ಪ್ರಾದೇಶಿಕ ವಾರ್ತೆಗಳು

ಪ್ರಾದೇಶಿಕ ವಾರ್ತೆಗಳು

ಎಂ.ಸಿ. ಸಿ. ಬ್ಯಾಂಕಿನ 113ನೇ ಸ್ಥಾಪಕರ ದಿನಾಚರಣೆ

ಎಂಸಿ.ಸಿ.ಬ್ಯಾAಕಿನ 113ನೇ ಸಂಸ್ಥಾಪಕರ ದಿನಾಚರಣೆಯನ್ನು ದಿನಾಂಕ 10.05.2025ರAದು ಎಂ.ಸಿ.ಸಿ. ಬ್ಯಾಂಕಿನ ಆಡಳಿತ ಕಛೇರಿಯ ಅವರಣದಲ್ಲಿ ಆಚರಿಸಲಾಯಿತು. ಈ ಆಚರಣೆಯು ಬ್ಯಾಂಕಿನ ಸಂಸ್ಥಾಪಕ ಶ್ರೀ ಪಿ.ಎಫ್.ಎಕ್ಸ್. ಸಲ್ಡಾನ್ಹಾ ಅವರ ಪರಂಪರೆಗೆ ಗೌರವ ಸಲ್ಲಿಸಿ ಸಹಕಾರಿ ವಲಯದಲ್ಲಿ ಬ್ಯಾಂಕಿನ ನಿರಂತರ ಪ್ರಗತಿಯನ್ನು ಗುರುತಿಸಿತು. ಪ್ರಾರ್ಥನಾ ಗೀತೆಯೊಂದಿಗೆ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು. ಬ್ಯಾಂಕಿನ ಇತಿಹಾಸ ಮತ್ತು ಪ್ರಗತಿಯ ಕುರಿತಾದ ಸಾಕ್ಷಚಿತ್ರವನ್ನು ಈ ಸಂದರ್ಭದಲ್ಲಿ ಪ್ರಸ್ತುತಪಡಿಸಲಾಯಿತು. ಬ್ಯಾAಕಿನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಉಡುಪಿ ಧರ್ಮಪ್ರಾಂತ್ಯದ ಪಿಆರ್‌ಒ ವಂ. ಫಾ| ಡೆನಿಸ್ ಡೆಸಾ, ಅತಿಥಿಗಳಾಗಿ ಮಂಗಳೂರು ಧರ್ಮಪ್ರಾಂತ್ಯದ ಪ್ರಾಂತಿಯ ಸುಪಿರೀಯರ್ ವಂ. ಸಿ| ಕ್ಲಾರ ಮಿನೇಜಸ್, ಯುಎಫ್‌ಸಿ, ಪ್ರಜ್ಞ ಕೌನ್ಸೆಲಿಂಗ್ಸೆAಟರ್‌ನ ನಿರ್ದೇಶಕಿ ಪ್ರೊ. ಹಿಲ್ಡಾ ರಾಯಪ್ಪನ್, ಮಂಗಳೂರು ಕೊOಕಣ್ಸ್ ದುಬಾಯ್, ಅಧ್ಯಕ್ಷ ಶ್ರೀ ಸ್ಟೇಫನ್ ಮಿನೇಜಸ್ ಮತ್ತು ಬ್ಯಾಂಕಿನ ಮಹಾಪ್ರಬಂಧಕ ಶ್ರೀ ಸುನಿಲ್ ಮಿನೇಜಸ್ ಹಾಜರಿದ್ದರು. ಸ್ವಾಗತ ಭಾಷಣದಲ್ಲಿ ಶ್ರೀ ಅನಿಲ್ ಲೋಬೊ ಅವರು, ಗಣ್ಯರು, ಆಡಳಿತ ಮಂಡಳಿ ಸದಸ್ಯರು. ಸಿಬ್ಬಂದಿ ಹಾಗೂ ಅತಿಥಿಗಳನ್ನು ಸ್ವಾತಿಸಿದರು. ಅವರು ಎಂ.ಸಿ.ಸಿ. ಬ್ಯಾಂಕಿನ ರೂಪಾಂತರ, ಸೇವೆ ಮತ್ತು ಕಾರ್ಯಕ್ಷಮತೆಯಲ್ಲಿ ರಾಷ್ಟಿçÃಕೃತ ಬ್ಯಾಂಕುಗಳೊAದಿಗೆ ಬ್ಯಾAಕಿನ ಸಮಾನತೆಯನ್ನು ಎತ್ತಿ ತೋರಿಸಿದರು. ವಂ. ಫಾ| ಡೆನಿಸ್ಡೆಸಾ ಅವರ ಬಗ್ಗೆ ಅಪಾರ ಮೆಚ್ಚುಗೆಯನ್ನು ವ್ಯಕ್ತಪಡಿಸಿ ಅವರನ್ನೂ ಸ್ಪೂರ್ತಿಯ ಮೂಲ ಮತ್ತು ವೃತ್ತಿಪರತೆಯಸಂಕೇತವೆAದು ಶ್ಲಾಘಿಸಿದರು. ಬ್ಯಾಂಕಿನ ಪ್ರಗತಿ, ಸಾದನೆಯನ್ನು ವಿವರಿಸಿ ಸಂಸ್ಥಾಪಕರ ದಿನಾಚರಣೆಯ ಮಹತ್ವವನ್ನು ವಿವರಿಸಿದರು.ಬ್ಯಾಂಕಿನ ಸಂಸ್ಥಾಪಕರ ದಿನಾಚರಣೆಯ ಪ್ರಯುಕ್ತ ಸಂಸ್ಥಾಪಕ ಶ್ರೀ ಪಿ.ಎಫ್. ಎಕ್ಸ್ ಸಲ್ಡಾನ್ಹಾರವರ ಕುಟುಂಬದ ಸದಸ್ಯರು ಮತ್ತು ವೇದಿಕೆಯಲ್ಲಿರುವ ಗಣ್ಯರು ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ವಂ.ಫಾ| ಡೆನಿಸ್ ಡೆಸಾ ಮಾತನಾಡಿ ಪ್ರಗತಿಯತ್ತ ಮುನ್ನುಗ್ಗುತ್ತಿರುವ ಬ್ಯಾಂಕಿನ ಅಧ್ಯಕ್ಷರು, ಆಡಳಿತ ಮಂಡಳಿಸದಸ್ಯರು ಮತ್ತು ಸಿಬ್ಬಂದಿಯನ್ನು ಅಭಿನಂದಿಸಿದರು. ಮೂರು ಪ್ರಮುಖ ತತ್ವಗಳಲ್ಲಿ ಬೇರೂರಿರುವ ಸ್ಪೂರ್ತಿದಾಯಕ ಸಂದೇಶವನ್ನು ಅವರು ಈ ಸಂದರ್ಭದಲ್ಲಿ ನೀಡಿದರು.1) ಕ್ರತಜ್ಞತೆಯಿಂದ ಹಿಂದಿರುಗಿ ನೋಡುವುದು, ಸಂಸ್ಥೆಯ ಪರAಪರೆ ಮತ್ತು ಅಡಿಪಾಯದ ಮೌಲ್ಯಗಳನ್ನು ಆಚರಿಸುವುದು.2) ಸ್ವಯಂ ಮೌಲ್ಯಮಾಪನವನ್ನು ಮಾಡುವುದು, ವಿಶ್ಲೇಷಣೆ ಮತ್ತು ಅಪಾಯಗಳನ್ನು ತೆಗೆದುಕೊಳ್ಳುವ ದೈರ್ಯದ ಮೂಲಕ ಅತ್ಮಾವಲೋಕನವನ್ನು ಪ್ರೊತ್ಸಾಹಿಸುವುದು.3) ದೇವರಲ್ಲಿ ನಂಬಿಕೆಯಿಟ್ಟು ಮುಂದೆ ಸಾಗುವುದು. ಬ್ಯಾಂಕಿನ ಸಿಬ್ಬಂದಿಗಳು ಶ್ರದ್ದೆಯಿಂದ ಇರಲು, ಸಹಾನುಭೂತಿಯಿಂದಸೇವೆ ಸಲ್ಲಿಸಲು ಮತ್ತು ಗ್ರಾಹಕರನ್ನು ನಗುವಿನೊಂದಿಗೆ ಸAಪರ್ಕಿಸಲು ಅವರು ಒತ್ತಾಯಿಸಿದರು. ಪಾನೀರ್‌ನ ದಿ ಮರ್ಸಿಡ್ ಅನಾಥಾಶ್ರಮ ಮತ್ತು ಕಂಕನಾಡಿಯ ಶಾಲೋಮ್ ಟ್ರಸ್ಟ್ಗೆ ಈ ಸಂದರ್ಭದಲ್ಲಿ ದೇಣಿಗೆಯನ್ನುವಿತರಿಸಲಾಯಿತು. ವಂ.ಸಿ| ಕ್ಲಾರಾ ಮಿನೇಜಸ್‌ರವರು ಬ್ಯಾಂಕಿನ ಪ್ರಗತಿಯನ್ನು ತೋರಿಸುವ ಬುಲೆಟಿನ್ ಅನ್ನು ಬಿಡುಗಡೆ ಮಾಡಿ ಬ್ಯಾಂಕಿನ ಪ್ರಗತಿಯನ್ನು ಶ್ಲಾಘಿಸಿದರು. ಸುಸ್ಥಿರ ಬೆಳವಣಿಗೆಯನ್ನು ಸಾಧಿಸುವಲ್ಲಿ ಅವಕಾಶ, ತಾಳ್ಮೆ, ವೃತ್ತಿಪರತೆ ಮತ್ತು ಕಠಿಣ ಪರಿಶ್ರಮದ ಮಹತ್ವವನ್ನು ಒತ್ತಿ ಹೇಳಿದರು. ಹೊಸದಾಗಿ ಸಿಎ ಪರೀಕ್ಷೇಯಲ್ಲಿ ಉತ್ತೀರ್ಣರಾದ ಗ್ರಾಹಕರ ಮಕ್ಕಳಾದ ಚಾರ್ಟರ್ಡ್ ಅಕೌಂಟೆAಟ್‌ಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಸಂತ ಅಲೋಶಿಯಸ್ ಕಾಲೇಜಿನ ಪ್ರೊಫೆಸರ್ ಮತ್ತು ಎಂಸಿಸಿ ಬ್ಯಾಂಕಿನ ಮಾಜಿ ಉಪಾಧ್ಯಕ್ಷರಾದ ಡಾ| ಎಡ್ಮಂಡ್ ಜೆ.ಬಿ. ಫ್ರಾಂಕ್ ಮತ್ತು ಎಂ.ಸಿ.ಸಿ. ಬ್ಯಾAಕಿನ ಮಾಜಿ ನಿರ್ದೇಶಕರು ಮತ್ತು ಬರಹಗಾರ ಶ್ರೀ ಮಾರ್ಸೆಲ್ ಎಂ.ಡಿಸೋಜ, ಮಂAಗಳೂರು ಕೊಂಕಣ್ಸ್ ದುಬೈನ ಹೊಸದಾಗಿ ಆಯ್ಕೆಯಾದ ಶ್ರೀ ಸ್ಟೀಫನ್ ಮಿನೇಜಸ್ ಇವರು ಸಮುದಾಯಕ್ಕೆ ನೀಡಿದ ಶ್ಘಾಘನೀಯ ಸೇವೆಗಾಗಿ ಸನ್ಮಾನಿಸಲಾಯಿತು. ಸಿಎ ಲಯ್ನಾಲ್ ನೋರೊನ್ಹಾರವರು ಬ್ಯಾಂಕಿನ ಇತಿಹಾಸ, ಪ್ರಗತಿಯನ್ನು ವಿವರಿಸಿ, ಅಧ್ಯಕ್ಷರು ಮತ್ತು ಆಡಳಿತ ಮಂಡಳಿಗೆ ಅಭಿನಂದಿಸಿದರು. ಗ್ರಾಹಕರು ಬ್ಯಾಂಕಿನ ಮೇಲೆ ಇಟ್ಟ ವಿಸ್ವಾಸದಿಂದ ಬ್ಯಾಂಕ್ ಮುನ್ನಡೆಯುತ್ತಿದೆ ಎಂದರು. ಯಶಸ್ಸು ಕೇವಲ ಫಲಿತಾಂಶಗಳ ಬಗ್ಗೆ ಅಲ್ಲ, ಅದರೆ ಅದನ್ನು ಸಾಧಿಸುವಲ್ಲಿ, ಸಮಗ್ರತೆ ಮತ್ತು ತತ್ವಗಳ ಬಗ್ಗೆ ನೆನಪಿಸಿದರು.ಕಳೆದ 50 ವರ್ಷಗಳಿಂದ ಸಾರ್ವಜನಿಕ ಸೇವೆ ಸಲ್ಲಿಸುತ್ತಿರುವ ಪ್ರಜ್ಞ ಕೌನ್ಸೆಲಿಂಗ್ ಸೆಂಟರ್‌ನ ನಿರ್ದೇಶಕಿ ಪ್ರೊ. ಹಿಲ್ಡಾ ರಾಯಪ್ಪನ್ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದಅವರು ಬ್ಯಾಂಕಿಗೆ ಧನ್ಯವಾದ ಸಲ್ಲಿಸಿ ಸೇವೆಯಲ್ಲಿ ಸಹಾನೂಭೂತಿಯ ಮಹತ್ವವನ್ನು ಒತ್ತಿ ಹೇಳಿದರು.ಬ್ಯಾಂಕಿನ ನಿರ್ದೇಶಕರಾದ ಶ್ರೀ ಅನಿಲ್ ಪತ್ರಾವೊ, ಶ್ರೀ ಅಂಡ್ರು÷್ಯ ಡಿಸೋಜ, ಶ್ರೀ ಹೆರಾಲ್ಡ್ ಮೊಂತೇರೊ, ಶ್ರೀ ರೋಶನ್ ಡಿಸೋಜ, ಡಾ| ಜೆರಾಲ್ಡ್ ಪಿಂಟೊ, ಶ್ರೀ ಮೆಲ್ವಿನ್ ವಾಸ್, ಶ್ರೀ ಸಿ.ಜಿ.ಪಿಂಟೊ, ಶ್ರೀಮತಿ ಐರಿನ್ರೆಬೆಲ್ಲೊ, ಡಾ| ಫ್ರೀಡಾ ಡಿಸೋಜ. ಶ್ರೀಮತಿ ಶರ್ಮಿಳಾ ಮಿನೇಜಸ್, ಶ್ರೀ ಫೆಲಿಕ್ಸ್ ಡಿಕ್ರುಜ್ ಮತ್ತು ಶ್ರೀ ಆಲ್ವಿನ್ ಪಿ. ಮೊಂತೇರೊ ಹಾಜರಿದ್ದರು, ಬ್ಯಾಂಕಿನ ಮಹಾಪ್ರಬಂಧಕ ಸುನಿಲ್ ಮಿನೇಜಸ್ ವಂದಿಸಿ, ಗ್ರೀಶ್ಮಾಸಲ್ಡಾನ್ಹಾ, ನೀರ್‌ಮಾರ್ಗ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ನಿನ್ನೆ ರಾತ್ರಿ ಜೆಪ್ಪು ಬಪ್ಪಾಲ್, ಜೆಪ್ಪು ಕುಡುಪಾಡಿ ಪರಿಸರದಲ್ಲಿ ಬಾನಿನಲ್ಲಿ ದಿಢೀರ್ ಆಗಿ ಕಾಣಿಸಿಕೊಂಡ ಟಾರ್ಚ್ ಲೈಟ್ ಬೆಳಕು

ಬ್ರೇಕಿಂಗ್ ನ್ಯೂಸ್:ಡಾ.ಅಶೋಕ್ ಶೆಟ್ಟಿ ಬಿ.ಎನ್.ಮಂಗಳೂರು -ಮೇ10ರ ಶನಿವಾರ ರಾತ್ರಿ 9.50ರ ಸುಮಾರಿಗೆ ಮಂಗಳೂರಿನ ಜೆಪ್ಪು ಬಪ್ಪಲ್,ಜೆಪ್ಪು ಕುಡುಪಾಡಿ ಪರಿಸರದಲ್ಲಿ ಬಾನಿನಲ್ಲಿ ಮೋಡಗಳ ನಡುವೆ ಟಾರ್ಚ್ ಲೈಟ್ ಬೆಳಕೊಂದು 5 ನಿಮಿಷಗಳ ಕಾಲ ಹರಿದಾಡಿ ಆಶ್ಚರ್ಯ ಹುಟ್ಟಿಸಿದೆ.ಇದರ ವಿಡಿಯೋ ಲಿಂಕ್ ಇಲ್ಲಿದೆ https://drive.google.com/file/d/1q60MqFlwiLJKXTHg5ZR1C3bKSYgyYspa/view?usp=sharing

ಪ್ರಾದೇಶಿಕ ವಾರ್ತೆಗಳು

Igniting Innovation: Entrepreneurship Development Programme 2025 Empowers AIMIT Studentpreneurs

The Entrepreneurship Development Programme (EDP) – 2025 was successfully conducted on 8th May 2025 at the Arthur Shenoy Auditorium, AIMIT, St Aloysius (Deemed to be University), Mangaluru. Organized by the Department of Business Administration (MBA), the full-day programme commenced at 9:00 a.m. and concluded at 4:15 p.m. The inaugural session was graced by the presence of esteemed dignitaries, including the Chief Guest, Mr. Ullas Kamath, a distinguished entrepreneur and Joint Managing Director of Jyothi Labs. Other notable attendees included Rev. Fr. Kiran Coth SJ, Director of AIMIT; Dr. Rajani Suresh, Dean of Academics and Research; Ms. Beena Dias, Head of the Department; faculty coordinator Dr. Swapna Rose; and event coordinators Ms. Prithvi Prakash and Ms. Laveena Nightingale.The programme commenced with the traditional lighting of the lamp, symbolizing the inauguration of the event. This was followed by a special address delivered by Mr. Ullas Kamath, and the presidential address by Rev. Fr. Kiran Coth SJ, setting the tone for the day’s proceedings. The event featured a series of insightful sessions by prominent speakers. Mr. Ajay Kamath K, Associate Vice President at Federal Bank, delivered an expert talk, followed by an engaging session by Mrs. Vathika Pai, Proprietor of Vathikav International Travels. An inspiring presentation was also delivered by Master Jithen Arun, a young intrapreneur with notable contributions in the fields of music and adventure sports.The concluding session, titled ‘Mentoprich’, was moderated by Mrs. Shifali Saldanha, Senior Analyst at Oracle. This interactive session offered live mentoring to student entrepreneurs from AIMIT, providing them with practical insights and guidance. Active participants included Ms. Mahalakshmi Bhat, Ms. Bianca Saldanha, Ms. Pratheekha, and Mr. Prithvi.

ಪ್ರಾದೇಶಿಕ ವಾರ್ತೆಗಳು

AIMIT ನಲ್ಲಿ ನವೋದ್ಯಮಕ್ಕೆ ನುರಿತ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ‘ಇಗ್ನೈಟಿಂಗ್ ಇನೋವೇಷನ್: ಎಂಟರ್‌ಪ್ರೈನರ್‌ಶಿಪ್ ಡೆವಲಪ್‌ಮೆಂಟ್ ಪ್ರೋಗ್ರಾಂ 2025’

ಎಂಟರ್‌ಪ್ರೈನರ್‌ಶಿಪ್ ಡೆವಲಪ್‌ಮೆಂಟ್ ಪ್ರೋಗ್ರಾಂ (EDP) – 2025 ಅನ್ನು ಮೇ 8, 2025ರಂದು ಮಂಗಳೂರುದಲ್ಲಿರುವ ಸೇಂಟ್ ಅಲೋಶಿಯಸ್ (ಅಭ್ಯರ್ಥಿತ ವಿಶ್ವವಿದ್ಯಾಲಯ) ಯೂನಿಟ್‌ನ AIMIT ನಲ್ಲಿ ಶೆಣೈ ಸಭಾಂಗಣದಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು. ಬಿಸಿನೆಸ್ ಅಡ್ಮಿನಿಸ್ಟ್ರೇಶನ್ (ಎಂ.ಬಿ.ಎ) ವಿಭಾಗದ ವತಿಯಿಂದ ಈ ಪೂರ್ಣದಿನ ಕಾರ್ಯಕ್ರಮವನ್ನು ಬೆಳಗ್ಗೆ 9:00ರಿಂದ ಸಂಜೆ 4:15ರ ವರೆಗೆ ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನಾ ಸಮಾರಂಭವನ್ನು ಹಲವಾರು ಗಣ್ಯರ ಸಮ್ಮುಖದಲ್ಲಿ ನಡೆಸಲಾಯಿತು. ಮುಖ್ಯ ಅತಿಥಿಯಾಗಿ ಪ್ರಖ್ಯಾತ ಉದ್ಯಮಿ ಮತ್ತು ಜ್ಯೋತಿ ಲ್ಯಾಬ್ಸ್‌ನ ಜಂಟಿ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಉಲ್ಲಾಸ್ ಕಾಮತ್ ಅವರು ಪಾಲ್ಗೊಂಡರು. ಇವರೊಂದಿಗೆ ರೆ। ಫಾ| ಕಿರಣ್ ಕೊತ್ ಎಸ್‌ಜೆ (AIMIT ನಿರ್ದೇಶಕ), ಡಾ. ರಜನಿ ಸುರೇಶ್ (ಅಕಾಡೆಮಿಕ್ಸ್ ಮತ್ತು ಸಂಶೋಧನಾ ಡೀನ್), ಮಿಸ್ ಬೀನಾ ಡಯಸ್ (ವಿಭಾಗದ ಮುಖ್ಯಸ್ಥೆ), ಕಾರ್ಯಕ್ರಮ ಸಂಯೋಜಕ ಡಾ. ಸ್ವಪ್ನಾ ರೋಸ್ ಮತ್ತು ಕಾರ್ಯಕ್ರಮ ಸಹ ಸಂಯೋಜಕರಾದ ಮಿಸ್ ಪ್ರಥ್ವಿ ಪ್ರಕಾಶ್ ಮತ್ತು ಮಿಸ್ ಲವೀನಾ ನೈಟಿಂಗೇಲ್ ಅವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಆರಂಭವನ್ನು ಪರಂಪರೆಯಂತೆ ದೀಪ ಬೆಳಗಿಸುವ ಮೂಲಕ ಮಾಡಲಾಯಿತು. ಬಳಿಕ ಶ್ರೀ ಉಲ್ಲಾಸ್ ಕಾಮತ್ ಅವರು ವಿಶೇಷ ಭಾಷಣ ನೀಡಿದರು. ರೆ. ಫಾ. ಕಿರಣ್ ಕೊತ್ ಎಸ್‌ಜೆ ಅವರು ಅಧ್ಯಕ್ಷೀಯ ಭಾಷಣ ನೀಡಿದರು.ಕಾರ್ಯಕ್ರಮದಲ್ಲಿ ಹಲವು ಮಹತ್ವಪೂರ್ಣ ಭಾಷಣಗಳು ನಡೆಯುವ ಮೂಲಕ ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕ ಅನುಭವವಾಯಿತು. ಫೆಡರಲ್ ಬ್ಯಾಂಕ್‌ನ ಅಸೋಸಿಯೇಟ್ ವೈಸ್ ಪ್ರೆಸಿಡೆಂಟ್‌ ಆಗಿರುವ ಶ್ರೀ ಅಜಯ್ ಕಾಮತ್ ಕೆ. ಅವರು ತಜ್ಞ ಭಾಷಣ ನೀಡಿದರು. ನಂತರ ವಥಿಕಾವ್ ಇಂಟರ್‌ನ್ಯಾಷನಲ್ ಟ್ರಾವೆಲ್ಸ್‌ನ ಮಾಲಕಿಯಾದ ಮಿಸೆಸ್ ವಥಿಕಾ ಪೈ ಅವರು ಉಪನ್ಯಾಸ ನೀಡಿದರು. ಸಂಗೀತ ಮತ್ತು ಸಾಹಸ ಕ್ರೀಡೆಗಳಲ್ಲಿ ಸಾಧನೆ ಮಾಡಿದ ಯುವ ಉದ್ಯಮಿ ಮಾಸ್ಟರ್ ಜಿತೇನ್ ಅರುಣ್ ಅವರು ಪ್ರೇರಣಾದಾಯಕ ಪ್ರಸ್ತುತಿ ನೀಡಿದರು.ಕಾರ್ಯಕ್ರಮದ ಕೊನೆಯ ಅಧಿವೇಶನ ‘ಮೆಂಟೋಪ್ರಿಚ್’ ಎಂದು ಕರೆಯಲ್ಪಟಿದ್ದು, ಓರಾಕಲ್‌ನ ಹಿರಿಯ ವಿಶ್ಲೇಷಕ ಮಿಸೆಸ್ ಶಿಫಾಲಿ ಸಲ್ಡಾನ್ಹಾ ಅವರ ನೇತೃತ್ವದಲ್ಲಿ ನಡೆಯಿತು. ಈ ಸೆಷನ್‌ನಲ್ಲಿ AIMITನ ವಿದ್ಯಾರ್ಥಿ ಉದ್ಯಮಿಗಳಿಗೆ ನೇರ ಮಾರ್ಗದರ್ಶನ ನೀಡಲಾಯಿತು.

ಪ್ರಾದೇಶಿಕ ವಾರ್ತೆಗಳು

ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್ ಐ ಎ ಗೆ ಹಸ್ತಾಂತರಿಸಲು ಬಿಜೆಪಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ರಾಜ್ಯಪಾಲರಿಗೆ ಮನವಿ. ನಿಯೋಗದಲ್ಲಿ ಸುಹಾಸ್ ಶೆಟ್ಟಿ ತಂದೆ ತಾಯಿ ಉಪಸ್ಥಿತಿ.

ಬೆಂಗಳೂರು -ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್. ಐ. ಎ. ತನಿಖೆಗೆ ಹಸ್ತಾಂತರಿಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ, ವಿಧಾನ ಸಭಾ ವಿಪಕ್ಷ ನಾಯಕರಾದ ಆರ್ ಅಶೋಕ್ ಹಾಗೂ ವಿಧಾನ ಪರಿಷತ್ ವಿಪಕ್ಷ ನಾಯಕರಾದ ಛಲವಾದಿ ನಾರಾಯಣ ಸ್ವಾಮಿ ನೇತೃತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಶಾಸಕರು ಹಾಗೂ ಸಂಸದರ ನಿಯೋಗ ಕರ್ನಾಟಕದ ಘನವೆತ್ತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರವರನ್ನು ಮೃತ ಸುಹಾಸ್ ಶೆಟ್ಟಿಯವರ ತಂದೆ ತಾಯಿಯವರೊಂದಿಗೆ ರಾಜಭವನದಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಎಂಪಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ ವೈ ,ರಾಜೇಶ್ ನ್ಯಾಕ್ ಉಳಿಪ್ಪಾಡಿ, ಉಮಾನಾಥ ಕೋಟ್ಯಾ ನ್,ಹರೀಶ್ ಪೂಂಜ ,ಭಾಗೀರಥಿ ಮುರುಳ್ಯ ,ಪ್ರತಾಪ್ ಸಿಂಹ ನಾಯಕ್ ಸೇರಿದಂತೆ ಉಭಯ ಜಿಲ್ಲೆಗಳ ಶಾಸಕರು,ಸುಹಾಸ್ ಶೆಟ್ಟಿ ಮಾವ ರಾಜೇಶ್ ಭಂಡಾರಿ, ಕಾವಳಮುಡೂರು, ಗ್ರಾ.ಪಂ ಅಧ್ಯಕ್ಷರಾದ ಅಜಿತ್ ಶೆಟ್ಟಿಯವರು ಸುಹಾಸ್ ಕುಟುಂಬದೊಂದಿಗೆ ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವನೆಗೆ ಯುವ ರೆಡ್‌ಕ್ರಾಸ್ ಪ್ರೇರಣೆ -ರೆಡ್‌ಕ್ರಾಸ್ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ

ಮಂಗಳೂರು : ಯುವ ರೆಡ್‌ಕ್ರಾಸ್ ಮಂಗಳೂರು ವಿ.ವಿ. ಘಟಕದ ವತಿಯಿಂದ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ದ.ಕ. ಮತ್ತು ಉಡುಪಿ ಜಿಲ್ಲಾ ಘಟಕದ ಸಹಯೋಗದಲ್ಲಿ ಮಂಗಳೂರು ವಿ.ವಿ. ಮಟ್ಟದ ಯುವ ರೆಡ್‌ಕ್ರಾಸ್ ಸದಸ್ಯರಿಗೆ ಮೂರು ದಿನಗಳ ಪ್ರೇರಣಾ ಶಿಬಿರ ಗುರುವಾರ ಪಿಲಿಕುಳದ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಗುರುವಾರ ಉದ್ಘಾಟನೆಗೊಂಡಿತು.ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ರೆಡ್‌ಕ್ರಾಸ್ ಸಂಸ್ಥೆಯ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಮಾತನಾಡಿ‘ವಿದ್ಯಾರ್ಥಿಗಳು ಜೀವನದಲ್ಲಿ ಕರುಣೆ, ಸೇವಾ ಮನೋಭಾವ ಅಳವಡಿಸಿಕೊಳ್ಳಬೇಕು. ಮಾನವೀಯ ಸೇವೆಗೆ ಒಂದಷ್ಟು ಸಮಯ ಮೀಸರಿಲಿಸಬೇಕು. ಸವಾಜ ಸೇವೆ ಹಾಗೂ ವಾನವೀಯ ಮೌಲ್ಯಗಳನ್ನು ರೂಢಿಸಿಕೊಳ್ಳಲು ಯುವ ರೆಡ್‌ಕ್ರಾಸ್ ಪ್ರೇರಣೆ ನೀಡುತ್ತದೆ ಎಂದರು.ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ.ಅರುಣ್ ಕುಮಾರ್ ಶೆಟ್ಟಿ, ಉದ್ಯಮಿ ಸಂತೋಷ್ ಶೆಟ್ಟಿ ಮುಖ್ಯ ಅತಿಥಿಗಳಾಗಿದ್ದರು.ರೆಡ್‌ಕ್ರಾಸ್ ಸಂಸ್ಥೆಯ ದ.ಕ.ಜಿಲ್ಲಾ ಘಟಕದ ಖಜಾಂಜಿ ಮೋಹನ್ ಶೆಟ್ಟಿ, ಕಾರ್ಯದರ್ಶಿ ಕಿಶೋರ್‌ಚಂದ್ರ ಹೆಗ್ಡೆ, ಉಡುಪಿ ಘಟಕದ ಕಾರ್ಯದರ್ಶಿ ಡಾ.ಗಣನಾಥ ಎಕ್ಕಾರು, ಯುವ ರೆಡ್‌ಕ್ರಾಸ್ ಸಂಯೋಜನಾಧಿಕಾರಿಗಳಾದ ಯೋಗೀಶ್ ಶ್ಯಾನ್‌ಭೋಗ್, ಸಂತೋಷ್ ಪಿಂಟೊ, ದೀಕ್ಷಿತಾ, ಡಾ.ಅನುರಾಧ ಕುರುಂಜಿ ಉಪಸ್ಥಿತರಿದ್ದರು.ಯುವ ರೆಡ್‌ಕ್ರಾಸ್ ಮಂಗಳೂರು ವಿ.ವಿ. ಘಟಕದ ನೋಡಲ್ ಆಫೀಸರ್ ಡಾ.ಗಾಯತ್ರಿ.ಎನ್. ಸ್ವಾಗತಿಸಿ, ಯುವ ರೆಡ್‌ಕ್ರಾಸ್ ಉಪ ಸಮಿತಿಯ ನಿರ್ದೇಶಕ ಸಚೇತ್ ಸುವರ್ಣ ವಂದಿಸಿದರು. ರಾಮಕೃಷ್ಣ ಕಾಲೇಜಿನ ಯುವ ರೆಡ್‌ಕ್ರಾಸ್ ಸಂಯೋಜನಾಧಿಕಾರಿ ನಟೇಶ್ ಆಳ್ವ ವಂದಿಸಿದರು. ಮಂಗಳೂರು ವಿ.ವಿ.ಯ ವಿವಿಧ ಕಾಲೇಜುಗಳ ಯುವ ರೆಡ್‌ಕ್ರಾಸ್ ಸದಸ್ಯರು ಶಿಬಿರದಲ್ಲಿಭಾಗವಹಿಸಿದ್ದರು.

ಪ್ರಾದೇಶಿಕ ವಾರ್ತೆಗಳು

ಪಜೀರು ಶ್ರೀ ಅರಸು ಮುಂಡಿತ್ತಾಯ ದೈವಸ್ಥಾನದ ವ್ಯವಸ್ಥಾಪನಾ ಅಧ್ಯಕ್ಷರಾಗಿ ಪ್ರದೀಪ್ ಆಳ್ವ ನೇಮಕ

ತೊಕ್ಕೊಟ್ಟು: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಪಜೀರು ಗ್ರಾಮದ ಶ್ರೀ ಅರಸು ಮುಂಡಿತ್ತಾಯ ದೈವಸ್ಥಾನದ ವ್ಯವಸ್ಥಾಪನಾ ಸಮಿತಿಯನ್ನು ರಚಿಸಿ ಮಂಗಳೂರಿನ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯಿಂದ ಆದೇಶ ಹೊರಡಿಸಿರುತ್ತಾರೆ. ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರನ್ನಾಗಿ ಪಜೀರು ಅಜೆಕಳಗುತ್ತು ಪ್ರದೀಪ್ ಆಳ್ವ ಕದ್ರಿ ಆಯ್ಕೆ ಮಾಡಲಾಗಿದೆ.ಸದಸ್ಯರಾಗಿ ಸುಬ್ರಾಯ ಪೂಜಾರಿ ಭಂಡಾರಮನೆ, ಜಗದೀಶ್ ಆಳ್ವ ಕುವೆತ್ತಬೈಲು, ವಿಶ್ವಾಸ್ ರೈ ಬಂಗದಾರೆಗುತ್ತು, ಪುರಂದರ ವಜಲಗುಡ್ಡೆ, ಸರಸ್ವತಿ ಅಡ್ಕ, ಭಾರತಿ ಗಟ್ಟಿ ಕೊರಂತೋಡಿ, ರಂಗನಾಥ ಪೂಂಜ ಅಜೆಕಳಗುತ್ತು, ರಮೇಶ್ ಸಪಲ್ಯ ಗಾಣದಮನೆ ಇವರುಗಳನ್ನು ಆಯ್ಕೆ ಮಾಡಿ ಆದೇಶ ಹೊರಡಿಸಿದೆ.

ಪ್ರಾದೇಶಿಕ ವಾರ್ತೆಗಳು

ಪೊಪ್ಯುಲರ್ ಜಗದೀಶ ಸಿ. ಶೆಟ್ಟಿ 8ನೇ ಪುಣ್ಯ ಸಂಸ್ಮರಣೆ. 40 ಅಶಕ್ತರಿಗೆ, 31 ವಿದ್ಯಾರ್ಥಿಗಳ ಶಿಕ್ಷಣಕ್ಕೆ 10 ಲಕ್ಷರೂಪಾಯಿ ಆರ್ಥಿಕ ಸಹಾಯ ವಿತರಣೆ

ಬಜಪೆ: ಪೊಪ್ಯುಲರ್ ಜಗದೀಶ ಸಿ. ಶೆಟ್ಟಿ ಚಾರಿಟೇಬಲ್ ಫೌಂಡೇಶನ್, ಪೊಪ್ರೈಲರ್ ಬಂಟ್ಸ್ ಇಂಗ್ಲೀಷ್ ಮೀಡಿಯಂ ಪ್ರೌಢಶಾಲೆ, ಮಳವೂರು ಆಶ್ರಯದಲ್ಲಿ ಸಂಸ್ಥೆಯ ಸ್ಥಾಪಕ ಕಾರ್ಯಾಧ್ಯಕ್ಷ ಹಾಗೂ ಸಂಚಾಲಕರಾಗಿದ್ದ ದಿ. ಪೊಪ್ಯಲರ್ ಜಗದೀಶ ಸಿ. ಶೆಟ್ಟಿ ಅವರ 8ನೇ ಪುಣ್ಯಸಂಸ್ಕರಣಾ ಕಾರ್ಯಕ್ರಮವು ಪ್ರೌಢಶಾಲೆಯ ಸಭಾಂಗಣದಲ್ಲಿ ನಡೆಯಿತು.ಫೌಂಡೇಷನ್ ಹಾಗೂ ಪ್ರೌಢಶಾಲೆಯ ಸಂಚಾಲಕರಾದ ಕೆ.ಕರುಣಾಕರ ಶೆಟ್ಟಿಯವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಪೊಪ್ಯುಲರ್ ಜಗದೀಶ ಸಿ.ಶೆಟ್ಟಿ ಯವರ ಪ್ರತಿಮೆಗೆ ಹೂಹಾರ ಹಾಗೂ ಪುಷ್ಪ ನಮನ ಸಲ್ಲಿಸಿದರು. ಬಳಿಕ 40 ಮಂದಿ ಆಶಕ್ತರಿಗೆ ಹಾಗೂ 31 ವಿದ್ಯಾರ್ಥಿಗಳ ಶಿಕ್ಷಣಕ್ಕೆ ಒಟ್ಟು 10 ಲಕ್ಷರೂ. ಸಹಾಯ ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ಮಾತನಾಡಿದ ಬಂಟ್ಸ್ ವೇಲ್ವೇರ್ ಟ್ರಸ್ಟಿನ ಹಾಗೂ ಪೊಪ್ಯುಲರ್ ಬಂಟ್ಸ್ ಇಂಗ್ಲೀಷ್ ಮೀಡಿಯಂ ಪ್ರೌಢಶಾಲಾ ಕಾರ್ಯ ದರ್ಶಿ ಗೋಪಿನಾಥ ಹೆಗ್ಡೆ ಪೊಪ್ಯುಲರ್ ಜಗದೀಶ ಸಿ.ಶೆಟ್ಟಿ ಯವರ ಆದರ್ಶ, ಮಾರ್ಗದರ್ಶನ ನಮಗೆ ದಾರಿದೀಪ. ಉತ್ತಮ ಶಿಕ್ಷಣ ಸಂಸ್ಥೆಯಾಗ ಬೇಕು, ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ, ಆಶಕ್ತರಿಗೆ ಧನ ಸಹಾಯ ಅವರ ಕನಸು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ದೊಂದಿಗೆ ಅವರಿಗೆ ಅರ್ಥಪೂರ್ಣ ಶ್ರದ್ಧಾಂಜಲಿಯನ್ನು ಸಲ್ಲಿಸಲಾಗುತ್ತಿದೆ ಎಂದರು.ಟ್ರಸ್ಟಿನ ಕೋಶಾಧಿಕಾರಿ ರತ್ನಾಕರ ಶೆಟ್ಟಿ ಮಾತನಾಡಿ, ಪೊಪ್ಯುಲರ್ ಜಗದೀಶ್ ಸಿ.ಶೆಟ್ಟಿಯವರನೆನಪು ಸದಾ ಉಳಿಯು ವಂತೆ ಮಾಡಿದೆ. ಸಂಸ್ಥೆಯಲ್ಲಿ 1,200 ವಿದ್ಯಾರ್ಥಿಗಳಿಗೆ ಶಿಕ್ಷಣ, ಸಹಾಯದ ನಿರೀಕ್ಷೆಯಲ್ಲಿ ಬಂದ ಅಶಕ್ತರಿಗೆ ಸಹಾಯ ಧನ ನೀಡುವ ಮೂಲಕ ಅವರ ಕನಸು ಸಾಕಾರಗೊಳಿಸಿದೆ ಎಂದರು. ಫೌಂಡೇಶನ್ ಕಾರ್ಯದರ್ಶಿ ಮತ್ತು ಟ್ರಸ್ಟಿ ಶಶಿರೇಖಾ ಜೆ.ಶೆಟ್ಟಿ, ಟ್ರಸ್ಟಿ ಸಂದೀಪ್ ರೈ, ಶಶಿಕಲಾ ಶೆಟ್ಟಿ ಅರ್ಚನಾ ಶೆಟ್ಟಿ ಉಪಸ್ಥಿತರಿದ್ದರು ಮುಖ್ಯೋಪಾಧ್ಯಾ ಯಿನಿ ಶಹನ ಎಂ.ಫೆಹಲವಿ ಸ್ವಾಗತಿಸಿದರು. ಶಿಕ್ಷಕಿ ಸಾಧನ ಶೆಟ್ಟಿ ಫಲಾನುಭವಿಗಳ ಹೆಸರನ್ನು ವಾಚಿಸಿದರು. ಸದಾಶಿವ ಎಂ. ನಿರೂಪಿಸಿದರು. ಸಹ ಮುಖ್ಯಶಿಕ್ಷಕಿ ಸೆಲ್ವಿನ್ ಸಲ್ವಾನ ವಂದಿಸಿದರು.

ಪ್ರಾದೇಶಿಕ ವಾರ್ತೆಗಳು

ಪಟ್ಲ ಫೌಂಡೇಶನ್ ಟ್ರಸ್ಟ್ ದಶಮ ಸಂಭ್ರಮ : 10 ಕೋಟಿ ದೇಣಿಗೆ ಸಂಗ್ರಹದ ಗುರಿ: ಪಟ್ಲ ಸತೀಶ್ ಶೆಟ್ಟಿ

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ದಶಮ ಸಂಭ್ರಮದ ಹಿನ್ನಲೆಯಲ್ಲಿ ಈ ಬಾರಿ ದಾನಿಗಳಿಂದ, ಕಲಾ ಪೋಷಕರಿಂದ ಕನಿಷ್ಠ 10 ಕೋಟಿ ದೇಣಿಗೆಯನ್ನು ಸಂಗ್ರಹಿಸಿಡಲು ತೀರ್ಮಾನಿಸಿದೆ. ಬಳಿಕ ಇದೇ ಹಣದಿಂದ ಕಲಾವಿದರಿಗೆ ನೆರವು ನೀಡಲಾಗುವುದು ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ತಿಳಿಸಿದರು.ಜೂನ್ 1 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ ಪಟ್ಲ ದಶಮ ಸಂಭ್ರಮ ಕಾರ್ಯಕ್ರಮದ ಕುರಿತು ಬಲ್ಲಾಲ್ ಬಾಗ್ ಪತ್ತುಮುಡಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಟ್ಲ ದಶಮ ಸಂಭ್ರಮದ ಹಿನ್ನಲೆಯಲ್ಲಿ ಎಲ್ಲಾ ಘಟಕಗಳಿಗೆ ಜವಾಬ್ದಾರಿಯನ್ನು ಹಂಚಿ ಕೊಡಲಾಗುವುದು. ಕಳೆದ 10 ವರ್ಷಗಳಲ್ಲಿ ಪಟ್ಲ ಫೌಂಡೇಶನ್ ಟ್ರಸ್ಟ್ 15 ಕೋಟಿ ರೂಪಾಯಿ ಮೊತ್ತದ ಸೇವಾ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಪ್ರತೀ ವರ್ಷ ಹಣ ಸಂಗ್ರಹಿಸುವುದನ್ನು ಬಿಟ್ಟು 10 ಕೋಟಿ ರೂಪಾಯಿ ಹಣವನ್ನು ಸಂಗ್ರಹಿಸುವ ಗುರಿ ಹೊಂದಿದೆ. ಎಲ್ಲಾ ಘಟಕಗಳು ಕನಿಷ್ಠ ಹತ್ತು ಮಂದಿ ಟ್ರಸ್ಟಿಗಳನ್ನು ಮಾಡಿ ಫೌಂಡೇಶನ್ ಟ್ರಸ್ಟ್ ಗೆ ನೆರವಾಗಿ ಎಂದು ಪಟ್ಲ ಸತೀಶ್ ಶೆಟ್ಟಿ ವಿನಂತಿಸಿದರು. ಎಲ್ಲಾ ಘಟಕಗಳು ಸಕ್ರೀಯವಾಗಿ ತೊಡಗಿಕೊಂಡಿದೆ. ಇನ್ನೂ ಕೆಲವು ಪ್ರದೇಶಗಳಲ್ಲಿ ಘಟಕಗಳ ರಚನೆಯಾಗ ಬೇಕಿದೆ. ಜೂನ್ 1 ರಂದು ಅಡ್ಯಾರ್ ನಲ್ಲಿ ನಡೆಯುವ ಪಟ್ಲ ದಶಮ ಸಂಭ್ರಮಕ್ಕೆ ಎಲ್ಲರ ಸಹಕಾರ ಬೇಕು ಎಂದರು. ಕೇಂದ್ರೀಯ ಘಟಕದ ಪ್ರಧಾನ ಕಾರ್ಯದರ್ಶಿ ಪುರುಪೋತ್ತಮ ಭಂಡಾರಿ ಅಡ್ಯಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.ಸಮಾರಂಭದಲ್ಲಿ ಉದ್ಯಮಿ ಸುರೇಶ್ ಭಂಡಾರಿ ಕಡಂದಲೆ, ಸೀತಾರಾಮ ತೋಳ್ಪಾಡಿತ್ತಾಯ, ಭುಜಬಲಿ ಧರ್ಮಸ್ಥಳ, ಜಯರಾಮ ಶೇಖ, ಕೋಶಾಧಿಕಾರಿ ಸಿಎ ಸುದೇಶ್ ಕುಮಾರ್ ರೈ, ಸಂಘಟನಾ ಕಾರ್ಯದರ್ಶಿ ಬಾಳ ಜಗನ್ನಾಥ ಶೆಟ್ಟಿ, ಪ್ರದೀಪ್ ಆಳ್ವ ಕದ್ರಿ, ಜೊತೆ ಕಾರ್ಯದರ್ಶಿ ರವಿಚಂದ್ರ ಶೆಟ್ಟಿ ಅಶೋಕನಗರ ಉಪಸ್ಥಿತರಿದ್ದರು. ಪ್ರಭಾಕರ ಜೋಷಿ, ಸರಪಾಡಿ ಅಶೋಕ್ ಶೆಟ್ಟಿ, ಸಂತೋಷ್ ಶೆಟ್ಟಿ ಬೊಳಿಯಾರು, ವಿದುಷಿ ಲತಾ ನಾಗರಾಜ್ ಶೆಟ್ಟಿ ಅನಿಸಿಕೆಗಳನ್ನು ಸಭೆಯಲ್ಲಿ ವ್ಯಕ್ತಪಡಿಸಿದರು. ಎಲ್ಲಾ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. ಪುರುಷೋತ್ತಮ ಭಂಡಾರಿ ಅಡ್ಯಾರ್ ಸ್ವಾಗತಿಸಿ ಕಾರ್ಯಕ್ರಮ‌ ನಿರೂಪಿಸಿದರು. ಪ್ರದೀಪ್ ಆಳ್ವ ಕದ್ರಿ ವಂದಿಸಿದರು.

ಪ್ರಾದೇಶಿಕ ವಾರ್ತೆಗಳು

ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಿರಿಪರ್ಬ- 2025’. ನಾಡು – ನುಡಿ ಸೇವೆಯಲ್ಲಿ ಆಳ್ವಾಸ್ ಪಾತ್ರ ಹಿರಿದು: ಗುರ್ಮೆ ಸುರೇಶ್ ಶೆಟ್ಟಿ

ಮೂಡಬಿದ್ರಿ: ‘ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ನಡೆಯುವ ನುಡಿಸಿರಿ ವಿರಾಸತ್ ಗಳಲ್ಲದೆ ಇತರ ಹಲವಾರು ರಾಜ್ಯ – ರಾಷ್ಟ್ರ ಮಟ್ಟದ ಕಾರ್ಯಕ್ರಮಗಳು ಕರಾವಳಿ ಕರ್ನಾಟಕದ ಶಿಕ್ಷಣ, ಸಾಹಿತ್ಯ ಮತ್ತು ಸಂಸ್ಕೃತಿಗಳ ಶ್ರೀಮಂತಿಕೆಯನ್ನು ಜಗದಗಲ ಪಸರಿಸಿದೆ. ನಾಡು – ನುಡಿಯ ಸೇವೆಯಲ್ಲಿ ಆಳ್ವಾಸ್ ಸಮೂಹ ಸಂಸ್ಥೆಗಳ ಪಾತ್ರ ಹಿರಿದು. ಅದು ಇತರ ಹಲವಾರು ಸಂಘ ಸಂಸ್ಥೆಗಳಿಗೆ ಮಾದರಿಯಾಗಿದೆ’ ಎಂದು ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದ್ದಾರೆ.ಮಿಜಾರಿನ ಆಳ್ವಾಸ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ ಸಂಸ್ಥೆಯ ತುಳು ಸಂಘದ ಆಶ್ರಯದಲ್ಲಿ ಜರಗಿದ ‘ಸಿರಿಪರ್ಬ – 2025’ ತುಳು ಸಾಂಸ್ಕೃತಿಕ ಉತ್ಸವದಲ್ಲಿ ಪ್ರಧಾನ ಅತಿಥಿಗಳಾಗಿ ಭಾಗವಹಿಸಿದ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಡಳಿತಾತ್ಮಕ ಟ್ರಸ್ಟಿ ವಿವೇಕ್ ಆಳ್ವ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ತುಳು ತಲೆಯೆತ್ತಿ ನಿಲ್ಲಲಿ:‘ ಶಿಕ್ಷಣ ಸಂಸ್ಥೆಗಳಲ್ಲಿ ತುಳು ಮಾತನಾಡಲು ತೀವ್ರ ವಿರೋಧವಿದ್ದ ಕಾಲವಿತ್ತು; ಆದರೆ ಈಗ ಅದು ಬದಲಾಗಿದೆ. ಪ್ರಾಥಮಿಕ ಹಂತದಿಂದ ಕಾಲೇಜಿನವರೆಗೆ ತುಳುವನ್ನೊಂದು ಪಠ್ಯವಾಗಿ ಸರಕಾರ ಅನುಮೋದಿಸಿದೆ. ಶಿಕ್ಷಣ ಸಂಸ್ಥೆಗಳಲ್ಲಿ ತುಳು ಚಟುವಟಿಕೆಗಳಿಗೆ ವೇದಿಕೆಗಳು ಸಿದ್ಧವಾಗಿವೆ. ತುಳುವೇತರರೂ ತುಳು ಭಾಷೆ ಕಲಿತು ಅವುಗಳಲ್ಲಿ ಭಾಗವಹಿಸುವಂತಾಗಬೇಕು. ಎಲ್ಲಾ ಕಡೆ ತೌಳವ ಸಂಸ್ಕೃತಿಯನ್ನು ಪಸರಿಸುವ ಮೂಲಕ ತುಳು ತಲೆಯೆತ್ತಿ ನಿಲ್ಲಬೇಕು’ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ, ಸಾಹಿತಿ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದರು. ಸಿರಿಪರ್ಬದ ಅಂಗವಾಗಿ ಏರ್ಪಡಿಸಲಾಗಿದ್ದ ‘ತುಳು ಸಾಂಸ್ಕೃತಿಕ ವೈಭವ’ ಅಂತರ್ಕಾಲೇಜು ಸ್ಪರ್ಧೆಗೆ ವಿಧ್ಯುಕ್ತ ಚಾಲನೆ ನೀಡಿ ಅವರು ಮಾತನಾಡಿದರು. ಈ ಬಾರಿಯ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಿದ ಸಂಸ್ಥೆಯ ವಿದ್ಯಾರ್ಥಿಗಳಾದ ಹಾರ್ದಿಕ್ ಎಚ್.ಶೆಟ್ಟಿ, ಜೆವಿತಾ ಪೆರ್ಲ್ ಕ್ರಾಸ್ಟಾ, ಪ್ರಶಸ್ತಿ ಎಂ.ಎಸ್. ಅವರನ್ನು ಸಭೆಯಲ್ಲಿ ಸನ್ಮಾನಿಸಲಾಯಿತು. ತುಳು ಚಲನಚಿತ್ರ ನಟ ಮತ್ತು ನಿರ್ದೇಶಕ ಅನೀಶ್ ಪೂಜಾರಿ ವೇಣೂರು, ಆಳ್ವಾಸ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ ಪ್ರಾಂಶುಪಾಲ ಡಾ.ಪೀಟರ್ ಫೆರ್ನಾಂಡಿಸ್, ಆಳ್ವಾಸ್ ಪದವಿ ಕಾಲೇಜು ಕನ್ನಡ ಪ್ರಾಧ್ಯಾಪಕ ಡಾ.ಯೋಗೀಶ್ ಕೈರೋಡಿ, ಶಿಕ್ಷಕ – ಕಲಾವಿದ ಬಾಲಕೃಷ್ಣ ರೇಖ್ಯ ಮುಖ್ಯ ಅತಿಥಿಗಳಾಗಿದ್ದರು. ಉಪನ್ಯಾಸಕ ಹೇಮಂತ್ ಸುವರ್ಣ ಕಾರ್ಯಕ್ರಮವನ್ನು ಸಂಯೋಜಿಸಿದ್ದರು. ಆಕರ್ಷಕ ಶೋಭಾಯಾತ್ರೆ – ವಸ್ತು ಪ್ರದರ್ಶನ:ಸಮಾರಂಭದಲ್ಲಿ ತುಳುನಾಡಿನ ಜಾನಪದ ಸಂಸ್ಕೃತಿಗೆ ಪೂರಕವಾದ ಯಕ್ಷಗಾನ, ಚೆಂಡೆ ವಾದನ, ಕಂಬಳದ ಕೋಣಗಳು, ಕುಣಿತ ಭಜನೆ, ದಫ್ ಕುಣಿತಗಳನ್ನೊಳಗೊಂಡ ವರ್ಣರಂಜಿತ ಶೋಭಾಯಾತ್ರೆ ನಡೆಯಿತು. ಅಲ್ಲದೆ ತುಳು ಬದುಕಿನ ಭೌತಿಕ ಸಂಸ್ಕೃತಿಯನ್ನು ಪ್ರತಿನಿಧಿಸುವ ವಿವಿಧ ಪಾರಂಪರಿಕ ವಸ್ತುಗಳು, ದಿನಬಳಕೆಯ ಸಾಮಾನು, ಕೃಷಿ ಉಪಕರಣಗಳು, ಆಭರಣ, ಹಸ್ತ ಕಲಾಕೃತಿ, ಶಿಲ್ಪ ವೈವಿಧ್ಯ ,ಭೂತಕೋಲ, ನಾಗಾರಾಧನೆ, ಸಂಗೀತ ವಾದ್ಯ, ಯಂತ್ರೋಪಕರಣಗಳು ಸೇರಿದಂತೆ ವೈವಿಧ್ಯಮಯ ವಸ್ತು ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.ಸ್ಪರ್ಧಾ ವಿಜೇತರು:ದಿನವಿಡೀ ನಡೆದ ಸ್ಪರ್ಧೆಯಲ್ಲಿ ಜಿ.ಎಫ್.ಜಿ.ಸಿ. ವಾಮದಪದವು, ಮಹಾವೀರ ಕಾಲೇಜು ಮೂಡಬಿದಿರೆ, ಎಸ್‌.ಡಿ.ಎಂ. ಪಿಜಿ ಸೆಂಟರ್, ಆಳ್ವಾಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜು, ಶ್ರೀ ಧವಳ ಕಾಲೇಜು, ಆಳ್ವಾಸ್ ಪದವಿ ಕಾಲೇಜು ಮುಂತಾದ ತಂಡಗಳು ಭಾಗವಹಿಸಿದ್ದವು. ಪ್ರತೀ ತಂಡವೂ ತುಳುನಾಡಿನ ಪುರಾತನ ಆಚರಣೆಗಳು, ಜಾನಪದ ಚರಿತ್ರೆ, ಆರಾಧನಾ ಪರಂಪರೆ, ಹಾಡು – ಕುಣಿತಗಳನ್ನೊಳಗೊಂಡ ತುಳುನಾಡಿನ ಶ್ರೀಮಂತ ಸಂಸ್ಕೃತಿಯನ್ನು ಕಲಾತ್ಮಕವಾಗಿ ರೂಪಿಸಿ ಪ್ರಸ್ತುತಪಡಿಸಿದವು. ಅಂತಿಮ ಹಂತದಲ್ಲಿ ವಿಜೇತರಾದ ಶ್ರೀ ಧವಳ ಕಾಲೇಜು ಮೂಡಬಿದಿರೆ (ಪ್ರಥಮ ), ಆಳ್ವಾಸ್ ಪದವಿ ಕಾಲೇಜು (ದ್ವಿತೀಯ) ಇವರಿಗೆ ಸ್ಮರಣಿಕೆಯೊಂದಿಗೆ ನಗದು ಬಹುಮಾನಗಳನ್ನು ವಿತರಿಸಲಾಯಿತು.ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಮತ್ತು ಬಾಲಕೃಷ್ಣ ರೇಖ್ಯ ತೀರ್ಪುಗಾರರಾಗಿ ಸಹಕರಿಸಿದರು. ವಿದ್ಯಾರ್ಥಿ ನಾಯಕ ದೀಕ್ಷಿತ್ ಡಿ. ಶೆಟ್ಟಿ ಸ್ವಾಗತಿಸಿ, ನಿರೀಕ್ಷಾ ರೈ ವಂದಿಸಿದರು. ರಿಶಾಂಕ್ ತೋಡಾರ್ ಮತ್ತು ಅಜೇಯ್ ಕಾರ್ಯಕ್ರಮ ನಿರೂಪಿಸಿದರು.

Scroll to Top