Author name: editor

ಪ್ರಾದೇಶಿಕ ವಾರ್ತೆಗಳು

ಮಯೂರ ಪ್ರತಿಷ್ಠಾನ ಮಂಗಳೂರು: ಮಯೂರ ಯಾನ -1. ಕಟೀಲು: ಆ.9ರಂದು ಯಕ್ಷ ವೇಷಭೂಷಣ ಉದ್ಘಾಟನೆ, ಯಕ್ಷಗಾನ

ಕಿನ್ನಿಗೋಳಿ ಆ.7: ಮಯೂರ ಪ್ರತಿಷ್ಠಾನ ಮಂಗಳೂರು ಇದರ ಪ್ರಥಮ ವಾರ್ಷಿಕೋತ್ಸವ ಹಾಗೂ ಯಕ್ಷ ಗುರು ರಕ್ಷಿತ್ ಪಡ್ರೆ ಶಿಷ್ಯವೃಂದದ ನೂತನ ಯಕ್ಷವೇಷಭೂಷಣ ಉದ್ಘಾಟನಾ ಕಾರ್ಯಕ್ರಮ ಮಯೂರಯಾನ-1 ಕಟೀಲು ರಥಬೀದಿ ಶ್ರೀ ಸರಸ್ವತಿ ಸದನದಲ್ಲಿ ಆ.9ರಂದು ನಡೆಯಲಿದೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆನುವಂಶಿಕ ಅರ್ಚಕ ಹರಿದಾಸ ಆಸ್ರಣ್ಣ ಅವರು ನೂತನ ವೇಷಭೂಷಣವನ್ನು ಉದ್ಘಾಟಿಸಿ ಆಶೀರ್ವಚನ ನೀಡಲಿರುವರು. ಹಿರಿಯ ನ್ಯಾಯವಾದಿ, ಮಯೂರ ಪ್ರತಿಷ್ಠಾನದ ಅಧ್ಯಕ್ಷ ಪಿ.ಸದಾಶಿವ ಐತಾಳ ಅವರು ಅಧ್ಯಕ್ಷತೆ ವಹಿಸಲಿರುವರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹ ನಿರ್ದೇಶಕ ರಾಜೇಶ್ ಕೆ., ಪಣಂಬೂರು ಪಿ.ವಿ.ಐತಾಳ ಇಂಗ್ಲೀಷ್ ಯಕ್ಷಗಾನ ಬಳಗದ ಸಂಚಾಲಕ ಪಿ.ಸಂತೋಷ್ ಐತಾಳ, ನಿಡ್ಡೋಡಿ ಜ್ಞಾನರತ್ನ ಎಜುಕೇಶನ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಭಾಸ್ಕರ ದೇವಸ್ಯ, ಮಂಗಳೂರು ಯಕ್ಷ ಮಂಜೂಷ ನಿರ್ದೇಶಕಿ ವಿದ್ಯಾ ಕೂಳ್ಯೂರು ಅತಿಥಿಗಳಾಗಿ ಭಾಗವಹಿಸಿಲಿರುವರು. ಸಂಜೆ ಗಂಟೆ 4.30ರಿಂದ ಕಾರ್ಯಕ್ರಮ ಆರಂಭಗೊಳ್ಳಲಿದ್ದು,5.30ರ ವರೆಗೆ ಪೂರ್ವ ರಂಗ, ಬಳಿಕ ಸಭಾ ಕಾರ್ಯಕ್ರಮ, ಗಂಟೆ 7ರಿಂದ ಮಯೂರ ಪ್ರತಿಷ್ಠಾನ ಕಲಾವಿದರಿಂದ ಯಕ್ಷಗಾನ ಬಯಲಾಟ ಅಶ್ವಮೇಧ ಪ್ರದರ್ಶನ ನಡೆಯಲಿದೆ ಎಂದು ಪ್ರತಿಷ್ಠಾನ ಅಧ್ಯಕ್ಷ ಕೆ.ಸದಾಶಿವ ಐತಾಳ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ಸರ್ಕಾರದ ಬೊಕ್ಕಸದಿಂದ ಪಿಂಚಣಿ ಕೊಡಿ. ಜನರ ಜೇಬಿನಿಂದ ಅಲ್ಲ:- ವೇದವ್ಯಾಸ ಕಾಮತ್

ಮಂಗಳೂರು -ವಿದ್ಯುತ್ ಸರಬರಾಜು ನಿಗಮಗಳ ನೌಕರರಿಗೆ ಪಿಂಚಣಿ ಹಾಗೂ ಗ್ರಾಚ್ಯುಟಿ ನೀಡಲು ಗ್ರಾಹಕರಿಂದಲೇ ಹಣ ವಸೂಲಿ ಮಾಡುವ ಮೂಲಕ ಹಗಲು ದರೋಡೆಗಿಳಿದಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ತಪ್ಪನ್ನು ತಿದ್ದಿಕೊಳ್ಳುವ ಬದಲು, ಮುಚ್ಚಿಕೊಳ್ಳಲು ಪ್ರಯತ್ನಿಸಿ, “ಆ ನಿರ್ಧಾರ ನಮ್ಮದಲ್ಲ, ಹಿಂದಿನ ಸರ್ಕಾರದ್ದು” ಎಂದು ಬಾಲಿಶ ಹೇಳಿಕೆ ನೀಡಿ ಜನತೆಯ ಮುಂದೆ ಇನ್ನಷ್ಟು ಬೆತ್ತಲಾಗುತ್ತಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಅವಧಿಯ ಕರೆಂಟ್ ಬಿಲ್ಲುಗಳಲ್ಲಿ ಪಿಂಚಣಿ ಹಾಗೂ ಗ್ರ್ಯಾಚುಟಿ ಹೆಸರಿನಲ್ಲಿ ಒಂದೇ ಒಂದು ರೂಪಾಯಿ ಸಹ ಸಂಗ್ರಹ ಮಾಡಿಲ್ಲ. ಆದರೆ ,ಈಗಿನ ಕಾಂಗ್ರೆಸ್ ಸರ್ಕಾರ ಜನರನ್ನು ಲೂಟಿ ಮಾಡುತ್ತಿದ್ದು ಪ್ರತಿಯೊಬ್ಬರೂ ತಮ್ಮ ತಮ್ಮ ಮನೆಯ ಕರೆಂಟ್ ಬಿಲ್ಲುಗಳಲ್ಲಿ ಪರೀಕ್ಷಿಸಿಕೊಳ್ಳಬಹುದು. ಸಂಶಯವಿದ್ದರೆ ಕಾಂಗ್ರೆಸ್ ನಾಯಕರೂ ಸಹ ತಮ್ಮ ಮನೆಯ ಬಿಲ್ ಪರೀಕ್ಷಿಸಿಕೊಂಡು ಜನತೆಯ ದಿಕ್ಕು ತಪ್ಪಿಸುವ ಹೇಳಿಕೆ ನೀಡಿದ್ದಕ್ಕೆ ಬಹಿರಂಗ ಕ್ಷಮೆಯಾಚಿಸಲಿ. ನಮ್ಮ ಸರ್ಕಾರದ ಆದೇಶವಾಗಿದ್ದರೆ ಬಿಜೆಪಿ ಅವಧಿಯಲ್ಲಿ ಜಾರಿಗೊಳಿಸಿದ ಗೋಹತ್ಯಾ ನಿಷೇಧವನ್ನು ಕೇವಲ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಹಿಂಪಡೆದ ನೀವು ಇದನ್ನೂ ಸಹ ಹಿಂಪಡೆದು ನಿಮ್ಮ ತಾಕತ್ತು ಪ್ರದರ್ಶಿಸಿ. ನೌಕರರ ಅತ್ಯುತ್ತಮ ಕಾರ್ಯಕ್ಷಮತೆಗಾಗಿ ಪಿಂಚಣಿ ಹಾಗೂ ಗ್ರಾಚುಟಿಯನ್ನು ಖಂಡಿತವಾಗಿಯೂ ನೀಡಬೇಕಾಗಿದ್ದು ಸರ್ಕಾರದ ಬೊಕ್ಕಸದಿಂದ ಹೊರತು ಜನರ ಜೇಬಿನಿಂದ ಅಲ್ಲ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.₹900 ಗೆ ಸಿಗುತ್ತಿದ್ದ ಸ್ಮಾರ್ಟ್ ಮೀಟರ್ ಗೆ ₹10,000 ಯಾಕೆ? ಎಂದು ಹೈಕೋರ್ಟ್ ಸಹ ಸರ್ಕಾರಕ್ಕೆ ಛೀಮಾರಿ ಹಾಕಿದೆ. ಹೆಚ್ಚುವರಿ ಭದ್ರತಾ ಠೇವಣಿ ಹೆಸರಿನಲ್ಲಿ ಉಚಿತ ವಿದ್ಯುತ್ ಪಡೆಯುತ್ತಿರುವವರಿಂದಲೂ ಸಾವಿರಾರು ರೂಪಾಯಿ ಲೂಟಿ ಮಾಡಲಾಗುತ್ತಿದೆ. ಸರ್ಕಾರ ಒಂದು ಕೈಯಲ್ಲಿ ಸವಲತ್ತು ಕೊಟ್ಟ ಹಾಗೆ ಮಾಡಿ ಇನ್ನೊಂದು ಕೈಯಿಂದ ಕಿತ್ತುಕೊಂಡರೆ ಏನು ಪ್ರಯೋಜನ? ಲೋಡ್ ಶೆಡ್ಡಿಂಗ್ ನಿಂದಾಗಿ ಸಾರ್ವಜನಿಕರು, ರೈತರು, ಕೈಗಾರಿಕೆಗಳು, ವಿದ್ಯಾರ್ಥಿಗಳು, ತೀವ್ರ ಸಮಸ್ಯೆ ಅನುಭವಿಸುತ್ತಿದ್ದಾರೆ ಎಂದರು.ಕೆಂಪು ಕಲ್ಲು ಮತ್ತು ಮರಳು ಸಮಸ್ಯೆಯಿಂದಾಗಿ ಜಿಲ್ಲೆಯಲ್ಲಿ ಸಮಸ್ಯೆ ಇನ್ನಷ್ಟು ಹೆಚ್ಚಾಗಿದ್ದು ರಾಜ್ಯ ಕಾಂಗ್ರೆಸ್ ಸರ್ಕಾರ ಇನ್ನೂ ಸಹ ಸ್ಪಂದಿಸುತ್ತಿಲ್ಲ. ದ.ಕ ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಬಿಜೆಪಿ ನೇತೃತ್ವದಲ್ಲಿ ಹೋರಾಟ ನಡೆದು ಕೊನೆಗೆ ಜಿಲ್ಲಾ ಬಿಜೆಪಿ ನಿಯೋಗವು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿದರೂ ಈ ಗೊಂದಲವನ್ನು ಬಗೆಹರಿಸದೇ ದಕ್ಷಿಣ ಕನ್ನಡ ಜಿಲ್ಲೆಯ ಜನತೆಯನ್ನು ಸಂಪೂರ್ಣ ಕಡೆಗಣಿಸಿರುವುದು ಖಂಡನೀಯವಾಗಿದ್ದು ಕೆಲಸವೇ ಇಲ್ಲದೇ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿಕೊಳ್ಳುವ ಪರಿಸ್ಥಿತಿಯಲ್ಲಿರುವ ಕಾರ್ಮಿಕರ ಪರಿಸ್ಥಿತಿ ನೋಡಿಯಾದರೂ ಕೂಡಲೇ ಜನರಿಗೆ ಅನುಕೂಲವಾಗುವಂತೆ ಕಾನೂನು ರೂಪಿಸಬೇಕು ಎಂದು ಆಗ್ರಹಿಸಿದರು.ಬಿಜೆಪಿ ಪ್ರಮುಖರಾದ ರಮೇಶ್ ಕಂಡೆಟ್ಟು, ರಮೇಶ್ ಹೆಗ್ಡೆ, ಲಲ್ಲೇಶ್ ಕುಮಾರ್, ಸಂಜಯ್ ಪ್ರಭು, ಮುರುಳಿ ಹೊಸಮಜಲು, ಗಂಗಾಧರ್ ಸಾಲ್ಯಾನ್ ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

112ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮ

ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ಹಾಗೂ ಮಹರ್ಷಿ ವಾಲ್ಮೀಕಿ ವಸತಿ ಶಾಲೆ ಕದ್ರಿ ಮಂಗಳೂರು ಜಂಟಿ ಆಶ್ರಯದಲ್ಲಿ 112ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮ ದಿನಾಂಕ 9/8/2025 ಶನಿವಾರ ಮಹರ್ಷಿ ವಾಲ್ಮೀಕಿ ಸಭಾಂಗಣ ಸಮಯ 10:30 ಕ್ಕೆ ನಡೆಯಲಿದೆ. 112ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮದ ಅಧ್ಯಕ್ಷತೆಯನ್ನ ಮಹರ್ಷಿ ವಾಲ್ಮೀಕಿ ವಸತಿ ಶಾಲೆ. ಮುಖ್ಯೋಪಾಧ್ಯಾಯರಾದ ಶ್ರೀಮತಿ ಸುನೀತಾ ವಹಿಸುವರು. ಮುಖ್ಯಸಂಪನ್ಮೂಲ ಅತಿಥಿಗಳಾಗಿ. ಕರಾವಳಿ ಡೈಲಿ ನ್ಯೂಸ್ ಚೀಪ್ ಎಡಿಟರ್ ಮಹೇಶ್ ಕನ್ನೇಶ್ವರ ಹಿರಿಯ ಬರಹಗಾರರಾದ ಸುಬ್ರಾಯ ಭಟ್, ದೂರದರ್ಶನ ಸುದ್ದಿ ವಾಹಿನಿಯ ಜಿಲ್ಲಾ ವರದಿಗಾರರಾದ. ರಾಜೇಶ್ ದಡ್ಡಂಗಡಿ, ಲೇಖಕಿ ನಿರ್ಮಲ ಉದಯಕುಮಾರ್ ಉಪಸ್ಥಿತರಿರುವರು. ಕಾರ್ಯಕ್ರಮ ನಿರೂಪಣೆ ಸುರೇಖಾ ಯಾಳವಾರ ಮಾಡುವರು. ಅಮೃತ ಪ್ರಕಾಶ ಪತ್ರಿಕೆಯ ಸಂಪಾದಕಿ ಡಾ.ಮಾಲತಿ ಶೆಟ್ಟಿ ಮಾಣೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ISA Mangaluru City Branch Hosts 39th Annual State Conference of ISA Karnataka State Branch

Mangaluru, August 6 th, 2025 – The ISA Mangaluru City Branch is proud to host the 39th Annual State Conference of the ISA Karnataka State Branch, titled “ISACON Karnataka 2025,” on Friday, August 8, 2025, at the Father Muller Convention Centre in Mangaluru.The inaugural ceremony will commence at 6:00 PM and will feature esteemed dignitaries, including Dr. J. Balavenkata Subramanian, President of ISA National, as the Chief Guest, and Rev. Fr. Faustine L. Lobo, Director of FMCI Mangaluru, as Guests of Honour. Dr. Manjula B.P., President of the ISA Karnataka State Branch, will preside over the ceremony.The event is organized by the ISA Mangaluru City Branch and hosted by the ISA Karnataka State Branch. The Organizing Committee, led by Dr. Anand Bangera, Organizing Chairman, and Dr. Sripada G Mehandale, Organizing Secretary, has worked tirelessly to ensure the success of this prestigious event.The conference promises to be a grand success, bringing together experts and professionals from across the state of Karnataka and various states our country and abroad to share knowledge, ideas, and experiences. The ISA Mangaluru City Branch and the ISA Karnataka State Branch invite all members and guests to attend this significant event.As a part of the conference Pre conference workshop is conducted at various medical colleges of mangalore on 7 th August 2025. 8 th August 2025 will be the CME& 9 th and 10 August will be the conferenceDr. Meghna Mukund, Secretary, ISA Mangaluru, or Dr. Kishan Shetty, President, ISA Mangaluru have wished success to the conference

ಪ್ರಾದೇಶಿಕ ವಾರ್ತೆಗಳು

ಆ.10: ಕಲಾಸಾಧನ ‘ಸ್ವರಧಾರ’ ಸಂಗೀತ ಉತ್ಸವ

ಮಂಗಳೂರು,ಆ.7;ಕಲಾಸಾಧನ ಮಂಗಳೂರು ಇದರ ವತಿಯಿಂದ ಸ್ವರಧಾರಾ ಸಂಗೀತ ಉತ್ಸವ ಆ.10ರಂದು ಸಂಜೆ 5ಗಂಟೆಯಿಂದ ನಗರದ ಓಶಿಯನ್ ಪರ್ಲ್ ಸಭಾಂಗಣದಲ್ಲಿ ನಡೆಯಲಿದೆ. ಉತ್ಸವದಲ್ಲಿ ಪ್ರಸಿದ್ಧ ಹಿಂದೂಸ್ತಾನಿ ಗಾಯಕಸಂಗೀತ ನಾಟಕ ಅಕಾಡೆಮಿ ನವದೆಹಲಿಯಿಂದ ಭಾರತರತ್ನ ಉಸ್ತಾದ್ ಬಿಸ್ಮಿಲ್ಲಾ ಖಾನ್ ಯುವ ಪುರಸ್ಕಾರ ಪಂಡಿತ್ಕುಮಾರ್ ಮರ್ದೂರ್ ಭಾಗವಹಿಸಲಿದ್ದಾರೆ. ಕುಮಾರ್ ರವರು ಕಿರಾಣಾ, ಗ್ವಾಲಿಯರ್ ಮತ್ತು ಜೈಪುರ ಘರಾಣೆಗಳ ಶೈಲಿಗಳನ್ನು ಬೆರೆಸಿ ತಮ್ಮದೇ ಆದ ಗಾಯನವನ್ನು ರಚಿಸಿ ದೇಶ ವಿದೇಶಗಳಲ್ಲಿ ಖ್ಯಾತಿ ಪಡೆದವರು.ಖ್ಯಾತ ಹಿಂದೂಸ್ತಾನಿ ಗಾಯಕ ಪಂಡಿತ್ ಸೋಮನಾಥ ಮರ್ದೂರರ ಫುತ್ರ. ಕುಮಾರ್ 2011 ರಿಂದ 2021 ರವರೆಗೆ 10 ವರ್ಷಗಳ ಕಾಲ ಕೋಲ್ಕತ್ತಾದ ಐಟಿಸಿ-ಸಂಗೀತ ಸಂಶೋಧನಾ ಅಕಾಡೆಮಿಯಲ್ಲಿ ಬೋಧನಾ ಅಧ್ಯಾಪಕರಾಗಿ ಸೇವೆ ಸಲ್ಲಿಸಿದವರು. ಅಮೆರಿಕ ಸಂಯುಕ್ತ ಸಂಸ್ಥಾನ, ಕೆನಡಾ, ಸಿಂಗಾಪುರ, ಬಾಂಗ್ಲಾದೇಶಗಳಲ್ಲಿ ಕಾರ್ಯ ನೀಡಿ ಖ್ಯಾತಿ ಪಡೆದವರು. ಉತ್ಸವದಲ್ಲಿ ಅಕ್ಷಯ ಜೋಶಿ ಧಾರವಾಡ್ ತಬಲಾ ಮತ್ತುಸತೀಶ್ ಭಟ್ ಹೆಗ್ಗಾರ್ ಹಾರ್ಮೊನಿಯಂ ಸಾಥ್ ನೀಡಲಿದ್ದಾರೆ ಎಂದು ಕಲಾ ಸಾಧನ ಕೇಂದ್ರದ ನಿರ್ದೇಶಕಿ ಶ್ರೀಮತಿ ವಿಭಾಶ್ರೀನಿವಾಸ ನಾಯಕ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ನೆರವೇರಿಸಲಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಸಂಸ್ಥೆಯ ಗೌರವ ಸಲಹೆಗಾರ ಶ್ರೀನಿವಾಸ್ ನಾಯಕ್ ಇಂದಾಜೆ ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ಕಾರ್ಮಾರಿನಲ್ಲಿ ಮಂದಾರ ರಾಮಾಯಣ ವಾಚನ – ವ್ಯಾಖ್ಯಾನ. ತುಳು ಬದುಕಿನ ಅನಾವರಣ, ಮಂದಾರ ರಾಮಾಯಣ

ಕಾಸರಗೋಡು: ತುಳುವ ಮಹಾಸಭೆ ಕಾಸರಗೋಡು ನೇತೃತ್ವದಲ್ಲಿ, ತುಳು ವರ್ಲ್ಡ್ ಕಟೀಲು ಸಂಯೋಜಿಸಿದ ತುಳು ವಾಲ್ಮೀಕಿ ಮಂದಾರ ಕೇಶವ ಭಟ್ಟರ ‘ಮಂದಾರ ರಾಮಾಯಣ’ ಸುಗಿಪು – ದುನಿಪು ಕಾರ್ಯಕ್ರಮ ಕಾಸರಗೋಡು ಉಳ್ಳೋಡಿಯ ಕಾರ್ಮಾರು ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಆಗಸ್ಟ್ 1, ಶನಿವಾರ ಜರಗಿತು. ಯಕ್ಷಗಾನ ಅರ್ಥಧಾರಿ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಸಂಪೂರ್ಣ ಮಂದಾರ ರಾಮಾಯಣದ ವ್ಯಾಖ್ಯಾನವವನ್ನು ನಡೆಸಿಕೊಟ್ಟರು. ಭಾಗವತ ಪ್ರಶಾಂತ್ ರೈ ಪುತ್ತೂರು ಮತ್ತು ರಚನಾ ಚಿತ್ಕಲ್ ಆಯ್ದ ಪದ್ಯಗಳನ್ನು ವಾಚಿಸಿದರು. ಹಿಮ್ಮೇಳದಲ್ಲಿ ಲವ ಕುಮಾರ್ ಐಲ ಮದ್ದಳೆ ನುಡಿಸಿದರು. ದೊಡ್ಡ ಸಂಖ್ಯೆಯಲ್ಲಿ ನೆರೆದ ಪ್ರೇಕ್ಷಕರು ಭಕ್ತಿ ಭಾವದೊಂದಿಗೆ ಕಥಾ ಶ್ರವಣ ಮಾಡಿ ಸಂತುಷ್ಟರಾದರು. ಆಟಿ ತಿಂಗಳ ಸಂಕಷ್ಟ ದೂರ:ಪ್ರವಚನಕಾರ ಭಾಸ್ಕರ ರೈ ಕುಕ್ಕುವಳ್ಳಿ ಮಾತನಾಡಿ ‘ತುಳುವರಿಗೆ ಸಂಕಷ್ಟ ಕಾಲವಾದ ಆಟಿ ತಿಂಗಳಲ್ಲಿ ರಾಮಾಯಣ ಪಾರಾಯಣ, ವಾಚನ – ಪ್ರವಚನಗಳ ಮೂಲಕ ಪರಿಹಾರ ಕಂಡುಕೊಳ್ಳಬಹುದೆಂಬ ನಂಬಿಕೆಯಿದೆ. ಮಂದಾರ ಕೇಶವ ಭಟ್ಟರ ತುಳು ರಾಮಾಯಣದಲ್ಲಿ ಪುರಾಣದ ಪುಣ್ಯ ಕಥೆಯೊಂದಿಗೆ ತುಳು ಬದುಕಿನ ನೈಜ ಚಿತ್ರಣವೂ ಇರುವುದರಿಂದ ಅದು ಜನರಿಗೆ ಹತ್ತಿರವಾಗಿದೆ’ ಎಂದು ನುಡಿದರು.ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದ ಮಂದಾರ ಪ್ರತಿಷ್ಠಾನದ ಅಧ್ಯಕ್ಷ, ಪತ್ರಕರ್ತ ಮಂದಾರ ರಾಜೇಶ್ ಭಟ್ ಕಾರ್ಯಕ್ರಮವನ್ನು ಆಯೋಜಿಸಿದ ಎಲ್ಲರನ್ನೂ ಮಂದಾರ ಪ್ರತಿಷ್ಠಾನದ ಪರವಾಗಿ ಹಾಗೂ ಮಂದಾರರ ಕುಟುಂಬದ ಪರವಾಗಿ ಅಭಿನಂದಿಸಿ, ಮುಂದೆಯೂ ತಮ್ಮ ಸಹಕಾರದ ಭರವಸೆ ನೀಡಿದರು.ತುಳುವ ಮಹಾಸಭೆ ಕಾರ್ಯಾಧ್ಯಕ್ಷ ಡಾ. ರಾಜೇಶ್ ಕೃಷ್ಣ ಆಳ್ವ ಮಾತನಾಡಿ , ‘ಮಂದಾರ ರಾಮಾಯಣ ಪ್ರಸರಣ ಕಾರ್ಯಕ್ರಮವನ್ನು ತುಳು ನಾಡಿನಾದ್ಯಂತ ಏರ್ಪಡಿಸುವ ಉದ್ದೇಶ ಹೊಂದಿದ್ದು,ಜೊತೆಗೆ ತುಳು ಭಾಷೆಯ ಬೆಳವಣಿಗೆ ಮತ್ತು ತುಳುವರ ಪ್ರಾಚೀನ ಜೀವನ ಶೈಲಿಯನ್ನು ನಾಡಿಗೆ ಪರಿಚಯಿಸುವಉದ್ದೇಶವೂ ಇದೆ; ಅಲ್ಲದೆ ತುಳುವರ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಿದೆ’ ಎಂದರು. ತುಳು ನಾಡಿನಾದ್ಯಂತ ತುಳುವ ಮಹಾಸಭೆ ಕಾರ್ಯ ವ್ಯಾಪ್ತಿಯನ್ನು ಹೊಂದಿದ್ದು , ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರು ನೋಂದಾವಣೆಯಾಗುವುದರ ಮೂಲಕ ಸಹಕರಿಸುವಂತೆ ಅವರು ತುಳುವ ಮಹಾಸಭೆ ಪರವಾಗಿ ವಿನಂತಿಸಿದರು.ಶ್ರೀ ಕ್ಷೇತ್ರ ಕಾರ್ಮಾರು ಆಡಳಿತ ಮುಖ್ಯಸ್ಥ ರಾಧಾಕೃಷ್ಣ ರೈ ಮಾತನಾಡಿ, ತುಳುವ ಮಹಾಸಭೆ ಹಾಗೂ ಮಂದಾರ ರಾಮಾಯಣ ಕಾರ್ಯಕ್ರಮಗಳಿಗೆ ಸಂಪೂರ್ಣ ಬೆಂಬಲ ಘೋಷಿಸಿದರು.ಬಲಿವಾಡು ಕೂಟ:ಆಟಿ ತಿಂಗಳ ವಿಶೇಷ ಕಾರ್ಯಕ್ರಮ ಹಾಗೂ ಬಲಿವಾಡು ಕೂಟದ ಪ್ರಯುಕ್ತ ಬೆಳಿಗ್ಗೆ ಮಹಾವಿಷ್ಣು ದೇವಸ್ಥಾನದಲ್ಲಿ ಪೂಜೆ, ಗಣ ಹೋಮ, ನಂತರದಲ್ಲಿ ಮಂದಾರ ರಾಮಾಯಣ ಕಾರ್ಯಕ್ರಮ , ಮಹಾಪೂಜೆ, ಅನ್ನಪ್ರಸಾದ ವಿತರಣೆ ಹಾಗೂ ಸಂಜೆ ದುರ್ಗಾಪೂಜೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಪ್ರಾದೇಶಿಕ ವಾರ್ತೆಗಳು

ಡಾ.ಎಂ.ಮೋಹನ ಆಳ್ವರಿಗೆ ಸುವರ್ಣ ಸಂಭ್ರಮ ಗೌರವ ಪ್ರಶಸ್ತಿ. ‘ವಾಸ್ತವಾಂಶಕ್ಕೆ ಮಾತ್ರ ಮಾಧ್ಯಮ ಆದ್ಯತೆ ನೀಡಲಿ’ -ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ ಆಶಯ

ಮಂಗಳೂರು: ತಂತ್ರಜ್ಞಾನ ಬೆಳೆದ ಬಳಿಕ ಮಾಧ್ಯಮ ಕ್ಷೇತ್ರ ವಿಸ್ತಾರವಾಗಿದೆ. ಸಮಾಜದ ವಾಸ್ತವದ ಸತ್ಯ ಸಂಗತಿಗಳನ್ನು ಜನರ ಮುಂದಿಡುವ ಕೆಲಸ ಆಗಬೇಕು. ಮಾಧ್ಯಮ ಶಕ್ತಿಯ ಸದ್ಭಳಕೆ ಇಂದಿನ ಅಗತ್ಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಹೇಳಿದರು.ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಬುಧವಾರ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಉದ್ಘಾಟಿಸಿ, ಅವರು ಮಾತನಾಡಿದರು.ಸಾಮಾಜಿಕ ಜಾಲತಾಣಗಳ ಅವ್ಯಾಹತ ಬಳಕೆಯಿಂದ ಸಮಾಜದ ಸ್ವಾಸ್ಥೃ ಹಾಳಾಗುತ್ತಿದೆ. ಮಾಧ್ಯಮಗಳು ವಾದ, ಪ್ರತಿವಾದ, ತೀರ್ಪು ನೀಡದೆ ತೀರ್ಮಾನ ಕೈಗೊಳ್ಳಲು ಓದುಗರ, ವೀಕ್ಷಕರಿಗೆ ಅವಕಾಶ ಕಲ್ಪಿಸಬೇಕು. ವಸ್ತುನಿಷ್ಠ, ನಿಪ್ಷಕ್ಷಪಾತವಾಗಿ ಮಾಧ್ಯಮಗಳು ಕೆಲಸ ಮಾಡಿದಾಗ ಪ್ರಭಾವಶಾಲಿಯಾಗಲು ಸಾಧ್ಯ ಎಂದರು.ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಅವರಿಗೆ ಸುವರ್ಣ ಸಂಭ್ರಮ ಗೌರವ ಪುರಸ್ಕಾರ ಪ್ರದಾನ ಮಾಡಲಾಯಿತು. ಈ ಸಂದರ್ಭ ಮಾತನಾಡಿದ ಅವರು, ಪ್ರಜಾಪ್ರಭುತ್ವ ಮತ್ತು ಪತ್ರಿಕೋದ್ಯಮ ಪರಸ್ಪರ ಸಂಬಂಧ ಹೊಂದಿದ್ದು, ಸಾರ್ವಜನಿಕರ ಅಭಿಪ್ರಾಯಗಳಿಗೆ ಮನ್ನಣೆ ನೀಡಬೇಕು. ಪ್ರತಿಯೊಂದು ವರದಿ ನಂಬಿಕೆ, ಬದ್ಧತೆಯಿಂದ ಕೂಡಿರಬೇಕು. ನೈತಿಕ ಮೌಲ್ಯಗಳ ಪ್ರತಿಪಾದನೆಯಾಗಬೇಕು ಎಂದರು.ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಸುವರ್ಣ ಸಂಭ್ರಮ ಸಾಕ್ಷೃಚಿತ್ರ ಬಿಡುಗಡೆಗೊಳಿಸಿದರು. ಶಾಸಕರಾದ ವೇದವ್ಯಾಸ ಕಾಮತ್, ಡಾ.ವೈ.ಭರತ್ ಶೆಟ್ಟಿ, ರಾಜೇಶ್ ನಾಯ್ಕ್, ಹಿರಿಯ ಪತ್ರಕರ್ತ ರವಿ ಹೆಗಡೆ, ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ, ಅದಾನಿ ಗ್ರೂಪ್ ಅಧ್ಯಕ್ಷ ಕಿಶೋರ್ ಆಳ್ವ, ಮನಪಾ ಮಾಜಿ ಸದಸ್ಯ ನವೀನ್ ಡಿಸೋಜ,ಕಾರ್ಡೋಲೈಟ್ ಸ್ಪೆಷಾಲಿಟಿ ಕೆಮಿಕಲ್ಸ್ ಇಂಡಿಯಾದ ಜನರಲ್ ಮ್ಯಾನೇಜರ್ ಕೆ.ದಿವಾಕರ್, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಅನಿವಾಸಿ ಭಾರತೀಯ ಉದ್ಯಮಿ ಝಕರಿಯಾ ಜೋಕಟ್ಟೆ, ಜಯರಾಮ ರೈ, ಕೆಸಿಸಿಐ ಅಧ್ಯಕ್ಷ ಆನಂದ ಜಿ. ಪೈ, ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕ ಡಾ.ಶಿವಪ್ರಕಾಶ್, ಮಾಧ್ಯಮ ಅಕಾಡೆಮಿಯ ಮಾಜಿ ಸದಸ್ಯ ಬಾಳ ಜಗನ್ನಾಥ ಶೆಟ್ಟಿ, ಹಿರಿಯ ಪತ್ರಕರ್ತ ಬಿ.ರವೀಂದ್ರ ಶೆಟ್ಟಿ, ವಾಲ್ಟರ್ ನಂದಳಿಕೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್., ಮಂಗಳೂರು ಪ್ರೆಸ್‌ಕ್ಲಬ್ ನಿಕಟಪೂರ್ವ ಅಧ್ಯಕ್ಷ ಅನ್ನು ಮಂಗಳೂರು ಉಪಸ್ಥಿತರಿದ್ದರು.ಸುವರ್ಣ ಸಂಭ್ರಮದ ಪ್ರದಾನ ಸಂಚಾಲಕ ಪಿ.ಬಿ.ಹರೀಶ್ ರೈ ಸ್ವಾಗತಿಸಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ಇಂದಾಜೆ ಆಶಯ ಭಾಷಣ ಮಾಡಿದರು. ಮಂಗಳೂರು ಪ್ರೆಸ್‌ಕ್ಲಬ್ ಸ್ಥಾಪಕಾಧ್ಯಕ್ಷ ಆನಂದ ಶೆಟ್ಟಿ ಪ್ರಸ್ತಾವನೆಗೈದರು. ಪ್ರದಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು. ಪತ್ರಕರ್ತ ದಿನೇಶ್ ಇರಾ ಕಾರ್ಯಕ್ರಮ ನಿರೂಪಿಸಿದರು.ಛಾಯಾಚಿತ್ರ ಸ್ಪರ್ಧೆ ವಿಜೇತರು:ಸುವರ್ಣ ಸಂಭ್ರಮದ ಅಂಗವಾಗಿ ಏರ್ಪಡಿಸಿದ್ದ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯಲ್ಲಿ ವಿಜೇತರಾದ ಹುಬ್ಬಳ್ಳಿಯ ಕನ್ನಡ ಪ್ರಭ ಪತ್ರಿಕೆಯ ಛಾಯಾಗ್ರಾಹಕ ಈರಪ್ಪ ನಾಯ್ಕರ್ (ಪ್ರ), ಮೈಸೂರಿನ ಕನ್ನಡಪ್ರಭ ಪತ್ರಿಕೆಯ ಛಾಯಾಗ್ರಾಹಕ ಎಂ.ಎಸ್. ಬಸವಣ್ಣ (ದ್ವಿ)ಹಾಗೂ ಮೈಸೂರಿನ ದ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯ ಪ್ರಿನ್ಸಿಪಾಲ್ ಫೋಟೋಗ್ರಾಪರ್ ಉದಯಶಂಕರ್ (ತೃ) ಅವರಿಗೆ ಬಹುಮಾನ ವಿತರಿಸಲಾಯಿತು.

ಪ್ರಾದೇಶಿಕ ವಾರ್ತೆಗಳು

ರೋಹನ್ ಕಾರ್ಪೋರೇಶನ್ ವತಿಯಿಂದ ಉದ್ಯೋಗಿಗಳು ಮತ್ತು ಕಾರ್ಮಿಕರಿಗಾಗಿ ಉಚಿತ ವೈದ್ಯಕೀಯ ಶಿಬಿರ

ಮಂಗಳೂರು,ಆ.6– ಸಂಸ್ಥೆಯ ಸಿಬ್ಬಂದಿ ಹಾಗೂ ಕಾರ್ಮಿಕರ ಉತ್ತಮ ಆರೋಗ್ಯದ ಕಡೆಗೆ ಕಾಳಜಿ ತೋರುವ ಉದ್ದೇಶದಿಂದ ರೋಹನ್ ಕಾರ್ಪೋರೇಶನ್ ಸಂಸ್ಥೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.ಈ ಶಿಬಿರ ಮಂಗಳೂರು ಬಿಜೈ ಮುಖ್ಯ ರಸ್ತೆಯಲ್ಲಿರುವ ರೋಹನ್ ಸಿಟಿ ಆವರಣದಲ್ಲಿ ನಡೆಯಿತು. ಶಿಬಿರವನ್ನು ಹಿಂದ್ ಕುಷ್ಟ್ ನಿವಾರಣ್ ಸಂಘ (ರಿ) ಮತ್ತು ಲಯನ್ಸ್ ಕ್ಲಬ್ ಮಂಗಳಾದೇವಿ ಈ ಎರಡು ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿತ್ತು.ಬೆಳಿಗ್ಗೆಯಿಂದಲೇ ಶಿಬಿರದಲ್ಲಿ ನೂರಾರು ಉದ್ಯೋಗಿಗಳು ಮತ್ತು ಕಾರ್ಮಿಕರು ಭಾಗವಹಿಸಿದ್ದು, ತಜ್ಞ ವೈದ್ಯರ ತಂಡದಿಂದ ರಕ್ತದೊತ್ತಡ, ಡಯಾಬಿಟಿಸ್, ದಂತಚಿಕಿತ್ಸೆ, ಇ.ಸಿ. ಜಿ ,ಸಾಮಾನ್ಯ ತಪಾಸಣೆ ಸೇರಿದಂತೆ ವಿವಿಧ ಪರೀಕ್ಷೆಗಳು ನಡೆಯಿತು. ರೋಹನ್ ಕಾರ್ಪೋರೇಶನ್ ನ ಡೈರೆಕ್ಟರ್ ಡಿಯೋನ್ ಮೊಂತೇರೊರವರು “ನಮ್ಮ ಸಂಸ್ಥೆಯ ಬೆಳವಣಿಗೆಯಲ್ಲಿ ಕಾರ್ಮಿಕರ ಕೊಡುಗೆ ಅಮೂಲ್ಯವಾಗಿದೆ. ಅವರ ಆರೋಗ್ಯದ ಬಗ್ಗೆ ನಾವು ತೀವ್ರ ಕಾಳಜಿ ವಹಿಸುತ್ತಿದ್ದೇವೆ. ಈ ಶಿಬಿರವು ಕಾಳಜಿಯ ಪ್ರತಿಬಿಂಬವಾಗಿದೆ” ಎಂದು ಅಭಿಪ್ರಾಯಪಟ್ಟರು.ಮಂಗಳೂರು ಡಿಎಪಿಸಿಯು ಜಿಲ್ಲಾ ಮೇಲ್ವಿಚಾರಕರಾದ ಶ್ರೀ ಮಹೇಶ್ ರವರು “ಇದೊಂದು ಸಾಮಾನ್ಯ ಆರೋಗ್ಯ ತಪಾಸಣೆಯ ಶಿಬಿರವಲ್ಲ, ಇದು ಸಂಸ್ಥೆಯ ಸಿಬ್ಬಂದಿಗಳ ಮತ್ತು ಕಾರ್ಮಿಕರ ಆರೋಗ್ಯಕ್ಕೆ ನೆರವಾಗುವಂತೆ ರೂಪಿಸಲಾದ ಸಾರ್ಥಕ ಹೆಜ್ಜೆಯಾಗಿದೆ. ಭವಿಷ್ಯದಲ್ಲಿಯೂ ಇಂತಹ ಸಾಮಾಜಿಕ ಹಾಗೂ ಆರೋಗ್ಯಪೂರ್ಣ ಯೋಜನೆಗಳನ್ನು ಮುಂದುವರಿಯಲಿ” ಎಂದು ಆಶಿಸಿದರು.ಶಿಬಿರದಲ್ಲಿ ಉಪಸ್ಥಿತರಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಿರಿಯ ಆರೋಗ್ಯ ಅಧಿಕಾರಿ ಸಲೀಂ ಪಾಷಾ, “ಇಂತಹ ಶಿಬಿರಗಳು ನಮ್ಮ ಶಾರೀರಿಕ ಆರೋಗ್ಯದ ತಪಾಸಣೆಯಷ್ಟೇ ಅಲ್ಲ, ಸಂಸ್ಥೆ ಉದ್ಯೋಗಿಗಳು ಮತ್ತು ಕಾರ್ಮಿಕರಿಗಾಗಿ ಬಗ್ಗೆ ಹೊಂದಿರುವ ನಿಜವಾದ ಕಾಳಜಿಯನ್ನೂ ತೋರಿಸುತ್ತವೆ. ರೋಹನ್ ಕಾರ್ಪೋರೇಶನ್ ಮಾಡುತ್ತಿರುವ ಈ ಪ್ರಯತ್ನ ಎಲ್ಲ ಸಂಸ್ಥೆಗಳಿಗೆ ಮಾದರಿಯಾಗಲಿ ಎಂದು ಹೇಳಿದರು.”ಈ ಕಾರ್ಯಕ್ರಮದಲ್ಲಿ ಕಂಪನಿಯ ಜನರಲ್ ಮ್ಯಾನೇಜರ್ ಸುಮನಾ , ಲಯನ್ಸ್ ಕ್ಲಬ್ ಮಂಗಳದೇವಿ ಮಂಗಳೂರು ಅಧ್ಯಕ್ಷರಾದ ಶ್ರೀ ಸಂತೋಷ ಪೂಂಜ, ಎ.ಜೆ. ಡೆಂಟಲ್ ಕಾಲೇಜು ಸಹಾಯಕ ಪ್ರಾಧ್ಯಾಪಕಿ ಡಾ. ಶ್ರೇಷ್ಠ ಶೆಟ್ಟಿ , ಕೆಎಂಸಿ ಮಂಗಳೂರಿನ ಸಮುದಾಯ ವೈದ್ಯಕೀಯ ವಿಭಾಗದ ಶ್ರಿಮತಿ ಶರಾವತಿ , ಯೋಜನಾ ವ್ಯವಸ್ಥಾಪಕರಾದ ಶ್ರೀ ನರೇಶ್ ಕುಮಾರ್, ಹಿಂದ್ ಕುಷ್ಟ ನಿವಾರಣ ಸಂಘ ಯೋಜನಾ ವ್ಯವಸ್ಥಾಪಕರಾದ ಶ್ರೀ ಕಾಂತಾ ನಾಯಕ, ಹೆಲ್ತ್ ಸೇಫ್ಟಿ ಎನ್ವಿರಾನ್‌ಮೆಂಟ್ ಮ್ಯಾನೇಜರ್‌ ಆಗಿರುವ ಶ್ರೀ ಪುನೀತ್ ಕುಮಾರ್ ರವರು ಭಾಗವಹಿಸಿದ್ದರು.

ಪ್ರಾದೇಶಿಕ ವಾರ್ತೆಗಳು

ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ ಓಪನ್ ಡೇ 2025 ಸಮಾರಂಭ

ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯವು ಜುಲೈ 28, 2025ರಂದು ವಾರ್ಷಿಕ ಓಪನ್ ಡೇ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿತು. 1,300ಕ್ಕೂ ಹೆಚ್ಚು ಭೇಟಿಗಾರರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಉದ್ಘಾಟನಾ ಸಮಾರಂಭದಲ್ಲಿ ರೆ. ಫಾದರ್ ಡಾ. ವಿಕ್ಟರ್ ಲೋಬೊ ಎಸ್.ಜೆ. (ಕುಲಪತಿ), ಡಾ. ಚಂದ್ರಭಾಸ್ ನಾರಾಯಣ (ರಾಜೀವ್ ಗಾಂಧಿ ಜೈವಿಕತಂತ್ರಜ್ಞಾನ ಕೇಂದ್ರದ ನಿರ್ದೇಶಕ) ಮತ್ತು ಡಾ. ವಿ. ಕ್ರಿಸ್ಟೋ ಸೆಲ್ವನ್ (ಓಪನ್ ಡೇ 2025 ಸಂಯೋಜಕ) ಅವರು ಗೌರವ ಅತಿಥಿಗಳಾಗಿ ಭಾಗವಹಿಸಿದ್ದರು.ಕಾರ್ಯಕ್ರಮದಲ್ಲಿ 180ಕ್ಕೂ ಹೆಚ್ಚು ಪ್ರದರ್ಶನಗಳು ನಡೆದಿದ್ದು, ವಿಜ್ಞಾನ ವಿಭಾಗದ ಕ್ಯಾನ್ಸರ್ ಸಂಶೋಧನೆ, ಬಯೋಪ್ಲಾಸ್ಟಿಕ್ ತಯಾರಿಕೆ, ವಾಣಿಜ್ಯ ವಿಭಾಗದ ಸೆಗ್ರೆಬಾಟ್ ಯೋಜನೆ, ಇತಿಹಾಸ ವಿಭಾಗದ ವಿಜಯನಗರ ಸಾಮ್ರಾಜ್ಯದ ಮಾದರಿ ಮತ್ತು ಮಾಧ್ಯಮ ವಿಭಾಗದ ಸೃಜನಾತ್ಮಕ ಪ್ರದರ್ಶನಗಳು ಪ್ರಮುಖ ಆಕರ್ಷಣೆಗಳಾಗಿದ್ದವು.“ಶೈಕ್ಷಣಿಕ ಸೇತುವೆಗಳ ನಿರ್ಮಾಣ” ಎಂಬ ವಿಶೇಷ ಸಭೆಯಲ್ಲಿ ಡಿಪಿಎಸ್ ಈಸ್ಟ್ ನ ಪ್ರಾಂಶುಪಾಲೆ ಶ್ರೀಮತಿ ಮನಿಲಾ ಕಾರ್ವಾಲ್ಕೋ ಸೇರಿದಂತೆ ಅನೇಕ ಶಿಕ್ಷಣತಜ್ಞರು ಭಾಗವಹಿಸಿದ್ದರು. ವಿದ್ಯಾರ್ಥಿ ಸಂಸದೀಯ ಸಭೆ 2025 ರಾಜಕೀಯ ಪ್ರಜ್ಞೆಯನ್ನು ಬೆಳೆಸುವಲ್ಲಿ ಸಹಾಯಕವಾಗಿತ್ತು. ಪೋಷಕರಿಗಾಗಿ “ಉನ್ನತ ಶಿಕ್ಷಣ – ಬದಲಾಗುವ ಅವಕಾಶಗಳು ಮತ್ತು ಆಯ್ಕೆಗಳು” ವಿಶೇಷ ಸೆಷನ್ ನಡೆದಿತ್ತು. ಕಾರ್ಯಕ್ರಮದ ಅಂತಿಮ ಸಮಾರಂಭದಲ್ಲಿ ಡೆಲ್ಲಿ ಪಬ್ಲಿಕ್ ಸ್ಕೂಲ್, ಎಲೆಕ್ಟ್ರಾನಿಕ್ ಸಿಟಿ ಮತ್ತು ಸ್ಕೂಲ್ ಆಫ್ ಇಂಡಿಯಾ ಪ್ರಶಸ್ತಿಗಳನ್ನು ಪಡೆದುಕೊಂಡವು. ಸಂವಹನ ಮತ್ತು ಮಾಧ್ಯಮ ಅಧ್ಯಯನ ಶಾಲೆಯನ್ನು ವಿಶ್ವವಿದ್ಯಾಲಯದ ವಿಭಾಗಗಳಲ್ಲಿ ಚಾಂಪಿಯನ್ ಆಗಿ ಘೋಷಿಸಲಾಯಿತು. ಶಾಲಾ ಪ್ರಾಂಶುಪಾಲರು ಮತ್ತು ಶಿಕ್ಷಣತಜ್ಞರೊಂದಿಗೆ ‘ಶೈಕ್ಷಣಿಕ ಸಹಯೋಗ’ ಕುರಿತು ವಿಶೇಷ ಚರ್ಚೆ ನಡೆಯಿತು. ವಿದ್ಯಾರ್ಥಿ ಸಂಸದೀಯ ಸಭೆ, ಪೋಷಕರಿಗಾಗಿ ವಿಶೇಷ ಮಾರ್ಗದರ್ಶನ ಸೆಷನ್ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಸಹ ನಡೆದಿದ್ದು, ಈ ಕಾರ್ಯಕ್ರಮವು ವಿಶ್ವವಿದ್ಯಾಲಯದ ಸಮಗ್ರ ಶಿಕ್ಷಣದ ದೃಷ್ಟಿಯನ್ನು ಯಶಸ್ವಿಯಾಗಿ ಪ್ರದರ್ಶಿಸಿತು.

ಪ್ರಾದೇಶಿಕ ವಾರ್ತೆಗಳು

ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆಯ ಪಲಿತಾಂಶ ಪ್ರಕಟ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮದ ಪ್ರಯುಕ್ತ ಪತ್ರಿಕಾ ಛಾಯಾಗ್ರಾಹಕರಿಗಾಗಿ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆಯ ಫಲಿತಾಂಶ ಪ್ರಕಟಗೊಂಡಿದೆ. ಹುಬ್ಬಳ್ಳಿಯ ಕನ್ನಡ ಪ್ರಭ ಪತ್ರಿಕೆಯ ಛಾಯಾಗ್ರಾಹಕ ಈರಪ್ಪ ನಾಯ್ಕರ್ ಅವರ  ಚಿತ್ರ ಪ್ರಥಮ ಸ್ಥಾನ ಪಡೆದಿದೆ. ಮೈಸೂರಿನ ಕನ್ನಡಪ್ರಭ ಪತ್ರಿಕೆಯ ಛಾಯಾಗ್ರಾಹಕ  ಎಂ.ಎಸ್. ಬಸವಣ್ಣ ಅವರು ದ್ವಿತೀಯ, ಮೈಸೂರಿನ ದ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯ ಪ್ರಿನ್ಸಿಪಾಲ್ ಫೋಟೋಗ್ರಾಪರ್ ಉದಯಶಂಕರ್ ಅವರುತೃತೀಯ ಪಡೆದುಕೊಂಡಿದ್ದಾರೆ.ಬೆಂಗಳೂರಿನ ಪ್ರಜಾವಾಣಿಯ ಹಿರಿಯ ಛಾಯಾಗ್ರಾಹಕ ಎಂ.ಎಸ್. ಮಂಜುನಾಥ್  ಮತ್ತು ಇಂದ್ರಕುಮಾರ್ ದಸ್ತೇನವರ ಚಿತ್ರ ತೀರ್ಪುಗಾರರ ಮೆಚ್ಚುಗೆಯ ಬಹುಮಾನಕ್ಕೆ ಪಾತ್ರವಾಗಿದೆ.*ಇಂದು ಬಹುಮಾನ ವಿತರಣೆ:* ಆ.6ರಂದು (ಇಂದು) ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ  ನಡೆಯಲಿರುವ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಮಹೋತ್ಸವ ಉದ್ಘಾಟನಾ ಸಮಾರಂಭದಲ್ಲಿ  ಪ್ರಶಸ್ತಿ ಪ್ರದಾನ ಮಾಡಲಾಗುವುದು.*ಪ್ರಶಸ್ತಿ ವಿವರ:* ಸುದ್ದಿ ಚಿತ್ರ ವಿಭಾಗದಲ್ಲಿ ಸ್ಪರ್ಧೆಗೆ ಛಾಯಾಚಿತ್ರ ಆಹ್ವಾನಿಸಲಾಗಿದ್ದು, ಪ್ರಥಮ ಬಹುಮಾನ 10ಸಾವಿರ ರೂ. ಮತ್ತು ನಗದು ಫಲಕ, ದ್ವಿತೀಯ ಬಹುಮಾನ 5 ಸಾವಿರ ರೂ. ನಗದು ಮತ್ತು ಫಲಕ ಹಾಗೂ ತೃತೀಯ ಬಹುಮಾನ3 ಸಾವಿರ ರೂ. ನಗದು ಮತ್ತು ಫಲಕ ನೀಡಲಾಗುವುದು ಛಾಯಾಚಿತ್ರ ಸ್ಪರ್ಧಾ ವಿಭಾಗದ ಸಂಚಾಲಕ ಸತೀಶ್ ಇರಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top