ಪ್ರಾದೇಶಿಕ ವಾರ್ತೆಗಳು

ಪ್ರಾದೇಶಿಕ ವಾರ್ತೆಗಳು

ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ(ಬೂಡಾ) ಅಧ್ಯಕ್ಷರಾಗಿ ಬೇಬಿ ಕುಂದರ್

ಬಂಟ್ವಾಳ: ಬಂಟ್ವಾಳ  ನಗರ ಯೋಜನಾ ಪ್ರಾಧಿಕಾರ(ಬೂಡಾ) ನೂತನ ಅಧ್ಯಕ್ಷರಾಗಿ ಬೇಬಿಕುಂದರ್‌ ಹಾಗೂ ಮೂವರು ಸದಸ್ಯರು ಶನಿವಾರ ಬಿ.ಸಿ.ರೋಡಿನಲ್ಲಿರುವ ಯೋಜನಾ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರುಮಾಜಿ ಸಚಿವ ಬಿ.ರಮಾನಾಥ ರೈ ಅವರು ನೂತನ ಅಧ್ಯಕ್ಷರ ಕೊಠಡಿಯನ್ನು ಉದ್ಘಾಟಿಸಿ ನೂತನ ಅಧ್ಯಕ್ಷ ಹಾಗೂ ಸದಸ್ಯರಿಗೆ ಶುಭಹಾರೈಸಿ ನಗರದ ಅಭಿವೃದ್ದಿಗೆ ಯೋಜನಾ ಪ್ರಾಧಿಕಾರ ಮಹತ್ವದ್ದಾಗಿದೆ ಎಂದರು.ಅಧಿಕಾರ ಸ್ವೀಕರಿಸಿ ಮಾತನಾಡಿದ ಅಧ್ಯಕ್ಷ ಬೇಬಿಕುಂದರ್ ಬಂಟ್ವಾಳ ನಗರದ ಅಭಿವೃದ್ದಿಗೆ ಪೂರಕವಾಗಿ ಯೋಜನೆ ರೂಪಿಸಲಾಗುವುದು,ಕಚೇರಿಗಾಗಮಿಸುವ ಜನಸಾಮಾನ್ಯರಿಗೆ ಅತ್ಯಂತ ಸರಳವಾಗಿ ಕೆಲಸ ಕಾರ್ಯಗಳನ್ನು ಮಾಡಿಕೊಡುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು ಎಂದರು. ನೂತನ ಸದಸ್ಯರಾದ ಮನೋಹರ ಕುಲಾಲ್ ನೇರಂಬೋಳ್, ಹರೀಶ್ ಅಜ್ಜಿಬೆಟ್ಟು ಹಾಗೂ‌ ಅಬ್ದುಲ್ ರಜಾಕ್ ಗೂಡಿನಬಳಿ, ಕಾರ್ಯದರ್ಶಿ ಅಭಿಲಾಷ್ ,ಭಾರತಿ ಬಿ.ಕುಂದರ್ ಹಾಜರಿದ್ದರು. ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಡಿ, ಬೂಡಾ ಮಾಜಿ ಅಧ್ಯಕ್ಷರಾದ ಪಿಯೂಸ್ ಎಲ್ ರೋಡ್ರಿಗಸ್,ಸದಾಶಿವ ಬಂಗೇರ, ಜಿ.ಪಂ.ಮಾಜಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ , ಪದ್ಮಶೇಖರ ಜೈನ್, ಸಿಂಡಿಕೇಟ್ ಸದಸ್ಯ ಸುರೇಶ್ ಕುಲಾಲ್, ಪುರಸಭಾ ಸದಸ್ಯರಾದ ಜನಾರ್ದನ ಚಂಡ್ತಿಮಾರ್, ಲೋಲಾಕ್ಷ ಶೆಟ್ಟಿ,ಜೆಸಿಂತಾ ಡಿಸೋಜ,ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ಪೂಜಾರಿ,ಪಕ್ಷದ ಪ್ರಮುಖರಾದ ಅಶ್ವನಿಕುಮಾರ್ ರೈ,ಪದ್ಮನಾಭ ರೈ, ವೆಂಕಪ್ಪ ಪೂಜಾರಿ ಬಂಟ್ವಾಳ,ಸುದೀಪ್ ಕುಮಾರ್ ರೈ,ಸಂಜೀವ ಪೂಜಾರಿ ಬೊಳ್ಳಾಯಿ,ಮಲ್ಲಿಕಾ ಶೆಟ್ಟಿ,ಸುರೇಶ್ ಜೋರ,ಸುಧಾಕರ ಶೆಣೈ ಖಂಡಿಗ,ಶೈಲಜಾ ರಾಜೇಶ್,ಸುಭಾಶ್ಚಂದ್ರ ಶೆಟ್ಟಿ,ನಾರಾಯಣ ನಾಯ್ಕ್ ಮೊದಲಾದವರಿದ್ದರು.

ಪ್ರಾದೇಶಿಕ ವಾರ್ತೆಗಳು

“ದಕ್ಷ ಆಡಳಿತ ಮತ್ತು ಕಾರ್ಯವೈಖರಿ ರಾಜೇಂದ್ರ ಕುಮಾರ್ ಯಶಸ್ಸಿನ ಸೂತ್ರ” -ಯು.ಟಿ. ಖಾದರ್. ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಗೆ 7ನೇ ಬಾರಿ ಅಧ್ಯಕ್ಷರಾಗಿ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಪದಗ್ರಹಣ ಸಮಾರಂಭ

ಮಂಗಳೂರು *  ಎಸ್ ಸಿಡಿಸಿಸಿ ಬ್ಯಾಂಕ್ ಇದರ ಅಧ್ಯಕ್ಷರಾಗಿ 7ನೇ ಬಾರಿ ಅಧಿಕಾರ ಸ್ವೀಕರಿಸಿರುವ “ಸಹಕಾರ ರತ್ನ” ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ  ಈಚೆಗೆ ಬುಧವಾರ ಮಧ್ಯಾಹ್ನ ಬ್ಯಾಂಕ್ ಸಭಾಂಗಣದಲ್ಲಿ ಜರುಗಿತು. ನಿರ್ದೇಶಕ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಅವರು ಪ್ರಾಸ್ತಾವಿಕ ಮಾತನಾಡಿ, “ರಾಜೇಂದ್ರ ಕುಮಾರ್ ಅವಧಿಯಲ್ಲಿ  ಎಸ್ ಸಿಡಿಸಿಸಿ ಬ್ಯಾಂಕ್ ಯಶಸ್ಸಿನ ತುತ್ತತುದಿಯನ್ನು ಏರಿದೆ. ವರಂಗದಲ್ಲಿ ಹುಟ್ಟಿ ಬೆಳೆದ ಓರ್ವ ಸಾಮಾನ್ಯ ಸಹಕಾರಿ ಬ್ಯಾಂಕ್ ಸಿಬ್ಬಂದಿಯಾಗಿದ್ದ ರಾಜೇಂದ್ರ ಕುಮಾರ್ ಅವರು ಎಸ್ ಸಿಡಿಸಿಸಿ ಬ್ಯಾಂಕ್ ಚುಕ್ಕಾಣಿಯನ್ನು ಹಿಡಿದು ಅಸಾಧ್ಯವಾದುದನ್ನು ಸಾಧಿಸಿ ತೋರಿಸಿದ್ದಾರೆ. ಅವರ ಕಾರ್ಯ ದಕ್ಷತೆಯಿಂದ ಬ್ಯಾಂಕ್ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ” ಎಂದರು. ಎಂಎನ್ ಆರ್ ದಕ್ಷ ಆಡಳಿತಗಾರ  – ಯು. ಟಿ. ಖಾದರ್    ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಮಾತನಾಡಿ, “ದೇವರ ಆಶೀರ್ವಾದ ಇರುವ ಕಾರಣಕ್ಕೆ ರಾಜೇಂದ್ರ ಕುಮಾರ್ ಅವರು ಸತತ ಏಳನೇ ಬಾರಿಗೆ ಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ನನ್ನ ತಂದೆ ಕೂಡ ಈ ಬ್ಯಾಂಕಿನ ನಿರ್ದೆಶಕರಾಗಿದ್ದರು. ಹೀಗಾಗಿ ಚಿಕ್ಕಂದಿನಿಂದಲೇ ಬ್ಯಾಂಕ್ ಕಾರ್ಯವೈಖರಿ ಕುರಿತು ತಿಳಿದಿದ್ದೆ. ಇಂದು ಉತ್ತಮ ಕಾರ್ಯ ವೈಖರಿ ಹಾಗೂ ದಕ್ಷ ಆಡಳಿತದಿಂದಾಗಿ ರಾಜೇಂದ್ರ ಕುಮಾರ್ ಅವರು ಜನರಿಗೆ ಹತ್ತಿರವಾಗಿದ್ದಾರೆ. ಅವರು ಮುಂದೆಯೂ ಸಮಾಜಪರ ಕಾರ್ಯ ನಿರ್ವಹಿಸುವ ಮೂಲಕ ಬ್ಯಾಂಕ್ ಪ್ರಗತಿಯ ಹಾದಿಯಲ್ಲಿ ಮುನ್ನಡೆಯಲಿ” ಎಂದರು. ರೈತರ ಪರ ಬ್ಯಾಂಕ್ : ಎಂಎನ್ ಆರ್ ಅಭಿನಂದನೆ ಸ್ವೀಕರಿಸಿ ಮಾತಾಡಿದ ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು, “ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಲ್ಲಿ ರೈತರು ಸಾಲ ಸಿಗದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡ ಘಟನೆಗಳು ನಡೆದಿಲ್ಲ. ರೈತರ ಶಕ್ತಿಗನುಸಾರವಾಗಿ ಸಾಲ ನೀಡಿ ಅವರನ್ನು ಸಮಾಜದಲ್ಲಿ ಸಶಕ್ತರಾಗಲು ನಾವು ಶ್ರಮಿಸಿದ್ದೇವೆ. ಸಹಕಾರಿ ಕ್ಷೇತ್ರ ಇನ್ನಷ್ಟು ಬೆಳೆಯಲಿ. ರೈತರು ಮಹಿಳೆಯರಿಗೆ ಶಕ್ತಿ ತುಂಬಲು ಬ್ಯಾಂಕ್ ಸದಾ ಸಿದ್ಧವಿದೆ. ಬ್ಯಾಂಕ್ ಅಭಿವೃದ್ಧಿಯಲ್ಲಿ ನಿಮ್ಮೆಲ್ಲರ ಪಾತ್ರವಿದೆ. ಮೊಳಹಳ್ಳಿ ಶಿವರಾಯರು ತೋರಿಸಿದ ದಾರಿಯಲ್ಲಿ ಮುನ್ನಡೆದು ಸಹಕಾರಿ ಕ್ಷೇತ್ರವನ್ನು ಇನ್ನಷ್ಟು ಮುನ್ನಡೆಸೋಣ” ಎಂದರು. ಮಾಜಿ ಸಚಿವ ಅಭಯಚಂದ್ರ ಜೈನ್ ಮಾತನಾಡಿ, “ಎಸ್ ಸಿಡಿಸಿಸಿ ಬ್ಯಾಂಕ್ ನಿಂದ ಸಾಲ ಪಡೆದು ಮಹಿಳೆಯರು ಸ್ವಾವಲಂಬಿಗಳಾಗಿದ್ದಾರೆ. ಕನಿಷ್ಠ ದರದಲ್ಲಿ ಸಾಲ ಪಡೆದ ರೈತಾಪಿ ವರ್ಗದ ಜನರು ಆರ್ಥಿಕವಾಗಿ ಸಶಕ್ತರಾಗಿದ್ದಾರೆ. ಇದೆಲ್ಲವೂ ರಾಜೇಂದ್ರ ಕುಮಾರ್ ಅವರ ಸೇವಾ ದಕ್ಷತೆಯಿಂದ ಸಾಧ್ಯವಾಗಿದೆ” ಎಂದರು.ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮಾತನಾಡಿ, “ಬಂಟರ ಸಂಘಕ್ಕೂ ಎಸ್ ಸಿಡಿಸಿಸಿ ಬ್ಯಾಂಕ್ ಗೂ ಅವಿನಾಭಾವ ಸಂಬಂಧವಿದೆ. ರಾಜೇಂದ್ರ ಕುಮಾರ್ ಅವರ ಅವಧಿಯಲ್ಲಿ ಬ್ಯಾಂಕ್ ಇನ್ನಷ್ಟು ಎತ್ತರಕ್ಕೇರಲಿ” ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಶಾಸಕರುಗಳಾದ ಯಶ್ ಪಾಲ್ ಸುವರ್ಣ,  ಗುರ್ಮೆ ಸುರೇಶ್ ಶೆಟ್ಟಿ , ಮಾಜಿ ಸಚಿವರಾದ ರಮಾನಾಥ ರೈ,  ಮಾಜಿ ಶಾಸಕರುಗಳಾದ ಸುಕುಮಾರ್ ಶೆಟ್ಟಿ, ಪದ್ಮನಾಭ ಕೊಟ್ಟಾರಿ ಶುಭ ಹಾರೈಸಿದರು. ವೇದಿಕೆಯಲ್ಲಿ  ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಸಹಾಯಕ ಆಯುಕ್ತ  ಹರ್ಷವರ್ಧನ್, ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ ಟಿ. ಜಿ. ರಾಜರಾಮ ಭಟ್, ಭಾಸ್ಕರ್ ಎಸ್. ಕೋಟ್ಯಾನ್, ಎಂ. ವಾದಿರಾಜ ಶೆಟ್ಟಿ, ಐಕಳಬಾವ ದೇವಿಪ್ರಸಾದ್  ಶೆಟ್ಟಿ ಬೆಳಪು, ಶಶಿಕುಮಾರ್ ರೈ, ಎಸ್. ರಾಜು ಪೂಜಾರಿ, ಎಂ. ಮಹೇಶ್ ಹೆಗ್ಡೆ, ಅಶೋಕ್ ಕುಮಾರ್ ಶೆಟ್ಟಿ, ಕೆ. ಹರಿಶ್ಚಂದ್ರ, ಮೋನಪ್ಪ ಶೆಟ್ಟಿ ಎಕ್ಕಾರು, ಕೆ.ಜೈರಾಜ್ ಬಿ. ರೈ , ಎಸ್. ಬಿ. ಜಯರಾಮ್ ರೈ,      ಎಸ್. ಎನ್. ಮನ್ಮಥ, ಕುಶಾಲಪ್ಪ ಗೌಡ ಪಿ. ಮುಖ್ಯಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್, ಸಹಕಾರ ಸಂಘಗಳ ಉಪನಿಬಂಧಕರಾದ ಎನ್. ರಮೇಶ್ ಲಾವಣ್ಯ, ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಸುಧೀರ್ ಕುಮಾರ್ ಹಾಗೂ ರಾಜೇಂದ್ರ ಕುಮಾರ್ ಪುತ್ರ ಮೇಘರಾಜ್ ಮತ್ತಿತರರು ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ಮಂಗಳೂರಿನ ಹೋಲಿ ಕ್ರಾಸ್ ಚರ್ಚ್ ಕೊರ್ಡೇಲ್ ಅವರ ನೇತೃತ್ವದಲ್ಲಿ ಮಾರ್ಚ್ 25 ರ ಸಂಜೆ 4.30 ಕ್ಕೆ ‘ಶಿಲುಬೆಯ ಹಾದಿ’.

ಮಂಗಳೂರು :ಮಂಗಳೂರಿನ ಹೋಲಿ ಕ್ರಾಸ್ ಚರ್ಚು ಕೊರ್ಡೆಲ್ ಅವರ ನೇತೃತ್ವದಲ್ಲಿ ಮಾರ್ಚ್ 25 ರಂದು ಸಂಜೆ 4.3೦ ಗಂಟೆಗೆ “ಶಿಲುಬೆಯ ಹಾದಿ” (ಕುರ್ಸಾಚಿ ವಾಟ್) ನ್ನು ಸಿಟಿ ವಲಯದ 12 ಚರ್ಚುಗಳ ಸಹಯೋಗದಿಂದ ನಡೆಸಲಾಗುತ್ತದೆ. ಕೊರ್ಡೆಲ್, ವಾಮಂಜೂರ್, ಪಾಲ್ದಾನೆ, ಬೊಂದೇಲ್, ದೆರೆಬೈಲು, ನೀರುಮಾರ್ಗ, ಕೆಲರೈ, ಬಜ್ಜೊಡಿ, ಕಪಿತಾನಿಯೋ, ಬಜಾಲ್, ಪೆರ್ಮಾಯಿ, ಶಕ್ತಿನಗರ ಚರ್ಚುಗಳು ಭಾಗವಹಿಸಲಿದ್ದು, ಏಸುಕ್ರಿಸ್ತರು ಶಿಲುಬೆಯ 14 ಹಾದಿಗಳನ್ನು ಈ ಚರ್ಚುಗಳ ಕಲಾವಿದರ ನಟನೆಯ ಮೂಲಕ ಚರ್ಚಿನ ಆವರಣದ ಒಳಗೆ ನಡೆಸಲಾಗುವುದು. ಶಿಲುಬೆಯ ಹಾದಿಯ 14 ನಿಲ್ದಾಣಗಳನ್ನು (ಸ್ಟೇಶನ್) ನ್ನು ವಲಯದ 12 ಚರ್ಚುಗಳ ಹಾಗೂ ಧರ್ಮಗುರುಗಳ ಮತ್ತು ಧರ್ಮಭಗಿನಿಯರ ಪ್ರತಿನಿಧಿಗಳು ನಡೆಸಿಕೊಡುತ್ತಾರೆ. ಸಂಜೆ 4.30ಕ್ಕೆ ಬಲಿಪೂಜೆ, ನಂತರ ಶಿಲುಬೆಯ ಹಾದಿ, 12ನೇ ನಿಲ್ದಾಣದಲ್ಲಿ ಪ್ರವಚನವನ್ನು ನಡೆಸಿಲಾಗುವುದು.ಈ ಬಗ್ಗೆ ಪೂರ್ವಭಾವಿ ಸಭೆಯಲ್ಲಿ ಚರ್ಚಿನ ಪ್ರಧಾನ ಧರ್ಮಗುರುಗಳಾದ ವಂ| ಪಾ| ಕ್ಲಿಫರ್ಡ್ ಫೆರ್ನಾಂಡಿಸ್ ಅವರು ಸ್ಕಿçಪ್ಟ್ ಬಿಡುಗಡೆ ಮಾಡಿದರು. ಸಹಾಯಕ ಧರ್ಮಗುರುಗಳಾದ ವಂ| ಪಾ| ಪಾವುಲ್ ಡಿ’ಸೋಜ, ಧರ್ಮಪ್ರಾಂತ್ಯದ ಪಿ.ಆರ್.ಓ. ರೋಯ್ ಕ್ಯಾಸ್ಟಲಿನೋ, ಚರ್ಚಿನ ಉಪಾಧ್ಯಕ್ಷ ರೂತ್ ಕ್ಯಾಸ್ಟಲಿನೋ, ಕಾರ್ಯದರ್ಶಿ ಅನಿಲ್ ಡೆಸಾ, ಸರ್ವ ಆಯೋಗದ ಸಂಚಾಲಕ ಡೊಲ್ಫಿ ಡಿ’ಸೋಜ,12 ಚರ್ಚುಗಳ ಉಪಾಧ್ಯಕ್ಷರು ಉಪಸ್ಥಿತರಿದ್ದರು. ಕಲಾವಿದರಿಗೆ ನಿರ್ದೇಶಕರಾಗಿ ಡೆನ್ನಿಸ್ ಮೊಂತೆರೋ ಹಾಗೂ ಸ್ಟ್ಯಾನ್ಲಿ ಅಲ್ವಾರೀಸ್, ಏಸು ಕ್ರಿಸ್ತರ ಪಾತ್ರವನ್ನು ವಿಕಾಸ್ ಕುಲಾಕುಲ್, ಮದರ್ ಮೇರಿಯ ಪಾತ್ರವನ್ನು ಆ್ಯಶೆಲ್ ಡಿ’ಸಿಲ್ವಾ, ಪಿಲಾತನ ಪಾತ್ರವನ್ನು ಆಲ್ವಿನ್ ಪಾಯಸ್ ಮುಂತಾದವರು ನಿರ್ವಹಿಸಲಿದ್ದಾರೆ.

ಪ್ರಾದೇಶಿಕ ವಾರ್ತೆಗಳು

9 ಮಂದಿ ಹಿರಿಯ ಪತ್ರಕರ್ತರಿಗೆ ಪ್ರೆಸ್ ಕ್ಲಬ್ ಗೌರವ ಸನ್ಮಾನ. ಮೈಮುನಾ-ಮರ್ಝಿನಾರಿಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ. ಸಾಧಕರನ್ನು ಗುರುತಿಸುವುದು ಸಮಾಜಕ್ಕೆ ಪ್ರೇರಣೆ- ಡಾ.ವೈ.ಭರತ್ ಶೆಟ್ಟಿ

ಮಂಗಳೂರು : ಸಾಧಕರನ್ನು ಗುರುತಿಸಿ ಗೌರವಿಸುವುದರಿಂದ ಸಮಾಜಕ್ಕೆ ಪ್ರೇರಣೆ ನೀಡಿದಂತಾಗುತ್ತದೆ ಎಂದು ಶಾಸಕ ಡಾ.ವೈ.ಭರತ್ ಶೆಟ್ಟಿ ಹೇಳಿದರು.ಮರವೂರಿನ ದಿ ಗ್ರ್ಯಾಂಡ್ ಬೇಯಲ್ಲಿ ಭಾನುವಾರ ನಡೆದ ಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆಯಲ್ಲಿ ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ ವಿತರಿಸಿ ಮಾತನಾಡಿದ ಅವರುಹೈನುಗಾರಿಕೆಯ ಮೂಲಕ ಅತ್ಯಪೂರ್ವ ಸಾಧನೆ ಮಾಡಿರುವ ಮೈಮೂನಾ ಮತ್ತು ಮರ್ಝಿನಾ ಅವರು ಮಹಿಳಾ ಸಬಲೀಕರಣಕ್ಕೆ ಮಾದರಿಯಾಗಿದ್ದಾರೆ. ಅವರನ್ನು ಗುರುತಿಸಿ ಪ್ರೆಸ್ ಕ್ಲಬ್ ಪ್ರಶಸ್ತಿ ನೀಡಿರುವುದು ಶ್ಲಾಘನೀಯ ಎಂದರು. ಕಾರ್ಯಕ್ರಮ ಉದ್ಘಾಟಿಸಿದ ನಟ -ನಿರ್ದೇಶಕ ದೇವದಾಸ್ ಕಾಪಿಕಾಡ್ ಮಾತನಾಡಿ “ಸಮಾಜದಲ್ಲಿ ಮಾಧ್ಯಮ ರಂಗ ಮಹತ್ವದ ಸ್ಥಾನವನ್ನು ಪಡೆದಿದೆ. ಗುರು , ಹಿರಿಯರನ್ನು ಗೌರವಿಸಿದರೆ ಮಾತ್ರ ಸಾಧನೆಯ ಹಾದಿಯಲ್ಲಿ ಯಶಸ್ಸು ಕಾಣಲು ಸಾಧ್ಯ ” ಎಂದರು.ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಪತ್ರಕರ್ತರಾದ ಅನ್ನು ಮಂಗಳೂರು, ರವಿ ಪೊಸವಣಿಕೆ, ರಾಘವೇಂದ್ರ ಭಟ್, ಪ್ರಕಾಶ್ ಮಂಜೇಶ್ವರ, ಕೃಷ್ಣ ಕೋಲ್ಚಾರ್, ರಾಜೇಶ್ ಕಿಣಿ, ಅಶೋಕ್ ಶೆಟ್ಟಿ ಬಿ.ಎನ್., ರವೀಂದ್ರ ಶೆಟ್ಟಿ ಕುತ್ತೆತ್ತೂರು, ಶರತ್ ಸಾಲ್ಯಾನ್ ಇವರುಗಳಿಗೆ ಪ್ರೆಸ್ ಕ್ಲಬ್ ಗೌರವ ಪ್ರದಾನ ಹಾಗೂ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೆರವೇರಿತು.ಪ್ರೆಸ್ ಕ್ಲಬ್ ಪ್ರಶಸ್ತಿ ತೀರ್ಪು ಗಾರರಾದ ಎಸ್ ಡಿಎಂ ಕಾಲೇಜಿನ ಉಪನ್ಯಾಸಕ ಪುಷ್ಪರಾಜ್ ಮತ್ತು ವಿಶ್ರಾಂತ ಪತ್ರಕರ್ತ ಕುಮಾರ್ ನಾಥ್ ಅವರನ್ನು ಗೌರವಿಸಲಾಯಿತು.ಪ್ರೆಸ್ ಕ್ಲಬ್ ಸಿಬ್ಬಂದಿ ಚಂಚಲಾಕ್ಷಿ ಅವರನ್ನು ಸನ್ಮಾನಿಸಲಾಯಿತು.ಇದೇ ಸಂದರ್ಭ ಮತದಾನದ ಪ್ರತಿಜ್ಞಾ ವಿಧಿಯನ್ನು ಹರೀಶ್ ಮೋಟುಕಾನ ನೆರವೇರಿಸಿದರು.ಸಮಾರಂಭದಲ್ಲಿ ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಎ.ಖಾದರ್ ಶಾ, ಮಾಜಿ ಮೇಯರ್‌ ಗಳಾದ ಶಶಿಧರ್ ಹೆಗ್ಡೆ,ಭಾಸ್ಕರ ಕೆ,ಮನಪಾ ಸದಸ್ಯ ನವೀನ್ ಡಿ ಸೋಜ, ದ.ಕ.ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ,ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್, ಕಾರ್ಯನಿರತ ಪತ್ರ ಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಪ್ರೆಸ್ ಕ್ಲಬ್ ಪೂರ್ವಾಧ್ಯಕ್ಷ ಅನ್ನು ಮಂಗಳೂರು, ಹಿರಿಯ ಪತ್ರಕರ್ತರಾದ ಬಿ. ರವೀಂದ್ರ ಶೆಟ್ಟಿ, ವಾಲ್ಟರ್ ನಂದಳಿಕೆ, ಉಪಸ್ಥಿತರಿದ್ದರು. ಸತೀಶ್ ಇರಾ ಪ್ರಾರ್ಥಿಸಿದರು. ಮಹಮ್ಮದ್ ಆರಿಫ್ ಪಡುಬಿದ್ರಿ, ಆರ್.ಸಿ.ಭಟ್ ಮತ್ತು ಆತ್ಮಭೂಷಣ್ ಭಟ್ ಸನ್ಮಾನಿತರನ್ನು ಪರಿಚಯಿಸಿದರು.ಪ್ರೆಸ್ ಕ್ಲಬ್ ಪ್ರದಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು. ಕಾರ್ಯದರ್ಶಿ ಪುಷ್ಪರಾಜ್ ಬಿ.ಎನ್ ಕಾರ್ಯ ಕ್ರಮ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ಮೈಮೂನಾ ಮತ್ತು ಮರ್ಝಿನಾರಿಗೆ ಪ್ರೆಸ್‌ಕ್ಲಬ್ ವರ್ಷದ ಪ್ರಶಸ್ತಿ. ಅನ್ನು ಮಂಗಳೂರು, ರಾಘವೇಂದ್ರ ಭಟ್, ಪ್ರಕಾಶ್ ಮಂಜೇಶ್ವರ , ಕೃಷ್ಣ ಕೋಲ್ಚಾರ್, ರವಿ ಪೊಸವಣಿಕೆ, ರವೀಂದ್ರ ಶೆಟ್ಟಿ ಕುತ್ತೆತ್ತೂರು, ರಾಜೇಶ್ ಕಿಣಿ, ಶರತ್ ಸಾಲ್ಯಾನ್, ಅಶೋಕ್. ಶೆಟ್ಟಿ ಬಿ.ಎನ್. ಸೇರಿದಂತೆ 9 ಮಂದಿ ಹಿರಿಯ ಪತ್ರಕರ್ತರಿಗೆ ಪ್ರೆಸ್‌ಕ್ಲಬ್ ಗೌರವ ಸನ್ಮಾನ.ಮಾ.1೦ರಂದು ಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆ.

ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಪ್ರೆಸ್‌ಕ್ಲಬ್ ದಿನಾಚರಣೆ ಮಾ.1೦ರಂದು ಬೆಳಗ್ಗೆ9.3೦ರಿಂದ ಮರವೂರಿನ ದಿ ಗ್ರ್ಯಾಂಡ್ ಬೇಯಲ್ಲಿ ನಡೆಯಲಿದೆ. ಹೈನುಗಾರಿಕೆಯಲ್ಲಿ ಅಪೂರ್ವ ಸಾಧನೆಗೈದ ಹರೇಕಳದ ಮೈಮೂನಾ ಮತ್ತು ಮರ್ಝಿನಾ ಅವರು ಪ್ರೆಸ್‌ಕ್ಲಬ್ ವರ್ಷದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪತ್ರಕರ್ತರಾದ ಅನ್ನು ಮಂಗಳೂರು, ರಾಘವೇಂದ್ರ ಭಟ್, ಪ್ರಕಾಶ್ ಮಂಜೇಶ್ವರ , ಕೃಷ್ಣ ಕೋಲ್ಚಾರ್, ರವಿ ಪೊಸವಣಿಕೆ, ರವೀಂದ್ರ ಶೆಟ್ಟಿ ಕುತ್ತೆತ್ತೂರು, ರಾಜೇಶ್ ಕಿಣಿ, ಶರತ್ ಸಾಲ್ಯಾನ್, ಅಶೋಕ್. ಶೆಟ್ಟಿ ಬಿ.ಎನ್.ಇವರುಗಳು ಪ್ರೆಸ್‌ಕ್ಲಬ್ ಗೌರವ ಸನ್ಮಾನಕ್ಕೆ ಆಯ್ಕೆಯಾಗಿದ್ದಾರೆ.ನಟ, ನಿರ್ದೇಶಕ ನಟ ದೇವದಾಸ ಕಾಪಿಕಾಡ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ ಡಾ.ವೈ.ಭರತ್ ಶೆಟ್ಟಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಎ. ಖಾದರ್ ಶಾ, ಕರ್ನಾಟಕ ಲೋಕ ಸೇವಾ ಆಯೋಗದ ಸದಸ್ಯ ಡಾ. ರೊನಾಲ್ಡ್ ಅನಿಲ್ ಫೆರ್ನಾಂಡಿಸ್, ಪ್ರೆಸ್‌ಕ್ಲಬ್ ನ ಸ್ಥಾಪಕ ಅಧ್ಯಕ್ಷ ಕೆ.ಆನಂದ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಆರ್.ರಾಮಕೃಷ್ಣ , ಪ್ರೆಸ್‌ಕ್ಲಬ್ ನ ನಿಕಟಪೂರ್ವ ಅಧ್ಯಕ್ಷ ಅನ್ನು ಮಂಗಳೂರು, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ ಉಪಸ್ಥಿತರಿರುವರು. ಇದೇ ಸಂದರ್ಭ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೆರವೇರಲಿದೆ ಎಂದು ಪ್ರೆಸ್‌ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

“ಪುರುಷೋತ್ತಮನ‌ ಪ್ರಸಂಗ” ಕನ್ನಡ ಸಿನಿಮಾ ಬಿಡುಗಡೆ

ಮಂಗಳೂರು: ರಾಷ್ಟ್ರಕೂಟ ಪಿಚರ್ಸ್ ಲಾಂಛನದಲ್ಲಿ ವಿ ರವಿ ಕುಮಾರ್ ನಿರ್ಮಾಣದಲ್ಲಿ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ನಿರ್ದೇಶನದಲ್ಲಿ ತಯಾರಾದ ಪುರುಷೋತ್ತಮನ‌ ಪ್ರಸಂಗ ಸಿನಿಮಾ ಮಂಗಳೂರಿನ ಭಾರತ್ ಸಿನಿಮಾಸ್ ನಲ್ಲಿ ತೆರೆಕಂಡಿತು. ಭುಜಬಲಿ ಧರ್ಮಸ್ಥಳ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ದೇವದಾಸ್ ಕಾಪಿಕಾಡ್ ತುಳು ನಾಟಕ ಮತ್ತು ತುಳು ಸಿನಿಮಾಗಳ ಮೂಲಕ ಅದ್ವಿತೀಯ ಸಾಧನೆಗೈದವರು. ಈಗ ಪುರುಷೋತ್ತಮನ ಪ್ರಸಂಗ ಸಿನಿಮಾವನ್ನು ಕನ್ನಡದಲ್ಲಿ ನಿರ್ದೇಶನ ಮಾಡುವ ಮೂಲಕ ಕನ್ನಡ ಚಿತ್ರರಂಗಕ್ಕೂ ಪರಿಚಯವಾಗುತ್ತಿದ್ದಾರೆ. ಇದರಲ್ಲಿ ಅವರು ಯಶಸ್ಸನ್ನೂ ಕಂಡಿದ್ದಾರೆ. ಮತ್ತಷ್ಟು ಕನ್ನಡ ಸಿನಿಮಾಗಳನ್ನು ನಿರ್ದೇಶನ ಮಾಡಲಿ ಎಂದು ಶುಭ ಹಾರೈಸಿದರು.ವಾರ್ತಾಧಿಕಾರಿ ಖಾದರ್ ಷಾ ಶುಭ ಹಾರೈಸಿದರು. ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್ ಬೈಲ್ ಮಾತನಾಡಿ ಕಾಪಿಕಾಡ್ ತುಳು ಸಿನಿಮಾರಂಗದಲ್ಲಿ ಅನೇಕ ಉತ್ತಮ ಸಿನಿಮಾಗಳನ್ನು ನೀಡಿದ್ದಾರೆ. ಈಗ ಕನ್ನಡದಲ್ಲಿ ನಿರ್ದೇಶನ ಮಾಡಿದ ಸಿನಿಮಾ ಸೂಪರ್ ಹಿಟ್ ಆಗಲಿ ಎಂದರು. ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್ ಮಾತನಾಡಿ ಕೋಸ್ಟಲ್ ವುಡ್ ನಿಂದ ದೇವದಾಸ್ ಕಾಪಿಕಾಡ್ ಕನ್ನಡ ಚಿತ್ರರಂಗಕ್ಕೆ ಹೋಗಿದ್ದಾರೆ. ಅವರಿಂದ ಒಳ್ಳೆಯ ಸಿನಿಮಾಗಳು ಬರಲಿ. ಪುರುಷೋತ್ತಮನ‌ ಪ್ರಸಂಗ ಒಂದು ಸದಭಿರುಚಿಯ ಒಳ್ಳೆಯ ಸಿನಿಮಾ. ಸಿನಿಮಾ ನೋಡಿ ಎಲ್ಲರೂ ಪ್ರೋತ್ಸಾಹ ನೀಡಿ ಎಂದು ಶುಭ ಹಾರೈಸಿದರು.ಕಿಶೋರ್ ಕೊಟ್ಟಾರಿ, ಗಿರೀಶ್ ಶೆಟ್ಟಿ, ಸಾಯಿ ಕೃಷ್ಣ ಕುಡ್ಲ, ಮೈಮ್ ರಾಮ್ ದಾಸ್, ಸದಾಶಿವ ಅಮೀನ್, ದೇವದಾಸ್ ಕಾಪಿಕಾಡ್, ಶರ್ಮಿಳಾ ಕಾಪಿಕಾಡ್, ನಾಯಕ ನಟ ಅಜಯ್ ಪೃಥ್ವಿ, ನಾಯಕಿ ರಿಷಿಕಾ ನಾಯಕ್, ಜ್ಯೋತಿಷ್ ಶೆಟ್ಟಿ, ಅರ್ಜುನ್ ಕಾಪಿಕಾಡ್, ಸಂದೀಪ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.ಉತ್ತಮ ಹಾಸ್ಯ ಕಥಾಹಂದರ ಹೊಂದಿರುವ ಈ ಸಿನಿಮಾದ ಮೂಲಕ ಅಜಯ್ ಎಂಬ ನವ ನಟನನ್ನು ಹಾಗೂ ರಿಷಿಕಾ ನಾಯ್ಕ್ ಮತ್ತು ದೀಪಿಕಾ ಎಂಬರನ್ನು ದೇವದಾಸ್ ಕಾಪಿಕಾಡ್ ಕನ್ನಡಕ್ಕೆ ಪರಿಚಯಿಸಿದ್ದಾರೆ.ಹಾಸ್ಯ ದಿಗ್ಗಜರನ್ನೊಳಗೊಂಡ ತಾರಾಗಣದಲ್ಲಿ ಬಹಳಷ್ಟು ಮಂದಿ ಹೊಸಬರಿಗೂ ಅವಕಾಶ ನೀಡಲಾಗಿದೆ.ಕನ್ನಡದಲ್ಲಿ ನಟನಾಗಿ ಗುರುತಿಸಿ ಹೆಸರು ಗಳಿಸಿರುವ ದೇವದಾಸ್ ಕಾಪಿಕಾಡ್ ಮೊದಲನೇ ಬಾರಿಗೆ ಕನ್ನಡದಲ್ಲಿ ಕತೆ ಚಿತ್ರಕತೆ ಸಾಹಿತ್ಯ ಸಂಭಾಷಣೆ ಬರೆದು ಸಿನಿಮಾ ನಿರ್ದೇಶಿಸಿದ್ದಾರೆ. ಅಲ್ಲದೆ ಒಂದು ಪ್ರಮುಖ ಪಾತ್ರದಲ್ಲೂ ಅವರು ಕಾಣಿಸಿ ಕೊಂಡಿದ್ದಾರೆ. ಇವರಿಗೆ ನಿರ್ದೇಶನದಲ್ಲಿ ಅರ್ಜುನ್ ಕಾಪಿಕಾಡ್ ಸಹ ನಿರ್ದೇಶಕರಾಗಿ ಸಾಥ್ ನೀಡಿದ್ದಾರೆ. ನಿರ್ಮಾಪಕರು: ವಿ. ರವಿ ಕುಮಾರ್.ತಾರಾಗಣದಲ್ಲಿ ಅಜಯ್ ನಾಯಕ ನಟ ರಿಷಿಕಾ ನಾಯ್ಕ್ (ನಾಯಕಿ) ದೀಪಿಕಾ ( ನಾಯಕಿ) ದೇವದಾಸ್ ಕಾಪಿಕಾಡ್ ನವೀನ್ ಡಿ ಪಡೀಲ್ ಅರವಿಂದ ಬೋಳಾರ್ ಭೋಜರಾಜ ವಾಮಂಜೂರು ಸಾಯಿಕೃಷ್ಣ ಕುಡ್ಲ, ಶೋಭರಾಜ್ ಪಾವೂರು, ದೀಪಕ್ ರೈ ಪಾಣಾಜೆ ಚೇತನ್ ರೈ ಮಾಣಿ, ಜ್ಯೋತಿಷ್ ಶೆಟ್ಟಿ ಇದ್ದಾರೆ. ತಾಂತ್ರಿಕ ವರ್ಗಸಹ ನಿರ್ದೇಶನ: ಅರ್ಜುನ್ ಕಾಪಿಕಾಡ್ ಸಹಾಯಕ ನಿರ್ದೇಶನ: ಅರ್ಜುನ್ ಕಜೆ, ಪ್ರಶಾಂತ್ ಕಲ್ಲಡ್ಕ, ವಿಕ್ರಮ್ ದೇವಾಡಿಗ, ಅನೂಪ್ ಸಾಗರ್, ಕ್ಯಾಮರಾ -ವಿಷ್ಣು, ಸಹಾಯ: ಪುಟ್ಟ, ಸಂಗೀತ – ನಕುಲ್ ಅಭಯಂಕರ್, ವಸ್ತ್ರವಿನ್ಯಾಸ – ಶರತ್ ಪೂಜಾರಿ, ಸಹ ನಿರ್ಮಾಪಕರು- ಅಬೂಬಕರ್ ಪುತ್ತಕ, ಲೈನ್ ಪ್ರೊಡ್ಯುಸರ್ – ಸಂದೀಪ್ ಶೆಟ್ಟಿ, ಪ್ರೊಡಕ್ಷನ್ ಟೀಮ್ – ಸಂತೋಷ್, ರಮಾನಂದ, ಮುನ್ನ, ರಾಜೇಶ್.

ಪ್ರಾದೇಶಿಕ ವಾರ್ತೆಗಳು

ಬೆಂಗಳೂರು ಬಂಟರ ಸಂಘದ ಮಾಜಿ ಅಧ್ಯಕ್ಷ ಉಪೇಂದ್ರ ಶೆಟ್ಟಿಯವರನ್ನು ಶ್ಲಾಘಿಸಿದ ದೂರಗಾಮಿ ನಾಯಕ, ಬಡವರ ಬಂಧು, ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆ.

ಇತ್ತೀಚೆಗೆ ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆ ಅವರ ಸಾಧನೆ ಸಹಿತ ಪರಿಚಯವನ್ನು Mp mlas news tv ಅಂತರ ಜಾಲ ಸುದ್ದಿ ಮಾಧ್ಯಮದಲ್ಲಿ ಪ್ರಕಟಿಸಲಾಗಿತ್ತು. ಈ ಬಗ್ಗೆ mp mlas news ಸಂಪಾದಕ ಡಾ. ಅಶೋಕ್ ಶೆಟ್ಟಿ ಬಿ. ಎನ್ ಅವರೊಂದಿಗೆ ಮಾತನಾಡಿದ ಸಂತೋಷ್ ಶೆಟ್ಟಿಯವರು ತನ್ನ ಸಾಧನೆಗೆ ಸ್ಫೂರ್ತಿ ತುಂಬಿದವರಲ್ಲಿ ಉಪೇಂದ್ರ ಶೆಟ್ಟಿಯವರು ಪ್ರಮುಖರು. ಅವರು ಬೆಂಗಳೂರು ಬಂಟರ ಸಂಘದ ಅಧ್ಯಕ್ಷರಾಗಿ ಸಲ್ಲಿಸಿದ ಸೇವೆ ಅನನ್ಯವಾಗಿದೆ. ಬೆಂಗಳೂರಿನಲ್ಲಿ ಯೂನಿವರ್ಸಲ್ ಕೋಚಿಂಗ್ ಸೆಂಟರ್ ಎನ್ನುವ ಜನಪ್ರಿಯ ಶಿಕ್ಷಣ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾಗಿರುವ ಅವರು ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣವನ್ನು ನೀಡುವ ಮಹಾನ್ ವಿದ್ಯಾ ದಾನಿಯೆಂದು ಶ್ಲಾಘಿಸಿದ್ದಾರೆ. ಈ ಸಂದರ್ಭದಲ್ಲಿ ಉಪೇಂದ್ರ ಶೆಟ್ಟಿಯವರ ಕುರಿತಾಗಿ mp mlas news ನಲ್ಲಿ 4 ವರ್ಷಗಳ ಹಿಂದೆಯೇ ನೇರ ನಡೆ ನುಡಿಯ ನಿರ್ಭಿತ ನಾಯಕ, ದಾನ ಶೂರ ಕರ್ಣನೆಂದು ಬೆಳಕು ಚೆಲ್ಲಿದ್ದನ್ನು mp mla’s ನ್ಯೂಸ್ ಸಂಪಾದಕರು ನೆನಪಿಸಿಕೊಂಡರು. ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಅವರು ಸಾಧನೆಯ ಹಾದಿಯಲ್ಲಿ ಕಠಿಣ ಪರಿಶ್ರಮದಲ್ಲಿ ಸಾಗಿ ಯಶಸ್ಸು ಸಾಧಿಸಿದ್ದಾರೆ. ಆದರೆ, ಅವರಿಗೆ ಸ್ಫೂರ್ತಿಯಾದ ಬಂಟ ನಾಯಕರನ್ನು ಅವರು ಮರೆತಿಲ್ಲ. ಅದು ಅವರ ದೊಡ್ಡ ಗುಣ. ಇದು ಎಲ್ಲರಿಗೂ ಬರುವುದಿಲ್ಲ. ಸಂತೋಷ್ ಶೆಟ್ಟಿಯವರು ಉಪೇಂದ್ರ ಶೆಟ್ಟಿಯವರಂತೆ ದೂರಗಾಮಿ ನಾಯಕ, ನೇರ ನಡೆ ನುಡಿಯ ಸ್ವಚ್ಛ ಮನಸ್ಸಿನ ಸಮಾಜ ಸೇವಕ ಮತ್ತು ಬಡವರ ಬಂಧು.

ಪ್ರಾದೇಶಿಕ ವಾರ್ತೆಗಳು

ಮಂಗಳೂರು ಪತ್ರಿಕೋದ್ಯಮದ ಭೀಷ್ಮ ಮನೋಹರ್ ಪ್ರಸಾದ್ ನಿಧನದಿಂದ ಒಬ್ಬ ಪ್ರಬುದ್ಧ ಮಾರ್ಗದರ್ಶಕನನ್ನು ಕಳೆದುಕೊಂಡಂತಾಗಿದೆ. | ಕಂಬನಿ |

ಮಂಗಳೂರು: ಪತ್ರಿಕೋದ್ಯಮದ ಭೀಷ್ಮ, ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ನಮ್ಮನ್ನು ಅಗಲಿದ್ದಾರೆ. ಇದು ಪತ್ರಿಕೋದ್ಯಮಕ್ಕೆ ತುಂಬಲಾರದ ನಷ್ಟ.ಅಲ್ಪಕಾಲದ ಅನಾರೋಗ್ಯದಿಂದ ಮಾರ್ಚ್. 1ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾದ ಅವರು ಪತ್ರಕರ್ತ ಮಾತ್ರವಾಗಿರದೆ, ವಾಗ್ಮಿ, ಬರಹಗಾರ, ಸಂಸ್ಕೃತಿ, ಕ್ರೀಡೆ, ಸಾಹಿತ್ಯ, ಲಲಿತಕಲೆ, ರಂಗಭೂಮಿ, ಚಲನಚಿತ್ರ, ಸಾಮಾಜಿಕ ಜಾಗೃತಿ, ಸಂಘಟನೆ, ಶಿಕ್ಷಣ ಹೀಗೇ ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ತನ್ನ ಅಧ್ಯಯನ ಶೀಲತೆಯಿಂದ ಸಂಪನ್ಮೂಲ ಶಕ್ತಿಯಾಗಿ ಬೆಳೆದ ಅವರು ಎಲ್ಲ ವಿಚಾರಗಳ ಬಗ್ಗೆಯೂ ಪರಿಪಕ್ವತೆಯಿಂದ ಮಾತಾಡುವ ಹಾಗೂ ಅಪೂರ್ವ ನೆನಪಿನ ಶಕ್ತಿಯನ್ನು ಹೊಂದಿದ್ದರು.ಯಕ್ಷಗಾನ, ಕಂಬಳ, ತುಳುನಾಡಿನ ಇತಿಹಾಸ, ಜಾನಪದ ಆಚರಣೆ, ಪರಂಪರೆ, ಸಾಹಿತ್ಯ ಎಲ್ಲ ವಿಷಯಗಳ ಬಗ್ಗೆ ಚೆನ್ನಾಗಿ ಬರೆಯಬಲ್ಲವರಾಗಿದ್ದರು . ಅಷ್ಟೇ ಚೆನ್ನಾಗಿ ಮಾತನಾಡಬಲ್ಲವರಾಗಿದ್ದರು.‘ಉದಯವಾಣಿ’ ದೈನಿಕದ ವಿಶ್ರಾಂತ ಸಹಾಯಕ ಸಂಪಾದಕರಾಗಿದ್ದ ಅವರು ಸಮಸ್ತ ಪತ್ರಕರ್ತ ಮಿತ್ರರ ಅಚ್ಚುಮೆಚ್ಚಿನ ‘ಮನೋಹರಣ್ಣ’ ಆಗಿದ್ದರು.3೦ ಸಣ್ಣ ಕಥೆಗಳನ್ನು ಬರೆದಿರುವ ಅವರು ಉದಯವಾಣಿಯಲ್ಲಿ 3 ಸಾವಿರಕ್ಕೂ ಅಧಿಕ ವಿಶೇಷ ವರದಿ, ಸಂದರ್ಶನ, ತನಿಖಾ ವರದಿ, ನುಡಿಚಿತ್ರಗಳನ್ನು ಬರೆದಿದ್ದಾರೆ. ಮದರ್ ಥೆರೇಸಾ, ಅಮಿತಾಭ್ ಬಚ್ಚನ್, ಜೇಸುದಾಸ್, ಅಬ್ದುಲ್ ಕಲಾಂ, ವಾಜಪೇಯಿ, ಸಚಿನ್ ತೆಂಡುಲ್ಕರ್, ಐಶ್ಚರ್ಯ ರೈ ಸಹಿತ ದೇಶದ ಬಹುತೇಕ ಗಣ್ಯರನ್ನು ಅವರು ಸಂದರ್ಶನ ನಡೆಸಿದ್ದರು.ಆರಂಭದಲ್ಲಿ ‘ನವಭಾರತ’ ದೈನಿಕದಲ್ಲಿ ವೃತ್ತಿ ಜೀವನ ಆರಂಭಿಸಿದ ಅವರು ಬಳಿಕ ‘ಉದಯವಾಣಿ’ ಮಂಗಳೂರು ವರದಿಗಾರರಾಗಿ ಸೇರ್ಪಡೆಗೊಂಡು ಮುಖ್ಯ ವರದಿಗಾರರಾಗಿ, ಬ್ಯುರೋ ಮುಖ್ಯಸ್ಥರಾಗಿ, ಸಹಾಯಕ ಸಂಪಾದಕರಾಗಿ ಸೇವೆ ಸಲ್ಲಿಸಿದ್ದರು. ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದಿಸುವ ವರದಿಗಾರಿಕೆಯಿಂದ ಜನಪ್ರಿಯತೆ ಪಡೆದಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಸ್ವಾತಂತ್ರ್ಯ ಹೋರಾಟದ ಬಗ್ಗೆ ಸತತ 25 ಸಂಶೋಧನಾ ಲೇಖನ ಪ್ರಕಟಿಸಿದ್ದಾರೆ. ಕರ್ನಾಟಕ ಕರಾವಳಿಯ ಇತಿಹಾಸ ಕುರಿತಾಗಿ 608 ಸಂಶೋಧನಾ ಲೇಖನಗಳು ‘ನಮ್ಮೂರು’ ಎಂಬ ಹೆಸರಿನಲ್ಲಿ ಉದಯವಾಣಿಯಲ್ಲಿ ಪ್ರಕಟವಾಗಿದೆ. ‘ನೇರ ನೋಟ’ ಎಂಬ ಸಾಪ್ತಾಹಿಕ ಅಂಕಣ ಮತ್ತು ಇತ್ತೀಚೆಗೆ ‘ತೀರ ಯಾನ’ ಅಂಕಣವನ್ನು ‘ಉದಯವಾಣಿ’ಯಲ್ಲಿ ಬರೆಯುತ್ತಿದ್ದರು. 1986ರಲ್ಲಿ ಸಕಲೇಶಪುರ ಬಳಿ ಪಶ್ಚಿಮ ಘಟ್ಟದಲ್ಲಿ ಬಿಎಸ್‌ಎಫ್ ಹೆಲಿಕಾಫ್ಟರ್ ಪತನಗೊಂಡು ಇಬ್ಬರು ಫೈಲಟ್‌ಗಳು ಮೃತರಾದಾಗ ಸ್ಥಳಕ್ಕೆ ತೆರಳಿ ವರದಿ ಮಾಡಿದ್ದರು.ಅವರು ‘ಬದ್‌ಕ್‌ದ ಬಂಡಿ’ ಎಂಬ ತುಳು ಕಥಾ ಸಂಕಲನ ಪ್ರಕಟಿಸಿದ್ದರು. ಅವರ ‘ಬಂಡಿ’ ಎಂಬ ಕಾದಂಬರಿಗೆ ಪಣಿಯಾಡಿ ಪುರಸ್ಕಾರ ದೊರಕಿದೆ. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಗೌರವ ಪ್ರಶಸ್ತಿ ಸೇರಿದಂತೆ ನೂರಕ್ಕೂ ಅಧಿಕ ಪ್ರಶಸ್ತಿಗಳು, ರಾಜ್ಯ, ಜಿಲ್ಲಾ ಮಟ್ಟದ ಪ್ರಶಸ್ತಿ ಪುರಸ್ಕಾರ, ಸನ್ಮಾನಗಳು ಅವರಿಗೆ ದೊರಕಿವೆ. ಮಂಗಳೂರಿನ ಸ್ವಗೃಹದಲ್ಲಿ ಮೃತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಬಳಿಕ ಲೇಡಿಹಿಲ್‌ನಲ್ಲಿರುವ ಪ್ರೆಸ್‌ಕ್ಲಬ್‌ನಲ್ಲಿ ಅಂತಿಮ ನಮನ ಸಲ್ಲಿಸಲಾಯಿತು. ಸರಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನೆರವೇರಿತು.ಮನೋಹರ ಪ್ರಸಾದ್ ಅವರ ನಿಧನಕ್ಕೆ ಗಣ್ಯರನೇಕರು ಸಂತಾಪ ಸೂಚಿಸಿದ್ದರು. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಎಂಎಂಎನ್‌ಎಲ್ ಕಾರ‍್ಯನಿರ್ವಾಹಕ ಅಧ್ಯಕ್ಷ ಸತೀಶ್ ಯು.ಪೈ., ಕಾರ‍್ಯನಿರ್ವಾಹಕ ಅಧ್ಯಕ್ಷ ಗೌತಮ್ ಎಸ್. ಪೈ., ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ, ಸಂಸದ ನಳಿನ್‌ಕುಮಾರ್ ಕಟೀಲ್, ಎಂ. ವೀರಪ್ಪ ಮೊಯ್ಲಿ ,ಮಾಜಿ ಸಂಸದ ವಿನಯಕುಮಾರ್ ಸೊರಕೆ, ಮಾಜಿ ಸಚಿವ ಬಿ. ರಮಾನಾಥ ರೈ, ಮಾಜಿ ಮೇಯರ್ ಶಶಿಧರ್ ಹೆಗ್ಡೆ , ಕಾರ್ಪೋರೇಟರ್ ನವೀನ್ ಆರ್.ಡಿ ‘ಸೋಜ,ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ದ.ಕ. ಜಿಲ್ಲಾ ಕಾರ‍್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಸಹಿತ ಪತ್ರಕರ್ತ ಮಿತ್ರರು, ಮಂಗಳೂರು ಪತ್ರಿಕಾಭವನ ಟ್ರಸ್ಟ್ ನ ಅಧ್ಯಕ್ಷ ರಾಮಕೃಷ್ಣ ಆರ್., ಜಗನ್ನಾಥ ಶೆಟ್ಟಿ ಬಾಳ ಸೇರಿದಂತೆ ಪತ್ರಕರ್ತ ಗಣ್ಯರನೇಕರು ಸಂತಾಪ ಸೂಚಿಸಿದ್ದಾರೆ.. ಮನೋಹರ ಪ್ರಸಾದ್ ನಿಧನದಿಂದ ಮಂಗಳೂರು ಪತ್ರಿಕೋದ್ಯಮ ಒಬ್ಬ ಪ್ರಬುದ್ಧ ಮಾರ್ಗದರ್ಶಕನನ್ನು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು MPMLA’s ನ್ಯೂಸ್ ಸಂಪಾದಕ ಡಾ. ಅಶೋಕ್ ಶೆಟ್ಟಿ ಬಿ.ಎನ್. ಅವರು ಸಂತಾಪ ಸೂಚಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಮಮತ ಗಟ್ಟಿ

ಮಂಗಳೂರು :ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮಮತ ಡಿ. ಎಸ್.ಗಟ್ಟಿಯವರು ನೇಮಕಗೊಂಡಿದ್ದಾರೆ

ಪ್ರಾದೇಶಿಕ ವಾರ್ತೆಗಳು

ಮಾಜಿ ಸಚಿವ ಬಿ. ರಮಾನಾಥ ರೈ ಸಾರಥ್ಯದಲ್ಲಿ ನಡೆದ ಬಂಟ್ವಾಳದ ಮೂಡೂರು – ಪಡೂರು ಜೋಡುಕರೆ ಕಂಬಳದಲ್ಲಿ ಭಾಗವಹಿಸಿದ ಕೋಣಗಳು 182 ಜೊತೆ.ಕನ ಹಲಗೆ ಪ್ರಥಮ ಬಹುಮಾನ ಪಡೆದ ಬೇಲಾಡಿ ಬಾವ ಅಶೋಕ್ ಶೆಟ್ಟಿಯವರ ಕೋಣಗಳು

ಮಂಗಳೂರು :ಮಾಜಿ ಸಚಿವ ಬಿ. ರಮಾನಾಥ ರೈ ಅವರ ಸಾರಥ್ಯದಲ್ಲಿ ನಡೆದ 13 ನೇ ಹೊನಲು ಬೆಳಕಿನ ಮೂಡೂರು-ಪಡೂರು ಕಂಬಳ ಕೂಟದ ಫಲಿತಾoಶದ ವರದಿಯನ್ನು ಪ್ರಕಟಿಸುತ್ತಿದ್ದೇವೆ. ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ: ಕನೆಹಲಗೆ: 9 ಜೊತೆ, ಅಡ್ಡಹಲಗೆ: 4 ಜೊತೆ,ಹಗ್ಗ ಹಿರಿಯ: 15 ಜೊತೆ,ನೇಗಿಲು ಹಿರಿಯ: 29 ಜೊತೆ,ಹಗ್ಗ ಕಿರಿಯ: 2೦ಜೊತೆ,ನೇಗಿಲು ಕಿರಿಯ: 105 ಜೊತೆ. ಒಟ್ಟು 182 ಜೊತೆ ಕೋಣಗಳು ಕಂಬಳ ಕೂಟದಲ್ಲಿ ಭಾಗವಹಿಸಿದ್ದವು. ಕನೆಹಲಗೆ: ( ನೀರು ನೋಡಿ ಬಹುಮಾನ ) ಪ್ರಥಮ: ಬೇಲಾಡಿ ಬಾವ ಅಶೋಕ್ ಶೆಟ್ಟಿಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗದ್ವಿತೀಯ: ಅಲ್ಲಿಪಾದೆ ಕೆಳಗಿನಮನೆ ವಿನ್ಸೆಂಟ್ ಪಿಂಟೊ.ಹಲಗೆ ಮುಟ್ಟಿದವರು: ಬೈಂದೂರು ಮಹೇಶ್ ಪೂಜಾರಿ ಅಡ್ಡ ಹಲಗೆ:ಪ್ರಥಮ: ಅಲ್ಲಿಪಾದೆ ಪೆರಿಯಾರ್ ಮಿಂಗಲ್ ಸೇನ್ಹಲಗೆ ಮುಟ್ಟಿದವರು:ಭಟ್ಕಳ ಹರೀಶ್ದ್ವಿತೀಯ: ಅಲ್ಲಿಪಾದೆ ಕೆಳಗಿನಮನೆ ವಿನ್ಸೆಂಟ್ ಪಿಂಟೋಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ ಹಗ್ಗ ಹಿರಿಯ:ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ “ಎ”ಓಡಿಸಿದವರು: ಬಂಬ್ರಾಣ ಬೈಲು ವಂದಿತ್ ಶೆಟ್ಟಿದ್ವಿತೀಯ: ನಂದಳಿಕೆ ಶ್ರೀಕಾಂತ್ ಭಟ್ “ಬಿ”ಓಡಿಸಿದವರು:ಕಾವೂರ್ ತೋಟ ಸುರ‍್ಶನ್ ಹಗ್ಗ ಕಿರಿಯ:ಪ್ರಥಮ: ಬೆಳುವಾಯಿ ಪೆರೋಡಿ ಪುತ್ತಿಗೆಗುತ್ತು ದಿನಕರ್ ಬಿ ಶೆಟ್ಟಿಓಡಿಸಿದವರು: ಭಟ್ಕಳ ಶಂಕರ್ದ್ವಿತೀಯ: ಎಂಬತ್ತು ಬಡಗಬೆಟ್ಟು ಕಲ್ಲಪಾಪು ಶ್ರೀಕ ಸಂದೀಪ್ ಶೆಟ್ಟಿಓಡಿಸಿದವರು: ಅತ್ತೂರು ಕೋಡಂಗೆ ಸುಧೀರ್ ಸಾಲ್ಯಾನ್ ನೇಗಿಲು ಹಿರಿಯ:ಪ್ರಥಮ:ನೂಜಿಪ್ಪಡಿ ಡಾ.ಪ್ರವೀಣ್ ಹೊಳ್ಳ “ಬಿ”ಓಡಿಸಿದವರು: ನಕ್ರೆ ಪವನ್ ಮಡಿವಾಳದ್ವಿತೀಯ: ಕಕ್ಕೆಪದವು ಪೆರ‍್ಗಾಲು ಬಾಬು ತನಿಯಪ್ಪ ಗೌಡಓಡಿಸಿದವರು:ಕಕ್ಕೆಪದವು ಪೆರ‍್ಗಾಲು ಕೃತಿಕ್ ಗೌಡ ನೇಗಿಲು ಕಿರಿಯ:ಪ್ರಥಮ: ಮಿಜಾರ್ ಹರಿಮೀನಾಕ್ಷಿ ತೋಟ ಹರಿಯಪ್ಪ ಶೆಟ್ಟಿ “ಬಿ”ಓಡಿಸಿದವರು: ಪಣಪಿಲ ಪ್ರವೀಣ್ ಕೋಟ್ಯಾನ್ದ್ವಿತೀಯ:ನಿಟ್ಟೆ ಹೊಸವಕ್ಲು ಸುರೇಶ ಕೋಟ್ಯಾನ್ “ಬಿ”ಓಡಿಸಿದವರು: ಅತ್ತೂರು ಕೋಡಂಗೆ ಸುಧೀರ್ ಸಾಲ್ಯಾನ್

Scroll to Top