ಪ್ರಾದೇಶಿಕ ವಾರ್ತೆಗಳು

ಪ್ರಾದೇಶಿಕ ವಾರ್ತೆಗಳು

ರಾಜ್ಯ ಪ್ರಶಸ್ತಿ ವಿಜೇತ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ಚಿತ್ರಕಥೆ, ನಿರ್ದೇಶನದ ಕನ್ನಡ ಸಿನೆಮಾ ‘ಪುರುಷೋತ್ತಮನ ಪ್ರಸಂಗ’ ಮಾರ್ಚ್ 1 ರಂದು ರಾಜ್ಯಾದ್ಯಂತ ತೆರೆಗೆ

ಮಂಗಳೂರು : ರಾಷ್ಟ್ರಕೂಟ ಪಿಚರ್ಸ್ ಲಾಂಛನದಲ್ಲಿ ವಿ.ರವಿ ಕುಮಾರ್ ನಿರ್ಮಾಣದಲ್ಲಿ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ನಿರ್ದೇಶನದಲ್ಲಿ ತಯಾರಾದ ಪುರುಷೋತ್ತಮನ ಪ್ರಸಂಗ ಸಿನಿಮಾ ಮಾರ್ಚ್ 1 ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ.ಒಂದೇ ಹಂತದಲ್ಲಿ ಸತತ 29 ದಿನಗಳ ಕಾಲ ಪುರುಷೋತ್ತಮನ ಪ್ರಸಂಗ ಸಿನಿಮಾಕ್ಕೆ ಚಿತ್ರೀಕರಣ ನಡೆದಿತ್ತು. ಮಂಗಳೂರು ಸುತ್ತಮುತ್ತ ಬಜಪೆ, ಮುರನಗರ, ಕೆಂಜಾರ್ ಮೊದಲಾದ ಪ್ರದೇಶಗಳಲ್ಲಿ ಚಿತ್ರೀಕರಣ ನಡೆದಿದ್ದು, ದುಬಾಯಿಯಲ್ಲಿ 7 ದಿನಗಳ ಕಾಲ ಚಿತ್ರೀಕರಣ ನಡೆದಿತ್ತು, ಉತ್ತಮ ಹಾಸ್ಯ ಕಥಾಹಂದರವನ್ನು ಒಳಗೊಂಡಿರುವ ಸಿನಿಮಾದಲ್ಲಿ ಪ್ರತಿಯೊಂದು ಪಾತ್ರವೂ ಇಲ್ಲಿ ಕತೆಗೆ ಪೂರಕವಾಗಿ ಪ್ರಾಮುಖ್ಯತೆಯನ್ನು ಪಡೆದಿರುತ್ತದೆ. ಈ ಸಿನಿಮಾದ ಮೂಲಕ ಅಜಯ್ ಎಂಬ ನವ ನಟನನ್ನು ಹಾಗ ರಿಷಿಕಾ ನಾಯ್ಕ ಮತ್ತು ದೀಪಿಕಾ ಎಂಬವರನ್ನು ದೇವದಾಸ್ ಕಾಪಿಕಾಡ್ ಕನ್ನಡಕ್ಕೆ ಪರಿಚಯಿಸಿದ್ದಾರೆ. ಹಾಸ್ಯ ದಿಗ್ಗಜರನ್ನೊಳಗೊಂಡ ತಾರಾಗಣದಲ್ಲಿ ಬಹಳಷ್ಟು ಮಂದಿ ಹೊಸಬರಿಗೂ ಅವಕಾಶ ನೀಡಲಾಗಿದೆ. ಚಿತ್ರಗಳು: ಸತೀಶ್ ಕಾಪಿಕಾಡ್ ಕನ್ನಡದಲ್ಲಿ ನಟನಾಗಿ ಗುರುತಿಸಿ ಹೆಸರು ಗಳಿಸಿರುವ ದೇವದಾಸ್ ಕಾಪಿಕಾಡ್ ಮೊದಲನೇ ಬಾರಿಗೆ ಕನ್ನಡದಲ್ಲಿ ಕತೆ ಚಿತ್ರಕತೆ ಸಾಹಿತ್ಯ ಸಂಭಾಷಣೆ ಬರೆದು ಸಿನಿಮಾ ನಿರ್ದೇಶಿಸುತ್ತಿದ್ದಾರೆ. ಅಲ್ಲದೆ ಒಂದು ಪ್ರಮುಖ ಪಾತ್ರದಲ್ಲೂ ಅವರು ಕಾಣಿಸಿ ಕೊಂಡಿದ್ದಾರೆ. ಇವರಿಗೆ ನಿರ್ದೇಶನದಲ್ಲಿ ಅರ್ಜುನ್ ಕಾಪಿಕಾಡ್ ಸಹ ನಿರ್ದೇಶಕರಾಗಿ ಸಾಥ್ ನೀಡಿದ್ದಾರೆ.ನಿರ್ಮಾಪಕರು: ವಿ. ರವಿ ಕುಮಾರ್.ತಾರಾಗಣದಲ್ಲಿ ಅಜಯ್ ನಾಯಕ ನಟ,ರಿಷಿಕಾ ನಾಯ್ಕ್ (ನಾಯಕಿ) ದೀಪಿಕಾ (ನಾಯಕಿ) ದೇವದಾಸ್ ಕಾಪಿಕಾಡ್, ನವೀನ್ ಡಿ.ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಸಾಯಿಕೃಷ್ಣ ಕುಡ್ಲ, ಶೋಭರಾಜ್ ಪಾವೂರು, ದೀಪಕ್ ರೈ ಪಾಣಾಜೆ, ಚೇತನ್ ರೈ ಮಾಣಿ, ಜ್ಯೋತಿಷ್ ಶೆಟ್ಟಿ, ಶಿವ ಪ್ರಕಾಶ್ ಪೂಂಜ ಹರೇಕಳ, ರೂಪಾ ವರ್ಕಾಡಿ ಹಾಗೂ ಇತರರು ಇದ್ದಾರೆ.ತಾಂತ್ರಿಕ ವರ್ಗ, ಸಹ ನಿರ್ದೇಶನ: ಅರ್ಜುನ್ ಕಾಪಿಕಾಡ್ ,ಸಹಾಯಕ ನಿರ್ದೇಶನ: ಅರ್ಜುನ್ ಕಜೆ, ಪ್ರಶಾಂತ್ ಕಲ್ಲಡ್ಕ, ವಿಕ್ರಮ್ ದೇವಾಡಿಗ,ಅನೂಪ್ ಸಾಗರ್, ಕ್ಯಾಮರಾ -ವಿಷ್ಣು, ಸಹಾಯ: ಪುಟ್ಟ, ಸಂಗೀತ -ನಕುಲ್ ಅಭಯಂಕರ್, ವಸ್ತ್ರವಿನ್ಯಾಸ – ಶರತ್ ಪೂಜಾರಿ,ಸಹ ನಿರ್ಮಾಪಕರು- ಅಬೂಬಕರ್ ಪುತ್ತಕ, ಲೈನ್ ಪ್ರೊಡ್ಯುಸರ್ – ಸಂದೀಪ್ ಶೆಟ್ಟಿ, ಪ್ರೊಡಕ್ಷನ್ ಟೀಮ್ – ಸಂತೋಷ್,ರಮಾನಂದ, ಮುನ್ನ, ರಾಜೇಶ್.ಮಾರ್ಚ್ 1 ರಂದು “ಪುರುಷೋತ್ತಮನ ಪ್ರಸಂಗ” ಹಾಸ್ಯ ಪ್ರಧಾನ ಸಿನಿಮಾ ತೆರೆಗೆ ಬರಲಿದೆ. ದೇವದಾಸ್ ಕಾಪಿಕಾಡ್ ಅವರು ಪತ್ರಿಕಾಗೋಷ್ಟಿಯಲ್ಲಿ ಪುರುಷೋತ್ತಮನ ಪ್ರಸಂಗ ಕನ್ನಡ ಚಿತ್ರದ ಬಗ್ಗೆ ವಿವರ ನೀಡಿದರು. ಚಿತ್ರದ ನಿರ್ಮಾಪಕ ವಿ. ರವಿ ಕುಮಾರ್,ಸಂಶುದ್ದೀನ್, ಸಹ ನಿರ್ದೇಶಕ ಅರ್ಜುನ್ ಕಾಪಿಕಾಡ್, ನಾಯಕ ನಟ ಅಜಯ್, ನಾಯಕಿ ನಟಿ ದೀಪಿಕಾ ದಿನೇಶ್ ಮೊದಲಾದವರು ಉಪಸ್ಥಿತರಿದ್ದು ಸಿನೆಮಾದ ಬಗ್ಗೆ ಮಾತಾಡಿದರು. ಈ ಸಿನೆಮಾವನ್ನು ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಥಿಯೇಟರ್ ಗೆ ಬಂದು ನೋಡುವುದರ ಮೂಲಕ ಕನ್ನಡ ಚಿತ್ರವನ್ನು ಪ್ರೋತ್ಸಾಹಿಸಬೇಕೆಂದು ದೇವದಾಸ್ ಕಾಪಿಕಾಡ್ ಮತ್ತು ಚಿತ್ರ ತಂಡ ವಿನಂತಿಸಿದೆ.

ಕರಾವಳಿ ಸುದ್ದಿ, ಪ್ರಾದೇಶಿಕ ವಾರ್ತೆಗಳು

ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನ, ಸಜೀಪಮೂಡ,ಬಂಟ್ವಾಳ ತಾಲೂಕು ಇಲ್ಲಿ ಫೆ.25 ಮತ್ತು ಫೆ.27 ರಂದು ಅಗೇಲು ಸೇವೆ ಇರುವುದಿಲ್ಲ.

ಪಣೋಲಿಬೈಲ್ : ನಂದಾವರ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾoಬಾ ಕ್ಷೇತ್ರ ಇದರ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ದಿನಾಂಕ 25-02-2024 ನೇ ಆದಿತ್ಯವಾರ ಮತ್ತು 27-02-2024 ನೇ ಮಂಗಳವಾರದಂದು ಶ್ರೀ ಕ್ಷೇತ್ರದಲ್ಲಿ ಅಗೇಲು ಸೇವೆ ಇರುವುದಿಲ್ಲವೆಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.

ಪ್ರಾದೇಶಿಕ ವಾರ್ತೆಗಳು

ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಬ್ರಹ್ಮ ಕಲಶ ಮಹೋತ್ಸವ ಮತ್ತು ವರ್ಷಾವಧಿ ಮಹೋತ್ಸವ.

ಮಂಗಳೂರು : ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನ ದಲ್ಲಿ ಫೆ.13ರಂದು ಬ್ರಹ್ಮಶ್ರೀ ಕೋಡಿಕಲ್ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ವಿವಿಧ ವೈದಿಕ ವಿಧಿ-ವಿಧಾನಗಳು ನಡೆದವು. ಪ್ರಾತಃಕಾಲ ಪುಣ್ಯಾಹ, ಶ್ರೀದೇವರ ಪ್ರತಿಷ್ಠಾ ಕಲಶ, ಪ್ರಧಾನ ಹೋಮ, ಶಿಖರಪ್ರತಿಷ್ಠಾಂಗ ಶಿಖರ ಕಲಶ ಪ್ರತಿಷ್ಠಾ ಕಲಶಾಭಿಷೇಕ, ಗೋಪೂಜಾ ಪೂರ್ವಕ ಶ್ರೀ ಮಾರಿಯಮ್ಮ ದೇವರ ಪುನರ್ ಪ್ರತಿಷ್ಠೆ ಪಂಚಾಮೃತಾಪೂರ್ವಕ ಕಲಶಾಭಿಷೇಕ, ಪಂಚಬ್ರಹ್ಮ ಮಹಾಮಂತ್ರ ಹೋಮ, ಶ್ರೀ ಮಹಾಗಣಪತಿ ದೇವರಿಗೆ, ಶ್ರೀ ಸುಬ್ರಹ್ಮಣ್ಯ ದೇವರಿಗೆ, ಶ್ರೀ ನಾಗ ದೇವರಿಗೆ ವಿಶೇಷ ಸಾನಿಧ್ಯ ಕಲಶಾಭಿಷೇಕ, ಮಹಾಪೂಜೆ, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ಸಂಜೆ 4.30 ರಿಂದ ಸಾಮೂಹಿಕ ಕುಂಕು ಮಾರ್ಚನೆ, ಸಂಜೆ 5ರಿಂದ ಲಲಿತಸಹಸ್ರನಾಮ ಹೋಮ, ಶ್ರೀ ಕ್ಷೇತ್ರ ದೈವಗಳಿಗೆ ಸಾನಿಧ್ಯ, ಕಲಶಾಭಿಷೇಕಗಳು, ಪರ್ವಗಳು, ಮಹಾಪೂಜೆ ಜರಗಿದವು. ಶ್ರೀ ಕ್ಷೇತ್ರದಲ್ಲಿ ಬೆಳಗ್ಗೆ ವಿವಿಧ ಭಜನ ತಂಡಗಳಿAದ ಭಜನೆ, ಮಧ್ಯಾಹ್ನ ಗಾನ ಮಾಧುರ್ಯ, ಸಂಜೆ ಧಾರ್ಮಿಕ ಸಭೆ, ಸಂಜೆ ಬಳಿಕ ಗ್ರಾಮ ಸಭೆಯ ಮಹಿಳಾ ಸದಸ್ಯರಿಂದ ಮನೋರಂಜನಾ ಕಾರ್ಯಕ್ರಮ, ನೃತ್ಯ ವೈಭವ, ‘ಶಿವದೂತೆ ಗುಳಿಗೆ’ ತುಳು ನಾಟಕ ನಡೆದವು. ಫೆ.14 ರಂದು ಬೆಳಗ್ಗೆ 7.30ರಿಂದ ಪುಣ್ಯಾಹ, ನವಶಕ್ತಿ ಹೋಮ, ತತ್ವಕಲಶಪ್ರತಿಷ್ಠಾ ತತ್ವಹೋಮ, ಶ್ರೀ ದೇವಿಗೆ ತತ್ವಕಲಶಾಭಿಷೇಕ, ಮಹಾಪೂಜೆ, ಬ್ರಹ್ಮಕಲಶ ಮಂಡಲ ರಚನೆ, ಬೆಳಗ್ಗೆ 11 ರಿಂದ ಭಜನಾ ಕಾರ್ಯಕ್ರಮ, 12.30ಕ್ಕೆ ಮಹಾಪೂಜೆ, ಅನ್ನಸಂತರ್ಪಣೆ, 1 ಗಂಟೆಯಿಂದ 3 ರ ವರೆಗೆ ಮೇಘನಾ ಸಾಲಿಗ್ರಾಮ ಅವರಿಂದ ಸ್ಯಾಕ್ಸೊಫೋನ್ ಪ್ಯೂಷನ್, ಸಂಜೆ 4.30 ರಿಂದ 5.30ರ ವರೆಗೆ ಸಾಮೂಹಿಕ ಕುಂಕುಮಾರ್ಚನೆ, 5ರಿಂದ ಬ್ರಹ್ಮಕಲಶ ಮಂಡಲ ಪೂಜಾ, ಕಲಶಾಧಿವಾಸಗಳು, 5.30 ರಿಂದ 6.30ರ ವರೆಗೆ ಧಾರ್ಮಿಕ ಸಭೆ, 6.30 ರಿಂದ 7.30ರ ವರೆಗೆ ವೀಣಾ ವಾದನ, 7.30ರಿಂದ 9ರ ವರೆಗೆ ನ್ಯಾಟ್ಯ ನಿಲಯ ಉಳ್ಳಾಲದಿಂದ ನೃತ್ಯ ವೈಭವ, ರಾತ್ರಿ 7.39ಕ್ಕೆ ಮಹಾಪೂಜೆ, 9 ರಿಂದ 10ರ ವರೆಗೆ ಮಹಿಳಾ ಸದಸ್ಯರಿಂದ ಮನೋರಂಜನಾ ಕಾರ್ಯಕ್ರಮ, 10 ರಿಂದ ತುಳು ನಾಟಕ ಜರಗಿತು. ಮಂಗಳೂರು ನಗರದ ಬೋಳೂರು ಗ್ರಾಮದಲ್ಲಿ ನೆಲೆ ನಿಂತ ಪುರಾಣ ಪ್ರಸಿದ್ದ ಉರ್ವ ಶ್ರೀ ಮಾರಿಯಮ್ಮ ಸನ್ನಿಧಿಯಲ್ಲಿ ಬ್ರಹ್ಮಕಲಶ ಸಂಭ್ರಮವು ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಭಕ್ತಿ ಸಡಗರದ ಪವಿತ್ರ ಕಾರ್ಯವಾದ ಬ್ರಹ್ಮಕಲಶೋತ್ಸವ ಸಡಗರವನ್ನು ಸಹಸ್ರಾರು ಭಕ್ತ ಸಮೂಹವು ಕಣ್ತುಂಬಿಕೊಂಡು ಕೃತಾರ್ಥರಾದರು. ಪ್ರತಿ 12 ವರ್ಷಕ್ಕೊಮ್ಮೆ ನಡೆಯುವ ಅಪರೂಪದ ಹಾಗೂ ದಿವ್ಯ ಅನುಭೂತಿ ಕಲ್ಪಿಸುವ ಉರ್ವದ ಮಹಾಮಾತೆಯ ಬ್ರಹ್ಮಕಲಶ ಸಡಗರವನ್ನು ಕಣ್ಣು ತುಂಬಿಕೊಂಡು ಸಂಭ್ರಮಿಸಿದರು. ಫೆ. 11ರಿಂದ ಮೊದಲ್ಗೊಂಡು ಫೆ.15ರ ಗುರುವಾರದವರೆಗೆ ಕ್ಷೇತ್ರದ ನವೀಕರಿಸಲಾದ ಗರ್ಭಗೃಹದಲ್ಲಿ ಬ್ರಹ್ಮಶ್ರೀ ಕೋಡಿಕಲ್ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ವೈದಿಕ ವಿಧಿ-ವಿಧಾನಗಳು ನಡೆದು ಧಾರ್ಮಿಕ, ಸಾಂಸ್ಕೃತಿಕ ಕಾರ್ಯ ಕ್ರಮಗಳೊಂದಿಗೆ ವಿಜೃಂಭಣೆಯಿಂದ ನೆರವೇರಿತು. ಮೊಗವೀರ ಬಂಧುಗಳ ಪ್ರಧಾನ ಆರಾಧನ ಕ್ಷೇತ್ರವಾದ ಉರ್ವ ಶ್ರೀ ಮಾರಿಯಮ್ಮ ಸನ್ನಿಧಿಯಲ್ಲಿ ನಡೆದ ಬ್ರಹ್ಮಕಲಶ ಸಂಭ್ರಮದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಗುರುವಾರ ಸಹಿತ ಇತರ ದಿನಗಳಲ್ಲಿಯೂ ಭಕ್ತರು ಸೇರಿದ್ದರು. ಪವಿತ್ರ ರತ್ನ ದರ್ಭೆ, ಅಕ್ಷತೆ, ತುಳಸಿ ಸಹಿತ ಪ್ರಧಾನ ಸುವಸ್ತುಗಳ ಜತೆಗೆ ಬ್ರಹ್ಮಕಲಶೋತ್ಸವದ ವಿಧಿವಿಧಾನಗಳು ಗುರುವಾರ ನೆರವೇರಿದವು. ಮುಂಜಾನೆಯಿಂದ ಮಧ್ಯಾಹ್ನದವರೆಗೆ ನಡೆದ ಧಾರ್ಮಿಕ ಕಾರ್ಯಕಲಾಪಗಳು ನೆರವೇರಿತು.ಮಧ್ಯಾಹ್ನ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ, ಗಿರೀಶ್ ರೈ ಕಕ್ಕೆಪದವು ಅವರ ಭಾಗವತಿಕೆಯಲ್ಲಿ ಯಕ್ಷಗಾನ ವೈಭವ, ಸಂಜೆ ಸುಮಂಗಲೆಯರಿಸಿದ ಸಾಮೂಹಿಕ ಕುಂಕುಮಾರ್ಚನೆ, ಕಲಾಸಿಂಧು ಕಲಾವತಿ ದಯಾನಂದ ಬಳಗದಿಂದ ಸಂಗೀತ ಸಂಜೆ ನಡೆಯಿತು. ಬ್ರಹ್ಮಕಲಶೋತ್ಸವ ದಿನವಾದ ಗುರುವಾರ ಮಧ್ಯಾಹ್ನದಿಂದ ರಾತ್ರಿಯವರೆಗೆ ಸುಮಾರು 50 ಸಾವಿರಕ್ಕೂ ಅಧಿಕ ಮಂದಿ ಅನ್ನಪ್ರಸಾದ ಸ್ವೀಕರಿಸಿದರು. ಮಧ್ಯಾಹ್ನ 12ಕ್ಕೆ ಮಹಾಪೂಜೆ, ಪಲ್ಲಪೂಜೆ ನಡೆಯಿತು. ಬಳಿಕ ಅನ್ನಪ್ರಸಾದ ವಿತರಣೆ ಆರಂಭವಾಗಿ ರಾತ್ರಿಯವರೆಗೂ ಮುಂದುವರಿಯಿತು. ಸಂಜೆ 7.30ಕ್ಕೆ ಶ್ರೀ ದೇವಿಗೆ ಸಾಮೂಹಿಕ ಮಹಾರಂಗಪೂಜೆ, ಮಹಾಪೂಜೆ, ದರ್ಶನ ಬಲಿ ಪೂಜೆ, ರಥೋತ್ಸವ ನಡೆಯಿತು. ಬೋಳೂರು ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ನಂತರ ಮಾರಿಯಮ್ಮ ದೇವರ ಪುನರ್ ಪ್ರತಿಷ್ಠೆ ನಡೆಯಿತು. ಫೆ. 23ನೇ ಶುಕ್ರವಾರ ಶ್ರೀ ಚಂಡಿಕಾಯಾಗ ಮತ್ತು ಮಹಾ ಅನ್ನಸಂತರ್ಪಣೆ ನಡೆಯಲಿದೆ.ಫೆ. 26ನೇ ಸೋಮವಾರ ಮತ್ತು ಫೆ. 27ನೇ ಮಂಗಳವಾರದAದು ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಸಹಿತ ವರ್ಷಾವಧಿ ಮಹಾಪೂಜೆ ನಡೆಯಲಿದೆ. ಮಾರ್ಚ್ 2ನೇ ಶನಿವಾರ ಶ್ರೀ ಮಲರಾಯ ಧೂಮಾವತಿ ದೈವಗಳ ನೇಮೋತ್ಸವವು ವಿಜೃಂಭಣೆಯಿAದ ಜರಗಲಿದೆ.ಭಕ್ತಾಧಿಗಳೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ಮಾರಿಯಮ್ಮ ದೇವರ ಮತ್ತು ದೈವಗಳ ಕೃಪೆಗೆ ಪಾತ್ರರಾಗಬೇಕಾಗಿ ವಿನಂತಿ.

ಪ್ರಾದೇಶಿಕ ವಾರ್ತೆಗಳು

ಸಾಂಸ್ಕೃತಿಕ ಪಟ್ಟಿಗೆ ಜಾದೂ ಕಲೆ ಸೇರ್ಪಡೆಯಾಗಲಿ : ಅಂತಾರಾಷ್ಟ್ರೀಯ ಜಾದೂಗಾರ ಕುದ್ರೋಳಿ ಗಣೇಶ್ ಮನವಿ

ಮಂಗಳೂರು : ಮನರಂಜನೆ ಜತೆಗೆ ವಿಸ್ಮಯ ಮೂಡಿಸುವ ಜಾದೂ ಕೂಡಾ ಸಾಂಸ್ಕೃತಿಕ ಕಲೆಯಾಗಿದೆ. ಕೇಂದ್ರದ ನಾಟಕ ಅಕಾಡೆಮಿ ಪಟ್ಟಿಯಲ್ಲಿ ಜಾದೂವಿಗೆ ಸ್ಥಾನ ನೀಡಿದ್ದು, ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪಟ್ಟಿಯಲ್ಲಿಯೂ ಜಾದೂ ಸೇರ್ಪಡೆಯಾಗಬೇಕು. ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ವಹಿಸಬೇಕು ಎಂದು ಅಂತಾರಾಷ್ಟ್ರೀಯ ಜಾದೂಗಾರ ಕುದ್ರೋಳಿ ಗಣೇಶ್ ವಿನಂತಿಸಿದ್ದಾರೆ. ನಗರದ ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ಮಂಗಳೂರು ಪ್ರೆಸ್‌ಕ್ಲಬ್ ಗೌರವ ಅತಿಥಿಯಾಗಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ‘ಸಂಗೀತ, ನೃತ್ಯ, ಯಕ್ಷಗಾನದಂತೆ ಜಾದೂ ಕೂಡಾ ಸಾಂಸ್ಕೃತಿಕ ಕಲೆಯಾಗಿದೆ. ನಶಿಸಿ ಹೋಗುತ್ತಿರುವ ಈ ಕಲೆಯನ್ನು ಸಂರಕ್ಷಿಸುವ ನಿಟ್ಟಿನಲ್ಲಿ ನೀನಾಸಂ, ರಂಗಾಯಣ ಮಾದರಿಯ ತರಬೇತಿ ವ್ಯವಸ್ಥೆ ಕಲ್ಪಿಸಬೇಕಾಗಿದೆ ಎಂದರು. ಜಾದೂವನ್ನು ಇತರ ಕಲೆಗಳಂತೆ ತರಗತಿ ಕೊಠಡಿಯಲ್ಲಿ ವಿದ್ಯಾರ್ಥಿಗಳಿಗೆ ಒಟ್ಟಾಗಿ ಕಲಿಸಲು ಸಾಧ್ಯವಿಲ್ಲ. ಜಾದೂ ಕಲಿಯುವ ವಿದ್ಯಾರ್ಥಿಯಲ್ಲಿ ಮೆದುಳು ಮತ್ತು ಕೈಚಳಕದ ಜತೆಗೆ ಸಮರ್ಪಣಾ ಮನೋಭಾವ ಅಗತ್ಯ.ಜಾದೂ ಕಲೆ ಸಿದ್ಧಿಸಿಕೊಳ್ಳಬೇಕೆಂದರೆ ಕನಿಷ್ಠ ಆರೇಳು ವರ್ಷಗಳ ಅಭ್ಯಾಸದ ಅಗತ್ಯವಿದೆ. ಈ ನಿಟ್ಟಿನಲ್ಲಿ ತರಬೇತಿ ನೀಡುವ, ಕಾಲೇಜು ತೆರೆಯುವ ಆಶಯವೂ ಇದೆ . ವೃತ್ತಿಪರತೆಗಿಂತಲೂ ಹವ್ಯಾಸಿ ಕಲೆಯಾಗಿ ಉಳಿದಿರುವ ಜಾದೂವನ್ನು ನವರಸ ಪೂರ್ಣ ಭಾವದೊಂದಿಗೆ, ರಂಗಭೂಮಿಯ ಕಲೆಯಾಗಿ ಬೆಳೆಸಬೇಕಾಗಿದೆ ಎಂದು ಅವರು ಅಭಿಪ್ರಾಯ ಪಟ್ಟರು. 1998ರಿಂದ ತುಳುನಾಡಿನ ದೈವರಾಧಾನೆಯನ್ನು ಬಿಂಬಿಸುವ ಜಾದೂವನ್ನು ಪ್ರಸ್ತುತ ಪಡಿಸಿದ ಪರಿಣಾಮ ನಮ್ಮ ವಿಸ್ಮಯ ತಂಡ ಇದು ವಿಶ್ವವಿಖ್ಯಾತಿಯಾಗಲು ಸಾಧ್ಯವಾಗಿದೆ. ನಮ್ಮ ಮಣ್ಣಿನ ಜನಪದ ಸ್ಪರ್ಶವನ್ನು ಜಾದೂವಿನ ತಂತ್ರಗಾರಿಕೆಯ ಜತೆ ಬೆಸೆದಾಗ ವೀಕ್ಷಕನ ಭಾವನೆಗಳನ್ನು ತಟ್ಟಲು ಸಾಧ್ಯವಾಗುತ್ತದೆ. ಜಾದೂ ಕೂಡಾ ಸಾಮಾಜಿಕ ಕಳಕಳಿಯೊಂದಿಗೆ ಬೆರೆತಾಗ ಹೃದಯವನ್ನು ತಲುಪಲು ಸಾಧ್ಯವಾಗುತ್ತದೆ ಎಂದು ಕುದ್ರೋಳಿ ಗಣೇಶ್ ಹೇಳಿದರು.ನಮ್ಮ ಟಿವಿಯ ವ್ಯವಸ್ಥಾಪಕ ನಿರ್ದೇಶಕ ಡಾ.ಶಿವಶರಣ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ. ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಕಾರ್ಯಕ್ರಮ ಸಂಯೋಜಕ ಆತ್ಮಭೂಷಣ ಭಟ್ ಉಪಸ್ಥಿತರಿದ್ದರು. ಪ್ರೆಸ್‌ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು. ಆರ್.ಸಿ. ಭಟ್ ಕಾರ್ಯಕ್ರಮ ನಿರೂಪಿಸಿದರು. ಓದಿನ ಹವ್ಯಾಸ ಜಾದೂ ಕಲೆಗೆ ಪ್ರೇರಣೆ 8ನೆ ತರಗತಿಯಿಂದಲೇ ಪುಸ್ತಕ ಓದುವ ಹುಚ್ಚು ಸಣ್ಣ ಪುಟ್ಟ ಮ್ಯಾಜಿಕ್‌ಗಳ ಬಗ್ಗೆ ಆಸಕ್ತಿ ಬೆಳೆಸಿತು. ದ್ವಿತೀಯ ಪಿಯುಸಿಯಲ್ಲಿ ಇರುವಾರ ಓದಿದ ಮ್ಯಾಜಿಕ್ ಫೋರ್ ದಿ ಬಿಗಿನರ್ಸ್ ಎಂಬ ಪುಸ್ತಕ ಓದಿನ ಜಾದೂವಿನ ಆಸಕ್ತಿಯನ್ನು ಇಮ್ಮಡಿಸಿತು. ಬಳಿಕ ಹವ್ಯಾಸಿ ಜಾದೂಗಾರರಾಗಿದ್ದ ಪ್ರದೀಪ್ ಅವರು ನನ್ನ ಗುರುವಾದರು. ಅವರು ಜಾದೂ ತಂತ್ರಗಾರಿಕೆಯನ್ನು ನನಗೆ ಹೇಳಿಕೊಟ್ಟಿದ್ದಲ್ಲದೆ, ಹಲವು ಪರಿಕರಗಳನ್ನೂ ನೀಡಿದರು. ಪದವಿ ಬಳಿಕ ಮುಂಗಾರು ಪತ್ರಿಕೆಯಲ್ಲಿ ಸುಮಾರು 3 ವರ್ಷಗಳ ಕಾಲ ಉಪಸಂಪಾದಕನಾಗಿದ್ದ ಸಂದರ್ಭ ಓದಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದರಿಂದ ಜಾದೂವಿನ ನನ್ನ ಆಸಕ್ತಿಯನ್ನು ಮತ್ತಷ್ಟು ಗಟ್ಟಿಗೊಳಿಸಲು ಸಾಧ್ಯವಾಯಿತು ಎಂದು ಕುದ್ರೋಳಿ ಗಣೇಶ್ ಹೇಳಿದರು.

ಪ್ರಾದೇಶಿಕ ವಾರ್ತೆಗಳು

Dr. Sudhakar shetty pune delivered a lecture on How to diagnose malnutrition & importance to treat malnutrition in tulunadu.

Odiyoor:Dr. Sudhakar shetty famous children specialist pune – moodubedri has lecture on ” HOW TO DIAGNOSE MALNUTRITION & IMPORTANCE TO TREAT MALNUTRITION IN TULUNAAD” on the occasion of Tulunaad jaatre & Rathaotsava at Shreekshetra Odiyoor on 19.2 .2024 at 11am in the presence of Odiyoor Shree Gurudeva & Guru Maatha.Present on the occasion are Nalin Kumar Kateel(MP),Shashidar Shetty Baroda,Viraar Shankar Shetty & many other dignitaries. Detail about Dr SUDHAKAR shetty Child specialist. pune/moodabidri.He is practising in pune since 36 years .he has his own child clinic in pune by the name of BABYFRIEND CLINIC.he is also attached to Pune police hospital, State RESERVE police force hospital, red cross society & professor at bharathividyapeet UNIVERSITY. Dr. Sudhakar shetty has received several awards for service in childcare & outstanding service during g covid pandemic. He has helped more than 1500 kanadigas during covid pandemic by treating them & giving covid vaccination.AWARDS1..RAKSHA MANTRI AWARD was given to his team2.certificate of excellence from pune cantonment board3.dakshina kannada Zilla rRAJYOTHSAVA AWARD 20224.CHAAR SAHIBZAADE award.

ಪ್ರಾದೇಶಿಕ ವಾರ್ತೆಗಳು

ಬಜೆಟ್ ನಲ್ಲಿ ನಿರ್ಲಕ್ಷ್ಯ, ಜಾಗತಿಕ ಬಂಟರ ಸಂಘಗಳ ಒಕ್ಕೂಟ ಆಗ್ರಹ**ಬಂಟರ ಅಭಿವೃದ್ದಿ ನಿಗಮ ಸ್ಥಾಪಿಸಿ : ಐಕಳ ಹರೀಶ್ ಶೆಟ್ಟಿ

ಮಂಗಳೂರು: ರಾಜ್ಯದ ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದಂತೆ ನಡೆದವರು ಎನ್ನುತ್ತಾರೆ, ಅದು ನಿಜ ಎಂದಾದಲ್ಲಿ ನೀವು ಬಂಟರ ಸಮ್ಮೇಳನದಲ್ಲಿ ನೀಡಿದ ಭರವಸೆಯಂತೆ ಬಂಟರ ನಿಗಮ ಸ್ಥಾಪಿಸಿ ನುಡಿದಂತೆ ನಡೆಯಿರಿ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂಟರ ಸಂಘಕ್ಕೆ ಇದುವರೆಗೆ ಯಾವ ಸರಕಾರದಿಂದಲೂ ಸಹಕಾರ ಸಿಕ್ಕಿಲ್ಲ. ಬಂಟ ಸಮುದಾಯ ನೋಡಲು ಬಲಿಷ್ಠ ಸಮಾಜ. ಆದರೆ ನಮ್ಮಲ್ಲೂ ಶೇ50ಕ್ಕಿಂತ ಅಧಿಕ ಕಡುಬಡವರಿದ್ದಾರೆ. ದೊಡ್ಡವರಿಗೆ ಸಮುದಾಯದಲ್ಲಿ ಕಷ್ಟದಲ್ಲಿರುವವರ ಬಗ್ಗೆ ಗೊತ್ತಿಲ್ಲ. ಆದರೆ ನಮಗೆ ಗೊತ್ತಿದೆ. ಜಾಗತಿಕ ಬಂಟರ ಸಂಘಕ್ಕೆ ಯಾವುದೇ ಆದಾಯವಿಲ್ಲ. ಇತರರಲ್ಲಿ ಹಣ ಸಂಗ್ರಹಿಸಿ ಸಹಾಯ ಮಾಡುತ್ತಿದ್ದೇವೆ. ಈ ಕಾರಣದಿಂದ ನಮಗೂ ನಿಗಮ, ಮೀಸಲಾತಿ ಬೇಕು ಎಂದು ತಿಳಿಸಿದರು. ನಮಗೆ ಬಿಜೆಪಿ, ಕಾಂಗ್ರೆಸ್ ಎಲ್ಲವೂ ಸಮಾನ. ಬಂಟ ಜನಪ್ರತಿನಿಧಿಗಳು ರಾಜಕೀಯವಾಗಿ ಹೇಳಿಕೆ ನೀಡುವ ಬದಲು ನಿಮಗೂ ಜವಾಬ್ದಾರಿ ಇದೆ. ಅವರು ನಮ್ಮ ಬೇಡಿಕೆ ಈಡೇರಿಸಲು ಯಾವ ರೀತಿ ಸ್ಪಂದಿಸಿದ್ದೀರಿ ಎನ್ನುವ ಮಾಹಿತಿಯಿಲ್ಲ. ರಾಜ್ಯದಲ್ಲಿ ಬಿಜೆಪಿ ಸರಕಾರ ಇದ್ದಾಗ ನಳಿನ್ ಕುಮಾರ್ ಕಟೀಲ್ ಅವರನ್ನು ಮೂರ್ನಾಲ್ಕು ಬಾರಿ ಭೇಟಿ ಮಾಡಿ ನಿಗಮಕ್ಕಾಗಿ ಮನವಿ ಸಲ್ಲಿಸಿದ್ದೆವು. ಕಾಂಗ್ರೆಸ್ ಸರಕಾರ ಬಂದ ಬಳಿಕ ರಮಾನಾಥ ರೈ, ಮಂಜುನಾಥ ಭಂಡಾರಿ, ಅಶೋಕ್ ರೈ, ಮಿಥುನ್ ರೈ ಸಹಿತ ಇತರರನ್ನು ಭೇಟಿಯಾಗಿ ಮಾಡಿ ಮನವಿ ಮಾಡಿದ್ದೇವೆ. ಬಂಟರ ಅಭಿವೃದ್ಧಿ ನಿಗಮ ಸ್ಥಾಪಿಸುವುದಾಗಿ ಕಾಂಗ್ರೆಸ್ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಿ ಹಾಗೂ ವಿಶ್ವ ಬಂಟರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಣೆ ಮಾಡಿದ್ದರೂ ಬಜೆಟ್‌ನಲ್ಲಿ ಯಾವುದೇ ಪ್ರಸ್ತಾವನೆ ಮಾಡದೆ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಹರೀಶ್ ಶೆಟ್ಟಿ ತಿಳಿಸಿದರು.ಕಳೆದ ವರ್ಷ ಉಡುಪಿಯಲ್ಲಿ ನಡೆದ ವಿಶ್ವ ಬಂಟರ ಸಮ್ಮೇಳನ ಉದ್ಘಾಟಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಮುಂದಿನ ಬಜೆಟ್‌ನಲ್ಲಿ ಬಂಟರ ಅಭಿವೃದ್ಧಿ ನಿಗಮ ಸ್ಥಾಪಿಸಿ 500 ಕೋಟಿ ರೂಪಾಯಿಗಳನ್ನು ಮೀಸಲಿರಿಸುದಾಗಿ ಘೋಷಿಸಿದ್ದರೂ ಅವರೇ ಮಂಡಿಸಿದ ಬಜೆಟ್‌ನಲ್ಲಿ ಬಂಟರ ಅಭಿವೃದ್ಧಿಗೆ ಯಾವುದೇ ಅನುದಾನ, ಅಭಿವೃದ್ಧಿ ನಿಗಮಕ್ಕೆ ಅವಕಾಶ ನೀಡದೆ ಬಂಟ ಸಮುದಾಯವನ್ನು ನಿರ್ಲಕ್ಷ್ಯ ಮಾಡಲಾಗಿದೆ. ಈ ವಿಚಾರದಲ್ಲಿ ಬಂಟ ಶಾಸಕರೂ ದ್ವನಿ ಎತ್ತಲಿಲ್ಲ ಎಂದು ಖೇದ ವ್ಯಕ್ತಪಡಿಸಿದ ಹರೀಶ್ ಶೆಟ್ಟಿ, ನಿಗಮ ಸ್ಥಾಪನೆಗಾಗಿ ಸರಕಾರಕ್ಕೆ ಡೆಡ್‌ಲೈನ್ ಕೊಡುವುದಿಲ್ಲ. ಸರಕಾರ ಬಂದು ವರ್ಷ ಮಾತ್ರ ಆಗಿದೆ. ಚುನಾವಣೆಗೆ ಮೊದಲು ಇನ್ನೊಮ್ಮೆ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡುತ್ತೇವೆ ಎಂದು ಮುಂದಿನ ನಡೆಯ ಬಗ್ಗೆ ತಿಳಿಸಿದರು.ಉಪಾಧ್ಯಕ್ಷರಾದ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಜತೆಕಾರ್ಯದರ್ಶಿ ಚಂದ್ರಹಾಸ ಡಿ.ಶೆಟ್ಟಿ, ಮಾಧ್ಯಮ ಸಂಚಾಲಕ ಬಾಳ ಜಗನ್ನಾಥ ಶೆಟ್ಟಿ ಸುದ್ದಿಗೋಷ್ಠಿಯಲ್ಲಿದ್ದರು.

ಪ್ರಾದೇಶಿಕ ವಾರ್ತೆಗಳು

ಅಮೃತಾನಂದಮಯಿ ಮಠದಲ್ಲಿ ಯೋಗಶಿಬಿರ ಉದ್ಘಾಟನೆ

ಮಂಗಳೂರು: ನಗರದ ಬೋಳೂರು ಅಮೃತಾನಂದಮಯಿ ಮಠದ ಆಶ್ರಯದಲ್ಲಿ ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಹಾಗೂ ಬಳಗದವರಿಂದ ಯೋಗತರಬೇತಿ ಶಿಬಿರವನ್ನು ಸೋಮವಾರ ದಿನಾಂಕ 19ರಂದು ಉದ್ಘಾಟಿಸಲಾಯಿತು. ಮಠದ ದೇವಸ್ಥಾನ ಸಮಿತಿ ಸದಸ್ಯರಾದ ಮುರಳೀಧರ್ ಶೆಟ್ಟಿಯವರು ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಶರೀರ ಹಾಗೂ ಮನಸ್ಸಿನ ಸ್ವಾಸ್ಥ್ಯ ರಕ್ಷಣೆಯೊಂದಿಗೆ ದೀರ್ಘಾಯುಷ್ಯ ಹೊಂದಲು ಯೋಗ ಬಹಳ ಸರಳ ವಿಧಾನ. ಗೋಪಾಲಕೃಷ್ಣ ದೇಲಂಪಾಡಿಯವರು ಸಾರ್ವಜನಿಕರ ಹಿತದೃಷ್ಟಿಯಿಂದ ಹಲವಾರು ವರ್ಷಗಳಿಂದ ಶಿಬಿರಗಳನ್ನು ನಡೆಸುತ್ತಿದ್ದಾರೆ. ಅವರ ಈ ಸೇವೆ ಎಲ್ಲರಿಗೂ ಮಾದರಿಯಾಗಲಿ ಎಂದು ಹೇಳಿದರು. ಪ್ರಾರಂಭದಲ್ಲಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತಾಡಿದ ಸೇವಾ ಸಮಿತಿಯ ಅಧ್ಯಕ್ಷರಾದ ಡಾ.ವಸಂತಕುಮಾರ್ ಪೆರ್ಲ ಅವರು ಮಾತಾ ಅಮೃತಾನಂದಮಯಿ ಮಠವು ಸಾಮಾಜಿಕ ಸ್ವಾಸ್ಥ್ಯ ರಕ್ಷಣೆಯ ಉದ್ದೇಶದಿಂದ ನಡೆಸುತ್ತಿರುವ ಕಾರ್ಯಕ್ರಮಗಳಲ್ಲಿ ಯೋಗವೂ ಪ್ರಮುಖವಾಗಿದೆ. ದೇಲಂಪಾಡಿ ಪ್ರತಿಷ್ಠಾನದ ಜೊತೆಗೆ ನಡೆಸುತ್ತಿರುವ ಈ ಶಿಬಿರದ ಪ್ರಯೋಜನವನ್ನು ಎಲ್ಲರೂ ಪಡೆಯುವಂತಾಗಬೇಕು ಎಂದರು.ಡಾ.ದೇವದಾಸ್ ಪುತ್ರನ್ ವಂದಿಸಿದರು. ಸೇವಾ ಸಮಿತಿಯ ಪದಾಧಿಕಾರಿಗಳಾದ ಭರತ್ ಕುಮಾರ್ ಎರ್ಮಾಳ್, ನಿರಂಜನ್ ಅಡ್ಯಂತಾಯ, ಆಯುಷ್ ವೈದ್ಯಾಧಿಕಾರಿ ಡಾ.ಶ್ರೀದೇವಿ, ಶ್ರೀಮತಿ ವೀಣಾ ಮಾರ್ಲ, ಭಾರತಿ ಎಸ್.ರಾವ್, ಕುಮಾರ್ ಶೆಣೈ, ಸ್ಕಂದ, ದಾಮೋದರ್ , ಹಾಗೂ ಗೋಪಾಲಕೃಷ್ಣದೇಲಂಪಾಡಿಯವರ ಶಿಷ್ಯರು ಮತ್ತು ಅಮ್ಮನ ಭಕ್ತರು ಭಾಗವಹಿಸಿದ್ದರು.ಯೋಗ ತರಬೇತಿಯನ್ನು ಪಡೆಯಲು ಆಸಕ್ತರಿಗೆ ಪ್ರವೇಶಾವಕಾಶ ಇರುತ್ತದೆ. ಶ್ರೀ ಬ್ರಹ್ಮಸ್ಥಾನ ಕ್ಷೇತ್ರದಲ್ಲಿ ನೋಂದಣಿ ಮಾಡಬಹುದಾಗಿದೆ ಎಂದು ಡಾ.ವಸಂತಕುಮಾರ್ ಪೆರ್ಲ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿರುತ್ತಾರೆ.

ಪ್ರಾದೇಶಿಕ ವಾರ್ತೆಗಳು

ಫೆ.11-15: ಉರ್ವ ಮಾರಿಯಮ್ಮನ ಸನ್ನಿಧಿಯಲ್ಲಿ ಬ್ರಹ್ಮಕಲಶೋತ್ಸವ, ಫೆ.26-ಮಾ.2: ವರ್ಷಾವಧಿ ಉತ್ಸವ, ಮಲರಾಯ ನೇಮೋತ್ಸವ

ಮಂಗಳೂರು: “ಪುರಾಣ ಪ್ರಸಿದ್ಧ ದೇವಸ್ಥಾನಗಳಲ್ಲಿ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನ ಕೂಡಾ ಪ್ರಾಮುಖ್ಯತೆ ಪಡೆದಿರುತ್ತದೆ. ದ.ಕ. ಜಿಲ್ಲೆ ಮಾತ್ರವಲ್ಲದೇ ನಾಡಿನ ಸಮಸ್ತ ವರ್ಗದ ಭಕ್ತಾಭಿಮಾನಿಗಳು ಉರ್ವ ಶ್ರೀ ಮಾರಿಯಮ್ಮ ದೇವಿಯ ಕ್ಷೇತ್ರದ ಬಗ್ಗೆ ಅಪಾರ ಭಕ್ತಿ ಮತ್ತು ನಂಬಿಕೆಯನ್ನಿಟ್ಟು, ಶ್ರದ್ಧೆಯಿಂದ ಆರಾಧಿಸಿಕೊಂಡು ಬಂದಿದ್ದಾರೆ. ಇಂತಹ ದಿವ್ಯ ಮಾತೆಯ ಕ್ಷೇತ್ರದಲ್ಲಿ ಫೆ.11ರಿಂದ 15ರವರೆಗೆ ಬ್ರಹ್ಮಕಲಶೋತ್ಸವವು ನಡೆಯಲಿದ್ದು ಈ ಸಂದರ್ಭದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಂತ ಪ್ರಚಾರ ರಥದ ಸಂಚಾರ, ಹೊರೆಕಾಣಿಕೆ ಮೆರವಣಿಗೆ, ಬೃಹತ್ ನೂತನ ಸಭಾಂಗಣ ಉದ್ಘಾಟನೆ ನಡೆಯಲಿದೆ” ಎಂದು ಬ್ರಹ್ಮಕಲಶೋತ್ಸವ ಸಮಿತಿ ಗೌರವ ಅಧ್ಯಕ್ಷ ನಾಡೋಜ ಜಿ. ಶಂಕರ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. “ಫೆ.26ರಿಂದ ಕ್ಷೇತ್ರದಲ್ಲಿ ವರ್ಷಾವಧಿ ಮಹಾಪೂಜೆ, ಮಾರ್ಚ್ 2ರಂದು ಶ್ರೀ ಲ್ ಮಲರಾಯ ಪರಿವಾರ ದೈವಗಳ ನೇಮೋತ್ಸವ, ಧಾರ್ಮಿಕ ಸಭಾ ಕಲಾಪ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸಾಮೂಹಿಕ ಅನ್ನಸಂತರ್ಪಣೆ ಕೂಡಾ ನೆರವೇರಲಿದೆ. ಈಗಾಗಲೇ ಪ್ರಚಾರ ರಥವು ಸಂಚಾರ ಆರಂಭಿಸಿದೆ” ಎಂದರು. “ಬ್ರಹ್ಮಕಲಶೋತ್ಸವ ಸಲುವಾಗಿ ಹೊರೆಕಾಣಿಕೆ ಮೆರವಣಿಗೆಯು ಫೆ.9ರಂದು ಅಪರಾಹ್ನ ಗಂಟೆ 3ಕ್ಕೆ ನಗರದ ಕೇಂದ್ರ ಮೈದಾನ ಹಾಗೂ ಕೂಳೂರು ಸಮೀಪದ ಗೋಲ್ಡ್ ಪಿಂಚ್ ಮೈದಾನದಿಂದ ಏಕಕಾಲದಲ್ಲಿ ಹೊರಡಲಿದ್ದು ಎರಡೂ ಕಡೆಯ ಹೊರೆಕಾಣಿಕೆ ಮೆರವಣಿಗೆಯು ಲೇಡಿಹಿಲ್ ಬ್ರಹ್ಮಶ್ರೀ ನಾರಾಯಣಗುರು ವೃತ್ತದಲ್ಲಿ ಒಟ್ಟು ಸೇರಿ ಕ್ಷೇತ್ರಕ್ಕೆ ಆಗಮಿಸಲಿದೆ. ಫೆ.11ರಿಂದ ಬ್ರಹ್ಮಕಲಶೋತ್ಸವದ ವೈದಿಕ ವಿಧಿ-ವಿಧಾನಗಳು ಆರಂಭವಾಗಲಿದ್ದು, ಫೆ.13ರಂದು ದೇವರ ಪುನರ್ ಪ್ರತಿಷ್ಠೆ ನೆರವೇರುತ್ತದೆ. ಫೆ.15ರಂದು ಬ್ರಹ್ಮಕಲಶೋತ್ಸವವು ಸಂಪನ್ನವಾಗಲಿದೆ. ಫೆ.16ರಂದು ವರ್ಷಾವಧಿ ಮಹಾಪೂಜೆಗೆ ಪ್ರಸಾದ ಹಾರಿಸುವಿಕೆ, ಫೆ.23ರಂದು ಚಂಡಿಕಾಯಾಗ, ಫೆ.26 ಹಾಗೂ 27ರಂದು ವರ್ಷಾವಧಿ ಮಹಾಪೂಜೆ ನಡೆಯುತ್ತದೆ. ಮಾ.2ರಂದು ಕ್ಷೇತ್ರದ ಶ್ರೀ ಮಲರಾಯ ಪರಿವಾರ ದೈವಗಳ ನೇಮೋತ್ಸವ ನಡೆಯುವುದರೊಂದಿಗೆ ವರ್ಷಾವಧಿ ಉತ್ಸವ ಮುಕ್ತಾಯವಾಗಲಿದೆ. ಕ್ಷೇತ್ರದ ಮುಂಭಾಗದಲ್ಲಿ 6 ಕೋಟಿ ರೂ. ವೆಚ್ಚದಲ್ಲಿ ನೂತನ ಬೃಹತ್ ಸಭಾಂಗಣದ ನಿರ್ಮಾಣ ಕಾರ್ಯ ಅಂತಿಮ ಹಂತದಲ್ಲಿದ್ದು ಫೆ.3ರಂದು ಬೆಳಿಗ್ಗೆ ಗಂಟೆ 10.00ಕ್ಕೆ ಲೋಕಾರ್ಪಣೆಗೊಳ್ಳಲಿದೆ ಎಂದು ಮಾಹಿತಿ ನೀಡಿದರು. ವೇದಿಕೆಯಲ್ಲಿ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್, ಗೌರವ ಸಲಹೆಗಾರ ಜಯ ಸಿ. ಕೋಟ್ಯಾನ್, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಅನಿಲ್ ಕುಮಾರ್ ಕರ್ಕೇರ, ಪ್ರಧಾನ ಸಂಚಾಲಕ ಗೌತಮ್ ಸಾಲ್ಯಾನ್ ಕೋಡಿಕಲ್, ಪ್ರಧಾನ ಕಾರ್ಯದರ್ಶಿ ಜಗದೀಶ್ ಬಂಗೇರ ಬೋಳೂರು, ಉಪಾಧ್ಯಕ್ಷ ಕುಮಾರ್ ಮೆಂಡನ್ ಬೈಕಂಪಾಡಿ, ಕೋಶಾಧಿಕಾರಿ ವಸಂತ ಅಮೀನ್ ಬೈಕಂಪಾಡಿ, ಏಳು ಪಟ್ಣ ಮೊಗವೀರ ಸಂಯುಕ್ತ ಸಭಾ ಅಧ್ಯಕ್ಷ ಲೋಕೇಶ್ ಸುವರ್ಣ, ಆಡಳಿತ ಮೊಕ್ತೇಸರ ಲಕ್ಷ್ಮಣ ಅಮೀನ್ ಕೋಡಿಕಲ್, ಪ್ರಚಾರ ಸಮಿತಿಯ ಯಶವಂತ ಬೋಳೂರು, ಪ್ರಧಾನ ಅರ್ಚಕ ಶಿವಾನಂದ ಕನ್ನಡ ಮತ್ತಿತರರು ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ಮಂಗಳೂರಿನ ಪ್ರಖ್ಯಾತ 30 ಮಾರ್ಕಿನ ಬೀಡಿ ತಯಾರಕರಾದ ಭಾರತ್ ಬೀಡಿ ವರ್ಕ್ಸ್ ಪ್ರೈ. ಲಿ. ನ ಸ್ಥಾಪಕರಾದ ಬಿ. ಮಂಜುನಾಥ್ ಪೈ ಯವರ 111 ನೇ ಜನ್ಮ ದಿನವನ್ನು ಸಂಸ್ಥಾಪಕರ ದಿನವನ್ನಾಗಿ ಆಚರಣೆ

ಮಂಗಳೂರು: ಮಂಗಳೂರಿನ ಪ್ರಖ್ಯಾತ 30 ಮಾರ್ಕಿನ ಬೀಡಿ ತಯಾರಕರಾದ ಭಾರತ್ ಬೀಡಿ ವರ್ಕ್ಸ್ ಪ್ರೈ ಲಿಮಿಟೆಡ್ ಇದರ ಸ್ಥಾಪಕರಾದ ಬಿ. ಮಂಜುನಾಥ ಪೈಯವರ 111 ನೇ ಜನ್ಮ ದಿನವನ್ನು ಸಂಸ್ಥಾಪಕರ ದಿನವನ್ನಾಗಿ ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ಸರಳ ರೀತಿಯಲ್ಲಿ ಆಚರಿಸಲಾಯಿತು.ಸಂಸ್ಥೆಯ ಕಾರ್ಯದರ್ಶಿ ವಾಸುದೇವ ಎಸ್. ಪೈ ಯವರು ಸ್ವಾಗತಿಸಿ ಪ್ರಸ್ತಾವನೆಗೈದರು.ಸಂಸ್ಥೆಯ ಕಾರ್ಯಕಾರಿ ನಿರ್ದೇಶಕರಾದ ಸುಭ್ರಾಯ ಎಂ. ಪೈ ಯವರು ಮಾತನಾಡಿ ಸಂಸ್ಥೆಗೆ ಸ್ಥಾಪಕರು ನೀಡಿದ ಕೊಡುಗೆ, ಅವರ ದೂರ ದೃಷ್ಟಿ ಹಾಗೂ ಅವರಿಗೆ ಸಮಾಜದ ಬಗ್ಗೆ ಇದ್ದ ಕಾಳಜಿಯನ್ನು ವಿವರಿಸಿದರು.ಲೆಕ್ಕ ಪರಿಶೋಧಕರಾದ ಸಿಎ ಶಿವಾನಂದ ಪೈಯವರು ಸಂಸ್ಥೆಯ ಬಗ್ಗೆ ಸವಿಸ್ತಾರವಾದ ವಿವರಗಳನ್ನು ನೀಡಿದರು. ಸಂಸ್ಥಾಪಕರು ಹಾಕಿ ಕೊಟ್ಟ ಮೌಲ್ಯಗಳನ್ನು ಅನುಚಾನವಾಗಿ ಸಂಸ್ಥೆಯು ಅನುಸರಿಸುತ್ತಾ ಬಂದಿದ್ದು, ಸಮಾಜಮುಖಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಸಂಸ್ಥೆಯು ಸಾಂಸ್ಥಿಕ ಸಮಾಜಿಕ ಕಳಕಳಿಗಳನ್ನು ತನ್ನ ಆರಂಭದ ದಿನಗಳಿಂದಲೂ ಅನುಸರಿಸುತ್ತಾ ಬಂದಿದೆ ಎಂದರು.ಇದೇ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯಕಾರಿ ನಿರ್ದೇಶಕರಾದ ನಾಗೇಂದ್ರ ಡಿ. ಪೈ ಯವರು ಸಂಸ್ಥೆಯ ಹೊಸ ಉತ್ಪನ್ನವಾದ ಮೂವತ್ತು ಮಾರ್ಕಿನ “ಕಡಕ್ ಪ್ಯಾಲಿ” ಚಹಾ ಪುಡಿಯನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಿದರು. ಹೊಸ ಉತ್ಪನ್ನದ ಬಗ್ಗೆ ಸಂಸ್ಥೆಯ ಹಿರಿಯ ಅಧಿಕಾರಿ ಎಚ್. ರಮೇಶ್ ಶೆಣೈಯವರು ಮಾಹಿತಿ ನೀಡಿದರು.ಕಾರ್ಯಕ್ರಮದಲ್ಲಿ ವಿವಿಧ ಬ್ಯಾಂಕುಗಳ ಅಧಿಕಾರಿಗಳು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿ ಸಂಸ್ಥೆಗೆ ಶುಭಹಾರೈಸಿದರು. ಈ ಸಂದರ್ಭದಲ್ಲಿ ಸಂಸ್ಥೆಗೆ 55 ವರ್ಷಗಳ ಸೇವೆ ಸಲ್ಲಿಸಿರುವ ಸುರೇಶ್ ಶೆಣೈಯವರನ್ನು ಆಡಳಿತ ಮಂಡಳಿಯು ಅಭಿನಂದಿಸಿ ಪುರಸ್ಕರಿಸಿತು.ಕಾರ್ಯಕ್ರಮದಲ್ಲಿ ನಿರ್ದೇಶಕರಾದ ವೆಂಕಟೇಶ್ ಎಂ. ಪೈ, ಉಪಸ್ಥಿತರಿದ್ದರು. ಸಂಸ್ಥೆಯ ಇನ್ನೊರ್ವ ಕಾರ್ಯಕಾರಿ ನಿರ್ದೇಶಕರಾದ ಆನಂದ್ ಜಿ. ಪೈ ಬಂದ ಎಲ್ಲಾ ಅತಿಥಿಗಳಿಗೆ ಧನ್ಯವಾದವಿತ್ತರು.

ಪ್ರಾದೇಶಿಕ ವಾರ್ತೆಗಳು

ಪತ್ರಕರ್ತರ ಗ್ರಾಮ ವಾಸ್ತವ್ಯ‌ ಕಾರ್ಯಕ್ರಮ ರಾಜ್ಯಕ್ಕೆ ಮಾದರಿ-ಸ್ಪೀಕರ್ ಯು.ಟಿ.ಖಾದರ್

ಅಹವಾಲುಗಳನ್ನು ಆದ್ಯತೆಯ ಮೇರೆಗೆ ಪರಿಹರಿಸಲು ಸೂಚಿಸುತ್ತೇನೆ-ಪತ್ರಕರ್ತರ ಗ್ರಾಮ ವಾಸ್ತವ್ಯ ಸಮಾರೋಪದಲ್ಲಿ ಸ್ಪೀಕರ್ ಭರವಸೆ ಕೊಲ್ಲಮೊಗ್ರ: ತಮ್ಮ ಒತ್ತಡದ ಕೆಲಸದ ಮಧ್ಯೆಯೂ ಗ್ರಾಮ ವಾಸ್ಯವ್ಯ ಮಾಡಿ ಆ ಊರಿನ ಸಮಸ್ಯೆಗಳನ್ನು ಅರಿತು ಪರಿಹಾರಕ್ಕಾಗಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಪತ್ರಕರ್ತರು ಮಾಡಿದ ಗ್ರಾಮ ವಾಸ್ತವ್ಯ ರಾಜ್ಯಕ್ಕೆ ಮಾದರಿಯಾಗಿದೆ ಎಂದು ರಾಜ್ಯ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದ್ದಾರೆ. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್, ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ.ಜಿಲ್ಲಾ ಪಂಚಾಯತ್, ದ.ಕ.ಪೊಲೀಸ್ ಇಲಾಖೆ, ಸುಳ್ಯ ತಾಲೂಕು ಆಡಳಿತ, ಹರಿಹರ, ಕೊಲ್ಲಮೊಗರು ಗ್ರಾಮ ಪಂಚಾಯತ್ ಮತ್ತು‌ ಸ್ಥಳೀಯ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಕೊಲ್ಲಮೊಗ್ರದಲ್ಲಿ ನಡೆದ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಸಮಾರೋಪ‌‌ ಸಮಾರಂಭದಲ್ಲಿ ಅವರು ಮಾತನಾಡಿದರು. ಇಲ್ಲಿ ಜನರು ಮಂಡಿಸಿದ ಎಲ್ಲಾಅಹವಾಲುಗಳನ್ನು ತಾಲೂಕು, ಜಿಲ್ಲೆ ಹಾಗೂ ರಾಜ್ಯ ಮಟ್ಟದ ಅಧಿಕಾರಿಗಳು ಪರಿಹರಿಸುತ್ತಾರೆ. ಜಿಲ್ಲೆ ಹಾಗು ರಾಜ್ಯ ಮಟ್ಟದಲ್ಲಿ ಇದರ ಪರಿಹಾರಕ್ಕೆ ಪೂರ್ಣ ಸಹಾಕರ ನೀಡುತ್ತೇನೆ. ಆದ್ಯತೆಯ ಮೇರೆಗೆ ಇಲ್ಲಿನ ಸಮಸ್ಯೆಗಳ ಪರಿಹಾರಕ್ಕೆ ಸೂಚಿಸುತ್ತೇನೆ. ಕೆಲವೊಂದು ಸಮಸ್ಯೆಗಳ ಪರಿಹಾರಕ್ಕೆಅಗತ್ಯ ಇದ್ದಲ್ಲಿ ಕೇಂದ್ರಕ್ಕೂ ಪತ್ರ ಬರೆಯುತ್ತೇನೆ ಎಂದು ಅವರು ಭರವಸೆ ನೀಡಿದರು. ಮುಂದಿನ ತಲೆಮಾರಿನ ಮತ್ತು ವಿದ್ಯಾರ್ಥಿಗಳ ಬೆಳವಣಿಗೆಯ ದೃಷ್ಟಿಯಿಂದ ನೆಟ್ ವರ್ಕ್ ಮತ್ತು ಬ್ರಾಡ್ ಬ್ಯಾಂಡ್ ಸಂಪರ್ಕ ಅತೀ ಅಗತ್ಯ. ಈ ಭಾಗದಲ್ಲಿ ಅದರ ಯಶಸ್ವಿ ಅನುಷ್ಠಾನಕ್ಕೆ ಸಂಂಧಪಟ್ಟವರಿಗೆ ಸೂಚಿಸುತ್ತೇನೆ ಎಂದರು.ನಿಮ್ಮ ಸಮಸ್ಯೆ ಪರಿಹಾರಕ್ಕೆ ಸ್ಪೀಕರ್‌ ಕಚೇರಿ ಬಾಗಿಲು ಸದಾ ತೆರೆಸಿರುತ್ತದೆ ಎಂದ ಅವರು ಮುಂದಿನ ದಿನಗಳಲ್ಲಿ ಕೊಲ್ಲಮೊಗ್ರ ಹರಿಹರ ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಹಾಗೂ ಇಲ್ಲಿನ ವಿದ್ಯಾರ್ಥಿಗಳಿಗೆ ವಿಧಾನಸಭಾ ಕಲಾಪಗಳ ವೀಕ್ಷಣೆಗೆ ಅವಕಾಶ ಮಾಡಿ ಕೊಡುತ್ತೇನೆ, ಶ್ರೀನಿವಾಸ ನಾಯಕ್ ಇಂದಾಜೆ ನೇತೃತ್ವದಲ್ಲಿ ಅವರನ್ನು ಕರೆ ತರಬೇಕು ಎಂದು ಅವರು ಹೇಳಿದರು.ಗ್ರಾಮ ವಾಸ್ತವ್ಯದ ನೆನಪಿಗಾಗಿ ಸ್ಪೀಕರ್ ಯು.ಟಿ.ಖಾದರ್ ತೆಂಗಿನ ಗಿಡವನ್ನು ನೆಟ್ಟರು.ಸಮಾರೋಪ ಭಾಷಣ ಮಾಡಿದ ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ‘ಗ್ರಾಮಗಳ ಅಭಿವೃದ್ಧಿ ಆದರೆ ಮಾತ್ರ ಭಾರತ ಬೆಳಗಲು ಸಾಧ್ಯ. ಪತ್ರಕರ್ತರ ಗ್ರಾಮ ವಾಸ್ತವ್ಯ ಕೊಲ್ಲಮೊಗ್ರ, ಹರಿಹರ , ಕಲ್ಮಕಾರು, ಬಾಳುಗೋಡು ಗ್ರಾಮಗಳ ಅಭಿವೃದ್ಧಿಯ ಬಾಗಿಲು ತೆರೆಯಲು ಸ್ಪೂರ್ತಿ ನೀಡಲಿ. ತನ್ನ ಕಡೆಯಿಂದಲೂ ಈ ಗ್ರಾಮಗಳ ಅಭಿವೃದ್ಧಿಗೆ ನೆರವು ನೀಡುತ್ತೇನೆ ಎಂದು ಹೇಳಿದರು‌.ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು.ಸುಳ್ಯ ಟಿಎಪಿಸಿಎಂಎಸ್ ಅಧ್ಯಕ್ಚ ನಿತ್ಯಾನಂದ ಮುಂಡೋಡಿ, ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಪಿ.ಸಿ.ಜಯರಾಮಮುಖ್ಯ ಅತಿಥಿಗಳಾಗಿದ್ದರು.ಕೊಲ್ಲಮೊಗ್ರ ಗ್ರಾ.ಪಂ. ಅಧ್ಯಕ್ಷೆ ಜಯಶ್ರೀ ಚಾಂತಾಳ, ಉಪಾಧ್ಯಕ್ಷ ಅಶ್ವತ್ ಯಾಲದಾಳ,ಹರಿಹರ ಗ್ರಾ.ಪಂ. ಅಧ್ಯಕ್ಷ ವಿಜಯ ಅಙಣ, ಉಪಾಧ್ಯಕ್ಷ ಜಯಂತ ಬಾಳುಗೋಡು, ಮಹಾರಾಷ್ಟ್ರ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ, ದ.ಕ. ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್ ವೇದಿಕೆಯಲ್ಲಿ ಉಪಸ್ಥಿದ್ದರು.ಡಾ.ಸೋಮಶೇಖರ ಕಟ್ಟೆಮನೆ ಅವಳಿ ಗ್ರಾಮಗಳ ಜನತೆ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವಿವರಿಸಿದರು. ಶ್ರೀನಿವಾಸ ನಾಯಕ್ ಇಂದಾಜೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಪತ್ರಕರ್ತರಾದ ಬಾಲಕೃಷ್ಣ ಭೀಮಗುಳಿ ಸ್ವಾಗತಿಸಿ, ಲೋಕೇಶ್ ಬಿ.ಎನ್.ವಂದಿಸಿದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಗಂಗಾಧರ ಕಲ್ಲಪಳ್ಳಿ ಕಾರ್ಯಕ್ರಮ ನಿರೂಪಿಸಿದರು.

Scroll to Top