ಪ್ರಾದೇಶಿಕ ವಾರ್ತೆಗಳು

ಪ್ರಾದೇಶಿಕ ವಾರ್ತೆಗಳು

ಯಕ್ಷಾಂಗಣ ರಾಜ್ಯೋತ್ಸವ ಪುರಸ್ಕಾರಕ್ಕೆ ಪ್ರದೀಪ ಕುಮಾರ ಕಲ್ಕೂರನವೆಂಬರ್ 11ರಂದು ಪ್ರಶಸ್ತಿ ಪ್ರದಾನ

ಮಂಗಳೂರು: ‘ಯಕ್ಷಾಂಗಣ ಮಂಗಳೂರು’ ಯಕ್ಷಗಾನ ಚಿಂತನ – ಮಂಥನ ಮತ್ತು ಪ್ರದರ್ಶನ ವೇದಿಕೆ ವತಿಯಿಂದ ಜಿಲ್ಲೆಯ ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ ರಂಗದ ಸಾಧಕರು ಮತ್ತು ಯಕ್ಷಗಾನ ಕಲಾಪೋಷಕರಿಗಾಗಿ ನೀಡುವ ‘ಯಕ್ಷಾಂಗಣ ರಾಜ್ಯೋತ್ಸವ ಪುರಸ್ಕಾರ’ವನ್ನು ಈ ಬಾರಿ ಎಸ್. ಪ್ರದೀಪ ಕುಮಾರ್ ಕಲ್ಕೂರ ಅವರಿಗೆ ನೀಡಲಾಗುವುದು ಎಂದು ಯಕ್ಷಾಂಗಣದ ಕಾರ್ಯಾಧ್ಯಕ್ಷ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದ್ದಾರೆ. ಕಲ್ಕೂರಾ ಅವರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ತಮ್ಮ ಕಲ್ಕೂರ ಪ್ರತಿಷ್ಠಾನದ ಆಶ್ರಯದಲ್ಲಿ ಎಡೆಬಿಡದೆ ಮಾಡಿದ ಹಲ ಬಗೆಯ ಸೇವಾ ಕಾರ್ಯಗಳಿಗಾಗಿ ಕರ್ನಾಟಕ ರಾಜ್ಯೋತ್ಸವ ಕಲಾ ಸಂಭ್ರಮದ ವಿಶೇಷ ಗೌರವಕ್ಕೆ ಪಾತ್ರರಾಗಿದ್ದಾರೆ ಎಂದವರು ತಿಳಿಸಿದ್ದಾರೆ.ಬಹುಮುಖೀ ಸಾಧಕ ಕಲ್ಕೂರ:ನವೆಂಬರ್ 16,1960 ರಂದು ಉಡುಪಿಯ ಸಗ್ರಿಯಲ್ಲಿ ಮಂಜುನಾಥ ಕಲ್ಕೂರ ಮತ್ತು ಲಲಿತಾ ಕಲ್ಕೂರ ದಂಪತಿಗೆ ಹಿರಿಯ ಪುತ್ರನಾಗಿ ಜನಿಸಿದ ಪ್ರದೀಪ ಕುಮಾರ ಕಲ್ಕೂರ ಪ್ರಾಥಮಿಕ ಶಿಕ್ಷಣವನ್ನು ಕಡಿಯಾಳಿ ಶಾಲೆ, ಪ್ರೌಢಶಾಲೆಯನ್ನು ಕಮಲಾ ಬಾಯಿ ಹೈಸ್ಕೂಲ್ ನಲ್ಲಿ ಪೂರೈಸಿದರು. ಮೂಡುಬಿದಿರೆಯ ಮಹಾವೀರ ಕಾಲೇಜಿನಲ್ಲಿ ವಿದ್ಯಾಭ್ಯಾಸವನ್ನು ಮುಂದುವರಿಸಿ, ಬಳಿಕ ಮಂಗಳೂರಿನ ಕರ್ನಾಟಕ ಪಾಲಿಟೆಕ್ನಿಕ್ ನಲ್ಲಿ ಆಟೋಮೊಬೈಲ್ ಇಂಜಿನಿಯರಿಂಗ್ ಡಿಪ್ಲೊಮಾ ಪದವೀಧರರಾದರು. ಕಲ್ಕೂರ ಎಡ್ವರ್ಟೈಸರ್ಸ್ ಸಮೂಹ ಸಂಸ್ಥೆಗಳನ್ನು ಮಂಗಳೂರಿನಲ್ಲಿ ಆರಂಭಿಸುವ ಮೂಲಕ ವೃತ್ತಿ ಜೀವನ ಆರಂಭಿಸಿದ ಅವರು ಜೊತೆ ಜೊತೆಗೆ ಸಾಹಿತ್ಯ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ವಿಶೇಷ ಆಸಕ್ತಿ ಬೆಳೆಸಿಕೊಂಡರು. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ನಿರಂತರ ಐದು ಅವಧಿಗಳಿಗೆ ಅವಿರೋಧವಾಗಿ ಆಯ್ಕೆಗೊಳ್ಳುವ ಮೂಲಕ ಅತ್ಯಂತ ಯಶಸ್ವೀ ಸಾಹಿತ್ಯಪರ ಕೆಲಸಗಳು, ಸಮ್ಮೇಳನಗಳನ್ನು ಆಯೋಜಿಸಿ ಸಾಹಿತ್ಯಾಸಕ್ತರ ಅಪಾರ ಮೆಚ್ಚುಗೆಗೆ ಪಾತ್ರರಾದರು. ಇದಲ್ಲದೆ ತನ್ನದೇ ನೇತೃತ್ವದ ಕಲ್ಕೂರ ಪ್ರತಿಷ್ಠಾನ ಮೂಲಕ ರಾಷ್ಟ್ರೀಯ ಮಕ್ಕಳ ಉತ್ಸವ ಶ್ರೀ ಕೃಷ್ಣ ವೇಷ ಸ್ಪರ್ಧೆಯನ್ನು ಕಳೆದ ನಾಲ್ಕು ದಶಕಗಳಿಂದ ಶ್ರೀ ಕ್ಷೇತ್ರ ಕದ್ರಿಯ ಆವರಣದಲ್ಲಿ ಆಯೋಜಿಸಿ ಮಕ್ಕಳಲ್ಲಿ ರಾಷ್ಟ್ರೀಯ ಹಾಗೂ ಧಾರ್ಮಿಕ ಚಿಂತನೆ ಬೆಳೆಸುವ ಕಾಯಕದಲ್ಲಿ ತೊಡಗಿರುವರು. ಕನ್ನಡ ರಾಜ್ಯೋತ್ಸವ, ಕಾರಂತ ಹುಟ್ಟು ಹಬ್ಬ, ಸಾವಯವ ಕೃಷಿ ಸಂತೆ, ದಕ್ಷಿಣೋತ್ತರ ಕನ್ನಡ ಜಿಲ್ಲೆಗಳ ಯಕ್ಷಗಾನ, ಸಾಹಿತಿ – ಕಲಾವಿದರ ಸಂಸ್ಮರಣೆ ಹೀಗೆ ಹತ್ತಾರು ಕಾರ್ಯಕ್ರಮಗಳನ್ನು ಜೋಡಿಸಿಕೊಂಡು, ಹಿರಿ ಕಿರಿಯ ಪ್ರತಿಭೆಗಳನ್ನು ಗೌರವಿಸುವ ಸತ್ಕಾರ್ಯವನ್ನು ಮಾಡುತ್ತಲೇ ಬಂದಿದ್ದಾರೆ. ಕವನ, ಪ್ರಬಂಧ, ಚಿತ್ರ ರಚನಾ ಸ್ಪರ್ಧೆ ಏರ್ಪಡಿಸಿ ಸಾಹಿತ್ಯಾಸಕ್ತರನ್ನು ಪ್ರೋತ್ಸಾಹಿಸುತ್ತಿದ್ದಾರೆ. ಕಲ್ಕೂರ ಪ್ರಕಾಶನದ ಮೂಲಕ ಯಕ್ಷಗಾನ ಸಹಿತ ಅನೇಕ ಪುಸ್ತಕಗಳ ಪ್ರಕಾಶನ ವನ್ನೂ ಮಾಡಿರುವರು.ಉಡುಪಿಯ ಪೇಜಾವರ ಮಠಾಧೀಶರಾಗಿದ್ದ ಶ್ರೀ ವಿಶ್ವೇಶತೀರ್ಥ ಶ್ರೀ ಪಾದರ ಪರಮಾಪ್ತ ಶಿಷ್ಯರಾಗಿ ಉಡುಪಿ ಶ್ರೀಕೃಷ್ಣ ಮಠದ ಪರ್ಯಾಯ ಸಮಿತಿಯ ಗೌರವ ಕಾರ್ಯದರ್ಶಿಯಾಗಿ, ಶಾರದಾ ಸಮೂಹ ವಿದ್ಯಾ ಸಂಸ್ಥೆ ಸಹಿತ ಇನ್ನೂ ಅನೇಕ ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ, ಪೋಷಕರಾಗಿ ಸೇವಾನಿರತರಾಗಿರುವ ಕಲ್ಕೂರರದು ಬಹುಮುಖೀ ವ್ಯಕ್ತಿತ್ವ. ಇದಕ್ಕಾಗಿ ವಿವಿಧ ಸಂಘ ಸಂಸ್ಥೆಗಳು ಸನ್ಮಾನಿಸಿ ಗೌರವಿಸಿವೆ.ತಿರುಪತಿ ತಿರುಮಲ ದೇವಸ್ಥಾನ ಕೊಡಮಾಡುವ ‘ಪುರಂದರ ದಾಸಾನುಗ್ರಹ ಪ್ರಶಸ್ತಿ’ , ಉಡುಪಿ ಶ್ರೀಕೃಷ್ಣ ಮಠದ ‘ಶ್ರೀ ಕೃಷ್ಣಾನುಗ್ರಹ ಪ್ರಶಸ್ತಿ’, ಸಹಿತ ಹಲವು ಪ್ರಶಸ್ತಿಗಳು ಅವರಿಗೆ ಲಭಿಸಿವೆ.ಕದ್ರಿ ದೇವಳದಲ್ಲಿ ಪ್ರಶಸ್ತಿ ಪ್ರದಾನ:ಇದೇ 2024 ನವೆಂಬರ 11ರಿಂದ 17ರ ವರೆಗೆ ಕದ್ರಿ ಶ್ರೀ ಮಂಜುನಾಥ ದೇವಾಲಯದ ರಾಜಾಂಗಣದಲ್ಲಿ ನಡೆಯುವ 12ನೇ ವರ್ಷದ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ’ ದ್ವಾದಶ ಸರಣಿಯ ಉದ್ಘಾಟನಾ ಸಮಾರಂಭದಲ್ಲಿ ನವೆಂಬರ್ 11ರಂದು ಸೋಮವಾರ ಪ್ರದೀಪ ಕುಮಾರ್ ಕಲ್ಕೂರರು ಯಕ್ಷಾಂಗಣದ ರಾಜ್ಯೋತ್ಸವ ಗೌರವ ಸ್ವೀಕರಿಸುವರು. ಬಳಿಕ ಒಂದು ವಾರ ಪರ್ಯಂತ ಕ್ರಮವಾಗಿ ರಾಜಾ ದಂಡಕ, ಕಚ – ದೇವಯಾನಿ, ಸೈಂಧವ ವಧೆ, ತ್ರಿಶಂಕು ಸ್ವರ್ಗ, ಬಿನದ ದಾಂಪತ್ಯ, ಸುದರ್ಶನೋಪಖ್ಯಾನ, ಸತೀ ಶಕುಂತಳೆ ಮತ್ತು ‘ರೆಂಜೆ ಬನೊತ ಲೆಕ್ಯೆಸಿರಿ (ತುಳು)’ ಯಕ್ಷಗಾನ ತಾಳಮದ್ದಳೆಗಳು ಜರಗಲಿವೆ ಎಂದು ಭಾಸ್ಕರ ರೈ ಕುಕ್ಕುವಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ತುಳು ಸಿನಿಮಾಕ್ಕೆ ಮುಹೂರ್ತ. ಒಂದೇ ಹಂತದಲ್ಲಿ ಚಿತ್ರೀಕರಣ

ಮಂಗಳೂರು: ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ಜೈ ತುಳು ಸಿನಿಮಾದ ಮುಹೂರ್ತ ಸಮಾರಂಭ ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯಿತು. ಶರವು ರಾಘವೇಂದ್ರ ಶಾಸ್ತ್ರೀ ಕ್ಲಾಪ್ ಮಾಡಿ ಸಿನಿಮಾಕ್ಕೆ ಶುಭ ಹಾರೈಸಿದರು.ಸಮಾರಂಭದಲ್ಲಿ ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ್, ತಾರಾನಾಥ ಶೆಟ್ಟಿ ಬೋಳಾರ್, ಮಂಜುನಾಥ ಅತ್ತಾವರ, ಬಾಳ ಜಗನ್ನಾಥ ಶೆಟ್ಟಿ, ನವೀನ್ ಶೆಟ್ಟಿ ಆರ್ಯನ್ಸ್ ಮೊದಲಾದವರು ಉಪಸ್ಥಿತರಿದ್ದರು. ಗಿರಿಗಿಟ್, ಗಮ್ಜಾಲ್, ಸರ್ಕಸ್ ಚಿತ್ರಗಳ ಯಶಸ್ಸಿನ ಬಳಿಕ ರೂಪೇಶ್ ಶೆಟ್ಟಿ ಅವರು ಮತ್ತೊಂದು ಬಿಗ್ ಬಜೆಟ್ ನ ಸಿನಿಮಾಕ್ಕೆ ಕೈ ಹಾಕಿದ್ದಾರೆ. ಜೈ ಸಿನಿಮಾ ಆರ್ ಎಸ್ ಸಿನಿಮಾಸ್, ಶೂಲಿನ್ ಫಿಲಂಸ್, ಮುಗ್ರೋಡಿ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗುತ್ತಿದೆ.ರೂಪೇಶ್ ಶೆಟ್ಟಿ ಸಿನಿಮಾದ ನಿರ್ದೇಶಕರಾಗಿದ್ದು, ಕತೆ ಹಾಗೂ ಸಂಭಾಷಣೆಯನ್ನು ಪ್ರಸನ್ನ ಶೆಟ್ಟಿ ಬೈಲೂರು ಬರೆದಿದ್ದಾರೆ.ಕ್ಯಾಮರಾ ವಿನುತ್ ಕೆ, ಸಂಗೀತ ಲೊಯ್ ವೆಲೆಂಟಿನ್ ಸಲ್ದಾನ, ಸಂಕಲನ ರಾಹುಲ್ ವಸಿಷ್ಠ, ನಿರ್ಮಾಪಕರು ಅನಿಲ್ ಶೆಟ್ಟಿ, ಸುಧಾಕರ ಶೆಟ್ಟಿ ಮುಗ್ರೋಡಿ, ಮಂಜುನಾಥ ಅತ್ತಾವರ, ಸಹ ನಿರ್ಮಾಪಕರು ದೀಕ್ಷಿತ್ ಆಳ್ವ, ನೃತ್ಯ ಹಾಗೂ ಎಕ್ಸಿಕ್ಯೂಟಿವ್ ಪ್ರೊಡ್ಯುಸರ್ ನವೀನ್ ಶೆಟ್ಟಿ ಆರ್ಯನ್ಸ್.“‘ಜೈ ಸಿನಿಮಾದಲ್ಲಿ ದೇವದಾಸ್ ಕಾಪಿಕಾಡ್, ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಪ್ರಸನ್ನ ಶೆಟ್ಟಿ ಬೈಲೂರು, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ಉಮೇಶ್ ಮಿಜಾರ್, ಮೊದಲಾದವರು ಅಭಿನಯಿಸಲಿದ್ದಾರೆ.ಸಿನಿಮಾಕ್ಕೆ ಒಂದೇ ಹಂತದಲ್ಲಿ ಚಿತ್ರೀಕರಣ ನಡೆಯಲಿದೆ ಎಂದು ನಟ, ನಿರ್ದೇಶಕ ರೂಪೇಶ್ ಶೆಟ್ಟಿ ತಿಳಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ಅಕ್ಟೋಬರ್ 28 ರಂದು ಕುತ್ಲುರು ಸರಕಾರಿ ಶಾಲೆಯ ಮಕ್ಕಳಿಗೆ ಸಮವಸ್ತ್ರ ವಿತರಣೆ

ಮಂಗಳೂರು, ಅಕ್ಟೋಬರ್ 25,ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸಂಘದ ಸಹಭಾಗಿತ್ವದಲ್ಲಿ ಪತ್ರಕರ್ತರು ಗ್ರಾಮ ವಾಸ್ತವ್ಯ ಮಾಡಿದ ಕುತ್ಲುರು ಸರಕಾರಿ ಶಾಲೆ ಮಕ್ಕಳಿಗೆ ಎಂಸಿಫ್ ಸಿ ಎಸ್ ಆರ್ ನಿಧಿಯಿಂದ ಒಂದು ಲಕ್ಷ ರೂಪಾಯಿ ಮೌಲ್ಯದ ಸಮವಸ್ತ್ರ ವಿತರಣೆ ಅಕ್ಟೋಬರ್ 28 ರಂದು ಸೋಮವಾರ ಬೆಳಿಗ್ಗೆ 11 ಗಂಟೆಗೆ ಪತ್ರಿಕಾ ಭವನ ದಲ್ಲಿ ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸಮವಸ್ತ್ರ ವಿತರಣೆ ಮಾಡಲಿದ್ದಾರೆ.ಸಾಹಸ ಪ್ರವಾಸೋದ್ಯಮ ವಿಭಾಗದಲ್ಲಿ ರಾಷ್ಟ್ರ ಪ್ರಶಸ್ತಿ ಪಡೆದಿರುವ ಕುತ್ಲುರು ಗ್ರಾಮದ ಪ್ರತಿನಿಧಿಗಳನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಟಧಿಕಾರಿ ಯತೀಶ್ ಸನ್ಮಾನಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಲಿದ್ದಾರೆ. ಎಂಸಿಫ್ ಕಂಪನಿ ಚೀಫ್ ಪ್ರೊಡಕ್ಷನ್ ಆಫೀಸರ್ ಗಿರೀಶ್. ಎಸ್, ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಚೇತನ್ ಮೆಂಡೋನ್ಸ, ಸಾರ್ವಜನಿಕ ಸಂಪರ್ಕಧಿಕಾರಿ ಅವಿನಂದನ್, ಕುತ್ಲುರು ಸರಕಾರಿ ಶಾಲೆಯ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಮಚಂದ್ರ ಭಟ್ ಮುಖ್ಯ ಅತಿಥಿ ಗಳಾಗಿ ಭಾಗವಹಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ ಬಿ ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ. ಆರ್ ಉಪಸ್ಥಿತರಿಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇ0ದ್ರ ಕುಂದೇಶ್ವರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ಎಂಎಲ್ಸಿ ಉಪಚುನಾವಣೆ ಫಲಿತಾಂಶ: ಬಿಜೆಪಿಯ ಕಿಶೋರ್ ಕುಮಾರ್ ಗೆಲುವು

ಮಂಗಳೂರು :ವಿಧಾನಪರಿಷತ್ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಅವರು ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಎದುರು 1600ಕ್ಕೂ ಅಧಿಕ ಮತಗಳ ಅಂತರದಿಂದ ಗೆದ್ದಿದ್ದಾರೆ. ವಿಧಾನಪರಿಷತ್ ಉಪಚುನಾವಣೆಯ ಮತ ಎಣಿಕೆಯು ಮಂಗಳೂರಿನ ಸಂತ ಎಲೋಷಿಯಸ್ ಪದವಿ ಪೂರ್ವ ಕಾಲೇಜ್ ನಲ್ಲಿ ಇಂದು ನಡೆದಿದ್ದು,ಕೇಂದ್ರ ಚುನಾವಣಾ ವೀಕ್ಷಕ ಪಂಕಜ್ ಕುಮಾರ್ ಪಾಂಡೆ, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಉಪಸ್ಥಿತಿರಿದ್ದರು.

ಪ್ರಾದೇಶಿಕ ವಾರ್ತೆಗಳು

ಮಂಗಳೂರು ಧರ್ಮಪ್ರಾಂತ್ಯದ ಸಿಟಿ ವಲಯದ ವ್ಯಾಪ್ತಿಯಲ್ಲಿ ಬರುವ ಚರ್ಚ್ ಗಳ 21 ಆಯೋಗದ ಸದಸ್ಯರಿಗೆ ಕಾರ್ಯಗಾರ.

ಮಂಗಳೂರು ಧರ್ಮಪ್ರಾಂತ್ಯದ ಸಿಟಿ ವಲಯದ ವ್ಯಾಪ್ತಿಯಲ್ಲಿ ಬರುವ ಕುಲಶೇಖರ, ಬೊಂದೇಲ್, ನೀರುಮಾರ್ಗ, ಪಾಲ್ದನೆ, ಬಜಾಲ್, ಕೆಲರೈ, ದೇರೆಬೈಲ್, ಪೆರ್ಮಯ್, ವಾಮಂಜೂರು, ಅಂಜೆಲೊರ್, ಶಕ್ತಿನಗರ ಇದರ 21 ಆಯೋಗದ ಸದಸ್ಯರಿಗೆ ಕಾರ್ಯಗಾರವನ್ನು ಕುಲಶೇಖರದ ಹೋಲಿ ಕ್ರಾಸ್ ಚರ್ಚಿನ ಸಭಾಂಗಣದಲ್ಲಿ ಏರ್ಪಡಿಸಲಾಗಿತ್ತು. ಈ ಕಾರ್ಯಾಗಾರದಲ್ಲಿ ಚರ್ಚಿನ 21ಆಯೋಗದ ಸದಸ್ಯರಿಗೆ ಮಾಹಿತಿ, ವಿಚಾರ ವಿನಿಮಯ, ಸಂದೇಹಗಳಿಗೆ ಉತ್ತರ ನೀಡುವ ಮೂಲಕ ಸಹಕಾರಿಯಾಯಿತು. ಕಾರ್ಯಗಾರದಲ್ಲಿ ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ| ಪೀಟರ್ ಪಾವುಲ್ ಸಲ್ಡಾನ ಅವರು ಕಾರ್ಯಗಾರದ ಉದ್ಘಾಟಣೆ ಮಾಡಿ ಮಾಹಿತಿ ನೀಡಿದರು. ಮುಂದೆ ಸುಮಾರು 2 ಗಂಟೆಗಳ ಕಾಲ ವಂದನೀಯ ಪಾ| ಪಾವೊಸ್ತಿನ್ ಲೋಬೊ ಅವರು ಆಯೋಗದ ಬಗ್ಗೆ ಸವಿಸ್ತಾರವಾದ ವಿವರ ನೀಡಿದರು.ವೇದಿಕೆಯಲ್ಲಿ ಸಿಟಿ ವಲಯದ ವಿಕಾರ್ ವಾರ್ ವಂ| ಪಾ| ಜೇಮ್ಸ್ ಡಿ’ಸೋಜ ಅವರು ಕಾರ್ಯಗಾರದ ಮಹತ್ವ ವಿವರಿಸಿ ಸ್ವಾಗತಿಸಿದರು. ವಂ| ಪಾ| ವಿಜಯ್ ಮೊಂತೆರೋ ಅವರು ಪ್ರಾರ್ಥನಾ ವಿದಿ ನೆರವೇರಿಸಿದರು.ವ| ಪಾ| ಕ್ಲಾನೀ ಡಿ’ಸೋಜಾ, ವಂ| ಪಾ| ಆಲ್ವಿನ್ ಡಿ’ಸೋಜ, ಕೊರ್ಡೆಲ್ ಚರ್ಚಿನ ಪ್ರಧಾನ ಧರ್ಮಗುರುಗಳಾದ ವಂ| ಪಾ| ಕ್ಲಿಫರ್ಡ್ ಫೆರ್ನಾಂಡಿಸ್, ಧರ್ಮಪ್ರಾಂತ್ಯದ ಸಾರ್ವಜನಿಕ ಅಧಿಕಾರಿ ರೋಯ್ ಕ್ಯಾಸ್ಟಲೀನೊ ಉಪಸ್ಥಿತರಿದ್ದರು. ಕಾರ್ಯಗಾರದಲ್ಲಿ ಎಲ್ಲಾ ಚರ್ಚುಗಳ ಧರ್ಮಗುರುಗಳು, ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಆಯೋಗದ ಸಂಚಾಲಕರು, ಧರ್ಮ ಭಗಿನಿಯರು ಭಾಗವಹಿಸಿದ್ದರು.ಆಂಜೆಲೋರ್ ಚರ್ಚಿನ ಪ್ರಧಾನ ಧರ್ಮಗುರುಗಳಾದ ವಂ| ಪಾ| ಫೆಡ್ರಿಕ್ ಮೊಂತೇರೊ ಅವರು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಸಂತೋಷ್ ಡಿ’ಕೋಸ್ತಾ ವಂದಿಸಿದರು.

ಪ್ರಾದೇಶಿಕ ವಾರ್ತೆಗಳು

ತುಳು ರಂಗಭೂಮಿಯಲ್ಲಿ ಸದಭಿರುಚಿಯ ಹಾಸ್ಯಕ್ಕೆ ಮನ್ನಣೆ-ನಟ ಅರವಿಂದ ಬೋಳಾರ್

ಮಂಗಳೂರು: ರಂಗಭೂಮಿ ಕಲಾವಿದನಿಗೆ ತನ್ನ ವೃತ್ತಿಯಲ್ಲಿ ನಿಷ್ಠೆ,ಭಕ್ತಿ ಇದ್ದರೆ ಜೀವನ ನಿರ್ವಹಣೆಗೆ ಯಾವುದೇ ಕೊರತೆ ಉಂಟಾಗದು. ಕಲಾವಿದನಲ್ಲಿ ಸಮಾಜ ಪ್ರಜ್ಞೆ ಅಗತ್ಯ . ತುಳು ರಂಗಭೂಮಿಯಲ್ಲಿ ಸದಭಿರುಚಿಯ ಹಾಸ್ಯವನ್ನು ಮಾತ್ರ ಪ್ರೇಕ್ಷಕರು ಒಪ್ಪುತ್ತಾರೆ. ಹಾಸ್ಯ ಕಲಾವಿದರು ಕೂಡಾ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡಬಹುದು ಎಂಬುದನ್ನು ತುಳು ನಾಟಕಗಳು ತೋರಿಸಿಕೊಟ್ಟಿವೆ ಎಂದು ಜನಪ್ರಿಯ ನಟ ಅರವಿಂದ ಬೋಳಾರ್ ಹೇಳಿದರು.ಮಂಗಳೂರು ಪ್ರೆಸ್‌ಕ್ಲಬ್ ವತಿಯಿಂದ ಬುಧವಾರ ಪತ್ರಿಕಾ ಭವನದಲ್ಲಿ ನಡೆದ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ‘ ರಂಗಭೂಮಿ ಕಲಾವಿದನಾಗಿ ನಿಷ್ಠೆಯಿಂದ ಕೆಲಸ ಮಾಡಿದ್ದೇನೆ. ಜನತೆಯ ಪ್ರೇರಣೆಯಿಂದಲೇ ಹಾಸ್ಯವನ್ನು ನಾನು ಸ್ವೀಕರಿಸಿದ್ದು, ಅದನ್ನು ವೃತ್ತಿ ಜೀವನದಲ್ಲಿ ಮುಂದುವರಿಸುತ್ತಿದ್ದೇನೆ. ಪ್ರತಿ ಬಾರಿಯೂ ಹಾಸ್ಯದಲ್ಲಿ ಹೊಸತನ ತರಲು ಪ್ರಯತ್ನಿಸುತ್ತೇನೆ ಎಂದರು.ಪ್ರಾಥಮಿಕ ಶಾಲೆಯಲ್ಲಿ ಇರುವಾಗ ಹುಚ್ಚನ ಪಾತ್ರ ಮಾಡಿ ಪ್ರಥಮ ಸ್ಥಾನ ಪಡೆದೆ. ಬಡತನದ ಕಾರಣ ಹೆಚ್ಚು ಶಿಕ್ಷಣ ಪಡೆಯಲು ಸಾಧ್ಯವಾಗಲಿಲ್ಲ. ಆದರೆ ಶಾರದಾ ಮಾತೆ ನನ್ನ ಕೈ ಬಿಡಲಿಲ್ಲ. ಹೊಟ್ಟೆಪಾಡಿಗೆ ಹಲವು ಕೆಲಸ ಮಾಡಿದೆ. ಸ್ಥಳೀಯ ದೇವಾಲಯಗಳಲ್ಲಿ ನಡೆಯುವ ನಾಟಕಗಳಲ್ಲಿ ಹಾಸ್ಯ ಪಾತ್ರ ಮಾಡುತ್ತಿದ್ದೆ. ಬಳಿಕ ಹಾಸ್ಯ ಪಾತ್ರ ನನ್ನ ಜೀವನದಲ್ಲಿ ಹಾಸುಹೊಕ್ಕಾಯಿತು. ರಂಗಭೂಮಿಯ ಮೇಲಿನ ಆಸಕ್ತಿ, ಗುರುಗಳ ಹಾಗೂ ಪ್ರೇಕ್ಷಕರ ಆಶೀರ್ವಾದ ನನ್ನನ್ನು ಎತ್ತರಕ್ಕೆ ಬೆಳೆಸಿತು. ದೇವದಾಸ್ ಕಾಪಿಕಾಡ್ ಅವರ ತಂಡಕ್ಕೆ ಸೇರ್ಪಡೆಯಾದ ಬಳಿಕ ಸಾಕಷ್ಟು ಜನಪ್ರಿಯತೆ ಪಡೆದೆ. ವಿಜಯಕುಮಾರ್ ಕೊಡಿಯಾಲ್‌ಬೈಲ್ ಅವರಿಂದ ತುಳು ಸಿನಿಮಾ ಪ್ರವೇಶಿಸಿ ಅಲ್ಲಿಯೂ ಒಳ್ಳೆಯ ಅವಕಾಶ ಪಡೆದೆ ಎಂದು ಅವರು ಹೇಳಿದರು.ಯಕ್ಷಗಾನ, ಟಿ.ವಿ.ಕಾರ್ಯಕ್ರಮಗಳಲ್ಲೂ ಬೇಡಿಕೆಯ ನಟನಾದೆ. ಇದು ನನ್ನ ಭಾಗ್ಯ. ರಂಗಭೂಮಿ ನನಗೆ ಎಲ್ಲವನ್ನೂ ನೀಡಿದೆ. ಅನ್ನದ ದಾರಿ, ಸಂಪಾದನೆ ,ಉತ್ತಮ ಹೆಸರು, ಸ್ವಂತ ಮನೆ, ಮಕ್ಕಳಿಗೆ ಶಿಕ್ಷಣ ಎಲ್ಲವೂ ರಂಗಭೂಮಿಯಿಂದ ಸಾಧ್ಯವಾಗಿದೆ .ಮುಂದಿನ ಜನ್ಮಇದ್ದರೆ ರಂಗಭೂಮಿ ಕಲಾವಿದನಾಗಿಯೇ ಜನಿಸಬೇಕು ಎಂಬ ಬಯಕೆ. ಜನರ ಪ್ರೀತಿ ನನಗೆ ಸಿಕ್ಕಿದ್ದು, ಅದುವೇ ನನ್ನನ್ನು ಇಷ್ಟುಎತ್ತರಕ್ಕೆ ಬೆಳೆಸಿದೆ ಎಂದು ಅರವಿಂದ ಬೋಳಾರ್ ಹೇಳಿದರು.ಕಾರ್ಯಕ್ರಮ ಉದ್ಘಾಟಿಸಿದ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಮಾತನಾಡಿ, ತುಳು ರಂಗಭೂಮಿ ಕಟ್ಟಲು ಅನೇಕರ ತ್ಯಾಗ, ಪರಿಶ್ರಮ ಇದೆ. ತುಳು ರಂಗಭೂಮಿ ತುಳು ಭಾಷೆಯ ಉಳಿವಿಗೆ ತನ್ನದೇ ಆದ ಕೊಡುಗೆ ನೀಡಿದೆ.ತುಳು ರಂಗ ಭೂಮಿಗೆ ಅರವಿಂದ ಬೋಳಾರ್ ಅವರ ಕೊಡುಗೆ ಅನನ್ಯ ಎಂದರು.ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್, ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ , ಕಾರ್ಯಕ್ರಮ ಸಂಯೋಜಕ ಸತೀಶ್ ಇರಾ ಉಪಸ್ಥಿತರಿದ್ದರು. ಪ್ರೆಸ್‌ಕ್ಲಬ್ ಉಪಾಧ್ಯಕ್ಷ ಮಹಮ್ಮದ್ ಆರಿಫ್ ವಂದಿಸಿದರು. ಕಾರ್ಯಕಾರಿ ಸಮಿತಿ ಸದಸ್ಯ ಹರೀಶ್ ಮೋಟುಕಾನ ಕಾರ್ಯಕ್ರಮ ನಿರೂಪಿಸಿದರು.ವಿದೇಶಕ್ಕೆ ಬೋಳಾರ್ಅರವಿಂದ ಬೋಳಾರ್ ಅವರು ನ.6ರಿಂದ ಆಸ್ಟ್ರೇಲಿಯಾ, ಡಿ.5ರಿಂದ ನೈಜೀರಿಯಾದಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿಭಾಗವಹಿಸಲಿದ್ದಾರೆ .ಅಮೆರಿಕಾ ಇಂಗ್ಲೆಂಡ್ ದೇಶಗಳಲ್ಲೂ ಮುಂದಿನ ದಿನಗಳಲ್ಲಿ ಕಾರ್ಯಕ್ರಮ ನೀಡುವ ಬಗ್ಗೆ ಸಂಘಟಕರು ಮಾತುಕತೆ ನಡೆಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ದ.ಕ.ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆ: ಹೈಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್ ಗೆ 105 ಪದಕಗಳು

ಮಂಗಳೂರು: ಕರ್ನಾಟಕ ರಾಜ್ಯ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ಮಂಗಳೂರಿನ ಅಶೋಕನಗರದ ಫ್ರಾನ್ಸಿಸ್ ಡೋರಿಸ್ ಸ್ಕೇಟ್ ಸಿಟಿಯಲ್ಲಿ ಆಯೋಜಿಸಿದ ದ.ಕ ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಮಂಗಳೂರಿನ ಹೈ-ಫ್ಲೈಯರ್ ಸ್ಕೇಟಿಂಗ್ ಕ್ಲಬ್‌ನ ಸ್ಕೇಟರ್ ಗಳು ಅಮೋಘ ಸಾಧನೆ ಮೆರೆದಿದ್ದಾರೆ.ಹೈಫ್ಲೈರ‍್ಸ್ ಸ್ಕೇಟಿಂಗ್ ಕ್ಲಬ್ ನ ಸ್ಕೇಟರ್ ಗಳು ತಂಡವಾಗಿ ಪ್ರತಿನಿಧಿಸಿ 105 ಪದಕಗಳನ್ನು ಗೆದ್ದು ರಾಜ್ಯ ಮಟ್ಟಕ್ಕೆ ಕ್ಲಬ್ ನ 32 ಸ್ಕೇಟರ್ ಗಳು ಆಯ್ಕೆಯಾದರು.‌ ರಾಜ್ಯ ಮಟ್ಟದ ಸ್ರ‍್ಧೆಯು ನವೆಂಬರ್ ತಿಂಗಳಿನಲ್ಲಿ ಮೈಸೂರಿನಲ್ಲಿ ನಡೆಯಲಿದೆ.ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಹೈ-ಫ್ಲೈಯರ್ ಸ್ಕೇಟಿಂಗ್ ಕ್ಲಬ್‌ನ 42 ಸ್ಕೇಟರ್ ಗಳು ಭಾಗವಹಿಸಿದ್ದು, 56 ಚಿನ್ನ, 33 ಬೆಳ್ಳಿ ಹಾಗೂ 16 ಕಂಚಿನ ಪದಕ ಗಳಿಸಿ ಗಮನ ಸೆಳೆದರು.‌ ಇವರೆಲ್ಲರೂ ಫ್ರಾನ್ಸಿಸ್ ಡೋರಿಸ್ ಸ್ಕೇಟ್ ಸಿಟಿಯಲ್ಲಿ ಮೋಹನ ದಾಸ್ ಕೆ., ಜಯರಾಜ್ ಮತ್ತು ರಮಾನಂದ ಅವರಿಂದ ತರಬೇತಿ ಪಡೆಯುತ್ತಿದ್ದಾರೆ.ಪದಕ ಪಡೆದ ಸ್ಕೇರ‍್ಸ್ ಗಳ ವಿವರ:ತನ್ಮಯ್ ಕೊಟ್ಟಾರಿ – 4 ಚಿನ್ನಮುಹಮ್ಮದ್ ಶಾಮಿಲ್ ರ‍್ಷಾದ್ – 4 ಚಿನ್ನಡಾಶಿಯಲ್ ಆಮಂಡಾ ಕಾನ್ಸೆಸ್ಸಾವ್ – 4 ಚಿನ್ನಡೇನಿಯಲ್ ಸಾಲ್ವಡೋರ ಕಾನ್ಸೆಸ್ಸಾವ್ – 4 ಚಿನ್ನಶೀಹಾನ್ ಎ.ಆರ್. – 3 ಚಿನ್ನರಿತ್ವಿಕಾ ಮಲ್ಯ – 3 ಚಿನ್ನಜೆಸ್ನಿಯಾ ಕರ‍್ರೆಯ – 3 ಚಿನ್ನಶಾಲೋಮ್ ಕ್ರಿಶ್ಚಿನ್ – 3 ಚಿನ್ನಗ್ರೀಷ್ಮಾ ಶೆಟ್ಟಿ – 3 ಚಿನ್ನಇದ್ಧಾಂತ್ ಯೋಗಿ – 3 ಚಿನ್ನಹಿಮಾನಿ ಕೆ.ವಿ. – 3 ಚಿನ್ನಮುಹಮ್ಮದ್ ಆಯಾನ್ – 3 ಚಿನ್ನಲಕ್ಷ್. ಡಿ. ಎಸ್. ಗೌಡ – 3 ಚಿನ್ನರೆಯಾನ್ಶ್ ಕೆ – 2 ಚಿನ್ನಜೇನಿಷಾ – 2 ಚಿನ್ನ, 1ಬೆಳ್ಳಿಅಡಪಾ ಡೇವಿಡ್ ಆಚರ‍್ಯ – 2 ಚಿನ್ನ, 1 ಬೆಳ್ಳಿಶಿವಾಂಶ್ ಕೆ.ಪಿ. ಶೆಟ್ಟಿ – 1 ಚಿನ್ನ 2 ಬೆಳ್ಳಿಈಶಾನಿ ಕೆ.ವಿ. – 1 ಚಿನ್ನ 2 ಬೆಳ್ಳಿಜಿಷ್ಣು : 1 ಚಿನ್ನ 2 ಬೆಳ್ಳಿಎಂ. ಆಕಾಂಶಾ ಪೈ – 1 ಚಿನ್ನ, 2 ಬೆಳ್ಳಿಕೇಟ್ ರ‍್ವಿವಾಜ್ – 1 ಚಿನ್ನ, 1 ಬೆಳ್ಳಿ, 1 ಕಂಚುಶ್ರೇಷ್ಟ್ ಮಲ್ಲಿ – 1 ಚಿನ್ನ, 1ಬೆಳ್ಳಿ, 1 ಕಂಚುಮರ‍್ಯ ಕಿರಣ್ ಬಂಜನ್ – 1 ಚಿನ್ನ, 1 ಬೆಳ್ಳಿ, 1 ಕಂಚುಸ್ಪೃಹಾ ಜೈಶ್ವರ್ – 3 ಬೆಳ್ಳಿಎ. ಡೇವಿನ ಮಹೇಶ್ – 3 ಬೆಳ್ಳಿಡೆಲಿನಾ ಒಳಿಡಾ ಮೆಂಡೋನ್ಸ – 2 ಬೆಳ್ಳಿ, 1 ಕಂಚುಅಕ್ಷೋಬ್ಯಾ ಜಿ.ಎಸ್. – 2 ಬೆಳ್ಳಿ,‌ 1 ಕಂಚುಅನಿಕಾ ಸಚಿನ್ ಉಚ್ಚಿಲ‌ – 2 ಬೆಳ್ಳಿ, 1 ಕಂಚುನೈವೇದ್ಯ ಪಾಂಡೇ – 2 ಬೆಳ್ಳಿ, 1 ಕಂಚುರಕ್ಷ್ ಡಿ.ಎಸ್. ಗೌಡ – 2 ಬೆಳ್ಳಿಪ್ರದ್ಯುಮ್ನ ರಾವ್ ಎಚ್. – 1 ಬೆಳ್ಳಿ, 1 ಕಂಚುಭೂಮಿಕಾ ವಿ. ಭಟ್ – 1 ಬೆಳ್ಳಿ , 1 ಕಂಚುಎಂ. ಅಮನ್ ಅರುಣ್ ಶೇಟ್ – 1 ಬೆಳ್ಳಿ, 1 ಕಂಚುಅಮಯ್ ಸಚಿನ್ ಉಚ್ಚಿಲ – 1 ಬೆಳ್ಳಿನೀವೇದ್ ಅನಿಶ್ – 3 ಕಂಚುಸನ್ನಿಧಿ ಪಿ. ಭಂಡಾರಿ – 2 ಕಂಚುಮೇಧಾಂಶ್ ನೇತ್ರಕೆರೆ – 1 ಕಂಚು

ಪ್ರಾದೇಶಿಕ ವಾರ್ತೆಗಳು

ನ.9-10ರಂದು ಆಳ್ವಾಸ್ ಕಾಲೇಜಿನಲ್ಲಿ “ಗದ್ದಿಗೆ” ಕರಾವಳಿ ಮರಾಟಿ ಸಮಾವೇಶ-2024

ಮಂಗಳೂರು: “ಕರ್ನಾಟಕದಲ್ಲಿ ಸುಮಾರು 3 ಲಕ್ಷಕ್ಕೂ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಕರಾವಳಿ ಮೂಲದ ಮರಾಟಿಗರು ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ನುಡಿಸಿರಿ ಸಭಾಂಗಣದಲ್ಲಿ ನ.9 ಮತ್ತು 10ರಂದು ಮರಾಟಿಗರ ಸಮಗ್ರ ಬಲವರ್ಧನೆ ಮತ್ತು ಪ್ರಗತಿಗಾಗಿ ”ಗದ್ದಿಗೆ“ ಮರಾಟಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ” ಎಂದು ಕರಾವಳಿ ಮರಾಠಿ ಸಮಾವೇಶದ ಅಧ್ಯಕ್ಷ ಹೆಚ್.ರಾಜೇಶ್ ಪ್ರಸಾದ್ ಐಎಎಸ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.“22 ವರ್ಷಗಳ ಬಳಿಕ ಸಮಾವೇಶ ನಡೆಯಲಿದ್ದು ನಮ್ಮ ಈ ಸಮಾವೇಶವು ಮುಖ್ಯವಾಗಿ ಶಿಕ್ಷಣ, ಸಂಘಟನೆ ಹಾಗೂ ಸ್ವಾಭಿಮಾನದ ಧೈಯಘೋಷವನ್ನು ಹೊಂದಿದ್ದೆ. ಮೂಲತಃ ಮಹಾರಾಷ್ಟ್ರದಿಂದ ವಲಸೆ ಬಂದು ಕರ್ನಾಟಕದ ಗುಡ್ಡಗಾಡಿನಲ್ಲಿ ವಾಸಿಸುತ್ತಿರುವ ಈ ಸಮುದಾಯದ ಸುಮಾರು ಶೇಕಾಡ 80ರಷ್ಟು ಜನ ಇಂದಿಗೂ ಆರ್ಥಿಕವಾಗಿ ಹಿಂದುಳಿದಿದ್ದು ಇವರು ಅನೇಕ ಸಮಸ್ಯೆಗಳನ್ನು ಹಾಗೂ ಸವಾಲುಗಳನ್ನು ಎದುರಿಸುತ್ತಿದ್ದಾರೆ. ಈ ಸಮಸ್ಯೆಗಳ ಬಗ್ಗೆ ಚರ್ಚಿಸುವ ಸಲುವಾಗಿ, ಹಾಗೂ ನಮ್ಮ ಸಂಸ್ಕೃತಿ, ಆಚರಣೆಗಳನ್ನು ಅನಾವರಣೆ ಮಡುವ ಉದ್ದೇಶದಿಂದ ಈ ಸಮಾವೇಶವನ್ನು ಹಮ್ಮಿಕೊಂಡಿದ್ದು, ಇದರಲ್ಲಿ ಸುಮಾರು 15 ರಿಂದ 20 ಸಾವಿರ ಜನ ಭಾಗವಹಿಸುವವರಿದ್ದಾರೆ.ಈ ಸಮಾವೇಶದಲ್ಲಿ ಮರಾಟಿಗರ ವಿವಿಧ ಆಚಾರ-ವಿಚಾರ ಸಂಸ್ಕಾರಗಳನ್ನು ಪ್ರತಿಬಿಂಬಿಸುವ ಸಾಂಸ್ಕೃತಿಕ, ಮೂರು ಗೋಷ್ಠಿಗಳು, ಉಪನ್ಯಾಸ ಹಾಗೂ ಸನ್ಮಾನ ಮತ್ತು ಸಾಧಕರನ್ನು ಪುರಸ್ಕರಿಸುವ ಕಾರ್ಯಕ್ರಮಗಳು ನಡೆಯಲಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯರವರು ಈ ಸಮಾವೇಶವನ್ನು ಉದ್ಘಾಟಿಸಲಿದ್ದು, ನಮ್ಮ ಬಹು ನಿರೀಕ್ಷೆಯ “ಗದ್ದಿಗೆ” ಸ್ಮರಣ ಸಂಚಿಕೆಯನ್ನು ಡಾ.ಎಂ.ಮೋಹನ್ ಆಳ್ವರವರು ಬಿಡುಗಡೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ನಮ್ಮ ಸಮಾಜದ ಶ್ರೇಷ್ಠ ಸಾಧನೆಯನ್ನು ಮಾಡಿರುವ ಪದ್ಮಶ್ರೀ ಪುರಸ್ಕೃತರಾದ ಅಮೈ ಮಹಾಲಿಂಗ ನಾಯ್ಕರವರನ್ನು ಸನ್ಮಾನ ಮಾಡಲಾಗುವುದು. ಮರಾಟಿಗರ ಅಹವಾಲುಗಳನ್ನು ನಮ್ಮ ಸಮಾವೇಶದ ಗೌರವಾಧ್ಯಕ್ಷರಾದ ಡಾ.ಕೆ.ಸುಂದರ್ ನಾಯಕ್ ರವರು ಮುಖ್ಯಮಂತ್ರಿಗಳಿಗೆ ಅರ್ಪಿಸಲಿದ್ದಾರೆ. ಹಾಗೆಯೇ ರಾಷ್ಟ್ರಮಟ್ಟದಲ್ಲಿ ಸಾಧಿಸಿರುವ ಸಾಧನೆಯನ್ನು ಪರಿಗಣಿಸಿ ಸಮಾಜದ ಆನೇಕ ಸಾಧಕರನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಗುವುದು“ ಎಂದರು.ನ.9ರಂದು ಕರ್ನಾಟಕ ಮರಾಟಿ ಸಂಘ (ರಿ.) ಬೆಂಗಳೂರು ಇವರ ಸಹಕಾರದಿಂದ ಮರಾಟಿಗರಿಗಾಗಿಯೇ ಉದ್ಯೋಗ ಮೇಳವನ್ನು ಹಮ್ಮಿಕೊಂಡಿದ್ದು ಈಗಾಗಲೇ 1500ಕ್ಕೂ ಹೆಚ್ಚು ಮರಾಟಿ ಉದ್ಯೋಗಾಕಾಂಕ್ಷಿಗಳು ತಮ್ಮ ಹೆಸರನ್ನು ನೋಂದಾಯಿಸಿದ್ದಾರೆ. ಸುಮಾರು 30ಕ್ಕೂ ಹೆಚ್ಚು ವಿವಿಧ ಕಂಪೆನಿಗಳು ಈ ಸಮಾವೇಶದ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮಕ್ಕೆ ಬರುವ ದೂರದ ಊರಿನ ಮರಾಟ ಬಂಧುಗಳಿಗೆ ವಸತಿ ವ್ಯವಸ್ಥೆ ಮತ್ತು ಎಲ್ಲರಿಗೂ ಊಟೋಪಚಾರದ ವ್ಯವಸ್ಥೆ ಮಾಡಲಾಗುವುದು.ಸಂಪನ್ಮೂಲ ವ್ಯಕ್ತಿಗಳಾಗಿ ಡಾ.ಎಂ. ಮೋಹನ್ ಆಳ್ವ, ಎನ್.ಎಸ್.ಮಂಜುನಾಥ್, ರತಿ ಪ್ರಭಾಕರ ನಾಯ್ಕ, ಹಾಗೂ ಪ್ರವೀಣ್ ಕುಮಾರ್ ಮುಗುಳಿ ನಮ್ಮೊಂದಿಗೆ ಸಹಕರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸ್ಪೀಕರ್ ಯು.ಟಿ.ಖಾದರ್, ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಮುಖ್ಯ ಅತಿಥಿಗಳಾಗಿ, ಶಾಸಕಉಮಾನಾಥ ಕೋಟ್ಯಾನ್, ಐವನ್ ಡಿ’ಸೋಜ, ಕೆ.ಅಭಯಚಂದ್ರ ಜೈನ್, ವಿನಯ ಕುಮಾರ್ ಸೊರಕೆ, ಶಶಿಧರ್ ಶೆಟ್ಟಿ ಬರೋಡಾ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.ಸಮಾರೋಪ ಸಮಾರಂಭದಲ್ಲಿ ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ದ.ಕ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್, ಡಾ.ಎಂ ಮೋಹನ್ ಆಳ್ವ, ಕೆನರಾ ಬ್ಯಾಂಕ್ ಜಿ.ಎಂ. ಶ್ರೀ ರಾಮ ನಾಯ್ಕ್, ದ.ಕ,ಉಡುಪಿ ಜಿಲ್ಲೆಯ ಎಲ್ಲಾ ಶಾಸಕರು ಹಾಗೂ ಮುಖಂಡರು ಕಾರ್ಯಕ್ರಮದಲ್ಲಿ ಮುಖ್ಯಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ“ ಎಂದರು. ಪತ್ರಿಕಾಗೋಷ್ಟಿಯಲ್ಲಿ ಡಾ.ಕೆ.ಸುಂದರ್ ನಾಯಕ್, ಕಾರ್ಯಾಧ್ಯಕ್ಷ ರಾಮಚಂದ್ರ ಕೆಂಬಾರೆ, ರತ್ನಾವತಿ, ಎನ್.ವಿಶ್ವನಾಥ್ ನಾಯಕ್, ಮಹಾಲಿಂಗ ನಾಯಕ್, ಗೌತಮ್ ಮತ್ತಿತರರು ಉಪಸ್ಥಿತರಿದ್ದರು.ಚಿತ್ರಗಳು: ಸತೀಶ್ ಕಾಪಿಕಾಡ್

ಪ್ರಾದೇಶಿಕ ವಾರ್ತೆಗಳು

ಅ.23ರಂದು ಅರವಿಂದ ಬೋಳಾರ್ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ

ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಅ.23ರಂದು ಬೆಳಗ್ಗೆ 11.30ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಜನಪ್ರಿಯ ನಟ ಅರವಿಂದ ಬೋಳಾರ್ ಭಾಗವಹಿಸಿ ಸಂವಾದ ನಡೆಸಲಿದ್ದಾರೆ.ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸುವರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ .ಆರ್. ಉಪಸ್ಥಿತರಿರುವರು ಎಂದು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

‘ಮಾದಕ ವ್ಯಸನಗಳ ಬಗ್ಗೆ ಯುವಜನತೆ ಜಾಗೃತರಾಗಿರಿ’ ಸಹಾಯಕ ಪೊಲೀಸ್ ಆಯುಕ್ತೆ ಗೀತಾ ಕುಲಕರ್ಣಿ

ಮಂಗಳೂರು: ನಗರದ ಮಾತಾ ಅಮೃತಾನಂದಮಯಿ ಮಠದ ಸಂಸ್ಕೃತಿ ಮತ್ತು ಶ್ರೇಷ್ಠತಾ ಕೇಂದ್ರದ ವತಿಯಿಂದ ಮಾದಕ ವ್ಯಸನಗಳ ವಿರುದ್ಧ ಯುವ ಜನರ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಮಠದ ಮುಖ್ಯಸ್ಥರಾದ ಸ್ವಾಮಿನಿ ಮಂಗಳಾಮೃತ ಪ್ರಾಣರವರ ನಿರ್ದೇಶನದಂತೆ ಮಂಗಳೂರಿನ ಅಮೃತ ವಿದ್ಯಾಲಯಂನಲ್ಲಿ ಜರುಗಿದ ಈ ವಿಶೇಷ ವಿಚಾರ ಸಂಕೀರ್ಣ ಕಾರ್ಯಕ್ರಮದ‌ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸಹಾಯಕ ಪೊಲೀಸ್ ಆಯುಕ್ತರಾದ ಗೀತಾ ಕುಲಕರ್ಣಿಯವರು “ಮಾದಕದ್ರವ್ಯ ವ್ಯಸನ ಮತ್ತು ಪರಿಹಾರೋಪಾಯಗಳು” ಎಂಬ ವಿಷಯದ ಕುರಿತು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ವೈದ್ಯರ ಸಲಹೆಯಂತೆ ಪಡೆಯುವ ಔಷಧಗಳು ಅಧಿಕೃತ. ವೈದ್ಯರ ಸಲಹೆ ಇಲ್ಲದೆ ಪಡೆಯುವ ಔಷಧಗಳು ಅಕ್ರಮ ಹಾಗೂ ಹಾನಿಕಾರಕ ಪರಿಣಾಮಗಳನ್ನು ಬೀರುತ್ತವೆ. ಯುವಜನರು ಹಾಗೂ ವಿದ್ಯಾರ್ಥಿಗಳು ಮಾದಕದ್ರವ್ಯ ವ್ಯಸನಗಳಿಗೆ ಬಲಿಯಾಗದಂತೆ ಜಾಗೃತಿ ಮೂಡಿಸುವುದು ಅತ್ಯಗತ್ಯ ಎಂದರು. ಪೋಷಕರು ಮಕ್ಕಳ ಭವಿಷ್ಯದ ಬಗ್ಗೆ ಭರವಸೆಯನ್ನು ಹೊಂದಿ ಉತ್ತಮ ಶಿಕ್ಷಣವನ್ನು ನೀಡಲು ಮುಂದಾಗುವರು. ಅವರ ನಿರೀಕ್ಷೆಯಂತೆ ಜೀವನದಲ್ಲಿ ಉನ್ನತ ಮೌಲ್ಯಗಳನ್ನು ಅಳವಡಿಸಿ ಮುನ್ನಡೆಯುವಂತೆ ಅವರು ಕರೆಯಿತ್ತರು.ಇನ್ನೋರ್ವ ಅತಿಥಿ ಮಂಗಳೂರು ಆಕಾಶವಾಣಿಯ ಕಾರ್ಯಕ್ರಮ ಸಹಾಯಕ ನಿರ್ದೇಶಕರಾದ ಸೂರ್ಯನಾರಾಯಣ ಭಟ್ ಅವರು “ಆಧುನಿಕ ಸಮಾಜದಲ್ಲಿ ಸಮೂಹ ಮಾಧ್ಯಮಗಳ ಬಳಕೆ” ಬಗ್ಗೆ ಮಾತನಾಡಿ ಮಾಧ್ಯಮಗಳು ಬೆಳೆದುಬಂದ ಮೈಲಿಗಲ್ಲುಗಳ ಬಗ್ಗೆ ಮಾಹಿತಿ ನೀಡಿದರು.ನವೀನ ಮಾಧ್ಯಮದ ಕುರಿತು ಮಾತಾಡಿದ ಅವರು ಶಿಕ್ಷಣ, ಮಾಹಿತಿ ಮತ್ತು ಮನರಂಜನೆಗಾಗಿ ಮಾಧ್ಯಮಗಳು ಬಳಕೆಯಾಗುತ್ತವೆ. ಇದರಲ್ಲಿ ಎಲ್ಲರೂ ತಮ್ಮ ಅಭಿಪ್ರಾಯಗಳನ್ನು ತಿಳಿಸಲು ಸಾಧ್ಯವಾಗುತ್ತದೆ. ಆದುದರಿಂದ ಮಾಹಿತಿಗಳನ್ನು ಹಂಚಿಕೊಳ್ಳುವಾಗ ಅತ್ಯಂತ ಎಚ್ಚರಿಕೆ ಅಗತ್ಯ ಎಂದು ತಿಳಿಸಿದರು.ಅಮೃತಸಂಸ್ಕೃತಿ ಮತ್ತು ಶ್ರೇಷ್ಠತಾ ಕೇಂದ್ರದ ಗೌರವ ಸಲಹೆಗಾರ ಡಾ. ಜೀವರಾಜ್ ಸೊರಕೆ ಅಮ್ಮ ಮತ್ತು ಆಶ್ರಮದ ಪರಿಚಯ ನೀಡಿದರು. ಕೇಂದ್ರದ ಅಧ್ಯಕ್ಷ ಡಾ.ವಸಂತಕುಮಾರ ಪೆರ್ಲ ಅವರು 2018 ರಿಂದ ಅತ್ಯುತ್ತಮ ಕಾರ್ಯಕ್ರಮಗಳೊಂದಿಗೆ ಯುವ ಸಮುದಾಯಕ್ಕೆ ಸ್ಪೂರ್ತಿ ತುಂಬುವ ಕಾರ್ಯ ಯಶಸ್ವಿಯಾಗಿ ಈ ಕೇಂದ್ರದಿಂದ ನಡೆಯುತ್ತಿದೆ ಎಂದರು. ಅಮೃತ ವಿದ್ಯಾಲಯಂ ಪ್ರಾಂಶುಪಾಲರಾದ ಅಕ್ಷತಾ ಶೆಣೈ ಅತಿಥಿಗಳ ಪರಿಚಯವಿತ್ತರು. ಅತಿಥಿಗಳು ಶ್ರೀ ಬ್ರಹ್ಮಸ್ಥಾನ ಕ್ಷೇತ್ರಕ್ಕೆ ಭೇಟಿ ನೀಡಿದರು. ಕ್ಷೇತ್ರಾಭಿವೃದ್ಧಿ ಸಮಿತಿ ಹಾಗೂ ಸೇವಾ ಸಮಿತಿಯ ವತಿಯಿಂದ ಸನ್ಮಾನಿಸಲಾಯಿತು.ಡಾ.ಕಬ್ಬಿನಾಲೆ ಬಾಲಕೃಷ್ಣ ಭಾರದ್ವಾಜ್ ಸ್ವಾಗತಿಸಿದರು, ಸೇವಾ ಸಮಿತಿಯ ಅಧ್ಯಕ್ಷ ಸುರೇಶ್ ಅಮಿನ್ ವಂದಿಸಿದರು. ಪ್ರವೀಣ್ ಚಂದ್ರ ಶರ್ಮ ವಂದಿಸಿದರು.ಚಿತ್ರಗಳು: ಸತೀಶ್ ಕಾಪಿಕಾಡ್

Scroll to Top