ಪ್ರಾದೇಶಿಕ ವಾರ್ತೆಗಳು

ಪ್ರಾದೇಶಿಕ ವಾರ್ತೆಗಳು

ಚಾರುವಸಂತ ರಂಗಪಯಣ, ನಾಟಕ ಕೃತಿ ಉದ್ಘಾಟನೆ ಕಾವ್ಯವನ್ನು ರಂಗರೂಪಕ್ಕೆ ತರುವುದು ಸಾಹಸ: ರೈ

ಮೂಡುಬಿದಿರೆ: ‘ಬರಹ ಅಥವಾ ಕಾವ್ಯವನ್ನು ರಂಗರೂಪಕ್ಕೆ ತರುವುದು ಒಂದು ಸಾಹಸ. ‘ಚಾರುವಸಂತ’ದ ಮೂಲಕ ಹಂಪನಾ ಅವರ ಕನಸು ಈಡೇರಿದೆ’ ಎಂದು ವಿಶ್ರಾಂತ ಕುಲಪತಿ ಪ್ರೊ.ಬಿ.ಎ. ವಿವೇಕ ರೈ ಹೇಳಿದರು.ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ನಗರದ ಸ್ಕೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ಗುರುವಾರ ಸಂಜೆ ಹಮ್ಮಿಕೊಂಡ ರಂಗ ಮಾಂತ್ರಿಕ ಜೀವನ್‌ರಾಂ ಸುಳ್ಯ ನಿರ್ದೇಶನದಲ್ಲಿ ಆಳ್ವಾಸ್ ರಂಗ ಅಧ್ಯಯನ ಕೇಂದ್ರ ವಿದ್ಯಾರ್ಥಿಗಳು ಅಭಿನಯಿಸಿದ, ಹಂಪನಾ ವಿರಚಿತ ದೇಸೀ ಮಹಾ ಕಾವ್ಯದ ರಂಗರೂಪ ‘ಚಾರು ವಸಂತ’ ನಾಟಕದ ಪ್ರದರ್ಶನ, ರಂಗಪಯಣ ಉದ್ಘಾಟನೆ ಮತ್ತು ನಾಟಕ ಕೃತಿ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.ಬರಹದಿಂದ ರಂಗರೂಪಕ್ಕೆ ಕತೆಯನ್ನು ತರುವ ಅನುಭವಗಳನ್ನು ಹಂಚಿಕೊAಡ ವಿವೇಕ ರೈ, ‘ಕಾವ್ಯ ಭಾಷೆಯನ್ನು ಹೆಚ್ಚಾಗಿ ರಂಗರೂಪಕ್ಕೆ ಬಳಸಲಾಗಿದೆ’ ಎಂದರು.ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ ಆಳ್ವ ಮಾತನಾಡಿ, ‘ಚಾರುವಸಂತ’ ನಾಟಕಕ್ಕೆ ಜೈನ ಸಿದ್ಧಾಂತ ಮೂಲವಾಗಿದ್ದು, ಜೈನ ಕಾಶಿಯಲ್ಲಿ ಪ್ರದರ್ಶನ ಏರ್ಪಡಿಸಲಾಗಿದೆ ಎಂದರು.ಮೂಡುಬಿದಿರೆಯಲ್ಲಿ ನಡೆದಿದ್ದ ೭೧ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆದಾಗ ಹಂಪನಾ ಅವರು ನೀಡಿದ ಸಹಕಾರ ಅವಿಸ್ಮರಣೀಯ ಎಂದರು.ವಿದ್ಯಾರ್ಥಿಗಳನ್ನು ಉದ್ದೇಶಿಸಿ ಕಾಣುವ ಕನಸುಗಳನ್ನು ನನಸು ಮಾಡಲು ದೀರ್ಘವಾದ ಅಭ್ಯಾಸ ಮತ್ತು ಧೈರ್ಯ ಅಗತ್ಯ ಎಂದರು.‘ಚಾರುವಸಂತ’ವನ್ನು ರಂಗರೂಪಕ್ಕೆ ತಂದ ರಂಗಕರ್ಮಿ ಡಾ.ನಾ ದಾಮೋದರ ಶೆಟ್ಟಿ ಮಾತನಾಡಿ, ಕನ್ನಡ ಕಲಿಯಲು ಮತ್ತು ಉಳಿಸಲು ಆಳ್ವಾಸ್ ಮಾಡುತ್ತಿರುವ ಕೆಲಸ ಶ್ಲಾಘನೀಯ ಎಂದರು.ಈ ನಾಟಕವೂ ಕನ್ನಡ ಕಲಿಕೆಗೆ ಮತ್ತು ನೈತಿಕ ಮೌಲ್ಯಗಳನ್ನು ಕಲಿಯಲು ಅನುವು ಮಾಡಿಕೊಡುತ್ತದೆ ಎಂದರು.‘ಚಾರುವಸAತ’ ನಾಟಕ ಕೃತಿಯನ್ನು ಬಿಡುಗಡೆಗೊಳಿಸಲಾಯಿತು. ರಾಜ್ಯದ ವಿವಿಧೆಡೆ ತಂಡದ ರಂಗಪಯಣ ನಡೆಯಲಿದೆ. ನಾಟಕದ ನಿರ್ದೇಶಕ, ರಂಗ ಮಾಂತ್ರಿಕ ಜೀವನ್‌ರಾಂ ಸುಳ್ಯ ಇದ್ದರು. ಆಳ್ವಾಸ್ ಪದವಿಪೂರ್ವ ಕಾಲೇಜಿನ ಕಲಾ ವಿಭಾಗದ ಡೀನ್ ಕೆ. ವೇಣುಗೋಪಾಲ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ಅಂತರ್ ಕಾಲೇಜು ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಆಳ್ವಾಸ್ ಚಾಂಪಿಯನ್ಸ್

ಮೂಡುಬಿದಿರೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಮತ್ತು ಮಂಗಳೂರಿನ ಲಕ್ಷಿö್ಮÃ ಮೆಮೋರಿಯಲ್ ಫಿಸಿಯೋಥೆರಪಿ ಕಾಲೇಜು ಸಹಯೋಗದಲ್ಲಿ ನವೆಂಬರ್ 21 ಮತ್ತು 22ರಂದು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆದ ಅಂತರ ಕಾಲೇಜು ವೇಯ್ಟ್ ಲಿಫ್ಟಿಂಗ್, ಪವರ್ ಲಿಫ್ಟಿಂಗ್ ಮತ್ತು ದೇಹದಾರ್ಢ್ಯ ಸ್ಪರ್ಧೆಯಲ್ಲಿ ಆಳ್ವಾಸ್ ಹೋಮೀಯೋಪಥಿ ಕಾಲೇಜಿನ ವಿದ್ಯಾರ್ಥಿಗಳು ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಸಮಗ್ರ ಚಾಂಪಿಯನ್ಸ್ ಆಗಿ ಹೊರಹೊಮ್ಮಿದ್ದಾರೆ.ಶಶಾಂಕ್ ನಾಗರಾಜ್ ದೊಡ್ಡಮನಿ (55 ಕೆಜಿ ವಿಭಾಗ), ಈರಯ್ಯ ಬಸಯ್ಯ ಹಿರೇಮಠ್ (61 ಕೆಜಿ ವಿಭಾಗ), ಪವನ್ ಎಸ್ ದೊಡ್ರಲ್ (102 ಕೆಜಿ ವಿಭಾಗ) ಪುರುಷರ ವಿಭಾಗದಲ್ಲಿ ಚಿನ್ನದ ಪದಕ ಪಡೆದಿದ್ದಾರೆ. ಸಪಕಲೆ ಸುನಿಲ್ ಅಶೋಕ್ (109ಕೆಜಿ ವಿಭಾಗ) ಬೆಳ್ಳಿ ಹಾಗೂ ಮಹಾನಭಾವ ಹರ್ಷಲ್ (61ಕೆಜಿ ವಿಭಾಗ) ಕಂಚಿನ ಪದಕ ಪಡೆದಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ನ.27 ರಂದು ಡಾ.ಕೆ.ಚಿನ್ನಪ್ಪ ಗೌಡ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ

ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ನ.27ರಂದು ಬೆಳಗ್ಗೆ 11.30ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ವಿಶ್ರಾಂತ ಕುಲಪತಿ , ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಡಾ.ಕೆ.ಚಿನ್ನಪ್ಪ ಗೌಡ ಭಾಗವಹಿಸಿ ಸಂವಾದ ನಡೆಸಲಿದ್ದಾರೆ. ಹಿರಿಯ ಛಾಯಾಗ್ರಾಹಕ ಚಂದ್ರಹಾಸ ಕೋಟೆಕಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸುವರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ .ಆರ್. ಉಪಸ್ಥಿತರಿರುವರು ಎಂದು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ನ.27 ರಂದು ಡಾ.ಕೆ.ಚಿನ್ನಪ್ಪ ಗೌಡಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ

ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ನ.27ರಂದು ಬೆಳಗ್ಗೆ 11.30ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ವಿಶ್ರಾಂತ ಕುಲಪತಿ , ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಡಾ.ಕೆ.ಚಿನ್ನಪ್ಪ ಗೌಡ ಭಾಗವಹಿಸಿ ಸಂವಾದ ನಡೆಸಲಿದ್ದಾರೆ. ಹಿರಿಯ ಛಾಯಾಗ್ರಾಹಕ ಚಂದ್ರಹಾಸ ಕೋಟೆಕಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸುವರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ .ಆರ್. ಉಪಸ್ಥಿತರಿರುವರು ಎಂದು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ಕನ್ಯಾನ ಸದಾಶಿವ ಶೆಟ್ಟಿಯವರಿಗೆ ಸುರತ್ಕಲ್ ಬಂಟರ ಸಂಘದಿಂದ ಸನ್ಮಾನ

ಸುರತ್ಕಲ್: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ಆಶ್ರಯದಲ್ಲಿ ಮಂಗಳೂರು ಪುರಭವನದಲ್ಲಿ ಕರ್ನಾಟಕ ಸುವರ್ಣ ಪ್ರಶಸ್ತಿ ಪುರಸ್ಕೃತರಾದ ಕನ್ಯಾನ ಸದಾಶಿವ ಶೆಟ್ಟಿ ಅವರಿಗೆ ನಡೆದ ಸನ್ಮಾನ ಸಮಾರಂಭದಲ್ಲಿ ಸುರತ್ಕಲ್ ಬಂಟರ ಸಂಘವು ಸುರತ್ಕಲ್ ಬಂಟರ ಸಂಘದ ಕಟ್ಟಡ ಸಮಿತಿಯ ಅಧ್ಯಕ್ಷರಾದ ಕರುಣಾಕರ ಎಂ ಶೆಟ್ಟಿ ಮಧ್ಯಗುತ್ತು ಅವರ ನೇತೃತ್ವದಲ್ಲಿ ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು, ಪಟ್ಲ ಫೌಂಡೇಶನ್ ಸುರತ್ಕಲ್ ಘಟಕದ ಅಧ್ಯಕ್ಷ ಸುಧಾಕರ ಪೂಂಜ ಅವರು ಕನ್ಯಾನ ಸದಾಶಿವ ಶೆಟ್ಟಿ ಅವರನ್ನು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು. ಸಂಘದ ಉಪಾಧ್ಯಕ್ಷ ಪುಷ್ಪರಾಜ ಶೆಟ್ಟಿ ಕುಡುಂಬೂರು, ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಕಟ್ಲ, ಪಟ್ಲ ಫೌಂಡೇಶನ್ ಟ್ರಸ್ಟ್ ನ ಟ್ರಸ್ಟಿಗಳಾದ ಸಹನಾ ರಾಜೇಶ್ ರೈ, ಸವಿತಾ ಭವಾನಿ ಶಂಕರ್ ಶೆಟ್ಟಿ, ಕೇಸರಿ ಎಸ್ ಪೂಂಜ, ಪಟ್ಲ ಟ್ರಸ್ಟ್ ನ ಕೇಂದ್ರೀಯ ಸಮಿತಿಯ ಸಂಘಟನಾ ಕಾರ್ಯದರ್ಶಿ ಬಾಳ ಜಗನ್ನಾಥ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ಸಿ.ಎಸ್ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ಉತ್ತಮ ಸಾಧನೆಸಿ. ಎಸ್.ಇ.ಇ.ಟಿ ಪರೀಕ್ಷೆ ಫಲಿತಾಂಶ

ಮೂಡುಬಿದಿರೆ: ಐಸಿಎಸ್‌ಐ(IಅSI)2024 ನವೆಂಬರ್‌ನಲ್ಲಿ ನಡೆಸಿದ ಸಿ.ಎಸ್.ಇ.ಇ.ಟಿ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳಾದ ಕೀರ್ತನ್ ಎಸ್. ಶೆಟ್ಟಿ(126), ಪವಿತ್ರ ಪ್ರಭು(121), ಗಗನ್ ಟಿ.ವೈ (119), ಅದಿತಿ(119), ಗ್ಲೆನಿಶಾ ಎಸ್(115), ಯಶಸ್ ಆರ್(114), ಸೃಷ್ಟಿ ಎನ್ ಪೂಜಾರಿ(112), ಸೃಷ್ಟಿ ಅಶೋಕ್(108), ನಿಹಾರಿಕಾ ಎಸ್.ಎಂ(106), ಚಿನ್ಮಯಿ ಹೊಳ್ಳ(104), ಪ್ರಥ್ವಿಕ್ ಶೆಟ್ಟಿ(104), ಚಂದನಾ ವೈ(100), ನಿಶಿತಾ(100), ರಾಹುಲ್ ಹೆಚ್.ಎಸ್(100), ಶಿವಾತ್ಮಜ(100), ದೀಶ್ಮಾ(100), ಕಾವ್ಯ(100), ಸಂಜನಾ ವಿ(100), ವೀರವರ್ಧನ್ ರೆಡ್ಡಿ(100) ಮೊದಲ ಪ್ರಯತ್ನದಲ್ಲಿ ಉತ್ತಮ ಅಂಕದೊAದಿಗೆ ಉತ್ತೀರ್ಣರಾಗಿದ್ದಾರೆ.ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೂ ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವ,ಪ್ರಾಂಶುಪಾಲರು ಡಾ. ಕುರಿಯನ್, ಪದವಿಪೂರ್ವ ಕಾಲೇಜು ಪ್ರಾಂಶುಪಾಲರು ಮಹಮ್ಮದ್ಸದಾಕತ್, ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಂ.ಡಿ, ವಾಣಿಜ್ಯ ವಿಭಾಗದ ಮುಖ್ಯಸ್ಥಅಶೋಕ್ ಹಾಗೂ ಸಿ.ಎಸ್ ಸಂಯೋಜಕರು ಅಭಿನಂದಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ದೇಶದ ಉನ್ನತಿಗೆ ಮಹಿಳೆಯ ಕೊಡುಗೆ ಅನನ್ಯ: ವಿವೇಕ್ ಆಳ್ವ

ಮೂಡುಬಿದಿರೆ: ಕೆಲವು ದೇಶಗಳು ಆರ್ಥಿಕವಾಗಿ ಹಿಂದುಳಿಯಲು ಮಹಿಳಾ ಉದ್ಯೋಗಿಗಳ ಪ್ರಮಾಣ ಕಡಿಮೆ ಪ್ರಮುಖ ಕಾರಣವಾಗಿದೆ. ಯಾವುದೇ ದೇಶ ಅಥವಾ ಸಂಸ್ಥೆ ಉನ್ನತಿಯನ್ನು ಕಾಣಲು ಮಹಿಳೆಯರ ಪಾತ್ರ ಮುಖ್ಯ. ಮಹಿಳೆಯರು ವಿವಿಧ ವೃತ್ತಿರಂಗಗಳಲ್ಲಿ ತೊಡಗಿಸಿಕೊಳ್ಳುವುದರ ಮೂಲಕ ದೇಶದ ಪ್ರಗತಿಗೆ ಕಾಣಿಕೆ ನೀಡಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಅಭಿಪ್ರಾಯಪಟ್ಟರು.ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಗುರುವಾರ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮಹಿಳಾ ಘಟಕ ‘ಸಕ್ಷಮಾ’ದ ವತಿಯಿಂದ ಮಹಿಳಾ ಮಾನಸಿಕ ಆರೋಗ್ಯದ ಜಾಗೃತಿ ಕಾರ್ಯಕ್ರಮ ‘ಎಂಪವರ್‌ಹರ್’ ಉದ್ಘಾಟಿಸಿ ಮಾತನಾಡಿದ ಅವರು ಮಹಿಳೆಯರು ವಿವಿಧ ಸ್ತರದ ಉದ್ಯೋಗಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವುದನ್ನು ಪ್ರೋತ್ಸಾಹಿಸಿಸುವ ಸಮಾಜ ನಮ್ಮದಾಗಬೇಕು ಎಂದರು. ಆಳ್ವಾಸ್ ಸಂಸ್ಥೆಯ ಯಶಸ್ಸಿನಲ್ಲಿ ಮಹಿಳೆಯರ ಪಾತ್ರ ಅನನ್ಯ. ಮಹಿಳೆಯರು ತಮ್ಮ ಜವಾಬ್ದಾರಿಗಳನ್ನು ಶ್ರೇಷ್ಠತೆಯಿಂದ ನಿಭಾಯಿಸುವುದರಿಂದ ಸಂಸ್ಥೆಯ ಜೇಷ್ಠತೆ ಹೆಚ್ಚಿದೆ ಎಂದರು. ಮಹಿಳೆಯರು ವೃತ್ತಿ ಜೀವನ ಹಾಗೂ ಕೌಟುಂಬಿಕ ಜೀವನದಲ್ಲಿ ಸಮತೋಲನ ಕಾಪಾಡಿಕೊಳ್ಳುವುದು ಬಹಳ ಅವಶ್ಯ. ಇತ್ತೀಚಿನ ದಿನಗಳಲ್ಲಿ ವಿಭಕ್ತ ಕುಟುಂಬಗಳು ಕೂಡ ಮಾನಸಿಕ ಆರೋಗ್ಯದ ಮೇಲೆ ಋಣಾತ್ಮಕ ಪರಿಣಾಮ ಬೀರುತ್ತಿವೆ ಎಂದರು.ನAತರ ನಡೆದ ಉಪನ್ಯಾಸ ಕರ‍್ಯಕ್ರಮದಲ್ಲಿ ಉಡುಪಿಯ ಡಾ. ಪಿ ವಿ. ಬಾಳಿಗ ಮೆಮೋರಿಯಲ್ ಆಸ್ಪತ್ರೆಯ ಮನೋವೈದ್ಯ ಡಾ. ವಿರೂಪಾಕ್ಷ ದೇವರಮನೆ ವೃತ್ತಿ ಜೀವನದ ಸಮತೋಲನ ಮತ್ತು ವೃತ್ತಿ ಜೀವನದಲ್ಲಿ ಮಹಿಳೆಯರ ಮಾನಸಿಕ ಆರೋಗ್ಯದ ಮಹತ್ವದ ಕುರಿತು ಸಂಸ್ಥೆಯ ಮಹಿಳಾ ಉದ್ಯೋಗಿಗಳನ್ನು ಉದ್ದೇಶಿಸಿ ಮಾತನಾಡಿದರು. ಗೃಹಿಣಿಯರಿಗೆ ಮತ್ತು ಮಹಿಳಾ ಉದ್ಯೋಗಿಗಳಿಗೆ ಹೋಲಿಸಿದರೆ ಮಹಿಳಾ ಉದ್ಯೋಗಿಗಳು ಹೆಚ್ಚಿನ ಒತ್ತಡವನ್ನು ಅನುಭವಿಸುತ್ತಿರುತ್ತಾರೆ. ಮಹಿಳಾ ಉದ್ಯೋಗಿಗಳ ಮಾನಸಿಕ ಆರೋಗ್ಯವು ಸಂಸ್ಥೆಯ ಏಳಿಗೆಯ ಮೇಲೂ ಪರಿಣಾಮ ಬೀರಬಲ್ಲದು. ಮಹಿಳೆಯರಿಗೆ ವೃತ್ತಿ ಜೀವನ ಮತ್ತು ಕೌಟುಂಬಿಕ ಜೀವನವನ್ನು ಜೊತೆಯಲ್ಲೇ ಸಂಭಾಳಿಸಲು ಕಷ್ಟವಾದಾಗ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬಿರುತ್ತದೆ. ನಾವು ವೃತ್ತಿಯನ್ನು ನಿರ್ವಹಿಸುವ ರೀತಿಯಲ್ಲಿ ನಮ್ಮ ಮಾನಸಿಕ ಆರೋಗ್ಯ ನಿರ್ಧಾರವಾಗುತ್ತದೆ. ನಾವು ಮಾಡುವ ಕೆಲಸವನ್ನು ಖುಷಿಯಿಂದ ನಿರ್ವಹಿಸಿದಾಗ ಮಾನಸಿಕ ಸಮಸ್ಯೆಗಳು ತಗ್ಗುತ್ತದೆ ಎಂದರು. ಸಿಟ್ಟು, ಬೇಸರ, ದ್ವೇಷ, ಅಸಹನೆ, ಕೀಳರಿಮೆಗಳಂತಹ ಭಾವನೆಗಳು ಮಾನಸಿಕ ಅನಾರೋಗ್ಯಕ್ಕೆ ಕಾರಣವಾಗುತ್ತದೆ.ಭಾವನೆಗಳ ನಿಯಂತ್ರಣದಿAದ ಸಂತೋಷದಾಯಕ ಜೀವನ ಸಾಧ್ಯ. ನಮ್ಮ ಮುಖದಲ್ಲಿ ಚಿಂತೆಯ ಸುಕ್ಕು ಎಂದು ಮೂಡದಿರಲಿ. ಒತ್ತಡ ನಮ್ಮ ನಿರೀಕ್ಷೆಗಳ ಮತ್ತು ವಾಸ್ತವದ ನಡುವಿನ ವ್ಯತ್ಯಾಸವಾಗಿದೆ. ಒತ್ತಡ ಕಡಿಮೆಯಾದಾಗ ರೋಗ ನಿರೋಧಕ ಶಕ್ತಿಯೂ ಹೆಚ್ಚುತ್ತದೆ. ಶೇ.೯೮% ದುಗುಡಗಳು ನಿಜವಿರುವುದಿಲ್ಲ. ಆದರೆ ಮಿತವಾದ ಒತ್ತಡವು ವಾಸ್ತವವಾಗಿ ಕಾರ್ಯಕ್ಷಮತೆ ಮತ್ತು ದಕ್ಷತೆಯನ್ನು ಹೆಚ್ಚಿಸಬಲ್ಲದು ಎಂದರು. ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನ ಮನೋವಿಜ್ಞಾನ ಉಪನ್ಯಾಸಕಿ ಸಾರ ಕ್ರಾಸ್ತ ವಿದ್ಯಾರ್ಥಿನಿಯರಲ್ಲಿ ಮಾನಸಿಕ ಯೋಗಕ್ಷೇಮದ ಕುರಿತು ಉಪನ್ಯಾಸ ನೀಡಿ ಕಲಿಕೆ, ಪರೀಕ್ಷೆ, ವೃತ್ತಿ ಜೀವನದ ಆಯ್ಕೆ, ಗೆಳೆತನ ಸಾಮಾಜಿಕ ಮಾಧ್ಯಮಗಳ ಪರಿಣಾಮ ವಿವರಿಸಿದರು. ಈಗಿನ ಯುವ ಜನಾಂಗ ಮತ್ತು ಹಿಂದಿನ ತಲೆಮಾರು ಹೀಗೆ ಭಿನ್ನವಾಗಿತ್ತು ಮತ್ತು ಇಂದಿನ ಸಮುದಾಯ ಎದುರಿಸತ್ತಿರುವ ತೊಂದರೆಗಳಾದ ಮೊಬೈಲ್ ಅವಲಂಬನೆ, ಸೃಜನಶೀಲತೆಯ ಕೊರತೆ, ತಮ್ಮನ್ನು ಸಮಾಜದಿಂದ ಪ್ರತ್ಯೇಕಿಸುವುದರ ಕುರಿತು ವಿವರಿಸಿದರು.ಮಾನಸಿಕ ಆರೋಗ್ಯವನ್ನು ಹತೋಟಿಯಲ್ಲಿಟ್ಟುಕೊಳ್ಳಲು ಮೆದುಳಿಗೆ ನೀಡಬೇಕಾದ ವಿಶ್ರಾಂತಿ, ಲಘು ನಿದ್ದೆ, ಸಕರಾತ್ಮಕ ಚಿಂತನೆಗಳು ಅಗತ್ಯ ಎಂದರು.ಕಾರ್ಯಕ್ರಮದಲ್ಲಿ ಸಕ್ಷಮ ಮಹಿಳಾ ಘಟಕದ ಮಾಸಿಕ ಇ-ಪೋಸ್ಟರ್- ‘ಶಿರೋಸ್’ ಬಿಡುಗಡೆ ಮಾಡಲಾಯಿತು.ಆಳ್ವಾ ಫಾರ್ಮಸಿಯ ಮುಖ್ಯ ನಿರ್ವಾಹಕಿ ಡಾ. ಗ್ರೀಷ್ಮ ಆಳ್ವ, ಮೂಡಬಿದಿರೆಯ ಮಹಿಳಾ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷೆ ಶೋಭಾ ಹೆಗ್ಡೆ, ಸಕ್ಷಮಾ ಘಟಕದ ಅಧ್ಯಕ್ಷೆ ಡಾ. ಮುಕಾಂಬಿಕಾ ಮತ್ತಿತರರು ಇದ್ದರು. ಪದವಿ ಪೂರ್ವ ಕಾಲೇಜಿನ ಅಧ್ಯಾಪಕಿ ಮಲ್ಲಿಕಾ ಎಂ. ಆರ್ ನಿರೂಪಿಸಿದರು. ಆಳ್ವಾಸ್ ಅಲೈಡ್ ಹೆಲ್ತ್ ಸೈನ್ಸ್ ನ ಉಪ ಪ್ರಾಂಶುಪಾಲೆ ಶ್ರೀವನಿತಾ ವಂದಿಸಿದರು.

ಪ್ರಾದೇಶಿಕ ವಾರ್ತೆಗಳು

ಅಖಿಲ ಭಾರತ ಅಂತರ್ ವಿವಿ ಮಹಿಳಾ ಹಾಗೂ ಪುರುಷರ ಕ್ರಾಸ್‌ಕಂಟ್ರಿ ಚಾಂಪಿಯನ್‌ಶಿಪ್‌. ಮಂಗಳೂರು ವಿವಿ ಪ್ರತಿನಿಧಿಸಿದ್ದ ಆಳ್ವಾಸ್‌ನ ಪುರುಷರ ಹಾಗೂ ಮಹಿಳೆಯರ ಎರಡು ತಂಡ ಸಮಗ್ರ ಚಾಂಪಿಯನ್ಸ್. ಪ್ರತಿನಿಧಿಸಿದ 12 ಜನ ಆಟಗಾರರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು.

ಮೂಡುಬಿದಿರೆ: ಅಖಿಲ ಭಾರತ ಅಂತರ್ ವಿವಿ ಮಹಿಳಾ ಹಾಗೂ ಪುರುಷರ ಕ್ರಾಸ್‌ಕಂಟ್ರಿ ಚಾಂಪಿಯನ್‌ಶಿಪ್‌ನಲ್ಲಿ ಮಂಗಳೂರು ವಿವಿಯನ್ನು ಪ್ರತಿನಿಧಿಸಿದ್ದ ಆಳ್ವಾಸ್ ಪುರುಷರ ಹಾಗೂ ಮಹಿಳೆಯರ ತಂಡ ಎರಡು ವಿಭಾಗದಲ್ಲಿ ಸಮಗ್ರ ಚಾಂಪಿಯನ್ಸ್ ಪಟ್ಟ ಪಡೆಯಿತು. ಪುರುಷರ ತಂಡವು ನಾಲ್ಕನೇ ಭಾರಿ ಸಮಗ್ರ ತಂಡ ಪ್ರಶಸ್ತಿ ಪಡೆಯುತ್ತಿದ್ದರೆ, ಮಹಿಳೆಯರ ತಂಡವು ಮೂರನೇ ಬಾರಿ ಪ್ರಶಸ್ತಿ ಪಡೆದಿದೆ. ಮಂಗಳೂರು ವಿವಿ ಪ್ರತಿನಿಧಿಸಿದ ಪುರುಷರ ಹಾಗೂ ಮಹಿಳೆಯರ ತಂಡದಲ್ಲಿದ್ದ 12 ಜನ ಕ್ರೀಡಾಳುಗಳು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳಾಗಿದ್ದರೆ. ಪುರುಷರ ವಿಭಾಗದಲ್ಲಿ ಮಂಗಳೂರು ವಿವಿ 69 ಅಂಕಗಳೊAದಿಗೆ ಪ್ರಥಮ ಸ್ಥಾನ ಪಡೆದರೆ, ಮುಂಬೈ ವಿವಿ 71 ಅಂಕಗಳೊAದಿಗೆ ದ್ವಿತೀಯ ಸ್ಥಾನ, 83 ಅಂಕಗಳೊAದಿಗೆ ರಾಜಸ್ಥಾನ ವಿವಿ ತೃತೀಯ ಸ್ಥಾನ ಗಳಿಸಿತು.ಮಹಿಳಾ ವಿಭಾಗದಲ್ಲಿ ಮಂಗಳೂರು ವಿವಿ 33 ಅಂಕಗಳೊAದಿಗೆ ಪ್ರಥಮ, 46 ಅಂಕಗಳೊAದಿಗೆ ಮಹರ್ಷಿದಯನಂದ ವಿವಿಯು ದ್ವಿತೀಯ, ಕೋಲ್ಹಾಪುರದ ಶಿವಾಜಿ ಯುನಿವರ್ಸಿಟಿ 64 ಅಂಕಗಳೊAದಿಗೆ ತೃತೀಯ ಸ್ಥಾನ ಪಡೆಯಿತುಮಹಿಳೆಯರ ವೈಯಕ್ತಿಕ ವಿಭಾಗದಲ್ಲಿ ಆಳ್ವಾಸ್‌ನ ಬಸಂತಿಕುಮಾರಿ ದ್ವಿತೀಯ, ಸೋನಿಯಾ ತೃತೀಯ ಸ್ಥಾನ, ಜ್ಯೋತಿ ಒಂಬತ್ತನೇ ಸ್ಥಾನ, ದಿಶಾ ಬೋರ್ಸೆ ಹತ್ತೋಂಬತ್ತನೇ ಸ್ಥಾನ ಪಡೆದರುಪುರುಷರ ವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ನವರತನ್ ಎಂಟನೇ ಸ್ಥಾನ, ಗಗನ್ ಹದಿನೇಳನೆ ಸ್ಥಾನ, ರೋಹಿತ ಹದಿನೆಂಟನೇ ಸ್ಥಾನ, ಅಮನ್ ಕುಮಾರ್ ಇಪ್ಪತ್ತಾರನೇ ಸ್ಥಾನ ಪಡೆದರು.ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಅಸೋಸಿಯೇಷನ್ ಆಫ್ ಇಂಡಿಯನ್ ಯುನಿವರ್ಸಿಟಿಸ್ ಸಹಯೋಗದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಅಖಿಲ ಭಾರತ ಅಂತರ್ ವಿವಿ ಮಹಿಳೆಯರ ಕ್ರಾಸ್‌ಕಂಟ್ರಿ ಚಾಂಪಿಯನ್‌ಶಿಪ್ ಬುಧವಾರ ನಡೆಯಿತು. ಪುರುಷರ ಅಖಿಲ ಭಾರತಅಂತರ್ ವಿವಿ ಗುಡ್ಡಗಾಡು ಓಟವು ಉಪ್ಪಿನಂಗಡಿಯ ಪ್ರಧಮ ದರ್ಜೆಕಾಲೇಜಿನಲ್ಲಿ ಮಂಗಳವಾರ ಜರುಗಿತ್ತು.ಮಹಿಳಾ ವಿಭಾಗದಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಗಳಿಸಿದ ತಂಡಗಳಿಗೆ ಕ್ರಮವಾಗಿ 25,000, 15000 ಹಾಗೂ 10000 ನಗದನ್ನು ಆಳ್ವಾಸ್ ಶಿಕ್ಷಣ ಸಂಸ್ಥೆಯಿAದ ನೀಡಲಾಯಿತು.ಸಮಾರೋಪ ಸಮಾರಂಭದಲ್ಲಿ ಮಂಗಳೂರು ವಿವಿ ಕುಲಪತಿ ಡಾ ಪಿ ಎಲ್‌ಧರ್ಮ, ಸ್ಕೌಟ್ಸ್ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿಜಿಆರ್ ಸಿಂಧ್ಯಾ, ಮಾಜಿ ಸಚಿವ ಅಭಯಚಂದ್ರ ಜೈನ್, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ, ದೈಹಿಕ ನಿರ್ದೇಶಕ ಡಾ. ಜೆರಾಲ್ಡ್ ಸಂತೋಷ್ ಡಿಸೋಜ, ಮೂಡುಬಿದಿರೆ ಪುರಸಭಾ ಅಧ್ಯಕ್ಷೆ ಜಯಶ್ರೀ ಕೇಶವ್, ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಉಪಸ್ಥಿತರಿದ್ದರು. ಆಳ್ವಾಸ್ ಪದವಿ ಪೂರ್ವಕಾಲೇಜಿನ ಉಪನ್ಯಾಸಕ ರಾಜೇಶ್ ಡಿಸೋಜ ಕಾರ್ಯಕ್ರಮ ನಿರೂಪಿಸಿದರು

ಪ್ರಾದೇಶಿಕ ವಾರ್ತೆಗಳು

ಮುಂಬೈಯಲ್ಲಿ ಡಿ. 7 ರಂದು ವಿಶ್ವಬಂಟರ ಸಮಾಗಮ, ಕಟೀಲು ಕ್ಷೇತ್ರದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

ಕಟೀಲು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಡಿ. 7 ರಂದು ಮುಂಬೈಯಲ್ಲಿ ನಡೆಯುವ ವಿಶ್ವಬಂಟರ ಸಮಾಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ಲಕ್ಷ್ಮೀ ನಾರಾಯಣ ಅಸ್ರಣ್ಣ ಬಿಡುಗಡೆ ಗೊಳಿಸಿದರು.ಸಮಾರಂಭದಲ್ಲಿ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಜೊತೆ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ, ಸಂತೋಷ್ ಕುಮಾರ್ ಹೆಗ್ಡೆ, ಭುವನಾಭಿರಾಮ ಉಡುಪ, ಶರತ್ ಶೆಟ್ಟಿ, ಸಂತೋಷ್ ಶೆಟ್ಟಿ ಶೆಡ್ಡೆ, ರತ್ನಾಕರ ಶೆಟ್ಟಿ ಎಕ್ಕಾರ್, ಅಶೋಕ್ ಕುಮಾರ್ ಶೆಟ್ಟಿ ಮುಲ್ಕಿ , ಬಾಲಕೃಷ್ಣ ರೈ ಕೊಲ್ಲಾಡಿ, ಸಾಯಿನಾಥ ಶೆಟ್ಟಿ, ತೋನ್ಸೆ ಮನೋಹರ್ ಶೆಟ್ಟಿ, ದೇವಪ್ಪ ಶೆಟ್ಟಿ ಸಾಲೆತ್ತೂರು, ಅಮರೇಶ್ ಸಾಲೆತ್ತೂರು, ಅರವಿಂದ ರೈ, ಅಜಿತ್ ಶೆಟ್ಟಿ ಬಜಪೆ, ಹರೀಶ್ ಶೆಟ್ಟಿ ಬಜಪೆ, ಸಂದೀಪ್ ಶೆಟ್ಟಿ ಎಕ್ಕೂರು, ತೇಜಸ್ ಶೆಟ್ಟಿ, ಮೊದಲಾದವರು ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ಯಕ್ಷಾಂಗಣ ನುಡಿಹಬ್ಬದಲ್ಲಿ ಕುಂಬಳೆ ಶ್ರೀಧರ ಸಂಸ್ಮರಣೆ – ಸಾಧಕರಿಗೆ ಸನ್ಮಾನ. ‘ಯಕ್ಷಗಾನದಲ್ಲಿ ಮಕ್ಕಳನ್ನು ತೊಡಗಿಸಿ’: ಸಿಎ ಶಾಂತರಾಮಶೆಟ್ಟಿ

ಮಂಗಳೂರು: ‘ಯಕ್ಷಗಾನದಲ್ಲಿ ನಮ್ಮ ಜೀವನ ಮೌಲ್ಯದ ಪಾಠವಿದೆ. ಆದ್ದರಿಂದ ಎಳೆಯ ಜನಾಂಗ ಅದರತ್ತ ಹೆಚ್ಚು ಆಸಕ್ತರಾಗುವ ಅಗತ್ಯವಿದೆ. ಕಲಿಯುವ ಮಕ್ಕಳನ್ನು ಶಾಲಾ ಹಂತದಲ್ಲೇ ಯಕ್ಷಗಾನದಲ್ಲಿ ತೊಡಗಿಸಲು ಪೋಷಕರು ಮುಂದಾಗಬೇಕು’ ಎಂದು ಭಾರತೀಯ ರೆಡ್ ಕ್ರಾಸ್ ಅಧ್ಯಕ್ಷ ಸಿಎ ಶಾಂತರಾಮ ಶೆಟ್ಟಿ ಹೇಳಿದ್ದಾರೆ.ಯಕ್ಷಾಂಗಣ ಮಂಗಳೂರು, ಯಕ್ಷಗಾನ ಚಿಂತನ – ಮಂಥನ ಮತ್ತು ಪ್ರದರ್ಶನ ವೇದಿಕೆ ಹಾಗೂ ಕರ್ನಾಟಕ ಯಕ್ಷಭಾರತಿ ಪುತ್ತೂರು ಇವರು ಕದ್ರಿ ಶ್ರೀ ಮಂಜುನಾಥ ದೇವಾಲಯದ ರಾಜಾಂಗಣದಲ್ಲಿ ಏರ್ಪಡಿಸಿದ್ದ ಕರ್ನಾಟಕ ರಾಜ್ಯೋತ್ಸವ ಕಲಾ ಸಂಭ್ರಮ12ನೇ ವರ್ಷದ ನುಡಿಹಬ್ಬ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ – 2024’ ಅಂಗವಾಗಿ 4ನೇ ದಿನದ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಬಳಿಕ ಅವರು ಮಾತನಾಡಿದರು. ಮಂಗಳೂರಿನ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಮಾಜಿ ಮೊಕ್ತೇಸರ ಹಾಗೂ ಕೌಶಲ್ಯ ಕನ್ಸ್ಟ್ರಕ್ಷನ್ಸ್ ನ ಜಿ.ಸುಂದರ ಆಚಾರ್ಯ ಬೆಳುವಾಯಿ ಮುಖ್ಯ ಅತಿಥಿಯಾಗಿದ್ದರು. ಕುಂಬಳೆ ಯಕ್ಷಗಾನದ ಕಣ್ಣು: ಎಂ.ನಾ.ಕಾರ್ಯಕ್ರಮದಲ್ಲಿ ಇತ್ತೀಚೆಗೆ ಅಗಲಿದ ಯಕ್ಷಗಾನದ ಹಿರಿಯ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಅವರ ಸಂಸ್ಮರಣೆ ಜರಗಿತು. ಸಂಸ್ಮರಣಾ ಭಾಷಣ ಮಾಡಿದ ‘ಕಣಿಪುರ’ ಮಾಸಪತ್ರಿಕೆ ಸಂಪಾದಕ ಎಂ.ನಾ.ಚಂಬಲ್ತಿಮಾರ್ ಮಾತನಾಡಿ ‘ತೆಂಕುತಿಟ್ಟಿನ ಮೂಲನೆಲವಾದ ಕುಂಬ್ಳೆಯ ಹೆಸರನ್ನು ವರ್ತಮಾನದಲ್ಲಿ ಬೆಳಗಿಸಿ, ಮೆರೆಸಿದವರು ಕುಂಬ್ಳೆ ಸುಂದರ ರಾವ್ ಮತ್ತು ಶ್ರೀಧರ ರಾಯರು. ಅವರಿಬ್ಬರೂ ಅಗಲುವ ಮೂಲಕ ಕುಂಬ್ಳೆಯ ಹೆಸರನ್ನು ಮೆರೆಸಲು ಮತ್ತು ಮೆರೆಯಲು ಕುಂಬ್ಳೆಯಲ್ಲಿ ಕಲಾವಿದರೇ ಇಲ್ಲ! ಈ ಮೂಲಕ ಕುಂಬ್ಳೆಯ ಯಕ್ಷಗಾನದ ಕಣ್ಣುಗಳೆರಡೂ ಮಂಜಾಗಿವೆ’ ಎಂದರು.‘ದುರಂತ ಮತ್ತು ವಿಷಾದ ಎಂದರೆ ವರ್ತಮಾನದ ಕಲಾಭಿಮಾನಿಗಳಿಗೆ ಪಾರ್ತಿಸುಬ್ಬನೇ ಕುಂಬ್ಳೆಯವನೆಂದು ಗೊತ್ತಿಲ್ಲ. ಕುಂಬ್ಳೆ ಸೀಮೆಯೆಂದರೆ ಯಕ್ಷಗಾನದ ತವರು. ಅಲ್ಲಿನ ಕಲಾವಿದರನ್ನು ಈಗೀಗ ಕೇರಳದ ಕಲಾವಿದರೆಂದು ಗುರುತಿಸುವುದು ವಿಷಾದನೀಯ. ತುಳುವರು, ಕನ್ನಡಿಗರು ತಮ್ಮದೇ ನಾಡಿನ ಸಾಂಸ್ಕೃತಿಕ ಸೌರಭವನ್ನು ಮರೆಯುವುದು ವಿಷಾದಕರ’ ಎಂದು ಎಂ.ನಾ.ನುಡಿದರು. ವಾಸುದೇವ ಕೊಟ್ಟಾರಿ ಸಮ್ಮಾನ:‌ಸಮಾರಂಭದಲ್ಲಿ ಯಕ್ಷಾಂಗಣದ ಹಿರಿಯ ಸದಸ್ಯ, ಧಾರ್ಮಿಕ ಮುಂದಾಳು ಅಳಪೆ – ಕರ್ಮಾರ್ ಸತ್ಸಂಗ ಸಮಿತಿ ಸಂಚಾಲಕ ವಾಸುದೇವ ಆರ್. ಕೊಟ್ಟಾರಿ ಅವರನ್ನು ಯಕ್ಷಾಂಗಣದ ವತಿಯಿಂದ ಸನ್ಮಾನವಿತ್ತು ಗೌರವಿಸಲಾಯಿತು. ಯಕ್ಷಾಂಗಣದ ಕಾರ್ಯಾಧ್ಯಕ್ಷ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ತಮ್ಮ ಪ್ರಾಸ್ತಾವಿಕ ಮಾತುಗಳಲ್ಲಿ ಅವರನ್ನು ಅಭಿನಂದಿಸಿದರು.ಹರಿದಾಸ, ನ್ಯಾಯವಾದಿ ಮಹಾಬಲ ಶೆಟ್ಟಿ ಕೂಡ್ಲು, ಭಾರತೀಯ ರಿಸರ್ವ್ ಬ್ಯಾಂಕಿನ ನಿವೃತ್ತ ಮಹಾ ಪ್ರಬಂಧಕ ರಾಜಾರಾಮ್ ಶೆಟ್ಟಿ, ಮನವಳಿಕೆ ಗುತ್ತು; ಪದಾಧಿಕಾರಿಗಳಾದ ಎಂ. ಸುಂದರ ಶೆಟ್ಟಿ ಬೆಟ್ಟಂಪಾಡಿ, ರವೀಂದ್ರ ರೈ ಕಲ್ಲಿಮಾರು, ತೋನ್ಸೆ ಪುಷ್ಕಳ ಕುಮಾರ್, ಕರುಣಾಕರ ಶೆಟ್ಟಿ ಪಣಿಯೂರು, ಲಕ್ಷ್ಮೀನಾರಾಯಣ ರೈ ಹರೇಕಳ, ನಿವೇದಿತಾ ಎನ್. ಶೆಟ್ಟಿ ಬೆಳ್ಳಿಪ್ಪಾಡಿ, ಸುಮಾ ಪ್ರಸಾದ್ ವೇದಿಕೆಯಲ್ಲಿದ್ದರು.‘ತ್ರಿಶಂಕು ಸ್ವರ್ಗ’ ತಾಳಮದ್ದಳೆ:ಬಳಿಕ ವಾಣೀವಿಲಾಸ ಯಕ್ಷಬಳಗ ಕಟೀಲು ಇವರಿಂದ ‘ತ್ರಿಶಂಕು ಸ್ವರ್ಗ’ ಯಕ್ಷಗಾನ ತಾಳಮದ್ದಳೆ ನಡೆಯಿತು. ಭಾಗವತರಾಗಿ ರವಿಕೃಷ್ಣ ದಂಬೆ, ಹಿಮ್ಮೇಳದಲ್ಲಿ ಮಣಿಮುಂಡ ಸುಬ್ರಹ್ಮಣ್ಯ ಶಾಸ್ತ್ರಿ, ರಾಮ ಹೊಳ್ಳ ಭಾಗವಹಿಸಿದರು. ಸರ್ಪಂಗಳ ಈಶ್ವರ ಭಟ್, ವಿನಯಾಚಾರ್ ಹೊಸಬೆಟ್ಟು, ಪಶುಪತಿ ಶಾಸ್ತ್ರಿ ಶಿರಂಕಲ್ಲು, ಉಮೇಶ ನೀಲಾವರ ಅರ್ಥಧಾರಿಗಳಾಗಿದ್ದರು.

Scroll to Top