ಪ್ರಾದೇಶಿಕ ವಾರ್ತೆಗಳು

ಪ್ರಾದೇಶಿಕ ವಾರ್ತೆಗಳು

ಬಂಟರು ಬಿಪಿಎಲ್ ಕಾಡ್೯ನಿಂದ ಮುಕ್ತಿ ಪಡೆಯಬೇಕು: ಬರೋಡ ಶಶಿಧರ ಶೆಟ್ಟಿ.ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿಯ ಸಭೆ

ಮಂಗಳೂರು: ತಳ ಮಟ್ಟದಲ್ಲಿರುವ ಬಂಟರನ್ನು ಮೇಲಕ್ಕೆ ತರುವ ಪ್ರಯತ್ನ ನಡೆಯಬೇಕಾಗಿದೆ. ಪ್ರತಿಯೊಬ್ಬ ಬಂಟರು ಬಿಪಿಎಲ್ ಕಾಡ್೯ನಿಂದ ಮುಕ್ತಿ ಪಡೆಯ ಬೇಕು. ಬಂಟರಲ್ಲಿ ಛಲ ಇದ್ದಾಗ ಮಾತ್ರ ಇಂಥವುಗಳನ್ನು ಮಾಡಲು ಸಾಧ್ಯವಿದೆ. ಜಾಗತಿಕ ಬಂಟರ ಸಂಘಗಳ ಒಕ್ಕೂಟ ಕಳೆದ ಏಳೆಂಟು ವರ್ಷಗಳಿಂದ ಬಡವರ ಕಣ್ಣೀರು ಒರೆಸುವ ಕೆಲಸ ಮಾಡುತ್ತಿದೆ. ಐಕಳ ಹರೀಶ್ ಶೆಟ್ಟಿ ಅವರು ಒಕ್ಕೂಟದ ಅಧ್ಯಕ್ಷರಾಗಿ 25 ಕೋಟಿ ರೂಪಾಯಿಗೂ ಮಿಕ್ಕಿ ಪರಿಹಾರ ಧನವನ್ನು ಬಡವರಿಗೆ ವಿತರಿಸಿದ್ದಾರೆ. ಪ್ರಸಕ್ತ ಮುಲ್ಕಿಯಲ್ಲಿ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣವಾಗುತ್ತಿರುವ ಸಭಾಭವನದ ಕಾಮಗಾರಿ ತ್ವರಿತಗತಿಯಲ್ಲಿ ಸಾಗುತ್ತಿದ್ದು ಅದರ ಉದ್ಘಾಟನೆಗೆ ನಾವೆಲ್ಲರೂ ಸಾಕ್ಷಿಯಾಗೋಣ ಎಂದು ಒಕ್ಕೂಟದ ವಿಶೇಷ ಮಹಾ ನಿರ್ದೇಶಕರು, ಬರೋಡ ಶಶಿ ಕ್ಯಾಟರಿಂಗ್ ನ ಮಾಲಕರಾದ ಶಶಿಧರ ಶೆಟ್ಟಿ ಬರೋಡ ತಿಳಿಸಿದರು. ಬಂಟ್ಸ್ ಹಾಸ್ಟೇಲ್ ನ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ನಡೆದ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿಯ ಸಭೆಯನ್ನು ಶಶಿಧರ ಶೆಟ್ಟಿ ಬರೋಡ ಅವರು ಉದ್ಘಾಟಿಸಿ ಮಾತನಾಡಿದರು.ನಮ್ಮಲ್ಲಿ ಅನೇಕ ಸಾಧಕರಿದ್ದಾರೆ. ಡಾ ಕೆ ಪ್ರಕಾಶ್ ಶೆಟ್ಟಿ, ಕನ್ಯಾನ‌ ಸದಾಶಿವ ಶೆಟ್ಟಿ, ತೋನ್ಸೆ ಆನಂದ ಶೆಟ್ಟಿ, ಶಶಿಕಿರಣ್ ಶೆಟ್ಟಿ, ರಾಕ್ಷಿ ಬಿಲ್ಡಸ್೯ನ ರಾಜೇಶ್ ಶೆಟ್ಟಿ ಮೊದಲಾದವರ ಸಾಧನೆ ನಮಗೆಲ್ಲ ದಾರಿದೀಪವಾಗಿದೆ. ಇಂತಹ ಅನೇಕ ಮಂದಿ ಸಾಧಕರು ನಮ್ಮ ಸಮಾಜದಲ್ಲಿದ್ದಾರೆ. ಬಂಟ ಸಮಾಜ ಇತರ ಸಮಾಜಕ್ಕೆ ಮಾದರಿಯಾಗ ಬೇಕು. ಒಳ್ಳೆಯ ಕೆಲಸಗಳನ್ನು ಮಾಡುವಾಗ ಪರವಿರೋಧ ಚರ್ಚೆಗಳು ಬರುವುದು ಸಹಜ. ಎಲ್ಲರೂ ಸಮಾಜದ ಅಭಿವೃದ್ದಿಗಾಗಿ ಕೆಲಸ ಮಾಡ ಬೇಕೆಂದರು. ಒಕ್ಕೂಟದ ನಿರ್ದೇಶಕ ಮುನಿಯಾಲು ಉದಯಕುಮಾರ್ ಶೆಟ್ಟಿ ಮಾತನಾಡಿ,ಜಾಗತಿಕ ಬಂಟರ ಸಂಘಗಳ ಒಕ್ಕೂಟ ನಿರಂತರ ಸಮಾಜಪರ ಕೆಲಸದಲ್ಲಿ ತೊಡಗಿಸಿ ಕೊಂಡಿದೆ‌ ಐಕಳ ಹರೀಶ್ ಶೆಟ್ಟಿಯವರ ಸಂಘಟನೆ ಮತ್ತು ಪದಾಧಿಕಾರಿಗಳ ಕೆಲಸ ಕಾರ್ಯಗಳಿಂದ ಒಕ್ಕೂಟ ಹಲವು ಕೋಟಿ ರೂ.ಗಳನ್ನು ಬಡವರ ವಿವಿಧ ಕಾರ್ಯಗಳಿಗೆ ವಿನಿಯೋಗಿಸಿದೆ ಎಂದರು.ಸಮಾರಂಭದಲ್ಲಿ ಉದ್ಯಮಿ ಒಕ್ಕೂಟದ ನಿರ್ದೇಶಕ ಹುಬ್ಬಳ್ಳಿ- ಧಾರಾವಾಡ ಬಂಟರ ಸಂಘದ ಅಧ್ಯಕ್ಷ ರಾಜೇಂದ್ರ ವಿ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಬಡತನದಲ್ಲಿ ಹುಟ್ಟಿದ ನಾನು ಬಡತನ ಏನೆಂಬುದನ್ನು ತಿಳಿದಿದ್ದೇನೆ. ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರ ಕನಸಿನ ಯೋಜನೆ ಮುಲ್ಕಿಯಲ್ಲಿ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ಸಭಾಭವನ ನಿರ್ಮಾಣವಾಗುತ್ತಿದೆ. ಐಕಳ ಹರೀಶ್ ಶೆಟ್ಟಿ ಅವರು ಅನೇಕ ವರ್ಷಗಳಿಂದ ಸಮಾಜದ ಕೆಲಸ ಮಾಡುತ್ತಿದ್ದಾರೆ ಅವರ ಹೆಸರಿನಲ್ಲಿ ನಾನು ಕೂಡಾ ಸಭಾಭವನ ನಿರ್ಮಿಸುತ್ತೇನೆ ಎಂದರು.ನಮ್ಮ ಆಲೋಚನೆಗಳಿಂದ ನಮ್ಮ ಬದುಕನ್ನು ಕಟ್ಟಿ ಕೊಳ್ಳಲು ಸಾಧ್ಯವಿದೆ. ನೌಕರರನ್ನು ಪ್ರೀತಿಯಿಂದ ಕಂಡಾಗ ನಾವು ಮತ್ತಷ್ಟು ಅಭಿವೃದ್ದಿ ಹೊಂದಲು ಸಾಧ್ಯವಿದೆ ಎಂದು ರಾಜೇಂದ್ರ ಶೆಟ್ಟಿ ತಿಳಿಸಿದರು.ಸಭೆಯ ಅಧ್ಯಕ್ಷತೆ ವಹಿಸಿದ್ದ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರು ಮಾತನಾಡಿ, ಎಲ್ಲಾ ಬಂಟರ ಸಂಘಗಳು ಪ್ರತೀವರ್ಷದಂತೆ ನೋಂದಾವಣೆಯನ್ನು ಮಾಡಿಕೊಂಡು ಸಂಘದ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ವಿನಂತಿಸಿದರು. ಮುಲ್ಕಿಯಲ್ಲಿ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣವಾಗುತ್ತಿರುವ ಸಭಾಭವನವನ್ನು ಡಿಸೆಂಬರ್ ತಿಂಗಳ ಒಳಗೆ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಲು ಎಲ್ಲರ ಸಹಕಾರ ಬೇಕು ಎಂದರು.ಪೋಷಕ ಸದಸ್ಯ ನವೀನ್ ಚಂದ್ರ ಶೆಟ್ಟಿ ಪಡುಬಿದ್ರೆ ಮಾತನಾಡಿ,ಐಕಳ ಹರೀಶ್ ಶೆಟ್ಟಿ ಅವರು ಕಾಲೇಜು ದಿನಗಳಿಂದಲೇ ಸಮಾಜ ಸೇವೆಯನ್ನು ಮಾಡಿಕೊಂಡಿರುವುದನ್ನು ನಾನು ನೋಡಿದ್ದೇನೆ ಎಂದರು. ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ ಮಾತನಾಡಿ, ನಾನು ಐಕಳ ಹರೀಶ್ ಶೆಟ್ಟಿಯವರೊಂದಿಗೆ ಅನೇಕ ವರ್ಷಗಳಿಂದ ಜೊತೆಯಾಗಿ ಕೆಲಸ ಮಾಡಿದ್ದೇನೆ. ಒಕ್ಕೂಟದಲ್ಲೂ ಅವರ ಜೊತೆಗಿದ್ದು, ಕೆಲಸ ಮಾಡುವ ಅವಕಾಶ ದೊರೆತಿದೆ ಎಂದರು.ಸಭೆಯಲ್ಲಿ ನಿರ್ದೇಶಕರಾದ ಶಶಿಧರ ಶೆಟ್ಟಿ ಇನ್ನಂಜೆ, ಇಂಜಿನಿಯರ್ ಗೋಪಾಲ ಭಟ್, ಸುಧಾಕರ ಶೆಟ್ಟಿ ಉತ್ರಿಂಜೆ ಬೆಹರಿನ್, ಸತೀಶ್ಚಂದ್ರ ಶೆಟ್ಟಿ ಅಕ್ಕುಂಜೆ, ಒಕ್ಕೂಟದ ಕೋಶಾಧಿಕಾರಿ ಉಳ್ತೂರು ಮೋಹನ್ ದಾಸ್ ಶೆಟ್ಟಿ, ಯುವ ವಿಭಾಗದ ಸಂಚಾಲಕ ಗಿರೀಶ್ ಶೆಟ್ಟಿ ತೆಳ್ಳಾರ್, ಸಂಚಾಲಕ ಬಾಲಕೃಷ್ಣ ರೈ ಕೊಲ್ಲಾಡಿ ಮೊದಲಾದವರು ಉಪಸ್ಥಿತರಿದ್ದರು.ಸಭೆಯಲ್ಲಿ ಹಿರಿಯಡ್ಕ ಬಂಟರ ಸಂಘದ ನೂತನ ಅಧ್ಯಕ್ಷ ರವೀಂದ್ರನಾಥ ಹೆಗ್ಡೆ, ಹೆಬ್ರಿ ಬಂಟರ ಸಂಘದ ಅಧ್ಯಕ್ಷ ಹರ್ಷ ಶೆಟ್ಟಿ, ಕುಂದಾಪುರ ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷ ಡಾ ಚೇತನ್ ಶೆಟ್ಟಿ ಕೋವಾಡಿ, ಮೂಡಬಿದ್ರೆ ಯುವ ಬಂಟರ ಸಂಘದ ಅಧ್ಯಕ್ಷ ಸಂದೀಪ್ ಶೆಟ್ಟಿ, ಸುರತ್ಕಲ್ ಬಂಟರ ಸಂಘದ ಯುವ ಸಮಿತಿಯ ಸಂಚಾಲಕ ಶಿಶಿರ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ವಿವಿಧ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.ಒಕ್ಕೂಟದ ಆಡಳಿತ ಮಂಡಳಿ ಸಭೆಯಲ್ಲಿ ತ್ರೈಮಾಸಿಕ ಲೆಕ್ಕಪತ್ರಗಳ ಮಂಡನೆ, ವರದಿ ವಾಚನ, ಲೆಕ್ಕಪತ್ರಗಳಿಗೆ ಮಂಜೂರಾತಿ, ಫಲಾನುಭವಿಗಳಿಗೆ ನೀಡಲ್ಪಟ್ಟ ಆರ್ಥಿಕ ಸಹಾಯಧನಕ್ಕೆ ಮಂಜೂರಾತಿ ಪಡೆಯಲಾಯಿತು. 30 ನೇ ವಾರ್ಷಿಕ ಮಹಾಸಭೆಗೆ ದಿನ ನಿಗದಿಪಡಿಸಲಾಯಿತು.ಐಕಳ ಹರೀಶ್ ಶೆಟ್ಟಿ ಸ್ವಾಗತಿಸಿದರು. ಗಿರೀಶ್ ಶೆಟ್ಟಿ ವಂದಿಸಿದರು. ಅನೂಪ್ ಶೆಟ್ಟಿ ಸುರತ್ಕಲ್ ಪ್ರಾರ್ಥಿಸಿದರು. ಡಾ ಪ್ರಿಯಾ ಶೆಟ್ಟಿ, ಡಾ ಮಂಜುಳಾ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

ಪ್ರಾದೇಶಿಕ ವಾರ್ತೆಗಳು

ಆ.30ರಂದು ಹಿರಿಯ ನಾಗರಿಕರ ದಿನಾಚರಣೆ

ಮಂಗಳೂರು : ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕ, ರೋಟರಿ ಇಂಟರ್‌ನ್ಯಾಶನಲ್ ಜಿಲ್ಲೆ ೩೧೮೧, ದ.ಕ.ಜಿಲ್ಲಾ ಮಾಜಿ ಸೈನಿಕರ ಸಂಘ, ಮಂಥನ ಓಜಸ್ ಟ್ರಸ್ಟ್ ಮತ್ತು ದ.ಕ. ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ “ಧನ್ಯತಾ” ಹಿರಿಯ ನಾಗರಿಕರ ದಿನಾಚರಣೆ ಆ.30ರಂದು ಬೆಳಗ್ಗೆ 9ಕ್ಕೆ ರೆಡ್‌ಕ್ರಾಸ್ ಶತಮಾನೋತ್ಸವಭವನದ ಪ್ರೇರಣಾ ಸಭಾಂಗಣದಲ್ಲಿ ನಡೆಯಲಿದೆ. ರೋಟರಿ ಜಿಲ್ಲೆ ೩೧೮೧ ಗವರ್ನರ್ ಸತೀಶ್ ಬೋಳಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್, ಸಂಸದ ಕ್ಯಾ.ಬ್ರಿಜೇಶ್ ಚೌಟ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ದ.ಕ.ಜಿಲ್ಲಾ ರೆಡ್‌ಕ್ರಾಸ್ ಸೊಸೈಟಿಯ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಮಾಜಿ ಸೈನಿಕರ ಸಂಘದ ಉಪಾಧ್ಯಕ್ಷ ಕರ್ನಲ್ ಎ.ಕೆ.ಜಯಚಂದ್ರನ್, ಮಂಥನ ಓಜಸ್ ಟ್ರಸ್ಟ್ ನ‌ ಅಧ್ಯಕ್ಷೆ ಮಂಗಳಾ ನಂದಕುಮಾರ್,ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್., ರೋಟರಿ ಸಂಧ್ಯಾ ಸುರಕ್ಷಾ ಯೋಜನೆಯ ಚೇರ್ಮನ್ ಅನಿಲ್ ರಾವ್ ಉಪಸ್ಥಿತರಿರುವರು. ಇದೇ ಸಂದರ್ಭ ಹಿರಿಯ ನಾಗರಿಕರಿಗಾಗಿ ಯೇನೆಪೊಯ ಆಯುರ್ವೇದ ವೈದ್ಯಕೀಯ ಕಾಲೇಜಿನ ಸಹಯೋಗದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ಶ್ರೀನಿವಾಸ್ ಇನ್‌ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸಸ್ ಸಹಯೋಗದಲ್ಲಿ ಉಚಿತ ದಂತ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಾದೇಶಿಕ ವಾರ್ತೆಗಳು

ಹಿರಿಯರ ಮಾರ್ಗದರ್ಶನ ದಾರಿದೀಪ-ಅನಿಲ್ ರಾವ್

ಮಂಗಳೂರು : ಹಿರಿಯರನ್ನು ಗೌರವಿಸುವುದು ನಮ್ಮ ಸಂಸ್ಕೃತಿ ಮತ್ತು ಪರಂಪರೆಯ ಪ್ರತೀಕವಾಗಿದೆ. ಅವರ ಅನುಭವ ಹಾಗೂ ಮಾರ್ಗದರ್ಶನ ಉತ್ತಮ ಸಮಾಜ ನಿರ್ಮಾಣಕ್ಕೆ ದಾರಿದೀಪ ಎಂದು ರೋಟರಿ ಸಂಧ್ಯಾ ಸುರಕ್ಷಾ ಜಿಲ್ಲಾ ಯೋಜನೆಯ ಚೇರ್ಮನ್ ಅನಿಲ್ ರಾವ್ ಹೇಳಿದರು. ರೋಟರಿ ಜಿಲ್ಲೆ 3181 ದ.ಕ.ಜಿಲ್ಲಾ ರೆಡ್ ಕ್ರಾಸ್ ಸೊಸೈಟಿ ಮತ್ತು ಮಂಥನ ಓಜಸ್ ಎನ್‌ಜಿಒ ಟ್ರಸ್ಟ್ ವತಿಯಿಂದ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಭಾನುವಾರ ರೆಡ್‌ಕ್ರಾಸ್‌ನ ಪ್ರೇರಣಾ ಸಭಾಂಗಣದಲ್ಲಿ ಹಿರಿಯ ನಾಗರಿಕರಿಗೆ ಏರ್ಪಡಿಸಿದ್ದ ಸ್ಪರ್ಧಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಜಿಲ್ಲಾ ರೆಡ್‌ಕ್ರಾಸ್ ಸೊಸೈಟಿಯ ಆಡಳಿತ ಮಂಡಳಿ ನಿರ್ದೇಶಕ ಪಿ.ಬಿ.ಹರೀಶ್ ರೈ ಮುಖ್ಯ ಅತಿಥಿಯಾಗಿದ್ದರು. ಮಂಥನ ಓಜಸ್ ಟ್ರಸ್ಟ್‌ ನ ಗೌರವಾಧ್ಯಕ್ಷ ನಂದ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.ಸ್ಪರ್ಧೆಗಳ ತೀರ್ಪುಗಾರರಾಗಿ ಪ್ರತಿಭಾ ಸಾಲಿಯನ್, ಸ್ವರ್ಣಶ್ರೀ, ಲತಾ.ಕೆ. ಮತ್ತು ತನ್ಮಯ್ ಭಾಗವಹಿಸಿದ್ದರು. ಮಂಥನ ಓಜಸ್ ಟ್ರಸ್ಟ್ ನ‌ ಸಂಸ್ಥಾಪಕಿ ಮಂಗಳಾ ನಂದಕುಮಾರ್ ಕಾರ್ಯಕ್ರಮ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ಸಂಶೋಧನೆಯಿಂದ ದೇಶದ ಅಭಿವೃದ್ಧಿಗೆ ಕೊಡುಗೆ -ಡಾ. ಅರುಣಕುಮಾರ್.ಶೆಟ್ಟಿ.ಎನ್.

ಮಂಗಳೂರು: ವಿಜ್ಞಾನ ಮತ್ತು ತಂತ್ರಜ್ಞಾನದ ಕ್ಷೇತ್ರದಲ್ಲಿ ಭಾರತ ನಿರಂತರ ಮುನ್ನಡೆದಿದೆ. ಸಂಶೋಧನೆಗಳ ಮೂಲಕ ವಿಜ್ಞಾನಿಗಳು ದೇಶದ ಅಭಿವೃದ್ಧಿಗೆ ನೀಡುತ್ತಿರುವ ಕೊಡುಗೆ ಅಪಾರ. ಯುವ ಜನತೆ ಆವಿಷ್ಕಾರ, ಸಹಯೋಗ ಮತ್ತು ನಾಯಕತ್ವವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ದೇಶದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ. ಅರುಣಕುಮಾರ್.ಶೆಟ್ಟಿ.ಎನ್. ಹೇಳಿದರು. ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ಮತ್ತು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ವತಿಯಿಂದ ಶುಕ್ರವಾರ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ನಡೆದ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಬಾಹ್ಯಾಕಾಶ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ಮೂರು ದಿನಗಳ ಕಾಲವಿವಿಧ ಮಾಹಿತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.ಕಾರ್ಯಕ್ರಮ ಉದ್ಘಾಟಿಸಿದ ದ.ಕ.ಜಿಲ್ಲಾ ರೆಡ್‌ಕ್ರಾಸ್ ಸೊಸೈಟಿಯ ನಿರ್ದೇಶಕ ಪಿ.ಬಿ.ಹರೀಶ್ ರೈ ಮಾತನಾಡಿ ” ಚಂದ್ರಯಾನ -3 ಐತಿಹಾಸಿಕ ಸಾಧನೆಯ ನೆನಪಿಗಾಗಿಬಾಹ್ಯಾಕಾಶ ದಿನ ಆಚರಿಸಲಾಗುತ್ತಿದೆ ಎಂದರು. ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕ ಡಾ. ಅಶೋಕ್ ಕೆ.ಆರ್. ಮಾತನಾಡಿ ವಿದ್ಯಾರ್ಥಿಗಳು ಪ್ರತಿಯೊಂದು ವಿಷಯವನ್ನು ವೈಜ್ಞಾನಿಕ ದೃಷ್ಟಿಕೋನದಿಂದ ಗಮನಿಸಿ, ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು ‘ಎಂದರು. ಶೈಕ್ಷಣಿಕ ಸಹಾಯಕಿ ಚಂಚಲಾಕ್ಷಿ ಸ್ವಾಗತಿಸಿ, ವೈಜ್ಞಾನಿಕಅಧಿಕಾರಿ ವಿಘ್ನೇಶ್ ಭಟ್ ವಂದಿಸಿದರು. ಕೇಂದ್ರದ ಕ್ಯುರೇಟರ್ ಜಗನ್ನಾಥ್ ಕಾರ್ಯಕ್ರಮ ರೂಪಿಸಿದರು.ಬಳಿಕ ನಡೆದ ಕಾರ್ಯಾಗಾರದಲ್ಲಿ ಅಮೆಚೂರ್ ರೇಡಿಯೊ ಕ್ಲಬ್ ಅಧ್ಯಕ್ಷ ರೋಹಿತ್.ಎಸ್. ರಾವ್ ಅವರು ಹ್ಯಾಮ್ ರೇಡಿಯೊ ಬಗ್ಗೆ ಡಾ. ಪ್ರಹಾಸ್ ಅಮೀನ್ ಅವರು ಆಸ್ಟ್ರೋ ಫೋಟೊಗ್ರಾಫಿ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದರು.

ಪ್ರಾದೇಶಿಕ ವಾರ್ತೆಗಳು

ನಿಸ್ವಾರ್ಥ ಸೇವೆಗೆ ಯೂತ್ ರೆಡ್ ಕ್ರಾಸ್ ಪ್ರೇರಣೆ -ಪ್ರೊ.ಜಯಂತ ನಾಯಕ್

ಮಂಗಳೂರು : ಮಾನವೀಯ ಸೇವೆಯೇ ರೆಡ್‌ಕ್ರಾಸ್ ಸಂಘಟನೆಯ ಧ್ಯೇಯವಾಗಿದೆ. ವಿದ್ಯಾರ್ಥಿಗಳು ಭವಿಷ್ಯದಲ್ಲಿ ಪ್ರಥಮ ಚಿಕಿತ್ಸೆ, ಆಪತ್ಕಾಲದಲ್ಲಿ ಸಹಾಯ, ವಿಪತ್ತು ನಿರ್ವಹಣೆ, ರಕ್ತದಾನದಂತಹ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಯೂತ್ ರೆಡ್‌ಕ್ರಾಸ್ ಪ್ರೇರಣೆ ನೀಡುತ್ತಿದೆ ಎಂದು ನಗರದ ವಿ.ವಿ.ಕಾಲೇಜಿನ ಪ್ರಾಂಶುಪಾಲ ಪ್ರೊ.ಜಯಂತ ನಾಯಕ್ ಹೇಳಿದರು. ಯೂತ್ ರೆಡ್ ಕ್ರಾಸ್ ಮಂಗಳೂರು ವಿ.ವಿ. ಇದರ ವತಿಯಿಂದ ನಗರದ ವಿ.ವಿ.ಕಾಲೇಜಿನ ಯೂತ್ ರೆಡ್ ಕ್ರಾಸ್ ಘಟಕದ ಸಹಯೋಗದಲ್ಲಿ ವಿಶ್ವ ಜಿನೀವಾ ಒಪ್ಪಂದ ದಿನಾಚರಣೆ ಅಂಗವಾಗಿ ವಿ.ವಿ.ಕಾಲೇಜಿನ ಶಿವರಾಮ ಕಾರಂತ ಸಭಾ ಭವನದಲ್ಲಿ ಶನಿವಾರ ನಡೆದ ರಸಪ್ರಶ್ನೆ ಸ್ಪರ್ಧೆಯ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಕಾರ್ಯಕ್ರಮ ಉದ್ಘಾಟಿಸಿದ ದ.ಕ.ಜಿಲ್ಲಾ ರೆಡ್‌ಕ್ರಾಸ್ ಸೊಸೈಟಿಯ ನಿರ್ದೇಶಕ ಪಿ.ಬಿ.ಹರೀಶ್ ರೈ ಮಾತನಾಡಿ ” ವಿದ್ಯಾರ್ಥಿಗಳು ಕೇವಲ ಪಠ್ಯ ಕಲಿಕೆಗೆ ಸೀಮಿತರಾಗದೆ ಯೂತ್ ರೆಡ್‌ಕ್ರಾಸ್ ,ಎನ್‌ಸಿಸಿ, ಎನ್‌ಎಸ್‌ಎಸ್ ಚಟುವಟಿಕೆಗಳಲ್ಲಿ ಭಾಗಿಯಾದರೆ ಬದುಕಿನ ಸವಾಲುಗಳನ್ನು ಎದುರಿಸಲು ಶಕ್ತರಾಗುತ್ತಾರೆ’ ಎಂದರು.ಮಂಗಳೂರು ವಿ.ವಿ. ಯೂತ್ ರೆಡ್ ಕ್ರಾಸ್ ನೋಡಲ್ ಅಧಿಕಾರಿ ಡಾ.ಗಾಯತ್ರಿ.ಎನ್. ಮಾತನಾಡಿ “ಯುದ್ಧದ ಸಮಯದಲ್ಲಿ ಮಾನವೀಯತೆ ಕಾಪಾಡಲು ನೆರವಾಗುವ ಜಿನೀವಾ ಒಪ್ಪಂದದ ಬಗ್ಗೆ ವಿದ್ಯಾರ್ಥಿಗಳಲ್ಲಿ ಹೆಚ್ಚಿನ ಅರಿವು ಮೂಡಿಸಲು ರಸಪ್ರಶ್ನೆ ಸ್ಪರ್ಧೆ ಆಯೋಜಿಸಲಾಗಿದೆ’ ಎಂದರು.ವಿ.ವಿ.ಕಾಲೇಜಿನ ಯೂತ್ ರೆಡ್‌ಕ್ರಾಸ್ ಯೋಜನಾಧಿಕಾರಿ ಡಾ.ಭಾರತಿ ಪಿಲಾರ್ ಸ್ವಾಗತಿಸಿದರು. ವಿದ್ಯಾರ್ಥಿನಿ ಯಶಸ್ವಿ.ಎಸ್. ಕಾರ್ಯಕ್ರಮ ನಿರೂಪಿಸಿದರು. ರಸಪ್ರಶ್ನೆ ಸ್ಪರ್ಧೆ ವಿಜೇತರುವಿಶ್ವ ಜಿನೀವಾ ಒಪ್ಪಂದ ದಿನಾಚರಣೆ ಅಂಗವಾಗಿ ಏರ್ಪಡಿಸಿದ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಂಡಾರ್‌ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು ಕುಂದಾಪುರ ತಂಡ ಪ್ರಥಮ, ಹಿರಾ ಮಹಿಳಾ ಕಾಲೇಜು ತಂಡ ಮಂಗಳೂರು ದ್ವಿತೀಯ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಾವೂರು “ಬಿ”ತಂಡ ತೃತೀಯ ಸ್ಥಾನ ಪಡೆದವು. ವಿವಿಧ ಕಾಲೇಜುಗಳ ಒಟ್ಟು 18 ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು.

ಪ್ರಾದೇಶಿಕ ವಾರ್ತೆಗಳು

ಕಿಂಗ್ಸ್ ಚೆಸ್ ಅಕಾಡೆಮಿಯಿಂದ ಫಿಡೆ ರೇಟಿಂಗ್ ಟೂರ್ನಿ:ಮಕ್ಕಳಲ್ಲಿ ಏಕಾಗ್ರತೆ ಬೆಳೆಸಲು ಚೆಸ್ ಸಹಕಾರಿ -ವಕೀಲ ರಾಘವೇಂದ್ರ ರಾವ್

ಮಂಗಳೂರು: ಕಿಂಗ್ಸ್ ಚೆಸ್ ಅಕಾಡೆಮಿ ವತಿಯಿಂದ ನಗರದ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದ ಸಭಾ ಭವನದಲ್ಲಿ ಭಾನುವಾರ 13ನೇ ಕೆಸಿಎ ಟ್ರೋಫಿ ಆಲ್ ಇಂಡಿಯಾ ಮುಕ್ತ ಫಿಡೆ ರೇಟಿಂಗ್ ಚೆಸ್ ಟೂರ್ನಿ ನಡೆಯಿತು. ಟೂರ್ನಿಗೆ ಚಾಲನೆ ನೀಡಿದ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ನಿರ್ದೇಶಕ ,ವಕೀಲ ರಾಘವೇಂದ್ರ ರಾವ್ ಮಾತನಾಡಿ ” ಚೆಸ್ ಬೌದ್ಧಿಕ ಶಕ್ತಿಯ ಆಟವಾಗಿದ್ದು ಆಳವಾದ ಯೋಚನೆ ಮತ್ತು ತಂತ್ರಗಾರಿಕೆಯಿಂದ ಗೆಲುವು ಸಾಧಿಸಲಾಗುತ್ತದೆ. ಮಕ್ಕಳಲ್ಲಿ ಏಕಾಗ್ರತೆ, ಸಂಯಮ ಮತ್ತು ಜ್ಞಾನಶಕ್ತಿ ಬೆಳೆಸಲು ಚೆಸ್ ಆಟ ಅತ್ಯಂತ ಸಹಕಾರಿಯಾಗಿದೆ’ ಎಂದರು.ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಲಕ್ಷ್ಮಣ ಅಮೀನ್ ಕೋಡಿಕಲ್ ಮಾತನಾಡಿ ” ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಪೂರಕವಾದ ಕ್ರೀಡೆಯಲ್ಲಿ ಬಾಲ್ಯದಲ್ಲೇ ಮಕ್ಕಳು ತೊಡಗಿಸಿಕೊಳ್ಳಲು ಹೆತ್ತವರು ಪ್ರೋತ್ಸಾಹ ನೀಡಬೇಕು’ಎಂದರು.ಮುಖ್ಯ ಅತಿಥಿಯಾಗಿದ್ದ ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಶುಭ ಹಾರೈಸಿದರು. ಕಿಂಗ್ಸ್ ಚೆಸ್ ಅಕಾಡೆಮಿಯ ತರಬೇತುದಾರ ಪ್ರವೀಣ್ ಕಾಮತ್, ಟೂರ್ನಿಯ ಸಂಘಟಕರಾದ ವಿಜಯರಾಜ್ ಪೈ, ಅನೂಪ್ ಕಾಮತ್, ಶರತ್ ಕುಮಾರ್, ವಿನಯ್ ಕಾಮತ್ ಉಪಸ್ಥಿತರಿದ್ದರು. ಚೆಸ್ ತರಬೇತುದಾರ ಬಾಬು ಪೂಜಾರಿ ಉಪ್ಪುಂದ ಕಾರ್ಯಕ್ರಮ ನಿರೂಪಿಸಿದರು.250 ಫಿಡೆ ರೇಟೆಡ್ ಆಟಗಾರರು ಸೇರಿದಂತೆ ವಿವಿಧ ರಾಜ್ಯಗಳ ಒಟ್ಟು 565 ಆಟಗಾರರು ಟೂರ್ನಿಯ ವಿವಿಧ ವಯೋಮಾನ‌ ವಿಭಾಗ ಹಾಗೂ ಮುಕ್ತ ವಿಭಾಗದ ಸ್ಪರ್ಧೆಗಳಲ್ಲಿ ಭಾಗವಹಿಸಿದರು.

ಪ್ರಾದೇಶಿಕ ವಾರ್ತೆಗಳು

ಸ್ವಾತಂತ್ರ್ಯ ದಿನಾಚರಣೆ: ರೆಡ್‌ ಕ್ರಾಸ್ ಸೊಸೈಟಿ ದ.ಕ.ಜಿಲ್ಲಾ ಘಟಕ

ಇಂಡಿಯನ್ ರೆಡ್‌ ಕ್ರಾಸ್ ಸೊಸೈಟಿ ದ.ಕ.ಜಿಲ್ಲಾ ಘಟಕದ ವತಿಯಿಂದ ಸಂಸ್ಥೆಯ ಶತಮಾನೋತ್ಸವ ಕಟ್ಟಡದ ಮುಂಭಾಗದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ನಿವೃತ್ತ ಯೋಧ ಸುಬೇದಾರ್ ಶಶಾಂಕ ನಾಯಕ್.ಎಸ್. ಧ್ವಜಾರೋಹಣ ನೆರವೇರಿಸಿದರು. ರೆಡ್‌ ಕ್ರಾಸ್ ಸೊಸೈಟಿಯ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ, ಉಪಾಧ್ಯಕ್ಷ ಡಾ.ಸಚ್ಚಿದಾನಂದ ರೈ, ಖಜಾಂಜಿ ಗುರುದತ್ ನಾಯಕ್, ಕಾರ್ಯದರ್ಶಿ ಡಾ.ಸತೀಶ್ ಕುಮಾರ್ ಶೆಟ್ಟಿ, ನಿರ್ದೇಶಕರಾದ ಡಾ.ಸತೀಶ್ ರಾವ್, ಪಿ.ಬಿ.ಹರೀಶ್ ರೈ, ಡಾ.ಸುಮನ.ಬಿ., ರಾಘವೇಂದ್ರ ರಾವ್, ನಿವೃತ್ತ ಎಡಿಸಿ ಪ್ರಭಾಕರ ಶರ್ಮ, ನಿವೃತ್ತ ಎಸ್‌ಐ ನಾರಾಯಣ, ವಿಜಯ ಬ್ಯಾಂಕ್‌ನ ನಿವೃತ್ತ ಎಜಿಎಂ ಕಿಶೋರ್‌ಚಂದ್ರ ಹೆಗ್ಡೆ, ವಕೀಲ ಜಿನೇಂದ್ರಕುಮಾರ್, ಮಿತ್ರಾ ಶಶಾಂಕ ನಾಯಕ್ ಹಾಗೂ ಯೂತ್ ರೆಡ್‌ಕ್ರಾಸ್ ಸ್ವಯಂ ಸೇವಕರು ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ಸಮಾಜದಲ್ಲಿ ಕಷ್ಟದಲ್ಲಿರುವವರಿಗೆ ಸಹಾಯ ಮಾಡಿದ ಸಂತೃಪ್ತಿ ನನಗಿದೆ-ಹರಿಕೃಷ್ಣ ಪುನರೂರು. *ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ವೆಬ್ ಸೈಟ್ ಅನಾವರಣ

ಮಂಗಳೂರು,ಆ.24;ಸಮಾಜದಲ್ಲಿ ಕಷ್ಟದಲ್ಲಿರುವವರಿಗೆ ನನ್ನ ಇಳಿ ವಯಸ್ಸಿನವರೆಗೂ ನನ್ನಿಂದಾಗುವ ಸಹಾಯ ಮಾಡಿದ್ದೇನೆ ಎಂಬ ಆತ್ಮ ತೃಪ್ತಿ ನನಗಿದೆ.ಕೊಟ್ಟದ್ದು ತನಗೆ ಬಚ್ಚಿಟ್ಟದ್ದು ಪರರಿಗೆ ಎಂಬ ಮಾತಿನಂತೆ ನಾನು ಕಾರ್ಯ ನಿರ್ವಹಿಸುತ್ತಾ ಬಂದಿದ್ದೇನೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಪೂರ್ವಾಧ್ಯಕ್ಷರಾದ ಹರಿಕೃಷ್ಣ ಪುನರೂರು ತಿಳಿಸಿದ್ದಾರೆ. ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ವೆಬ್ ಸೈಟ್(dkwju.com)ನ್ನು ಅವರು ಸೋಮವಾರ ನಗರದ ಪತ್ರಿಕಾಭವನದಲ್ಲಿ ಅನಾವರಣಗೊಳಿಸಿ ಮಾತನಾಡುತ್ತಾ,ಕನ್ನಡ ಸಾಹಿತ್ಯ ಪರಿಷತ್ತಿನಅಧ್ಯಕ್ಷನಾಗಿ ಕನ್ನಡದ ಕೆಲಸ ಮಾಡಿರುವುದರ ಜೊತೆಗೆ ಮನೆಯಿಲ್ಲದವರಿಗೆ ಸರಕಾರದ ನೆರವಿನಿಂದ ಮನೆ ನಿರ್ಮಿಸಲು ಸಹಾಯ ಮಾಡಿದ್ದೇನೆ ಮತ್ತು ಮನೆ ಇಲ್ಲದವರಿಗೆ 101 ಮನೆಯನ್ನು ನಾನೇ ಉಚಿತವಾಗಿ ನಿರ್ಮಿಸಿ ಕೊಟ್ಟಿದ್ದೇನೆ, ಖ್ಯಾತ ನೇತ್ರ ತಜ್ಞ ಡಾ.ಮೋದಿಯವರ ಮೂಲಕ ಸಾಕಷ್ಟು ಕಣ್ಣಿನ ತಪಾಸಣೆ ಶಿಬಿರಗಳನ್ನು ಮಾಡಿ ಅವರಿಗೆ ಆರ್ಥಿಕ ಸಹಾಯ ಮಾಡಲು ಸಾಧ್ಯ ವಾಗಿದೆ, ಊರಿನಲ್ಲಿ ಸರಕಾರಿ ಕನ್ನಡ ಶಾಲೆನಿರ್ಮಿಸಿದ ತೃಪ್ತಿ ಇದೆ, ಈ ರೀತಿಯ ಸಮಾಜಸೇವಾ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು ನನ್ನ ಪತ್ನಿಯ ಸಹಕಾರವು ದೊರೆತಿದೆ, ದೇವರು ಆರೋಗ್ಯ ನೀಡಿದ್ದಾರೆ. ಆರೋಗ್ಯ ಚೆನ್ನಾಗಿರುವವರೆಗೆ ಈ ರೀತಿಯ ಚಟುವಟಿಕೆಗಳನ್ನು ನಡೆಸುವ ಇಚ್ಛೆ ಇದೆ.ಪತ್ರಕರ್ತರ ಗೃಹ ನಿರ್ಮಾಣ ಸಹಕಾರಿ ಸಂಘಕ್ಕೆ ಈಗಾಗಲೇ ನೀಡಿದ ಭರವಸೆಯಂತೆ ಸಹಕಾರ ನೀಡುವುದಾಗಿ ತಿಳಿಸಿ ಶುಭ ಹಾರೈಸಿದರು.ಮಂಗಳೂರು ಪ್ರೆಸ್ ಕ್ಲಬ್ ನ ಅಧ್ಯಕ್ಷರಾದ ಪಿ.ಬಿ.ಹರೀಶ್ ರೈ ಮಾತನಾಡುತ್ತಾ,ಹರಿಕೃಷ್ಣ ಪುನರೂರು ಅವರು ಸುದೀರ್ಘ ಕಾಲ ಸಮಾಜದ ವಿವಿಧ ಸಮಾಜ ಸೇವಾ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿ ಕೊಂಡವರು. ಅವರ ಬಗ್ಗೆ ಈಗಾಗಲೇ ಒಂದು ಕೃತಿ ಬಿಡುಗಡೆಯಾಗಿದೆ. ಅದರಲ್ಲಿ ಸಾಕಷ್ಟು ವಿವರಗಳಿವೆ ಎಂದರು.ಸಮಾರಂಭದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್ ವಹಿಸಿದ್ದರು.ದಕ್ಷಿಣ ಕನ್ನಡ ಪತ್ರಕರ್ತರ ಗೃಹ ನಿರ್ಮಾಣ ಸಹಕಾರಿ ಸಂಘ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ವೇದಿಕೆ ಯಲ್ಲಿ ಉಪಸ್ಥಿತರಿದ್ದರು. ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಕೋಶಾಧಿಕಾರಿ ವಿಜಯ ಕೋಟ್ಯಾನ್ ಪಡು ಮತ್ತು ಗೃಹ ನಿರ್ಮಾಣ ಸಹಕಾರಿ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ಕಾರ್ಯಕ್ರಮ ನಿರೂಪಿಸಿದರು.ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಶ್ ಪೂಜಾರಿ ಕೆ ವಂದಿಸಿದರು.

ಪ್ರಾದೇಶಿಕ ವಾರ್ತೆಗಳು

ಮುಹಮ್ಮದ್ ನಬಿಸ್ವಲ್ಲಲ್ಲಾಹು ಅಲೈಹಿ ವಸಲ್ಲಮರ 1501ನೇ ಮೀಲಾದುನ್ನಬೀ (ಸ) ಪ್ರಯುಕ್ತ ಮೀಲಾದ್ ರ‍್ಯಾಲಿ

ಮಂಗಳೂರು :ಬಜಾಲ್ ನಂತೂರು ಹಯಾತುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದ್ರಸ ಮತ್ತು ಫೈಸಲ್ ನಗರ ನಮಾಉಲ್ ಇಸ್ಲಾಂ ಮದ್ರಸ ಹಾಗೂ ಶಾಂತಿನಗರ ತರ್ಬಿಯತುಲ್ ಇಸ್ಲಾಂ ಕಮಿಟಿ ಇವುಗಳ ಜಂಟಿ ಆಶ್ರಯದಲ್ಲಿ ಮೀಲಾದ್ ರ‍್ಯಾಲಿ ನಡೆಯಿತು. ಬದ್ರಿಯಾ ಜುಮಾ ಮಸೀದಿ ಖತೀಬರಾದ ಅಬ್ದುಲ್ ನಾಸಿರ್ ಸಅದಿಯವರು ದುಆ ಮಾಡಿ ಅಧ್ಯಕ್ಷರಾದ ಅಬ್ದುಲ್ ರವೂಫ್ ರವರು ಧ್ವಜಾರೋಹಣ ನೆರವೇರಿಸಿ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಹಯಾತುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದ್ರಸ ಸದರ್ ಉಸ್ತಾದ್ ಅಬ್ದುಲ್ ಹಕೀಂ ಮದನಿ ಗೌಸಿಯಾ ಜುಮಾ ಮಸೀದಿ ಖತೀಬರಾದ ಇಕ್ಬಾಲ್ ನಿಝಾಮಿ ತರ್ಬಿಯತುಲ್ ಇಸ್ಲಾಂ ಕಮಿಟಿ ಇಮಾಮರಾದ ಮಿಖ್ದಾದ್ ಹಾಶಿಮಿ ಹಾಗೂ ಬದ್ರಿಯಾ ಜುಮಾ ಮಸೀದಿ ಮಾಜಿ ಅಧ್ಯಕ್ಷರಾದ ಅಬ್ಬಾಸ್ ಹಾಜಿ ಉಪಾಧ್ಯಕ್ಷರಾದ ಅಶ್ರಫ್ ಕರಿಬೊಟ್ಪು ಹನೀಫ್ ಹಾಜಿ, ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಮೀದ್,ಮಾಜಿ ಕಾರ್ಯದರ್ಶಿ ಪೊಡಿಯಾಕ, ಕೋಶಾಧಿಕಾರಿ ನಝೀರ್ ಪಾಂಡೇಲ್ ಉಸ್ತುವಾರಕರಾದ ನಝೀರ್ ಬಜಾಲ್, ಅಶ್ರಫ್ ತೋಟ, ಗೌಸಿಯಾ ಮಸೀದಿ ಅಧ್ಯಕ್ಷರಾದ ಅಬ್ದುಲ್ ರಝಾಕ್ ಹಾಜಿ, ಬದ್ರಿಯಾ ಜುಮಾ ಮಸೀದಿ ಜೊತೆ ಕಾರ್ಯದರ್ಶಿ ಮುಹಮ್ಮದ್ ಹನೀಫ್ ಕೆಳಗಿನ ಮನೆ, ಸದಸ್ಯರಾದ ಇಕ್ಬಾಲ್ ಅಹ್ಸನಿ,ಯೂಸುಫ್ ಕುಂಬ್ಳಲಿಕೆ ಹಾಗೂ ಮದ್ರಸಾ ಅಧ್ಯಕ್ಷರು ಮತ್ತು ಊರಿನ ಹಿರಿಯರೂ ಹಾಜರಿದ್ದರು, ಪ್ರಸ್ತುತ ರ್ಯಾಲಿಯಲ್ಲಿ ದಫ್ ಸ್ಕೌಟ್ ಮತ್ತು ಫ್ಲವರ್ ಶೋ ಪ್ರದರ್ಶನ ಮತ್ತು ಸಿಹಿ ತಿಂಡಿ ತಂಪು ಪಾನೀಯ ನೀಡಲಾಯಿತು. ರ್ಯಾಲಿಯು ಹಯಾತುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದ್ರಸ ವಠಾರ ದಿಂದ ಪ್ರಾರಂಭಿಸಿದ ರ್ಯಾಲಿಯು ಫೈಸಲ್ ನಗರ ಶಾಂತಿನಗರ ಪಾಂಡೇಲ್ ಮಾರ್ಗ ವಾಗಿ ರ್ಯಾಲಿ ನಡೆಯಿತು. ರ್ಯಾಲಿಯ ಕೊನೆಯಲ್ಲಿ ದುಆ ದೊಂದಿಗೆ ವಿರಾಮ ನೀಡಲಾಯಿತು.

ಪ್ರಾದೇಶಿಕ ವಾರ್ತೆಗಳು

ಪತ್ರಕರ್ತ-ರಂಗನಟ ನರೇಂದ್ರ ಕೆರೆಕಾಡು ಅವರಿಗೆ ಮಾತೃ ವಿಯೋಗ

ಮಂಗಳೂರು: ಪತ್ರಕರ್ತ ಹಾಗೂ ಸಿನಿಮಾ ರಂಗಭೂಮಿ ಕಲಾವಿದ ನರೇಂದ್ರ ಕೆರೆಕಾಡು ಅವರ ಮಾತೃಶ್ರೀ ಮೂಲ್ಕಿಯ ಕೆರೆಕಾಡು ಸ್ವಾತಂತ್ರ್ಯ ಸೇನಾನಿ ದಿ.ಸೋಮಪ್ಪ ಪೂಜಾರಿ ಅವರ ಮನೆತನದ “ನಮ್ಮನೆ” ನಿವಾಸಿ ಮೋನಪ್ಪ ಪೂಜಾರಿ ಅವರ ಧರ್ಮಪತ್ನಿ ಶ್ರೀಮತಿ ಲಕ್ಷ್ಮೀ ಪೂಜಾರ್ತಿ (81) ಅವರು ಹೃದಯಾಘಾತದಿಂದ ಆಗಸ್ಟ್ 22ರಂದು ನಿಧನರಾಗಿದ್ದಾರೆ.ಅವರು ಪುತ್ರ ನರೇಂದ್ರ ಕೆರೆಕಾಡು ಸಹಿತ ಪುತ್ರಿ ಜಾಗೂ ಪತಿಯನ್ನು ಅಗಲಿದ್ದಾರೆ.ಅವರ ಅಂತ್ಯ ಸಂಸ್ಕಾರದ ಅಂತಿಮ ವಿಧಿ ವಿಧಾನವು ಬಪ್ಪನಾಡುವಿನ ಬಡಗುಹಿತ್ಲುವಿನಲ್ಲಿ ನಡೆದು ಕೆರೆಕಾಡು ಸಾರ್ವಜನಿಕ ರುದ್ರಭೂಮಿಯಲ್ಲಿ ಶವ ಸಂಸ್ಕಾರ ನಡೆಯಿತು. ಕುಟುಂಬಿಕರು, ಆಪ್ತರು ಅಂತಿಮ ದರ್ಶನ ಪಡೆದರು.ಮೃತರ ಆತ್ಮಕ್ಕೆ ಅಂತಾರಾಷ್ಟ್ರೀಯ ವಾಸ್ತುತಜ್ಞರು, ಆಧ್ಯಾತ್ಮಿಕ ಗುರುಗಳಾದ ಅಂತರಾಷ್ಟ್ರೀಯ ವಾಸ್ತುತಜ್ಞರು ಹಾಗೂ ಆಧ್ಯಾತ್ಮಿಕ ಗುರುಗಳಾದ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ, ಯುವ ಉದ್ಯಮಿ ರಾಹುಲ್ ಚಂದ್ರಶೇಖರ್, ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ವಸಂತ ಬೆರ್ನಾರ್ಡ್, ಕಿನ್ನಿಗೋಳಿ ಯುಗಪುರುಷದ ಕೊಡೆತ್ತೂರು ಭುವನಾಭಿರಾಮ ಉಡುಪ, ನ್ಯಾಯವಾದಿ ಬಿಪಿನ್ ಪ್ರಸಾದ್ ಮೂಲ್ಕಿ, ಮೂಲ್ಕಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಮೋಹನ್ ಕೋಟ್ಯಾನ್ ಶಿಮಂತೂರು, ಮೂಲ್ಕಿ-ಮೂಡಬಿದಿರೆಯ ಬಿಜೆಪಿ ಮಂಡಲ ಅಧ್ಯಕ್ಷ ದಿನೇಶ್ ಪುತ್ರನ್, ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ವಾಮನ ಕೋಟ್ಯಾನ್ ನಡಿಕುದ್ರು, ಮೂಲ್ಕಿ ಯುವವಾಹಿನಿ ಘಟಕದ ಅಧ್ಯಕ್ಷೆ ಶ್ರೀಮತಿ ಚರಿಷ್ಮಾ ಶ್ರೀನಿವಾಸ್ ಬಪ್ಪನಾಡು, ಬಿರುವೆರ್ ಕುಡ್ಲ ಮೂಲ್ಕಿ ಘಟಕದ ಅಧ್ಯಕ್ಷ ಕಿಶೋರ್ ಸಾಲ್ಯಾನ್ ಬಪ್ಪನಾಡು, ಸಮಾಜ ಸೇವಕ ಗೋಪಿನಾಥ ಪಡಂಗ, ಮೂಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಮೂಲ್ಕಿ ರೋಟರಿ ಕ್ಲಬ್ ಅಧ್ಯಕ್ಷೆ ಶ್ರೀಮತಿ ಭಾನುಮತಿ ಶೆಟ್ಟಿ ಕಕ್ವಗುತ್ತು, ಮೂಲ್ಕಿ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಅಧ್ಯಕ್ಷ ಶ್ರೀನಿವಾಸ್ ಬಪ್ಪನಾಡು, ಕಿನ್ನಿಗೋಳಿ ವಿಜಯಾ ಕಲಾವಿದರು ಸಂಸ್ಥೆಯ ಅಧ್ಯಕ್ಷ ಶರತ್ ಶೆಟ್ಟಿ, ಕೆರೆಕಾಡು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಅಧ್ಯಕ್ಷ ರಾಜೇಶ್ ಕುಮಾರ್ ಪಿ.ಆರ್. ಮತ್ತಿತರರು ತೀವ್ರ ಸಂತಾಪ ಸೂಚಿಸಿದ್ದಾರೆ.

Scroll to Top