ರಾಷ್ಟ್ರೀಯ ವಾರ್ತೆಗಳು

ರಾಷ್ಟ್ರೀಯ ವಾರ್ತೆಗಳು

ಎಲ್ಲ ವರ್ಗದ ಜನತೆಯ ಹಿತ ಕಾಯುವ ಬಜೆಟ್ : ನಳಿನ್ ಕುಮಾರ್ ಕಟೀಲ್.

ನವದೆಹಲಿ : ರೈತರು, ಮಹಿಳೆಯರು, ಉದ್ದಿಮೆದಾರರ ಸಹಿತ ಎಲ್ಲ ವರ್ಗದ ಜನತೆಯ ಹಿತ ಕಾಯುವ ಬಜೆಟ್ ಮಂಡನೆಯಾಗಿದೆ. ಕೇಂದ್ರ ಸರ್ಕಾರದ ವಿಕಸಿತ ಭಾರತ ಸಂಕಲ್ಪಕ್ಕೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ಭದ್ರ ತಳಪಾಯ ಹಾಕಿದೆ. ಗ್ರಾಮೀಣಾಭಿವೃದ್ಧಿಗೆ 2.66 ಲಕ್ಷ ಕೋಟಿ ರೂ., ಶಿಕ್ಷಣ,ಉದ್ಯೋಗ ಮತ್ತು ಕೌಶಲಾಭಿವೃದ್ಧಿಗೆ 1.48 ಲಕ್ಷ ಕೋಟಿ ರೂ., ಮಹಿಳೆಯರ ಅಭಿವೃದ್ಧಿಗೆ 3 ಲಕ್ಷ ಕೋಟಿ ರೂ., ಕೃಷಿ ವಲಯಕ್ಕೆ 1.52 ಲಕ್ಷ ರೂ. ಮೀಸಲಿರಿಸುವ ಮೂಲಕ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ದಿಟ್ಟ ಕ್ರಮ ಕೈಗೊಳ್ಳಲಾಗಿದೆ. ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಮುದ್ರಾ ಯೋಜನೆಯ ಸಾಲದ ಮಿತಿ ಏರಿಕೆ ಸ್ವಾಗತಾರ್ಹವೆಂದು , ಮಾಜಿ ಸಂಸದ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕೇಂದ್ರ ಬಜೆಟ್ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.

ರಾಷ್ಟ್ರೀಯ ವಾರ್ತೆಗಳು

“ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣ” ವಚನ ಸ್ವೀಕರಿಸಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

ದೆಹಲಿ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸದಸ್ಯರಾಗಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಸೋಮವಾರ ಪ್ರಮಾಣ ವಚನ ಸ್ವೀಕಾರ ಮಾಡಿದರು.ಸೋಮವಾರ ಲೋಕಸಭೆಯಲ್ಲಿ ಅವರು ಕನ್ನಡದಲ್ಲಿ ಮಾಡಿದ ಪ್ರಮಾಣವಚನದಲ್ಲಿ ತುಳುನಾಡಿನ ದೈವ ದೇವರನ್ನು ಸ್ಮರಿಸಿದ್ದು ವಿಶೇಷವಾಗಿತ್ತು. “ನಾನು ಕ್ಯಾಪ್ಟನ್ ಬ್ರಿಜೇಶ್ ಚೌಟ ಲೋಕಸಭೆಯ ಸದಸ್ಯನಾಗಿ ಚುನಾಯಿತನಾದವನಾಗಿ ಕಾನೂನಿನ ಮೂಲಕ ಸ್ಥಾಪಿತವಾದ ಭಾರತದ ಸಂವಿಧಾನದ ವಿಷಯದಲ್ಲಿ ನಿಜವಾದ ಶ್ರದ್ದೆ ಮತ್ತು ನಿಷ್ಠೆಯನ್ನು ಹೊಂದಿರುತ್ತೇನೆಂದೂ, ಭಾರತದ ಸಾರ್ವಭೌಮತ್ವವನ್ನು ಮತ್ತು ಅಖಂಡತೆಯನ್ನು ಎತ್ತಿಹಿಡಿಯುತ್ತೇನೆಂದೂ ಮತ್ತು ನಾನು ಈಗ ವಹಿಸಿಕೊಳ್ಳಲಿರುವ ಕರ್ತವ್ಯವನ್ನು ಶ್ರದ್ಧಾಪೂರ್ವಕವಾಗಿ ನಿರ್ವಹಿಸುತ್ತೇನೆಂದೂ, ದೈವ ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ ಶ್ರದ್ಧಾಪೂರ್ವಕವಾಗಿ ಪ್ರತಿಜ್ಞೆ ಮಾಡುತ್ತೇನೆ” ಎಂದು ಹೇಳಿ ನಂತರ “ಮಾತೆರೆಗ್ಲಾ ಸೊಲ್ಮೆಲು” ಎಂದು ಸಂಸತ್ತನ್ನು ಅಭಿನಂದಿಸಿದರು. ತುಳುನಾಡಿಗೆ, ತುಳುಭಾಷೆಗೆ ಅವರು ಸಲ್ಲಿಸಿದ ಈ ಗೌರವ ಸಾಮಾಜಿಕ ಜಾಲತಾಣದಲ್ಲಿಯೂ ಸುದ್ದಿ ಮಾಡಿದೆ ಹಾಗೂ ಮೆಚ್ಚುಗೆ ಪಡೆದಿದೆ. ಪ್ರತಿಮೆಗೆ ನಮನ: ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ದೆಹಲಿಯ ಬಿಜೆಪಿ ಕೇಂದ್ರ ಕಾರ್ಯಾಲಯಕ್ಕೆ ಭೇಟಿ ನೀಡಿ ಶ್ಯಾಮ್ ಪ್ರಸಾದ್ ಮುಖರ್ಜಿ ಮತ್ತು ದೀನ ದಯಾಳ್ ಉಪಾಧ್ಯಯ ಅವರ ಪ್ರತಿಮೆಗೆ ನಮನ ಸಲ್ಲಿಸಿದರು.

ರಾಷ್ಟ್ರೀಯ ವಾರ್ತೆಗಳು

ಜೂನ್ 8 ರ ರಾತ್ರಿ 8 ಗಂಟೆಗೆ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ.

ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಜೀನಾಮೆ ನೀಡಿದ್ದು, ರಾಷ್ಟ್ರಪತಿಯವರು ರಾಜೀನಾಮೆ ಅಂಗೀಕರಿಸಿದ್ದಾರೆ. ಪ್ರಸುತ್ತ ಮೋದಿಯವರು ಹಂಗಾಮಿ ಪ್ರಧಾನಿಯಾಗಿ ಮುಂದುವರಿಯಲಿದ್ದು, ಜೂನ್ 8 ರ ಶನಿವಾರ ರಾತ್ರಿ 8 ಗಂಟೆಗೆ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ರಾಷ್ಟ್ರೀಯ ವಾರ್ತೆಗಳು

ಪತ್ರಿಕಾ ಪ್ರಕಟಣೆಜೆ: ಜೆಬಿಎಫ್ ಉದ್ಯೋಗಿಗಳಿಗೆ ಜಿಎಂಪಿಎಲ್ (ಗೇಲ್-ಇಂಡಿಯಾ) ನಲ್ಲಿ ಶೀಘ್ರದಲ್ಲೇ ಖಾಯಂ ಉದ್ಯೋಗ: ಕೇಂದ್ರ ಪೆಟ್ರೋಲಿಯಂ ಸಚಿವರ ಭರವಸೆ

ಇಂದು ನವದೆಹಲಿಯಲ್ಲಿ ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವರಾದ ಶ್ರೀ ಹರ್ದೀಪ್ ಸಿಂಗ್ ಪೂರಿಯವರನ್ನು ದಕ್ಷಿಣ ಕನ್ನಡ ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್ ರವರು ಭೇಟಿಯಾಗಿ ಮಂಗಳೂರಿನ ಜಿಎಂಪಿಎಲ್ ಕಂಪೆನಿಯಲ್ಲಿ ಹಿಂದಿನ ಜೆಬಿಎಫ್ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದವರಿಗೆ ನೇರವಾಗಿ ಖಾಯಂ ಉದ್ಯೋಗ ನೀಡುವಂತೆ ಮನವಿ ಸಲ್ಲಿಸಿ ಜೆಬಿಎಫ್ ಉದ್ಯೋಗಿಗಳ ಬೇಡಿಕೆಯನ್ನು ಮಾನ್ಯ ಸಚಿವರಿಗೆ ವಿವರವಾಗಿ ಮನವರಿಕೆ ಮಾಡಲಾಯಿತು. ಇದಕ್ಕೆ ಸ್ಪಂದಿಸಿದ ಮಾನ್ಯ ಸಚಿವರು ಶೀಘ್ರದಲ್ಲಿಯೇ ಸಕರಾತ್ಮಕ ನಿರ್ಣಯ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಮುಲ್ಕಿ-ಮೂಡಬಿದಿರೆ ಶಾಸಕರಾದ ಶ್ರೀ ಉಮಾನಾಥ್ ಕೋಟ್ಯಾನ್ ಹಾಗೂ ಬಂಟ್ವಾಳ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ರವರು ಉಪಸ್ಥಿತರಿದ್ದರು.

ರಾಷ್ಟ್ರೀಯ ವಾರ್ತೆಗಳು

ಎಲ್ಲ ವರ್ಗದ ಜನತೆಯ ಹಿತ ಕಾಯುವ ಬಜೆಟ್ :ಸಂಸದ ನಳಿನ್ ಕುಮಾರ್ ಕಟೀಲ್

ನವದೆಹಲಿ: ಚುನಾವಣೆಯ ಹೊಸ್ತಿಲಿನಲ್ಲಿ ನಿರ್ಮಲಾ ಸೀತಾರಾಮ್ ಅವರು ಸದೃಢ ದೇಶ ನಿರ್ಮಾಣದ  ಅಭಿವೃದ್ಧಿಯ ಬಜೆಟ್ ಮಂಡಿಸಿದ್ದಾರೆ. ಬಡವರ, ರೈತರ ಹಾಗೂ ಎಲ್ಲ ವರ್ಗದ ಜನತೆಯ ಹಿತ ಕಾಯುವ ಬಜೆಟ್ ಇದಾಗಿದೆ. ಮಹಿಳಾ ಸಬಲೀಕರಣಕ್ಕೆ ವಿಶೇಷ ಆದ್ಯತೆ ಕಲ್ಪಿಸಲಾಗಿದೆ. 9 ರಿಂದ 14 ವರ್ಷ ವಯಸ್ಸಿನ ಹೆಣ್ಣುಮಕ್ಕಳಿಗೆ ಗರ್ಭಕಂಠ ಕ್ಯಾನ್ಸರ್  ನಿರೋಧಕ ಲಸಿಕೆಗೆ ಉತ್ತೇಜನ ನೀಡುವ ಮೂಲಕ ಅವರ ಆರೋಗ್ಯದ ಬಗ್ಗೆ  ವಿಶೇಷ ಕಾಳಜಿ ವಹಿಸಲಾಗಿದೆ. ಲಕ್ಷ ದ್ವೀಪದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಪರೋಕ್ಷವಾಗಿ ಮಂಗಳೂರು ಸಹಿತ ಕರಾವಳಿಯ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ದಿಗೂ ಸಹಕಾರಿಯಾಗಲಿದೆ. ಪ್ರವಾಸೋದ್ಯಮಕ್ಕೆ ಒತ್ತು ನೀಡಿರುವುದರಿಂದ  ಅನೇಕ ಉದ್ಯೋಗ ಹಾಗೂ  ವ್ಯವಹಾರಗಳು ಸೃಷ್ಟಿಯಾಗಲಿವೆ. ಮೀನುಗಾರಿಕೆಗೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸುವ ಮೂಲಕ ಮೀನುಗಾರರ ಬಹುಕಾಲದ ಬೇಡಿಕೆ ಈಡೇರಿಸಿದ್ದ ಕೇಂದ್ರ ಸರ್ಕಾರ ಈಗ ಮತ್ಸೃ ಸಂಪದ ಯೋಜನೆ ಮುಂದುವರಿಸಿದ್ದು  ಕರಾವಳಿಯ ಮೀನುಗಾರರಿಗೆ ವರದಾನವಾಗಲಿದೆ. ದೇಶಾದ್ಯಂತ ಒಂದು ಕೋಟಿ ಮನೆಗಳಿಗೆ ಸೌರ ವಿದ್ಯುತ್, ಮುಂದಿನ 5 ವರ್ಷಗಳಲ್ಲಿ 3 ಕೋಟಿ ಹೊಸ ಮನೆ ನಿರ್ಮಾಣ, ಹೆಚ್ಚಿನ ಮೆಡಿಕಲ್ ಕಾಲೇಜು ನಿರ್ಮಾಣ   ಸ್ವಾಗತಾರ್ಹವಾಗಿದೆಂದು ಕೇಂದ್ರದ ಬಜೆಟ್ ಬಗ್ಗೆ ಸಂಸದ ನಳಿನ್‌ಕುಮಾರ್ ಕಟೀಲ್  ಅವರು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.

Scroll to Top