ಪ್ರಾದೇಶಿಕ ವಾರ್ತೆಗಳು

ಪ್ರಾದೇಶಿಕ ವಾರ್ತೆಗಳು

ಜೂ.14 ರಂದು ರಕ್ತದಾನಿಗಳಿಗೆ ಸನ್ಮಾನ

ಮಂಗಳೂರು : ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ದಕ್ಷಿಣ ಕನ್ನಡ ಜಿಲ್ಲಾ ಶಾಖೆಯ ವತಿಯಿಂದ ಜೂ.೧೪ರಂದು ವಿಶ್ವ ರಕ್ತದಾನಿಗಳ ದಿನ ಆಚರಿಸಲಾಗುವುದು.ಕಾರ್ಯಕ್ರಮದ ಅಂಗವಾಗಿ ಅತಿ ಹೆಚ್ಚು ಬಾರಿ ರಕ್ತದಾನ ಮಾಡಿದ ರಕ್ತದಾನಿಗಳನ್ನು ಜಿಲ್ಲಾ ಮಟ್ಟದಲ್ಲಿ ಸನ್ಮಾನಿಸಲಾಗುವುದು. ಅತಿ ಹೆಚ್ಚು ಬಾರಿ ರಕ್ತದಾನ ಮಾಡಿದ ಜಿಲ್ಲೆಯ ಓರ್ವ ರಕ್ತದಾನಿಯನ್ನು ರೆಡ್‌ಕ್ರಾಸ್ ಸಂಸ್ಥೆ, ಕರ್ನಾಟಕ ರಾಜ್ಯ ಶಾಖೆ ವತಿಯಿಂದ ಬೆಂಗಳೂರಿನಲ್ಲಿ ವಿಶೇಷವಾಗಿ ಗೌರವಿಸಲಾಗುವುದು.10 ಅಥವಾ ಅದಕ್ಕಿಂತ ಹೆಚ್ಚು ಬಾರಿ ರಕ್ತದಾನ ಮಾಡಿದ ದ.ಕ.ಜಿಲ್ಲೆಯ ರಕ್ತದಾನಿಗಳು ತಮ್ಮ ರಕ್ತದಾನಕ್ಕೆ ಸಂಬಂಧಿಸಿದ ದಾಖಲೆಗಳನ್ನು ಜೂ.6ರ ಒಳಗಾಗಿ ಕಚೇರಿ ವಿಳಾಸ: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲಾ ಶಾಖೆ, “ಶತಮಾನೋತ್ಸವ ಕಟ್ಟಡ” ಹಳೇ ಜಿಲ್ಲಾಧಿಕಾರಿ ಕಚೇರಿ ಆವರಣ, ಓಲ್ಡ್ ಪೋರ್ಟ್ ರೋಡ್, ಮಂಗಳೂರು -575001 ಈ ವಿಳಾಸಕ್ಕೆ ಸಲ್ಲಿಸಬೇಕು. ಈ ಹಿಂದೆ ರೆಡ್‌ಕ್ರಾಸ್ ಸಂಸ್ಥೆಯಿಂದ ರಕ್ತದಾನಕ್ಕಾಗಿಸನ್ಮಾನಿತರಾದವರು ಆಯ್ಕೆಗೆ ಅರ್ಹರಾಗಿರುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.ದಾಖಲೆಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮೂಲಕವೂ ಕಳುಹಿಸಬಹುದಾಗಿದೆ.ವಾಟ್ಸಪ್ : 96068 66210e mail : ircsdkd@gmai.com

ಪ್ರಾದೇಶಿಕ ವಾರ್ತೆಗಳು

ಇಂದು ಡಾ.ಮಿಜಾರುಗುತ್ತು ಮೋಹನ ಆಳ್ವರಿಗೆ ಹುಟ್ಟುಹಬ್ಬ ದ ಸಂಭ್ರಮ.

ಮೂಡಬಿದ್ರೆ – ಮೇ 31.ಇಂದು ನಿಸ್ವಾರ್ಥ ಸಮಾಜ ಸೇವಕ, ಬಹುಮುಖ ಪ್ರತಿಭೆಯ ಸವ್ಯಸಾಚಿ, ಅಪೂರ್ವ ಸಾಧಕ, ಶಿಕ್ಷಣ, ಸಾಂಸ್ತ್ರತಿಕ, ಕ್ರೀಡಾ ಕ್ಷೇತ್ರಗಳ ಮಹಾನ್ ಪೋಷಕ, ಮೂಡಬಿದ್ರೆ ಅಭಿವೃದ್ಧಿಯ ಹರಿಕಾರ, ಅದ್ಭುತ ವಾಗ್ಮಿ, ಸಾಹಿತ್ಯ, ಜಾನಪದ ಲೋಕದ ಅಪೂರ್ವ ಸಿರಿ, ಅಂತಾರಾಷ್ಟ್ರೀಯ ಖ್ಯಾತಿಯ ಸರಿಸಾಟಿ ಇಲ್ಲದ ಅದ್ವಿತೀಯ ಸಂಘಟಕ, ಮಾನವೀಯ ಮೌಲ್ಯಗಳಿಗೆ ಜೀವ ತುಂಬುವ ಕರುಣಾಮೂರ್ತಿ, ಬಡವರ ಬಂಧು, ವಿದ್ಯಾ ದಾನಿ, ಕಲಾ ಪೋಷಕ, ಸಮಯಪಾಲಕ,ನುಡಿದಂತೆ ನಡೆವ ನೇರ ನಡೆ ನುಡಿಯ ಸೌಹಾರ್ದ ವ್ಯಕ್ತಿತ್ವದ ಮಾನವತಾವಾದಿ. ಸರ್ವ ಧರ್ಮಿಗಳ ನೆಚ್ಚಿನ ಸರದಾರ, ಬಂಟ ಸಮಾಜದ ಅಪೂರ್ವ ಮುತ್ತು, ದಿಟ್ಟ ನಡಿಗೆಯ ಅಜಾತ ಶತ್ರು, ದಣಿವರಿಯದ ನಾಯಕ, ರಾಷ್ಟ್ರ, ಅಂತಾರಾಷ್ಟ್ರೀಯ ಖ್ಯಾತಿಯ ಹೆಸರಾಂತ ಮೂಡಬಿದ್ರೆ ಆಳ್ವಾಸ್ ಎಜುಕೇಶನ್ ಸಂಸ್ಥೆ ಯ ಸ್ಥಾ ಪಕ ಅಧ್ಯಕ್ಷರಾಗಿರುವ ಡಾ. ಮಿಜಾರುಗುತ್ತು ಡಾ. ಮೋಹನ ಆಳ್ವ ಅವರಿಗೆ 75ನೇ ಹುಟ್ಟುಹಬ್ಬದ ಸಂಭ್ರಮ. ಡಾ. ಮಿಜಾರುಗುತ್ತು ಮೋಹನ್ ಆಳ್ವರ ಹುಟ್ಟುಹಬ್ಬಕ್ಕೆ ಎಂಪಿ ಎಂಎಲ್ ಎ ಸಂಪಾದಕ ಡಾ.ಅಶೋಕ್ ಶೆಟ್ಟಿ ಬಿ. ಎನ್. ಅವರು ಶುಭ ಹಾರೈಸಿದ್ದಾರೆ

ಪ್ರಾದೇಶಿಕ ವಾರ್ತೆಗಳು

ಸತ್ಯದ ಅನಾವರಣ ಮಾಧ್ಯಮದ ಜವಾಬ್ದಾರಿ-ಪಿ.ಬಿ.ಹರೀಶ್ ರೈ

ಮಂಗಳೂರು: ಮಾಧ್ಯಮವು ಸಮಾಜದ ಕೈಗನ್ನಡಿ. ಮಾಧ್ಯಮಗಳು ಸಮಾಜದ ನೈಜ ಚಿತ್ರಣವನ್ನು, ಆಗುಹೋಗುಗಳನ್ನು, ಸಾಧನೆ ಮತ್ತು ಸಮಸ್ಯೆಗಳನ್ನುನೇರವಾಗಿ ಜನತೆಗೆ ತಲುಪಿಸುತ್ತಿವೆ. ಸತ್ಯದ ಅನಾವರಣ ಮಾಧ್ಯಮದ ಜವಾಬ್ದಾರಿ ಎಂದು ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಹೇಳಿದರು.ರೋಟರಿ ಕ್ಲಬ್ ಮಂಗಳೂರು ನಾರ್ತ್ ಇದರ ವತಿಯಿಂದ ನಗರದ ಮಲ್ಲಿಕಟ್ಟೆಯ ರೋಟರಿ ಬಾಲ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾಧ್ಯಮ ಮತ್ತು ಸಮಾಜ ವಿಷಯದ ಬಗ್ಗೆ ಉಪನ್ಯಾಸ ನೀಡಿದರು,ಇಂದಿನ ವಿದ್ಯಾಥಿಗಳು , ಯುವ ಜನತೆ ಓದಿನಿಂದ ವಿಮುಖರಾಗುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಬರುವ ಎಲ್ಲ ವಿಚಾರಗಳು ಸತ್ಯ ಎಂದು ನಂಬುವ ಸ್ಥಿತಿ ಇದೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ. ದಿನ ಪತ್ರಿಕೆಗಳು ನೈಜ ಸುದ್ದಿಯ ಜತೆಗೆ ಜ್ಞಾನದ ಆಗರವಾಗಿದೆ. ಪತ್ರಿಕೆ ಓದುವಂತೆ ಮಕ್ಕಳನ್ನು ಪ್ರೇರೇಪಿಸುವುದುಹಿರಿಯರ ಜವಾಬ್ದಾರಿ ಎಂದು ಅವರು ಹೇಳಿದರು.ರೋಟರಿ ಕ್ಲಬ್ ಮಂಗಳೂರು ನಾರ್ತ್ ಅಧ್ಯಕ್ಷ ಡಾ.ಅರುಣ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಶಾಂಭವಿ ಪ್ರಭು, ನಿಕಟಪೂರ್ವ ಅಧ್ಯಕ್ಷ ಮೋಹನ್ ನಾಯರ್, ನಿಯೋಜಿತ ಅಧ್ಯಕ್ಷ ಸುದರ್ಶನ್ ನಾಯಕ್ , ಡಾ.ಸತೀಶ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಆರ್.ಎಂ.ಗೊಗೆರಿ ಮುಖ್ಯ ಅತಿಥಿಯನ್ನು ಪರಿಚಯಿಸಿದರು. ಗಣೇಶ್ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ಉರುಮಣೆ ಶಾಲೆಯಲ್ಲಿ ಎನ್ ಎಸ್ ಎಸ್ ಕಾರ್ಯಾಗಾರ; ಶೈಕ್ಷಣಿಕ ಸಾಮಾಗ್ರಿ ವಿತರಣೆ

ಮಂಜನಾಡಿ,ಮೇ,25ಮಂಗಳೂರು ವಿಶ್ವವಿದ್ಯಾನಿಲಯದ ನೆಹರು ಚಿಂತನ ಕೇಂದ್ರ ಮತ್ತು ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ,ವಿಶ್ವವಿದ್ಯಾನಿಲಯ ಕಾಲೇಜು, ಮಂಗಳಗಂಗೋತ್ರಿಯ ಸಹಯೋಗ ದೊಂದಿಗೆ ಒಂದು ದಿನದ ಎನ್. ಎಸ್. ಎಸ್ ಕಾರ್ಯಾಗಾರ ಸೋಮವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾ ಯತ್ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಉರುಮಣೆ ಯಲ್ಲಿ ನಡೆಯಿತು. ಉರುಮಣೆ ಶಾಲೆಯ ಆಟದ ಮೈದಾನ ಮಕ್ಕಳಿಗೆ ಆಟಕ್ಕೆ ಯೋಗ್ಯವಂತೆ ಶಾಲಾ ಆಟದ ಮೈದಾನವನ್ನು ಸರಿಪಡಿಸುವ ಮತ್ತು ಸ್ವಚ್ಚತಾ ಕಾರ್ಯ ನಡೆಯಿತು. ವಿಶ್ವವಿದ್ಯಾನಿ ಲಯ ಕಾಲೇಜಿನ ವಿದ್ಯಾರ್ಥಿ ಗಳು ಬೆಳಗ್ಗಿನಿಂದ ಸಂಜೆಯ ತನಕ ಶ್ರಮದಾನ ವನ್ನು ನಡೆಸಿದರು. ಕಾರ್ಯಕ್ರಮದ ಕೊನೆಯಲ್ಲಿ ನೆಹರು ಚಿಂತನ ಕೇಂದ್ರದ ನಿರ್ದೇಶಕರಾದ ಪ್ರಶಾಂತ್ ನಾಯ್ಕ ಮತ್ತು ರೋಟರಿ ಕ್ಲಬ್ ನ ಅಧ್ಯಕ್ಷರಾದ ಭಾಸ್ಕರ್ ರೈ ರವರು ತರಕಾರಿ ಗಿಡಗಳನ್ನು ನೆಡುವ ಮೂಲಕ ಶ್ರಮದಾನದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಧನ್ಯವಾದ ಸಮರ್ಪಿಸಿದರು.ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್ ,ರೋಟರಿ 3180 ಮಾಜಿ ಗವರ್ನರ್ ಡಾ. ದೇವದಾಸ್ ರೈ ಭಾಗವಹಿಸಿದ್ದರು. ವಿಶ್ವವಿದ್ಯಾನಿಲಯ ಕಾಲೇಜಿನ ಎನ್. ಎಸ್. ಎಸ್ ಅಧಿಕಾರಿ ಶೇಷಶಯನ ಹೆಚ್. ವಿ, ನೆಹರು ಚಿಂತನ ಕೇಂದ್ರದ ಸಂಶೋಧನ ಸಹಾಯಕಿ ಡಾ. ನಯನ ಕೃಷ್ಣಾಪುರ, ಸಂಧ್ಯಾ ಅಂಚನ್, ಉರುಮನೆ ಶಾಲೆಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೆ. ಎಲ್ ಅಶ್ರಫ್, ಶಾಲೆಯ ಮುಖ್ಯೋಪಾಧ್ಯಾಯಿನಿ ಗೀತಾ ಪಿ. ಕಾರ್ಯ ಕ್ರಮದಲ್ಲಿ ಉಪಸ್ಥಿತರಿದ್ದರು.ಇದೇ ಸಂದರ್ಭದಲ್ಲಿ ಉರುಮಣೆ ಶಾಲಾ ವಿದ್ಯಾರ್ಥಿ ಗಳಿಗೆ ಶೈಕ್ಷಣಿಕ ಸಾಮಾಗ್ರಿಗಳನ್ನು ವಿತರಿಸಲಾಯಿತು.

ಪ್ರಾದೇಶಿಕ ವಾರ್ತೆಗಳು

ನಗರದಲ್ಲಿ ಸುರಕ್ಷತಾ ಸಂಕಲ್ಪ ಜಾಥ

ಮಂಗಳೂರು,ಮೇ.26;ನಗರದ ಬೆಸೆಂಟ್ ಮಹಿಳಾ ಕಾಲೇಜಿನಿಂದ ಪಿವಿಎಸ್ ವೃತ್ತದ ವರೆಗೆ ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಮತ್ತು ಬೆಸೆಂಟ್ ಮಹಿಳಾ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ಮಂಗಳವಾರ ಸುರಕ್ಷಾ ಸಂಕಲ್ಪ ಜಾಥ ನಡೆಯಿತು.ಮಂಗಳೂರು ಪೊಲೀಸ್ ಕಮೀಷನರೇಟ್ ಸಂಚಾರ ವಿಭಾಗದ ಎಸಿಪಿ ಗೀತಾ ಕುಲಕರ್ಣಿಸುರಕ್ಷಾ ಜಾಥಾಕ್ಕೆ ಚಾಲನೆ ನೀಡಿ ಮಾತನಾ ಡುತ್ತಾ,ರಸ್ತೆ ಸಂಚಾರ ನಿಯಮದ ಪಾಲನೆ ಯಿಂದ ನಮ್ಮ ಜೀವದ ರಕ್ಷಣೆಯ ಜೊತೆ ಇತರರ ಜೀವವನ್ನು ಉಳಿಸಬಹುದು. ಸಂಚಾರ ನಿಯಮದ ಪಾಲನೆಯಲ್ಲಿ ಎಚ್ಚರ ತಪ್ಪಿದಾಗ ಅಮಾಯಕರು ವಾಹನ ಅಪಘಾತಕ್ಕೀಡಾಗಿ ಬಲಿಯಾದ ಉದಾಹರಣೆಗಳಿವೆ.ನಾಗರೀಕರಿಗೂ ರಸ್ತೆ ಸಂಚಾರ ನಿಯಮಗಳ ಬಗ್ಗೆ ಜಾಗೃತಿ ಅಗತ್ಯವಿದೆ. ಇದರಿಂದಲೂ ಸಾಕಷ್ಟು ಅಪಘಾತಗಳನ್ನು ತಪ್ಪಿಸಲು ಸಾಧ್ಯವಿದೆಈ ಹಿನ್ನೆಲೆಯಲ್ಲಿ ಸುರಕ್ಷತಾ ಜಾಥ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದರು.ಸಮಾರಂಭದಲ್ಲಿ ಮಂಗಳೂರು ರೋಟರಿ ಕ್ಲಬ್ ಸೆಂಟ್ರಲ್ ಅಧ್ಯಕ್ಷ ಭಾಸ್ಕರ ರೈ ಕಟ್ಟ ಅಧ್ಯಕ್ಷ ತೆ ವಹಿಸಿದ್ದರು.ಸಮಾರಂಭದಲ್ಲಿಬೆಸೆಂಟ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಪ್ರವೀಣ್ ಕುಮಾರ್ ಕೆ.ಸಿ,ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತ ರ ಸಂಘದ ಅಧ್ಯಕ್ಷ ಪುಷ್ಪರಾಜ್. ಬಿ.ಎನ್, ರೋಟರಿ ಜಿಲ್ಲೆ 3180 ಮಾಜಿ ಗವರ್ನರ್ ರಾಜ ಗೋಪಾಲ್ ರೈ,ರೋಟರಿ ಝೋನಲ್ ಲೆಫ್ಟಿನೆಂಟ್ ರವಿಜಲನ್,ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯ ಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ, ರೋಟರಿ ಸೆಂಟ್ರಲ್ ನಿಯೋಜಿತ ಅಧ್ಯಕ್ಷ ರವೀಂದ್ರ ಬಿ ಎನ್, ರೋಟರಿ ಪೂರ್ವಾ ಧ್ಯಕ್ಷ ರಾಜೇಶ್ ಶೆಟ್ಟಿ ಮೊದಲಾ ದವರು ಉಪಸ್ಥಿತರಿದ್ದರು.ಬೆಸೆಂಟ್ ಮಹಿಳಾ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮ ಅಧಿಕಾರಿ ದೀಕ್ಷಿತಾ ಸ್ವಾಗತಿಸಿ ದರು,ಕಾರ್ಯದರ್ಶಿ ಅಂಚಲ್ ಕೃತಜ್ಞತೆ ಸಲ್ಲಿಸಿದರು.ಎಸಿಪಿ ಗೀತಾ ಕುಲಕರ್ಣಿ ಹಾಗೂ ಟ್ರಾಫಿಕ್ ಪೊಲೀಸ್ ಸಬ್ ಇನ್ಸಪೆಕ್ಟರ್ ಮಂಜುಳಾ,ಅಸಿಸ್ಟೆಂಟ್ ಸಬ್ ಇನ್ಸಪೆಕ್ಟರ್ ಭುವನೇಶ್ , ಸುರಕ್ಷಾ ಜಾಥದ ಬಗ್ಗೆ ವಿದ್ಯಾರ್ಥಿ ಗಳಿಗೆ ಮಾರ್ಗದ ರ್ಶನ ನೀಡಿದರು.ಬೆಸೆಂಟ್ ಮಹಿಳಾ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಸದಸ್ಯರು ಜಾಥದಲ್ಲಿ ಮಾಹಿತಿ ಫಲಕದ ಜೊತೆ ಭಾಗವ ಹಿಸಿದ್ದರು

ಪ್ರಾದೇಶಿಕ ವಾರ್ತೆಗಳು

ಹಿರಿಯ ನಾಟಕಕಾರ, ಸಿನಿಮಾ ನಿರ್ಮಾಪಕ ಡಾ.ಸಂಜೀವ ದಂಡಕೇರಿ ಅವರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ

ಬೆಂಗಳೂರು: ಕಳೆದ ಬಾರಿ ಸುವರ್ಣ ಸಂಭ್ರಮವನ್ನಾಚರಿಸಿದ ಅಂತಾರಾಷ್ಟ್ರೀಯ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು ತನ್ನ 51ನೇ ವರ್ಷದ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ ಸಮಾರಂಭವನ್ನು 2026 ಮೇ 23ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಏರ್ಪಡಿಸಿತ್ತು. ಕಾರ್ಯಕ್ರಮವನ್ನು ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ನ್ಯಾಯಮೂರ್ತಿ ರಾಜೇಂದ್ರ ಬಾದಾಮಿಕರ್ ದೀಪ ಬೆಳಗಿ ಉದ್ಘಾಟಿಸಿದರು.ಸಮಾರಂಭದಲ್ಲಿ ತುಳು ರಂಗಭೂಮಿ ಸಿನಿಮಾರಂಗ, ಉದ್ಯಮ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಮಹತ್ವದ ಸೇವೆ ಸಲ್ಲಿಸಿದ ಬಯ್ಯಮಲ್ಲಿಗೆ ಖ್ಯಾತಿಯ ಹಿರಿಯ ನಾಟಕಕಾರ ಡಾ.ಸಂಜೀವ ದಂಡಕೇರಿ ಅವರಿಗೆ ಈ ಬಾರಿಯ ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ದಂಡಕೇರಿಯವರ ಪತ್ನಿ ಜಲಜಾಕ್ಷಿ ದಂಡಕೇರಿ ಮತ್ತು ಕುಟುಂಬ ಸದಸ್ಯರು ಸಮಾರಂಭದಲ್ಲಿ ಪಾಲ್ಗೊಂಡರು. ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ. ಹೆಚ್.ಎಲ್.ಎನ್. ರಾವ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಬೆಂಗಳೂರು ದೂರದರ್ಶನ ಕೇಂದ್ರದ ವಿಶ್ರಾಂತ ಹೆಚ್ಚುವರಿ ಮಹಾನಿರ್ದೇಶಕ ನಾಡೋಜ ಡಾ. ಮಹೇಶ್ ಜೋಶಿ, ಖ್ಯಾತ ವಿದ್ವಾಂಸ, ವಿದ್ಯಾ ವಾಚಸ್ಪತಿ ಡಾ.ಅರಳುಮಲ್ಲಿಗೆ ಪಾರ್ಥಸಾರಥಿ ಮುಖ್ಯ ಅತಿಥಿಗಳಾಗಿದ್ದರು. ಸ್ವಾಗತ ಸಮಿತಿಯ ಡಾ. ಕೆ.ಎನ್ ಅಡಿಗ ಅಡೂರು, ಗುರುರಾಜ್, ಡಾ. ಬಸವರಾಜು, ಎಚ್.ಎಸ್. ಹನುಮಂತ ರಾವ್, ಸುಮಾ, ವಿ.ನಾಗೇಂದ್ರ, ಮಂಗಳೂರಿನ ಪ್ರತಿನಿಧಿ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಮೊದಲಾದವರು ಉಪಸ್ಥಿತರಿದ್ದರು.ಆರ್ಯಭಟ ನೃತ್ಯೋತ್ಸವದೊಂದಿಗೆ ಜರಗಿದ ವರ್ಣರಂಜಿತ ಸಮಾರಂಭದಲ್ಲಿ ರಾಜ್ಯ,ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 72ಮಂದಿ ಹಿರಿಯ ಸಾಧಕರಿಗೆ 2025 – 26 ನೇ ಸಾಲಿನ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಯನ್ನು ವಿತರಿಸಲಾಯಿತು.ಸಂಸ್ಥೆಯ ಅಧ್ಯಕ್ಷ ಡಾ.ಎಚ್.ಎಲ್.ಯನ್.ರಾವ್ ಸ್ವಾಗತಿಸಿ ಪ್ರಸ್ತಾವನೆಗೈದರು. ಕಾರ್ಯದರ್ಶಿ ಡಾ.ಬಸವರಾಜು ವಂದಿಸಿದರು. ಸಾರ್ಥವಳ್ಳಿ ನಾರಾಯಣಸ್ವಾಮಿ ಮತ್ತು ಆರ್.ವೆಂಕಟರಾಜು ಕಾರ್ಯಕ್ರಮ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ನಿರಂತರ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮ

ಮಂಗಳೂರು : ಕೆ.ಎಸ್. ಹೆಗ್ಡೆ ವೈದ್ಯಕೀಯ ಅಕಾಡೆಮಿಯಲ್ಲಿ “ಐಡಿಯಾದಿಂದ ಪ್ರಕಟಣೆಯವರೆಗೆ” ವಿಷಯದ ಕುರಿತು ನಿರಂತರ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿದ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಪ್ರೊ.ಚಾನ್ಸೆಲರ್ ಡಾ.ಎಂ. ಶಾಂತಾರಾಮ್ ಶೆಟ್ಟಿ ಮಾತನಾಡಿ ” ಆಧುನಿಕ ವೈದ್ಯಕೀಯ ಶಿಕ್ಷಣ ಹಾಗೂ ರೋಗಿಗಳ ಆರೈಕೆಯಲ್ಲಿ ಸಂಶೋಧನೆ, ನಾವೀನ್ಯತೆ ಮತ್ತು ಗುಣಮಟ್ಟದ ವೈಜ್ಞಾನಿಕ ಪ್ರಕಟಣೆಗಳ ಪ್ರಾಮುಖ್ಯತೆ ಹೆಚ್ಚಿದೆ. ಯುವ ಸಂಶೋಧಕರು ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಶೈಕ್ಷಣಿಕ ಬರವಣಿಗೆ ಹಾಗೂ ಪುರಾವೆ ಆಧಾರಿತ ಸಂಶೋಧನಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸ ಬೇಕು’ಎಂದರು.ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಅರ್ಥೋಪೆಡಿಕ್ ಅಸೋಸಿಯೇಶನ್ ಅಧ್ಯಕ್ಷ ಡಾ.ಬಿ.ಸಚ್ಚಿದಾನಂದ ರೈ ಮಾತನಾಡಿ ” ವೈದ್ಯಕೀಯ ಸಂಶೋಧನೆ ಮತ್ತು ವೈಜ್ಞಾನಿಕ ಪ್ರಕಟಣೆಗಳಲ್ಲಿ ಆಸಕ್ತಿ ಹೊಂದಿರುವ ಅಧ್ಯಾಪಕರು, ವೈದ್ಯರು ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳನ್ನು ಒಟ್ಟುಗೂಡಿಸಲು ನಿರಂತರ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದೆ’ ಎಂದರು.ಕೆ.ಎಸ್. ಹೆಗ್ಡೆ ವೈದ್ಯಕೀಯ ಅಕಾಡೆಮಿಯ ಮೂಳೆಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ವಿಕ್ರಮ್ ಶೆಟ್ಟಿ ಸ್ವಾಗತಿಸಿದರು. ಸಂಶೋಧನಾ ವಿಧಾನ, ಹಸ್ತಪ್ರತಿ ತಯಾರಿಕೆ, ನೈತಿಕ ಪ್ರಕಾಶನ ಅಭ್ಯಾಸಗಳು ಮತ್ತು ಸೂಚ್ಯಂಕಿತ ನಿಯತಕಾಲಿಕೆಗಳಲ್ಲಿ ಯಶಸ್ವಿ ಪ್ರಕಟಣೆಗಾಗಿ ತಂತ್ರಗಳ ಕುರಿತು ತಜ್ಞರು ಮಾಹಿತಿ ನೀಡಿದರು.

ಪ್ರಾದೇಶಿಕ ವಾರ್ತೆಗಳು

ಉರ್ವದಲ್ಲಿ ಅಂಚೆ ಜನ ಸಂಪರ್ಕ ಅಭಿಯಾನ

ಮಂಗಳೂರು : ಮಂಗಳೂರು ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್ ಮತ್ತು ಭಾರತೀಯ ಅಂಚೆ ಇಲಾಖೆ ಮಂಗಳೂರು ವಿಭಾಗದ ಸಹಯೋಗದಲ್ಲಿ ನಗರದ ಉರ್ವದ ಕಬಡ್ಡಿ ಒಳಾಂಗಣ ಕ್ರೀಡಾಂಗಣದಲ್ಲಿ ಅಂಚೆ ಜನ ಸಂಪರ್ಕ ಅಭಿಯಾನ, ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರ ನಡೆಯಿತು.ಕರ್ನಾಟಕ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಅಧ್ಯಕ್ಷ ರಾಕೇಶ್ ಮಲ್ಲಿ ಕಾರ್ಯಕ್ರಮ ಉದ್ಘಾಟಿಸಿದರು. ಮಂಗಳೂರು ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್‌ನ ಅಧ್ಯಕ್ಷ ದಿನಕರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಯಾಗಿದ್ದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜ ಮಾತನಾಡಿ “ಮಂಗಳೂರು ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್ ಉರ್ವಒಳಾಂಗಣ ಕ್ರೀಡಾಂಗಣದಲ್ಲಿ ಮಕ್ಕಳಿಗೆ ಉಚಿತ ಕಬಡ್ಡಿ ತರಬೇತಿ ಶಿಬಿರ ಸಂಘಟಿಸುವ ಮೂಲಕ ಎಳೆಯ ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಿತ್ತು. ಈಗ ಸಾರ್ವಜನಿಕರಿಗೆ ಅನುಕೂಲವಾಗಲುಅಂಚೆ ಜನಸಂಪರ್ಕ ಮತ್ತು ಅಪಘಾತ ವಿಮೆ ಹಾಗೂ ಆಧಾರ್ ತಿದ್ದುಪಡಿಯ ಶಿಬಿರ ನಡೆಸುತ್ತಿರುವುದು ಶ್ಲಾಘನೀಯ ಎಂದರು.ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಶನ್‌ನ ಗೌರವ ಸಲಹೆಗಾರರಾದ ಪುರುಷೋತ್ತಮ್ ಪೂಜಾರಿ ಮತ್ತು ರತನ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಬಿಲ್ಲವ ಸಂಘದ ಉಪಾಧ್ಯಕ್ಷವೆಂಕಟೇಶ್‌ದಾಸ್ , ಯೋಗೀಶ್ ಬೋಳೂರು. ಸಚಿನ್ ಬಂಗೇರ. ಯಶವಂತ ಮಾಡ. ವಿಕ್ರಂ ಹೊಯ್ಗೆಬೈಲ್. ಜೀವನ್ ಪೂಜಾರಿ ಹೊಯ್ಗೆಬೈಲ್. ಕಬೀರ್ ಕೊಂಚಾಡಿ. ರಂಜನ್ ಶೆಟ್ಟಿ ಉಪಸ್ಥಿತರಿದ್ದರು. ಮಂಗಳೂರು ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್‌ನ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ಅಶೋಕನಗರ ಕಾರ್ಯಕ್ರಮ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ಪತ್ತನಾಜೆಯಲ್ಲಿ ಕೃಷಿ ಸಂಸ್ಕೃತಿ ಅಂತರ್ಗತ – ಯುವ ವಾಗ್ಮಿ ವಿಜೇತ್ ಶೆಟ್ಟಿ ಮಂಜನಾಡಿ

ಮಂಗಳೂರು : ಪತ್ತನಾಜೆ ಆಚರಣೆಯ ಹಿಂದೆ ಈ ನೆಲದ ನಂಬಿಕೆ ಮತ್ತು ಕೃಷಿ ಸಂಸ್ಕೃತಿ ಅಂತರ್ಗತವಾಗಿದೆ. ಸಾಂಪ್ರದಾಯಿಕ ಜಾತ್ರೆ, ಉತ್ಸವ, ದೈವಾರಾಧನೆ, ಯಕ್ಷಗಾನ ಮೇಳಗಳ ತಿರುಗಾಟಕ್ಕೆ ತೆರೆ ಎಳೆಯುವ ಕೃಷಿ ವರ್ಗದ ಜನರು ಕೃಷಿ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಗಡುವಿನಂತೆ ಪತ್ತನಾಜೆಯನ್ನು ಆಚರಿಸುತ್ತಾರೆ. ಇದೊಂದು ಕಾಲ ನಿರ್ಣಯದ ಮಹತ್ವವನ್ನು ಪಡೆದಿದೆ ಎಂದು ಯುವ ವಾಗ್ಮಿ ವಿಜೇತ್ ಶೆಟ್ಟಿ ಮಂಜನಾಡಿ ಹೇಳಿದರು.ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಮಂಗಳೂರು ತಾಲೂಕು ಸಮಿತಿ ಹಾಗೂ ಥಿಯಾಸೋಫಿಕಲ್ ಸೊಸೈಟಿ ಮಂಗಳೂರು ಸಹಯೋಗದಲ್ಲಿ ನಗರದ ಥಿಯಾಸೋಫಿಕಲ್ ಸೊಸೈಟಿ ಸಭಾಂಗಣದಲ್ಲಿನಡೆದ ಕಾರ್ಯಕ್ರಮದಲ್ಲಿ ಅವರು ಪತ್ತನಾಜೆ ಆಚರಣೆ ವಿಷಯದ ಬಗ್ಗೆ ಉಪನ್ಯಾಸ ನೀಡಿದರು.ಮುಖ್ಯ ಅತಿಥಿಯಾಗಿದ್ದ ವಿದ್ವಾನ್ ತುಪ್ಪೆಕಲ್ಲು ನರಸಿಂಹ ಶೆಟ್ಟಿ ಮಾತನಾಡಿ ” ಚೆನ್ನಾಗಿ ಫಸಲು ಬರಲು ನೈಸರ್ಗಿಕ ಕ್ರಮವನ್ನು ಅಳವಡಿಸುವ ಮಹತ್ವದ ವಿಚಾರ ಪತ್ತನಾಜೆ ಆಚರಣೆಯ ಹಿಂದೆ ಇದೆ ಎಂದರು.ಅಭಾಸಾಪ ಮಂಗಳೂರು ತಾಲೂಕು ಸಮಿತಿ ಅಧ್ಯಕ್ಷೆ ಡಾ. ಮೀನಾಕ್ಷಿ ರಾಮಚಂದ್ರ ಅಧ್ಯಕ್ಷತೆ ವಹಿಸಿದ್ದರು. ಅಭಾಸಾಪ ಮಂಗಳೂರು ವಿಭಾಗ ಸಂಯೋಜಕ ಸುಂದರ ಶೆಟ್ಟಿ, ವಿದ್ವಾಂಸ ಡಾ. ಪ್ರಭಾಕರ ಜೋಷಿಉಪಸ್ಥಿತರಿದ್ದರು. ಅಭಾಸಾಪ ಕಾರ್ಯದರ್ಶಿ ಪ್ರೊ. ಶೈಲಜಾ ಪುದುಕೋಳಿ ಸ್ವಾಗತಿಸಿ, ಯಶೋದಾ ಕುಮಾರಿ ವಂದಿಸಿದರು. ಉಷಾ ಕುಮಾರಿ ಕಾರ್ಯಕ್ರಮ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ಮಂಗಳೂರು ಸೆಂಟ್ರಲ್ ವತಿಯಿಂದ ಯುವ ಕ್ರೀಡಾ ಪ್ರತಿಭೆ ದೀಕ್ಷಿತ ರಾಮಕೃಷ್ಣ ಗೌಡಗೆ ಸನ್ಮಾನ

ಮಂಗಳೂರು,ಮೇ.24;ಮಂಗಳೂರು ರೋಟರಿ ಸೆಂಟ್ರಲ್ ವತಿಯಿಂದ ಆಳ್ವಾಸ್ ಕಾಲೇಜು ಮೂಡುಬಿದಿರೆ ಇಲ್ಲಿನ ವಿದ್ಯಾರ್ಥಿರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ ಯುವ ಕ್ರೀಡಾ ಪ್ರತಿಭೆ ಅಥ್ಲೆಟ್ ದೀಕ್ಷಿತ ರಾಮಕೃಷ್ಣ ಗೌಡ ಇವರನ್ನು ರವಿವಾರ ನಗರದ ಸಿ ವ್ಯೂವ್ ಹೊಟೇಲ್ ಸಭಾಂಗಣದಲ್ಲಿ ಸನ್ಮಾನಿಸಲಾಯಿತು.ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಅಧ್ಯಕ್ಷ ಭಾಸ್ಕರ್ ರೈ ಕಟ್ಟ , ಕಾರ್ಯದರ್ಶಿ ವಿಕಾಸ್ ಕೋಟ್ಯಾನ್ , ರೋಟರಿ 3180 ಜಿಲ್ಲಾ ಮಾಜಿ ಗವರ್ನರ್ ಡಾ ದೇವದಾಸ್ ರೈ , ಝೋನಲ್ ಲೆಫ್ಟಿನೆಂಟ್ ರವಿ ಜಲನ್ ,ಕೋಶ ಧಿಕಾರಿ ರಾಜೇಶ್ ಸೀತಾರಾಂ, ನಿಕಟ ಪೂರ್ವ ಅಧ್ಯಕ್ಷ ಬ್ರಾಯನ್ ಪಿಂಟೋ, ನಿಯೋಜಿತ ಅಧ್ಯಕ್ಷ ರವೀಂದ್ರ ಬಿ. ಎನ್. , ರೋಟರಿ ಸದಸ್ಯ ರಾದ ಗೀತಾ ಬಿ ರೈ, ರೂಪಾ ಶೆಟ್ಟಿ, , ನೀಲo ಜಲನ್ , ಆರತಿ ಶೇಟ್ ರೂಪ ಶೆಟ್ಟಿ ,ಡಾ. ಜ್ಯೋತಿ ,ವಿದ್ಯಾ.ಆರ್ ವೀಣಾ , ಪ್ರಮೀಳಾ ಶೆಟ್ಟಿ ಮತ್ತು ಇತರ ಸದಸ್ಯರು ಉಪಸ್ಥಿತರಿದ್ದರು

Scroll to Top