BREAKING NEWS. ಮುಂಬಯಿಯ ಖ್ಯಾತ ಉದ್ಯಮಿಯೊಬ್ಬರಿಗೆ ಹನಿ ಟ್ರ್ಯಾಪ್. 5 ಕೋಟಿ ಡೀಲ್
ಬೆಂಗಳೂರು – ಮುಂಬಯಿ ಉದ್ಯಮಿಯೊಬ್ಬರನ್ನು ಹನಿ ಟ್ರ್ಯಾಪ್ ಮಾಡಿದ ಪ್ರಕರಣವನ್ನು ಸದ್ದಿಲ್ಲದೆ ಮುಚ್ಚಿಡಲಾಗಿದೆ. ಈ ಬಗ್ಗೆ ಮಹತ್ವದ ಸುಳಿವು ಲಭ್ಯವಾಗಿದೆ. ಇದರ ಡೀಟೇಲ್ ವರದಿ ನಿರೀಕ್ಷಿಸಿ
ಬೆಂಗಳೂರು – ಮುಂಬಯಿ ಉದ್ಯಮಿಯೊಬ್ಬರನ್ನು ಹನಿ ಟ್ರ್ಯಾಪ್ ಮಾಡಿದ ಪ್ರಕರಣವನ್ನು ಸದ್ದಿಲ್ಲದೆ ಮುಚ್ಚಿಡಲಾಗಿದೆ. ಈ ಬಗ್ಗೆ ಮಹತ್ವದ ಸುಳಿವು ಲಭ್ಯವಾಗಿದೆ. ಇದರ ಡೀಟೇಲ್ ವರದಿ ನಿರೀಕ್ಷಿಸಿ
ಮಂಗಳೂರು: ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ, ನಿಟ್ಟೆ ಪರಿಗಣಿತ ವಿ.ವಿ.ಯ ಕುಲಾಧಿಪತಿ, ಶಿಕ್ಷಣ ತಜ್ಞ ಕೆ.ಎಸ್. ಹೆಗ್ಡೆ ಚಾರಿಟೆಬಲ್ ಹಾಸ್ಪಿಟಲ್‍ನ ವ್ಯವಸ್ಥಾಪಕ ನಿರ್ದೇಶಕ ಎನ್. ವಿನಯ ಹೆಗ್ಡೆ (86) ಗುರುವಾರ ನಸುಕಿನ 2 ಗಂಟೆ ಸುಮಾರಿಗೆ ಕದ್ರಿ ಶಿವಬಾಗ್‍ನಲ್ಲಿರುವ ಸ್ವಗೃಹದಲ್ಲಿ ನಿಧನ ಹೊಂದಿದರು.ಮೃತರು ಪತ್ನಿ ಸುಜಾತಾ ಹೆಗ್ಡೆ, ಪುತ್ರ ನಿಟ್ಟೆ ವಿ.ವಿ.ಯ ಸಹ ಕುಲಾಧಿಪತಿ ವಿಶಾಲ್ ಹೆಗ್ಡೆ, ಪುತ್ರಿ ಬೆಂಗಳೂರಿನ ನಿಟ್ಟೆ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥೆ ಅಶ್ವಿತಾ ಪೂಂಜ, ಸಹೋದರ ನಿವೃತ್ತ ಕರ್ನಾಟಕ ಲೋಕಾಯುಕ್ತ ನ್ಯಾ| ಎನ್. ಸಂತೋಷ್ ಹೆಗ್ಡೆ ಸಹಿತ ಸಹೋದರ ಸಹೋದರಿಯರನ್ನು ಅಗಲಿದ್ದಾರೆ.ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ, ಲೋಕಸಭಾ ಸ್ಪೀಕರ್ ಆಗಿದ್ದ ಕೆ.ಎಸ್. ಹೆಗ್ಡೆ (ಕೌಡೂರು ಸದಾನಂದ ಹೆಗ್ಡೆ) ಅವರ ದ್ವಿತೀಯ ಪುತ್ರರಾದ ವಿನಯ ಹೆಗ್ಡೆ ಅವರು ಕರಾವಳಿ ಭಾಗದಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿದ್ದರು. ನಿಟ್ಟೆ ಪರಿಗಣಿತ ವಿಶ್ವವಿದ್ಯಾನಿಲಯದ ಮೂಲಕ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ್ದರು. ಗ್ರಾಮೀಣ ಪ್ರದೇಶವಾಗಿದ್ದ ನಿಟ್ಟೆಯನ್ನು ಅಂತಾರಾಷ್ಟ್ರೀಯ ಮಟ್ಟದ ಶೈಕ್ಷಣಿಕ ಕೇಂದ್ರವಾಗಿ ಪರಿವರ್ತಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ.ಶಿಕ್ಷಣ ಮಾತ್ರವಲ್ಲದೆ ಆರೋಗ್ಯ ಕ್ಷೇತ್ರದಲ್ಲಿಯೂ ಸಾಧನೆ ಮಾಡಿದವರು ಧಾರ್ಮಿಕ, ಸಾಮಾಜಿಕ ಸೇವೆಯ ಮೂಲಕವೂ ಅಪಾರ ಖ್ಯಾತಿ ಗಳಿಸಿದ್ದರು. ಇವರ ಸೇವೆಯನ್ನು ಪರಿಗಣಿಸಿ ಅನೇಕ ಪ್ರಶಸ್ತಿ ಗೌರವಗಳು ಇವರಿಗೆ ಸಂದಿವೆ.*ಎರಡು ದಿನ ಹಿಂದೆ ಅಯೋಧ್ಯೆ ರಾಮನ ದರ್ಶನ*ವಿನಯ ಹೆಗ್ಡೆ ಕುಟುಂಬ ಸಹಿತ ಡಿ. 28ರಂದು ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಭೇಟಿ ನೀಡಿ, ಶ್ರೀರಾಮಚಂದ್ರನ ದರ್ಶನ ಪಡೆದು ಬಂದಿದ್ದರು. ಅಲ್ಲಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರ ಜತೆಯಲ್ಲೇ ಶ್ರೀರಾಮನ ದರ್ಶನ ಮಾಡಿದ್ದರು. ಈ ವೇಳೆ ಅವರು, ಜೀವನದ ಆಸೆ ಈಡೇರಿದೆ ನನಗೆ ಇನ್ನೇನು ಬೇಕು’ ಎನ್ನುವ ಮಾತನ್ನು ಹೇಳಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.ಅಯೋಧ್ಯೆಯಿಂದ ಬಂದವರಿಗೆ ಸ್ವಲ್ಪ ಅನಾರೋಗ್ಯ ಕಾಡಿತ್ತು. ಡಿ. 30ರಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಬಂದಿದ್ದರು. ಡಿ. 31ರಂದು ಮನೆಯಲ್ಲೇ ಇದ್ದು, ರಾತ್ರಿ ಮಲಗಿದವರು ಎದ್ದು ಶೌಚಾಲಯಕ್ಕೆ ಹೋಗಿ ಮರಳಿ ಬಂದು ಹಾಸಿಗೆಯಲ್ಲಿ ಕುಳಿತವರು ಅಲ್ಲೇ ಮಲಗಿ ನಿಧನ ಹೊಂದಿದರು.
ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ತಾಲೂಕು ಘಟಕದಿಂದ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಇಲ್ಲಿ ಡಿ.30ರಂದು ಸಾಹಿತಿ ತೇಜಕುಮಾರ್ ಬಡ್ಡಡ್ಕ ಅವರ ಅಧ್ಯಕ್ಷತೆಯಲ್ಲಿ ನಡೆದ ಸುಳ್ಯ ತಾಲೂಕು 28ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವಿಜಯವಾಣಿ ಹಿರಿಯ ವರದಿಗಾರ ಹರೀಶ್ ಮೋಟುಕಾನ ಅವರು ಕನ್ನಡ ಕಸ್ತೂರಿ ಪುರಸ್ಕಾರ ಸ್ವೀಕರಿಸಿದರು.
ಮಂಗಳೂರು: ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಅಧ್ಯಕ್ಷತೆಯಲ್ಲಿ ಮಂಗಳೂರು ಕಂಬಳ ಸಮಿತಿ ವತಿಯಿಂದ ಬಂಗ್ರಕೂಳೂರಿನ ಗೋಲ್ಡ್‌ಪಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡುಕರೆಯಲ್ಲಿ ನಡೆದ ನವ ವರ್ಷದ-ನವ ವಿಧದ ಮಂಗಳೂರು ಕಂಬಳವು ನವರೂಪದಲ್ಲಿ ಅರ್ಥಪೂರ್ಣ ಕಾರ್ಯಕ್ರಮಗಳೊಂದಿಗೆ ಬಹಳ ಯಶಸ್ವಿಯಾಗಿ ಸಂಪನ್ನಗೊಂಡಿದೆ.ತುಳುನಾಡು ಅಸ್ಮಿತೆಯ 9ನೇ ವರ್ಷದ ಮಂಗಳೂರು ಕಂಬಳದಲ್ಲಿ ಸಂಸದ ಕ್ಯಾ. ಚೌಟ ಅವರ ʼಬ್ಯಾಕ್ ಟು ಊರುʼ ಪರಿಕಲ್ಪನೆಗೆ ಪೂರಕವಾಗಿ ತಾಯ್ನಾಡಿಗೆ ವಾಪಾಸ್ಸಾಗಿ ಸ್ವಂತ ಉದ್ಯಮ ಕಟ್ಟಿ ಬೆಳೆಸಿ ಸ್ಥಳೀಯರಿಗೆ ಉದ್ಯೋಗಾವಕಾಶ ನೀಡಿರುವ 9 ಮಂದಿ ಉದ್ಯಮಿಗಳನ್ನು ಕಂಬಳ ವೇದಿಕೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಇತರೆ ನಾಯಕರ ಸಮ್ಮುಖದಲ್ಲಿ ಸನ್ಮಾನಿಸಿರುವುದು ಅವಿಸ್ಮರಣೀಯ ಕ್ಷಣವಾಗಿತ್ತು. ವಿನೂತನ ‘ವಂದೇ ಮಾತರಂ ಬೂತ್’: 1000ಕ್ಕೂ ಹೆಚ್ಚು ಮಂದಿಯಿಂದ ರಾಷ್ಟ್ರೀಯ ಗೀತೆ ರೆಕಾರ್ಡ್!ಈ ಬಾರಿಯ ಮಂಗಳೂರು ಕಂಬಳದಲ್ಲಿ ಸಂಸದ ಕ್ಯಾ. ಚೌಟ ಅವರ ಆಶಯದಂತೆ ನಮ್ಮ ತುಳುನಾಡಿನ ಜನರಲ್ಲಿ ದೇಶ ಭಕ್ತಿಯ ಚೈತನ್ಯವನ್ನು ಉದ್ದೀಪನಗೊಳಿಸಲು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಕರೆಯಂತೆ ವಂದೇ ಮಾತರಂ’ ಗೀತೆಯನ್ನು ಕೆರೋಕೆಯೊಂದಿಗೆ ಹಾಡಿ, ಅದರ ವಿಡಿಯೋವನ್ನು ವಂದೇ ಮಾತರಂ ವೆಬ್ ಸೈಟ್ ನಲ್ಲಿ ಅಪ್‌ಲೋಡ್ ಮಾಡಲು ವಿಶೇಷ ಬೂತ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಅದರಂತೆ, ಒಂದೆಡೆ ಕಂಬಳದ ಕೋಣಗಳ ಓಟ ಸ್ಪರ್ಧೆ ನಡೆಯುತ್ತಿದ್ದರೆ, ಮತ್ತೊಂದಡೆ ಮಕ್ಕಳು, ಯುವಕರು, ಮಹಿಳೆಯರು, ಹಿರಿಯರು,ಕಂಬಳ ಓಟಗಾರರು ಹೀಗೆ ಕಂಬಳಕ್ಕೆ ಬಂದಿದ್ದವರ ಪೈಕಿ ಸುಮಾರು 1000ಕ್ಕೂ ಹೆಚ್ಚು ಮಂದಿ ಬಂದು ವಂದೇ ಮಾತರಂ ಗೀತೆ ಹಾಡಿ ಹಾಡಿ ಡಿಜಿಟಲ್ ಸರ್ಟಿಫಿಕೇಟ್ ಪಡೆದುಕೊಂಡರು. ಈ ಮೂಲಕ ಇಡೀ ಮಂಗಳೂರು ಕಂಬಳದಲ್ಲಿ ದೇಶಪ್ರೇಮದ ಕಿಡಿ ಪಸರಿಸುವ ಬಹಳ ವಿನೂತನ ಪ್ರಯತ್ನವನ್ನು ಕ್ಯಾ. ಚೌಟ ಅವರು ಮಾಡಿದ್ದಾರೆ. ಮಂಗಳೂರು ಕಂಬಳದಲ್ಲಿಯೂ ವಂದೇ ಮಾತರಂ ಗೀತೆಯ 150ನೇ ವರ್ಷಾಚರಣೆಗೆ ತುಳುನಾಡಿನ ಜನತೆಯು ವಿಭಿನ್ನ ರೀತಿ ಸಾಕ್ಷಿಯಾಗುವಂತೆ ಮಾಡಿದ ಕ್ಯಾ. ಬ್ರಿಜೇಶ್ ಚೌಟ ಅವರ ಪ್ರಯತ್ನ ನಿಜಕ್ಕೂ ಮಾದರಿ ಹಾಗೂ ಶ್ಲಾಘನೀಯ. ಕಂಬಳದಲ್ಲಿ ಹಿರಿಯ ಜೀವಗಳ ಸಮ್ಮಿಲನಹಾಗೆಯೇ ಈ ಬಾರಿಯ ಮಂಗಳೂರು ಕಂಬಳದಲ್ಲಿ ದಕ್ಷಿಣ ಕನ್ನಡದ ವೃದ್ಧಾಶ್ರಮದಲ್ಲಿರುವ ಹಿರಿಯ ಜೀವಗಳಿಗೂ ಭಾಗವಹಿಸುವ ಅವಕಾಶವನ್ನು ಕೂಡ ಕ್ಯಾ. ಚೌಟ ಅವರು ಕಲ್ಪಿಸಿದ್ದರು. ಅದರಂತೆ ಜಿಲ್ಲೆಯ ಹಲವಾರು ವೃದ್ಧಾಶ್ರಮಗಳಿಂದ ಹಿರಿಯ ಚೇತನಗಳು ಮಂಗಳೂರು ಕಂಬಳ ನೋಡುವುದಕ್ಕೆ ಆಗಮಿಸಿದ್ದು, ಅವರೆಲ್ಲರನ್ನು ಖುದ್ದು ಕ್ಯಾ. ಚೌಟ ಅವರೇ ಬಹಳ ಪ್ರೀತಿ-ಅಕ್ಕರೆಯಿಂದ ಕಂಬಳ ಕರೆಯತ್ತ ಕರೆದುಕೊಂಡು ಹೋಗಿ ಕಂಬಳದ ವೈಭವವನ್ನು ಕಣ್ಣುತುಂಬಿಕೊಳ್ಳುವುದಕ್ಕೆ ಜತೆಯಾಗಿದ್ದು ನಿಜಕ್ಕೂ ಭಾವಪರವಶಗೊಳಿಸುವಂತಿತ್ತು. ಕಂಬಳದ ಈ ಸಂಭ್ರಮದಲ್ಲಿ ಭಾಗಹಿಸುವುದಕ್ಕೆ ಹೀಗೊಂದು ಅಪರೂಪದ ಅವಕಾಶ ಲಭಿಸಿರುವುದರ ಧನ್ಯತೆ ಆ ಹಿರಿಜೀವಗಳ ಮುಖದಲ್ಲಿ ಕಾಣಿಸಿದ್ದು, ಇಂಥಹ ಅಪರೂಪದ ಕ್ಷಣ ಕ್ಯಾ. ಚೌಟ ಅವರಲ್ಲಿಯೂ ಸಾರ್ಥಕತೆಯ ಭಾವ ಮೂಡಿಸಿದೆ.ಹಾಗೆಯೇ ಏಕ್ ಪೇಡ್ ಮಾ ಕೇ ನಾಮ್ ಅಭಿಯಾನದಂತೆ ಮಂಗಳೂರು ಕಂಬಳದಲ್ಲಿಯೂ 200ಕ್ಕೂ ಹೆಚ್ಚು ಸಸಿ ವಿತರಿಸುವ ಬಹಳ ವಿಭಿನ್ನ ವ್ಯವಸ್ಥೆ ಕಲ್ಪಿಸಲಾಗಿತ್ತು. ಜತೆಗೆ ಎಐ ಕ್ರಿಯೇಟಿವ್ ಯೋಧ, ಫೋಟೊಗ್ರಾಫಿ, ಸೋಷಿಯಲ್ ಮೀಡಿಯಾ ಆಸಕ್ತರ ರೀಲ್ಸ್ ಮೇಕಿಂಗ್ ಸ್ಪರ್ಧೆಯೂ ನವ ವರ್ಷದ ಕಂಬಳಕ್ಕೆ ವಿಶೇಷ ಕಳೆ ನೀಡಿತ್ತು. ಈ ನಡುವೆ ಡ್ರಾಯಿಂಗ್ ಸ್ಪರ್ಧೆಯಲ್ಲಿಯೂ ಸುಮಾರು 100 ಮಂದಿ ಭಾಗವಹಿಸಿ ಕಂಬಳವನ್ನು ಮತ್ತಷ್ಟು ಕಲರ್‌ಪುಲ್ ಮಾಡಿತ್ತು. ಮಂಗಳೂರು ಕಂಬಳದ ಯಶಸ್ವಿಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆನವ ವಿಧದ-ನವ ವರ್ಷದ ಮಂಗಳೂರು ಕಂಬಳದ ಬಗ್ಗೆ ಪ್ರತಿಕ್ರಿಯಿಸಿರುವ ಸಂಸದ ಕ್ಯಾ. ಚೌಟ ಅವರು, “ಮಂಗಳೂರು ಕಂಬಳ ಸಮಿತಿಯ ಅವಿರತ ಪರಿಶ್ರಮ ಹಾಗೂ ಉತ್ಸಾಹದ ಫಲವಾಗಿ 9ನೇ ವರ್ಷದ ಮಂಗಳೂರು ಕಂಬಳವು ತುಳುನಾಡಿನ ಅಸ್ಮಿತೆಯನ್ನು ಮತ್ತಷ್ಟು ಗಟ್ಟಿಗೊಳಿಸಿ ಕಂಬಳದ ಸೊಬಗು ನೋಡಲು ಬಂದ ಜನರಲ್ಲಿ ದೇಶಭಕ್ತಿಯ ಭಾವ ಉದ್ದೀಪನಗೊಳಿಸುವುದಕ್ಕೆ ಸಾಕ್ಷಿಯಾಗಿದ್ದು ವೈಯಕ್ತಿಕವಾಗಿ ಬಹಳ ಖುಷಿ ಹಾಗೂ ಸಂತೃಪ್ತಿ ತಂದಿದೆ. ಇಡೀ ಮಂಗಳೂರು ಕಂಬಳ ಬಹಳ ಅಚ್ಚುಕಟ್ಟಾಗಿ ನಡೆಯುವ ಮೂಲಕ ಅದರ ಯಶಸ್ವಿಗೆ ನೇರ ಹಾಗೂ ಪರೋಕ್ಷವಾಗಿ ಸಹಕರಿಸಿದ ಪ್ರತಿಯೊಬ್ಬರಿಗೂ ಕೃತಜ್ಞತೆಯನ್ನು ಸಲ್ಲಿಸಬಯಸುತ್ತೇವೆ. ಇದು ಮುಂದಿನ 10ನೇ ವರ್ಷದ ಮಂಗಳೂರು ಕಂಬಳವನ್ನು ಮತ್ತಷ್ಟು ವೈಭವೋಪೇತವಾಗಿ ಆಯೋಜಿಸುವುದಕ್ಕೆ ಉತ್ತೇಜನವನ್ನು ನೀಡಿದೆ ಎಂದು ಕ್ಯಾ.ಚೌಟ ಅವರು ಅಭಿಪ್ರಾಯಪಟ್ಟಿದ್ದಾರೆ.
ಪಡುಬಿದ್ರಿ: ಬೆಂಗಳೂರಿನ ಅಖಿಲ ಕರ್ನಾಟಕ ಅಭಿವೃದ್ಧಿ ಪ್ರತಿಷ್ಠಾನ, ಮಂಗಳೂರಿನ ಕಣಚೂರು ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ಇವರ ಸಹಭಾಗಿತ್ವ ದಲ್ಲಿ ಶನಿವಾರ ಇಲ್ಲಿನ ಸುಸ್ಲಾನ್ ಕಾಲೋನಿಯಲ್ಲಿ “ಆರೋಗ್ಯವೇ ಭಾಗ್ಯ” ಉಚಿತ ವೈದ್ಯಕೀಯ ಶಿಬಿರ ನಡೆಯಿತು.ವೈದ್ಯಕೀಯ ಶಿಬಿರವನ್ನು ಉದ್ಘಾಟಿಸಿದ ಮಾಜಿ ಜಿಲ್ಲಾ ಪಂಚಾಯತ ಸದಸ್ಯ ಶಶಿಕಾಂತ್ ಪಡುಬಿದ್ರಿ ಮಾತನಾಡಿ ಇಂತಹ ವೈದ್ಯಕೀಯ ಶಿಬಿರಗಳಿಂದ ಕಾಯಿಲೆಗಳ ಪತ್ತೆ ಆಗುವುದರಿಂದ ಸಕಾಲದಲ್ಲಿ ಚಿಕಿತ್ಸೆ ನೀಡಲು ಸಹಾಯಕ ಆಗುತ್ತದೆ. ಸಂಘಟನೆಯ ಕಾರ್ಯ ಶ್ಲಾಘನೀಯ ಎಂದು ಅವರು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎನ್ಎಸ್ ಸಿಡಿಎಫ್ ಅಧ್ಯಕ್ಷ ಗಂಗಾಧರ್ ಗಾಂಧಿ ವಹಿಸಿದ್ದರು.ಕಣಚೂರು ಆಯುರ್ವೇದ ಕಾಲೇಜು ವೈದ್ಯಕೀಯಸಲಹೆಗಾರ ಡಾ. ಸುರೇಶ್ ನೆಗಳಗುಳಿ. ಕಣಚೂರು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಕಾರ್ತಿಕೇಯ ಪ್ರಸಾದ್, ಸಹಾಯಕ ಪ್ರಾಧ್ಯಾಪಕ ಡಾ. ಶ್ರೀರಾಮ್,ಕಣಚೂರು ಆಸ್ಪತ್ರೆ, ಸಮಾಜ ಸೇವಕ ರಂಜನ್ ಕುಮಾರ್,ಸುಸ್ಲೋನ್ ಕಾಲೊನಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಜಮಾಲ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.ಅಖಿಲ ಕರ್ನಾಟಕ ಅಭಿವೃದ್ಧಿ ಪ್ರತಿಷ್ಠಾನ ಅಧ್ಯಕ್ಷೆ ಸೌಮ್ಯ ಶೆಟ್ಟಿ, ಸ್ವಾಗತಿಸಿ, ಪ್ರಸ್ತಾವಿಕವಾಗಿ ಮಾತನಾಡಿದರು. ಅಖಿಲ ಕರ್ನಾಟಕ ಅಭಿವೃದ್ಧಿ ಪ್ರತಿಷ್ಠಾನದ ಕಾರ್ಯದರ್ಶಿ ಅನುಪಮಾ ರಾವ್, ನಿರ್ದೇಶಕಿ ಶಿಲ್ಪಾ ಜೋಸೆಫ್ ಮತ್ತಿತರರು ಉಪಸ್ಥಿತರಿದ್ದರು.ಶರಣ್ಯ ಬೆಳುವಾಯಿ ಕಾರ್ಯಕ್ರಮ ನಿರೂಪಿಸಿದರು.ಬಳಿಕ ನಡೆದ ವೈದ್ಯಕೀಯ ಶಿಬಿರದಲ್ಲಿ 60 ಕ್ಕು ಹೆಚ್ಚು ಮಂದಿ ವೈದ್ಯಕೀಯ ಸಲಹೆ ಮತ್ತು ಔಷಧಿ ಪಡೆದರು.
ಮಂಗಳೂರು, ಕಾಸರಗೋಡು ಕನ್ನಡ ಭವನದ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಅಂತರ್ ರಾಜ್ಯ ಪ್ರಶಸ್ತಿಯಾಗಿರುವ ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ 2026 ಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ನಿಕಟ ಪೂರ್ವ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರನ್ನು ಆಯ್ಕೆ ಮಾಡಲಾಗಿದೆ. ಜನವರಿ 18 ರಂದು ಕಾಸರಗೋಡು ನಲ್ಲಿ ಕನ್ನಡ ಭವನ ರಜತ ಸಂಭ್ರಮ ನಾಡು ನುಡಿ ಹಬ್ಬ ಕಾರ್ಯಕ್ರಮ ದಲ್ಲಿ ಪ್ರಶಸ್ತಿ ಪುರಸ್ಕಾರ ನಡೆಯಲಿದೆ.ಮಾಧ್ಯಮ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಇವರ ಸಾಧನೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ತಿಳಿಸಿದ್ದಾರೆ.
ಮಂಗಳೂರು: ಮಂಗಳೂರು ಕೇವಲ ನಮ್ಮ ನೆಲವಲ್ಲ, ಇದು ಸನಾತನ ಸಂಸ್ಕೃತಿಯ ನೆಲೆಬೀಡು ಮತ್ತು ನಮ್ಮ ತುಳುನಾಡಿನ ಅಸ್ಮಿತೆ. ಹೀಗಿರುವಾಗ, ದಕ್ಷಿಣ ಕನ್ನಡ ಜಿಲ್ಲೆಯ ತಪ್ಪು ಅಭಿಪ್ರಾಯ-ಅಪಪ್ರಚಾರ ಹುಟ್ಟು ಹಾಕುವ ಪಟ್ಟಭದ್ರ ಹಿತಾಸಕ್ತಿಗಳ ವಿರುದ್ಧ ಹೋರಾಡುವ ಜೊತೆಗೆ, ಸ್ಥಳೀಯರ ಪಾಲ್ಗೊಳ್ಳುವಿಕೆಯೊಂದಿಗೆ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕನಸಿನಂತೆ ನಮ್ಮ ‘ಮಂಗಳೂರು ೨.೦ ಹಾಗೂ ‘ವಿಕಸಿತ ಮಂಗಳೂರು’ ನಿರ್ಮಾಣ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ದಕ್ಷಿಣ ಕನ್ನಡ ಸಂಸದ ಹಾಗೂ ಮಂಗಳೂರು ಕಂಬಳ ಸಮಿತಿ ಅಧ್ಯಕ್ಷ ಕ್ಯಾ. ಬ್ರಿಜೇಶ್ ಚೌಟ ಕರೆ ನೀಡಿದ್ದಾರೆ. ಬಂಗ್ರಕೂಳೂರಿನ ಗೋಲ್ಡ್‌ಫಿಂಚ್ ಸಿಟಿಯಲ್ಲಿ ನಡೆದ ಒಂಬತ್ತನೇ ವರ್ಷದ ‘ಮಂಗಳೂರು ಕಂಬಳ’ದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿ, ನಮ್ಮ ನೆಲದ ಭವಿಷ್ಯವನ್ನು ನಮ್ಮವರೇ ರೂಪಿಸಬೇಕು ಮತ್ತು ಇಲ್ಲಿನ ಅಭಿವೃದ್ಧಿಯಲ್ಲಿ ಸ್ಥಳೀಯರ ಪಾಲ್ಗೊಳ್ಳುವಿಕೆ ಅತ್ಯಗತ್ಯ. 8 ವರ್ಷದ ಹಿಂದೆ ಆರಂಭಗೊಂಡ ಈ ಕಂಬಳ ತುಳುನಾಡಿನ ಎಲ್ಲ ವರ್ಗದವರು, ಸಮುದಾಯದವರನ್ನು ಒಂದಾಗಿ ಜೋಡಿಸುವಲ್ಲಿ ಯಶಸ್ವಿಯಾಗಿದೆ. 9ನೇ ವರ್ಷದ ಈ ಕಂಬಳವನ್ನು ನವವಿಧ-ನವವರ್ಷದ ಕಾರ್ಯಕ್ರಮಗಳೊಂದಿಗೆ ಮಂಗಳೂರು ಕಂಬಳವನ್ನು ಅರ್ಥಪೂರ್ಣವಾಗಿ ಆಯೋಜಿಸಲಾಗಿದೆ ಎಂದು ಹೇಳಿದ್ದಾರೆ.ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ಅಧ್ಯಕ್ಷರಾದ ಚಿತ್ತರಂಜನ್ ಅವರು ದೀಪಪ್ರಜ್ವಲನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ, ಕಟೀಲು ದುರ್ಗಾಪರಮೇಶ್ವರಿ ದೇವಳದ ಅರ್ಚಕ ಅನಂತ ಪದ್ಮನಾಭ ಅಸ್ರಣ್ಣ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಕ್ಯಾ. ಗಣೇಶ್ ಕಾರ್ಣಿಕ್, ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷರಾದ ತುಕರಾಮ್ ಪೂಜಾರಿ, ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ಸುನಿಲ್ ಆಚಾರ್, ವಿನೋದ್ ಶೆಣೈ, ಪ್ರಸಾದ್ ಕುಮಾರ್ ಶೆಟ್ಟಿ, ಜಯಾನಂದ್ ಅಂಚನ್, ಕದ್ರಿ ನವನೀತ್ ಶೆಟ್ಟಿ, ಅನಿಲ್ ಕುಮಾರ್, ಮನೋಹರ್ ಜೋಷಿ, ಕಿರಣ್ ಕುಮಾರ್ ಕೋಡಿಕಲ್, ಶಕೀಲಾ ಖಾವ, ಸಂಧ್ಯಾ ಅಚಾರ್, ಶೋಭಾ ರಾಜೇಶ್, ಹೆಚ್.ಕೆ ಪುರುಷೋತ್ತಮ, ಪ್ರದೀಪ್ ಕುಮಾರ್ ಕಲ್ಕೂರ, ಗೋಪಾಲ್ ಕುತ್ತಾರ್ ಮುಂತಾದವರು ಉಪಸ್ಥಿತರಿದ್ದರು.ಕಂಬಳದ ನೆಲದಲ್ಲಿ ವಂದೇ ಮಾತರಂವಂದೇ ಮಾತರಂ ಗೀತೆಗೆ 150 ವರ್ಷ ತುಂಬಿದ ಸಂಭ್ರಮಕ್ಕಾಗಿ, ಶ್ವೇತವಸ್ತ್ರ ಧರಿಸಿದ 150 ವಿದ್ಯಾರ್ಥಿನಿಯರು ಕೆಸರು ಗದ್ದೆಯ ಬದಿಯಲ್ಲಿ ನಿಂತು ಏಕಕಂಠದಿಂದ ಈ ಗೀತೆಯನ್ನು ಹಾಡತೊಡಗಿದಾಗ ಇಡೀ ಪರಿಸರವೇ ದೇಶಭಕ್ತಿಯನ್ನು ಮೊಳಗಿಸುವಂತೆ ಮಾಡಿತು.ತುಳುನಾಡಿನ ಮಣ್ಣಿನ ವಾಸನೆ ಮತ್ತು ತಾಯಿ ಭಾರತಾಂಬೆಯ ಸ್ತುತಿ ಒಂದಾದ ಆ ಕ್ಷಣ, ನೆರೆದಿದ್ದ ಪ್ರತಿಯೊಬ್ಬರ ಮೈ-ಮನಗಳಲ್ಲಿ ದೇಶಪ್ರೇಮದ ಅಲೆ ಎಬ್ಬಿಸಿತು. ಜಾನಪದ ಕ್ರೀಡೆಯ ಅಬ್ಬರದ ನಡುವೆ ಕೇಳಿಬಂದ ಆ ಸುಮಧುರ ಗಾಯನ, ನಮ್ಮ ಮಣ್ಣಿನ ಸಂಸ್ಕೃತಿ ಮತ್ತು ರಾಷ್ಟ್ರೀಯತೆಯ ಅಪೂರ್ವ ಸಂಗಮವಾಗಿ ‘ನವ ವೈವಿಧ್ಯ’ದ ಶ್ರೇಷ್ಠತೆಯನ್ನ ಸಾರಿತು. ನವವಿಧ-ನವವರ್ಷವೀರ ವನಿತೆ ರಾಣಿ ಅಬ್ಬಕ್ಕ ಚರಿತ್ರೆಯ ಚಿತ್ರಕಲಾ ಪ್ರದರ್ಶನ, ಪ್ರಧಾನಿಯವರ ‘ಏಕ್ ಪೆಡ್ ಮಾ ಕೆ ನಾಮ್’ ಅಭಿಯಾನದಡಿ ಗಿಡಗಳ ವಿತರಣೆ, ‘ಬ್ಯಾಕ್ ಟು ಊರು’ ಉದ್ಯಮಿಗಳಿಗೆ ಸನ್ಮಾನ ಹಾಗೂ ವೃದ್ಧಾಶ್ರಮದ ಹಿರಿಯ ಚೇತನಗಳೊಂದಿಗೆ ಸಂಭ್ರಮ ಹಂಚಿಕೊಳ್ಳುವ 5 ವಿಶಿಷ್ಟ ಚಟುವಟಿಕೆಗಳು ಈ ಬಾರಿಯ ಮಂಗಳೂರು ಕಂಬಳದ ವಿಶೇಷ. ಇದರೊಂದಿಗೆ ಮಕ್ಕಳಿಗಾಗಿ ‘ರಂಗ್ ದ ಕೂಟ’ ಚಿತ್ರಕಲೆ, ಫೋಟೋಗ್ರಫಿ, ರೀಲ್ಸ್ ಹಾಗೂ ತಾಂತ್ರಿಕತೆಯ ಮೆರುಗು ನೀಡುವ ‘AI ಕ್ರಿಯೇಟಿವ್ ಯೋಧ’ ಸೇರಿದಂತೆ ನಾಲ್ಕು ವೈವಿಧ್ಯಮಯ ಸ್ಪರ್ಧೆಗಳು ಕಂಬಳದ ಗತ್ತು-ಗಮ್ಮತ್ತನ್ನು ಮತ್ತಷ್ಟು ಹೆಚ್ಚಿಸಿತ್ತು.
ಮಂಗಳೂರು: ಗ್ರಾಮೀಣ ಸೊಗಡಿನ ಕಂಬಳವನ್ನು ನಗರಕ್ಕೆ ಪರಿಚಯಿಸಿದಂತೆ, ಜಗತ್ತಿನಾದ್ಯಂತ ಹರಡಿರುವ ಮಂಗಳೂರಿನ ಪ್ರತಿಭೆಗಳು ತಾಯ್ನಾಡಿಗೆ ಕೊಡುಗೆ ನೀಡಲು ಇಲ್ಲಿ ಉದ್ಯಮ ಸ್ಥಾಪಿಸುವಂತೆ ಹುರಿದುಂಬಿಸುವ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ‘ಬ್ಯಾಕ್ ಟು ಊರು’ ಪರಿಕಲ್ಪನೆ ಅತ್ಯಂತ ವಿಭಿನ್ನ ಹಾಗೂ ಶ್ಲಾಘನೀಯವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ಹೇಳಿದ್ದಾರೆ. ಬಂಗ್ರಕೂಳೂರಿನ ಗೋಲ್ಡ್‌ಪಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡುಕರೆಯಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನೇತೃತ್ವದಲ್ಲಿ ನಡೆದ ನವ ವರ್ಷದ ನವವಿಧದ 9ನೇ ವರ್ಷದ ಕಂಬಳದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಂಬಳ ಎನ್ನುವುದು ಕೇವಲ ಗ್ರಾಮೀಣ ಒಂದು ಜಾನಪದ ಕ್ರೀಡೆಯಲ್ಲ. ಈ ಕಂಬಳವು ತುಳುನಾಡಿನ ಅಸ್ಮಿತೆಯ ಪ್ರತೀಕ. ಇಂಥಹ ಕಂಬಳ ವೇದಿಕೆಯಲ್ಲಿ ಕ್ಯಾ. ಚೌಟ ಅವರು ತಮ್ಮ ಬ್ಯಾಕ್ ಟು ಊರು ಪರಿಕಲ್ಪನೆಯಡಿ ತಾಯ್ನಾಡಿಗೆ ವಾಪಸ್ಸಾಗಿ ಈ ತುಳುನಾಡಿಗೆ ಕೊಡುಗೆ ನೀಡುತ್ತಿರುವ ಕರಾವಳಿ ಭಾಗದ ಯಶಸ್ವಿ ಉದ್ಯಮಿಗಳನ್ನು ಗುರುತಿಸಿ ಅಂಥಹ ಸಾಧಕರನ್ನು ಗೌರವಿಸುತ್ತಿರುವುದು ಕೂಡ ಪ್ರಶಂಸನೀಯ ಹಾಗೂ ಮಾದರಿಯ ನಡೆ ಎಂದು ಅವರು ಹೇಳಿದ್ದಾರೆ.ಕ್ಯಾ. ಬ್ರಿಜೇಶ್ ಚೌಟ ಅವರು ಕಳೆದ 8 ವರ್ಷಗಳಿಂದ ಮಂಗಳೂರು ಕಂಬಳವನ್ನು ಬಹಳ ವ್ಯವಸ್ಥಿತವಾಗಿ ಆಯೋಜಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ ವಿಚಾರ. ಗ್ರಾಮೀಣ ಭಾಗದ ಜನರಂತೆ ಪ್ರಸ್ತುತ ನಗರ ಭಾಗದಲ್ಲಿಯೂ ಕಂಬಳದ ಸದ್ದು ಮೊಳಗುತ್ತಿದ್ದರೆ ಅದಕ್ಕೆ ಕ್ಯಾ. ಬ್ರಿಜೇಶ್ ಚೌಟ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಈ ಮಂಗಳೂರು ಕಂಬಳದ ಕೊಡುಗೆ ಗಮನಾರ್ಹವಾದದ್ದು ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಕಂಬಳ ಸಮಿತಿಯ ಅಧ್ಯಕ್ಷರು ಹಾಗೂ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಾತನಾಡಿ, ತುಳುನಾಡಿನ ಕಲೆ ಹಾಗೂ ಸಾಂಸ್ಕೃತಿಕ ಅಸ್ಮಿತೆಯನ್ನು ಮುಂದಿನ ಜನಾಂಗಕ್ಕೂ ಪರಿಚಯಿಸಲು ಈ ಕಂಬಳವನ್ನು ನಡೆಸಲಾಗುತ್ತಿದೆ. ಈ ಬಾರಿ ರಾಷ್ಟ್ರ ಜಾಗೃತಿಯ ಕಾರ್ಯಕ್ರಮ, ಬ್ಯಾಕ್ ಟು ಊರು ಸೇರಿದಂತೆ ನವ-ವಿಧ ಕಾರ್ಯಕ್ರಮಗಳ ಮೂಲಕ ಮಂಗಳೂರು ಕಂಬಳವನ್ನು ಮತ್ತಷ್ಟು ಅರ್ಥಪೂರ್ಣಗೊಳಿಸುವ ಪ್ರಯತ್ನ ಮಾಡಿರುವುದಾಗಿ ಹೇಳಿದರು. ಬ್ಯಾಕ್ ಟು ಊರು ಉದ್ಯಮಿಗಳಿಗೆ ಸನ್ಮಾನದೇಶ-ವಿದೇಶದಲ್ಲಿ ಉದ್ಯಮ ಅಥವಾ ಉದ್ಯೋಗದಲ್ಲಿ ಉನ್ನತ ಹುದ್ದೆಯಲ್ಲಿ ನೆಲೆಸಿದ್ದವರು ವಾಪಾಸ್ ತಾಯ್ನಾಡಿಗೆ ಬಂದು ಸ್ವಂತ ಉದ್ಯಮ ಕಟ್ಟಿ ಬೆಳೆಸಿ ಸ್ಥಳೀಯರಿಗೆ ಉದ್ಯೋಗಾವಕಾಶ ನೀಡಿರುವ ಯಶಸ್ವಿ 10 ಉದ್ಯಮಿಗಳನ್ನು ಗುರುತಿಸಿ ಗೌರವಿಸಿರುವುದು ಬ್ಯಾಕ್ ಟು ಊರಿಗೆ ಮತ್ತಷ್ಟು ಮಂಗಳೂರಿಗರು ಹಿಂದಿರುಗಲು ಪ್ರೇರಣೆ ನೀಡಿರುವುದು ಈ ಬಾರಿಯ ಮಂಗಳೂರು ಕಂಬಳದ ಬಹಳ ವಿಶೇಷತೆಯಾಗಿದೆ.ಅದರಂತೆ ಮಂಗಳೂರಿನಲ್ಲಿ ಇಜಿ ಕಂಪೆನಿಯ ಆಪರೇಷನ್ ಆರಂಭಿಸಿ ಸಾಕಷ್ಟು ಉದ್ಯೋಗಾವಕಾಶ ನೀಡಿರುವ ಆನಂದ್ ಫೆರ್ನಾಂಡೀಸ್, ಮಂಗಳೂರಿನ ಎಸ್‌ಇಝೆಡ್‌ನಲ್ಲಿ ಸುಸ್ಥಿರ ಕಟ್ಟಡ ಸಾಮಗ್ರಿಗಳ ಘಟಕ ಸ್ಥಾಪಿಸಿರುವ ಎಂಐಆರ್ ಗ್ರೂಪ್‌ನ ಕಾರ್ಯನಿರ್ವಾಹಕ ನಿರ್ದೇಶಕ ನಿತಿನ್ ರತ್ನಾಕರ್, ಮಂಗಳೂರಿನ ಎಸ್‌ಇಝೆಡ್‌ನಲ್ಲಿ ಇಟ್ಯಾಗ್ ಎನರ್ಜಿಟೆಕ್ನಿಕ್ ಪ್ರೈವೆಟ್ ಲಿ.ನ ಉತ್ಪಾದನಾ ಘಟನೆ ಸ್ಥಾಪಿಸುತ್ತಿರುವ ಬ್ರೂನೋ ಮಾರ್ಸೆಲ್ ಪ್ರಕಾಶ್ ಪೆರೇರಾ, ಶೆಫ್ ಹಾಗೂ ಉದ್ಯಮಿಯಾಗಿರುವ ಶ್ರೀಯಾ ಶೆಟ್ಟಿ, ಅಗ್ರಿಲೀಫ್ ಮೂಲಕ ಗ್ರಾಮೀಣ ಭಾಗದಲ್ಲಿ ಸುಸ್ಥಿರ ಉತ್ಪಾದನಾ ಕಂಪೆನಿ ಸ್ಥಾಪಿಸಿರುವ ಅವಿನಾಶ್ ರಾವ್, ಇಂಡಸ್ಟ್ರೀಯಲ್ ಅಟೋಮೇಷನ್ & ಡಿಜಿಟಲ್ ಟೆಕ್ನಾಲಜೀಸ್ ಮೂಲಕ ಮಂಗಳೂರಿಗೆ ಕೊಡುಗೆ ನೀಡಿರುವ ಸ್ಮಿತಾ ರಾವ್, ಬೋಸ್ ಫ್ರೊಫೆಷನಲ್ಸ್‌ನ ಇಂಡಿಯಾ ಆರ್‌ಅಂಡ್‌ಡಿ ಸೆಂಟರ್‌ನ್ನು ಮಂಗಳೂರಿನಲ್ಲಿ ಸ್ಥಾಪಿಸಿರುವ ನಮಿತಾ ಪಿ.ಪಿ., ಹೈದರಬಾದ್‌ನಿಂದ ಎಂಎನ್‌ಸಿ ಕಂಪೆನಿ ಕೆಲಸ ಬಿಟ್ಟುಬಂದು ಮಂಗಳೂರಿನಲ್ಲಿ ಡೀನೆಟ್ ಸರ್ವೀಸಸ್ ಪ್ರೈ.ಲಿ. ಮೂಲಕ ಇಂಟರ್‌ನೆಟ್ ಸೇವೆ ಒದಗಿಸಿ ನೂರಾರು ಮಂದಿಗೆ ಉದ್ಯೋಗ ನೀಡಿರುವ ಸಂದೇಶ್ ಡಿ. ಪೂಜಾರಿ, ಉದ್ಯಮಿಯಾಗಿ ಎಸ್‌ಎನ್ ಪೂಂಜಾ & ಕೋ. ಮೂಲಕ ಮಂಗಳೂರು ನಗರದಲ್ಲಿ ಕದ್ರಿ ಪಾರ್ಕ್ ಅಭಿವೃದ್ಧಿ ಸೇರಿ ವಿವಿಧ ವೆಂಚರ್‌ಗಳನ್ನು ಮಾಡಿರುವ ಸುಧಾಕರ್ ಪೂಂಜಾ, ಸೌದಿ ಅರೇಬಿಯಾ ಸೇರಿ ಹಲವೆಡೆ ಇಂಡಿಪೆಂಡೆಂಟ್ ಇನ್ನೋವೇಷನ್ ಎಂಬ ಕಂಪೆನಿ ಮೂಲಕ ತಮ್ಮ ಉದ್ಯಮವನ್ನು ಮಂಗಳೂರಿಗೆ ವಿಸ್ತರಿಸಿರುವ ಅನ್ಸಾರಿ ಅಲಿ ಅವರನ್ನು ಕಂಬಳ ವೇದಿಕೆಯಲ್ಲಿ ಸನ್ಮಾನಿಸಲಾಯಿತು.ಕಂಬಳಕ್ಕೆ ಮೆರುಗು ತಂದ ಮೇರಿ ಕೋಮ್‌ವಿಶ್ವ ಬಾಕ್ಸಿಂಗ್ ಚಾಂಪಿಯನ್ ಮೇರಿ ಕೋಮ್ ಅವರು ಮಂಗಳೂರು ಕಂಬಳದಲ್ಲಿ ಪಾಲ್ಗೊಂಡು ಕರಾವಳಿಯ ಈ ಜಾನಪದ ಕ್ರೀಡೆಯನ್ನು ಪ್ರೋತ್ಸಾಹಿಸಿದ್ದಾರೆ. ಈ ವೇಳೆ ಅವರಿಗೆ ಕಂಬಳದ ಬೆತ್ತ ಹಾಗೂ ಕಂಬಳ ಕೋಣಗಳ ಸ್ಮರಣಿಕೆ ನೀಡಿ ಗೌರವಿಸಲಾಯಿತು. ನಾನು ಇದೇ ಮೊದಲ ಬಾರಿಗೆ ನೇರವಾಗಿ ಕಂಬಳವನ್ನು ನೋಡುತ್ತಿದ್ದು, ಬಹಳ ಖುಷಿ ನೀಡಿದೆ. ನಿಜಕ್ಕೂ ಇದೊಂದು ಅಪರೂಪವಾದ ಕ್ರೀಡಾ ಸಂಭ್ರಮ ಎಂದು ಮಂಗಳೂರು ಕಂಬಳವನ್ನು ಬಣ್ಣಿಸಿದ್ದಾರೆ.ಕಂಬಳ ಸಮಿತಿಯ ಗೌರವಾಧ್ಯಕ್ಷ ಡಾ.ಕೆ. ಪ್ರಕಾಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಹರೀಶ್ ಪೂಂಜಾ, ವೇದವ್ಯಾಸ ಕಾಮತ್, ಭಾಗೀರಥಿ ಮುರುಳ್ಯ, ಡಾ.ವೈ. ಭರತ್ ಶೆಟ್ಟಿ, ರಾಜೇಶ್ ನಾೖಕ್, ಗುರುರಾಜ ಗಂಟಿಹೊಳೆ, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ ಸಿಂಹ ನಾಯಕ್, ಕಿಶೋರ್ ಕುಮಾರ್ ಬೊಟ್ಯಾಡಿ, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಬಿ.ನಾಗರಾಜ ಶೆಟ್ಟಿ, ಪ್ರಮುಖರಾದ ಶಶಿಧರ ಶೆಟ್ಟಿ ಬರೋಡಾ ಸೇರಿದಂತೆ ಹಲವು ಉದ್ಯಮಿಗಳು, ಗಣ್ಯರು, ಜನನಾಯಕರು ಭಾಗವಹಿಸಿದ್ದರು.
ಮಂಗಳೂರು, ಮಂಗಳೂರಿಗೆ ಆಗಮಿಸಿದ ಶ್ರೀಲಂಕಾ ಪತ್ರಕರ್ತರ ನಿಯೋಗ ಕರ್ನಾಟಕ ವಿಧಾನ ಸಭೆಯ ಸಭಾಪತಿ ಯು ಟಿ ಖಾದರ್ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಚರ್ಚಿಸಿತು. ಅಲ್ಲದೆ ಶ್ರೀಲಂಕಾಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿದರು.ಈ ವೇಳೆ ಮಾತನಾಡಿದ ಸ್ಪೀಕರ್ ಯು ಟಿ ಖಾದರ್ ಭಾರತ ಹಾಗೂ ಶ್ರೀ ಲಂಕಾ ಹಿಂದಿನಿಂದಲೂ ಬಹಳಷ್ಟು ಉತ್ತಮ ಸಂಬಂಧ ಹೊಂದಿದೆ. ಮುಂದಿನ ದಿನಗಳಲ್ಲಿ ಶಾಸಕರೊಂದಿಗೆ ಶ್ರೀ ಲಂಕಾಕ್ಕೆ ಭೇಟಿ ನೀಡುವುದಾಗಿ ನಿಯೋಗಕ್ಕೆ ತಿಳಿಸಿದರು. ಕರ್ನಾಟಕ ಪ್ರವಾಸದಲ್ಲಿರುವ ಶ್ರೀ ಲಂಕಾ ಪತ್ರಕರ್ತರ ನಿಯೋಗವನ್ನು ವಿಧಾನ ಸೌಧಕ್ಕೆ ಭೇಟಿ ನೀಡುವಂತೆ ಸ್ಪೀಕರ್ ಅಹ್ವಾನ ನೀಡಿದರು.ನಿಯೋಗದಲ್ಲಿ ಏಷ್ಯಾನ್ ಮೀಡಿಯಾ ಮತ್ತು ಕಲ್ಚರಲ್ ಅಸೋಸಿಯೇಷನ್ ಅಧ್ಯಕ್ಷ ಪ್ಯಾಟ ಮ್ ಪ್ಯಾಸ್ತುಲ್,ಶ್ರೀ ಲಂಕಾ ಪ್ರಧಾನಿ ಕಚೇರಿ ಮಾಜಿ ಮಾಧ್ಯಮ ಕಾರ್ಯದರ್ಶಿ ನಿಶಾಂತ್ ಅಲ್ವಿಸ್,ಶ್ರೀಲಂಕಾ ಹಿರಿಯ ಪತ್ರಕರ್ತರಾದ ಸಂಜೀವ ತಿಸೆರಾ,ಹೇಮಂತ್ ಕುಮಾರ್ ಸಿಂಘೆ,ದಾಮಿಸಿರಿ ಅಜಿತ್,ತುಷಾರ ಹೆಟ್ಟಿರಾಚಿ , ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ರಾಜ್ಯ ಕಾರ್ಯಕಾರಿಣಿ ಸದಸ್ಯ ಶ್ರೀನಿವಾಸ್ ನಾಯಕ್ ಇಂದಾಜೆ ಉಪಸ್ಥಿತರಿದ್ದರು.
ದೇಶದಲ್ಲಿರುವ ನಗರಾಡಳಿತ ಸ್ಥಳೀಯ ಸಂಸ್ಥೆಗಳಲ್ಲಿ ಸ್ವಚ್ಛತಾ ಸೇವೆ ಸಲ್ಲಿಸುತ್ತಿರುವ ಪೌರ ಕಾರ್ಮಿಕರ ಸೇವೆ ರಾಷ್ಟ್ರ ಸೇವೆಗೆ ಮತ್ತು ದೇವತಾ ಕಾರ್ಯಕ್ಕೆ ಸಮಾನ ವಾಗಿದ್ದು, ಯಾವುದೇ ತೊಡಕುಗಳಿಲ್ಲದೇ ಅತ್ಯಂತ ಸ್ವಚ್ಛಂದವಾಗಿ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಈ ವರ್ಷದಲ್ಲಿ ಜರಗಿದ ಮಹಾ ಕುಂಭಮೇಳ ಸಾಕ್ಷೀಯಾಗಿದ್ದು ಇಲ್ಲಿ ಪೌರ ಕಾರ್ಮಿಕರ ಸೇವೆಯೇ ನಿದರ್ಶನವಾಗಿದೆ. ಈ ನಿಟ್ಟಿನಲ್ಲಿ ಸಮಾಜದಲ್ಲಿನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿರುವವರನ್ನು ಗುರುತಿಸಿ ಗೌರವಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ.ಸ್ವಾತಂತ್ರ ಹೋರಾಟಗಾರ ವೀರ ಸಾವರ್ಕರ್ ರವರ ಜೀವನ ಚರಿತ್ರೆಯನ್ನು ಉಪನ್ಯಾಸ ಮೂಲಕ ಸಮಾಜಕ್ಕೆ ನೀಡಿ, ಸೇವಕರಿಗೆ ಗೌರವಿಸುವಲ್ಲಿ ಮಾತೃ ಭೂಮಿ ಸೇವಾ ಸಂಘ ನಾವೂರು ಜೆಲ್ಲೆಯ ಸಂಘ ಸಂಸ್ಥೆ ಗಳಿಗೆ ಮಾದರಿ ಯಾಗಿದೆ ಎಂದು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಪ್ರಭಾಕರ ಪ್ರಭು ಅಭಿಪ್ರಾಯ ವ್ಯಕ್ತ ಪಡಿಸಿದರು.ಇವರು ಸತ್ಯದೇವತಾ ಸಭಾಂಗಣ ಕಣಪಾದೆಯಲ್ಲಿ ನಡೆದ ಮಾತೃಭೂಮಿ ಸೇವಾ ಸಂಘ ನಾವೂರು ಇದರ ದ್ವೀತಿಯ ವರುಷದ ವಾರ್ಷಿಕೋತ್ಸವ ಹಾಗೂ ಪೌರ ಕಾರ್ಮಿಕರನ್ನು ಗೌರವಿಸುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಸಮಾಜ ಸೇವಕರಾದ ರವಿ ಕಟಪಾಡಿ ಹಾಗೂ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನ ಮುಖ್ಯಸ್ಥರಾದ ಅರ್ಜುನ್ ಭಂಡಾರ್ಕರ್ಉದ್ಘಾಟನಾ ಕಾರ್ಯಕ್ರಮ ನೆರವೇರಿಸಿದರು.ಸಾಮಾಜಿಕ ಮುಖಂಡರು ಖಾಲಿದ್ ನಂದಾವರ ಅಧ್ಯಕ್ಷತೆ ವಹಿಸಿದ್ದರು.ಶ್ರೀ ಅಶ್ವಥ್ ಬರಿಮಾರು ಸಾರ್ವಕರ್ ಹಾಗೂ ರಾಷ್ಟ್ರೀಯತೆ ವಿಷಯದ ವಿಚಾರ ಮಂಡನೆ ಮಾಡಿದರು. ಶ್ರೀ ಗಣೇಶ್ ಯುವ ಶಕ್ತಿ ಸೇವಾ ಪಥ ಇವರು ಅತಿಥಿಯಾಗಿದ್ದುನಾವೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಇಂದಿರಾ ಸತ್ಯ ದೇವತೆ ಗೆಳೆಯರ ಬಳಗ ಕಣಪಾದೆಯ ಅಧ್ಯಕ್ಷರಾದ ಸದಾನಂದ ಹಳೆಗೇಟು ಮಾತೃಭೂಮಿ ಸಂಘದ ಅಧ್ಯಕ್ಷರಾದ ಸಂತೋಷ್ ಕೋಟ್ಯಾನ್ ಎಕ್ಕುಡೇಲು ಹಾಗೂ ಪಂಚಾಯತ್ ಸದಸ್ಯರಾದ ವಿಜಯ್ ಉಪಸ್ಥಿತಿ ಇದ್ದರು.ಪೌರ ಕಾರ್ಮಿಕರ ಜೊತೆಗೆ, ಮಾಜಿ ಸೈನಿಕರನ್ನು ಹಾಗೂ ಸಮಾಜ ಸೇವಕರನ್ನು ವೈದ್ಯರು ಹಾಗೂ ದಾದಿಯರನ್ನು ಈ ಸಂಧರ್ಭದಲ್ಲಿ ಸನ್ಮಾನಿಸಲಾಯಿತು.ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸತ್ಯ ದೇವತೆ ನೃತ್ಯ ಕಲಾ ತಂಡದ ವತಿಯಿಂದ ಮಾತೃಭೂಮಿಗೆ ನಮನ ಕಾರ್ಯಕ್ರಮ ಹಾಗೂ ಸ್ಪಂದನ ಕಲಾವಿದರ್ ಬಂಟ್ವಾಳ ಇವರಿಂದ ಜಾಗೃತಿಯ ಸಂದೇಶ ಸಾರುವ ಸಾದಿ ತಿಕ್ಕುಜಿ ನಾಟಕ ಪ್ರದರ್ಶನಗೊಂಡಿತು.ಜಗದೀಶ್ ಕಕ್ಕಿಂಜಿ ಇವರು ಪ್ರಾರ್ಥಿಸಿ, ಸಂಘ ನಿರ್ದೇಶಕರಾದ ಸುರೇಶ್. ಎಸ್ ನಾವೂರು ಸ್ವಾಗತಿಸಿ ಕಾರ್ಯದರ್ಶಿ ಲೋಹಿತ್ .ಕೆ.ವಂದಿಸಿದರು.ಎಂ.ಕೆ..ಕನ್ಯಾಡಿ ನಿರೂಪಿಸಿದರು.