ಕರಾವಳಿ ಸುದ್ದಿ

ಕರಾವಳಿ ಸುದ್ದಿ

ಮಕ್ಕಳಲ್ಲಿನ ಕ್ಯಾನ್ಸರ್ ಚಿಕಿತ್ಸೆ ಜಾಗೃತಿಗಾಗಿ ಮ್ಯಾರಥಾನ್ ಓಟ

ಮಕ್ಕಳಲ್ಲಿ ಕ್ಯಾನ್ಸರ್ ಕಂಡುಬಂದಲ್ಲಿ ಸೂಕ್ತವಾದ ಚಿಕಿತ್ಸೆ ನೀಡಿ ಗುಣಪಡಿಸಲು ಎಲ್ಲಾ ಅವಕಾಶಗಳಿದ್ದು, ಈ ನಿಟ್ಟಿನಲ್ಲಿ ಜನಸಾಮಾನ್ಯರಿಗೆ ಅರಿವು ಮೂಡಿಸುವ ಉದ್ದೇಶದಿಂದ ಕರ್ಮಭೂಮಿಯಿಂದ ಜನ್ಮಭೂಮಿಗೆ ಎಂಬ ಧ್ಯೇಯವಾಕ್ಯದೊಂದಿಗೆ ಮುಂಬಯಿಯಿಂದ ಮಂಗಳೂರಿಗೆ ಕೇವಲ 23 ದಿನಗಳಲ್ಲಿ ಸುಮಾರು 950 ಕಿಲೋಮೀಟರ್ ವಿಶೇಷ ಮ್ಯಾರಥಾನ್ ಓಟವನ್ನು ರೇಷ್ಮಾ ಮತ್ತು ಗಿರೀಶ್ ಶೆಟ್ಟಿ ದಂಪತಿಗಳು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಇದು ದಂಪತಿಗಳಿಂದ ನಡೆದ ಅತ್ಯಂತ ದೀರ್ಘಾವಧಿಯ ಮ್ಯಾರಥಾನ್ ಎಂದು ದಾಖಲೆಯನ್ನು ನಿರ್ಮಿಸಿದೆ. ಇವರಿಗೆ ಕುಮಾರ ಅಜ್ವಾಣಿ ಹಾಗು ಹರಿದಾಸ ನಾಯರ್ ಕೂಡ ಸಾಥ್ ನೀಡಿದ್ದಾರೆ. ಮಕ್ಕಳ ಕ್ಯಾನ್ಸರ್ ಗೆ ಚಿಕಿತ್ಸೆ ಪೂರ್ತಿ ಉಚಿತವಾಗಿದ್ದು, ರೋಗವನ್ನು ಕೂಡ ಸಂಪೂರ್ಣವಾಗಿ ಗುಣಪಡಿಸಬಹುದು ಎಂಬ ಒಳ್ಳೆಯ ಉದ್ದೇಶದಿಂದ ಹೊಸ ದಾಖಲೆಯನ್ನು ನಿರ್ಮಿಸಿದ ಅಪರೂಪದ ಸಾಧಕರನ್ನು ಸುರತ್ಕಲ್ ರೋಟರಿ ಕ್ಲಬ್ ಅಧ್ಯಕ್ಷ ಸಂದೀಪ್ ರಾವ್ ಇಡ್ಯಾ, ಸುರತ್ಕಲ್ ಪರಿಸರದಲ್ಲಿ ಗೌರವಪೂರ್ವಕವಾಗಿ ಸ್ವಾಗತಿಸಿದರು ಶ್ರೀ ಶಿವಶಕ್ತಿ ಸೇವಾ ಸಂಘಟನೆಯ ಅಧ್ಯಕ್ಷ ಪುಂಡಲೀಕ ಹೊಸಬೆಟ್ಟು ಇವರು ದಂಪತಿಯ ಮ್ಯಾರಥಾನ್ ಓಟದ ಉದ್ದೇಶ ಮತ್ತು ಹೊಸವಿಶ್ವದಾಖಲೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು, ಈ ವಿಶೇಷ ಕಾರ್ಯಕ್ರಮದಲ್ಲಿ ಪ್ರೋ.ಕೃಷ್ಣಮೂರ್ತಿ, ಹರೀಶ್ ಆಚಾರ್ಯ, ನೀಲಪ್ಪ ವಿ., ಡಾ.ಭಾಗ್ಯಲಕ್ಷ್ಮಿ, ಅಕ್ಷತಾ ವಿ, ಪ್ರಶಾಂತ್, ರೊ.ಎಂ ರಾಜೇಶ್ ರಾವ್, ಚಂದ್ರಕಾಂತ್ ಎಂ, ಯಶೋಮತಿ ರವೀಂದ್ರನಾಥ್, ಪ್ರೀತಂ ಜೈನ್, ವಸಂತ್ ಕುಮಾರ್ ನಾಯ್ಕ್, ಸತೀಶ್ ಸದಾನಂದ, ಜಯರಾಮ್ ಶೆಟ್ಟಿ ಮುಂಬೈ, ಹಾಗು ಎಂಸಿಎಫ್ ನಾಗರಿಕ ಸಲಹಾ ಮತ್ತು ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ರಾಜ್ ಮೋಹನ್ ರಾವ್ ಉಪಸ್ಥಿತರಿದ್ದರು.

ಕರಾವಳಿ ಸುದ್ದಿ

ಮಕ್ಕಳು ಯಕ್ಷಗಾನದತ್ತ ಆಕರ್ಷಿಸುತ್ತಿರುವುದು ಒಳ್ಳೆಯ ಬೆಳವಣಿಗೆ : ಪ್ರತಿಭಾ ಎಲ್ ಸಾಮಗಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕೇಂದ್ರೀಯ ಮಹಿಳಾ ಘಟಕದ 8 ನೇ ವಾರ್ಷಿಕೋತ್ಸವ

ಸುರತ್ಕಲ್ :ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಕೇಂದ್ರೀಯ ಘಟಕ ಮಂಗಳೂರು ಇದರ 8 ನೇ ವಾರ್ಷಿಕೋತ್ಸವ ಬಂಟರ ಭವನದಲ್ಲಿ ನಡೆಯಿತು.ಶಕುಂತಳಾ ರಮಾನಂದ ಭಟ್, ಚಂದ್ರಕಲಾ ಬಾಲಕೃಷ್ಣ ಶೆಟ್ಟಿ, ಭಾರತಿ ಗಂಗಾಧರ್, ಮಮತ ಹೆಗ್ಡೆ, ಸತ್ಯವತಿ ಡಿ ಶೆಟ್ಟಿ ದೀಪ ಪ್ರಜ್ವಲನೆಗೈದರು. ಸಂಜೆ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ನೃತ್ಯ ವಿದುಷಿ, ವಿಮರ್ಶಕಿ ಪ್ರತಿಭಾ ಎಲ್ ಸಾಮಗ ವಹಿಸಿದ್ದರು. ಪ್ರಸಕ್ತ ಕಾಲಘಟ್ಟದಲ್ಲಿ ಮಹಿಳೆಯರೂ ಕೂಡಾ ಯಕ್ಷಗಾನದಲ್ಲಿ ಮುಂಚೂಣಿಯಲ್ಲಿದ್ದು ಕಲಾಸೇವೆಗೈಯುತ್ತಿದ್ದಾರೆ. ಅದರಲ್ಲೂ ಮಕ್ಕಳು ಯಕ್ಷಗಾನದತ್ತ ಆಕರ್ಷಿತರಾಗುತ್ತಿರುವುದು ಒಳ್ಳೆಯ ಬೆಳವಣಿಗೆ. ಮಕ್ಕಳನ್ನು ಯಕ್ಷಗಾನದಲ್ಲಿ ತೊಡಗಿಸಿಕೊಳ್ಳುವಂತೆ ಮಹಿಳಾ ಕೇಂದ್ರ ಸಮಿತಿ ಶ್ರಮ ಪಟ್ಟಿದೆ. ನೇಪಥ್ಯಕ್ಕೆ ಸರಿದ ಮತ್ತು ಸಾಧನೆಗೈದ ಮಹಿಳಾ ಕಲಾವಿದರನ್ನು ಗುರುತಿಸಿ ಗೌರವಿಸುವುದು ಶ್ಲಾಘನೀಯ ಕಾರ್ಯ ಎಂದರು.ಯಕ್ಷಗಾನ ಭಾಗವತ ಪಟ್ಲ ಸತೀಶ್ ಶೆಟ್ಟಿಯವರ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪದ್ಮಪ್ರಸಾದ್ ಜೈನ್, ದೀಪಕ್ ಶೆಟ್ಟಿ ಲಿಂಗಮಾರುಗುತ್ತು, ವಿದ್ಯಾ ರಾಕೇಶ್, ಪೂರ್ಣಿಮಾ ಪ್ರಭಾಕರ ರಾವ್ ಪೇಜಾವರ, ಸುಜಾತ ಧನಂಜಯ ಶೆಟ್ಟಿ ಹೊಸಬೆಟ್ಟು, ಚೈತ್ರಾ ಶೆಟ್ಟಿ ಭಾಗವಹಿಸಿದ್ದರು.ಸಮಾರಂಭದಲ್ಲಿ ಜಯಲಕ್ಷ್ಮೀ ಕಾರಂತ್ ಮಂಗಲ್ಪಾಡಿ, ಜ್ಯೋತಿ ಸುನೀಲ್ ಶೆಟ್ಟಿ ಕಾರ್ಕಳ ಅವರನ್ನು ಸನ್ಮಾನಿಸಲಾಯಿತು. ಕುಮಾರಿ ಚೈತ್ರಾ ಎಚ್ ರಾವ್, ವಿದುಷಿ ವೈಷ್ಣವಿ ಸಾತ್ವಿಕ್ ರಾವ್, ವಿದುಷಿ ಮೈತ್ರಿ ಭಟ್ ಅವರನ್ನು ಯಕ್ಷಧ್ರುವ ಪುರಸ್ಕಾರ ನೀಡಿ ಗೌರವಿಸಲಾಯಿತು. ಕೇಂದ್ರೀಯ ಮಹಿಳಾ ಘಟಕದ ಗೌರವಾಧ್ಯೆಕ್ಷೆ ಆರತಿ ಆಳ್ವ, ಅಧ್ಯೆಕ್ಷೆ ಪೂರ್ಣಿಮಾ ಯತೀಶ್ ರೈ, ಕಾರ್ಯದರ್ಶಿ ಪೂರ್ಣಿಮಾ ಶಾಸ್ತ್ರಿ, ಕೋಶಾಧಿಕಾರಿ ಭಾರತಿ ಎಸ್ ರಾವ್, ಸಂಚಾಲಕಿ ನಿವೇದಿತಾ ಎನ್ ಶೆಟ್ಟಿ ಉಪಸ್ಥಿತರಿದ್ದರು. ಪೂರ್ಣಿಮಾ ಯತೀಶ್ ರೈ ಸ್ವಾಗತಿಸಿ ಪ್ರಸ್ತಾವನೆಗೈದರು. ಆರತಿ ಆಳ್ವ ವಂದಿಸಿದರು. ಸಾಯಿಸುಮ ನಾವಡ ಕಾರ್ಯಕ್ರಮ‌ ನಿರೂಪಿಸಿದರು.ಬಳಿಕ ಮಹಿಳಾ ಕಲಾವಿದೆಯರಿಂದ ದಶಾವತಾರ ಯಕ್ಷರೂಪಕ ಪ್ರದರ್ಶನಗೊಂಡಿತು.

ಕರಾವಳಿ ಸುದ್ದಿ

ಕುದ್ರೋಳಿ ಗಣೇಶ್ ಗೆ” ಗೋಲ್ಡನ್ ಮ್ಯಾಜಿಷಿಯನ್ “ರಾಷ್ಟ್ರೀಯ ಜಾದೂ ಪ್ರಶಸ್ತಿ

ಆಂಧ್ರಪ್ರದೇಶದ ಇಂಡಿಯನ್ ಮ್ಯಾಜಿಕ್ ಅಸೋಶಿಯೇಶನ್ ( ಐ ಎಂ ಎ) ಸಂಸ್ಥೆಯು ಕರ್ನಾಟಕದ ಜಾದೂ ಕಲಾವಿದ ಕುದ್ರೋಳಿ ಗಣೇಶ್ ರವರಿಗೆ ಪ್ರತಿಷ್ಟಿತ ” ಗೋಲ್ಡನ್ ಮ್ಯಾಜಿಷಿಯನ್ ” ರಾಷ್ಟ್ರೀಯ ಜಾದೂ ಪ್ರಶಸ್ತಿ ನೀಡಿ ಗೌರವಿಸಿದೆ. ಕುದ್ರೋಳಿ ಗಣೇಶ್ ರವರು ಜಾದೂ ರಂಗದಲ್ಲಿ ಮಾಡಿರುವ ಸೃಜನಾತ್ಮಕ ಪ್ರಯೋಗಗಳನ್ನು ಗುರುತಿಸಿ ಜೀವಿತಾವಧಿಯ ಸಾಧನೆಗಾಗಿ ಈ ಪ್ರಶಸ್ತಿ ಸಂದಾಯವಾಗಿದೆ.ಆಂಧ್ರಪದೇಶದ ವಿಶಾಖಪಟ್ಟಣದಲ್ಲಿ ರಾಷ್ಟ್ರೀಯ ಜಾದೂ ದಿನಾಚರಣೆಯ ನೆನಪಿಗಾಗಿ ನಡೆದ ಅದ್ದೂರಿ ಸಮಾರಂಭದಲ್ಲಿ ವಿಶಾಖಪಟ್ಟಣದ ಲೋಕಸಭಾ ಸದಸ್ಯರಾದ ಶ್ರೀ ಶ್ರೀಭರತ್ ಮುತ್ತುಕುಮುಲಿಯವರು ಕುದ್ರೋಳಿ ಗಣೇಶ್ ರವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಐ ಎಂ ಎ ಸಂಸ್ಥೆಯ ಅಧ್ಯಕ್ಷರಾದ ಖ್ಯಾತ ಜಾದೂಗಾರ ಶ್ರೀ ಬಿ.ಎಸ್.ರೆಡ್ಡಿ ಉಪಸ್ಥಿತರಿದ್ದರು.ಇಂಡಿಯನ್ ಮ್ಯಾಜಿಕ್ ಅಸೋಸಿಯೇಶನ್ ಸಂಸ್ಥೆಯು ತನ್ನ ದಶಮಾನೋತ್ಸದ ಅಂಗವಾಗಿ ಭಾರತದ ಅಗ್ರಗಣ್ಯ ಜಾದೂಗಾರರಾದ ಶ್ರೀ ಪಿ.ಸಿ.ಸೊರ್ಕಾರ್ ಜೂನಿಯರ್ ಸೇರಿದಂತೆ ದೇಶ ವಿದೇಶದ ಹತ್ತು ಜಾದೂ ಸಾಧಕರಿಗೆ ಪ್ರಶಸ್ತಿಯನ್ನು ಕೊಡಮಾಡಿದೆ.ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಕುದ್ರೋಳಿ ಗಣೇಶ್ ಬದಲಾಗುತ್ತಿರುವ ಅಭಿರುಚಿಗೆ ಹೊಂದುವಂತೆ ಪ್ರದರ್ಶನದಲ್ಲಿ ಹೊಸತನವನ್ನು ಜೋಡಿಸಿಕೊಳ್ಳೊಣ ಎಂದು ಭಾರತೀಯ ಜಾದೂಗಾರರಿಗೆ ಕರೆ ನೀಡಿದರು. ಜಾದೂ ಕಲೆಯ ಅಭಿವೃದ್ದಿಗಾಗಿ ಜಾದೂ ಕಲೆಗೆ ಸಾಂಸ್ಥಿಕ ರೂಪ ದೊರೆಯಬೇಕಾಗಿದೆ, ಈ ಬಗ್ಗೆ ಕೇಂದ್ರ ಸರಕಾರಕ್ಕೆ ಒತ್ತಾಯಿಸಬೇಕಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಕುದ್ರೋಳಿ ಗಣೇಶ್ ಈ ಬಗ್ಗೆ ತಾವು ಮುಂದಾಳತ್ವವನ್ನು ವಹಿಸಬೇಕು ಎಂದು ಸಭೆಯಲ್ಲಿ ಉಪಸ್ಥಿತರಿದ್ದ ಹಿರಿಯ ಜಾದೂಗಾರ ಶ್ರೀ ಪಿ.ಸಿ.ಸೊರ್ಕಾರ್ ರವರಿಗೆ ವಿನಂತಿಸಿದರು.ಕುದ್ರೋಳಿ ಗಣೇಶ್ ರವರು ಮೂವತ್ತಕ್ಕೂ ಅಧಿಕ ವರ್ಷಗಳಿಂದ ಜಾದೂರಂಗದಲ್ಲಿದ್ದು ದೇಶದಾದ್ಯಂತ ಹಾಗೂ ವಿದೇಶದ 15 ರಾಷ್ಟ್ರಗಳಲ್ಲಿ 2,300 ಕ್ಕೂ ಹೆಚ್ಚು ಜಾದೂ ಪ್ರದರ್ಶನ ನೀಡಿದ್ದಾರೆ. ವಿವಿಧ ಜಾದೂ ಸ್ಪರ್ಧೆಗಳಲ್ಲಿ ಭಾಗವಹಿಸಿ 11 ರಾಷ್ಟ್ರೀಯ ಜಾದೂ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಜಾದೂ,ಜಾನಪದ,ರಂಗಭೂಮಿ,ಸಂಗೀತಗಳ ಸಮ್ಮಿಳನದ ನವರಸಪೂರ್ಣ ಜಾದೂ ಶೈಲಿಯನ್ನು ಹುಟ್ಟುಹಾಕಿದ್ದಾರೆ. ತುಳುನಾಡು ಜಾದೂ, ತುಳುನಾಡು ತುಡರ್ ಚೆಂಡು,ಹರಿಕಥೆ ಜಾದೂ, ನವದುರ್ಗಾ ವಿಸ್ಮಯ, ಸ್ವಚ್ಛತೆಗಾಗಿ ಜಾದೂ, ಶಿಕ್ಷಣಕ್ಕಾಗಿ ಜಾದೂ, ಮೈಂಡ್ ಮ್ಯಾಜಿಕ್ ಮುಂತಾದ ನವನವೀನ ಜಾದೂ ಪ್ರಯೋಗಗಳ ಮೂಲಕ ಜಗತ್ತಿನಾದ್ಯಂತ ಜನಪ್ರಿಯರಾಗಿದ್ದಾರೆ

ಕರಾವಳಿ ಸುದ್ದಿ

ಮಧೂರು ಬ್ರಹ್ಮಕಲಶೋತ್ಸವ” ಮಂಗಳೂರಿನಲ್ಲಿ ನಾಳೆ ಹೊರೆಕಾಣಿಕೆ ಸಂಗ್ರಹಣಾ ಕೇಂದ್ರ ಉದ್ಘಾಟನೆ

ಶ್ರೀ ಕ್ಷೇತ್ರ ಮಧೂರಿನಲ್ಲಿ ಜರಗಲಿರುವ ಬ್ರಹ್ಮಕಲಶೋತ್ಸವದ ಪ್ರಯುಕ್ತ ಮಂಗಳೂರಿನಲ್ಲಿ ” ಹೊರೆಕಾಣಿಕೆ ಸಂಗ್ರಹಣಾ ಕೇಂದ್ರ ” ದ ಉದ್ಘಾಟನೆಯು ನಾಳೆ ತಾ.15, ಶನಿವಾರ ಬೆಳಿಗ್ಗೆ ಗಂಟೆ 10-00 ಕ್ಕೆ ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಜರಗಲಿರುವುದು.ಕೊಂಡೆವೂರಿನ ಪ.ಪೂ.ಶ್ರೀ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿ, ಕಟೀಲು ಹರಿನಾರಾಯಣ ಆಸ್ರಣ್ಣ, ಮಧೂರು ಕ್ಷೇತ್ರದ ತಂತ್ರಿಗಳಾದ ದೇರೆಬೈಲು ಶಿವಪ್ರಸಾದ್ ತಂತ್ರಿ, ಶರವು ರಾಘವೇಂದ್ರ ಶಾಸ್ತ್ರಿ , ಇತರ ಧಾರ್ಮಿಕ ಕ್ಷೇತ್ರಗಳ ಪ್ರಮುಖರು, ಸಂಸದರು, ಶಾಸಕರು, ಜನಪ್ರತಿನಿಧಿಗಳು ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ಹೊರೆಕಾಣಿಕೆ ಸಂಗ್ರಹಣಾ ಕೇಂದ್ರವನ್ನು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಡಾ|ಎಂ.ಎನ್. ರಾಜೇಂದ್ರ ಕುಮಾರ್ ಉದ್ಘಾಟಿಸಲಿರುವರು.ಬನ್ನಿ ಭಾಗವಹಿಸಿಎಸ್.ಪ್ರದೀಪ ಕುಮಾರ ಕಲ್ಕೂರ , 9845083736

ಕರಾವಳಿ ಸುದ್ದಿ

ಮಾಚ್೯ 15 ರಂದು ಸುರತ್ಕಲ್ ನಲ್ಲಿ ಪಟ್ಲ ಫೌಂಡೇಶನ್ ಘಟಕದ ಪಂಚಮ ವಾರ್ಷಿಕೋತ್ಸವ, ಕೇಂದ್ರೀಯ ಮಹಿಳಾ ಘಟಕದ ಅಷ್ಟಮ ವಾರ್ಷಿಕೋತ್ಸವ

ಸುರತ್ಕಲ್: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ಸುರತ್ಕಲ್ ಘಟಕದ ಪಂಚಮ ವಾರ್ಷಿಕೋತ್ಸವ ಮಾಚ್೯ 15 ರಂದು ಶನಿವಾರ ಸಂಜೆ 6.30 ಗಂಟೆಗೆ ಸುರತ್ಕಲ್ ಬಂಟರ ಭವನದ ವಠಾರದಲ್ಲಿ ನಡೆಯಲಿದೆ.ಸಂಜೆ 7.30 ಕ್ಕೆ ನಡೆಯುವ ಕಾರ್ಯಕ್ರಮವನ್ನು ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕ ಶಂಕರ ನಾರಾಯಣ ಭಟ್ ದೀಪ ಪ್ರಜ್ವಲನೆ ಗೈಯ್ಯಲಿದ್ದಾರೆ. ಸುರತ್ಕಲ್ ಘಟಕದ ಅಧ್ಯಕ್ಷ ಸುಧಾಕರ ಪೂಂಜ ಅಧ್ಯಕ್ಷತೆ ವಹಿಸಲಿದ್ದಾರೆ. ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿಯವರ ಉಪಸ್ಥಿತಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉದ್ಯಮಿ ಕರುಣಾಕರ ಎಂ ಶೆಟ್ಟಿ ಮಧ್ಯಗುತ್ತು, ಮುಂಬೈ ಉದ್ಯಮಿ ಅನಿಲ್ ಶೆಟ್ಟಿ ತೇವು ಸೂರಿಂಜೆ, ಅಗರಿ ರಾಘವೇಂದ್ರ ರಾವ್, ಡಿ ಕೆ ಶೆಟ್ಟಿ ಸುರತ್ಕಲ್, ಮನೋಹರ ಶೆಟ್ಟಿ ಸೂರಿಂಜೆ, ಜಗಧೀಶ ಶೆಟ್ಟಿ ಪೆರ್ಮುದೆ, ಶ್ರೀಕಾಂತ್ ಕಾಮತ್ ಭಾಗವಹಿಸಲಿದ್ದಾರೆ.ಪುತ್ತಿಗೆ ರಘುರಾಮ ಹೊಳ್ಳರಿಗೆ ಗೌರವಾರ್ಪಣೆ ನಡೆಯಲಿದೆ. ಸಮಾರಂಭದಲ್ಲಿ ಶಂಕರ ನಾರಾಯಣ ಮೈರ್ಪಾಡಿ, ಶ್ರೀಧರ ಶೆಟ್ಟಿ ಕೊಕ್ಕಾರುಗುತ್ತು ಪೆರ್ಮುದೆ, ಜಗಧೀಶ್ ಆಚಾರ್ಯ ಜೋಕಟ್ಟೆ, ಕೃಷ್ಣಪ್ಪ ಪೂಜಾರಿ ಬೊಟ್ಟಿಕೆರೆ, ಜರ್ನಾಧನ ಡಿ ಶೆಟ್ಟಿಗಾರ್ ಅವರನ್ನು ಸನ್ಮಾನಿಸಲಾಗುವುದು.ಸಂಜೆ 6.30 ರಿಂದ ಪಾವಂಜೆ ಮೇಳದವರಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ನಡೆಯಲಿದೆ.ಮಹಿಳಾ ಘಟಕದ ವಾರ್ಷಿಕೋತ್ಸವಅದೇ ದಿನ ಸಂಜೆ 4 ಗಂಟೆಗೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕೇಂದ್ರೀಯ ಮಹಿಳಾ ಘಟಕದ 8 ನೇ ವಾರ್ಷಿಕೋತ್ಸವ ನಡೆಯಲಿದೆ.ಶಕುಂತಳಾ ರಮಾನಂದ ಭಟ್, ಚಂದ್ರಕಲಾ ಬಾಲಕೃಷ್ಣ ಶೆಟ್ಟಿ, ಭಾರತಿ ಗಂಗಾಧರ್, ಮಮತಾ ಹೆಗ್ಡೆ, ಸತ್ಯವತಿ ಡಿ ಶೆಟ್ಟಿ ದೀಪ ಪ್ರಜ್ವಲನೆ ಮಾಡಲಿದ್ದಾರೆ.ಸಂಜೆ 4.15 ರಿಂದ ಮಹಿಳಾ ಕಲಾವಿದೆಯರಿಂದ ದಶಾವತಾರ ಯಕ್ಷರೂಪಕ ನಡೆಯಲಿದೆ.ಸಂಜೆ 5 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರತಿಭಾ ಎಲ್ ಸಾಮಗ ವಹಿಸಲಿದ್ದಾರೆ. ಪಟ್ಲ ಸತೀಶ್ ಶೆಟ್ಟಿ, ಪೂರ್ಣಿಮಾ ಯತೀಶ್ ರೈ, ಆರತಿ ಆಳ್ವ ಉಪಸ್ಥಿತಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅಶೋಕ್ ಶೆಟ್ಟಿ ತಡಂಬೈಲ್, ಪದ್ಮಪ್ರಸಾದ್ ಜೈನ್ , ದೀಪಕ್ ಶೆಟ್ಟಿ ಲಿಂಗಮಾರು ಗುತ್ತು, ವಿದ್ಯಾ ರಾಕೇಶ್, ಪೂರ್ಣಿಮಾ ಪ್ರಭಾಕರ್ ರಾವ್ ಪೇಜಾವರ, ಸುಜಾತ ಧನಂಜಯ ಶೆಟ್ಟಿ ಹೊಸಬೆಟ್ಟು, ಚೈತ್ರಾ ಶೆಟ್ಟಿ ಭಾಹವಹಿಸಲಿದ್ದಾರೆ.ಸಮಾರಂಭದಲ್ಲಿ ಜಯಲಕ್ಷ್ಮೀ ಕಾರಂತ್ ಮಂಗಲ್ಪಾಡಿ, ಜ್ಯೋತಿ ಸುನೀಲ್ ಶೆಟ್ಟಿ ಕಾರ್ಕಳ ಇವರನ್ನು ಸನ್ಮಾನಿಸಲಾಗುವುದು. ಚೈತ್ರಾ ಎಚ್ ರಾವ್, ವೈಷ್ಣವಿ ಸಾತ್ವಿಕ್ ರಾವ್, ಮೈತ್ರಿ ಭಟ್ ಮವ್ವಾರು ಇವರಿಗೆ ಯಕ್ಷಧ್ರುವ ಪುರಸ್ಕಾರ ನೀಡಿ ಗೌರವಿಸಲಾಗುತ್ತದೆ.

ಕರಾವಳಿ ಸುದ್ದಿ

45ನೇ ರಾಷ್ಟ್ರೀಯ ಹಿರಿಯರ ಕ್ರೀಡಾಕೂಟದಲ್ಲಿ ಶ್ರೀಮತಿ ಗ್ಲಾಡಿಸ್ ಪಾಯ್ಸ್ ಅವರಿಗೆ ಪ್ರಶಸ್ತಿ

ಮಾರ್ಚ್ 4ರಿಂದ 9ರವರೆಗೆ ಬೆಂಗಳೂರಿನ ಕಂಠೀರವ ಹಾಗೂ ಸಾಯಿ ಕ್ರೀಡಾಂಗಣದಲ್ಲಿ ನಡೆದ 45ನೇ ರಾಷ್ಟ್ರೀಯ ಹಿರಿಯರ ಕ್ರೀಡಾಕೂಟದಲ್ಲಿ ಬಂಟ್ವಾಳ ನಿವಾಸಿ ಶ್ರೀಮತಿ ಗ್ಲಾಡಿಸ್ ಪಾಯ್ಸ್ ರವರು 70ರ ವಯೋಮಾನದ ವಿಭಾಗದಲ್ಲಿ 400 ಮೀ. ಓಟ ಮತ್ತು ತ್ರಿವಿಧ ಜಿಗಿತದಲ್ಲಿ ಪ್ರಥಮ ಸ್ಥಾನ ಹಾಗೂ 800 ಮೀ. ಓಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ

ಕರಾವಳಿ ಸುದ್ದಿ

ಬಂಟರ ಅಭಿವೃದ್ಧಿ ನಿಗಮ ಸ್ಥಾಪಿಸಲು ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸರಕಾರಕ್ಕೆ ಒತ್ತಾಯ

ಬಂಟರ ಅಭಿವೃದ್ಧಿ ನಿಗಮ ಸ್ಥಾಪಿಸಲು ಜಾಗತಿಕ ಬಂಟರ ಸಂಘಗಳ ಒಕ್ಕೂಟವು ಸರಕಾರವನ್ನು ಒತ್ತಾಯಿಸಿದೆ.ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಲ್ಲಿ ಇರುವ ಬಂಟರ ಸಮುದಾಯವು ಒಟ್ಟು ಜನಸಂಖ್ಯೆ ಶೇಕಡಾ 60 ಮಂದಿ ಬಡತನ ರೇಖೆಯಲ್ಲಿದ್ದು 30 ಶೇಕಡಾ ಮಧ್ಯಮ ವರ್ಗದಲ್ಲಿದ್ದು ಕೇವಲ 10 ಶೇಕಡಾ ಜನರು ಸಿರಿವಂತರಾಗಿದ್ದಾರೆ. ಈ ಬಂಟ ಸಮುದಾಯ ಕಡಿಮೆ ಜನರು ಇರುವ ಒಂದು ವಿಶಿಷ್ಟ ಜಾತಿಯಾಗಿದ್ದು ತೀರ ಕೆಳಸ್ತರದ ಮಂದಿಯನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಉದ್ದೇಶ ನಮ್ಮದಾಗಿದೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ತಿಳಿಸಿದ್ದಾರೆಬಡ ಜನರನ್ನು ಮುಖ್ಯ ವಾಹಿನಿಗೆ ಕರೆತರಲು ಸರಕಾರದ ಸಂಪೂರ್ಣ ಸಹಾಯ ಇದ್ದಲ್ಲಿ ಮಾತ್ರ ಸಾಧ್ಯ. ಅದಕ್ಕಾಗಿ ಕರ್ನಾಟಕ ಘನ ಸರಕಾರ ಬಂಟರ ಅಭಿವೃದ್ಧಿ ನಿಗಮ ಸ್ಥಾಪಿಸಿ ಮುಂದಿನ ದಿನಗಳಲ್ಲಿ ಬಡ ಬಂಟರ ಉನ್ನತೀಕರಣ ಮಾಡಬೇಕೆಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಹಕ್ಕೊತ್ತಾಯ ಮಾಡುತ್ತಿದೆ ಎಂದು ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮತ್ತು ಪದಾಧಿಕಾರಿಗಳು ಜಾಗತಿಕ ಬಂಟರ ಸಂಘಗಳ ಒಕ್ಕೂಟ ( ರಿ )ಮಂಗಳೂರು ತಿಳಿಸಿದೆ.

ಕರಾವಳಿ ಸುದ್ದಿ

ಬಹು ಭಾಷೆಗಳಲ್ಲಿ ಭಾರತೀಯ ಸಂಸ್ಕೃತಿ ಅಡಕಹಿರಿಯ ಸಾಹಿತಿ ಡಾ.ಕೆ.ಚಿನ್ನಪ್ಪ ಗೌಡ ಅಭಿಪ್ರಾಯ

ಮಂಗಳೂರು : ದೇಶದ ಬಹು ಭಾಷೆಗಳಲ್ಲಿ ನಮ್ಮ ಸಂಸ್ಕೃತಿ ಅಡಕವಾಗಿದ್ದು, ಭಾರತೀಯ ಸಾಹಿತ್ಯದ ವ್ಯಾಪ್ತಿ, ವೈವಿಧ್ಯತೆ ಅಗಾಧವಾಗಿದೆ. ಸ್ವತಂತ್ರ ಕೃತಿ ರಚನೆಯ ಜತೆಗೆ ,ಇತರ ಭಾಷೆಯ ಪ್ರಮುಖ ಕೃತಿಗಳನ್ನು ಅನುವಾದ ಮಾಡುವ ಮೂಲಕ ನಮ್ಮ ಸಾಹಿತ್ಯಿಕ ಪರಂಪರೆಯನ್ನು ಎಲ್ಲೆಡೆ ಪಸರಿಸಲು ಸಾಹಿತಿಗಳು ಪ್ರಯತ್ನಿಸಬೇಕು ಎಂದು ವಿಶ್ರಾಂತ ಕುಲಪತಿ, ಹಿರಿಯ ಸಾಹಿತಿ ಡಾ.ಕೆ.ಚಿನ್ನಪ್ಪ ಗೌಡ ಹೇಳಿದರು.ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಆಯೋಜಿಸಿದ ಹಿರಿಯ ಸಾಹಿತಿಗಳ ಸಂಪರ್ಕ ಅಭಿಯಾನದಡಿ ಗುರುವಾರ ಸ್ವಗೃಹದಲ್ಲಿ ಗೌರವ ಸ್ವೀಕರಿಸಿ ಮಾತನಾಡಿದ ಅವರು ಸಾಹಿತ್ಯ ಕ್ಷೇತ್ರದಲ್ಲಿ ಅನುವಾದ ಕೃತಿಗಳೂ ಸ್ವತಂತ್ರ ಕೃತಿಯಷ್ಟೇ ಮಹತ್ವ ಪಡೆದಿವೆ ಎಂದರು.ಸಾಹಿತ್ಯ ಸಮ್ಮೇಳನಗಳಲ್ಲಿ ಹಿಂದಿನ ಸಾಹಿತ್ಯ, ಸಮಕಾಲೀನ ಸಾಹಿತ್ಯದ ಬಗ್ಗೆ ಚಿಂತನ ಮಂಥನ ನಡೆಯಬೇಕು. ಆದರೆ ಇತ್ತೀಚಿನ ಸಾಹಿತ್ಯ ಸಮ್ಮೇಳನಗಳಲ್ಲಿ ರಾಜಕೀಯವೂ ಸೇರಿದಂತೆ ಇತರ ವಿಷಯಗಳ ಬಗ್ಗೆಯೇ ಹೆಚ್ಚು ಚರ್ಚೆ ನಡೆಯುತ್ತಿದೆ. ಇದು ಒಳ್ಳೆಯ ಬೆಳವಣಿಗೆಯಲ್ಲ. ಸಾಹಿತ್ಯ ಸಮ್ಮೇಳನ ಸಾಹಿತ್ಯ ಕ್ಷೇತ್ರದ ಬೆಳವಣಿಗೆಗೆ ಪೂರಕವಾಗಿರಬೇಕು. ಶಿಕ್ಷಣ ವ್ಯವಸ್ಥೆ ಸಾಹಿತ್ಯಕ್ಕೆ ಹೆಚ್ಚಿನ ಶಕ್ತಿ ನೀಡಬಲ್ಲದು. ವಿಶ್ವ ವಿದ್ಯಾನಿಲಯಗಳಲ್ಲಿ ಸಾಹಿತ್ಯದ ಚಟುವಟಿಕೆ ನಿರಂತರವಾಗಿ ನಡೆಯಬೇಕು ಎಂದು ಡಾ.ಕೆ.ಚಿನ್ನಪ್ಪ ಗೌಡ ಅಭಿಪ್ರಾಯ ಪಟ್ಟರು.ಅಭಾಸಾಪ ದ.ಕ.ಜಿಲ್ಲಾ ಘಟಕದ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಸಮಿತಿ ಸದಸ್ಯ ಡಾ.ಸುರೇಶ್ ನೆಗಳಗುಳಿ , ಸಾಹಿತ್ಯ ಕೂಟದ ಮುಖ್ಯಸ್ಥೆ ಗೀತಾ ಲಕ್ಷ್ಮೀಶ್,ಉಳ್ಳಾಲ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವಸಂತ ಕೊಣಾಜೆ ಉಪಸ್ಥಿತರಿದ್ದರು. ಅಭಾಸಾಪ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಮಂಗಲಾ ರತ್ನಾಕರ್ ಸ್ವಾಗತಿಸಿ, ಖಜಾಂಜಿ ಭಾಸ್ಕರ ರೈ ಕಟ್ಟ ವಂದಿಸಿದರು.

ಕರಾವಳಿ ಸುದ್ದಿ

ಸೇಂಟ್ ಜೋಸೆಫ್ ವಿಶ್ವವಿದ್ಯಾಲಯಮಾಹಿತಿ ತಂತ್ರಜ್ಞಾನದಲ್ಲಿನ ಪ್ರಸ್ತುತ ಪ್ರವೃತ್ತಿಗಳ ಕುರಿತು ಅಂತರರಾಷ್ಟ್ರೀಯ ಸಮ್ಮೇಳನ

ಮಾರ್ಚ್ 10 ಮತ್ತು 11, 2025ಸೆಂಟ್ ಜೋಸೆಫ್ ವಿಶ್ವವಿದ್ಯಾಲಯದ ಮಾಹಿತಿ ತಂತ್ರಜ್ಞಾನ ಸಂಸ್ಥೆ, “ಅಂತಾರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಪ್ರಗತಿ ಸಮ್ಮೇಳನವನ್ನು ಯಶಸ್ವಿಯಾಗಿ ಆಯೋಜಿಸಿತು. ಈ ಎರಡು ದಿನಗಳ ಸಮ್ಮೇಳನದಲ್ಲಿ ಸಂಶೋಧಕರು, ಶಿಕ್ಷಣ ತಜ್ಞರು ಮತ್ತು ಉದ್ಯಮ ವೃತ್ತಿಪರರಾದಿಯಾಗಿ 150 ಜನರು ಭಾಗವಹಿಸಿ ಹೊಸ ತಂತ್ರಜ್ಞಾನ ವಿಷಯಗಳನ್ನು ಚರ್ಚಿಸಿದರು.ಸಮ್ಮೇಳನದ ಪ್ರಾರಂಭದಲ್ಲಿ ಪ್ರಾರ್ಥನೆ, ವಿಶ್ವವಿದ್ಯಾಲಯ ಗೀತ ಮತ್ತು ದೀಪ ಬೆಳಗಿಸಿ ಸಮಾರಂಭವನ್ನು ಆರಂಭಿಸಲಾಯಿತು. ಡಾ. ಆನಿ ಸಿರಿಯನ್ ಅವರು ಉಪನ್ಯಾಸ ನೀಡಿ ಅಕಾಡೆಮಿಕ್ ಸಹಕಾರ ಮತ್ತು ಜ್ಞಾನ ವಿನಿಮಯದ ಮಹತ್ವವನ್ನು ವಿವರಿಸಿದರು. ಹಂಗಾಮಿ ಉಪಕುಲಪತಿ ಡಾ. ರೊನಾಲ್ಡ್ ಮಸ್ಕರೇನ್ಹಸ್, ಕಂಪ್ಯೂಟರ್ ವಿಜ್ಞಾನ ಮತ್ತು ರಸಾಯನಶಾಸ್ತ್ರದ ನಡುವಿನ ಬೆಳೆಯುತ್ತಿರುವ ಸಮನ್ವಯತೆಯ ಬಗ್ಗೆ ತಿಳಿಸಿದರು. ಪ್ರೊ-ಉಪಕುಲಪತಿ ಶ್ರೀಮತಿ ರೆಜಿನಾ ಮಥಾಯಸ್, ಶೈಕ್ಷಣಿಕ ಕ್ಷೇತ್ರದಲ್ಲಿ ಸಂಶೋಧನೆ ಆಧಾರಿತ ಚರ್ಚೆಗಳ ಮಹತ್ವವನ್ನು ತಿಳಿಸಿದರು.ಮುಖ್ಯ ಅತಿಥಿ ಶ್ರೀ ತಾಂಡವ ಪೊಪುರಿ, ಡೆಲ್ ಟೆಕ್ನೋಲಜೀಸ್, ಅವರು ಕೃತಕ ಬುದ್ಧಿಮತ್ತೆ ಮತ್ತು ಯಾಂತ್ರಿಕ ಮೆಶಿನ್ ಲರ್ನಿಂಗ್ ಕುರಿತು ಉಪನ್ಯಾಸ ನೀಡಿದರು. ಅಂತರರಾಷ್ಟ್ರೀಯ ಸಮ್ಮೇಳನದ ಉದ್ಘಾಟನಾ ಅಧಿವೇಶನವನ್ನು ಡಾ.ಬಿ.ಜಿ. ಪ್ರಶಾಂತಿ ಯಶಸ್ವಿಯಾಗಿ ಮುಕ್ತಾಯಗೊಳಿಸಿದರು. ಮೊದಲ ದಿನ “ಆರೋಗ್ಯ ಸೇವೆಯಲ್ಲಿ ಎಐ ಮತ್ತು ಇತ್ತೀಚಿನ ಪ್ರಗತಿಗಳು” ಕುರಿತು ಮುಖ್ಯ ಭಾಷಣ ಹಾಗೂ ಸೈಬರ್ ಸಿಸ್ಟಮ್ ಸಂಬಂಧಿತ ತಂತ್ರಜ್ಞಾನಗಳ ಕುರಿತು ತಾಂತ್ರಿಕ ಅಧಿವೇಶನ ನಡೆಯಿತು. ಡಾ. ಕೆ. ಗೋಪಾಲಕೃಷ್ಣನ್ ನೇತೃತ್ವದಲ್ಲಿ ಸೈಬರ್ ಭದ್ರತೆಯ ಮುಂದಿನ ಪೀಳಿಗೆಯ ಪ್ರವೃತ್ತಿಗಳ ಕುರಿತು ತಾಂತ್ರಿಕ ಅಧಿವೇಶನ, ನಂತರ ಎಐ ಅಪ್ಲಿಕೇಶನ್‌ಗಳು, ಸೈಬರ್ ಭದ್ರತೆ ಮತ್ತು ಡಿಜಿಟಲ್ ರೂಪಾಂತರದಲ್ಲಿನ ಪ್ರಗತಿಗಳ ಕುರಿತು ಸಂಶೋಧನಾ ಪ್ರಸ್ತುತಿಗಳು ನಡೆದವು.ಎರಡನೇ ದಿನದಂದು, ಮಂಗಳೂರಿನ ಸೇಂಟ್ ಅಲೋಶಿಯಸ್ ವಿಶ್ವವಿದ್ಯಾಲಯದ ಡಾ. ರೂಬನ್ ಅವರು “ಆರೋಗ್ಯ ರಕ್ಷಣೆ ತಂತ್ರಜ್ಞಾನದಲ್ಲಿನ ಪ್ರಗತಿಗಳು – ಎಐ ಸಂಶೋಧನೆ ಮತ್ತು ವಾಸ್ತವದ ಒಳನೋಟಗಳು” ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು.ಸಮ್ಮೇಳನವು ಶೈಕ್ಷಣಿಕ ಮತ್ತು ಉದ್ಯಮದ ಪ್ರಮುಖ ಭಾಷಣಕಾರರನ್ನು ಒಳಗೊಂಡ ಸಮಾರೋಪ ಅಧಿವೇಶನದೊಂದಿಗೆ ಮುಕ್ತಾಯಗೊಂಡಿತು. ಮಾಹಿತಿ ತಂತ್ರಜ್ಞಾನ ಶಾಲೆಯ ಡೀನ್ ಫಾದರ್ ಡೆನ್ಜಿಲ್ ಲೋಬೊ ಅವರು ಸಮ್ಮೇಳನದ ಶೈಕ್ಷಣಿಕ ಮತ್ತು ಕೈಗಾರಿಕಾ ಮಹತ್ವದ ಬಗ್ಗೆ ಮಾತನಾಡಿದರು. ಮುಖ್ಯ ಅತಿಥಿ ಡಾ. ಶ್ರೀನಿವಾಸ್ ಕಥಾರ್ಗುಪ್ಪೆ ಅವರು ಐಟಿ ಭವಿಷ್ಯವನ್ನು ರೂಪಿಸುವಲ್ಲಿ ಸಂಶೋಧನೆಯ ಪಾತ್ರವನ್ನು ತಿಳಿಸಿದರು. ಅಮೆರಿಕದ ಸಾಂತಾ ಕ್ಲಾರಾದ ಎಎಮ್’ಡಿ ಯಲ್ಲಿ ಹಿರಿಯ ಉತ್ಪಾದನಾ ಕಾರ್ಯಾಚರಣೆಯ ಉದ್ಯೋಗಿಯಾದ ಶ್ರೀ ಟೆರೆನ್ಸ್ ಆಂಡ್ರೇಡ್ ಅವರು ಉತ್ಪಾದನೆ ಮತ್ತು ಉತ್ಪಾದನೆಯಲ್ಲಿ ಉದಯೋನ್ಮುಖ ತಂತ್ರಜ್ಞಾನಗಳ ಕುರಿತು ಒಳನೋಟಗಳನ್ನು ನೀಡಿದರು.

ಕರಾವಳಿ ಸುದ್ದಿ

ಪತ್ರಿಕಾಗೋಷ್ಠಿ

ಕಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ದಕ್ಷಿಣ ವಲಯದ ಮುಂದಾಳತ್ವದಲ್ಲಿ ಮಂಗಳೂರು ದಕ್ಷಿಣ ವಲಯದ ಎಲ್ಲಾ ಚರ್ಚಿನ ಧರ್ಮಗುರುಗಳು, ಧರ್ಮಭಗಿನಿಯರು, ಪಾಲನಾ ಮಂಡಳಿಗಳು, ವಿವಿಧ ಸಂಘ ಸಂಸ್ಥೆಗಳು, ಕಥೊಲಿಕ್ ವಿದ್ಯಾಸಂಸ್ಥೆಗಳು ಹಾಗೂ 21 ಆಯೋಗದ ಸಹಭಾಗಿತ್ವದಲ್ಲಿ ತಪಸ್ಸು ಕಾಲದ ಆಧ್ಯಾತ್ಮಿಕ ಪ್ರೇರಣೆಯಾಗಿ ಸಂತ ಜೋಸೆಫ್ ವಾಜ್ ಪುಣ್ಯ ಕ್ಷೇತ್ರ, ಮುಡಿಪು ಇದರ ಬೆಳ್ಳಿ ಹಬ್ಬದ ಪ್ರಯುಕ್ತ ಮಹಾನ್ ಕಾಲ್ನಡಿಗೆ ಜಾಥ “ನಮ್ಮ ನಡಿಗೆ ಮುಡಿಪು ಪುಣ್ಯ ಕ್ಷೇತ್ರದ ಕಡೆಗೆ” ಎಂಬ ಜಾಥವು ಕೋಟೆಕಾರು ಗ್ರಾಮದ ದಯಾಮಾತಾ ದೇವಾಲಯದ ಪಾನೀರ್‌ನಲ್ಲಿ ವಿಶ್ರಾಂತ ಬಿಷಪ್ ಅತೀ ವಂದನೀಯ ಡಾ। ಅಲೋಶಿಯಸ್ ಪೌಲ್ ಡಿಸೋಜಾ ಅವರಿಂದ ಆಶೀರ್ವಚನ ಹಾಗೂ ವಂದನೀಯ ಫಾ। ವಿಕ್ಟರ್ ಡಿಮೆಲ್ಲೊರವರು ಉದ್ಘಾಟಿಸಲಿರುವರು. ಸಮಾರೋಪ ಕಾರ್ಯಕ್ರಮದಲ್ಲಿ ಅತೀ ವಂದನೀಯ ಫಾ| ಆಸ್ಸಿಸಿ ರೆಬೆಲ್ಲೊರವರು ಮತ್ತು ಫಾ| ಸಂತೋಷ್ ಮಿನೇಜಸ್‘ರವರು ಪ್ರಾರ್ಥನೆಯನ್ನು ನೆರವೇರಿಸುವರು. ಅತೀ ವಂದನೀಯ ಫಾ। ಸಿಪ್ರಿಯನ್ ಪಿಂಟೊರವರು ಪರಮಪ್ರಸಾದದ ಆಶೀರ್ವಚನವನ್ನು ನೆರವೇರಿಸುವರು. ಈ ಕಾರ್ಯಕ್ರಮವು ಆಧ್ಯಾತ್ಮಿಕ ಕಾರ್ಯಕ್ರಮವಾಗಿದ್ದು ಯೇಸುಕ್ರಿಸ್ತರು ಹುಟ್ಟಿ 2025 ವರ್ಷಗಳು(ಮಹೋತ್ಸವ) ತುಂಬಿದ ಸಂದರ್ಭದಲ್ಲಿ ಹಾಗೂ ತಪಸ್ಸು ಕಾಲದ ಪರಿವರ್ತನಾ ಜಾಥಾವಾಗಿರುತ್ತದೆ. ಈ ಜಾಥಕ್ಕೆ ಸುಮಾರು 5000 ಜನರು ಸೇರಲಿದ್ದಾರೆ. ಈ ಜಾಥವು ಪಾನೀರ್ ದಯಾಮಾತಾ ದೇವಾಲಯದಿಂದ ಹೊರಟು, ದೇರಳಕಟ್ಟೆಯಿಂದ ಸಾಗಿ ನಾಟೇಕಲ್ ಮಾರ್ಗವಾಗಿ ಮುನ್ನಡೆದು ಮುಡಿಪು ಸಂತ ಜೋಸೆಫ್ ವಾಜ್’ರವರ ಪುಣ್ಯಕ್ಷೇತ್ರದಲ್ಲಿ ಕೊನೆಗೊಳ್ಳುವುದು.ಉಪಸ್ಥಿತಿ: ಈ ಪತ್ರಿಕಾಗೋಷ್ಠಿಯಲ್ಲಿ ಮಂಗಳೂರು ದಕ್ಷಿಣ ವಲಯದ ಕಥೊಲಿಕ್ ಸಭಾದ ಅಧ್ಯಕ್ಷರಾದ ಶ್ರೀ ಡೊಲ್ಫಿ ಡಿಸೋಜಾ, ಸಂಚಾಲಕರಾದ ಶ್ರೀ ಆಲ್ವಿನ್ ಡಿಸೋಜಾ ಪಾನೀರ್, ಘಟಕದ ಅಧ್ಯಕ್ಷರಾದ ಶ್ರೀ ರಜತ್ ವೇಗಸ್, ಸಂತ ಜೋಸೆಫ್ ವಾಜ್ ಪುಣ್ಯಕ್ಷೇತ್ರದ ಬೆಳ್ಳಿ ಹಬ್ಬದ ಸಂಚಾಲಕರಾದ ಶ್ರೀ ರೋಶನ್ ಡಿಸೋಜಾ, ಸಂತ ಜೋಸೆಫ್ ವಾಜ್ ಪುಣ್ಯಕ್ಷೇತ್ರದ ಉಪಾಧ್ಯಕ್ಷರಾದ ನವೀನ್ ಡಿಸೋಜಾ ಮತ್ತು ಕಾರ್ಯದರ್ಶಿಯಾದ ಸಂತೋಶ್ ಡಿಸೋಜಾ ಹಾಗೂ ಕಥೊಲಿಕ್ ಸಭಾ ಮಂಗುರ್ ಪ್ರದೇಶ್(ರಿ) ದಕ್ಷಿಣ ವಲಯದ ಉಪಾಧ್ಯಕ್ಷರಾದ ಅರುಣ್‌ ಡಿಸೋಜಾ ಇವರು ಉಪಸ್ಥಿತಲಿರುವರು.

Scroll to Top