Author name: editor

ಪ್ರಾದೇಶಿಕ ವಾರ್ತೆಗಳು

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಪುತ್ತೂರು ಘಟಕದ ಸಭೆ

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ.ರಿ ಮೆಲ್ಕಾರ್ ಬಂಟ್ವಾಳ ಇದರ ಪುತ್ತೂರು ಘಟಕದ ಸಭೆಯು ಪುತ್ತೂರಿನ ಸ್ವಾಗತ ಹೋಟೆಲ್ ನಲ್ಲಿ ಜರಗಿತು. ಪ್ರತಿಷ್ಠಾನದ ಕೇಂದ್ರ ಸಮಿತಿಯ ಅಧ್ಯಕ್ಷರಾದ ಕಯ್ಯೂರು ನಾರಾಯಣ ಭಟ್ ಅಧ್ಯಕ್ಷತೆ ವಹಿಸಿದ್ದರು.ಪುತ್ತೂರು ಘಟಕದ ಅಧ್ಯಕ್ಷರಾದ ಚಂದ್ರಶೇಖರ ಆಳ್ವ ಪಡುಮಲೆ ಮಾತನಾಡಿ ಆಗಸ್ಟ್ 17 ರಂದು ಪಡುಮಲೆ ಕೂವೆ ಶ್ರೀ ಶಾಸ್ತರ ದೇವಸ್ಥಾನದಲ್ಲಿ ಜರಗಲಿರುವ ಜಿಲ್ಲಾಮಟ್ಟದ ಹಿರಿಯರ ಕಾರ್ಯಾಗಾರದಲ್ಲಿ ಮೂರು ವಿಚಾರಗೋಷ್ಠಿ, ಸನ್ಮಾನ ಮತ್ತು ಪ್ರತಿಷ್ಠಾನದ ಸದಸ್ಯರಿಂದ ತಾಳಮದ್ದಳೆಯನ್ನು ನಡೆಸಲಾಗುವುದೆಂದು ತಿಳಿಸಿದರು.ಜಿಲ್ಲಾ ಸಂಚಾಲಕ ಭಾಸ್ಕರ ಬಾರ್ಯ ಮಾತನಾಡಿ ಹಿರಿಯರಿಗೆ ಮತ್ತು ಸಮಾಜಕ್ಕೆ ಉಪಯುಕ್ತ ಕಾರ್ಯಕ್ರಮ ನಡೆಸಲು ಪುತ್ತೂರು ಘಟಕವು ಮಾದರಿಯಾಗಿದೆಯೆಂದರು.ಸಭೆಯಲ್ಲಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ, ಪದ್ಮನಾಭ ನಾಯಕ್, ಗುಂಡ್ಯಡ್ಕ ಈಶ್ವರ ಭಟ್, ವೇದವ್ಯಾಸ ರಾಮಕುಂಜ,ಟಿ. ಸದಾಶಿವ ರೈ,ಮಹಿಳಾ ಘಟಕದ ಜಿಲ್ಲಾ ಸಂಚಾಲಕಿ ವತ್ಸಲಾ ರಾಜ್ನಿ, ಚಂಚಲಾಕ್ಷಿ. ಎಸ್, ಪ್ರೇಮಲತಾ ರಾವ್ ಬೊಳುವಾರು ಉಪಸ್ಥಿತರಿದ್ದರು.ಶ್ರೀಮತಿ ಶಂಕರಿ ಶರ್ಮ ಪ್ರಾರ್ಥಿಸಿದರು. ಚಂದ್ರಶೇಖರ ಆಳ್ವ ಸ್ವಾಗತಿಸಿ ಭವಾನಿ ಶಂಕರ ಶೆಟ್ಟಿ ಪುತ್ತೂರು ವಂದಿಸಿದರು. ಕೇಂದ್ರ ಸಮಿತಿಯ ಉಪಾಧ್ಯಕ್ಷ ಲೋಕೇಶ್ ಹೆಗ್ಡೆ ಪುತ್ತೂರು ಕಾರ್ಯಕ್ರಮ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ಪುತ್ತೂರು: ಇಂಜಿನಿಯರಿಂಗ್ ನಲ್ಲಿ ಮೊದಲ ರ‍್ಯಾಂಕ್‌ ನ ಜೊತೆಗೆ ಚಿನ್ನದ ಪದಕ ಪಡೆದ ಸುಚಿತಾ ಮಡಿವಾಳ.

ಕು. ಸುಚಿತಾ ಮಡಿವಾಳ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ ಡಾಟಾ ಸೈನ್ಸ್ ನ ಪ್ರಥಮ ಬ್ಯಾಚ್ ಗೇ ರಾಜ್ಯಕ್ಕೆ ಮೊದಲ ರ‍್ಯಾಂಕ್‌ ನ ಜೊತೆಗೆ ಚಿನ್ನದ ಪದಕ ಪಡೆದಿದ್ದಾರೆ.ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ಮಹಾ ವಿದ್ಯಾಲಯ ನಡೆಸಿದ 2024-25 ನೇ ಸಾಲಿನ ಪರೀಕ್ಷೆಯಲ್ಲಿ ಪುತ್ತೂರು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜ್ ಅಂಡ್ ಟೆಕ್ನಾಲಜಿ ಫೈನಲ್ ಇಯರ್ ಬಿಇ ಕಂಪ್ಯೂಟರ್ ಸೈನ್ಸ್ (ಡೇಟಾ ಸೈನ್ಸ್) ವಿಭಾಗದಲ್ಲಿ 9.60 cgpa ಅಂಕಗಳೊಂದಿಗೆ ಉತ್ತಮ ಅಂಕಗಳನ್ನು ಪಡೆದು ರಾಜ್ಯಕ್ಕೆ ಮೊದಲ ರ‍್ಯಾಂಕ್‌ ಜೊತೆಗೆ ಚಿನ್ನದ ಪದಕ ಪಡೆದಿರುತ್ತಾರೆ.ದಿ.ರಮೇಶ ಮಡಿವಾಳ ಹಾಗೂ ಮೋಹಿನಿಯವರ ಮಗಳಾದ ಇವರು ಗ್ರಾಮೀಣ ಪ್ರದೇಶದಿಂದ ಬಂದವರಾದರೂ ಶಿಕ್ಷಣದ ಜೊತೆಗೆ ಇತರ ಚಟುವಟಿಕೆಗಳಲ್ಲೂ ತನ್ನನ್ನು ತಾನು ತೊಡಗಿಸಿಕೊಂಡು ಅಣ್ಣನ ಸಹಾಯ, ತಾಯಿಯ ಪ್ರೋತ್ಸಾಹದಿಂದ ಇಂತಹ ಸಾಧನೆ ಮಾಡಿರೋದು ಹೆಮ್ಮೆಯ ವಿಚಾರವಾಗಿದೆ.ಪ್ರತೀ ಹಂತದ ಮಾಸಿಕ, ವಾರ್ಷಿಕ ಪರೀಕ್ಷೆಯಲ್ಲೂ ಉತ್ತಮ ಅಂಕಗಳನ್ನು ಗಳಿಸುತ್ತಾ ಬರುತ್ತಿದ್ದ ಸುಚಿತಾ ಅಂತಿಮ ವರ್ಷದ ಪರೀಕ್ಷೆಯಲ್ಲೂ ಉತ್ತಮ ಅಂಕಗಳನ್ನು ಪಡೆದು ಮೊದಲ ಸ್ಥಾನ ಪಡೆದಿರುವುದು ಪ್ರಾಧ್ಯಾಪಕರಿಗೂ ಜೊತೆಗೆ ಹೆತ್ತವರಿಗೂ ಸಂತಸವನ್ನು ಉಂಟು ಮಾಡಿದೆ.ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ .ಕಲ್ಲಡ್ಕ ಪ್ರಭಾಕರ್ ಭಟ್ ಆಡಳಿತ ಮಂಡಳಿಯ ಅಧ್ಯಕ್ಷರು ಸಂಚಾಲಕರು ನಿರ್ದೇಶಕರು. ಕಾಲೇಜಿನ ಪ್ರಾಂಶುಪಾಲರಾದ ಡಾ.ಮಹೇಶ್ ಪ್ರಸನ್ನ ಕೆ ಅವರ ಮುಂದಾಳತ್ವದಲ್ಲಿ ಡೇಟಾ ಸೈನ್ಸ್ ವಿಭಾಗದ ಮುಖ್ಯಸ್ಥೆ ಪ್ರೊ ರೂಪ ಜಿಕೆ ಹಾಗೂ ಪ್ರಾಧ್ಯಾಪಕರ ಸಮರ್ಥ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿ ಇವರನ್ನು ಅಭಿನಂದಿಸಿದ್ದಾರೆ.

ಕರಾವಳಿ ಸುದ್ದಿ

ಸೇವಾ ಕಾರ್ಯಗಳಿಗೆ ಯೂತ್ ರೆಡ್‌ಕ್ರಾಸ್ ಪ್ರೇರಣೆ-ಉಪನ್ಯಾಸಕ ಸಚೇತ್ ಸುವರ್ಣ

ಮಂಗಳೂರು: ವಿದ್ಯಾರ್ಥಿಗಳು ಮಾನವೀಯ ಸೇವೆಯಲ್ಲಿ ತೊಡಗಿಸಿಕೊಳ್ಳಲು ಯೂತ್ ರೆಡ್ ಕ್ರಾಸ್ ಪ್ರೇರಣೆ ನೀಡುತ್ತಿದೆ. ಮಂಗಳೂರು ವಿಶ್ವವಿದ್ಯಾಲಯದ ಎಲ್ಲ ಕಾಲೇಜುಗಳಲ್ಲಿ ಯೂತ್ ರೆಡ್ ಕ್ರಾಸ್ ಘಟಕಗಳನ್ನು ತೆರೆಯುವ ಮೂಲಕ ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವನೆ ಬೆಳೆಸುವುದು ಅವಶ್ಯಎಂದು ಯೂತ್ ರೆಡ್ ಕ್ರಾಸ್ ನಿರ್ದೇಶಕ , ಉಪನ್ಯಾಸಕ ಸಚೇತ್ ಸುವರ್ಣ ಹೇಳಿದರು.ಯೇನೆಪೊಯ ಪರಿಗಣಿತ ವಿ.ವಿ.ಯ ಯೂತ್ ರೆಡ್‌ಕ್ರಾಸ್ ಘಟಕದ ವತಿಯಿಂದ ಯೇನೆಪೊಯ ಮೆಡಿಕಲ್ ಕಾಲೇಜ್ ಹಾಸ್ಪಿಟಲ್ ಸಭಾಂಗಣದಲ್ಲಿ ಗುರುವಾರ ನಡೆದ ಯೂತ್ ರೆಡ್‌ಕ್ರಾಸ್ ಯೋಜನಾಧಿಕಾರಿಗಳ ಸಾಮರ್ಥ್ಯ ವರ್ಧನೆ ಕಾರ್ಯಾಗಾರದಲ್ಲಿ ಅವರು ದಿಕ್ಸೂಚಿ ಭಾಷಣ ಮಾಡಿದರು.ರೆಡ್‌ಕ್ರಾಸ್ ಸೊಸೈಟಿ ದ.ಕ.ಜಿಲ್ಲಾ ಘಟಕದ ನಿರ್ದೇಶಕ ಪಿ.ಬಿ.ಹರೀಶ್ ರೈ ಕಾರ್ಯಾಗಾರ ಉದ್ಘಾಟಿಸಿದರು.ರೆಡ್ ಕ್ರಾಸ್ ಕಾರ್ಯದರ್ಶಿ ಕಿಶೋರ್‌ಚಂದ್ರ ಹೆಗ್ಡೆ ಮುಖ್ಯ ಅತಿಥಿಯಾಗಿದ್ದರು. ಯೇನೆಪೊಯ ಪರಿಗಣಿತ ವಿ.ವಿ.ಯ ಕುಲಪತಿ ಡಾ.ಎಂ.ವಿಜಯಕುಮಾರ್ ಅಧ್ಯಕ್ಷತೆ ವಹಿಸಿದ್ದರು.ಯೋಜನಾಧಿಕಾರಿ ಡಾ.ಹರಿ ನಾರಾಯಣನ್ ಸ್ವಾಗತಿಸಿ, ಯೂತ್ ರೆಡ್‌ಕ್ರಾಸ್ ಘಟಕದ ನೋಡಲ್ ಅಧಿಕಾರಿ ನಿತ್ಯಶ್ರೀ .ಬಿ.ವಿ. ವಂದಿಸಿದರು.ಅದ್ರಿಜಾ ಭೂನಿಯ ಮತ್ತು ಡಾ.ಪ್ರತೀಕ್ಷಾ ಕಾರ್ಯಕ್ರಮ‌ ನಿರೂಪಿಸಿದರು.ಸ್ವಸ್ತಿಕಾ ನ್ಯಾಶನಲ್ ಬ್ಯುಸಿನೆಸ್ ಕಾಲೇಜಿನ ಚೇರ್ಮನ್ ಡಾ.ರಾಘವೇಂದ್ರ ಹೊಳ್ಳ, ಅಸಿಸ್ಟೆಂಟ್ ಪ್ರೊಫೆಸರ್ ಪ್ರೀತಿ ಶೆಟ್ಟಿಗಾರ್, ಸಿಐಎಲ್ ನ ಕಾರ್ಯನಿರ್ವಾಹಕ ನಿರ್ದೇಶಕಿ ಸಚಿತಾ ನಂದಗೋಪಾಲ್, ಯೇನೆಪೊಯ ಮೆಡಿಕಲ್ ಕಾಲೇಜ್ ಹಾಸ್ಪಿಟಲ್ ನ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥ ಡಾ.ಮಹಮ್ಮದ್ ಗುತ್ತಿಗಾರ್, ಯೇನೆಪೊಯ ನರ್ಸಿಂಗ್ ಕಾಲೇಜಿನ ಡೀನ್ ಡಾ.ಲೀನಾ ಕೆ.ಸಿ.‌, ಮಂಗಳೂರು ವಿ.ವಿ. ಎನ್ ಎಸ್ ಎಸ್ ಯೋಜನಾಧಿಕಾರಿ ಡಾ.ಶೇಷಪ್ಪ ಅಮೀನ್.ಕೆ. ಎರಡು ದಿನದ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ಮುದ್ರಣ ಮಾಧ್ಯಮಗಳು ಮೇಲೆ ಜನರಿಗೆ ಹೆಚ್ಚು ವಿಶ್ವಾಸವಿದೆ-ವಾಲ್ಟರ್ ನಂದಳಿಕೆ.

ಮಂಗಳೂರು, ಜು.2: ಮುದ್ರಣ ಮಾಧ್ಯಮ ಗಳ ಮೇಲೆ ಜನರಿಗೆ ಹೆಚ್ಚು ವಿಶ್ವಾಸ್ ಇನ್ನೂ ಉಳಿದಿದೆ ಎನ್ನುವ ಅಭಿಪ್ರಾಯ ಇದೆ ಎಂದು ವಾಲ್ಟರ್ ನಂದಳಿಕೆ ತಿಳಿಸಿದ್ದಾರೆ.ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರು ಪತ್ರಿಕಾ ಭವನದಲ್ಲಿ ಹಮ್ಮಿಕೊಂಡ ಪತ್ರಿಕಾ ದಿನಾಚರಣೆಯ ಕಾರ್ಯಕ್ರಮ ದಲ್ಲಿ ಮಾಧ್ಯಮದ ಸವಾಲು ಗಳು ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು. .ಇತ್ತೀಚೆಗೆ ಸಮೀಕ್ಷೆ ಯೊಂದರ ಪ್ರಕಾರ ಶೇ.60ರಷ್ಟು ಜನರು ಮುದ್ರಣ ಮಾಧ್ಯಮವನ್ನು ನಂಬುತ್ತಾರೆ. ಶೇ.63ರಷ್ಟು ಜನರು ಟಿ.ವಿ ನ್ಯೂಸ್ ನ್ನು ನಂಬುವುದಿಲ್ಲ.ಶೇ 89 ರಷ್ಟು ಮಂದಿ ಸಾಮಾಜಿಕ ಮಾಧ್ಯಮಗಳನ್ನು ಆನ್ ಲೈನ್ ವೆಬ್ ಸೈಟ್ ಗಳನ್ನು ನಂಬುವುದಿಲ್ಲ ಎಂದವರು ತಿಳಿಸಿದ್ದಾರೆ. ಮಾದ್ಯಮ ಕ್ಷೇತ್ರದಲ್ಲಿ ಡಿಜಿಟಲ್ ,ಕೃತಕ ಬುದ್ಧಿ ಮತ್ತೆಯ ತಂತ್ರಜ್ಞಾನದ ಪ್ರವೇಶವಾಗಿದೆ ಆದರೆ ಸೃಜನಶೀಲತೆ ಮೂಲಕ ಈ ಸವಾಲು ಗಳನ್ನು ಎದುರಿಸಬಹುದು. ಮಾಧ್ಯಮ ಗಳು ಜನರಲ್ಲಿ ವಿಶ್ವಾಸಾರ್ಹತೆಯನ್ನು ಮೂಡಿ ಸುವ ಬಗ್ಗೆ ಹೆಚ್ಚು ಕಾರ್ಯ ಪ್ರವೃತ್ತ ವಾಗಬೇಕು ಎಂದರು.ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಉಮ್ಮರ್ ಯು.ಎಚ್. ಮಾತನಾಡುತ್ತಾ, ಮಾಧ್ಯಮ ಕ್ಷೇತ್ರದಲ್ಲಿ ಸಾಕಷ್ಟು ಸವಾಲು ಗಳಿವೆ.ಈ ನಡುವೆ ಮಾಧ್ಯಮ ಕ್ಷೇತ್ರದ ತಳ ಮಟ್ಟದಲ್ಲಿ ಪತ್ರಿಕಾವಿತರಣೆ ನಡೆಸುತ್ತಿ ರುವವರನ್ನು ಗೌರವಿಸುತ್ತಿರುವುದು ಶ್ಲಾಘನೀಯ ಎಂದರು.ಪತ್ರಿಕಾ ದಿನಾಚರಣೆಯ ಸಂದರ್ಭದಲ್ಲಿ ಹಿರಿಯ ಪತ್ರಿಕಾ ವಿತರಕ ರಘುರಾಮ.ಕೆ ಯವರನ್ನು ಸನ್ಮಾನಿಸ ಲಾಯಿತು.ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸನಾಯಕ್ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ,ದಕ್ಷಿಣ ಕನ್ನಡ ನಿವೃತ್ತ. ಅಪರ ಜಿಲ್ಲಾಧಿಕಾರಿ ಪ್ರಭಾಕರ ಶರ್ಮ, ಹಿರಿಯ ಪತ್ರಕರ್ತರಾದ ಚಿದಂಬರ ಬೈಕಂಪಾಡಿ, ಕುಮಾರನಾಥ್, ಕೆ.ವಿ‌.ಜಾರ್ಜ್ ದ.ಕ ಜಿಲ್ಲಾ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ,ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್, ಉಪಸ್ಥಿತರಿದ್ದರು.ಕಾರ್ಯದರ್ಶಿ ವಿಜಯ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು.

ಪ್ರಾದೇಶಿಕ ವಾರ್ತೆಗಳು

ಎಂಪಿ ಎಂಎಲ್ಎ ನ್ಯೂಸ್ 14ನೇ ಸೌಹಾರ್ದ ಸಂಗಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಗಳೂರು: ಎಂಪಿ ಎಂಎಲ್ಎ ನ್ಯೂಸ್ 14ನೇ ಸೌಹಾರ್ದ ಸಂಗಮವು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಅಕ್ಟೋಬರ್ 14 ರಂದು ಮಂಗಳವಾರ ಸಂಜೆ 4 ರಿಂದ 9 ಗಂಟೆ ತನಕ ನಡೆಯಲಿದ್ದು,ಇದರ ಆಮಂತ್ರಣ ಪತ್ರಿಕೆಯನ್ನು ಡೊoಗರಕೇರಿ ಗಣಪತಿ ಮಠದಲ್ಲಿ ವೇದಮೂರ್ತಿ ಶ್ರೀ ಪ್ರಶಾಂತ್ ಭಟ್ ಅವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಸೌಹಾರ್ದ ಸಂಗಮದ ಸಂಘಟಕ ಡಾ.ಅಶೋಕ್ ಶೆಟ್ಟಿ ಬಿ. ಎನ್ ಅವರು ಉಪಸ್ಥಿತಿರಿದ್ದರು.ಚಿತ್ರ -ಬಿ.ಕೆ.ಪ್ರಭು.ಇದರ ವಿಡಿಯೋ ಲಿಂಕ್ ಇಲ್ಲಿದೆ. https://drive.google.com/file/d/1knAAZBUMx7SQAzbHYtY8OGL16Sc_Hg0C/view?usp=sharing

ಪ್ರಾದೇಶಿಕ ವಾರ್ತೆಗಳು

ರೆಡ್‌ಕ್ರಾಸ್ ಶತಮಾನೋತ್ಸವ ಕಟ್ಟಡದ ಉದ್ಘಾಟನೆಗೆ ರಾಜ್ಯಪಾಲರಿಗೆ ಆಹ್ವಾನ

ಮಂಗಳೂರು: ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ (ಹಳೆ) ಆವರಣದಲ್ಲಿ 6 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣಗೊಂಡಿರುವ ರೆಡ್‌ಕ್ರಾಸ್ ಶತಮಾನೋತ್ಸವ ಕಟ್ಟಡದ ಕಾಮಗಾರಿ ಪೂರ್ಣಗೊಂಡಿದ್ದು ಉದ್ಘಾಟನೆಗೆ ಸಿದ್ಧವಾಗಿದೆ. ರೆಡ್‌ಕ್ರಾಸ್ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಅವರು ರಾಜ್ಯಪಾಲ ಹಾಗೂ ರೆಡ್‌ಕ್ರಾಸ್ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ರಾಜಭವನದಲ್ಲಿ ಭೇಟಿಯಾಗಿ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಲು ಆಗಮಿಸುವಂತೆ ಆಹ್ವಾನಿಸಿದರು.ರೆಡ್‌ಕ್ರಾಸ್ ದ.ಕ.ಜಿಲ್ಲಾ ಘಟಕದ ಕಾರ್ಯ ಚಟುವಟಿಕೆಗಳನ್ನು ಶ್ಲಾಘಿಸಿದ ರಾಜ್ಯಪಾಲರು ಉದ್ಘಾಟನೆಗೆ ಆಗಮಿಸುವುದಾಗಿ ತಿಳಿಸಿದರು. ರೆಡ್‌ಕ್ರಾಸ್ ರಾಜ್ಯ ಘಟಕದ ಚೇರ್ಮನ್ ಬಸ್ರೂರು ರಾಜೀವ್ ಶೆಟ್ಟಿ ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಫದ ಸುವರ್ಣ ಸಂಭ್ರಮ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಅವರಿಗೆ ಅಹ್ವಾನ

ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಕೈಪಿಡಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಬೆಂಗಳೂರು ವಾರ್ತಾಭವನ ದಲ್ಲಿ ಬಿಡುಗಡೆಗೊಳಿಸಿದರು.ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಕಾರ್ಯಕ್ರಮ ಉದ್ಘಾಟನೆಗೆ ಆಹ್ವಾನಿಸಲಾಯಿತು.ಈ ವೇಳೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್, ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಷಾ ಖಾನಮ್,ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಲೋಕೇಶ್, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ, ಕೋಶಾಧಿಕಾರಿ ಪುಷ್ಪರಾಜ್ ಬಿ ಎನ್, ಕಾರ್ಯಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡ0ಗಡಿ, ಬೆಂಗಳೂರು ನಗರ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಸೋಮಶೇಖರ್ ಗಾಂಧಿ ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಫದ ಸುವರ್ಣ ಸಂಭ್ರಮ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಅವರಿಗೆ ಅಹ್ವಾನ

ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಕೈಪಿಡಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಬೆಂಗಳೂರು ವಾರ್ತಾಭವನ ದಲ್ಲಿ ಬಿಡುಗಡೆಗೊಳಿಸಿದರು.ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಕಾರ್ಯಕ್ರಮ ಉದ್ಘಾಟನೆಗೆ ಆಹ್ವಾನಿಸಲಾಯಿತು.ಈ ವೇಳೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್, ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಷಾ ಖಾನಮ್,ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಲೋಕೇಶ್, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ, ಕೋಶಾಧಿಕಾರಿ ಪುಷ್ಪರಾಜ್ ಬಿ ಎನ್, ಕಾರ್ಯಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡ0ಗಡಿ, ಬೆಂಗಳೂರು ನಗರ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಸೋಮಶೇಖರ್ ಗಾಂಧಿ ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ಕಲಿಕೆಗೆ ಶಿಸ್ತು ಮುಖ್ಯ.ಕಲಿಕೆಯೊಂದಿಗೆ ಉತ್ತಮ ಗುಣನಡತೆ ಬೆಳೆಸಿಕೊಳ್ಳಬೇಕು: ಸುರೇಶ್ ಬಾಳಿಗ

ಬಂಟ್ವಾಳ ಜೂ.೧. ಕಾಲೇಜಿನಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಶಿಸ್ತು ಮತ್ತು ಪರಿಶ್ರಮದಿಂದ ನಿರ್ದಿಷ್ಟವಾದ ಗುರಿಯನ್ನು ಇಟ್ಟುಕೊಂಡು ನಿರಂತರ ಸಾಧನೆ ಮಾಡಬೇಕು. ಕನಸನ್ನು ನನಸು ಮಾಡಲು ಶಿಸ್ತಿನಿಂದ ಅಭ್ಯಾಸ ಮಾಡಬೇಕು.ಕಲಿಕೆಗೆ ಶಿಸ್ತು ಅಗತ್ಯ.ಆರೋಗ್ಯ ಮತ್ತು ಉತ್ತಮ ಗುಣನಡತೆ ಕಾಪಾಡಿಕೊಳ್ಳಬೇಕು ಎಂದು ಬಂಟ್ವಾಳ ಸ್ವರ್ಣೋದ್ಯಮಿ ಸುರೇಶ್ ಬಾಳಿಗಾ ಹೇಳಿದರು.ಅವರು ಎಸ್.ವಿ.ಎಸ್ ದೇವಳ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ 2025-26ನೇ ಸಾಲಿನ ವಿದ್ಯಾರ್ಥಿ ಸಂಸತ್ತನ್ನು ಉದ್ಘಾಟಿಸಿ ಮಾತನಾಡಿದರು.ಮುಖ್ಯ ಅತಿಥಿಗಳಾಗಿ ಕಾಲೇಜಿನ ಆಡಳಿತ ಸಮಿತಿಯ ಸದಸ್ಯರಾದ ಬಿ.ಶಿವಾನಂದ ಬಾಳಿಗ, ಬಿ. ಸುಬ್ರಾಯ ನಾಯಕ್ , ಪಿ. ಪ್ರಕಾಶ್ ಕಿಣಿ, ನ್ಯಾಯವಾದಿ ವೆಂಕಟ್ರಮಣ ಶೆಣೈ, ಭಾಮಿ ಲಕ್ಷ್ಮಣ ಶೆಣೈ, ಎಸ್ವಿಎಸ್ ಪ್ರೌಢ ಶಾಲಾ ಮುಖ್ಯೋಪಾಧ್ಯಾಯಿನಿ ರೋಶ್ನಿ ತಾರಾ ಡಿಸೋಜ ಉಪಸ್ಥಿತರಿದ್ದರು.ಪ್ರಾಂಶುಪಾಲ ಎಮ್‌. ಗಂಗಾಧರ ಆಳ್ವ ಪ್ರಾಸ್ತಾವಿಕವಾಗಿ ಮಾತನಾಡಿ ಜವಾಬ್ದಾರಿ ಘೋಷಣೆ ಮಾಡಿದರು. ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಜಯಾನಂದ ಪೆರಾಜೆ ಶುಭ ಹಾರೈಸಿ ಮಾತನಾಡಿದರು. ಉಪನ್ಯಾಸಕರಾದ ವೆಂಕಟೇಶ ನಾಯಕ್ , ಮಂಜುನಾಥ ಶೆಣೈ ಸಹಕರಿಸಿದರು.ವಿದ್ಯಾರ್ಥಿ ನಾಯಕಿಯಾಗಿ ವೇದಿಕಾ ದೀಪಕ್ ಗಾರ್ಗಿ, ಕಾರ್ಯದರ್ಶಿಯಾಗಿ ತನುಶ್ರೀ ಪೂಜಾರಿ, ಕ್ರೀಡಾ ಕಾರ್ಯದರ್ಶಿಯಾಗಿ ಅಹಮ್ಮದ್ ಸಾಹಿಲ್, ವಿದ್ಯಾಭ್ಯಾಸ ಕಾರ್ಯದರ್ಶಿಯಾಗಿ ರಾಜರಾಜೇಶ್ವರೀ ಭಟ್, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಮಹಮ್ಮದ್ ಶಕೀರ್ , ಶಿಸ್ತು ಸಮಿತಿ ಕಾರ್ಯದರ್ಶಿಯಾಗಿ ಮೋಕ್ಷಿತಾ ಮೊದಲಾದವರು ಸಂಚಾಲಕ ಸುರೇಶ ಬಾಳಿಗರಿಂದ ಪ್ರಮಾಣವಚನ ಸ್ವೀಕರಿಸಿದರು. ಸಂಸ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಸಂಘದ ವಿದ್ಯಾರ್ಥಿಗಳು ಸರಸ್ವತೀ ವಂದನೆ ಬಳಿಕ ವಿವಿಧ ಮನೋರಂಜನಾ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

ಪ್ರಾದೇಶಿಕ ವಾರ್ತೆಗಳು

ಇಹಲೋಕ ತ್ಯಜಿಸಿದ ಹಿಂದುಳಿದ ವರ್ಗಗಳ ಪರವಾಗಿ ಮಹತ್ತರ ಸೇವೆ ಸಲ್ಲಿಸಿದ ಹಿರಿಯ ಚಿಂತಕ ಯಂ.ಜಯಾನಂದ ದೇವಾಡಿಗ

ಮಂಗಳೂರು- ಹಿರಿಯ ಕಾಂಗ್ರೆಸ್ಸಿಗ, ಮಾಜಿ ಮುಖ್ಯಮಂತ್ರಿ ದೇವರಾಜು ಅರಸುರವರ ಆತ್ಮೀಯರಾಗಿದ್ಧ ಮುಲ್ಕಿ ಜಯಾನಂದ ದೇವಾಡಿಗರು ಜೂನ್ 30ರ ರಾತ್ರಿ ನಿಧನ ಹೊಂದಿದ್ದಾರೆ. ಅವರು ಸಮಸ್ತ ಹಿಂದುಳಿದ ವರ್ಗಗಳ ಪರವಾಗಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸುವಲ್ಲಿ ಯಶಸ್ವಿಯಾಗಿದ್ದರು,ಆದರ್ಶ ಗಾಂಧಿವಾದಿ, ಅದ್ವಿತೀಯ ಸಂಘಟಕರು, ಕರಾವಳಿ ಭಾಗದಲ್ಲಿ ದೇವಾಡಿಗ ಸಂಘವನ್ನು ಸ್ಥಾಪಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ಧರು.ದ.ಕ. ಜಿಲ್ಲೆ ಮತ್ತು ಉಡುಪಿ ಜಿಲ್ಲೆಗಳ ನೋಂದಾಯಿತ ಸಂಘ ಸಂಸ್ಥೆಗಳ ಒಕ್ಕೂಟವನ್ನು ರಚಿಸಿ ಅದರ ಮುಖೇನ ವಿವಿಧ ಸಂಘ ಸಂಸ್ಥೆಗಳನ್ನು ಒಗ್ಗೂಡಿಸಿದ್ದರು.ಅವರಿಗೆ 92 ವರ್ಷ ವಯಸ್ಸಾಗಿತ್ತ. ಜಯಾನಂದ ದೇವಾಡಿಗರ ನಿಧನದಿಂದ ಹಿಂದುಳಿದ ವರ್ಗಕ್ಕೆ ತುಂಬಲಾರದ ನಷ್ಟವಾಗಿದೆ . ಅವರ ಆತ್ಮಕ್ಕೆ ದೇವರು ಸದ್ಗತಿ ಕರುಣಿಸಲಿ ಮತ್ತು ಕುಟುಂಬ ವರ್ಗ, ಹಿತೈಷಿಗಳಿಗೆ ನೋವನ್ನು ಸಹಿಸುವ ಶಕ್ತಿ ನೀಡಲಿ ಎಂದು ಗಣ್ಯರನೇಕರು ಸಂತಾಪ ಸೂಚಿಸಿದ್ದಾರೆ

Scroll to Top