ ರಿಸಿಕೊಂಡು ಬರುತ್ತಿದ್ದು, ಶ್ರವಣದ ಸಮಸ್ಯೆಯಿಂದ (ಕೇಳಿಸಿಕೊಳ್ಳುವ ಸಮಸ್ಯೆ) ಬಳಲುತ್ತಿರುವ ರೋಗಿಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಉಚಿತ ಶಿಬಿರವನ್ನು ಮಾಡುತ್ತಿದ್ದು ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳಿಗೆ ನಮ್ಮ ಸಂಸ್ಥೆಯಾದ ಟೀಮ್ ಈಶ್ವರ್ ಮಲ್ಪೆ ಯವರು ಶ್ರವಣದ ಯಂತ್ರಕ್ಕೆ (Hearing Machine) ಆಗುವ ವೆಚ್ಚದ ಶೇಕಡಾ 40% ಮೊತ್ತವನ್ನು ಭರಿಸಲಾಗುತ್ತಿದ್ದು ರೋಗಿಗಳು ಇದರ ಸದುಪಯೋಗ ಪಡಿಸಿಕೊಳ್ಳ ಬೇಕಾಗಿ ವಿನಂತಿ.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ(ರಿ) ವತಿಯಿಂದ ಕಳೆದ ಬಾರಿ ಆಯೋಜಿಸಿರುವ ಶಿಬಿರದಲ್ಲಿ 68 ಮಂದಿ ತಪಾಸಣೆಗೆ ಒಳಗಾಗಿದ್ದರು.ಈ ಶಿಬಿರದಲ್ಲಿ ಭಾಗವಹಿಸುವ ಸಾರ್ವಜನಿಕರಿಗೆ ಕೆಲವು ಸೂಚನೆಗಳು ಹೀಗಿವೆ :-*ನೋಂದಣಿ ಕಡ್ಡಾಯವಾಗಿದೆ ಕರೆಮಾಡಿ ನೋಂದಾಯಿಸಿಕೊಳ್ಳಿ.*ಹಿರಿಯರ ನಾಗರಿಕರಿಗೆ ಮೊದಲ ಆದ್ಯತೆ. (ಮನೆಯವರೊಂದಿಗೆ ಬರಬೇಕು)*ಶ್ರವಣ ಪರೀಕ್ಷೆಯ ಯಾವುದಾದರೂ ಹಳೆಯ ವರದಿ (Old Report) ಇದ್ದರೆ ಜೊತೆಯಲ್ಲಿ ತನ್ನಿ.*ಈಶ್ವರ್ ಮಲ್ಪೆ ಟೀಮ್‌ನವರು ದೇಣಿಗೆ ಮೊತ್ತದಿಂದ 40% ಶ್ರವಣ ಸಾಧನದ ಮೊತ್ತವನ್ನು ಪಾವತಿಸುತ್ತಾರೆ.(ಮೊದಲು ನೋಂದಾಯಿಸುವ 30 ಜನರು ಈ ಸೌಲಭ್ಯವನ್ನು ಬಳಸಿಕೊಳ್ಳಬಹುದು.)*ಅಂತಾರಾಷ್ಟ್ರೀಯ ಸಂಸ್ಥೆಯಲ್ಲಿ ಅನುಭವ ಪಡೆದಿರುವ ವೈದ್ಯರು ಈ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ ಹೆಚ್ಚಿನ ಮಾಹಿತಿಗಾಗಿ91 89518 04399 ಕರೆಮಾಡಬಹುದಾಗಿದೆಸಾರ್ವಜನಿಕರು ಈ ಸೌಲಭ್ಯವನ್ನು ಬಳಸಿಕೊಳ್ಳಬಹುದಾಗಿದೆ ಎಂದು ಲವ ಬಂಗೇರಾ ತಿಳಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತ ರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್,ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ,ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ,ಶ್ರವಣ ತಜ್ಞೆ ಡಾ‌. ಅಂಕಿತಾ ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ಬಜೆಟ್ ಹೀಗೂ ಉಂಟೇ!!

ವರದಿ: ಡಾ.ಅಶೋಕ್ ಶೆಟ್ಟಿ ಬಿ.ಎನ್.ನವದೆಹಲಿ: ಕೇಂದ್ರ ಸರಕಾರ 53 ಲಕ್ಷ ಕೋಟಿ ಬಜೆಟ್ ಮಂಡಿಸಿದೆ. ಇದನ್ನು ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಇದು ಜನಪರ ಬಜೆಟ್ ಅಲ್ಲ ಎಂದು ಟೀಕಿಸಿದೆ. ಇನ್ನು ಸ್ವಲ್ಪ ಸಮಯದಲ್ಲಿ ರಾಜ್ಯ ಸರಕಾರ ಬಜೆಟ್ ಮಂಡಿಸಲಿದೆ. ಆವಾಗ ಬಿಜೆಪಿ ನಾಯಕರು ಟೀಕಿಸಲಿದ್ದಾರೆ.ಪ್ರತೀ ಸಾರಿ ಬಜೆಟ್ ಮಂಡಿಸಿದಾಗ ವಿಪಕ್ಷಗಳು ಟೀಕಿಸುತ್ತವೆ. ಇದು ಎಷ್ಟು ಸರಿ? ಅಭಿವೃದ್ಧಿ ಆಡಳಿತ ನಮ್ಮ ದೇಶದ ಧ್ಯೇಯವಾಗಿದೆ. ಆದರೆ ವಿರೋಧಪಕ್ಷದ ಸ್ಥಾನದಲ್ಲಿರುವ ರಾಜಕೀಯ ನಾಯಕರು ಆಡಳಿತ ಪಕ್ಷದ ಬಜೆಟ್ ಬಗ್ಗೆ ಸರಿಯಾಗಿ ವಿಮರ್ಶಿಸದೆ ಏಕಾಏಕಿ ಟೀಕಿಸುತ್ತಾರೆ. ಇದೇ ಸಂದರ್ಭ ಕೆಲವು ಚಾಲ್ತಿಯಲ್ಲಿ ಇಲ್ಲದ ಮಾಜಿ ರಾಜಕಾರಣಿಗಳು ಬಜೆಟನ್ನು ಬೇಕಾಬಿಟ್ಟಿ ಹೊಗಳಿ ಪ್ರಚಾರ ಗಿಟ್ಟಿಸಿಕೊಳ್ಳುತ್ತಾರೆ.ಇವರಿಗೆಲ್ಲಾ ಈ ಅರ್ಥವ್ಯವಸ್ಥೆಯ ಜ್ಞಾನವೇ ಇರುವುದಿಲ್ಲ. ಒಂದು ಬಜೆಟ್‍ನ್ನು ಮಂಡಿಸಬೇಕಾದರೆ ಎಷ್ಟು ಯೋಜನಾ ವರದಿಗಳನ್ನು ಸಿದ್ಧಪಡಿಸಿ ಮಂಡಿಸಬೇಕಾಗುತ್ತದೆ. ಅಭಿವೃದ್ದಿಯನ್ನು ಮೂಲ ಧ್ಯೇಯವಾಗಿರಿಸಿಕೊಂಡು ಬಜೆಟ್‍ನ್ನು ಮಂಡಿಸುತ್ತಾರೆ. ಆದರೆ ಬಜೆಟ್ ಮಂಡನೆಯಾದ ಕ್ಷಣವೇ ಅದು ಹೇಗಿದೆ ಎಂಬುದನ್ನು ಕೂಡಾ ನೋಡದೇ ಏಕಾಏಕಿ ಟೀಕಿಸುತ್ತಾರೆ.ಕಾಂಗ್ರೆಸ್ ಇರಲಿ, ಬಿಜೆಪಿ ಇರಲಿ ಇದು ರಾಷ್ಟ್ರೀಯ ರಾಜಕೀಯ ಪಕ್ಷಗಳು. ಇವುಗಳಿಗೆ ತಮ್ಮದೇ ಆದ ರಾಜಕೀಯ ಜವಾಬ್ದಾರಿಗಳಿರುತ್ತವೆ. ಇಷ್ಟು ಇದ್ದರೂ ಇದರ ಕೆಲವು ಪ್ರಚಾರ ಪ್ರಿಯ ನಾಯಕರು ಬಜೆಟ್‍ನ್ನು ಟೀಕಿಸುವುದು ಎಷ್ಟು ಸರಿ? ಬಜೆಟ್ ಎಂದರೆ ಹೀಗೂ ಉಂಟೇ ಎಂಬ ವಿಷಯ ಜನಚರ್ಚೆಗೆ ಗ್ರಾಸವಾಗಿದೆ.

ಪ್ರಾದೇಶಿಕ ವಾರ್ತೆಗಳು

ನೋಬೆಲ್ ಕನ್ನಡಿಗ ರಾಜ್ಯ ಪ್ರಶಸ್ತಿಗೆ ಡಾ. ಮಾಲತಿ ಶೆಟ್ಟಿ ಮಾಣೂರು ಆಯ್ಕೆ            

ಬೆಂಗಳೂರಿನ ಒರಿಯಂಟಲ್ ಫೌಂಡೇಶನ್ ರಿಜಿಸ್ಟರ್ ವತಿಯಿಂದ ನಡೆಯುವ 2026 ಸಾಲಿನ ಪ್ರತಿಷ್ಠಿತ *ನೋಬೆಲ್ ಕನ್ನಡಿಗ* ರಾಜ್ಯ ಪ್ರಶಸ್ತಿಗೆ ಸಾಹಿತ್ಯ ಹಾಗೂ ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ ಮಂಗಳೂರಿನ ಅಮೃತ ಪ್ರಕಾಶ ಪತ್ರಿಕೆ ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ರವರು ಆಯ್ಕೆಯಾಗಿದ್ದು. ಪ್ರಶಸ್ತಿ ಪ್ರದಾನ ಸಮಾರಂಭವು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ಚಾಮರಾಜಪೇಟೆ, ಕೃಷ್ಣರಾಜ ಪರಿಷತ್ ಮಂದಿರದಲ್ಲಿ ಫೆಬ್ರವರಿ ಒಂದರಂದು ಗಣ್ಯಾತಿ ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ .ಜನಪ್ರಿಯ ನಾಯಕ ನಟ  ಹಾಗೂ ನೃತ್ಯ ನಿರ್ದೇಶಕರಾದ ವಿನೋದ್ ರಾಜ್, ಹೆಸರಾಂತ ನಟಿ ಅಭಿನಯ,ಗಾಯಕಿ ಡಾ.ಗೀತಾ ಕೈವಾರ, ಹಾಸ್ಯ ನಟ ಮೈಸೂರು ರಮಾನಂದ, ಮುಖ್ಯ ಅತಿಥಿಗಳಾಗಿರುವರು ಎಂದು ಸಂಸ್ಥೆಯ ಸಂಸ್ಥಾಪಕರಾದ ರವಿಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಡಾ. ಮಾಲತಿ ಶೆಟ್ಟಿ ಮಾಣೂರುರವರು ಕಳೆದ 21 ವರ್ಷಗಳಿಂದ ಸಾಹಿತ್ಯ, ಪತ್ರಿಕೋದ್ಯಮ, ಸಮಾಜಸೇವೆ ,ಸಂಘಟನೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಕಳೆದ 13 ವರ್ಷಗಳಿಂದ ಸಾಹಿತ್ಯ ಪದ ಅಮೃತ ಪ್ರಕಾಶ ಪತ್ರಿಕೆಯನ್ನು ನಡೆಸುತ್ತಿದ್ದಾರೆ .9 ಕೃತಿಗಳನ್ನು ಪ್ರಕಟಿಸಿದ್ದಾರೆ .ಇತರ ಹಿರಿಯ ಕಿರಿಯ ಲೇಖಕರ ಸರಣಿ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಈಗಾಗಲೇ 49 ಕೃತಿಗಳನ್ನು ಪತ್ರಿಕೆಯ ವತಿಯಿಂದ ಬಿಡುಗಡೆಗೊಳಿಸಿದ್ದಾರೆ. ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳಲ್ಲಿ ಸಾಹಿತ್ಯದ ಅಭಿರುಚಿ ಮೂಡುವ ಸಲುವಾಗಿ ಈಗಾಗಲೇ 117 ಶಾಲಾ-ಕಾಲೇಜುಗಳಲ್ಲಿ ಉಚಿತ ಸಾಹಿತ್ಯ ಅಭಿರುಚಿ ಕಾರ್ಯಕ್ರಮ ಮಾಡಿ ದಾಖಲೆ ನಿರ್ಮಿಸಿದ್ದಾರೆ. ಮಂಗಳೂರಿನ   ಅತ್ತಾವರ ಪತಿ ಸತ್ಯ ಪ್ರಕಾಶ್ ಶೆಟ್ಟಿ ಜೊತೆ ಸಾಹಿತ್ಯ ನಂದನದಲ್ಲಿ ವಾಸವಾಗಿದ್ದಾರೆ. ಇವರ ತಂದೆ ಹಿರಿಯ ಯಕ್ಷಗಾನ ಕಲಾವಿದರಾದ ದಿವಂಗತ ಕಿಟ್ಟಣ್ಣ ಶೆಟ್ಟಿ ಮಾಣೂರು ಹಾಗೂ ರೇವತಿ ಶೆಟ್ಟಿ ಮಾಣೂರು ಅವರ ದಂಪತಿಗಳ   ಸುಪುತ್ರಿ. .

ಪ್ರಾದೇಶಿಕ ವಾರ್ತೆಗಳು

ಬಜೆಟ್ ನಲ್ಲಿ ಮಂಗಳೂರು ದಸರಾಗೆ 5 ಕೋಟಿ:- ಮುಖ್ಯಮಂತ್ರಿಗಳಿಗೆ ಶಾಸಕ ಕಾಮತ್ ಮನವಿ

ಮಂಗಳೂರು ದಸರಾ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಸಂಕೇತವಾಗಿದ್ದು ಪ್ರತೀ ವರ್ಷ ದೇಶ-ವಿದೇಶಗಳ ಲಕ್ಷಾಂತರ ಭಕ್ತರನ್ನು ಆಕರ್ಷಿಸುತ್ತಿದ್ದು ಇಂತಹ ವೈಭವದ ಹಬ್ಬಕ್ಕೆ ರಾಜ್ಯ ಸರ್ಕಾರವು ಈ ಬಾರಿಯ 2026-27 ನೇ ಸಾಲಿನ ಬಜೆಟ್ ನಲ್ಲಿ ರೂ.5 ಕೋಟಿ ಅನುದಾನ ಘೋಷಣೆ ಮಾಡುವಂತೆ ಶಾಸಕ ಡಿ.ವೇದವ್ಯಾಸ ಕಾಮತ್ ರವರು ಮುಖ್ಯಮಂತ್ರಿ ಸಿದ್ದರಾಮಯ್ಯ ನವರನ್ನು ಭೇಟಿ ಮಾಡಿ ಮನವಿ ಮಾಡಿದರು. ಮೈಸೂರು ನಂತರ ರಾಜ್ಯದಲ್ಲೇ ಅತೀ ಹೆಚ್ಚು ಜನ ಸೇರುವ ಹಬ್ಬ ಮಂಗಳೂರು ದಸರಾ. ನವರಾತ್ರಿಯ ಸಂದರ್ಭದಲ್ಲಿ ಇಲ್ಲಿನ ಪ್ರಸಿದ್ಧ ತೀರ್ಥಕ್ಷೇತ್ರಗಳು ನಾಡಿನ ಭಕ್ತರಿಂದ ತುಂಬಿರುತ್ತವೆ. ರಾಜ್ಯ ಸರ್ಕಾರ ಬಜೆಟ್ ನಲ್ಲಿ 5 ಕೋಟಿ ಘೋಷಣೆ ಮಾಡಿದರೆ ಇನ್ನಷ್ಟು ವಿಜೃಂಭಣೆಯಿಂದ ದಸರಾ ಆಯೋಜನೆ ಮಾಡಬಹುದಾಗಿದ್ದು ಹಬ್ಬದ ಸಂಭ್ರಮವೂ ಹೆಚ್ಚಲಿದೆ. ದಯವಿಟ್ಟು ಈ ಬಗ್ಗೆ ಆದ್ಯತೆಯ ಮೇರೆಗೆ ಕ್ರಮಗೊಳ್ಳಿ ಎಂದು ಶಾಸಕರು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದರು.ಈ ಹಿಂದೆ ಪಾಲಿಕೆಯಲ್ಲಿ ಬಿಜೆಪಿ ಆಡಳಿತದಲ್ಲಿದ್ದಾಗ, ದಸರಾ ವೇಳೆ ಕುದ್ರೋಳಿ ಗೋಕರ್ಣನಾಥೇಶ್ವರ ಕ್ಷೇತ್ರದಿಂದ ಆರಂಭವಾಗಿ ಮಂಗಳಾದೇವಿ, ಉರ್ವ ಮಾರಿಗುಡಿ, ಕಾರ್ ಸ್ಟ್ರೀಟ್, ಡೊಂಗರಕೇರಿ, ಹೀಗೆ ಇಡೀ ನಗರಕ್ಕೆ ಪಾಲಿಕೆ ವತಿಯಿಂದಲೇ ದೀಪಾಲಂಕಾರಗೊಳ್ಳಬೇಕು ಎಂದು ಚಿಂತನೆ ನಡೆಸಿದ ಶಾಸಕ ಕಾಮತ್ ರವರು, ಅಂದಿನ ಮೇಯರ್, ಕಾರ್ಪೊರೇಟರ್, ಸ್ಥಾಯಿ ಸಮಿತಿ ಸದಸ್ಯರು, ಜಿಲ್ಲಾಧ್ಯಕ್ಷರ ಸಹಿತ ಎಲ್ಲರ ಸಹಕಾರದೊಂದಿಗೆ ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದರು. ಇದರಿಂದಾಗಿ ದೇವಸ್ಥಾನಗಳಿಗೆ ದೀಪಾಲಂಕಾರಕ್ಕಾಗಿಯೇ ವರ್ಷಕ್ಕೆ ಸುಮಾರು 50 ರಿಂದ 60 ಲಕ್ಷದವರೆಗಿನ ಬಹುದೊಡ್ಡ ಆರ್ಥಿಕ ಹೊರೆಯಾಗುವುದು ತಪ್ಪಿರುವುದನ್ನು ಇಲ್ಲಿ ಸ್ಮರಿಸಬಹುದು.

ಪ್ರಾದೇಶಿಕ ವಾರ್ತೆಗಳು

ಜಾರಿಗೊಂಡ ಸಂಹಿತೆಗಳು ಕಾರ್ಮಿಕರ ಪಾಲಿಗೆ ಮರಣ ಶಾಸನವಾಗಲಿದೆ – ಮೀನಾಕ್ಷಿ ಸುಂದರಂ

ಕೇಂದ್ರ ಸರಕಾರ ಜಾರಿಗೆ ತಂದಿರುವ 4 ಕಾರ್ಮಿಕ ವಿರೋಧಿ ಸಂಹಿತೆಗಳು ಅತ್ಯಂತ ಅಪಾಯಕಾರಿಯಾಗಿದ್ದು, ಕಾರ್ಮಿಕ ವರ್ಗವನ್ನು ಮತ್ತೆ ಗುಲಾಮಗಿರಿಯತ್ತ ತಳ್ಳಲು ಸಂಚು ರೂಪಿಸಿದೆ. ಕಾರ್ಪೊರೇಟ್ ಗಳ ಹಿತಾಸಕ್ತಿಗಳನ್ನು ಕಾಪಾಡಲು ಶ್ರಮಜೀವಿಗಳ ರಕ್ತ ಹೀರಲು ಸನ್ನದ್ದವಾಗಿದೆ.ಈ ಹಿನ್ನೆಲೆಯಲ್ಲಿ ಜಾರಿಗೊಂಡ 4  ಸಂಹಿತೆಗಳು ಕಾರ್ಮಿಕರ ಪಾಲಿಗಂತೂ ಮರಣ ಶಾಸನವಾಗಲಿದೆ* ಎಂದು CITU ಕರ್ನಾಟಕ ರಾಜ್ಯಾಧ್ಯಕ್ಷರಾದ ಮೀನಾಕ್ಷಿ ಸುಂದರಂರವರು ತೀವ್ರ ಆತಂಕ ವ್ಯಕ್ತಪಡಿಸಿದರು._ಕಾರ್ಮಿಕ ಸಂಹಿತೆಗಳ ವಿರುದ್ಧ ಜನಜಾಗೃತಿ ಮೂಡಿಸುವ ಸಲುವಾಗಿ ಕಳೆದ 4 ದಿನಗಳಿಂದ ದ.ಕ.ಜಿಲ್ಲೆಯಾದ್ಯಂತ ಸಂಚರಿಸಿದ ಪಾದಯಾತ್ರೆಗಳು ಇಂದು ಮಂಗಳೂರಿನ ಹೃದಯಭಾಗದಲ್ಲಿ ಸಮಾಪನಗೊಂಡಿದ್ದು,ಅದರ ಭಾಗವಾಗಿ ನಡೆದ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾ ಅವರು,ಈ ಮಾತುಗಳನ್ನು ಹೇಳಿದರು._ಮುಂದುವರಿಸುತ್ತಾ ಅವರು, *ಕೇಂದ್ರ ಸರಕಾರವು  ಜನದ್ರೋಹಿ ಸಂಹಿತೆಗಳನ್ನು ಜಾರಿಗೊಳಿಸಿದರೆ, ರಾಜ್ಯದ ಕಾಂಗ್ರೆಸ್ ಸರಕಾರವೂ ಕೂಡ ಅದಕ್ಕೆ ಪೂರಕವಾಗಿ ಕರಡು ನಿಯಮಾವಳಿಗಳನ್ನು ರೂಪಿಸಲು ಹೊರಟಿರುವ ಮೂಲಕ ಕಾರ್ಮಿಕ ವರ್ಗದ ವಿರುದ್ದ ದ್ವೇಷ ಸಾಧಿಸುವುದರಲ್ಲಿ ಬಿಜೆಪಿ ಕಾಂಗ್ರೆಸ್ ಒಂದೇ ಎಂಬ ಸ್ಪಷ್ಟ ಸಂದೇಶವನ್ನು ನೀಡಿದೆ.ಬೀಜ ಮಸೂದೆ,ವಿದ್ಯುತ್ ಮಸೂದೆಗಳಂತಹ ಕರಾಳ ಶಾಸನಗಳನ್ನು ಜಾರಿಗೆ ತರುವ ಮೂಲಕ ರೈತಾಪಿ ಜನತೆಯ ಬದುಕನ್ನು ಕೂಡ ದುಸ್ತರಗೊಳಿಸಿದೆ.ಉದ್ಯೋಗ ಖಾತ್ರಿ ಯೋಜನೆಯ ಹಣಕಾಸಿನ ಹೊರೆಯನ್ನು ರಾಜ್ಯ ಸರಕಾರಗಳ ಮೇಲೆ ವರ್ಗಾಯಿಸುವ ಮೂಲಕ ಗ್ರಾಮೀಣ ಜನತೆಯ ಉಸಿರಾಗಿದ್ದ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನೇ ಕತ್ತು ಹಿಸುಕಿ ಸಾಯಿಸಲು ಹೊರಟಿದೆ* ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.ಪ್ರಾಸ್ತಾವಿಕವಾಗಿ ಮಾತನಾಡಿದ CITU ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ರವರು, *ಸಂಹಿತೆಗಳನ್ನು ಜಾರಿಗೊಳಿಸುವ ಮೂಲಕ ಕೇಂದ್ರ ಹಾಗೂ ರಾಜ್ಯ ಸರಕಾರಗಳು ದೇಶದ ಕಾರ್ಮಿಕ ವರ್ಗಕ್ಕೆ ಭಾರೀ ದ್ರೋಹವೆಸಗಿದೆ.ಅಂದು ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನದ ಮೂಲಕ ಸಮರಶೀಲ ಹೋರಾಟ ನಡೆಸಿದ ದೇಶದ ಕಾರ್ಮಿಕ ವರ್ಗ ಇಂದು ಮತ್ತೆ ದೇಶದ ಉಳಿವಿಗಾಗಿ, ಜನತೆಯ ಬದುಕಿನ ರಕ್ಷಣೆಗಾಗಿ ಆಳುವ ವರ್ಗದ ಆಕ್ರಮಣಕಾರಿ ನೀತಿಗಳನ್ನು ರೈತಾಪಿ ಜನತೆಯ ಜೊತೆಗೂಡಿ ಹಿಮ್ಮೆಟ್ಟಿಸಬೇಕಾಗಿದೆ* ಎಂದು ಹೇಳಿದರು.ಸಭೆಯ ಅಧ್ಯಕ್ಷತೆಯನ್ನು ವಹಿಸಿದ CITU ದ.ಕ.ಜಿಲ್ಲಾಧ್ಯಕ್ಷರಾದ ಬಿ‌ ಎಂ ಭಟ್ ರವರು ಮಾತನಾಡಿ *ಕಳೆದ 12 ವರ್ಷಗಳಲ್ಲಿ ದೇಶದ ಸಂಪತ್ತನ್ನು ಸಂಪೂರ್ಣವಾಗಿ  ಲೂಟಿ ಮಾಡಿ ಎಲ್ಲಾ ಕ್ಷೇತ್ರವನ್ನು ಕಾರ್ಪೊರೇಟ್ ಕಂಪೆನಿಗಳಿಗೊಪ್ಪಿಸಿದ ನರೇಂದ್ರ ಮೋದಿ ಸರಕಾರವು ಈಗ ಮತ್ತೆ ಜಾತಿ ಧರ್ಮದ ರಾಜಕಾರಣ ನಡೆಸಿ ದೇಶದ ಜನತೆಯನ್ನು ವಿಭಜಿಸುವ ಹುನ್ನಾರ ನಡೆಸುತ್ತಿದೆ. ಜನತೆ ತಮ್ಮ‌ ಬದುಕಿನ ಬಗ್ಗೆ ಚಿಂತಿಸುವ ಬದಲು ಅನಾವಶ್ಯಕ ವಿಚಾರಗಳನ್ನು ಚರ್ಚಿಸುವ ಮೂಲಕ ಜನರ ಗಮನವನ್ನು ಬೇರೆಡೆಗೆ ತಿರುಗಿಸಲು ಯತ್ನಿಸುತ್ತಿದೆ.ಸಂಹಿತೆಗಳ  ಜಾರಿಯ ಮೂಲಕ ಜನತೆಯನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಲಿದೆ* ಎಂದು ಹೇಳಿದರು. _ವೇದಿಕೆಯಲ್ಲಿ ಜಿಲ್ಲೆಯ ಕಾರ್ಮಿಕ ಚಳುವಳಿಯ ಹಿರಿಯ ನೇತಾರರಾದ ಜೆ ಬಾಲಕೃಷ್ಣ ಶೆಟ್ಟಿ, ಸುಕುಮಾರ್ ತೊಕ್ಕೋಟು,ವಸಂತ ಆಚಾರಿ, ಯಾದವ ಶೆಟ್ಟಿ, ಪದ್ಮಾವತಿ ಶೆಟ್ಟಿ, ರಮಣಿ ಮೂಡಬಿದ್ರೆ, CITU ಜಿಲ್ಲಾ ನಾಯಕರಾದ ಯೋಗೀಶ್ ಜಪ್ಪಿನಮೊಗರು, ನೋಣಯ್ಯ ಗೌಡರವರು ಉಪಸ್ಥಿತರಿದ್ದರು._ _ಪ್ರಾರಂಭದಲ್ಲಿ ಅಗಲಿದ ಕಾರ್ಮಿಕ ಚಳುವಳಿಯ ಹಿರಿಯ ಚೇತನ, AITUC ರಾಜ್ಯ ನಾಯಕರಾದ ಅನಂತ ಸುಬ್ಬರಾವ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು.ಜಿಲ್ಲೆಯಾದ್ಯಂತ 175 ಕಿ ಮೀ.ನಷ್ಟು ಕ್ರಮಿಸಿದ 4 ಪಾದಯಾತ್ರೆಗಳ ಪ್ರಮುಖ ನಾಯಕರಾದ ರಾಧಾ ಮೂಡಬಿದ್ರೆ, ನೋಣಯ್ಯ ಗೌಡ,ಬಿ ಕೆ ಇಮ್ತಿಯಾಜ್,ಈಶ್ವರಿ ಪದ್ಮುಂಜ, ರೋಹಿದಾಸ್,ರಮೇಶ್ ಉಳ್ಳಾಲ, ರವಿಚಂದ್ರ ಕೊಂಚಾಡಿ, ಜಯಶ್ರೀ, ಲೋಲಾಕ್ಷಿ ಬಂಟ್ವಾಳ, ಶ್ಯಾಮರಾಜ ಪಟ್ರಮೆ,ಪ್ರಮೋದಿನಿ ಕಲ್ಲಾಪು, ರಜಾಕ್ ಮುಡಿಪು,ಜಯಲಕ್ಷ್ಮಿ, ತಯ್ಯುಬ್ ಬೆಂಗರೆ,ಸಾಧಿಕ್ ಮುಲ್ಕಿ, ಶ್ರೀನಾಥ್ ಕಾಟಿಪಳ್ಳ, ಪ್ರಮೀಳಾ ಶಕ್ತಿನಗರರವರನ್ನು ಕೆಂಪು ಗುಲಾಬಿ ನೀಡುವ ಮೂಲಕ ಗೌರವಿಸಲಾಯಿತು. 4 ಪಾದಯಾತ್ರೆಗಳು ನಗರದ ಅಂಬೇಡ್ಕರ್ ವೃತ್ತದ ಬಳಿಯಲ್ಲಿ ಸಮಾಪನಗೊಂಡು,ಬಳಿಕ  ಮೆರವಣಿಗೆಯ ಮೂಲಕ ಕ್ಲಾಕ್ ಟವರ್ ಬಳಿಯತ್ತ ಸಾಗಲಾಯಿತು._

Scroll to Top