ಪ್ರಾದೇಶಿಕ ವಾರ್ತೆಗಳು

ಪ್ರಾದೇಶಿಕ ವಾರ್ತೆಗಳು

ಸಮಾಜ ಸೇವಕ ಯು.ಆರ್. ಶೆಟ್ಟಿ ಅವರಿಗೆ ಕರ್ನಾಟಕ ಮುಕುಟಮಣಿ ಪ್ರಶಸ್ತಿ ಪ್ರದಾನ

ಮಂಗಳೂರಿನಲ್ಲಿ ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀ ಯು.ಆರ್. ಶೆಟ್ಟಿ ಅವರಿಗೆ ಕರ್ನಾಟಕ ಮುಕುಟಮಣಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.ಶ್ರೀ ಸಾಲಿಗ್ರಾಮ ಗಣೇಶ್ ಶನೈ ಅವರ ನೇತೃತ್ವದ ಕಲಾ ಕುಂಚ ದಾವಣಗೆರೆ ಇವರು ಕನ್ನಡ ರಾಜ್ಯೋತ್ಸವದ ಪ್ರಯುಕ್ತ ದಾವಣಗೆರೆಯ ಚೆನ್ನಗಿರಿ ವಿರೂಪಾಕ್ಷಪ್ಪ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀ ಯು. ಆರ್. ಶೆಟ್ಟಿ ಯವರು ಸಮಾಜಮುಖಿ ಕೆಲಸಗಳಲ್ಲಿ ತಮ್ಮನ್ನು ತೊಡಗಿಸಿಕೊಂಡವರು. ವಿವಿಧ ಸಂಘ ಸಂಸ್ಥೆಗಳಲ್ಲಿ ಕ್ರಿಯಾಶೀಲವಾಗಿ ತೊಡಗಿಸಿಕೊಂಡಿರುವ ಇವರು ನಾಟಕ ಕಲಾವಿದರಾಗಿ ಜನಪ್ರಿಯ ರಾಗಿದ್ದಾರೆ. ಇವರ ನೇತೃತ್ವದ ನಾಟಕ ತಂಡ ಸರಕಾರಿ ನೌಕರರ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದಲ್ಲಿ ಉತ್ತಮ ಪ್ರದರ್ಶನ ನೀಡಿದೆ. ಇವರ ಸಮಾಜಮುಖಿ ಸೇವೆ ಮತ್ತು ಸಾಂಸ್ಕೃತಿಕ ಕ್ಷೇತ್ರಕ್ಕೆ ಇವರು ನೀಡಿದ ಕೊಡುಗೆಯನ್ನು ಪರಿಗಣಿಸಿ ದಾವಣಗೆರೆಯ ಕಲಾ ಕುಂಚ ಸಂಸ್ಥೆ ಇವರಿಗೆ ಕರ್ನಾಟಕ ಮುಕುಟಮಣಿ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

ಪ್ರಾದೇಶಿಕ ವಾರ್ತೆಗಳು

ಗಂಗೊಳ್ಳಿ ಪಂ. ಉಪಚುನಾವಣೆ: ಶಾಸಕ ಮಂಜುನಾಥ ಭಂಡಾರಿ ಪ್ರಚಾರ

ಉಡುಪಿ: ಬೈಂದೂರು ತಾಲೂಕಿನ ಗಂಗೊಳ್ಳಿ ಗ್ರಾಮ ಪಂಚಾಯತ್ ಗೆ ಉಪಚುನಾವಣೆ ನಡೆಯಲಿದ್ದು ಆದಿತ್ಯವಾರ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ಪ್ರಚಾರ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಅವರು ಪಾಲ್ಗೊಂಡು ಅಭ್ಯರ್ಥಿ ಪರ ಮತ ಯಾಚಿಸಿದರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಶಾಸಕ ಗೋಪಾಲ್ ಪೂಜಾರಿ, ವಿಧಾನ ಪರಿಷತ್ ಉಪಚನಾವಣೆಯ ಅಭ್ಯರ್ಥಿ ರಾಜು ಪೂಜಾರಿ, ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಶೆಟ್ಟಿ, ಕುಂದಾಪುರ ಬ್ಲಾಕ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ, ಪ್ರಸನ್ನ ಕುಮಾರ್ ಶೆಟ್ಟಿ, ಹಾಗೂ ಸ್ಥಳೀಯ ಕಾಂಗ್ರೆಸ್ ನಾಯಕರು ಮತ್ತು ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ಬೀಚ್ ಸ್ವಚ್ಛತೆಗೆ ಸ್ಮಾರ್ಟ್ ಸಿಟಿಯಿಂದ ಆದ್ಯತೆ. ಮಂಗಳೂರು ಸ್ಮಾರ್ಟ್ ಸಿಟಿ ಜಿಎಂ ಅರುಣ್ ಪ್ರಭಾ

ಮಂಗಳೂರು : ಬೀಚ್ ಗಳು ಪ್ರವಾಸೋದ್ಯಮದ ಪ್ರಮುಖ ಆಕರ್ಷಣೆಯಾಗಿದ್ದು, ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದ ಬೀಚ್ ಗಳ ಸ್ವಚ್ಚತೆಗೂ ಆದ್ಯತೆ ನೀಡಲಾಗುವುದು ಎಂದು ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯ ಜನರಲ್ ಮ್ಯಾನೇಜರ್ ಅರುಣ್ ಪ್ರಭಾ ತಿಳಿಸಿದರು.ದ.ಕ ಜಿಲ್ಲಾಡಳಿತ, ಮಂಗಳೂರು ನಗರ ಪೊಲೀಸ್ ಕಮಿಷನರೆಟ್,ಕ್ರೆಡೈ ಮಂಗಳೂರು, ಸ್ಮಾರ್ಟ್ ಸಿಟಿ ಮಂಗಳೂರು,ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಸ್ವಸ್ತಿಕ ನ್ಯಾಷನಲ್ ಬ್ಯುಸಿನೆಸ್ ಸ್ಕೂಲ್ ನ ಎನ್ ಎಸ್ ಎಸ್ ಘಟಕದ ಹಾಗೂ ಪಣಂಬೂರು ಕುಳಾಯಿ ಮೊಗವೀರ ಸಭಾದ ಸಹಯೋಗದಲ್ಲಿ ರವಿವಾರ ಚಿತ್ರಾಪುರ ಬೀಚ್ ನಲ್ಲಿ ನಡೆದ ಸ್ವಚ್ಚತಾ ಅಭಿಯಾನ ಉದ್ಘಾಟಿಸಿ ಅವರು ಮಾತನಾಡಿದರುಚಿತ್ರಾಪುರ ಬೀಚ್ ಕರಾವಳಿಯವ ಸ್ವಚ್ಛ, ಸುಂದರ ಬೀಚ್ ಆಗಿದ್ದು ಇದಕ್ಕೆ ಸ್ಥಳೀಯರ ಮುತುವರ್ಜಿ ಕಾರಣವಾಗಿದೆ ಎಂದು ಅವರು ಹೇಳಿದರು.ಮಂಗಳೂರು ಮಹಾನಗರ ಪಾಲಿಕೆಯ ಉಪ ಆಯುಕ್ತ ಚಂದ್ರಶೇಖರ್ ,ಕ್ರೆಡೈ ಮಂಗಳೂರು ಘಟಕದ ಅಧ್ಯಕ್ಷ ವಿನೋದ್ ಪಿಂಟೊ ,ಪಣಂಬೂರು ಕುಳಾಯಿ ಮೊಗವೀರ ಸಭಾದ ಅಧ್ಯಕ್ಷ ಮಾಧವ ಸುವರ್ಣ, ಡಿಸಿಪಿ ಸಿದ್ದಾರ್ಥ ಗೋಯಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಸ್ವಸ್ತಿಕ ನ್ಯಾಷನಲ್ ಬ್ಯುಸಿನೆಸ್ ಸ್ಕೂಲ್ ಅಧ್ಯಕ್ಷ ರಾಘವೇಂದ್ರ ಹೊಳ್ಳ, ಜಿಲ್ಲಾ ರೆಡ್ ಕ್ರಾಸ್ ಸೊಸೈಟಿ ನಿರ್ದೇಶಕ ಯತೀಶ್ ಬೈಕಂಪಾಡಿ, ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪರಾಜ್ . ಬಿ.ಎನ್ ,ಕಾರ್ಯಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ, ಮೊಗವೀರ ಸಭಾದ ಕಾರ್ಯದರ್ಶಿ ನಾಗೇಶ್ ಪುತ್ರನ್,ಉಪಾಧ್ಯಕ್ಷ ಕೇಶವ ಅಮೀನ್, ಜಗನ್ನಾಥ ಪುತ್ರನ್,ಕೋಶಾಧಿಕಾರಿ ಪುರು ಷೋತ್ತಮ ಕೋಟ್ಯಾನ್,ಸದಸ್ಯರಾದ ಪಿ.ದೇವೇಂದ್ರ, ರಮೇಶ್, ಕೆ.ಎಲ್. ಬಂಗೇರ, ಯೋಗೀಶ್ ಸಾಲ್ಯಾನ್ ,ಸ್ವಸ್ತಿಕ ನ್ಯಾಷನಲ್ ಬ್ಯುಸಿನೆಸ್ ಸ್ಕೂಲ್ ನ ಎನ್ ಎಸ್ ಎಸ್ ವಿದ್ಯಾರ್ಥಿ ಕಾರ್ಯದರ್ಶಿ ಗಳಾದ ಸಿಂಧು,ಸುದೀಪ್ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ನ್ಯಾಶನಲ್ ಸ್ಕೂಲ್ ಗೇಮ್ಸ್ ಅಥ್ಲೆಟಿಕ್ಸ್‌ನಲ್ಲಿ ಆಯುಷ್ ಪ್ರಾಂಜಲ್‌ಗೆ ಬೆಳ್ಳಿ

ಮಂಗಳೂರು: ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ ವತಿಯಿಂದ ಲಕ್ನೋದಲ್ಲಿ ಜರಗಿದ 68ನೇ ನ್ಯಾಶನಲ್ ಸ್ಕೂಲ್ ಗೇಮ್ಸ್ ಅಥ್ಲೆಟಿಕ್ಸ್‌ನ 17 ವಯೋಮಿತಿಯ ವಿಭಾಗದ 200 ಮೀ.ಓಟದ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಮಂಗಳೂರಿನ ಆಯುಷ್ ಪ್ರಾಂಜಲ್ 22.34 ಸೆಕೆಂಡ್ಸ್‌ನಲ್ಲಿ ಗುರಿ ಮುಟ್ಟುವ ಮೂಲಕ ಬೆಳ್ಳಿ ಪದಕ ಗೆದ್ದಿದ್ದಾರೆ. ಸ್ಪರ್ಧೆಯ ಸೆಮಿ ಫೈನಲ್‌ನಲ್ಲಿ 22.14 ಸೆಕೆಂಡ್ಸ್‌ನಲ್ಲಿ ಗುರಿ ಮುಟ್ಟುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದ 15ರ ಹರೆಯದ ಆಯುಷ್ ಪ್ರಾಂಜಲ್ ಮಂಗಳೂರಿನ ಖೇಲೋ ಇಂಡಿಯಾ ಅಥ್ಲೆಟಿಕ್ಸ್ ಸೆಂಟರ್‌ನಲ್ಲಿ ಕೋಚ್ ಭಕ್ಷಿತ್ ಸಾಲ್ಯಾನ್‌ರಿಂದ ತರಬೇತಿ ಪಡೆದಿದ್ದರು.

ಪ್ರಾದೇಶಿಕ ವಾರ್ತೆಗಳು

NABL ಪ್ರಮಾಣಪತ್ರವು ಅಂತರಾಷ್ಟ್ರೀಯ ಮನ್ನಣೆ ಪಡೆದಿದೆ: ಶ್ರೀಕಾಂತ್

ಮೂಡುಬಿದಿರೆ: ಪರೀಕ್ಷೆ ಮತ್ತು ಮಾಪನಾಂಕ ನಿರ್ಣಯ ಪ್ರಯೋಗಾಲಯಗಳ ರಾಷ್ಟ್ರೀಯ ಮಾನ್ಯತೆಯು (ಎನ್‌ಎಬಿಎಲ್) ಜಾಗತಿಕವಾಗಿ ಪರಿಗಣಿಸಲ್ಪಡುವ ಮಾನದಂಡವಾಗಿದೆ. ಈ ಪ್ರಯೋಗಾಲಯದ ಫಲಿತಾಂಶಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ವಿಶ್ವಾಸಾರ್ಹವಾಗಿರುತ್ತದೆ ಎಂದು ಪರೀಕ್ಷೆ ಮತ್ತು ಮಾಪನಾಂಕ ನಿರ್ಣಯ ಪ್ರಯೋಗಾಲಯಗಳ ರಾಷ್ಟ್ರೀಯ ಮಾನ್ಯತೆ ಮಂಡಳಿ ನಿರ್ದೇಶಕ ಶ್ರೀಕಾಂತ್ ಆರ್ ಹೇಳಿದರು.ಆಳ್ವಾಸ್ (ಸ್ವಾಯತ್ತ)ಕಾಲೇಜಿನ ಎಂಬಿಎ ಸೆಮಿನಾರ್ ಸಭಾಂಗಣದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಯೋಜಿಸಿದ ಪರೀಕ್ಷೆ ಮತ್ತು ಮಾಪನಾಂಕ ನಿರ್ಣಯ ಪ್ರಯೋಗಾಲಯಗಳ ರಾಷ್ಟ್ರೀಯ ಮಾನ್ಯತೆ ಮತ್ತು ಅದರ ಪ್ರಯೋಜನಗಳ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಎನ್‌ಎಬಿಎಲ್ ಮಾನ್ಯತೆಯ ಪ್ರಯೋಗಾಲಯಗಳು ದೃಢವಾದ ಗುಣಮಟ್ಟ ನಿರ್ವಹಣಾ ವ್ಯವಸ್ಥೆಯನ್ನು ಸ್ಥಾಪಿಸಲು ಮತ್ತು ನಿರ್ವಹಿಸಲು ಸಹಕಾರಿಯಾಗಿವೆ. ಇದು ಪ್ರಯೋಗಾಲಯದ ಕಾರ್ಯಾಚರಣೆಗಳು, ಪರೀಕ್ಷೆಯ ನಿಖರತೆ ಮತ್ತು ಒಟ್ಟಾರೆ ಸೇವೆಯ ಗುಣಮಟ್ಟದಲ್ಲಿ ನಿರಂತರ ಸುಧಾರಣೆಗೆ ಕಾರಣವಾಗುತ್ತದೆ ಎಂದರು.ಮಾಪನಶಾಸ್ತç ವಿಷಯವು ಇಂದಿನ ಶೈಕ್ಷಣಿಕ ಪಠ್ಯಕ್ರಮದಲ್ಲಿ ಒಂದು ವಿಷಯವಾಗಿ ಅಧ್ಯಯನ ಮಾಡಲು ಮಾತ್ರ ಸೀಮಿತವಾಗಿದೆ. ಆದರೆ ಇದು ದುರದೃಷ್ಟಕರ. ಮಾಪನಶಾಸ್ತ್ರ ಅಥವಾ ಮಾಪನ ವಿಜ್ಞಾನವು ಕೈಗಾರಿಕಾ ಉತ್ಪಾದನೆ ಮತ್ತು ವೈಜ್ಞಾನಿಕ ಸಂಶೋಧನೆಯಿAದ ಹಿಡಿದು ಆರೋಗ್ಯ ರಕ್ಷಣೆ, ಪರಿಸರ ಸಂರಕ್ಷಣೆ ಮತ್ತು ಅಂತರರಾಷ್ಟ್ರೀಯ ವ್ಯಾಪಾರದವರೆಗೆ ಆಧುನಿಕ ಜೀವನದ ಪ್ರತಿಯೊಂದು ಅಂಶಗಳಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಮಾಪನಗಳ ನಿಖರತೆ, ವಿಶ್ವಾಸಾರ್ಹತೆ ಮತ್ತು ಪತ್ತೆಹಚ್ಚುವಿಕೆ ತಾಂತ್ರಿಕ ಪ್ರಗತಿ ಮತ್ತು ಆರ್ಥಿಕ ಬೆಳವಣಿಗೆಗೆ ಅಡಿಪಾಯವಾಗಿದೆ ಎಂದರು.ಎನ್‌ಎಬಿಎಲ್‌ನ ಶ್ರೀರಾಮ್ ಪಿಣ್ಣಮ್ಮರಾಜು, ಗೋಪಿಕಾ ಮೋಹನನ್ ಕರ‍್ಯಗಾರವನ್ನು ನಡೆಸಿಕೊಟ್ಟರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿವಿಧ ಕಾಲೇಜುಗಳ ಉಪನ್ಯಾಸಕರು ಕರ‍್ಯಗಾರದಲ್ಲಿ ಪಾಲ್ಗೊಂಡರು. ಕರ‍್ಯಕ್ರಮ ಸಂಯೋಜಕ ಡಾ ವಿನಯ್ ಇದ್ದರು.ಸಹಾಯಕ ಪ್ರಾಧ್ಯಪಕಿ ಡಾ ಸಾಕ್ಷಿ ಕಾಮತ್ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ವ್ಯವಹಾರಗಳ ಡೀನ್ ಪ್ರೊ. ದುರ್ಗಾಪ್ರಸಾದ್ ಬಾಳಿಗ ಸ್ವಾಗತಿಸಿದರು. ಮ್ಯಾಕಾನಿಕಲ್ ಇಂಜಿನಿಯರಿAಗ್ ವಿಭಾಗದ ಮುಖ್ಯಸ್ಥ ಡಾ ಸತ್ಯನಾರಾಯಣ ವಂದಿಸಿದರು

ಪ್ರಾದೇಶಿಕ ವಾರ್ತೆಗಳು

ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜು ಕನ್ನಡ ಸಂಘದ ಕನ್ನಡ ಹಬ್ಬದಲ್ಲಿ ಡಾ. ಕೆ. ಚಿನ್ನಪ್ಪ ಗೌಡ. ‘ಕನ್ನಡದ ಬೆಳವಣಿಗೆಗೆ ತಂತ್ರಜ್ಞಾನದ ಕೊಡುಗೆ ಅತ್ಯವಶ್ಯ’

ಮಿಜಾರು: ‘ಇಂದಿನ ಡಿಜಿಟಲ್ ಕಾಲಘಟ್ಟದಲ್ಲಿ ಕನ್ನಡದ ಬೆಳವಣಿಗೆಗೆ ತಂತ್ರಜ್ಞಾನದ ಕೊಡುಗೆ ಅತ್ಯವಶ್ಯ ಹಾಗೂ ಅನಿವಾರ್ಯ’ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಕೆ. ಚಿನ್ನಪ್ಪ ಗೌಡ ಹೇಳಿದರು.ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜು ಕನ್ನಡ ಸಂಘವು ಕಾಲೇಜಿನ ಎಂಬಿಎ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ‘ಕನ್ನಡ ಹಬ್ಬ -2024’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಕನ್ನಡ ಭಾಷೆಯ ಅಳಿವು- ಉಳಿವಿಗೆ ತಂತ್ರಜ್ಞಾನದ ಬಳಕೆಯೂ ಮಹತ್ತರವಾಗಿದೆ. ತಂತ್ರಜ್ಞಾನದ ಮೂಲಕ ಕನ್ನಡದ ವ್ಯಾಪ್ತಿ ಮತ್ತು ಸತ್ವವನ್ನು ಹೆಚ್ಚಿಸುವುದು ಹಾಗೂ ಕಂಪನ್ನು ಪಸರಿಸುವುದು ಬಹುಮುಖ್ಯವಾಗಿದೆ. ಭವಿಷ್ಯದ ಪೀಳಿಗೆಗೆ ಕನ್ನಡದ ಪ್ರಸ್ತುತತೆಯನ್ನು ಖಚಿತಪಡಿಸಬಹುದು ಎಂದರು.ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಸತ್ಯನಾರಾಯಣ ಮಲ್ಲಿಪಟ್ಟಣ ಮಾತನಾಡಿ, ಕನ್ನಡ ಭಾಷೆಯು ಆಳವಾದ ಅರ್ಥಗಳನ್ನು ಹೊಂದಿರುವ ಪದಗಳಿಂದ ಕೂಡಿದ ಸಮೃದ್ಧ ಭಾಷೆಯಾಗಿದೆ. ದೈನಂದಿನ ಸಂಬAಧಗಳು ಮತ್ತು ಭಾವನೆಗಳನ್ನು ಅರ್ಥ ಮಾಡಿಕೊಳ್ಳುವಲ್ಲಿ ಕನ್ನಡ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಕನ್ನಡವು ನಮ್ಮ ಜೀವನದ ಹಾಗೂ ಸಂವಹನದ ಅವಿಭಾಜ್ಯ ಅಂಗ ಎಂದರು.ಕಾಲೇಜಿನ ಪ್ರಾಂಶುಪಾಲ ಡಾ. ಪೀಟರ್ ಫೆರ್ನಾಂಡಿಸ್ ಮಾತನಾಡಿ, ‘ಕನ್ನಡ ಮಾತನಾಡುವ ಜನರನ್ನು ಒಗ್ಗೂಡಿಸುವ ಶಕ್ತಿ ಆ ಭಾಷೆಯಲ್ಲಿದೆ. ಕನ್ನಡ ನಮ್ಮ ಆತ್ಮಭಾಷೆ, ಇಂಗ್ಲಿಷ್ ಕಾರ್ಯ ಭಾಷೆ ಎಂದರು.ವಿವಿಧ ಸ್ಪರ್ಧೆಗಳ ವಿಜೇತರ ಹೆಸರನ್ನು ಕನ್ನಡ ಸಂಘದ ಸಂಚಾಲಕರಾದ ಪ್ರೊ. ಗಣೇಶ್ ಆಚಾರ್ಯ ವಾಚಿಸಿದರು.ಕನ್ನಡ ಸಾಹಿತ್ಯ ಪರಿಷತ್ತು ಮೂಡುಬಿದಿರೆ ತಾಲ್ಲೂಕು ಘಟಕದ ಅಧ್ಯಕ್ಷ ಕೆ. ವೇಣುಗೋಪಾಲ ಶೆಟ್ಟಿ, ಕನ್ನಡ ಸಂಘದ ಸಂಚಾಲಕ ಡಾ.ಬಿ. ಗುರುಶಾಂತ ವಗ್ಗರ್, ವಿದ್ಯಾರ್ಥಿ ವ್ಯವಹಾರಗಳ ಡೀನ್ ಪ್ರೊ. ದುರ್ಗಾ ಪ್ರಸಾದ್ ಬಾಳಿಗಾ ಹಾಗೂ ವಿದ್ಯಾರ್ಥಿಗಳು ಇದ್ದರು. ಕನ್ನಡ ಸಂಘದ ವಿದ್ಯಾರ್ಥಿ ಸಂಚಾಲಕರಾದ ಸ್ಪಂದನಾ, ತೇಜಸ್, ಕನ್ನಡ ಸಂಘದ ವಿದ್ಯಾರ್ಥಿ ಸಂಚಾಲಕರಾದ ಗಣೇಶ್ ಆಚಾರ್ಯ ವಂದಿಸಿದರು. ಸಭಾ ಕರ‍್ಯಕ್ರಮ ನಂತರ ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕರ‍್ಯಕ್ರಮ ನಡೆಯಿತು.

ಪ್ರಾದೇಶಿಕ ವಾರ್ತೆಗಳು

ಆಳ್ವಾಸ್ ತುಳು ಸಂಸ್ಕೃತಿ ಅಧ್ಯಯನ ಕೇಂದ್ರದಿಂದ ಅವಲೋಕನ. ತುಳು ಕಾದಂಬರಿ ಗತಿ ಬದಲಾಯಿಸಿದ ‘ನಾಣಜ್ಜೆರ್…’

ಮೂಡುಬಿದಿರೆ: ತುಳು ಕಾದಂಬರಿ ಪ್ರಕಾರದ ದಿಕ್ಕನ್ನೇ ಬದಲಾಯಿಸಿದ ಕೃತಿ ‘ನಾಣಜ್ಜೆರ್ ಸುದೆ ತಿರ್ಗಾಯೆರ್ ಎಂದು ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಕುಲಸಚಿವ (ಶೈಕ್ಷಣಿಕ) ಡಾ. ಟಿ. ಕೆ. ರವೀಂದ್ರನ್ ಹೇಳಿದರು.ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಸ್ನಾತಕೋತ್ತರ ಸಭಾಂಗಣದಲ್ಲಿ ಬುಧವಾರ ಆಳ್ವಾಸ್ ತುಳು ಸಂಸ್ಕೃತಿ ಅಧ್ಯಯನ ಕೇಂದ್ರದ ವತಿಯಿಂದ ನಡೆದ ‘ಡಾ. ಮಹಾಲಿಂಗ ಭಟ್ ಬರೆದ ನಾಣಜ್ಜೆರ್ ಸುದೆ ತಿರ್ಗಾಯೆರ್’ ಕಾದಂಬರಿಯ ಅವಲೋಕನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ತುಳು ಭಾಷೆಯು ತಮಿಳಿನಷ್ಟೇ ಪುರಾತನವಾದ ಭಾಷೆ. ಪ್ರಪಂಚದಾದ್ಯAತ ಒಂದು ಕೋಟಿಗೂ ಹೆಚ್ಚು ತುಳು ಭಾಷಿಕರಿದ್ದಾರೆ. ಸಂಗಮ ಸಾಹಿತ್ಯದಲ್ಲೂ ತುಳು ಭಾಷೆಯ ಉಲ್ಲೇಖವಿದೆ ಎಂದರು.ತಮ್ಮ ಭಾಷೆಯ ಮೇಲೆ ಯಾರಿಗೂ ಕೀಳರಿಮೆ ಇರಬಾರದು. ತುಳು ಭಾಷಿಕರು ಸಾಹಿತ್ಯಕ್ಕೆ ಹೆಚ್ಚಿನ ಒಲವು ನೀಡದೇ ಇರುವುದರಿಂದ ಸಾಹಿತ್ಯದಲ್ಲಿ ತುಳು ಭಾಷೆಯು ಹಿಂದುಳಿದಿದೆ. ತುಳು ಭಾಷಿಕರು ತುಳು ಭಾಷೆಯನ್ನು ಉತ್ತೇಜಿಸಬೇಕು ಎಂದು ತಿಳಿಸಿದರು.‘ನಾಣಜ್ಜೆರ್ ಸುದೆ ತಿರ್ಗಾಯೆರ್’ ಕೃತಿಯು ತುಳು ಸಾಹಿತ್ಯದ ಸ್ಥಿತಿಯನ್ನೇ ಬದಲಾಯಿಸಿದ ಕೃತಿಯಾಗಿದೆ. ತುಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಕೃತಿ ಇದಾಗಿದ್ದು. ತುಳು ಸಾಹಿತ್ಯವು ಈ ಕೃತಿಯ ನಂತರ ತಿರುವು ಪಡೆದುಕೊಂಡಿದೆ ಎಂದರು.ವಾಣಿಜ್ಯ ವೃತ್ತಿಪರ ವಿಭಾಗದ ಸಂಯೋಜಕ ಅಶೋಕ್ ಕೆ. ಜಿ. ಇದ್ದರು. ಆಳ್ವಾಸ್ ತುಳು ಸಂಸ್ಕೃತಿ ಅಧ್ಯಯನ ಕೇಂದ್ರದ ಸಂಯೋಜಕ ಡಾ. ಯೋಗೀಶ್ ಕೈರೋಡಿ ಸ್ವಾಗತಿಸಿದರು. ವಿದ್ಯಾರ್ಥಿನಿ ಅನೀಶಾ ಶೆಟ್ಟಿ ವಂದಿಸಿದರು.

ಪ್ರಾದೇಶಿಕ ವಾರ್ತೆಗಳು

“ವಿದ್ಯಾರ್ಥಿಗಳ ಬದುಕಿನ ಅಡಿಪಾಯ ಶಿಕ್ಷಕರ ಶಿಕ್ಷಣ”

ವಿದ್ಯಾಗಿರಿ: ‘ವಿದ್ಯಾರ್ಥಿಗಳ ಪ್ರತೀ ಹೆಜ್ಜೆಯಲ್ಲೂ ಗುರುವಿನ ಸ್ಥಾನ ಇರಬೇಕು’ ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟ್ರೀಸ್ ಆಫ್ ಇಂಡಿಯಾದ (ಐಸಿಎಸ್‌ಐ) ಕೇಂದ್ರ ಸಮಿತಿ ಸದಸ್ಯ ಸಿ.ಎಸ್. ದ್ವಾರಕಾನಂದ್ ಹೇಳಿದರು.ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟ್ರೀಸ್ ಆಫ್ ಇಂಡಿಯಾ ಸಹಯೋಗದಲ್ಲಿ ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಗುರುವಾರ ನಡೆದ ‘ಶಿಕ್ಷಣ ತಜ್ಞರ ಸಶಕ್ತೀಕರಣ- ಶಿಕ್ಷಕರ ಸಮ್ಮೇಳನ’ದಲ್ಲಿ ಅವರು ಮಾತನಾಡಿದರು.ಇಷ್ಟಪಟ್ಟು ಓದಬೇಕು. ಕಷ್ಟ ಪಟ್ಟು ಓದುವ ಹಾಗೆ ಆಗಬಾರದು. ವಿದ್ಯಾರ್ಥಿಗಳಿಗೆ ಗುರಿ ಅತಿ ಮುಖ್ಯ. ಯಾವುದಕ್ಕಾಗಿ ಓದುತ್ತಿದ್ದೇವೆ ಎನ್ನುವ ಜ್ಞಾನ ನಿಮ್ಮಲ್ಲಿರಬೇಕು. ನಿಮ್ಮ ಸಮಯವನ್ನು ಓದಿಗೆ ಮೀಸಲಿಡಬೇಕು. ಇಷ್ಟ ಪಟ್ಟು ಕೆಲಸ ಮಾಡಿದಾಗ ಅದು ಕಷ್ಟ ವೆನಿಸುವುದಿಲ್ಲ’ ಎಂದರು.ಎಸ್. ಕೆ. ಎಫ್. ಎಲಿಕ್ಸರ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನಿರ್ದೇಶಕ ಪ್ರಜ್ವಲ್ ಆಚಾರ್ ಮಾತನಾಡಿ, ಶಿಕ್ಷಕರು ತುಂಬಾ ಸವಾಲುಗಳನ್ನು ಎದುರಿಸಬೇಕಾಗಿದೆ. ಶಿಕ್ಷಣ ನೀಡುವ ಜೊತೆಗೆ ತಂತ್ರಜ್ಞಾನಕ್ಕೆ ಸ್ಪಂದಿಸಬೇಕು. ನಾಳೆಯ ಸಮಾಜಕ್ಕೆ ನಾಯಕರನ್ನು ನೀಡುವ ದೊಡ್ಡ ಜವಾಬ್ದಾರಿ ಶಿಕ್ಷಕರ ಹೆಗಲ ಮೇಲೆ ಇದೆ ಎಂದರು.ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ವಿದ್ಯಾರ್ಥಿಗಳು ಕಲಿಸಿದ ಶಿಕ್ಷಕರಿಗೆ ಕೃತಜ್ಞರಾಗಿರಬೇಕು. ಮೊದಲು ನಿಮ್ಮ ಯೋಚನೆ ಬದಲಾಯಿಸಿಕೊಳ್ಳಿ. ಎಲ್ಲಾ ಶಿಕ್ಷಣ ಕ್ಷೇತ್ರಕ್ಕೂ ಅದರದೇ ಆದ ವಿಶೇಷತೆ ಇದೆ ಎಂದರು.ಅರಿವು ಮೂಡಿಸುವ ಶಿಕ್ಷಕರೇ ವಿದ್ಯಾರ್ಥಿಗಳ ಭವಿಷ್ಯದ ನಿರ್ದೇಶಕರು. ವಿದ್ಯಾರ್ಥಿಗಳಲ್ಲಿ ಇರುವ ಸಾಮರ್ಥ್ಯವನ್ನು ಹುಡುಕಿ, ಎಚ್ಚರಿಸಿ ಎಲ್ಲಾ ಮನುಷ್ಯನಿಗೆ ಅವನದೇ ಆದ ಸಾಮರ್ಥ್ಯವಿದೆ ಎಂದರು.ಆಳ್ವಾಸ್(ಸ್ವಾಯತ್ತ) ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಮಾತನಾಡಿ ವಿದ್ಯಾರ್ಥಿಗಳಲ್ಲಿ ಬದಲಾವಣೆ ತರಲು ಶಿಕ್ಷಕರಿಗೆ ಸಾಧ್ಯ. ಸಮಾಜದ ಜವಾಬ್ದಾರಿ ಶಿಕ್ಷಣದಲ್ಲಿದೆ. ಅದು ಶಿಕ್ಷಕರು ವಿದ್ಯಾರ್ಥಿಗಳಿಗೆ ನೀಡುವ ಶಿಕ್ಷಣ ತಿಳಿಸುತ್ತದೆ ವಿದ್ಯಾರ್ಥಿಗಳನ್ನು ಸಮಾಜನ ಶ್ರೇಷ್ಠ ವ್ಯಕ್ತಿಯನ್ನಾಗಿಸುವ ಜವಾಬ್ದಾರಿ ಶಿಕ್ಷಕರದ್ದು ಎಂದರು.ಪುಸ್ತಕದ ವಿಚಾರ ತಿಳಿಸುವುದು ಮಾತ್ರ ನಿಮ್ಮ ಕೆಲಸವಲ್ಲ ಬದುಕಿನ ಬಗ್ಗೆ ಎಚ್ಚರಿಸುವುದು ಶಿಕ್ಷಕರು. ವಿದ್ಯಾರ್ಥಿ ತಪ್ಪು ದಾರಿ ಹಿಡಿದರೆ ತಿದ್ದುವುದು ಶಿಕ್ಷಕರ ಕರ್ತವ್ಯ ಎಂದರು.‘ಶಿಕ್ಷಕರ ಸಂಪನ್ಮೂಲ ಉನ್ನತೀಕರಣ’ ಕುರಿತು ಮಂಗಳೂರು ರಥಬೀದಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಮನೋಜ್ ಲೂಯಿಸ್ ಹಾಗೂ ‘ಕಂಪೆನಿ ಸೆಕ್ರಟರೀಸ್‌ಯಾಗಿ ವೃತ್ತಿ ಜೀವನ ಮತ್ತು ಉದ್ಯೋಗ ಅವಕಾಶಗಳು’ ಕುರಿತು ಮಣಿಪಾಲ್ ಟೆಕ್ನಾಲಜಿಯ ಕಂಪೆನಿ ಸೆಕ್ರೆಟರಿ ಚಂದನಾ ಟಿಕೋಠಿ ಉಪನ್ಯಾಸ ನೀಡಿದರು. ಕರ‍್ಯಕ್ರಮದಲ್ಲಿ ಕಂಪೆನಿ ಸೆಕ್ರೆಟರಿಗಳಾದ ರಾಕೇಶ್ ನಾಯಕ್, ಸಂತೋಷ್ ಪ್ರಭು, ಸಿದ್ದೇಶ್ ಭಕ್ತ ಹಾಗೂ ವೃತ್ತಿಪರ ವಾಣಿಜ್ಯ ವಿಭಾಗದ ಸಂಯೋಜಕ ಅಶೋಕ ಕೆಜಿ ಇದ್ದರು.ಸಹಾಯಕ ಪ್ರಾಧ್ಯಾಪಕಿ ಸಮನ್ ಸೈಯದ್ ಕಾರ್ಯಕ್ರಮ ನಿರೂಪಿಸಿದರು. ಅಪರ್ಣಾ ಕೆ ಸ್ವಾಗತಿಸಿದರು. ಸುಪ್ರೀತಾ ನಾಯಕ್ ವಂದಿಸಿದರು.

ಪ್ರಾದೇಶಿಕ ವಾರ್ತೆಗಳು

ಪತ್ರಕರ್ತರ ಸಮ್ಮೇಳನದ ಆಮಂತ್ರಣ ‌ಪತ್ರಿಕೆ ಬಿಡುಗಡೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಡಿ.5ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿರುವ ಪತ್ರಕರ್ತರ 5ನೇ ಜಿಲ್ಲಾ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ.ಅವರು ಶನಿವಾರ ಬಿಡುಗಡೆಗೊಳಿಸಿದರು.ಶಾಸಕ ಡಾ.ವೈ.ಭರತ್ ಶೆಟ್ಟಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್, ಮುಡಾ ಆಯುಕ್ತೆನೂರ್ ಜಹರಾ ಖಾನಂ ಮುಖ್ಯ ಅತಿಥಿಗಳಾಗಿದ್ದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಕೋಶಾಧಿಕಾರಿ ಪುಷ್ಪರಾಜ್ .ಬಿ.ಎನ್ ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ರೋಮ್ ನ ಕ್ರೈಸ್ತ ಸಂಘಟನೆಗಳಿಂದ ಸ್ಪೀಕರ್ ಯು. ಟಿ. ಖಾದರ್ ರವರಿಗೆ ಸನ್ಮಾನ.

ರೋಮ್: ‘ಶತಮಾನಗಳ ಹಿಂದೆ ಕ್ರೈಸ್ತರು ಭಾರತದ ಗ್ರಾಮೀಣ ಭಾಗದಲ್ಲಿ ಶಾಲೆಗಳ ಸ್ಥಾಪನೆಗೈದು ಸಮಾಜದ ಒಳಿತಿಗಾಗಿ ತಮ್ಮ ಸೇವೆಯನ್ನು ನೀಡಿ ಜನಸಾಮಾನ್ಯರ ಬದುಕನ್ನು ಹಸನುಗೊಳಿಸಿದ್ದರು. “ಕ್ರೈಸ್ತರ ಪ್ರಮುಖ ಧಾರ್ಮಿಕ ಕೇಂದ್ರವಾದ ರೋಮ್ ನಲ್ಲಿ ನೀವು ಪಡೆಯುವ ಉನ್ನತ ಶಿಕ್ಷಣ ಮತ್ತು ನಿಮ್ಮ ಸೇವಾ ಮನೋಭಾವ, ಕರ್ನಾಟಕದ ಗ್ರಾಮೀಣ ಭಾಗದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಲು ನಿಮಗೆ ಪ್ರೇರಣೆಯಾಗಲಿ” ಎಂದು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ರವರು ಇಟಲಿಯ ರೋಮ್ ನಲ್ಲಿರುವ ಕರ್ನಾಟಕ ಮೂಲದ ಕ್ರೈಸ್ತ ಸಂಘಟನೆಗಳ ಸದಸ್ಯರಿಗೆ ಕರೆ ನೀಡಿದರು. ಅಂತರ್ ರಾಷ್ಟ್ರೀಯ ಅಂತರ್ ಧರ್ಮೀಯ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರೋಮ್ ಗೆ ಭೇಟಿ ನೀಡಿರುವ ಸಂದರ್ಭದಲ್ಲಿ ಸಂತ ಪೀಟರ್ ಪೊಂತಿಫಿಕಾಲ್ ಕೊಲೆಜ್ ನಲ್ಲಿ ‘ಕೊಂಕಣಿ ಕುಟಾಮ್ ರೋಮ್’ ಮತ್ತು ‘ಕನ್ನಡಿಗರ ಒಕ್ಕೂಟ, ರೋಮ್’ ಇವರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಭಾಗವಹಿಸಿದ್ದರು. ಮಂಗಳೂರು ಧರ್ಮಪ್ರಾಂತ್ಯದ ಧರ್ಮಗುರು ಫಾದರ್ ಜಿಲ್ ಡಿಸೋಜಾ, ಯು.ಟಿ. ಖಾದರ್ ರವರ ಸೇವಾ ಸಾಧನೆಯನ್ನು ವಿವರಿಸಿದರು. ಫಾದರ್ ಜೋವಿನ್ ಸಿಕ್ವೆರಾರವರು ಕೊಂಕಣಿ ಸಂಘಟನೆ ಮತ್ತು ಫಾದರ್ ರಿಚಾರ್ಡ್ ಕನ್ನಡ ಸಂಘಟನೆಯ ಕಾರ್ಯ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು. ಸಂತ ಪೀಟರ್ ಪೊಂತಿಫಿಕಾಲ್ ಕೊಲೆಜ್ ನ ರೆಕ್ಟರ್ ಫಾದರ್ ಜೋಸ್ ತಮ್ಮ ಸಂದೇಶ ನೀಡಿ ಶುಭ ಹಾರೈಸಿದರು. ಉಭಯ ಸಂಘಟನೆಗಳ ಪರವಾಗಿ ಖಾದರ್ ರವರನ್ನು ಸನ್ಮಾನಿಸಲಾಯಿತು. ಫಾದರ್ ಸೆಬಾಸ್ಟಿಯನ್ ಪ್ರಾರ್ಥನಾವಿಧಿ ನೆರವೇರಿಸಿದರು.ಕಾರ್ಯಕ್ರಮದ ಸಂಯೋಜಕ ಫಾದರ್ ಲೋರೆನ್ಸ್ ನೊರೊನ್ಹಾ ಸ್ವಾಗತಿಸಿದರು, ಸಹ ಸಂಯೋಜಕಿ ವ್ಯಾಟಿಕನ್ ಸಂವಹನ ವಿಭಾಗದ ಧರ್ಮಭಗಿನಿ ಸಿಸ್ಟರ್ ಕಾರ್ಮೆಲ್ ವಂದನಾರ್ಪಣೆಗೈದರು. ಫಾದರ್ ರೊಯ್ಸನ್ ಫೆರ್ನಾಂಡಿಸ್, ಹಿರ್ಗಾನ ಕಾರ್ಯಕ್ರಮವನ್ನುನಿರ್ವಹಿಸಿದರು.

Scroll to Top