Author name: info@mpmlasnewstv.com

ಕ್ರೈಂ

ಅಕ್ರಮ ಡ್ರಗ್ಸ್ ಸಾಗಾಟ ಆರೋಪಿ ಬಂಧನ

ಮಂಗಳೂರು :ಮಂಗಳೂರು ನಗರದ ಮೇರಿಹೀಲ್ ಹೆಲಿಪ್ಯಾಡ್ ಬಳಿ ಮಾದಕ ವಸ್ತುವಾದ  ಮೆಥಾಎಂಪೈಟಮೈನ್ . ಅಕ್ರಮವಾಗಿ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ  ಮೊಹಮ್ಮದ್‌ ಫರಾಜ್ ಎಂಬಾತನನ್ನು ಮಂಗಳೂರು ಉತ್ತರ ಉಪ ವಿಭಾಗದ ಡ್ರಗ್ಸ್ ಸ್ಕ್ವಾಡ್ ಸಿಬ್ಬಂದಿಗಳು ಮತ್ತು ಕಾವೂರು ಪೊಲೀಸ್ ಠಾಣಾ ಸಿಬ್ಬಂದಿಗಳು  ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.                ಬಂಧಿತನಿಂದ   ಸೊತ್ತುಗಳಾದ 7.28 ಗ್ರಾಂ ನಷ್ಟು ಮೆಥಾಎಂಪೆಟಮೈನ್ ಹಾಗೂ ಅದರ ಮೌಲ್ಯ ಸುಮಾರು 30,000 ರೂಗಳನ್ನು ಮತ್ತು  ಸುಜುಕಿ ಎಕ್ಸಸ್  ವಾಹನ ಅದರ ಮೌಲ್ಯ ಒಂದು ಲಕ್ಷ ರೂಗಳನ್ನು ವಶಕ್ಕೆ ಪಡೆದು  ಕಾವೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ ನಂಬ್ರ 15/2024 ಕಲಂ : 8(c), 21 (b) NDPS ಪ್ರಕರಣ ದಾಖಲಾಗಿಸಲಾಗಿದೆ.

ರಾಜಕೀಯ ವಾರ್ತೆಗಳು

ಫೆ.17ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: ಡಿಸಿಎಂ ಡಿ ಕೆ ಶಿವಕುಮಾರ್

ಮುಂದಿನ ಫೆಬ್ರವರಿ 17ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಹಿತಿ ನೀಡಿದ್ದಾರೆ. ವಿಧಾನಸೌಧದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಮೊದಲು ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸುವ ಬಗ್ಗೆ ತೀರ್ಮಾನಿಸಲಾಗಿತ್ತು. ಆ ಬಳಿಕ ಅದನ್ನು ಕಾರಣಾಂತರಗಳಿಂದ ಮುಂದೂಡಲಾಗಿತ್ತು. ಈಗ ಫೆ.17ರಂದು ನಡೆಸಲು ತೀರ್ಮಾನಿಸಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಈ ಸಮಾವೇಶ ಮಂಗಳೂರಿನಲ್ಲಿ ನಡೆಯಲಿದೆ” ಎಂದು ತಿಳಿಸಿದ್ದಾರೆ.

ಅಂತಾರಾಷ್ಟ್ರೀಯ ವಾರ್ತೆಗಳು

ತನ್ನ ಸೈನಿಕರ ಸಾವಿಗೆ ಸೇಡು

ಅಮೇರಿಕಾ :ಅಮೇರಿಕಾವು ಇರಾಕ್ -ಸಿರಿಯಾ ಮೇಲೆ ವೈಮಾನಿಕ ಧಾಳಿ ನಡೆಸಿ ತನ್ನ ಸೈನಿಕರ ಸಾವಿಗೆ ಸೇಡು ತೀರಿಸಿಕೊಂಡಿದೆ. ಇದರಿಂದಾಗಿ ಇರಾಕ್ -ಸಿರಿಯಾದ ಸುಮಾರು 40 ಮಂದಿ ಸೈನಿಕರು ಸಾವನ್ನಪ್ಪಿದ್ದಾರೆ

ರಾಷ್ಟ್ರೀಯ ವಾರ್ತೆಗಳು

ಎಲ್ಲ ವರ್ಗದ ಜನತೆಯ ಹಿತ ಕಾಯುವ ಬಜೆಟ್ :ಸಂಸದ ನಳಿನ್ ಕುಮಾರ್ ಕಟೀಲ್

ನವದೆಹಲಿ: ಚುನಾವಣೆಯ ಹೊಸ್ತಿಲಿನಲ್ಲಿ ನಿರ್ಮಲಾ ಸೀತಾರಾಮ್ ಅವರು ಸದೃಢ ದೇಶ ನಿರ್ಮಾಣದ  ಅಭಿವೃದ್ಧಿಯ ಬಜೆಟ್ ಮಂಡಿಸಿದ್ದಾರೆ. ಬಡವರ, ರೈತರ ಹಾಗೂ ಎಲ್ಲ ವರ್ಗದ ಜನತೆಯ ಹಿತ ಕಾಯುವ ಬಜೆಟ್ ಇದಾಗಿದೆ. ಮಹಿಳಾ ಸಬಲೀಕರಣಕ್ಕೆ ವಿಶೇಷ ಆದ್ಯತೆ ಕಲ್ಪಿಸಲಾಗಿದೆ. 9 ರಿಂದ 14 ವರ್ಷ ವಯಸ್ಸಿನ ಹೆಣ್ಣುಮಕ್ಕಳಿಗೆ ಗರ್ಭಕಂಠ ಕ್ಯಾನ್ಸರ್  ನಿರೋಧಕ ಲಸಿಕೆಗೆ ಉತ್ತೇಜನ ನೀಡುವ ಮೂಲಕ ಅವರ ಆರೋಗ್ಯದ ಬಗ್ಗೆ  ವಿಶೇಷ ಕಾಳಜಿ ವಹಿಸಲಾಗಿದೆ. ಲಕ್ಷ ದ್ವೀಪದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಪರೋಕ್ಷವಾಗಿ ಮಂಗಳೂರು ಸಹಿತ ಕರಾವಳಿಯ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ದಿಗೂ ಸಹಕಾರಿಯಾಗಲಿದೆ. ಪ್ರವಾಸೋದ್ಯಮಕ್ಕೆ ಒತ್ತು ನೀಡಿರುವುದರಿಂದ  ಅನೇಕ ಉದ್ಯೋಗ ಹಾಗೂ  ವ್ಯವಹಾರಗಳು ಸೃಷ್ಟಿಯಾಗಲಿವೆ. ಮೀನುಗಾರಿಕೆಗೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸುವ ಮೂಲಕ ಮೀನುಗಾರರ ಬಹುಕಾಲದ ಬೇಡಿಕೆ ಈಡೇರಿಸಿದ್ದ ಕೇಂದ್ರ ಸರ್ಕಾರ ಈಗ ಮತ್ಸೃ ಸಂಪದ ಯೋಜನೆ ಮುಂದುವರಿಸಿದ್ದು  ಕರಾವಳಿಯ ಮೀನುಗಾರರಿಗೆ ವರದಾನವಾಗಲಿದೆ. ದೇಶಾದ್ಯಂತ ಒಂದು ಕೋಟಿ ಮನೆಗಳಿಗೆ ಸೌರ ವಿದ್ಯುತ್, ಮುಂದಿನ 5 ವರ್ಷಗಳಲ್ಲಿ 3 ಕೋಟಿ ಹೊಸ ಮನೆ ನಿರ್ಮಾಣ, ಹೆಚ್ಚಿನ ಮೆಡಿಕಲ್ ಕಾಲೇಜು ನಿರ್ಮಾಣ   ಸ್ವಾಗತಾರ್ಹವಾಗಿದೆಂದು ಕೇಂದ್ರದ ಬಜೆಟ್ ಬಗ್ಗೆ ಸಂಸದ ನಳಿನ್‌ಕುಮಾರ್ ಕಟೀಲ್  ಅವರು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.

ಹೊರ ರಾಜ್ಯ ವಾರ್ತೆಗಳು

ಪುಣೆಯ ಖ್ಯಾತ ಮಕ್ಕಳ ತಜ್ಞ ಡಾ. ಸುಧಾಕಾರ್ ಶೆಟ್ಟಿ ಮತ್ತವರ ವೈದ್ಯಕೀಯ ತಂಡಕ್ಕೆ ಸತತ 3ನೇ ಬಾರಿಗೆ ಕೇಂದ್ರ ಸರಕಾರದ ರಕ್ಷಾ ಮಂತ್ರಿ ಅವಾರ್ಡ್

ಪುಣೆ :ಪುಣೆಯ ಖ್ಯಾತ ಮಕ್ಕಳ ತಜ್ಞ ಡಾ. ಸುಧಾಕಾರ್ ಶೆಟ್ಟಿ ಮತ್ತವರ ವೈದ್ಯಕೀಯ ತಂಡಕ್ಕೆ ವೈದ್ಯಕಿಯ ಕ್ಷೇತ್ರದಲ್ಲಿ ಸಲ್ಲಿಸಿದ ಅತ್ಯುತ್ತಮ ಸಮಾಜಸೇವೆಗಾಗಿ ಕೇಂದ್ರ ಸರಕಾರದ ಪ್ರತಿಷ್ಠಿತ ಪ್ರಶಸ್ತಿ ರಕ್ಷಾ ಮಂತ್ರಿ ಅವಾರ್ಡ್ ಸತತ 3ನೇ ಬಾರಿಗೆ ದೊರಕಿದೆ.

ಕರ್ನಾಟಕ ವಾರ್ತೆಗಳು

ಮುಖ್ಯ ಮಂತ್ರಿ ಸಿದ್ಧರಾಮಯ್ಯರಿಂದ ದ.ಕ . ಪತ್ರಕರ್ತರ ಗ್ರಾಮ ವಾಸ್ತವ್ಯದ ಮಾಹಿತಿ ಪತ್ರ ಬಿಡುಗಡೆ

ದಾವಣಗೆರೆ,ಫೆ.3;ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ,ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ,ದ.ಕ ಜಿಲ್ಲಾ ಪಂಚಾಯತ್,ಸುಳ್ಯ ತಾಲೂಕು ಪಂಚಾಯತ್ ,ದ.ಕ ಜಿಲ್ಲಾ ಪೊಲೀಸ್ ಇಲಾಖೆ. ಹರಿಹರ,ಕೊಲ್ಲಮೊಗರು ಗ್ರಾಮ ಪಂಚಾಯತ್ ಮತ್ತು ಸ್ಥಳೀಯಾಡಳಿತ ಮತ್ತು ಸ್ಥಳೀಯ ಸಂಘ ಸಂಸ್ಥೆಗಳ ಸಹಯೋ ಗದೊಂದಿಗೆ  ಕೊಲ್ಲಮೊಗರುವಿನ ಬಂಗ್ಲೆ ಗುಡ್ಡೆ ಸರಕಾರಿ ಶಾಲಾ ವಠಾರದಲ್ಲಿ ಫೆ.10ರಂದು  ನಡೆಯಲಿರುವ ಪತ್ರಕರ್ತರ 5ನೆ ಗ್ರಾಮ ವಾಸ್ತವ್ಯದ ಮಾಹಿತಿ ಪತ್ರವನ್ನು ಕರ್ನಾಟಕ ರಾಜ್ಯದ ಮುಖ್ಯ ಮಂತ್ರಿ ಸಿದ್ದರಾಮಯ್ಯ ದಾವಣಗೆರೆಯ ಕರ್ನಾಟಕ ಕಾರ್ಯ ನಿರತ ಪತ್ರ ಕರ್ತರ ಸಂಘದ ಸಮಾವೇಶದಲ್ಲಿ ಶನಿವಾರ ಬಿಡುಗಡೆ ಮಾಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ದಾವಣಗೆರೆ ಉಸ್ತುವಾರಿ ಸಚಿವ ಮಲ್ಲಿಕಾರ್ಜುನಯ್ಯ, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅದ್ಯಕ್ಷ ಶಿವಾನಂದ್ ತಗಡೂರು, ಮಾಜಿ ಸಚಿವ ಶಾಮನೂರು ಶಿವ ಶಂಕರಪ್ಪ, ದಕ್ಷಿಣ ಕನ್ನಡ ಜಿಲ್ಲೆ ಕಾರ್ಯ ನಿರತ ಪತ್ರಕಾರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಮೊದಲಾದ ವರು  ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ಸಹಕಾರ-ಪುತ್ತೂರು ಸಹಾಯಕ ಕಮೀಷನರ್

ಸುಳ್ಯ: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಫೆ.10ರಂದು ನಡೆಯುವ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ಸಹಾಯ, ಸಹಕಾರ ನೀಡುವುದಾಗಿ ಪುತ್ತೂರು ಸಹಾಯಕ ಕಮೀಷನರ್ ಜುಬಿನ್ ಮಹಾಪಾತ್ರ ಹೇಳಿದ್ದಾರೆ. ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಪೂರ್ವಭಾವಿಯಾಗಿ ಸುಳ್ಯ ತಾಲೂಕು ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಜನರಿಂದ ಬರುವ ಅರ್ಜಿಗಳನ್ನು ಸಾಧ್ಯವಾದಷ್ಟು ಸ್ಥಳದಲ್ಲಿಯೇ ಪರಿಹಾರ ಮಾಡುವ ಪ್ರಯತ್ನ ಮಾಡಲಾಗುವುದು. ಎಲ್ಲಾ ಇಲಾಖೆಗಳ ಅಧಿಕಾರಿಗಳು ಅಗತ್ಯ ಸಿದ್ಧತೆಗಳೊಂದಿಗೆ ಭಾಗವಹಿಸಬೇಕು. ವಿವಿಧ ಇಲಾಖೆಗಳ ಸ್ಟಾಲ್‌ಗಳನ್ನು ತೆರೆದು ಇಲಾಖೆಗಳ ಮಾಹಿತಿ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ವಿವರಿಸಿದರು. ಗ್ರಾಮ ವಾಸ್ತವ್ಯದ ಸಿದ್ಧತೆಗಳ ಬಗ್ಗೆ ಚರ್ಚಿಸಲಾಯಿತು. ತಹಶೀಲ್ದಾರ್ ಜಿ.ಮಂಜುನಾಥ್, ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ನಂದಕುಮಾರ್, ವಲಯ ಅರಣ್ಯಾಧಿಕಾರಿಗಳಾದ ಎನ್.ಮಂಜುನಾಥ್, ವಿಮಲ್ ಬಾಬು, ಆರ್.ಗಿರೀಶ್, ಪಶುವೈದ್ಯಕೀಯ ಇಲಾಖೆಯ ಸಹಾಯಕ ನಿರ್ದೇಶಕ ಡಾ.ನಿತಿನ್‌ ಪ್ರಭು, ಸಿಡಿಪಿಒ ಶೈಲಜಾ ದಿನೇಶ್ ಕುಕ್ಕುಜಡ್ಕ, ಲೋಕೋಪಯೋಗಿ ಇಲಾಖೆಯ ಸಹಾಯಕ‌ ಕಾರ್ಯನಿರ್ವಾಹಕ‌ ಇಂಜಿನಿಯರ್ ಗೋಪಾಲ, ಜಿ.ಪಂ. ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರುಕ್ಕು, ಸಹಾಯಕ ಇಂಜಿನಿಯರ್ ಮಣಿಕಂಠ, ಕಂದಾಯ ನಿರೀಕ್ಷಕ ಅವಿನ್ ರಂಗತ್ತಮಲೆ, ಶಿಕ್ಷಣ ಸಂಯೋಜಕಿ ಸಂಧ್ಯಾ ಕುಮಾರಿ, ತಾಲೂಕು ಪರಿವೀಕ್ಷಣಾಧಿಕಾರಿ ಆಶಾ ನಾಯಕ್, ಸಮಾಜ ಕಲ್ಯಾಣ ಇಲಾಖೆಯ ಅರ್ಷಿಯಾ, ಗೀತಾ, ನಗರ ಪಂಚಾಯತ್‌ನ ತಿಮ್ಮಪ್ಪ,  ದ.ಕ.ಜಿಲ್ಲಾ‌ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಕೋಶಾಧಿಕಾರಿ ಬಿ.ಎನ್.ಪುಷ್ಪರಾಜ್, ಕಾರ್ಯದರ್ಶಿ ಗಂಗಾಧರ ಕಲ್ಲಪಳ್ಳಿ, ಸುಳ್ಯ ಪ್ರೆಸ್ ಕ್ಲಬ್ ಅಧ್ಯಕ್ಷ  ಹರೀಶ್ ಬಂಟ್ವಾಳ್, ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದಯಾನಂದ‌ ಕಲ್ನಾರ್, ಕಾರ್ಯದರ್ಶಿ ತೇಜೇಶ್ವರ ಕುಂದಲ್ಪಾಡಿ, ಕೋಶಾಧಿಕಾರಿ ಪ್ರಜ್ಞಾ ಎಸ್.ನಾರಾಯಣ, ಮಾಜಿ ಅಧ್ಯಕ್ಷರಾದ ಪದ್ಮನಾಭ ಮುಂಡೋಕಜೆ, ಕೃಷ್ಣ ಬೆಟ್ಟ, ಸದಸ್ಯ ಮಿಥುನ್ ಕರ್ಲಪ್ಪಾಡಿ ಮತ್ತಿತರರು ಉಪಸ್ಥಿತರಿದ್ದರು.

Scroll to Top