ಪ್ರಾದೇಶಿಕ ವಾರ್ತೆಗಳು

ಪ್ರಾದೇಶಿಕ ವಾರ್ತೆಗಳು

ಫೆ.14ಕ್ಕೆ “ಭುವನಂ ಗಗನಂ” ಸಿನಿಮಾ ರಾಜ್ಯಾದ್ಯಂತ ತೆರೆಗೆ!

ಮಂಗಳೂರು: “ಭುವನಂ ಗಗನಂ ಸಿನಿಮಾದ ಒಬ್ಬ ನಾಯಕ ಪೃಥ್ವಿ ಅಂಬರ್ ಮಂಗಳೂರಿನವರು ಆಗಿರುವ ಕಾರಣ ಮಂಗಳೂರು ಭಾಷೆಯನ್ನು ಸಿನಿಮಾದಲ್ಲಿ ಬಳಸಲಾಗಿದೆ. ನವಿರಾದ ಪ್ರೇಮಕತೆ ಸಿನಿಮಾದ ಜೀವಾಳವಾಗಿದ್ದು ಫೆ.14ರ ಪ್ರೇಮಿಗಳ ದಿನದಂದು ಸಿನಿಮಾ ಬಿಡುಗಡೆಯಾಗಲಿದೆ“ ಎಂದು ಚಿತ್ರ ನಿರ್ದೇಶಕ ಗಿರೀಶ್ ಮೂಲಿಮನೆ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.ನಟ ಪೃಥ್ವಿ ಅಂಬರ್ ಮಾತಾಡಿ, ”ನನಗೆ ತುಳು ಭಾಷೆ, ಮಂಗಳೂರು ಅಂದ್ರೆ ಬಹಳ ಇಷ್ಟ. ಇಲ್ಲಿನ ಪ್ರೇಕ್ಷಕರು ನನ್ನ ಈ ಹಿಂದಿನ ತುಳು, ಕನ್ನಡ ಸಿನಿಮಾಗಳನ್ನು ಮೆಚ್ಚಿಕೊಂಡಿದ್ದಾರೆ. ದಿಯಾ ಸಿನಿಮಾ ಬಳಿಕ ಪ್ರೇಕ್ಷಕರು ಭಾವುಕರಾಗುವ ಸನ್ನಿವೇಶ ಈ ಸಿನಿಮಾದಲ್ಲಿದೆ. 50 ಶೇ. ಮಂಗಳೂರು ಕನ್ನಡ ಸಿನಿಮಾದಲ್ಲಿದೆ. ಇಲ್ಲಿನ ನೇಟಿವಿಟಿ ಸಿನಿಮಾದಲ್ಲಿ ಇರುವ ಕಾರಣ ನಿಮಗೆಲ್ಲ ಖಂಡಿತ ಇಷ್ಟವಾಗುತ್ತದೆ. ಎಲ್ಲರೂ ಸಿನಿಮಾ ನೋಡಿ“ ಎಂದರು. ನಟ ಪ್ರಮೋದ್ ಮಾತಾಡಿ, “ಗೀತಾ ಬ್ಯಾಂಗಲ್ ಸ್ಟೋರ್, ಪ್ರೀಮಿಯರ್ ಪದ್ಮಿನಿಯಂತಹ ಸಿನಿಮಾ ಮಾಡಿದ್ದೇನೆ. ನೀವು ತುಂಬಾ ಬೆಂಬಲ ನೀಡಿದ್ದೀರಿ. ಈ ಬಾರಿ ಒಂದೊಳ್ಳೆ ಪ್ರೇಮಕತೆಯೊಂದಿಗೆ ಬಂದಿದ್ದೇನೆ. ಹೊಸಬರ ಹೊಸ ಪ್ರಯತ್ನವನ್ನು ಗೆಲ್ಲಿಸಿ. ಇದರಿಂದ ಹೊಸ ಪ್ರತಿಭೆಗಳಿಗೆ ಇನ್ನಷ್ಟು ಅವಕಾಶ ಸಿಕ್ಕಂತಾಗುತ್ತದೆ” ಎಂದರು.ನಟಿ ರೇಷಲ್ ಡೇವಿಡ್ ಮಾತಾಡಿ, “ಸಿನಿಮಾದಲ್ಲಿ ಮಂಗಳೂರಿನ ಭಾಷೆ ಇಲ್ಲಿನ ಸಂಸ್ಕೃತಿಯನ್ನು ತೋರಿಸಲಾಗಿದೆ. ಮಂಗಳೂರಿನ ಚಿತ್ರಪ್ರೇಮಿಗಳು ಸಿನಿಮಾ ನೋಡಿ ನಮ್ಮನ್ನು ಆಶೀರ್ವದಿಸಿ” ಎಂದರು.ನಟಿ ಪೊನ್ನು ಅಶ್ವಥಿ ಮಾತಾಡಿ, “ಈ ಸಿನಿಮಾದಲ್ಲಿ ಎಲ್ಲ ಕಲಾವಿದರು ತುಂಬಾ ಚೆನ್ನಾಗಿ ನಟಿಸಿದ್ದಾರೆ. ಸಿನಿಮಾದಲ್ಲಿ ವಿಭಿನ್ನ ಪ್ರೇಮಕತೆಯಿದೆ, ಎಲ್ಲರೂ ಸಿನಿಮಾ ನೋಡಿ” ಎಂದರು.ನಿರ್ಮಾಪಕ ಎಂ.ಮುನೇ ಗೌಡ ಮಾತಾಡಿ, “ಸಿನಿಮಾಕ್ಕೆ ದುಬೈಯಲ್ಲಿ ಒಳ್ಳೆಯ ರೆಸ್ಪಾನ್ಸ್ ಸಿಕ್ಕಿದೆ. ಯಾರಾದರೂ ಸಿನಿಮಾ ನೋಡಿದವರು ಸಿನಿಮಾ ಚೆನ್ನಾಗಿಲ್ಲ ಅಂತಂದ್ರೆ ಸಿನಿಮಾದ ಹಣ ವಾಪಾಸ್ ಕೊಡುತ್ತೇವೆ” ಎಂದರು.ಪತ್ರಿಕಾಗೋಷ್ಟಿಯಲ್ಲಿ ಮಹೇಶ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.ಚಿತ್ರಗಳು – ಸತೀಶ್ ಕಾಪಿಕಾಡ್

ಪ್ರಾದೇಶಿಕ ವಾರ್ತೆಗಳು

Inaugaration of Centenary Year of St Vincent De Paul Society at Bejai Church Hall

St Vincent De Paul Society a Catholic lay service organization which started in Paris France in the year 1833 by Blessed Fredrick Ozanam which helps the needy irrespective of caste creed colour or religion started inMangalore in 1926 at Bendore Milagres Rosario and Bejai commenced its Cenenary year at Bejai church hall .students of Bejai St Xavier School performed the prayer dance .Mr Gerard Rego the Bejai unit President extended warm welcome to the dignotories present.The Chief guest Msgr Rev Fr Maxim Noronha released the Centenary Logo and advised the members to work hard in the service of the needy.Fr Francis D Souza the Spiritual Advisor of Mangalore Central Council released the Cenenary Theme and congratulated the members on their Centenary and wished their mission all the success .Fr J B Saldhana the Parish Priest of Bejai inugarated the Cenenary project Asro (Shelter) by handing over a cheque to Western India Coordinator Mr Walter Martis who was present on behalf of National Council. Mr Gilbert Pinto a senior member was felicitated for his contribution to the movement of service was Felicitated he narrated his 44 Years of experience in the society .Mrs Preetha Lobo the Vice President read the Citation .Mr Joe Coelho the the present Central Council President deliverd the key note address and gave details of Cenenary Projects ie Shikop for education aid for 405 students of adopted families and Asro ie providing shelter for 100 families. Mrs Philomina Menezes the The Centenary Celabration Commitee convenor proposed the vote of thanks .Mr AugustinRodrigues of Bejai unit Compered the programme .Mrs Hilda Rodrigues Mrs Mary D Douza Mrs Ida Pereiera Mr Felix DSilva Mr Rexon Miranda Mr Albert Sequiera were present at the Dias All the presidents and office bearers of 115 conferences were present

ಪ್ರಾದೇಶಿಕ ವಾರ್ತೆಗಳು

*ಗಣೇಶ್ ಕುಲಾಲ್ ಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ. ಸಮಾಜ ಸೇವಕರನ್ನು ಗುರುತಿಸುವುದು ನಮ್ಮ ಕರ್ತವ್ಯ-ಮಾಜಿ ಸಚಿವ ಕೃಷ್ಣ. ಜೆ.ಪಾಲೆಮಾರ್

ಮಂಗಳೂರು: ನಿಸ್ವಾರ್ಥ ಮನೋಭಾವದಿಂದ ಸಮಾಜದ ಒಳಿತಿಗಾಗಿ ಕೆಲಸ ಮಾಡುವವರನ್ನು ಗುರುತಿಸಿ ಗೌರವಿಸುವುದು ನಮ್ಮ ಕರ್ತವ್ಯ ಎಂದು ಮಾಜಿ ಸಚಿವ ಕೃಷ್ಣ. ಜೆ.ಪಾಲೆಮಾರ್ ಹೇಳಿದರು.ಭಾನುವಾರ ನಗರದ ಪಾಲೆಮಾರ್ ಗಾರ್ಡನ್‌ನಲ್ಲಿ ನಡೆದ ಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆಯಲ್ಲಿ ಕಾರ್ಪೋರೇಟರ್ ಗಣೇಶ್ ಕುಲಾಲ್ ಅವರಿಗೆ 2024ನೇ ಸಾಲಿನ ವಾರ್ಷಿಕ ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು. ಗಣೇಶ್ ಕುಲಾಲ್ ಅವರ ಸಮಾಜ ಸೇವೆ ಎಲ್ಲರಿಗೂ ಮಾದರಿ. ಇಂತಹವರು ಅಪರೂಪ. ಪತ್ರಕರ್ತರಿಂದಾಗಿ ಹರೇಕಳ ಹಾಜಬ್ಬ ಅವರು ರಾಷ್ಟ್ರ ಮಟ್ಟದಲ್ಲಿ ಗುರುತಿಸಲ್ಪಟ್ಟಿದ್ದಾರೆ. ಗಣೇಶ್ ಕುಲಾಲ್ ಅವರ ಸೇವೆ ಕೂಡಾ ಉನ್ನತ ಮಟ್ಟದಲ್ಲಿ ಗುರುತಿಸಲ್ಪಡಲಿ ಎಂದು ಪಾಲೆಮಾರ್ ಹೇಳಿದರು.ಕಾರ್ಯಕ್ರಮ ಉದ್ಘಾಟಿಸಿದ ಮಾಜಿ ಮೇಯರ್ ದಿವಾಕರ ಕದ್ರಿ ಮಾತನಾಡಿ, ಜನ ಸಾಮಾನ್ಯರಿಗೆ ಸತ್ಯ ದರ್ಶನ ಮಾಡುವಲ್ಲಿ ಪತ್ರಕರ್ತರು ಹಿಂಜರಿಯಬಾರದು. ಸಮಾಜದ ಅಭಿವೃದ್ಧಿಯಲ್ಲಿ ಪತ್ರಕರ್ತರು ಮಹತ್ವದ ಕೊಡುಗೆ ನೀಡಿದ್ದಾರೆ ಎಂದರು. 1500ಕ್ಕೂ ಅಧಿಕ ಶವ ಸಂಸ್ಕಾರ ಸೇವೆ ನಡೆಸಿರುವ ಗಣೇಶ್ ಕುಲಾಲ್ ಅವರಿಗೆ ಪ್ರೆಸ್‌ಕ್ಲಬ್ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು. ಪ್ರೆಸ್‌ಕ್ಲಬ್ ಸ್ಥಾಪಕ ಅಧ್ಯಕ್ಷ ಕೆ.ಆನಂದ ಶೆಟ್ಟಿ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಿದರು.ಮೇಯರ್ ಮನೋಜ್ ಕುಮಾರ್ ಕೋಡಿಕಲ್, ಉಪ ಮೇಯರ್ ಭಾನುಮತಿ, ಮಾಜಿ ಮೇಯರ್‌ಗಳಾದ ಸುಧೀರ್ ಶೆಟ್ಟಿ ಕಣ್ಣೂರು, ಪ್ರೇಮಾನಂದ ಶೆಟ್ಟಿ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್., ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಪ್ರೆಸ್ ಕ್ಲಬ್ ಮಾಜಿ ಅಧ್ಯಕ್ಷ ಅನ್ನು ಮಂಗಳೂರು, ಜಿಲ್ಲಾ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಬಿ.ರವೀಂದ್ರ ಶೆಟ್ಟಿ ಉಪಸ್ಥಿತರಿದ್ದರು.ಪ್ರೆಸ್‌ಕ್ಲಬ್ ಕಾರ್ಯಕಾರಿ ಸಮಿತಿ ಸದಸ್ಯರಾದ ಆತ್ಮಭೂಷಣ್ ಭಟ್, ಆರ್.ಸಿ.ಭಟ್, ಹರೀಶ್ ಮೋಟುಕಾನ ಇವರು ಸನ್ಮಾನಿತರ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ಪರಿಚಯ ನೀಡಿದರು. ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು. ಲೋಕೇಶ್ ರೈ ಮತ್ತು ನಿಖಿಲ್ ಕಾರ್ಯಕ್ರಮ ನಿರೂಪಿಸಿದರು. *ಸಾಧಕರಿಗೆ ಸನ್ಮಾನಹಿರಿಯ ಪತ್ರಕರ್ತರಾದ ಮಹಮ್ಮದ್ ಆರಿಫ್ ಪಡುಬಿದ್ರೆ, ಭಾಸ್ಕರ ರೈ ಕಟ್ಟ, ಜಿತೇಂದ್ರ ಕುಂದೇಶ್ವರ, ಸತೀಶ್ ಇರಾ, ರಘುರಾಮ‌ ನಾಯಕ್, ಇವರುಗಳಿಗೆ ಪ್ರೆಸ್‌ ಕ್ಲಬ್ ಗೌರವ ಪ್ರಶಸ್ತಿ ನೀಡಲಾಯಿತು. ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಯು.ಕೆ.ಕುಮಾರನಾಥ್, ಅನ್ನು ಮಂಗಳೂರು, ಇಬ್ರಾಹಿಂ ಅಡ್ಕಸ್ಥಳ, ವಿಜಯ ಕೋಟ್ಯಾನ್ ಮತ್ತು ಸಂಧ್ಯಾ ಹೆಗಡೆ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಐ.ಬಿ.ಸಂದೀಪ್ ಕುಮಾರ್, ಸುಖಪಾಲ್ ಪೊಳಲಿ ಮತ್ತು ಪುಷ್ಪರಾಜ್ ಬಿ.ಎನ್. ಇವರುಗಳನ್ನು ಸನ್ಮಾನಿಸಲಾಯಿತು. 19 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಚಿತ್ರಗಳು-ಸತೀಶ್ ಕಾಪಿಕಾಡ್

ಪ್ರಾದೇಶಿಕ ವಾರ್ತೆಗಳು

ಆರೋಗ್ಯಕರ ಜೀವನಕ್ಕೆ ಸಂಗೀತ ಕಲೆ ಪೂರಕ-ಕೃಷ್ಣ ಜೆ ಪಾಲೆಮಾರ್. ಸ್ವರ ಸಾನಿಧ್ಯ ರಾಷ್ಟ್ರೀಯ ಮಟ್ಟದ ಯುವ ಸಂಗೀತೋತ್ಸವ ಸಮಾರಂಭ

ಮಂಗಳೂರು,ಫೆ.8; ಆರೋಗ್ಯಕರ ಜೀವನಕ್ಕೆ ಸಂಗೀತ ಕಲೆ ಪೂರಕವಾಗಿದೆ ಎಂದು ಮಾಜಿ ಸಚಿವ ಕೃಷ್ಣ ಜೆ ಪಾಲೆಮಾರ್ ತಿಳಿಸಿದ್ದಾರೆ.ಅವರು ಮಂಗಳೂರಿನ ಕಲಾ ಸಾಧನ ಸಂಸ್ಥೆ ವತಿಯಿಂದ ನಗರದ ಟಿಎಂಎ ಪೈ ಇಂಟರ್‌ನ್ಯಾಶನಲ್ ಕನ್ವೆನ್ಷನ್ ಸೆಂಟರ್ ನಲ್ಲಿ ಹಮ್ಮಿಕೊಂಡ ಸ್ವರ ಸಾನಿಧ್ಯ ರಾಷ್ಟ್ರೀಯ ಮಟ್ಟದ ಯುವ ಸಂಗೀತ ಉತ್ಸವದಲ್ಲಿ ಕಲಾವಿದರನ್ನು ಸನ್ಮಾನಿಸಿ ಮಾತನಾಡಿದರು.. ಯುವ ಪೀಳಿಗೆಯಲ್ಲಿ ಸಂಗೀತದ ಬಗ್ಗೆ ಅಭಿರುಚಿ ಮೂಡಿಸುವ ನಿಟ್ಟಿನಲ್ಲಿ ಸ್ವರ ಸಾನಿಧ್ಯ ರಾಷ್ಟ್ರೀಯ ಸಂಗೀತೋತ್ಸವ ಗಮನಾರ್ಹ ವಾಗಿದೆ. ಸಂಗೀತಕ್ಕೆ ಅದ್ಭುತ ವಾದ ಶಕ್ತಿಯಿದೆ.ಪಶು ಪಕ್ಷಿಗಳು, ಗಿಡಗಳು ಸಂಗೀತಕ್ಕೆ ಸ್ಪಂದಿಸುತ್ತವೆ ಎನ್ನುವುದನ್ನು ಕೇಳಿದ್ದೇನೆ.ಮನುಷ್ಯನ ಆರೋಗ್ಯದ ಮೇಲೂ ಸಂಗೀತ ಕೇಳುವುದರಿಂದ ಉತ್ತಮ ಪರಿಣಾಮ ಬೀರುತ್ತದೆ. ಸಂಗೀತದ ಬಗ್ಗೆ ಸಮಾಜದಲ್ಲಿ ಅದರಲ್ಲೂ ಯುವ ಜನರಲ್ಲಿ ಇನ್ನಷ್ಟು ಜಾಗೃತಿ ಮೂಡಿಸುವ ಕೆಲಸವಾಗಲಿ ಎಂದು ಶುಭ ಹಾರೈಸಿದರು.ಸಮಾರಂಭದಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್,ಶಾಸಕ ವೇದವ್ಯಾಸ ಕಾಮತ್,ದಕ್ಷಿಣ ಕನ್ನಡ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿ, ಉದ್ಯಮಿ ಪುಷ್ಪರಾಜ್ ಜೈನ್, ಐಡಿಯಲ್ ಐಸ್ ಕ್ರೀಮ್ ಆಡಳಿತ ನಿರ್ದೇಶಕ ಮುಕುಂದ ಕಾಮತ್, ಸ್ವಸ್ತಿಕ್ ನ್ಯಾಷನಲ್ ಬ್ಯುಸಿನೆಸ್ ಸ್ಕೂಲ್ ನ ಅಧ್ಯಕ್ಷ ರಾಘವೇಂದ್ರ ಹೊಳ್ಳ,ಮೈಸೂರು ಎಲೆಕ್ಟ್ರಿಕಲ್ ಕಂಪೆನಿಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ರೈ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ,ಜ್ಯೋತಿಷಿ ಅಶ್ವಿನ್ ಶರ್ಮಾ,ಓಶಿಯನ್ ಪರ್ಲ್ ಸಂಸ್ಥೆಯ ಉಪಾಧ್ಯಕ್ಷ ಗಿರೀಶ್, ನಗರ ಉಪ ಪೊಲೀಸ್ ಆಯುಕ್ತ ರವಿಶಂಕರ್,ಕಲಾಸಾಧನ ಸಂಸ್ಥೆಯ ನಿರ್ದೇಶಕಿವಿಭಾ ಶ್ರೀನಿವಾಸ ನಾಯಕ್ ,ಅಶ್ವಿನ್ ಶರ್ಮಾ ಮೊದಲಾದವರು ಉಪಸ್ಥಿತರಿದ್ದರು. ಶ್ರೀನಿವಾಸ ನಾಯಕ್ ಸ್ವಾಗತಿಸಿದರು, ಭಾಸ್ಕರ್ ರೈ ಕಟ್ಟ ವಂದಿಸಿದರು. ಪುಷ್ಪರಾಜ್ ಬಿ.ಎನ್. ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಕೊಲ್ಕತ್ತಾದ ಅರಣ್ಯ ಚೌಧರಿಯವರಿಂದ ಸಂತೂರ್ ವಾದನ ಮತ್ತು ಕೊಲ್ಕತ್ತಾದ ಪಿಂಟೂದಾಸ್ ರವರ ತಬಲಾಸಾಥ್ ನೊಂದಿಗೆ ಹಿಂದೂಸ್ತಾನಿ ಕಚೇರಿ ನಡೆಯಿತು.ಧಾರಾವಾಡ ಜಿಲ್ಲೆಯ ಮಾನ್ವಿ ತಾಲೂಕಿನ ಬಸವರಾ ವಂದಲಿ ಮತ್ತು ಸಂಗಡಿಗರು ಹಿಂದೂಸ್ತಾನಿ ಸಂಗೀತ ಕಚೇರಿ ನಡೆಸಿಕೊಟ್ಟರು. ಹೇಮಂತ್ ಭಾಗ್ ವತ್ ಹಾರ್ಮೋನಿಯಂ ಮತ್ತು ವಿಘ್ನೇಶ್ ಪ್ರಭು ತಬಲಾ ಸಾಥ್ ನೀಡಿದರು.ಮೇದಾ ಜಿ.ಭಟ್ , ಹಾರ್ಮೋನಿಯಂ,ಅನ್ವೇಷಾ ನಾಯಕ್ ಮತ್ತು ಶ್ರುತಿ ಪ್ರಭು ತಾನ್ಪೂರ ವಾದನದಲ್ಲಿ ಸಹಕರಿಸಿದರು.ಸುಕನ್ಯಾ ಕಾಮತ್ ಕಾರ್ಯಕ್ರಮ ನಿರೂಪಿಸಿದರು

ಪ್ರಾದೇಶಿಕ ವಾರ್ತೆಗಳು

*ಗಣೇಶ್ ಕುಲಾಲ್ ಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ. ಸಮಾಜ ಸೇವಕರನ್ನು ಗುರುತಿಸುವುದು ನಮ್ಮ ಕರ್ತವ್ಯ-ಮಾಜಿ ಸಚಿವ ಕೃಷ್ಣ. ಜೆ.ಪಾಲೆಮಾರ್

ಮಂಗಳೂರು: ನಿಸ್ವಾರ್ಥ ಮನೋಭಾವದಿಂದ ಸಮಾಜದ ಒಳಿತಿಗಾಗಿ ಕೆಲಸ ಮಾಡುವವರನ್ನು ಗುರುತಿಸಿ ಗೌರವಿಸುವುದು ನಮ್ಮ ಕರ್ತವ್ಯ ಎಂದು ಮಾಜಿ ಸಚಿವ ಕೃಷ್ಣ. ಜೆ.ಪಾಲೆಮಾರ್ ಹೇಳಿದರು.ಭಾನುವಾರ ನಗರದ ಪಾಲೆಮಾರ್ ಗಾರ್ಡನ್‌ನಲ್ಲಿ ನಡೆದ ಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆಯಲ್ಲಿ ಕಾರ್ಪೋರೇಟರ್ ಗಣೇಶ್ ಕುಲಾಲ್ ಅವರಿಗೆ 2024ನೇ ಸಾಲಿನ ವಾರ್ಷಿಕ ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು. ಗಣೇಶ್ ಕುಲಾಲ್ ಅವರ ಸಮಾಜ ಸೇವೆ ಎಲ್ಲರಿಗೂ ಮಾದರಿ. ಇಂತಹವರು ಅಪರೂಪ. ಪತ್ರಕರ್ತರಿಂದಾಗಿ ಹರೇಕಳ ಹಾಜಬ್ಬ ಅವರು ರಾಷ್ಟ್ರ ಮಟ್ಟದಲ್ಲಿ ಗುರುತಿಸಲ್ಪಟ್ಟಿದ್ದಾರೆ. ಗಣೇಶ್ ಕುಲಾಲ್ ಅವರ ಸೇವೆ ಕೂಡಾ ಉನ್ನತ ಮಟ್ಟದಲ್ಲಿ ಗುರುತಿಸಲ್ಪಡಲಿ ಎಂದು ಪಾಲೆಮಾರ್ ಹೇಳಿದರು.ಕಾರ್ಯಕ್ರಮ ಉದ್ಘಾಟಿಸಿದ ಮಾಜಿ ಮೇಯರ್ ದಿವಾಕರ ಕದ್ರಿ ಮಾತನಾಡಿ, ಜನ ಸಾಮಾನ್ಯರಿಗೆ ಸತ್ಯ ದರ್ಶನ ಮಾಡುವಲ್ಲಿ ಪತ್ರಕರ್ತರು ಹಿಂಜರಿಯಬಾರದು. ಸಮಾಜದ ಅಭಿವೃದ್ಧಿಯಲ್ಲಿ ಪತ್ರಕರ್ತರು ಮಹತ್ವದ ಕೊಡುಗೆ ನೀಡಿದ್ದಾರೆ ಎಂದರು. 1500ಕ್ಕೂ ಅಧಿಕ ಶವ ಸಂಸ್ಕಾರ ಸೇವೆ ನಡೆಸಿರುವ ಗಣೇಶ್ ಕುಲಾಲ್ ಅವರಿಗೆ ಪ್ರೆಸ್‌ಕ್ಲಬ್ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು. ಪ್ರೆಸ್‌ಕ್ಲಬ್ ಸ್ಥಾಪಕ ಅಧ್ಯಕ್ಷ ಕೆ.ಆನಂದ ಶೆಟ್ಟಿ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಿದರು.ಮೇಯರ್ ಮನೋಜ್ ಕುಮಾರ್ ಕೋಡಿಕಲ್, ಉಪ ಮೇಯರ್ ಭಾನುಮತಿ, ಮಾಜಿ ಮೇಯರ್‌ಗಳಾದ ಸುಧೀರ್ ಶೆಟ್ಟಿ ಕಣ್ಣೂರು, ಪ್ರೇಮಾನಂದ ಶೆಟ್ಟಿ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್., ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಪ್ರೆಸ್ ಕ್ಲಬ್ ಮಾಜಿ ಅಧ್ಯಕ್ಷ ಅನ್ನು ಮಂಗಳೂರು, ಜಿಲ್ಲಾ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಬಿ.ರವೀಂದ್ರ ಶೆಟ್ಟಿ ಉಪಸ್ಥಿತರಿದ್ದರು.ಪ್ರೆಸ್‌ಕ್ಲಬ್ ಕಾರ್ಯಕಾರಿ ಸಮಿತಿ ಸದಸ್ಯರಾದ ಆತ್ಮಭೂಷಣ್ ಭಟ್, ಆರ್.ಸಿ.ಭಟ್, ಹರೀಶ್ ಮೋಟುಕಾನ ಇವರು ಸನ್ಮಾನಿತರ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ಪರಿಚಯ ನೀಡಿದರು. ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು. ಲೋಕೇಶ್ ರೈ ಮತ್ತು ನಿಖಿಲ್ ಕಾರ್ಯಕ್ರಮ ನಿರೂಪಿಸಿದರು. *ಸಾಧಕರಿಗೆ ಸನ್ಮಾನಹಿರಿಯ ಪತ್ರಕರ್ತರಾದ ಮಹಮ್ಮದ್ ಆರಿಫ್ ಪಡುಬಿದ್ರೆ, ಭಾಸ್ಕರ ರೈ ಕಟ್ಟ, ಜಿತೇಂದ್ರ ಕುಂದೇಶ್ವರ, ಸತೀಶ್ ಇರಾ, ರಘುರಾಮ‌ ನಾಯಕ್, ಇವರುಗಳಿಗೆ ಪ್ರೆಸ್‌ ಕ್ಲಬ್ ಗೌರವ ಪ್ರಶಸ್ತಿ ನೀಡಲಾಯಿತು. ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಯು.ಕೆ.ಕುಮಾರನಾಥ್, ಅನ್ನು ಮಂಗಳೂರು, ಇಬ್ರಾಹಿಂ ಅಡ್ಕಸ್ಥಳ, ವಿಜಯ ಕೋಟ್ಯಾನ್ ಮತ್ತು ಸಂಧ್ಯಾ ಹೆಗಡೆ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಐ.ಬಿ.ಸಂದೀಪ್ ಕುಮಾರ್, ಸುಖಪಾಲ್ ಪೊಳಲಿ ಮತ್ತು ಪುಷ್ಪರಾಜ್ ಬಿ.ಎನ್. ಇವರುಗಳನ್ನು ಸನ್ಮಾನಿಸಲಾಯಿತು. 19 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಚಿತ್ರಗಳು-ಸತೀಶ್ ಕಾಪಿಕಾಡ್

ಪ್ರಾದೇಶಿಕ ವಾರ್ತೆಗಳು

ಸಾಮಾಜಿಕ ಸ್ವಾಸ್ಥ್ಯಕ್ಕಾಗಿ ಮಾನಸಿಕ ನೆಮ್ಮದಿ ನೀಡುವ ಕಾರ್ಯಕ್ರಮ ಅಗತ್ಯ-ಕ್ಯಾ.ಬ್ರಿಜೇಶ್ ಚೌಟ *ಸ್ವರ ಸಾನಿಧ್ಯರಾಷ್ಟ್ರೀಯ ಮಟ್ಟದ ಯುವ ಸಂಗೀತೋತ್ಸವಕ್ಕೆ ಚಾಲನೆ

ಮಂಗಳೂರು,ಫೆ.8;ಸಾಮಾಜಿಕ ಸ್ವಾಸ್ಥ್ಯ ಕ್ಕಾಗಿ ಮಾನಸಿಕ ನೆಮ್ಮದಿ ನೀಡುವಂತಹ ಸಂಗೀತ ಸಾಂಸ್ಕೃತಿಕ ಕಾರ್ಯಕ್ರಮಗಳು ಅಗತ್ಯವಿದೆ ಎಂದು ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ.ಅವರು ಮಂಗಳೂರಿನ ಕಲಾ ಸಾಧನಸಂಸ್ಥೆ ವತಿಯಿಂದ ನಗರದ ಟಿಎಂಎ ಪೈ ಇಂಟರ್‌ನ್ಯಾಶನಲ್ ಕನ್ವೆನ್ಷನ್ ಸೆಂಟರ್ ನಲ್ಲಿ ಹಮ್ಮಿಕೊಂಡ ಸ್ವರ ಸಾನಿಧ್ಯ ರಾಷ್ಟ್ರೀಯ ಮಟ್ಟದ ಯುವ ಸಂಗೀತೋತ್ಸವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡುತ್ತಿದ್ದರು. ಜನಸಾಮಾನ್ಯರ ಬದುಕಿಗೆ ಸಮಾಜದಲ್ಲಿ ಶಾಂತಿಯ ವಾತಾವರಣದ ಅಗತ್ಯವಿದೆ. ಸ್ವರ ಸಾನಿಧ್ಯದಂತಹ ರಾಷ್ಟ್ರೀಯ ಯುವ ಸಂಗೀತೊತ್ಸವ ಯುವ ಪ್ರತಿಭೆಗಳಿಗೆ ಅವಕಾಶ ನೀಡುವುದರ ಜೊತೆಗೆ ದೇಶದ ಖ್ಯಾತ ಸಂಗೀತ ಕಲಾವಿದರ ಕಾರ್ಯಕ್ರಮ ವನ್ನು ಆಲಿಸುವ ಅವಕಾಶ ಮಂಗಳೂರಿನ ಜನತೆಗೆ ದೊರೆತಂತಾಗಿದೆ ಎಂದು ಶುಭ ಹಾರೈಸಿದರು.ಸಮಾರಂಭದಲ್ಲಿ ಇಂಡಿಯನ್ ರೆಡ್ ಕ್ರಾಸ್ ದ.ಕ ಜಿಲ್ಲಾ ಘಟಕದ ಸಭಾಪತಿ ಶಾಂತರಾಮ ಶೆಟ್ಟಿ,ಮಾಜಿ ಮೇಯರ್ ದಿವಾಕರ,ರಾಜ್ಯ ಅಲೆಮಾರಿ ಅರೆ ಅಲೆ ಮಾರಿ ನಿಗಮದ ಮಾಜಿ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು, ಐಎಂಎ ದ.ಕ ಘಟಕದ ಕಾರ್ಯದರ್ಶಿ ಡಾ.ಅವಿನ್ ಆಳ್ವಾ,ವಿಶ್ವ ಕೊಂಕಣಿ ಕೇಂದ್ರದ ಉಪಾಧ್ಯಕ್ಷ ರಮೇಶ್ ನಾಯ್ಕ್ ,ಕೆಎಸ್ ಆರ್ ಟಿಸಿ ಮಂಗಳೂರು ವಿಭಾಗಾಧಿಕಾರಿ ರಾಜೇಶ್ ಶೆಟ್ಟಿಹಾಗೂ ಪ್ರಭಾ ಚಂದ್ರಶೇಖರ್, ವಿಭಾ ಶ್ರೀನಿವಾಸ ನಾಯಕ್ ಮೊದಲಾದವರು ಉಪಸ್ಥಿತ ರಿದ್ದರು. ಶ್ರೀನಿವಾಸ ನಾಯಕ್ ಸ್ವಾಗತಿ ಸಿದರು, ಭಾಸ್ಕರ್ ರೈ ಕಟ್ಟ ಕಾರ್ಯಕ್ರಮ ನಿರೂಪಿಸಿದರು, ಪುಷ್ಪರಾಜ್ ಬಿ.ಎನ್. ವಂದಿಸಿದರು.ಸಮಾರಂಭದಲ್ಲಿ ಮಂಗಳೂರು ನಗರ ಉಪ ಪೊಲೀಸ್ ಆಯುಕ್ತ..ಜಗದೀಶ್ ಬಾಳಾ,ಮನಪಾ ಮೇಯರ್ ಮನೋಜ್ ಕುಮಾರ್, ಮಂಗಳೂರು ನಗರ ಉಪ ಪೊಲೀಸ್ ಆಯುಕ್ತ ರವಿಶಂಕರ್ ,ಮನಪಾಉಪ ಆಯುಕ್ತ ಚಂದ್ರ ಶೇಖರ್,ಯೋಗ ನಿರ್ದೇಶಕಿ ದೇವಿಕಾ ಪುರುಷೋತ್ತಮ ಶುಭ ಹಾರೈಸಿದರು.ರಾಷ್ಟ್ರೀಯ ಯುವ ಸಂಗೀತೋತ್ಸವದಲ್ಲಿ ಆರಂಭದಲ್ಲಿ ವಿಭಾ ಎಸ್ ನಾಯಕ್ ಅವರಿಂದ ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ನಡೆಯಿತು, ತಬಲಾ ದಲ್ಲಿ ವಿಗ್ನೇಶ್ ಪ್ರಭು ಹಾಗೂ ಹಾರ್ಮೋನಿಯಂ ನಲ್ಲಿ ಹೇಮಂತ್ ಭಾಗವತ್ ಸಾಥ್ ನೀಡಿದರು ಬಳಿಕ ಮೂಡುಬಿದಿರೆಯ ಸ್ವಯಂ ಪ್ರಕಾಶ್ ಪ್ರಭು (ಪಂಡಿತ್ ಹರಿಪ್ರಸಾದ್ ಚೌರಾಸಿಯಾ ಅವರ ಶಿಷ್ಯ) ಅವರಿಂದ ಕೊಳಲು ವಾದನ, ಆತ್ರೇಯಾ ಗಂಗಾಧರ್ ಅವರಿಂದ ಗಾಯನ, ಕಲಾಸಾಧನ ವಿದ್ಯಾರ್ಥಿಗಳಿಂದ ಸಂಗೀತ ಕಾರ್ಯಕ್ರಮ ನಡೆಯಿತು ಸಂಗೀತ ಗೋಷ್ಟಿ ಕಾರ್ಯಕ್ರಮವನ್ನು ಆಕಾಂಕ್ಷ ಎಸ್ ನಾಯಕ್ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ಫೆ. 20ರಂದು ಮಂಗಳೂರು ಟೌನ್ ಹಾಲ್ ನಲ್ಲಿ ಹಿಂದೂ ಟೂರಿಸಂ ಅಸೋಸಿಯೇಶನ್ ಸಮಾವೇಶ.

ಮಂಗಳೂರು :ದ.ಕ. ಜಿಲ್ಲಾ ಹಿಂದೂ ಟೂರಿಸಂ ಅಸೋಸಿಯೇಶನ್‌ನ ಸರ್ವ ಸದಸ್ಯರ ಸಮಾವೇಶ, ಸಂಸ್ಥೆಯ ಲೋಗೋ ಬಿಡುಗಡೆ ಮತ್ತು ಗಣ್ಯರಿಗೆ ಸಮ್ಮಾನ ಫೆ. 20ರಂದು ಬೆಳಗ್ಗೆ 9.30ರಿಂದ ಮಂಗಳೂರು ಕುದ್ಮುಲ್ ರಂಗರಾವ್ ಪುರಭವನದಲ್ಲಿ ಜರಗಲಿದೆ ಎಂದು ಅಸೋಸಿಯೇಶನ್‌ ಅಧ್ಯಕ್ಷ ಹೇಮಂತ್ ಎಚ್.ಎಂ. ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2018ರಲ್ಲಿ ವಾಟ್ಸ್ ಆ್ಯಪ್‌ ಗ್ರೂಪ್‌ನ ರೂಪದಲ್ಲಿ ಸಂಘಟನೆ ಆರಂಭಗೊಂಡಿತ್ತು. ಸಂಘದ ಸದಸ್ಯರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದು, ಅನಾರೋಗ್ಯ/ಅಪಘಾತಗಳ ಸಂದ ರ್ಭದಲ್ಲಿ ಸದಸ್ಯರಿಗೆ ಹಣಕಾಸಿನ ನೆರವು, ರಕ್ತದಾನ ಮೊದಲಾದವು ಸಂಘಟನೆಯ ಮೂಲ ಉದ್ದೇಶವಾಗಿದೆ ಎಂದರು.ಪುರಭವನದಲ್ಲಿ ಶಾಸಕ ವೇದವ್ಯಾಸ ಕಾಮತ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರಗಲಿದ್ದು, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಕಲ್ಲಡ್ಕ ಪ್ರಭಾಕರ ಭಟ್, ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ದ.ಕ. ಜಿಲ್ಲಾ ಹಿಂದೂ ಟೂರಿಸಂ ಅಸೋಸಿಯೇಶನ್ ಸಲಹೆಗಾರ ಜಗದೀಶ್ ಶೇಣವ, ಉದ್ಯಮಿ ಜಿತೇಂದ್ರ ಕೊಟ್ಟಾರಿ, ದ.ಕ. ಜಿಲ್ಲಾ ಟ್ಯಾಕ್ಸಿಮನ್ಸ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಶನ್ ಅಧ್ಯಕ್ಷ ಆನಂದ ಕೆ. ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಮಂತ್ ತಿಳಿಸಿದರು.ಅಸೋಸಿಯೇಶನ್ ಪ್ರಧಾನ ಕಾರ್ಯದರ್ಶಿ ರಾಮಚಂದ್ರ ಎಚ್.ಎಂ., ಕೋಶಾಧಿಕಾರಿ ಅಣ್ಣಪ್ಪ ವಿಜಯೇಂದ್ರ, ಹರೀಶ್ ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ಫೆ.8;ಸ್ವರ ಸಾನಿಧ್ಯ ರಾಷ್ಟ್ರೀಯ ಮಟ್ಟದ ಯುವ ಸಂಗೀತೋತ್ಸವ

ಮಂಗಳೂರು,ಫೆ.4;. ಮಂಗಳೂರಿನ ಕಲಾ ಸಾಧನ ಸಂಸ್ಥೆ ವತಿಯಿಂದ ನಗರದ ಟಿಎಂಎ ಪೈ ಇಂಟರ್‌ನ್ಯಾಶನಲ್ ಕನ್ವೆನ್ಷನ್ ಸೆಂಟರ್ನಲ್ಲಿ ಸ್ವರ ಸಾನಿಧ್ಯ ರಾಷ್ಟ್ರೀಯ ಮಟ್ಟದ ಯುವ ಸಂಗೀತೋತ್ಸವ ಹಾಗೂ ದೇಶದ ಖ್ಯಾತ ಸಂಗೀತ ಕಲಾವಿದರ ಸಂಗೀತ ಕಾರ್ಯಕ್ರಮ ಫೆಬ್ರವರಿ 8 ರಂದು ನಡೆಯಲಿದೆ.ಬೆಳಗ್ಗೆ 8 ಗಂಟೆಗೆ ದೀಪ ಪ್ರಜ್ವಲನದೊಂದಿಗೆ ಕಾರ್ಯಕ್ರಮ ಆರಂಭ ಗೊಳ್ಳಲಿದೆ.ಬೆಳಿಗ್ಗೆ 8.40 ರಿಂದ 9.30 ರವರೆಗೆ,ಶ್ರೀಮತಿ ವಿಭಾ ಎಸ್ ನಾಯಕ್ ಅವರಿಂದ ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ನಡೆಯಲಿದೆ. ತಬಲಾ ದಲ್ಲಿ ವಿಗ್ನೇಶ್ ಪ್ರಭು ಹಾಗೂ ಹಾರ್ಮೋನಿಯಂ ನಲ್ಲಿ ಹೇಮಂತ್ ಭಾಗವತ್ ಸಾಥ್ ನೀಡಲಿದ್ದಾರೆ.ಬೆಳಿಗ್ಗೆ 9.40 ರಿಂದ 10.30 ರವರೆಗೆ ಮೂಡುಬಿದಿರೆಯ ಸ್ವಯಂ ಪ್ರಕಾಶ್ ಪ್ರಭು (ಪಂಡಿತ್ ಹರಿಪ್ರಸಾದ್ ಚೌರಾಸಿಯಾ ಅವರ ಶಿಷ್ಯ) ಅವರಿಂದ ಕೊಳಲು ವಾದನಬೆಳಿಗ್ಗೆ 10.40 ರಿಂದ 11.30 ರವರೆಗೆ ಆತ್ರೇಯಾ ಗಂಗಾಧರ್ ಅವರಿಂದ ಗಾಯನ,ಮಂಗಳೂರಿನ ಸುರತ್ಕಲ್ ಮೂಲದ ಆತ್ರೇಯ ಗಂಗಾಧರ್ ಅವರು ಪುಣೆಯ ಚಿನ್ಮಯ ವಿಶ್ವವಿದ್ಯಾಪೀಠದಲ್ಲಿ ಸಂಗೀತದಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರುವಗಾಯಕರಾಗಿದಗದಾರೆ. ಬೆಳಗ್ಗೆ 11.40 ರಿಂದ ಕಲಾಸಾಧನ ವಿದ್ಯಾರ್ಥಿಗಳಿಂದ ಸಂಗೀತ ಕಾರ್ಯಕ್ರಮ.ಸಂಜೆ 5.00 ಹಿಂದೂಸ್ತಾನಿ ಸಂಗೀತ ಕಛೇರಿ ಉದ್ಘಾಟನೆ.ಸಂಜೆ 5.45 ರಿಂದ 7.00 ವರೆಗೆ ಬಸವರಾಜ ವಂದಲಿ ಅವರಿಂದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಕಛೇರಿ.ಬಸವರಾಜ ವಂದಲಿ, ಧಾರವಾಡ ಜಿಲ್ಲೆಯ ಮಾನ್ವಿಯ ಸಂಗೀತಗಾರರು ಮತ್ತು ನಾಟಕಕಾರರ ಕುಟುಂಬದಲ್ಲಿ ಜನಿಸಿದವರು.ತನ್ನ ತಂದೆಯ (ಡಾ. ಪುಟ್ಟರಾಜ ಗವಾಯಿಜಿ ಗದಗನ ಶಿಷ್ಯ) ಮಾರ್ಗದರ್ಶನದಲ್ಲಿ ತರಬೇತಿ ಪಡೆದಿದ್ದಾರೆ. ಪಂ. ವಿರೂಪಾಕ್ಷಯ್ಯ ವಂದಲಿ ಜಿ ಗ್ವಾಲಿಯರ್ ಮತ್ತು ಕಿರಾಣಾ ಘರಾನಾದ ಶ್ರೀಮಂತ ಸಂಪ್ರದಾಯದಲ್ಲಿ ತರಬೇತಿ ಪಡೆಯುತ್ತಿದ್ದಾರೆ.ಗಮಕ್ ಶೈಲಿಯ ಸಾಧಕ ಟಂಕರಿಯೊಂದಿಗೆ ಪ್ರಸ್ತುತ ಪಡಿಸಲಿದ್ದಾರೆ.7.15 ರಿಂದ 8.30ವರೆಗೆ ಕೋಲ್ಕತ್ತಾದ ಅರಣ್ಯ ಚೌಧರಿ ಅವರಿಂದ ಸಂತೂರ್ ವಾದನ ಕಛೇರಿ ನಡೆಯಲಿದೆ ಅವರು ಮುಂಬೈ, ಬನಾರಸ್, ದೆಹಲಿ ಹಾಗೂ ಜರ್ಮನಿ, ಫ್ರಾನ್ಸ್, ಪೋಲೆಂಡ್ ಮುಂತಾದ ವಿದೇಶಗಳಲ್ಲಿಯೂ ಪ್ರದರ್ಶನ ನೀಡಿರುವ ಖ್ಯಾತ ಸಂತೂರ್ ವಾದಕರಾಗಿದ್ದಾರೆ ಎಂದು ಕಲಾಸಾಧನ ಸಂಸ್ಥೆ ನಿರ್ದೇಶಕಿವಿಭಾ ಎಸ್ ನಾಯಕ್ ತಿಳಿಸಿದ್ದಾರೆ.ಮಂಗಳೂರಿನ ಸ್ವಸ್ತಿಕ ನ್ಯಾಷನಲ್ ಬಿಸಿನೆಸ್ ಸ್ಕೂಲ್ ಸಹಭಾಗಿತ್ವದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಈ ಸಂಗೀತ ಕಾರ್ಯಕ್ರಮದಕ್ಕೆ ಸಾರ್ವಜನಿಕರಿಗೆ ಮುಕ್ತ ಪ್ರವೇಶವಿದೆ.ಪತ್ರಿಕಾಗೋಷ್ಠಿ ಯಲ್ಲಿ ಸಂಸ್ಥೆಯ ಗೌರವ ಸಲಹೆಗಾರರಾದ ಶ್ರೀನಿವಾಸ್ ನಾಯಕ್ ಇಂದಾಜೆ, ಸ್ವಸ್ತಿಕ ನ್ಯಾಷನಲ್ ಬಿಸಿನೆಸ್ ಸ್ಕೂಲ್ ಪ್ರಿನ್ಸಿಪಾಲ್ ಡಾ ಮಾಲಿನಿ ಹೆಬ್ಬಾರ್ ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ಬೊಂಡಾಲ ಪ್ರಶಸ್ತಿಗೆ ಹಾಸ್ಯಗಾರ ರವಿಶಂಕರ್ ವಳಕುಂಜ ಆಯ್ಕೆ. ಫೆ.14ರಂದು ಬೊಂಡಾಲದಲ್ಲಿ ಪ್ರಶಸ್ತಿ ಪ್ರದಾನ

ಮಂಗಳೂರು: ಹಿರಿಯ ಯಕ್ಷಗಾನ ಅರ್ಥಧಾರಿ, ಶಿಕ್ಷಕ ಮತ್ತು ಶಂಭೂರು ಗ್ರಾಮದ ಪಟೇಲ ದಿ.ಬೊಂಡಾಲ ಜನಾರ್ದನ ಶೆಟ್ಟಿ ಹಾಗೂ ಅವರ ಪುತ್ರ ಹವ್ಯಾಸಿ ಯಕ್ಷಗಾನ ಕಲಾವಿದ, ನಿವೃತ್ತ ಭೂಮಾಪನ ಅಧಿಕಾರಿ ದಿ‌. ಬೊಂಡಾಲ ರಾಮಣ್ಣ ಶೆಟ್ಟಿಯವರ ಸ್ಮರಣಾರ್ಥ ನೀಡಲಾಗುವ ‘ಬೊಂಡಾಲ ಪ್ರಶಸ್ತಿ’ಗೆ ಕಟೀಲು ಮೇಳದ ಕಲಾವಿದ,ಯಕ್ಷಗಾನ ಹಾಸ್ಯಗಾರ ರವಿಶಂಕರ ವಳಕುಂಜ ಅವರು ಆಯ್ಕೆಯಾಗಿದ್ದಾರೆ. ಬೊಂಡಾಲ ಚ್ಯಾರಿಟೇಬಲ್ ಟ್ರಸ್ಟ್ ವತಿಯಿಂದ ಕಟೀಲು ಮೇಳದಲ್ಲಿ ಸೇವೆ ಸಲ್ಲಿಸಿದ ಕಲಾವಿದರಿಗಾಗಿ ಉದ್ಯಮಿ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಅವರು ನೀಡುತ್ತಿರುವ ವಾರ್ಷಿಕ ಪ್ರಶಸ್ತಿಗೆ ಕರ್ನಾಟಕ ಜಾನಪದ, ಯಕ್ಷಗಾನ ಮತ್ತು ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಸಂಚಾಲಕರಾಗಿರುವ ಆಯ್ಕೆ ಸಮಿತಿ 2024 – 25ನೇ ಸಾಲಿಗೆ ವಳಕುಂಜ ಅವರ ಹೆಸರನ್ನು ಅಂತಿಮಗೊಳಿಸಿದೆ. ಪ್ರಶಸ್ತಿಯು ರೂ.10,000/- ನಗದು, ಶಾಲು, ಸ್ಮರಣಿಕೆ ಮತ್ತು ಪ್ರಶಸ್ತಿ ಫಲಕಗಳನ್ನು ಒಳಗೊಂಡಿದೆ. ರವಿಶಂಕರ್ ವಳಕುಂಜ:ಕಾಸರಗೋಡು ಬದಿಯಡ್ಕದ ನಿವೃತ್ತ ಶಿಕ್ಷಕ ಮತ್ತು ಅರ್ಥಧಾರಿ ದಿ.ಸುಬ್ರಹ್ಮಣ್ಯ ಭಟ್ ಮತ್ತು ಲಕ್ಷ್ಮೀ ಅಮ್ಮ ದಂಪತಿಗೆ ಜನಿಸಿದ ರವಿಶಂಕರ ವಳಕುಂಜ ಅವರು ಕಳೆದ 27 ವರ್ಷಗಳಿಂದ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮೇಳದಲ್ಲಿ ಕಲಾವಿದರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನಾಟ್ಯಗುರು ಉಂಡೆಮನೆ ಶ್ರೀಕೃಷ್ಣ ಭಟ್ ಅವರಿಂದ ಯಕ್ಷಗಾನ ನೃತ್ಯಾಭ್ಯಾಸ ಮಾಡಿದ ರವಿಶಂಕರ ಭಟ್ ತನ್ನ ಸೋದರಮಾವ ಹಾಸ್ಯರತ್ನ ನಯನಕುಮಾರ್ ಅವರಿಂದ ಹಾಸ್ಯಗಾರನ ಪಟ್ಟುಗಳನ್ನು ಕಲಿತುಕೊಂಡರು.ಮೊದಲ ಮೂರು ವರ್ಷ ಕಟೀಲು ಒಂದನೇ ಮೇಳದಲ್ಲಿ ವೇಷಧಾರಿಯಾಗಿದ್ದ ಅವರು ಬಳಿಕ ಮುಖ್ಯ ಹಾಸ್ಯಗಾರನಾಗಿ ಭಡ್ತಿ ಪಡೆದು ನಾಲ್ಕನೇ ಮೇಳಕ್ಕೆ ಸೇರ್ಪಡೆಗೊಂಡರು. ಬೊಟ್ಟಿಕೆರೆ ಪುರುಷೋತ್ತಮ ಪೂಂಜ, ಕುಬಣೂರು ಶ್ರೀಧರ ರಾವ್, ಪಟ್ಲ ಸತೀಶ್ ಶೆಟ್ಟಿ, ಕೋಳ್ಯೂರು ರಾಮಚಂದ್ರ ರಾವ್, ಸಂಪಾಜೆ ಶೀನಪ್ಪ ರೈ, ಪೆರುವಾಯಿ ನಾರಾಯಣ ಶೆಟ್ಟಿ, ಮಂಜೇಶ್ವರ ಜನಾರ್ದನ ಜೋಗಿ, ಸುಣ್ಣಂಬಳ ವಿಶ್ವೇಶ್ವರ ಭಟ್, ತೊಡಿಕಾನ ವಿಶ್ವನಾಥ ಗೌಡ ಮೊದಲಾದ ಪ್ರಸಿದ್ಧರ ಒಡನಾಟದಿಂದ ಓರ್ವ ಪ್ರಬುದ್ಧ ಕಲಾವಿದರಾಗಿ ರೂಪುಗೊಂಡರು.ಬಾಹುಕ, ಸಂಜಯ, ಅಕ್ರೂರ, ಬೃಹಸ್ಪತಿ, ಮಕರಂದ, ವಿಜಯ, ಮೂಕಾಸುರ, ನಾರದ… ಇತ್ಯಾದಿ ಹಾಸ್ಯ ಪಾತ್ರಗಳಲ್ಲಿ ಅವರದೇ ಆದ ಛಾಪನ್ನು ಮೂಡಿಸಿದ ವಳಕುಂಜರು ಓರ್ವ ಲೇಖಕನಾಗಿ ಮತ್ತು ಯಕ್ಷಗಾನ ಸಂಬಂಧೀ ವಿಷಯಗಳ ಸಂಗ್ರಾಹಕರಾಗಿಯೂ ಕೆಲಸ ಮಾಡಿದ್ದಾರೆ. ಯಕ್ಷಗಾನ ವಾಚಿಕ ಸಮಾರಾಧನೆ (ಭಾಗ ೧-೨), ಯಕ್ಷಗಾನ ಪ್ರಸಂಗ ದೃಶ್ಯಾವಳೀ (ಭಾಗ ೧-೨), ಯಕ್ಷ ಪಾತ್ರ ದೀಪಿಕಾ, ಯಕ್ಷಗಾನ ಪ್ರಸಂಗಗಳಲ್ಲಿ ‘ನಾರದ’ – ಹೀಗೆ 6 ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಯಕ್ಷಗಾನ ಕಲಾವಿದರನ್ನು ಸಂದರ್ಶಿಸಿ ಸಿದ್ಧಪಡಿಸಿರುವ ಪುಸ್ತಕ ಮುದ್ರಣ ಹಂತದಲ್ಲಿದೆ.ಯಕ್ಷಗಾನದ ಅಭಿಮಾನಿಗಳು ಮತ್ತು ಸಂಸ್ಥೆಗಳಿಂದ ವಿವಿಧೆಡೆ ಸನ್ಮಾನಿತರಾಗಿರುವ ರವಿಶಂಕರ್ ಪ್ರಸ್ತುತ ಪುತ್ತೂರು ತಾಲೂಕಿನ ಮಾಡಾವಿನಲ್ಲಿ ವಾಸ್ತವ್ಯ ಹೊಂದಿದ್ದಾರೆ.ಪ್ರಶಸ್ತಿ ಪ್ರದಾನ:ಫೆಬ್ರವರಿ 13ರಂದು ಬಂಟ್ವಾಳ ತಾಲೂಕು ಶಂಭೂರು ಗ್ರಾಮದ ಬೊಂಡಾಲದಲ್ಲಿ ಶ್ರೀ ದುರ್ಗಾಪರಮೇಶ್ವರೀ ಬಯಲಾಟ ಸೇವಾ ಸಮಿತಿ ವತಿಯಿಂದ ಹತ್ತು ಸಮಸ್ತರ ಆಶ್ರಯದಲ್ಲಿ ಕಟೀಲು ಮೇಳದವರಿಂದ ‘ಹನುಮೋದ್ಭವ, ವೀರಮಣಿ ಮತ್ತು ಮಹಿರಾವಣ ಕಾಳಗ’ ಹಾಗೂ ಫೆ.14ರಂದು ಬೊಂಡಾಲ ಚ್ಯಾರಿಟೇಬಲ್ ಟ್ರಸ್ಟ್ ವತಿಯಿಂದ ‘ಶ್ರೀದೇವಿ ಮಹಾತ್ಮೆ’ ಸೇವಾ ಬಯಲಾಟಗಳು ನಡೆಯಲಿವೆ. ಫೆ. 14ರಂದು ರಾತ್ರಿ ಬಯಲಾಟದ ರಂಗಸ್ಥಳದಲ್ಲಿ ಜರಗುವ ದಿ.ಬೊಂಡಾಲ ಜನಾರ್ದನ ಶೆಟ್ಟಿ ಮತ್ತು ರಾಮಣ್ಣ ಶೆಟ್ಟಿ ಸಂಸ್ಮರಣಾ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಸ್ಥಳೀಯ ಶಾಸಕರು, ಲೋಕಸಭಾ ಸದಸ್ಯರು, ಕಟೀಲು ಕ್ಷೇತ್ರದ ಆಸ್ರಣ್ಣರು ಮತ್ತು ವಿಶೇಷ ಗಣ್ಯರು ಅತಿಥಿಗಳಾಗಿ ಭಾಗವಹಿಸುವರು ಎಂದು ಬೊಂಡಾಲ ಚ್ಯಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ಫೆ.9 ರಂದು ಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆ

ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಪ್ರೆಸ್ ಕ್ಲಬ್ ದಿನಾಚರಣೆ ಫೆ.9ರಂದು ಬೆಳಗ್ಗೆ 10ಕ್ಕೆ ನಗರದ ಮೋರ್ಗನ್ಸ್‌ಗೇಟ್ಬಳಿಯ ಪಾಲೆಮಾರ್ ಗಾರ್ಡನ್‌ಮಲ್ಲಿ ನಡೆಯಲಿದೆ. ಮಾಜಿ ಮೇಯರ್, ಕಾರ್ಡೋಲೈಟ್ ಸ್ಪೆಷಾಲಿಟಿ ಕೆಮಿಕಲ್ಸ್ ಇಂಡಿಯಾದ ಜನರಲ್ ಮ್ಯಾನೇಜರ್ ದಿವಾಕರ್ ಕದ್ರಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. 2024ನೇ ಸಾಲಿನ ಮಂಗಳೂರು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಗೆಆಯ್ಕೆಯಾಗಿರುವ ಮನಪಾ ಕಾರ್ಪೋರೇಟರ್ ಗಣೇಶ್ ಕುಲಾಲ್ ಇವರಿಗೆ ಮಾಜಿ ಸಚಿವ ಕೃಷ್ಣ.ಜೆ.ಪಾಲೆಮಾರ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಖಾದರ್ ಶಾ ಅವರು ಹಿರಿಯ ಪತ್ರಕರ್ತರಿಗೆ ಗೌರವ ಸನ್ಮಾನ ಹಾಗೂ ಪ್ರೆಸ್ ಕ್ಲಬ್ ಸ್ಥಾಪಕ ಅಧ್ಯಕ್ಷ ಆನಂದ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಲಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ .ಆರ್, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಪ್ರೆಸ್ ಕ್ಲಬ್‌ನ ನಿಕಟಪೂರ್ವ ಅಧ್ಯಕ್ಷ ಅನ್ನು ಮಂಗಳೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರೆಸ್ ಕ್ಲಬ್‌ನ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top