ಮಿತ್ರಂಪಾಡಿ ಜಯರಾಮ ರೈ ಅವರಿಗೆ ನವಕರ್ನಾಟಕ ರತ್ನ ಪ್ರಶಸ್ತಿ.
ದುಬೈ: ಅನಿವಾಸಿ ಪ್ರಥಮ ಕನ್ನಡಿಗರ ಸಮ್ಮೇಳನದಲ್ಲಿ ಮಿತ್ರಂಪಾಡಿ ಜಯರಾಮ ರೈ ಅವರಿಗೆ ನವಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ದುಬೈ: ಅನಿವಾಸಿ ಪ್ರಥಮ ಕನ್ನಡಿಗರ ಸಮ್ಮೇಳನದಲ್ಲಿ ಮಿತ್ರಂಪಾಡಿ ಜಯರಾಮ ರೈ ಅವರಿಗೆ ನವಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ದುಬೈ: ವಿಶ್ವದಲ್ಲಿ ಅತೀ ದೊಡ್ಡ ಅನಿವಾಸಿ ಭಾರತೀಯ ಸಂಸ್ಥೆ ಇಂಡಿಯಾ ಸೋಶಿಯಲ್ ಅಂಡ್ ಕಲ್ಬರಲ್ ಸೆಂಟರ್ ಅಬುಧಾಬಿ ಅಧ್ಯಕ್ಷರಾಗಿ ಕನ್ನಡಿಗ ಮಿತ್ರಂಪಾಡಿ ಜಯರಾಮ್ ರೈ ಅಧಿಕಾರ ಸ್ವೀಕರಿಸಿದ್ದಾರೆ.ಅರಬ್ ಸಂಯುಕ್ತ ಸಂಸ್ಥಾನದ ಅಬುಧಾಬಿಯಲ್ಲಿರುವ ಅನಿವಾಸಿ ಭಾರತೀಯರ ಭವ್ಯ ಸೌಧ ಇಂಡಿಯಾ ಸೋಶಿಯಲ್ ಅಂಡ್ ಕಲ್ಬರಲ್ ಸೆಂಟರ್ ವಿಶ್ವದಲ್ಲೇ ಅನಿವಾಸಿ ಭಾರತೀಯರ ಅತ್ಯಂತ ದೊಡ್ಡದಾಗಿರುವ ಸಂಘಟನೆಯ 2024 ನೇ ಸಾಲಿನ ಅಧ್ಯಕ್ಷರಾಗಿ ಶ್ರೀಯುತ ಜಯರಾಮ್ ರೈಯವರು ಪದಗ್ರಹಣ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಿ, ಕಾರ್ಯ ನಿರ್ವಹಿಸುತ್ತಿದ್ದಾರೆ. ಶ್ರೀಯುತ ಜಯರಾಮ್ ರೈಯವರು ನಡೆದು ಬಂದಿರುವ ಹಾದಿಯನ್ನು ಅವಲೋಕಿಸುವುದಾದರೆ ಮಿತ್ರಂಪಾಡಿ ಜಯರಾಮ್ ರೈ ಅವರು ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ದಿವಂಗತ ಮಿತ್ರಂಪಾಡಿ ಚನ್ನಪ್ಪ ರೈ ಹಾಗೂ ದಿಂಬಿ ಗುತ್ತು ಸರಸ್ವತಿ ರೈ ಅವರ ಸುಪುತ್ರ.ಪ್ರಸ್ತುತ ಬಿನ್ ಫರ್ದನ್ ಸಂಸ್ಥೆಯ ಸಿ. ಎಫ್. ಓ. ಗ್ರೂಫ್ ಫೈನಾನ್ಸ್ ಮ್ಯಾನೇಜರ್ ಆಗಿರುವ ಶ್ರೀ ಮಿತ್ರಂಪಾಡಿ ಜಯರಾಮ್ ರೈಯವರ ಸಮಾಜ ಸೇವೆ, ಸಾಂಸ್ಕೃತಿಕ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಗಾಗಿ ಆರ್ಯಭಟ ಕಲ್ಬರಲ್ ಆರ್ಗನೈಸೇಶನ್ (ರಿ) ಬೆಂಗಳೂರು ಇವರು ಕೊಡಮಾಡುವ ಆರ್ಯಭಟ ಇಂಟರ್ ನ್ಯಾಶನಲ್ ಅವಾರ್ಡ್ 2024 ಪುರಸ್ಕೃತರು. ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಹಾ ಪೋಷಕರಾಗಿದ್ದು ಪರಿಷತ್ತಿನ ಮೂಲಕ ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಎಂಬ ಘೋಷ ವಾಕ್ಯದಲ್ಲಿ ‘ಗ್ರಾಮ ಸಾಹಿತ್ಯ ಸಂಭ್ರಮ’ ದ ಮೂಲಕ ಹಳ್ಳಿಹಳ್ಳಿಗೂ ಕನ್ನಡದ ಕಂಪನ್ನು ಪಸರಿಸುವ ಜೊತೆಗೆ ದೇಶ ವಿದೇಶಗಳಲ್ಲಿಲ್ಲೂ ಕನ್ನಡದ ಕಂಪು ಪಸರಿಸಲು ಕಾರಣೀಭೂತರಾದ ಇವರ ಕನ್ನಡ ಪರ ಸೇವೆಯನ್ನು ಸಹ ಗುರುತಿಸಲಾಗಿದೆ.ಧಾರ್ಮಿಕ ಹಾಗೂ ಸಮಾಜ ಸೇವೆ: ಇವರು ದಕ್ಷಿಣ ಕನ್ನಡ ಜಿಲ್ಲೆಯ ಅನೇಕ ದೈವ, ದೇವಸ್ಥಾನಗಳ ಜೀರ್ಣೋದ್ಧಾರ ದಲ್ಲಿ ಗೌರವಾಧ್ಯಕ್ಷರಾಗಿ, ಜೀರ್ಣೋದ್ಧಾರ ಸಮಿತಿ ಸದಸ್ಯರಾಗಿ ಮಹತ್ತರ ಕಾರ್ಯವನ್ನು ಮಾಡುವ ಜೊತೆಗೆ ನೂರಕ್ಕೂ ಅಧಿಕ ಬಡಕುಟುಂಬಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಗೆ, ಬಡ ಹೆಣ್ಣು ಮಕ್ಕಳ ಮದುವೆಗೆ ಆರ್ಥಿಕ ಸಹಾಯವನ್ನು ಮಾಡಿರುತ್ತಾರೆ. ಕೊರೊನಾ ಸಂದರ್ಭದಲ್ಲಿ ಪುತ್ತೂರು ತಾಲೂಕಿನ ಸಾವಿರಕ್ಕೂ ಅಧಿಕ ಬಡಕುಟುಂಬಗಳಿಗೆ ಅಕ್ಕಿಯನ್ನು ವಿತರಿಸಿ ಮಾನವೀಯತೆ ಮೆರೆದಿದ್ದಾರೆ.ಗ್ರಾಮೀಣ ಭಾಗದಲ್ಲಿ ಕನ್ನಡ ಭಾಷೆಯ ಬಗ್ಗೆ ಜಾಗೃತಿಯನ್ನು ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಹಾಗೂಅವರನ್ನು ಸಾಹಿತ್ಯ ಕ್ಷೇತ್ರಕ್ಕೆ ಬರಮಾಡಿಕೊಳ್ಳುವ ನಿಟ್ಟಿನಲ್ಲಿ ದ. ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತುಪುತ್ತೂರು ತಾಲೂಕು ಘಟಕದಿಂದ ನಡೆಸಲ್ಪಡುವ ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಎಂಬ.ಘೋಷವಾಕ್ಯದಲ್ಲಿ ಪುತ್ತೂರು ತಾಲೂಕಿನ 22 ಗ್ರಾಮ ಪಂಚಾಯತ್ ವ್ಯಾಪ್ತಿಯ 32 ಗ್ರಾಮದಲ್ಲಿ ಪ್ರತಿತಿಂಗಳು ನಡೆಯುವ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಮಹಾ ಪೋಷಕರಾಗಿರುತ್ತಾರೆ. ಈ ಗ್ರಾಮಸಾಹಿತ್ಯ ಸಂಭ್ರಮದಲ್ಲಿ, ಕನ್ನಡದಲ್ಲೂ ಐಎಎಸ್ ಬರೆಯಿರಿ ಅಭಿಯಾನ, ಕವಿಗೋಷ್ಠಿಕಥಾ ಗೋಷ್ಠಿ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಉಪನ್ಯಾಸ ಹಾಗೂ ಸಾಧಕರಿಗೆ ಸನ್ಮಾನ ನಡೆಯುತ್ತಿದ್ದು ಸುಮಾರು 5000 ಪುಟಾಣಿ ಸಾಹಿತಿಗಳಿಗೆ ವೇದಿಕೆಯನ್ನು ಕಲ್ಪಿಸಿಕೊಟ್ಟ ಗೌರವ ಹಾಗೂ 50 ಸಾವಿರಕ್ಕೂ ಅಧಿಕ ಪ್ರೇಕ್ಷಕ ವರ್ಗ ಇದನ್ನ ನೋಡಿ ಆನಂದಿಸಿದ ಗೌರವ ಇವರಿಗೆ ಸಲ್ಲುತ್ತದೆ. ಈ ರೀತಿಯ ಕಾರ್ಯಕ್ರಮವನ್ನು *ಗ್ರಾಮ ಮಟ್ಟದಲ್ಲಿ ಆಯೋಜಿಸಿರುವುದು ಬಹುಶಃ ಭಾರತದಲ್ಲಿಯೇ ಪ್ರಥಮ ಎನ್ನಬಹುದು.ಕಳೆದ ಇಪ್ಪತ್ತೈದು ವರ್ಷಗಳಿಂದ ಅರಬ್ ರಾಷ್ಟ್ರದಲ್ಲೂ ಕನ್ನಡ ಸೇವೆ ಹಾಗೂ ಕನ್ನಡಿಗರ ಸೇವೆ ಮಾಡುವ ಇವರು ಕನ್ನಡ ಭಾಷೆ ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಅನೇಕ ಕಾರ್ಯಕ್ರಮಗಳಿಗೆ ತನು ಮನ ಧನ ಗಳಿಂದ ಸಹಕಾರ ನೀಡುತ್ತಾ ಬಂದಿದ್ದಾರೆ. ಅರಬ್ ಸಂಯುಕ್ತ ಸಂಸ್ಥಾನದಲ್ಲಿ ನಡೆಯುವ ಕರ್ನಾಟಕ ಪರ ಸಂಘಟನೆಗಳ ಆಶ್ರಯದಲ್ಲಿ ನಡೆಯುವ ವಿಶ್ವ ಕನ್ನಡ ಸಮ್ಮೇಳನ, ವಿಶ್ವ ತುಳು ಸಮ್ಮೇಳನ, ಕವಿ ಸಮ್ಮೇಳನ, ನಾಟಕ ಯಕ್ಷಗಾನ, ಸಂಗೀತ ರಸಮಂಜರಿ, ಇನ್ನಿತರ ಸಾಮಾಜಿಕ ಚಟುವಟಿಕೆಗಳಿಗೆ ಸದಾ ಬೆಂಬಲ ಪ್ರೋತ್ಸಾಹ, ಪ್ರಾಯೋಜಕತವ ನೀಡುತ್ತಾ ಬಂದಿರುವ ಪೋಷಕರಾಗಿದ್ದಾರೆ.ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿ ನಾಯಕನಾಗಿ, ನಾಯಕತ್ವ ಗುಣಗಳನ್ನು ಮೈಗೂಡಿಸಿಕೊಂಡು ಬಂದವರು. ಬೆಂಗಳೂರಿನ ಯುವ ಬಂಟ ಸಮಾಜದ ಅಧ್ಯಕ್ಷರಾಗಿ, ಕನ್ನಡ ಮತ್ತು ತುಳುವೆರೆಂಕುಳು, ಲಯನ್ಸ್ ಕ್ಲಬ್ ಮತ್ತು ಇನ್ನಿತರ ಸಂಘಟನೆಗಳಲ್ಲಿ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿರುವರು. ಇಂಡಿಯಾ ಸೋಶಿಯಲ್ ಸೆಂಟರ್ ಟೋಸ್ಟ್ ಮಾಸ್ಟರ್ ಇಂಟರ್ನ್ಯಾಶನಲ್ ಅಬುಧಾಬಿ ಇದರ್ ಸ್ಥಾಪಕ ಅಧ್ಯಕ್ಷರಾಗಿ ಮತ್ತು ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ಇಂಡಿಯಾ ಸೋಶಿಯಲ್ ಅಂಡ್ ಕಲ್ಬರಲ್ ಸೆಂಟರ್ ಇದರ್ ಗೌರವಾನ್ವಿತ ಲೆಕ್ಕ ಪರಿಶೋಧಕರಾಗಿ, ಚೀಫ್ ಪೋಲಿಂಗ್ ಆಫಿಸರ್ ಆಗಿ ಸೇವೆ ಸಲ್ಲಿಸ್ ಅಪಾರ ಜನಪ್ರಿಯತೆಯನ್ನು ಪಡೆದಿದ್ದಾರೆ.ಕಳೆದ 25ವರ್ಷಗಳಿಂದ ಇವರ ಧಾರ್ಮಿಕ, ಶೈಕ್ಷಣಿಕ, ಸಮಾಜಸೇವೆ ಹಾಗೂ ಕನ್ನಡಪರ ಸೇವೆಯನ್ನು ಗುರುತಿಸಿ 2022 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ‘2023 ರ ‘ಗಡಿನಾಡ ಸದ್ಭಾವನ ಭೂಷಣ ಪ್ರಶಸ್ತಿ’ ಇಂಟರ್ನ್ಯಾಷನಲ್ ಐಕಾನ್ ಪ್ರಶಸ್ತಿ’ ಟೋಸ್ಟ್ ಮಾಸ್ಟರ್ ಅಂತರಾಷ್ಟ್ರೀಯ ಪ್ರಶಸ್ತಿಯಾದ DTM ಮತ್ತು “ಟ್ರಿಪಲ್ ಕೌನ್” ಪ್ರಶಸ್ತಿ, ದುಬೈನಲ್ಲಿ ಇಂಟರ್ನ್ಯಾಷನಲ್ ಕಲ್ಬರಲ್ ಫೆಸ್ಟ್ ಕೌನ್ಸಿಲ್ ಆಫ್ ಇಂಡಿಯಾ ಆಯೋಜಿಸಿರುವ 17ನೇ ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನದಲ್ಲಿ ‘ವಿಶ್ವಮಾನ್ಯ ಪ್ರಶಸ್ತಿ 2024 ಬಂಟ್ಸ್ ನೌ ಅನುಬಂಧ “ಬಂಟ ರತ್ನ 2024 ಪ್ರಶಸ್ತಿ, ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿಗೂ ಭಾಜನರಾಗಿದ್ದಾರೆ ಜನ್ಮ ಭೂಮಿ ಭಾರತ ಮತ್ತು ಕರ್ಮ ಭೂಮಿ ಅರಬ್ ಸಂಯುಕ್ತ ಸಂಸ್ಥಾನದಲ್ಲಿ ಹಲವಾರು ಸಂಘ-ಸಂಸ್ಥೆಗಳಿಂದಲೂ ಪ್ರಶಸ್ತಿ ಪುರಸ್ಕಾರಗಳು ಇವರ ಮುಡಿಯೇರಿದೆ.ಉದ್ಯೋಗ ನಿಮಿತ್ತ ದೂರದ ಗಲ್ಫ್ ರಾಷ್ಟ್ರದಲ್ಲಿ ಇದ್ದರೂ ಸದಾ ಭಾರತ ದೇಶ, ಕನ್ನಡ ನಾಡು, ಕನ್ನಡ ನುಡಿ, ಕನ್ನಡ ನೆಲ ಜಲದ ಶ್ರೇಯೋಭಿವೃದ್ಧಿಗಾಗಿ ಸದಾ ತನ್ನನ್ನು ತಾನು ಅರ್ಪಿಸಿಕೊಂಡು ಕನ್ನಡಪರ ಸೇವೆಯನ್ನು ಹುಟ್ಟೂರಿನಲ್ಲಿ ಮಾತ್ರವಲ್ಲದೇ ಗಲ್ಫ್ ರಾಷ್ಟ್ರದಲ್ಲೂ ಕನ್ನಡಪರ ಸೇವೆಯನ್ನು ಹಾಗೂ ಸಮಾಜ ಸೇವೆಯನ್ನು ಮಾಡುತ್ತಾ ಕನ್ನಡಿಗರ ಸಂಕಷ್ಟಕ್ಕೆ ಸ್ಪಂದಿಸುವ ಹಾಗೂ ಸದಾ ಕನ್ನಡಪರ ವಿಚಾರವನ್ನು ಚಿಂತಿಸುವ ಅಬುದಾಬಿಯಲ್ಲಿರುವ ಕನ್ನಡದ ರಾಯಭಾರಿ ಮಿತ್ರಂಪಾಡಿ ಜಯರಾಮ ರೈ ಅವರ ಸಮಾಜ ಸೇವೆ ನಿಜವಾಗಿಯೂ ಅಭಿನಂದನೀಯ ಹಾಗೂ ಶ್ರೇಷ್ಠವೆನಿಸುತ್ತದೆ.
ಅಬುಧಾಬಿ: ಪ್ರತಿಷ್ಠಿತ ‘ಆರ್ಯಭಟ ಇಂಟರ್ನ್ಯಾಷನಲ್ ಅವಾರ್ಡ್-2024’ ಪುರಸ್ಕಾರಕ್ಕೆ ಆಯ್ಕೆಯಾಗಿರುವ ಮಿತ್ರಂಪಾಡಿ ಜಯರಾಮ ರೈಯವರು ಅರಬ್ ಸಂಯುಕ್ತ ಸಂಸ್ಥಾನದ ಅಬುಧಾಬಿಯಲ್ಲಿರುವ ಅನಿವಾಸಿ ಭಾರತೀಯರ ಭವ್ಯ ಸೌಧ ಇಂಡಿಯಾ ಸೋಷಿಯಲ್ ಆ್ಯಂಡ್ ಕಲ್ಚರಲ್ ಸೆಂಟರ್ ವಿಶ್ವದಲ್ಲೇ ಅನಿವಾಸಿ ಭಾರತೀಯರ ಅತ್ಯಂತ ದೊಡ್ಡ ಸಂಘಟನೆಯಾಗಿದ್ದು, ಇದರ 2024-25ನೇ ಸಾಲಿನ ಅಧ್ಯಕ್ಷರಾಗಿ ಮೇ.13ರಂದು ನಡೆದ ಚುನಾವಣೆಯಲ್ಲಿ ಬಹುಮತದಿಂದ ಆಯ್ಕೆಯಾಗಿದ್ದರು . ಅವರು ಜೂನ್ 8 ರಂದು ಅಧಿಕಾರ ಸ್ವೀಕಾರ. ರಂದು ಅಧಿಕಾರ ಸ್ವೀಕರಿಸಿದ್ದಾರೆ. ಪ್ರಸ್ತುತ ಅಬುಧಾಬಿಯಲ್ಲಿರುವ ಬಿನ್ ಫರ್ದನ್ ಸಂಸ್ಥೆಯ ಸಿಎಫ್ಓ ಆಗಿ ಯಶಸ್ವಿ ಉದ್ಯಮಿಯಾಗಿರುವ ಮಿತ್ರಂಪಾಡಿ ಜಯರಾಮ ರೈಯವರು ಕೆದಂಬಾಡಿ ಗ್ರಾಮದ ಮಿತ್ರಂಪಾಡಿ ದಿ. ಮಿತ್ರಂಪಾಡಿ ಚೆನ್ನಪ್ಪ ರೈ ಮತ್ತು ಡಿಂಬ್ರಿಗುತ್ತು ಸರಸ್ವತಿ ರೈ ಅವರ ಪುತ್ರ. ಧಾರ್ಮಿಕ ಹಾಗೂ ಸಮಾಜಸೇವೆಯಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿರುವ ಇವರು ಗ್ರಾಮೀಣ ಭಾಗದಲ್ಲಿ ಕನ್ನಡ ಭಾಷೆಯ ಬಗ್ಗೆ ಜಾಗೃತಿಯನ್ನು ಮೂಡಿಸಿ ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಹಾಗೂ ಅವರನ್ನೂ ಸಾಹಿತ್ಯ ಕ್ಷೇತ್ರಕ್ಕೆ ಬರಮಾಡಿಕೊಳ್ಳುವ ನಿಟ್ಟಿನಲ್ಲಿ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಘಟಕದಿಂದ ನಡೆಸಲ್ಪಡುವ ‘ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ’ ಎಂಬ ಘೋಷ ವಾಕ್ಯದಲ್ಲಿ 22 ಗ್ರಾಮ ಪಂಚಾಯತ್ ವ್ಯಾಪ್ತಿಯ 32 ಗ್ರಾಮಗಳಲ್ಲಿ ಪ್ರತಿ ತಿಂಗಳು ನಡೆಯುವ ಸಾಹಿತ್ಯ ಸಂಭ್ರಮದ ಕಾರ್ಯಕ್ರಮದ ಮಹಾಪೋಷಕರಾಗಿದ್ದಾರೆ. ಈ ಗ್ರಾಮ ಸಾಹಿತ್ಯ ಸಂಭ್ರಮದಲ್ಲಿ ‘ಕನ್ನಡದಲ್ಲೂ ಐಎಎಸ್ ಬರೆಯಿರಿ’ ಅಭಿಯಾನ, ಕವಿಗೋಷ್ಠಿ ಕಥಾಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಉಪನ್ಯಾಸ, ಸಾಧಕರಿಗೆ ಸನ್ಮಾನ ನಡೆಯುತ್ತಿದ್ದು, ಈಗಾಗಲೇ ಸುಮಾರು 5 ಸಾವಿರ ಪುಟಾಣಿ ಸಾಹಿತಿಗಳಿಗೆ ವೇದಿಕೆಯನ್ನು ಕಲ್ಪಿಸಿಕೊಟ್ಟ ಗೌರವ ಹಾಗೂ 50 ಸಾವಿರಕ್ಕೂ ಅಧಿಕ ಪ್ರೇಕ್ಷಕ ವರ್ಗ ವೀಕ್ಷಿಸಿ, ಆನಂದಿಸಿದ ಗೌರವ ಇವರಿಗೂ ಸಲ್ಲುತ್ತದೆ. ಕಳೆದ 25 ವರ್ಷಗಳಿಂದ ಅರಬ್ ರಾಷ್ಟ್ರದಲ್ಲೂ ಕನ್ನಡ ಸೇವೆ ಹಾಗೂ ಕನ್ನಡಿಗರ ಸೇವೆ ಮಾಡುತ್ತಿರುವ ಇವರು ಕನ್ನಡ ಭಾಷೆ ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟಿನಲ್ಲಿ ಅನೇಕ ಕಾರ್ಯಕ್ರಮಗಳಿಗೆ ಸಹಕಾರ ನೀಡುತ್ತಾ ಬಂದಿದ್ದಾರೆ. ಅರಬ್ ಸಂಯುಕ್ತ ಸಂಸ್ಥಾನದಲ್ಲಿ ಕರ್ನಾಟಕ ಪರ ಸಂಘಟನೆಗಳ ಆಶ್ರಯದಲ್ಲಿ ನಡೆಯುವ ವಿಶ್ವಕನ್ನಡ ಸಮ್ಮೇಳನ, ವಿಶ್ವ ತುಳು ಸಮ್ಮೇಳನ, ಕವಿ ಸಮ್ಮೇಳನ, ನಾಟಕ ಯಕ್ಷಗಾನ, ಸಂಗೀತ ರಸಮಂಜರಿ, ಇನ್ನಿತರ ಸಾಮಾಜಿಕ ಚಟುವಟಿಕೆಗಳಿಗೆ ನಿರಂತರ ಬೆಂಬಲ, ಪ್ರೋತ್ಸಾಹ ನೀಡುತ್ತಿದ್ದಾರೆ. ಜಯರಾಮ ರೈಯವರು ವಿವಿಧ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಇದೀಗ ಪ್ರತಿಷ್ಠಿತ ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಇವರು ಇಂಡಿಯಾ ಸೋಷಿಯಲ್ ಸೆಂಟರ್ ಟೋಸ್ಟ್ ಮಾಸ್ಟರ್ ಇಂಟಕ್ ನ್ಯಾಷನಲ್ ಅಬಧಾಬಿ ಇದರ ಸ್ಥಾಪಕಾಧ್ಯಕ್ಷರಾಗಿ, ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ.
ಅಬುದಾಬಿ: ಅಬುದಾಬಿಯಲ್ಲಿರುವ ಅನಿವಾಸಿ ಭಾರತೀಯರ ಭವ್ಯ ಸೌಧ ‘ಇಂಡಿಯಾ ಸೋಶಿಯಲ್ ಆ್ಯಂಡ್ ಕಲ್ಚರಲ್ ಸೆಂಟರ್ (ಐಎಸ್ಸಿ) ಕಳೆದ 57 ವರ್ಷಗಳಿಂದ ಕಾರ್ಯೋನ್ಮುಖವಾಗಿರುವ, ವಿಶ್ವದಲ್ಲೇ ಅನಿವಾಸಿ ಭಾರತೀಯರ ಅತ್ಯಂತ ದೊಡ್ಡದಾಗಿರುವ ಸಂಘಟನೆಯಾಗಿದೆ. ಐಎಸ್ಸಿಯಲ್ಲಿ ಎರಡು ಸಾವಿರ ಸದಸ್ಯರಿದ್ದು, ಬೃಹತ್ ಉದ್ಯಮಿಗಳು, ವೃತ್ತಿಪರ ಗಣ್ಯರು ಆಡಳಿತ ಮಂಡಳಿಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದಾರೆ. ಪ್ರತಿ ವರ್ಷ ಚುನಾವಣೆಯ ಮೂಲಕ ಪದಾಧಿಕಾರಿಗಳ ಆಯ್ಕೆ ನಡೆಸಲಾಗುತ್ತಿದೆ. 2018-19ನೇ ಸಾಲಿನಲ್ಲಿ ಮಿತ್ರಂಪಾಡಿ ಜಯರಾಮ್ ರೈ ಅವರು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಇದೀಗ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅರಬ್ ಸಂಯುಕ್ತ ಸಂಸ್ಥಾನದ ಅಬುದಾಬಿಯಲ್ಲಿರುವ, ವಿಶ್ವದಲ್ಲೇ ಅನಿವಾಸಿ ಭಾರತೀಯರ ಅತ್ಯಂತ ದೊಡ್ಡ ಸಂಘಟನೆಯಾಗಿರುವ ‘ಇಂಡಿಯಾ ಸೋಶಿಯಲ್ ಆ್ಯಂಡ್ ಕಲ್ಚರಲ್ ಸೆಂಟರ್ ನ 2024-2025 ನೇ ಸಾಲಿನ ಅಧ್ಯಕ್ಷ ಸ್ಥಾನಕ್ಕೆ ಮೇ.13ರಂದು ನಡೆದ ಚುನಾವಣೆಯಲ್ಲಿ ಮಿತ್ರಂಪಾಡಿ ಜಯರಾಮ್ ರೈಯವರು ಬಹುಮತಗಳೊಂದಿಗೆ ಜಯಶೀಲರಾಗಿದ್ದಾರೆ. ಅಬುದಾಬಿಯಲ್ಲಿರುವ ಅನಿವಾಸಿ ಭಾರತೀಯರ ಭವ್ಯ ಸೌಧ ಇಂಡಿಯಾ ಸೋಶಿಯಲ್ ಆ್ಯಂಡ್ ಕಲ್ಚರಲ್ ಸೆಂಟರ್ (ಐಎಸ್ಸಿ), ಕಳೆದ 57 ವರ್ಷಗಳಿಂದ ಕಾರ್ಯೋನ್ಮುಖವಾಗಿರುವ ವಿಶ್ವದಲ್ಲೇ ಅನಿವಾಸಿ ಭಾರತೀಯರ ಅತ್ಯಂತ ದೊಡ್ಡದಾಗಿರುವ ಸಂಘಟನೆಯಾಗಿದೆ. ಭಾರತೀಯ ವೈವಿಧ್ಯಮಯ ಕಲೆ ಸಂಸ್ಕೃತಿ, ಕಲಾಪ್ರಕಾರಗಳಿಗೆ ಇಲ್ಲಿ ವೇದಿಕೆಯನ್ನು ಕಲ್ಪಿಸಲಾಗುತ್ತಿದೆ. ಈಗಾಗಲೇ ನೂರಾರು ಕಲಾ ಪ್ರತಿಭೆಗಳು ಹೊರಹೊಮ್ಮಿದ್ದು, ವಿಶ್ವದ ವಿವಿಧ ಕಡೆಗಳಿಂದ ಪ್ರೇಕ್ಷಕರು ಆಸೀನರಾಗುವ ಹವಾನಿಯಂತ್ರಿತ ಸಭಾಂಗಣ ಮತ್ತು ಮುನ್ನೂರು ಮಂದಿ ಆಸೀನರಾಗುವ ಎರಡು ಕಿರಿಯ ಸಭಾಂಗಣಗಳನ್ನು ಹೊಂದಿದೆ. ಈಜು ಕೊಳ, ಜಿಮ್ ಒಳಾಂಗಣ ಕ್ರೀಡಾ ವ್ಯವಸ್ಥೆ, ಉಪಹಾರ ಮಂದಿರದ ವ್ಯವಸ್ಥೆ ಇದ್ದು ಎಂಟು ಸಾವಿರ ಮಂದಿ ಸೌಲಭ್ಯ ಪಡೆಯುತ್ತಿದ್ದಾರೆ. ಐಎಸ್ಸಿಯಲ್ಲಿ ಎರಡು ಸಾವಿರ ಸದಸ್ಯರಿದ್ದು, ಬೃಹತ್ ಉದ್ಯಮಿಗಳು, ವೃತ್ತಿಪರ ಗಣ್ಯರು ಆಡಳಿತ ಮಂಡಳಿಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದಾರೆ. ಪ್ರತಿವರ್ಷ ಗಣ್ಯರು ಆಡಳಿತ ಮಂಡಳಿಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದಾರೆ. ಪ್ರತಿ ವರ್ಷ ಚುನಾವಣೆಯ ಮೂಲಕ ಪದಾಧಿಕಾರಿಗಳ ಆಯ್ಕೆ ನಡೆಸಲಾಗುತ್ತಿದೆ. 2018-19ನೇ ಸಾಲಿನಲ್ಲಿ ಉಪಾಧ್ಯಕ್ಷರಾಗಿ ಬಹುತದಿಂದ ಮಿತ್ರಂಪಾಡಿ ಜಯರಾಮ್ ರೈ ಆಯ್ಕೆಯಾಗಿದ್ದರು. ಅಂದಿನ ದಿನಗಳಲ್ಲಿ ಇವರು ಏಕೈಕ ಕನ್ನಡಿಗರಾಗಿದ್ದು, ತುಳುನಾಡಿಗೆ ಕರ್ನಾಟಕಕ್ಕೆ ಸಂದ ಗೌರವವಾಗಿತ್ತು. ಪುತ್ತೂರಿನ ಕೆದಂಬಾಡಿ ಗ್ರಾಮದ ಪ್ರಗತಿಪರ ಕೃಷಿಕರಾಗಿದ್ದ ದಿ. ಮಿತ್ರಂಪಾಡಿ ಚೆನ್ನಪ್ಪ ರೈ ಮತ್ತು ದಿ.ಡಿಂಬ್ರಿ ಗುತ್ತು ಸರಸ್ವತಿ ರೈಯವರು ಪುತ್ರನಾಗಿರುವ ಜಯರಾಮ ರೈಯವರು ಬೆಂಗಳೂರಿನ ಯುವ ಬಂಟ ಸಮಾಜದ ಅಧ್ಯಕ್ಷರಾಗಿ, ಕನ್ನಡ ಮತ್ತು ತುಳುವೆರೆಂಕುಳು, ಲಯನ್ಸ್ ಕ್ಲಬ್ ಹಾಗೂ ಇನ್ನಿತರ ಸಂಘಟನೆಗಳಲ್ಲಿ ಪದಾಧಿಕಾರಿಯಾಗಿ ಮತ್ತು ಸಕ್ರಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. 1999ರಲ್ಲಿ ಕೊಲ್ಲಿರಾಷ್ಟ್ರ ಅರಬ್ ಸಂಯುಕ್ತ ಸಂಸ್ಥಾನದ ಅಬುದಾಬಿಯಲ್ಲಿ ವೃತ್ತಿ ಜೀವನವನ್ನು ಪ್ರಾರಂಭಿಸಿದ ರೈಯವರು ಬಿನ್ ಫರ್ದಾನ್ ಗ್ರೂಫ್ನ ಫೈನಾನ್ಸ್ ಮ್ಯಾನೇಜರ್ ಆಗಿ ಜವಾಬ್ದಾರಿಯನ್ನು ವಹಿಸಿಕೊಂಡರು. ಸಂಸ್ಥೆಯು ಅಭಿವೃದ್ಧಿ ಪಥದಲ್ಲಿ ಮುನ್ನಡೆಯುವಲ್ಲಿ ರೈಯವರ ಕೊಡುಗೆ ಅಪಾರವಾಗಿದ್ದು ಅಭಿನಂದಿಸಲ್ಪಟ್ಟು ಸಿ.ಎಫ್.ಒ. ಆಗಿ ಎತ್ತರದ ಸ್ಥಾನ ಲಭಿಸಿದ್ದು, ಪ್ರಸ್ತುತ ಗೌರವದ ಸ್ಥಾನದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವೃತ್ತಿಯೊಂದಿಗೆ ಪ್ರವೃತ್ತಿಯಲ್ಲಿ ಸಮಾಜ ಸೇವೆಯನ್ನು ಮೈಗೂಡಿಸಿಕೊಂಡಿದ್ದು ತಮ್ಮ ಬಿಡುವಿನ ಸಮಯವನ್ನು ಸಮಾಜಸೇವೆಗಾಗಿ ಮೀಸಲಾಗಿಟ್ಟಿದ್ದಾರೆ. ಇಂಡಿಯ ಸೋಶಿಯಲ್ ಸೆಂಟರ್ ಟೋಸ್ಟ್ ಮಾಸ್ಟರ್ ಇಂಟರ್ ನ್ಯಾಷನಲ್ ಅಬುದಾಬಿ ಇದರ ಸ್ಥಾಪಕ ಅಧ್ಯಕ್ಷರಾಗಿ ಮತ್ತು ನಿರ್ದೇಶಕರಾಗಿ ಉತ್ತಮ ಸೇವೆ ಸಲ್ಲಿಸಿರುವ ಇವರು ಇಂಡಿಯಾ ಸೋಶಿಯಲ್ ಆ್ಯಂಡ್ ಕಲ್ಚರಲ್ ಸೆಂಟರ್ನ ಸೆಂಟರ್ನ ಗೌರವಾನ್ವಿತ ಲೆಕ್ಕ ಪರಿಶೋಧಕರಾಗಿ, ಚೀಫ್ ಪೋಲಿಂಗ್ ಆಫೀಸರ್ ಆಗಿ ಸೇವೆ ಸಲ್ಲಿಸಿ ಜನಪ್ರಿಯತೆ ಪಡೆದಿದ್ದಾರೆ. ಇದರ ಫಲವಾಗಿ ಅತ್ಯಧಿಕ ಬಹುಮತದಿಂದ 2018-19ನೇ ಸಾಲಿನ ಉಪಾಧ್ಯಕ್ಷರಾಗಿ ಜಯಗಳಿಸಿ ಮತ್ತು ಅಧಿಕಾರದ ಅವಧಿಯಲ್ಲಿ ಅತ್ಯುತ್ತಮ ಕಾರ್ಯಕ್ರಮಗಳನ್ನು ಆಯೋಜಿಸಿ ಭಾರತ ಮತ್ತು ಅರಬ್ ಸಂಯುಕ್ತ ಸಂಸ್ಥಾನದ ಸಾಂಸ್ಕೃತಿಕ ಬಾಂಧವ್ಯವನ್ನು ಉತ್ತುಂಗಕ್ಕೆ ಏರಿಸಿದ ಹೆಗ್ಗಳಿಕೆ ಹೊಂದಿದ್ದಾರೆ. ಯು.ಎ.ಇ. ಯಲ್ಲಿ ಅನಿವಾಸಿ ಭಾರತೀಯ ಸಂಘಟನೆಗಳು ಭಾರತೀಯ ಸಂಸ್ಕೃತಿ ಆಚಾರ ವಿಚಾರಗಳನ್ನು ಗಲ್ಫ್ ನಾಡಿನಲ್ಲಿ ಉಳಿಸಿಕೊಂಡು ಬೆಳೆಸಿಕೊಂಡು ಬರುತ್ತಿದೆ. ಇದೇ ರೀತಿಯಲ್ಲಿ ಕರ್ನಾಟಕ ಪರ ಸಂಘಟನೆಗಳು ಕನ್ನಡ, ತುಳು, ಕೊಂಕಣಿ, ಬ್ಯಾರಿ ಮತ್ತು ಕೊಡವ ಭಾಷಾ ಚಟುವಟಿಕೆಗಳನ್ನು ನಡೆಸಿಕೊಂಡು ಕಾರ್ಯೋನ್ಮುಖವಾಗಿವೆ. ಇಂತಹ ಸಂಘಟನೆಗಳಿಗೆ ರೈಯವರು ಸದಾ ಬೆಂಬಲ, ಪ್ರೋತ್ಸಾಹ ಮತ್ತು ಪ್ರಾಯೋಜಕತ್ವ ನೀಡುತ್ತಾ ಬರುತ್ತಿದ್ದಾರೆ. ರೈಯವರು ಉತ್ತಮ ರಂಗ ಕಲಾವಿದರೂ ಆಗಿದ್ದು ಯು.ಎ.ಇ.ಯಲ್ಲಿ ನಡೆಯುವ ಕನ್ನಡ ಮತ್ತು ತುಳು ಸಂಘ ಸಂಸ್ಥೆಗಳ ಕಾರ್ಯಕ್ರಮಗಳಲ್ಲಿ ಐತಿಹಾಸಿಕ ಸಾಮಾಜಿಕ ನಾಟಕಗಳಲ್ಲಿ ಮುಖ್ಯವಾಗಿ ದೇವ ಪೂಂಜ ಮತ್ತು ಸಂಗೊಳ್ಳಿ ರಾಯಣ್ಣ ಪಾತ್ರದ ಮೂಲಕ ಗಮನ ಸೆಳೆದಿದ್ದಾರೆ. ಇವರು ರಚಿಸಿ ನಿರ್ದೇಶಿಸಿ, ನಟಿಸಿರುವ ಮಂತ್ರಿಮಂಡಲ ಮತ್ತು ಅಪ್ಪೆನ ತ್ಯಾಗ ನಾಟಕಗಳನ್ನು ವೀಕ್ಷಿಸಿರುವ ಯು.ಎ.ಇ.ಯ ಹಿರಿಯ ಉದ್ಯಮಿ ಡಾ| ಬಿ.ಆರ್. ಶೆಟ್ಟಿಯವರು ಅಪಾರ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದರು. ದುಬಾಯಿಯಲ್ಲಿ ನಡೆದ ಯು.ಎ.ಇ. ಬಂಟ್ಸ್ ಸ್ನೇಹ ಮಿಲನ, ತುಳುಕೂಟ, ಕರ್ನಾಟಕ ಸಂಘ ಮತ್ತು ಬದಿಯಡ್ಕದಲ್ಲಿ ನಡೆದ ವಿಶ್ವಸಮ್ಮೇಳನದ ವೇದಿಕೆಗಳಲ್ಲಿ ಜಯರಾಮ ರೈಯವರನ್ನು ಸನ್ಮಾನಿಸಿ ಗೌರವಿಸಲಾಗಿದೆ. ಯು.ಎ.ಇ.ಯಲ್ಲಿ ನಡೆಯುವ ಸ್ನೇಹ ಮಿಲನ, ವಿಹಾರ ಕೂಟ, ಕ್ರೀಡಾ ಕೂಟ, ಪೂಜಾ ಸಮಾರಂಭ, ಸಾಹಿತ್ಯ ಸಮ್ಮೇಳನಗಳಿಗೆ ಸಹಾಯ ಹಸ್ತ ನೀಡುವುದರೊಂದಿಗೆ ಸಕ್ರಿಯವಾಗಿ ಪಾಲ್ಗೊಂಡು ಸಮಾರಂಭಗಳ ಯಶಸ್ಸಿನಲ್ಲಿ ಇವರು ಭಾಗಿಯಾಗಿರುತ್ತಾರೆ. ಯಕ್ಷಗಾನ ಕಲಾವಿದರ ಶ್ರೇಯೋಭಿವೃದ್ಧಿಗೆ ಸ್ಥಾಪನೆಯಾಗಿರುವ ಯಕ್ಷ ದ್ರುವ ಪಟ್ಲ ಪೌಂಢೇಶನ್ ಟ್ರಸ್ಟಿಯಾಗಿಯೂ ಸೇವೆ ಸಲ್ಲಿಸುತ್ತಿರುವ ಇವರು ತಮ್ಮ ಹುಟ್ಟೂರಿನಲ್ಲಿಯೂ ವಿದ್ಯಾಸಂಸ್ಥೆಗಳಿಗೆ, ದೇವಸ್ಥಾನಗಳಿಗೆ ದೇಣಿಗೆ, ಬಡ ವಿದ್ಯಾರ್ಥಿಗಳು ಮತ್ತು ನೊಂದವರಿಗೆ ಸಹಾಯ ಹಸ್ತ ನೀಡುತ್ತಿದ್ದಾರೆ. 2022 ರಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಇಂಟರ್ನ್ಯಾಷನಲ್ ಐಕಾನಿಕ್ ಪ್ರಶಸ್ತಿ, ಗಡಿನಾಡ ಸದ್ಭಾವನ ರಾಷ್ಟ್ರೀಯ ಪ್ರಶಸ್ತಿ, ಗ್ಲೋಬಲ್ ಮೆನ್ ಅವಾರ್ಡ್ ಸಹಿತ ಹಲವು ಪ್ರಶಸ್ತಿ, ಸನ್ಮಾನಗಳನ್ನು ಮುಡಿಗೇರಿಸಿಕೊಂಡಿರುವ ಜಯರಾ ರೈಯವರು ಡಿಸ್ಟಿಂಗ್ವಿಶ್ ಟೋಸ್ಟ್ ಮಾಸ್ಟರ್ ಮತ್ತು ಟ್ರಿಪಲ್ ಕ್ರೌನ್ ಅವಾರ್ಡ್ ಪುರಸ್ಕೃತರೂ ಆvದ್ದಾರೆ. ಪತ್ನಿ ಶ್ರೀಮತಿ ಆಶಾ ಜೆ.ರೈ, ಪುತ್ರ ತಾರಾನಾಥ ರೈ ಮತ್ತು ಪುತ್ರಿ ಪ್ರಾಂಜಲ ರೈಯವರೊಂದಿಗೆ ಜಯರಾಮ ರೈಯವರು ಸುಖೀ ಸಂಸಾರಿಯಾಗಿದ್ದಾರೆ.
ಅಮೇರಿಕಾ :ಅಮೇರಿಕಾವು ಇರಾಕ್ -ಸಿರಿಯಾ ಮೇಲೆ ವೈಮಾನಿಕ ಧಾಳಿ ನಡೆಸಿ ತನ್ನ ಸೈನಿಕರ ಸಾವಿಗೆ ಸೇಡು ತೀರಿಸಿಕೊಂಡಿದೆ. ಇದರಿಂದಾಗಿ ಇರಾಕ್ -ಸಿರಿಯಾದ ಸುಮಾರು 40 ಮಂದಿ ಸೈನಿಕರು ಸಾವನ್ನಪ್ಪಿದ್ದಾರೆ