ಪ್ರಾದೇಶಿಕ ವಾರ್ತೆಗಳು

ಪ್ರಾದೇಶಿಕ ವಾರ್ತೆಗಳು

ಹಿರಿಯ ಪತ್ರಕರ್ತ ದಿ.ಬಾಳೆಪುಣಿ ಅವರಿಗೆ ಶ್ರದ್ಧಾಂಜಲಿ ಸಭೆ

ಮಂಗಳೂರು: ಇತ್ತೀಚೆಗೆ ನಿಧನರಾದ ಹಿರಿಯ ಪತ್ರಕರ್ತ ದಿ. ಗುರುವಪ್ಪ ಎನ್.ಟಿ.ಬಾಳೆಪುಣಿ ಅವರಿಗೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಶ್ರದ್ಧಾಂಜಲಿ ಸಭೆ ಮಂಗಳವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ನಡೆಯಿತು.ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಮಾತನಾಡಿ ಕಿತ್ತಳೆ ಮಾರುತ್ತಿದ್ದ ನನ್ನನ್ನು ಮೊದಲ ಬಾರಿಗೆ ಸಮಾಜಕ್ಕೆ ಪರಿಚಯಿಸಿದ್ದು ಬಾಳೆಪುಣಿ ಅವರು. ಹಳ್ಳಿಯ ಸಾಮಾನ್ಯ ವ್ಯಕ್ತಿಯಾಗಿದ್ದ ನಾನು ಬಾಳೆಪುಣಿ ಅವರ ಬರಹ ಹಾಗೂ ಪ್ರೋತ್ಸಾಹದಿಂದ ಪ್ರಧಾನಿ ಮೋದಿ ಅವರನ್ನು ಕಾಣುವಂತಾಯಿತು ಎಂದರು.ಹೊಸದಿಗಂತ ಪತ್ರಿಕೆಯ ಸಿಇಒ ಪ್ರಕಾಶ್ ಪಿ.ಎಸ್. ಮಾತನಾಡಿ ನೇರ, ನಡೆನುಡಿಯ ನಿಷ್ಠುರವಾದಿ ಪತ್ರಕರ್ತ ಬಾಳೆಪುಣಿ ಅವರು ತಮ್ಮ ವರದಿಗಳ ಮೂಲಕ ಗ್ರಾಮೀಣ ಬದುಕನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದರು.ದ.ಕ.ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ , ಹಿರಿಯ ಪತ್ರಕರ್ತರಾದ ಆನಂದ ಶೆಟ್ಟಿ, ಚಿದಂಬರ ಬೈಕಂಪಾಡಿ, ರವಿ ಪೊಸವಣಿಕೆ, ಭಾಸ್ಕರ ರೈ ಕಟ್ಟ, ಬಾಳೆಪುಣಿ ಅವರ ಅಣ್ಣನ ಮಗ ಸುಧೀರ್ ನುಡಿ ನಮನ ಸಲ್ಲಿಸಿದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು.

ಪ್ರಾದೇಶಿಕ ವಾರ್ತೆಗಳು

Guillain-Barre Syndrome: Neurologist’s Role and Patient Education

Dr shivanand pai (Consultant neurologist Kmc Mangalore)Guillain-Barre Syndrome (GBS) is a rare but serious autoimmune condition in which the body’s immune system attacks the peripheral nervous system, leading to muscle weakness, tingling, and in severe cases, paralysis. Neurologists play a critical role in diagnosing, managing, and educating patients about this condition to ensure better outcomes and informed decision-making.Understanding GBS: Symptoms and DiagnosisGBS often begins with tingling sensations or weakness in the legs, which can progress to the arms and upper body. In severe cases, patients may experience difficulty breathing, requiring urgent medical attention. Neurologists are trained to recognize these early signs and differentiate GBS from other neurological disorders, such as multiple sclerosis or neuropathy.Diagnosis typically involves a combination of clinical evaluations, including a thorough neurological exam, lumbar puncture to assess cerebrospinal fluid, and nerve conduction studies. Early diagnosis is crucial, as GBS can progress rapidly, and timely intervention significantly affects recovery.Role of Neurologists in GBS ManagementOnce diagnosed, neurologists develop a personalized treatment plan. The two main treatments for GBS are intravenous immunoglobulin (IVIG) and plasmapheresis. Both therapies aim to remove or neutralize the antibodies attacking the nervous system. Neurologists monitor the patient closely during treatment to assess efficacy and manage potential side effects.Additionally, neurologists collaborate with a multidisciplinary team, including physical therapists, occupational therapists, and respiratory specialists, to address the wide-ranging effects of GBS. Long-term rehabilitation often focuses on regaining strength and mobility, with neurologists guiding progress and adapting treatment as needed.Patient Education: A Key ComponentEducating patients and their families is a cornerstone of GBS management. Since the syndrome can be sudden and life-altering, neurologists ensure patients understand the condition, treatment options, and recovery process. Key points in patient education include:Nature of the Condition: Explaining that GBS is an autoimmune disorder and not caused by infections, despite being triggered by certain viral or bacterial infections in some cases. Treatment Overview: Providing details on IVIG and plasmapheresis, including their benefits, risks, and expected outcomes.Recovery Expectations: Emphasizing that recovery varies, with most patients regaining significant function over months or years. However, some may experience lingering weakness or fatigue.Importance of Rehabilitation: Highlighting the role of physical and occupational therapy in regaining strength and independence.Signs of Recurrence: Educating patients on recognizing symptoms of potential relapse, though rare, to seek timely medical care.Emotional Support and AdvocacyDealing with GBS can be emotionally taxing. Neurologists often refer patients to support groups or counseling services to help them cope with the emotional and psychological aspects of the condition. Encouraging patients to connect with others who have experienced GBS fosters a sense of community and understanding.ConclusionNeurologists are integral to the diagnosis, treatment, and education of patients with Guillain-Barré Syndrome. By providing comprehensive care and empowering patients with knowledge, they help improve outcomes and support recovery. Through continued research and patient-centered care, neurologists aim to enhance the quality of life for individuals affected by this challenging condition.

ಪ್ರಾದೇಶಿಕ ವಾರ್ತೆಗಳು

ಉದ್ಯಮಿ ಎಂ. ಅಶೋಕ ಶೇಟ್ ನಿಧನ.

ಮಂಗಳೂರು: ಶ್ವೇತಾ ಜುವೆಲ್ಲಸ್೯ ನ ಮಾಲಕ, ದೈವಜ್ಞ ಬ್ರಾಹ್ಮಣ ಸಮಾಜದ ಕ್ರಿಯಾಶೀಲ ವ್ಯಕ್ತಿತ್ವದ ಎಂ. ಅಶೋಕ್ ಶೇಟ್ (64) ಜನವರಿ 22 ರಂದು ಖಾಸಗಿ ಆಸ್ಪತ್ರೆ ಯಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು.ಮೃತರು ಪತ್ನಿ,ಮೂವರು ಪುತ್ರಿಯರನ್ನು ಅಗಲಿದ್ದಾರೆ. ಅಶೋಕ್ ಶೇಟ್ ಪ್ರಸ್ತುತ ಮಂಗಳೂರು ದೈವಜ್ಞ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಹಾಲಿ ಅಧ್ಯಕ್ಷರಾಗಿದ್ದರು. ದೈವಜ್ಞ ಯುವಕ ಮಂಡಳಿಯ ಅಧ್ಯಕ್ಷರಾಗಿ, ಲಯನ್ಸ್ ಕ್ಲಬ್ ಸೇವಾ ಸಂಸ್ಥೆ, ದೈವಜ್ಞ ಬ್ರಾಹ್ಮಣ ಸಂಘ ಮುಂತಾದ ಅನೇಕ ಸಂಘ- ಸಂಸ್ಥೆಗಳಲ್ಲಿ ಪದಾಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದಾರೆ.ಮಂಗಳೂರು ದೈವಜ್ಞ ಕ್ರೆಡಿಟ್ ಕೋ- ಅಪರೇಟಿವ್ ಸೊಸೈಟಿಯ ಮುಖ್ಯ ಪ್ರವರ್ತಕರಾಗಿದ್ದ ಎಂ ಅಶೋಕ್ ಶೇಟ್ ರವರು ದೈವಜ್ಞ ಸೌರಭ ಪತ್ರಿಕೆಯ ಸಂಸ್ಥಾಪಕ ಪ್ರಕಾಶಕರಾಗಿದ್ದರು. ಸಾಂಸ್ಕೃತಿಕ, ಧಾರ್ಮಿಕ, ಶೈಕ್ಷಣಿಕ ಚಟುವಟಿಕೆಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದ ಅವರು ಸ್ನೇಹಜೀವಿಯಾಗಿದ್ದರು.

ಪ್ರಾದೇಶಿಕ ವಾರ್ತೆಗಳು

ಸೋಲು, ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿದಾಗ ಯಶಸ್ಸು: ಕೃಷ್ಣ ಜೆ. ಪಾಲೆಮಾರ್

ಮಂಗಳೂರು : ನನ್ನ ಉದ್ದಿಮೆಯಲ್ಲಿ ಮೂರು ಬಾರಿ ಸಂಪೂರ್ಣವಾಗಿ ಸೋತಿದ್ದೇನೆ. ಆದರೆ ಊರು ಬಿಟ್ಟಿಲ್ಲ, ಆದರೆ ಮುಂದೆ ಇದರಿಂದ ಹೊರಬರಲಿದ್ದೇನೆ ಎಂಬ ಆತ್ಮವಿಶ್ವಾಸದೊಂದಿಗೆ ಸವಾಲನ್ನು ಸ್ವೀಕರಿಸಿ ಮುಂದೆ ಬಂದಿದ್ದೇನೆ. ಹಾಗಾಗಿ ಜೀವನದಲ್ಲಿ ಎದುರಾಗುವ ಸೋಲು ಹಾಗೂ ಕಷ್ಟಗಳನ್ನು ಸ್ವೀಕರಿಸುವ ಎದೆಗಾರಿಕೆ ನಮ್ಮಲ್ಲಿ ಇದ್ದಾಗ ಯಶಸ್ಸು ಗಳಿಸಲು ಸಾಧ್ಯವಾಗುತ್ತದೆ ಎಂದು ಮಾಜಿ ಸಚಿವ,ಲ್ಯಾಂಡ್‌ಲಿಂಕ್ಸ್ ಸಂಸ್ಥೆಯ ಸಿಇಒ ಕೃಷ್ಣ ಜೆ. ಪಾಲೆಮಾರ್‌ಹೇಳಿದರು.ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಬುಧವಾರ ನಗರದ ಪತ್ರಿಕಾ ಭವನದಲ್ಲಿ ಗೌರವ ಅತಿಥಿ ಸನ್ಮಾನ ಸ್ವೀಕರಿಸಿದ ಅವರು ತಮ್ಮ ಬದುಕಿನ ಸೋಲು ಗೆಲುವಿನ ಹಾದಿಯನ್ನು ತೆರೆದಿಟ್ಟರು. ತಾವು ಬಯಸಿದ ಅಂಕಗಳು ದೊರಕಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗುವುದನ್ನು ನಾವು ಕಾಣುತ್ತಿದ್ದೇವೆ. ಆದರೆ ಜೀವನದಲ್ಲಿ ಎದುರಾಗುವ ಕಷ್ಟಗಳನ್ನು ಆತ್ಮಸ್ಥೈರ್ಯದಿಂದ ಎದುರಿಸುವ ಮನೋಸ್ಥೈರ್ಯವನ್ನು ಬೆಳೆಸಿಕೊಳ್ಳಬೇಕು. ನಮ್ಮ ದುಡಿಮೆಯ ಲಾಭಾಂಶದಲ್ಲಿ ಸಮಾಜಕ್ಕೂ ದೊರಕಬೇಕೆಂಬ ನಿಟ್ಟಿನಲ್ಲಿ ಈವರೆಗೂ ವ್ಯವಹಾರ ನಡೆಸಿಕೊಂಡು ಬಂದಿದ್ದೇನೆ.ಶಾಲೆಗೆ ಹೋಗುತ್ತಿದ್ದ ಸಂದರ್ಭ ಮೋರ್ಗನ್ಸ್‌ಗೇಟ್‌ನ ಗೇರುಬೀಜ ಕಾರ್ಖಾನೆಯೊಂದರಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದ ತಾನು ಮುಂದೊಂದು ದಿನ ಆ ಇಡೀ ಆಸ್ತಿಯನ್ನೇ ಖರೀದಿಸುವಷ್ಟು ಶಕ್ತನಾಗುತ್ತೇನೆಂಬ ಕನಸು ಕಂಡಿರಲಿಲ್ಲ. ಆದರೆ ದುಡಿಮೆ ಹಾಗೂ ವ್ಯವಹಾರದಲ್ಲಿ ಪ್ರಾಮಾಣಿಕತೆ ಹಾಗೂ ಬದ್ಧತೆಯನ್ನು ಮೈಗೂಡಿಸಿಕೊಂಡ ಕಾರಣ ಅದು ಇಂದು ಸಾಧ್ಯವಾಗಿದೆ ಎಂದವರು ಹೇಳಿದರು. ಸಣ್ಣ ಪುಟ್ಟ ವ್ಯವಹಾರ ನಡೆಸುತ್ತಿದ್ದ ಸಂದರ್ಭ ರಿಯಲ್ ಎಸ್ಟೇಟ್ ಆರಂಭಿಸಿದಾಗ ಸಿ.ಎಲ್. ಡಿಸೋಜಾ ಎಂಬವರು ಗಾಡ್‌ಫಾದರ್ ಆಗಿ ಬೆಂಬಲ ನೀಡಿದ ಕಾರಣ ವ್ಯವಹಾರದಲ್ಲಿ ಯಶಸ್ಸು ಗಳಿಸಲು ಸಾಧ್ಯವಾಯಿತು ಎಂದು ನೆನಪಿಸಿಕೊಂಡ ಕೃಷ್ಣ ಪಾಲೆಮಾರ್, ಜಿಲ್ಲಾ ಉಸ್ತುವಾರಿ, ಬಂದರು ಇಲಾಖೆ, ಪರಿಸರ ಇಲಾಖೆಯ ಸಚಿವನಾಗಿಯೂ ಉತ್ತಮವಾಗಿ ಕಾರ್ಯ ನಿರ್ವಹಿಸಿದ ತೃಪ್ತಿ ಇದೆ. ಸಚಿವನಾಗಿದ್ದ ಅವಧಿಯಲ್ಲಿ ಮೆರಿಟೈಮ್ ಬೋರ್ಡ್ ಸ್ಥಾಪನೆ ಮಾಡಿದ ತೃಪ್ತಿ, 40 ಮೈಕ್ರೋನ್‌ಗಿಂತ ಕಡಿಮೆ ಪ್ಲಾಸ್ಟಿಕ್ ಬಳಕೆ ನಿಷೇಧ ಮಾಡಿದ ಬಗ್ಗೆ ಹೆಮ್ಮೆ ಇದೆ ಎಂದರು.ನಮ್ಮ ಕುಡ್ಲ ವಾಹಿನಿ ಸಿಇಒ ಕದ್ರಿ ನವನೀತ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್. ಪ್ರೆಸ್‌ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ , ಕೆ.ಆನಂದ ಶೆಟ್ಟಿ, ಅನ್ನು ಮಂಗಳೂರು . ಮಹಮ್ಮದ್ ಆರಿಫ್ ಪಡುಬಿದ್ರಿ, ವಿಲ್ಫ್ರೆಡ್ ಡಿಸೋಜಾ ಉಪಸ್ಥಿತರಿದ್ದರು. ಅತ್ಮಭೂಷಣ್ ಭಟ್ ಕಾರ್ಯಕ್ರಮ ನಿರೂಪಿಸಿದರು.ಚಿತ್ರಗಳು: ಸತೀಶ್ ಕಾಪಿಕಾಡ್

ಪ್ರಾದೇಶಿಕ ವಾರ್ತೆಗಳು

ದಶಮಾನೋತ್ಸವದ ಸಂಭ್ರಮದಲ್ಲಿ ಡಾ. ಕುಲಾಲ್ಸ್ ಸರ್ವಜ್ಞ ಸೆಕೆಂಡ್ ಒಪೀನಿಯನ್ ಸೆಂಟರ್. ವ್ಯಾಪಕ ಜನ ಪ್ರಶಂಸೆಗೆ ಪಾತ್ರವಾದ ಸೆಕೆಂಡ್ ಒಪೀನಿಯನ್ ಸೆಂಟರ್. ಇದರ ಯಶಸ್ಸಿಗೆ ಕಾರಣ ಅಜಾತಶತ್ರು, ಸವ್ಯಸಾಚಿ ವೈದ್ಯ ಡಾ. ಎಂ.ಅಣ್ಣಯ್ಯ ಕುಲಾಲ್. ಇವರಿಗೆ ಬಡವರ ಬಗ್ಗೆ ಇರುವ ನೈಜ ಕಾಳಜಿ, ತುಡಿತ. ದೇವರಾಜು ಅರಸು ಸರಕಾರಿ ಹಾಸ್ಟೆಲ್ ನಲ್ಲಿ ದಾಖಲೆ 16 ವರ್ಷಗಳ ಕಾಲ ವಿದ್ಯಾರ್ಥಿಯಾಗಿ ಓದಿ ಪಡೆದ ಜಾತ್ಯಾತೀತ ಚಿಂತನೆಯ ಅನುಭವ. ಸಾಹಿತಿ ಸಂಘಟಕ ಖ್ಯಾತ ವಾಗ್ಮಿ ಆಗಿರುವ ಡಾ.ಕುಲಾಲ್ ಪ್ರಸ್ತುತ ಪ್ರತಿಷ್ಠಿತ ಐಎಂಎ ರಾಜ್ಯ ಘಟಕಕ್ಕೆ ಅವಿರೋಧವಾಗಿ ಆಯ್ಕೆ ಆಗಿರುವ ನಿಯೋಜಿತ ಉಪಾಧ್ಯಕ್ಷರು

ಜನಾಭಿಪ್ರಾಯ ವರದಿ.ಮಂಗಳೂರು: ಈಗೀಗ ಖಾಸಗಿ ಹಾಗೂ ಸರಕಾರಿ ಮಟ್ಟದಲ್ಲಿ ಸೆಕೆಂಡ್ ಒಪೀನಿಯನ್ ಆರೋಗ್ಯ ಮಾಹಿತಿಯ ಅಗತ್ಯದ ಬಗ್ಗೆ ಕೇಳಿಬರುತ್ತಿದೆ. ಆದರೆ, ಇದನ್ನು ಒಂದು ದಶಕದ ಹಿಂದೆ ಮನಗಂಡು ಅದನ್ನು ಆರಂಭಿಸಿ ತನ್ನ ವೈದ್ಯ ಮಿತ್ರರ ಜೊತೆಗೂಡಿ ಉಚಿತವಾಗಿ ಸುಮಾರು 5೦೦೦ ಮಂದಿಗೆ ಸೇವೆ ಒದಗಿಸಿ ಸದ್ದಿಲ್ಲದೇ ಸುದ್ದಿ ಆಗಿರುವವರು ಡಾ ಅಣ್ಣಯ್ಯ ಕುಲಾಲ್ ಉಳ್ತೂರು. ಅವರು ತನ್ನ ತಂದೆಯ ನೆನಪಲ್ಲಿ ಸ್ಥಾಪಿಸಿದ ಪುಟ್ಟಣ್ಣ ಕುಲಾಲ್ ಪ್ರತಿಷ್ಠಾನದ ಕುಲಾಲ್ ಹೆಲ್ತ್ ಸೆಂಟರ್ ನ ಆಶ್ರಯದಲ್ಲಿ ಸರ್ವಜ್ಞ ಸೆಕೆಂಡ್ ಒಪೀನಿಯನ್ ಈ ಸೇವೆಯನ್ನು ಕರಾವಳಿ ಮಲೆನಾಡು ಅಲ್ಲದೇ ರಾಜ್ಯದಲ್ಲೇ ಪ್ರಥಮವಾಗಿ ಕೊಡುತ್ತಿರುವವರು. ಅವರ ಈ ಸೇವೆಗೆ ದೇವರಾಜ ಅರಸು ಪ್ರಶಸ್ತಿ, ಡಾ ಬಿ ಸಿ ರಾಯ್ ಪ್ರಶಸ್ತಿ, ಜಿಲ್ಲಾ ರಾಜ್ಯೋತ್ಸವ ಪುರಸ್ಕಾರ ಸಹಿತ ಹತ್ತಾರು ಗೌರವಗಳು. ಐಎಂಎ ಮಂಗಳೂರು ಜೀವ ಮಾನದ ಶ್ರೇಷ್ಠ ಸೇವಾ ಸಾಧನ ರಾಜ್ಯೋತ್ಸವ ಪುರಸ್ಕಾರ ಲಭಿಸಿವೆ. ಇಲ್ಲಿ ಬಡವರಿಗೆ, ನಿರ್ಗತಿಕರಿಗೆ, ಅವಿದ್ಯಾವಂತರಿಗೆ ಅವರಿಗೆ ಅರ್ಥ ಆಗುವ ಹಾಗೆ ಕಾಯಿಲೆಗಳ ಬಗ್ಗೆ ತಿಳಿ ಹೇಳುವುದು, ಕಾಯಿಲೆಯ ಹಂತ, ಅದರ ಮಾರಕ ಪರಿಣಾಮ, ಬೇಕಾದ ಚಿಕಿತ್ಸೆ, ಅದು ಉಚಿತವಾಗಿ ಸಿಗುವ ಆಸ್ಪತ್ರೆಗಳು, ಸರಕಾರದ ಪ್ರಯೋಜನಗಳು, ಖಾಸಗಿಯಾದರೆ ಕಡಿಮೆ ಖರ್ಚಿನಲ್ಲಿ ಮಾಡುವ ಆಸ್ಪತ್ರೆ ವೈದ್ಯರುಗಳು, ಬಡವರಾದರೆ ಖ್ಯಾತ ವೈದ್ಯರ ಮೂಲಕ ಉಚಿತ ಅಭಿಪ್ರಾಯ, ಕ್ಯಾನ್ಸರ್ ಸಹಿತ ಹಲವು ಚಿಕಿತ್ಸೆ ಗಳಿಗೆ ಸಲಹೆ ಸಾಂತ್ವನ ಸಹಿತ ಚಿಕಿತ್ಸೆ, ಅತೀ ಅಗತ್ಯ ಇದ್ದವರಿಗೆ ಒಂದಷ್ಟು ಕ್ರೌಡ್ ಫಂಡಿಂಗ್, ಹೀಗೆ ಸಮಾಜಮುಖಿ ಆರೋಗ್ಯ ಸೇವೆಯನ್ನು ಕಳೆದ 25 ವರ್ಷಗಳಿಂದ ಫ್ಯಾಮಿಲಿ ಮೆಡಿಸಿನ್ ಪಾಲಿಯೇಟಿವ್ ಮೆಡಿಸಿನ ಹಾಗು ಇಂಡಸ್ಟ್ರಿಯಲ್ ಮೆಡಿಸಿನ್ ಸೇವೆ ಕೊಡುತ್ತಾ ಬಂದಿರುವ ಡಾ ಅಣ್ಣಯ್ಯ ಕುಲಾಲ್, ಕಳೆದ ಹತ್ತು ವರ್ಷಗಳಿಂದ ಡಾ ಕುಲಾಲ್ಸ್ ಸರ್ವಜ್ಞ ಸೆಕೆಂಡ್ ಒಪೀನಿಯನ್ ಸೆಂಟರ್ ಮೂಲಕ ನಾಡಿನಾದ್ಯಂತ ರೋಗಿಗಳಿಗೆ ಆಶಾಕಿರಣ ವಾಗಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ಬಂಟ್ಸ್ ಅಸೋಸಿಯೇಷನ್ ಪುಣೆ ಮಲ್ಟಿಸ್ಪೆಷಾಲಿಟಿ ಉಚಿತ ಆರೋಗ್ಯ ತಪಾಸಣಾ ಶಿಬಿರ. ‘ಆರೋಗ್ಯ ಪೂರ್ಣ ಜೀವನ ಪಡೆಯಲು ಎಲ್ಲರೂ ಬಯಸುತ್ತಾರೆ’ -ರೋಹಿತ್ ಶೆಟ್ಟಿ

ವರದಿ: ಹರೀಶ್ ಮೂಡಬಿದ್ರಿ.ಪುಣೆ : ಮನುಷ್ಯ ತನ್ನ ದೈನಂದಿನ ಬದುಕಿನಲ್ಲಿ ಅತ್ಯಂತ ಬಿಡುವಿಲ್ಲದ ಕೆಲಸದಲ್ಲಿ ನಿರತನಾಗಿರುತ್ತಾನೆ ಹಿಂದಿನ ಜೀವನ ಶೈಲಿಗೆ ಹೋಲಿಸಿದರೆ ಇಂದಿನ ಜೀವನ ಶೈಲಿಯೇ ಬೇರೆ .ಜೀವನದ ಜಂಜಾಟದಲ್ಲಿ ಉದ್ಯೋಗ ಒತ್ತಡ ,ಉದ್ಯಮದ ಜವಾಬ್ದಾರಿ,ಮನೆ ಮಕ್ಕಳ ಉಸ್ತುವಾರಿಯಲ್ಲಿ ನಿತ್ಯವು ಸಮಯದ ಕೊರತೆ ನಮಗೆ ಬರುತ್ತದೆ .ಇದರಿಂದ ನಮ್ಮ ದೇಹದಲ್ಲಿ ಹಲವಾರು ರೀತಿಯ ಏರುಪೇರುಗಳು ಆಗುತ್ತವೆ ,ನಂತರ ತನ್ನಿಂತಾನೆ ಯಾವುದಾದರೊಂದು ರೋಗಕ್ಕೆ ತುತ್ತಾಗುತ್ತೇವೆ , ಇಂದಿನ ದಿನಗಳಲ್ಲಿ ಮನುಷ್ಯರಲ್ಲಿ ಕಾಣಸಿಗುವ ಯಾವುದಾದರೊಂದು ಆರೋಗ್ಯ ತೊಂದರೆಗಳು ಸಾಮಾನ್ಯವಾಗಿವೆ . ಆದರೆ ,ಈಗಿನ ದೈಹಿಕ ,ಮಾನಸಿಕ ,ಸಾಮಾಜಿಕ ಒತ್ತಡದ ನಡುವೆ ಆರೋಗ್ಯವಂತನಾಗಿರಲು ಬಯಸಿದರೂ ಪರಿಸರ ಮತ್ತು ಪರಿಸ್ಥಿತಿ ನಮ್ಮ ಆರೋಗ್ಯವನ್ನು ಬದಲಾಯಿಸುತ್ತದೆ .ಇದರಿಂದ ನಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ನಿಗಾ ವಹಿಸುವುದು ಬಹಳ ಮುಖ್ಯ , ಇಂತಹ ಸಂದರ್ಭದಲ್ಲಿ ಯಾವುದೇ ರೀತಿಯ ತೊಂದರೆಯಾದರೂ ಮೊದಲಾಗಿ ನಾವು ಡಾಕ್ಟರ್ಸ್ ನವರ ಸಲಹೆಯಂತೆ ಆರೋಗ್ಯ ಕಾಪಾಡಿಕೊಳ್ಳುವ ಬಗ್ಗೆ ಯೋಚಿಸಿವುದು ಮುಖ್ಯ . ಆರೋಗ್ಯ ಪೂರ್ಣ ಜೀವನ ಎಲ್ಲರೂ ಬಯಸುತ್ತಾರೆ ಆದರೆ, ನಿರ್ಲಕ್ಷ್ಯ ವಹಿಸದೆ ಸೂಕ್ತ ಸಮಯದಲ್ಲಿ ಸಲಹೆ ಪಡೆಯುದು ಮುಖ್ಯ ಎಂದು ಪುಣೆ ಬಂಟ್ಸ್ಅಸೋಸಿಯೇಷನ್ ನ ಅಧ್ಯಕ್ಷರಾದ ರೋಹಿತ್ ಶೆಟ್ಟಿ ನಗ್ರಿ ಗುತ್ತು ನುಡಿದರು. ಹಾಗೂ ಕ್ಯಾಂಪ್ ಗುರುದ್ವಾರ ಗುರುನಾನಕ್ ದರ್ಬಾರ್ ಮತ್ತು , ಗುರುನಾನಕ್ ಮೆಡಿಕಲ್ ಫೌಂಡೇಶನ್ ಸಹಯೋಗದಿಂದ ಉತ್ತಮ ರೀತಿಯಲ್ಲಿ ಸ್ಪಂದನೆ ಸಿಕ್ಕಿದೆ .ನಮ್ಮ ಉಪಾಧ್ಯಕ್ಷರಾದ ಡಾ. ಸುಧಾಕರ್ ಶೆಟ್ಟಿಯವರ ಮುಂದಾಳತ್ವದಲ್ಲಿ ಮತ್ತು ಇಲ್ಲಿ ಸೇವೆ ನೀಡಲು ಬಂದಿರುವ ಡಾಕ್ಟರ್ಸ್ ನವರ ಸಹಕಾರದಿಂದ ಈ ಆರೋಗ್ಯ ತಪಾಸಣೆ ಸಮಾಜದ ಜನ ಸಾಮಾನ್ಯರಿಗೆ ಸಹಕಾರಿಯಾಗಿದೆ ಎಂದರು.ಪುಣೆ ಬಂಟ್ಸ್ ಅಸೋಸಿಯೇಷನ್ ನ ಸಮಾಜ ಕಲ್ಯಾಣ ಸೇವಾ ಕಾರ್ಯದಂಗವಾಗಿ ಗುರುನಾನಕ್ ಮೆಡಿಕಲ್ ಫೌಂಡೇಶನ್ ಸಹಯೋಗದೊಂದಿಗೆ ಸಮಾಜ ಭಾಂದವರಿಗಾಗಿ ಮಲ್ಟಿಸ್ಪೆಷಾಲಿಟಿ ಉಚಿತ ಅರೋಗ್ಯ ತಪಾಸಣಾ ಶಿಬಿರವು ಜನವರಿ 19 ರವಿವಾರದಂದು ,ಗುರುನಾನಕ್ ಮೆಡಿಕಲ್ ಫೌಂಡೇಶನ್ ನ ಗುರುನಾನಕ್ ದರ್ಬಾರ್ ಹಾಲ್ (ಹಾಲಿವುಡ್ ಗುರುದ್ವಾರ) ಕ್ಯಾಂಪ್ , ಪುಣೆ ಇಲ್ಲಿ ನಡೆಯಿತು . ಈ ಉಚಿತ ಅರೋಗ್ಯ ತಪಾಸಣಾ ಶಿಬಿರದಲ್ಲಿ ಮಲ್ಟಿಸ್ಪೆಷಾಲಿಟಿ ಆರೋಗ್ಯ ತಪಾಸಣೆ , ಸ್ತ್ರೀರೋಗ ಶಾಸ್ತ್ರ ಮಕ್ಕಳ ರೋಗ ತಪಾಸಣೆ , ಕಣ್ಣು ,ಹಲ್ಲು ತಪಾಸಣೆ ,ಔಷದಿ ಮತ್ತು ರೋಗಶಾಸ್ತ್ರದ ಬಗ್ಗೆ ಮಾಹಿತಿ , ಸಕ್ಕರೆ ತಪಾಸಣೆ ನಡೆಸಲಾಯಿತು .ಈ ಶಿಬಿರವನ್ನು ಪುಣೆ ಬಂಟ್ಸ್ ಅಸೋಸಿಯೇಷನ್ ನ ಅಧ್ಯಕ್ಷರಾದ ರೋಹಿತ್ ಶೆಟ್ಟಿ ನಗ್ರಿಗುತ್ತು ಶಿಬಿರದ ಸಂಯೋಜಕರಾದ ಸಂಘದ ಉಪಾಧ್ಯಕ್ಷರಾದ ಡಾ ಸುಧಾಕರ್ ಶೆಟ್ಟಿ ,ಸತೀಶ್ ರೈ ಕಲ್ಲಂಗಳ ಗುತ್ತು ,ಗುರುದ್ವಾರ ಗುರುನಾನಕ್ ದರ್ಬಾರ್ ನ ಅಧ್ಯಕ್ಷ ಸರ್ದಾರ್ ಚರಣ್ ಜೀತ್ ಸಿಂಗ್ ಶೈನಿ , ಗುರುನಾನಕ್ ಮೆಡಿಕಲ್ ಫೌಂಡೇಶನ್ ನ ಕಾರ್ಯಾಧ್ಯಕ್ಷ ಸರ್ದಾರ್ ಸಂತ್ ಸಿಂಗ್ ಮೋಕ್ಷಾ ಮತ್ತು ಪದಾಧಿಕಾರಿಗಳು ದೀಪ ಪ್ರಜ್ವಲಿಸಿ ಆರೋಗ್ಯ ತಪಾಸಣೆ ಶಿಬಿರವನ್ನು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷ ನಾರಾಯಣ ಶೆಟ್ಟಿ ,ಪ್ರಧಾನ ಕಾರ್ಯದರ್ಶಿ ದಿನೇಶ್ ಶೆಟ್ಟಿ ಪೆಲತ್ತೂರು ಮೇಲ್ಮನೆ ,ಕೋಶಾಧಿಕಾರಿ ಸಿ ಎ ಮನೋಹರ್ ಶೆಟ್ಟಿ ,ಬಾಲಕೃಷ್ಣ ಶೆಟ್ಟಿ, ಸುರೇಶ್ ಶೆಟ್ಟಿ ,ಮಹೇಶ್ ಹೆಗ್ಡೆ ಪೊಳಲಿ ,ಅಶೋಕ್ ಶೆಟ್ಟಿ ,ಯುವ ವಿಬಾಗದ ಕಾರ್ಯಾಧ್ಯಕ್ಷ ಅದೀಪ್ ಶೆಟ್ಟಿ ಮಹಿಳಾ ವಿಬಾಗದ ಶಾಲಿನಿ ಶೆಟ್ಟಿ ,ಪೂರ್ಣಿಮಾ ಶೆಟ್ಟಿ ,ಪ್ರೀತಿ ಶೆಟ್ಟಿ ,ಲತಾ ಶೆಟ್ಟಿ ಮಾಜಿ ಅಧ್ಯಕ್ಷೆಯರುಗಳಾದ ಸುಜಾತ್ ಎಸ್ ಹೆಗ್ಡೆ ,ದೀಪಾ ಎ ರೈ , ಮತ್ತು ಸಮಿತಿ ಪದಾಧಿಕಾರಿಗಳು .ಮಹಿಳಾ ವಿಭಾಗ ,ಯುವ ವಿಭಾಗದ ಸದಸ್ಯರು ಉಪಸ್ಥಿತರಿದ್ದರು .ಈ ಆರೋಗ್ಯ ತಪಸಣಾ ಶಿಬಿರದ ವೈದ್ಯಕೀಯ ಸಲಹೆಗಾರರ ಬೋರ್ಡ್ ನ ಪ್ರಮುಖರಾದ ಡಾ ಹಂಸರಾಜ್ ಶೆಟ್ಟಿ ಎಂ ಬಿ ಎ ,ಡಾ ಸಂಜಯ್ ಕುಲಕರ್ಣಿ , ಡಾ ಸುಜಯ್ ಹೆಗ್ಡೆ ,ಡಾ ಜ್ಯೋತಿ ಶೆಟ್ಟಿ ,ಡಾ ಪ್ರವೀಣ್ ಅರ್ ಶೆಟ್ಟಿ ,ಡಾ ವಿವೇಕ್ ಹೆಗ್ಡೆ ,ಡಾ ಸಂಜಯ್ ತೆಕವಡೆಯವರ ಸಲಹೆಯೊಂದಿಗೆ ಪುಣೆಯ ಖ್ಯಾತ ವೈದ್ಯರುಗಳಾದ ಡಾ.ಚಿತ್ತರಂಜನ್ ಶೆಟ್ಟಿ , ಡಾ.ಸುಧಾಕರ್ ಶೆಟ್ಟಿ , ಡಾ.ಉರ್ವಿ ಕೊಥಾರಿ,ಡಾ ರೋಬರ್ಟ್ ಲೋಬೊ ,ಡಾ.ವಿಕಾಸ್ ಮಂತೋಲೆ ,ಡಾ ಸಮಿತಾ ಮೂಲಾನಿ ,ಡಾ ಸತ್ಯಶೀಲ ನ್ಯಾ ಕ್ ರವರು ಆರೋಗ್ಯ ತಪಾಸಣೆ ನಡೆಸಿ ಸೂಕ್ತ ಸಲಹೆ ನಿಡಿದರು .ಹೆಚ್ಚಿನ ಸಂಖ್ಯೆಯ ಸಮಾಜ ಭಾಂದವರು ಹಾಗೂ ಎಲ್ಲಾ ಸಮಾಜದ ಭಾಂದವರು ವಿವಿದ ವಿಬಾಗಗಳಲ್ಲಿ ಮತ್ತು ಹಲವಾರು ರೀತಿಯ ಆರೋಗ್ಯ ತಪಾಸಣೆ ಮಾಡಿಸಿಕೊಂಡರು ಮತ್ತು ಚಿಕಿತ್ಸೆಯ ಬಗ್ಗೆ ಮಾಹಿತಿ ಪಡೆದರು . ಸಮಾಜ ಭಾಂದವರ ಆರೋಗ್ಯ ಸುಧಾರಣೆಯ ದೃಷ್ಟಿಯಿಂದ ಈ ಶಿಭಿರ ಆಯೋಜಿಸಲಾಗಿದೆ .ಪ್ರತಿ ವರ್ಷ ವು ಈ ಶಿಭಿರ ನಡೆಯಬೇಕು ,ನಮ್ಮ ಸಮಾಜದ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು .ವಿವಿದ ಸ್ತರದ ತಪಾಸಣಾ ಡಾಕ್ಟರ್ಸ್ ಒಂದೇ ಕಡೆ ಇದ್ದು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಸದಾವಕಾಶ ದೊರೆಯುತ್ತದೆ .ಇದು ಸಮಾಜ ಕಲ್ಯಾಣಕ್ಕಾಗಿ ಮಾಡುವ ಸೇವೆ ನಮ್ಮದು.ಸುಮಾರು 28 ವರ್ಷಗಳಿಂದ ಗುರುನಾನಕ್ ಮೆಡಿಕಲ್ ಫೌಂಡೇಶನ್ ಅರೋಗ್ಯ ಸೇವೆಯಲ್ಲಿ ತೊಡಗಿಸಿಕೊಂಡಿದೆ, ನಮ್ಮ ಸಂಘಕ್ಕೆ ಉತ್ತಮ ಸಹಕಾರ ನೀಡುತಿದ್ದಾರೆ .ಆರೋಗ್ಯದ ಬಗ್ಗೆ ನಿಮ್ಮ ಸೇವೆಗೆ ನಾವು ಸದಾ ಸಿದ್ದರಿದ್ದೇವೆ .ಡಾ .ಸುಧಾಕರ್ ಶೆಟ್ಟಿ –ಉಪಾಧ್ಯಕ್ಷರು ಬಂಟ್ಸ್ ಅಸೋಸಿಯೇಷನ್ ಪುಣೆ

ಪ್ರಾದೇಶಿಕ ವಾರ್ತೆಗಳು

ಮಾತಾ ಅಮೃತಾನಂದಮಯಿ ಮಠ, ಮಂಗಳೂರಿನಲ್ಲಿ ಅಮೃತಾ ಆಸ್ಪತ್ರೆ ಕೊಚ್ಚಿ ಇವರಿಂದ ಜನ್ಮಜಾತ ಹೃದಯ ರೋಗ ಸಮಸ್ಯೆ ಇರುವ ಮಕ್ಕಳಿಗಾಗಿ ಬೃಹತ್ ಉಚಿತ ಆರೋಗ್ಯ ಮೇಳ

ಅಮೃತಾ ಆಸ್ಪತ್ರೆ ,ಕೊಚ್ಚಿ ಇವರಿಂದ ಮಂಗಳೂರಿನಲ್ಲಿ ಜನ್ಮಜಾತ ಹೃದಯರೋಗ ಸಮಸ್ಯೆ ಇರುವ ಮಕ್ಕಳಿಗಾಗಿ ಪ್ರಪ್ರಥಮ ಚಿಕಿತ್ಸಾ ಶಿಬಿರ ಜರುಗಿತು.ಮಂಗಳೂರಿನ ಮಾತಾ ಅಮೃತಾನಂದಮಯಿ ಮಠದ ವತಿಯಿಂದ ಕರಾವಳಿ ಕರ್ನಾಟಕದ ಅಮ್ಮನವರ ಭಕ್ತರು ಮತ್ತು ಸೇವಾಸಮಿತಿಗಳ ಸಹಯೋಗದೊಂದಿಗೆಜರುಗಿದ ಈ ಬೃಹತ್ ಆರೋಗ್ಯ ಮೇಳದಲ್ಲಿ ಕರ್ನಾಟಕದಾದ್ಯಂತ ಹಾಗೂ ಹೊರರಾಜ್ಯಗಳ ಜನರು ವಿಶೇಷವಾಗಿ ಗ್ರಾಮೀಣ ಪ್ರದೇಶದಿಂದ ಬಂದು ಭಾಗವಹಿಸಿ ಪ್ರಯೋಜನ ಪಡೆದರು.18 ವರ್ಷದೊಳಗಿನ ಮಕ್ಕಳ ತಪಾಸಣೆಯನ್ನು ಕೊಚ್ಚಿಯ ಅಮೃತಾ ಆಸ್ಪತ್ರೆಯ ಪೀಡಿಯಾಟ್ರಿಕ್ ಕಾರ್ಡಿಯಾಲಜಿ ವಿಭಾಗದ ಪ್ರೊಫೆಸರ್ ಆಗಿರುವ ಡಾ. ಬ್ರಿಜೇಶ್ ಪಿ ಕೆ ನೇತೃತ್ವದ ಮಕ್ಕಳ ಹೃದಯ ರೋಗ ತಂಡವು ವೈದ್ಯಕೀಯ ಶಿಬಿರವನ್ನು ಮುನ್ನಡೆಸಿತು. ಜನ್ಮಜಾತ ಹೃದ್ರೋಗವಿದ್ದು ಶಸ್ತ್ರ ಚಿಕಿತ್ಸೆ ಅಗತ್ಯವುಳ್ಳ ಮತ್ತು ಇತರ ಗಂಭೀರ ಪರಿಸ್ಥಿತಿ ಗಳೊಂದಿಗೆ ಗುರುತಿಸಲ್ಲಟ್ಟ ಮಕ್ಕಳಿಗೆ ಕೊಚ್ಚಿಯ ಅಮೃತಾ ಆಸ್ಪತ್ರೆ ಯಲ್ಲಿ ಉಚಿತ ಚಿಕಿತ್ಸೆ ಮತ್ತು ಶಸ್ತ್ರ ಚಿಕಿತ್ಸೆಗಳನ್ನು ನೀಡುವ ಭರವಸೆ ನೀಡಲಾಯಿತು.400 ಕ್ಕೂ ಅಧಿಕ ಮಕ್ಕಳು ಈ ಶಿಬಿರದ ಪ್ರಯೋಜನ ಪಡೆಯುತ್ತಿರುವುದರಿಂದ ಶಿಬಿರವು ವಿಶೇಷ ಮಹತ್ವ ಪಡೆದಿದೆ.ಡಾ. ಬ್ರಿಜೇಶ್ ಪಿ ಕೆ ಯವರು ಮಾಹಿತಿ ನೀಡಿ“ಜಗತ್ತಿನ ಹುಟ್ಟುವ ಮಕ್ಕಳಲ್ಲಿ ಸರಾಸರಿ ನೂರರಲ್ಲಿ ಒಂದು ಮಗುವಿಗೆ ಹೃದಯ ಸಂಬಂಧಿ ಖಾಯಿಲೆ ಕಾಣಿಸುತ್ತದೆ. ಇದು ಗಾಬರಿಯಾಗುವಂತಹ ಖಾಯಿಲೆ ಅಲ್ಲ. ಸರಿಯಾದ ಸಮಯದಲ್ಲಿ ಸೂಕ್ತ ಶಸ್ತ್ರಚಿಕಿತ್ಸೆ ನೀಡಿದರೆ ಇದು ಗುಣ ಪಡಿಸುವ ಖಾಯಿಲೆ.ಜನರಿಗೆ ಇದರ ಬಗ್ಗೆ ಮಾಹಿತಿಯ ಕೊರತೆ ಇದೆ ಮತ್ತು ದುಬಾರಿ ಚಿಕಿತ್ಸಾ ವೆಚ್ಚದ ಕಾರಣ ಸಕಾಲದಲ್ಲಿ ಮಕ್ಕಳಿಗೆ ಸೂಕ್ತ ಚಿಕಿತ್ಸೆ ಪಡೆಯಲು ಸಾಧ್ಯವಾಗುತ್ತಿಲ್ಲ.ಅಮ್ಮನವರು ಮಂಗಳೂರಿನಲ್ಲಿ ಇಂತಹ ಒಂದು ಶಿಬಿರ ಆಗಬೇಕೆಂದು ಸೂಚಿಸಿದ ಪ್ರಕಾರ ನಮ್ಮ ತಂಡ ಮಂಗಳೂರಿಗೆ ಬಂದಿದೆ. ಮುಂದಿನ ದಿನಗಳಲ್ಲಿಯೂ ಇದಕ್ಕೆ ಪೂರಕವಾದ ಶಿಬಿರಗಳನ್ನು ಆಯೋಜಿಸಲಾಗುವುದು” ಎಂದರು. ಕರಾವಳಿ ಕರ್ನಾಟಕದ ಮಾತಾ ಅಮೃತಾನಂದಮಯಿ ಮಠದ ಮುಖ್ಯಸ್ಥರಾದ ಸಂಪೂಜ್ಯ ಸ್ವಾಮಿನಿ ಮಂಗಳಾಮೃತ ಪ್ರಾಣ ಇವರು ಜ್ಯೋತಿ ಬೆಳಗಿಸುವ ಮೂಲಕ ಶಿಬಿರಕ್ಕೆ ಅಧಿಕೃತ ಚಾಲನೆ ನೀಡಲಾಯಿತು.ನಂತರ ನಡೆದ ಸಭಾ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದ ಕರ್ನಾಟಕ ವಿಧಾನ ಪರಿಷತ್ ಸದಸ್ಯ ಶೀ ಐವನ್ ಡಿ’ಸೋಜ ಮಾತನಾಡಿ ““ಈ ಯೋಜನೆಯು ದೇವರ ಪ್ರತ್ಯಕ್ಷ ಕಾಳಜಿಗೆ ಸಮಾನವಾದುದು. ಅಮ್ಮನವರು ಸಾರ್ವಜನಿಕ ಸೇವೆಗಾಗಿ ಮಾಡುತ್ತಿರುವ ಅಪ್ರತಿಮ ಸಮರ್ಪಣೆಯು ಅತ್ಯಂತ ಶ್ಲಾಘನೀಯವಾದುದು.ನಾವೆಲ್ಲರೂ ನಮ್ಮ ಜೀವನದಲ್ಲಿದೇವರು ಮೆಚ್ಚುವಂತಹ ಕೆಲಸಗಳನ್ನು ಮಾಡಿ ಮತ್ತೊಬ್ಬರ ಕಷ್ಟದಲ್ಲಿ ಭಾಗಿಗಳಾಗಬೇಕು. ಅಮ್ಮನವರು ಮಾನವೀಯತೆಯ ಕಲ್ಯಾಣಕ್ಕಾಗಿ ಮೌನವಾಗಿಯೇ ಕೆಲಸ ಮಾಡುತ್ತಿರುವವರು.ಅವರ ಕರುಣೆ ಮತ್ತು ಪ್ರೀತಿಭರಿತ ದೃಷ್ಟಿ ಕೋನ ಅಪ್ರತಿಮವಾದುದು.ಅಮ್ಮನವರು ನನ್ನನ್ನು ಅಪ್ಪಿಕೊಂಡು ಪ್ರೀತಿ ತುಂಬಿ ಹರಸಿದ ಬಳಿಕವೇ ನಾನು ಕೂಡ ವಿಧಾನ ಪರಿಷತ್ ಗೆ ಆಯ್ಕೆಯಾಗಲು ಸಾಧ್ಯವಾಯಿತು” ಎಂದರು.ಮಂಗಳೂರಿನ ಮೇಯರ್ ಮನೋಜ್ ಕುಮಾರ್ ರವರು ಮಾತನಾಡಿ ಅಮ್ಮನವರ ಮಾನವೀಯ ಸೇವಾಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನ ಗೊಳಿಸುತ್ತಿರುವ ಮಂಗಳೂರಿನ ಮಾತಾ ಅಮೃತಾನಂದಮಯಿ ಮಠದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮಂಗಳೂರು ದಕ್ಷಿಣ ವಿಧಾನಸಭಾ ಸದಸ್ಯರಾದ ಶ್ರೀ ವೇದವ್ಯಾಸ ಕಾಮತ್ ರವರು ಸಭೆಯನ್ನುದ್ದೇಶಿಸಿ“ಕರ್ನಾಟಕದಲ್ಲಿ, ನನ್ನ ಕ್ಷೇತ್ರದಲ್ಲಿ ಇಂತಹ ವಿನೂತನ ಕಾರ್ಯಕ್ರಮ ನಡೆಯುತ್ತಿರುವುದು ನನಗೆ ಹೆಮ್ಮೆಯ ವಿಚಾರ. ಚಿಂತೆ, ದುಃಖ, ಆರ್ಥಿಕ ಸಂಕಷ್ಟ ಮತ್ತು ಆರೋಗ್ಯ ಸಮಸ್ಯೆ ಇರುವ ಜನರು ಪ್ರತಿನಿತ್ಯ ನಮ್ಮ ಮನೆಗೆ ಪರಿಹಾರ ಕೋರಿ ಬರುತ್ತಾರೆ, ನಮ್ಮ ಮನೆಯ ಇಂತಹ ಪರಿಸ್ಥಿತಿಯನ್ನು ಕಂಡಾಗ ಏನು ಮಾಡಬೇಕೆಂದೇ ತೋಚದೆ ಹೋದಾಗ ದೇವರೇ ಪ್ರತ್ಯಕ್ಷವಾಗಿ ಇಂತಹ ಕೊಡುಗೆಯನ್ನು ಮಾಡುತ್ತಾರೆ ಎನ್ನುವುದಕ್ಕೆ ಈ ಯೋಜನೆ, ಇಂತಹ ಕಾರ್ಯಕ್ರಮಗಳು ಜ್ವಲಂತ ನಿದರ್ಶನ. ಇಂತಹ ಬೃಹತ್ ಮಟ್ಟದ ವೈದ್ಯಕೀಯ ಶಿಬಿರ ಮಾತಾ ಅಮೃತಾನಂದಮಯಿಯ ದೈವತ್ವ ಪ್ರೀತಿ ಮತ್ತು ಕಾಳಜಿಯಿಂದ ಮಾತ್ರ ಸಾಧ್ಯ” ಎಂದರು.ವೇದಿಕೆಯಲ್ಲಿ ಗೌರವಾಧ್ಯಕ್ಷರುಗಳಾದ ಪ್ರಸಾದ್ ರಾಜ್ ಕಾಂಚನ್, ಡಾ.ವಸಂತ ಕುಮಾರ್ ಪೆರ್ಲ ಉಪಸ್ಥಿತರಿದ್ದರು.ಸೇವಾ ಸಮಿತಿಯ ಅಧ್ಯಕ್ಷ ಸುರೇಶ್ ಅಮಿನ್ ಸ್ವಾಗತಿಸಿದರು. ವೈದ್ಯಕೀಯ ವಿಭಾಗದ ಸಂಚಾಲಕ ಡಾ.ದೇವಿಪ್ರಸಾದ್ ಸದಾನಂದ ಹೆಜಮಾಡಿ ವಂದಿಸಿದರು.ಡಾ.ದೇವದಾಸ್ ಪುತ್ರನ್ ನಿರೂಪಣೆ ಮಾಡಿದರು.ವೈದ್ಯಕೀಯ ತಂಡದಲ್ಲಿ ಮಕ್ಕಳ ಹೃದಯ ಶಸ್ತ್ರ ಚಿಕಿತ್ಸಾ ತಜ್ಞರಾದ ಡಾ.ಬ್ರಿಜೇಶ್ ಜೊತೆಗೆ ಮಕ್ಕಳ ಹೃದಯ ರೋಗ ತಜ್ಞರಾದ ಡಾ. ಶೈನಿ, ಡಾ.ನಿಶಾಂತ್, ವೈದ್ಯಕೀಯ ಸೇವಾ ಕಾರ್ಯಕರ್ತ ವಿಷ್ಣು, ಡಾ.ಅಮೃತ ಸುಧಾಮಣಿ, ಮಂಗಳೂರಿನ ಅಮೃತಾ ಉಚಿತ ವೈದ್ಯಕೀಯ ತಂಡದ ತಜ್ಞ ವೈದ್ಯರುಗಳಾದ ಡಾ.ಸುಚಿತ್ರಾ ರಾವ್, ಡಾ.ಇಂದುಮತಿ ಮಲ್ಯ, ಡಾ.ರಿಷಿಕೇಶ್, ಫಾರ್ಮಸಿ ವಿಭಾಗದಲ್ಲಿ ನಿರಂಜನ್ ಅಡ್ಯಂತಾಯ ,ರಶ್ಮಿತಾ ಮೊದಲಾದವರು ಸೇವೆಗೈದರು.ಕಲಾಮೃತ ಮಂಗಳೂರು ತಂಡದ ಕಲಾವಿದರು ಸುಶ್ರಾವ್ಯ ಸಂಗೀತ ಕಾರ್ಯಕ್ರಮ ನೀಡಿ ತಮ್ಮ ಸರದಿಗಾಗಿ ಬೆಳಗ್ಗಿನಿಂದ ಕಾದುಕುಳಿತ ಜನರಿಗೆ ಮನರಂಜನೆ ನೀಡಿದರು.ಕರಾವಳಿ ಕಾಲೇಜಿನ ತೃತೀಯ ವರ್ಷದ ಬಿ ಎಸ್ ಸಿ ನರ್ಸಿಂಗ್ ವಿದ್ಯಾರ್ಥಿಗಳು , ಯುನಿವರ್ಸಿಟಿ ಕಾಲೇಜಿನ ಮತ್ತು ಕೆನರಾ ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆಯ ವಿದ್ಯಾರ್ಥಿಗಳು ಈ ಪವಿತ್ರ ಕಾರ್ಯದಲ್ಲಿ ಸೇವೆಗೈದು ಸಹಕರಿಸಿದರು.ಈ ಸಂದರ್ಭದಲ್ಲಿ ಗೌರವಾಧ್ಯಕ್ಷರು ಹಾಗೂ ಶ್ರೀ ಬ್ರಹ್ಮಸ್ಥಾನಂ ಕ್ಷೇತ್ರದ ಗೌರವ ಸಲಹೆಗಾರಾಗಿರುವ ಡಾ. ಜೀವರಾಜ್ ಸೊರಕೆ, ಕರಾವಳಿ ಕರ್ನಾಟಕದ ವಿವಿಧ ಮಾತಾ ಅಮೃತಾನಂದಮಯಿ ಸೇವಾ ಸಮಿತಿಗಳು, ಶ್ರೀ ಬ್ರಹ್ಮಸ್ಥಾನಂ ಕ್ಷೇತ್ರಾಭಿವೃದ್ಧಿ ಸಮಿತಿ ಹಾಗೂ ಅಯುಧ್ ಪದಾಧಿಕಾರಿಗಳು , ಅಮೃತ ವಿದ್ಯಾಲಯಂ ಪ್ರಾಂಶುಪಾಲರಾದ ಅಕ್ಷತಾ ಶೆಣೈ ಹಾಗೂ ಶಾಲಾ ಶಿಕ್ಷಕರು, ಸಿಬ್ಬಂದಿ ವರ್ಗದವರು, ಅಮ್ಮನ ಭಕ್ತರು ಬೆಳಗ್ಗಿನಿಂದ ರಾತ್ರಿಯ ತನಕವೂ ಸಮರೋತ್ಸಾಹದಿಂದ ಸೇವೆಗೈದು ಕಾರ್ಯಕ್ರಮ ಅಭೂತಪೂರ್ವ ಯಶಸ್ಸು ಕಾಣಲು ಕಾರಣರಾದರು.ರಾಜ್ಯದ ವಿವಿಧ ಸ್ಥಳಗಳಿಂದ ಆಗಮಿಸಿದವರಿಗೆ ಕರ್ನಾಟಕ ಸರಕಾರಿ ರಸ್ತೆ ಸಾರಿಗೆ ಸಂಸ್ಥೆಹಾಗೂ ಅಮೃತ ವಿದ್ಯಾಲಯಂ ವತಿಯಿಂದ ಬಿಜೈ ಸರಕಾರಿ ಬಸ್ಸು ನಿಲ್ದಾಣ , ಸೆಂಟ್ರಲ್ ಮತ್ತು ಜಂಕ್ಷನ್ ರೈಲು ನಿಲ್ದಾಣಗಳಿಂದ ಉಚಿತ ಪ್ರಯಾಣದ ವ್ಯವಸ್ಥೆ ಕಲ್ಪಿಸಲಾಯಿತು.ಮಕ್ಕಳು ಹಾಗೂ ಪೋಷಕರು ,ಸೇವಾರ್ಥಿಗಳೆಲ್ಲರಿಗೂ ಬೆಳಗ್ಗೆ ಉಪಹಾರ, ಮಧ್ಯಾಹ್ನ ಭೋಜನ,ಸಂಜೆ ಉಪಹಾರ ಹಾಗೂ ರಾತ್ರಿಯ ಭೋಜನದ ವ್ಯವಸ್ಥೆಗಳನ್ನು ಉಚಿತವಾಗಿ ಕಲ್ಪಿಸಲಾಯಿತು ಎಂದು ಸೇವಾ ಸಮಿತಿಯ ಅಧ್ಯಕ್ಷರಾದ ಸುರೇಶ್ ಅಮೀನ್ ತಿಳಿಸಿದರು.ಚಿತ್ರಗಳು ಸತೀಶ್ ಕಾಪಿಕಾಡ್

ಪ್ರಾದೇಶಿಕ ವಾರ್ತೆಗಳು

ಅಶಕ್ತರಿಗೆ ನೆರವಾಗುವುದು ಅತ್ಯಂತ ಶ್ರೇಷ್ಠ ಕಾರ್ಯ: ಡಿಎಂಒ ಡಾ.ಶಿವಪ್ರಕಾಶ್

ಮಂಗಳೂರು: ಅಶಕ್ತರಿಗೆ, ಸಂಕಷ್ಟದಲ್ಲಿ ಇರುವವರಿಗೆ ನೆರವಾಗುವುದು ಅತ್ಯಂತ ಶ್ರೇಷ್ಠ ಕಾರ್ಯವಾಗಿದೆ .ಕಾಲು ಕಳಕೊಂಡವರಿಗೆ ಕೃತಕ ಕಾಲು ಒದಗಿಸುವುದರಿಂದ ಹೊಸ ಬದುಕು ನೀಡಿದಂತಾಗುತ್ತದೆ ಎಂದು ವೆನ್ಲಾಕ್ ಆಸ್ಪತ್ರೆಯ ಡಿಎಂಒ ಡಾ.ಶಿವಪ್ರಕಾಶ್ ಹೇಳಿದರು.ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ನಗರದ ವೆನ್ಲಾಕ್ ಆಸ್ಪತ್ರೆಯ ಲಯನ್ಸ್ ಲಿಂಬ್ ಸೆಂಟರ್‌ನಲ್ಲಿ ಕೊಣಾಜೆಯ ಅಬ್ದುಲ್ ರವೂಫ್ ಅವರಿಗೆ ಉಚಿತ ಕೃತಕ ಕಾಲು ವಿತರಿಸಿ ಮಾತನಾಡಿದ ಅವರು ಪತ್ರಕರ್ತರ ಸಂಘಟನೆ ಇಂತಹ ಮಾನವೀಯ ಕಾರ್ಯದಲ್ಲಿ ತೊಡಗಿರುವುದು ಸಮಾಜಕ್ಕೆ ಪ್ರೇರಣೆಯಾಗಿದೆ ಎಂದರು.ವೆನ್ಲಾಕ್ ಆಸ್ಪತ್ರೆಯ ಆರ್ಥೊ ಸರ್ಜನ್ ಡಾ.ಕೆ.ಆರ್.ಕಾಮತ್ ಮಾತನಾಡಿ ‘ ಕೃತಕ ಕಾಲುಗಳಿಗೆ ಜನತೆಯಿಂದ ಬೇಡಿಕೆ ಇದ್ದು, ಉಚಿತವಾಗಿ ಒದಗಿಸಲು ದಾನಿಗಳ ಅವಶ್ಯಕತೆ ಇದೆ’ ಎಂದರು.ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಲಯನ್ಸ್ ಲಿಂಬ್ ಸೆಂಟರ್‌ನ ಮ್ಯಾನೇಜರ್ ಕೆ.ಸುರೇಶ್ ಶೆಟ್ಟಿ, ನಿವೃತ್ತ ಅಪರ ಜಿಲ್ಲಾಧಿಕಾರಿ ಪ್ರಭಾಕರ ಶರ್ಮ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಪ್ರೆಸ್ ಕ್ಲಬ್ ಕಾರ್ಯದರ್ಶಿ ಪುಷ್ಪರಾಜ್.ಬಿ.ಎನ್., ಕಾರ್ಯಕಾರಿ ಸಮಿತಿ ಸದಸ್ಯರಾದ ರಾಜೇಶ್ ಶೆಟ್ಟಿ ದಡ್ಡಂಗಡಿ, ಬಿ.ಎಸ್.ಜೀವನ್, ವೆನ್ಲಾಕ್ ರಕ್ಷಾ ಸಮಿತಿ ಸದಸ್ಯ ಸಲೀಂ ಮಕ್ಕಾ ,ಲಯನ್ಸ್ ಲಿಂಬ್ ಸೆಂಟರ್‌ನ ಸಿಬ್ಬಂದಿ ಉಪಸ್ಥಿತರಿದ್ದರು.ಪ್ರೆಸ್ ಕ್ಲಬ್ ಉಪಾಧ್ಯಕ್ಷ ಮುಹಮ್ಮದ್ ಆರಿಫ್ ಪಡುಬಿದ್ರಿ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು.

ಪ್ರಾದೇಶಿಕ ವಾರ್ತೆಗಳು

ಮಂಗಳೂರು ಪ್ರೆಸ್ ಕ್ಲಬ್ ಗೌರವ ಸನ್ಮಾನಕ್ಕೆ ಆಯ್ಕೆ

ಮಂಗಳೂರು, ಜ.21: ಮಂಗಳೂರು ಪ್ರೆಸ್ ಕ್ಲಬ್‌ನ 2024ನೇ ಸಾಲಿನ ಮಂಗಳೂರು ಪ್ರೆಸ್ ಕ್ಲಬ್ ಗೌರವ ಸನ್ಮಾನಕ್ಕೆ ಐವರು ಹಿರಿಯ ಪತ್ರಕರ್ತರು ಆಯ್ಕೆಯಾಗಿದ್ದಾರೆ.ಮುಹಮ್ಮದ್ ಆರೀಫ್ ಪಡುಬಿದಿರೆ (ವಿಜಯ ಕರ್ನಾಟಕ), ಜಿತೇಂದ್ರ ಕುಂದೇಶ್ವರ (ವಿಶ್ವವಾಣಿ), ಭಾಸ್ಕರ ರೈ ಕಟ್ಟ ( ಸುದ್ದಿ ಬಿಡುಗಡೆ) , ರಘರಾಮ ನಾಯಕ್ (ಹೊಸದಿಗಂತ) ಮತ್ತು ಪತ್ರಿಕಾ ಛಾಯಾಗ್ರಾಹಕ ಸತೀಶ್ ಇರಾ ( ಉದಯವಾಣಿ ) ಇವರು ಗೌರವ ಸನ್ಮಾನಕ್ಕೆ ಆಯ್ಕೆಯಾದವರು. ಗೌರವ ಪುರಸ್ಕಾರ 10 ಸಾವಿರ ರೂ. ನಗದು, ಪ್ರಶಸ್ತಿ ಫಲಕ, ಸ್ಮರಣಿಕೆ ಒಳಗೊಂಡಿದೆ.ಜ.26 ರಂದು ಬೆಳಗ್ಗೆ 10 ರಿಂದ ನಗರದ ಮೋರ್ಗನ್ಸ್ ಗೇಟ್ ಬಳಿಯ ” ಪಾಲೆಮಾರ್ ಗಾರ್ಡನ್ ” ನಲ್ಲಿ ನಡೆಯಲಿರುವಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆಯಂದು ಗೌರವ ಸನ್ಮಾನ ನೀಡಲಾಗುವುದೆಂದು ಮಂಗಳೂರು ಪ್ರೆಸ್ ಕ್ಲಬ್‌ನ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

*ದೇಶ ಮತ್ತು ಧರ್ಮ ಎರಡು ಕಣ್ಣುಗಳಿದ್ದಂತೆ: ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ.,-ಕಾಟಿಪಳ್ಳದಲ್ಲಿ ಕೇಶವ ಶಿಶುಮಂದಿರದ ಕಟ್ಟಡ ಉದ್ಘಾಟನೆ.

ಸುರತ್ಕಲ್: ದೇಶದಲ್ಲಿ ಹುಟ್ಟಿದ ಪ್ರತಿಯೊಬ್ಬರಿಗೂ ದೇಶ ಮತ್ತು ಧರ್ಮ ಎರಡು ಕಣ್ಣುಗಳಿದ್ದಂತೆ. ಈ ಎರಡೂ ದೃಷ್ಟಿಕೋನವಿದ್ದರೆ ಸನಾತನ ಧರ್ಮ ಮತ್ತು ದೇಶ ಇನ್ನಷ್ಟು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಉಡುಪಿ ಪೇಜಾವರ ಮಠದ ಪರಮಪೂಜ್ಯ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ನುಡಿದರು. ಅವರು ಅಭ್ಯುದಯ ಭಾರತಿ ಸೇವಾ ಟ್ರಸ್ಟ್ ಕಾಟಿಪಳ್ಳ, ಹಿಂದೂ ಧಾರ್ಮಿಕ ಸೇವಾ ಸಮಿತಿ ಕಾಟಿಪಳ್ಳ, ವತಿಯಿಂದ ಶ್ರೀಜಾರಂದಾಯ ಕೇಶವ ಶಿಶುಮಂದಿರದ ನೂತನ 3 ಅಂತಸ್ತಿನ ಕಟ್ಟಡ ಸಾರ್ಥಕ್ಯ ಎಂ,ಅರ್,ಪಿ,ಎಲ್ ಸಿ.ಎಸ್ ಅರ್ ವಿಭಾಗದ ಅನುದಾನದಿಂದ 40 ಲಕ್ಷ ಮಂಗಳೂರು ಮಹಾನಗರ ಪಾಲಿಕೆಯ ಅನುದಾನದಿಂದ 22 ಲಕ್ಷ ಮತ್ತು ದಾನಿಗಳ ಸಹಕಾರದಿಂದ 68 ಲಕ್ಷ ವೆಚ್ಚದಲ್ಲಿ ನಿರ್ಮಾಣ ಗೊಂಡಿದ್ದು ಅದನ್ನು ಉದ್ಘಾಟಿಸಿ ಮಾತನಾಡಿದರು.ರಾಷ್ಟ್ರ ಮತ್ತು ಧರ್ಮದ ಬಗ್ಗೆ ಎಲ್ಲರೂ ಶ್ರದ್ಧೆ ರೂಡಿಸಿಕೊಳ್ಳಬೇಕು. ಮೂಲ ಪರಂಪರೆಯಿಂದ ಬಂದಿರುವ ಆಚರಣೆಗಳನ್ನು ರೂಢಿಸಿಕೊಂಡು ಧರ್ಮವನ್ನು ಬಲಪಡಿಸಬೇಕು ಎಂದರಲ್ಲದೆ ಈ ನಿಟ್ಟಿನಲ್ಲಿ ನಮ್ಮ ಹಿಂದು ಸಂಸ್ಕೃತಿಗಳ ಬಗ್ಗೆ ಚಿಕ್ಕ ಮಕ್ಕಳಿಗೆ ಅರಿವು ಮೂಡಿಸುವ ಸಲುವಾಗಿ ಶಿಶುಮಂದಿರವನ್ನು ನಿರ್ಮಾಣ ಮಾಡಿದ್ದಕ್ಕಾಗಿ ಸಮಿತಿಗೆ ಅಭಿನಂದನೆ ಸಲ್ಲಿಸಿದರು. ಇದು ಇತರರಿಗೆ ಮಾದರಿಯಾಗಲಿ ಎಂದರು.ವೇದಿಕೆಯಲ್ಲಿ ಕಟೀಲು ಕ್ಷೇತ್ರದ ಅನುವಂಶಿಯ ಅರ್ಚಕರಾದ ಅನಂತ ಪದ್ಮನಾಭ ಅಸ್ರಣ್ಣ, ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್, ಮೇಯರ್ ಮನೋಜ್ ಕುಮಾರ್, ಮನಪಾ ಸದಸ್ಯ ಲೋಕೇಶ್ ಬೊಳ್ಳಾಜೆ, ಮುಂಬಯಿ ವಿ‌.ಕೆ,ಸಮೂಹ ಸಂಸ್ಥೆಯ ಅಧ್ಯಕ್ಷರು ಮತ್ತು ಅಡಳಿತ ನಿರ್ದೇಶಕರಾದ ಕರುಣಾಕರ ಎಂ ಶೆಟ್ಟಿ ಮಧ್ಯಗುತ್ತು, ಮುಂಬಯಿ ಉದ್ಯಮಿ ರಾಜೇಂದ್ರ ಶೆಟ್ಟಿ ಕುಡ್ತಿಮಾರು ಗುತ್ತು, ಮುಂಬಯಿ ಹೇರಂಭಾ ಇಂಡಸ್ಟ್ರೀಸ್ ಆಡಳಿತ ನಿರ್ದೇಶಕ ಕನ್ಯಾನ ಸದಾಶಿವ ಶೆಟ್ಟಿ, ಎಂ,ಅರ್,ಪಿ,ಎಲ್ ಮ್ಯಾನೇಜಮೆಂಟ್ ಸ್ಟಾಪ್ ಎಸೋಸಿಯೇಷನ್ ಅಧ್ಯಕ್ಷ ಸಂಪತ್ ರೈ, ಜ್ಯೋತಿಷಿ ನಾಗೇಂದ್ರ ಭಾರದ್ವಾಜ್ ಸುರತ್ಕಲ್, ಪ್ರದ್ಯುಮ್ನರಾವ್ ಶಿಬರೂರು, ಮುಂಬಯಿ ಉದ್ಯಮಿ ಅನಿಲ್ ಶೆಟ್ಟಿ ತೇವು ಸೂರಿಂಜೆ, ಕಾಟಿಪಳ್ಳ ತಣ್ಣೀರುಬಾವಿ, ಜಾರಂತಾಯ ದೈವಸ್ಥಾನದ ಮೊಕ್ತೇಸರರಾದ ಕೇಶವ ಸನಿಲ್, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಾಂತ ಸಹಕಾರ್ಯವಾಹ ಪ್ರಕಾಸ್ ಪಿ ಎಸ್, ಮಾಜಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್, ಗಣೇಶಪುರ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಧರ್ಮೆಂದ್ರ ಗಣೇಶಪುರ, ಮಂಗಳೂರು ಸೇವಾ ಲೈಪ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅರ್ಜುನ್ ಭಂಡಾರ್ಕರ್, ಉದ್ಯಮಿ ವಿನೀತ್ ಶೆಟ್ಟಿ ಪರ್ಲಬೈಲ್ ಶಿಬರೂರು, ಉದ್ಯಮಿ ಸತೀಶ್ ಮುಂಚೂರು, ಗುಜರಾತ್ ಉದ್ಯಮಿ ವಿಕಾಸ್ ಪೈ ಚಾಂಗ, ಮಂಗಳಪೇಟೆ ಶಾರದ ಭಜನಾ ಮಂಡಳಿ ಅಧ್ಯಕ್ಷ ಚಂದ್ರಶೇಖರ್ ಶೆಟ್ಟಿ, ಕಾಟಿಪಳ್ಳ ನಿತ್ಯಾನಂದ ಭಜನಾ ಮಂದಿರ ಅಧ್ಯಕ್ಷ ಚಂದ್ರಹಾಸ್ ಶೆಟ್ಟಿಗಾರ್ , ಅಭ್ಯುದಯ ಭಾರತಿ ಸೇವಾ ಟ್ರಸ್ಟ್ ಕಾಟಿಪಳ್ಳ ಅಧ್ಯಕ್ಷ ಜಯಕುಮಾರ್, ಜಾರಂದಾಯ ಕೇಶವ ಶಿಶು ಮಂದಿರದ ನೂತನ ಕಟ್ಟಡ ಸಮಿತಿ ಅಧ್ಯಕ್ಷ ಮನೋಹರ ಶೆಟ್ಟಿ ಸೂರಿಂಜೆ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ , ಕೇಶವ ಶಿಶುಮಂದಿರದ ಅಧ್ಯಕ್ಷ ಮಧುಸೂದನ್ ರಾವ್, ಸುರತ್ಕಲ್ ವಿಶ್ವಹಿಂಧು ಪರಿಷತ್ ಅಧ್ಯಕ್ಷ ಭಾಸ್ಕರ್ ರಾವ್ ಬಾಳ, ವರಮಹಾಲಕ್ಷ್ಮಿ ಪೂಜನ ಸಮಿತಿ ಅಧ್ಯಕ್ಷೆ ರೇಷ್ಮಾ ಪ್ರಸನ್ನ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ ವೈ ಭರತ್ ಶೆಟ್ಟಿ ವಹಿಸಿದ್ದರು . ಕಾಟಿಪಳ್ಳ ಹಿಂಧು ಧಾರ್ಮಿಕ ಸೇವಾ ಸಮಿತಿ ಅಧ್ಯಕ್ಷ ಜಯಪ್ರಕಾಶ್ ಸೂರಿಂಜೆ ಸ್ವಾಗತಿಸಿದರು. ಅಶೋಕ್ ಕೃಷ್ಣಾಪುರ ನಿರೂಪಿಸಿದರು. ಲೋಕನಾಥ್ ಭಂಡಾರಿ ವಂದಿಸಿದರು

Scroll to Top