ಅಭಿವೃದ್ಧಿಯ ಮುಂಚೂಣಿಯಲ್ಲಿ ಎಸ್ ಸಿಡಿಸಿಸಿ ಬ್ಯಾಂಕ್. 110.40 ಕೋಟಿ ರೂಪಾಯಿ ಲಾಭ. 2025-26ನೇ ಸಾಲಿಗೆ 19,250 ಕೋಟಿ ರೂಪಾಯಿ ವ್ಯವಹಾರದ ಗುರಿ – ಡಾ. ಎಂ. ಎನ್ .ರಾಜೇಂದ್ರ ಕುಮಾರ್.
ಮಂಗಳೂರು: ಬ್ಯಾಂಕಿಂಗ್ ಸೇವೆಯಲ್ಲಿ ದೇಶಕ್ಕೆ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್) ಅಭಿವೃದ್ಧಿಯ ಮುಂಚೂಣಿಯಲ್ಲಿದೆ. ಸಹಕಾರಿ ರಂಗದಲ್ಲಿ ವಿಶಿಷ್ಟ ಹಾಗೂ ವಿನೂತನ ಬ್ಯಾಂಕಿಂಗ್ ಸೇವೆಯನ್ನು ನಗರ ಹಾಗೂ ಗ್ರಾಮೀಣ ಪ್ರದೇಶದ ಜನರಿಗೆ ತನ್ನ 113 ಶಾಖೆಗಳ ಮೂಲಕ ನೀಡುತ್ತಿರುವ ಎಸ್‌ಸಿಡಿಸಿಸಿ ಬ್ಯಾಂಕ್ ಜನಸಾಮಾನ್ಯರ ಬ್ಯಾಂಕ್ ಆಗಿ ಗುರುತಿಸಿಕೊಂಡಿದೆ. ಸಾರ್ವಕಾಲಿಕ ದಾಖಲೆಯ ರೂ 110.40 ಕೋಟಿ ಲಾಭ:111 ವರ್ಷಗಳ ಸಾರ್ಥಕ ಸೇವೆಯನ್ನು ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ನೀಡುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವರದಿ ವರ್ಷದಲ್ಲಿ ಅಮೋಘ ಸಾಧನೆಗೈದು, ದಿನಾಂಕ 31-03-2025ಕ್ಕೆ ಅಂತ್ಯವಾದ ಆರ್ಥಿಕ ವರ್ಷದಲ್ಲಿ ಬ್ಯಾಂಕ್ ರೂ. 110.40 ಕೋಟಿ ಲಾಭ ಗಳಿಸಿದೆ. ಇದು ಕಳೆದ ವರ್ಷದ ಲಾಭ (ರೂ. 79.09 ಕೋಟಿ) ಕ್ಕಿಂತ ಶೇಕಡಾ 39.59 ಏರಿಕೆಯಾಗಿದೆ. ಇದು ಎಸ್‌ಸಿಡಿಸಿಸಿ ಬ್ಯಾಂಕ್‌ನ ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆಯಾಗಿದೆ ಹಾಗೂ ಬ್ಯಾಂಕಿನ ಅನುತ್ಪಾದಕ ಆಸ್ತಿಯ ಪ್ರಮಾಣವು 3.52 ಶೇಕಡಾದಿಂದ 2.71 ಶೇಕಡಾಕ್ಕೆ ಇಳಿಕೆಯಾಗಿರುವುದು ಒಂದು ಗಮನಾರ್ಹ ಸಾಧನೆಯಾಗಿದೆ. ಇದು ಬ್ಯಾಂಕಿನ ಪ್ರಗತಿಯನ್ನು ಸೂಚಿಸುತ್ತದೆ. ಆಧುನಿಕ ಬ್ಯಾಂಕಿಂಗ್ ಸೌಲಭ್ಯಗಳೊಂದಿಗೆ ಕಾರ್ಯನಿರ್ವಹಿಸುತ್ತಿರುವ ಎಸ್‌ಸಿಡಿಸಿಸಿ ಬ್ಯಾಂಕ್ ಗ್ರಾಹಕರನ್ನು ಹೆಚ್ಚು ಆಕರ್ಷಿಸುತ್ತಿದೆ. ವರದಿ ವರ್ಷದಲ್ಲಿ ರೂ. 17366.68 ಕೋಟಿ ರೂಪಾಯಿಗಳ ಒಟ್ಟು ವ್ಯವಹಾರ ದಾಖಲಿಸಿ ಹೊಸ ಇತಿಹಾಸ ನಿರ್ಮಿಸಿದೆ. ಕಳೆದ ಸಾಲಿನ ಒಟ್ಟು ವ್ಯವಹಾರ (ರೂ.15544.34)ಕ್ಕಿಂತ ಈ ಬಾರಿ ಶೇ. 11.72 ಏರಿಕೆಯನ್ನು ಕಂಡಿದೆ. 2025-26ನೇ ಸಾಲಿಗೆ ರೂ.19250.00 ಕೋಟಿ ವ್ಯವಹಾರದ ಗುರಿಯನ್ನು ಬ್ಯಾಂಕ್ ಹೊಂದಿದೆಂದು ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್ .ರಾಜೇಂದ್ರ ಕುಮಾರ್ ಅವರು ಕೊಡಿಯಾಲುಬೈಲ್ ನಲ್ಲಿರುವ ಬ್ಯಾಂಕಿನ ಕೇಂದ್ರ ಕಚೇರಿಯಲ್ಲಿ ಸುದ್ಧಿಗೋಷ್ಠಿ ಕರೆದು ಬ್ಯಾಂಕಿನ ಸಮಗ್ರ ಅಭಿವೃದ್ಧಿ ಬಗ್ಗೆ ಸವಿವರ ಮಾಹಿತಿ ನೀಡಿದ್ದಾರೆ.ರೂ. 7882.76 ಕೋಟಿ ಠೇವಣಿ:ಠೇವಣಿಗಳ ಸಂಗ್ರಹಣೆಯಲ್ಲಿ ಎಲ್ಲಾ ಬ್ಯಾಂಕ್‌ಗಳಲ್ಲೂ ಸ್ಪರ್ಧೆ ಇದೆ. ಕೇಂದ್ರ ಹಾಗೂ ರಾಜ್ಯ ಸರಕಾರದ ಯಾವುದೇ ಠೇವಣಾತಿ ಇಲ್ಲದೆಯೂ ಎಸ್‌ಸಿಡಿಸಿಸಿ ಬ್ಯಾಂಕ್ ತನ್ನ 113 ಶಾಖೆಗಳ ಮುಖಾಂತರ ಒಟ್ಟು ರೂ. 7882.76 ಕೋಟಿ ರೂಪಾಯಿ ಠೇವಣಿ ಸಂಗ್ರಹಿಸಿ ಸಾಧನೆಗೈದಿದೆ. ಈ ಮೂಲಕ ಠೇವಣಿ ಸಂಗ್ರಹಣೆಯಲ್ಲಿ ರಾಜ್ಯದ ಇತರ ಜೀವಾ ಕೇಂದ್ರ ಸಹಕಾರಿ ಬ್ಯಾಂಕ್‌ಗಳಲ್ಲಿ ಮುಂಚೂಣಿಯಲ್ಲಿದೆ. ಕಳೆದ ಸಾಲಿನ ಠೇವಣಿ ಸಂಗ್ರಹಣೆಗಿಂತ ಈ ಬಾರಿ ಶೇ.9.11 ಏರಿಕೆಯಾಗಿದೆ.ಸರಕಾರದ ಅಧಿಸೂಚನೆಯಂತೆ ಕೃಷಿಯೇತರ ಸಹಕಾರ ಸಂಘಗಳ ಕ್ಷೇಮನಿಧಿಯನ್ನು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಲ್ಲಿ ಹೂಡಿಕೆ ಮಾಡುವ ಕುರಿತು ಕ್ರಮ ಕೈಗೊಳ್ಳಲಾಗಿದೆ. ಮಾತ್ರವಲ್ಲ, ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳ ಠೇವಣಿಗಳನ್ನು ಕೂಡಾ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಲ್ಲಿ ಹೂಡಿಕೆ ಮಾಡುವಂತೆ ವಿಜ್ಞಾಪಿಸಲಾಗಿದೆ.ರೂ.7775.44 ಕೋಟಿ ಮುಂಗಡ ಸ್ಪರ್ಧಾತ್ಮಕ ವ್ಯವಹಾರದಲ್ಲಿ ಬ್ಯಾಂಕ್ ರೂ.7775.44 ಕೋಟಿ ಮುಂಗಡ ನೀಡಿದೆ. ಕೃಷಿ ಹಾಗೂ ಕೃಷಿ ಅಭಿವೃದ್ಧಿಗೆ ಅಲ್ಪಾವಧಿ ಸಾಲವಾಗಿ ರೂ.2130.95 ಕೋಟಿ ರೂಪಾಯಿ, ಮಧ್ಯಮಾವಧಿ ಸಾಲ ರೂ.169.79 ಕೋಟಿ ರೂಪಾಯಿ, ಹೀಗೆ ಕೃಷಿ ಕ್ಷೇತ್ರಕ್ಕೆ ಒಟ್ಟು ರೂ.2300.74 ಕೋಟಿ ರೂಪಾಯಿ ಸಾಲ ನೀಡಲಾಗಿದ್ದು. ಕೃಷಿಯೇತರ ಕ್ಷೇತ್ರಕ್ಕೆ ರೂ. 5474.70 ಕೋಟಿ ಸಾಲ ನೀಡಲಾಗಿದೆ. ಕೃಷಿ ಹಾಗೂ ಕೃಷಿಯೇತರ ಸಾಲಗಳ ಹೊರಬಾಕಿ ರೂ.9483.92 ಕೋಟಿಯಾಗಿರುತ್ತದೆ.ಸತತ 30 ವರ್ಷಗಳಿಂದ ಕೃಷಿ ಸಾಲ ಮರುಪಾವತಿಯಲ್ಲಿ ಶೇಕಡಾ 100ರ ಸಾಧನೆಬ್ಯಾಂಕ್ ವರದಿ ವರ್ಷದಲ್ಲಿ ನೀಡಿದ ಎಲ್ಲಾ ಕೃಷಿ ಸಾಲಗಳು ಶೇಕಡಾ 100ರ ಮರುಪಾವತಿಯನ್ನು ಕಂಡು ದಾಖಲೆ ನಿರ್ಮಿಸಿ ಸಾಧನೆಗೈದಿದೆ. ಇಂತಹ ಸಾಧನೆಯನ್ನು ಕಳೆದ 30 ವರ್ಷಗಳಿಂದ ಬ್ಯಾಂಕ್ ಸತತವಾಗಿ ಮಾಡಿರುವುದು ರಾಷ್ಟ್ರೀಯ ದಾಖಲೆಯಾಗಿದೆ. ಬ್ಯಾಂಕಿನ ಆರ್ಥಿಕ ತಖ್ತೆ:ಬ್ಯಾಂಕ್‌ಗೆ ಒಟ್ಟು 1086 ಸಂಘಗಳು ಸದಸ್ಯರಾಗಿವೆ. ಇವುಗಳ ಪಾಲು ಬಂಡವಾಳ ರೂ.476.00 ಕೋಟಿ ಆಗಿರುತ್ತದೆ. ದುಡಿಯುವ ಬಂಡವಾಳ ರೂ. 12873.14 ಕೋಟಿ ಆಗಿದ್ದು. ಇದು ಕಳೆದ ವರ್ಷಕ್ಕಿಂತ (ರೂ.11418.68 ಕೋಟಿ) ಶೇಕಡ 12.74 ರಷ್ಟು ಏರಿಕೆ ಕಂಡಿದೆ. ಬ್ಯಾಂಕ್ ರೂ.270.15 ಕೋಟಿ ವಿವಿಧ ನಿಧಿಗಳನ್ನು ಹೊಂದಿರುತ್ತದೆ. ಶೇಕಡ 8.02 ರಷ್ಟು ಏರಿಕೆ ಕಂಡಿದೆ.“ರುಪೇ” (RuPay) ಕಿಸಾನ್ ಕ್ರೆಡಿಟ್ ಕಾರ್ಡ್:ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಮಂಗಳ ಕಿಸಾನ್ ಕ್ರೆಡಿಟ್ ಕಾರ್ಡ್ ಖಾತೆಯನ್ನು ಹೊಂದಿರುವ ರೈತರಿಗೆ ಬ್ಯಾಂಕ್ ರುಪೇ (RuPay) ಕಿಸಾನ್ ಕಾರ್ಡ್ ನ್ನು ನೀಡಿದೆ. ಈಗಾಗಲೇ 1,41,266 ರುಪೇ ಕಿಸಾನ್ ಕಾರ್ಡ್ ಗಳನ್ನು ರೈತರಿಗೆ ವಿತರಿಸಲಾಗಿದೆ 86,887 ರುಪೇ ಡೆಬಿಟ್ ಕಾರ್ಡ್ ಗಳನ್ನು ಬ್ಯಾಂಕ್ ಇತರ ಗ್ರಾಹಕರಿಗೆ ನೀಡಲಾಗಿದೆ.ಮುಂದಿನ ಯೋಜನೆಗಳು:









