Author name: editor

ಪ್ರಾದೇಶಿಕ ವಾರ್ತೆಗಳು

ಯಕ್ಷಗಾನ ಕಲೆ ಕೇವಲ ಜಿಲ್ಲೆಗೆ ಸೀಮಿತವಾಗದಿರಲಿ, ರಾಜ್ಯದುದ್ದಕ್ಕೂ ವಿಸ್ತರಣೆಯಾಗಲಿ: ಯು.ಟಿ ಖಾದರ್. ಸಹ್ಯಾದ್ರಿಯಲ್ಲಿ ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ವಿದ್ಯಾರ್ಥಿಗಳಿಂದ ಯಕ್ಷಧ್ರುವ ಸಮ್ಮಿಲನ 2025-26 ಸಮಾರೋಪ

ಮಂಗಳೂರು: ಯಕ್ಷಗಾನ ಕರಾವಳಿಯ ಶ್ರೇಷ್ಠ ಕಲೆ. ಈ ಕಲೆಯನ್ನು ಕೇವಲ ಜಿಲ್ಲೆಗೆ ಸೀಮಿತಗೊಳಿಸದೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲೂ ಮಕ್ಕಳಿಗೆ ಯಕ್ಷಶಿಕ್ಷಣ ಕಲಿಸುವ ಮೂಲಕ ವಿಸ್ತರಣೆಯಾಗಲಿ, ಈ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿರುವ ವಸತಿ ಶಾಲೆಗಳಲ್ಲಿ ಯಕ್ಷಶಿಕ್ಷಣವನ್ನು ನೀಡುವ ಮೂಲಕ ಯಕ್ಷಗಾನ ಕಲೆಯನ್ನು ರಾಜ್ಯದಾದ್ಯಂತ ವಿಸ್ತರಿಸುತ್ತಿರುವ ಕೀರ್ತಿ ಪ್ರಖ್ಯಾತ ಯುವ ಭಾಗವತರಾದ ಶ್ರೀ ಪಟ್ಲ ಸತೀಶ್ ಶೆಟ್ಟಿಯವರ ನೇತೃತ್ವದ ಯಕ್ಷಧ್ರುವ ಪಟ್ಲ ಫೌಂಡೇಶನಿಗೆ ಸಲ್ಲುತ್ತದೆ ಎಂದು ವಿಧಾನಸಭಾಧ್ಯಕ್ಷ ಯು ಟಿ ಖಾದರ್ ತಿಳಿಸಿದರು. ಅಡ್ಯಾರ್ ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಘಟಕಗಳ ಸಹಯೋಗದೊಂದಿಗೆ ನಡೆದ ಯಕ್ಷಧ್ರುವ- ಯಕ್ಷಶಿಕ್ಷಣ ಯೋಜನೆಯ ವಿದ್ಯಾರ್ಥಿಗಳ ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ 2025-26 ರ ಸಮಾರೋಪ ಸಮಾರಂಭದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.ಯಕ್ಷಗಾನದ ಮೂಲಕ ಪುರಾಣ, ಇತಿಹಾಸವನ್ನು ವಿಶ್ವಕ್ಕೆ ಪರಿಚಯಿಸಿದ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕೆಲಸ ಕಾರ್ಯ ಶ್ಲಾಘನೀಯ. ಸರಕಾರದ ಮೂಲಕ ಯಾವುದೇ ಸಹಕಾರ ಬೇಕಾದಲ್ಲಿ ಖಂಡಿತ ಮಾಡುತ್ತೇನೆ ಎಂದು ಯು.ಟಿ ಖಾದರ್ ತಿಳಿಸಿದರು.ಇನ್ನೋರ್ವ ಮುಖ್ಯ ಅತಿಥಿ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಮಾತನಾಡಿ ಕಳೆದ ವರ್ಷ ಒಡ್ಡೂರಿನಲ್ಲಿ ಶಾಸಕ ರಾಜೇಶ್ ನಾಯ್ಕ್ ಅವರ ಸಮ್ಮುಖದಲ್ಲಿ ನಡೆದ ಮಕ್ಕಳ ರಂಗಪ್ರವೇಶ ನೋಡಿ ಸಂತೋಷ ಪಟ್ಟಿದ್ದೆ. ಅಂದು ನಾನು ಒಡ್ಡೂರಿನಲ್ಲಿ ಘೋಷಣೆ ಮಾಡಿದಂತೆ ಅಡ್ಯಾರ್ ಸಹ್ಯಾದ್ರಿ ಶಿಕ್ಷಣ ದೇಗುಲದಲ್ಲಿ 700 ಮಕ್ಕಳು ಯಕ್ಷಗಾನದ ರಂಗಪ್ರವೇಶ ಮಾಡಿದ್ದು ಕಲಾದೇವಿ ಸರಸ್ವತಿಯ ಸೇವೆ ಮಾಡಿದಂತಾಯಿತು. ಯಕ್ಷಗಾನದಲ್ಲಿ ಪದವಿ ಮಾಡುವ ಉದ್ದೇಶ ಪಟ್ಲ ಫೌಂಡೇಶನ್ ಟ್ರಸ್ಟ್ ಗೆ ಇದ್ದರೆ ಸರಕಾರದ ಮಟ್ಟದಲ್ಲಿ ಸಹಕಾರ ಮಾಡುವುದಾಗಿ ತಿಳಿಸಿದರು.ಇನ್ನೋರ್ವ ಮುಖ್ಯ ಅತಿಥಿ ರಮಾನಾಥ ರೈ ಮಾತನಾಡಿ ಕೇರಳದಲ್ಲಿ ಕತಕಳಿಗೆ ನೀಡಿದಂತಹ ಪ್ರೋತ್ಸಾಹ ಕರ್ನಾಟಕ ಸರಕಾರದಿಂದ ಯಕ್ಷಗಾನಕ್ಕೆ ದೊರೆಯಲಿಲ್ಲ. ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಪ್ರಯತ್ನಿಸ ಬೇಕು ಎಂದರು.ಯಕ್ಷಗಾನಕ್ಕೆ ದೀರ್ಘಕಾಲಿಕವಾದ ಇತಿಹಾಸ ಇದೆ. ಇದನ್ನು ಮುಂದುವರಿಸಲು ಎಲ್ಲರ ಸಹಕಾರ ಬೇಕು ಎಂದು ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ತಿಳಿಸಿದರು.ಸಮಾರಂಭದಲ್ಲಿ ಯಕ್ಷಧ್ರುವ ಯಕ್ಷಶಿಕ್ಷಣದ ಪ್ರಧಾನ ಸಂಚಾಲಕ ಪಣಂಬೂರು ವಾಸುದೇವ ಐತಾಳ, ಟ್ರಸ್ಟ್ ನ ಪ್ರಧಾನ‌ ಕಾರ್ಯದರ್ಶಿ ಕೆ ಪುರುಷೋತ್ತಮ ಭಂಡಾರಿ ಅಡ್ಯಾರ್, ಕೋಶಾಧಿಕಾರಿ ಸಿಎ ಸುದೇಶ್ ಕುಮಾರ್ ರೈ, ಸಂಘಟನಾ ಕಾರ್ಯದರ್ಶಿಗಳಾದ ಬಾಳ ಜಗನ್ನಾಥ ಶೆಟ್ಟಿ ಮತ್ತು ಪ್ರದೀಪ್ ಆಳ್ವ ಕದ್ರಿ, ಸರಪಾಡಿ ಅಶೋಕ ಶೆಟ್ಟಿ, ಯಕ್ಷಶಿಕ್ಷಣದ ಸಂಯೋಜಕ ದೀವಿತ್ ಎಸ್ ಕೆ ಪೆರಾಡಿ ಹಾಗೂ ವಿವಿಧ ಘಟಕಗಳ ಅಧ್ಯಕ್ಷರು ಉಪಸ್ಥಿತರಿದ್ದರು.ಪುರುಷೋತ್ತಮ ಭಂಡಾರಿ ಪ್ರಸ್ತಾವನೆಗೈದರು. ಸಲಹಾ ಸಮಿತಿ ಸದಸ್ಯ ದೇವದಾಸ ಶೆಟ್ಟಿ ಬಂಟ್ವಾಳ ಕಾರ್ಯಕ್ರಮ‌ ನಿರ್ವಹಿಸಿದರು. ಮೂರನೇ ವರ್ಷದ ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನದಲ್ಲಿ 16 ಶಾಲೆಗಳ 700 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಎರಡು ವೇದಿಕೆಗಳಲ್ಲಿ ಕಾರ್ಯಕ್ರಮ ನಡೆಯಿತು.

ಪ್ರಾದೇಶಿಕ ವಾರ್ತೆಗಳು

ನೊಂದವರಿಗೆ ಸಹಾಯ ಮಾಡುವುದು ದೇವರ ಸೇವೆ-ತಣ್ಣೀರುಬಾವಿಯಲ್ಲಿ ಬೀಚ್ ಫೆಸ್ಟಿವಲ್‌ಗೆ ಚಾಲನೆಗೈದು ಶರವು ರಾಘವೇಂದ್ರ ಶಾಸ್ತ್ರಿ

ಮಂಗಳೂರು: ಕ್ಯಾನ್ಸರ್ ರೋಗಿಗಳಿಗೆ ಸೇವೆ ನೀಡುತ್ತಿರುವ ತಪಸ್ಯ ಫೌಂಡೇಶನ್ ಮತ್ತು ದಕ್ಷಿಣ ಕನ್ನಡ ಜಿಲ್ಲಾಡಳಿತ ಸಹಯೋಗದಲ್ಲಿ ಮಂಗಳೂರು ಟ್ರಯಥ್ಲಾನ್ ಮತ್ತು ಆಲ್ ಕಾರ್ಗೋ ಮಂಗಳೂರು ಇದರ ವತಿಯಿಂದ ನಡೆಯುತ್ತಿರುವ ಬೀಚ್ ಫೆಸ್ಟಿವಲ್‌ಗೆ ಶುಕ್ರವಾರ ತಣ್ಣೀರುಬಾವಿಯಲ್ಲಿ ಚಾಲನೆ ನೀಡಲಾಯಿತು.ಶರವು ಶ್ರೀ ಮಹಾಗಣಪತಿ ದೇವಳದ ಮ್ಯಾನೇಜಿಂಗ್ ಟ್ರಸ್ಟಿ ಶರವು ರಾಘವೇಂದ್ರ ಶಾಸ್ತ್ರಿ ಅವರು ಮುಖ್ಯ ಅತಿಥಿಯಾಗಿದ್ದರು. ಸಮಾಜದಲ್ಲಿ ನೊಂದವರಿಗೆ ಸಹಾಯ ಮಾಡಿದರೆ ದೇವರು ಮೆಚ್ಚುತ್ತಾರೆ. ತಪಸ್ಯ ಫೌಂಡೇಶನ್ ಮೂಲಕ ಸಬಿತಾ ಶೆಟ್ಟಿ ಅವರು ಕ್ಯಾನ್ಸರ್ ಪೀಡಿತರಿಗೆ ಸಹಾಯ ಮಾಡುವ ದೊಡ್ಡ ಗುಣವನ್ನು ಅಳವಡಿಸಿಕೊಂಡಿದ್ದಾರೆ. ಜನರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಲು ಬೀಚ್ ಫೆಸ್ಟಿವಲ್ ಹಮ್ಮಿಕೊಂಡಿದ್ದಾರೆ. ಆದರ್ಶ ಮಹಿಳೆಯಾಗಿರುವ ಅವರ ಸಮಾಜಮುಖಿ ಕೆಲಸಗಳಿಗೆ ಬೆನ್ನೆಲುಬಾಗಿ ನಿಲ್ಲೋಣ ಎಂದರು.ಜಮಾಅತೆ ಇಸ್ಲಾಮಿ ಹಿಂದ್‌ನ ಕಾರ್ಯದರ್ಶಿ ಮೊಹಮ್ಮದ್ ಕುಂಞಿ ಎಂ.ಎಚ್., ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ನಿರ್ದೇಶಕ ರೆ.ಫಾ.ವಿಲ್ಪ್ರೆಡ್ ಡಿಸೋಜ, ಯುವಜನ ಮತ್ತು ಕ್ರೀಡಾ ಸಬಲೀಕರಣ ಇಲಾಖೆ ಉಪನಿರ್ದೇಶಕ ಪ್ರದೀಪ್ ಡಿಸೋಜ, ಪಶ್ಚಿಮ ಬಂಗಾಳದ ನಿವೃತ್ತ ಡಿಜಿಪಿ ಡಾ.ಬಿ.ಎನ್. ರಮೇಶ್ ಐಪಿಎಸ್, ಆಲ್‌ಕಾರ್ಗೋ ಲಾಜಿಸ್ಟಿಕ್ಸ್‌ನ ಸಿಇಒ ಸುರೇಶ್ ಕುಮಾರ್ ಮುಖ್ಯ ಅತಿಥಿಗಳಾಗಿ ಬೀಚ್ ಉತ್ಸವಕ್ಕೆ ಶುಭ ಹಾರೈಸಿದರು. ತಪಸ್ಯ ಫೌಂಡೇಶನ್ ನಿರ್ದೇಶಕಿ ಸಬಿತಾ ಆರ್. ಶೆಟ್ಟಿ ಸ್ವಾಗತಿಸಿದರು. ಸಂಯೋಜಕರಾದ ನವೀನ್ ಹೆಗ್ಡೆ, ರಿತೇಶ್, ಅರವಿಂದ್, ಕರುಣಾಕರ್, ರಮಾನಾಥ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ರಾಜ್ಯ ಮಟ್ಟದ ಬೀಚ್ ಕುಸ್ತಿ, ವಿಜ್ಞಾನ ಮತ್ತು ಕಲಾ ವಸ್ತು ಪ್ರದರ್ಶನ, ಮಕ್ಕಳಿಗೆ ಐಟಿ ಕ್ವಿಜ್, ಬೀಚ್ ಮ್ಯಾರಥಾನ್, ಡುಯಾಥ್ಲಾನ್, 40ಕೆ ಡೀಮ್ ಡಿಸ್ಟನ್ಸ್ ಟ್ರಯಾಥ್ಲಾನ್, ಸ್ಟಂಟ್ ಟ್ರಯಾಥ್ಲಾನ್, ಟೀಮ್ ರಿಲೇ ಟ್ರಯಾಥಾನ್, 1000 ಮೀಟರ್ ಡೀಮ್ ಸ್ವಿಮ್, 500 ಮೀ. ಫನ್ ಸ್ವಿಮ್, ಅಕ್ವಾಥಾನ್, ಫುಲ್ ಮ್ಯಾರಥಾನ್, ಹಾಫ್ ಮ್ಯಾರಥಾನ್, 10 ಕೆ ಡೀಮ್ ರನ್, 5ಕೆ ಫನ್ ರನ್ ಹೀಗೆ ವಿವಿಧ ರೀತಿಯ ಸ್ಪರ್ಧೆಗಳು ಕಡಲ ಕಿನಾರೆಯಲ್ಲಿ ಜ.11ರ ತನಕ ನಡೆಯುತ್ತಿದೆ. ದೇಶ- ವಿದೇಶದ ಸ್ಪರ್ಧಿಗಳು ಭಾಗವಹಿಸಿದ್ದಾರೆ. ಬೈಕ್ ಸ್ಟಂಟ್ ಶೋ, ಬ್ಯಾಟಲ್ ಆಫ್ ಬ್ಯಾಂಡ್ಸ್, ಫ್ಯಾಶನ್ ಶೋ, ಥ್ರೋ ಬಾಲ್ ವಿಶೇಷ ಆಕರ್ಷಣೆಯಾಗಿದೆ.

ಪ್ರಾದೇಶಿಕ ವಾರ್ತೆಗಳು

“ಮಕ್ಕಳು ಕ್ರೀಡೆಯಷ್ಟೇ ಮಹತ್ವ ಶಿಕ್ಷಣಕ್ಕೂ ಕೊಡಬೇಕು” -ಡಾ ಪಿ.ವಿ.ಶೆಟ್ಟಿ.ಸುರತ್ಕಲ್ ಬಂಟರ ವಾರ್ಷಿಕ ಕ್ರೀಡಾಕೂಟ

ಸುರತ್ಕಲ್: ಬಂಟರ ಸಂಘ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಹಾಗೂ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಹಯೋಗದೊಂದಿಗೆ ಬಂಟರ ಕ್ರೀಡೋತ್ಸವ ಸುರತ್ಕಲ್ ಗೋವಿಂದ ದಾಸ್ ಕಾಲೇಜ್ ಮೈದಾನದಲ್ಲಿ ಜರುಗಿತು.ಕಾರ್ಯಕ್ರಮವನ್ನು ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ ಎಂ ಮೋಹನ್ ಆಳ್ವ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.ಬಳಿಕ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಮುಂಬೈ ಬಂಟರ ಸಂಘದ ಮಾಜಿ ಅಧ್ಯಕ್ಷ , ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈದ ಡಾ ಪಿ.ವಿ.ಶೆಟ್ಟಿ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು. ಬಳಿಕ ಮಾತನಾಡಿದ ಅವರು “ಸುರತ್ಕಲ್ ಬಂಟರ ಸಂಘ ನನ್ನ ಮನೆಯಿದ್ದಂತೆ. ಸಂಘದ ಕಾರ್ಯ ಚಟುವಟಿಕೆಗಳನ್ನು ಗಮನಿಸುತ್ತ ಬಂದಿದ್ದೇನೆ. ಇದು ಇತರ ಸಂಘಟನೆಗಳಿಗೆ ಮಾದರಿಯಾಗಿದೆ. ಕ್ರೀಡೆಯಷ್ಟೇ ಶಿಕ್ಷಣವೂ ಮುಖ್ಯ. ಮಕ್ಕಳು ಕ್ರೀಡೆಗೆ ಮಾತ್ರ ಮಹತ್ವ ಕೊಟ್ಟರೆ ಸಾಲದು. ಕ್ರೀಡಾ ಕ್ಷೇತ್ರದಲ್ಲಿ ಏನಾದರೂ ಸಾಧನೆ ಮಾಡಲು ಅನಾನುಕೂಲಗಳಿದ್ದರೆ ನನ್ನನ್ನು ಸಂಪರ್ಕಿಸಿ. ನಿಮ್ಮ ಜೊತೆಗೆ ನಾನಿದ್ದೇನೆ“ ಎಂದರು. ಬಳಿಕ ಮಾತಾಡಿದ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ। ಎಂ ಮೋಹನ್ ಆಳ್ವ ಅವರು, “ಸುರತ್ಕಲ್ ಬಂಟರ ಸಂಘ ಅನೇಕ ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ. ಇಂದು ಕ್ರೀಡೆಯಲ್ಲಿ ಸಾಧನೆ ಮಾಡಿರುವ ಧನಲಕ್ಷ್ಮೀ ಪೂಜಾರಿಯವರನ್ನು ಸನ್ಮಾನಿಸಿದ್ದೀರಿ. ಇದು ನಿಜಕ್ಕೂ ಖುಷಿಯ ವಿಚಾರ. ಧನಲಕ್ಷ್ಮೀ 11 ವರ್ಷಗಳ ಕಾಲ ನಮ್ಮ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಇದ್ದ ಹೆಮ್ಮೆಯ ಕ್ರೀಡಾಪಟು. ಇಂತಹ ಇನ್ನಷ್ಟು ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಯುವ ಪ್ರತಿಭೆಗಳನ್ನು ಕ್ರೀಡಾಳುಗಳನ್ನು ಬೆಳೆಸಲು ಸಂಘಟನೆಯ ಸಹಕಾರ ಅಗತ್ಯ“ ಎಂದರು.ಇನ್ನೋರ್ವ ಮುಖ್ಯ ಅತಿಥಿ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಕೆ ಅಜಿತ್ ಕುಮಾರ್ ರೈ ಮಾಲಾಡಿ ಮಾತನಾಡಿ ಸುರತ್ಕಲ್ ಬಂಟರ ಸಂಘ ನಿರಂತರವಾಗಿ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಂಡು ಕ್ರೀಯಾಶೀಲ ಸಂಘಟನೆಯಾಗಿ ಬೆಳೆದಿದೆ. ಸಂಘದ ಒಗ್ಗಟ್ಟು, ಕಾರ್ಯ ಸಾಧನೆ ಇತರ ಸಂಘಗಳಿಗೆ ಮಾದರಿ ಎಂದರು.ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ ಮಾತಾಡಿ, “ಕ್ರೀಡಾಕೂಟ ತುಂಬಾ ಚೆನ್ನಾಗಿ ನಡೆದಿದೆ. ಇಂತಹ ಕಾರ್ಯಕ್ರಮ ಆಯೋಜನೆಗೆ ನಿಮ್ಮೆಲ್ಲರ ಸಹಕಾರ ಬೇಕು” ಎಂದರು. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಂಚಾಲಕ ಬಾಲಕೃಷ್ಣ ರೈ ಕೊಲ್ಲಾಡಿ ಶುಭ ಹಾರೈಸಿದರು.ವೇದಿಕೆಯಲ್ಲಿಬಂಟರ ಸಂಘ ಸುರತ್ಕಲ್ ಇದರ ಸ್ಥಾಪಕಾಧ್ಯಕ್ಷ ರೋಹಿತಾಕ್ಷ ರೈ ಕುಳಾಯಿಗುತ್ತು, ಮಾಜಿ ಅಧ್ಯಕ್ಷರಾದ ದೇವಾನಂದ ಎಂ.ಶೆಟ್ಟಿ, ಉಲ್ಲಾಸ್ ಆರ್. ಶೆಟ್ಟಿ, ಸುಧಾಕರ್ ಎಸ್. ಪೂಂಜಾ, ನಿಕಟಪೂರ್ವ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು, ಉಪಾಧ್ಯಕ್ಷ ಪ್ರವೀಣ್ ಪಿ.ಶೆಟ್ಟಿ, ಪ್ರಧಾನ‌ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಕಟ್ಲ, ಕೋಶಾಧಿಕಾರಿ ರತ್ನಾಕರ ಶೆಟ್ಟಿ, ಮಹಿಳಾ ವಿಭಾಗದ ಅಧ್ಯಕ್ಷೆ ಸರೋಜ ಟಿ ಶೆಟ್ಟಿ, ಕ್ರೀಡಾ ಕಾರ್ಯದರ್ಶಿ ಪುಷ್ಪರಾಜ್ ಶೆಟ್ಟಿ ಮಧ್ಯ, ಸಂಘಟನಾ ಕಾರ್ಯದರ್ಶಿ ಪುಷ್ಪರಾಜ ಶೆಟ್ಟಿ ಕುಡುಂಬೂರು, ಸಾಂಸ್ಕೃತಿಕ ಕಾರ್ಯದರ್ಶಿ ದೇವೇಂದ್ರ ಶೆಟ್ಟಿ, ಜೊತೆ ಕಾರ್ಯದರ್ಶಿ ಮೀರಾವಾಣಿ ಎಂ ಶೆಟ್ಟಿ, ಮಹಿಳಾ ವಿಭಾಗದ ಕ್ರೀಡಾ ಕಾರ್ಯದರ್ಶಿ ಬಬಿತ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.ವೇದಿಕೆಯಲ್ಲಿ ಅಂತಾರಾಷ್ಟ್ರೀಯ ಕಬಡ್ಡಿ ಕ್ರೀಡಾಪಟು ಧನಲಕ್ಷ್ಮೀ ಪೂಜಾರಿ ಹೆತ್ತವರನ್ನು ಸನ್ಮಾನಿಸಲಾಯಿತು.ಸಂಘದ ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಅತಿಥಿಗಳನ್ನು ಸ್ವಾಗತಿಸಿದರು.ಅನೂಪ್ ಶೆಟ್ಟಿ ದೇವರನ್ನು ಸ್ತುತಿಸಿದರು. ಕ್ರೀಡಾ ಕಾರ್ಯದರ್ಶಿ ಪುಷ್ಪರಾಜ್ ಶೆಟ್ಟಿ ಮದ್ಯ ಧನ್ಯವಾದ ಸಮರ್ಪಿಸಿದರು. ನಿತೇಶ್ ಶೆಟ್ಟಿ ಎಕ್ಕಾರ್ ಕಾರ್ಯಕ್ರಮ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್: ಸುರತ್ಕಲ್ ಘಟಕದ ಅಧ್ಯಕ್ಷರಾಗಿ ಲೀಲಾಧರ ಶೆಟ್ಟಿ ಕಟ್ಲ ಆಯ್ಕೆ

ಸುರತ್ಕಲ್: ಯಕ್ಷಧ್ರುವ ಪಟ್ಲ ಫೌಂಡೇಶನ್ ಸುರತ್ಕಲ್ ಘಟಕದ ಅಧ್ಯಕ್ಷರಾಗಿ ಲೀಲಾಧರ ಶೆಟ್ಟಿ ಕಟ್ಲ ಆಯ್ಕೆಯಾಗಿದ್ದಾರೆ.ಸುರತ್ಕಲ್ ಬಂಟರ ಭವನದಲ್ಲಿ ನಡೆದ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.ಗೌರವಾಧ್ಯಕ್ಷರಾಗಿ ಸುಧಾಕರ ಎಸ್ ಪೂಂಜ, ಅಧ್ಯಕ್ಷರಾಗಿ ಲೀಲಾಧರ ಶೆಟ್ಟಿ ಕಟ್ಲ, ಸಂಚಾಲಕರಾಗಿ ನಾಗರಾಜ್ ಕಡಂಬೋಡಿ, ಸಹ ಸಂಚಾಲಕರಾಗಿ ಡಾ| ಸುಧಾ ಚಂದ್ರಶೇಖರ್ ಶೆಟ್ಟಿ, ಉಪಾಧ್ಯಕ್ಷರುಗಳಾಗಿ ರಮೇಶ್ ಭಟ್ ಎಸ್.ಜಿ, ಸಹನಾ ರಾಜೇಶ್ ರೈ, ಪ್ರಧಾನ ಕಾರ್ಯದರ್ಶಿಯಾಗಿ ಬಾಳ ಗಂಗಾಧರ ಪೂಜಾರಿ ಚೇಳ್ಯಾರು, ಕೋಶಾಧಿಕಾರಿಯಾಗಿ ರಾಕೇಶ್ ಹೊಸಬೆಟ್ಟು ಜೊತೆ ಕಾರ್ಯದರ್ಶಿಗಳಾಗಿ ಗುಣಶೇಖರ್ ಶೆಟ್ಟಿ , ಸತೀಶ್ ಶೆಟ್ಟಿ ಬಾಳಿಕೆ, ಪಾರ್ವತಿ ಎಸ್ ಅಮೀನ್, ಉಮೇಶ್ ಶೆಟ್ಟಿ , ಸವಿತಾ ಭವಾನಿಶಂಕರ್ ಶೆಟ್ಟಿ , ಪ್ರಭಾಕರ್ ಶೆಟ್ಟಿ ಬಾಳ, ನಿರ್ಮಲಾ ಅರಿಗ, ಸಂಘಟನಾ ಕಾರ್ಯದರ್ಶಿಗಳಾಗಿ ದೇವೇಂದ್ರ ಶೆಟ್ಟಿ ,ರಮೇಶ್ ಟಿ.ಎನ್, ಪುಷ್ಪರಾಜ್ ಶೆಟ್ಟಿ ಕುಡುಂಬೂರು, ಪ್ರವೀಣ್ ಪಿ ಶೆಟ್ಟಿ, ರಮೇಶ್ ಶೆಟ್ಟಿ ಸುಭಾಷಿತನಗರ , ಸುಜೀರ್ ಶೆಟ್ಟಿ, ನಾರಾಯಣ ಶೆಟ್ಟಿ ಕಟ್ಲ, ಅನಂತ್‌ರಾಜ್ ಶೆಟ್ಟಿಗಾರ್ ಆಯ್ಕೆಯಾದರು.

ಪ್ರಾದೇಶಿಕ ವಾರ್ತೆಗಳು

ತುಳು ಕ್ರೈಂ ಥ್ರಿಲ್ಲರ್ ‘ಕಟ್ಟೆಮಾರ್’ ಟ್ರೇಲರ್‌ಗೆ ಅದ್ಧೂರಿ ಬಿಡುಗಡೆ: ಜ.23ರಂದು ತೆರೆಗೆ

ಮಂಗಳೂರು: ಅಸ್ತ್ರ ಪ್ರೊಡಕ್ಷನ್ ಸಂಸ್ಥೆಯ ಲಂಚುಲಾಲ್ ಕೆ.ಎಸ್. ನಿರ್ಮಾಣದ ಬಹುನಿರೀಕ್ಷಿತ ಕ್ರೈಂ ಥ್ರಿಲ್ಲರ್ ತುಳು ಸಿನಿಮಾ ‘ಕಟ್ಟೆಮಾರ್’ ಇದೇ ಜನವರಿ 23ರಂದು ತೆರೆಗೆ ಬರಲಿದ್ದು, ಅದರ ಟ್ರೇಲರ್ ಬಿಡುಗಡೆ ಸಮಾರಂಭ ಮಂಗಳೂರಿನ ಬಿಗ್ ಸಿನಿಮಾಸ್‌ನಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಅದ್ಧೂರಿಯಾಗಿ ನೆರವೇರಿತು.ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ನಿರ್ಮಾಪಕ ಲಂಚುಲಾಲ್ ಕೆ.ಎಸ್., “ಜನವರಿ 23ರಂದು ಕಟ್ಟೆಮಾರ್ ಸಿನಿಮಾ ಬಿಡುಗಡೆಯಾಗುತ್ತಿದೆ. ಬೇರೆ ಭಾಷೆಗಳ ಸಿನಿಮಾಗಳಿಗಿಂತ ತುಳು ಚಿತ್ರವೂ ಯಾವುದಕ್ಕೂ ಕಡಿಮೆಯಾಗಬಾರದು ಎಂಬ ಉದ್ದೇಶದಿಂದ ಈ ಚಿತ್ರವನ್ನು ಭರ್ಜರಿಯಾಗಿ ನಿರ್ಮಿಸಿದ್ದೇವೆ. ತುಳು ಚಿತ್ರರಂಗಕ್ಕೆ ಕಟ್ಟೆಮಾರ್ ನಮ್ಮ ವಿಶೇಷ ಕೊಡುಗೆ. ಎಲ್ಲರೂ ಈ ಹೊಸ ಪ್ರಯತ್ನಕ್ಕೆ ಬೆಂಬಲ ನೀಡಬೇಕು. ನಿಮ್ಮ ಬೆಂಬಲ ದೊರೆತರೆ ತುಳು ಸಿನಿ ಇಂಡಸ್ಟ್ರಿಗೆ ಇನ್ನೂ ಹಲವು ಹೊಸ ಸಾಹಸಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತದೆ” ಎಂದು ಹೇಳಿದರು. ನಟ ರೂಪೇಶ್ ಶೆಟ್ಟಿ ಮಾತನಾಡಿ, “ಈ ಚಿತ್ರಕ್ಕೆ ರಿವ್ಯೂ ಕೊಡುವ ಅವಶ್ಯಕತೆಯೇ ಇಲ್ಲ. ಟ್ರೇಲರ್ ಪ್ರದರ್ಶನದ ವೇಳೆ ಕೇಳಿಬಂದ ಪ್ರೇಕ್ಷಕರ ಚಪ್ಪಾಳೆ, ಶಿಳ್ಳೆಗಳೇ ಇದರ ಮಟ್ಟವನ್ನು ತೋರಿಸಿವೆ” ಎಂದರು.ಮುಖ್ಯಪಾತ್ರದಲ್ಲಿ ನಟಿಸಿರುವ ಜೆಪಿ ತುಮಿನಾಡ್ ಮಾತನಾಡಿ, “ಹೊಸತನದ ನಿರೀಕ್ಷೆಯಲ್ಲಿ ಮೂಡಿದ ಚಿತ್ರವೇ ಕಟ್ಟೆಮಾರ್. ಲಂಚುಲಾಲ್ ಅವರು ಸದಾ ಹೊಸ ನಿರ್ದೇಶಕರು ಮತ್ತು ಹೊಸ ಪ್ರತಿಭೆಗಳನ್ನು ತೆರೆಗೆ ತರುತ್ತಿದ್ದಾರೆ. ಈ ಸಿನಿಮಾ ತುಳು ಚಿತ್ರರಂಗಕ್ಕೆ ದೊಡ್ಡ ಕೊಡುಗೆ ಆಗಬಹುದು ಎಂಬ ನಂಬಿಕೆ ನನಗಿದೆ. ಈ ಚಿತ್ರ ಗೆದ್ದರೆ ಇಂಥಾ ವಿಭಿನ್ನ ಪ್ರಯತ್ನಗಳಿಗೆ ಇನ್ನಷ್ಟು ಮಂದಿ ಮುಂದೆ ಬರಲಿದ್ದಾರೆ” ಎಂದರು.ನಿರ್ದೇಶಕ ಸಚಿನ್ ಕಾಟ್ಲ ಮಾತನಾಡಿ, “ಈ ತರಹದ ಸಿನಿಮಾ ಮಾಡಲು ಧೈರ್ಯ ಬೇಕು. ಆ ಧೈರ್ಯವನ್ನು ನಿರ್ಮಾಪಕ ಲಂಚುಲಾಲ್ ತೋರಿಸಿದ್ದಾರೆ. ಈ ಚಿತ್ರದಲ್ಲಿ ಹೊಸತನವಿದೆ. ಎಲ್ಲರೂ ಬೆಂಬಲ ನೀಡಬೇಕು” ಎಂದು ಮನವಿ ಮಾಡಿದರು. ನಟಿ ಹರ್ಷಿತಾ ಕುಲಾಲ್ ಮಾತನಾಡಿ, ಇದು ತಮ್ಮ ಮೊದಲ ಅನುಭವವಾಗಿದ್ದು, ಪ್ರೇಕ್ಷಕರ ಸಹಕಾರವನ್ನು ಕೋರಿದರು.ಸಮಾರಂಭದಲ್ಲಿ ಆಕಾಂಕ್ಷ ರಾವ್, ಪಲ್ಲವಿ ದೇವಾಡಿಗ, ರಕ್ಷಿತ್ ಗಾಣಿಗ, ಮಾಸುಮಾ ಕೊಡಗು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಖ್ಯಾತ ನಿರೂಪಕ ಆಂಕರ್ ಚೇತನ್ ನಿರೂಪಿಸಿದರು.ಚಿತ್ರದ ಕುರಿತು‘ಕಟ್ಟೆಮಾರ್’ ಚಿತ್ರಕ್ಕೆ ರಕ್ಷಿತ್ ಗಾಣಿಗ ಮತ್ತು ಸಚಿನ್ ಕಾಟ್ಲ ಕಥೆ, ಚಿತ್ರಕಥೆ, ಸಂಭಾಷಣೆ ಹಾಗೂ ನಿರ್ದೇಶನ ಮಾಡಿದ್ದಾರೆ. ಅಸ್ತ್ರ ಪ್ರೊಡಕ್ಷನ್ ಮೂಲಕ ಲಂಚುಲಾಲ್ ಕೆ.ಎಸ್. ಬಂಡವಾಳ ಹೂಡಿದ್ದು, ಅವರು ಚಿತ್ರದಲ್ಲಿ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಕಾಂತಾರ ಖ್ಯಾತಿಯ ಸ್ವರಾಜ್ ಶೆಟ್ಟಿ ಹಾಗೂ ‘ಸು ಫ್ರಂ ಸೋ’ ಖ್ಯಾತಿಯ ಜೆಪಿ ತುಮಿನಾಡ್ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ಮೈಮ್ ರಾಮದಾಸ್, ಮಾಸುಮ ಕೊಡಗು, ಭಗವಾನ್ ಸುರತ್ಕಲ್, ನಮಿತಾ ಕಿರಣ್ ಸೇರಿದಂತೆ ಹಲವರು ಚಿತ್ರದಲ್ಲಿದ್ದಾರೆ. ಕಾರ್ತಿಕ್ ಮೂಲ್ಕಿ ಸಂಗೀತ, ಗಣೇಶ್ ನೀರ್ಚಾಲು ಸಂಕಲನ, ಸಂತೋಷ್ ಆಚಾರ್ಯ ಗುಂಪಲಾಜೆ ಅವರ ಛಾಯಾಗ್ರಹಣ ಚಿತ್ರಕ್ಕಿದೆ. ಟೀಸರ್‌ನಲ್ಲಿಯೇ ಭರವಸೆ ಮೂಡಿಸಿರುವ ಈ ಸಿನಿಮಾ ಜನವರಿ 23ರಂದು ತೆರೆಗೆ ಅಪ್ಪಳಿಸಲಿದೆ.

ಪ್ರಾದೇಶಿಕ ವಾರ್ತೆಗಳು

ತುಳು ಸಿನಿಮಾ ಪ್ರಿಯರಿಗೊಂದು ಸಿಹಿ ಸುದ್ದಿ: ಫೆ. 6ರಂದು ನಾನ್‌ವೆಜ್‌ ರಿಲೀಸ್‌ – ಕೇವಲ 99 ರೂ.ಗೆ ನೋಡಿ ಮಲ್ಪಿಪ್ಲೆಕ್ಸ್‌ನಲ್ಲಿ!

ಮಂಗಳೂರು: ಜಯಕಿರಣ ಫಿಲಂಸ್ ಲಾಂಛನದಲ್ಲಿ, ಪ್ರಕಾಶ್ ಪಾಂಡೇಶ್ವರ್ ನಿರ್ಮಾಣದಲ್ಲಿ ಹಾಗೂ ಕೆ. ಸೂರಜ್ ಶೆಟ್ಟಿ ನಿರ್ದೇಶನದಲ್ಲಿ ಅದ್ಭುತವಾಗಿ ಸಿದ್ಧಗೊಂಡಿರುವ “ನಾನ್‌ ವೆಜ್’ ತುಳು ಸಿನಿಮಾ ಫೆಬ್ರವರಿ 6 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ. ಇದರಲ್ಲೊಂದು ಅತ್ಯಂತ ಸಂತೋಷದ ಸಂಗತಿ ಎಂದರೆ, ಈ ಸಿನಿಮಾವನ್ನು ಎಲ್ಲ ಮಲ್ಟಿಪ್ಲೆಕ್ಸ್‌ನಲ್ಲೂ ಕೇವಲ 99 ರೂ.ಗೆ ನೋಡಬಹುದಾಗಿದೆ. ದುಬಾರಿ ಟಿಕೆಟ್‌ ಕೊಟ್ಟು ಸಿನಿಮಾ ನೋಡಲು ಸಾಧ್ಯವಾಗದವರು ಇಂಥದ್ದೊಂದು ಸುಂದರ ಹಾಗೂ ಅತ್ಯುತ್ತಮ ಸಿನಿಮಾವನ್ನು ನೋಡದೆ ಇರಬಾರದು ಎಂದು ಚಿತ್ರದ ನಿರ್ಮಾಪಕರು ಕೇವಲ 99 ರೂ. ಟಿಕೆಟ್‌ ನಿಗದಿಪಡಿಸಿದ್ದು, ಇದು ತುಳುಚಿತ್ರರಂಗದಲ್ಲಿ ಒಂದು ಹೊಸ ಸಂಚಲನ ಉಂಟು ಮಾಡಿದೆ. ಸಿಂಗಲ್‌ ಥಿಯೇಟರ್‌ಗಿಂತಲೂ ಕಡಿಮೆ ದರದಲ್ಲಿ ಈ ಸಿನಿಮಾವನ್ನು ತುಳು ಪ್ರೇಮಿಗಳು ಮಲ್ಟಿಫ್ಲೆಕ್ಸ್ ಗಳಲ್ಲಿ ನೋಡುವಂತಹ ಅವಕಾಶವನ್ನು ನಿರ್ಮಾಪಕರು ಕಲ್ಪಿಸಿಕೊಟ್ಟಿದ್ದಾರೆ. ಕರಾವಳಿಯ ಪ್ರತಿಭೆಗಳಿಂದಲೇ ಸಿದ್ಧವಾಗಿರುವ “ನಾನ್‌ವೆಜ್‌” ಒಂದು ಅತ್ಯುತ್ತಮ ಹಾಗೂ ಭಿನ್ನ ಕಥಾವಸ್ತುವನ್ನು ಹೊಂದಿದೆ. ‘ಸು ಫ್ರಂ ಸೋ” ಸಿನಿಮಾದ ಹೆಚ್ಚಿನ ಕಲಾವಿದರು “ನಾನ್‌ವೆಜ್‌” ಸಿನಿಮಾದಲ್ಲೂ ಇದ್ದಾರೆ. ಪ್ರಮುಖ ಪಾತ್ರದಲ್ಲಿ ಪ್ರಕಾಶ್ ತೂಮಿನಾಡು, ಬಂದರೊ ಬಂದರು ಬಾವಾ ಬಂದರು ಖ್ಯಾತಿಯ ಪುಷ್ಪರಾಜ್ ಬೊಳ್ಳೂರು, ದೀಪಕ್‌ ರೈ ಪಾಣಾಜೆ, ಮೈಮ್‌ ರಾಮದಾಸ್‌, ವಿಸ್ಮಯ ವಿನಾಯಕ್, ರೂಪಾ ವರ್ಕಾಡಿ ಕೂಡ ಇದರಲ್ಲಿದ್ದಾರೆ. ನಾಯಕಿಯಾಗಿ ಪುಟ್ಟಕ್ಕನ ಮಕ್ಕಳು ಧಾರಾವಾಹಿ ಖ್ಯಾತಿಯ ಸಂಜನಾ ಬುರ್ಲಿ ತಮ್ಮ ಅದ್ಭುತ ನಟನಾ ಕೌಶಲವನ್ನು ಪ್ರದರ್ಶಿಸಿ ದ್ದಾರೆ. ಜತೆಗೆ ಕುಸೇಲ್ದರಸೆ ನವೀನ್‌ ಡಿ. ಪಡೀಲ್‌ ಪ್ರಮುಖ ಪಾತ್ರದಲ್ಲಿದ್ದಾರೆ. ಈಗಾಗಲೇ ಕೆಲವು ತುಳು, ಕನ್ನಡ ಸಿನಿಮಾಗಳಲ್ಲಿ ನಟಿಸಿ ಭರವಸೆಯ ನಾಯಕ ನಟ ಎಂದೇ ಗುರುತಿಸಿಕೊಂಡಿರುವ ಅಥರ್ವ ಪ್ರಕಾಶ್‌ ಕೂಡ ನಾನ್‌ವೆಜ್‌ನ ಪ್ರಮುಖ ಪಾತ್ರದಲ್ಲಿದ್ದು, ಈ ಸಿನಿಮಾ ಭರ್ಜರಿ ಹಿಟ್‌ ಆಗುವ ನಿರೀಕ್ಷೆ ಇದೆ. ಹಾಸ್ಯಕ್ಕೂ ಕೊರತೆಯಿಲ್ಲ, ಮನೋರಂಜನೆಯೂ ಕಡಿಮೆ ಇಲ್ಲ, ಸಂದೇಶ – ಕಥೆಯೂ ಅದ್ಭುತ ಎಂಬುದು ಚಿತ್ರತಂಡದ ಮಾತು.ನಾನ್‌ವೆಜ್‌ನ ವಿಷಯವೇ ಎಲ್ಲರಿಗೂ ಖುಷಿ ಕೊಡಲಿದೆ. ಪ್ರೀತಿಯ ಹಿಂದೆ ಹೋಗುತ್ತಿರುವ ಮುಗ್ಧ ಯುವಕನೊಬ್ಬನ ಸುತ್ತ ಹೆಣೆದಿರುವ ಕಥೆಯನ್ನು ಈ ಸಿನಿಮಾ ಹೊಂದಿದೆ. ಆದ ಕಾರಣ ಇದು ಯುವ ಸಮುದಾಯವನ್ನು ಸೆಳೆಯುವ ಸಾಧ್ಯತೆ ನಿಚ್ಚಳವಾಗಿದೆ. ಮಕ್ಕಳೊಂದಿಗೆ ಹೆತ್ತವರು ಜತೆಯಾಗಿ ಕುಳಿತು ನೋಡಬೇಕಾದ ಸಿನಿಮಾವಾಗಿದ್ದು, ಇಡೀ ಸಿನಿಮಾದ ಕಥೆ ಹಾಗೂ ಸಂದೇಶವನ್ನು ಹಾಸ್ಯದಲ್ಲೇ ತೆಗೆದುಕೊಂಡು ಹೋಗಿರುವುದು ಒಂದು ದೊಡ್ಡ ಪ್ಲಸ್‌ ಪಾಯಿಂಟ್‌.

ಪ್ರಾದೇಶಿಕ ವಾರ್ತೆಗಳು

KONKANI LEKHAK SANGH, KARNATAKA Konkani Literary Award Conferred to: Mr. Patrick Camille Moras (M. Patrik)

Konkani Lekhak Sangh Karnataka – A voluntary association exclusively formed with the sole intention of promoting Konkani language and literature in the year 2018. From the year 2022, Konkani Lekhak Sangh decided to select and honour a Konkani writer who has immensely contributed to Konkani literature.For the year 2026, Konkani Lekhak Sangh award committee has selected a well known Konkani writer Mr. Patrick Camille Moras (M. Patrik).The award consists of a cash prize of Rs 25000/-, a citation and a Memento. Born on November 17, 1945, Patrick Camille Moras, known as M. Patrik, rose from a childhood of hardship to become a pillar of Konkani literature. After discontinuing school in fifth grade to support his family, he found a mentor in J.B. Rasquinha, who provided him with books and encouraged him to sell literature books door-to-door.Starting as a book seller and Associate Editor of Kannik Konkani Magazine at eighteen, he became a prolific author of over 800 short stories, 400 articles, and ten novels. Through his Nityadar Prakashan, he published numerous works, including plays and detective dramas, cementing his legacy as a dedicated servant of the Konkani language. In recognition of his immense contribution to literature, he has been honored with the Honorary Award from the Karnataka Konkani Sahitya Academy and the ‘Sandesha Konkani Literature Award – 2026’ conferred upon M. Patrick.The award will be conferred at a function on February 07, 2026 at 6.30 p.m., at Sandesha Premises, Sandesha Foundation, Bajjodi, Mangaluru.Members Present at the Press Meet:Richard Moras – ConvenerDolphy F. Lobo – Committee memberDr Jerry Niddodi – Advisory Committee memberJ.F. DSouza – Advisory committee member

ಪ್ರಾದೇಶಿಕ ವಾರ್ತೆಗಳು

ರಾಜ್ಯ ಮಹಿಳಾ ಸಹಕಾರ ಮಹಾಮಂಡಳದ ನಿರ್ದೇಶಕರಾಗಿಸಾವಿತ್ರಿ ರೈ ಕೆ. ಆಯ್ಕೆ

ಮಂಗಳೂರು : ಬೆಂಗಳೂರಿನ ಕರ್ನಾಟಕ ರಾಜ್ಯ ಮಹಿಳಾ ಸಹಕಾರ ಮಹಾಮಂಡಳದ ನಿರ್ದೇಶಕರಾಗಿ ಸಾವಿತ್ರಿ ಕೈ ಕೆ. ಆಯ್ಕೆಯಾಗಿದ್ದಾರೆ. ಪ್ರಸ್ತುತ ಇವರು ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್ ನ ನಿರ್ದೇಶಕರಾಗಿ, ಬೆಳ್ತಂಗಡಿ ತಾಲೂಕು ಮಹಿಳಾ ಸಹಕಾರ ಸಂಘ ಉಜಿರೆ ಇದರ ಅಧ್ಯಕ್ಷರಾಗಿ ಹಾಗೂ ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರಿಯ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Scroll to Top