ಪ್ರಾದೇಶಿಕ ವಾರ್ತೆಗಳು

ಪ್ರಾದೇಶಿಕ ವಾರ್ತೆಗಳು

ಗೂಗಲ್ ಬದಲು ಗ್ರಂಥಾಲಯ ಅವಲಂಬಿಸಿ- ಡಾ.ಸಂಕಮಾರ್

ಮಂಗಳೂರು : ಅಕ್ಷರ ಲೋಕಕ್ಕೆ ಪ್ರಬಲವಾದ ಶಕ್ತಿ ಇದೆ. ಇಂದಿನ ವಿದ್ಯಾರ್ಥಿಗಳಲ್ಲಿ ಸಾಹಿತ್ಯ ಓದುವ ಅಭಿರುಚಿ ಬೆಳೆಸುವುದು ಅವಶ್ಯವಾಗಿದೆ. ಗೂಗಲ್ ಬದಲು ಗ್ರಂಥಾಲಯ ಅವಲಂಬಿಸಲು ಪ್ರೇರಣೆ ನೀಡಬೇಕು ಎಂದು ಜಾನಪದ ವಿದ್ವಾಂಸ, ಹಿರಿಯ ಸಾಹಿತಿ ಡಾ.ಗಣೇಶ್ ಅಮೀನ್ ಸಂಕಮಾರ್ ಹೇಳಿದರು.ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಆಯೋಜಿಸಿದ ಹಿರಿಯ ಸಾಹಿತಿಗಳ ಸಂಪರ್ಕ ಅಭಿಯಾನದಡಿ ಭಾನುವಾರ ಸ್ವಗೃಹದಲ್ಲಿ ಗೌರವ ಸ್ವೀಕರಿಸಿ ಮಾತನಾಡಿದ ಅವರು ಸಾಹಿತ್ಯದ ಮೂಲಬೇರು ನಮ್ಮ ಜನಪದದಲ್ಲಿದೆ. ಬದುಕಿನ ನೋವು ಜನಪದ ಸಾಹಿತ್ಯದ ಮೂಲಕ ಹೊರಹೊಮ್ಮಲು ಸಾಧ್ಯವಾಗಿದೆ. ಸಾಹಿತಿಗಳು ಮನಸ್ಸುಗಳನ್ನು ಕಟ್ಟುವ ಜತೆಗೆ ಸಮಾಜದ ಧ್ವನಿಯಾಗಬೇಕು‌ ಎಂದರು.ಇಂದು ಸಾಹಿತ್ಯ ಸಮ್ಮೇಳನಗಳು ರಾಜಕೀಯ ಅಬ್ಬರದ ಪ್ರದರ್ಶನವಾಗುತ್ತಿದೆ. ಇದು ಒಳ್ಳೆಯ ಬೆಳವಣಿಗೆಯಲ್ಲ. ಸಮ್ಮೇಳನ ನಿಜಾರ್ಥದಲ್ಲಿ ಸಾಹಿತಿಗಳ ಸಮ್ಮೇಳನವಾಗ ಬೇಕು‌‌ ಎಂದು ಡಾ.ಸಂಕಮಾರ್ ಅಭಿಪ್ರಾಯ ಪಟ್ಟರು.ಅಭಾಸಾಪ‌ಜಿಲ್ಲಾ ಖಜಾಂಜಿ ಭಾಸ್ಕರ ರೈ ಕಟ್ಟ, ಸಾಹಿತ್ಯ ಕೂಟದ ಮುಖ್ಯಸ್ಥೆ ಗೀತಾ ಲಕ್ಷ್ಮೀಶ್, ಮೂಲ್ಕಿ ಘಟಕದ ಅಧ್ಯಕ್ಷ ಸರ್ವೋತ್ತಮ ಅಂಚನ್, ಕಾರ್ಯಕಾರಿ ಸಮಿತಿ ಸದಸ್ಯ ಯಾದವ ದೇವಾಡಿಗ, ನಾಟ್ಯರಾಧನಾ ಕಲಾ ಕೇಂದ್ರದ ಟ್ರಸ್ಟಿ ಬಿ.ರತ್ನಾಕರ ರಾವ್, ಜಯಂತಿ ಸಂಕಮಾರ್, ಭವ ಸಂಕಮಾರ್ ಕಾಪಸ್ಥಿತರಿದ್ದರು. ಅಭಾಸಾಪ ದ.ಕ.ಜಿಲ್ಲಾಧ್ಯಕ್ಷ ಪಿ. ಬಿ.ಹರೀಶ್ ರೈ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಸುಮಂಗಲಾ ರತ್ನಾಕರ್ ವಂದಿಸಿದರು.

ಪ್ರಾದೇಶಿಕ ವಾರ್ತೆಗಳು

ಪಿ.ಎ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಗ್ರಾಹಕರ ದಿನಾಚರಣೆ

“ಗ್ರಾಹಕರು ಖರೀದಿಸುವಾಗ ಯಾವುದೇ ವಂಚನೆಗೆ ಒಳಗಾಗಬಾರದು ಹಾಗೂ ತಮ್ಮ ಹಕ್ಕುಗಳ ಬಗೆಗೆ ಸರಿಯಾಗಿ ತಿಳಿದಿರಬೇಕು. ಪ್ರತಿಯೋರ್ವ ಗ್ರಾಹಕನು ತನ್ನ ಹಕ್ಕು ಮತ್ತು ಭಾದ್ಯತೆಗಳನ್ನು ತಿಳಿದು ನಡೆಯಬೇಕೆಂದು” ಮುಖ್ಯ ಅತಿಥಿಯಾಗಿ ಆಗಮಿಸಿದ ಅಡ್ವಕೇಟ್ ಕೆ .ಪೃಥ್ವಿರಾಜ್ ರೈ ,ಮಾಜಿ ಅಧ್ಯಕ್ಷರು ,ವಕೀಲರ ಸಂಘ ಮಂಗಳೂರು ಮಾತನಾಡಿ ಹೇಳಿದರು . ಪಿ.ಎ ಪ್ರಥಮ ದರ್ಜೆ ಕಾಲೇಜು ಹಾಗೂ ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಒಡಂಬಡಿಕೆಯ ಅನ್ವಯ ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ಮಾರ್ಚ್ 15, 2025 ರಂದು ವಿಶ್ವ ಗ್ರಾಹಕ ಹಕ್ಕುಗಳ ದಿನಾಚರಣೆಯು ನಡೆಯಿತು. ಕಾರ್ಯಕ್ರಮದ ಪೀಠಿಕೆಯ ಕುರಿತು ಡಾ.ಅಬೂಬಕ್ಕರ್ ಸಿದ್ಧಿಕ್, ಒಡಂಬಡಿಕೆಯ ಸಂಚಾಲಕರು, ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು, ವಿವರಿಸಿಕೊಟ್ಟರು. ಪಿ.ಎ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಸರ್ಫ್ರಾಜ್ ಜೆ ಹಾಸಿಂ ಅಧ್ಯಕ್ಷೀಯ ನುಡಿಗಳನ್ನಾಡಿದರು.ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಜಯವಂತ ನಾಯಕ್ ಪ್ರಾಧ್ಯಾಪಕರು ಅರ್ಥಶಾಸ್ತ್ರವಿಭಾಗ, ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು, ಶರಫುದ್ದೀನ್ ಪಿ.ಕೆ, ಎ .ಜಿ .ಎಮ್ ಕ್ಯಾಂಪಸ್ ಪಿ.ಎ.ಇ.ಟಿ , ಪಿ.ಎ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳ ಶೈಕ್ಷಣಿಕ ವ್ಯವಹಾರಗಳ ಮುಖ್ಯಸ್ಥರಾದ ಡಾ.ಸಯ್ಯದ್ ಅಮೀನ್ ಅಹ್ಮದ್, ಪಿ.ಎ ಪ್ರಥಮ ದರ್ಜೆ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ.ಜಿ ಹರಿಕೃಷ್ಣನ್, ಐ.ಕ್ಯೂ.ಎ.ಸಿ ಸಂಯೋಜಕರರಾದ ಶ್ರೀಮತಿ ವಾಣಿಶ್ರೀ ವೈ ವೇದಿಕೆಯಲ್ಲಿ ಆಸೀನರಾಗಿದ್ದರು.ವಿದ್ಯಾರ್ಥಿಗಳಾದ ಹಿಬಾ ಮರ್ಯಂ ಕಾರ್ಯಕ್ರಮ ನಿರೂಪಿಸಿದರೆ, ಫರ್ಹಾನ್ ಸ್ವಾಗತಿಸಿ, ತಶ್ಮೀಯಾ ವಂದಿಸಿದರು. ಇರ್ಫಾದ್ ಪ್ರಾರ್ಥನೆ ನೆರವೇರಿಸಿದರು.

ಪ್ರಾದೇಶಿಕ ವಾರ್ತೆಗಳು

ಮಾ.18ರಂದು ಡಾ.ಆರ್.ಕೆ.ನಾಯರ್ ಪ್ರೆಸ್ ಕ್ಲಬ್ ಗೌರವ ಅತಿಥಿ

ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಮಾ.18ರಂದು ಬೆಳಗ್ಗೆ 11.30 ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಗುಜರಾತ್ ನ ಸ್ಮೃತಿ ವನದ ರೂವಾರಿ, ಪರಿಸರವಾದಿ ಡಾ.ಆರ್.ಕೆ.ನಾಯರ್ ಭಾಗವಹಿಸಿ ಸಂವಾದ ನಡೆಸಲಿದ್ದಾರೆ.ಜಿಲ್ಲಾ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಖಾದರ್ ಶಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ , ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ.ಆರ್. ಉಪಸ್ಥಿತರಿರುವರು ಎಂದು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ರೂ.1200 ಕೋಟಿ ವ್ಯವಹಾರದ 113 ವರ್ಷಗಳ ಇತಿಹಾಸವಿರುವ ಎಂ.ಸಿ.ಸಿ. ಬ್ಯಾಂಕಿನ 19ನೇ ಶಾಖೆ ಬೆಳ್ಮಣ್‌ನಲ್ಲಿ ಉದ್ಘಾಟನೆ

113 ವರ್ಷಗಳ ಇತಿಹಾಸವಿರುವ ಎಂ.ಸಿ.ಸಿ. ಬ್ಯಾಂಕ್ ಬ್ಯಾಂಕಿAಗ್ ಕ್ಷೇತ್ರದಲ್ಲಿ ಅತ್ಯುತ್ತಮ ಪ್ರಗತಿ ಸಾಧಿಸುತ್ತಿದ್ದು 2023-24ನೇ ವಿತ್ತೀಯ ವರ್ಷದಲ್ಲಿ ಶೇಕಡಾ 10% ಲಾಭಾಂಶ ಘೋಷಿಸಿರುತ್ತದೆ.  ಬ್ಯಾಂಕ್ ಸತತವಾಗಿ ಲಾಭ ಗಳಿಸುತ್ತಿದ್ದು. 2023-24ನೇ ವಿತ್ತೀಯ ವರ್ಷದಲ್ಲಿ ಲಾಭ ಗಳಿಕೆಯಲ್ಲಿ ಅಭೂತಪೂರ್ವ ಪ್ರಗತಿ ಸಾಧಿಸಿದ್ದು, ಬ್ಯಾಂಕಿನ ನಿವ್ವಳ ಲಾಭವು ರೂ.10.45 ಕೋಟಿಯಾಗಿರುತ್ತದೆ. ಇದು ಬ್ಯಾಂಕಿನ ಚರಿತ್ರೆಯಲ್ಲಿಯೇ ಅತ್ಯಂತ ಹೆಚ್ಚಿನ ಲಾಭವಾಗಿರುತ್ತದೆ. ಕಳೆದ 6 ವರ್ಷಗಳಿಂದ ಪ್ರಸ್ತುತ ಆಡಳಿತ ಮಂಡಳಿಯು ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಇವರ ಮುಂದಾಳತ್ವದಲ್ಲಿ ಬ್ಯಾಂಕ್ ಪ್ರಗತ್ತಿಯತ್ತ ದಾಪುಗಾಲು ಇಡುತ್ತಿದೆ. ಬ್ಯಾಂಕಿನ ಕಾರ್ಯವ್ಯಾಪ್ತಿಯು ಇಡೀ ಕರ್ನಾಟಕ ರಾಜ್ಯಕ್ಕೆ ವಿಸ್ತರಿಸಿದೆ. ಬ್ಯಾಂಕಿನ ವ್ಯವಹಾರವನ್ನು ಸಂಪೂರ್ಣ ಕೋರ್ ಬ್ಯಾಂಕಿAಗ್ ಮುಖಾಂತರ ಕಾರ್ಯ ನಡೆಸುತ್ತಿದ್ದು, ಇತರ ಖಾಸಗಿ ಮತ್ತು ವಾಣಿಜ್ಯ ಬ್ಯಾಂಕುಗಳು ನೀಡುವ ಎಲ್ಲಾ ಸೇವೆ ಮತ್ತು ಸೌಲಭ್ಯಗಳು ನಮ್ಮ ಬ್ಯಾಂಕಿನಲ್ಲಿ ದೊರೆಯುತ್ತವೆ. ಡಿಜಿಟಲ್ ಸೇವೆಯಂತಹ ಗೂಗಲ್ ಪೇ, ಫೊನ್ ಪೇ, ಯುಪಿಎ, ಇತರ ಸೌಲಭ್ಯಗಳನ್ನು ಸದ್ಯದಲ್ಲಿಯೇ ಗ್ರಾಹಕರಿಗೆ ಒದಗಿಸುವ ಯೋಜನೆಯನ್ನು ಕೈಗೊಂಡಿದ್ದು ಬ್ಯಾಂಕಿನ ಶಾಖೆಗಳನ್ನು ಇಡೀ ಕರ್ನಾಟಕ ರಾಜ್ಯಕ್ಕೆ ವಿಸ್ತರಿಸಲು ಕಾರ್ಯಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಗ್ರಾಹಕರಿಗೆ ಕಡಿಮೆ ಬಾಡಿಗೆಯಲ್ಲಿ ಲಾಕರ್ ಸೌಲಭ್ಯ, ಕಡಿಮೆ ದರದಲ್ಲಿ ದೇಶ ವಿದೇಶ ವಿಧ್ಯಾ ಭವಿಷ್ಯ ಶಿಕ್ಷಣ ಸಾಲ, ಎಮ್.ಎಸ್.ಎಮ್.ಇ ವ್ಯವಹಾರ ಸಾಲ, ವಾಹನ ಸಾಲ, ವಸತಿ ಸಾಲ, ಮನೆ ಖರೀದಿ, ದುರಸ್ತಿ, ಮದುವೆ, ಗ್ರಹ ಉಪಯೋಗಿ ವಸ್ತು ಖರೀದಿ ಸಾಲವನ್ನು ತ್ವರಿತವಾಗಿ ನೀಡುತ್ತಿದೆ. ಸೇವಾ ಶುಲ್ಕವಿಲ್ಲದೆ ಚಿನ್ನಾಭರಣ ಸಾಲವನ್ನು ನೀಡುತ್ತಿದೆ. ಏಟಿಎಮ್ ಮತ್ತು ಮೊಬೈಲ್ ಬ್ಯಾಂಕಿAಗ್ ಸೌಲಭ್ಯವನ್ನು ಉಚಿತವಾಗಿ ನೀಡುತ್ತಿದೆ. ಕರ್ನಾಟಕದಲ್ಲಿ ಎನ್‌ಆರ್‌ಐ ಸೌಲಭ್ಯವಿರುವ ಎಕೈಕ ಪಟ್ಟಣ ಸಹಕಾರ ಬ್ಯಾಂಕ್ ಆಗಿರುತ್ತದೆ. ಬ್ಯಾಂಕಿನಲ್ಲಿರುವ ಠೇವಣಿಗಳಿಗೆ ಖಾಸಗಿ ಮತ್ತು ವಾಣಿಜ್ಯ ಬ್ಯಾಂಕುಗಳAತೆಯೇ ಭಾರತೀಯ ರಿಸರ್ವ್ ಬ್ಯಾಂಕಿನ ಡಿಪಾಜಿಟ್ ಇನ್ಸೂರೆನ್ಸ್ ಆ್ಯಂಡ್ ಕ್ರೆಡಿಟ್ ಗ್ಯಾರಂಟಿ ಕಾರ್ಪೊರೇಶನ್‌ನಿಂದ (ಆIಅಉಅ) ವಿಮಾ ಸೌಲಭ್ಯವಿದೆ. ಎಂ.ಸಿ.ಸಿ.ಬ್ಯಾAಕ್ ಒಟ್ಟು ಠೇವಣಿಯು ರೂ.676.00 ಕೋಟಿ, ಒಟ್ಟು ಸಾಲ ಮತ್ತು ಮುಂಗಡ ರೂ.532.00 ಕೋಟಿ ತಲುಪಿದ್ದು, ಒಟ್ಟು ವ್ಯವಹಾರವು ರೂ. 1208 ಕೋಟಿ ಆಗಿರುತ್ತದೆ. ಮಾರ್ಚ್ ಅಂತ್ಯಕ್ಕೆ ದುಡಿಯುವ ಬಂಡವಾಳ ರೂ.752.95 ಕೋಟಿ ಮತ್ತು ಶೇರು ಬಂಡವಾಳ ರೂ.31.21 ಕೋಟಿ ಇರುತ್ತದೆ. ಜೊತೆಗೆ ಬ್ಯಾಂಕಿನ ಎನ್.ಪಿ.ಎ. ಪ್ರಮಾಣವು 1.12%ಕ್ಕೆ ತಲುಪಿರುವುದು ಬ್ಯಾಂಕಿನ ಬೆಳವಣಿಗೆ ಉತ್ತಮವಾಗಿದೆ ಎಂಬುದನ್ನು ತೋರಿಸುತ್ತದೆ. ಬ್ಯಾಂಕಿನ ಅಖಂಖ ಪ್ರಮಾಣವು ಆರ್‌ಬಿಐ ನಿಗದಿಪಡಿಸಿರುವ ಕನಿಷ್ಟ ಮಿತಿ ಶೇಕಡಾ 9%ಕ್ಕಿಂತ ಹೆಚ್ಚಿದ್ದು ಅಂದರೆ 23.06% ಆಗಿದ್ದು, ಬ್ಯಾಂಕ್ ಆರೋಗ್ಯಕರವಾಗಿರುವುದನ್ನು ತೋರಿಸುತ್ತದೆ. ಭಾರತೀಯ ರಿಸರ್ವ್ ಬ್ಯಾಂಕ್ ನೇಮಿಸಿದ ಲೆಕ್ಕಪರಿಶೋಧಕರು ನಡೆಸಿದ ಲೆಕ್ಕ ಪರಿಶೋಧನೆಯಲ್ಲಿ ಸತತವಾಗಿ ‘ಎ’ ಶ್ರೇಣಿಯ ಬ್ಯಾಂಕಾಗಿ ಗುರುತಿಸಲ್ಪಟ್ಟಿದ್ದು ಬ್ಯಾಂಕ್ ಆರ್ಥಿಕವಾಗಿ ಸುಧ್ರಡವಾಗಿದೆ ಎಂಬುದನ್ನು÷ತೋರಿಸುತ್ತದೆ. ಬ್ಯಾಂಕಿನ ಪ್ರಗತಿಯ ಬಗ್ಗೆ ವಿಶೇಷ ಕಾಳಜಿ ವಹಿಸುತ್ತಿರುವ ಸಮರ್ಥ ಆಡಳಿತ ಮಂಡಳಿ, ಅದಕ್ಕನುಗುಣವಾಗಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ವರ್ಗದ ಶ್ರಮ ಹಾಗೂ ಬ್ಯಾಂಕಿನ ಪ್ರಗತಿಯತ್ತ ಗಮನಹರಿಸಿ ಕಾರ್ಯಯೋಜನೆಯನ್ನು ಹಮ್ಮಿಕೊಂಡಿರುವ ಕಾರಣ ಭಾರತೀಯ ರಿಸರ್ವ್ ಬ್ಯಾಂಕಿನ ಎಲ್ಲಾ ಮಾನದಂಡಗಳನ್ನು ಪೂರ್ಣಗೊಳಿಸಿ 22 ವರ್ಷಗಳ ನಂತರ ಪ್ರಸ್ತುತ ಆಡಳಿತ ಮಂಡಳಿಯ ಮುಂದಾಳತ್ವದಲ್ಲಿ ಬ್ರಹ್ಮಾವರದಲ್ಲಿ 2024ನೇ ಮಾರ್ಚ್ ತಿಂಗಳಲ್ಲಿ 17ನೇ ಶಾಖೆಯನ್ನು ಮತ್ತು ನವಂಬರ್ ತಿಂಗಳಲ್ಲಿ 18ನೇ ಶಾಖೆಯನ್ನು ಬೆಳ್ತಂಗಡಿಯಲ್ಲಿ ಪ್ರಾರಂಭಿಸಲಾಗಿದೆ. ಪ್ರಸ್ತುತ ಎಂ.ಸಿ.ಸಿ ಬ್ಯಾಂಕ್ ಸುಸಜ್ಜಿತ ಆಡಳಿತ ಕಛೇರಿ ಮತ್ತು ಸಂಸ್ಥಾಪಕರ ಶಾಖೆ ಹಂಪನಕಟ್ಟ, ಅಶೋಕನಗರ, ಕಂಕನಾಡಿ, ಕುಲಶೇಕರ, ಮೋರ್ಗನ್ಸ್ಗೇಟ್, ಮೂಡಬಿದ್ರಿ, ಶಿರ್ವ, ಬಜಪೆ, ಕಿನ್ನಿಗೋಳಿ, ಸುರತ್ಕಲ್, ಉಳ್ಳಾಲ, ಉಡುಪಿ, ಕುಂದಾಪುರ, ಪುತ್ತೂರು, ಬಿ.ಸಿ.ರೋಡ್, ಕಾರ್ಕಳ, ಬ್ರಹ್ಮಾವರ ಮತ್ತು ಬೆಳ್ತಂಗಡಿ ಹೀಗೆ 18 ಶಾಖೆಗಳನ್ನು ಹೊಂದಿರುವ ಎಂ.ಸಿ.ಸಿ. ಬ್ಯಾಂಕ್ ತನ್ನ 19ನೇ ಶಾಖೆಯನ್ನು ದಿನಾಂಕ 02.03.2025ರಂದು ಬೆಳ್ಮಣ್‌ನಲ್ಲಿ ಉದ್ಘಾಟಿಸಲಿದೆ.ಶಾಖೆಯ ಉದ್ಘಾಟನೆಯ ಕಾರ್ಯಕ್ರಮವು ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಇವರ ಅಧ್ಯಕ್ಷತೆಯಲ್ಲಿ ನಡೆಸಿಯಲಿದೆ. ಶಾಖೆಯ ಉದ್ಘಾಟನೆಯನ್ನು ಶ್ರೀ ಐವನ್ ಡಿಸೋಜ, ಶಾಸಕರು, ಕರ್ನಾಟಕ ವಿಧಾನ ಪರಿಷತ್ ಇವರು ನಡೆಸಿಕೊಡಲಿರುವರು. ಸಂತ ಜೋಸೆಪ್ಸ್ ಚರ್ಚ್, ಬೆಳ್ಮಣ್ ಇದರ ಧರ್ಮಗುರುಗಳಾದ ವಂ. ಫಾ| ಫ್ರೆಡ್ರಿಕ್ ಮಸ್ಕರೇನ್ಹಸ್ ಇವರು ಆಶಿರ್ವಚನ ಕೈಗೊಳ್ಳುವರು. ದಾಯ್ಜಿವಲ್ಡ್ ಮೀಡಿಯಾ ಪ್ರೆöÊ.ಲಿ. ಇದರ ಸಂಸ್ಥಾಪಕರಾದ ಶ್ರೀ ವಾಲ್ಟರ್ ನಂದಳಿಕೆ ಮುಖ್ಯ ಅತಿಥಿಯಾಗಿದ್ದು, ಬೆಳ್ಮಣ್ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀಮತಿ ರಾಮೇಶ್ವರಿ ಎಮ್. ಶೆಟ್ಟಿ ಗೌರವಾನ್ವಿತ ಅತಿಥಿಗಳಾಗಿರುವರು.ಹಾಗೆಯೇ ಬ್ರಹ್ಮಾವರ ಶಾಖೆಯ ಎಟಿಎಮ್ ಉದ್ಘಾಟನೆ: ನೆಲಮಹಡಿ, ಶೇಷಗೋಪಿ ಪ್ಯಾರಡೈಸ್, ರಾ.ಹೆ.66, ಆಕಾಶವಾಣಿ ವೃತ್ತದ ಬಳಿ, ವಾರಂಬಳ್ಳಿ, ಬ್ರಹ್ಮಾವರದಲ್ಲಿರುವ ಎಮ್‌ಸಿಸಿ ಬ್ಯಾಂಕಿನ ಶಾಖೆಯ ಎಟಿಎಮ್ ಉದ್ಘಾಟನೆ ಸೋಮವಾರ ಮಾರ್ಚ್ 3 ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.ಬ್ಯಾಂಕಿನ ಆಡಳಿತ ಮಂಡಳಿ*ಪ್ರಸ್ತುತ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಅಧ್ಯಕ್ಷ ಹಾಗೂ ಜೆರಾಲ್ಡ್ ಡಿಸಿಲ್ವಾ ಉಪಾಧಕ್ಷರಾಗಿದ್ದು, ಶ್ರೀ ಅಂಡ್ರೂ÷್ಯ ಡಿಸೋಜ, ಶ್ರೀ ಅನಿಲ್ ಪತ್ರಾವೊ, ಡಾ| ಜೆರಾಲ್ಡ್ ಪಿಂಟೊ, ಶ್ರೀ ಡೇವಿಡ್ ಡಿಸೋಜ, ಶ್ರೀ ಎಲ್‌ರೊಯ್ ಕ್ರಾಸ್ಟೊ, ಶ್ರೀ ರೋಶನ್ ಡಿ’ಸೋಜ, ಶ್ರೀ ಹೆರಾಲ್ಡ್ ಮೊಂತೇರೊ, ಶ್ರೀ ಜೆ. ಪಿ. ರೊಡ್ರಿಗಸ್, ಶ್ರೀ ವಿನ್ಸೆಂಟ್ ಲಸ್ರಾದೊ, ಶ್ರೀ ಮೆಲ್ವಿನ್ ವಾಸ್, ಶ್ರೀಮತಿ ಐರಿನ್ ರೆಬೆಲ್ಲೊ, ಡಾ| ಫ್ರೀಡಾ ಡಿಸೋಜ, ನಿರ್ದೇಶಕರಾಗಿದ್ದು, ಶ್ರೀ ಸಿ.ಜಿ. ಪಿಂಟೊ, ಶ್ರೀ ಸುಶಾಂತ್ ಸಲ್ಡಾನ್ಹಾ ವೃತ್ತಿಪರ ನಿರ್ದೇಶಕರಾಗಿರುತ್ತರೆ. ಶ್ರೀ ಪೆಲಿಕ್ಸ್ ಡಿಕ್ರುಜ್, ಶ್ರೀ ಆಲ್ವಿನ್ ಮೊಂತೇರೊ ಹಾಗೂ ಶ್ರೀಮತಿ ಶರ್ಮಿಳಾ ಮಿನೇಜಸ್ ವ್ಯವಸ್ಥಾಪನ ಸಮಿತಿಯ ಸದಸ್ಯರಾಗಿರುತ್ತಾರೆ. ಪ್ರಸ್ತುತ ಶ್ರೀ ಸುನಿಲ್ ಮಿನೇಜಸ್ ಮಹಾಪ್ರಬಂಧಕರಾಗಿ, ಒಟ್ಟು, 185 ಸಿಬ್ಬಂದಿಗಳು ಆಡಳಿತ ಕಛೇರಿ ಮತ್ತು ಶಾಖೆಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ.

ಪ್ರಾದೇಶಿಕ ವಾರ್ತೆಗಳು

MCC Bank with a History of 113 years and a Business Turnover of Rs. 1200 Crore inaugurates its 19th branch at Belman

M.C.C. Bank, which has a 113-years history, has achieved excellent progress in the banking sector, declaring 10% dividend to its members for the financial year 2023-24. The bank has been consistently making profit and during 2023-24, the bank has come out with an unprecedented net profit of Rs. 10.45 crore, the highest in the bank’s history. The current management, under the leadership of ‘Sahakara Ratna’ Shri Anil Lobo, has been driving the bank’s progress over the past six years. The bank’s operations have expanded across Karnataka. It operates fully on core banking and offers all the products and services available in other private and public sector banks. The bank has plans to provide digital services such as Google Pay, PhonePe, UPI, and more are underway. The bank is also working on expanding its branches across Karnataka state.The bank has been providing various financial products, including locker facilities at low costs, affordable education loans for domestic and international studies, MSME loans, vehicle loans, housing loans, loans for house repairs, wedding, and purchase of household items. It offers gold loans without processing fees and provides ATM and mobile banking services free of charge. M.C.C. Bank is the only urban co-operative bank in Karnataka providing NRE accounts to NRIs. Deposits in the bank are insured by the Deposit Insurance and Credit Guarantee Corporation (DICGC), as per the guidelines of the Reserve Bank of India (RBI).M.C.C. Bank’s total deposits amount to Rs. 676 crore, total loans and advances stand at Rs. 532 crore, and the total business has reached Rs. 1208 crore. As on 31st March, 2024, the working capital of the bank was Rs.752.95 crore, and the share capital was Rs. 31.21 crore. The bank’s NPA ratio has improved to 1.12%, showing a significant reduction in NPA. The bank’s capital adequacy ratio, which exceeds the RBI’s minimum requirement of 9%, stands at 23.06%, indicating a healthy financial position. The bank has been continuously rated as ‘A’ grade bank by the auditors appointed by the RBI, demonstrating its strong financial health. With the constant efforts of the efficient management team, the dedicated staff, and a well-laid out strategic plan, the bank has met all the regulatory requirements set by the Reserve Bank of India and opened its 17th branch at Brahmavara in March 2024 and 18th branch at Belthangady after 22 years. Now, M.C.C. Bank is set to inaugurate its 19th branch at Belman March 2, 2025.The programme will be presided over by Sahakara Ratna Shri Anil Lobo, President of MCC Bank. Branch will be inaugurated by Mr Ivan Dsouza, MLC, Govt of Karnataka, Rev. Fr Frederick Mascarenhas, Parish Priest of St Joseph’s Church, Belman will bless the branch premises, Mr Walter Nandalike, Founder and MD of Daijiwolrd Media Pvt Ltd will be the chief guest. Smt. Rameshwari M. Shetty, President of Belman Grama Panchayath will be the Guests of honour.Similarly, the inauguration of the ATM at the Brahmavar branch: The ATM of MCC Bank’s branch, located at ground floor of Sheshagopi Paradise, NH-66, near Akashvani Circle, Varamballi, Brahmavar, will be inaugurated on Monday, March 3, at 10:00 AM.Bank’s Management: The current Board of Directors includes ‘Sahakara Ratna’ Shri Anil Lobo as the president, Shri Gerald D’Silva as vice-president, Shri Andrew D’Souza, Shri Anil Patrao, Dr Gerald Pinto, Shri David D’Souza, Shri Elroy Crasto, Shri Roshan D’Souza, Shri Herald Monteiro, Shri J.P. Rodrigues, Shri Vincent Lasrado, Shri Melwin Vas, Smt. Irene Rebello, and Dr Freeda D’Souza as directors. Shri C.G. Pinto and Shri Sushanth Saldanha as Professional directors. The Board of Management consists of Shri Felix D’Cruz, Shri Alwin Monteiro and Smt. Sharmila Menezes. Currently, Shri Sunil Menezes serves as the General Manager, with a total of 185 staff members working at the administrative office and branches.

ಪ್ರಾದೇಶಿಕ ವಾರ್ತೆಗಳು

ಮಹಾನಗರ ಪಾಲಿಕೆ ಅಧಿಕಾರಿ ನಾಗೇಂದ್ರ ಅವರಿಗೆ ಕಲಾರತ್ನ ಪ್ರಶಸ್ತಿ.

ಮಂಗಳೂರು -Film field, ಸಂಗೀತ ಕ್ಷೇತ್ರ, ಉದ್ಯೋಗ ಕ್ಷೇತ್ರ, ರಂಗಭೂಮಿ, TVನಿರೂಪಕ, ಸಾಹಿತ್ಯ ,ಸಾಮಾಜಿಕ ಕಳಕಳಿ, cooking field, ಎಲ್ಲವನ್ನು ಪರಿಗಣಿಸಿ ಮಂಗಳೂರು ಮಹಾ ನಗರ ಪಾಲಿಕೆ ಅಧಿಕಾರಿ ನಾಗೇಂದ್ರ ಅವರಿಗೆ Axis Bank max ರವರು ಕಲಾರತ್ನ ಅವಾರ್ಡ್ ನೀಡಿರುತ್ತಾರೆ

ಪ್ರಾದೇಶಿಕ ವಾರ್ತೆಗಳು

ಮಾ.1ರಿಂದ 9ರವರೆಗೆ ಕಾವೂರು ಮಹಾಲಿಂಗೇಶ್ವರನ ಸನ್ನಿಧಿಯಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ

ಮಂಗಳೂರು: “ಇತಿಹಾಸ ಪ್ರಸಿದ್ಧ ಕಾವೂರು ಶ್ರೀ ಮಹಾಲಿಂಗೇಶ್ವರನ ಸನ್ನಿಧಿಯಲ್ಲಿ ಮಾರ್ಚ್ 6ರಂದು ಬೆಳಗ್ಗೆ ಗಂಟೆ 11ರಿಂದ 12ರವರೆಗೆ ನವೀಕೃತ ಗರ್ಭಗೃಹದಲ್ಲಿ ಮಹಾಲಿಂಗೇಶ್ವರ ದೇವರ ಪುನಃ ಪ್ರತಿಷ್ಠಾಪನಾ ಕಾರ್ಯಕ್ರಮ ಮತ್ತು ಮಾರ್ಚ್ 9ರಂದು ಬೆಳಗ್ಗೆ 8:10ರಿಂದ 8:40ರ ಮೀನಲಗ್ನ ಸುಮುಹೂರ್ತದಲ್ಲಿ ಮಹಾಲಿಂಗೇಶ್ವರ ದೇವರಿಗೆ ಬ್ರಹ್ಮಕಲಶಾಭಿಷೇಕವು ಜರುಗಲಿರುವುದು”ಎಂದು ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. “ಊರಿನ ಜನರು ಪ್ರಾಕೃತಿಕ ವಿಕೋಪ ಮತ್ತು ಸಂಕಷ್ಟಗಳಿಂದ ಮುಕ್ತವಾಗಿ ನೆಮ್ಮದಿಯ ಜೀವನವನ್ನು ನಡೆಸಲು ನಮ್ಮ ದೇವಸ್ಥಾನ, ದೈವಸ್ಥಾನ ಹಾಗೂ ಆರಾಧನಾ ಕೇಂದ್ರಗಳಲ್ಲಿ ನಡೆಯುವ ಧಾರ್ಮಿಕ ವಿಧಿ ವಿಧಾನಗಳು ಹಾಗೂ ಪುಣ್ಯಕಾರ್ಯಗಳು ಕಾರಣೀಭೂತವಾಗಿವೆ. ಧಾರ್ಮಿಕ ಕಾರ್ಯಗಳು ನಿರಂತರವಾಗಿ ನಡೆಯುವ ಪುಣ್ಯ ಕ್ಷೇತ್ರ ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಎಂಬುದು ಇತಿಹಾಸ. ಸುಮಾರು 800 ವರ್ಷಕ್ಕೂ ಮಿಕ್ಕಿದ ಇತಿಹಾಸವಿದೆ. ಕಾವೂರು, ಬಂಗ್ರಕೂಳೂರು, ಪಂಜಿಮೊಗರು, ಪಡುಕೋಡಿ, ಕುಂಜತ್ತಬೈಲ್, ಮರಕಡ, ಪಡುಶೆಡ್ಡೆ- ಜಾರ ಎಂಬ ಏಳು ಗ್ರಾಮಗಳಿಗೆ ಮಾಗಣೆ ದೇವಾಲಯವಾಗಿರುವ ಈ ದೇವಸ್ಥಾನವು 1982ನೇ ಇಸವಿಯಲ್ಲಿ ಜೀರ್ಣೋದ್ಧಾರಗೊಂಡಿರುತ್ತದೆ. ಶ್ರೀ ಮಹಾಲಿಂಗೇಶ್ವರ ದೇವರು ಊರ-ಪರವೂರ ಸಹಸ್ರಾರು ಭಕ್ತರ ಬೇಡಿಕೆ-ಇಷ್ಟಾರ್ಥಗಳನ್ನು ಅನುಗ್ರಹಿಸುವ ಇಷ್ಟದೇವರಾದ ಕಾರಣ ಕ್ಷೇತ್ರದ ಭಕ್ತರ ಸಂಖ್ಯೆ ಅಪಾರವಾಗಿ ಬೆಳೆಯುತ್ತಾ ಬಂದಿದೆ. 1996ರಲ್ಲಿ ಕ್ಷೇತ್ರದಲ್ಲಿ ನೂತನ ಕಲ್ಯಾಣ ಮಂಟಪ, ವಸಂತ ಮಂಟಪ, 2004ರಲ್ಲಿ ಬ್ರಹ್ಮರಥ, ಜಳಕದ ಕೆರೆ, 2009ರಲ್ಲಿ ಸುತ್ತು ಪೌಳಿ, ಏಕಶಿಲಾ ಧ್ವಜಸ್ತಂಭ ನಿರ್ಮಾಣಗೊಂಡಿರುತ್ತದೆ. ಈ ಬಾರಿ ಗರ್ಭಗುಡಿಯ ಜೀರ್ಣೋದ್ಧಾರ, ಪಾಕಶಾಲೆ, ಅನ್ನಛತ್ರ, ಸಭಾಭವನಗಳ ನಿರ್ಮಾಣವಾಗಿದೆ“ ಎಂದರು.”ಮಾರ್ಚ್ 1ರ ಶನಿವಾರದಿಂದ ಮೊದಲ್ಗೊಂಡು ವೇದಮೂರ್ತಿ ಬ್ರಹ್ಮಶ್ರೀ ಕುಡುಪು ನರಸಿಂಹ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮ ಹಾಗೂ ಮಾರ್ಚ್ 9ರ ವರೆಗೆ ನಡೆಯುವ ಶ್ರೀ ಮಹಾಲಿಂಗೇಶ್ವರ ದೇವರ ಪುನಃ ಪ್ರತಿಷ್ಠಾಪನಾ ಕಾರ್ಯಕ್ರಮ ಹಾಗೂ ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಹಾಕಲಾಶಾಭಿಶೇಕಕ್ಕೆ ಭಕ್ತಭಿಮಾನಿಗಳು ತ್ರಿಕರಣಪೂರ್ವಕವಾಗಿ ಸಹಕರಿಸಬೇಕು“ ಎಂದು ಹೇಳಿದರು. ಹೊರೆಕಾಣಿಕೆ ಸಮಿತಿ ಸಂಚಾಲಕ ರಮಾನಂದ ಭಂಡಾರಿ ಮಾತಾಡಿ, ”ಮಾರ್ಚ್ 1ರಂದು ಕೂಳೂರು, ಪಡುಕೋಡಿ, ಶಾಂತಿನಗರ, ಗಾಂಧಿನಗರ, ಅತ್ರಬೈಲು, ಕುಂಜತ್ತಬೈಲು, ಮರಕಡ, ಕಾವೂರು, ಪಡುಶೆಡ್ಡೆಜಾರ, ಬೋಂದೇಲ್, ಪಚ್ಚನಾಡಿ, ಪದವಿನಂಗಡಿ, ಮೇರಿಹಿಲ್, ಕೊಂಚಾಡಿ, ಮುಗ್ರೋಡಿ ಹಾಗೂ ಮಾರ್ಚ್ 2ರಂದು ಸಂಜೆ 4 ಗಂಟೆಗೆ ಕೆಎಚ್ ಬಿ ಕಾಲೋನಿ ಹಾಗೂ ಬೋಂದೆಲ್ ನಿಂದ ಹೊರೆಕಾಣಿಕೆ ಮೆರವಣಿಗೆ ಹೊರಡಲಿದೆ“ ಎಂದು ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ್ ಭಟ್, ದೇವಳದ ಕಾರ್ಯ ನಿರ್ವಹಣಾಧಿಕಾರಿ ಶ್ವೇತಾ ಪಳ್ಳಿ, ಆಶಿಕ್ ಕುಮಾರ್ ಬಳ್ಳಾಲ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ಪ್ರಭು, ಅವಿನಾಶ್ ನಾಯ್ಕ್ ಪಂಜಿಮೊಗರುಗುತ್ತು, ದೀಪಕ್ ಪೂಜಾರಿ, ಕಿಶೋರ್ ಕುಮಾರ್, ಹರೀಶ್ ಶೆಟ್ಟಿ, ಸದಾಶಿವ, ಗಿರಿಜಾ ಭಂಡಾರಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.ಚಿತ್ರಗಳು – ಸತೀಶ್ ಕಾಪಿಕಾಡ್

ಪ್ರಾದೇಶಿಕ ವಾರ್ತೆಗಳು

ಅಭಾಸಾಪ ಪುತ್ತೂರು ತಾಲೂಕು ಸಮಿತಿ ಅಧ್ಯಕ್ಷರಾಗಿ ಗಣರಾಜ ಕುಂಬ್ಳೆ

ಮಂಗಳೂರು: ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನ ಪುತ್ತೂರು ತಾಲೂಕು ಸಮಿತಿ ಅಧ್ಯಕ್ಷರಾಗಿ ಗಣರಾಜ ಕುಂಬ್ಳೆಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಡಾ.ಶ್ರೀಪತಿ ಕಲ್ಲೂರಾಯ, ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ ಭಟ್ ದ್ವಾರಕ ,ಕಾರ್ಯದರ್ಶಿಯಾಗಿ ಚೇತನ್ ಮೊಗ್ರಾಲ್ , ಕೋಶಾಧಿಕಾರಿಯಾಗಿ ಅವಿನಾಶ ಕೊಡೆಂಕಿರಿ , ಜತೆ ಕಾರ್ಯದರ್ಶಿಯಾಗಿಸ್ವಪ್ನ ಉದಯ ಕುಮಾರ , ಮಾಧ್ಯಮ ಪ್ರಮುಖ್ ಆಗಿ ನವೀನ ಕೃಷ್ಣ ಉಪ್ಪಿನಂಗಡಿ ,ಸಮಿತಿ ಸದಸ್ಯರಾಗಿ ಕುಮಾರ ಪೆರ್ನಾಜೆ ,ಬಾಬು ನಾಯ್ಕ ದೇವಸ್ಯ ಆಯ್ಕೆಯಾಗಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ವಿ.ಟಿ.ರಾಜಶೇಖರ್, ಅಸಾದಿ, ಡೇಸಾ ಒಂದು ಕಾಲಕ್ಕೆ ಜನಮನ ತಟ್ಟಿದವರು: ಡಾ. ಇಸ್ಮಾಯೀಲ್

ಮಂಗಳೂರು, ಫೆ.25: ನಮ್ಮನ್ನಗಲಿದ ಹಿರಿಯ ಪತ್ರಕರ್ತ ವಿ.ಟಿ.ರಾಜಶೇಖರ ಶೆಟ್ಟಿ, ವಿಶ್ರಾಂತ ಪ್ರಾಧ್ಯಾಪಕ ಪ್ರೊ. ಮುಝಫ್ಫರ್ ಅಸಾದಿ ಮತ್ತು ಮಾನವ ಹಕ್ಕುಗಳಿಗಾಗಿ ಹೋರಾಡಿದ ಪಿ.ಬಿ.ಡೇಸಾ ಒಂದು ಕಾಲಕ್ಕೆ ಜನಸಾಮಾನ್ಯರ ಜನಮನ ತಟ್ಟಿದವರು ಮತ್ತು ಯುವಕರನ್ನು ಒಟ್ಟುಗೂಡಿಸಿದವರು ಎಂದು ನಿವೃತ್ತ ಪ್ರಾಂಶುಪಾಲ ಹಾಗೂ ಮಹಾತ್ಮ ಗಾಂಧಿ ಶಾಂತಿ ಪ್ರತಿಷ್ಠಾನ(ರಿ) ಕಾರ್ಯದರ್ಶಿ ಡಾ. ಇಸ್ಮಾಯೀಲ್ ಎನ್ ಹೇಳಿದ್ದಾರೆ. ದಲಿತ್ ವಾಯ್ಸ ‘ಸಂಪಾದಕ ವಿ.ಟಿ.ರಾಜಶೇಖರ , ಪ್ರೊ. ಮುಝಫ್ಫರ್ ಅ ಸ್ಸಾದಿ ಮತ್ತು ಪಿ.ಬಿ.ಡೇಸಾ ಇವರಿಗೆ ಮಂಗಳವಾರ ನಗರದ ಖಾಸಾಗಿ ಹೋಟೆಲ್ ಸಭಾಂಗಣದಲ್ಲಿ ಆಯೋಜಿಸಲಾದ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದರು.ಮೂವರು ಬೇರೆ ಬೇರೆ ಸಮುದಾಯದಿಂದ ಬಂದವರಾಗಿದ್ದರೂ ಇವರ ಚಿಂತನೆ ಒಂದೇ ಆಗಿತ್ತು ಎಂದರು.ಮೈಸೂರು ವಿವಿಯಲ್ಲಿ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಆ ವಿಭಾಗಕ್ಕೆ ದೊಡ್ಡ ಕೊಡುಗೆಯನ್ನು ಅವರು ನೀಡಿದ್ದರು. ಧೀಮಂತ ಅಧ್ಯಾಪಕರಾಗಿ ವಿದ್ಯಾರ್ಥಿಗಳೊಂದಿಗೆ ಸೇರಿಕೊಂಡು ತೆರೆದ ಕಣ್ಣುಗಳಿಂದ ಸಮಾಜವನ್ನು ನೋಡಿದವರು. ತನಗೆ ಬೇಕಾಗಿ ಸಂಘಟನೆ ಕಟ್ಟಿಕೊಂಡಿರಲಿಲ್ಲ. ಹೀಗಾಗಿ ಅವರಿಗೆ ವಿವಿ ಉಪಕುಲಪತಿಯಾಗಿ ಅವಕಾಶ ಸಿಗಲಿಲ್ಲ ಎಂದರು.ಡೇಸಾ ಅವರು ತನ್ನ ಬಗ್ಗೆ ಚಿಂತನೆ ನಡೆಸುವುದಕ್ಕಿಂತ ಇನ್ನೊಬ್ಬರ ಬಗ್ಗೆ ಚಿಂತನೆ ನಡೆಸಿದವರು ಎಂದರು. ಆಧುನಿಕ ಅಂಬೇಡ್ಕರ್ ವಿ.ಟಿ .ರಾಜಶೇಖರ್: ವಿ.ಟಿ .ರಾಜಶೇಖರ್ ಅವರ ಪುತ್ರ ಅಮ್ನೆಸ್ಟಿ ಇಂಟರ್‌ನ್ಯಾಶನಲ್‌ನ ಮಾಜಿ ಪ್ರಧಾನ ಕಾರ್ಯದರ್ಶಿಸಲೀಲ್ ಶೆಟ್ಟಿ ಮಾತನಾಡಿ ದಲಿತರಿಗಾಗಿ ಶ್ರಮಿಸಿದ ಆಧುನಿಕ ಅಂಬೇಡ್ಕರ್ ಆಗಿದ್ದರು ಎಂದು ಹೇಳಿದರು.ಅವರು ಬರೆದದ್ದು ಇಂಗ್ಲಿಷ್‌ನಲ್ಲಿ ಜಾಸ್ತಿ. ಅದು ದಲಿತರಿಗೆ ಹೆಚ್ಚು ಮುಟ್ಟಲಿಲ್ಲ. ಅವರ ಚಿಂತನೆಗಳು ಎಂದೆಂದಿಗೂ ಸಕಾಲಿಕವಾಗಿದೆ ಎಂದರು.ಪಿ.ಬಿ .ಡೇಸಾ ಅವರ ಪುತ್ರಿ ಪ್ರೀತಿಕಾ ಅವರು ಮಾತನಾಡಿ ತನ್ನ ತಂದೆಯ ಜೀವನ ಸರಳವಾಗಿತ್ತು. ನಾನಾ ಸವಾಲುಗಳು ಅವರ ಬದುಕಿನಲ್ಲಿ ಎದುರಾಗಿದ್ದರೂ ಅವೆಲ್ಲವನ್ನು ಬದಿಗೊತ್ತಿ ಇತರಿಗಾಗಿ ದುಡಿದರು ಎಂದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್, ಪರಿಶಿಷ್ಟ ಜಾತಿಗಳು ಮತ್ತು ಬುಡಕಟ್ಟು ಸಂಘ ಸಂಸ್ಥೆಗಳ ಮಹಾ ಒಕ್ಕೂಟದ ಅಧ್ಯಕ್ಷ ಲೋಲಾಕ್ಷ ಮಾತನಾಡಿದರು.ಮಂಗಳೂರು ವಿವಿ ಪ್ರಾಧ್ಯಾಪಕ ಎಂ.ಪಿ.ಉಮೇಶ್‌ಚಂದ್ರ, ವಕೀಲರಾದ ಬಿ.ಎ. ಮೊಹಮ್ಮದ್ ಹನೀಫ್, ಪ್ರಮುಖರಾದ ಎನ್.ಜಿ. ಮೋಹನ್, ಖಾಲಿದ್ ತಣ್ಣೀರುಬಾವಿ, ಜೋಶಿ ಸತ್ಯಾನಂದ್, ವಿಕ್ಟರ್ ಕ್ರಾಸ್ತಾ, ರೆನ್ನಿ ಡಿ ಸೋಜ, ಭರತೇಶ್ ಬಜಾಲ್, ಯೂಸುಫ್ ವಕ್ತಾರ್, ಬಾವಾ ಪದರಂಗಿ, ಯೋಗೀಶ್ ಜೆಪ್ಪು, ಕಾಂತಪ್ಪ ಆಲಂಗಾರು, ಸದಾಶಿವ ಸಾಲ್ಯಾನ್, ಸೋಮಪ್ಪ ಆಲಂಗಾರು, ಯಾದವ್ ಶೆಟ್ಟಿ, ಡಾ.ಹರೀದಾಸ್ ರೈ, ಶಾಹಿದಾ, ದಿಲ್‌ಶಾದ್, ಶಾಹಿನ್ ಮತ್ತಿತರರು ಭಾಗವಹಿಸಿದ್ದರು.

ಪ್ರಾದೇಶಿಕ ವಾರ್ತೆಗಳು

ಇಚ್ಛಾಶಕ್ತಿ ಇದ್ದರೆ ಮಾತ್ರ ಜೀವನದಲ್ಲಿ ಸಾಧನೆ ಸಾಧ್ಯ. ಕಣಚೂರು ಸಂಸ್ಥೆಗಳ ಸ್ಥಾಪಕಾಧ್ಯಕ್ಷ ಡಾ.ಯು.ಕೆ.ಮೋನು ಅಭಿಪ್ರಾಯ

ಮಂಗಳೂರು : ನಮ್ಮ ದೇಶದಲ್ಲಿ ಸಾಧನೆ ಮಾಡಲು ವಿಪುಲ ಅವಕಾಶವಿದೆ. ಎಲ್ಲ ವರ್ಗದ ಜನರಿಗೆ ಇಲ್ಲಿ ಬೆಳೆಯಲು ಅವಕಾಶವಿದೆ. ಆದರೆ ಇಚ್ಛಾಶಕ್ತಿ ಬೇಕು. ಹಾಗಿದ್ದರೆ ಮಾತ್ರ ಜೀವನದಲ್ಲಿ ಸಾಧನೆ ಮಾಡಲು ಸಾಧ್ಯ ಎಂದು ಕಣಚೂರು ಸಮೂಹ ಸಂಸ್ಥೆಗಳ ಸ್ಥಾಪಕಾಧ್ಯಕ್ಷ ಡಾ.ಯು.ಕೆ.ಮೋನು ಹೇಳಿದರು. ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಬುಧವಾರ ಮಂಗಳೂರು ಪ್ರೆಸ್‌ಕ್ಲಬ್ ಗೌರವ ಅತಿಥಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ‘ ಕೆಲಸ ಮಾಡಬೇಕೆಂಬ ಛಲವಿತ್ತು. ಹಾಗಾಗಿ ವಿದ್ಯಾಭ್ಯಾಸ ಕಡಿಮೆ ಇದ್ದರೂ ಸಾಧನೆ ಮಾಡಲು ಸಾಧ್ಯವಾಯಿತು ಎಂದರು.ಕೆಲಸ ಮಾಡಬೇಕು, ಸಂಬಳ ಪಡೆಯಬೇಕೆಂಬ ಛಲ ಬಾಲ್ಯದಲ್ಲಿಯೇ ಇತ್ತು. ಆದರೆ ಶಿಕ್ಷಣ 3ನೇ ತರಗತಿಗೆ ಸೀಮಿತವಾಯಿತು.ತಂದೆ ಬ್ರಿಟಿಷ್ ಸರ್ಕಾರದಲ್ಲಿ ನೌಕರನಾಗಿದ್ದರು. ಅನಿವಾರ್ಯ ಸ್ಥಿತಿಯಿಂದ ಬಡತನ ಅನುಭವಿಸಿದ್ದೆವು. ಬಾಲ್ಯದಲ್ಲಿ ಅಡಕೆ ಹೆಕ್ಕುವ ಕೆಲಸ, ಮೂಟೆ ಹೊರುವ ಕೆಲಸ ಸೇರಿದಂತೆ ಹಲವು ರೀತಿಯ ಕೂಲಿ ಕೆಲಸ ಮಾಡಿದ್ದೆ. ಇದ್ದಿಲು ಮಾಡುವ ಕೆಲಸ ಕೂಡ ಮಾಡಿದ್ದೆ,ಹದಿ ಹರೆಯದಲ್ಲೇ ವ್ಯವಹಾರ ಕ್ಷೇತ್ರಕ್ಕೆ ಇಳಿದೆ. ಟಿಂಬರ್ ವ್ಯಾಪಾರದಲ್ಲಿ ಯಶಸ್ಸು ಕಂಡೆ. ಕೆಲವೇ ವರ್ಷದಲ್ಲಿ ರಾಜ್ಯದಲ್ಲೇ ಮುಂಚೂಣಿಯ ಟಿಂಬರ್ ವ್ಯಾಪಾರಿಯಾಗಿ ಗುರುತಿಸಿಕೊಂಡೆ ಎಂದು ಅವರು ಸಾಗಿ ಬಂದ ಹಾದಿಯನ್ನು ಸ್ಮರಿಸಿಕೊಂಡರು.ಈ ನೆಲದ ಕಾನೂನು ಗೌರವಿಸಿ ಪ್ರಾಮಾಣಿಕವಾಗಿ ವ್ಯವಹಾರ ನಡೆಸುತ್ತಾ ಬಂದೆ. ಮಲೇಶ್ಯಾ ,ಸಿಂಗಾಪುರ ಸಹಿತವಿದೇಶಗಳಲ್ಲಿಯೂ ವ್ಯವಹಾರ ಸಂಸ್ಥೆ ಆರಂಭಿಸಿದೆ. ಮೂರನೇ ಕ್ಲಾಸ್ ಕಲಿತರೂ ಇಂಗ್ಲಿಷ್, ಹಿಂದಿ, ಗುಜರಾತಿ, ತಮಿಳು ಸೇರಿದಂತೆ ಹತ್ತಾರು ಭಾಷೆಗಳನ್ನು ಕಲಿತೆ . ಹತ್ತಾರು ದೇಶ ಸುತ್ತಿದ್ದೇನೆ. ನನ್ನ ಮಕ್ಕಳು ಶಿಕ್ಷಣ ಪಡೆಯುವ ಸಂದರ್ಭ ಉತ್ತಮ ಶಿಕ್ಷಣ ಸಿಗಲು ಇರುವ ಹಲವು ತೊಡಕುಗಳನ್ನು ಸ್ವತಃ ಅನುಭವಿಸಿದೆ. ಇದೇ ನೋವು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಲು ಕಾರಣವಾಯಿತು. ಹುಟ್ಟೂರಿನಲ್ಲಿಯೇ ಹಂತಹಂತವಾಗಿ ಶಿಕ್ಷಣ ಸಂಸ್ಥೆಗಳನ್ನು ತೆರೆದೆ. ಮೆಡಿಕಲ್ ಕಾಲೇಜು ಸ್ಥಾಪಿಸುವ ಬಹುಕಾಲದ ಕನಸು ಕೂಡಾ ನನಸಾಯಿತುಮುಂದೆ ಇಂಜಿನಿಯರಿಂಗ್ ಹಾಗೂ ಡೆಂಟಲ್ ಕಾಲೇಜು ಸ್ಥಾಪಿಸುವ ಯೋಜನೆ ಇದೆ ಎಂದು ಯು.ಕೆ.ಮೋನು ತಿಳಿಸಿದರು.ರಾಜಕೀಯ ಆಸಕ್ತಿ ಇತ್ತು. ಆದರೆ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಎಂಎಲ್‌ಎ ಆಗುವ ಕನಸಿತ್ತು. ಪೂರಕ ವಾತಾವರಣವೂ ಇತ್ತು. ಶಾಸಕರಾಗಿದ್ದ ಯು.ಟಿ ರೀದ್ ಅವರ ನಿಧನದಿಂದಾಗಿ ಪುತ್ರ ಯು.ಟಿ.ಖಾದರ್ ಅವಕಾಶ ಪಡೆದರು. ಶಾಸಕನಾಗಿ ಆಯ್ಕೆಯಾದ ಮೊದಲ ಅವಧಿಯಲ್ಲಿ ಖಾದರ್ ಅವರ ಕಾರ್ಯವೈಖರಿಯನ್ನು ಮೆಚ್ಚಿ ಮುಂದೆ ಅವರ ಸೀಟಿಗೆ ಪ್ರಯತ್ನ ಮಾಡಬಾರದೆಂದು ನಿರ್ಧಸಿದೆ. ಖಾದರ್ ರಾಜಕೀಯ ಕ್ಷೇತ್ರದಲ್ಲಿ ನಮ್ಮ ಸಮಾಜಕ್ಕೆ ಗೌರವ ತಂದುಕೊಟ್ಟಿದ್ದಾರೆ ಎಂದು ಅವರು ಹೇಳಿದರು.ಹಿರಿಯ ಪತ್ರಕರ್ತ ಹಿಲರಿ ಕ್ರಾಸ್ತಾ ಕಾರ್ಯಕ್ರಮ ಉದ್ಘಾಟಿಸಿದರು. ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು.ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್, ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ, ಪ್ರೆಸ್‌ಕ್ಲಬ್ ಪ್ರಧಾನಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಉಪಸ್ಥಿತರಿದ್ದರು. ಪ್ರೆಸ್‌ಕ್ಲಬ್ ಕಾರ್ಯದರ್ಶಿ ಪುಷ್ಪರಾಜ್ ಬಿ.ಎನ್ ಕಾರ್ಯಕ್ರಮ ನಿರೂಪಿಸಿದರು.ಚಿತ್ರಗಳು: ಪ್ರೆಸ್ ಕ್ಲಬ್ ಮತ್ತು ಸತೀಶ್ ಕಾಪಿಕಾಡ್

Scroll to Top