ಪ್ರಾದೇಶಿಕ ವಾರ್ತೆಗಳು

ಪ್ರಾದೇಶಿಕ ವಾರ್ತೆಗಳು

ಕಾರ್ಯನಿರತ ಪತ್ರಕರ್ತರ ಸಂಘದ ಎಲ್ಲಾ ಸದಸ್ಯರಿಗೆ ತಲಾ 5ಲಕ್ಷ ರುಪಾಯಿ ಆರೋಗ್ಯ ವಿಮೆ ನೀಡುವಂತೆ ಒತ್ತಾಯ.

ಮಂಗಳೂರು – ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ಮಾನ್ಯತೆ ಪಡೆದ ಪತ್ರಕರ್ತರಿಗೆ ಮಾತ್ರ 5 ಲಕ್ಷ ರುಪಾಯಿ ಆರೋಗ್ಯ ವಿಮೆ ಘೋಷಿದ್ದು,ಇದನ್ನು ಎಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಸಿಗುವಂತೆ ಮಾಡಬೇಕೆಂದು ಅಶೋಕ್ ಶೆಟ್ಟಿ ಬಿ.ಯನ್ ಅವರು ಕಾರ್ಯನಿರತ ಪತ್ರಕರ್ತರ ಸಂಘದ ಮಾಸಿಕ ಸಭೆಯಲ್ಲಿ ಪ್ರಸ್ತಾಪಿಸಿದರು. ಅದರಂತೆ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆಯವರು ಮಾರ್ಚ್ 25ರಂದು ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಈ ಬಗ್ಗೆ ಆರೋಗ್ಯ ವಿಮೆಯನ್ನು ಎಲ್ಲಾ ಪತ್ರಕರ್ತರಿಗೆ ಅನ್ವಯಿಸುವಂತೆ ಜಾರಿಗೊಳಿಸಬೇಕೆಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮೂಲಕ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ. ವಿ.ಪ್ರಭಾಕರ್ ಅವರಿಗೆ ಒತ್ತಾಯಿಸಿದರು. ಕೆ.ವಿ.ಪ್ರಭಾಕರ್ ಅವರನ್ನು ಭೇಟಿಯಾಗಿ ಅಶೋಕ್ ಶೆಟ್ಟಿ ಬಿ. ಎನ್.ಅವರು ಕೂಡಾ ಈ ಬಗ್ಗೆ ಗಮನ ಸೆಳೆದರು. ಈ ಬಗ್ಗೆ ಪರಿಶೀಲಿಸುವುದಾಗಿ ಕೆ. ವಿ.ಪ್ರಭಾಕರ್ ಹೇಳಿದರು

ಪ್ರಾದೇಶಿಕ ವಾರ್ತೆಗಳು

ವಿಕಸಿತ ಭಾರತ್ ಯೂತ್ ಪಾರ್ಲಿಮೆಂಟ್ ಸಮಾರೋಪ.ರಚನಾತ್ಮಕ ಕಾರ್ಯಗಳಿಗೆ ಯುವಶಕ್ತಿ ಬಳಕೆ: ರಾಜ್ಯಶಾಸ್ತ್ರ ಉಪನ್ಯಾಸಕ ಪ್ರೊ.ದಯಾನಂದ ನಾಯಕ್ ಆಶಯ

ಮಂಗಳೂರು : ಪ್ರಜಾಪ್ರಭುತ್ವದಲ್ಲಿ ವಿದ್ಯಾರ್ಥಿ ಶಕ್ತಿಯ ಪಾತ್ರ ಮಹತ್ವದ್ದು. ರಾಷ್ಟ್ರ ನಿರ್ಮಾಣ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಿರಬೇಕು. ಯುವಶಕ್ತಿ ರಚನಾತ್ಮಕ ಕಾರ್ಯಗಳಿಗೆ ಬಳಕೆಯಾದರೆ ದೇಶದ ಪ್ರಗತಿ ಸಾಧ್ಯ ಎಂದು ಮಂಗಳೂರು ವಿ.ವಿ.ಯ ರಾಜ್ಯಶಾಸ್ತ್ರ ಉಪನ್ಯಾಸಕ ಪ್ರೊ.ದಯಾನಂದ ನಾಯಕ್ ಹೇಳಿದರು.ಕೇಂದ್ರದ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವಕೇಂದ್ರ ಸಂಘಟನ್, ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿ.ವಿ. ಹಾಗೂ ಸೈಂಟ್ ಆಗ್ನೆಸ್ ಕಾಲೇಜು ವತಿಯಿಂದ ಆಗ್ನೆಸ್ ಕಾಲೇಜಿನಲ್ಲಿ ನಡೆದ ಎರಡು ದಿನಗಳ ವಿಕಸಿತ ಭಾರತ್ ಯೂತ್ ಪಾರ್ಲಿಮೆಂಟ್‌ನ ಸಮಾರೋಪ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು.ಸೈಂಟ್ ಆಗ್ನೆಸ್ ಕಾಲೇಜಿನ ಪ್ರಾಂಶುಪಾಲೆ ಡಾ.ಎಂ.ವೆನಿಸ್ಸಾ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ವಿ.ವಿ.ಯ ಎನ್‌ಎಸ್‌ಎಸ್ ಸಂಯೋಜಕ ಡಾ.ಶೇಷಪ್ಪ ಅಮೀನ್.ಕೆ. ಯೂತ್ ಪಾರ್ಲಿಮೆಂಟ್ ಸ್ಪರ್ಧೆಯ ವಿಜೇತರ ವಿವರ ನೀಡಿದರು.ನೆಹರು ಯುವ ಕೇಂದ್ರದ ಉಪ ನಿರ್ದೇಶಕ ಲೋಕೇಶ್ ಕುಮಾರ್ , ಸೈಂಟ್ ಆಗ್ನೆಸ್ ಕಾಲೇಜಿನ ಎನ್‌ಎಸ್‌ಎಸ್ ಸಂಯೋಜಕ ಡಾ.ಉದಯಕುಮಾರ್.ಬಿ., ನೆಹರು ಯುವ ಕೇಂದ್ರದ ಆಡಳಿತ ಸಹಾಯಕ ಜಗದೀಶ್. ಕೆ. , ಯೂತ್ ಪಾರ್ಲಿಮೆಂಟ್‌ನ ತೀರ್ಪುಗಾರರಾದ ರೂಪ ಧರ್ಮಯ್ಯ , ಪಿ.ಬಿ.ಹರೀಶ್ ರೈ, ಪುಷ್ಪರಾಜ್.ಬಿ.ಎನ್.ಮತ್ತು ನಿಶಾನ್.ಎನ್. ಉಪಸ್ಥಿತರಿದ್ದರು . ವಿದ್ಯಾರ್ಥಿನಿ ಪ್ರಾಪ್ತಿ ಕಾರ್ಯಕ್ರಮ ನಿರೂಪಿಸಿದರು.ವಿಜೇತರ ವಿವರ :ದ.ಕ., ಉಡುಪಿ ಮತ್ತು ಕೊಡಗು ಜಿಲ್ಲೆಯ ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಯೂತ್ ಪಾರ್ಲಿಮೆಂಟ್‌ನಲ್ಲಿ ಪಾಲ್ಗೊಂಡು ‘ ಏಕ ದೇಶ-ಏಕ ಚುನಾವಣೆ’ ವಿಷಯದ ಬಗ್ಗೆ ಅಭಿಪ್ರಾಯ ಮಂಡಿಸಿದರು. ಅಭಿಜಯ್ .ಎನ್.ಎಸ್. (ಉಡುಪಿ), ಶೌರ್ಯ.ಎಚ್.ಎಸ್., ಸಹನಾ ಪ್ರವೀಣ್ ಭಂಡಾರಿ, ಮರಿಯಮ್ ಫಸ್ನಾತ್ ಫಝ, ಕ್ರಿಸ್ಟನ್ ಜೊಶ್ವಾ ಮಿನೇಜಸ್, ಪ್ರಿವಿ ಡಿಸೋಜಾ (ದ.ಕ.) ಟಿ.ಶರಣ್ಯ(ಉಡುಪಿ), ಚಾರ್ಲಿ ಸರಸ್ವತಿ, ಅವಿನಾಶ್ ಪೌಲ್ ಫೆರ್ನಾಂಡಿಸ್ (ದ.ಕ.), ಮನು ಶೆಟ್ಟಿ (ಉಡುಪಿ) ಇವರು ವಿಜೇತರಾಗಿ ರಾಜ್ಯ ಮಟ್ಟದ ಯೂತ್ ಪಾರ್ಲಿಮೆಂಟ್‌ಗೆ ಆಯ್ಕೆಯಾಗಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ಕರ್ನಾಟಕ ರಾಜ್ಯ ಮಾಧ್ಯಮ ಅಕಾಡೆಮಿ ಆಯೋಜಿಸಿದ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯಲ್ಲಿ ಸತೀಶ್ ಇರಾ ಅವರಿಗೆ ಪ್ರಥಮ ಪ್ರಶಸ್ತಿ. ಹುಬ್ಬಳ್ಳಿಯಲ್ಲಿ ಪ್ರಶಸ್ತಿ ಸ್ವೀಕರಿಸಿದ ಸತೀಶ್ ಇರಾ.

ಕರ್ನಾಟಕ ರಾಜ್ಯ ಮಾಧ್ಯಮ ಅಕಾಡೆಮಿ ಇದೇ ಮೊದಲ ಬಾರಿಗೆ ಆಯೋಜಿಸಿದ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯಲ್ಲಿ ಉದಯವಾಣಿ ಮಂಗಳೂರು ವಿಭಾಗದ ಹಿರಿಯ ಛಾಯಾಗ್ರಾಹಕ ಸತೀಶ್ ಇರಾ ಅವರು ಪ್ರಥಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಹುಬ್ಬಳ್ಳಿಯಲ್ಲಿ ಮಾರ್ಚ್ 23 ರ ಆದಿತ್ಯವಾರ ನಡೆದ ಕಾರ್ಯಕ್ರಮದಲ್ಲಿ ಸಚಿವ ಸಂತೋಷ್ ಲಾಡ್ ಪ್ರಶಸ್ತಿ ಪ್ರದಾನಿಸಿದರು.

ಪ್ರಾದೇಶಿಕ ವಾರ್ತೆಗಳು

ಎಸ್.ಡಿ.ಎಂ.ಕಾನೂನು ಕಾಲೇಜಿನಲ್ಲಿ ‘ಯಕ್ಷೋತ್ಸವ’ ಉದ್ಘಾಟನೆ. ಯಕ್ಷಗಾನ ವಿಶ್ವದ ಸಮೃದ್ಧ ಕಲೆ: ಹೈಕೋರ್ಟ್ ನ್ಯಾಯವಾದಿ ಸುಧಾಕರ ಪೈ ಅಭಿಮತ

ಮಂಗಳೂರು: ‘ತ್ರೇತಾ ಯುಗದ ರಾಮನ ನಡೆಯನ್ನು, ದ್ವಾಪರ ಯುಗದ ಕೃಷ್ಣನ ನುಡಿಯನ್ನು ಕಲಿಯುಗದ ಜನಮಾನಸಕ್ಕೆ ಪ್ರಸ್ತುತ ಪಡಿಸುವ ಶಕ್ತಿಯಿರುವುದು ಯಕ್ಷಗಾನಕ್ಕೆ ಮಾತ್ರ. ಈ ಕಾರಣದಿಂದ ಅದು ವಿಶ್ವದ ಏಕೈಕ ಸಮೃದ್ದ ಕಲೆ’ ಎಂದು ಹೈಕೋರ್ಟ್ ಹಿರಿಯ ವಕೀಲ ಎಂ.ಸುಧಾಕರ ಪೈ ಅಭಿಪ್ರಾಯ ಪಟ್ಟಿದ್ದಾರೆ. ಮಾ.22ರಂದು ನಗರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನಲ್ಲಿ 33ನೇ ವರ್ಷದ ಅಂತರ್ಕಾಲೇಜು ಯಕ್ಷಗಾನ ಸ್ಪರ್ಧೆ ‘ಯಕ್ಷೋತ್ಸವ-2025’ ಉದ್ಘಾಟಿಸಿ, ಅವರು ಮಾತನಾಡಿದರು.‘ಕೇರಳದ ಕಥಕ್ಕಳಿ, ಆಂದ್ರಪ್ರದೇಶದ ಭಾಮಾ ವಿಲಾಸ ಮೊದಲಾದ ಸಮಕಾಲೀನ ಕಲೆಗಳಂತೆ ಕರಾವಳಿಯಲ್ಲಿ ಯಕ್ಷಗಾನ ಮೆರೆಯುತ್ತಾ ಬಂದಿದೆ. ಮೇಳಗಳು ದೇವಾಲಯಗಳ ಹೆಸರಿನಲ್ಲಿ ಹೊರಡುವ ಕಾರಣದಿಂದಾಗಿ ಯಕ್ಷಗಾನಕ್ಕೆ ದೈವಿಕ ನೆಲೆ ಇದೆ. ಶುದ್ಧ ಕನ್ನಡ ಭಾಷೆಯನ್ನು ಕಲಿಸುವ ಜತೆಗೆ ಸಂಸ್ಕೃತಿ, ಸಂಸ್ಕಾರ ಮೈಗೂಡಿಸಿಕೊಳ್ಳಲು ಅದು ಪೂರಕವಾಗಿದೆ’ ಎಂದವರು ಹೇಳಿದರು. ಅಗಲಿದ ಕಲಾವಿದರ ಸ್ಮರಣೆ:ಯಕ್ಷಗಾನ ಅಕಾಡೆಮಿ ಮಾಜಿ ಸದಸ್ಯ, ಸಾಹಿತಿ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಅವರು ಕಳೆದ ಒಂದು ವರ್ಷ ಅವಧಿಯಲ್ಲಿ ಅಗಲಿದ ಯಕ್ಷಗಾನ ಕಲಾವಿದರನ್ನು ಸ್ಮರಿಸಿದರು. 2024 ಎಪ್ರಿಲ್ ತಿಂಗಳಿಂದೀಚೆಗೆ ನಿಧನರಾದ ಬಡಗು ತಿಟ್ಟಿನ ಸುಬ್ರಹ್ಮಣ್ಯ ಧಾರೇಶ್ವರ, ಬಾಳೆಗದ್ದೆ ಕೃಷ್ಣ ಹೆಗಡೆ, ತೆಂಕಿನ ಲೀಲಾವತಿ ಬೈಪಡಿತ್ತಾಯ, ಗಂಗಾಧರ ಜೋಗಿ ಪುತ್ತೂರು, ಕುಂಬ್ಳೆ ಶ್ರೀಧರ ರಾವ್, ಬಂಟ್ವಾಳ ಜಯರಾಮ ಆಚಾರ್ಯ, ಕೆ.ವಿ. ಗಣಪಯ್ಯ, ಬರೆ ಕೇಶವ ಭಟ್, ರಘುನಾಥ ರೈ ನುಳಿಯಾಲು, ಪಕಳಕುಂಜ ಶ್ಯಾಮ ಭಟ್, ರಾಮಣ್ಣ ಕಲ್ಮಡ್ಕ, ಪ್ರದೀಪ ರೈ ಬೆಟ್ಟಂಪಾಡಿ, ಗೋಪಾಲಕೃಷ್ಣ ಕುರುಪ್, ಕಲಾಪೋಷಕಿ ಕೀಲಾರು ವಿಜಯಲಕ್ಷ್ಮೀ ಅಮ್ಮ ಮೊದಲಾದ 14ಕ್ಕೂ ಅಧಿಕ ಮಂದಿ ಸಾಧಕರ ಜೀವನ – ಸಾಧನೆಗಳನ್ನು ಪರಿಚಯಿಸಿ ಅವರು ನುಡಿ ನಮನ ಸಲ್ಲಿಸಿದರು.ಮಂಗಳೂರಿನ ಹಿರಿಯ ವಕೀಲರಾದ ಪಿ. ಸಂತೋಷ ಐತಾಳ ಹಾಗೂ ದಯಾನಂದ ರೈ ಮುಖ್ಯ ಅತಿಥಿಗಳಾಗಿದ್ದರು. ಯಕ್ಷಗಾನ ತರಬೇತಿ ಕೇಂದ್ರ ಸ್ಥಾಪನೆಗೆ ಚಿಂತನೆ:ಸಮಾರಂಭದ ಅಧ್ಯಕ್ಷತೆ ವಹಿಸಿದ ಕಾನೂನು ಕಾಲೇಜು ಪ್ರಾಂಶುಪಾಲ ಡಾ.ತಾರಾನಾಥ ಮಾತನಾಡಿ, ‘ಎಸ್‌ಡಿಎಂ ಕಾನೂನು ಹಾಗೂ ಉದ್ಯಮಾಡಳಿತ ಕಾಲೇಜಿನ ಕಟ್ಟಡ ವಿಸ್ತರಣೆಯಾಗುತ್ತಿದ್ದು, ನಾಗರಿಕ ಸೇವೆ ತರಬೇತಿ ಹಾಗೂ ಯಕ್ಷಗಾನ ತರಬೇತಿ ಕೇಂದ್ರ ಆರಂಭಿಸಲು ಚಿಂತನೆ ನಡೆಸಲಾಗಿದೆ. ಈ ಬಗ್ಗೆ ಆಡಳಿತ ಮಂಡಳಿಗೆ ಮನವಿ ಮಾಡಲಾಗಿದೆ’ ಎಂದು ಹೇಳಿದರು.’35 ನೇ ವರ್ಷದ ಯಕ್ಷೋತ್ಸವದಲ್ಲಿ ಇಲ್ಲಿನ ಯಕ್ಷೋತ್ಸವದಲ್ಲಿ ಪಾತ್ರ ವಹಿಸಿ ಪ್ರಸ್ತುತ ದೇಶದ ವಿವಿಧೆಡೆ ಕಾರ್ಯನಿರ್ವಹಿಸುತ್ತಿರುವ ಸಾಧಕರನ್ನು ಕರೆಸಿ ಅವರಿಂದಲೇ ಯಕ್ಷಗಾನ ಪ್ರದರ್ಶನ ಮಾಡಿಸುವ ಯೋಜನೆ ಇದೆ. ಯಕ್ಷೋತ್ಸವ ಸಂಘಟನೆ ಸುಲಭವಲ್ಲ. ಇದರ ಹಿಂದೆ ಬಹಳಷ್ಟು ಶ್ರಮವಿದೆ. ಆದರೂ ವರ್ಷದಿಂದ ವರ್ಷಕ್ಕೆ ಉತ್ತಮ ರೀತಿಯಲ್ಲಿ ನಡೆಯುತ್ತಾ ಬರುತ್ತಿದೆ’ ಎಂದವರು ನುಡಿದರು. ಯಕ್ಷೋತ್ಸವ ವಿಧ್ಯಾರ್ಥಿ ಸಂಚಾಲಕ ಶಿವತೇಜ ಐತಾಳ್ ಉಪಸ್ಥಿತರಿದ್ದರು.ಯಕ್ಷೋತ್ಸವ ಸಂಚಾಲಕ ಪ್ರೊ. ಪುಷ್ಪರಾಜ್ ಕೆ. ಸ್ವಾಗತಿಸಿದರು. ಸಂಚಾಲಕಿ ಡಾ.ಶುಭಲಕ್ಷ್ಮೀ ಪಿ. ವಂದಿಸಿದರು. ಶ್ರೀಲಕ್ಷ್ಮೀ ಮಠದಮೂಲೆ ಕಾರ್ಯಕ್ರಮ ನಿರೂಪಿಸಿದರು. ಎರಡು ದಿನಗಳ ಕಾಲ ನಡೆಯುವ ಯಕ್ಷೋತ್ಸವದಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಿಂದ ಒಟ್ಟು 10 ಕಾಲೇಜುಗಳು ಭಾಗವಹಿಸಿದ್ದು, ಒಟ್ಟಾಗಿ 8 ಪ್ರಸಂಗಗಳು ಪ್ರದರ್ಶನಗೊಂಡಿವೆ.

ಪ್ರಾದೇಶಿಕ ವಾರ್ತೆಗಳು

ಗೋಕರ್ಣನಾಥೇಶ್ವರ ಕಾಲೇಜಿನಲ್ಲಿ ತುಳುಕೂಟ ಉದ್ಘಾಟನೆ. ಉತ್ಸಾಹೀ ಯುವಕರಿಂದ ತುಳು ಸಂಸ್ಕೃತಿ ಬೆಳೆಯಲಿ: ಭಾಸ್ಕರ ರೈ ಕುಕ್ಕುವಳ್ಳಿ

ಮಂಗಳೂರು: ‘ನಮ್ಮ ಕಣ್ಣಿಂದ ಮರೆಯಾಗುತ್ತಿರುವ ತುಳು ಪರಿಸರ, ಜನಪದ ಸಂಸ್ಕೃತಿ, ಇತಿಹಾಸದ ಕುರುಹುಗಳು, ಆಚಾರ ವಿಚಾರ, ಕಟ್ಟು – ಕಟ್ಟಳೆಗಳು ಉಳಿಯಬೇಕಾದರೆ ಯುವಜನರು ಅದರಲ್ಲಿ ಆಸಕ್ತಿ ತೋರಬೇಕು. ಶಾಲಾ ಕಾಲೇಜುಗಳಲ್ಲಿ ತುಳು ಕಾರ್ಯಕ್ರಮಗಳಿಗೆ ಹೆಚ್ಚಿನ ಅವಕಾಶ ಸಿಕ್ಕಿದಾಗ ಅದು ಸಾಧ್ಯ. ತುಳುವನ್ನು ತಲೆಮಾರಿಗೆ ತಲುಪಿಸುವಲ್ಲಿ ಉತ್ಸಾಹೀ ಯುವಕ ಯುವತಿಯರು ಶ್ರಮಿಸಬೇಕಾಗಿದೆ’ ಎಂದು ತುಳು – ಕನ್ನಡ ಸಾಹಿತಿ, ಕರ್ನಾಟಕ ಯಕ್ಷಗಾನ ಮತ್ತು ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದ್ದಾರೆ. ನಗರದ ಗಾಂಧಿನಗರ ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನಲ್ಲಿ ನೂತನವಾಗಿ ಆರಂಭವಾದ ‘ಸಿರಿ ಚಾವಡಿ’ ತುಳುಕೂಟವನ್ನು ತೆಂಗಿನ ಕೊಂಬು ಅರಳಿಸುವ ಮೂಲಕ ಸಾಂಪ್ರದಾಯಿಕವಾಗಿ ಉದ್ಘಾಟಿಸಿ ಬಳಿಕ ಅವರು ಮಾತನಾಡಿದರು. ‘ತುಳು ಸಮೃದ್ಧವಾದ ಭಾಷೆ. ಅಗಾಧವಾದ ಜನಪದ ಸಾಹಿತ್ಯ, ಮೌಖಿಕ ಕಾವ್ಯ, ಸಂಧಿ – ಪಾಡ್ದನ, ಗಾದೆ – ಒಗಟುಗಳ ಕಣಜವಾಗಿರುವ ತುಳು ಭಾಷೆಯಲ್ಲಿ ಇತ್ತೀಚೆಗೆ ಸಾಕಷ್ಟು ಕೃತಿಗಳು ಹಾಗೂ ಸಂಶೋಧನಾತ್ಮಕ ಗ್ರಂಥಗಳು ಪ್ರಕಟವಾಗಿವೆ. ದೈವಾರಾಧನೆ, ನಾಗಾರಾಧನೆ ಮತ್ತು ಯಕ್ಷಾರಾಧನೆಗಳ ಮೂಲಕ ತೌಳವ ಸಂಸ್ಕೃತಿಯನ್ನು ಜಗತ್ತಿನಾದ್ಯಂತ ಇರುವ ತುಳುವರು ಲೋಕ ಮುಖಕ್ಕೆ ಪರಿಚಯಿಸಿದ್ದಾರೆ’ ಎಂದವರು ನುಡಿದರು.ತುಳು ಬದುಕು ಸಮೃದ್ಧ:ಕಾರ್ಯಕ್ರಮದಲ್ಲಿ ‘ಗೇನದ ಮದಿಪು’ ಉಪನ್ಯಾಸ ನೀಡಿದ ಜಾನಪದ ತಜ್ಞ ಕೆ.ಕೆ.ಪೇಜಾವರ ಮಾತನಾಡಿ, ‘ಬೇಸಾಯ ಮತ್ತು ದೈವಾರಾಧನೆ ತುಳು ಬದುಕಿನ ಪ್ರಧಾನ ಅಂಗಗಳು. ಇದರೊಂದಿಗೆ ಹಾಸುಹೊಕ್ಕಾಗಿರುವ ಸಂಧಿ – ಪಾಡ್ದನಗಳು ನಮ್ಮ ಮಣ್ಣಿನ ಸತ್ವವನ್ನು ಸಾರಿ ಹೇಳುತ್ತವೆ’ ಎಂದು ನುಡಿದರು.ಹಿರಿಯ ಜಾನಪದ ಕಲಾವಿದೆ ಲೀಲಾವತಿ ಕುಪ್ಪೆಪದವು ಅವರು ತುಳುನಾಡಿನ ಉಗಮದ ಸಂಧಿ ಹಾಗೂ ಓಬೇಲೇ ಪಾಡ್ದನವನ್ನು ಹಾಡಿ ರಂಜಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಸಂಚಾಲಕ ವಸಂತ್ ಕಾರಂದೂರು ವಹಿಸಿದ್ದರು. ಸಾಧಕರಿಗೆ ಸನ್ಮಾನ :ಸಭೆಯಲ್ಲಿ ಹಿರಿಯ ಸಾಧಕರಾದ ಪಾಡ್ದನ ಕಲಾವಿದೆ ಲೀಲಾವತಿ ಮತ್ತು ಪ್ರಸಿದ್ಧ ನಾಟಿ ವೈದ್ಯ ಡಾ.ಮುರಳಿ ಕುಮಾರ್ ಚಿಲಿಂಬಿ ಅವರನ್ನು ‘ಸಿರಿ ಚಾವಡಿ’ ವತಿಯಿಂದ ಸನ್ಮಾನಿಸಲಾಯಿತು. ಓಟದ ಕೋಣಗಳ ಮಾಲಿಕ ಕೊಂಡಾಣ ಗುತ್ತಿನ ನಾಗೇಶ್ ರೈ ಮತ್ತು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಜಯಶ್ರೀ ಅವರನ್ನು ಗೌರವಿಸಲಾಯಿತು. ಗ್ರಂಥ ಪಾಲಕಿ ದಿವ್ಯಾ ಎ. ಮತ್ತು ಎಂ.ಕಾಂ. ಉಪನ್ಯಾಸಕ ಲೆಫ್ಟಿನೆಂಟ್ ಪ್ರವೀಣ್ ಸನ್ಮಾನ ಪತ್ರ ವಾಚಿಸಿದರು. ಶ್ರೀ ವೆಂಕಟೇಶ ಶಿವಭಕ್ತಿ ಯೋಗ ಸಂಘದ ಉಪಾಧ್ಯಕ್ಷರಾದ ಶೇಖರ ಪೂಜಾರಿ, ಡಾ‌.ಬಿ.ಜಿ. ಸುವರ್ಣ, ಕಾಲೇಜು ಆಡಳಿತ ಮಂಡಳಿ ಸದಸ್ಯ ರಂಜನ್ ದಾಸ್, ವಿಜಯ್, ಜಯರಾಮ ಕಾರಂದೂರು, ಆಡಳಿತಾಧಿಕಾರಿ ನಾಗೇಶ್ ಕರ್ಕೇರ, ನಿವೃತ್ತ ಪ್ರಾಧ್ಯಾಪಕ ಡಾ.ಉಮ್ಮಪ್ಪ ಪೂಜಾರಿ, ಬಿ. ಎಡ್. ಕಾಲೇಜು ಪ್ರಾಂಶುಪಾಲ ಉದಯಕುಮಾರ್ ಬಿ., ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಘುರಾಜ್ ಕದ್ರಿ, ಎಂ.ಕಾಂ. ವಿಭಾಗದ ಸಂಯೋಜಕಿ ಸುಜಾತ, ಐಕ್ಯೂ ಎಸಿ ಸಂಯೋಜಕ ಯತೀನ್, ವಿದ್ಯಾರ್ಥಿ ಪ್ರತಿನಿಧಿಗಳಾದ ನವ್ಯ ಶ್ರೀ , ಸುಮಿತ್ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕಿ ಡಾ. ನಿಶಾ ಯುವರಾಜ್ ಮತ್ತು ಡಾ. ಮಂಜುಳಾ ಮಲ್ಯ ಅವರು ಬರೆದ ನೂತನ ಅರ್ಥಶಾಸ್ತ್ರ ಕೃತಿಯನ್ನು ಗಣ್ಯರು ಬಿಡುಗಡೆಗೊಳಿಸಿದರು‌.‘ಸಿರಿ ಚಾವಡಿ’ ತುಳುಕೂಟದ ಸಂಯೋಜಕ ವಸಂತ್ ಸ್ವಾಗತಿಸಿದರು. ಪದವಿ ಕಾಲೇಜು ಪ್ರಾಂಶುಪಾಲ ಡಾ.ಜಯಪ್ರಕಾಶ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಡಾ‌ ನಿಶಾ ಯುವರಾಜ್ ಮತ್ತು ಮಿಥುನ್ ಚಂದ್ರ ಆರ್. ಕೆ. ನಿರೂಪಿಸಿದರು‌; ಬಾಲಚಂದ್ರ ವಂದಿಸಿದರು.ತುಳುವರ ಪ್ರಾಚೀನ ವಸ್ತುಗಳ ಪ್ರದರ್ಶನ, ಕಂಬಳದ ಕೋಣಗಳು ಹಾಗೂ ತುಳು ಬದುಕಿನ ವೈವಿಧ್ಯಮಯ ಅಲಂಕಾರಗಳನ್ನೊಳಗೊಂಡ ಸಭಾಂಗಣ ಮತ್ತು ವೇದಿಕೆ, ಜಾನಪದ ಹಾಡು – ಕುಣಿತ ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿತ್ತು. ಕಾಲೇಜಿನ ಹಿರಿಯ ಉಪನ್ಯಾಸಕರು, ಹಳೆ ವಿದ್ಯಾರ್ಥಿಗಳು ಮತ್ತು ಎಲ್ಲಾ ವಿಭಾಗದ ವಿದ್ಯಾರ್ಥಿಗಳು ಸಾಂಪ್ರದಾಯಿಕ ವಸ್ತ್ರ ಧರಿಸಿ ಸಂಭ್ರಮದಿಂದ ಪಾಲ್ಗೊಂಡಿದ್ದರು.

ಪ್ರಾದೇಶಿಕ ವಾರ್ತೆಗಳು

Rohan Corporation to Launch its New Residential Project ‘Rohan Nest’ at Babugudda, Attawar on March 24, 2025

Mangalore, March 22, 2025 – Rohan Corporation, a leading real estate developer in coastal Karnataka, is set to launch its latest residential project, Rohan Nest, with a groundbreaking ceremony on March 24, 2025, at 4:00 PM. The event will take place at the project site Attawar-Babugudda, Mangalore.Rohan Nest is a well planned residential development that promises to redefine urban living in Mangalore. The project features 58 thoughtfully designed 2 BHK apartments, spread across three floors, with each unit optimized for spatial efficiency and aesthetic appeal. The apartments, ranging from 695 to 715 square feet, are designed to cater to the needs of modern urban families, offering a perfect blend of comfort and functionality. The project boasts a range of premium amenities, including automatic passenger elevators, power backup, vitrified tile flooring, and surveillance cameras for enhanced security. Additionally, the development incorporates rainwater harvesting system and eco-friendly construction practices, aligning with Rohan Corporation’s commitment to sustainable living.Rohan Nest’s location in Attavar-Babugudda offers residents easy access to some of Mangalore’s most esteemed educational institutions, healthcare facilities, and recreational centers. The project is strategically positioned near landmarks such as KMC Hospital Attavar, Mangalore Central Railway Station, and D-Mart, making it an ideal choice for families and professionals alike.Rohan Corporation’s LegacyWith a legacy spanning over three decades, Rohan Corporation has established itself as a trusted name in the real estate sector. The company has successfully delivered numbers of projects across coastal Karnataka, consistently setting new benchmarks in quality and design. Rohan Nest is yet another testament to the company’s dedication to creating luxurious yet affordable living spaces that cater to the evolving needs of urban dwellers.For bookings and inquiries, please contact the Rohan Corporation sales office at +91 98454 90100 / Email: info@rohancorporation.in / Website: www.rohancorporation.in or visit their sales office at Rohan City, Bejai Main Road, Mangalore 575 004.

ಪ್ರಾದೇಶಿಕ ವಾರ್ತೆಗಳು

ವಿಕಸಿತ ಭಾರತ್ ಯೂತ್ ಪಾರ್ಲಿಮೆಂಟ್

ಮಂಗಳೂರು : ಕೇಂದ್ರದ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವಕೇಂದ್ರ ಸಂಘಟನ್, ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿ.ವಿ. ಹಾಗೂ ಸೈಂಟ್ ಆಗ್ನೆಸ್ ಕಾಲೇಜು ವತಿಯಿಂದ ಎರಡು ದಿನಗಳ ವಿಕಸಿತ ಭಾರತ್ ಯೂತ್ ಪಾರ್ಲಿಮೆಂಟ್ ಶನಿವಾರ ನಗರದ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ಆರಂಭಗೊಂಡಿತು.ಕಾರ್ಯಕ್ರಮ ಉದ್ಘಾಟಿಸಿದ ಸೈಂಟ್ ಆಗ್ನೆಸ್ ಕಾಲೇಜಿನ ಪ್ರಾಂಶುಪಾಲೆ ಡಾ.ಎಂ.ವೆನಿಸ್ಸಾ ಮಾತನಾಡಿ ‘ ವಿದ್ಯಾರ್ಥಿಗಳು ದೇಶದ ಮುಂದಿನ ರೂವಾರಿಗಳು. ನಾಡಿನ ಸಮಗ್ರತೆ ಹಾಗೂ ಪರಂಪರೆಯನ್ನು ರಕ್ಷಿಸುವ ಮಹತ್ವದ ಜವಾಬ್ದಾರಿ ಯುವ ಜನತೆಯ ಮೇಲಿದೆ..ಬಡತನ ನಿರ್ಮೂಲನೆ, ಮಹಿಳಾ ಸಬಲೀಕರಣದ ಮೂಲಕ ದೇಶದ ಭವಿಷ್ಯವನ್ನು ಉಜ್ವಲಗೊಳಿಸುವುದು ನಮ್ಮ ಗುರಿಯಾಗಬೇಕು ಎಂದರು.ನೆಹರು ಯುವ ಕೇಂದ್ರದ ಉಪ ನಿರ್ದೇಶಕ ಲೋಕೇಶ್ ಕುಮಾರ್ ಅವರು ಯೂತ್ ಪಾರ್ಲಿಮೆಂಟ್ ಸ್ಪರ್ಧೆಯ ವಿವರ ನೀಡಿದರು.ಮಂಗಳೂರು ವಿ.ವಿ.ಯ ರಾಜ್ಯ ಶಾಸ್ತ್ರ ಉಪನ್ಯಾಸಕ ಪ್ರೊ.ದಯಾನಂದ ನಾಯಕ್, ರಾಷ್ಟ್ರೀಯ ಸೇವಾ ಯೋಜನೆಯ ಡಾ.ಶೇಷಪ್ಪ ಅಮೀನ್.ಕೆ., ಸೈಂಟ್ ಆಗ್ನೆಸ್ ಕಾಲೇಜಿನ ಎನ್‌ಎಸ್‌ಎಸ್ ಸಂಯೋಜಕ ಡಾ.ಉದಯಕುಮಾರ್.ಬಿ., ನೆಹರು ಯುವ ಕೇಂದ್ರದ ಆಡಳಿತ ಸಹಾಯಕ ಜಗದೀಶ್. ಕೆ. ಉಪಸ್ಥಿತರಿದ್ದರು . ವಿದ್ಯಾರ್ಥಿನಿ ಧನ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು.ಯೂತ್ ಪಾರ್ಲಿಮೆಂಟ್‌ನ ತೀರ್ಪುಗಾರರಾಗಿ ಪ್ರೊ.ದಯಾನಂದ ನಾಯಕ್, ಹಿರಿಯ ಪತ್ರಕರ್ತರಾದ ಪಿ.ಬಿ.ಹರೀಶ್ ರೈ,ಪುಷ್ಪರಾಜ್.ಬಿ.ಎನ್, ವಕೀಲ ನಿಶಾನ್.ಎನ್. ಮತ್ತು ರೂಪ ಧರ್ಮಯ್ಯ ಭಾಗವಹಿಸಿದ್ದರು. ದ.ಕ., ಉಡುಪಿ ಮತ್ತು ಕೊಡಗು ಜಿಲ್ಲೆಯ ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಯೂತ್ ಪಾರ್ಲಿಮೆಂಟ್‌ನಲ್ಲಿ ಪಾಲ್ಗೊಂಡು ‘ ಏಕ ದೇಶ-ಏಕ ಚುನಾವಣೆ’ ವಿಷಯದ ಬಗ್ಗೆ ಅಭಿಪ್ರಾಯ ಮಂಡಿಸಿದರು.

ಪ್ರಾದೇಶಿಕ ವಾರ್ತೆಗಳು

ರೋಹನ್ ಕಾರ್ಪೊರೇಷನ್’ನ ಹೊಸ ರೆಸಿಡೆನ್ಶಿಯಲ್ ಪ್ರಾಜೆಕ್ಟ್ ‘ರೋಹನ್ ನೆಸ್ಟ್’ನ ಭೂಮಿಪೂಜೆ

ಮಂಗಳೂರು, ಮಾರ್ಚ್ 22, 2025 : ಕರಾವಳಿ ಕರ್ನಾಟಕದ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಡೆವಲಪರ್ ರೋಹನ್ ಕಾರ್ಪೊರೇಷನ್, ತನ್ನ ಹೊಸ ರೆಸಿಡೆನ್ಶಿಯಲ್ ಪ್ರಾಜೆಕ್ಟ್ ‘ರೋಹನ್ ನೆಸ್ಟ್’ ಇದರ ಭೂಮಿಪೂಜೆಯು ಮಾರ್ಚ್ 24, 2025, ಸಂಜೆ 4:00 ಗಂಟೆಗೆ ಮಂಗಳೂರಿನ ಅತ್ತಾವರ-ಬಾಬುಗುಡ್ಡ ಪ್ರದೇಶದಲ್ಲಿ ನಡೆಯಲಿದೆ. ರೋಹನ್ ನೆಸ್ಟ್:ರೋಹನ್ ನೆಸ್ಟ್ ಮಂಗಳೂರಿನ ನಗರ ಜೀವನವನ್ನು ಪುನರ್ವ್ಯಾಖ್ಯಾನಿಸುವ ಉದ್ದೇಶದಿಂದ ಯೋಜನಾಬದ್ಧವಾಗಿ ರೂಪಿಸಲಾದ ಒಂದು ವಾಸಯೋಗ್ಯ ನಿವೇಶನವಾಗಿದೆ. ಈ ಪ್ರಾಜೆಕ್ಟ್ 58 ಉತ್ತಮವಾಗಿ ವಿನ್ಯಾಸಗೊಳಿಸಲಾದ 2 ಬಿ.ಎಚ್.ಕೆ. ಅಪಾರ್ಟ್’ಮೆಂಟ್’ಗಳನ್ನು ಒಳಗೊಂಡಿದೆ, ಇದು ಮೂರು ಮಹಡಿಗಳಲ್ಲಿ ಹರಡಿಕೊಂಡಿದ್ದು, ಪ್ರತಿ ಘಟಕವು ಸ್ಥಳಾವಕಾಶ ಮತ್ತು ಸೊಗಸನ್ನು ಹೊಂದಿದೆ. 695 ರಿಂದ 715 ಚದರ ಅಡಿ ವಿಸ್ತೀರ್ಣದ ಈ ಅಪಾರ್ಟ್’ಮೆಂಟ್’ಗಳು ಆಧುನಿಕ ನಗರ ಕುಟುಂಬಗಳ ಅವಶ್ಯಕತೆಗಳನ್ನು ಪೂರೈಸಲು ವಿನ್ಯಾಸಗೊಳಿಸಲಾಗಿದೆ, ಇದು ಸೌಕರ್ಯ, ಶೈಲಿ ಮತ್ತು ಕಾರ್ಯಕ್ಷಮತೆಯ ಮಿಶ್ರಣವನ್ನು ಹೊಂದಿದೆ.ಸ್ವಯಂಚಾಲಿತ ಲಿಫ್ಟ್’ಗಳು, ಪವರ್ ಬ್ಯಾಕಪ್, ವಿಟ್ರಿಫೈಡ್ ಟೈಲ್ ಫ್ಲೋರಿಂಗ್, ಮತ್ತು ಸುರಕ್ಷತೆಗಾಗಿ ಸರ್ವಿಲೆನ್ಸ್ ಕ್ಯಾಮೆರಾಗಳು ಸೇರಿದಂತೆ ಹಲವು ಸೌಲಭ್ಯಗಳನ್ನು ಹೊಂದಿದೆ. ಹೆಚ್ಚುವರಿಯಾಗಿ, ಮಳೆನೀರಿನ ಸಂಗ್ರಹಣಾ ವ್ಯವಸ್ಥೆ ಮತ್ತು ಪರಿಸರ ಸ್ನೇಹಿ ನಿರ್ಮಾಣ ಪದ್ಧತಿಗಳನ್ನು ಒಳಗೊಂಡಿದೆ.ಅತ್ತಾವರ-ಬಾಬುಗುಡ್ಡದಲ್ಲಿರುವ ರೋಹನ್ ನೆಸ್ಟ್‌, ಮಂಗಳೂರಿನ ಹಲವು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಆರೋಗ್ಯ ಸೌಲಭ್ಯಗಳು ಮತ್ತು ಮನರಂಜನಾ ಕೇಂದ್ರಗಳಿಗೆ ಸನಿಹದಲ್ಲಿದೆ. ಕೆ.ಎಮ್.ಸಿ. ಆಸ್ಪತ್ರೆ ಅತ್ತಾವರ, ಮಂಗಳೂರು ಸೆಂಟ್ರಲ್ ರೈಲ್ವೆ ಸ್ಟೇಷನ್ ಮತ್ತು ಡಿ-ಮಾರ್ಟ್’ನಂತಹ ಪ್ರಮುಖ ಸ್ಥಳಗಳು ಹತ್ತಿರದಲ್ಲಿವೆ.ರೋಹನ್ ಕಾರ್ಪೊರೇಷನ್‌:ಮೂರು ದಶಕಗಳಿಗೂ ಹೆಚ್ಚು ಕಾಲದ ಪರಂಪರೆಯನ್ನು ಹೊಂದಿರುವ ರೋಹನ್ ಕಾರ್ಪೊರೇಷನ್ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ವಿಶ್ವಾಸಾರ್ಹ ಹೆಸರನ್ನು ಗಳಿಸಿದೆ. ಕಂಪನಿಯು ಕರಾವಳಿ ಕರ್ನಾಟಕದಾದ್ಯಂತ ಹತ್ತು-ಹಲವು ಪ್ರಾಜೆಕ್ಟ್’ಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಇದು ಗುಣಮಟ್ಟ ಮತ್ತು ವಿನ್ಯಾಸಗಳಲ್ಲಿ ಹೊಸ ಮಾನದಂಡಗಳನ್ನು ಸ್ಥಾಪಿಸಿದೆ.ಹೆಚ್ಚಿನ ಮಾಹಿತಿ ಅಥವಾ ಬುಕಿಂಗ್‌ಗಾಗಿ, ರೋಹನ್ ಕಾರ್ಪೊರೇಷನ್ ದೂರವಾಣಿ ಸಂಖ್ಯೆ: +91 98454 90100 ಅಥವಾ ಈಮೇಲ್: info@rohancorporation.in / ಜಾಲತಾಣ: www.rohancorporation.in ಅಥವಾ ರೋಹನ್ ಕಾರ್ಪೋರೇಶನ್, ಮುಖ್ಯ ರಸ್ತೆ, ರೋಹನ್ ಸಿಟಿ, ಬಿಜೈ, ಮಂಗಳೂರು 575004 ಆಫೀಸನ್ನು ಸಂಪರ್ಕಿಸಬಹುದಾಗಿದೆ.

ಪ್ರಾದೇಶಿಕ ವಾರ್ತೆಗಳು

ವಿಶ್ವ ಬಂಟ ಪ್ರತಿಷ್ಠಾನದಿಂದ ವಿದ್ಯಾರ್ಥಿ ವೇತನ ವಿತರಣೆ

ಮಂಗಳೂರು : ವಿಶ್ವ ಬಂಟ ಪ್ರತಿಷ್ಠಾನದಿಂದ 2024-25ನೇ ಸಾಲಿನ ವಿದ್ಯಾರ್ಥಿ ವೇತನ ಹಾಗೂ ಬಡ್ಡಿ ರಹಿತ ಶೈಕ್ಷಣಿಕ ಸಾಲ ವಿತರಣಾ ಸಮಾರಂಭ ನಗರದ ಮೋತಿಮಹಲ್ ಹೋಟೆಲ್ ಸಭಾಂಗಣದಲ್ಲಿ ನಡೆಯಿತು. ಒಟ್ಟು 165 ವಿದ್ಯಾರ್ಥಿಗಳಿಗೆ 36.70 ಲಕ್ಷ ರೂ.ವಿದ್ಯಾರ್ಥಿ ವೇತನ ಹಾಗೂ ಬಡ್ಡಿ ರಹಿತ ಶೈಕ್ಷಣಿಕ ಸಾಲ ನೀಡಲಾಯಿತು. ವಿದ್ಯಾರ್ಥಿ ದತ್ತಿ ನಿಧಿಯಿಂದ ಪ್ರಸಕ್ತ ಸಾಲಿನಲ್ಲಿ 9 ವಿದ್ಯಾರ್ಥಿಗಳಿಗೆ 1.75 ಲಕ್ಷ ರೂ.ನೀಡಲಾಯಿತು. ಪ್ರತಿಷ್ಠಾನದ ಅಧ್ಯಕ್ಷ ಡಾ.ಎ.ಜೆ.ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.ಪ್ರಧಾನ ಕಾರ್ಯದರ್ಶಿ ಸುಧೀರ್ ಕುಮಾರ್ ಶೆಟ್ಟಿ, ಖಜಾಂಜಿ ಸಿಎ ಸುದೇಶ್ ಕುಮಾರ್ ರೈ.ಬಿ., ಯೋಜನಾ ನಿರ್ದೇಶಕ ಡಾ.ಸಂಜೀವ .ಬಿ.ರೈ, ಜೈರಾಜ್.ಬಿ.ರೈ, ರಾಮಕೃಷ್ಣ ಮಾಣಾ , ಬೂಡಿಯಾರ್ ರಾಧಾಕೃಷ್ಣ ರೈ, ಚಂದ್ರಶೇಖರ ಭಂಡಾರಿ, ಡಾ.ಪ್ರಶಾಂತ್ ಕುಮಾರ್ ರೈ, ಬಲರಾಜ್ ರೈ, ಜ್ಯೋತಿ ಆಳ್ವ, ಶಂಕರಿ ರೈ, ವರಲಕ್ಷ್ಮಿ ಮಲ್ಲಿ ಉಪಸ್ಥಿತರಿದ್ದರು.ವಿಶ್ವ ಬಂಟ ಪ್ರತಿಷ್ಠಾನ ಕಳೆದ 28 ವರ್ಷಗಳಲ್ಲಿ 6,000ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಿ ಅವರ ವಿದ್ಯಾಭ್ಯಾಸ ಮುಂದುವರಿಸಲು ಸಹಕರಿಸಿದೆ. ವಿದ್ಯಾರ್ಥಿ ವೇತನದ ಜತೆಗೆ ಬಡವರಿಗೆ ವೈದ್ಯಕೀಯ ನೆರವು ನೀಡುತ್ತಿದ್ದು, ಒಟ್ಟು 5 ಲಕ್ಷ ರೂ.ಹಣವನ್ನು 21 ಮಂದಿಗೆ ಒದಗಿಸಲಾಗಿದೆ. ಪ್ರತಿಷ್ಠಾನವು ಪ್ರತಿ ವರ್ಷ ಓರ್ವ ಯಕ್ಷಗಾನ ಕಲಾವಿದನನ್ನು ಸನ್ಮಾನಿಸಿ 25,000 ರೂ. ನಗದು ಹಾಗೂ ಉತ್ತಮ ಕ್ರೀಡಾಳುಗಳನ್ನು ಗುರುತಿಸಿ ಗೌರವ ಧನ ನೀಡುತ್ತಾ ಬಂದಿದೆ ಎಂದು ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಸುಧೀರ್ ಕುಮಾರ್ ಶೆಟ್ಟಿಈ ಸಂದರ್ಭ ತಿಳಿಸಿದರು.

ಪ್ರಾದೇಶಿಕ ವಾರ್ತೆಗಳು

ನಕಲಿ ಐಡಿ, ಮೀಡಿಯಾ ಸ್ಟಿಕ್ಕರ್‌ ದುರ್ಬಳಕೆ ತಡೆಗೆ ಕ್ರಮ: ಪೊಲೀಸ್‌ ಕಮಿಷನರ್‌

ಮಂಗಳೂರು: ಪತ್ರಕರ್ತರ ನಕಲಿ ಐಡಿ ಕಾರ್ಡ್‌ ದುರ್ಬಳಕೆ ಮಾಡುವ ಹಾಗೂ ಮೀಡಿಯಾ ನಕಲಿ ಸ್ಟಿಕ್ಕರ್‌ ಅಳವಡಿಸಿಕೊಂಡಿರುವ ವಾಹನಗಳನ್ನು ಪತ್ತೆ ಹಚ್ಚುವಂತೆ ಸಂಚಾರಿ ಪೊಲೀಸರಿಗೆ ಪೊಲೀಸ್‌ ಕಮಿಷನರ್‌ ಅನುಪಮ್‌ ಆಗರ್ವಾಲ್ ಸೂಚಿಸಿದ್ದಾರೆ.ಪತ್ರಕರ್ತರ ನಕಲಿ ಐಡಿ ಕಾರ್ಡ್ ದುರ್ಬಳಕೆ, ಮೀಡಿಯಾ, ಪ್ರೆಸ್ ಸ್ಟಿಕರ್ ದುರ್ಬಳಕೆ ಗೆ ಕಡಿವಾಣ ಹಾಕುವಂತೆ ಹಾಗು ಕರ್ತವ್ಯ ನಿರ್ವಹಿಸುವ ಸಂದರ್ಭ ಪತ್ರಕರ್ತರಿಗೆ ಭದ್ರತೆ ಖಾತ್ರಿ ಪಡಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮನವಿಗೆ ಸ್ಪಂದಿಸಿ ಶೀಘ್ರ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಮಾಧ್ಯಮ ಐಡಿ ಕಾರ್ಡ್ ದುರ್ಬಳಕೆ ಪ್ರಕರಣಗಳು ಕಂಡು ಬರುತ್ತಿವೆ. ಗುರುವಾರ ರಾತ್ರಿ ಕೊಡಿಯಾಲ್ ಬೈಲ್ ಬಳಿ ನಡೆದ ಸರಣಿ ಅಪಘಾತದಲ್ಲಿ ಕಾರು ಒಂದರಲ್ಲಿ ಮಾಧ್ಯಮ ಹೆಸರು ದುರ್ಬಳಕೆ ಮಾಡಿ ಸ್ಥಳದಲ್ಲಿ ನಕಲಿ ಐ ಡಿ ಕಾರ್ಡ್ ಪತ್ತೆ ಯಾಗಿದೆ. ಮಾಧ್ಯಮ ಕಾರ್ಡ್ ಗಳ ದುರ್ಬಳಕೆ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಹಲವಾರು ವಾಹನಗಳಲ್ಲಿ ಮೀಡಿಯಾ ಹಾಗೂ ಪ್ರೆಸ್ ಸ್ಟಿಕರ್ ಬಳಕೆ ಕಂಡು ಬರುತ್ತಿದೆ. ಇಂತಹ ಮಾಧ್ಯಮ ಸ್ಟಿಕರ್ ಬಳಕೆ ಮಾಡಿ ಕಾನೂನು ಬಾಹಿರ ಕೃತ್ಯ ಗಳು ನಡೆಯುವ ಸಾಧ್ಯತೆ ಇದೆ. ಇಂತಹ ವಾಹನಗಳ ತಪಾಸಣೆ ನಡೆಸಬೇಕು. ಪತ್ರಕರ್ತರು ನಿರ್ಭೀತಿಯಿಂದ, ಸುಲಲಿತವಾಗಿ ಕರ್ತವ್ಯ ನಿರ್ವಹಿಸಲು ಭದ್ರತೆ ಖಾತ್ರಿಪಡಿಸಬೇಕು ಎಂದು ಸಂಘ ಮನವಿ ಮಾಡಿತ್ತು.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಪ್ರೆಸ್‌ ಕ್ಲಬ್‌ ಅಧ್ಯಕ್ಷ ಪಿ.ಬಿ. ಹರೀಶ್‌ ರೈ, ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಪ್ರೆಸ್‌ ಕ್ಲಬ್‌ ಉಪಾಧ್ಯಕ್ಷ ಮುಹಮ್ಮದ್‌ ಆರೀಫ್‌ ಪಡುಬಿದ್ರಿ, ಕಾರ್ಯಕಾರಿ ಸಮಿತಿ ಸದಸ್ಯರಾದ ಸುಖಪಾಲ್‌ ಪೊಳಲಿ, ರಾಜೇಶ್‌ ದಡ್ಡಂಗಡಿ, ಸದಸ್ಯರಾದ ಪ್ರಸನ್ನ ಪೂಜಾರಿ, ಶಶಿಕಾಂತ್‌ ಜೆ., ಸಂದೀಪ್‌ ಕುಮಾರ್‌ ಇದ್ದರು.

Scroll to Top