ಪ್ರಾದೇಶಿಕ ವಾರ್ತೆಗಳು

ಪ್ರಾದೇಶಿಕ ವಾರ್ತೆಗಳು

ಮುದ್ದು ಶಾರದೆ ಮತ್ತು ನವದುರ್ಗೆ ವೇಷ ಸ್ಪರ್ಧೆ. ‘ದಸರಾ ಆಚರಣೆ ಸಂಸ್ಕೃತಿಯ ಪ್ರತೀಕ’ -ಪದ್ಮರಾಜ್ ಆರ್

ಮಂಗಳೂರು : ದಸರಾ ಆಚರಣೆ ನಮ್ಮ ಸಂಸ್ಕೃತಿಯ ಪ್ರತೀಕವಾಗಿದ್ದು , ಉತ್ಸವಕ್ಕೆ ಇನ್ನಷ್ಟು ಮೆರುಗು ನೀಡುವ ಉದ್ದೇಶದಿಂದ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್.ಆರ್ .ಪೂಜಾರಿ ಹೇಳಿದರು.ಶರಧಿ ಪ್ರತಿಷ್ಠಾನದ ವತಿಯಿಂದ ಮಂಗಳೂರು ದಸರಾ ಅಂಗವಾಗಿ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಸಭಾಂಗಣದಲ್ಲಿ ಭಾನುವಾರ ನಡೆದ ಮುದ್ದು ಶಾರದೆ ಮತ್ತು ನವದುರ್ಗೆ ವೇಷ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು.ದಸರಾ ಅಂಗವಾಗಿ ಈ ಬಾರಿ ಮ್ಯಾರಥಾನ್, ಬಹುಭಾಷಾ ಕವಿಗೋಷ್ಠಿ ನಡೆಸಿದ್ದು, ಶರಧಿ ಪ್ರತಿಷ್ಠಾನದ ಮುದ್ದು ಶಾರದೆ ಸ್ಪರ್ಧೆಗೆ ಕುದ್ರೋಳಿ ಕ್ಷೇತ್ರದ ವತಿಯಿಂದ ಸಂಪೂರ್ಣ ಸಹಕಾರ ನೀಡಲಾಗಿದೆ ಎಂದರು. ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ, ಉದ್ಯಮಿ‌ ರಮೇಶ್ ನಾಯಕ್, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಶುಭ ಹಾರೈಸಿದರು.ಮಾಲತಿ ಜನಾರ್ದನ ಪೂಜಾರಿ,ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಕಾರ್ಯದರ್ಶಿ ಮಾಧವ ಸುವರ್ಣ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಅಮೃತ ವಿದ್ಯಾಲಯದ ಟ್ರಸ್ಟಿ ಯತೀಶ್ ಬೈಕಂಪಾಡಿ, ಅಮೃತ ವಿದ್ಯಾಲಯದ ಪ್ರಾಂಶುಪಾಲೆ ಅಕ್ಷತಾ ಶೆಣೈ , ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ಮಂಗಳೂರು ವಲಯ ಸಮಿತಿ ಅಧ್ಗಕ್ಷ ಹರೀಶ್ ಅಡ್ಯಾರ್ , ಕಲಾವಿದ ದಿನೇಶ್ ಹೊಳ್ಳ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.ಶರಧಿ ಪ್ರತಿಷ್ಠಾನ ಅಧ್ಯಕ್ಷೆ ಸೌಜನ್ಯ ಶೆಟ್ಟಿ, ಕಾರ್ಯದರ್ಶಿ ಪುನೀಕ್ ಶೆಟ್ಟಿ ಉಪಸ್ಥಿತರಿದ್ದರು.ಜಗದೀಶ್ ಶೆಟ್ಟಿ ಬಿಜೈ ಸ್ವಾಗತಿಸಿದರು. ಮಧ್ವರಾಜ್ ಕಾರ್ಯಕ್ರಮ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ಬಲ್ಮಠ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಮಾಧ್ಯಮ ಕಾರ್ಯಾಗಾರ

ಮಂಗಳೂರು, ಅಕ್ಟೋಬರ್ 5,ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಬಲ್ಮಠ, ಪರಿಸರ ಅಧ್ಯಯನ ಕೇಂದ್ರ ನೆಲ್ಲಿಗುಡ್ಡೆ,ಮೀಡಿಯಾ ಕ್ರಿಯೇಷನ್ಸ್ ಹಾಗೂ ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಸಹಭಾಗಿತ್ವದಲ್ಲಿ ವಿದ್ಯಾರ್ಥಿಗಳಿಗೆ ಮಾಧ್ಯಮ ಸಂವಾದ ಕಾರ್ಯಾಗಾರ ಬಲ್ಮಠ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ನಲ್ಲಿ ನಡೆಯಿತು.ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯ ಮಹಾ ಪ್ರಬಂಧಕ ಅರುಣ ಪ್ರಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಂಗಳೂರು ನಗರದ ಅಭಿವೃದ್ಧಿ ಸ್ವಚ್ಛತೆಗೆ ಎಲ್ಲರ ಸಹಕಾರ ಅಗತ್ಯ ಮಾಧ್ಯಮಗಳು ಸಮಾಜದ ಪ್ರಮುಖ ಅಂಗ ಎಂದು ಶುಭ ಹಾರೈಸಿದರು. ಮುಖ್ಯ ಅತಿಥಿ ಯಾಗಿ ಭಾಗವಹಿಸಿದ ಮಂಗಳೂರು ಮಹಾ ನಗರ ಪಾಲಿಕೆ ಉಪ ಆಯುಕ್ತ ಚಂದ್ರಶೇಖರ್ ಮಾತನಾಡಿ ಸಮಾಜದ ಬದಲಾವಣೆ ಯಲ್ಲಿ ಮಾಧ್ಯಮಗಳ ಪಾತ್ರ ಬಹಳಷ್ಟು ಇದೆ. ವಿದ್ಯಾರ್ಥಿಗಳು ಪ್ರತಿನಿತ್ಯ ಪತ್ರಿಕೆಗಳನ್ನು ಓದುವುದರ ಮೂಲಕ ಸಮಾಜದ ಆಗು ಹೋಗುಗಳನ್ನು ತಿಳಿದು ಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.ಸಮಾರಂಭದಲ್ಲಿ ರೋಟರಿ ಕ್ಲಬ್ ಮಂಗ ಳೂರು ಸೆಂಟ್ರಲ್ ಅಧ್ಯಕ್ಷ ಬ್ರಾಯನ್ ಪಿಂಟೋ,ಬಲ್ಮಠ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ನ್ಯಾಕ್ ಸಂಯೋಜಕಿ ಡಾ.ಮಂಜುಳಾ,ಟೆಕ್ನೊ ಪ್ರೊ ಸಾಫ್ಟ್‌ವೇರ್ ನಿರ್ದೇಶಕ ಜಿ.ಕೆ.ಭಟ್ ಉಪಸ್ಥಿತರಿದ್ದರು. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಮತ್ತು ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದರು.ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಸ್ವಾಗತಿಸಿ ಪ್ರಸ್ತಾವಿಕ ವಾಗಿ ಮಾತನಾಡಿದರು ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಪ್ರಾದೇಶಿಕ ವಾರ್ತೆಗಳು

ಗ್ರಾಮ ಪಂಚಾಯತ್ ಗಳ ಬಲವರ್ಧನೆಗೆ ಬಿಜೆಪಿ ನೇತೃತ್ವದ ಎನ್ ಡಿಎ ಸರಕಾರ ಕಾರಣ -ನಳಿನ್ ಕುಮಾರ್ ಕಟೀಲ್

ಮಂಗಳೂರು: ಗ್ರಾಮ ಪಂಚಾಯತ್ ಗಳ ಬಲವರ್ಧನೆಗೆ ಕೇಂದ್ರದ ಬಿಜೆಪಿಯ ನರೇಂದ್ರ ಮೋದಿಯವರ ನಾಯಕತ್ವದ ಎನ್ ಡಿಎ ಸರಕಾರ ಕಾರಣ ಎಂದು ಮಾಜಿ ಸಂಸದ ಹಾಗೂ ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.ಅವರು ಶನಿವಾರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಂಡ ಸುದ್ದಿ ಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದರು.ಗ್ರಾಮ ಪಂಚಾಯತ್ ಗಳಿಗೆ ಕೇಂದ್ರದಿಂದ ನೇರವಾಗಿ ಅನುದಾನ ಬಿಡುಗಡೆ,ನರೇಗಾ, ಸ್ವರ್ಣ ಗ್ರಾಮ ಯೋಜನೆ ,ಪಂಚಾಯತ್ ಸದಸ್ಯರಿಗೆ ಗೌರವಧನ ಬಿಜೆಪಿ ನೇತೃತ್ವದ ಸರಕಾರದ ಕೊಡುಗೆ. ಕಳೆದ ಆರೂವರೆ ವರ್ಷ ಬಿಜೆಪಿ ಬೆಂಬಲಿತ ಶಾಸಕ ಕೋಟ ಶ್ರೀನಿವಾಸ ಪೂಜಾರಿ ವಿಧಾನ ಪರಿಷತ್ ಸದಸ್ಯರಾಗಿ ಸಕ್ರೀಯರಾಗಿದ್ದರು. ಅವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ ಕಾರಣ ತೆರವಾದ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಿಶೋರ್ ಕುಮಾರ್ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಾರೆ. ಅವರನ್ನು ಬೆಂಬಲಿಸಿ ಬಿಜೆಪಿ ಯನ್ನು ಈ ಬಾರಿಯೂ ಗೆಲ್ಲಿಸಬೇಕೆಂದು ತಾನು ಮತದಾರರಲ್ಲಿ ಮನವಿ ಮಾಡುವುದಾಗಿ ತಿಳಿಸಿದ್ದಾರೆ.ರಾಜ್ಯದಲ್ಲಿ ಸಿದ್ದರಾಮಯ್ಯರ ನೇತೃತ್ವದ ಸರಕಾರ ಹಗರಣಗಳಿಂದ ಕೂಡಿದ ಸರಕಾರವಾಗಿದೆ.ಅಭಿವೃದ್ಧಿ ಯೋಜನೆ,ಹಣ ಬಿಡುಗಡೆ ಆಗುತ್ತಿಲ್ಲ.ಶಾಸಕರ ನಿಧಿಯ ಯೋಜನೆಗಳಿಗೂ ಅನುದಾನ ಬಿಡುಗಡೆ ಆಗಿಲ್ಲ.ಹಿಂದಿನ ಯಡಿಯೂರಪ್ಪ, ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯಕ್ಕೆ ಜಿಲ್ಲೆಗೆ ಕೋಟ್ಯಾಂತರ ರೂಪಾಯಿ ಅನುದಾನ ಬಿಡುಗಡೆಯಾಗಿದೆ.ದಸರಾ ಕಾರ್ಯಕ್ರಮದಲ್ಲೂ ಮುಖ್ಯಮಂತ್ರಿ ರಾಜಕೀಯ ಮಾತುಗಳನ್ನಾಡಿದ್ದಾರೆ. ಭ್ರಷ್ಟಾಚಾರ ಮಿತಿ ಮೀರಿದೆ.ರೈತರ ಆತ್ಮಹತ್ಯೆ ದೊಡ್ಡ ಪ್ರಮಾಣದಲ್ಲಿ ನಡೆದಿದೆ.ಮುಖ್ಯ ಮಂತ್ರಿಯವರ ಮೇಲೆ ಎಫ್ ಐಆರ್ ದಾಖಲಾದರೂ ಅವರು ರಾಜೀನಾಮೆ ಕೊಟ್ಟಿಲ್ಲ.ಅವರು ಆ ಸ್ಥಾನದಲ್ಲಿ ಮುಂದುವರಿಯುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ ಎಂದರು. ನಿಮ್ಮ ಮುಂದಿನ ರಾಜಕೀಯ ಭವಿಷ್ಯ ಏನು ಎಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು ಪಕ್ಷದ ಕಾರ್ಯಕರ್ತ ನಾಗಿ ಇರುತ್ತೇನೆ.ನಾನು ವಿಧಾನ ಪರಿಷತ್ ಅಭ್ಯರ್ಥಿಯ ಆಕಾಂಕ್ಷಿಯಾಗಿರಲಿಲ್ಲ ಪಕ್ಷ ನನಗೆ ಮೂರು ಬಾರಿ ಸಂಸದನಾಗುವ ಅವಕಾಶ, ರಾಜ್ಯಾಧ್ಯಕ್ಷ ನಾಗುವ ಅವಕಾಶವನ್ನು ನಾನು ಯಾವುದೇ ಬೇಡಿಕೆ ನೀಡದೆ ಕೊಟ್ಟಿದೆ. ಅದಕ್ಕಾಗಿ ನಾನು ಪಕ್ಷಕ್ಕೆ ಋಣಿಯಾಗಿದ್ದೇನೆ ಮುಂದೆಯೂ ಪಕ್ಷ ಸಂಘಟನೆಯ ಕೆಲಸ ಮಾಡುತ್ತೇನೆ ಎಂದರು.ಸುದ್ದಿಗೋಷ್ಠಿಯಲ್ಲಿ ದ.ಕ ಜಿ ಬೆಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ,ಪ್ರದಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಉಪಾಧ್ಯಕ್ಷ ರಾಕೇಶ್ ರೈ,ಜಿಲ್ಲಾ ವಕ್ತಾರ ರಾಜಗೋಪಾಲ ರೈ,ವಿಧಾನಪರಿಷತ್ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು, ಬಿಜೆಪಿ ಜಿಲ್ಲಾ ಸಂಘದ ಕೋಶಾಧಿಕಾರಿ ಸಂಜಯ ಪ್ರಭು ಮೊದಲಾದವರು ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ಕಳೆದುಕೊಂಡ 10 ಲಕ್ಷ ಮೌಲ್ಯದ ಚಿನ್ನಾಭರಣ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಮೆಕ್ಯಾನಿಕ್

ಮಹಿಳೆಯೊಬ್ಬರು ಕಳೆದುಕೊಂಡ ಸುಮಾರು 10 ಲಕ್ಷ ರೂಪಾಯಿ ಮೌಲ್ಯದ 15 ಪವನ್ ಚಿನ್ನಾಭರಣದ ಬ್ಯಾಗ್ ಸಿಕ್ಕ ಮೆಕ್ಯಾನಿಕ್ ಒಬ್ಬರು ಅದನ್ನು ಆ ಮಹಿಳೆಗೆ ಹಿಂದಿರುಗಿಸಿದಾಗ, ಆ ಪ್ರಾಮಾಣಿಕತೆ ಮೆರೆದ ವ್ಯಕ್ತಿಯನ್ನು ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬಂಟ್ವಾಳದ ವಲಯದ ವತಿಯಿಂದ ಸನ್ಮಾನಿಸಲಾಯಿತು.ಬಂಟ್ವಾಳ : ಬಂಟ್ವಾಳ ಬೈಪಾಸ್ ರಸ್ತೆಯಲ್ಲಿ ಮಹಿಳೆಯೊಬ್ಬರು 15 ಪವನು ಚಿನ್ನಾಭರಣ ಇರುವ ಬ್ಯಾಗನ್ನು ಕಳೆದು ಕೊಂಡಿದ್ದು, ಇದು ಭಂಡಾರಿ ಬೆಟ್ಟು ನಿವಾಸಿ ಮೈಕಾನಿಕ್ ಗಣೇಶ್ ಆಚಾರ್ಯ ಇವರಿಗೆ ಸಿಕ್ಕಿದ್ದು, ಈ 10 ಲಕ್ಷಕ್ಕಿಂತಲೂ ಮಿಗಿಲಾದ ಮೌಲ್ಯದ ಬ್ಯಾಗನ್ನು ಅದರ ವಾರೀಸುದಾರರಿಗೆ ಹಿಂತಿರುಗಿಸಿ ಪ್ರಾಮಾಣಿಕತೆಯನ್ನು ಮೆರೆದು ಇತರರಿಗೂ ಮಾದರಿಯಾಗಿರುತ್ತಾರೆ, ಇವರ ಪ್ರಾಮಾಣಿಕತೆಯನ್ನು ಮನಗಂಡು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬಂಟ್ವಾಳ ವಲಯದ ವತಿಯಿಂದ ಅಧ್ಯಕ್ಷರಾದ ಕಿಶೋರ್ ಇವರ ನೇತೃತ್ವದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನ ಗಾಣದ ಪಡ್ಪು ಇಲ್ಲಿ ಗೌರವಿಸಲಾಯಿತು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ ಬಂಟ್ವಾಳ, ವಲಯ ಕಾರ್ಯದರ್ಶಿ ಪ್ರಶಾಂತ್ ಕಲ್ಲಡ್ಕ, ಕೋಶಾಧಿಕಾರಿ ವರುಣ್ ಕಲ್ಲಡ್ಕ, ಮಾಜಿ ಅಧ್ಯಕ್ಷರುಗಳಾದ ಸತೀಶ್ ಬಿ . ಸಿ .ರೋಡ್, ಸುಕುಮಾರ್ ಬಂಟ್ವಾಳ, ಹರೀಶ್ ಮಾಣಿ, ಹರೀಶ್ ಕುಂದರ್, ಸದಸ್ಯರುಗಳಾದ ಮಹೇಶ್ ಶೆಟ್ಟಿ, ರಾಜರತ್ನ, ಹರೀಶ್ ನಾಟಿ, ರವಿ ಪ್ರಕಾಶ್, ವಿಕ್ರಮ್, ಭಾಸ್ಕರ್, ವಿಕೇಶ್, ಮೋಹನದಾಸ, ಪುರೋಹಿತರಾದ ತಿಲಕ್ ಶಾಂತಿ ಭಾಗಿಯಾಗಿದ್ದರು.

ಪ್ರಾದೇಶಿಕ ವಾರ್ತೆಗಳು

ಬಂಟ ಕ್ರೀಡೋತ್ಸವ ಸುರತ್ಕಲ್ ಬಂಟರ ಸಂಘದ ಮಹಿಳಾ ತಂಡಕ್ಕೆ ಪ್ರಥಮ, ದ್ವಿತೀಯ ಪ್ರಶಸ್ತಿ

ಸುರತ್ಕಲ್: ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್ ನಲ್ಲಿ ಸಾರ್ವಜನಿಕ ಗಣೇಶೋತ್ಸವದ ಅಂಗವಾಗಿ ನಡೆದ ಬಂಟ ಕ್ರೀಡೋತ್ಸವ-2024 ರಲ್ಲಿ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಸುರತ್ಕಲ್ ಬಂಟರ ಸಂಘದ ಮಹಿಳೆಯರ ತಂಡ ಪ್ರಥಮ ಮತ್ತು ದ್ವಿತೀಯ ಸ್ಥಾನವನ್ನು ಪಡದುಕೊಂಡಿದೆ. ಜಿದ್ದಾಜಿದ್ದಿನ ಫೈನಲ್ ಪಂದ್ಯದಲ್ಲಿ ಮಹಿಳೆಯರ ಬಿ ತಂಡ ಎ ತಂಡವನ್ನು ಸೋಲಿಸಿ 25 ಸಾವಿರ ನಗದು ಮತ್ತು ಪ್ರಶಸ್ತಿಯನ್ನು ಪಡೆಯಿತು. ಎ ತಂಡ 15 ಸಾವಿರ ನಗದು ಮತ್ತು ಪ್ರಶಸ್ತಿಯೊಂದಿಗೆ ರನ್ನರ್ಸ್ ಅಪ್ ಪ್ರಶಸ್ತಿ ಪಡೆಯಿತು. ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಪ್ರಶಸ್ತಿ ವಿತರಿಸಿದರು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ಬಿ. ನಾಗರಾಜ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಉಪಾಧ್ಯಕ್ಷ ಹೇಮನಾಥ ಶೆಟ್ಟಿ ಕಾವು, ಪ್ರಧಾನ ಕಾರ್ಯದರ್ಶಿ ಕೆ.ಎಂ.ಶೆಟ್ಟಿ, ಕೋಶಾಧಿಕಾರಿ ಸಿ ಎ ರಾಮ ಮೋಹನ್ ರೈ, ಸಿದ್ಧಿ ವಿನಾಯಕ ಪ್ರತಿಷ್ಠಾನದ ಟ್ರಸ್ಟಿಗಳಾದ ಡಾ.ಆಶಾಜ್ಯೋತಿ ರೈ, ರವಿರಾಜ್ ಶೆಟ್ಟಿ ನಿಟ್ಟೆಗುತ್ತು, ಶೆಡ್ಡೆ ಮಂಜುನಾಥ್ ಭಂಡಾರಿ, ಕೃಷ್ಣ ಪ್ರಸಾದ್ ರೈ, ತಾಲೂಕು ಸಮಿತಿಯ ಅಧ್ಯಕ್ಷ ವಸಂತ ಶೆಟ್ಟಿ,ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು, ನಿಕಟಪೂರ್ವ ಅಧ್ಯಕ್ಷ ಸುಧಾಕರ ಪೂಂಜ, ಸಂಘದ ಉಪಾಧ್ಯಕ್ಷ ಪುಷ್ಪರಾಜ ಶೆಟ್ಟಿ ಕುಡುಂಬೂರು, ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಕಟ್ಲ, ಕೋಶಾಧಿಕಾರಿ ಅವಿನಾಶ್ ಶೆಟ್ಟಿ, ಮಾಜಿ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಶೆಟ್ಟಿ, ಮಹಿಳಾ ವೇದಿಕೆಯ ಅಧ್ಯೆಕ್ಷೆ ಭವ್ಯಾ ಶೆಟ್ಟಿ, ಕ್ರೀಡಾ ಕಾರ್ಯದರ್ಶಿಗಳಾದ ಬಬಿತಾ ಶೆಟ್ಟಿ, ಶಿಶಿರ್ ಶೆಟ್ಟಿ, ಗುಣಶೇಖರ ಶೆಟ್ಟಿ‌ ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ತೋಕೂರು ಸ್ಪೋರ್ಟ್ಸ್ ಕ್ಲಬ್‌ನಲ್ಲಿ “ಗಲಾಟೆ ಸಂಸಾರ” ಧಾರಾವಾಹಿಯ ಶೀರ್ಷಿಕೆ ಹಾಡು ಬಿಡುಗಡೆ : ಕಲಾ ಸಾಧಕರನ್ನು ಪ್ರೋತ್ಸಾಯಿಸಿ : ವಸಂತ ಬೆರ್ನಾಡ್

ಮೂಲ್ಕಿ : ಕಲಾ ಸಾಧಕರನ್ನು ಪ್ರೋತ್ಸಾಯಿಸಿ ಬೆಳೆಸಿದಲ್ಲಿ ಅವರ ಪ್ರತಿಭೆಗೆ ಮುಕ್ತ ಅವಕಾಶ ನೀಡಿದಂತಾಗುತ್ತದೆ ಎಂದು ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೂಸೈಟಿಯ ಅಧ್ಯಕ್ಷ ಎಚ್. ವಸಂತ ಬೆರ್ನಾಡ್ ಹೇಳಿದರು.ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಪ್ರಾಯೋಜಕ್ವದಲ್ಲಿಶ್ರೀಗುರುನಮನಸಂತೃಪ್ತಿ ಸಿನಿಮಾ ನಿರ್ಮಾಣ ಸಂಸ್ಥೆಯಿಂದ ನಿರ್ಮಿಸಿರುವ “ಗಲಾಟೆ ಸಂಸಾರ” ಕನ್ನಡ ಧಾರಾವಾಹಿಯ ಶೀರ್ಷಿಕೆ ಹಾಡನ್ನು ಹಳೆಯಂಗಡಿ ಬಳಿಯ ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್‌ನ ವಿಶೇಷ ಸಹಕಾರದಲ್ಲಿ ಕ್ಲಬ್ ನ ಸಭಾಂಗಣದಲ್ಲಿ ಅನಾವರಣಗೊಳಿಸಿ ಅವರು ಮಾತನಾಡಿದರು.ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಮಂಡಳಿಯ ಅಧ್ಯಕ್ಷರಾದ ಗುರುರಾಜ್ ಎಸ್. ಪೂಜಾರಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಸಾರದಲ್ಲಿನ ಸ್ವಾರಸ್ಯವನ್ನು ಹಾಸ್ಯ ಮಿಶ್ರಿತವಾಗಿ ನೀಡುವ ಪ್ರಯತ್ನಕ್ಕೆ ಎಲ್ಲರ ಪ್ರೋತ್ಸಾಹ ಸಿಗಲಿ ಎಂದರು.ಈ ಸಂದರ್ಭದಲ್ಲಿ ಎರಡು ಕುಟುಂಬಗಳಿಗೆ ಪಡಿತರವನ್ನು ವಿತರಿಸಲಾಯಿತು.ಕ್ಲಬ್ ನ ವಿದ್ಯಾ ನಿಧಿಗೆ ಆರ್ಥಿಕ ಸಹಾಯವನ್ನು ನರೇಂದ್ರ ಕೆರೆಕಾಡು ಹಸ್ತಾಂತರಿಅಇದರು.ಹಳೆಯಂಗಡಿ ಲಯನ್ಸ್ ಕ್ಲಬ್‌ನ ಅಧ್ಯಕ್ಷ ಅರುಣ್‌ಕುಮಾರ್, ಮಂಗಳೂರಿನ ಕುವೆಲ್ಲೋ ಬ್ರದರ್‍ಸ್ ಸಿನಿ ಕ್ರಿಯೇಶನ್ಸ್‌ನ ಲ್ಯಾನ್ಸಿ ಕುವೆಲ್ಲೋ, ಪಡುಪಣಂಬೂರು ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ ಮೋಹನ್‌ದಾಸ್, ಮಂಗಳೂರಿನ ಕಲಾಭಿ ಸಂಸ್ಥೆಯ ಗೌರವಾಧ್ಯಕ್ಷ ಸುರೇಶ್ ಬಿ. ವರ್ಕಾಡಿ, ಕ್ಲಬ್ ನ ಗೌರವಾಧ್ಯಕ್ಷ ಪ್ರಶಾಂತ್ ಕುಮಾರ್ ಬೇಕಲ್, ಮಹಿಳಾ ಕಾರ್ಯಾಧ್ಯಕ್ಷೆ ಯಶೋಧಾ ದೇವಾಡಿಗ, ಧಾರಾವಾಹಿಯ ನಿರ್ದೇಶಕ ದೇವಿಪ್ರಕಾಶ್, ಛಾಯಾಗ್ರಾಹಕ ಹರೀಶ್ ಪಿ. ಕೋಟ್ಯಾನ್ ಉಪಸ್ಥಿತರಿದ್ದರು.ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್‌ನ ಅಧ್ಯಕ್ಷ ದೀಪಕ್ ಸುವರ್ಣ ಸ್ವಾಗತಿಸಿದರು,ಸಾಂಸ್ಕೃತಿಕ ಕಾರ್ಯದರ್ಶಿ ಶ್ರೀಮತಿ ಗೀತಾ ಶೆಟ್ಟಿಗಾರ್ ಪ್ರಾರ್ಥಿಸಿದರು.ಕಲಾವಿದ ನರೇಂದ್ರ ಕೆರೆಕಾಡು ಪ್ರಸ್ತಾವನೆಗೈದರು.ಮಾಜಿ ಅಧ್ಯಕ್ಷ ಸುರೇಶ್ ಶೆಟ್ಟಿ ವಂದಿಸಿದರು.ಕಾರ್ಯಾಧ್ಯಕ್ಷ ಸಂತೋಷ್ ದೇವಾಡಿಗ ಕಾರ್ಯಕ್ರಮ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ಅ.6ರಂದು ಹಾಫ್ ಮ್ಯಾರಥಾನ್

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ನಡೆಯುತ್ತಿರುವ ಮಂಗಳೂರು ದಸರಾ ಮಹೋತ್ಸವ ಅಂಗವಾಗಿ ಕ್ಷೇತ್ರದ ವತಿಯಿಂದ ಜಿಯೂಸ್ ಫಿಟ್ನೆಸ್ ಕೇಂದ್ರ, ಖೋಲೋ ಇಂಡಿಯಾ ಹಾಗೂ ಡೆಕತ್ಲಾನ್ ಸಹಭಾಗಿತ್ವದಲ್ಲಿ ಅ.6ರಂದು ದಸರಾ ಹಾಫ್ ಮ್ಯಾರಥಾನ್ ಪಂದ್ಯಾಟ ನಡೆಯಲಿದೆ ಎಂದು ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್. ತಿಳಿಸಿದ್ದಾರೆ.ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ವನ್ ಸಿಟಿ ವನ್ ಸ್ಪಿರಿಟ್’ ಧ್ಯೇಯದೊಂದಿಗೆಎಲ್ಲಿ ಒಗ್ಗಟ್ಟಿದೆಯೂ ಅಲ್ಲಿ ಬಲವಿದೆ’ ಎಂಬ ವಾಕ್ಯದೊಂದಿಗೆ ಈ ಪಂದ್ಯಾಟ ನಡೆಯಲಿದೆ. 21 ಕಿ.ಮೀ., 10 ಕಿ.ಮೀ. ಹಾಗೂ 5 ಕಿ.ಮೀ.ಗಳ ಮೂರು ವಿಭಾಗಗಳಲ್ಲಿ ಹ್ಯಾಪ್ ಮಾರಥಾನ್ ಆಯೋಜಿಸಲಾಗಿದೆ ಎಂದರು.ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ನಡೆಯಲಿರುವ ಹಾಫ್ ಮ್ಯಾರಥಾನ್‌ನಲ್ಲಿ ಪ್ರಥಮ ವಿಜೇತರಿಗೆ 25ಸಾವಿರ ರೂ. ನಗದು ಬಹುಮಾನ, ದ್ವಿತೀಯ ಬಹುಮಾನ 15ಸಾವಿರ ರೂ. ಆಗಿರುತ್ತದೆ. 21 ಕಿ.ಮೀ. ಮ್ಯಾರಥಾನ್ ಬೆಳಗ್ಗೆ 5 ಗಂಟೆಗೆ, 10 ಕಿ.ಮೀ. ಮ್ಯಾರಥಾನ್ 5.30ಕ್ಕೆ ಹಾಗೂ 5ಕಿ.ಮೀ. ನಡಿಗೆ 6.30ಕ್ಕೆ ಕುದ್ರೋಳಿ ಕ್ಷೇತ್ರದಿಂದ ಆರಂಭಗೊಳ್ಳಲಿದೆ. ಹಾಫ್ ಮ್ಯಾರಥಾನ್ ಕ್ಷೇತ್ರದಿಂದ ಹೊರಟು ನಾರಾಯಣ ಗುರು ಸರ್ಕಲ್ ಆಗಿ, ಚಿಲಿಂಬ, ಪೈ ಸೇಲ್ಸ್ ದೇರೆಬೈಲ್, ಕರ್ನಾಟಕ ಬ್ಯಾಂಕ್, ಭಾರತ್ ಮಾಲ್, ಬಿಜೈನಿಂದ ಕದ್ರಿ ದೇವಸ್ಥಾನ ರಸ್ತೆ ಮಾರ್ಗವಾಗಿ, ಮಲ್ಲಿಕಟ್ಟೆ ಭಾರತ್ ಬೀಡಿ, ಕಂಕನಾಡಿ, ವೆಲೆನ್ಸಿಯಾ, ಮಂಗಳಾದೇವಿ, ಫಾರಂ ಮಾಲ್, ಕ್ಲಾಕ್‌ಟವರ್ ಆಗಿ ವೆಂಕಟ್ರಮಣ ದೇವಸ್ಥಾನದ ಬಳಿಯಿಂದ ಕ್ಷೇತ್ರಕ್ಕೆ ಹಿಂತಿರುಗಲಿದೆ. ಮ್ಯಾರಥಾನ್‌ನಲ್ಲಿ ಭಾಗವಹಿಸುವವರ ಸುರಕ್ಷತೆ ಹಾಗೂ ಹಿತದೃಷ್ಟಿಯಿಂದ ಸ್ವಯಂ ಸೇವಕರ ಜತೆಗೆ, ಫಿಸಿಯೋತೆರಪಿಸ್ಟ್ಗಳು, ಆ್ಯಂಬುಲೆನ್ಸ್ಗಳನ್ನು ನಿಗದಿತ ಸ್ಥಗಳಲ್ಲಿ ಸ್ಥಿತಗೊಳಿಸಲಾಗಿರುತ್ತದೆ. ಮ್ಯಾರಥಾನ್‌ನಲ್ಲಿ ಭಾಗವಹಿಸುವವರಿಗೆ ಲೋಕೇಷನ್ ದೃಷ್ಟಿಯಿಂದ ಮೈಕ್ರೋ ಚಿಪ್‌ಗಳನ್ನು ನೀಡಲಾಗುತ್ತದೆ. ಭಾಗವಹಿಸುವ ಎಲ್ಲರಿಗೂ ಪದಕ ಹಾಗೂ ಪ್ರಮಾಣ ಪತ್ರ, ಟೀಶರ್ಟ್ಗಳನ್ನು ಒದಗಿಸಲಾಗುತ್ತದೆ ಎಂದು ಅವರು ವಿವರಿಸಿದರು.ಈಗಾಗಲೇ 1200ರಷ್ಟು ಮಂದಿ ನೋಂದಣಿ ಮಾಡಿಕೊಂಡಿದ್ದು, ಸ್ಥಳದಲ್ಲೇ ನೋಂದಣಿಗೂ ಅವಕಾಶವಿರಲಿದೆ. ಸುಮಾರು 2000ಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಸಹಿತ ಹಲವು ಅಧಿಕಾರಿಗಳು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.ಪತ್ರಿಕಾಗೋಷ್ಟಿಯಲ್ಲಿ ಕ್ಷೇತ್ರದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ದೇವೇಂದ್ರ ಪೂಜಾರಿ, ರಕ್ಷಿತ್, ಜಯರಾಂ ಶಾಂ ಸುಂದರ್, ರಾಜೇಶ್, ರವಿ, ಧನರಾಜ್, ಸುಖ್ ಪಾಲ್ ಪೊಳಲಿ, ರಕ್ಷಿತ್ ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯ; ಎಸ್.ಪಿ ತಂಡ ಪ್ರಥಮ, ಕಮೀಷನರ್ ತಂಡ ದ್ವಿತೀಯ ಪ್ರಶಸ್ತಿ

ಮಂಗಳೂರು,ಅ.3,ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯದಲ್ಲಿ ದ.ಕ ಎಸ್.ಪಿ ತಂಡ ಪ್ರಥಮ,ಮಂಗಳೂರು ಪೊಲೀಸ್ ಕಮೀಷನರ್ ತಂಡ ದ್ವಿತೀಯ ಪ್ರಶಸ್ತಿ ಗಳಿಸಿದೆ ಉತ್ತಮ ಎಸೆತಗಾರನಾಗಿ ಮಂಗಳೂರು ಕಮೀಶನರ್ ತಂಡದ ಆಟಗಾರ ರಂಜನ್ ಉತ್ತಮ ದಾಂಡಿಗ ಪ್ರಶಸ್ತಿಯನ್ನು ಮಂಗಳೂರು ಕಮೀಷನರ್ ತಂಡದ ಸಿದ್ದಾರ್ಥ ಹಾಗೂಪಂದ್ಯ ಪುರುಷನಾಗಿ ಹಾಗೂ ಸರಣಿ ಶ್ರೇಷ್ಠ ಆಟಗಾರನಾಗಿ ದಕ್ಷಿಣ ಕನ್ನಡ ಎಸ್ ಪಿ ತಂಡದ ಶಿವಕುಮಾರ್ ಪ್ರಶಸ್ತಿ ಪಡೆದರು. ‌ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಪೊಲೀಸ್ ಕಮಿಷನರೇಟ್, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್, ಸಹ್ಯಾದ್ರಿ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಕಾಲೇಜು ಹಾಗೂ ರೋಹನ್ ಕಾರ್ಪೋರೇಶನ್ ನೇತೃತ್ವದಲ್ಲಿ ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ ಬುಧವಾರ ಅಡ್ಯಾರ್ ಸಹ್ಯಾದ್ರಿ ಕಾಲೇಜು ಮೈದಾನ ದಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ತಂಡ ಪ್ರಥಮ ಮಂಗಳೂರು ಪೊಲೀಸ್ ಕಮೀಷನರ್ ತಂಡ ದ್ವಿತೀಯ ಪ್ರಶಸ್ತಿಗಳಿಸಿದೆಮುಖ್ಯ ಅತಿಥಿಯಾಗಿ ಅದಾನಿ ಸಮೂಹ ಸಂಸ್ಥೆಯ ಅಧ್ಯಕ್ಷ ಕಿಶೋರ್ ಆಳ್ವ ಮಾತನಾಡಿ ಮಂಗಳೂರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡುತ್ತಿದೆ. ಬ್ರ್ಯಾಂಡ್ ಮಂಗಳೂರು ಇದಕ್ಕೆ ಪೂರಕವಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದರು.ದಕ್ಷಿಣ ಕನ್ನಡ ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ,ಹೆಚ್ಚು ವರಿ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ ಭಾಗವಹಿಸಿದ್ದರು.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ , ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ,ಹೆಚ್ಚು ವರಿ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ ಉಪಸ್ಥಿತರಿದ್ದರು.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್ ಕಾರ್ಯಕ್ರಮ ನಿರೂಪಿ ಸಿದರು. ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು. ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ಬಹುಮಾನಿತರ ವಿವರ ನೀಡಿದರು.

ಪ್ರಾದೇಶಿಕ ವಾರ್ತೆಗಳು

ಬಾಂಧವ್ಯ ಬೆಸೆಯಲು ಕ್ರೀಡೆ ಪೂರಕ: ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅಭಿಮತ.

ಮಂಗಳೂರು : ಪರಸ್ಪರ ಬಾಂಧವ್ಯ ಬೆಸೆದು ಸೌಹಾರ್ದತೆ ನೆಲೆಸಲು ಕ್ರೀಡೆ ಸಹಕಾರಿಯಾಗಿದ್ದು, ಬ್ರಾೃಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯಾಟ ಇದಕ್ಕೆ ಪೂರಕವಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್.ಎಂ.ಪಿ. ಹೇಳಿದರು.ದ.ಕ.ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ದ.ಕ.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ನಗರ ಪೊಲೀಸ್ ಕಮಿಷನರೆಟ್, ದ.ಕ.ಜಿಲ್ಲಾ ಪೊಲೀಸ್,ಸಹ್ಯಾದ್ರಿ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಕಾಲೇಜು ಹಾಗೂ ರೋಹನ್ ಕಾರ್ಪೋರೇಶನ್ ನೇತೃತ್ವದಲ್ಲಿ ಬುಧವಾರ ಅಡ್ಯಾರ್ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ನಡೆದ ಬ್ರಾೃಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯಾಟ ಉದ್ಘಾಟಿಸಿ, ಅವರು ಮಾತನಾಡಿದರು. ಮುಖ್ಯ ಅತಿಥಿಯಾಗಿದ್ದ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾತನಾಡಿ ‘ಜನರನ್ನು ಒಗ್ಗೂಡಿಸುವ ಬ್ರಾೃಂಡ್ ಮಂಗಳೂರು ಪರಿಕಲ್ಪನೆಯ ವಿವಿಧ ಕಾರ್ಯಕ್ರಮಗಳು ಸೌಹಾರ್ದತೆಯನ್ನು ಕಾಪಾಡುವ ನಿಟ್ಟಿನಲ್ಲಿ ಉತ್ತಮ ಪ್ರಯತ್ನ ಎಂದರು.ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ .ಎನ್., ದ.ಕ.ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಆನಂದ ಕೆ ಶುಭ ಹಾರೈಸಿದರು. ರೋಹನ್ ಕಾರ್ಪೊರೇಷನ್‌ನ ಆಡಳಿತ ನಿರ್ದೇಶಕ ರೋಹನ್ ಮೊಂತೆರೊ ಪಂದ್ಯಾಟ ಟ್ರೋಫಿ ಅನಾವರಣಗೊಳಿಸಿದರು.ದ.ಕ.ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ ಇಂದಾಜೆ ಅಧ್ಯಕ್ಷ ತೆ ವಹಿಸಿದ್ದರು.ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ, ಸಹಾಯಕ ಕಮಿಷನರ್ ಹರ್ಷವರ್ಧನ್ ,ಸಹ್ಯಾದ್ರಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಟ್ರಸ್ಟಿ ದೇವದಾಸ್ ಹೆಗ್ಡೆ ,ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಸಹಾಯಕ ಪ್ರಾಂಶುಪಾಲ ಸುಧೀರ್, ಡೀನ್ ರಮೇಶ್, ದೈಹಿಕ ಶಿಕ್ಷಣ ನಿರ್ದೇಶಕ ಕರುಣಾಕರ, ಸಹಾಯಕ ಪ್ರಾಧ್ಯಾಪಕರಾದ ವರುಣ್, ಪದ್ಮನಾಭ , ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ,ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್.,ಕಾರ್ಯಕ್ರಮ ನಿರ್ದೇಶಕ ವಿಲ್ಫ್ರೆಡ್ ಡಿಸೋಜ, ರಾಜೇಶ್ ಪೂಜಾರಿ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು. ಕಾರ್ಯದರ್ಶಿ ವಿಜಯ ಕೋಟ್ಯಾನ್ ಪಡು ಕಾರ್ಯಕ್ರಮ ನಿರೂಪಿಸಿದರು.ದ.ಕ.ಜಿಲ್ಲಾಧಿಕಾರಿ ತಂಡ, ಮಂಗಳೂರು ನಗರ ಪೊಲೀಸ್ ಆಯುಕ್ತರ ತಂಡ, ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಂಡ, ದ..ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ತಂಡ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರ ತಂಡಗಳು ಪಂದ್ಯಾಟದಲ್ಲಿ ಭಾಗವಹಿಸಿದ್ದವು

ಪ್ರಾದೇಶಿಕ ವಾರ್ತೆಗಳು

ನ.11-17: ಯಕ್ಷಾಂಗಣ ತಾಳಮದ್ದಳೆ ಸಪ್ತಾಹ-ವಿವಿಧ ತಂಡಗಳ ಸಂಯೋಜನೆಯಲ್ಲಿ ವಿಭಿನ್ನ ಪ್ರಯೋಗ

ಮಂಗಳೂರು: ‘ಯಕ್ಷಾಂಗಣ ಮಂಗಳೂರು’ ಚಿಂತನ – ಮಂಥನ ಮತ್ತು ಪ್ರದರ್ಶನ ವೇದಿಕೆಯು ಎಂದಿನಂತೆ ಈ ಬಾರಿಯೂ ಕರ್ನಾಟಕ ರಾಜ್ಯೋತ್ಸವ ಕಲಾ ಸಂಭ್ರಮವಾಗಿ ನಡೆಸಲಿರುವ 12ನೇ ವರ್ಷದ ನುಡಿಹಬ್ಬ ಯಕ್ಷಗಾನ ತಾಳಮದ್ದಳೆ ಸಪ್ತಾಹ ‘ದ್ವಾದಶ ಸರಣಿ’ಯು ಇದೇ 2024 ನವೆಂಬರ್ ತಿಂಗಳ 11ರಿಂದ 17ರವರೆಗೆ ಕದ್ರಿ ಶ್ರೀ ಮಂಜುನಾಥ ದೇವಾಲಯದ ರಾಜಾಂಗಣದಲ್ಲಿ ನಡೆಯಲಿದೆ. ಜಿಲ್ಲೆಯ ವಿವಿಧ ತಂಡಗಳ ಸಂಯೋಜನೆಯಲ್ಲಿ ವಿಭಿನ್ನ ರೀತಿಯ ಕಾರ್ಯಕ್ರಮಗಳನ್ನು ಅಳವಡಿಸಿಕೊಳ್ಳಲಾಗಿದೆ’ ಎಂದು ಯಕ್ಷಾಂಗಣದ ಕಾರ್ಯಾಧ್ಯಕ್ಷ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದ್ದಾರೆ. ಇತ್ತೀಚೆಗೆ ಕದ್ರಿ ದೇವಳದ ವಠಾರದಲ್ಲಿ ಜರಗಿದ ಯಕ್ಷಾಂಗಣದ ಕಾರ್ಯಕಾರಿಣಿ ಸಭೆಯಲ್ಲಿ ಅವರು ಈ ವಿಷಯವನ್ನು ಪ್ರಕಟಿಸಿ ಮಾತನಾಡಿದರು. ‘ನವಂಬರ 11 ರಂದು ಸೋಮವಾರ ಸಂಜೆ ಗಂಟೆ 4ಕ್ಕೆ ಉದ್ಘಾಟನೆ ಯೊಂದಿಗೆ ಆರಂಭವಾಗುವ ಸಪ್ತಾಹದಲ್ಲಿ ಜಿಲ್ಲೆಯ ಹೆಸರಾಂತ ಏಳು ಯಕ್ಷಗಾನ ಕಲಾಸಂಘಗಳು ಭಾಗವಹಿಸಲಿದ್ದು, ಈಗಾಗಲೇ ತಾಳಮದ್ದಳೆ ಕ್ಷೇತ್ರದಲ್ಲಿ ಖ್ಯಾತರಾದ ಹಿರಿಯ ಯಕ್ಷಗಾನ ಕಲಾವಿದರನ್ನು ಬಳಸಿಕೊಂಡು ವಿವಿಧ ಪ್ರಸಂಗಗಳನ್ನು ಪ್ರಸ್ತುತಪಡಿಸಲಿವೆ’ ಎಂದವರು ತಿಳಿಸಿದರು.ಭಾಗವಹಿಸುವ ಕಲಾ ಸಂಘಗಳು:‘ರಾಜ್ಯೋತ್ಸವ ಕಲಾ ಸಂಭ್ರಮವಾಗಿ ಮೂಡಿ ಬರುವ ದ್ವಾದಶ ಸರಣಿಯಲ್ಲಿ ಕ್ರಮವಾಗಿ ಹವ್ಯಾಸಿ ಬಳಗ ಕದ್ರಿ, ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಕಲಾಸಂಘ ಬೆಟ್ಟಂಪಾಡಿ, ಶ್ರೀ ಕಾಳಿಕಾಂಬಾ ಯಕ್ಷಗಾನ ಕಲಾ ಸೇವಾಸಂಘ ಉಪ್ಪಿನಂಗಡಿ ,ಯಕ್ಷಲಹರಿ ಕಿನ್ನಿಗೋಳಿ, ಅಂಬುರಹ ಯಕ್ಷ ಸದನ ಬೊಟ್ಟಿಕೆರೆ, ಶ್ರೀ ಚಾಮುಂಡೇಶ್ವರಿ ಯಕ್ಷಕೂಟ ಕಣಿಯೂರು ಕನ್ಯಾನ ಮತ್ತು ಕರ್ನಾಟಕ ಯಕ್ಷ ಭಾರತಿ ಪುತ್ತೂರು ತಂಡಗಳು ಭಾಗವಹಿಸಲಿವೆ. ಸಪ್ತಾಹದಲ್ಲಿ ಪ್ರತಿವರ್ಷದಂತೆ ಅಗಲಿದ ಹಿರಿಯ ಕಲಾವಿದರ ಸಂಸ್ಮರಣೆ, ಸಾಧಕರ ಸನ್ಮಾನ ಮತ್ತು ಪ್ರಶಸ್ತಿ ಪ್ರದಾನಗಳೂ ಜರಗಲಿವೆ’ ಎಂದು ಪ್ರಧಾನ ಕಾರ್ಯದರ್ಶಿ ತೋನ್ಸೆ ಪುಷ್ಕಳ ಕುಮಾರ್ ಮಾಹಿತಿ ನೀಡಿದರು.ಯಕ್ಷಾಂಗಣದ ಉಪಾಧ್ಯಕ್ಷ ಎಂ. ಸುಂದರ ಶೆಟ್ಟಿ ಬೆಟ್ಟಂಪಾಡಿ, ಸಂಚಾಲಕ ಕೆ.ರವೀಂದ್ರ ರೈ ಕಲ್ಲಿಮಾರ್, ಕೋಶಾಧಿಕಾರಿ ಸುಮಾ ಪ್ರಸಾದ್, ಕಾರ್ಯದರ್ಶಿಗಳಾದ ಕರುಣಾಕರ ಶೆಟ್ಟಿ ಪಣಿಯೂರು, ನಿವೇದಿತಾ ಎನ್. ಶೆಟ್ಟಿ ಉಪಸ್ಥಿತರಿದ್ದು ಸೂಕ್ತ ಸಲಹೆ ನೀಡಿದರು.

Scroll to Top