ಪ್ರಾದೇಶಿಕ ವಾರ್ತೆಗಳು

ಪ್ರಾದೇಶಿಕ ವಾರ್ತೆಗಳು

ಕ್ಲಾಟ್ (ಸಿಎಲ್‌ಎಟಿ)- 2025 ಫಲಿತಾಂಶ: ಆಳ್ವಾಸ್ ಪಿಯು ಕಾಲೇಜು ವಿದ್ಯಾರ್ಥಿಗಳ ಅಮೋಘ ಸಾಧನೆ.

ವಿದ್ಯಾಗಿರಿ: ಕ್ಲಾಟ್ ಒಕ್ಕೂಟವು 1ನೇ ಡಿಸೆಂಬರ್ 2024 ರಂದು ನಡೆಸಿದ ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ (ಸಿಎಲ್‌ಎಟಿ) 2025 ರಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆಯನ್ನು ಮಾಡಿದ್ದಾರೆ.ಕಾಲೇಜಿನ ವಿದ್ಯಾರ್ಥಿಗಳಾದ ಅಹನಾ ಎಂ.ಕೆ., ಕಾರ್ತಿಕ್ ಆರ್. ಮಳಲಿ ಮತ್ತು ಅಭಿನವ್ ಎಂ.ಎಸ್. ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದು, ಪ್ರತಿಷ್ಠಿತ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳಿಗೆ ಪ್ರವೇಶ ಗಳಿಸಿದ್ದಾರೆ.ಅವರ ಕಠಿಣ ಪರಿಶ್ರಮ, ಸಮರ್ಪಣೆ ಮತ್ತು ಶಿಸ್ತು, ಬದ್ಧತೆ ಸಂಸ್ಥೆಗೆ ಹೆಮ್ಮೆ ತಂದಿದೆ. ಆಳ್ವಾಸ್ ಸಮೂಹ ಶಿಕ್ಷಣ ಸಂಸ್ಥೆಗಳು ವಿವಿಧ ಶೈಕ್ಷಣಿಕ ಮತ್ತು ಸ್ಪರ್ಧಾತ್ಮಕ ಕ್ಷೇತ್ರಗಳಲ್ಲಿ ನಿರಂತರವಾಗಿ ಅಸಾಧಾರಣ ಫಲಿತಾಂಶಗಳನ್ನು ನೀಡುತ್ತಿದೆ. ಸಮಗ್ರ ಕಲಿಕೆ ಮತ್ತು ವೈಯಕ್ತಿಕ ಮಾರ್ಗದರ್ಶನದಿಂದ ವಿದ್ಯಾರ್ಥಿಗಳು ಎಲ್ಲಾ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತಿದೆ . ವಿದ್ಯಾರ್ಥಿಗಳ ಅದ್ಭುತ ಸಾಧನೆಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ, ಪ್ರಾಚರ‍್ಯ ಮಹಮ್ಮದ್ ಸದಾಕತ್, ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಮ್‌ಡಿ ಅಭಿನಂದಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ಜಾನಪದ- ಶಾಸ್ತ್ರೀಯದ ಸ್ಪಂದನ, ಸಾಹಸ- ಹೆಜ್ಜೆಗಳ ಸಮ್ಮಿಲನ. ವಿರಾಸತ್: ರಂಗೇರಿಸಿದ ನೃತ್ಯ, ಕಸರತ್ತಿನ ಗಮ್ಮತ್ತು

ವಿದ್ಯಾಗಿರಿ: ಪಂಡಿತ್ ಎಂ.ವೆAಕಟೇಶ್ ಕುಮಾರ್ ಅವರ ಭಕ್ತಿ ಗಾನ ಸುಧೆಯಲ್ಲಿ ಮಿಂದ ಪ್ರೇಕ್ಷಕರನ್ನು ನರ್ತನ ಲೋಕಕ್ಕೆ ಕೊಂಡೊಯ್ದದ್ದು, ಗುಜರಾತ್‌ನ ರಂಗ್ ಮಲಹರ್ ದಿ ಫೋಕ್ ಆರ್ಟ್ಸ್ ತಂಡದ ವೈವಿಧ್ಯಮಯ ಗುಜರಾತಿ ಜಾನಪದ ನೃತ್ಯ ಪ್ರದರ್ಶನ.ಉತ್ತರದ ಹಿಂದೂಸ್ಥಾನಿಗೆ ಶ್ರೋತೃಗಳಾಗಿದ್ದ ವಿರಾಸತ್ ಪ್ರೇಕ್ಷಕರು ಪಶ್ಚಿಮದ ಜಾನಪದಕ್ಕೆ ವೀಕ್ಷಕರಾದರು.ದೇಶದ ಪಶ್ಚಿಮ ತೀರದ ಗುಜರಾತ್‌ನಲ್ಲಿ ನವರಾತ್ರಿಯ ಸಂದರ್ಭದಲ್ಲಿ ದೇವಿ ಆರಾಧನೆ ಮಾಡುತ್ತಾ ನರ್ತಿಸುವ ಜಾನಪದ ನೃತ್ಯವೇ ಗಾರ್ಭ. ಗುಜರಾತ್‌ನ ರಂಗ್ ಮಲಹರ್ ತಂಡ ಸದಸ್ಯರು ಸಾಂಪ್ರದಾಯಿಕ ವಸ್ತ್ರ ತೊಟ್ಟು ಹೆಜ್ಜೆ ಹಾಕಿದಾಗ, ಅಪ್ಸರೆಯರು ಧರೆಗಿಳಿದು ನರ್ತಿಸಿದ ಚಿತ್ರಣ ರೂಪುಗೊಂಡಿತು.‘ರಂಗ್ ಧಾರಿ ಚೂಡೆ .. ಹಾಡಿಗೆ ಹೆಣ್ಣುಮಕ್ಕಳು ಹೆಜ್ಜೆ ಹಾಕುತ್ತಾ ಗುಜರಾತಿನ ಸಾಂಸ್ಕೃತಿಕ ಸಿಂಚನ ಉಣಬಡಿಸಿದರು.ಕೆಂಪು, ಗುಲಾಬಿ, ಹಳದಿ, ಕಿತ್ತಳೆ ಸೇರಿದಂತೆ ಪ್ರಖರ ಬಣ್ಣಗಳ ಚಾನ್ಯ, ಚೋಲಿ ಅಥವಾ ಘಾಗ್ರ ಚೋಲಿ, ಬಾಂದನಿ, ಅಭ್ಲಾ (ಕನ್ನಡಿ) ಸಹಿತ ದಪ್ಪನೆಯ ಗುಜರಾತಿ ಅಂಚನ್ನು ಹೊಂದಿದ ದುಪ್ಪಟ್ಟ ತೊಟ್ಟ ಕನ್ಯೆಯರು ಚಂದ್ರನ ಬೆಳಕಿಗೆ ಹೊಳೆವ ನೆಕ್ಲೆಸ್, ಬಳೆ, ಸೊಂಟ ಪಟ್ಟಿ, ಕಿವಿಯೋಲೆ ಸೇರಿದಂತೆ ಭಾರಿ ಆಭರಣಗಳನ್ನು ಧರಿಸಿ ಹೆಜ್ಜೆ ಹಾಕಿದಾಗ, ಸಾಂಪ್ರದಾಯಿಕ ಕೆಡಿಯಾ ಹಾಗೂ ಪೈಜಾಮ(ಧೋತಿ) ತೊಟ್ಟ ಪುರುಷರು ಸಾಥ್ ನೀಡಿದ್ದು, ಅವರ ನರ್ತನಕ್ಕೆ ವರ್ಣಮಯ ಲೋಕವೇ ಸೃಷ್ಟಿಯಾಗಿತ್ತು. ಛತ್ರಿ ಹಾಗೂ ಕೋಲಾಟ ಮಿಶ್ರಣದ ನೃತ್ಯ ಮನ ಸೆಳೆಯಿತು. ಜೀವ, ಏಕತೆ, ಸಂತೋಷ ಸಾರುವ ‘ ಪರ್ ದೇಶಿ ರಾಧಾನೇ… ಏ ರಂಗ್ ರಸಿಯಾ..’ ಹಾಡಿಗೆ ಕೋಲಾಟ ಮಾಡಿದರು.ಮಳೆಗೆ ಮುನ್ನ ಮೇವು ಸಂಗ್ರಹಿಸುವ ಹಳ್ಳಿಗರ ಸಂಭ್ರಮದ ಬೇಟೆ, ಬೆಟ್ಟದ ನೃತ್ಯವು ಬುಡಕಟ್ಟು ಜನರ ಜೀವನ ಬಿಂಬಿಸಿತು. ಶ್ರಾವ್ಯ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.ಗುಜರಾತಿನ ಜಾನಪದ ನೃತ್ಯದ ಬೆನ್ನಲ್ಲೇ ಅಬ್ಬರಿಸಿದ್ದು, ಆಳ್ವಾಸ್ ಸಾಂಸ್ಕೃತಿಕ ವೈಭವದ ಝಲಕ್.ಪಶ್ಚಿಮ ಭಾರತದಿಂದ ಪ್ರೇಕ್ಷಕ ಸಮೂಹವನ್ನು ದಕ್ಷಿಣದ ಸಿಂಗಾರಿ ಮೇಳದೆಡೆಗೆ ವಿರಾಸತ್ ಕೊಂಡೊಯ್ಯಿತು. ಕೇರಳ ಹಾಗೂ ಕರ್ನಾಟಕದ ಕರಾವಳಿ (ತುಳು ನಾಡು)ಯ ದೇವ, ದೈವ, ಸಾಂಸ್ಕೃತಿಕ ಆರಾಧನೆಯ ಅವಿಭಾಜ್ಯ ಅಂಗವಾದ ‘ಚೆಂಡೆ’ಯ ನಿನಾದಕ್ಕೆ ಉನ್ಮಾದಗೊಳ್ಳದ ಕಲಾಸಕ್ತರಿಲ್ಲ. ಭಕ್ತರು, ಕಲಾಸಕ್ತರು ಸೇರಿದಂತೆ ಕುಳಿತವರಿಗೆಲ್ಲ ಝಲ್ ಎನಿಸುವಂತೆ ಮಾಡುವ ಚೆಂಡೆಯ ನಾದ ವಿರಾಸತ್ ವೇದಿಕೆಯಲ್ಲಿ ಹೊಮ್ಮಿದಾಗ ನೆರೆದ ಪ್ರೇಕ್ಷಕರಲ್ಲೂ ಮೈ ರೋಮಾಂಚನ.ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಮೂಹ ಸಂಸ್ಥೆಗಳ ಸಾಂಸ್ಕೃತಿಕ ವಿದ್ಯಾರ್ಥಿಗಳೇ ಕೇರಳದ ಚೆಂಡೆ ನುಡಿಸಿ, ಜನಮನ ಗೆದ್ದರು. ಕೇರಳದ ಚೆಂಡೆಯ ನಿನಾದವು ನೆರೆದ ಪ್ರೇಕ್ಷಕರನ್ನು ಮುದಗೊಳಿಸಿತು.ಕೇರಳ ಮೂಲದ ಸಿಂಗಾರಿ ಮೇಳವು ಶಾಸ್ತ್ರೀಯ ವಾದ್ಯವಾಗಿದ್ದು, ಜನಾಕರ್ಷಣೆ ಹೊಂದಿದ ನೃತ್ಯ ಕಲೆ. ಕೇರಳದಲ್ಲಿ ದೇವರ ಉತ್ಸವ, ಅರ್ಚನೆ, ಮೆರವಣಿಗೆಗಳಲ್ಲಿ ಸಿಂಗಾರಿ ಮೇಳಕ್ಕೆ ವಿಶೇಷ ಪ್ರಾತಿನಿಧ್ಯವಿದೆ. ವಾದ್ಯಗಳೇ ಈ ಮೇಳದ ಪ್ರಮುಖ ಪರಿಕರಗಳಾಗಿದ್ದು, ವರಂದಲಾ, ಚೆಂಡೆ ಮತ್ತು ತಾಳ ಸಿಂಗಾರಿ ಮೇಳಕ್ಕೆ ಕಳೆ ತರುತ್ತವೆ. ವಿರಾಸತ್ ವೇದಿಕೆಯಲ್ಲಿ ಚೆಂಡೆಯ ಅಬ್ಬರ. ಮಣಿಪುರದ ಮೈತೇಯಿ ಜನರ ಲಯ ಹಾಗೂ ಕೌಶಲಗಳ ಸಮ್ಮಿಳಿತದ ಆರಾಧನಾ ಕಲೆಯೇ ‘ಸ್ಟಿಕ್ ಡ್ಯಾನ್ಸ್’ ಎಂದು ಜನಜನಿತ. ಭಾರತೀಯ ಮಾರ್ಷಲ್ ಕಲಾ ಮಾದರಿಯ ಮಣಿಪುರಿ ‘ಸ್ಟಿಕ್ ಡ್ಯಾನ್ಸ್’ ಈಶಾನ್ಯ ಭಾರತದ ಸಾಹಸದ ದರ್ಶನ ನೀಡಿತು. ಸಾಹಸ ಮತ್ತು ಏಕಾಗ್ರತೆಯ ಸಂಗಮ ದಂತೆ ಆಳ್ವಾಸ್ ಸಾಂಸ್ಕೃತಿಕ ವಿದ್ಯಾರ್ಥಿಗಳು ‘ಸ್ಟಿಕ್ ಡ್ಯಾನ್ಸ್’ ಅನ್ನು ಕಸರತ್ತುಗಳೊಂದಿಗೆ ಪ್ರದರ್ಶಿಸಿದರು.ಒಬ್ಬರ ಮೇಲೆ ಮತ್ತೊಬ್ಬರು ಏರಿ ನಿರ್ಮಿಸಿದ ಪಿರಮಿಡ್, ಬಹುವಿಧದ ಜಿಗಿತ, ಚೂರಿ ಮೇಲೆ ಮಲಗಿದ ಕಸರತ್ತು, ಆಟ ರೋಮಾಂಚನಗೊಳಿಸಿತು.ಕಸರತ್ತಿನ ಬಳಿಕ ಶಿವನ ದರ್ಶನ. ಪುತ್ತೂರಿನ ವಿದ್ವಾನ್ ದೀಪಕ್ ಕುಮಾರ್ ನಿರ್ದೇಶನದಲ್ಲಿ ಮೂಡಿಬಂದ ನೀಲಕಂಠನ ಆರಾಧನೆಯ ‘ಭೋ ಶಂಭೋ, ಶಿವ ಶಂಭೋ, ಸ್ವಯಂ ಭೋ’ ಶಾಸ್ತ್ರೀಯ ನೃತ್ಯ ಮತ್ತೆ ಹೆಜ್ಜೆ- ಗೆಜ್ಜೆಗಳೆಡೆಗೆ ಸೆಳೆಯಿತು.ಶಿವನ ಮಹಿಮೆಯನ್ನು ಸಾರುವ ಈ ಶಾಸ್ತ್ರೀಯ ನೃತ್ಯ ರೂಪಕವನ್ನು ಆಳ್ವಾಸ್ ವಿದ್ಯಾರ್ಥಿಗಳು ಪ್ರದರ್ಶಿಸಿದಾಗ ಭಕ್ತಿ-ಭಾವದಲ್ಲಿ ಜನತೆ ಸಂಭ್ರಮಿಸಿದರು. ಹರಿಭಕ್ತಿಗೆ ಕಿವಿಯಾದವರು ಹರನ ಮಹಿಮೆಗೆ ಕಣ್ಣಾದರು. ನೃತ್ಯದ ಬಳಿಕ ಕಸರತ್ತಿನ ಗಮತ್ತು. ಮಲ್ಲರು (ಜಟ್ಟಿ)ಗಳು ತಮ್ಮ ದೇಹದಾರ್ಢ್ಯ ವರ್ಧನೆಗೆ ಕಂಬ ಬಳಸಿ ಮಾಡುತ್ತಿದ್ದ ಕಸರತ್ತು ‘ಮಲ್ಲಕಂಬ’ ಕ್ರೀಡೆಯಾಯಿತು. ಇದು ದೈಹಿಕ ಸೌಂದರ್ಯ, ಸಾಮರ್ಥ್ಯ ವರ್ಧನೆಯ ಸಾಹಸವೂ ಹೌದು. ನಮ್ಮ ನೆಲದ ಮಲ್ಲಕಂಬ ಕ್ರೀಡೆಗೆ ಸಾಂಸ್ಕೃತಿಕ ಸ್ವರೂಪ ನೀಡಿ, ವೇದಿಕೆಯ ಮೇಲೆ ಪ್ರದರ್ಶನವಾಗಿ ಪರಿವರ್ತಿಸುವ ಹಿಂದೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವರ ಕನಸಿದೆ. ಸದ್ಯ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಪುರುಷರ ಮಲ್ಲಕಂಬ ಹಾಗೂ ಮಹಿಳೆಯರ ರೋಪ್ ಸ್ಪರ್ಧೆಯಲ್ಲಿ ಆಳ್ವಾಸ್ ಕನ್ನಡ ಶಾಲೆಯ ವಿದ್ಯಾರ್ಥಿಗಳು ಹೆಸರು ಮಾಡುತ್ತಿದ್ದಾರೆ. ಕಂಬವನ್ನು ಏರಿ ಅವರು ನೀಡುತ್ತಿದ್ದ ಪ್ರದರ್ಶನ ರೋಮಾಂಚನ ನೀಡಿತು.ಬಸವರಾಜ್ ಹಾಗೂ ಚೇತನ್ ತರಬೇತಿಯಲ್ಲಿ ಮೂಡಿ ಬಂದ ಮಲ್ಲಕಂಬ ಮತ್ತು ರೋಪ್ ಕಸರತ್ತು ಕಲಾಕ್ರೀಡೆಯಾಗಿ ಮೆರಗು ನೀಡಿತು. ಅಂತರ ರಾಷ್ಟ್ರೀಯ ಮಲ್ಲಕಂಬ ಸ್ಪರ್ಧೆಗೆ ತೆರಳಿದ ತಂಡದಲ್ಲಿದ್ದ ಏಕೈಕ ಕರ್ನಾಟಕ ಪ್ರತಿನಿಧಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಎಂಬ ಹೆಮ್ಮೆಯನ್ನು ಕಾರ್ಯಕ್ರಮ ನಿರೂಪಿಸಿದ ನಿತೇಶ್ ಮಾರ್ನಾಡು ತಿಳಿಸಿದರು.ಮಂಗಳೂರಿನ ಅರೆಹೊಳೆ ಪ್ರತಿಷ್ಠಾನದ ಸದಸ್ಯರು ‘ಹನುಮಾನ್ ಚಾಲೀಸಾ’ ನತ್ಯ ರೂಪಕ ನಡೆಸಿಕೊಟ್ಟರು. ಶ್ವೇತಾ ಅರೆಹೊಳೆ ನಿರ್ದೇಶನದಲ್ಲಿ ರೂಪಕ ಮೂಡಿ ಬಂತು. ಬಳಿಕ ಗುಜರಾತಿ ಜಾನಪದ ವೈಭವದ ನೃತ್ಯಗಳ ಪ್ರದರ್ಶನವನ್ನು ಮಲಹರ್ ತಂಡವು ನೀಡಿತು. ‘ ಗುಜರಾತ್ ಬಂಧನ್’ ಹಾಡಿನೊಂದಿಗೆ ತೆರೆಬಿತ್ತು.

ಪ್ರಾದೇಶಿಕ ವಾರ್ತೆಗಳು

‘ತೊರೆದು ಜೀವಿಸಬಹುದೇ..’ ಹರಿಭಕ್ತಿಗೆ ಶರಣೆಂದ ವಿರಾಸತ್

ವಿದ್ಯಾಗಿರಿ: ಆಳ್ವಾಸ್ ವಿರಾಸತ್ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನದ ಬಳಿಕ ಸುಧೆಯಾಗಿ ಹರಿದದ್ದು ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಗಾಯಕ ಪದ್ಮಶ್ರೀ ಪಂಡಿತ್ ವೆಂಕಟೇಶ್ ಕುಮಾರ್ ಅವರ ಸ್ವರ ಮಾಧರ‍್ಯ.ಶ್ರೀ ರಾಗದ ಮೂಲಕ ಕಛೇರಿ ಆರಂಭಿಸಿದ ಅವರು ಮುರಲೀ ಸ್ತುತಿಸುತ್ತಾ ‘ಆನಂದ ದೇ ಮುಖ ಚಂದ್ರ ಐ ಸೇ ಚಾಂದನಿ ಸಾಂದ್ರ…’ಬಾದಲ್ ಆಯೇ ನಭಾ ಮೇ…ಯಾದ’ ಗಾನ ಸುಧೆ ಹರಿಸಿದರು.ಶ್ರೋತ್ರವಿನ ಯೋಚನಾ ಲಹರಿಗೆ ತೆರೆದುಕೊಳ್ಳುವ ಪುರಾತನ ಶ್ರೀ ರಾಗ ಹಾಡಿದ ಅವರು, ‘ ಗಾಯನ ಕೇಳುಗರಿಗೆ ಸುಲಲಿತ ಹಾಗೂ ಇಂಪಾಗಿರಬೇಕು’ ಎಂದು ಕೇಳುವುದನ್ನೂ ಕಲಿಸಿದರು. ಆಲಿಸುವ ಮನಸ್ಸು ತಂಪಾಗಿರಬೇಕು ಎಂದು ನೆನಪಿಸಿದರು.ಶ್ರೀ ರಾಗದ ಮೂಲಕ ಮುಸ್ಸಂಜೆಯ ಹೊತ್ತಲ್ಲಿ ಬದ್ಧತೆ ಹಾಗೂ ಭಕ್ತಿಯನ್ನು ಮೂಡಿಸಿದರು. ಬಳಿಕ, ‘ಕಮಲೇ… ಕಮಲಾಲಯೇ ಕಮಲ ಭವಾದಿ ಸುರ ವಂದಿತ ಪದೇ… ತ್ರಿಗುಣಾಭಿಮಾನಿಯೇ’ ಎಂದು ಲಕ್ಷ್ಮೀ ಸ್ತುತಿ ಭಜಿಸಿದರು. ಪ್ರದೀಪ ಮತ್ತು ಮಿಶ್ರ ರಾಗದಲ್ಲಿ ಭಜಿಸಿದರು.‘ಬಂದದ್ದು ಸರ‍್ಥಕ ಆತು. ನಾ ಹೆಂಗಾರ ಹಾಡ್ಲಿ… ಹಾಡ್ಲಿಕ್ಕಾ ಹುರಪು ಕೊಡ್ತೀರಲ್ಲಾ… ‘ ಎಂದು ಪ್ರೇಕ್ಷಕರ ಹುರುಪು ಕಂಡು ಕೃತಜ್ಞತೆ ವ್ಯಕ್ತಪಡಿಸಿದರು.ನಂತರ ವೆಂಕಟೇಶ್ ವಚನದತ್ತ ರಾಗ ಹೊರಳಿಸಿದರು. ‘ಅಕ್ಕಾ ಕೇಳವ್ವಾ ನಾ ಕನಸೊಂದ ಕಂಡೆ, ಅಕ್ಕಿ ಅಡಕೆ ಓಲೆ ತೆಂಗಿನಕಾಯಿ’ ಎಂದು ಅಕ್ಕಮಹಾದೇವಿ ವಚನಗಳನ್ನು ಹಾಡಿದರು.‘ಕೂಗಿದರೂ ದನಿ ಕೇಳದೇ … ಕೃಷ್ಣಾ’ ಎಂದು ಬೀಮ ಪಾಲಸ ರಾಗದಲ್ಲಿ ಕೃಷ್ಣನ ಸ್ತುತಿಸಿದರು. ಪ್ರೇಕ್ಷಕರ ಕಂಡು ‘ಬರೋಬ್ಬರಿ ಆತ್ರಿ’ ಎಂದು ಸಂತಸ ವ್ಯಕ್ತಪಡಿಸಿದರು.ಅವರಿಗೆ ಅಪಾರ ಖ್ಯಾತಿ ತರಿಸಿದ ಕನಕದಾಸರ ಹರಿಭಕ್ತಿಯ ‘ತೊರೆದು ಜೀವಿಸಬಹದೇ ಹರಿ ನಿನ್ನ ಚರಣಗಳ, ಬರಿದೆ ಮಾತೇಕಿನ್ನು ಅರಿ ಪೇಳುವೆನಯ್ಯಾ ಶ್ರೀಕೃಷ್ಣ ನಿನ್ನಡಿಯ ಬಿಡಲಾಗದು’ ಎಂದಾಗ ಕೃಷ್ಣ ಭಕ್ತಿಯಲ್ಲಿ ಸಭಾಂಗಣವೇ ಭಾವಪರಶವಾಯಿತು. ಕರತಾಡನದ ಅಲೆ ಉಕ್ಕಿ ಬಂತು. ‘ತೊರೆದು ಜೀವಿಸ ಬಹುದೇ…’ ಎಂದು ಶ್ರೋತ್ರುಗಳು ದನಿ ನೀಡಿದರು. ‘ಆದಿಕೇಶವರಾಯ… ಎಂಬ ಏರುಗತಿಗೆ ಪ್ರೇಕ್ಷಕರು ಧನ್ಯರಾದರು.‘ಇಲ್ಲಿನ ವಿದ್ಯರ‍್ಥಿಗಳು ಸಂಗೀತ ಆಸಕ್ತಿ ವ್ಯಕ್ತಪಡಿಸಿದರು. ನಿಮಗೆ ಕಲಿಕೆ ಜೊತೆ ಆಳ್ವಾಸ್ ನಲ್ಲಿ ಸಂಸ್ಕಾರ ಕೊಡುತ್ತಾರೆ. ಒಳ್ಳೆಯ ವಿದ್ಯಾ ಸಂಸ್ಥೆ’ ಎಂದು ವೆಂಕಟೇಶ್ ಶ್ಲಾಘಿಸಿದರು.ಒಂದು ಕಾಲದಲ್ಲಿ ಲತಾ ಮಂಗೇಶ್ಕರ್ ಸ್ವರದಲ್ಲಿ ಖ್ಯಾತಿ ಪಡೆದಿದ್ದ, ‘ಪಾವೋಜಿ ಮೈನೇ.. ರಾಮ ರತನ್ ಧನ್ ಪಾಯೋ..’ ಹಾಡಿದಾಗ ಮಹಿಳೆಯರೆಲ್ಲ ತಲೆದೂಗಿದರು.‘ ಪರ‍್ವತಿಯೇ ದೇವಿಯೇ, ಗಿರಿಜೆಯೇ, ಕಲ್ಯಾಣಿಯೇ… ರ‍್ವ ಮಂಗಳ ದೇವಿಯೇ’… ಎನ್ನುತ್ತಾ ಶಂಕರನ ರಾಣಿ ಪರ‍್ವತಿಯ ಸ್ತುತಿಸಿದರು.‘ಒಂದು ಬಾರಿ ಸ್ಮರಣೆ ಸಾಲದೇ ಆನಂದತರ‍್ಥ ಪರ‍್ಣಪ್ರಜ್ಞರ ರ‍್ವಜ್ಞ ರಾಯರ … ಮಧ್ವ ಮುನಿಯ’ ಎಂದು ವಾದಿರಾಜರ ಸಾಲುಗಳನ್ನು ಬೈರವಿ ರಾಗದಲ್ಲಿ ಹಾಡಿ ತೆರೆ ಎಳೆದರು.ಬಳ್ಳಾರಿಯ ಲಕ್ಷ್ಮೀಪುರದ ೭೧ರ ಹರೆಯದ ಎಂ. ವೆಂಕಟೇಶ್ ಕುಮಾರ್ ಬಿದಿರೆಯ ನಾಡಲ್ಲಿ ದಾಸಭಕ್ತಿಯನ್ನೇ ಉಕ್ಕೇರಿಸಿದರು. ಮುಸ್ಸಂಜೆಯ ಹೊಂಗಿರಣದ ನಡುವೆ ರ‍್ಣಮಯ ಬೆಳಕಿನ ಚಿತ್ತಾರ ಹಾಗೂ ವೈವಿಧ್ಯಮಯ ಅಲಂಕಾರಗಳಿಂದ ಕೂಡಿದ್ದ ಬೃಹತ್ ಸಭಾಂಗಣದಲ್ಲಿ ಗ್ವಾಲಿಯರ್ ಘರಾಣಾದ ವೆಂಕಟೇಶ್ ಗಾನದ ರ‍್ಷಧಾರೆಯನ್ನೇ ಹರಿಸಿದರು.ಜನಪದ ಗಾಯನದ ಕುಟುಂಬದಿಂದ ಬಂದು, ಗದಗದ ಪಂಡಿತ ಪುಟ್ಟರಾಜ ಗವಾಯಿಗಳ ಶಿಷ್ಯರಾಗಿ ಭಕ್ತಿ ಸಂಗೀತದ ಲಹರಿಯನ್ನು ನಾಡಿನಾದ್ಯಂತ ಹರಿಸಿದ ವೆಂಕಟೇಶರ ಹರಿಸ್ತುತಿಗೆ ಮಾರು ಹೋಗದವರಿಲ್ಲ. ಮಂಗಳವಾರ ಭಕ್ತಿಯ ವೈಭವ ಕಂಡಿದ್ದ ಪ್ರೇಕ್ಷಕರು ಬುಧವಾರ ಭಕ್ತಿ ಲಯದಲ್ಲಿ ಮುಳುಗಿದರು. ಸ್ವರ ಲೋಕದಲ್ಲಿ ಮಿಂದೆದ್ದರು.ಪಂಡಿತ್ ಭೀಮಸೇನ ಜೋಶಿ ಮೆಚ್ಚಿಗೆ ಸೂಚಿಸಿದ್ದ ಸ್ವರದ ಲಾಲಿತ್ಯಕ್ಕೆ ಸೇರಿದವರೆಲ್ಲ ಮೂಕಸ್ಮಿತ. ಹರಿಸ್ಮರಣೆ, ಭಕ್ತಿ ಸುಧೆ ಮತ್ತೆ ಅದೇ ನಿನಾದ..ಹರ‍್ಮೋನಿಯಂನಲ್ಲಿ ನರೇಂದ್ರ ಎಲ್. ನಾಯಕ್, ತಬಲಾದಲ್ಲಿ ಕೇಶವ ಜೋಶಿ ಮತ್ತು ವಿಘ್ನೇಶ್ ಕಾಮತ್ ಹಾಗೂ ತಾನ್ ಪುರಾ (ತಂಬೂರಿ)ದಲ್ಲಿ ರಮೇಶ ಕೋಲಕುಂದ ಮತ್ತು ರಾಘವ ಹೆಗಡೆ ಶಿರಸಿ ಹಾಗೂ ತಾಳದಲ್ಲಿ ವಿನೀತ್ ಭಟ್ ಕೋಟೇಶ್ವರ ಸಾಥ್ ನೀಡಿದರು. ಮಾಧವಿ ಮತ್ತು ಮೇಘ ಕರ‍್ಯಕ್ರಮ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ಪಂಡಿತ್ ಎಂ. ವೆಂಕಟೇಶ್ ಕುಮಾರ್‌ಗೆ ‘ಆಳ್ವಾಸ್ ವಿರಾಸತ್-2024’ ಪ್ರಶಸ್ತಿ ಪ್ರದಾನ. ಗವಾಯಿಗಳಿಗೆ ಪ್ರಶಸ್ತಿ ಅರ್ಪಿಸಿದ ಭಕ್ತಿ ಸ್ವರ ಮಾಂತ್ರಿಕ

ವಿದ್ಯಾಗಿರಿ (ಮೂಡುಬಿದಿರೆ): ‘ಬಡವರು, ದೀನ ದಲಿತರು, ಅಂಗವಿಕಲರಿಗಾಗಿ ಬದುಕು ಮುಡುಪಾಗಿಟ್ಟಿದ್ದ ಪಂಡಿತ ಪುಟ್ಟರಾಜ ಗವಾಯಿಗಳಿಗೆ ಈ ಪ್ರಶಸ್ತಿ ಅರ್ಪಣೆ’ ಎಂದು ಖ್ಯಾತ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಗಾಯಕ ಪದ್ಮಶ್ರೀ ಪಂಡಿತ್ ವೆಂಕಟೇಶ್ ಕುಮಾರ್ ಭಾವುಕರಾದರು.ಇಲ್ಲಿನ ವನಜಾಕ್ಷಿ ಕೆ.ಶ್ರೀಪತಿ ಭಟ್ ಬಯಲು ರಂಗಮAದಿರದಲ್ಲಿ ಬುಧವಾರ ಸಂಜೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ‘30ನೇ ವರ್ಷದ ಆಳ್ವಾಸ್ ವಿರಾಸತ್’ನಲ್ಲಿ ಪ್ರತಿಷ್ಠಿತ ‘ಆಳ್ವಾಸ್ ವಿರಾಸತ್-2024’ ಪ್ರಶಸ್ತಿಯನ್ನು ಸ್ವೀಕರಿಸಿದ ಅವರು ಮನದುಂಬಿ ಮಾತನಾಡಿದರು.ಶಿಸ್ತು, ಸಂಯಮ, ಸಮಯ ಬಹಳ ದೊಡ್ಡದು. ಅದನ್ನು ತೋರಿಸಿದ ಡಾ.ಎಂ. ಮೋಹನ ಆಳ್ವ ಅವರ ಸಾಧನೆ ಅನನ್ಯ. ಅವರಿಂದ 101 ವರ್ಷ ಕಾರ್ಯಕ್ರಮ ನಡೆಯಲಿ ಎಂದು ಹಾರೈಸಿದರು.ಇಂತಹ ಕಾರ್ಯಕ್ರಮ ಕಷ್ಟದ ಕಾರ್ಯ ಎಂದು ಉಲ್ಲೇಖಿಸಿದರು.ತಂದೆ- ತಾಯಿಗಳ ಬಳಿಕ ಗುರುವೇ ನಮ್ಮ ಪುಣ್ಯ ಗವಾಯಿಗಳು ರಾಜ್ಯದಲ್ಲಿ ಹಿಂದೂಸ್ತಾನಿ ಸಂಗೀತ ಪಸರಿಸಲು ಕಾರಣ. ಅದಕ್ಕಾಗಿ ಜೀವನ ಮುಡುಪಾಗಿಟ್ಟ ಮಹಾತ್ಮ ಎಂದರು.ಪ್ರಶಸ್ತಿ ಹುಡುಕಿಕೊಂಡು ಬರಬೇಕು. ನಾವು ಅದರ ಹಿಂದೆ ಹೋಗಬಾರದು ಎಂದು ಕಿವಿಮಾತು ಹೇಳಿದರು. ಅದಕ್ಕೂ ಮೊದಲು, ಕಲೆ-ಸಂಸ್ಕೃತಿಯ ಸಮ್ಮಿಲನದ ಸ್ವರೂಪದಂತೆ ಅಲಂಕೃತ ಗೊಂಡ ವಿರಾಸತ್‌ನ ಬಯಲು ರಂಗಮAದಿರದ ಬೃಹತ್ ವೇದಿಕೆಗೆ ಪಂಡಿತ್ ವೆಂಕಟೇಶ್ ಕುಮಾರ್ ಅವರನ್ನು ಸಾಂಪ್ರದಾಯಿಕ ಗೌರವದ ಅಪ್ಸರೆಯರ ಜೊತೆಯಾದ ಸ್ಯಾಕ್ಸೋಫೋನ್, ಗಟ್ಟಿಮೇಳ, ಚೆಂಡೆ, ಛತ್ರಿ ಚಾಮರ ಮತ್ತಿತರ ಗೌರವ ವಾದ್ಯಪರಿಕರಗಳ ನಿನಾದಗಳ ಮೂಲಕ ಕರೆತರಲಾಯಿತು.ವೇದಿಕೆಯ ಗೌರವ ಪೀಠದಲ್ಲಿ ಕುಳ್ಳಿರಿಸಿ, ಆರತಿ ಬೆಳಗಿ ಹಾರ ಹಾಕಿ ಗೌರವಿಸಲಾಯಿತು. ಹೂ, ಪನ್ನೀರು, ಗಂಧ, ಚಂದನದ ಮೂಲಕ ಸಾಂಪ್ರದಾಯಿಕ ಗೌರವ ನೀಡಲಾಯಿತು.‘ಸ ಎಂದರೆ ಸಂಗೀತ ಸಾಗರ.. ಆರತಿಯು…’ ಹಾಡಿನ ಮೂಲಕ ಅಭಿವಂದನೆ ಸಲ್ಲಿಸಲಾಯಿತು. ಹೂ ಹಾರ, ಶಾಲು, ಹಣ್ಣು-ಹಂಪಲು, ಪ್ರಶಸ್ತಿ ಫಲಕ, ಸ್ಮರಣಿಕೆ ಸಹಿತ ಒಂದು ಲಕ್ಷ ರೂಪಾಯಿಯ ಪುರಸ್ಕಾರ ನೀಡಿ ಪ್ರಶಸ್ತಿ ಪ್ರದಾನ ಮಾಡಲಾಯಿತು.ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಹಾಗೂ ಅತಿಥಿಗಳು ಪ್ರಶಸ್ತಿ ಪ್ರದಾನ ಮಾಡಿದರು.ಆರಂಭದಲ್ಲಿ ದೀಪ ಪ್ರಜ್ವಲನ ಮಾಡಲಾಯಿತು. ಬೆಂಗಳೂರಿನ ಪ್ರಾರ್ಥನಾ ಶಿಕ್ಷಣ ಸಂಸ್ಥೆಯ ಕರ್ಣ ಬೆಳಗೆರೆ, ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಲ್.ಧರ್ಮ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಪ್ರಧಾನ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ಎಲ್. ಎಚ್. ಮಂಜುನಾಥ್, ಪ್ರಮುಖರಾದ ನರೇಂದ್ರ ಎಲ್. ನಾಯಕ್, ಉದ್ಯಮಿ ಶ್ರೀಪತಿ ಭಟ್ ಇದ್ದರು.ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಕನ್ನಡ ಡೀನ್ ಕೆ. ವೇಣುಗೋಪಾಲ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಉಪನ್ಯಾಸ ಕಾರ್ಯಕ್ರಮ. ಸೌಹಾರ್ದತೆಯಿಲ್ಲದೆ ಬದುಕಿಗೆ ಅರ್ಥವಿಲ್ಲ: ಡಾ| ಎಂ. ಮೋಹನ ಆಳ್ವ

ವಿದ್ಯಾಗಿರಿ: ಸೌಹಾರ್ದತೆಯಿಲ್ಲದೆ ಬದುಕಿಗೆ ಅರ್ಥವಿಲ್ಲ. ಪ್ರೀತಿ ಸೌಹಾರ್ದತೆಗಾಗಿ ನಾವು ಜೀವನದುದ್ದಕ್ಕೂ ಶ್ರಮಿಸಬೇಕು ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲಾ ಮುಖ್ಯ ಆಯುಕ್ತರಾದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಹೇಳಿದರು.ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಮೂಡುಬಿದಿರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಸಹಭಾಗಿತ್ವದಲ್ಲಿ ‘೩೦ನೇ ಆಳ್ವಾಸ್ ವಿರಾಸಾತ್’ ಅಂಗವಾಗಿ ನಡೆಯುತ್ತಿರುವ ರಾಜ್ಯ ಮಟ್ಟದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮತ್ತು ರೋವರ್ಸ್- ರೇಂಜರ್ಸ್ ಸಾಂಸ್ಕೃತಿಕ ಉತ್ಸವದ ಅಂಗವಾಗಿ ರತ್ನಾಕರವರ್ಣಿ ವೇದಿಕೆಯಲ್ಲಿ ಬುಧವಾರ ಅವರು ಉಪನ್ಯಾಸ ನಿಡಿದರು.ಜಾನಪದ ಕಲೆಗಳ ವೈವಿಧ್ಯತೆಯನ್ನು ವಿದ್ಯಾರ್ಥಿಗಳು ಅಪ್ಪಿಕೊಳ್ಳಬೇಕು. ದೇಶದ ಕಲೆಯನ್ನು ಪ್ರೀತಿಸಬೇಕು ಎಂದರು. ಶುಚಿತ್ವವನ್ನು ಬಿಟ್ಟರೆ ಬದುಕೇ ಇಲ್ಲ. ಶುಚಿತ್ವ ಕೇವಲ ಮಾತಿಗೆ, ಬರಹಕ್ಕೆ ಮೀಸಲಾಗಬಾರದು. ನಮ್ಮ ಜೀವನದಲ್ಲಿ ಅಂತರ್ಗತವಾಗಬೇಕು. ಇದರ ಜೊತೆಗೆ ಮಣ್ಣು ಗಾಳಿ ನೀರು ಆಕಾಶವನ್ನು ರಕ್ಷಿಸುವುದು ನಮ್ಮ ಕರ್ತವ್ಯ. ಈ ಅಂಶಗಳು ಮಾನವನ ಉಳಿವಿಗಿರುವ ಪ್ರಮುಖ ಅಂಶಗಳು. ಮಾನವ ಕುಲದ ರಕ್ಷಣೆಗೆ ಪರಿಸರದ ರಕ್ಷಣೆ ಬಹುಮುಖ್ಯ ಎಂದರು.ಜೀವನದಲ್ಲಿ ಸೇವಾಮನೋಭಾವವನ್ನು ಬೇಕಿಸಿಕೊಳ್ಳಬೇಕು. ಕೇವಲ ಓದಿ ತಿಳಿಯುವುದಲ್ಲ ಜೀವನದ ಅನುಭವದ ಮೂಲಕ ತಿಳಿಯುವುದು ಎಂದು ತಿಳಿಸಿದರು.ಮಾನವಧರ್ಮವನ್ನು ಹೊರತುಪಡಿಸಿ ಜಗತ್ತಿನಲ್ಲಿ ಯಾವುದೇ ಧರ್ಮವಿಲ್ಲ. ಧರ್ಮವೊಂದೇ, ಮತಗಳು ಹಲವಾರು ಎಲ್ಲಾ ಮತಗಳು ಸೇರಿ ಇರುವುದೇ ಧರ್ಮ ಎಂದರು.ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಮುಖ್ಯ ಆಯುಕ್ತ ಪಿ. ಜಿ. ಆರ್. ಸಿಂಧ್ಯಾ ಮಾತನಾಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದೇಶಕ್ಕೆ ಮಾದರಿಯಾಗುವಂತೆ ಬೆಳೆಯುತ್ತಿದೆ. ವಿದ್ಯಾರ್ಥಿಗಳಲ್ಲಿ ಸ್ವ ಪರಿಪೂರ್ಣತೆಯನ್ನು ಮೂಡಿಸುವ ಕೆಲಸವನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮಾಡುತ್ತಿದೆ ಎಂದರು.ಶಿಕ್ಷಣ, ಕ್ರೀಡೆ, ಸಂಸ್ಕೃತಿಯ ದೃಷ್ಟಿಯಲ್ಲಿ ದೇಶಕ್ಕೆ ಮಾದರಿಯಾಗಿರುವ ಏಕೈಕ ಸಂಸ್ಥೆ ಆಳ್ವಾಸ್ ಎಂದು ಶ್ಲಾಘಿಸಿದರು.ಆಳ್ವಾಸ್ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ. ವಿರಾಸಾತ್ ಮೇಳಗಳನ್ನು ಪ್ರತಿಯೊಬ್ಬರೂ ಸೂಕ್ಷ್ಮತೆಯಿಂದ ಗಮನಿಸಿ, ಪ್ರೇರಿತರಾಗಬೇಕು ಎಂದು ತಿಳಿಸಿದರು.ರಾಜ್ಯ ಕಾರ್ಯದರ್ಶಿ ಗಂಗಪ್ಪ ಗೌಡ, ರಾಜ್ಯ ಸಂಘಟನಾ ಆಯುಕ್ತ ಎಂ. ಪ್ರಭಾಕರ ಭಟ್, ದಕ್ಷಿಣ ಕನ್ನಡ ಜಿಲ್ಲಾ ಕೋಶಾಧಿಕಾರಿ ನವೀನಚಂದ್ರ ಅಂಬೂರಿ ಶಿಬಿರದ ಮೇಲ್ವಿಚಾರಕಿ ಮಲ್ಲೇಶ್ವರಿ ಜೂಜಾರೆ ಇದ್ದರು. ಆಳ್ವಾಸ್ ಪದವಿ ಪೂರ್ವ ಕಾಲೇಜಿನ ರೇಂಜರ್ಸ್ ನಾಯಕಿ ಶ್ವೇತಾಶ್ರೀ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಪ್ರಾದೇಶಿಕ ವಾರ್ತೆಗಳು

ಕಲಾಸಕ್ತರು, ರೈತರು, ಮಕ್ಕಳು, ಮಹಿಳೆಯರು, ಕುಶಲಕರ್ಮಿಗಳು ಸೇರಿದಂತೆ ಸರ್ವರನ್ನೂ ಸೆಳೆಯುತ್ತಿರುವ ‘ವಿದ್ಯಾಗಿರಿ’ 30ನೇ ವರ್ಷದ ಆಳ್ವಾಸ್ ವಿರಾಸತ್: ಸಾಂಸ್ಕೃತಿಕ ಮೆರುಗು, ಮೇಳಗಳ ಬೆರಗು

ವಿದ್ಯಾಗಿರಿ: ಮೂಡಣದ ಬಿದಿರೆಯ ನಾಡಲ್ಲಿ ಮೂರು ದಶಕಗಳ ಹಿಂದೆ ಬೆಳಗಿದ ಸಾಂಸ್ಕೃತಿಕ ಬೆಳಕು ಜನಮಾನಸವ ಬೆಸೆದುಕೊಂಡಿದ್ದು, ಈಗ ಮೂವತ್ತರ ಹರುಷ. ಈ ಸಾಂಸ್ಕೃತಿಕ ಬೆಳಕಿನ ರಾಷ್ಟಿçÃಯ ಸಾಂಸ್ಕೃತಿಕ ಉತ್ಸವವಾದ 30ನೇ ವರ್ಷದ ‘ಆಳ್ವಾಸ್ ವಿರಾಸತ್’ಗೆ ವಿದ್ಯಾಗಿರಿಯು ವಿದ್ಯುದ್ದೀಪಾಲಂಕಾರ, ಹೂ-ಹಣ್ಣಿನ ಸಿಂಗಾರ, ಗೂಡುದೀಪಗಳ ಬೆಳಕು, ಕಲಾಕೃತಿಗಳ ಮೆರುಗು ಸೇರಿದಂತೆ ಅನನ್ಯತೆ ಹಾಗೂ ಅಚ್ಚರಿಗಳ ಬೆರಗಿನ ಮೂಲಕ ಸಜ್ಜಾಗಿದೆ. ಇಂದಿನಿAದ (ಡಿ.10) ಭಾನುವಾರದ ವರೆಗೆ (ಡಿ.15) ಮಹಾಮೇಳಗಳ ಜೊತೆ ಸಾಂಸ್ಕೃತಿಕ ರಸದೌತಣ. ಈ ಬಾರಿ ಡಿ.10 ರಿಂದ 14ರ ವರೆಗೆ ಮೇಳಗಳ ಜೊತೆ ಸಾಂಸ್ಕೃತಿಕ ಕಾರ್ಯಕ್ರಮಗಳು ಮೇಳೈಸಲಿದ್ದರೆ, ಡಿ.15ರ ಭಾನುವಾರದ ಪೂರ್ಣ ದಿನವನ್ನು ಜನ ಮೇಳಗಳಲ್ಲಿ ಮಿಂದೇಳಲು ಮೀಸಲಿರಿಸಲಾಗಿದೆ.ವನಜಾಕ್ಷಿ ಕೆ. ಶ್ರೀಪತಿ ಭಟ್ ವೇದಿಕೆಯು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಮೀಸಲಾಗಿದ್ದರೆ, ಸಮೀಪದ ಕೃಷಿಸಿರಿ, ನೀಟ್ ಕಟ್ಟಡ, ಅರಮನೆ ಮೈದಾನ ಸೇರಿದಂತೆ ಸುತ್ತಲ ಆವರಣದಲ್ಲಿ ಕೃಷಿ ಮೇಳ, ಆಹಾರ ಮೇಳ, ಫಲಪುಷ್ಪ ಮೇಳ, ಕರಕುಶಲ ಮತ್ತು ಪ್ರಾಚ್ಯವಸ್ತು ಪ್ರದರ್ಶನ ಮೇಳ, ಚಿತ್ರಕಲಾ ಮೇಳ, ಕಲಾಕೃತಿ ಪ್ರದರ್ಶನ, ಛಾಯಾಚಿತ್ರಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳ ಮಹಾಮೇಳ ದಿನಪೂರ್ತಿ ತೆರೆದಿರುತ್ತವೆ. ಪುಟಾಣಿ- ಶತಾಯುಷಿ ಸೇರಿದಂತೆ ಎಲ್ಲರ ತನು-ಮನ ಸಂತೈಸಲಿದೆ. ತುಳುನಾಡಿನ ಗುತ್ತಿನ ಮನೆಯ ಪರಿಕಲ್ಪನೆಯಲ್ಲಿ ಕೃಷಿಸಿರಿ ಮೇಳಗಳ ಆವರಣವನ್ನು ಸಜ್ಜುಗೊಳಿಸಲಾಗಿದ್ದು, ಈ ಬಾರಿ 650 ಮಳಿಗೆಗಳಿವೆ. ವಿದ್ಯಾಗಿರಿಯ ಆವರಣದ ತುಂಬಾ ಸುಮಾರು 2.5 ಲಕ್ಷಕ್ಕೂ ಅಧಿಕ ಹೂವಿನಗಿಡಗಳು, 500ಕ್ಕೂ ಹೆಚ್ಚು ಕಲಾಕೃತಿಗಳಿದ್ದು, ವಿರಾಸತ್ ರಾಜಮಾರ್ಗದ ಅಂದವನ್ನೂ ಹೆಚ್ಚಿಸಿವೆ. ಪ್ರಕೃತಿಯ ಮಡಿಲಲ್ಲಿ ಸಿಂಗರಿಸಿ ನಿಂತ ಮದುವಣಗಿತ್ತಿಯಂತೆ ಕೈ ಬೀಸಿ ಕರೆಯುತ್ತಿದೆ.ಅಬಾಲವೃದ್ಧರಾಗಿ ಯಾವುದೇ ಭೇದಭಾವ ಇಲ್ಲದೇ ಎಲ್ಲರೂ ಆಶಾದಾಯಕವಾಗಿ ಕುಟುಂಬ ಸಮೇತ ಸಂಭ್ರಮಿಸಬಹುದಾದ ಅಪೂರ್ವ ಸಾಂಸ್ಕೃತಿಕ ಉತ್ಸವದ ತೆರೆ ಮೆಲ್ಲನೆ ಸರಿದಿದೆ. ಏಕತೆ ಮತ್ತು ಸಮಗ್ರತೆಯನ್ನು ಪ್ರತಿಬಿಂಬಿಸುವ ವೈಭವವನ್ನು ಎಲ್ಲಾ ಪ್ರೇಕ್ಷಕರು 6 ದಿನಗಳ ಕಾಲ ಸವಿಯಬಹುದು.ಸುಮಾರು 30 ವರ್ಷದಿಂದ ನಡೆಸಿಕೊಂಡು ಬರುತ್ತಿರುವ ಆಳ್ವಾಸ್ ವಿರಾಸತ್ ಸಾಂಸ್ಕೃತಿಕ ಉತ್ಸವ ಎಲ್ಲಾ ಸಂಘಟಕರಿಗೆ, ಕಲಾವಿದರಿಗೆ ಹೊಸ ಸಾಧ್ಯತೆ ಮತ್ತು ಸಂದೇಶವನ್ನು ನೀಡುವಲ್ಲಿ ಯಶಸ್ವಿಯಾಗಿದೆ.ಕಳೆದ ಆರು ತಿಂಗಳಿAದ ಸಂಸ್ಥೆಯ ವಿದ್ಯಾರ್ಥಿಗಳು, ಸಿಬ್ಬಂದಿ, ಸರಿಸುಮಾರು 500ಕ್ಕೂ ಹೆಚ್ಚಿನ ಕಾರ್ಮಿಕರು ಡಾ.ಎಂ. ಮೋಹನ ಆಳ್ವ ಅವರ ಮಾರ್ಗದರ್ಶನದಲ್ಲಿ ವಿರಾಸಾತ್‌ನ ಯಶಸ್ಸಿಗೆ ಶ್ರಮಿಸುತ್ತಿದ್ದಾರೆ. ರಥಾರತಿ:ಕಳೆದ ಬಾರಿಯಂತೆ ಈ ಬಾರಿಯೂ ರಥ ಸಂಚಾರವು ವಿರಾಸತ್ ವಿಶೇಷವಾಗಿದೆ. ವೇದಘೋಷಗಳು, ಪುಷ್ಪಪಲ್ಲಕ್ಕಿ, ಮಂಗಳವಾದ್ಯಗಳೊAದಿಗೆ ಸಾಂಸ್ಕೃತಿಕ ರಥಸಂಚಲನ ಮತ್ತು ರಥಾರತಿ ಜರುಗಲಿದೆ. ಮುಖ್ಯ ವೇದಿಕೆಯ ಮುಂಭಾಗದಲ್ಲಿ ಉದ್ಘಾಟನೆ ಸಂದರ್ಭದಲ್ಲಿ ಸಾಂಸ್ಕೃತಿಕ ರಥವನ್ನು ಎಳೆಯಲಾಗುತ್ತದೆ. ಈ ರಥದಲ್ಲಿ ಲೋಕ ಮಾರ್ಗದರ್ಶಕರಾದ ಮರ್ಯಾದಾ ಪುರುಷೋತ್ತಮ ರಾಮ ಹಾಗೂ ಜೀವನೋಲ್ಲಾಸ ಕೃಷ್ಣರ ಮೂರ್ತಿ ಇರಲಿವೆ. ಶಕ್ತಿ ಮತ್ತು ಭಕ್ತಿಯ ಪ್ರತೀಕವಾಗಿ ಹನುಮಂತ, ಸಂಪತ್ತಿನ ಧ್ಯೋತಕವಾದ ಮಹಾಲಕ್ಷಿö್ಮà ಹಾಗೂ ವಿದ್ಯಾಮಾತೆ ಮಹಾ ಸರಸ್ವತಿ ಇರಲಿದ್ದಾರೆ. ರಥದ ಜೊತೆ ಭಜನಾ ತಂಡಗಳು ಪಾಲ್ಗೊಳ್ಳಲಿವೆ. ಸಮಾರೋಪದ ದಿನ ರಥವು ಮತ್ತೆ ಸ್ವಸ್ಥಾನಕ್ಕೆ ರಥ ಸಂಚರಿಸಲಿದ್ದು, ಹರಿದ್ವಾರದಿಂದ ಬರುವ ಪ್ರಮುಖರು ಮಂತ್ರ ಘೋಷಗಳೊಂದಿಗೆ ಆರತಿ ಬೆಳಗಲಿದ್ದಾರೆ.ಮೆರವಣಿಗೆ:150 ಕ್ಕಿಂತಲೂ ಅಧಿಕ ದೇಶಿಯ ಜಾನಪದ ಕಲಾ ತಂಡಗಳ 4000 ಕ್ಕೂ ಮಿಕ್ಕಿದ ಕಲಾವಿದರಿಂದ ವೈವಿಧ್ಯಮಯ ಭವ್ಯ ಸಾಂಸ್ಕೃತಿಕ ಮೆರವಣಿಗೆ ನಡೆಯಲಿದೆ. ಅಳಿವಿನಂಚಿನಲ್ಲಿರುವ ಜಾನಪದ ಕಲೆಯ ರಕ್ಷಣೆ ಹಾಗೂ ಜಾನಪದ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡುವುದು ಈ ಮೆರವಣಿಗೆಯ ಉದ್ದೇಶ ಎನ್ನುತ್ತಾರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ.ರಾಷ್ಟಿçÃಯ- ಅಂತರರಾಷ್ಟಿçÃಯ ಕಲಾವಿದರು ಮಾತ್ರವಲ್ಲ, ನಮ್ಮ ರಾಜ್ಯ- ಜಿಲ್ಲೆಯ ಕಲಾವಿದರ ಜೊತೆ ಸಂಸ್ಥೆಯ 400ಕ್ಕೂ ಅಧಿಕ ಸಾಂಸ್ಕೃತಿಕ ಕಲಾವಿದ ವಿದ್ಯಾರ್ಥಿಗಳು ಪ್ರದರ್ಶನ ನೀಡಲಿದ್ದಾರೆ. ಕೃಷಿ ಮೇಳ :ವಿರಾಸತ್‌ನಲ್ಲಿ ಕೃಷಿಯ ಅದ್ಭುತ ಲೋಕವೇ ನಿರ್ಮಾಣವಾಗಿದೆ. ಹಸಿರುಟ್ಟ ಬೆಡಗಿಯಂತೆ ‘ಗಿರಿ’ ಸಿಂಗರಿಸಿದೆ. ದೇಶ ವಿದೇಶಗಳಿಂದ ತಂದ ತಳಿಗಳು ಹಾಗೂ ಕಸಿ ಮಾಡಿದ ವೈವಿದ್ಯ ಫಲಗಳ ಜೊತೆಗೆ ಇಲ್ಲಿನ ಹಲವು ಬಗೆಯ ಫಲ ಪುಷ್ಪ ಮತ್ತು ತರಕಾರಿಗಳನ್ನು ಬೆಳೆಯವ ಕೆಲಸವನ್ನು 250 ಕ್ಕೂ ಹೆಚ್ಚಿನ ಕಾರ್ಮಿಕರು ನಿರ್ವಹಿಸುತ್ತಿದ್ದಾರೆ. ಇಸ್ರೇಲ್ ತಂತಾಜ್ಞಾನ ಬಳಸಿ ಹಾಗಲಕಾಯಿ, ಕುಂಬಳಕಾಯಿ, ಹರಿವೆ, ಬೆಂಡೆಕಾಯಿ, ಬದನೆ, ಪಡುವಲಕಾಯಿ ಹಾಗೂ ಇನ್ನಿತರ ತರಕಾರಿಗಳು ಬೆಳೆಯಲಾಗಿದೆ.ಈ ಬಾರಿ ಕೃಷಿ ಮೇಳದಲ್ಲಿ ಹಣ್ಣು- ತರಕಾರಿ, ಬೀಜಗಳು, ನರ್ಸರಿಗಳು, ಸಾವಯವ ಹಾಗೂ ರಾಸಾಯನಿಕ ಗೊಬ್ಬರಗಳು, ನೀರು- ನೆಲಗಳಲ್ಲಿ ಬೆಳೆಯುವ ವಿವಿಧ ಸಸ್ಯ ಪ್ರಭೇದಗಳು, ಕೃಷಿ ಉಪಕರಣ- ಯಂತ್ರಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳು ಇರಲಿವೆ.ವಿವಿಧ ಕೃಷಿ ಸಸ್ಯ ಪ್ರಭೇದಗಳ ಬೀಜ, ಅವುಗಳನ್ನು ಬೆಳೆಸಲು ಬೇಕಾದ ಯಂತ್ರ- ತಾಂತ್ರಿಕ ಸಲಕರಣೆಗಳು, ಕೃಷಿ ಉತ್ಪನ್ನಗಳು ಈ ಬಾರಿಯ ವಿಶೇಷ ಆಕರ್ಷಣೆ.ಆಹಾರ ಮೇಳ:ಆಹಾರ ಮೇಳದಲ್ಲಿ ಸುಮಾರು 150ಕ್ಕೂ ಅಧಿಕ ಮಳಿಗೆಗಳಲ್ಲಿ ಪಾರಂಪರಿಕದಿAದ ಹಿಡಿದು ಫಾಸ್ಟ್ಫುಡ್ ತನಕದ ಸಸ್ಯಾಹಾರ ಹಾಗೂ ಮಾಂಸಾಹಾರ ಇತ್ಯಾದಿಗಳ ವೈವಿಧ್ಯ ಇವೆ. ಆಹಾರದ ಪ್ರದರ್ಶನ ಮತ್ತು ಮಾರಾಟವಿದ್ದು, ಕಣ್ಣು- ನಾಲಗೆಗೆ ಮಾತ್ರವಲ್ಲ, ಹೊಟ್ಟೆಯನ್ನೂ ತುಂಬಿಸಿಕೊಳ್ಳಬಹುದು.ಫಲಪುಷ್ಪ ಮೇಳ :ನಮ್ಮ ನೆಲದ ಚೆಂಡು, ಮಲ್ಲಿಗೆ ಮತ್ತಿತರ ಹೂಗಳ ಜೊತೆ ಹೂ ಗಿಡಗಳಾದ ಪಾಯಿಂಸೆಟ್ಟಿ, ಪೆಟುನಿಯಾ, ಸಾಲ್ವಿಯಾ, ಆಗ್ಲೋನಿನ, ಫಿಲಿಡೊಡ್ರನ್, ಟೊರ್ನಿಯ, ಕಲೆನಚೋ ವಿವಿಧ ಬಗೆಯ ಸಮಗ್ರ ಫಲ ಪುಷ್ಪ ಪ್ರದರ್ಶನ ಮೇಳೈಸಲಿವೆೆ.ಸದಾಪುಷ್ಪ, ಸೇವಂತಿಗೆ, ಜೀನ್ಯ, ಗೌರಿ, ಡಾಲಿ, ಲಿಲ್ಲಿ, ಕೆಪುಳ, ಸಿಲ್ವರ್ ಡಸ್ಟ್ ಲವೆಂಡಾರ್, ಅನೆಸೊಪ್ಪು, ಅಂತೋರಿಯಮ್, ಮಲ್ಲಿಗೆ, ಸಲ್ವಿಯ ಸ್ಪ್ಲೆಂಡನ್ಸ್, ಸೆಲೋಶಿಯ, ಚೈನೀಸ್ ಫ್ರಿಂಜ್, ವೀಪಿಂಗ್ ಫಿಗ್, ವಿಶ್ಬೋನ್ ಸೇರಿದಂತೆ ನಂದನವನವೇ ಧರೆಗಿಳಿದಂತೆ ಭಾಸವಾಗುತ್ತಿವೆ.ಇನ್ನು ಪುಷ್ಪಗಳಿಂದ ರಚಿಸಿದ ಆನೆ, ಕುದುರೆ, ಜಿರಾಫೆ, ನವಿಲು ಇತ್ಯಾದಿ ಕಲಾಕೃತಿಗಳಿವೆ.ಔಷಧೀಯ ಸಸ್ಯಗಳಾದ ಅಮ್ರ, ನಂದಿ, ಬಕುಲಾ, ಶಲ್ಮಾಲಿ, ಜಂಬೂ, ತಿಲಕ, ತಾರೇಕಾಯಿ, ಸರಳ, ಪ್ರಿಯಂಗು, ಕದಂಬ, ತೆಂದುಕ, ಅಶ್ವತ್ಥ, ಶಿರೀಶ, ಸಪ್ತ ಪರ್ಣಿ, ದೇವದಾರು, ಸಂಪಿಗೆ, ಅಶೋಕ, ಕಪಿತ, ಶಾಲವೃಕ್ಷ, ನಾಗಾಕೇಸರ, ಪಾಲಶ ಗಿಡ ಸೇರಿದಂತೆ ನೂರಾರು ಸಸ್ಯ ಸಂಕುಲವಿದೆ. ಕಲಾಕೃತಿ :ವಿರಾಸತ್ ನಡೆಯುವ ವಿದ್ಯಾಗಿರಿ ಆವರಣದ ತುಂಬಾ ಸುಮಾರು ಸಾವಿರಕ್ಕೂ ಅಧಿಕ ಕಲಾಕೃತಿಗಳು ನಿಮ್ಮನ್ನು ಕೈ ಬೀಸಿ ಕರೆಯುತ್ತಿವೆ. ಸಿಮೆಂಟ್‌ನಿAದ ತಯಾರಿಸಲಾದ ಒಂಟೆ, ಅಳಿಲು, ಟಗರು, ಯಕ್ಷಗಾನ ಕಲಾಕೃತಿಗಳು ಹಾಗೂ 24 ಜೈನ ತೀರ್ಥಂಕರರು, ವಿವಿಧ ಸಂಪ್ರದಾಯ ಶೈಲಿಯ ಮದುವೆಯ ವೇಷಧಾರಿಗಳ ಆಕೃತಿಗಳು, ಜ್ಞಾನಪೀಠ ಪುರಸ್ಕೃತರ ಪ್ರತಿಮೆ, ವಿವೇಕಾನಂದ, ರಾಧಾಕೃಷ್ಣ, ಗಣಪತಿ, ಬಸವಣ್ಣ , ಮೀರಾಬಾಯಿ, ಕತಕ್ಕಳಿಯಂತಹ ಅನೇಕ ಆಕರ್ಷಣೀಯ ವೇಷಧಾರಿ ಅಕೃತಿಗಳ ಜೊತೆಗೆ ಮೋಲ್ಡ್ ಮಾಡಿದ ಕಲಾಕೃತಿಗಳು ಕಂಗೊಳಿಸಲಿವೆ.ವೀರಪುರುಷರು, ಪ್ರಾಣಿ-ಪಕ್ಷಿಗಳು, ಸಾಂಸ್ಕೃತಿಕ ನಾಯಕರು, ದೈವ-ದೇವರು, ಸ್ವಾತಂತ್ರö್ಯ ಹೋರಾಟಗಾರರು, ಪುಟಾಣಿಗಳ ನೆಚ್ಚಿನ ಕಾರ್ಟೂನ್ ಪಾತ್ರಗಳು, ತಾಯಿಯ ಮಮತೆ, ಬುದ್ಧನ ಧ್ಯಾನ, ನಗಿಸುವ ಮೋಟು, ಪ್ರಾದೇಶಿಕ ಕಲಾಪ್ರಕಾರಗಳ ಕಲಾಕೃತಿಗಳು ಮನ ಸೆಳೆಯುತ್ತವೆ. ಆನೆ, ಜಿರಾಫೆ, ಎತ್ತು, ಮಹಿಷಾಸುರ, ಯಕ್ಷಗಾನ, ಎತ್ತಿನ ಬಂಡಿ, ಚಕ್ರ, ಗಣಪತಿ, ಸಂಗೊಳ್ಳಿ ರಾಯಣ್ಣ, ಡೊಳ್ಳು ಕುಣಿತ, ಅಂಬೇಡ್ಕರ್, ವೀರಗಾಸೆ, ಹನುಮಂತ, ಕೋಟಿ ಚೆನ್ನಯ, ಲಕ್ಷ್ಮಿ ನರಸಿಂಹ, ವೀರಭದ್ರ , ಬಾಹುಬಲಿ, ವಿವೇಕಾನಂದ, ಬುದ್ಧ, ಗಾಂಧೀಜಿ, ಸಂಗೊಳ್ಳಿ ರಾಯಣ್ಣ, ಬಸವೇಶ್ವರ, ಆದಿಯೋಗಿ ಶಿವ, ಮೀರಾಬಾಯಿ, ಕಥಕ್ಕಳಿ ಪ್ರತಿಮೆಗಳನ್ನು ಕಾಣಬಹುದು.ಛಾಯಾಚಿತ್ರ ಮತ್ತು ಲಲಿತಕಲಾ ಮೇಳ:ರಾಷ್ಟಿçÃಯ- ಅಂತರರಾಷ್ಟಿçÃಯ ಖ್ಯಾತಿಯ ಛಾಯಾಗ್ರಾಹಕರ ಸಾವಿರಕ್ಕೂ ಅಧಿಕ ಛಾಯಾಚಿತ್ರಗಳು, ಈ ಬಾರಿಯ ವಿರಾಸತ್‌ಗೆ ಆಹ್ವಾನಿಸಿದ 100ಕ್ಕೂ ಅಧಿಕ ಕಲಾಕೃತಿಗಳು ಲಲಿತಕಲಾ ಮೇಳದ ಸೊಬಗನ್ನು ಹೆಚ್ಚಿಸಲಿವೆ. 100 ಕಲಾಕೃತಿಗಳ ಪೈಕಿ ಅತ್ಯುತ್ತಮ ಕಲಾಕೃತಿಗಳಿಗೆ ವಿಶೇಷ ಬಹುಮಾನಗಳಿವೆ.ಸೀರೆ- ಆಭರಣ:ಮಹಿಳೆಯರಿಗೆ ಕಣ್ಮನ ಸೆಳೆಯುವ ಕೈಮಗ್ಗಗಳ ಸೀರೆಯ ಪ್ರದರ್ಶನವು ಈ ಬಾರಿಯ ವಿಶೇಷ. ಸುಮಾರು 30ಕ್ಕೂ ಹೆಚ್ಚು ಮಳಿಗೆಗಳು ಇರಲಿದ್ದು, ಆಭರಣಗಳ ಮಳಿಗೆಗಳು ಸೌಂದರ್ಯವನ್ನೂ ಹೆಚ್ಚಿಸಲಿವೆ. ಕಾರ್ಯಕ್ರಮಗಳು:ಡಿ.10, ಮಂಗಳವಾರ-ಉದ್ಘಾಟನೆ:ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮAದಿರದಲ್ಲಿ ಡಿ.10ರ ಮಂಗಳವಾರ ಸಂಜೆ 5.30ರಿಂದ 6.30ರ ವರೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆ ಉದ್ಘಾಟಿಸುವರು. ಬೆಂಗಳೂರಿನ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷ ಬಿ.ಎಲ್. ಶಂಕರ್ ಅಧ್ಯಕ್ಷತೆ ವಹಿಸುವರು. ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕ ಉಮಾನಾಥ ಕೋಟ್ಯಾನ್, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೆöÊ ಮುಹಿಲನ್ ಎಂ.ಪಿ, ಸೇರಿದಂತೆ ಗಣ್ಯರು ಉಪಸ್ಥಿತರಿರುವರು.ಭವ್ಯ ಸಾಂಸ್ಕೃತಿಕ ಮೆರವಣಿಗೆ: ಸಂಜೆ 6.35ರಿಂದ ರಾತ್ರಿ 8.30ರ ವರೆಗೆ ಭವ್ಯ ಸಾಂಸ್ಕೃತಿಕ ಮೆರವಣಿಗೆ ನಡೆಯಲಿದೆ. ಜೊತೆಗೆ ರಥಾರತಿ ನಡೆಯಲಿದೆ.ಡಿ.11, ಬುಧವಾರ:ಸಂಜೆ 5.45ರಿಂದ 6.30ರ ವರೆಗೆ ಆಳ್ವಾಸ್ ವಿರಾಸತ್ 2024 ಪ್ರಶಸ್ತಿ ಪ್ರದಾನ ನಡೆಯಲಿದ್ದು, ಈ ಬಾರಿ ಖ್ಯಾತ ಹಿಂದೂಸ್ಥಾನಿ ಶಾಸ್ತಿçÃಯ ಸಂಗೀತಗಾರ ಪದ್ಮಶ್ರೀ ಪಂಡಿತ್ ವೆಂಕಟೇಶ್ ಕುಮಾರ್ ಅವರಿಗೆ ಪ್ರದಾನ ಮಾಡಲಾಗುವುದು. 6.35ರಿಂದ 7.30ರ ವರೆಗೆ ಅವರು ಹಿಂದೂಸ್ಥಾನಿ ಗಾಯನ ನಡೆಸಿಕೊಡವರು.ಬಳಿಕ ರಾತ್ರಿ 7.45ರಿಂದ 9ರ ವರೆಗೆ ಗುಜರಾತ್‌ನ ರಂಗ್ ಮಲಹರ್ ದಿ ಫೋಕ್ ಆರ್ಟ್ಸ್ ತಂಡದಿAದ ವೈವಿಧ್ಯಮಯ ಗುಜರಾತಿ ಜಾನಪದ ನೃತ್ಯ ಪ್ರದರ್ಶನ ಹಾಗೂ 9ರಿಂದ ಆಳ್ವಾಸ್ ಸಾಂಸ್ಕೃತಿಕ ವೈಭವ ನಡೆಯಲಿದೆ.ಡಿ.12, ಗುರುವಾರ:ಸಂಜೆ 5.45ಕ್ಕೆ ದೀಪ ಪ್ರಜ್ವಲನ ಹಾಗೂ 5.55ಕ್ಕೆ ಕಲಾವಿದರಿಗೆ ಸಾಂಪ್ರದಾಯಿಕ ಸ್ವಾಗತ ನೀಡಲಾಗುವುದು. ಸಂಜೆ 6ರಿಂದ 8ರ ವೆರೆಗೆ ಗುಜರಾತ್ ಒಸ್ಮಾನ್ ಮೀರ್ ಮತ್ತು ಬಳಗದಿಂದ ಸಂಗೀತ ಲಹರಿ ಹಾಗೂ ರಾತ್ರಿ 8.15ರಿಂದ ನೃತ್ಯ ವೈವಿಧ್ಯ ನಡೆಯಲಿದೆ. ಉಡುಪಿ ಕೊಡವೂರು ನೃತ್ಯ ನಿಕೇತನ, ಬೆಂಗಳೂರು ಚಿಗುರು ನೃತ್ಯಾಲಯ, ಮಂಗಳೂರು ಸನಾತನ ನಾಟ್ಯಾಲಯ, ಕುಂದಾಪುರ ನೃತ್ಯ ವಸಂತ ನಾಟ್ಯಾಲಯ, ಮಂಗಳೂರು ಗಾನ ನೃತ್ಯ ಅಕಾಡೆಮಿ. ಮಂಗಳೂರು ಅರೆಹೊಳೆ ಪ್ರತಿಷ್ಠಾನದ ಕಲಾವಿದರು ನೃತ್ಯ ವೈವಿಧ್ಯ ನಡೆಸಿಕೊಡುವರು. ರಾತ್ರಿ 9.15ರಿಂದ ಆಳ್ವಾಸ್ ಸಾಂಸ್ಕೃತಿಕ ವೈವಿಧ್ಯ ನಡೆಯಲಿದೆ.ಡಿ.13, ಶುಕ್ರವಾರ:ಸಂಜೆ 5.45ಕ್ಕೆ ದೀಪ ಪ್ರಜ್ವಲನ ಹಾಗೂ 5.55ಕ್ಕೆ ಕಲಾವಿದರಿಗೆ ಸಾಂಪ್ರದಾಯಿಕ ಸ್ವಾಗತ ನೀಡಲಾಗುವುದು. ಸಂಜೆ 6ರಿಂದ 8 ಗಂಟೆಯವರೆಗೆ ನೀಲಾದ್ರಿ ಕುಮಾರ್ ಮತ್ತು ತಂಡದಿAದ ‘ಸೌಂಡ್ ಆಫ್ ಇಂಡಿಯಾ’ ಹಾಗೂ 8.15ರಿಂದ 9ರ ವರೆಗೆ ಕೋಲ್ಕತ್ತಾದ ಆಶೀಮ್ ಬಂಧು ಚಟರ್ಜಿ ಸಂಯೋಜನೆಯಲ್ಲಿ ಭರತನಾಟ್ಯ, ಒಡಿಸ್ಸಿ, ಕಥಕ್ ಸಂಗಮದ ತ್ರಿಪರ್ಣ ಪ್ರಸ್ತುತಗೊಳ್ಳಲಿದೆ. ರಾತ್ರಿ 9ರಿಂದ ಬೆಂಗಳೂರು ಕಾರ್ತೀಸ್ ಪರ್‌ಫಾರ್ಮಿಂಗ್ ಆರ್ಟ್ಸ್ ‘ನೃತ್ಯೋಲ್ಲಾಸ’ ಹಾಗೂ ಬೆಂಗಳೂರು ಶ್ರೀ ರಾಜರಾಜೇಶ್ವರಿ ಕಲಾನಿಕೇತನದಿಂದ ಕೂಚುಪುಡಿ ನೃತ್ಯ ಹಾಗೂ 9.15ರಿಂದ ಆಳ್ವಾಸ್ ಸಾಂಸ್ಕೃತಿಕ ವೈಭವ ಪ್ರದರ್ಶನಗೊಳ್ಳಲಿದೆ.ಡಿ.14, ಶನಿವಾರ:ಸಂಜೆ 5.45ಕ್ಕೆ ದೀಪ ಪ್ರಜ್ವಲನ ಹಾಗೂ 5.55ಕ್ಕೆ ಕಲಾವಿದರಿಗೆ ಸಾಂಪ್ರದಾಯಿಕ ಸ್ವಾಗತ ನೀಡಲಾಗುವುದು. ಸಂಜೆ 6ರಿಂದ 9ರ ವರೆಗೆ ಚೆನ್ನೆöÊ ಸ್ಟೆಕೇಟೋದ ಖ್ಯಾತ 25 ಕಲಾವಿದರಿಂದ ಭರ್ಜರಿ ‘ಸಂಗೀತ ರಸದೌತಣ’ ಹಾಗೂ ರಾತ್ರಿ 9ಕ್ಕೆ ಸಾಂಸ್ಕೃತಿಕ ರಥ ಸ್ವಸ್ಥಾನ ಗಮನ ನಡೆಯಲಿದೆ.ಡಿ.15, ಭಾನುವಾರ:ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳು ಇರುವುದಿಲ್ಲ. ಆದರೆ, ಕೃಷಿ ಮೇಳ, ಆಹಾರ ಮೇಳ, ಫಲಪುಷ್ಪ ಮೇಳ, ಕರಕುಶಲ ಮತ್ತು ಪ್ರಾಚ್ಯವಸ್ತು ಪ್ರದರ್ಶನ ಮೇಳ, ಚಿತ್ರಕಲಾ ಮೇಳ, ಕಲಾಕೃತಿ ಪ್ರದರ್ಶನ, ಛಾಯಾಚಿತ್ರಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳ ಮಹಾಮೇಳ ದಿನಪೂರ್ತಿ ತೆರೆದಿರುತ್ತದೆ.‘ಆಳ್ವಾಸ್ ವಿರಾಸತ್‌ಗೆ ಪ್ರವೇಶ ಸಂಪೂರ್ಣ ಉಚಿತವಾಗಿದ್ದು, ಕಾರ್ಯಕ್ರಮಗಳು ಕ್ಲಪ್ತ ಸಮಯಕ್ಕೆ ಆರಂಭಗೊಳ್ಳಲಿವೆ. ಸುಮಾರು 40 ಸಾವಿರಕ್ಕೂ ಹೆಚ್ಚು ಆಸನದ ವ್ಯವಸ್ಥೆ ಮಾಡಲಾಗಿದ್ದು, ಕಾರ್ಯಕ್ರಮ ಆರಂಭಗೊಳ್ಳುವ 15 ನಿಮಿಷ ಮೊದಲೇ ಆಸೀನರಾಗಬೇಕು. ವಾಹನ ಪಾರ್ಕಿಂಗ್‌ಗೆ ವಿಶಾಲ ವ್ಯವಸ್ಥೆ ಇರುತ್ತದೆ. ಕಣ್ಮನ ಸೆಳೆಯುವ ಸೊಬಗನ್ನು ಸವಿಯಬಹುದು’ ಎಂದಿದ್ದಾರೆ.

ಪ್ರಾದೇಶಿಕ ವಾರ್ತೆಗಳು

30ನೇ ವರ್ಷದ ಆಳ್ವಾಸ್ ವಿರಾಸತ್‌ಗೆ ಅದ್ಧೂರಿಯ ಚಾಲನೆ, ಮೇಳೈಸಿದ ವೈಭವ. ವಿಶ್ವವನ್ನೇ ಹೃದಯದಲ್ಲಿ ತುಂಬುವ ‘ವಿರಾಸತ್’: ಹೆಗ್ಗಡೆ

ವಿದ್ಯಾಗಿರಿ (ಮೂಡುಬಿದಿರೆ):ವಿಶ್ವವನ್ನೇ ಹೃದಯದಲ್ಲಿ ತುಂಬುವ ಹಬ್ಬವೇ ‘ವಿರಾಸತ್’ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮನದುಂಬಿ ಬಣ್ಣಿಸಿದರು.ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಆವರಣದಲ್ಲಿ ಡಿ.11 ರಿಂದ ಡಿ. 15ರವರೆಗೆ ಆಯೋಜಿಸಿರುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ’30ನೇ ವರ್ಷದ ‘ಅಳ್ವಾಸ್ ವಿರಾಸತ್” ಅನ್ನು ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮAದಿರದಲ್ಲಿ ಮಂಗಳವಾರ ಸಂಜೆ ಉದ್ಘಾಟಿಸಿ ಅವರು ಮಾತನಾಡಿದರು.ಮುಸ್ಸಂಜೆಯಲ್ಲಿ ಪ್ರಕೃತಿ ರಮಣೀಯ ವಿಶಾಲ ಸಭಾಂಗಣದಲ್ಲಿ ತುಂಬಿದ ಪ್ರೇಕ್ಷಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಇದು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಕಾರ್ಯಕ್ರಮ. ಸಾಹಿತ್ಯ ಮತ್ತು ಸಂಸ್ಕೃತಿ ಜೊತೆಯಾಗಿ ಮೇಳೈಸಿದ ಕಾರ್ಯಕ್ರಮ. ನಮ್ಮ ಸಾಂಸ್ಕೃತಿಕ ಸಂಪತ್ತು ಹೆಚ್ಚಾದಾಗ ಮನಸ್ಸು ಅರಳುತ್ತದೆ ಎಲ್ಲರಿಗೂ ಸಂತೋಷ ನೀಡುವ ವ್ಯಕ್ತಿತ್ವವೇ ಆಳ್ವ ಎಂದು ಬಣ್ಣಿಸಿದರು. ಒಳ್ಳೆಯದನ್ನು ಒಪ್ಪಿಕೊಂಡು ಅಪ್ಪಿಕೊಳ್ಳಿ. ಆ ಹಾದಿಯಲ್ಲಿ ಸಮಾಜ, ದೇಶ ಬೆಳೆಯಬೇಕು. ನಾವೂ ಪ್ರಕೃತಿಯನ್ನು, ಹೃದಯವನ್ನು ಅರಳಿಸಬೇಕು ಎಂದರು.ಆಳ್ವಾಸ್ ಕೃಷಿ ಮೇಳ ಕಂಡು ನೀವೂ ಸಣ್ಣ ಕೈತೋಟ ಮಾಡಿ. ಮಣ್ಣು, ಪರಿಸರ ಪ್ರೀತಿಸಿ ಎಂದು ಸಲಹೆ ನೀಡಿದರು.ಪಂಚೇAದ್ರೀಯಗಳಿಗೆ ಉಣಬಡಿಸುವ .ಡಾ.ಮೋಹನ ಆಳ್ವ ಅವರದ್ದು, ಹೃದಯ ವೈಶಾಲ್ಯದ ವ್ಯಕ್ತಿತ್ವ. ಇಂತಹ ವ್ಯಕ್ತಿತ್ವ ನಾಡಿನಾದ್ಯಂತ ಹೆಚ್ಚಲಿ ಎಂದರು.ಸಮಾರAಭದ ಅಧ್ಯಕ್ಷತೆ ವಹಿಸಿದ ಎಂ.ಜಿ.ಆರ್. ಗ್ರೂಪ್ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ಮಾತನಾಡಿ, ಆಳ್ವರ ದೃಷ್ಟಿಯೇ ಕ್ರಿಯೆಯಾಗಿ ಇಲ್ಲಿ ರೂಪುಗೊಂಡಿದೆ ಎಂದರು.ನಾನು ಅವರನ್ನು ನಾಲ್ಕು ದಶಕಗಳಿಂದ ಕಂಡಿದ್ದೇನೆ. ಅವರ ಪ್ರಯೋಗ ಇಂದು ನಾಡಿಗೆ ಕೊಡುಗೆ ನೀಡಿದೆ ಎಂದರು. ಆಳ್ವಾಸ್ ಆವರಣವು ಚಂದಮಾಮದ ಅಮರಾವತಿ ಹಾಗೂ ಇಂದ್ರ ನಗರಿಯ ನೆನಪಿಸುತ್ತದೆ. ಹೊಸ ಲೋಕವೇ ಇಲ್ಲಿ ಸೃಷ್ಟಿಯಾಗಿದೆ ಎಂದರು.ಪ್ರಾಸ್ತಾವಿಕವಾಗಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ, ಅಂದು ಊರಿಗೆ ಸೀಮಿತವಾಗಿದ್ದ ವಿರಾಸತ್ ಇಂದು ರಾಷ್ಟ್ರೀಯ ಹಬ್ಬವಾಗಿದೆ. ಇಂದು ದೇಶದಲ್ಲಿ ವಿದ್ಯಾರ್ಥಿಗಳ ಸಂಖ್ಯೆ 52 ಕೋಟಿ ಇದೆ. ಯುವ ಸಂಪತ್ತು ಬಗ್ಗೆ ನಾವು ಯೋಚಿಸಬೇಕು ಎಂದರು.ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕಾಗಿ ಕ್ರೀಡೆ, ಸಾಂಸ್ಕೃತಿಕ ತರಬೇತಿ ನೀಡುತ್ತಿದ್ದೇವೆ. ಮಂಗಳೂರು ವಿಶ್ವವಿದ್ಯಾನಿಲಯದ 49 ಅಥ್ಲೆಟಿಕ್ಸ್ ದಾಖಲೆ ಆಳ್ವಾಸ್ ಹೆಸರಿನಲ್ಲಿದೆ ಎಂದು ಸಂತಸ ಹಂಚಿಕೊAಡರು.ನಮ್ಮ ಸಂಸ್ಥೆಯಲ್ಲಿ ಪ್ರತಿವರ್ಷ 400 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಾಂಸ್ಕೃತಿಕ ತರಬೇತಿ ಪಡೆದು, ರಾಷ್ಟ್ರೀಯ ಮಟ್ಟದಲ್ಲಿ ಕಾರ್ಯಕ್ರಮ ನೀಡುತ್ತಿದ್ದಾರೆ ಎಂದರು.ವಿರಾಸತ್ ಅನ್ನು ಸಮಗ್ರವಾಗಿ ರೂಪಿಸಲಾಗಿದ್ದು, ಪಂಚೇAದ್ರಿಯಗಳಿಗೆ ಜ್ಞಾನ ನೀಡುವ ಕಾರ್ಯಕ್ರಮವಾಗಿದೆ. ಯುವಕರು, ಹಿರಿಯರು, ವೃದ್ಧರೆಲ್ಲರಿಗೂ ವಿರಾಸತ್ ಮುದ ನೀಡಲಿದೆ ಎಂದರು. ಆರAಭದಲ್ಲಿ ಗಿರಿಧರ್ ಅವರ ನಿರ್ದೇಶನ ಮತ್ತು ಸಂಯೋಜನೆಯಲ್ಲಿ ಮೂಡಿದ ‘ಬೆಳಕಾಗಿ ಬಾ’ ಹಾಗೂ ಡಾ.ಎನ್.ಕೆ. ಪದ್ಮನಾಭ ವಿರಚಿತ ‘ಪರಹಿತ ಬಯಸೋ’ ಪ್ರಾರ್ಥನೆಯನ್ನು ಹಾಡಲಾಯಿತು.ಆಳ್ವಾಸ್ ವಿರಾಸತ್ 30ನೇ ವರ್ಷದ ಹಿನ್ನೆಲೆಯಲ್ಲಿ ಅಂಚೆ ಇಲಾಖೆಯು ಹೊರತಂದಿರುವ ‘ಆಳ್ವಾಸ್ ಸಾಂಸ್ಕೃತಿಕ ವೈಭವ’ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು.ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ, ದಂಪತಿ, ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್, ಮಾಜಿ ಸಚಿವರಾದ ಕೆ. ಅಭಯಚಂದ್ರ ಜೈನ್, ಭಾರತ್ ಸ್ಕೌಟ್ಸ್ ಗೈಡ್ಸ್ ಕರ್ನಾಟಕ ರಾಜ್ಯ ಪ್ರಧಾನ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ, ಮುಂಬಯಿ ಹೇರಂಭಾ ಇಂಡಸ್ಟ್ರೀಸ್ ಆಡಳಿತ ನಿರ್ದೇಶಕ ಕನ್ಯಾನ ಸದಾಶಿವ ಶೆಟ್ಟಿ, ಅದಾನಿ ಗ್ರೂಪ್ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ, ಕಟೀಲು ದುರ್ಗಾಪರಮೇಶ್ವರಿ ದೇವಾಲಯದ ಆನುವಂಶಿಕ ಮೊಕ್ತೇಸರ ಲಕ್ಷ್ಮೀ ನಾರಾಯಣ ಅಸ್ರಣ್ಣ, ಶಾರದಾ ಶಿಕ್ಷಣ ಸಮೂಹ ಸಂಸ್ಥೆ ಅಧ್ಯಕ್ಷ ಎಂ.ಬಿ.ಪುರಾಣಿಕ, ಬರೋಡ ಶಶಿ ಕೇಟರಿಂಗ್ ಸರ್ವೀಸಸ್ ಆಡಳಿತ ನಿರ್ದೇಶಕ ಶಶಿಧರ ಶೆಟ್ಟಿ, ಬೆಂಗಳೂರು ಕೆ.ಎಲ್.ಎನ್. ಎಂಜಿನಿಯರಿAಗ್ ಆಡಳಿತ ನಿರ್ದೇಶಕ ಪ್ರಸನ್ನ ಕುಮಾರ್ ಶೆಟ್ಟಿ,, ಬಳ್ಳಾರಿ ಕುಮಾರಸ್ವಾಮಿ ಮಿನರಲ್ ಎಕ್ಸ್ ಪೋರ್ಟ್ ನ ಎಂ.ರವೀAದ್ರನಾಥ ಆಳ್ವ, ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕಲ್ಕೂರ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, , ಪುತ್ತಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕು. ರಾಧಾ, ಮೂಡುಬಿದಿರೆ ಧನಲಕ್ಷ್ಮೀ ಕ್ಯಾಶ್ಯೂಸ್ ಆಡಳಿತ ನಿರ್ದೇಶಕ ಕೆ. ಶ್ರೀಪತಿ ಭಟ್, ಕೆನರಾ ಬ್ಯಾಂಕಿನ ಸುಧಾಕರ್ ಕೊಠಾರಿ, ಪ್ರಮುಖವಾದ ಜಯಶ್ರೀ ಅಮರನಾಥ ಶೆಟ್ಟಿ, ಹರಿಕೃಷ್ಣ ಪುನರೂರು, ಭುವನಾಭಿರಾಮ ಉಡುಪ, ತಿಮ್ಮಯ್ಯ ಶೆಟ್ಟಿ, ರಾಮಯ್ಯ ಶೆಟ್ಟಿ, ಪತ್ರಕರ್ತ ಶ್ರೀನಿವಾಸ ಇಂದಾಜೆ, ಮೂಡುಬಿದಿರೆ ಚೌಟರ ಅರಮನೆಯ ಕುಲದೀಪ ಎಂ., ಮಂಗಳೂರು ಭಾರತ್ ಇನ್‌ಫ್ರಾಟೆಕ್‌ನ ಮುಸ್ತಾಫ ಎಸ್.ಎಂ, ಮೂಡುಬಿದಿರೆ ಬಿಮಲ್ ಕನ್‌ಸ್ಟ್ರಕ್ಷನ್ ನಪ್ರವೀಣ್ ಕುಮಾರ್ ಉಪಸ್ಥಿತರಿದ್ದರು..ಆಳ್ವಾಸ್ ಪದವಿಪೂರ್ವ ಕಾಲೇಜಿನ ಕನ್ನಡ ಡೀನ್ ಕೆ. ವೇಣುಗೋಪಾಲ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.ಮೇಳಗಳು:ಅನ್ವೇಷಣಾತ್ಮಕ ಶತಾಯುಷಿ ಕೃಷಿಕ ಮಿಜಾರುಗುತ್ತು ಆನಂದ ಆಳ್ವ ಸ್ಮರಣಾರ್ಥ ಕೃಷಿಮೇಳ, ಆಹಾರ ಮೇಳ, ಫಲಪುಷ್ಪ ಮೇಳ, ಕರಕುಶಲ ಮತ್ತು ಪ್ರಾಚ್ಯವಸ್ತು ಪ್ರದರ್ಶನ ಮೇಳ, ಚಿತ್ರಕಲಾ ಮೇಳ, ಕಲಾಕೃತಿ ಪ್ರದರ್ಶನ, ಛಾಯಾಚಿತ್ರಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳ ಮಹಾಮೇಳಗಳೂ ಮಂಗಳವಾರ ಬೆಳಿಗ್ಗೆ ಉದ್ಘಾಟನೆಗೊಂಡಿದ್ದು, ಡಿ.15ರ ವರೆಗೆ ನಡೆಯಲಿವೆ.

ಪ್ರಾದೇಶಿಕ ವಾರ್ತೆಗಳು

ಆಳ್ವಾಸ್ ವಿರಾಸತ್: ಕೃಷಿ, ಆಹಾರ, ಫಲಪುಷ್ಪ, ಕರಕುಶಲ, ಪ್ರಾಚ್ಯವಸ್ತು, ಚಿತ್ರಕಲಾ, ಮಹಾಮೇಳಗಳಿಗೆ ಚಾಲನೆ. ‘ಯುವಜನತೆ ಕೃಷಿಯೆಡೆಗೆ ಸೆಳೆಯಲು ಮೇಳ ಪ್ರೇರಣೆ’

ವಿದ್ಯಾಗಿರಿ (ಮೂಡುಬಿದಿರೆ): ‘ಕರಾವಳಿಯ (ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ) ಯುವಜನತೆ ಕೃಷಿ ವಿಮುಖರಾಗುತ್ತಿದ್ದು, ಮಣ್ಣಿನೆಡೆಗೆ ಅವರನ್ನು ಸೆಳೆಯುವ ಇಂತಹ ಕಾರ್ಯಕ್ರಮಗಳು ಆದರ್ಶ ಮತ್ತು ಅನುಕರಣೀಯ’ ಎಂದು ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಕುಲಪತಿ ಡಾ.ಆರ್.ಸಿ. ಜಗದೀಶ್ ಹೇಳಿದರು.ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಡಿ.11 ರಿಂದ ಡಿ. 15ರವರೆಗೆ ಆಯೋಜಿಸಿರುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ’30ನೇ ವರ್ಷದ ಅಳ್ವಾಸ್ ವಿರಾಸತ್’ ಅಂಗವಾಗಿ ಹಮ್ಮಿಕೊಂಡ ಅನ್ವೇಷಣಾತ್ಮಕ ಶತಾಯುಷಿ ಕೃಷಿಕ ಮಿಜಾರುಗುತ್ತು ಆನಂದ ಆಳ್ವ ಸ್ಮರಣಾರ್ಥ ಕೃಷಿಮೇಳ, ಆಹಾರ ಮೇಳ, ಫಲಪುಷ್ಪ ಮೇಳ, ಕರಕುಶಲ ಮತ್ತು ಪ್ರಾಚ್ಯವಸ್ತು ಪ್ರದರ್ಶನ ಮೇಳ, ಚಿತ್ರಕಲಾ ಮೇಳ, ಕಲಾಕೃತಿ ಪ್ರದರ್ಶನ, ಛಾಯಾಚಿತ್ರಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳ ಮಹಾಮೇಳಗಳ ಉದ್ಘಾಟನೆಯಲ್ಲಿ ಅವರು ಮಾತನಾಡಿದರು.ಕೃಷಿ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ವಿಶ್ವವಿದ್ಯಾಲಯ ವ್ಯಾಪ್ತಿಗೆ ಬರುತ್ತಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರತಿ ವರ್ಷ 500 ಎಕರೆ ಹಡಿಲು ಭೂಮಿಯನ್ನು ಭತ್ತದ ಗದ್ದೆಯಾಗಿ ಪರಿವರ್ತಿಸಲಾಗುತ್ತಿದೆ. ಗೇರು ಕೃಷಿಗೆ ಸಂಬAಧಿಸಿದAತೆ ವಿ.ವಿಯು ಸಂಪೂರ್ಣ ತಂತ್ರಜ್ಞಾನ ಹೊಂದಿದ್ದು, ಪ್ರತಿ ವರ್ಷ 3 ಲಕ್ಷ ಗೇರು ಸಸಿ ನೀಡಿ, ಬೆಳೆಗೆ ಪ್ರೊತ್ಸಾಹಿಸಲಾಗುತ್ತಿದೆ. ‘ಸಹ್ಯಾದ್ರಿ ಕೆಂಪು ಮುಕ್ತಿ’ ಹಾಗೂ ‘ಪಂಚಮಿ ಭತ್ತದ ತಳಿ’ ಇಲ್ಲಿನ ಹವಾಗುಣಕ್ಕೆ ಸೂಕ್ತವಾಗಿದ್ದು, ಬೆಳೆಯಿರಿ. ಒಳನಾಡಿನ ಮೀನುಗಾರಿಕೆಗೂ ಒತ್ತು ನೀಡಿ ಎಂದರು.ಭಾರತವು ಕೃಷಿ ಪ್ರಧಾನ ರಾಷ್ಟçವಾಗಿದ್ದು, ಶೇ 65ರಷ್ಟು ಜನರಿಗೆ ಉದ್ಯೋಗ, ದೇಶದ 140 ಕೋಟಿಗೂ ಅಧಿಕ ಜನಸಂಖ್ಯೆಗೆ ಆಹಾರ ನೀಡಿದೆ. ದೇಶದ ಶಾಂತಿ- ಸಹಬಾಳ್ವೆಗೆ ಕೃಷಿ ಕೊಡುಗೆ ಅಪಾರ. ಆಹಾರ ತಿನ್ನುವ ಮೊದಲು ರೈತರ ನೆನಪಿಸಿಕೊಳ್ಳಿ ಎಂದರು.ದೇಶದಲ್ಲಿ ವಾರ್ಷಿಕ ಸುಮಾರು 250 ಕೋಟಿ ಮೆಟ್ರಿಕ್ ಟನ್‌ಗೂ ಅಧಿಕ ಆಹಾರದ ಬೇಡಿಕೆ ಇದೆ. ಈ ಪೈಕಿ ಸುಮಾರು 33 ಕೋಟಿ ಮೆಟ್ರಿಕ್ ಟನ್ ಆಹಾರ-ಧಾನ್ಯ, 35 ಕೋಟಿ ಮೆಟ್ರಿಕ್ ಟನ್, ತರಕಾರಿ 50 ಕೋಟಿ ಮೆಟ್ರಿಕ್ ಟನ್ ಹಾಲು ಹಾಗೂ ಉತ್ಪನ್ನಗಳು, 60 ಮೆಟ್ರಿಕ್ ಟನ್‌ಗೂ ಅಧಿಕ ಮಾಂಸ ಮತ್ತಿತರ ಆಹಾರ ಇದೆ ಎಂದರು.ವಿದ್ಯಾರ್ಥಿಗಳಲ್ಲಿ ಬುದ್ಧಿಮತ್ತೆ ಹೆಚ್ಚಲು ಪೌಷ್ಟಿಕ ಆಹಾರ ಸೇವನೆಯೂ ಅವಶ್ಯ. ಎಲ್ಲ ಮಕ್ಕಳು ಒಂದೇ ರೀತಿ ಇರುವುದಿಲ್ಲ. ಪ್ರತಿಯೊಬ್ಬರಿಗೂ ಅನನ್ಯ ಸಾಮರ್ಥ್ಯ ಇದ್ದು, ವೃದ್ಧಿಗೆ ಗಮನ ಹರಿಸಿ. ನಮ್ಮದು ಯುವ ದೇಶವಾಗಿದ್ದು, ಅವರ ಅವರ ಅಗತ್ಯ ಮೂಲಸೌಲಭ್ಯಗಳನ್ನು ಕಲಿಸಬೇಕಾಗಿದೆ ಎಂದರು.ಸ್ಕೌಟ್ಸ್ ಮತ್ತು ಗೈಡ್ಸ್ -ರೋವರ್ಸ್ ರೇಂಜರ್ಸ್ ಸಾಂಸ್ಕೃತಿಕ ಶಿಬಿರ, ಕರಕುಶಲ ಮೇಳ, ಆಹಾರ ಮೇಳವನ್ನು ಉದ್ಘಾಟಿಸಿದ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಮುಖ್ಯ ಅಯುಕ್ತ ಪಿ.ಜಿ.ಆರ್. ಸಿಂಧ್ಯಾ ಮಾತನಾಡಿ, ಕನ್ನಡ, ಕ್ರೀಡೆ, ಸಂಸ್ಕೃತಿ, ಶಿಸ್ತು ಮತ್ತಿತರ ವಿಚಾರಗಳಿಗೆ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಸಿಗುವ ಪ್ರೇರಣೆ ಬೇರೆ ಕಡೆ ಇಲ್ಲ ಎಂದು ಶ್ಲಾಘಿಸಿದರು.ಸಮಯ ಪ್ರಜ್ಞೆ , ಸ್ವಚ್ಛತೆ ಹಾಗೂ ಶಿಸ್ತುಗೆ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಸೇವೆಗೆ ರೋವರ್ಸ್ -ರೇಂಜರ್ಸ್ ಹೆಸರುವಾಸಿಯಾಗಿದೆ. ಕೋವಿಡ್ ಸಂದರ್ಭದಲ್ಲಿ ನೀಡಿದ ಸೇವೆ ಅಪರಿಮಿತ. ಆಳ್ವಾಸ್ ನಲ್ಲಿ ನಡೆದ ಜಾಂಬೂರಿ ದೇಶಕ್ಕೆ ಜಗದ್ವಿಖ್ಯಾತಿ ನೀಡಿತು ಎಂದು ಬಣ್ಣಿಸಿದರು.ಇಂದು ದೇಶದಲ್ಲಿ ಪ್ರತಿಷ್ಠೆಗಾಗಿ ಶೇ 40 ರಷ್ಟು ಆಹಾರ ಪೋಲಾಗುತ್ತಿದ್ದು, ಇದು ದೇಶದ್ರೋಹದ ಕೆಲಸ ಎಂದು ಅವರು ಬೇಸರ ವ್ಯಕ್ತ ಪಡಿಸಿದರು.ಮೂಡುಬಿದಿರೆ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಾತನಾಡಿ, ಸನ್ನಡತೆ, ಶಿಸ್ತು, ಒಳ್ಳೆಯ ಮನೋಭಾವದಿಂದ ಮನಸ್ಸಿನ ಶ್ರೀಮಂತಿಕೆ ಬರುತ್ತದೆ. ಅಂತಹ ಶ್ರೀಮಂತ ವ್ಯಕ್ತಿ ಡಾ.ಎಂ.ಮೋಹನ ಆಳ್ವ ಎಂದು ಬಣ್ಣಿಸಿದರು.ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಮಾತನಾಡಿ, ಇಲ್ಲಿನ ಎಲ್ಲ ಕಾರ್ಯಗಳು ಕಲಿಕೆಯ ಭಾಗ. ಬದುಕಿನ ಆಂದೋಲನದ ಅಂಗ. ಇವು ನಿಮ್ಮ ಜೀವನದ ಅವಿಭಾಜ್ಯ ಅಂಗ. ಎಲ್ಲ ಮಕ್ಕಳ ಮನೋಭಾವ ಬದಲಾಗಲಿ. ಪ್ರತಿ ಕ್ಷಣವೂ ಆದರ್ಶನೀಯವಾಗಲಿ ಎಂದು ಆಶಿಸಿದರು.ಮೂಡುಬಿದಿರೆಯ ಎಂ.ಸಿ.ಎಸ್. ಬ್ಯಾಂಕ್‌ನ ಅಧ್ಯಕ್ಷ ಎಂ. ಬಾಹುಬಲಿ ಪ್ರಸಾದ್ , ಮೂಡುಬಿದಿರೆ ಎಂ.ಸಿ.ಎಸ್. ಬ್ಯಾಂಕ್ ಕಾರ್ಯ ನಿರ್ವಹಣಾಧಿಕಾರಿ ಚಂದ್ರಶೇಖರ್ ಎಂ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಿ. ಶ್ರೀಧರ್, ಬ್ರಹ್ಮಾವರದ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರದ ಸಹ ಸಂಶೋಧನಾ ನಿರ್ದೇಶಕ ಹಾಗೂ ಹಿರಿಯ ವಿಜ್ಞಾನಿ ಡಾ. ಧನಂಜಯ್ ಬಿ, ಕೃಷಿ ಇಲಾಖೆಯ ಉಪ ನಿರ್ದೇಶಕ ಶಶಿಧರ್ , ಉಡುಪಿಯ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ದುಗ್ಗೇಗೌಡ, ಪುತ್ತೂರಿನ ನವನೀತ್ ನರ್ಸರಿಯ ವೇಣುಗೋಪಾಲ ಎಸ್. ಜೆ, ಮಂಗಳೂರಿನ ತೋಟಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಪೊನ್ನಪ್ಪ, ಧನಲಕ್ಷ್ಮಿ ಕ್ಯಾಶೂಸ್ ನ ಆಡಳಿತ ನಿರ್ದೇಶಕ ಕೆ ಶ್ರೀಪತಿ ಭಟ್, ಸಿರಿ ಸಂಸ್ಥೆಯ ಜನಾರ್ದನ, ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕ ಮಂಜುನಾಥ್, ಸ್ಕೌಟ್ಸ್ ಮತ್ತು ಗೈಡ್ಸ್ ನ ನಿರ್ದೇಶಕ ಪ್ರಭಾಕರ್ ಭಟ್ ಇದ್ದರು.ಮಾಜಿ ಮುಖ್ಯ ಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಲಾಯಿತು. ಆಳ್ವಾಸ್ ಸಾಂಸ್ಕೃತಿಕ ತಂಡದ ಸದಸ್ಯರು ಪ್ರಾರ್ಥನೆ ಹಾಗೂ ಗಾಯಕ ಯಶವಂತ್ ಅವರು ರೈತಗೀತೆಯನ್ನು ಹಾಡಿದರು. ಆಳ್ವಾಸ್ ಪದವಿಪೂರ್ವ ಕಾಲೇಜಿನ ಕನ್ನಡ ಡೀನ್ ಕೆ. ವೇಣುಗೋಪಾಲ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ಕರಾವಳಿ ತೀರಗಳ ವಾತಾವರಣ ಬದಲಾವಣೆ ಅಧ್ಯಯನ: ವಿದ್ಯಾರ್ಥಿ ವಿಜ್ಞಾನಿ ಕಾರ್ಯಕ್ರಮ” ಮಳೆ ಹಾಗೂ ಗಾಳಿವೇಗದ ಅಳತೆಯ ಮಾಪಕ ಎಲ್ಲರಿಗೂ ಪೂರಕ”

ಉಳ್ಳಾಲ (ಮಂಗಳೂರು): ಮನುಷ್ಯನ ಅನೇಕ ದುರಾಸೆಯ ಫಲವೇ ಹವಾಮಾನ ವೈಪರೀತ್ಯಕ್ಕೆ ಮೂಲ ಕಾರಣ ಎಂದು ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿನ ಮುಂದುವರಿದ ಅಧ್ಯಯನಗಳ ರಾಷ್ಟ್ರೀಯ ಸಂಸ್ಥೆ (ಎನ್‌ಐಎಎಸ್)ಯ ಇಸ್ರೋ ಮುಖ್ಯ ಪ್ರಾಧ್ಯಾಪಕ ಡಾ. ಪಿ. ಜಿ. ದಿವಾಕರ್ ಅಭಿಪ್ರಾಯಪಟ್ಟರು.ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮತ್ತು ಎನ್‌ಐಎಎಸ್ ಜಂಟಿ ಆಶ್ರಯದಲ್ಲಿ ಉಳ್ಳಾಲದ ಬಿಎಂ ಶಾಲೆಯಲ್ಲಿ ಹಮ್ಮಿಕೊಂಡ ‘ವಿದ್ಯಾರ್ಥಿ- ವಿಜ್ಞಾನಿ’ ಕಾರ್ಯಕ್ರಮದಲ್ಲಿ ಬುಧವಾರ ಅವರು ಮಾತನಾಡಿದರು.ಇತ್ತೀಚಿನ ದಿನಗಳಲ್ಲಿ ಹವಾಮಾನ ಬದಲಾವಣೆಯು ತೀವ್ರ ಸಮಸ್ಯೆಯಾಗಿ ಬೆಳೆಯುತ್ತಿದೆ. ಅದರಲ್ಲೂ ,ಕರಾವಳಿ ಭಾಗದ ಜನರಿಗೆ ವಾತಾವರಣದಲ್ಲಾಗುವ ತೀವ್ರ ಮಾರ್ಪಾಡುಗಳು ಬಹುಬೇಗನೇ ತಿಳಿಯುವುದರಿಂದ, ಈ ಯೋಜನೆಯು ಇಲ್ಲಿನ ಜನರಿಗೆ ಅತಿಹೆಚ್ಚು ಪೂರಕವಾಗಲಿದೆ ಎಂದರು.ವಿದ್ಯಾರ್ಥಿಗಳಿಗೆ ವಿಜ್ಞಾನದ ಕಡೆಗೆ ಆಸಕ್ತಿ ಹೆಚ್ಚಿಸಿ , ಪರಿಣಾಮಕಾರಿ ವಿಜ್ಞಾನಿಗಳನ್ನಾಗಿ ಮಾಡಲು ಎನ್‌ಐಎಎಸ್ ಆಯೋಜಿಸಿರುವ ‘ಕರಾವಳಿ ಭಾಗದ ಹವಾಮಾನ ಬದಲಾವಣೆ’ಯ ಅಧ್ಯಯನ ಯೋಜನೆಯು ಸಹಕರಿಯಾಗಲಿದೆ ಎಂದು ಹೇಳಿದರು.ವೈಜ್ಞಾನಿಕ ಶಿಕ್ಷಣದ ಮೂಲಕ ಯುವ ಜನಾಂಗದಲ್ಲಿ ವಿಜ್ಞಾನ ಮತ್ತು ಅನ್ವೇಷಣೆಯತ್ತ ಒಲವು ಮೂಡಿಸುವುದು ಬಹಳ ಅವಶ್ಯಕ ಎಂದರು. ಇಸ್ರೋ ಜಿಯೋಎಐಯನ್ನು ಬಿಡುಗಡೆಗೊಳಿಸಲಿದ್ದು , ಇದರಲ್ಲಿ ಮುಂದಿನ 10 ವರ್ಷದದಲ್ಲಿ ವಿಶ್ವದ ವಾತಾವರಣ ಹೇಗಿರುತ್ತವೆ ಎಂಬ ದತ್ತಾಂಶವು ಲಭ್ಯವಾಗಲಿದೆ ಎಂದು ತಿಳಿಸಿದರು.ಎನ್‌ಐಎಎಸ್ ಸಹ ಪ್ರಾಧ್ಯಾಪಕ ವಿ. ವಿ. ಬಿನೋಯ್ ಮಾತನಾಡಿ ,ಪ್ರಸ್ತುತ ಸ್ಥಿತಿಗತಿಯಲ್ಲಿ ವಿಜ್ಞಾನ ಎಂಬುದು ಪ್ರತಿ ಮೂಲೆ ಮೂಲೆಗೂ ತಲುಪುವುದು ಬಹಳ ಅನಿವಾರ್ಯ ಎಂದು ತಿಳಿಸಿದರು.ಇಂದಿನ ಶಾಲಾ ಕಾಲೇಜು ವಿದ್ಯಾರ್ಥಿಗಳು ವೈಜ್ಞಾನಿಕ ಅಧ್ಯಯನದಲ್ಲಿ ಹೆಚ್ಚು ತೊಡಗಿ,ಕ್ರಿಯಾತ್ಮಕವಾಗಿ ಪ್ರಶ್ನಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದರು.ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ , ವಿಜ್ಞಾನಿಗಳು ವಿದ್ಯಾರ್ಥಿಗಳ ನಿಜವಾದ ಪ್ರೇರಣಾ ಶಕ್ತಿಯಾಗಿರುತ್ತಾರೆ. ಎಲ್ಲಾ ಶಾಲಾ ವಿದ್ಯಾರ್ಥಿಗಳು ತಮ್ಮೊಳಗಿರುವ ಪ್ರತಿಭಾ ಶಕ್ತಿಯನ್ನು ಇನ್ನಷ್ಟೂ ಉತ್ತಮ ವೇದಿಕೆಯ ರೂಪದಲ್ಲಿ ಅನಾವರಣಗೊಳಿಸಲು ಮುಂಬರಬೇಕು ಎಂದು ಸಲಹೆ ನೀಡಿದರು.ಇಂದು, ಇಸ್ರೋ ಮತ್ತು ಎನ್‌ಐಎಎಸ್ ಸಂಸ್ಥೆಗಳು ದೇಶದ ಸುಸ್ಥಿರ ಭವಿಷ್ಯವನ್ನು ರೂಪಿಸುವಲ್ಲಿ ಅಭೂತಪೂರ್ವ ಕಾರ್ಯವನ್ನು ಮಾಡುತ್ತಿದೆ. ವಿದ್ಯಾರ್ಥಿಗಳು ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ಹೆಚ್ಚಾಗಿ ತಿಳಿದುಕೊಂಡು ಇಂತಹ ಅನೇಕ ಪ್ರಯೋಜನಕಾರಿ ಕಾರ್ಯಾಗಾರಗಳಲ್ಲಿ ಭಾಗವಹಿಸುವುದರಿಂದ ಉತ್ತಮ ಭವಿಷ್ಯವಿದೆ ಎಂದು ಹೇಳಿದರು.ವಿದ್ಯಾರ್ಥಿ ವಿಜ್ಞಾನಿ ಪರಿಕಲ್ಪನೆ:ಕೇರಳ ಮತ್ತು ಕರ್ನಾಟಕದ ಕರಾವಳಿ ತೀರಗಳಲ್ಲಿ ಹವಾಮಾನ ಬದಲಾವಣೆ ಕುರಿತು ಅಧ್ಯಯನ ಮಾಡಲು ವಿದ್ಯಾರ್ಥಿಗಳನ್ನೇ ವಿಜ್ಞಾನಿಗಳಾಗಿ ಮಾಡುವ ಯೋಜನೆ ಇದಾಗಿದೆ.ವಿವಿಧ ಶಾಲಾ ವಿದ್ಯಾರ್ಥಿಗಳನ್ನು ತರಬೇತಿಗೊಳಿಸಲು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 40 ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಾಗಾರವನ್ನು ಎನ್‌ಐಎಎಸ್ ಹಮ್ಮಿಕೊಂಡಿತ್ತು. ಈ ಯೋಜನೆಯಲ್ಲಿ ಆಯ್ಕೆಗೊಂಡ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಎಂಜಿನಿಯರ್, ಪದವಿ ವಿಜ್ಞಾನ ಮತ್ತು ಸಮಾಜಕಾರ್ಯ ವಿದ್ಯಾರ್ಥಿಗಳು ಕೈಜೋಡಿಸಿದ್ದಾರೆ.ಮಣ್ಣು, ನೀರು, ಗಾಳಿ, ವಾತಾವರಣ, ಮಾಲಿನ್ಯ, ಪರಿಸರ, ಉಷ್ಣಾಂಶ, ಮಳೆ, ನೀರಿನ ಶುದ್ಧತೆ, ಗಾಳಿಯ ವೇಗ, ಸಾಂಕ್ರಾಮಿಕ ರೋಗಗಳ ಕುರಿತ ಅಧ್ಯಯನವನ್ನು ಈ ಯೋಜನೆಯು ಒಳಗೊಂಡಿದೆ.ಬಿಎA ಶಾಲೆಗೆ ಆಗಮಿಸಿದ ವಿವಿಧ ಶಾಲಾ ವಿದ್ಯಾರ್ಥಿಗಳಿಗೆ ಆಳ್ವಾಸ್ ನಲ್ಲಿ ತರಬೇತುಗೊಂಡ ವಿದ್ಯಾರ್ಥಿಗಳು ಮಾರ್ಗದರ್ಶನ ಹಾಗೂ ಅಧ್ಯಯನ ನಡೆಸಲು ಬೇಕಾದ ಸಲಕರಣೆಗಳ ನಿರ್ಮಾಣದಲ್ಲಿ ಸಹಕರಿಸಿದರು. ಗಾಳಿಯ ದಿಕ್ಕು, ಗಾಳಿಯ ವೇಗ, ಮಳೆಯ ಮಾಪಕವನ್ನು ಜನಸಾಮಾನ್ಯರು ಕೂಡ ಸುಲಭವಾಗಿ ಅಳತೆ ಮಾಡಬಹುದು ಎಂಬುದನ್ನು ನಿದರ್ಶಿಸಿ ತೋರಿಸಿದರು.ಬಿಎಂ ಶಾಲೆಯು,ಅಧ್ಯಯನಕ್ಕೆ ಪೂರಕವಾಗುವ ದತ್ತಾಂಶಗಳನ್ನು ಒದಗಿಸುವುದರ ಜೊತೆಗೆ ಮಾಹಿತಿಯನ್ನು ಕರ್ನಾಟಕದ ನೋಡಲ್ ಕೇಂದ್ರವಾದ ಆಳ್ವಾಸ್ ಸಂಸ್ಥೆಗೆ ಒದಗಿಸಲು ಮುಂದಾಗಿದೆ.ಇದೇ ರೀತಿ ಪ್ರತಿ 2ರಿಂದ 3 ತಿಂಗಳಿಗೊಮ್ಮೆ ವಿದ್ಯಾರ್ಥಿಗಳು ಅನ್ವೇಷಿಸಿದ ದತ್ತಾಂಶಗಳ ಪರಿಶೀಲನೆ ನಡೆಯಲಿರುವುದು. ಈ ಯೋಜನೆಯು ವಿದ್ಯಾರ್ಥಿಗಳಲ್ಲಿ ಅನ್ವೇಷಷಣೆಯ ಒಲವು ಮೂಡಿಸಲು ಸಹಕಾರಿಯಾಗಲಿದೆ.ಉಳ್ಳಾಲ ಬಿಎಂ ಪ್ರೌಢ ಶಾಲೆಯ ಪ್ರಾಂಶುಪಾಲೆ ಜಯವಂತಿ ಸೋನ್ಸ್ , ಉಳ್ಳಾಲ ಬಿಎಂ ಪ್ರಾಥಮಿಕ ಶಾಲೆಯ ಪ್ರಾಂಶುಪಾಲೆ ಹೇರೋಸ್ ಹಿಲ್ಡಾ ಇದ್ದರು. ಬೈಂದೂರಿನಿAದ ಹಿಡಿದು ಮಂಗಳೂರಿನ ವಿವಿಧ ಶಾಲಾ ಕಾಲೇಜುಗಳ ಆಯ್ಕೆಗೊಂಡ 6 ರಿಂದ 12 ನೇ ತರಗತಿಯ 112 ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಕಾರ್ಯಕ್ರಮದ ಸಂಯೋಜಕ ಡಾ. ವಿನಯ್‌ಎಸ್. ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಪ್ರಾದೇಶಿಕ ವಾರ್ತೆಗಳು

ಆಳ್ವಾಸ್ ಎಂಜಿನಿಯರಿಂಗ್ ಕಾಲೇಜು: ಯುವಜನೋತ್ಸವದಲ್ಲಿ ಹಲವು ಪ್ರಶಸ್ತಿ

ಮಿಜಾರು: ಮಂಗಳೂರಿನ ಸಸಿಹಿತ್ಲುವಿನಲ್ಲಿ ಈಚೆಗೆ ನಡೆದ ಜಿಲ್ಲಾ ಮಟ್ಟದ ಯುವಜನೋತ್ಸವದಲ್ಲಿ ಸ್ಪರ್ಧಿಸಿದ ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಜನಪದ ನೃತ್ಯ (ಡೊಳ್ಳು- ಪ್ರಥಮ), ಜನಪದ ನೃತ್ಯ (ಏಕವ್ಯಕ್ತಿ) ಪ್ರಥಮ, ಕತೆ ಬರೆಯುವುದು- ಪ್ರಥಮ ಮತ್ತು ದ್ವಿತೀಯ, ಭಾಷಣ ಕಲೆ -ಪ್ರಥಮ, ಕವಿತೆ ಬರೆಯುವುದು -ಪ್ರಥಮ ಮತ್ತು ದ್ವಿತೀಯ ಬಹುಮಾನ ಪಡೆದಿದ್ದಾರೆ.ಪ್ರಥಮ ಬಹುಮಾನ ವಿಜೇತರು ರಾಜ್ಯಮಟ್ಟದ ಯುವಜನೋತ್ಸವಕ್ಕೆ ಆಯ್ಕೆಯಾಗಿದ್ದಾರೆ. ವಿಜೇತ ವಿದ್ಯಾರ್ಥಿಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ, ಟ್ರಸ್ಟಿ ವಿವೇಕ ಆಳ್ವ ಅಭಿನಂದಿಸಿದ್ದಾರೆ.

Scroll to Top