ಪ್ರಾದೇಶಿಕ ವಾರ್ತೆಗಳು

ಪ್ರಾದೇಶಿಕ ವಾರ್ತೆಗಳು

ಸಮಾಜಕ್ಕೆ ಕೊಡುಗೆ ನೀಡುವ ಉನ್ನತ ಗುರಿಯೊಂದಿಗೆ ಮುನ್ನಡೆಯಿರಿ-ಮುಲ್ಲೈ ಮುಗಿಲನ್. ಪತ್ರಕರ್ತರ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ.

ಮಂಗಳೂರು,ಆ.25; ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಸಮಾಜಕ್ಕೆ ಕೊಡುಗೆ ನೀಡುವ ಉನ್ನತ ಗುರಿಯೊಂದಿಗೆ ಮುನ್ನಡೆಯಿರಿ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಯುವ ವಿದ್ಯಾರ್ಥಿ ಗಳಿಗೆ ಕರೆ ನೀಡಿದರು.ಅವರು ಇಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾಭವನದಲ್ಲಿ ರವಿವಾರ 2023-24 ರ ಸಾಲಿನಲ್ಲಿ ಪಿ ಯು ಸಿ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ. 90 ಕ್ಕೂ ಹೆಚ್ಚು ಅಂಕ ಗಳಿಸಿದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ನೆರವೇರಿಸಿ ಮಾತನಾಡುತ್ತಿದ್ದರು.ಶಿಕ್ಷಣ ನಮ್ಮನ್ನು ಸಮಾಜ ಮುಖಿಯಾಗಿ ತೊಡಗಿಸಿಕೊಳ್ಳುವಂತೆ ಮಾಡಬೇಕು. ಸಮಾಜದ ಸರಿ ತಪ್ಪುಗಳನ್ನು ಗುರಿತಿಸಲು ಸಹಾಯ ಮಾಡಬೇಕು.‌ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಉನ್ನತ ಗುರಿಯೊಂದಿಗೆ ನಿರಂತರ ಪ್ರಯತ್ನ ಪಡಬೇಕು ಆ ಗುರಿ ಬದುಕನ್ನು ಅರ್ಥ ಪೂರ್ಣ ಗೊಳಿಸು ವಂತಿರಬೇಕು.ಪತ್ರ ಕರ್ತರು ಪ್ರಾಕೃತಿಕ ವಿಕೋಪಗಳಾದ,ಜನರ ಸಮಸ್ಯೆ ಗಳಿಗೆ ಸ್ಪಂದಿಸುತ್ತಿರುವ ರೀತಿ ಅವರ ಘನತೆಯನ್ನು ಹೆಚ್ಚಿಸಿದೆ ಅದಕ್ಕಾಗಿ ಅವರಿಗೆ ತಾನು ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ, ಶಿರೂರು ದುರಂತದ ಸಂದರ್ಭ ಮಾನವೀಯ ಕೆಲಸ ಮಾಡಿರುವ ಪತ್ರಕರ್ತರ ಕಾರ್ಯ ರಾಜ್ಯದ ಎಲ್ಲ ಪತ್ರಕರ್ತರಿಗೆ ಹೆಮ್ಮೆ ತಂದಿದೆ. ಅದೇ ರೀತಿ ಬೆಂಗಳೂರಿನ ಅಂಡರ್‌ ಪಾಸ್ ನಲ್ಲಿ ಕಾರು ನೀರಿಗೆ ಸಿಕ್ಕಿದ ಸಂದರ್ಭದಲ್ಲಿ ಜೀವ ಉಳಿಸಿದ್ದೂ ಕೂಡಾ ಇಬ್ಬರು ಪತ್ರಕರ್ತರು . ಇವರಿಗೆ ಸನ್ಮಾನ ಮಾಡಿರುವುದು ನನಗೆ ಖುಷಿ ಕೊಟ್ಟಿದೆ. ಪತ್ರಕರ್ತರು ಮಾನವೀಯ ಕಾರ್ಯ ಮಾಡಿದಾಗ ಬೆನ್ನುತಟ್ಟಬೇಕಾದ್ದು ನಮ್ಮೆಲ್ಲರ ಕರ್ತವ್ಯ ಎಂದರು. ಮನೆಮನೆಗೆ ಬೆಳಗ್ಗೆಪತ್ರಿಕೆ ವಿತರಿಸುವ ಪತ್ರಿಕಾ ವಿತರಕರ ಕಾಯಕಕ್ಕೆ ಸರಿಸಾಟಿ ಯಾವುದೂ ಇಲ್ಲ.ಇಂತಹ ಕೆಲಸವನ್ನು ನಿರಂತರ 62 ವರ್ಷಗಳ ಕಾಲ ಮಾಡಿರುವ ರಮೇಶ್ ಅವರ ಕಾರ್ಯಕ್ಕೆ ನಾವು ಋಣಿಯಾಗಿರಬೇಕು.ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕಳೆದ ಮೂರು ವರ್ಷಗಳಿಂದ ಪತ್ರಕರ್ತರ ಮಕ್ಕಳಿಗೆ ರಾಜ್ಯಮಟ್ಟ,‌ ಜಿಲ್ಲಾ ಮಟ್ಟ, ತಾಲೂಕು ಮಟ್ಟದಲ್ಲಿ ಸನ್ಮಾನ ಮಾಡುತ್ತಿದೆ. ಜೀವದ ಹಂಗು ತೊರೆದು ಕೆಲಸ ಮಾಡುತ್ತಿರುವ ಪತ್ರಕರ್ತರಿಗೆ ಏನಾದರೂ ಅನಾಹುತ ಆದರೆ ಅವರ ಕುಟುಂಬಕ್ಕೆ ಸರಕಾರದಿಂದ 5 ಲಕ್ಷ ಪರಿಹಾರ ದೊರಕಿಸಿಕೊಡುವ ಕೆಲಸ ಮಾಡುತ್ತಾ ಬಂದಿದೆ ಎಂದರು.ಇದೇ ಸಂದರ್ಭದಲ್ಲಿ 64 ವರ್ಷಗಳಿಂದ ಪತ್ರಿಕೆ ವಿತರಣೆ ಮಾಡುತ್ತಿರುವ 82ರ ಹರೆಯದ ರಮೇಶ್, ವಿನೂತನ ರೀತಿಯಲ್ಲಿ ಮತದಾನ ಹಾಗೂ ಡೆಂಗ್ಯು ಜಾಗೃತಿ ಮೂಡಿಸಿದ ಸನ್ನಿಧಿ ಕಶೆಕೋಡಿ, ಶಿರೂರು ಗುಡ್ಡ ಕುಸಿತ ಸಂದರ್ಭ ವೃದ್ಧೆಯ ಅಂತಿಮ ಸಂಸ್ಕಾರ ನೆರವೇರಿಸಿ ಮಾನವೀಯತೆಯನ್ನು ಸಾರಿದ ಪತ್ರಕರ್ತರನ್ನು ಸನ್ಮಾನಿಸಲಾಯಿತು.ಬಿಜೈ ಅಂಗನವಾಡಿಗೆ ಎರಡು ಫ್ಯಾನ್ ಗಳನ್ನು ಹಸ್ತಾಂತರಿಸಲಾಯಿತು.2023-24ನೆ ಸಾಲಿನ ಪಿಯುಸಿಯ ಪ್ರತಿಭಾ ವಂತ ವಿದ್ಯಾರ್ಥಿಗಳಾದ ತೇಜಸ್ ಕಿಣಿ,ಅವನಿ ಪಿ.ಬಂಗ,ದೀಪ್ತಿಭಟ್ ಹಾಗೂ ಎಸ್ ಎಸ್ ಎಲ್ ಸಿಯ ವಿದ್ಯಾರ್ಥಿ ಗಳಾದ ಬಿ.ಆರ್.ಶ್ರೀ ಹರಿ,ತಂಝಿಲ್ ರಹಮಾನ್,ಮನೀಶ್ ಎಸ್ ಶೆಟ್ಟಿ, ಮುಹಮ್ಮದ್ ಶೆಫಿಕ್,ಮಾಧವ ಕಾಮತ್,ದೇವಾಂಶು,ಸುಧನ್ವ ಕೆ.ಬಿ ಯವರನ್ನು ಪುರಸ್ಕರಿಸಲಾಯಿತು.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು.ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ, ಹಿರಿಯ ಪತ್ರಕರ್ತ ಆನಂದ್ ಶೆಟ್ಟಿ, ರಾಜ್ಯ ಪತ್ರಕರ್ತರ ಸಂಘದ ಕಾರ್ಯ ಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಇಬ್ರಾಹಿಂ ಅಡ್ಕಸ್ಥಳ,ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ,ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್ ,ಕಾರ್ಯಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ,ರಾಜೇಶ್ ಶೆಟ್ಟಿ,ನಿಶಾಂತ್ ಶೆಟ್ಟಿ ಮೊದಲಾದ ವರು ಉಪಸ್ಥಿತರಿದ್ದರು.ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇ ಶ್ವರ ವಂದಿಸಿದರು.ಹರೀಶ್ ಮೋಟುಕಾನ ಕಾರ್ಯಕ್ರಮ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ಜಾಗತಿಕ ಬಂಟರ ಸಂಘಗಳ ಒಕ್ಕೂಟ: ಆಡಳಿತ ಮಂಡಳಿಯ ಸಭೆಮುಲ್ಕಿಯಲ್ಲಿ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ಸುಸಜ್ಜಿತ ಸಭಾಂಗಣ

ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ) ಇದರ ಆಡಳಿತ ಮಂಡಳಿಯ ಸಭೆ ಬಂಟ್ಸ್ ಹಾಸ್ಟೇಲ್ ನ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ಜರಗಿತು.ಸಭೆಯ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ವಹಿಸಿದ್ದರು.ಮುಲ್ಕಿಯಲ್ಲಿ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣವಾಗುತ್ತಿರುವ ತೋನ್ಸೆ ಶ್ರೀಮತಿ ಶಶಿರೇಖಾ ಆನಂದ ಶೆಟ್ಟಿ ವೇದಿಕೆಯಲ್ಲಿ , ಕನ್ಯಾನ ಸದಾಶಿವ ಶೆಟ್ಟಿ ಹವಾನಿಯಂತ್ರಿತ ಸಭಾಂಗಣ ರಚನೆಯಾಗಲಿದೆ ಎಂದರು. ಸುಮಾರು 1,200 ಆಸನಗಳ ಸೌಲಭ್ಯ ಇರುವ ಸುಸಜ್ಜಿತ ಹವಾ ನಿಯಂತ್ರಿತ ಸಭಾಂಗಣವನ್ನು ನಿರ್ಮಿಸಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. 2025 ರ ಎಪ್ರಿಲ್ ತಿಂಗಳಲ್ಲಿ ಸಭಾಂಗಣವನ್ನು ನಿರ್ಮಾಣ ಮಾಡಿ ಸಮಾಜಕ್ಕೆ ಅರ್ಪಿಸಲಾಗುವುದು. ಇದಕ್ಕೆ ಸಮಾಜದ ಎಲ್ಲರ ಸಹಕಾರ ಅಗತ್ಯ ಎಂದು ಐಕಳ ಹರೀಶ್ ಶೆಟ್ಟಿ ತಿಳಿಸಿದರು.ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಒಕ್ಕೂಟದ ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿ ಅವರು ಮಾತನಾಡಿ ಜಾಗತಿಕ ಬಂಟರ ಸಂಘಗಳ ಒಕ್ಕೂಟಕ್ಕೆ ಒಂದು ಸುಸಜ್ಜಿತ ಹವಾ ನಿಯಂತ್ರಿತ ಸಭಾಂಗಣದ ಅಗತ್ಯ ಇದೆ. ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ದಾನಿಗಳ ನೆರವಿನಿಂದ ನಿರ್ಮಾಣ ಆಗುತ್ತಿರುವ ಹವಾ ನಿಯಂತ್ರಿತ ಸಭಾಂಗಣದ ಕಟ್ಟಡವು ವೇಗವನ್ನು ಪಡೆಯಬೇಕು. ಇದಕ್ಕೆ ನನ್ನ ಸಂಪೂರ್ಣ ಸಹಕಾರವೂ ಇದೆ. ಜೊತೆಗೆ ಎಲ್ಲಾ ದಾನಿಗಳು ಕೈಜೋಡಿಸಿ ಸಹಕಾರ ನೀಡಬೇಕು. ಸುಸಜ್ಜಿತ ಹವಾ ನಿಯಂತ್ರಿತ ಸಭಾಂಗಣದಿಂದ ಸಾಮಾನ್ಯ ಜನರಿಗೂ ಪ್ರಯೋಜನ ಆಗಬೇಕು. ಸಮಾಜವನ್ನು ಗಟ್ಟಿಗೊಳಿಸುವ ಜವಾಬ್ದಾರಿ ಇದೆ. ಇದು ನನ್ನ ಯೋಗ, ಭಾಗ್ಯ, ಸಭಾಂಗಣದ ನಿರ್ಮಾಣಕ್ಕೆ ಎಲ್ಲರ ಸಹಕಾರ ಬೇಕೆಂದರು.ಮುಖ್ಯ ಅತಿಥಿ ಸವಣೂರು ಸೀತಾರಾಮ ರೈ ಮಾತನಾಡಿ, ಕನ್ಯಾನ ಸದಾಶಿವ ಶೆಟ್ಟಿ, ಕೆ ಪ್ರಕಾಶ್ ಶೆಟ್ಟಿ, ಐಕಳ ಹರೀಶ್ ಶೆಟ್ಟಿ ಅವರ ಸಮಾಜ ಸೇವೆಯನ್ನು ಯಾವಾಗಲೂ ಸ್ಮರಿಸುವಂತದ್ದು, ಸಮಾಜದ ಬಗ್ಗೆ ಅವರಿಗೆ ಇರುವ ಕಾಳಜಿ ಮತ್ತು ಕಷ್ಟಗಳಿಗೆ ತಕ್ಷಣ ಸ್ಪಂದಿಸುವ ಇಂತಹ ನಾಯಕರನ್ನು ಪಡೆದ ಬಂಟ ಸಮಾಜ ಯಾವತ್ತೂ ಅವರಿಗೆ ಚಿರಋಣಿಯಾಗಿರುತ್ತದೆ ಎಂದರು.ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ ಪ್ರಸ್ತಾವಿಕವಾಗಿ ಮಾತನಾಡಿದರು.ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ, ಶಶಿಧರ ಶೆಟ್ಟಿ ಇನ್ನಂಜೆ, ಡಾ ಆರ್ ಕೆ ಶೆಟ್ಟಿ ಅತಿಥಿಯಾಗಿ ಭಾಗವಹಿಸಿದ್ದರು. ಕೋಶಾಧಿಕಾರಿ ಉಳ್ತೂರು ಮೋಹನ್ ದಾಸ್ ಶೆಟ್ಟಿ, ವೇಣು ಗೋಪಾಲ್ ಶೆಟ್ಟಿ ಥಾಣೆ, ರತ್ನಾ ಪಿ ಶೆಟ್ಟಿ ಮುಂಬೈ, ಅಜಿತ್ ಹೆಗ್ಡೆ ಪೂನಾ, ಗಿರೀಶ್ ಶೆಟ್ಟಿ ತೆಳ್ಳಾರು, ನಾಗೇಶ್ ಹೆಗ್ಡೆ ಉಡುಪಿ, ಹರಿ ಪ್ರಸಾದ್ ರೈ ಉಡುಪಿ, ಲೋಕೇಶ್ ಶೆಟ್ಟಿ ಬಂಟ್ವಾಳ, ಶ್ರೀಧರ ಶೆಟ್ಟಿ ಬ್ರಹ್ಮಾವರ, ಸುರೇಶ್ ರೈ ಮಕರ ಜ್ಯೋತಿ, ಸಿಎ ದಯಾಚರಣ್ ಶೆಟ್ಟಿ, ವಕೀಲ ಪೃಥ್ವಿರಾಜ ರೈ ಮೊದಲಾದವರು ಉಪಸ್ಥಿತರಿದ್ದರು.ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ ಸ್ವಾಗತಿಸಿದರು. ಚಂದ್ರಹಾಸ ಶೆಟ್ಟಿ ವಂದಿಸಿದರು. ಅನೂಪ್ ಶೆಟ್ಟಿ ಸುರತ್ಕಲ್ ಪ್ರಾರ್ಥನೆಗೈದರು.ಇದೇ ಸಂದರ್ಭದಲ್ಲಿ ನೀಟ್ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ರಕ್ಷಣ್ ಶೇಖ ಸಾಲೆತ್ತೂರು ಅವರನ್ನು ಒಕ್ಕೂಟದ ಅಧ್ಯಕ್ಷರು ಸನ್ಮಾನಿಸಿದರು.

ಪ್ರಾದೇಶಿಕ ವಾರ್ತೆಗಳು

ಶರತ್ ಶೆಟ್ಟಿಯವರ ವಿಜಯ ಕಲಾವಿದರಿಂದ ರಾಜೇಶ್ ಕೆಂಚನಕೆರೆಯವರ “ಪರಿಮಳ ಕ್ಯಾಟರಿಂಗ್” ರಂಗಭೂಮಿಯಲ್ಲಿ ಮನರಂಜನೆಯ ರಸದೌತಣ ನೀಡಲಿ : ಭೋಜರಾಜ್ ವಾಮಂಜೂರು

ಮೂಲ್ಕಿ : ಗ್ರಾಮೀಣ ಭಾಗದ ಕಲಾ ತಂಡವೊಂದು ಬೆಳ್ಳಿ ಹಬ್ಬದ ವರ್ಷವನ್ನು ಸಂಭ್ರಮದಿಂದ ಆಚರಿಸಿಕೊಂಡು ಬಂದಿರುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶರತ್ ಶೆಟ್ಟಿ ಅವರ ಸಾರಥ್ಯದ ವಿಜಯ ಕಲಾವಿದರಿಂದ ರಾಜೇಶ್ ಕೆಂಚನಕೆರೆಯವರ “ಪರಿಮಳ ಕ್ಯಾಟರಿಂಗ್” ತುಳು ನಾಟಕ ರಂಗಭೂಮಿಯಲ್ಲಿ ಮನರಂಜನೆಯ ರಸದೌತಣ ನೀಡಲಿ ಎಂದು ತುಳುನಾಡಿನ ನಾಟಕ ಹಾಗೂ ಸಿನಿಮಾ ಕಲಾವಿದ ನವರಸ ನಾಯಕ ಭೋಜರಾಜ್ ವಾಮಂಜೂರು ಹೇಳಿದರು.ಅವರು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ರಾಜೇಶ್ ಕೆಂಚನಕೆರೆ ಅವರ ಆರನೇ ನಾಟಕ ಕೃತಿಯಾಗಿ “ಪರಿಮಳ ಕ್ಯಾಟರಿಂಗ್” ತುಳು ನಾಟಕದ ಮುಹೂರ್ತದ ಕಾರ್ಯಕ್ರಮದಲ್ಲಿ ಶುಭ ಹಾರೈಸಿ ಮಾತನಾಡಿದರು.ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಅನುವಂಶಿಕ ಅರ್ಚಕ ಅನಂತ ಪದ್ಮನಾಭ ಆಸ್ರಣ್ಣ ಅವರು ಆಶೀರ್ವಚನ ನೀಡಿದರು.ಕಿನ್ನಿಗೋಳಿ ವಿಜಯ ಕಲಾವಿದರ ಅಧ್ಯಕ್ಷ ಶರತ್ ಶೆಟ್ಟಿ ಮಾತನಾಡಿ, ವಿಜಯಕುಮಾರ್ ಕೊಡಿಯಾಲ್ ಬೈಲ್ ನಿರ್ದೇಶನದ ನೂತನ ನಾಟಕ ಪರಿಮಳ ಕ್ಯಾಟರಿಂಗ್‌ನ್ನು ರಾಜೇಶ್ ಕೆಂಚನಕೆರೆಯವರು ನಾಟಕದ ಮೂಲಕ ಕ್ಯಾಟರಿಂಗ್‌ನವರ ಬದುಕು ಬವಣೆಯನ್ನು ಹಾಸ್ಯದೊಂದಿಗೆ ತೆರೆದಿಟ್ಟಿದ್ದಾರೆ. ಇದು ರಂಗಭೂಮಿಯಲ್ಲಿ ಹೊಸತನ ನೀಡಲಿದೆ. ನವರಾತ್ರಿಯ ಸಂದರ್ಭದಲ್ಲಿ ನಾಟಕ ಪ್ರದರ್ಶನವು ವಿಜಯ ಕಲಾವಿದರ ಮೂಲಕ ಪ್ರದರ್ಶನ ಕಾಣಲಿದೆ ಎಂದರು.ಅರ್ಚಕ ಸದಾನಂದ ಆಸ್ರಣ್ಣ, ಕಲಾಪೋಷಕರಾದ ಗಿರೀಶ್ ಶೆಟ್ಟಿ ಕಟೀಲು, ಸುರೇಶ್ ಸುವರ್ಣ ಐಕಳ, ದೇವಿಪ್ರಸಾದ್ ಶೆಟ್ಟಿ ಕೊಡೆತ್ತೂರು, ತಂಡದ ಗೌರವಾಧ್ಯಕ್ಷ ಕೆ. ಭುವನಾಭಿರಾಮ ಉಡುಪ, ನಾಟಕದ ಸಂಚಾಲಕ ಸಾಯಿನಾಥ ಶೆಟ್ಟಿ ಮುಂಡ್ಕೂರು, ಮಾರ್ಗದರ್ಶಕರಾದ ಸ್ವರಾಜ್ ಶೆಟ್ಟಿ ಮುಂಡ್ಕೂರು, ತಂಡದ ಕಾರ್ಯದರ್ಶಿ ಲಕ್ಷ್ಮಣ್ ಬಿ. ಬಿ. ಏಳಿಂಜೆ, ಗಾಯಕ ಪ್ರಕಾಶ್ ಆಚಾರ್ಯ, ಸಂಗೀತಗಾರ ದಿನೇಶ್ ಪಾಪು ಮುಂಡ್ಕೂರು, ಕಲಾವಿದರಾದ ಭಾಸ್ಕರ ಪಕ್ಷಿಕೆರೆ, ಉದಯಕುಮಾರ್ ಹಳೆಯಂಗಡಿ ಮತ್ತಿತರರು ಉಪಸ್ಥಿತರಿದ್ದರು.ತಂಡದ ನಿರ್ವಾಹಕ ಸುಧಾಕರ ಸಾಲ್ಯಾನ್ ಕಾರ್ಯಕ್ರಮ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ಕ್ರೀಡಾಪಟುಗಳಿಗೆ ಉಜ್ವಲ ಉದ್ಯೋಗಾವಕಾಶ – ಎಂ.ಆರ್.ಪೂವಮ್ಮ

ಮಂಗಳೂರು : ಉದಯೋನ್ಮುಖ ಕ್ರೀಡಾಪಟುಗಳಿಗೆ ದೇಶದಲ್ಲಿ ಉತ್ತಮ ಭವಿಷ್ಯವಿದೆ. ಸೋಲು ಎದುರಾದರೆ ಧೃತಿಗೆಡದೆ ಛಲದಿಂದ ಮುಂದುವರಿದರೆ ಮಾತ್ರ ಕ್ರೀಡಾ ಕ್ಷೇತ್ರದಲ್ಲಿ ಯಶಸ್ಸು ಸಾಧ್ಯ. ರಾಜ್ಯ,ರಾಷ್ಟ್ರ ಮಟ್ಟದಲ್ಲಿ ಸಾಧನೆ ತೋರುವ ಕ್ರೀಡಾಪಟುಗಳಿಗೆ ಉಜ್ವಲ ಉದ್ಯೋಗಾವಕಾಶ ಇರುವ ಕಾರಣ ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಕ್ರೀಡೆಗೂ ಹೆಚ್ಚಿನ ಮಹತ್ವ ನೀಡಬೇಕೆಂದು ಒಲಿಂಪಿಕ್ ಕ್ರೀಡಾಪಟು, ಅರ್ಜುನ ಪ್ರಶಸ್ತಿ ಪುರಸ್ಕೃತೆ ಕ್ರೀಡಾಪಟು ಎಂ.ಆರ್.ಪೂವಮ್ಮ ಹೇಳಿದರು.ಮಂಗಳೂರು ಪ್ರೆಸ್‌ಕ್ಲಬ್ ವತಿಯಿಂದ ಶನಿವಾರ ನಗರದ ಪತ್ರಿಕಾ ಭವನದಲ್ಲಿ ನಡೆದ ಮಂಗಳೂರು ಪ್ರೆಸ್ ಗೌರವ ಅತಿಥಿ ಪುರಸ್ಕಾರ ಸ್ವೀಕರಿಸಿ ಮಾತನಾಡಿದ ಅವರು ‘ ನಾನು ಶಾಲಾ ದಿನಗಳಿಂದ ರಾಷ್ಟ್ರೀಯ , ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ಕೂಟದಲ್ಲಿಭಾಗವಹಿಸುತ್ತಾ ಬಂದಿದ್ದರೂ ಪದವಿ ಪೂರೈಸಿದ್ದೇನೆ. ಕ್ರೀಡೆಯಿಂದ ಓದಿಗೆ ಯಾವುದೇ ತೊಂದರೆಯಾಗುವುದಿಲ್ಲ. ಇದು ನನ್ನ ಸ್ವಂತ ಅನುಭವ ಎಂದರು.ಕ್ರೀಡಾಪಟುಗಳಿಗೆ ಹಿಂದೆ ಸೀಮಿತ ಸೌಲಭ್ಯವಿತ್ತು. ಆದರೆ ಈಗ ಪರಿಸ್ಥಿತಿ ಸಾಕಷ್ಟು ಸುಧಾರಣೆಯಾಗಿದೆ. ಗ್ರಾಮಾಂತರ ಪ್ರದೇಶದ ಕ್ರೀಡಾ ಪಟುಗಳನ್ನು ಕೂಡಾ ಗುರುತಿಸಿ ಸ್ಪೋಟ್ಸ್ ಹಾಸ್ಟೆಲ್ ಮೂಲಕ ತರಬೇತಿ ನೀಡುವ ಸೌಲಭ್ಯ ಇದೆ. ಖೇಲೋ ಇಂಡಿಯಾ ಸಹಿತ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ಹಲವು ಸರ್ಕಾರಿ ಯೋಜನೆಗಳಿವೆ. ಸಾಧನೆಯ ಹಾದಿಯಲ್ಲಿ ಸವಾಲುಗಳು ಎದುರಾಗುವುದು ಸಹಜ. ಅದನ್ನು ಮೀರಿ ನಿಲ್ಲಲು ಪ್ರಯತ್ನಿಸಬೇಕು ಎಂದು ಪೂವಮ್ಮ ಹೇಳಿದರು.ಪ್ರಾಥಮಿಕ ಶಾಲೆಯಲ್ಲಿ ಕಬಡ್ಡಿ, ಪುಟ್‌ಬಾಲ್ ಆಡುತ್ತಿದ್ದ ನಾನು ಬಳಿಕ ಅಥ್ಲೆಟಿಕ್ ಬಗ್ಗೆ ಆಸಕ್ತಿ ಬೆಳೆಸಿಕೊಂಡೆ. ನನ್ನ ತಂದೆ ಬಜ್ಪೆವಿಮಾನ ನಿಲ್ದಾಣದಲ್ಲಿ ಉದ್ಯೋಗದಲ್ಲಿದ್ದರು. ಅಲ್ಲಿ ದೊಡ್ಡ ಮೈದಾನದ ಇಲ್ಲದ ಕಾರಣ ಮಂಗಳೂರಿಗೆ ಬಂದು ನೆಲೆಸಿದರು. ಮಂಗಳಾ ಕ್ರೀಡಾಂಗಳನದಲ್ಲಿ ಆಗ ಸಿಂಥೆಟಿಕ್ ಟ್ರಾೃಕ್ ಕೂಡಾ ಇರಲಿಲ್ಲ. ನಾನು ಇಂದು ಕ್ರೀಡಾ ಕ್ಷೇತ್ರದಲ್ಲಿ ಏನೇ ಸಾಧನೆ ಮಾಡಿದ್ದರೂ ಅದರಲ್ಲಿ ನನ್ನ ಹೆತ್ತವರ ಶ್ರಮ ಅಧಿಕವಾದದ್ದು. ನನ್ನ 24 ವರ್ಷಗಳ ಕ್ರೀಡಾ ಸಾಧನೆಗೆ ಪೋಷಕರು ಹಾಗೂ ಪತಿಯ ಬೆಂಬಲವೇ ಪ್ರಮುಖ ಕಾರಣ. ಕ್ರೀಡೆಯಲ್ಲಿ ಆಸಕ್ತಿ ಇರುವ ಮಕ್ಕಳಿಗೆ ಇದೇ ರೀತಿ ಎಲ್ಲ ಪೋಷಕರು ಪ್ರೋತ್ಸಾಹ ನೀಡುವಂತಾಗಬೇಕೆಂದು ಎಂದು ಅವರು ಹೇಳಿದರು.ನನಗೀಗ 34 ವರ್ಷ ವಯಸ್ಸು. ಹಾಗೆಂದು ಕ್ರೀಡೆಯನ್ನು ಈಗಲೇ ಬಿಡಲು ಮನಸ್ಸಿಲ್ಲ. ನನ್ನ ಪತಿ ಕ್ರೀಡಾಪಟು. ಅವರಿಗೆ ಕ್ರೀಡೆಯ ಮಹತ್ವ ತಿಳಿದಿದೆ. ಅವರ ಪ್ರೋತ್ಸಾಹದಿಂದ ನಾನು 3ನೇ ಬಾರಿ ಒಲಿಂಪಿಕ್ಸ್‌ನಲ್ಲಿ ಭಾಗವಹಿಸುವಂತಾಯಿತು. ವಯಸ್ಸು ಸಾಧನೆಗೆ ಅಡ್ಡಿಯಾಗಬಾರದು ಮುಂದಿನ ಪೀಳಿಗೆಯ ಮಕ್ಕಳಿಗೂ ಮಾದರಿಯಾಗುವ ನಿಟ್ಟಿನಲ್ಲಿ ಕ್ರೀಡೆಯಲ್ಲಿ ಇನ್ನು ಕೆಲವು ಮುಂದುವರಿಯಲು ಬಯಸಿದ್ದೇನೆ ಎಂದು ಪೂವಮ್ಮ ಹೇಳಿದರು.ಸುಯೆಝ್ ಪ್ರಾಜೆಕ್ಟ್ಸ್ ಕಂಪನಿಯ ಕಾರ್ಪೊರೇಟ್ ಕಮ್ಯುನಿಕೇಶನ್ಸ್ ಮ್ಯಾನೇಜರ್ ಡಾ.ರೇಶ್ಮಾ ಉಳ್ಳಾಲ್ ಕಾರ್ಯಕ್ರಮ ಉದ್ಘಾಟಿಸಿದರು. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ .ಆರ್. , ಪೂವಮ್ಮ ಅವರ ಪತಿ ಜಿತಿನ್ ಪೌಲ್, ತಾಯಿ ಜಾಜಿ ರಾಜು, ಖೇಲೋ ಇಂಡಿಯಾದ ದ.ಕ.ಕೋಚ್ ಭಕ್ಷಿತ್ ಸಾಲ್ಯಾನ್ ಉಪಸ್ಥಿತರಿದ್ದರು. ಪ್ರೆಸ್ ಕ್ಲಬ್ ಪ್ರಧಾನಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು. ಆರ್. ಸಿ. ಭಟ್ ಕಾರ್ಯಕ್ರಮ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ 2023-24 ರ ಸಾಲಿನಲ್ಲಿ ಪಿ ಯು ಸಿ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ. 90 ಕ್ಕೂ ಹೆಚ್ಚು ಅಂಕ ಗಳಿಸಿದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಆಗಸ್ಟ್ 25 ರಂದು ಭಾನುವಾರ ಬೆಳಿಗ್ಗೆ 11 ಗಂಟೆಗೆ ಪತ್ರಿಕಾ ಭವನದಲ್ಲಿ ನಡೆಯಲಿದೆ.ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಕಾರ್ಯಕ್ರಮ ಉದ್ಘಾಟಿಸುವರುದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರತಿಭಾ ಪುರಸ್ಕಾರ ನೆರವೇರಿಸುವರು.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಲಿದ್ದಾರೆ. ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಖಾದರ್ ಷಾ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ ಬಿ ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ. ಆರ್. ಉಪಸ್ಥಿತರಿರುವರು ಎಂದು ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ 2023-24 ರ ಸಾಲಿನಲ್ಲಿ ಪಿ ಯು ಸಿ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ. 90 ಕ್ಕೂ ಹೆಚ್ಚು ಅಂಕ ಗಳಿಸಿದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಆಗಸ್ಟ್ 25 ರಂದು ಭಾನುವಾರ ಬೆಳಿಗ್ಗೆ 11 ಗಂಟೆಗೆ ಪತ್ರಿಕಾ ಭವನದಲ್ಲಿ ನಡೆಯಲಿದೆ.ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಕಾರ್ಯಕ್ರಮ ಉದ್ಘಾಟಿಸುವರುದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರತಿಭಾ ಪುರಸ್ಕಾರ ನೆರವೇರಿಸುವರು.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಲಿದ್ದಾರೆ. ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಖಾದರ್ ಷಾ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ ಬಿ ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ. ಆರ್. ಉಪಸ್ಥಿತರಿರುವರು ಎಂದು ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ಪತ್ರಕರ್ತರಿಗೆ ಮಣಿಪಾಲ ಅರೋಗ್ಯ ಕಾರ್ಡ್ ವಿತರಣೆ

ಮಂಗಳೂರು, ಆಗಸ್ಟ್ 22, ಮಣಿಪಾಲ ಅರೋಗ್ಯ ಕಾರ್ಡ್ ಯೋಜನೆಯ 2024:ನೇ ಸಾಲಿನ ನೋಂದಾವಣೆ ಆರಂಭವಾಗಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ಕೆ ಎಂ ಸಿ ಆಸ್ಪತ್ರೆ ಡೀನ್ ಡಾ. ಉನಿಕೃಷ್ಣನ್ ತಿಳಿಸಿದರು.ಮಂಗಳೂರು ಪತ್ರಿಕಾ ಭವನದಲ್ಲಿ ಪತ್ರಕರ್ತರಿಗೆ ಮಣಿಪಾಲ ಅರೋಗ್ಯ ಕಾರ್ಡ್ ನ್ನು ಮಾಹೆ ಟೀಚಿಂಗ್ ಹಾಸ್ಪಿಟಲ್ ಚೀಫ್ ಒಪರೇಟಿಂಗ್ ಆಫೀಸರ್ ಆನಂದ್ ವೇಣುಗೋಪಾಲ್ ಹಾಗೂ ಉನಿಕೃಷ್ಣ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ಹಸ್ತಾಂತರಿಸಿದರು. ಮಾಹೆ ಸಂಸ್ಥಾಪಕ ದಿವ0ಗತ ಡಾ. ಟಿ ಎಂ ಎ ಪೈ ಅವರ ಕನಸಿನಂತೆ 2000 ರ ಇಸವಿ ಯಲ್ಲಿ ಈ ಯೋಜನೆ ಆರಂಭಿಸಲಾಗಿದೆ. ಎಲ್ಲರಿಗೂ ಕೈಗೆಟಕುವ ದರದಲ್ಲಿ ಇದು ಲಭ್ಯವಿದೆ ಎಂದು ಆನಂದ್ ವೇಣುಗೋಪಾಲ್ ತಿಳಿಸಿದರು.ಕೆ ಎಂ ಸಿ ಆಸ್ಪತ್ರೆಯ ಅತ್ತಾವರ ವೈದ್ಯಕೀಯ ಅಧೀಕ್ಷಕ ಡಾ ಚಕ್ರಪಾಣಿ ಮಾತನಾಡಿ ಈ ಯೋಜನೆಯು ಒಂದು ವರ್ಷ ಮತ್ತು ಎರಡು ವರ್ಷದ ಅವಧಿ ಹೊಂದಿದೆ. ಈ ಅರೋಗ್ಯ ಕಾರ್ಡ್ ಹೊಂದಿದವರು ಕೆಎಂಸಿ ಆಸ್ಪತ್ರೆ ಅತ್ತಾವರ, ಕೆಎಂಸಿ ಆಸ್ಪತ್ರೆ ಜ್ಯೋತಿ, ದುರ್ಗಾ ಸಂಜೀವಿನಿ ಮಣಿಪಾಲ ಆಸ್ಪತ್ರೆ ಕಟೀಲ್, ಕೆಎಂಸಿ ಆಸ್ಪತ್ರೆ ಮಣಿಪಾಲ, ಡಾ ಟಿ ಎಂ ಎ ಪೈ ಉಡುಪಿ ಹಾಗೂ ಕಾರ್ಕಳ, ಗೋವಾ ಗಳಲ್ಲಿ ರಿಯಾಯತಿ ಸೌಲಭ್ಯ ಪಡೆಯಬಹುದು. ಕಾರ್ಡ್ ಹೊಂದಿದವರು ಮಣಿಪಾಲ ಕಾಲೇಜು ಒಫ್ ಡೆಂಟಲ್ ಸೈನ್ಸಸ್ ಮಂಗಳೂರು ಹಾಗೂ ಮಣಿಪಾಲ ದಲ್ಲಿ ರಿಯಾಯತಿ ಪಡೆದುಕೊಳ್ಳಬಹುದು ಎಂದು ಹೇಳಿದರು.ದುರ್ಗಾ ಸಂಜೀವಿನಿ ಮಣಿಪಾಲ ಆಸ್ಪತ್ರೆ ಕಟೀಲ್ ಆಸ್ಪತ್ರೆ ಮುಖ್ಯ ಆಡಳಿತ ಅಧಿಕಾರಿ ಡಾ. ಶಿವಾನಂದ ಪ್ರಭು ಮಾತನಾಡಿ ಈ ಕಾರ್ಡ್ ಮೂಲಕ ತಮ್ಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಕೊಂಡಿದ್ದಾರೆ. ಬಡ ವರ್ಗದ ಜನರಿಗೆ ಈ ಕಾರ್ಡ್ ಅನುಕೂಲಕರ ವಾಗಿದೆ ಎಂದು ಹೇಳಿದರು.ಕೆಎಂಸಿ ಆಸ್ಪತ್ರೆ ಮಂಗಳೂರು ಚೀಫ್ ಆಪರೇಟಿಂಗ್ ಆಫೀಸರ್ ಮಾತನಾಡಿ ಒಂದು ವರ್ಷದ ಕಾರ್ಡ್ ನ ಸದಸ್ಯತ್ವ ಒಬ್ಬರಿಗೆ 350 ರೂಪಾಯಿ ಆಗಿದೆ, ಕುಟುಂಬಕ್ಕೆ 700 ರೂಪಾಯಿ,ಎರಡು ವರ್ಷದ ಯೋಜನೆಯಲ್ಲಿ ಒಬ್ಬರಿಗೆ 600 ರೂಪಾಯಿ ಕುಟುಂಬಕ್ಕೆ 950 ರೂಪಾಯಿ ಆಗಿದೆ ಎಂದು ಹೇಳಿದರು.ಕೆಎಂಸಿ ಮಾರುಕಟ್ಟೆ ವಿಭಾಗದ ಮುಖ್ಯ ವ್ಯವಸ್ಥಾಪಕ ಸಚಿನ್ ಕಾರಂತ್ ಮಾತನಾಡಿ ಕೆಎಂಸಿ ಆಸ್ಪತ್ರೆಗಳಲ್ಲಿ ಕಾರ್ಡ್ ನೋಂದಣಿ ಮಾಡಬಹುದಾಗಿದೆ ಎಂದು ತಿಳಿಸಿದರು.ಕೆಎಂಸಿ ಆಸ್ಪತ್ರೆ ಮುರುಕಟ್ಟೆ ವಿಭಾಗದ ಮುಖ್ಯಸ್ಥ ರಾಕೇಶ್, ಮಾರ್ಕೆಟಿಂಗ್ ವಿಭಾಗದ ಪ್ರತಿನಿಧಿ ಕಾರ್ತಿಕ್ ನಾಯಕ್,ಹುಬರ್ಟ್ ಉಪಸ್ಥಿತರಿದ್ದರು. ದುರ್ಗಾ ಸಂಜೀವಿನಿ ಮಣಿಪಾಲ ಆಸ್ಪತ್ರೆ ಕಟೀಲ್ ಇದರ ಸಾರ್ವಜನಿಕ ಸಂಪರ್ಕ್ ಅಧಿಕಾರಿ ನಿತೇಶ್ ಶೆಟ್ಟಿ ಎಕ್ಕಾರು ಕಾರ್ಯಕ್ರಮ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ಆ.24ರಂದು ಎಂ.ಆರ್.ಪೂವಮ್ಮ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ

ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಆ. 24ರಂದು ಬೆಳಗ್ಗೆ 11.30 ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಒಲಿಂಪಿಕ್ ಕ್ರೀಡಾಪಟು ಎಂ.ಆರ್. ಪೂವಮ್ಮ ಭಾಗವಹಿಸಿ ಗೌರವ ಸ್ವೀಕರಿಸಲಿದ್ದಾರೆ.ಸುಯೆಝ್ ಪ್ರಾಜೆಕ್ಟ್ಸ್ ಕಂಪನಿಯ ಕಾರ್ಪೊರೇಟ್ ಕಮ್ಯುನಿಕೇಶನ್ಸ್ ಮ್ಯಾನೇಜರ್ ಡಾ.ರೇಶ್ಮಾ ಉಳ್ಳಾಲ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸುವರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ .ಆರ್. ಉಪಸ್ಥಿತರಿರುವರು ಎಂದು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ಆ.26ರಂದು ಕದ್ರಿಯಲ್ಲಿ ರಾಷ್ಟೀಯ ಮಕ್ಕಳ ಉತ್ಸವ, ಶ್ರೀ ಕೃಷ್ಣ ವೇಷ ಸ್ಪರ್ಧೆ

ಮಂಗಳೂರು: ಕಲ್ಕೂರ ಪ್ರತಿಷ್ಠಾನದಿಂದ ರಾಷ್ಟ್ರೀಯ ಮಕ್ಕಳ ಉತ್ಸವ ಶ್ರೀಕೃಷ್ಣ ವೇಷ ಸ್ಪರ್ಧೆಯು ಶ್ರೀ ಕ್ಷೇತ್ರ ಕದ್ರಿಯಲ್ಲಿ ಆಗಸ್ಟ್ 26, ಸೋಮವಾರದಂದು ನಡೆಯಲಿದೆ ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ್ ಕುಮಾರ್ ಕಲ್ಕೂರ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.“ಮಕ್ಕಳಲ್ಲಿ ಧಾರ್ಮಿಕ ಪ್ರಜ್ಞೆಯನ್ನು ಬೆಳೆಸುವ ಪ್ರಯತ್ನವಾಗಿ ಮತ್ತು ಅವರಲ್ಲಿನ ಪ್ರತಿಭೆಯನ್ನು ಗುರುತಿಸಿ ಬೆಳೆಸುವ ಸದುದ್ದೇಶದಿಂದ ಕಳೆದ ನಾಲ್ಕು ದಶಕಗಳಂದ (42ವರ್ಷ) ಕಲ್ಕೂರ ಪ್ರತಿಷ್ಠಾನವು ನಡೆಸಿಕೊಂಡು ಬಂದಿರುವ ರಾಷ್ಟ್ರಮಟ್ಟದ ಮಕ್ಕಳ ಉತ್ಸವ–“ಶ್ರೀ ಕೃಷ್ಣ ವೇಷ ಸ್ಪರ್ಧೆಯನ್ನು 42 ವಿಭಾಗಗಳಲ್ಲಿ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಏರ್ಪಡಿಸಲಾಗಿದೆ. ಕೃಷ್ಣಾಷ್ಟಮಿಯಂದು ಬೆಳಗ್ಗೆ 9.00ರಿಂದ ಶ್ರೀ ಕೃಷ್ಣ ವರ್ಣ ವೈಭವ, ಮಧ್ಯಾಹ್ನ 12 ರಿಂದ ಸಾಂಸ್ಕೃತಿಕಕಾರ್ಯಕ್ರಮ, 1 ಗಂಟೆಗೆ ಸರಿಯಾಗಿ ಶ್ರೀ ಕೃಷ್ಣ ಜನ್ಮ ಮಹೋತ್ಸವ ನಂದಗೋಕುಲ ವೇದಿಕೆಯಲ್ಲಿ ಗಣ್ಯಾತಿಗಣ್ಯರು ಮತ್ತುಪುಟಾಣಿಕೃಷ್ಣರು ಮತ್ತು ಮಾತೆಯರ ಸಮ್ಮುಖದಲ್ಲಿ ದೀಪ ಪ್ರಜ್ವಲನೆದೊಂದಿಗೆ ಶ್ರೀ ಕೃಷ್ಣ ವೇಷ ಸ್ಪರ್ಧೆ ಉದ್ಘಾಟನೆಗೊಳ್ಳಲಿದೆ. ರಾತ್ರಿ12.00ರ ತನಕ ವಿವಿಧ ಸ್ಪರ್ಧೆಗಳನ್ನು ಒಟ್ಟು 42 ವಿಭಾಗಗಳಲ್ಲಿ, 9 ವೇದಿಕೆಗಳಲ್ಲಿ ಏಕ ಕಾಲದಲ್ಲಿ ಆಯೋಜಿಸಲಾಗಿದೆ ಮತ್ತು ಮಧ್ಯಾಹ್ನ 12 ರಿಂದ ರಾತ್ರಿ 12ರವರೆಗೆ ವಿವಿಧ ಸಾಹಿತ್ಯಕ-ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಈ ರಾಷ್ಟ್ರೀಯ ಮಕ್ಕಳ ಉತ್ಸವದಲ್ಲಿ ಜೋಡಿಸಲಾಗಿದೆ. ರಾತ್ರಿ 12 ಗಂಟೆಗೆ ಅರ್ಘ್ಯ ಪ್ರದಾನ – ಪ್ರಸಾದ ವಿತರಣೆಯೊಂದಿಗೆ ಕಾರ್ಯಕ್ರಮ ಸಂಪನ್ನಗೊಳ್ಳಲಿದೆ“ ಎಂದರು.ರಾಷ್ಟ್ರವ್ಯಾಪಿ ಮಾನ್ಯತೆಗೊಂಡ ಶ್ರೀ ಕೃಷ್ಣವೇಷ ಸ್ಪರ್ಧೆಗಳು ಒಟ್ಟು 42 ವಿಭಾಗಗಳಲ್ಲಿ ಕದ್ರಿ ದೇವಳದ ಒಟ್ಟು ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ, ಅಭಿಷೇಕ ಮಂದಿರ,ಕದ್ರಿಕೆರೆ ಅಶ್ವತಕಟ್ಟೆ ಬಳಿ, ಶ್ರೀ ಕೃಷ್ಣ ಜನ್ಮ ಮಹೋತ್ಸವ ಸಮಿತಿ ವೇದಿಕೆ, ಅಭಿಷೇಕ ಮಂದಿರ 1ನೇ ಮಹಡಿ, ಕಲ್ಯಾಣ ಮಂಟಪ, ಮಂಜುಶ್ರೀ, ಅಭಿಷೇಕ ಮಂದಿರ, ಪ್ರಧಾನ ವೇದಿಕೆ ಸೇರಿದಂತೆ ಎಲ್ಲೆಡೆ ಏಕಕಾಲದಲ್ಲಿ ನಡೆಯಲಿದೆ“ ಎಂದರು.ಈ ಬಾರಿಯ ವಿಶೇಷತೆ:ಒಟ್ಟು 42 ವಿಭಾಗದಲ್ಲಿ ಏಕ ಕಾಲದಲ್ಲಿ ಕದ್ರಿ ದೇವಳದ ಒಟ್ಟು 9 ವೇದಿಕೆಗಳಲ್ಲಿ ಸ್ಪರ್ಧೆಗಳು ಜರಗಲಿವೆ. ಶ್ರೀ ಕೃಷ್ಣ ರಸಪ್ರಶ್ನೆ-ಬಾಲಕೃಷ್ಣ ರಸಪ್ರಶ್ನೆ ಸ್ಪರ್ಧಾಳುಗಳಿಗೆ ಬಹುಮಾನಾರ್ಥವಾಗಿ ಸುಮಾರು 150ಕ್ಕೂ ಮಿಕ್ಕಿ ನಿತ್ಯ ಪೂಜಾ ಅಥವಾ ಸಾಂಸ್ಕೃತಿಕ ಪರಿಕರಗಳನ್ನು (ಶಂಖ, ಜಾಗಟೆ, ಬೆಳ್ಳಿ ತುಳಸಿ ಮಣಿ ಸರ, ಬೆಳ್ಳಕಟ್ಟದ ಅಭಿಷೇಕ ಶಂಖ, ಮುದ್ರೆ, ತಾಳ, ಆರತಿ, ದೀಪ ಇತ್ಯಾದಿ ನೀಡಲಾಗುವುದು.)ರಾತ್ರಿ 12 ಗಂಟೆಗೆ ಶ್ರೀ ಕೃಷ್ಣ ದೇವರಿಗೆ 12 ಬಗೆಯ ಉಂಡೆಗಳು, ಚಕ್ಕುಲಿ, ಕಡುಬು ಇನ್ನಿತರ ಖಾದ್ಯಗಳನ್ನು ನೈವೇದ್ಯಮಾಡಿ ನೆರೆದ ಮಕ್ಕಳಗೆ ಪ್ರಸಾದರೂಪವಾಗಿ ಉಂಡೆ ಚಕ್ಕುಲಿಗಳನ್ನು ವಿತರಿಸಲಾಗುವುದು. ಸಾರ್ವಜನಿಕರಿಗೂ ಅರ್ಘ್ಯ ಪ್ರದಾನ ಮಾಡಲು ಅವಕಾಶ ಕಲ್ಪಸಲಾಗಿದೆ.ಪಾಲಕರು ತಮ್ಮ ಮಕ್ಕಳಗೆ ಅವರವರ ಮನೆಗಳಲ್ಲೇ ಅಥವಾ ಇತರ ಕಡೆಗಳಲ್ಲಿ ವೇಷ ಭೂಷಣವನ್ನು ಹಾಕಿಸಿ ತರಬಹುದುಅಥವಾ ಸ್ಥಳದಲ್ಲೇ ಅವರವರ ವೆಚ್ಚದಲ್ಲಿ ವೇಷವನ್ನು ಹಾಕಿಸ ಬಹುದಾಗಿದೆ. ವೇಷಭೂಷಣಗಳಲ್ಲಿ ಆಡಂಬರಕ್ಕೆ ಹೆಚ್ಚಿನ ಪ್ರಾಶಸ್ತ್ರ ನೀಡದೆ ಮಕ್ಕಳ ಮುಗ್ಧ ಸೌಂದಯ್ಯದ ನೈಜತೆಯನ್ನು ಹೊರಸೂಸುವ ವೇಷಗಳನ್ನು ಧರಿಸಿಕೊಂಡಿರಲಿ ಎಂದು ಸಂಘಟಕರು ವಿನಂತಿಸಿಕೊಂಡಿದ್ದಾರೆ.ಖ್ಯಾತ ಛಾಯಾಗ್ರಾಹಕರು ಸ್ಥಳದಲ್ಲಿ ಹಾಜರಿದ್ದು ಆಸಕ್ತರು ತಮ್ಮ ಮಕ್ಕಳ ವೈಯಕ್ತಿಕ ಛಾಯಾಚಿತ್ರವನ್ನು ಅವರವರ ಸ್ವಂತ ವೆಚ್ಚದಲ್ಲಿ ತೆಗೆಯುವ ಬಗ್ಗೆ ವ್ಯವಸ್ಥೆ ಮಾಡಲಾಗಿದೆ.ಪತ್ರಿಕಾಗೋಷ್ಠಿಯಲ್ಲಿ ಎಂ.ಬಿ. ಪುರಾಣಿಕ್, ಕದ್ರಿ ನವನೀತ್ ಶೆಟ್ಟಿ, ವಿಜಯಲಕ್ಷ್ಮಿ ಶೆಟ್ಟಿ, ಮಂಜುಳ ಶೆಟ್ಟಿ, ತಾರಾನಾಥ್ ಬೋಳಾರ್, ದಯಾನಂದ ಕಟೀಲ್, ತಮ್ಮ ಲಕ್ಷ್ಮಣ ಮತ್ತಿತರರು ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ಆ.24: ಪುರಭವನದಲ್ಲಿ “ತುಳುನಾಡ ಜಾನಪದ ಉಚ್ಛಯ”. ತುಳುವರ ದಿಬ್ಬಣ, ತುಳುನಾಡ ಕಲಾಪಂಥ, ಪೆರ್ಮೆದ ತುಳುವೆ ಪ್ರಶಸ್ತಿ, ಸಾಂಸ್ಕೃತಿಕ ಪ್ರದರ್ಶನ

ಮಂಗಳೂರು: “ಅಖಿಲ ಭಾರತ ತುಳು ಒಕ್ಕೂಟ ತುಳು ಭಾಷೆ, ಸಂಸ್ಕೃತಿ ಅಭಿವೃದ್ಧಿ ನೆಲೆಯಲ್ಲಿ ಸ್ಥಾಪಿಸಲ್ಪಟ್ಟಿದ್ದು ದೇಶದಾದ್ಯಂತ ಸುಮಾರು 46 ತುಳು ಸೇವಾ ಸಂಸ್ಥೆಗಳುಇದರ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿವೆ. ತುಳು ಭಾಷೆಗೆ ಸಂಬಂಧಿಸಿದಂತೆ ಕಾರ್ಯಕ್ರಮಗಳು, ಸಮಾರಂಭಗಳು, ಸಮ್ಮೇಳನಗಳು ದೇಶ ವಿದೇಶದಲ್ಲಿ ನಡೆಯುತ್ತಿದೆ. ಬರುವ ಅಗಸ್ಟ್ 24, ಶನಿವಾರದಂದು ತುಳುನಾಡ ಜಾನಪದ ಉಚ್ಛಯ ಕಾರ್ಯಕ್ರಮ ನಡೆಯಲಿದ್ದು ಇದಕ್ಕೆ ತುಳುವರ ಸಹಕಾರ ನಿರೀಕ್ಷಿಸುತ್ತಿದ್ದೇವೆ“ ಎಂದು ಸಂಘಟನೆಯ ಅಧ್ಯಕ್ಷ ಎಸಿ ಭಂಡಾರಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.ಅಂದು ಬೆಳಗ್ಗೆ 8.30ಕ್ಕೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಪುರಭವನದ ವರೆಗೆ ತುಳುವೆರ ದಿಬ್ಬಣ ಮೆರವಣಿಗೆ ನಡೆಯಲಿದೆ. ಇದರಲ್ಲಿ ಸುಮಾರು 8ಜಾನಪದ ಕಲಾಕೂಟಗಳು ಭಾಗವಹಿಸಲಿವೆ. ಈ ಸಮಾರಂಭವನ್ನು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಉದ್ಘಾಟಿಸಲಿದ್ದು, ಅತಿಥಿಗಳಾಗಿ ಲಯನ್ ದಿವಾಕರ ಶೆಟ್ಟಿ ಸಾಂಗ್ಲಿ, ನಗ್ರಿಗುತ್ತು ರೋಹಿತ್‌ ಶೆಟ್ಟಿ, ಕರ್ನೂರು ಮೋಹನ್ ರೈ, ಅಶೋಕ್ ಪಕ್ಕಳ ಮುಂಬೈ ಉಪಸ್ಥಿತರಿರಲಿದ್ದಾರೆ.ಇದೇ ಸಂದರ್ಭದಲ್ಲಿ ಕಂಬಳಕೂಟ ಹೆಸರುವಾಸಿಯಾದ ನಂದಳಿಕೆ ಶ್ರೀಕಾಂತ ಭಟ್ ರವರ ದಿಡ್ಡೆರು “ನಂದಳಿಕೆಪಾಂಡು”ವಿಗೆ ಸಮ್ಮಾನ ಗೌರವ ನಡೆಯಲಿದೆ. ಬೆಳಗ್ಗೆ 9.30ಕ್ಕೆ ಪುರಭವನದಲ್ಲಿ ನಡೆಯಲಿರುವ ನಮ್ಮ ತುಳುನಾಡ ಕಲಾಪಂಥವನ್ನು ಡಾ| ಎ. ಸದಾನಂದ ಶೆಟ್ಟಿ ಇವರು ಉದ್ಘಾಟಿಸಿ ಚಾಲನೆ ನೀಡಲಿದ್ದಾರೆ. ಅಧ್ಯಕ್ಷತೆಯನ್ನು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಇವರು ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಪ್ರೊ.ಪಿ.ಎಲ್, ಧರ್ಮ, ಬಿ.ರಮಾನಾಥ ರೈ, ಐವನ್ ಡಿ’ಸೋಜ, ರಾಜೇಶ್ ಖನ್ನಾ, ಜಾನಕಿ ಬ್ರಹ್ಮಾವರ್ ಉಪಸ್ಥಿತರಿರಲಿದ್ದಾರೆ. ವಿವಿಧ ಭಾಷಾ ಅಕಾಡೆಮಿಗಳ ಅಧ್ಯಕ್ಷರುಗಳಾದ ತಾರನಾಥ್ ಗಟ್ಟಿ ಕಾಪಿಕಾಡ್, ತಲ್ಲೂರು ಶಿವರಾಮ್ ಶೆಟ್ಟಿ, ಜೋಕಿಂ ಸ್ವಾನಿ ಅಲ್ವಾರಿಸ್, ಉಮರ್ ಯು. ಹೆಚ್. ಸದಾನಂದ ಮಾವಜಿ, ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ ಭಾಗವಹಿಸಲಿದ್ದಾರೆ. ನಮ್ಮ ತುಳುನಾಡ ಕಲಾಪಂಥದಲ್ಲಿ ಸುಮಾರು 13 ತುಳು ಸೇವಾ ಸಂಘಟನೆಗಳು ಭಾಗವಹಿಸಲಿದ್ದು, ಪ್ರಥಮ ನಗದು ಬಹುಮಾನ 50,000, ದ್ವಿತೀಯ ರೂ.30,000, ತೃತೀಯ ರೂ. 20,000 ಹಾಗೂ ಭಾಗವಹಿಸಿದ ಎಲ್ಲಾ ತಂಡಗಳಿಗೆ ಗೌರವ ಧನ ರೂ.5,000 ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಗುವುದು“ ಎಂದರು.ಬಳಿಕ ಮಾತಾಡಿದ ಸಂಘಟನೆಯ ಪ್ರಧಾನ ಸಂಚಾಲಕರಾದ ಕದ್ರಿ ನವನೀತ ಶೆಟ್ಟಿ ಅವರು, ”ಸಂಜೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದು, ಸಭಾಧ್ಯಕ್ಷರಾಗಿ ಸ್ಪೀಕರ್ ಯು.ಟಿ. ಖಾದರ್, ಅತಿಥಿಗಳಾಗಿ ಶಿವರಾಜ್ ಎಸ್. ತಂಗಡಗಿ, ಸೋಮಣ್ಣ ಬೇವಿನಮರದಭಾಗವಹಿಸಲಿದ್ದಾರೆ. “ಪೆರ್ಮೆದ ತುಳುವೆ” 2024 – ಹಿರಿಯ ನಾಟಕಕಾರ, ನಟ, ನಿರ್ಮಾಪಕ, ನಿರ್ದೇಶಕ, ಸಂಘಟಕ ತೋನ್ಸೆ ವಿಜಯಕುಮಾರ್ ಶೆಟ್ಟಿ ಮುಂಬೈ ಇವರಿಗೆ ನೀಡಿ ಗೌರವಿಸಲಾಗುವುದು. ಪ್ರಶಸ್ತಿ ಪ್ರಧಾನವನ್ನು ಡಾ| ಎಂ. ಮೋಹನ್ ಆಳ್ವ ಮೂಡಬಿದಿರೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಶಶಿಕಿರಣ್ ಶೆಟ್ಟಿ, ಮುಂಬೈ, ಐಕಳ ಹರೀಶ್ ಶೆಟ್ಟಿ, ಪ್ರವೀಣ್ ಭೋಜ ಶೆಟ್ಟಿ, ಧರ್ಮಪಾಲ ಯು. ದೇವಾಡಿಗ, ಕೆ.ಡಿ. ಶೆಟ್ಟಿ, ರವೀಂದ್ರನಾಥ ಎಂ. ಭಂಡಾರಿ, ಕಿಶನ್ ಶೆಟ್ಟಿ ಮುಂಬೈಯವರುಉಪಸ್ಥಿತರಿರುವರು. ಬಹುಮಾನ ವಿತರಣೆಯನ್ನು ಬರೋಡ ತುಳುಕೂಟದ ಅಧ್ಯಕ್ಷ ಶಶಿಧರ್ ಬಿ. ಶೆಟ್ಟಿಯವರು ನೆರವೇರಿಸಲಿದ್ದಾರೆ. ರಾತ್ರಿ 7.00ರಿಂದ 9.00ರವರೆಗೆ ಅಕಾಡೆಮಿಗಳ ಪ್ರಾಯೋಜಿತ ಕಲಾ ಪ್ರದರ್ಶನ ನಡೆಯಲಿದೆ“ ಎಂದವರು ಮಾಹಿತಿ ನೀಡಿದರು.ಪತ್ರಿಕಾಗೋಷ್ಟಿಯಲ್ಲಿ ಒಕ್ಕೂಟದ ಉಪಾಧ್ಯಕ್ಷರಾದ ದಾಮೋದರ ನಿಸರ್ಗ, ವಿಜಯಲಕ್ಷ್ಮಿ ಬಿ. ಶೆಟ್ಟಿ, ತಾರನಾಥ ಶೆಟ್ಟಿ ಬೋಳಾರ್, ಪ್ರಧಾನ ಕಾರ್ಯದರ್ಶಿ ಮುಚ್ಚಿ ಕರುಣಾಕರ ಶೆಟ್ಟಿ, ಕೋಶಾಧಿಕಾರಿ ಚಂದ್ರಹಾಸ ದೇವಾಡಿಗ, ರಾಜೇಶ್ ಆಳ್ವ, ಪ್ರಧಾನ ಕಾರ್ಯದರ್ಶಿ ಮುಲ್ಕಿ ಕರುಣಾಕರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ಕಾಂಗ್ರೆಸ್ ನಾಯಕರು ಹತಾಶರಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸುವ ಪ್ರಯತ್ನ ಮಾಡುತ್ತಿದ್ದಾರೆ -ನಳಿನ್ ಕುಮಾರ್ ಕಟೀಲ್ ಆರೋಪ

ಮಂಗಳೂರು: ಕಾಂಗ್ರೆಸ್ ನಾಯಕರು ಹತಾಶರಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಸಂಸದ ಹಾಗೂ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ. ನೈತಿಕತೆ ಇದ್ದರೆ ಸಿದ್ದರಾಮಯ್ಯ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ.ಮಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆಸಿರುವ ನಳಿನ್ ಕುಮಾರ್ ಕಟೀಲ್ ಮೂಡಾ ಹಗರಣ ದಲ್ಲಿ ಸಾವಿರಾರು ಕೋಟಿ ಲೂಟಿ ಆಗಿದೆ. ವಾಲ್ಮೀಕಿ ನಿಗಮದಲ್ಲೂ 187 ಕೋಟಿ ಹಗರಣ ಆಗಿದೆ. ಆದರೂ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅಧಿಕಾರದ ಆಸೆಗೆ ಆಂಟಿ ಕುಳಿತುಕೊಂಡಿದ್ದಾರೆ. ಸಿದ್ದರಾಮಯ್ಯ ನವರು ನೈತಿಕತೆ ಇದ್ದರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಲಿ ಎಂದು ಸವಾಲು ಹಾಕಿದರು. ಹೋರಾಟದ ನೆಪದಲ್ಲಿ ಕಾಂಗ್ರೆಸ್ ಆರಾಜಕತೆ ಸ್ರಷ್ಟಿಸಲು ಪ್ರಯತ್ನಿಸುತ್ತಿದೆ. ಕಾನೂನು ಸುವ್ಯವಸ್ಥೆ ಹದಗೆಡಳು ಕಾರಣವಾಗುತ್ತಿದೆ. ರಾಜ್ಯಪಾಲರ ನಡೆ ಸಮರ್ಥನಿಯವಾಗಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವ ರಾಜ್ಯಪಾಲರನ್ನು ನಿಂದಿಸುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Scroll to Top