Author name: editor

ಪ್ರಾದೇಶಿಕ ವಾರ್ತೆಗಳು

ಡಾ.ಸುಶಾಂತ್ ರೈ ಬೆಳ್ಳಿಪ್ಪಾಡಿ ಸೇರಿದಂತೆ 8 ಮಂದಿ ಸಾಧಕರಿಗೆ ಪುತ್ತೂರು ಬಂಟರ ಸಂಘದಿಂದ ಪೆರ್ಮೆದ ಬಂಟೆರ್ ಸನ್ಮಾನ ಗೌರವ

ಪುತ್ತೂರು – ರೈಸನ್ ನ್ಯೂಟ್ರಿಷನ್ ನ ವ್ಯವಸ್ಥಾಪಕ ನಿರ್ದೇಶಕರು ಮತ್ತು ಭಾರತೀಯ ಪಶು ವೈದ್ಯಕೀಯ ಮಂಡಳಿಯ ಸದಸ್ಯರಾಗಿರುವ ಡಾ.ಸುಶಾಂತ್ ರೈ ಬೆಳ್ಳಿಪ್ಪಾಡಿ ಅವರು ಪೆರ್ಮೆದ ಬಂಟೆರ್ ಸನ್ಮಾನ ಗೌರವಕ್ಕೆ ಆಯ್ಕೆಯಾಗಿದ್ದಾರೆ. ಪುತ್ತೂರು ಕೊಂಬೆಟ್ಟುವಿನಲ್ಲಿರುವ ಮೂಲ್ಕಿ ಸುಂದರ್ ರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಜುಲೈ12ರ ಶನಿವಾರ ಬೆಳಿಗ್ಗೆ 9 ಗಂಟೆಗೆ ನಡೆಯುವ ಪುತ್ತೂರು ಬಂಟರ ಸಂಘವು ಆಯೋಜಿಸಿರುವ ಕಾರ್ಯಕ್ರಮದಲ್ಲಿ ಡಾ.ಸುಶಾಂತ್ ರೈ ಬೆಳ್ಳಿಪ್ಪಾಡಿ ಸೇರಿದಂತೆ 8 ಮಂದಿ ಬಂಟ ಸಾಧಕರು ಪೆರ್ಮೆದ ಬಂಟೆರ್ ಸನ್ಮಾನ ಗೌರವವನ್ನು ಬಂಟ ಗಣ್ಯರ ಸಮ್ಮುಖದಲ್ಲಿ ಸ್ವೀಕರಿಸಲಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ಯಕ್ಷಗಾನದ ಕಲಿಕೆಯಿಂದ ವಿದ್ಯಾರ್ಥಿಗಳ ಏಕಾಗ್ರತೆ ಹೆಚ್ಚುತ್ತದೆ

“ಯಕ್ಷಗಾನದ ಕಲಿಕೆಯಿಂದ ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಹೆಚ್ಚಾಗುತ್ತದೆ. ಇದರಿಂದ ಶೈಕ್ಷಣಿಕ ಅಂಕಗಳಿಕೆಯೂ ಹೆಚ್ಚಾಗಿ, ಸಂಸ್ಕಾರವೂ ಬೆಳೆಯುತ್ತದೆ” ಎಂದು ಮುಲ್ಲಕಾಡು ಸರಕಾರಿ ಶಾಲೆಯ ಎಸ್.ಡಿ.ಎಂ.ಸಿ‌. ಅಧ್ಯಕ್ಷರಾದ ಶ್ರೀಮತಿ ಗೀತಾ ಲಕ್ಷೀಶ ಶೆಟ್ಟಿ ಹೇಳಿದರು. ಇವರು ಮುಲ್ಲಕಾಡು ಸರಕಾರಿ ಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.ಸರಕಾರಿ ಪ್ರೌಢಶಾಲೆ ಮುಲ್ಲಕಾಡಿನಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಅವರು ನಡೆಸುವ ಯಕ್ಷ ಶಿಕ್ಷಣದ ಮೂರನೆಯ ವರ್ಷದ ಉಚಿತ ಯಕ್ಷ ತರಗತಿಯ ಉದ್ಘಾಟನಾ ಸಮಾರಂಭ ನೆರವೇರಿತು. ಯಕ್ಷ ಧ್ರುವ ಪಟ್ಲ ಫೌಂಡೇಶನ್‌ನ ಮಂಗಳೂರು ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಕೃಷ್ಣ ಶೆಟ್ಟಿ ತಾರೆಮಾರ್ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಪ್ರಧಾನ ಸಂಚಾಲಕರಾದ ಶ್ರೀ ವಾಸುದೇವ ಐತಾಳರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್‌ನ ಪದಾಧಿಕಾರಿಗಳಾದ ಪ್ರದೀಪ್ ಆಳ್ವ, ರವಿಚಂದ್ರ ಶೆಟ್ಟಿ, ಗೋಪಿನಾಥ್, ಸಂತೋಷ ಕುಮಾರ್ ರೈ , ಸುಬ್ರಹ್ಮಣ್ಯ ಭಟ್, ಯಕ್ಷಗಾನ ಗುರುಗಳಾದ ರಾಕೇಶ್ ರೈ ಅಡ್ಕ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾದ ವೇಣುಗೋಪಾಲ ಉಪಸ್ಥಿತರಿದ್ದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಜಿ. ಉಸ್ಮಾನ್ ಅವರು ಸ್ವಾಗತಿಸಿ, ಶಿಕ್ಷಕ ನಾಗರಾಜ ಖಾರ್ವಿ ವಂದಿಸಿದರು. ಶ್ರೀಮತಿ ಕೃಪಾ ಕಾರ್ಯಕ್ರಮ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ಸ್ಮಾರ್ಟ್ ಅಂಗನವಾಡಿಯಾಗಿ ಬಿಜೈ ಕೇಂದ್ರ-ಸ್ಮಾರ್ಟ್ ಸಿಟಿ ಜಿಎಂ ಅರುಣ್‌ಪ್ರಭ ಕೆ.ಎಸ್.

ಮಂಗಳೂರು: ಸ್ಮಾರ್ಟ್ ಸಿಟಿ ಯೋಜನೆಯ ಪ್ರದೇಶ ಆಧಾರಿತ ಅಭಿವೃದ್ಧಿಯಡಿ ನಗರದ ಎಂಟು ವಾರ್ಡ್‌ಗಳ 54 ಶಾಲೆಗಳನ್ನು ಅಭಿವೃದ್ದಿ ಪಡಿಸಲಾಗಿದೆ. ಮುಂದಿನ ದಿನಗಳಲ್ಲಿ ಬಿಜೈ ಅಂಗನವಾಡಿ ಕೇಂದ್ರವನ್ನು ಸ್ಮಾರ್ಟ್ ಅಂಗನವಾಡಿಯಾಗಿ ಅಭಿವೃದ್ದಿ ಪಡಿಸಲು ಸಹಕರಿಸುವುದಾಗಿ ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯ ಜನರಲ್ ಮ್ಯಾನೇಜರ್ ಅರುಣ್‌ಪ್ರಭ ಕೆ.ಎಸ್.ಹೇಳಿದರು.ಬಿಜೈ ಅಂಗನವಾಡಿ ಕೇಂದ್ರಕ್ಕೆ ವೈಯಕ್ತಿಕ ನೆಲೆಯಲ್ಲಿ ಎರಡು ಆಹಾರ ಸುರಕ್ಷತಾ ಬಾಕ್ಸ್ ಹಸ್ತಾಂತರಿಸಿ ಮಾತನಾಡಿದ ಅವರುಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಹಾಗೂ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೆರವಿನಿಂದ ಬಿಜೈ ಅಂಗನವಾಡಿ ಕೇಂದ್ರ ಉತ್ತಮ ಅಭಿವೃದ್ಧಿ ಕಂಡಿದೆ. ಇನ್ನಷ್ಟು ಸೌಲಭ್ಯಗಳನ್ನು ಒದಗಿಸುವ ಮೂಲಕ ಮಾದರಿ ಅಂಗನವಾಡಿ ಕೇಂದ್ರವಾಗಿ ರೂಪಿಸಲಾಗುವುದು ಎಂದರು.ಸ್ಮಾರ್ಟ್ ಸಿಟಿ ಯೋಜನೆಯಡಿ ಕಾಪಿಕಾಡ್ -ಬಿಜೈ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ಸಹಕರಿಸುವಂತೆ ಶಾಲೆಯ ಮುಖ್ಯ ಶಿಕ್ಷಕಿ ಲೀನಾ ಐರಿನ್ ಗೋವಿಯಸ್ ಈ ಸಂದರ್ಭ ವಿನಂತಿಸಿದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಬಿಜೈ ಅಂಗನವಾಡಿ ಕೇಂದ್ರದ ಶಿಕ್ಷಕಿ ನಂದಾ, ಬಿಜೈ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಸಿಸಿಲಿಯ ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ಎಂಪಿ ಎಂಎಲ್ಎ ನ್ಯೂಸ್ 13ನೇ ಸೌಹಾರ್ದ ಸಂಗಮದಲ್ಲಿ ಪುಣೆಯ ಖ್ಯಾತ ಮಕ್ಕಳ ತಜ್ಞ ಡಾ. ಸುಧಾಕರ ಶೆಟ್ಟಿ ಮೂಡಬಿದ್ರೆ ಅವರಿಗೆ ‘ಸಮಾಜ ರತ್ನ’ ಪ್ರಶಸ್ತಿ ಪ್ರದಾನ

ಮಂಗಳೂರು: ಎಂಪಿ ಎಂಎಲ್ಎ ನ್ಯೂಸ್ 13ನೇ ಸೌಹಾರ್ದ ಸಂಗಮವು ಜೂನ್ 24ರ ಮಂಗಳವಾರ ಸಂಜೆ ಗಂಟೆ 4.00ರಿಂದ 9.00ರ ತನಕ ಮಂಗಳೂರು ಕುದ್ಮುಲ್ ರಂಗರಾವ್ ಪುರಭವನ (ಟೌನ್‍ಹಾಲ್)ನಲ್ಲಿ ನಡೆಯಿತು.ಸೌಹಾರ್ದ ಸಂಗಮವನ್ನು ಕನ್ನಡ ಸಾಹಿತ್ಯ ಪರಿಷತ್, ಬೆಂಗಳೂರು, ಇದರ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರುರವರು ಉದ್ಘಾಟಿಸಿ, ನಮ್ಮ ಜಿಲ್ಲೆಗೆ ಸೌಹಾರ್ದತೆಯ ಕೊರತೆ ಇದ್ದು ಇಂತಹ ಸೌಹಾರ್ದ ಸಂಗಮಗಳು ಹೆಚ್ಚು ಮಹತ್ವಪೂರ್ಣ ಮತ್ತು ಅರ್ಥಪೂರ್ಣವಾಗಿ ಸಮಾಜವನ್ನು ತಲುಪುತ್ತದೆ ಎಂದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕರ್ನಾಟಕ ಸರಕಾರದ ಮಾಜಿ ಸಚಿವ ಬಿ. ರಮಾನಾಥ ರೈಯವರು ನಮ್ಮ ಜಿಲ್ಲೆ ಅಭಿವೃದ್ಧಿಯಲ್ಲಿ ದೇಶದಲ್ಲೇ ಪ್ರಥಮ ಸ್ಥಾನದಲ್ಲಿದ್ದು ಕೊರತೆಯಿರುವುದು ಸೌಹಾರ್ದತೆಯಲ್ಲಿ ಎಂದರು. ಇಂತಹ ಕೊರತೆಯನ್ನು ಸೌಹಾರ್ದ ಸಂಗಮದಂತಹ ಜನಪರ ಕಾರ್ಯಕ್ರಮಗಳು ನೀಗಿಸಬಲ್ಲದು ಎಂದು ಸೌಹಾರ್ದ ಸಂಗಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಸೌಹಾರ್ದತೆ ಎನ್ನುವುದು ಈ ಸಮಾಜಕ್ಕೆ ಬೀಜಮಂತ್ರವಾಗಲಿ. ಶಾಂತಿ ಸಾಮರಸ್ಯ, ಸಹಬಾಳ್ವೆ, ಸೌಹಾರ್ದ ಸಂಗಮದ ಮೂಲಕ ರಾಷ್ಟ್ರವ್ಯಾಪ್ತಿ ಪಸರಿಸಲಿ ಎಂದು ದೇವರಾಜ ಅರಸು ರಾಜ್ಯಪ್ರಶಸ್ತಿ ಪುರಸ್ಕೃತ ಸಮಾಜ ವಿಜ್ಞಾನಿ ಡಾ. ಅಣ್ಣಯ್ಯ ಕುಲಾಲ್‍ರವರು ಹೇಳಿದರು. ಮಂಗಳೂರು ಪ್ರೆಸ್‍ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್, ನಿವೃತ್ತ ಸರಕಾರಿ ವೈದ್ಯಾಧಿಕಾರಿ ಡಾ. ಜೂಲಿಯಾನ ಸಲ್ಡಾನ ಅವರು ಸೌಹಾರ್ದ ಸಂಗಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಮಾತನಾಡಿದರು.ಮನುಷ್ಯ-ಮನುಷ್ಯರ ನಡುವೆ ಸೌಹಾರ್ದತೆ, ಭಾೃತತ್ವ ಅತ್ಯಗತ್ಯವಾಗಿದ್ದು ಜಾತಿ, ಮತ, ಪಕ್ಷ-ಭೇದವಿಲ್ಲದೆ ಸಾಧಕರುಗಳನ್ನು ಗುರುತಿಸಿ, ಪ್ರೋತ್ಸಾಹಿಸುವ ಸೌಹಾರ್ದ ಸಂಗಮ ಕಾರ್ಯಕ್ರಮ ಶ್ಲಾಘನೀಯವಾಗಿದೆ. ಇಲ್ಲಿ ಸಂಘಟಕರ ಪ್ರಯತ್ನ ಮೆಚ್ಚತಕ್ಕದ್ದು ಎಂದು ಸೌಹಾರ್ದ ಸಂಗಮದ ಅಧ್ಯಕ್ಷತೆ ವಹಿಸಿದ್ದ ಹಿರಿಯ ನ್ಯಾಯವಾದಿ ಕೆ. ದಯಾನಂದ ರೈಯವರು ತಿಳಿಸಿದರು.ಸಮಾರಂಭದಲ್ಲಿ ವಾರ್ತಾ ಇಲಾಖೆಯ ದಿವ್ಯ ಆರ್. ಶೆಟ್ಟಿ, ಯುವವಾಹಿನಿ (ರಿ) ಕೇಂದ್ರ ಸಮಿತಿ ಮಾಜಿ ಅಧ್ಯಕ್ಷ ರಾಜೇಶ್ ಬಿ., ಎಂ.ಸಿ.ಸಿ. ಬ್ಯಾಂಕ್‍ನ ಅಧ್ಯಕ್ಷ ಅನಿಲ್ ಲೋಬೊ, ವೆನ್ಲಾಕ್ ಜಿಲ್ಲಾ ಸರಕಾರಿ ಆಸ್ಪತ್ರೆ ಮೂತ್ರರೋಗ ತಜ್ಞ ಡಾ. ಸದಾನಂದ ಪೂಜಾರಿ, ಯುವವಾಹಿನಿ (ರಿ) ಕೇಂದ್ರ ಸಮಿತಿ ಅಧ್ಯಕ್ಷ ಲೋಕೇಶ್ ಕೋಟ್ಯಾನ್, ಮಹಿಳಾ ಮಂಡಲ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಚಂಚಲಾಕ್ಷಿ ತೇಜೋಮಯ ಮೊದಲಾದವರು ಉಪಸ್ಥಿತರಿದ್ದರು.ನರೇಶ್‍ಕುಮಾರ್ ಸಸಿಹಿತ್ಲು ಇವರು ಸ್ವಾಗತಿಸಿ, ಎಸ್.ಆರ್. ಪ್ರದೀಪ್ ವಂದಿಸಿದರು, ಮಲ್ಲಿಕಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಡಾ. ಅಶೋಕ್ ಶೆಟ್ಟಿ ಬಿ.ಎನ್.ರವರು ಪ್ರಸ್ತಾವನೆಗೈದರು. ದಿನಕರ ಡಿ. ಬಂಗೇರ, ಸನ್ಮಾನ ಪತ್ರ ವಾಚಿಸಿದರು. ಕನ್ನಡ-ತುಳು ಚಲನಚಿತ್ರ ಹಿನ್ನಲೆ ಗಾಯಕ ರವೀಂದ್ರ ಪ್ರಭು ಬಳಗದವರಿಂದ ರಾಗ್ ರಂಗ್ ಸೌಹಾರ್ದ ಸುಗಮ ಸಂಗೀತ ರಸಮಂಜರಿ ಮತ್ತು ದಿನೇಶ್ ಅತ್ತಾವರ ನಿರ್ದೇಶನದಲ್ಲಿ ರಂಗ ಚಲನ ಕಲಾವಿದರು ಮಂಗಳೂರು ಇವರಿಂದ ಯುವಜಾಗೃತಿ ಹಾಡುಗಳ ಮಿಶ್ರಣ ನಾಟಕ ವಿನೂತನ ಕಾರ್ಯಕ್ರಮ ನಡೆಯಿತು.ಈ ಸೌಹಾರ್ದ ಸಂಗಮದಲ್ಲಿ ಪುಣೆಯ ಖ್ಯಾತ ಮಕ್ಕಳ ತಜ್ಞ ಡಾ. ಸುಧಾಕರ ಶೆಟ್ಟಿ ಪುಣೆ-ಮೂಡಬಿದ್ರೆ ಅವರಿಗೆ ‘ಸಮಾಜ ರತ್ನ’ ಪ್ರಶಸ್ತಿ ಸೇರಿದಂತೆ ಆರು ಮಂದಿ ಸಾಧಕರಿಗೆ ಪ್ರಶಸ್ತಿ ನೀಡಿ ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.ಕಾರಣಾಂತರದಿಂದ ಈ ಪ್ರಶಸ್ತಿಯನ್ನು ಸ್ವೀಕರಿಸಲು ಬರಲಾಗುವುದಿಲ್ಲವೆಂದು ಹೇಳಿರುವ ಸನ್ಮಾನಿತರು ತನ್ನ ಪರವಾಗಿ ಪ್ರಶಸ್ತಿಯನ್ನು ತನ್ನ ಸಹೋದರ ರಾಜೇಶ್ ಹೆಗ್ಡೆ ಮೂಡಬಿದಿರೆ ಅವರ ಮೂಲಕ ಹಸ್ತಾಂತರಿಸಬೇಕು ಎಂದು ವಿನಂತಿಸಿದ್ದರು.ಅದರಂತೆ ಡಾ. ಸುಧಾಕರ ಶೆಟ್ಟಿ ಪುಣೆ, ಮೂಡಬಿದ್ರೆಯವರಿಗೆ ‘ಸಮಾಜ ರತ್ನ’ ಪ್ರಶಸ್ತಿಯನ್ನು ರಾಜೇಶ್ ಹೆಗ್ಡೆಯವರ ಮೂಲಕ ಗಣ್ಯರ ಸಮ್ಮುಖದಲ್ಲಿ ಹಸ್ತಾಂತರಿಸಲಾಗಿದೆ.ಡಾ. ಸುಧಾಕರ ಶೆಟ್ಟಿ *ಇಡೀ ಜಗತ್ತನ್ನು ಮಾರಕ ಕೊರೋನಾ ಕಾಡಿದಾಗ ಪುಣೆಯಲ್ಲಿ 10 ಸಾವಿರಕ್ಕೂ ಮಿಕ್ಕಿ ರೋಗಿಗಳಿಗೆ ಅದರಲ್ಲೂ 1,500ಕ್ಕೂ ಮಿಕ್ಕಿ ಕರ್ನಾಟಕದವರಿಗೆ ಸಕಾಲಕ್ಕೆ ಸೂಕ್ತ ಚಿಕಿತ್ಸೆ ನೀಡಿ ಗುಣಪಡಿಸಿದ ಡಾ. ಸುಧಾಕರ ಶೆಟ್ಟಿಯವರು ಇದಕ್ಕಾಗಿ ಸತತ 4 ಬಾರಿ ಕೇಂದ್ರ ಸರಕಾರದ ಪ್ರತಿಷ್ಠಿತ ರಕ್ಷಾ ಮಂತ್ರಿ ಅವಾರ್ಡ್ ಪಡೆದ ತಂಡದ ಸದಸ್ಯರಾಗಿ ಗುರುತಿಸಿಕೊಂಡಿದ್ದಾರೆ.ಮೂಡಬಿದ್ರೆಯ ಪ್ರತಿಷ್ಠಿತ ಬಂಟ ಮನೆತನದಲ್ಲಿ ಜನಿಸಿದ ಡಾ. ಸುಧಾಕರ ಶೆಟ್ಟಿಯವರು ಕಳೆದ 37 ವರ್ಷಗಳಿಂದ ಪುಣೆಯಲ್ಲಿ ಮಕ್ಕಳ ತಜ್ಞರಾಗಿ ಲಕ್ಷಕ್ಕೂ ಮಿಕ್ಕಿ ಮಕ್ಕಳಿಗೆ ಸೂಕ್ತ ಚಿಕಿತ್ಸೆ ನೀಡಿ ಗುಣಪಡಿಸಿದ ಕೀರ್ತಿ ಹೊಂದಿದ್ದಾರೆ.ಕಳೆದ 31 ವರ್ಷಗಳಿಂದ ಪುಣೆಯಲ್ಲಿ ಪ್ರತಿಷ್ಠಿತ ಬೇಬಿ ಫ್ರೆಂಡ್ ಮಕ್ಕಳ ಕ್ಲಿನಿಕ್‍ನ್ನು ಹೊಂದಿರುವ ಸನ್ಮಾನ್ಯರು ಪುಣೆ ಪೊಲೀಸ್ ಹಾಸ್ಪಿಟಲ್, ಪುಣೆ ಕಂಟೋನ್ಮೆಂಟ್ ಹಾಸ್ಪಿಟಲ್, SRP ಆಸ್ಪತ್ರೆಯಲ್ಲಿ ಮಕ್ಕಳ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.ಭಾರತೀಯ ವಿದ್ಯಾಪೀಠ ಯುನಿವರ್ಸಿಟಿಯಲ್ಲಿ ಪ್ರೊಫೆಸರ್ ಆಗಿರುವ ಸನ್ಮಾನಿತರು ಮೂಡಬಿದ್ರೆಯ ಡಾ. ಎಂ. ಮೋಹನ್ ಆಳ್ವರ ವಿದ್ಯಾಸಂಸ್ಥೆಯಲ್ಲಿ ವಿಶೇಷ ಉಪನ್ಯಾಸಕರಾಗಿ ವೈದ್ಯಕೀಯ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದ್ದಾರೆ.ಸಾವಿರಕ್ಕೂ ಮಿಕ್ಕಿ ಮಕ್ಕಳ ಉಚಿತ ಆರೋಗ್ಯ ತಪಾಸಣಾ ಶಿಬಿರಗಳಲ್ಲಿ ಭಾಗವಹಿಸಿರುವ ಸನ್ಮಾನ್ಯರು ಮೂಡಬಿದ್ರೆಯ ಡಾ. ಎಂ. ಮೋಹನ್ ಆಳ್ವರ ಸಹಕಾರದೊಂದಿಗೆ ಕಟೀಲು ಮಕ್ಕಳ ಸಂಚಾರಿ ಕ್ಲಿನಿಕನ್ನು ಉಚಿತವಾಗಿ ಆರಂಭಿಸಿರುವ ಜನಮೆಚ್ಚಿದ ವೈದ್ಯಕೀಯ ಸಮಾಜಸೇವಕರಾಗಿ ಗುರುತಿಸಿದ್ದಾರೆ.25 ಶಾಲೆಗಳಲ್ಲಿ ಸ್ಕೂಲ್ ಹೆಲ್ತ್ ಪ್ರೋಗ್ರಾಂ, ಪುಣೆ ರೆಡ್‍ಲೈಟ್ ಏರಿಯಾದಲ್ಲಿ ಅಲ್ಲಿನ ಮಹಿಳೆಯರ ಮಕ್ಕಳ ಆರೋಗ್ಯ ರಕ್ಷಣೆ, ಈ ಬಗ್ಗೆ ಜಾಗೃತಿ. ಉಚಿತ ಆರೋಗ್ಯ ತಪಾಸಣೆ ನಡೆಸಿದ ದೇಶದ ಪ್ರಪ್ರಥಮ ವೈದ್ಯರಾಗಿ ಸನ್ಮಾನಿತರು ಗುರುತಿಸಿಕೊಂಡಿದ್ದಾರೆ.ಪುಣೆ ಮಹಿಳಾ ಸೆಂಟ್ರಲ್ ಜೈಲಿನ ಖೈದಿಗಳ ಮಕ್ಕಳ ಆರೋಗ್ಯ ರಕ್ಷಣೆ ಬಗ್ಗೆ ಕೂಡಾ ವಿಶೇಷ ವೈದ್ಯಕೀಯ ತಪಾಸಣೆಯನ್ನು ನಡೆಸುತ್ತಾ ಬಂದಿರುವ ಡಾ. ಸುಧಾಕರ ಶೆಟ್ಟಿಯವರು ನೇರ ಮಾತಿನ, ನಿಷ್ಕಳಂಕ, ನಿಸ್ವಾರ್ಥ ವೈದ್ಯಕೀಯ ಸಮಾಜಸೇವಕರು. ಹಗಲಿರುಳು ವೈದ್ಯಕೀಯ ಜಗತ್ತಿನಲ್ಲಿ ಕಾಣಸಿಗುವ ವೈದ್ಯಕೀಯ ಲೋಕದ ಅಪೂರ್ವ ಸಾಧಕ, ಸಮಾಜಚಿಂತಕ ಇವರಿಗೆ 2022ರಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಕೋವಿಡ್ ಸಂದರ್ಭ ಸಲ್ಲಿಸಿದ ಅತ್ಯುತ್ತಮ ಸೇವಾಗಿ ಪುಣೆ ಕಂಟೋನ್ಮೆಂಟ್ ಬೋರ್ಡ್‍ನಿಂದ ಎಕ್ಸಲೆನ್ಸಿ ಸರ್ಟಿಫಿಕೇಟ್, ಸಿಖ್ ಸಮುದಾಯದಿಂದ ಚಾರ್ ಸಹಿಬಜಾದೆ ಅವಾರ್ಡ್ ದೊರಕಿರುತ್ತದೆ.

ಪ್ರಾದೇಶಿಕ ವಾರ್ತೆಗಳು

ಎಂಪಿ ಎಂಎಲ್ಎ ನ್ಯೂಸ್ 13ನೇ ಸೌಹಾರ್ದ ಸಂಗಮದಲ್ಲಿ ಡಾ. ರೋಹನ್ ಮೊಂತೆರೋ ಅವರಿಗೆ ‘ಉದ್ಯಮ ರತ್ನ’ ಪ್ರಶಸ್ತಿ ಪ್ರದಾನ

ಮಂಗಳೂರು: ಎಂಪಿ ಎಂಎಲ್ಎ ನ್ಯೂಸ್ 13ನೇ ಸೌಹಾರ್ದ ಸಂಗಮವು ಜೂನ್ 24ರ ಮಂಗಳವಾರ ಸಂಜೆ ಗಂಟೆ 4.00ರಿಂದ 9.00ರ ತನಕ ಮಂಗಳೂರು ಕುದ್ಮುಲ್ ರಂಗರಾವ್ ಪುರಭವನ (ಟೌನ್‍ಹಾಲ್)ನಲ್ಲಿ ನಡೆಯಿತು.ಸೌಹಾರ್ದ ಸಂಗಮವನ್ನು ಕನ್ನಡ ಸಾಹಿತ್ಯ ಪರಿಷತ್, ಬೆಂಗಳೂರು, ಇದರ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರುರವರು ಉದ್ಘಾಟಿಸಿ, ನಮ್ಮ ಜಿಲ್ಲೆಗೆ ಸೌಹಾರ್ದತೆಯ ಕೊರತೆ ಇದ್ದು ಇಂತಹ ಸೌಹಾರ್ದ ಸಂಗಮಗಳು ಹೆಚ್ಚು ಮಹತ್ವಪೂರ್ಣ ಮತ್ತು ಅರ್ಥಪೂರ್ಣವಾಗಿ ಸಮಾಜವನ್ನು ತಲುಪುತ್ತದೆ ಎಂದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕರ್ನಾಟಕ ಸರಕಾರದ ಮಾಜಿ ಸಚಿವ ಬಿ. ರಮಾನಾಥ ರೈಯವರು ನಮ್ಮ ಜಿಲ್ಲೆ ಅಭಿವೃದ್ಧಿಯಲ್ಲಿ ದೇಶದಲ್ಲೇ ಪ್ರಥಮ ಸ್ಥಾನದಲ್ಲಿದ್ದು ಕೊರತೆಯಿರುವುದು ಸೌಹಾರ್ದತೆಯಲ್ಲಿ ಎಂದರು. ಇಂತಹ ಕೊರತೆಯನ್ನು ಸೌಹಾರ್ದ ಸಂಗಮದಂತಹ ಜನಪರ ಕಾರ್ಯಕ್ರಮಗಳು ನೀಗಿಸಬಲ್ಲದು ಎಂದು ಸೌಹಾರ್ದ ಸಂಗಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಸೌಹಾರ್ದತೆ ಎನ್ನುವುದು ಈ ಸಮಾಜಕ್ಕೆ ಬೀಜಮಂತ್ರವಾಗಲಿ. ಶಾಂತಿ ಸಾಮರಸ್ಯ, ಸಹಬಾಳ್ವೆ, ಸೌಹಾರ್ದ ಸಂಗಮದ ಮೂಲಕ ರಾಷ್ಟ್ರವ್ಯಾಪ್ತಿ ಪಸರಿಸಲಿ ಎಂದು ದೇವರಾಜ ಅರಸು ರಾಜ್ಯಪ್ರಶಸ್ತಿ ಪುರಸ್ಕೃತ ಸಮಾಜ ವಿಜ್ಞಾನಿ ಡಾ. ಅಣ್ಣಯ್ಯ ಕುಲಾಲ್‍ರವರು ಹೇಳಿದರು. ಮಂಗಳೂರು ಪ್ರೆಸ್‍ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್, ನಿವೃತ್ತ ಸರಕಾರಿ ವೈದ್ಯಾಧಿಕಾರಿ ಡಾ. ಜೂಲಿಯಾನ ಸಲ್ಡಾನ ಅವರು ಸೌಹಾರ್ದ ಸಂಗಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಮಾತನಾಡಿದರು.ಮನುಷ್ಯ-ಮನುಷ್ಯರ ನಡುವೆ ಸೌಹಾರ್ದತೆ, ಭಾೃತತ್ವ ಅತ್ಯಗತ್ಯವಾಗಿದ್ದು ಜಾತಿ, ಮತ, ಪಕ್ಷ-ಭೇದವಿಲ್ಲದೆ ಸಾಧಕರುಗಳನ್ನು ಗುರುತಿಸಿ, ಪ್ರೋತ್ಸಾಹಿಸುವ ಸೌಹಾರ್ದ ಸಂಗಮ ಕಾರ್ಯಕ್ರಮ ಶ್ಲಾಘನೀಯವಾಗಿದೆ. ಇಲ್ಲಿ ಸಂಘಟಕರ ಪ್ರಯತ್ನ ಮೆಚ್ಚತಕ್ಕದ್ದು ಎಂದು ಸೌಹಾರ್ದ ಸಂಗಮದ ಅಧ್ಯಕ್ಷತೆ ವಹಿಸಿದ್ದ ಹಿರಿಯ ನ್ಯಾಯವಾದಿ ಕೆ. ದಯಾನಂದ ರೈಯವರು ತಿಳಿಸಿದರು.ಸಮಾರಂಭದಲ್ಲಿ ವಾರ್ತಾ ಇಲಾಖೆಯ ದಿವ್ಯ ಆರ್. ಶೆಟ್ಟಿ, ಯುವವಾಹಿನಿ (ರಿ) ಕೇಂದ್ರ ಸಮಿತಿ ಮಾಜಿ ಅಧ್ಯಕ್ಷ ರಾಜೇಶ್ ಬಿ., ಎಂ.ಸಿ.ಸಿ. ಬ್ಯಾಂಕ್‍ನ ಅಧ್ಯಕ್ಷ ಅನಿಲ್ ಲೋಬೊ, ವೆನ್ಲಾಕ್ ಜಿಲ್ಲಾ ಸರಕಾರಿ ಆಸ್ಪತ್ರೆ ಮೂತ್ರರೋಗ ತಜ್ಞ ಡಾ. ಸದಾನಂದ ಪೂಜಾರಿ, ಯುವವಾಹಿನಿ (ರಿ) ಕೇಂದ್ರ ಸಮಿತಿ ಅಧ್ಯಕ್ಷ ಲೋಕೇಶ್ ಕೋಟ್ಯಾನ್, ಮಹಿಳಾ ಮಂಡಲ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಚಂಚಲಾಕ್ಷಿ ತೇಜೋಮಯ ಮೊದಲಾದವರು ಉಪಸ್ಥಿತರಿದ್ದರು.ನರೇಶ್‍ಕುಮಾರ್ ಸಸಿಹಿತ್ಲು ಇವರು ಸ್ವಾಗತಿಸಿ, ಎಸ್.ಆರ್. ಪ್ರದೀಪ್ ವಂದಿಸಿದರು, ಮಲ್ಲಿಕಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಡಾ. ಅಶೋಕ್ ಶೆಟ್ಟಿ ಬಿ.ಎನ್.ರವರು ಪ್ರಸ್ತಾವನೆಗೈದರು. ದಿನಕರ ಡಿ. ಬಂಗೇರ, ಸನ್ಮಾನ ಪತ್ರ ವಾಚಿಸಿದರು. ಕನ್ನಡ-ತುಳು ಚಲನಚಿತ್ರ ಹಿನ್ನಲೆ ಗಾಯಕ ರವೀಂದ್ರ ಪ್ರಭು ಬಳಗದವರಿಂದ ರಾಗ್ ರಂಗ್ ಸೌಹಾರ್ದ ಸುಗಮ ಸಂಗೀತ ರಸಮಂಜರಿ ಮತ್ತು ದಿನೇಶ್ ಅತ್ತಾವರ ನಿರ್ದೇಶನದಲ್ಲಿ ರಂಗ ಚಲನ ಕಲಾವಿದರು ಮಂಗಳೂರು ಇವರಿಂದ ಯುವಜಾಗೃತಿ ಹಾಡುಗಳ ಮಿಶ್ರಣ ನಾಟಕ ವಿನೂತನ ಕಾರ್ಯಕ್ರಮ ನಡೆಯಿತು.ಈ ಸೌಹಾರ್ದ ಸಂಗಮದಲ್ಲಿ ರೋಹನ್ ಕಾರ್ಪೊರೇಶನ್ ಮಂಗಳೂರಿನ ಆಡಳಿತ ನಿರ್ದೇಶಕರಾಗಿರುವ ಡಾ. ಮೋಹನ್ ಮೊಂತೆರೋ ಅವರಿಗೆ ‘ಉದ್ಯಮ ರತ್ನ’ ಪ್ರಶಸ್ತಿ ಸೇರಿದಂತೆ ಆರು ಮಂದಿ ಸಾಧಕರಿಗೆ ಪ್ರಶಸ್ತಿ ನೀಡಿ ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.ರೋಹನ್ ಮೊಂತೆರೋ*ಡಾ. ರೋಹನ್ ಮೊಂತೆರೋ ಅವರು ಶಿಸ್ತು, ಶ್ರದ್ದೆ, ಸಮಯ ಪಾಲನೆ, ಕಠಿಣ ಪರಿಶ್ರಮದಿಂದ ರಿಯಲ್ ಎಸ್ಟೇಟ್ ಉದ್ಯಮದಲ್ಲಿ ಹಂತ ಹಂತವಾಗಿ ಮೇಲೇರಿ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿಯೇ ಹೆಸರಾಂತ ಬಿಲ್ಡರ್ ಆಗಿ, ಉದ್ಯಮಿಗಳ ಸಾಲಿನಲ್ಲಿ ಮಿಂಚುತ್ತಿರುವ, ಸಾಧನೆಗಳ ಸಾಲಿನಲ್ಲಿ ಅಗ್ರಪಂಕ್ತಿಯಲ್ಲಿದ್ದಾರೆ.ಬಾಲ್ಯದಲ್ಲಿ ಬಡತನವನ್ನು ಸ್ವತಃ ಅನುಭವಿಸಿ ರಿಯಲ್ ಎಸ್ಟೇಟ್ ಮೂಲಕ ಹಂತ ಹಂತವಾಗಿ ಮೇಲೇರಿದ ಡಾ. ರೋಹನ್ ಮೊಂತೆರೋ ಅವರು 1994ರಲ್ಲಿ ಪ್ರಾಪರ್ಟಿ ರಿಯಲ್ ಎಸ್ಟೇಟ್ ಮೂಲಕ ಉದ್ಯಮರಂಗಕ್ಕೆ ಹೆಜ್ಜೆಯಿರಿಸಿ ಕಠಿಣ ಪರಿಶ್ರಮದಿಂದ ಸಾಗಿ ಜನರ ಪ್ರೀತಿ ವಿಶ್ವಾಸ ಗಳಿಸಿ ರೋಹನ್ ಕಾರ್ಪೊರೇಶನ್ ಎಂಬ ಬೃಹತ್ ಸಂಸ್ಥೆಗೆ ಆಡಳಿತ ನಿರ್ದೇಶಕರಾಗಿ ಬೆಳೆದವರು.ಇವರ ಮಾಲಕತ್ವದಲ್ಲಿ ಸಾವಿರಾರು ಉದ್ಯೋಗಿಗಳು ಕೆಲಸ ಮಾಡುತ್ತಿದ್ದಾರೆ. ಸದಾ ಜನಪರ ಚಿಂತನೆ, ಸೌಹಾರ್ದತೆ, ಕಲೆಗೆ ಪ್ರೋತ್ಸಾಹ, ನಾಡಿನ ಸಂಸ್ಕೃತಿಗೆ ಸಹಕಾರ, ಹೀಗೇ ಡಾ. ರೋಹನ್ ಮೊಂತೆರೋ ಅವರು ‘ಬಡವರ ಬಂಧು’ ಆಗಿ ಸಮಾಜದಲ್ಲಿ ಗುರುತಿಸಿಕೊಂಡಿದ್ದಾರೆ. ಅವರ ಸಮಾಜ ಸೇವೆಯನ್ನು ಪರಿಗಣಿಸಿ ಮಂಗಳೂರು ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.ನೇರ ಮಾತು, ನಿರ್ಮಲ ಚಿತ್ತದ ನಿಷ್ಕಳಂಕ ವ್ಯಕ್ತಿತ್ವದ ಸನ್ಮಾನ್ಯ ಡಾ. ರೋಹನ್ ಮೊಂತೆರೋ ಅವರು ಯುವಪೀಳಿಗೆಗೆ ಮಾದರಿಯಾಗಿದ್ದಾರೆ. ಅವರು ಸಮಾಜಕ್ಕೆ, ಉದ್ಯಮರಂಗಕ್ಕೆ ಸಲ್ಲಿಸಿದ ಅನನ್ಯ ಕೊಡುಗೆಯನ್ನು ಪರಿಗಣಿಸಿ ಎಂಪಿ ಎಂಎಲ್ಎ ನ್ಯೂಸ್ ಡಾ. ರೋಹನ್ ಮೊಂತೆರೋ ಅವರಿಗೆ ‘ಉದ್ಯಮ ರತ್ನ’ ಪ್ರಶಸ್ತಿಯನ್ನು ಕಾರ್ಯಕ್ರಮಕ್ಕೆ ಅನಿವಾರ್ಯ ಕಾರಣಗಳಿಂದ ಬರಲಾಗದಿದ್ಧದ್ದಕ್ಕೆ ಗಣ್ಯರ ಸಮ್ಮುಖದಲ್ಲಿ ಅವರ ಪರ್ಸನಲ್ ಸೆಕ್ರೆಟರಿ ಕೀರ್ತನ ಗೌಡ ಕೊಡಪಾಲ ಮೂಲಕ ಹಸ್ತಾಂತರಿಸಿ ,ಗೌರವಿಸಿದೆ.

ಪ್ರಾದೇಶಿಕ ವಾರ್ತೆಗಳು

ಎಂಪಿ ಎಂಎಲ್ಎ ನ್ಯೂಸ್ 13ನೇ ಸೌಹಾರ್ದ ಸಂಗಮದಲ್ಲಿ ಹಿರಿಯ ಶಸ್ತ್ರಚಿಕಿತ್ಸಕ ಡಾ. ಶ್ರೀರಾಮ್ ಭಟ್ ಎಂ. ಅವರಿಗೆ ‘ವೈದ್ಯರತ್ನ’ ಪ್ರಶಸ್ತಿ ಪ್ರದಾನ

ಮಂಗಳೂರು: ಎಂಪಿ ಎಂಎಲ್ಎ ನ್ಯೂಸ್ 13ನೇ ಸೌಹಾರ್ದ ಸಂಗಮವು ಜೂನ್ 24ರ ಮಂಗಳವಾರ ಸಂಜೆ ಗಂಟೆ 4.00ರಿಂದ 9.00ರ ತನಕ ಮಂಗಳೂರು ಕುದ್ಮುಲ್ ರಂಗರಾವ್ ಪುರಭವನ (ಟೌನ್‍ಹಾಲ್)ನಲ್ಲಿ ನಡೆಯಿತು.ಸೌಹಾರ್ದ ಸಂಗಮವನ್ನು ಕನ್ನಡ ಸಾಹಿತ್ಯ ಪರಿಷತ್, ಬೆಂಗಳೂರು, ಇದರ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರುರವರು ಉದ್ಘಾಟಿಸಿ, ನಮ್ಮ ಜಿಲ್ಲೆಗೆ ಸೌಹಾರ್ದತೆಯ ಕೊರತೆ ಇದ್ದು ಇಂತಹ ಸೌಹಾರ್ದ ಸಂಗಮಗಳು ಹೆಚ್ಚು ಮಹತ್ವಪೂರ್ಣ ಮತ್ತು ಅರ್ಥಪೂರ್ಣವಾಗಿ ಸಮಾಜವನ್ನು ತಲುಪುತ್ತದೆ ಎಂದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕರ್ನಾಟಕ ಸರಕಾರದ ಮಾಜಿ ಸಚಿವ ಬಿ. ರಮಾನಾಥ ರೈಯವರು ನಮ್ಮ ಜಿಲ್ಲೆ ಅಭಿವೃದ್ಧಿಯಲ್ಲಿ ದೇಶದಲ್ಲೇ ಪ್ರಥಮ ಸ್ಥಾನದಲ್ಲಿದ್ದು ಕೊರತೆಯಿರುವುದು ಸೌಹಾರ್ದತೆಯಲ್ಲಿ ಎಂದರು. ಇಂತಹ ಕೊರತೆಯನ್ನು ಸೌಹಾರ್ದ ಸಂಗಮದಂತಹ ಜನಪರ ಕಾರ್ಯಕ್ರಮಗಳು ನೀಗಿಸಬಲ್ಲದು ಎಂದು ಸೌಹಾರ್ದ ಸಂಗಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.ಸೌಹಾರ್ದತೆ ಎನ್ನುವುದು ಈ ಸಮಾಜಕ್ಕೆ ಬೀಜಮಂತ್ರವಾಗಲಿ. ಶಾಂತಿ ಸಾಮರಸ್ಯ, ಸಹಬಾಳ್ವೆ, ಸೌಹಾರ್ದ ಸಂಗಮದ ಮೂಲಕ ರಾಷ್ಟ್ರವ್ಯಾಪ್ತಿ ಪಸರಿಸಲಿ ಎಂದು ದೇವರಾಜ ಅರಸು ರಾಜ್ಯಪ್ರಶಸ್ತಿ ಪುರಸ್ಕೃತ ಸಮಾಜ ವಿಜ್ಞಾನಿ ಡಾ. ಅಣ್ಣಯ್ಯ ಕುಲಾಲ್‍ರವರು ಹೇಳಿದರು. ಮಂಗಳೂರು ಪ್ರೆಸ್‍ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್, ನಿವೃತ್ತ ಸರಕಾರಿ ವೈದ್ಯಾಧಿಕಾರಿ ಡಾ. ಜೂಲಿಯಾನ ಸಲ್ಡಾನ ಅವರು ಸೌಹಾರ್ದ ಸಂಗಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಮಾತನಾಡಿದರು.ಮನುಷ್ಯ-ಮನುಷ್ಯರ ನಡುವೆ ಸೌಹಾರ್ದತೆ, ಭಾೃತತ್ವ ಅತ್ಯಗತ್ಯವಾಗಿದ್ದು ಜಾತಿ, ಮತ, ಪಕ್ಷ-ಭೇದವಿಲ್ಲದೆ ಸಾಧಕರುಗಳನ್ನು ಗುರುತಿಸಿ, ಪ್ರೋತ್ಸಾಹಿಸುವ ಸೌಹಾರ್ದ ಸಂಗಮ ಕಾರ್ಯಕ್ರಮ ಶ್ಲಾಘನೀಯವಾಗಿದೆ. ಇಲ್ಲಿ ಸಂಘಟಕರ ಪ್ರಯತ್ನ ಮೆಚ್ಚತಕ್ಕದ್ದು ಎಂದು ಸೌಹಾರ್ದ ಸಂಗಮದ ಅಧ್ಯಕ್ಷತೆ ವಹಿಸಿದ್ದ ಹಿರಿಯ ನ್ಯಾಯವಾದಿ ಕೆ. ದಯಾನಂದ ರೈಯವರು ತಿಳಿಸಿದರು.ಸಮಾರಂಭದಲ್ಲಿ ವಾರ್ತಾ ಇಲಾಖೆಯ ದಿವ್ಯ ಆರ್. ಶೆಟ್ಟಿ, ಯುವವಾಹಿನಿ (ರಿ) ಕೇಂದ್ರ ಸಮಿತಿ ಮಾಜಿ ಅಧ್ಯಕ್ಷ ರಾಜೇಶ್ ಬಿ., ಎಂ.ಸಿ.ಸಿ. ಬ್ಯಾಂಕ್‍ನ ಅಧ್ಯಕ್ಷ ಅನಿಲ್ ಲೋಬೊ, ವೆನ್ಲಾಕ್ ಜಿಲ್ಲಾ ಸರಕಾರಿ ಆಸ್ಪತ್ರೆ ಮೂತ್ರರೋಗ ತಜ್ಞ ಡಾ. ಸದಾನಂದ ಪೂಜಾರಿ, ಯುವವಾಹಿನಿ (ರಿ) ಕೇಂದ್ರ ಸಮಿತಿ ಅಧ್ಯಕ್ಷ ಲೋಕೇಶ್ ಕೋಟ್ಯಾನ್, ಮಹಿಳಾ ಮಂಡಲ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಚಂಚಲಾಕ್ಷಿ ತೇಜೋಮಯ ಮೊದಲಾದವರು ಉಪಸ್ಥಿತರಿದ್ದರು.ನರೇಶ್‍ಕುಮಾರ್ ಸಸಿಹಿತ್ಲು ಇವರು ಸ್ವಾಗತಿಸಿ, ಎಸ್.ಆರ್. ಪ್ರದೀಪ್ ವಂದಿಸಿದರು, ಮಲ್ಲಿಕಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಡಾ. ಅಶೋಕ್ ಶೆಟ್ಟಿ ಬಿ.ಎನ್.ರವರು ಪ್ರಸ್ತಾವನೆಗೈದರು. ದಿನಕರ ಡಿ. ಬಂಗೇರ, ಸನ್ಮಾನ ಪತ್ರ ವಾಚಿಸಿದರು. ಕನ್ನಡ-ತುಳು ಚಲನಚಿತ್ರ ಹಿನ್ನಲೆ ಗಾಯಕ ರವೀಂದ್ರ ಪ್ರಭು ಬಳಗದವರಿಂದ ರಾಗ್ ರಂಗ್ ಸೌಹಾರ್ದ ಸುಗಮ ಸಂಗೀತ ರಸಮಂಜರಿ ಮತ್ತು ದಿನೇಶ್ ಅತ್ತಾವರ ನಿರ್ದೇಶನದಲ್ಲಿ ರಂಗ ಚಲನ ಕಲಾವಿದರು ಮಂಗಳೂರು ಇವರಿಂದ ಯುವಜಾಗೃತಿ ಹಾಡುಗಳ ಮಿಶ್ರಣ ನಾಟಕ ವಿನೂತನ ಕಾರ್ಯಕ್ರಮ ನಡೆಯಿತು.ಈ ಸೌಹಾರ್ದ ಸಂಗಮದಲ್ಲಿ ಮಂಗಳೂರಿನ ಹಿರಿಯ ಶಸ್ತ್ರಚಿಕಿತ್ಸಕ ಡಾ. ಶ್ರೀರಾಮ್ ಭಟ್ ಎಂ. ಅವರಿಗೆ ‘ವೈದ್ಯರತ್ನ’ ಪ್ರಶಸ್ತಿ ಸೇರಿದಂತೆ ಆರು ಮಂದಿ ಸಾಧಕರಿಗೆ ಪ್ರಶಸ್ತಿ ನೀಡಿ ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು. ಡಾ. ಶ್ರೀರಾಮ್ ಭಟ್ ಎಂ:ಇವತ್ತು ಮಂಗಳೂರಲ್ಲಿ ಅತ್ಯಂತ ಅನುಭವಿ ಮತ್ತು ಪರಿಣತ, ಜನಪ್ರಿಯ ವೈದ್ಯರುಗಳಲ್ಲಿ ಡಾ. ಶ್ರೀರಾಮ್ ಭಟ್ ಎಂ. ಅವರ ಹೆಸರು ಮುಂಚೂಣಿಯಲ್ಲಿದೆ.ಬಡರೋಗಿಗಳಿಗೆ ಆಪದ್ಬಾಂಧವ ಎಂಥ ಕ್ಲಿಷ್ಟಕರವಾದ ಸರ್ಜರಿಯಿದ್ದರೂ ಅದನ್ನು ಲೀಲಾಜಾಲವಾಗಿ ಮಾಡಿ ಸಾವಿರಾರು ರೋಗಿಗಳಿಗೆ ಪುನರ್ಜನ್ಮ ನೀಡಿದ ಯಶಸ್ವಿ ಶಸ್ತ್ರ ಚಿಕಿತ್ಸಕ ತಜ್ಞರಾಗಿ ಡಾ. ಶ್ರೀರಾಮ್ ಭಟ್ ಅವರು ವೈದ್ಯಕೀಯ ಜಗತ್ತಿನಲ್ಲಿ ಹೊಸ ದಾಖಲೆ ಬರೆದಿದ್ದಾರೆ. ಹೈಸ್ಕೂಲ್ ಶಿಕ್ಷಕರಾಗಿದ್ದ ದಿ. ಕೃಷ್ಣ ಭಟ್ ಎಂ. ಮತ್ತು ದಿ. ಶ್ರೀಮತಿ ದೇವಕಿ ಅವರ ಸುಪುತ್ರರಾಗಿ ಜನಿಸಿದ ಡಾ. ಶ್ರೀರಾಮ್ ಭಟ್ ಎಂ. ಅವರು ಸುಳ್ಯದ ನೆಲ್ಲೂರು ಕೆಮ್ರಾಜೆ ಗ್ರಾಮದಲ್ಲಿ ಪ್ರಾಥಮಿಕ ಶಿಕ್ಷಣವನ್ನು, ಸುಳ್ಯ ಸರಕಾರಿ ಪ್ರೌಢಶಾಲೆಯಲ್ಲಿ ಹೈಸ್ಕೂಲ್ ಶಿಕ್ಷಣವನ್ನು, ಸುಳ್ಯ ಸರಕಾರಿ ಜೂನಿಯರ್ ಕಾಲೇಜಿನಲ್ಲಿ ಪಿಯುಸಿ ಶಿಕ್ಷಣವನ್ನು ಪಡೆದು, 1986ರಲ್ಲಿ ಕಸ್ತೂರ್‍ಬಾ ಮೆಡಿಕಲ್ ಕಾಲೇಜ್ ಮಂಗಳೂರಿನಲ್ಲಿ ಎಂಬಿಬಿಎಸ್ ವೈದ್ಯಕೀಯ ಪದವಿ, 1990ರಲ್ಲಿ ಜನರಲ್ ಸರ್ಜರಿಯಲ್ಲಿ ಸ್ನಾತಕೋತ್ತರ ವೈದ್ಯಕೀಯ ಪದವಿ, 2021ರಲ್ಲಿ ಇಂಗ್ಲೆಂಡ್‍ನ ಗಾಸ್ಕೋದಲ್ಲಿ FRCS ಉನ್ನತ ಪದವಿ ಪಡೆದಿರುತ್ತಾರೆ.ಮಂಗಳೂರಿನ ಕಸ್ತೂರ್‍ಬಾ ಮೆಡಿಕಲ್ ಕಾಲೇಜ್ ಕೆಎಂಸಿಯಲ್ಲಿ ಪ್ರೊಫೆಸರ್ ಆಗಿ ಸರ್ಜರಿ ಯುನಿಟ್‍ನ ಮುಖ್ಯಸ್ಥರಾಗಿ ಸೇವೆ, ವೆನ್ಲಾಕ್ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ 1990ರಿಂದ ಗೌರವಾನ್ವಿತ ವೈದ್ಯಾಧಿಕಾರಿಯಾಗಿ ಮತ್ತು ಶಸ್ತ್ರಚಿಕಿತ್ಸಕರಾಗಿ ಕರ್ತವ್ಯ ಸಲ್ಲಿಸುತ್ತಾ ಬಂದಿದ್ದಾರೆ.ಬಾವುಟಗುಡ್ಡೆ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜ್ ಎದುರುಗಡೆಯಿರುವ ಲೈಟ್‍ಹೌಸ್ ಪಾಲಿಕ್ಲಿನಿಕ್‍ನಲ್ಲಿ ಪ್ರತಿದಿನ ಮಧ್ಯಾಹ್ನ 12ರಿಂದ 2 ಗಂಟೆಯವರೆಗೆ ಹೊರರೋಗಿಗಳಿಗೆ ಲಭ್ಯರಿರುವ ಶ್ರೀಯುತರು ಜನರಲ್ ಸರ್ಜರಿ, ಲಾಪ್ರೋಸ್ಕೋಫಿಕ್ ಮತ್ತು ಗ್ಯಾಸ್ಟ್ರೋ ಇಟೆಸ್ಟಿನಲ್ ಸರ್ಜರಿಯಲ್ಲಿ ತರಬೇತಿ ಪಡೆದು, ಅಪಾರ ಅನುಭವ ಹೊಂದಿರುತ್ತಾರೆ.ಸರ್ಜರಿಗೆ ಸಂಬಂಧಿಸಿದಂತೆ ಶ್ರೀಯುತರು ಬರೆದ ಹಲವಾರು ಪುಸ್ತಕಗಳು ಉಪಯುಕ್ತವಾಗಿದ್ದು, ಜನಪ್ರಿಯಗೊಂಡಿವೆ.SRBS Manual of surgery ,SRBS clinical methods on surgery,SRBS surgical operations,SRBS surgery for Dental students,SRBs surgery for nursing students,SRBS atlas of tissue approximation ಮೊದಲಾದ ಹಲವಾರು ಸರ್ಜರಿಗೆ ಸಂಬಂಧಿಸಿದ ವೈದ್ಯಕೀಯ ಪುಸ್ತಕಗಳನ್ನು ಬರೆದಿದ್ದಾರೆ.ಸರ್ಜರಿಗೆ ಸಂಬಂಧಿಸಿದಂತೆ ಸನ್ಮಾನ್ಯರ ಹಲವಾರು ಲೇಖನಗಳು ಸರ್ಜಿಕಲ್ ಜರ್ನಲ್‍ನಲ್ಲಿ ಪ್ರಕಟಗೊಂಡಿವೆ.SRBS surgical insights ಎನ್ನುವ ಜನಪ್ರಿಯ ವೆಬ್‍ಸೈಟನ್ನು ಹೊಂದಿರುವ ಇವರು ಸರ್ಜರಿಗೆ ಸಂಬಂಧಿಸಿದಂತೆ ವಿಶೇಷ ವೈದ್ಯಕೀಯ ಮಾಹಿತಿ, ವಿವರಗಳ ಉಪನ್ಯಾಸವನ್ನು ಈ ವೆಬ್‍ಸೈಟ್ ಮೂಲಕ ಪ್ರತಿದಿನ ಪ್ರಸರಿಸಿ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಶಂಸೆ ಪಡೆದಿರುತ್ತಾರೆ.ಡಾ. ಶ್ರೀರಾಮ್ ಭಟ್ ಎಂ. ಇವರು ವೈದ್ಯಕೀಯ ಕ್ಷೇತ್ರದಲ್ಲಿ ಸಲ್ಲಿಸಿದ ಅನನ್ಯ ಸಮಾಜಸೇವೆಯನ್ನು ಪರಿಗಣಿಸಿ ಎಂಪಿ ಎಂಎಲ್ಎ ನ್ಯೂಸ್ 13ನೇ ಸೌಹಾರ್ದ ಸಂಗಮದಲ್ಲಿ ‘ವೈದ್ಯರತ್ನ’ ಪ್ರಶಸ್ತಿ ನೀಡಿ ಗೌರವಿಸಿದೆ.

ಪ್ರಾದೇಶಿಕ ವಾರ್ತೆಗಳು

ರೆಡ್‌ಕ್ರಾಸ್ ಸಮಿತಿಯಿಂದ ಜಿಲ್ಲಾಧಿಕಾರಿ ಭೇಟಿ

ಮಂಗಳೂರು: ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಆಡಳಿತ ಸಮಿತಿ ಸದಸ್ಯರು ದ.ಕ. ಜಿಲ್ಲಾಧಿಕಾರಿ ದರ್ಶನ್ .ಎಚ್.ವಿ ಅವರನ್ನು ಭೇಟಿಯಾಗಿ ಸ್ವಾಗತಿಸಿದರು. ಜಿಲ್ಲಾ ರೆಡ್‌ಕ್ರಾಸ್ ಹಮ್ಮಿಕೊಂಡಿರುವ ಸೇವಾ ಕಾರ್ಯ ಹಾಗೂ ಹಳೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ 6 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣಗೊಂಡಿರುವ ರೆಡ್‌ಕ್ರಾಸ್ ಶತಮಾನೋತ್ಸವ ಕಟ್ಟಡ ಉದ್ಘಾಟನೆಗೆ ಸಿದ್ಧವಾಗಿರುವ ಬಗ್ಗೆ ಸಮಿತಿ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಅವರು ನೂತನ ಜಿಲ್ಲಾಧಿಕಾರಿ ಅವರಿಗೆ ವಿವರ ನೀಡಿದರು. ಶೀಘ್ರದಲ್ಲೇ ಕಟ್ಟಡ ವೀಕ್ಷಿಸಲು ಆಗಮಿಸುವುದಾಗಿ ಜಿಲ್ಲಾಧಿಕಾರಿ ಅವರು ತಿಳಿಸಿದರು. ಜಿಲ್ಲಾ ರೆಡ್‌ಕ್ರಾಸ್‌ನ ಉಪಾಧ್ಯಕ್ಷ ಡಾ.ಸತೀಶ್ ರಾವ್,ಕಾರ್ಯದರ್ಶಿ ಕಿಶೋರ್‌ಚಂದ್ರ ಹೆಗ್ಡೆ, ನಿರ್ದೇಶಕರಾದ ಡಾ.ಸಚ್ಚಿದಾನಂದ ರೈ, ಗುರುದತ್ ನಾಯಕ್, ಪಿ.ಬಿ.ಹರೀಶ್ ರೈ ಉಪಸ್ಥಿತರಿದ್ದರು. ಫೋಟೋ : ರೆಡ್‌ಕ್ರಾಸ್………

ಪ್ರಾದೇಶಿಕ ವಾರ್ತೆಗಳು

ಎಂಪಿ ಎಂಎಲ್ಎ ನ್ಯೂಸ್ 13ನೇ ಸೌಹಾರ್ದ ಸಂಗಮದಲ್ಲಿ ಮಂಗಳೂರು ಕೆ.ಎಂ.ಸಿ.ಯ ಗ್ಯಾಸ್ಟ್ರೋ ಎಂಟರಾಲಜಿ ಡಾ. ಅನುರಾಗ್ ಜೆ. ಶೆಟ್ಟಿ ಅವರಿಗೆ ‘ಬೆಸ್ಟ್ ಡಾಕ್ಟರ್ಸ್’ ಪ್ರಶಸ್ತಿ ಪ್ರದಾನ

ಮಂಗಳೂರು: ಎಂಪಿ ಎಂಎಲ್ಎ ನ್ಯೂಸ್ 13ನೇ ಸೌಹಾರ್ದ ಸಂಗಮವು ಜೂನ್ 24ರ ಮಂಗಳವಾರ ಸಂಜೆ ಗಂಟೆ 4.00ರಿಂದ 9.00ರ ತನಕ ಮಂಗಳೂರು ಕುದ್ಮುಲ್ ರಂಗರಾವ್ ಪುರಭವನ (ಟೌನ್‍ಹಾಲ್)ನಲ್ಲಿ ನಡೆಯಿತು.ಸೌಹಾರ್ದ ಸಂಗಮವನ್ನು ಕನ್ನಡ ಸಾಹಿತ್ಯ ಪರಿಷತ್, ಬೆಂಗಳೂರು, ಇದರ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರುರವರು ಉದ್ಘಾಟಿಸಿ, ನಮ್ಮ ಜಿಲ್ಲೆಗೆ ಸೌಹಾರ್ದತೆಯ ಕೊರತೆ ಇದ್ದು ಇಂತಹ ಸೌಹಾರ್ದ ಸಂಗಮಗಳು ಹೆಚ್ಚು ಮಹತ್ವಪೂರ್ಣ ಮತ್ತು ಅರ್ಥಪೂರ್ಣವಾಗಿ ಸಮಾಜವನ್ನು ತಲುಪುತ್ತದೆ ಎಂದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕರ್ನಾಟಕ ಸರಕಾರದ ಮಾಜಿ ಸಚಿವ ಬಿ. ರಮಾನಾಥ ರೈಯವರು ನಮ್ಮ ಜಿಲ್ಲೆ ಅಭಿವೃದ್ಧಿಯಲ್ಲಿ ದೇಶದಲ್ಲೇ ಪ್ರಥಮ ಸ್ಥಾನದಲ್ಲಿದ್ದು ಕೊರತೆಯಿರುವುದು ಸೌಹಾರ್ದತೆಯಲ್ಲಿ ಎಂದರು. ಇಂತಹ ಕೊರತೆಯನ್ನು ಸೌಹಾರ್ದ ಸಂಗಮದಂತಹ ಜನಪರ ಕಾರ್ಯಕ್ರಮಗಳು ನೀಗಿಸಬಲ್ಲದು ಎಂದು ಸೌಹಾರ್ದ ಸಂಗಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಸೌಹಾರ್ದತೆ ಎನ್ನುವುದು ಈ ಸಮಾಜಕ್ಕೆ ಬೀಜಮಂತ್ರವಾಗಲಿ. ಶಾಂತಿ ಸಾಮರಸ್ಯ, ಸಹಬಾಳ್ವೆ, ಸೌಹಾರ್ದ ಸಂಗಮದ ಮೂಲಕ ರಾಷ್ಟ್ರವ್ಯಾಪ್ತಿ ಪಸರಿಸಲಿ ಎಂದು ದೇವರಾಜ ಅರಸು ರಾಜ್ಯಪ್ರಶಸ್ತಿ ಪುರಸ್ಕೃತ ಸಮಾಜ ವಿಜ್ಞಾನಿ ಡಾ. ಅಣ್ಣಯ್ಯ ಕುಲಾಲ್‍ರವರು ಹೇಳಿದರು. ಮಂಗಳೂರು ಪ್ರೆಸ್‍ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್, ನಿವೃತ್ತ ಸರಕಾರಿ ವೈದ್ಯಾಧಿಕಾರಿ ಡಾ. ಜೂಲಿಯಾನ ಸಲ್ಡಾನ ಅವರು ಸೌಹಾರ್ದ ಸಂಗಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಮಾತನಾಡಿದರು. ಮನುಷ್ಯ-ಮನುಷ್ಯರ ನಡುವೆ ಸೌಹಾರ್ದತೆ, ಭಾೃತತ್ವ ಅತ್ಯಗತ್ಯವಾಗಿದ್ದು ಜಾತಿ, ಮತ, ಪಕ್ಷ-ಭೇದವಿಲ್ಲದೆ ಸಾಧಕರುಗಳನ್ನು ಗುರುತಿಸಿ, ಪ್ರೋತ್ಸಾಹಿಸುವ ಸೌಹಾರ್ದ ಸಂಗಮ ಕಾರ್ಯಕ್ರಮ ಶ್ಲಾಘನೀಯವಾಗಿದೆ. ಇಲ್ಲಿ ಸಂಘಟಕರ ಪ್ರಯತ್ನ ಮೆಚ್ಚತಕ್ಕದ್ದು ಎಂದು ಸೌಹಾರ್ದ ಸಂಗಮದ ಅಧ್ಯಕ್ಷತೆ ವಹಿಸಿದ್ದ ಹಿರಿಯ ನ್ಯಾಯವಾದಿ ಕೆ. ದಯಾನಂದ ರೈಯವರು ತಿಳಿಸಿದರು.ಸಮಾರಂಭದಲ್ಲಿ ವಾರ್ತಾ ಇಲಾಖೆಯ ದಿವ್ಯ ಆರ್. ಶೆಟ್ಟಿ, ಯುವವಾಹಿನಿ (ರಿ) ಕೇಂದ್ರ ಸಮಿತಿ ಮಾಜಿ ಅಧ್ಯಕ್ಷ ರಾಜೇಶ್ ಬಿ., ಎಂ.ಸಿ.ಸಿ. ಬ್ಯಾಂಕ್‍ನ ಅಧ್ಯಕ್ಷ ಅನಿಲ್ ಲೋಬೊ, ವೆನ್ಲಾಕ್ ಜಿಲ್ಲಾ ಸರಕಾರಿ ಆಸ್ಪತ್ರೆ ಮೂತ್ರರೋಗ ತಜ್ಞ ಡಾ. ಸದಾನಂದ ಪೂಜಾರಿ, ಯುವವಾಹಿನಿ (ರಿ) ಕೇಂದ್ರ ಸಮಿತಿ ಅಧ್ಯಕ್ಷ ಲೋಕೇಶ್ ಕೋಟ್ಯಾನ್, ಮಹಿಳಾ ಮಂಡಲ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಚಂಚಲಾಕ್ಷಿ ತೇಜೋಮಯ ಮೊದಲಾದವರು ಉಪಸ್ಥಿತರಿದ್ದರು.ನರೇಶ್‍ಕುಮಾರ್ ಸಸಿಹಿತ್ಲು ಇವರು ಸ್ವಾಗತಿಸಿ, ಎಸ್.ಆರ್. ಪ್ರದೀಪ್ ವಂದಿಸಿದರು, ಮಲ್ಲಿಕಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಡಾ. ಅಶೋಕ್ ಶೆಟ್ಟಿ ಬಿ.ಎನ್.ರವರು ಪ್ರಸ್ತಾವನೆಗೈದರು. ದಿನಕರ ಡಿ. ಬಂಗೇರ, ಸನ್ಮಾನ ಪತ್ರ ವಾಚಿಸಿದರು. ಕನ್ನಡ-ತುಳು ಚಲನಚಿತ್ರ ಹಿನ್ನಲೆ ಗಾಯಕ ರವೀಂದ್ರ ಪ್ರಭು ಬಳಗದವರಿಂದ ರಾಗ್ ರಂಗ್ ಸೌಹಾರ್ದ ಸುಗಮ ಸಂಗೀತ ರಸಮಂಜರಿ ಮತ್ತು ದಿನೇಶ್ ಅತ್ತಾವರ ನಿರ್ದೇಶನದಲ್ಲಿ ರಂಗ ಚಲನ ಕಲಾವಿದರು ಮಂಗಳೂರು ಇವರಿಂದ ಯುವಜಾಗೃತಿ ಹಾಡುಗಳ ಮಿಶ್ರಣ ನಾಟಕ ವಿನೂತನ ಕಾರ್ಯಕ್ರಮ ನಡೆಯಿತು.ಈ ಸೌಹಾರ್ದ ಸಂಗಮದಲ್ಲಿ ಮಂಗಳೂರು ಕೆ.ಎಂ.ಸಿ.ಯ ಅಸೋಸಿಯೇಟ್ ಪ್ರೊಫೆಸರ್ ಆಫ್ ಗ್ಯಾಸ್ಟ್ರೋ ಎಂಟರಾಲಜಿ ಡಾ. ಅನುರಾಗ್ ಜೆ. ಶೆಟ್ಟಿ ಅವರಿಗೆ ‘ಬೆಸ್ಟ್ ಡಾಕ್ಟರ್ಸ್’ ಅವಾರ್ಡ್ ಸೇರಿದಂತೆ ಆರು ಮಂದಿ ಸಾಧಕರಿಗೆ ಪ್ರಶಸ್ತಿ ನೀಡಿ ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.ಡಾ. ಅನುರಾಗ್ ಜೆ. ಶೆಟ್ಟಿ* ಡಾ. ಅನುರಾಗ್ ಜೆ. ಶೆಟ್ಟಿ ಅವರು ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಗ್ಯಾಸ್ಟ್ರೋ ಎಂಟರಾಲಜಿಯಲ್ಲಿ ಅಸೋಸಿಯೇಟ್ ಪ್ರೊಫೆಸರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಮಂಗಳೂರಿನ ಅಥೆನಾ ಆಸ್ಪತ್ರೆಯ ಸಂದರ್ಶಕ ವೈದ್ಯರಾಗಿರುವ ಶ್ರೀಯುತರು ಕಸ್ತೂರ್‍ಬಾ ಮೆಡಿಕಲ್ ಕಾಲೇಜ್ ಮಂಗಳೂರಲ್ಲಿ ಎಂಬಿಬಿಎಸ್ ವೈದ್ಯಕೀಯ ಪದವಿ ಮತ್ತು ಜನರಲ್ ಮೆಡಿಸಿನಲ್ಲಿ ಎಂ.ಡಿ. ಸ್ನಾತಕೋತ್ತರ ಪದವಿ ಪಡೆದು 2015ರಲ್ಲಿ ಗ್ಯಾಸ್ಟ್ರೋ ಎಂಟರಾಲಜಿಯಲ್ಲಿ ಡಿ.ಎಂ. ಸೂಪರ್ ಸ್ಪೆಷಾಲಿಟಿ ಪದವಿ ಪಡೆದಿರುತ್ತಾರೆ.ನ್ಯೂ ಡೆಲ್ಲಿಯ ದಿ ಗಂಗರಾಮ್ ಇನ್ಸ್‍ಸ್ಟಿಟ್ಯೂಟ್ ಫಾರ್ ಪೋಸ್ಟ್ ಗ್ರಾಜ್ಯುವೇಶನ್ ಮೆಡಿಕಲ್ ಎಜ್ಯುಕೇಶನ್ ಆ್ಯಂಡ್ ರಿಸರ್ಚ್ ನಲ್ಲಿ ಎಂಡೋಸ್ಕೋಪಿಕ್ ಅಲ್ಟ್ರಾಸೌಂಡ್ ಟ್ರೈನಿಂಗ್(EUS)ನ್ನು 2018ರಲ್ಲಿ ಪಡೆದಿರುತ್ತಾರೆ.ಚೀನಾದ ವೆಸ್ಟ್ ಚೀನಾ ಹಾಸ್ಪಿಟಲ್‍ನಲ್ಲಿ 2019ರಲ್ಲಿ ಅಡ್ವಾನ್ಸಡ್ ಎಂಡೋಸ್ಕೋಫಿಕ್ ಟ್ರೈನಿಂಗ್ ಪಡೆದಿರುತ್ತಾರೆ.ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವೈದ್ಯಕೀಯ ಸಮ್ಮೇಳನಗಳಲ್ಲಿ ಭಾಗವಹಿಸಿ, ಅಪಾರ ಅನುಭವ ಗಳಿಸಿರುತ್ತಾರೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಪ್ರಥಮ ಬಾರಿಗೆ ಡಯಗ್ನಾಸಿಕ್ ಮತ್ತು ಥೆರಫಿಟಿಕ್ ಎಂಡೋಸ್ಕೋಪಿಕ್ ಅಲ್ಟ್ರಾಸೌಂಡ್‍ನ್ನು ಆರಂಭಿಸಿದ ಸಾಧನೆ, ಹಿರಿಮೆ, ಹೆಗ್ಗಳಿಕೆ ಶ್ರೀಯುತರಿಗೆ ಸಲ್ಲುತ್ತದೆ.15 ಸಾವಿರಕ್ಕೂ ಮಿಕ್ಕಿ ಡಯಾಗ್ನಾಸಿಕ್ ಮತ್ತು ಥೆರಫಿಟಿಕ್ ಗ್ಯಾಸ್ಟ್ರೋಸ್ಕೋಫಿ, 8 ಸಾವಿರಕ್ಕೂ ಹೆಚ್ಚು ರೋಗಿಗಳಿಗೆ ಕೊಲೊನೋಸ್ಕೋಪಿ, ಸ್ವತಂತ್ರವಾಗಿ ಎಲ್ಲಾ ರೀತಿಯ ಥೆರೆಪಿಟಿಕ್ ಎಂಡೋಸ್ಕೋಪಿಕ್ ಪ್ರೊಸೀಜರ್ ನಡೆಸಿದ ಜನಪ್ರಿಯ ವೈದ್ಯರೆಂಬ ಸಾಧನೀಯ ಹೆಗ್ಗಳಿಕೆಗೆ ಶ್ರೀಯುತರು ಪಾತ್ರರಾಗಿದ್ದಾರೆ.1000ಕ್ಕೂ ಹೆಚ್ಚು ERCP, 800ಕ್ಕೂ ಡಯಾಗ್ನಾಸಿಕ್ ಮತ್ತು ಥೆರಫಿಟಿಕ್ಎಂಡೋಸ್ಕೋಪಿಕ್ ಅಲ್ಟ್ರಾಸೌಂಡ್ (EVS 100 EMP ಸೇರಿದಂತೆ ಎಂಡೋಸ್ಕೋಪಿಕ್ ಗ್ಯಾಸ್ಟ್ರೋ ಎಂಟರಾಲಜಿಯಲ್ಲಿ ದಾಖಲಾರ್ಹ ಸಾಧನೆಗಳನ್ನು ಗೈದಿದ್ದಾರೆ. ಹಲವಾರು ವೈದ್ಯಕೀಯ ಲೇಖನಗಳನ್ನು ಬರೆದಿದ್ದಾರೆ. ರೋಗಿಗಳಿಗೆ ಆಪದ್ಬಾಂಧವ, ನೇರ, ನಡೆ ನುಡಿ, ನಿರ್ಮಲಚಿತ್ತದ ನಿಸ್ವಾರ್ಥ ವೈದ್ಯಕೀಯ ಸಮಾಜಸೇವಕರಾಗಿರುವ ಶ್ರೀಯುತರಿಗೆ 13ನೇ ಸೌಹಾರ್ದ ಸಂಗಮದಲ್ಲಿ ‘ಬೆಸ್ಟ್ ಡಾಕ್ಟರ್ಸ್ ಅವಾರ್ಡ್’ನ್ನು ಗಣ್ಯರ ಸಮ್ಮುಖದಲ್ಲಿ ನೀಡಿ ಗೌರವಿಸಲಾಗಿದೆ.

ಪ್ರಾದೇಶಿಕ ವಾರ್ತೆಗಳು

ಡಿ ಗ್ರೂಪ್ ನೌಕರರ ಶೋಷಣೆ. ಸರ್ಕಾರಿ ನೌಕರರ ಸಂಘದಿಂದ ಜಿಲ್ಲಾಧಿಕಾರಿಯವರಿಗೆ ದೂರು

ಪಡೀಲ್ -ಕೆಲವೊಂದು ವಿಚಾರಗಳಲ್ಲಿ ಅಧಿಕಾರಿಯವರ ಉದ್ದಟನದಿಂದ ಕೆಲವು ಸಿಬ್ಬಂದಿಗಳನ್ನು ಹೊರ ಗುತ್ತಿಗೆ ಮೂಲಕ ನೇಮಕ ಮಾಡಿಕೊಂಡು ಅವರಲ್ಲಿ ಅವರಿಗೆ ಬೇಕಾಗುವ ರೀತಿಯಲ್ಲಿ ಕೆಲಸ ಮಾಡಿಸುತ್ತಿದ್ದಾರೆ ಮತ್ತು ಡಿ ಗ್ರೂಪ್ ಅಲ್ಲಿ ಮಾಡುವ ಕೆಲಸಗಳನ್ನು ಯಾವುದನ್ನು ಕೂಡಾ ಅವರಿಗೆ ನೀಡದೆ ಅಧಿಕಾರಿಗಳ ಕೆಲಸಕ್ಕೆ ಇಟ್ಟಿದ್ದಾರೆ ಎನ್ನುವ ರೀತಿಯಲ್ಲಿ ಡಿ ಗ್ರೂಪ್ ಮಾಡುವ ಕೆಲಸವನ್ನೆಲ್ಲ ತಮ್ಮ ಮೇಲೆ ಏರುತ್ತಿರುವುದು ಡಿ ಗ್ರೂಪ್ ನೌಕರರ ಅಳಲು ಆಗಿರುತ್ತದೆ.ಇದನ್ನು ಕಡಿವಾಣ ಹಾಕಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಡಿ ಗ್ರೂಪ್ ಸರಕಾರಿ ನೌಕರರ ಸಂಘ ಜಿಲ್ಲಾಧಿಕಾರಿಯವರಿಗೆ ಈ ಬಗ್ಗೆ ತಕ್ಷಣ ಸೂಕ್ತ ಕ್ರಮ ಕೈ ಗೊಳ್ಳುವಂತೆ ವಿನಂತಿಸಿ ಮನವಿ ಮೂಲಕ ದೂರು ಸಲ್ಲಿಸಿದೆ.ಈ ಸಂದರ್ಭಡಲ್ಲಿ ದಕ್ಷಿಣ ಕನ್ನಡ ಜಿಲ್ಲಾ”ಡಿ”ವರ್ಗ ಸರ್ಕಾರಿ ನೌಕರ ಸಂಘದ ವತಿಯಿಂದ ಜಿಲ್ಲಾಧಿಕಾರಿಯವರನ್ನು ಸಂಘದ ಜಿಲ್ಲಾಧ್ಯಕ್ಷರಾದ ಪ್ರವೀಣ್ ಎಸ್ ಇವರು ಅಭಿನಂದಿಸಿದರು.ಸಂಘದ ಮುಖ್ಯ ಸಲಹೆಗಾರರಾದ ಫ್ರಾಂಕಿ ಫ್ರಾನ್ಸಿಸ್,ಪ್ರಧಾನ ಕಾರ್ಯದರ್ಶಿ ನಾಗೇಶ್ ಎಸ್,ಕ್ರೀಡಾ ಕಾರ್ಯದರ್ಶಿ ಲೋಕೇಶ್ ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು

Scroll to Top