Author name: editor

ಪ್ರಾದೇಶಿಕ ವಾರ್ತೆಗಳು

ನವ ವಿಧ- ನವ ವರ್ಷದ ವಿಶಿಷ್ಟತೆ ಸಾರಿದ ಮಂಗಳೂರು ಕಂಬಳ.‘ ವಿಕಸಿತ ಮಂಗಳೂರು’ ನಿರ್ಮಾಣಕ್ಕೆ ಬದ್ಧರಾಗೋಣ: ಸಂಸದ ಕ್ಯಾ. ಚೌಟ ಕರೆ.

ಮಂಗಳೂರು: ಮಂಗಳೂರು ಕೇವಲ ನಮ್ಮ ನೆಲವಲ್ಲ, ಇದು ಸನಾತನ ಸಂಸ್ಕೃತಿಯ ನೆಲೆಬೀಡು ಮತ್ತು ನಮ್ಮ ತುಳುನಾಡಿನ ಅಸ್ಮಿತೆ. ಹೀಗಿರುವಾಗ, ದಕ್ಷಿಣ ಕನ್ನಡ ಜಿಲ್ಲೆಯ ತಪ್ಪು ಅಭಿಪ್ರಾಯ-ಅಪಪ್ರಚಾರ ಹುಟ್ಟು ಹಾಕುವ ಪಟ್ಟಭದ್ರ ಹಿತಾಸಕ್ತಿಗಳ ವಿರುದ್ಧ ಹೋರಾಡುವ ಜೊತೆಗೆ, ಸ್ಥಳೀಯರ ಪಾಲ್ಗೊಳ್ಳುವಿಕೆಯೊಂದಿಗೆ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕನಸಿನಂತೆ ನಮ್ಮ ‘ಮಂಗಳೂರು ೨.೦ ಹಾಗೂ ‘ವಿಕಸಿತ ಮಂಗಳೂರು’ ನಿರ್ಮಾಣ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ದಕ್ಷಿಣ ಕನ್ನಡ ಸಂಸದ ಹಾಗೂ ಮಂಗಳೂರು ಕಂಬಳ ಸಮಿತಿ ಅಧ್ಯಕ್ಷ ಕ್ಯಾ. ಬ್ರಿಜೇಶ್ ಚೌಟ ಕರೆ ನೀಡಿದ್ದಾರೆ. ಬಂಗ್ರಕೂಳೂರಿನ ಗೋಲ್ಡ್‌ಫಿಂಚ್‌ ಸಿಟಿಯಲ್ಲಿ ನಡೆದ ಒಂಬತ್ತನೇ ವರ್ಷದ ‘ಮಂಗಳೂರು ಕಂಬಳ’ದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿ, ನಮ್ಮ ನೆಲದ ಭವಿಷ್ಯವನ್ನು ನಮ್ಮವರೇ ರೂಪಿಸಬೇಕು ಮತ್ತು ಇಲ್ಲಿನ ಅಭಿವೃದ್ಧಿಯಲ್ಲಿ ಸ್ಥಳೀಯರ ಪಾಲ್ಗೊಳ್ಳುವಿಕೆ ಅತ್ಯಗತ್ಯ. 8 ವರ್ಷದ ಹಿಂದೆ ಆರಂಭಗೊಂಡ ಈ ಕಂಬಳ ತುಳುನಾಡಿನ ಎಲ್ಲ ವರ್ಗದವರು, ಸಮುದಾಯದವರನ್ನು ಒಂದಾಗಿ ಜೋಡಿಸುವಲ್ಲಿ ಯಶಸ್ವಿಯಾಗಿದೆ. 9ನೇ ವರ್ಷದ ಈ ಕಂಬಳವನ್ನು ನವವಿಧ-ನವವರ್ಷದ ಕಾರ್ಯಕ್ರಮಗಳೊಂದಿಗೆ ಮಂಗಳೂರು ಕಂಬಳವನ್ನು ಅರ್ಥಪೂರ್ಣವಾಗಿ ಆಯೋಜಿಸಲಾಗಿದೆ ಎಂದು ಹೇಳಿದ್ದಾರೆ.ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ಅಧ್ಯಕ್ಷರಾದ ಚಿತ್ತರಂಜನ್ ಅವರು ದೀಪಪ್ರಜ್ವಲನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ, ಕಟೀಲು ದುರ್ಗಾಪರಮೇಶ್ವರಿ ದೇವಳದ ಅರ್ಚಕ ಅನಂತ ಪದ್ಮನಾಭ ಅಸ್ರಣ್ಣ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಕ್ಯಾ. ಗಣೇಶ್ ಕಾರ್ಣಿಕ್, ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷರಾದ ತುಕರಾಮ್ ಪೂಜಾರಿ, ವಿಧಾನ ಪರಿಷತ್‌ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ಸುನಿಲ್ ಆಚಾರ್, ವಿನೋದ್ ಶೆಣೈ, ಪ್ರಸಾದ್ ಕುಮಾರ್ ಶೆಟ್ಟಿ, ಜಯಾನಂದ್ ಅಂಚನ್, ಕದ್ರಿ ನವನೀತ್ ಶೆಟ್ಟಿ, ಅನಿಲ್ ಕುಮಾರ್, ಮನೋಹರ್ ಜೋಷಿ, ಕಿರಣ್ ಕುಮಾರ್ ಕೋಡಿಕಲ್, ಶಕೀಲಾ ಖಾವ, ಸಂಧ್ಯಾ ಅಚಾರ್, ಶೋಭಾ ರಾಜೇಶ್, ಹೆಚ್.ಕೆ ಪುರುಷೋತ್ತಮ, ಪ್ರದೀಪ್ ಕುಮಾರ್ ಕಲ್ಕೂರ, ಗೋಪಾಲ್ ಕುತ್ತಾರ್ ಮುಂತಾದವರು ಉಪಸ್ಥಿತರಿದ್ದರು.ಕಂಬಳದ ನೆಲದಲ್ಲಿ ವಂದೇ ಮಾತರಂವಂದೇ ಮಾತರಂ ಗೀತೆಗೆ 150 ವರ್ಷ ತುಂಬಿದ ಸಂಭ್ರಮಕ್ಕಾಗಿ, ಶ್ವೇತವಸ್ತ್ರ ಧರಿಸಿದ 150 ವಿದ್ಯಾರ್ಥಿನಿಯರು ಕೆಸರು ಗದ್ದೆಯ ಬದಿಯಲ್ಲಿ ನಿಂತು ಏಕಕಂಠದಿಂದ ಈ ಗೀತೆಯನ್ನು ಹಾಡತೊಡಗಿದಾಗ ಇಡೀ ಪರಿಸರವೇ ದೇಶಭಕ್ತಿಯನ್ನು ಮೊಳಗಿಸುವಂತೆ ಮಾಡಿತು.ತುಳುನಾಡಿನ ಮಣ್ಣಿನ ವಾಸನೆ ಮತ್ತು ತಾಯಿ ಭಾರತಾಂಬೆಯ ಸ್ತುತಿ ಒಂದಾದ ಆ ಕ್ಷಣ, ನೆರೆದಿದ್ದ ಪ್ರತಿಯೊಬ್ಬರ ಮೈ-ಮನಗಳಲ್ಲಿ ದೇಶಪ್ರೇಮದ ಅಲೆ ಎಬ್ಬಿಸಿತು. ಜಾನಪದ ಕ್ರೀಡೆಯ ಅಬ್ಬರದ ನಡುವೆ ಕೇಳಿಬಂದ ಆ ಸುಮಧುರ ಗಾಯನ, ನಮ್ಮ ಮಣ್ಣಿನ ಸಂಸ್ಕೃತಿ ಮತ್ತು ರಾಷ್ಟ್ರೀಯತೆಯ ಅಪೂರ್ವ ಸಂಗಮವಾಗಿ ‘ನವ ವೈವಿಧ್ಯ’ದ ಶ್ರೇಷ್ಠತೆಯನ್ನ ಸಾರಿತು. ನವವಿಧ-ನವವರ್ಷವೀರ ವನಿತೆ ರಾಣಿ ಅಬ್ಬಕ್ಕ ಚರಿತ್ರೆಯ ಚಿತ್ರಕಲಾ ಪ್ರದರ್ಶನ, ಪ್ರಧಾನಿಯವರ ‘ಏಕ್ ಪೆಡ್ ಮಾ ಕೆ ನಾಮ್’ ಅಭಿಯಾನದಡಿ ಗಿಡಗಳ ವಿತರಣೆ, ‘ಬ್ಯಾಕ್ ಟು ಊರು’ ಉದ್ಯಮಿಗಳಿಗೆ ಸನ್ಮಾನ ಹಾಗೂ ವೃದ್ಧಾಶ್ರಮದ ಹಿರಿಯ ಚೇತನಗಳೊಂದಿಗೆ ಸಂಭ್ರಮ ಹಂಚಿಕೊಳ್ಳುವ 5 ವಿಶಿಷ್ಟ ಚಟುವಟಿಕೆಗಳು ಈ ಬಾರಿಯ ಮಂಗಳೂರು ಕಂಬಳದ ವಿಶೇಷ. ಇದರೊಂದಿಗೆ ಮಕ್ಕಳಿಗಾಗಿ ‘ರಂಗ್‌ ದ ಕೂಟ’ ಚಿತ್ರಕಲೆ, ಫೋಟೋಗ್ರಫಿ, ರೀಲ್ಸ್ ಹಾಗೂ ತಾಂತ್ರಿಕತೆಯ ಮೆರುಗು ನೀಡುವ ‘AI ಕ್ರಿಯೇಟಿವ್ ಯೋಧ’ ಸೇರಿದಂತೆ ನಾಲ್ಕು ವೈವಿಧ್ಯಮಯ ಸ್ಪರ್ಧೆಗಳು ಕಂಬಳದ ಗತ್ತು-ಗಮ್ಮತ್ತನ್ನು ಮತ್ತಷ್ಟು ಹೆಚ್ಚಿಸಿತ್ತು.

ಪ್ರಾದೇಶಿಕ ವಾರ್ತೆಗಳು

ಸಂಸದ ಕ್ಯಾ. ಚೌಟ ಅವರ ಬ್ಯಾಕ್‌ ಟು ಊರು ಪರಿಕಲ್ಪನೆಗೆ ಬಿ.ವೈ. ವಿಜಯೇಂದ್ರ ಮೆಚ್ಚುಗೆ. ತುಳುನಾಡಿಗೆ ಕೊಡುಗೆ ನೀಡಿದ ಉದ್ಯಮಿಗಳನ್ನು ಮಂಗಳೂರು ಕಂಬಳದಲ್ಲಿ ಗೌರವಿಸಿರುವುದು ಅರ್ಥಪೂರ್ಣ

ಮಂಗಳೂರು: ಗ್ರಾಮೀಣ ಸೊಗಡಿನ ಕಂಬಳವನ್ನು ನಗರಕ್ಕೆ ಪರಿಚಯಿಸಿದಂತೆ, ಜಗತ್ತಿನಾದ್ಯಂತ ಹರಡಿರುವ ಮಂಗಳೂರಿನ ಪ್ರತಿಭೆಗಳು ತಾಯ್ನಾಡಿಗೆ ಕೊಡುಗೆ ನೀಡಲು ಇಲ್ಲಿ ಉದ್ಯಮ ಸ್ಥಾಪಿಸುವಂತೆ ಹುರಿದುಂಬಿಸುವ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ ‘ಬ್ಯಾಕ್ ಟು ಊರು’ ಪರಿಕಲ್ಪನೆ ಅತ್ಯಂತ ವಿಭಿನ್ನ ಹಾಗೂ ಶ್ಲಾಘನೀಯವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ಹೇಳಿದ್ದಾರೆ. ಬಂಗ್ರಕೂಳೂರಿನ ಗೋಲ್ಡ್‌ಪಿಂಚ್‌ ಸಿಟಿಯ ರಾಮ-ಲಕ್ಷ್ಮಣ ಜೋಡುಕರೆಯಲ್ಲಿ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ ನೇತೃತ್ವದಲ್ಲಿ ನಡೆದ ನವ ವರ್ಷದ ನವವಿಧದ 9ನೇ ವರ್ಷದ ಕಂಬಳದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಂಬಳ ಎನ್ನುವುದು ಕೇವಲ ಗ್ರಾಮೀಣ ಒಂದು ಜಾನಪದ ಕ್ರೀಡೆಯಲ್ಲ. ಈ ಕಂಬಳವು ತುಳುನಾಡಿನ ಅಸ್ಮಿತೆಯ ಪ್ರತೀಕ. ಇಂಥಹ ಕಂಬಳ ವೇದಿಕೆಯಲ್ಲಿ ಕ್ಯಾ. ಚೌಟ ಅವರು ತಮ್ಮ ಬ್ಯಾಕ್‌ ಟು ಊರು ಪರಿಕಲ್ಪನೆಯಡಿ ತಾಯ್ನಾಡಿಗೆ ವಾಪಸ್ಸಾಗಿ ಈ ತುಳುನಾಡಿಗೆ ಕೊಡುಗೆ ನೀಡುತ್ತಿರುವ ಕರಾವಳಿ ಭಾಗದ ಯಶಸ್ವಿ ಉದ್ಯಮಿಗಳನ್ನು ಗುರುತಿಸಿ ಅಂಥಹ ಸಾಧಕರನ್ನು ಗೌರವಿಸುತ್ತಿರುವುದು ಕೂಡ ಪ್ರಶಂಸನೀಯ ಹಾಗೂ ಮಾದರಿಯ ನಡೆ ಎಂದು ಅವರು ಹೇಳಿದ್ದಾರೆ.ಕ್ಯಾ. ಬ್ರಿಜೇಶ್‌ ಚೌಟ ಅವರು ಕಳೆದ 8 ವರ್ಷಗಳಿಂದ ಮಂಗಳೂರು ಕಂಬಳವನ್ನು ಬಹಳ ವ್ಯವಸ್ಥಿತವಾಗಿ ಆಯೋಜಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ ವಿಚಾರ. ಗ್ರಾಮೀಣ ಭಾಗದ ಜನರಂತೆ ಪ್ರಸ್ತುತ ನಗರ ಭಾಗದಲ್ಲಿಯೂ ಕಂಬಳದ ಸದ್ದು ಮೊಳಗುತ್ತಿದ್ದರೆ ಅದಕ್ಕೆ ಕ್ಯಾ. ಬ್ರಿಜೇಶ್‌ ಚೌಟ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಈ ಮಂಗಳೂರು ಕಂಬಳದ ಕೊಡುಗೆ ಗಮನಾರ್ಹವಾದದ್ದು ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಕಂಬಳ ಸಮಿತಿಯ ಅಧ್ಯಕ್ಷರು ಹಾಗೂ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಮಾತನಾಡಿ, ತುಳುನಾಡಿನ ಕಲೆ ಹಾಗೂ ಸಾಂಸ್ಕೃತಿಕ ಅಸ್ಮಿತೆಯನ್ನು ಮುಂದಿನ ಜನಾಂಗಕ್ಕೂ ಪರಿಚಯಿಸಲು ಈ ಕಂಬಳವನ್ನು ನಡೆಸಲಾಗುತ್ತಿದೆ. ಈ ಬಾರಿ ರಾಷ್ಟ್ರ ಜಾಗೃತಿಯ ಕಾರ್ಯಕ್ರಮ, ಬ್ಯಾಕ್‌ ಟು ಊರು ಸೇರಿದಂತೆ ನವ-ವಿಧ ಕಾರ್ಯಕ್ರಮಗಳ ಮೂಲಕ ಮಂಗಳೂರು ಕಂಬಳವನ್ನು ಮತ್ತಷ್ಟು ಅರ್ಥಪೂರ್ಣಗೊಳಿಸುವ ಪ್ರಯತ್ನ ಮಾಡಿರುವುದಾಗಿ ಹೇಳಿದರು. ಬ್ಯಾಕ್‌ ಟು ಊರು ಉದ್ಯಮಿಗಳಿಗೆ ಸನ್ಮಾನದೇಶ-ವಿದೇಶದಲ್ಲಿ ಉದ್ಯಮ ಅಥವಾ ಉದ್ಯೋಗದಲ್ಲಿ ಉನ್ನತ ಹುದ್ದೆಯಲ್ಲಿ ನೆಲೆಸಿದ್ದವರು ವಾಪಾಸ್‌ ತಾಯ್ನಾಡಿಗೆ ಬಂದು ಸ್ವಂತ ಉದ್ಯಮ ಕಟ್ಟಿ ಬೆಳೆಸಿ ಸ್ಥಳೀಯರಿಗೆ ಉದ್ಯೋಗಾವಕಾಶ ನೀಡಿರುವ ಯಶಸ್ವಿ 10 ಉದ್ಯಮಿಗಳನ್ನು ಗುರುತಿಸಿ ಗೌರವಿಸಿರುವುದು ಬ್ಯಾಕ್‌ ಟು ಊರಿಗೆ ಮತ್ತಷ್ಟು ಮಂಗಳೂರಿಗರು ಹಿಂದಿರುಗಲು ಪ್ರೇರಣೆ ನೀಡಿರುವುದು ಈ ಬಾರಿಯ ಮಂಗಳೂರು ಕಂಬಳದ ಬಹಳ ವಿಶೇಷತೆಯಾಗಿದೆ.ಅದರಂತೆ ಮಂಗಳೂರಿನಲ್ಲಿ ಇಜಿ ಕಂಪೆನಿಯ ಆಪರೇಷನ್‌ ಆರಂಭಿಸಿ ಸಾಕಷ್ಟು ಉದ್ಯೋಗಾವಕಾಶ ನೀಡಿರುವ ಆನಂದ್‌ ಫೆರ್ನಾಂಡೀಸ್‌, ಮಂಗಳೂರಿನ ಎಸ್‌ಇಝೆಡ್‌ನಲ್ಲಿ ಸುಸ್ಥಿರ ಕಟ್ಟಡ ಸಾಮಗ್ರಿಗಳ ಘಟಕ ಸ್ಥಾಪಿಸಿರುವ ಎಂಐಆರ್‌ ಗ್ರೂಪ್‌ನ ಕಾರ್ಯನಿರ್ವಾಹಕ ನಿರ್ದೇಶಕ ನಿತಿನ್‌ ರತ್ನಾಕರ್‌, ಮಂಗಳೂರಿನ ಎಸ್‌ಇಝೆಡ್‌ನಲ್ಲಿ ಇಟ್ಯಾಗ್‌ ಎನರ್ಜಿಟೆಕ್ನಿಕ್‌ ಪ್ರೈವೆಟ್‌ ಲಿ.ನ ಉತ್ಪಾದನಾ ಘಟನೆ ಸ್ಥಾಪಿಸುತ್ತಿರುವ ಬ್ರೂನೋ ಮಾರ್ಸೆಲ್‌ ಪ್ರಕಾಶ್‌ ಪೆರೇರಾ, ಶೆಫ್‌ ಹಾಗೂ ಉದ್ಯಮಿಯಾಗಿರುವ ಶ್ರೀಯಾ ಶೆಟ್ಟಿ, ಅಗ್ರಿಲೀಫ್‌ ಮೂಲಕ ಗ್ರಾಮೀಣ ಭಾಗದಲ್ಲಿ ಸುಸ್ಥಿರ ಉತ್ಪಾದನಾ ಕಂಪೆನಿ ಸ್ಥಾಪಿಸಿರುವ ಅವಿನಾಶ್‌ ರಾವ್‌, ಇಂಡಸ್ಟ್ರೀಯಲ್‌ ಅಟೋಮೇಷನ್‌ & ಡಿಜಿಟಲ್‌ ಟೆಕ್ನಾಲಜೀಸ್‌ ಮೂಲಕ ಮಂಗಳೂರಿಗೆ ಕೊಡುಗೆ ನೀಡಿರುವ ಸ್ಮಿತಾ ರಾವ್‌, ಬೋಸ್ ಫ್ರೊಫೆಷನಲ್ಸ್‌ನ ಇಂಡಿಯಾ ಆರ್‌ಅಂಡ್‌ಡಿ ಸೆಂಟರ್‌ನ್ನು ಮಂಗಳೂರಿನಲ್ಲಿ ಸ್ಥಾಪಿಸಿರುವ ನಮಿತಾ ಪಿ.ಪಿ., ಹೈದರಬಾದ್‌ನಿಂದ ಎಂಎನ್‌ಸಿ ಕಂಪೆನಿ ಕೆಲಸ ಬಿಟ್ಟುಬಂದು ಮಂಗಳೂರಿನಲ್ಲಿ ಡೀನೆಟ್‌ ಸರ್ವೀಸಸ್‌ ಪ್ರೈ.ಲಿ. ಮೂಲಕ ಇಂಟರ್‌ನೆಟ್‌ ಸೇವೆ ಒದಗಿಸಿ ನೂರಾರು ಮಂದಿಗೆ ಉದ್ಯೋಗ ನೀಡಿರುವ ಸಂದೇಶ್‌ ಡಿ. ಪೂಜಾರಿ, ಉದ್ಯಮಿಯಾಗಿ ಎಸ್‌ಎನ್‌ ಪೂಂಜಾ & ಕೋ. ಮೂಲಕ ಮಂಗಳೂರು ನಗರದಲ್ಲಿ ಕದ್ರಿ ಪಾರ್ಕ್‌ ಅಭಿವೃದ್ಧಿ ಸೇರಿ ವಿವಿಧ ವೆಂಚರ್‌ಗಳನ್ನು ಮಾಡಿರುವ ಸುಧಾಕರ್‌ ಪೂಂಜಾ, ಸೌದಿ ಅರೇಬಿಯಾ ಸೇರಿ ಹಲವೆಡೆ ಇಂಡಿಪೆಂಡೆಂಟ್‌ ಇನ್ನೋವೇಷನ್‌ ಎಂಬ ಕಂಪೆನಿ ಮೂಲಕ ತಮ್ಮ ಉದ್ಯಮವನ್ನು ಮಂಗಳೂರಿಗೆ ವಿಸ್ತರಿಸಿರುವ ಅನ್ಸಾರಿ ಅಲಿ ಅವರನ್ನು ಕಂಬಳ ವೇದಿಕೆಯಲ್ಲಿ ಸನ್ಮಾನಿಸಲಾಯಿತು.ಕಂಬಳಕ್ಕೆ ಮೆರುಗು ತಂದ ಮೇರಿ ಕೋಮ್‌ವಿಶ್ವ ಬಾಕ್ಸಿಂಗ್‌ ಚಾಂಪಿಯನ್‌ ಮೇರಿ ಕೋಮ್‌ ಅವರು ಮಂಗಳೂರು ಕಂಬಳದಲ್ಲಿ ಪಾಲ್ಗೊಂಡು ಕರಾವಳಿಯ ಈ ಜಾನಪದ ಕ್ರೀಡೆಯನ್ನು ಪ್ರೋತ್ಸಾಹಿಸಿದ್ದಾರೆ. ಈ ವೇಳೆ ಅವರಿಗೆ ಕಂಬಳದ ಬೆತ್ತ ಹಾಗೂ ಕಂಬಳ ಕೋಣಗಳ ಸ್ಮರಣಿಕೆ ನೀಡಿ ಗೌರವಿಸಲಾಯಿತು. ನಾನು ಇದೇ ಮೊದಲ ಬಾರಿಗೆ ನೇರವಾಗಿ ಕಂಬಳವನ್ನು ನೋಡುತ್ತಿದ್ದು, ಬಹಳ ಖುಷಿ ನೀಡಿದೆ. ನಿಜಕ್ಕೂ ಇದೊಂದು ಅಪರೂಪವಾದ ಕ್ರೀಡಾ ಸಂಭ್ರಮ ಎಂದು ಮಂಗಳೂರು ಕಂಬಳವನ್ನು ಬಣ್ಣಿಸಿದ್ದಾರೆ.ಕಂಬಳ ಸಮಿತಿಯ ಗೌರವಾಧ್ಯಕ್ಷ ಡಾ.ಕೆ. ಪ್ರಕಾಶ್‌ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್‌ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಹರೀಶ್‌ ಪೂಂಜಾ, ವೇದವ್ಯಾಸ ಕಾಮತ್‌, ಭಾಗೀರಥಿ ಮುರುಳ್ಯ, ಡಾ.ವೈ. ಭರತ್‌ ಶೆಟ್ಟಿ, ರಾಜೇಶ್‌ ನಾೖಕ್‌, ಗುರುರಾಜ ಗಂಟಿಹೊಳೆ, ವಿಧಾನ ಪರಿಷತ್‌ ಸದಸ್ಯರಾದ ಪ್ರತಾಪ ಸಿಂಹ ನಾಯಕ್‌, ಕಿಶೋರ್‌ ಕುಮಾರ್‌ ಬೊಟ್ಯಾಡಿ, ಮಾಜಿ ಸಚಿವರಾದ ಪ್ರಮೋದ್‌ ಮಧ್ವರಾಜ್‌, ಬಿ.ನಾಗರಾಜ ಶೆಟ್ಟಿ, ಪ್ರಮುಖರಾದ ಶಶಿಧರ ಶೆಟ್ಟಿ ಬರೋಡಾ ಸೇರಿದಂತೆ ಹಲವು ಉದ್ಯಮಿಗಳು, ಗಣ್ಯರು, ಜನನಾಯಕರು ಭಾಗವಹಿಸಿದ್ದರು.

ಪ್ರಾದೇಶಿಕ ವಾರ್ತೆಗಳು

ಶ್ರೀಲಂಕಾ ಪತ್ರಕರ್ತರ ನಿಯೋಗದಿಂದ ವಿಧಾನ ಸಭಾಧ್ಯಕ್ಷ ಯು ಟಿ ಖಾದರ್ ಭೇಟಿ, ಶ್ರೀಲಂಕಾಕ್ಕೆ ಅಹ್ವಾನ

ಮಂಗಳೂರು, ಮಂಗಳೂರಿಗೆ ಆಗಮಿಸಿದ ಶ್ರೀಲಂಕಾ ಪತ್ರಕರ್ತರ ನಿಯೋಗ ಕರ್ನಾಟಕ ವಿಧಾನ ಸಭೆಯ ಸಭಾಪತಿ ಯು ಟಿ ಖಾದರ್ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಚರ್ಚಿಸಿತು. ಅಲ್ಲದೆ ಶ್ರೀಲಂಕಾಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿದರು.ಈ ವೇಳೆ ಮಾತನಾಡಿದ ಸ್ಪೀಕರ್ ಯು ಟಿ ಖಾದರ್ ಭಾರತ ಹಾಗೂ ಶ್ರೀ ಲಂಕಾ ಹಿಂದಿನಿಂದಲೂ ಬಹಳಷ್ಟು ಉತ್ತಮ ಸಂಬಂಧ ಹೊಂದಿದೆ. ಮುಂದಿನ ದಿನಗಳಲ್ಲಿ ಶಾಸಕರೊಂದಿಗೆ ಶ್ರೀ ಲಂಕಾಕ್ಕೆ ಭೇಟಿ ನೀಡುವುದಾಗಿ ನಿಯೋಗಕ್ಕೆ ತಿಳಿಸಿದರು. ಕರ್ನಾಟಕ ಪ್ರವಾಸದಲ್ಲಿರುವ ಶ್ರೀ ಲಂಕಾ ಪತ್ರಕರ್ತರ ನಿಯೋಗವನ್ನು ವಿಧಾನ ಸೌಧಕ್ಕೆ ಭೇಟಿ ನೀಡುವಂತೆ ಸ್ಪೀಕರ್ ಅಹ್ವಾನ ನೀಡಿದರು.ನಿಯೋಗದಲ್ಲಿ ಏಷ್ಯಾನ್ ಮೀಡಿಯಾ ಮತ್ತು ಕಲ್ಚರಲ್ ಅಸೋಸಿಯೇಷನ್ ಅಧ್ಯಕ್ಷ ಪ್ಯಾಟ ಮ್ ಪ್ಯಾಸ್ತುಲ್,ಶ್ರೀ ಲಂಕಾ ಪ್ರಧಾನಿ ಕಚೇರಿ ಮಾಜಿ ಮಾಧ್ಯಮ ಕಾರ್ಯದರ್ಶಿ ನಿಶಾಂತ್ ಅಲ್ವಿಸ್,ಶ್ರೀಲಂಕಾ ಹಿರಿಯ ಪತ್ರಕರ್ತರಾದ ಸಂಜೀವ ತಿಸೆರಾ,ಹೇಮಂತ್ ಕುಮಾರ್ ಸಿಂಘೆ,ದಾಮಿಸಿರಿ ಅಜಿತ್,ತುಷಾರ ಹೆಟ್ಟಿರಾಚಿ , ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ರಾಜ್ಯ ಕಾರ್ಯಕಾರಿಣಿ ಸದಸ್ಯ ಶ್ರೀನಿವಾಸ್ ನಾಯಕ್ ಇಂದಾಜೆ ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ಪೌರ ಕಾರ್ಮಿಕರ ಸ್ವಚ್ಛತಾ ಸೇವೆ ರಾಷ್ಟ್ರ ಸೇವೆ ಮತ್ತು ದೇವತಾ ಕಾರ್ಯಕ್ಕೆ ಸಮಾನ: ಪ್ರಭಾಕರ ಪ್ರಭು

ದೇಶದಲ್ಲಿರುವ ನಗರಾಡಳಿತ ಸ್ಥಳೀಯ ಸಂಸ್ಥೆಗಳಲ್ಲಿ ಸ್ವಚ್ಛತಾ ಸೇವೆ ಸಲ್ಲಿಸುತ್ತಿರುವ ಪೌರ ಕಾರ್ಮಿಕರ ಸೇವೆ ರಾಷ್ಟ್ರ ಸೇವೆಗೆ ಮತ್ತು ದೇವತಾ ಕಾರ್ಯಕ್ಕೆ ಸಮಾನ ವಾಗಿದ್ದು, ಯಾವುದೇ ತೊಡಕುಗಳಿಲ್ಲದೇ ಅತ್ಯಂತ ಸ್ವಚ್ಛಂದವಾಗಿ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಈ ವರ್ಷದಲ್ಲಿ ಜರಗಿದ ಮಹಾ ಕುಂಭಮೇಳ ಸಾಕ್ಷೀಯಾಗಿದ್ದು ಇಲ್ಲಿ ಪೌರ ಕಾರ್ಮಿಕರ ಸೇವೆಯೇ ನಿದರ್ಶನವಾಗಿದೆ. ಈ ನಿಟ್ಟಿನಲ್ಲಿ ಸಮಾಜದಲ್ಲಿನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿರುವವರನ್ನು ಗುರುತಿಸಿ ಗೌರವಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ.ಸ್ವಾತಂತ್ರ ಹೋರಾಟಗಾರ ವೀರ ಸಾವರ್ಕರ್ ರವರ ಜೀವನ ಚರಿತ್ರೆಯನ್ನು ಉಪನ್ಯಾಸ ಮೂಲಕ ಸಮಾಜಕ್ಕೆ ನೀಡಿ, ಸೇವಕರಿಗೆ ಗೌರವಿಸುವಲ್ಲಿ ಮಾತೃ ಭೂಮಿ ಸೇವಾ ಸಂಘ ನಾವೂರು ಜೆಲ್ಲೆಯ ಸಂಘ ಸಂಸ್ಥೆ ಗಳಿಗೆ ಮಾದರಿ ಯಾಗಿದೆ ಎಂದು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಪ್ರಭಾಕರ ಪ್ರಭು ಅಭಿಪ್ರಾಯ ವ್ಯಕ್ತ ಪಡಿಸಿದರು.ಇವರು ಸತ್ಯದೇವತಾ ಸಭಾಂಗಣ ಕಣಪಾದೆಯಲ್ಲಿ ನಡೆದ ಮಾತೃಭೂಮಿ ಸೇವಾ ಸಂಘ ‌ನಾವೂರು ಇದರ ದ್ವೀತಿಯ ವರುಷದ ವಾರ್ಷಿಕೋತ್ಸವ ಹಾಗೂ ಪೌರ ಕಾರ್ಮಿಕರನ್ನು ಗೌರವಿಸುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಸಮಾಜ ಸೇವಕರಾದ ರವಿ ಕಟಪಾಡಿ ಹಾಗೂ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನ ಮುಖ್ಯಸ್ಥರಾದ ಅರ್ಜುನ್ ಭಂಡಾರ್ಕರ್ಉದ್ಘಾಟನಾ ಕಾರ್ಯಕ್ರಮ ನೆರವೇರಿಸಿದರು.ಸಾಮಾಜಿಕ ಮುಖಂಡರು ಖಾಲಿದ್ ನಂದಾವರ ಅಧ್ಯಕ್ಷತೆ ವಹಿಸಿದ್ದರು.ಶ್ರೀ ಅಶ್ವಥ್ ಬರಿಮಾರು ಸಾರ್ವಕರ್ ಹಾಗೂ ರಾಷ್ಟ್ರೀಯತೆ ವಿಷಯದ ವಿಚಾರ ಮಂಡನೆ ಮಾಡಿದರು. ಶ್ರೀ ಗಣೇಶ್ ಯುವ ಶಕ್ತಿ ಸೇವಾ ಪಥ ಇವರು ಅತಿಥಿಯಾಗಿದ್ದುನಾವೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಇಂದಿರಾ ಸತ್ಯ ದೇವತೆ ಗೆಳೆಯರ ಬಳಗ ಕಣಪಾದೆಯ ಅಧ್ಯಕ್ಷರಾದ ಸದಾನಂದ ಹಳೆಗೇಟು ಮಾತೃಭೂಮಿ ಸಂಘದ ಅಧ್ಯಕ್ಷರಾದ ಸಂತೋಷ್ ಕೋಟ್ಯಾನ್ ಎಕ್ಕುಡೇಲು ಹಾಗೂ ಪಂಚಾಯತ್ ಸದಸ್ಯರಾದ ವಿಜಯ್ ಉಪಸ್ಥಿತಿ ಇದ್ದರು.ಪೌರ ಕಾರ್ಮಿಕರ ಜೊತೆಗೆ, ಮಾಜಿ ಸೈನಿಕರನ್ನು ಹಾಗೂ ಸಮಾಜ ಸೇವಕರನ್ನು ವೈದ್ಯರು ಹಾಗೂ ದಾದಿಯರನ್ನು ಈ ಸಂಧರ್ಭದಲ್ಲಿ ಸನ್ಮಾನಿಸಲಾಯಿತು.ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸತ್ಯ ದೇವತೆ ನೃತ್ಯ ಕಲಾ ತಂಡದ ವತಿಯಿಂದ ಮಾತೃಭೂಮಿಗೆ ನಮನ ಕಾರ್ಯಕ್ರಮ ಹಾಗೂ ಸ್ಪಂದನ ಕಲಾವಿದರ್ ಬಂಟ್ವಾಳ ಇವರಿಂದ ಜಾಗೃತಿಯ ಸಂದೇಶ ಸಾರುವ ಸಾದಿ ತಿಕ್ಕುಜಿ ನಾಟಕ ಪ್ರದರ್ಶನಗೊಂಡಿತು.ಜಗದೀಶ್ ‌ಕಕ್ಕಿಂಜಿ ಇವರು ಪ್ರಾರ್ಥಿಸಿ, ಸಂಘ ನಿರ್ದೇಶಕರಾದ ಸುರೇಶ್. ಎಸ್ ನಾವೂರು ಸ್ವಾಗತಿಸಿ ಕಾರ್ಯದರ್ಶಿ ‌ಲೋಹಿತ್ .ಕೆ.ವಂದಿಸಿದರು.ಎಂ.ಕೆ..ಕನ್ಯಾಡಿ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ಬಂಗ್ರ ಕೂಳೂರು, ಮಂಗಳೂರು “ರಾಮ – ಲಕ್ಷ್ಮಣ” ಜೋಡುಕರೆ ಕಂಬಳ ಕೂಟದ ಫಲಿತಾoಶ- 27 – 12 – 2025 )

ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :ಕನೆಹಲಗೆ: 09 ಜೊತೆಅಡ್ಡಹಲಗೆ: 10 ಜೊತೆಹಗ್ಗ ಹಿರಿಯ: 17 ಜೊತೆನೇಗಿಲು ಹಿರಿಯ: 26 ಜೊತೆಹಗ್ಗ ಕಿರಿಯ: 19 ಜೊತೆನೇಗಿಲು ಕಿರಿಯ: 60 ಜೊತೆಒಟ್ಟು ಕೋಣಗಳ ಸಂಖ್ಯೆ: 141 ಜೊತೆ•••••••••••••••••••••••••••••••••••••••••••••• ಅಡ್ಡ ಹಲಗೆ: ಪ್ರಥಮ: ಇರುವೈಲು ದೊಡ್ಡಗುತ್ತು ಜಗದೀಶ್ ಎಂ ಶೆಟ್ಟಿ “ಎ” (11.68)ಹಲಗೆ ಮುಟ್ಟಿದವರು:ತೆಕ್ಕಟ್ಟೆ ಸುಧೀರ್ ದೇವಾಡಿಗ ದ್ವಿತೀಯ: ನಾರ್ಯ ಗುತ್ತು ಕುವೆತ್ತಬೈಲು ಸಂತೋಷ್ ರೈ ಬೊಳ್ಯಾರು (11.83)ಹಲಗೆ ಮುಟ್ಟಿದವರು: ಬೈಂದೂರು ಮಹೇಶ್ ಪೂಜಾರಿ••••••••••••••••••••••••••••••••••••••••••••••ಹಗ್ಗ ಹಿರಿಯ: ಪ್ರಥಮ: ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ (11.41)ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ ದ್ವಿತೀಯ: ನಲ್ಲೂರು ಬಜಗೋಳಿ ಶಿವಪ್ರಸಾದ್ ನಿಲಯ ಪ್ರಾಣೇಶ್ ದಿನೇಶ್ ಭಂಡಾರಿ “ಎ” (11.50)ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ••••••••••••••••••••••••‌‌‌‌‌••••••••••••••••••••••ಹಗ್ಗ ಕಿರಿಯ: ಪ್ರಥಮ: ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ ಶೆಟ್ಟಿ “ಬಿ” (11.41)ಓಡಿಸಿದವರು: ಮಂಗಲ್ಪಾಡಿ ರಕ್ಷಿತ್ ಶೆಟ್ಟಿ ದ್ವಿತೀಯ: ಎರ್ಮಾಳ್ ಡಾ.ಚಿಂತನ್ ರೋಹಿತ್ ಹೆಗ್ಡೆ (11.62)ಓಡಿಸಿದವರು: ಮಿಜಾರ್ ಅಶ್ವಥಪುರ ಶ್ರೀನಿವಾಸ ಗೌಡ••••••••••••••••••••••••••••••••••••••••••••••ನೇಗಿಲು ಹಿರಿಯ: ಪ್ರಥಮ: ಎಂಬತ್ತು ಬಡಗಬೆಟ್ಟು ಕಲ್ಲಪಾಪು ಶ್ರೀಕ ಸಂದೀಪ್ ಶೆಟ್ಟಿ (10.87)ಓಡಿಸಿದವರು: ಕುಂದ ಬಾರಂದಡಿ ಮಾಸ್ತಿಕಟ್ಟೆ ಸ್ವರೂಪ್ ದ್ವಿತೀಯ: ಮಂಗಳೂರು ಮರಕಡ ಬಾಯಾಡಿ ಮನೆ ಶಾಂತ ಸಂಜಯ್ ಶೆಟ್ಟಿ “ಎ” (11.44)ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ••••••••••••••••••••••••••••••••••••••••••••••ನೇಗಿಲು ಕಿರಿಯ: ಪ್ರಥಮ: ಎರ್ಮಾಳ್ ಪುಚ್ಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ “ಬಿ” (11.56)ಓಡಿಸಿದವರು: ಕಾವೂರುದೋಟ ಸುದರ್ಶನ್ ದ್ವಿತೀಯ: ಮುಲ್ಕಿ ಚಿತ್ರಾಪು ಸಾನದಮನೆ ಅಂಬಿಕಾ ರವೀಂದ್ರ ಪೂಜಾರಿ (11.74)ಓಡಿಸಿದವರು: ಬಾರಾಡಿ ನತೀಶ್ ಸಫಲಿಗ

ಪ್ರಾದೇಶಿಕ ವಾರ್ತೆಗಳು

ಶ್ರೀಲಂಕಾ ನಿಯೋಗ ಮಂಗಳೂರು ಪ್ರೆಸ್ ಕ್ಲಬ್‌ಗೆ ಭೇಟಿ. ಭಾರತ -ಶ್ರೀಲಂಕಾ ಮಧ್ಯೆ ಅವಿನಾಭಾವ ಸಂಬಂಧ: ಶ್ರೀಲಂಕಾ ಪ್ರಧಾನಿ ಕಚೇರಿಯ ಮಾಜಿ ಮಾಧ್ಯಮ ಕಾರ್ಯದರ್ಶಿ ನಿಶಾಂತ ಆಲ್ವಿಸ್

ಮಂಗಳೂರು: ಶ್ರೀಲಂಕಾದ ಆರ್ಥಿಕ ಸಚಿವಾಲಯದ ಮಾಜಿ ಮಾಧ್ಯಮ ಕಾರ್ಯದರ್ಶಿ, ಏಷ್ಯನ್ ಮೀಡಿಯಾ ಮತ್ತು ಕಲ್ಚರಲ್ ಅಸೋಸಿಯೇಷನ್ ಅಧ್ಯಕ್ಷ ಪ್ಯಾಟಮ್ ಪ್ಯಾಸ್ಕುೃಲ್ ನೇತ್ರತ್ವದ ಶ್ರೀಲಂಕಾದ ಅಧಿಕಾರಿಗಳ ಹಾಗೂ ಪತ್ರಕರ್ತರ ನಿಯೋಗ ಶನಿವಾರ ಮಂಗಳೂರು ಪ್ರೆಸ್ ಕ್ಲಬ್‌ಗೆ ಭೇಟಿ ನೀಡಿತು.ಪತ್ರಕರ್ತರ ಜತೆ ಸಂವಾದ ನಡೆಸಿದ ನಿಯೋಗದ ಸದಸ್ಯ ಶ್ರೀಲಂಕಾ ಪ್ರಧಾನಿ ಕಚೇರಿಯ ಮಾಜಿ ಮಾಧ್ಯಮ ಕಾರ್ಯದರ್ಶಿ ನಿಶಾಂತ ಆಲ್ವಿಸ್ ಮಾತನಾಡಿ ‘ ಶ್ರೀಲಂಕಾಕ್ಕೆ ಸಂಕಷ್ಟ ಎದುರಿಸಿದಾಗಲೆಲ್ಲ ಭಾರತ ನೆರವಿಗೆ ಬಂದಿದೆ. ಕೊರೊನಾ, ಚಂಡಮಾರುತ , ನೆರೆ ಸಂದರ್ಭಗಳಲ್ಲಿ ಭಾರತದ ನೀಡಿದ ಸಹಾಯ ಹಸ್ತವನ್ನು ಎಂದೂ ಮರೆಯುವಂತಿಲ್ಲ. ಭಾರತ ಮತ್ತು ಶ್ರೀಲಂಕಾ ಮಧ್ಯೆ ಇರುವ ಅವಿನಾಭಾವ ಸಂಬಂಧವನ್ನು ಶಾಶ್ವತವಾಗಿ ಉಳಿಸಿಕೊಳ್ಳುವ ಜವಾಬ್ದಾರಿ ಉಭಯ ದೇಶಗಳ ಪ್ರಜೆಗಳ ಮೇಲಿದೆ ’ಎಂದರು. ಶ್ರೀಲಂಕಾದ ಹಿರಿಯ ಪತ್ರಕರ್ತರಾದ ಸಂಜೀವ ತಿಸೇರಾ, ಹೇಮಂತ ಕುಮಾರಸಿಂೆ, ದಾಮಿಸಿರಿ ಅಜಿತ್, ತುಷಾರ ಹೆಟ್ಟಿರಾಚಿ ನಿಯೋಗದ ಇತರ ಸದಸ್ಯರಾಗಿದ್ದರು. ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್., ಪ್ರಧಾನ ಕಾರ್ಯದರ್ಶಿ ರಾಜೇಶ್.ಕೆ.ಪೂಜಾರಿ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ ನಿಯೋಗದ ಸದಸ್ಯರನ್ನು ಗೌರವಿಸಿದರು. ಪತ್ರಕರ್ತರ ಸಂಘದ ಉಪಾಧ್ಯಕ್ಷರಾದ ಮಹಮ್ಮದ್ ಆರಿಫ್ ಪಡುಬಿದ್ರಿ, ವಿಲ್ಪ್ರೆಡ್ ಡಿಸೋಜಾ, ಖಜಾಂಜಿ ವಿಜಯ ಕೋಟ್ಯಾನ್, ಕಾರ್ಯದರ್ಶಿ ಸತೀಶ್ ಇರಾ, ಜೀವನ್, ದಯಾ ಕುಕ್ಕಾಜೆ, ಸಂದೀಪ್ ಕುಮಾರ್ ಎಂ, ಭಾಸ್ಕರ ರೈ ಕಟ್ಟ, ಪ್ರಣಾಮ್, ಅಭಿಜಿತ್ ಕೊಲ್ಪೆ ಉಪಸ್ಥಿತರಿದ್ದರು. ಹಿರಿಯ ಪತ್ರಕರ್ತ ರಾಮಚಂದ್ರ ಭಂಡಾರ್ಕಾರ್ ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

OBITUARY – Advocate B. L. N. Rai (94)

Veteran advocate Bellipady Laxminarayan Rai (94) passed away on Thursday, December 25, 2025, at around 10.30 p.m. at his daughter’s residence in Karangalpady, Mangaluru, following age-related illness.Professionally known as B. L. N. Rai, he studied law at Madras Law College and, after obtaining his B.A. B.L. degree, began his legal practice in Puttur in 1962, where he handled both civil and criminal cases. In his career spanning 64 years, he was widely respected for his integrity, dedication, and commitment to the legal profession. After his retirement, he donated his entire collection of law books to the newly established court at Belthangady. He was an active member of the Bar Association and had earlier served as an office bearer of Lions Club.He is survived by his sons Udayabhanu Rai and Sudesh Rai, and daughters Prof. Sharmila Rai and Dr. Sapna Sandeep. His wife, Smt. Nalini Rai, predeceased him in 2022. The last rites were performed on Friday, December 26, at 2.30 p.m. at the Kadri Crematorium

ಪ್ರಾದೇಶಿಕ ವಾರ್ತೆಗಳು

ನಿಧನ – ಹಿರಿಯ ನ್ಯಾಯವಾದಿ ಬಿ. ಎಲ್. ಎನ್. ರೈ (94)

ಪುತ್ತೂರಿನ ಖ್ಯಾತ ನ್ಯಾಯವಾದಿ ಬೆಳ್ಳಿಪ್ಪಾಡಿ ಲಕ್ಷ್ಮಿನಾರಾಯಣ ರೈ (94) ಅವರು ಡಿಸೆಂಬರ್ 25ರಂದು ಗುರುವಾರ ರಾತ್ರಿ 10.3೦ರ ಸುಮಾರಿಗೆ ಮಂಗಳೂರಿನ ಕರಂಗಲ್ಪಾಡಿಯಲ್ಲಿರುವ ತಮ್ಮ ಹಿರಿಯ ಮಗಳ ನಿವಾಸದಲ್ಲಿ ವಯೋಸಹಜ ಸಾವನ್ನಪ್ಪಿದರು.ವೃತ್ತಿಪರವಾಗಿ ಬಿ. ಎಲ್. ಎನ್. ರೈ ಎಂದೇ ಪರಿಚಿತರಾಗಿದ್ದ ಅವರು ಮದ್ರಾಸ್ ಲಾ ಕಾಲೇಜಿನಲ್ಲಿ ಕಾನೂನು ಶಿಕ್ಷಣ ಪಡೆದಿದ್ದು, ಬಿ.ಎ. ಬಿ.ಎಲ್. ಪದವಿ ಪಡೆದ ನಂತರ 1962 ರಲ್ಲಿ ಪುತ್ತೂರಿನಲ್ಲಿ ವಕೀಲ ವೃತ್ತಿಯನ್ನು ಆರಂಭಿಸಿದರು. ಅವರು ತಮ್ಮ 64ವರ್ಷಗಳ ಸುಧೀರ್ಘ ಸೇವಾವಧಿಯಲ್ಲಿ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳನ್ನು ಕೈಗೊಂಡು ವೃತ್ತಿಪರ ನಿಷ್ಠೆ, ಪ್ರಾಮಾಣಿಕತೆ ಮತ್ತು ಸಮರ್ಪಣೆಯಿಂದ ಹೆಸರು ಪಡೆದಿದ್ದರು. ನಿವೃತ್ತಿಯ ನಂತರ ಕೆಲವು ವರ್ಷಗಳ ಹಿಂದೆ ಬೆಳ್ತಂಗಡಿಯಲ್ಲಿ ಸ್ಥಾಪಿಸಲಾದ ಹೊಸ ನ್ಯಾಯಾಲಯಕ್ಕೆ ತಮ್ಮ ಸಂಪೂರ್ಣ ಕಾನೂನು ಪುಸ್ತಕ ಸಂಗ್ರಹವನ್ನು ದಾನವಾಗಿ ನೀಡಿದ್ದರು. ಅವರು ಬಾರ್ ಅಸೋಸಿಯೇಷನ್ ನ ಸಕ್ರಿಯ ಸದಸ್ಯರಾಗಿದ್ದರು ಮತ್ತು ಈ ಹಿಂದೆ ಲಯನ್ಸ್ ಕ್ಲಬ್‌ನ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.ಮೃತರು ಇಬ್ಬರು ಪುತ್ರರು (ಉದಯಭಾನು ರೈ ಮತ್ತು ಸುದೇಶ್ ರೈ), ಇಬ್ಬರು ಪುತ್ರಿಯರು (ಪ್ರೊ. ಶರ್ಮಿಳಾ ರೈ ಮತ್ತು ಡಾ. ಸಪ್ನಾ ಸಂದೀಪ್) ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಅವರ ಪತ್ನಿ ಶ್ರೀಮತಿ ನಳಿನಿ ರೈ ಅವರು 2022 ರಲ್ಲಿ ನಿಧನರಾಗಿದ್ದರು. ಡಿಸೆಂಬರ್ 26, ಶುಕ್ರವಾರ ಮಧ್ಯಾಹ್ನ 2.30ಕ್ಕೆ ಕದ್ರಿ ಸ್ಮಶಾನದಲ್ಲಿ ಅಂತ್ಯಕ್ರಿಯೆಗಳನ್ನು ನೆರವೇರಿಸಲಾಯಿತು.

ಪ್ರಾದೇಶಿಕ ವಾರ್ತೆಗಳು

ದಾಖಲೀಕರಣದಿಂದ ಸಾಧನೆಯ ನೆನಪು ಶಾಶ್ವತ-ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಟಾೃನಿ ಆಲ್ವಾರಿಸ್

ಮಂಗಳೂರು: ಸಂಘ, ಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯ ಚಟುವಟಿಕೆಗಳು ಕಾಲ ಕ್ರಮೇಣ ಮರೆತು ಹೋಗಬಹುದು. ಅವುಗಳನ್ನು ಕ್ರೋಢಿಕರಿಸಿ ಒಂದೆಡೆ ದಾಖಲೀಕರಣ ಮಾಡಿದಾಗ ಸಂಘದ ಸಾಧನೆ ಶಾಶ್ವತವಾಗಿ ಉಳಿಯುತ್ತದೆಎಂದು ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಟಾೃನಿ ಆಲ್ವಾರಿಸ್ ಹೇಳಿದರು.ಮಂಗಳೂರು ಪ್ರೆಸ್ ಕ್ಲಬ್ ಮತ್ತು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಗೃಹ ಪತ್ರಿಕೆ ‘ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರ ’ ಇದರ 7ನೇ ಸಂಚಿಕೆಯನ್ನು ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಬಿಡುಗಡೆಗೊಳಿಸಿ ಅವರು ಮಾತನಾಡಿದರು.ಕಾರ್ಯಕ್ರಮ ಉದ್ಘಾಟಿಸಿದ ಮುಖ್ಯ ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್‌ನ ಜನರಲ್ ಮ್ಯಾನೇಜರ್ ಅರುಣ್ ಪ್ರಭಾ ಮಾತನಾಡಿ ‘ ಪತ್ರಕರ್ತರು ಸಮಾಜದ ಕನ್ನಡಿಯಾಗಿದ್ದು ಅವರ ಸಂಘಟನೆಯ ಸಾಧನೆಯನ್ನು ದಾಖಲೆ ಮಾಡುವುದು ಉತ್ತಮಕಾರ್ಯ ಎಂದರು.ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು. ದ.ಕ. ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್., ಪ್ರಧಾನ ಕಾರ್ಯದರ್ಶಿ ರಾಜೇಶ್ ..ಕೆ. ಪೂಜಾರಿ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು, ಹಿರಿಯ ಪತ್ರಕರ್ತಭಾಸ್ಕರ ರೈ ಕಟ್ಟ ಉಪಸ್ಥಿತರಿದ್ದರು. ಪ್ರೆಸ್‌ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು.

ಪ್ರಾದೇಶಿಕ ವಾರ್ತೆಗಳು

ಡಿಸೆಂಬರ್ 27 ಶ್ರೀ ಲಂಕಾ ಪತ್ರಕರ್ತರ ನಿಯೋಗ ಮಂಗಳೂರು ಭೇಟಿ

ಮಂಗಳೂರು,ಶ್ರೀ ಲಂಕಾ ಪತ್ರಕರ್ತರ ನಿಯೋಗ ಡಿಸೆಂಬರ್ 27 ಹಾಗೂ ಡಿಸೆಂಬರ್ 28 ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿದೆ.ಡಿಸೆಂಬರ್ 27 ರಂದು ಮಂಗಳೂರಿಗೆ ನಿಯೋಗ ಆಗಮಿಸಲಿದೆ. ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಪತ್ರಕರ್ತರನ್ನು ಭೇಟಿ ಮಾಡಲಿದ್ದಾರೆ. ಬಳಿಕ ಕುಲಶೇಖರದಲ್ಲಿರುವ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ, ಪಿಲಿಕುಳ ನಿಸರ್ಗಧಾಮ, ಕರಾವಳಿ ಉತ್ಸವ, ಮಂಗಳೂರು ಕಂಬಳ, ಯಕ್ಷಗಾನ ಕೂಡಾ ವೀಕ್ಷಿಸಲಿದೆ.ಡಿಸೆಂಬರ್ 28 ರಂದು ಕರ್ನಾಟಕ ವಿಧಾನ ಸಭೆ ಸಭಾಪತಿ ಯು ಟಿ ಖಾದರ್ ಅವರನ್ನು ನಿಯೋಗ ಭೇಟಿ ಮಾಡಲಿದೆ. ಸ್ವಸಹಾಯ ಗುಂಪುಗಳ ಸದಸ್ಯರು ಹಾಗೂ ಗೊಂಡಂಬಿ ಕಾರ್ಖಾನೆಗೂ ಭೇಟಿ ನೀಡಲಿದ್ದಾರೆ. ಅಲ್ಲದೆ ಮಂಗಳೂರಿನ ಪ್ರೇಕ್ಷಣಿಯ ಸ್ಥಳಗಳನ್ನು ವೀಕ್ಷಿಸಲಿದೆ.ಶ್ರೀ ಲಂಕಾ ಆರ್ಥಿಕ ಸಚಿವಾಲಯದ ಮಾಜಿ ಮಾಧ್ಯಮ ಕಾರ್ಯದರ್ಶಿ ಹಾಗೂ ಏಶಿಯನ್ ಮೀಡಿಯಾ ಅಸೋಸಿಯೇಷನ್ ನ ಅಧ್ಯಕ್ಷ ಪ್ಯಾಟಮ್ ಪ್ಯಾಸ್ತ್ಯಯುಲ್ ನೇತೃತ್ವದ ನಿಯೋಗದಲ್ಲಿ 6 ಮಂದಿ ಹಿರಿಯ ಪತ್ರಕರ್ತರು ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ನಿರ್ದೇಶಕ ಶ್ರೀನಿವಾಸ್ ನಾಯಕ್ ಇಂದಾಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top