ಪ್ರಾದೇಶಿಕ ವಾರ್ತೆಗಳು

ಪ್ರಾದೇಶಿಕ ವಾರ್ತೆಗಳು

ಯಕ್ಷಾಂಗಣದಲ್ಲಿ ಬೆಟ್ಟಂಪಾಡಿ ಬಾಳಪ್ಪ ಶೆಟ್ಟಿ ಸಂಸ್ಮರಣೆ. ‘ಕಲಾವಿದರಿಗೆ ಅಭಿಮಾನಿಗಳ ರಕ್ಷೆ’: ಅರುವ ಕೊರಗಪ್ಪ ಶೆಟ್ಟಿ

ಮಂಗಳೂರು: ‘ಯಕ್ಷಗಾನ ಕ್ಷೇತ್ರದ ಸುಧೀರ್ಘವಾದ ತನ್ನ ಯಾತ್ರೆಯಲ್ಲಿ ಸಾವಿರಾರು ಮಾನ – ಸಮ್ಮಾನಗಳು ಲಭಿಸಿವೆ; ಇದು 1023ನೇ ಸನ್ಮಾನ. ದೇಹದ ಕಸುವು ಕಡಿಮೆಯಾದರೂ ರಂಗಸ್ಥಳದಲ್ಲಿ ಅದು ಅರಿವಿಗೆ ಬರುವುದಿಲ್ಲ; ಕಾರಣ ರಂಗದ ಒಳಗೂ ಹೊರಗೂ ನಮಗೆ ಅಭಿಮಾನಿಗಳ ರಕ್ಷೆ ಇದೆ’ ಎಂದು ರಾಜ್ಯ ಪ್ರಶಸ್ತಿ ಪುರಸ್ಕೃತ ಹಿರಿಯ ಕಲಾವಿದ ಅರುವ ಕೊರಗಪ್ಪ ಶೆಟ್ಟಿ ಹೇಳಿದ್ದಾರೆಯಕ್ಷಾಂಗಣ ಮಂಗಳೂರು, ಯಕ್ಷಗಾನ ಚಿಂತನ – ಮಂಥನ ಮತ್ತು ಪ್ರದರ್ಶನ ವೇದಿಕೆ ಹಾಗೂ ಕರ್ನಾಟಕ ಯಕ್ಷ ಭಾರತಿ ಪುತ್ತೂರು ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಕಲಾಸಂಭ್ರಮವಾಗಿ ಕದ್ರಿ ಶ್ರೀ ಮಂಜುನಾಥ ದೇವಾಲಯದ ರಾಜಾಂಗಣದಲ್ಲಿ ನಡೆಯುತ್ತಿರುವ 12ನೇ ವರ್ಷದ ನುಡಿ ಹಬ್ಬ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ – 2024’ ಅಂಗವಾಗಿ ನ.12ರಂದು ಜರಗಿದ ದಿ. ಬೆಟ್ಟಂಪಾಡಿ ಬಾಳಪ್ಪ ಶೆಟ್ಟಿ ಸಂಸ್ಮರಣಾ ಸಮಾರಂಭದಲ್ಲಿ ‘ಬಾಳಪ್ಪ ಶೆಟ್ಟಿ ಪ್ರಶಸ್ತಿ’ ಸ್ವೀಕರಿಸಿ ಅವರು ಮಾತನಾಡಿದರು.‘ಕುಂಡಾವು ಮೇಳದಲ್ಲಿ ಬಾಳಪ್ಪ ಶೆಟ್ಟರು ಜೊತೆಗಿದ್ದಾಗ ಅವರ ಪ್ರಬುದ್ಧ ಹಾಸ್ಯವನ್ನು ಹತ್ತಿರದಿಂದ ಕಂಡಿದ್ದೆ. ಅವರು ಯಾವತ್ತೂ ರಂಗದಲ್ಲಿ ಅಸಂಬದ್ಧವಾಗಿ ಅಪಹಾಸ್ಯವಾಗುವ ರೀತಿಯಲ್ಲಿ ನಡೆದುಕೊಂಡಿರಲಿಲ್ಲ’ ಎಂದು ಅವರೊಂದಿಗಿನ ಒಡನಾಟವನ್ನು ಸ್ಮರಿಸಿಕೊಂಡರು.ಸಂಸ್ಮರಣ ಜ್ಯೋತಿ ಬೆಳಗಿದ ಮೂಡುಬಿದಿರೆ ಶ್ರೀ ಧನಲಕ್ಷ್ಮಿ ಕ್ಯಾಶ್ಯೂ ಇಂಡಸ್ಟ್ರೀಸ್ ಮಾಲಕ ಶ್ರೀಪತಿ ಭಟ್ ಮಾತನಾಡಿ ‘ಯಕ್ಷಗಾನವಿಂದು ವಿದ್ಯಾವಂತರ ವಲಯದಲ್ಲೂ ಜನಪ್ರಿಯತೆ ಪಡೆದಿದೆ. ಅನೇಕ ಯುವಕರು,ಮಕ್ಕಳು ಹಾಗೂ ಮಹಿಳೆಯರು ಈ ಕ್ಷೇತ್ರದಲ್ಲಿ ಒಳ್ಳೆಯ ಸಾಧನೆ ತೋರುತ್ತಿದ್ದಾರೆ. ಇದಕ್ಕೆ ಕಾರಣ ಯಕ್ಷಗಾನವನ್ನು ಕಟ್ಟಿ ಬೆಳೆಸಿ ಗತಿಸಿ ಹೋದ ಹಿರಿಯ ಕಲಾವಿದರ ಆದರ್ಶ’ ಎಂದು ನುಡಿದರು. ಶ್ರೇಷ್ಠ ಕಾರ್ಯ: ಡಾ.ದಂಡಕೇರಿಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಹಿರಿಯ ನಾಟಕಕಾರ ಡಾ.ಸಂಜೀವ ದಂಡಕೇರಿ ಅವರು ‘ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ ಅನೇಕ ಕಲಾವಿದರು ಕದ್ರಿ ಕ್ಷೇತ್ರಕ್ಕೆ ಸೇರಿದ್ದಾರೆ. ಇಲ್ಲಿ ಅರುವ ಕೊರಗಪ್ಪ ಶೆಟ್ಟರಂತಹ ಹಿರಿಯರನ್ನು ಪ್ರಶಸ್ತಿ ನೀಡಿ ಗೌರವಿಸಿರುವುದು ಯಕ್ಷಾಂಗಣದ ಶ್ರೇಷ್ಠ ಕಾರ್ಯ’ ಎಂದು ಶ್ಲಾಘಿಸಿದರು. ದಿ.ಬೆಟ್ಟಂಪಾಡಿ ಬಾಳಪ್ಪ ಶೆಟ್ಟಿ ಯಕ್ಷ ಪ್ರತಿಷ್ಠಾನದ ಅಧ್ಯಕ್ಷ ಎಂ. ಸುಂದರ ಶೆಟ್ಟಿ ಬೆಟ್ಟಂಪಾಡಿ ಪ್ರಾಸ್ತಾವಿಕವಾಗಿ ಮಾತನಾಡಿ ತಂದೆಯವರೊಂದಿಗಿನ ತನ್ನ ಬಾಲ್ಯದ ದಿನಗಳನ್ನು ಸ್ಮರಿಸಿದರು. ಶ್ಯಾಮಲಾ ಪದ್ಮನಾಭ ಶೆಟ್ಟಿ ಸನ್ಮಾನ ಫಲಕ ವಾಚಿಸಿದರು.ಅರುವ – ಪುಳಿಂಚ ಅಪೂರ್ವ ಜೋಡಿ:ಮುಖ್ಯ ಅತಿಥಿಯಾಗಿ ಭಾಗವಹಿಸಿದ ಖ್ಯಾತ ವಕೀಲ ಮತ್ತು ಪುಳಿಂಚ ಪ್ರತಿಷ್ಠಾನದ ಅಧ್ಯಕ್ಷ ಪುಳಿಂಚ ಶ್ರೀಧರ ಶೆಟ್ಟಿ ಅವರು ಮಾತನಾಡುತ್ತಾ ‘ತಮ್ಮ ತಂದೆಯವರಾದ ಪುಳಿಂಚ ರಾಮಯ್ಯ ಶೆಟ್ಟಿ ಮತ್ತು ಅರುವ ಕೊರಗಪ್ಪ ಶೆಟ್ಟರದ್ದು ಅಪೂರ್ವ ಜೋಡಿ. ಕಾಡಮಲ್ಲಿಗೆಯಂಥ ತುಳು ಪ್ರಸಂಗಗಳಲ್ಲಿ ಅವರೀರ್ವರು ಊರು ಮತ್ತು ಮುಂಬೈಗಳಲ್ಲಿ ಕಲಾಭಿಮಾನಿಗಳನ್ನು ಹುಚ್ಚೆಬ್ಬಿಸಿದ್ದಾರೆ’ ಎಂದರು. ಸಮಾರಂಭದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಸದಸ್ಯೆ ಶಕೀಲಾ ಕಾವ ಮತ್ತು ಹಿರಿಯ ಅರ್ಥಧಾರಿ ಎನ್. ಸಂಜೀವ ರೈ ಬೆಟ್ಟಂಪಾಡಿ ಅತಿಥಿಗಳಾಗಿದ್ದರು. ಯಕ್ಷಾಂಗಣದ ಕಾರ್ಯಾಧ್ಯಕ್ಷ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಸ್ವಾಗತಿಸಿದರು. ಸಂಚಾಲಕ ರವೀಂದ್ರರೈ ಕಲ್ಲಿಮಾರು ಕಾರ್ಯಕ್ರಮ ನಿರೂಪಿಸಿ ಕರುಣಾಕರ ಶೆಟ್ಟಿ ಪಣಿಯೂರು ವಂದಿಸಿದರು. ಪ್ರಧಾನ ಕಾರ್ಯದರ್ಶಿ ತೋನ್ಸೆ ಪುಷ್ಕಳ ಕುಮಾರ್, ಸಂಚಾಲಕಿ ನಿವೇದಿತಾ ಎನ್. ಶೆಟ್ಟಿ, ಕಾರ್ಯದರ್ಶಿಗಳಾದ ಕೆ. ಲಕ್ಷ್ಮೀನಾರಾಯಣ ರೈ ಹರೇಕಳ, ಸುಮಾ ಪ್ರಸಾದ್ ಹಾಗೂ ಬಾಳಪ್ಪ ಶೆಟ್ಟಿ ಪ್ರತಿಷ್ಠಾನದ ಬೆಟ್ಟಂಪಾಡಿ ಪದ್ಮನಾಭ ಶೆಟ್ಟಿ ಮತ್ತು ಡಾ.ಸೂರಜ್ ಶೆಟ್ಟಿ ಉಪಸ್ಥಿತರಿದ್ದರು.‘ಕಚ – ದೇವಯಾನಿ’ ತಾಳಮದ್ದಳೆ:ಸಪ್ತಾಹದ ಎರಡನೇ ದಿನ ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಕಲಾಸಂಘ ಬೆಟ್ಟಂಪಾಡಿ, ಪುತ್ತೂರು ಇವರಿಂದ ‘ಕಚ-ದೇವಯಾನಿ’ ಯಕ್ಷಗಾನ ತಾಳಮದ್ದಳೆ ಜರಗಿತು.

ಪ್ರಾದೇಶಿಕ ವಾರ್ತೆಗಳು

71 ನೇ ಅಖಿಲ ಭಾರತ ಸಹಕಾರ ಸಪ್ತಾಹಮಾಧ್ಯಮ ಕ್ಷೇತ್ರದ ಸಾಧನೆಗಾಗಿ ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ಪ್ರಶಸ್ತಿ

ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹಾಗೂ ಪತ್ರಕರ್ತರ ಗ್ರಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ಮಾಧ್ಯಮ ಕ್ಷೇತ್ರದ ಸಾಧನೆ ಗಾಗಿ ಪತ್ರಿಕಾ ರಂಗದ ಸಾಧಕ ಪ್ರಶಸ್ತಿ ಯನ್ನು ನವೆಂಬರ್ 16 ರಂದು ಕರಾವಳಿ ಉತ್ಸವ ಮೈದಾನ ದಲ್ಲಿ ನಡೆಯುವ 71 ನೇ ಅಖಿಲ ಭಾರತ ಸಹಕಾರ ಸಪ್ತಾಹ ದಲ್ಲಿ ಗಣ್ಯರ ಸಮ್ಮುಖದಲ್ಲಿ ಪ್ರದಾನ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಂಡಳ ಅಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ ಎಂ ಎನ್ ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.ಶ್ರೀನಿವಾಸ್ ನಾಯಕ್ ಇಂದಾಜೆ ಅವರು ಪಬ್ಲಿಕ್ ರಿಲೇಶನ್ ಕೌನ್ಸಿಲ್ ಒಫ್ ಇಂಡಿಯಾ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಚಾಣಕ್ಯ ರಾಷ್ಟ್ರೀಯ ಪ್ರಶಸ್ತಿ ಗೆ ಭಾಜನರಾಗಿದ್ದಾರೆ. ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ, ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಜೂನಿಯರ್ ಚೇಂಬರ್ ಔಟ್ಸ್ ಸ್ಟ್ಯಾಂಡಿಂಗ್ ಯಂಗ್ ಅಚೀವರ್ಸ್ ಅವಾರ್ಡ್ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ.

ಪ್ರಾದೇಶಿಕ ವಾರ್ತೆಗಳು

“ಹೆತ್ತವರು, ಪೋಷಕರು ಮಕ್ಕಳ ಮೇಲೆ ನಿಗಾ ಇರಿಸಬೇಕು”-ಸ್ಪೀಕರ್ ಯು.ಟಿ.ಖಾದರ್.“ ಮಾದಕದ್ರವ್ಯ ವ್ಯಸನಮುಕ್ತ ಮಂಗಳೂರು” ಜಾಥಾಕ್ಕೆ ಚಾಲನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಬಂಟರ ಯಾನೆ ನಾಡವರ ಮಾತೃ ಸಂಘ, ಮಂಗಳೂರು ತಾಲೂಕು ಸಮಿತಿ, ಮಹಿಳಾ ಘಟಕ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನ ಕೇಂದ್ರ ಹಾಗೂ ಎಲ್ಲಾ ಶಾಲಾ ಕಾಲೇಜು ಶಿಕ್ಷಣ ಸಂಸ್ಥೆಗಳ ಸಹಯೋಗದೊಂದಿಗೆ “ಮಾದಕದ್ರವ್ಯ ವ್ಯಸನಮುಕ್ತ ಮಂಗಳೂರು” ಕಾರ್ಯಕ್ರಮದ ಉದ್ಘಾಟನೆ ಗುರುವಾರ ಸಂಜೆ ಎಸ್.ಡಿ.ಎಂ. ಕಾನೂನು ಕಾಲೇಜು ಸಭಾಂಗಣದಲ್ಲಿ ಜರುಗಿತು. ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತಾಡಿದ ಅವರು, “ಮಾದಕ ದ್ರವ್ಯ ವ್ಯಸನದಿಂದ ಮುಕ್ತರಾಗುವುದು ಸುಲಭದ ಮಾತಲ್ಲ. ಯಾಕೆಂದರೆ ಜಿಲ್ಲೆಯಲ್ಲಿ ಮಾದಕ ದ್ರವ್ಯ ಸೇವನೆ ಮತ್ತು ಸಾಗಾಟ ದೊಡ್ಡಮಟ್ಟದಲ್ಲಿ ನಡೆಯುತ್ತಿದೆ. ಆದ್ದರಿಂದ ಇದನ್ನು ತಡೆಯಲು ಸಮಾಜದ ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು. ಹೆತ್ತವರು, ಮನೆಯವರು ಮಕ್ಕಳ ಮೇಲೆ ನಿಗಾ ಇರಿಸಬೇಕು. ಪೊಲೀಸ್ ಇಲಾಖೆಯಲ್ಲಿ ಟೆಸ್ಟಿಂಗ್ ಕಿಟ್ ಸಿಗುತ್ತದೆ ಅದನ್ನು ಮನೆಯಲ್ಲಿಟ್ಟು ತಿಂಗಳಿಗೊಮ್ಮೆ ಪರೀಕ್ಷೆ ಮಾಡುವುದು ಯಾಕೆ ಕಷ್ಟ? ಈ ನಿಟ್ಟಿನಲ್ಲಿ ಜನಜಾಗೃತಿಯಾಗಬೇಕು. ಪ್ರತೀ ಕಾಲೇಜಿನಲ್ಲಿ ಇಂತಹ ಟೆಸ್ಟಿಂಗ್ ನಡೆದಾಗ ಮಕ್ಕಳು ಮಾದಕ ದ್ರವ್ಯ ಸೇವಿಸಲು ಭಯ ಪಡುತ್ತಾರೆ. ವಿದ್ಯಾರ್ಥಿಗಳಿಗೆ ಈ ಬಗ್ಗೆ ಮಾಹಿತಿ ಇದ್ದಲ್ಲಿ ಸಂಬಂಧಪಟ್ಟವರಿಗೆ ಕೊಡಿ ಇದರಿಂದ ಸ್ವಸ್ಥ ಸಮಾಜವನ್ನು ಕಟ್ಟಬಹುದು“ ಎಂದರು.ದಕ್ಷಿಣ ಕನ್ನಡ ಜಿಲ್ಲಾ ಸಂಸದ ಕ್ಯಾಪ್ಟನ್ ಬೃಜೇಶ್ ಚೌಟ ಮಾತಾಡಿ, “ಮಾದಕ ದ್ರವ್ಯ ಮುಕ್ತ ಸಮಾಜದ ನಿರ್ಮಾಣ ನಮ್ಮೆಲ್ಲರ ಬೇಡಿಕೆಯೂ ಹೌದು. ನಾನು ಮೊದಲ ಸಂಸತ್ ಅಧಿವೇಶನದಲ್ಲಿ ಈ ಬಗ್ಗೆ ಧ್ವನಿ ಎತ್ತಿದ್ದೆ. ಇಂದು ಪಂಜಾಬ್ ರಾಜ್ಯವನ್ನು ಡ್ರಗ್ಸ್ ದಂಧೆ ಬೆಂಬಿಡದೆ ಕಾಡುತ್ತಿದೆ. ಅಷ್ಟು ಭೀಕರವಾಗಿ ದಂಧೆ ಎಲ್ಲೆಡೆ ಹರಡಿದೆ. ಗಡಿಯಲ್ಲಿರುವ ಸೈನಿಕನಷ್ಟೇ ದೇಶವನ್ನು ಉಳಿಸುವ ಜವಾಬ್ದಾರಿ ಈ ಮಾದಕ ದ್ರವ್ಯ ವ್ಯಸನದ ವಿರುದ್ಧ ಹೋರಾಡುವವರದ್ದು. ಇದು ದೇವರು ಮೆಚ್ಚುವ ಕೆಲಸ. ಇಂತಹ ಕಾರ್ಯಕ್ರಮಕ್ಕೆ ಮಂಗಳೂರು ಮಾದರಿಯಾಗಬೇಕು“ ಎಂದರು.ಅಜಿತ್ ಕುಮಾರ್ ರೈ ಮಾಲಾಡಿ ಮಾತನಾಡಿ, “ನಮ್ಮ ದೇಶವನ್ನು ನಾಶ ಮಾಡುವ ದುಷ್ಟ ಷಡ್ಯಂತ್ರ ಮಾದಕ ದ್ರವ್ಯ ವ್ಯಸನದಿಂದ ನಡೆಯುತ್ತಿದೆ. ಇದನ್ನು ತಡೆಯಲು ಮನೆಯಲ್ಲಿ ಸಮಾಜದಲ್ಲಿ ಜಾಗೃತಿಯಾಗಬೇಕು. ಮಾದಕ ದ್ರವ್ಯ ಸೇವನೆ, ಮಾರಾಟ ಕುರಿತು ಮಾಹಿತಿ ಇದ್ದಲ್ಲಿ ಸಂಬಂಧಪಟ್ಟವರಿಗೆ ನೀಡಬೇಕು. ಎಲ್ಲರೂ ಒಗ್ಗಟ್ಟಾಗಿ ಇದರ ವಿರುದ್ಧ ಹೋರಾಡಬೇಕು” ಎಂದರು. ಮಂಗಳೂರು ಮೇಯರ್ ಮನೋಜ್ ಕುಮಾರ್ ಮಾತನಾಡಿ, “ಯುವಜನತೆಯನ್ನು ವ್ಯವಸ್ಥಿತವಾಗಿ ಹಾಳು ಮಾಡುವ ಮಾದಕ ದ್ರವ್ಯ ವ್ಯಸನದ ವಿರುದ್ಧ ಹೋರಾಟ ನಿರಂತರವಾಗಿರಬೇಕು” ಎಂದರು.ವೇದಿಕೆಯಲ್ಲಿ ಸಂಚಾಲಕ ವಸಂತ ಶೆಟ್ಟಿ, ಮಂಗಳೂರು ಪಾಲಿಕೆ ಪ್ರತಿಪಕ್ಷ ನಾಯಕ ಪ್ರವೀಣ್ ಚಂದ್ರ ಆಳ್ವ, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಮಾಜಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂ‌ರು, ಆಶಾಜ್ಯೋತಿ ರೈ, ಸದಾಶಿವ ಉಳ್ಳಾಲ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಟ್ರಾಫಿಕ್ ಎಸಿಪಿ ನಜ್ಮಾ ಫಾರೂಕಿ, ಎಸ್.ಡಿ.ಎಂ. ಕಾನೂನು ಕಾಲೇಜು ಪ್ರಾಂಶುಪಾಲ ಡಾ. ತಾರಾನಾಥ, ತಪಸ್ಯ ಫೌಂಡೇಶನ್ ಅಧ್ಯಕ್ಷೆ ಸಬಿತಾ ಆರ್. ಶೆಟ್ಟಿ, ಎಕ್ಕಾರ್ ರತ್ನಾಕರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.ಸಬಿತಾ ಆರ್. ಶೆಟ್ಟಿ ಪ್ರಾಸ್ತಾವಿಕ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು.ಪುಷ್ಪರಾಜ್ ಧನ್ಯವಾದ ಸಮರ್ಪಿಸಿದರು.

ಪ್ರಾದೇಶಿಕ ವಾರ್ತೆಗಳು

ಮದುವೆ ಹಾಲ್ ಬುಕ್ಕಿಂಗ್ ಮಾಡುವಾಗ ಕ್ಯಾಟರಿಂಗ್‍ನವರ ಲೈಸನ್ಸ್ ಪ್ರತಿ ಕಡ್ಡಾಯಗೊಳಿಸುವ ಕ್ರಮ ಶೀಘ್ರ ಜಾರಿಯಾಗಲಿ – ದ.ಕ. ಜಿಲ್ಲಾ ಕ್ಯಾಟರಿಂಗ್ ಮಾಲಕರ ಸಂಘದ ಅಧ್ಯಕ್ಷ ಅಬ್ದುಲ್ ರಶೀದ್ ಹೇಳಿಕೆ.

ಮಂಗಳೂರು: ಮದುವೆ ಹಾಲ್ ಬುಕ್ಕಿಂಗ್ ಮಾಡುವಾಗ ಹಾಲ್‍ನವರು ಕ್ಯಾಟರಿಂಗ್‍ನವರು ಯಾರು ಎಂದು ಕೇಳುತ್ತಾರೆ. ಈ ಸಂದರ್ಭದಲ್ಲಿ ಕ್ಯಾಟರಿಂಗ್‍ನವರ ಹೆಸರು ಬರೆಸಿಕೊಳ್ಳುವಾಗ ಲೈಸನ್ಸ್ ಪ್ರತಿಯನ್ನು ಕೂಡಾ ಹಾಜರು ಪಡಿಸುವಂತೆ ನಿಯಮ, ಪದ್ಧತಿಯನ್ನು ಮದುವೆ ಹಾಲ್‍ನವರು ಕಡ್ಡಾಯವಾಗಿ ಜಾರಿಗೊಳಿಸುವ ಕ್ರಮವನ್ನು ಮಾಡಬೇಕು. ಹಾಗದಲ್ಲಿ ಮಾತ್ರ ಅನಧಿಕೃತ ಕ್ಯಾಟರಿಂಗ್‍ನವರಿಗೆ ಕಡಿವಾಣ ಹಾಕಲು ಸಾಧ್ಯ ಎಂದು ದ.ಕ. ಜಿಲ್ಲಾ ಕ್ಯಾಟರಿಂಗ್ ಮಾಲಕರ ಸಂಘ (ರಿ)ದ ಅಧ್ಯಕ್ಷ ಅಬ್ದುಲ್ ರಶೀದ್‍ರವರು ತಿಳಿಸಿದ್ದಾರೆ.Mp mla’s ನ್ಯೂಸ್ ಜೊತೆ ಮಾತನಾಡಿದ ಅವರು ಶುಭ ಕಾರ್ಯ ಮಾಡುವವರು ಲೈಸನ್ಸ್ ಹೊಂದಿದ ಕ್ಯಾಟರಿಂಗ್‍ನ್ನೇ ಬುಕ್ ಮಾಡಬೇಕೆಂದು ಎಂದಿದ್ದಾರೆ. ಒಂದು ವೇಳೆ ಫುಡ್ ಪಾಯಿಸನ್ ಸಂಭವಿಸಿದರೆ ಹಾಲ್‍ನವರು ಜವಾಬ್ದಾರಿಯಾಗುತ್ತಾರಾ? ಅಂತಹ ಸಂದರ್ಭದಲ್ಲಿ ಎಲ್ಲರೂ ಬೊಟ್ಟು ಮಾಡಿ ತೋರಿಸುವುದು ಅದಕ್ಕೆ ಕಾರಣರಾದ ಕ್ಯಾಟರಿಂಗನ್ನು. ಈ ಕಾರಣಕ್ಕೆ ಸಾರ್ವಜನಿಕರು ಪರವಾನಿಗೆ ಹೊಂದಿರುವ ಅಧಿಕೃತ ಕ್ಯಾಟರಿಂಗ್‍ಗಳಿಗೆ ಆರ್ಡರ್ ಕೊಡಬೇಕು. ಹಾಗಾದಲ್ಲಿ ಮಾತ್ರ ಅಂತಹ ಸಂದರ್ಭದಲ್ಲಿ ಸಂಘ ಮಧ್ಯಪ್ರವೇಶಿಸಿ ಗ್ರಾಹಕರಿಗೆ ನ್ಯಾಯದೊರಕಿಸಿಕೊಡಲು ಸಾಧ್ಯ ಎಂದು ಅಬ್ದುಲ್ ರಶೀದ್‍ರವರು ಹೇಳಿದ್ದಾರೆ.ಈ ಬಗ್ಗೆ ಈಗಾಗಲೇ ಮದುವೆ ಹಾಲ್‍ಗಳ ಮಾಲಕರ ಸಂಘದ ಜೊತೆ ಮಾತಾಡಲಾಗಿದ್ದು, ಜಿಲ್ಲಾಧಿಕಾರಿಗಳು, ಮಹಾನಗರ ಪಾಲಿಕೆಯ ಕಮೀಷನರ್ ರವರ ಗಮನಕ್ಕೂ ತರಲಾಗಿದೆ. ಮದುವೆ ಹಾಲ್‍ಗಳ ಮಾಲಕರ ಸಭೆ ಕರೆದು ಕ್ಯಾಟರಿಂಗ್‍ನವರು ಕಡ್ಡಾಯವಾಗಿ ಲೈಸನ್ಸ್ ಪ್ರತಿಯನ್ನು ಹಾಜರುಪಡಿಸಲೇಬೇಕಾದ ನಿಯಮ, ಪದ್ಧತಿಯನ್ನು ಅನುಷ್ಟಾನಗೊಳಿಸುವತ್ತ ನಮ್ಮ ಸಂಘ ಸತತ ಪ್ರಯತ್ನ ಮಾಡುತ್ತದೆ. ಅನಧಿಕೃತ ಕ್ಯಾಟರಿಂಗ್ ಹಾವಳಿಯನ್ನು ಸಂಪೂರ್ಣವಾಗಿ ಮಟ್ಟಹಾಕುವಲ್ಲಿ ಸಾರ್ವಜನಿಕರ, ಅಧಿಕಾರಿಗಳ, ಮದುವೆ ಹಾಲ್‍ಗಳ ಮಾಲಕರ ಪರಸ್ಪರ ಸಹಕಾರ ಅತ್ಯಗತ್ಯವಾಗಿದೆ. ಒಟ್ಟಾರೆಯಾಗಿ ಹೇಳುವುದಾದರೆ, ಮದುವೆ ಹಾಲ್ ಬುಕ್ ಮಾಡುವಾಗ ಕ್ಯಾಟರಿಂಗ್‍ಗಳ ಲೈಸನ್ಸ್ ಪ್ರತಿ ಹಾಜರುಪಡಿಸುವಿಕೆಯನ್ನು ಕಡ್ಡಾಯವಾಗಿ ಜಾರಿಗೊಳಿಸುವ ಕ್ರಮ ಜಾರಿಯಾಗಲಿ ಎಂದು ಅಬ್ದುಲ್ ರಶೀದ್‍ರವರು ಹೇಳಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ಜಿಲ್ಲಾಮಟ್ಟದ ಪ.ಪೂ. ಕಾಲೇಜುಗಳ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ : ಆಳ್ವಾಸ್‌ಗೆ 19ನೇ ಬಾರಿಗೆ ಅವಳಿ ಪ್ರಶಸ್ತಿ

ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಮಂಗಳೂರು ಹಾಗೂ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜು ಸುಳ್ಯ ಇವರ ಆಶ್ರಯದಲ್ಲಿ ಜರುಗಿದ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಬಾಲಕರ ವಿಭಾಗದಲ್ಲಿ ಮೂಡುಬಿದಿರೆ ತಾಲೂಕನ್ನು ಪ್ರತಿನಿಧಿಸಿದ ಆಳ್ವಾಸ್ ತಂಡವು ಸುಳ್ಯ ತಾಲೂಕನ್ನು ಪ್ರತಿನಿಧಿಸಿದ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜು ತಂಡವನ್ನು 35-20, 35-5 ಅಂಕಗಳಿAದ ಸೋಲಿಸಿ ಪ್ರಶಸ್ತಿಯನ್ನು ಪಡೆಯಿತು. ಬಾಲಕಿಯರ ವಿಭಾಗದಲ್ಲಿ ಮೂಡುಬಿದಿರೆ ತಾಲೂಕನ್ನು ಪ್ರತಿನಿಧಿಸಿದ ಆಳ್ವಾಸ್ ತಂಡವು ಸುಳ್ಯ ತಾಲೂಕನ್ನು ಪ್ರತಿನಿಧಿಸಿದ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜು ಸುಳ್ಯ ತಂಡವನ್ನು 35-12, 35-10 ಅಂಕಗಳಿAದ ಸೋಲಿಸಿ 19ನೇ ಬಾರಿಗೆ ಅವಳಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಆಳ್ವಾಸ್ ಬಾಲಕರ ವಿಭಾಗದಲ್ಲಿ ಆಕಾಶ್ ಉತ್ತಮ ರಕ್ಷಣಾಕಾರ, ಲಿಖಿತ್ ಉತ್ತಮ ಆಕ್ರಮಣಕಾರ ಹಾಗೂ ಬಾಲಕಿಯರ ವಿಭಾಗದಲ್ಲಿ ಲಾಂಛನ ಉತ್ತಮ ರಕ್ಷಣಾಕರ‍್ತಿ, ಶಾಲಿನಿ ಉತ್ತಮ ಆಕ್ರಮಣಕಾರ್ತಿ ಪ್ರಶಸ್ತಿ ಪಡೆದರು. ವಿಜೇತ ಕ್ರೀಡಾಪಟುಗಳಿಗೆ ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವರು ಅಭಿನಂದಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ವಿಟಿಯು ರಾಜ್ಯ ಮಟ್ಟದ ವೇಯ್ಟ್ ಲಿಫ್ಟಿಂಗ್, ದೇಹದಾಢ್ಯ ಸ್ಪರ್ಧೆಆಳ್ವಾಸ್‌ಗೆ ಇಂಜಿನಿಯರ್ ಕಾಲೇಜಿಗೆ ಅವಳಿ ಪ್ರಶಸ್ತಿ, ಯೆನೆಪೋಯ ಪ್ರಶಸ್ತಿ.

ಮೂಡುಬಿದಿರೆ: ಆಳ್ವಾಸ್ ಇಂಜಿನಿಯರಿAಗ್ ಮತ್ತು ತಾಂತ್ರಿಕ ಕಾಲೇಜು ಮಿಜಾರು ಇವರ ಆಶ್ರಯದಲ್ಲಿ ವಿದ್ಯಾಗಿರಿಯಲ್ಲಿ ನಡೆದ ವಿಟಿಯು ರಾಜ್ಯ ಮಟ್ಟದ ವೇಯ್ಟ್ ಲಿಫ್ಟಿಂಗ್ ಮತ್ತು ದೇಹದಾಢ್ಯ ಸ್ಪರ್ಧೆಯಲ್ಲಿ ಬಾಲಕರ ವಿಭಾಗದಲ್ಲಿ ಆಳ್ವಾಸ್ ಅವಳಿ ಪ್ರಶಸ್ತಿಯನ್ನು ಪಡೆದುಕೊಂಡಿತು. ವೇಯ್ಟ್ ಲಿಫ್ಟಿಂಗ್ ನಲ್ಲಿ ದ್ವಿತೀಯ ಸ್ಥಾನವನ್ನು ಎನ್‌ಎಮ್‌ಎಎಮ್‌ಐಟಿ ನಿಟ್ಟೆ, ತೃತೀಯ ಸ್ಥಾನವನ್ನು ಯೆನಪೋಯ ಮೂಡುಬಿದಿರೆ ಇವರು ಪಡೆದುಕೊಂಡರು. ಬಾಲಕಿಯರ ವೇಯ್ಟ್ ಲಿಫ್ಟಿಂಗ್ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಯೆನೆಪೋಯ ಇಂಜಿನಿಯರಿAಗ್ ಮತ್ತು ತಾಂತ್ರಿಕ ಕಾಲೇಜು ಮೂಡುಬಿದಿರೆ, ದ್ವಿತೀಯ ಸ್ಥಾನವನ್ನು ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿ ಬೆಂಗಳೂರು, ತೃತೀಯ ಸ್ಥಾನವನ್ನು ಎನ್‌ಐಇ ಮೈಸೂರು ಪ್ರಶಸ್ತಿಯನ್ನು ಪಡೆಯಿತು. ದೇಹದಾಢ್ಯ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಕೆಎಲ್‌ಎಸ್ ಗೋಗಟೆ ತಾಂತ್ರಿಕ ಕಾಲೇಜು ಬೆಳಗಾವಿ, ತೃತೀಯ ಸ್ಥಾನವನ್ನು ಜಿಎಮ್ ತಾಂತ್ರಿಕ ಕಾಲೇಜು, ದಾವಣಗೆರೆ ಪಡೆದುಕೊಂಡಿತು. ಬೆಸ್ಟ್ ಲಿಫ್ಟರ್ ಬಾಲಕರ ವಿಭಾಗದಲ್ಲಿ ಆಕಾಶ್ ಎಜೆಇಐಟಿ ಮಂಗಳೂರು, ಬೆಸ್ಟ್ ಲಿಫ್ಟರ್ ಬಾಲಕಿಯರ ವಿಭಾಗದಲ್ಲಿ ರಿಕ್ತಕಿರಣ್ ಶ್ರೀನಿವಾಸ ಕಾಲೇಜು ಮಂಗಳೂರು. ಮಿಸ್ಟರ್ ವಿಟಿಯು ಆಳ್ವಾಸಿನ ಭರತ್ ಪ್ರಶಸ್ತಿಯನ್ನು ಪಡೆದರು.ಬಹುಮಾನ ವಿತರಣಾ ಸಮಾರಂಭದಲ್ಲಿ ಆಳ್ವಾಸ್ ಇಂಜಿನಿಯರಿAಗ್ ಮತ್ತು ತಾಂತ್ರಿಕ ಕಾಲೇಜು ಮಿಜಾರಿನ ಪ್ರಾಂಶುಪಾಲರಾದ ಡಾ. ಪೀಟರ್ ಫೆರ್ನಾಂಡಿಸ್, ವಿಟಿಯು ವೀಕ್ಷಕರಾಗಿ ನಿಟ್ಟೆ ಕಾಲೇಜಿನ ಶ್ಯಾಮ್ ಸುಂದರ್ ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

‘ಗದ್ದಿಗೆ’ ಕರಾವಳಿ ಮರಾಟಿ ಸಮಾವೇಶ 2024

ಮೂಡುಬಿದಿರೆ: ಭಾರತದ ರಾಜಕಾರಣ ಸಂವಿಧಾನದ ನಿರ್ದೇಶನ ಹಾಗೂ ತತ್ವಗಳ ಅಡಿಯಲ್ಲಿ ಕೆಲಸ ಮಾಡಿದರೆ ಇನ್ನು ಮುಂದಿನ ಹತ್ತು ವರ್ಷಗಳಲ್ಲಿ ಎರಡನೇ ದರ್ಜೆಯ ಪ್ರಜೆಗಳೆನಿಸಿರುವ ಆದಿವಾಸಿಗಳು ಸಮಾಜದ ಮುಖ್ಯವಾಹಿನಿಗೆ ಬರುವಂತಾಗುತ್ತದೆ. ರಾಜಕಾರಣವನ್ನು ಬದಿಗಿರಿಸಿ ಸಂವಿಧಾನದ ತತ್ವಗಳನ್ನು ಜಾರಿ ಮಾಡುವ ಮೂಲಕ ಸಮಸಮಾಜದ ನಿರ್ಮಾಣ ಸಾಧ್ಯ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ ಎಚ್.ಸಿ.ಮಹಾದೇವಪ್ಪ ಹೇಳಿದರು.ಮೂಡುಬಿದಿರೆ ವಿದ್ಯಾಗಿರಿ ಆಳ್ವಾಸ್‌ನ ನುಡಿಸಿರಿ ಸಭಾಂಗಣದ ದಿವಂಗತ ಜ್ಯೋತಿ ಸುಂದರ ನಾಯ್ಕ ವೇದಿಕೆಯಲ್ಲಿ ಭಾನುವಾರ ನಡೆದ ‘ಗದ್ದಿಗೆ’ ಕರಾವಳಿ ಮರಾಟಿ ಸಮಾವೇಶ 2024 ಉದ್ಘಾಟಿಸಿ ಅವರು ಮಾತನಾಡಿದರು.ಬಾಬಾ ಸಾಹೇಬರ ಮಂತ್ರ- ಶಿಕ್ಷಣ, ಸಂಘಟನೆ ಹಾಗೂ ಹೋರಾಟಬಾಬಾ ಸಾಹೇಬರ ಮಂತ್ರ- ಶಿಕ್ಷಣ, ಸಂಘಟನೆ ಹಾಗೂ ಹೋರಾಟ. ಶಿಕ್ಷಿತರಾಗುವ ಮೂಲಕ ಸಂಘಟಿತ ಹೋರಾಟ ಸಾಧ್ಯ. ಆ ಮೂಲಕ ನಮ್ಮ ನಿರ್ದಿಷ್ಟ ಬೇಡಿಕೆಗಳು ಇಡೇರುತ್ತವೆ. ಹೋರಾಟ ವ್ಯಕ್ತಿತ್ವ, ನೈತಿಕತೆ ಹಾಗೂ ಚರಿತ್ರೆಯನ್ನು ನಿರ್ಮಾಣ ಮಾಡಬಲ್ಲದು ಎಂದು ಅಂಬೇಡ್ಕರ್ ನಂಬಿದ್ದರು. ನಮ್ಮ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಬಾಬಾ ಸಾಹೇಬರು ರಚಿಸಿದ ಸಂವಿಧಾನದಲ್ಲಿದೆ. ಸಂವಿಧಾನವನ್ನು ನಾವು ರಕ್ಷಿಸಿದರೆ ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ ಎಂದರು. ‘ಸಾವಿರಾರು ದೇವರುಗಳು ನಮ್ಮ ಬಂಧನವನ್ನು ಬಿಡಿಸಲು ಸಾಧ್ಯವಾಗದೆ ಇದ್ದಾಗ, ಸಂವಿಧಾನ ಕೊಟ್ಟಿರುವ ಮೀಸಲಾತಿ ನಮ್ಮ ಬಂಧನವನ್ನು ಬಿಡಿಸಿತ್ತು. ಸಂವಿಧಾನ ನಮ್ಮೆಲ್ಲಾ ಸಮಸ್ಯೆಗಳಿಗೆ ಪರಿಹಾರ ಒದಗಿಸಬಲ್ಲ ಸಾಮಾರ್ಥ್ಯವನ್ನು ಹೊಂದಿದೆ ಎಂದು ಅಂದು ಅಂಬೇಡ್ಕರ್ ನುಡಿದ ಮಾತುಗಳನ್ನು ಪುನರುಚ್ಚಿಸಿದರು’.ಸಾರ್ವತ್ರಿಕ ಮೂಲ ಆದಾಯದ ಪರಿಕಲ್ಪನೆಯಲ್ಲಿ ಗ್ಯಾರಂಟಿ ಯೋಜನೆನಮ್ಮ ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿಗಳು ಸಂವಿಧಾನದ ಸಿದ್ದಾಂತಗಳ ಅಡಿಯಲ್ಲಿ ನಿರ್ಮಾಣಗೊಂಡಿವೆ. ಅವು ಯಾವುದೇ ಧರ್ಮ ಜಾತಿಗೆ ಸೀಮಿತವಾಗಿಲ್ಲ. ಸಾರ್ವತ್ರಿಕ ಮೂಲ ಆದಾಯದ ಪರಿಕಲ್ಪನೆಯ ಅಡಿಯಲ್ಲಿ ಅವುಗಳನ್ನು ಜಾರಿಗೊಳಿಸಲಾಗಿದೆ. ಇದು ದೇಶದಲ್ಲಿ ಮಾತ್ರವಲ್ಲದೆ, ಇಡೀ ಜಗತ್ತಿನಲ್ಲೆ ಮೊದಲ ಬಾರಿ ಇಂತಹ ಯೋಜನೆಗಳನ್ನು ಜಾರಿಗೊಳಿಸಿದ ಹಿರಿಮೆ ನಮ್ಮ ಸರ್ಕಾರದು ಎಂದರು.ಮರಾಟಿ ಸಮುದಾಯದ 17 ಬೇಡಿಕೆಗಳು ಈಡೇರಿಸಲು ಪ್ರಯತ್ನಕರಾವಳಿಯ ಮರಾಟಿ ಸಮುದಾಯದ ನ್ಯಾಯಯುತ ಬೇಡಿಕೆಗಳನ್ನು ಸಂವಿಧಾನ ಮತ್ತು ಕಾನೂನಿನ ಚೌಕಟ್ಟಿನಲ್ಲಿ ಪರಿಶೀಲಿಸಿ, ಮುಖ್ಯಮಂತ್ರಿ ಯವರ ಗಮನಕ್ಕೆ ತಂದು ಈಡೇರಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.ಗದ್ದಿಗೆ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ, ಕರಾವಳಿ ಮರಾಟಿ ಸಮಾವೇಶ ನಮ್ಮ ಆವರಣದಲ್ಲಿ ಜರಗುತ್ತಿರುವುದು ಸಂತಸದ ವಿಷಯ. ನಮ್ಮ ಶಿಕ್ಷಣ ಪ್ರತಿಷ್ಠಾನ ಸದಾ ಸಮಾಜದ ಪರಿಕಲ್ಪನೆಯಲ್ಲಿ ಕರ‍್ಯನಿರ್ವಹಿಸುತ್ತಾ ಬಂದಿದೆ. ಮರಾಟಿ ಸಮಾಜ ಸದಾ ಹೋರಾಟ ಹಾಗೂ ಸ್ವಾಭಿಮಾನದ ಮೂಲಕ ಬದುಕಿದವರು ಎಂಬುದು ಅವರ ಇತಿಹಾಸದ ಮೂಲಕ ತಿಳಿಯುತ್ತದೆ. ನಾವು ಯಾವುದೇ ಜಾತಿ ಧರ್ಮದವರಾಗಿದ್ದರೂ, ನಾವು ಈ ಸಮಸ್ತ ಸಮಾಜದ ಭಾಗ ಹಾಗೂ ಈ ದೇಶದ ಪ್ರಜೆ ಎಂಬ ನಮ್ಮಲ್ಲಿ ಸದಾ ಜಾಗೃತವಾಗಿರಬೇಕು ಎಂದರು.ಮುಖ್ಯ ಅತಿಥಿಯ ನೆಲೆಯಲ್ಲಿ ಮಾತನಾಡಿದ ಮೂಲ್ಕಿ- ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಶಾಸಕ ಉಮಾನಾಥ್ ಎ ಕೋಟ್ಯಾನ್, ಸಮಾವೇಶ ಹೊಸ ಇತಿಹಾಸ ಸೃಷ್ಟಿ ಮಾಡಿದೆ. ಸಮುದಾಯದ ನ್ಯಾಯಯುತ ಬೇಡಿಕೆ ಈಡೇರಿಸಲು ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸಲಾಗುವುದು. ವಿದ್ಯೆಗೆ ಯಾವುದೇ ಜಾತಿ, ಧರ್ಮದ ಗಡಿಗಳಿಲ್ಲ. ಪ್ರತಿಯೊಬ್ಬರೂ ವಿದ್ಯಾವಂತರಾಗುವAತೆ ಪ್ರತಿ ಸಮಾಜ ಶ್ರಮಿಸಬೇಕು ಎಂದರು.ಕರ‍್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಜಮ್ಮು ಕಾಶ್ಮೀರ ಸರಕಾರದ ಪ್ರಧಾನ ಕರ‍್ಯದರ್ಶಿ ಹಾಗೂ ಕರಾವಳಿ ಮರಾಟಿ ಸಮಾವೇಶದ ಅಧ್ಯಕ್ಷ ರಾಜೇಶ್ ಪ್ರಸಾದ, ದೇಶ ಸ್ವಾತಂತ್ರ‍್ಯ ಪಡೆದು ಏಳು ದಶಕವಾದರೂ ಮರಾಟಿ ಸಮಾಜ ಹಿಂದುಳಿದಿದೆ. ನಮ್ಮ ಸಮಾಜದ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಒತ್ತು ನೀಡುವ ಅಗತ್ಯತೆ ಇದೆ. ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯವಾಗಿ ನಾವು ಮುಖ್ಯ ವಾಹಿನಿಗೆ ಬರಲು ಶಿಕ್ಷಣ ನಮಗಿರುವ ಪ್ರಮುಖ ಅಸ್ತç ಎಂದರು.ಗದ್ದಿಗೆ ಸ್ಮರಣ ಸಂಚಿಕೆಯನ್ನು ಡಾ ಎಂ ಮೋಹನ ಆಳ್ವ ಬಿಡುಗಡೆಗೊಳಿಸಿದರು. ಕರ‍್ಯಕ್ರಮದಲ್ಲಿ ಪ್ರಮುಖ ಮೂರು ಗೋಷ್ಠಿಗಳನ್ನು ಹಮ್ಮಿಕೊಳ್ಳಲಾಯಿತು. ಮೊದಲನೆ ಗೋಷ್ಠಿಯಲ್ಲಿ ಶಿಕ್ಷಣ ಮತ್ತು ಯುವಜನತೆ ವಿಷಯದ ಕುರಿತು ಡಾ ಎಂ ಮೋಹನ್ ಆಳ್ವ ಮಾತನಾಡಿದರು. ಎರಡನೇ ಗೋಷ್ಠಿಯಲ್ಲಿ ಮರಾಟಿಗರ ಆಚಾರ ವಿಚಾರ ಮತ್ತು ಸಂಸ್ಕಾರ ವಿಷಯದ ಕುರಿತು ನ್ಯಾಯವಾದಿ ಎನ್‌ಎಸ್ ಮಂಜುನಾಥ ವಿಷಯ ಮಂಡಿಸಿದರು. ಕೊನೆಯ ಗೋಷ್ಠಿ ಮರಾಟಿಗರ ಸಮಸ್ಯೆ ಮತ್ತ ಸವಾಲುಗಳು ಕುರಿತು ಉಚ್ಛನ್ಯಾಲಯದ ನ್ಯಾಯವಾದಿ ಪ್ರವೀಣಕುಮಾರ ಮುಗುಳಿ ಮಾತನಾಡಿದರು. ಮರಾಟಿ ಭಾಷೆ ಉಳಿಸುವುದು ಮತ್ತು ಬೆಳೆಸುವುದು ವಿಷಯದಲ್ಲಿ ದೈಹಿಕ ಶಿಕ್ಷಕಿ ರತಿ ಪ್ರಭಾಕರ ನಾಯ್ಕ ಉಪನ್ಯಾಸ ನೀಡಿದರು. ಪದ್ಮಶ್ರೀ ರಾಷ್ಟç ಪ್ರಶಸ್ತಿ ಪುರಸ್ಕೃತರಾದ ಅಮೈ ಮಹಾಲಿಂಗ ನಾಯ್ಕರನ್ನು ಸನ್ಮಾನಿಸಲಾಯಿತು.ಮಾಜಿ ಸಚಿವ ಅಭಯಚಂದ್ರ ಜೈನ್, ಉದ್ಯಮಿ ಬರೋಡಾ ಶಶಿಧರ ಶೆಟ್ಟಿ, ಕೇಂದ್ರ ಸರ್ಕಾರದ ನಿವೃತ್ತ ಕೃಷಿ ನಿರ್ದೇಶಕ ಡಾ.ಬಿ.ಜಿ.ನಾಯ್ಕ, ಬೆಂಗಳೂರು ಮರಾಟಿ ಸಂಘದ ಅಧ್ಯಕ್ಷೆ ಶೋಭಾವತಿ ಎಂ.ಟಿ., ದಕ್ಷಿಣ ಜಿಲ್ಲಾ ಮರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷ ಎನ್.ವಿಶ್ವನಾಥ ನಾಯ್ಕ, ಜಿಲ್ಲಾ ಮರಾಟಿ ಸಂರಕ್ಷಣಾ ಸಮಿತಿ ಅಧ್ಯಕ್ಷ ಅಶೋಕ್ ನಾಯ್ಕ ಕೆದಿಲ, ಸಮ್ಮೇಳನದ ಸಂಚಾಲಕ ಡಾ.ಬಾಲಕೃಷ್ಣ ಸಿ.ಎಚ್., ಕೂಡ್ಲಿ ಮರಾಟಿ ಸಮಾಜದ ಅಧ್ಯಕ್ಷ ರಾಮಚಂದ್ರ ನಾಯ್ಕ್, ಕೆ. ಚಂದ್ರಶೇಖರ ನಾಯ್ಕ್, ಎಸ್. ಎಸ್. ಪರಮೇಶ್ವರ, ಸಮ್ಮೇಳನದ ಸಹಸಂಚಾಲಕ ಪ್ರಕಾಶ್ ನಾಯ್ಕ ಮೊದಲಾದವರು ಇದ್ದರು. ಸಮ್ಮೇಳನದ ಕಾರ್ಯಾಧ್ಯಕ್ಷ ರಾಮಚಂದ್ರ ಕೆಂಬಾರೆ ಅವರು ಮನವಿ ವಾಚಿಸಿದರು.ಮರಾಟಿ ಪ್ರತಿಭೆಗಳಿಂದ ವಿವಿಧ ಸಾಂಸ್ಕೃತಿಕ ಕರ‍್ಯಕ್ರಮಗಳು ಜರುಗಿದವು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳಿಂದ ವಿಶೇಷ ವೈವಿಧ್ಯಮಯ ಕರ‍್ಯಕ್ಮ ನಡೆಯಿತು.ಸಮಾವೇಶದ ಗೌರವಾಧ್ಯಕ್ಷ ಡಾ.ಕೆ.ಸುಂದರ ನಾಯ್ಕ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಶಂಕರ ನಾಯ್ಕ ವಂದಿಸಿದರು. ಉಪನ್ಯಾಸಕ ಪ್ರಕಾಶ ನಾಯ್ಕ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ಮಾನವತೆಯ ಮಹಾ ಬೆಳಕು: ಸ್ವಾಮಿ ವಿವೇಕಾನಂದರು: ಕು. ಅಕ್ಷಯಾ ಗೋಖಲೆ. ವಿವೇಕವಾಣಿ ಸರಣಿ ಉಪನ್ಯಾಸ ಕಾರ್ಯಕ್ರಮದ ನಲ್ವತ್ತನೇ ಉಪನ್ಯಾಸ

“ಸ್ವಾಮಿ ವಿವೇಕಾನಂದರು ಭಾರತದ ಮಾನವೀಯತೆಯ ಹಾಗೂ ಪ್ರಜ್ಞೆಯ ಶಾಶ್ವತ ಬೆಳಕಾಗಿ ಉಳಿದಿದ್ದಾರೆ. ಇಡೀ ವಿಶ್ವಕ್ಕೆ ಭಾರತೀಯ ತತ್ವಜ್ಞಾನ ಮತ್ತು ಸನಾತನ ಧರ್ಮದ ಮಹತ್ವವನ್ನು ಪರಿಚಯಿಸಿದ ಈ ಮಹಾನ್ ಯೋಗಿ, ತನ್ನ ಸಂದೇಶಗಳಿAದ ಜನರ ಮನಸ್ಸಿನಲ್ಲಿ ಹೊಸ ಹುಮ್ಮಸ್ಸು ಉಂಟುಮಾಡಿದರು. “ಉತ್ತಿಷ್ಠತ, ಜಾಗ್ರತ!” ಎಂಬ ನಿನಾದದಲ್ಲಿ ಪ್ರತಿಫಲಿಸಿದಂತೆ ಅವರು ಜೀವನದ ಪ್ರತಿ ಕ್ಷಣವನ್ನು ಸಾರ್ಥಕತೆಯಿಂದ, ಸಾಧನೆಯ ದಾರಿಗೆ ಬೆಳೆಸಲು ಪ್ರೇರೇಪಿಸಿದರು”.ಸ್ವಾಮಿ ವಿವೇಕಾನಂದರು ದೈವಸಾಕ್ಷಾತ್ಕಾರವನ್ನು ಮಾತ್ರವಲ್ಲ, ಮಾನವ ಸೇವೆಯನ್ನು ಸಹ ಪ್ರಧಾನ ಧರ್ಮವೆಂದು ಸಾರಿದರು. “ನೀವು ಬಡವರ ಸೇವೆ ಮಾಡುತ್ತಿರುವಾಗ, ಆ ದೇವರೇ ನಿಮ್ಮ ಮುಂದೆ ನಿಂತಿರುವರು” ಎಂಬ ಅವರ ಸಂದೇಶ, ಧರ್ಮವನ್ನು ಕೇವಲ ದೇವಾಲಯದ ಭಿತ್ತಿಗಳ ಒಳಗೆ ಮಾತ್ರವಲ್ಲ, ಸಾಮಾಜಿಕ ಜೀವನದ ಪ್ರತಿಯೊಂದು ಅಂಶದಲ್ಲೂ ಪ್ರತಿಷ್ಠಾಪಿಸುವಂತೆ ತೋರಿಸಿತು. ಇಂದು ಸ್ವಾಮಿ ವಿವೇಕಾನಂದರ ಶಕ್ತಿ, ಧೈರ್ಯ, ಮತ್ತು ತತ್ವದ ಬೆಳಕು ಎಲ್ಲರಿಗೂ ಹೊಸ ಬೆಳಕಿನಂತಾಗಿದೆ. ಅವರ “ವಿಶ್ವಸಮಾಧಾನ”ದ ದೃಷ್ಟಿಕೋನ ನಮಗೆ ಸಹಾನುಭೂತಿ, ಸಹಬಾಳ್ವೆ ಮತ್ತು ಜಗತ್ತಿಗೆ ಒಗ್ಗಟ್ಟಿನ ಸಂದೇಶವನ್ನು ನೀಡುತ್ತದೆ.” ಎಂದು ಕಾರ್ಕಳದ ಉಪನ್ಯಾಸಕರಾದ ಕು. ಅಕ್ಷಯಾ ಗೋಖಲೆಯವರು ಹೇಳಿದರು.ಮಂಗಳೂರು ವಿಶ್ವವಿದ್ಯಾಲಯದ ಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ನಡೆಯುತ್ತಿರುವ ವಿವೇಕವಾಣಿ ಸರಣಿ ಉಪನ್ಯಾಸ ಕಾರ್ಯಕ್ರಮದ ನಲ್ವತ್ತನೇ ಉಪನ್ಯಾಸದಲ್ಲಿ “ಮಹಾ ಬೆಳಕು ಸ್ವಾಮಿ ವಿವೇಕಾನಂದರ ಜೀವನ – ಸಂದೇಶ” ಎಂಬ ವಿಷಯದ ಕುರಿತು ಅವರು ಮಾತನಾಡಿದರು. ಈ ಕಾರ್ಯಕ್ರಮವು ಮಂಗಳೂರಿನ ತ್ರಿಶಾ ಕಾಲೇಜ್ ಆಫ್ ಕಾಮರ್ಸ್ & ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ಜರುಗಿತು.ಈ ಸಂದರ್ಭದಲ್ಲಿ ಮಂಗಳೂರಿನ ತ್ರಿಶಾ ಕಾಲೇಜ್ ಆಫ್ ಕಾಮರ್ಸ್ & ಮ್ಯಾನೇಜ್ಮೆಂಟ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಮಂಜುನಾಥ ಕಾಮತ್ ಎಂ, ತ್ರಿಶಾ ಸಂಧ್ಯಾ ಕಾಲೇಜಿನ ಪ್ರೊ. ಸುಪ್ರಭಾ ಎಂ, ತ್ರಿಶಾ ಸಮೂಹ ಸಂಸ್ಥೆಯ ಶೈಕ್ಷಣಿಕ ಸಲಹೆಗಾರರಾದ ಡಾ. ನಾರಾಯಣ್ ಕಾಯರ್ ಕಟ್ಟೆ, ತ್ರಿಶಾ ಕ್ಲಾಸೆಸ್ ಮಂಗಳೂರಿನ ಮುಖ್ಯಸ್ಥರಾದ ಪ್ರೊ. ಯಶಸ್ವಿನಿ ಯಶಪಾಲ್, ಕಾರ್ಯಕ್ರಮ ಸಂಯೋಜಕರಾದ ಪ್ರೊ. ನಮೃತಾ ಮತ್ತು ಉಪನ್ಯಾಸಕರು ಮತ್ತು ಪದವಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಮಂಗಳೂರು ವಿಶ್ವವಿದ್ಯಾಲಯದ ಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರದ ಸಂಯೋಜಕರಾದ ಡಾ. ಚಂದ್ರು ಹೆಗ್ಡೆ ಸ್ವಾಗತಿಸಿ, ಕಾರ್ಯಕ್ರಮ ಸಂಯೋಜಕರಾದ ಪ್ರೊ. ವಿದ್ಯಾಲಕ್ಷ್ಮಿ ವಂದಿಸಿದರು. ವಿದ್ಯಾರ್ಥಿನಿಯಾದ ಇಂಚರ ತಂತ್ರಿ ಕಾರ್ಯಕ್ರಮವನ್ನು ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ಅನಧಿಕೃತ ಕ್ಯಾಟರಿಂಗ್‍ಗಳ ವಿರುದ್ಧ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಮತ್ತು ಜನಪ್ರತಿನಿಧಿಗಳಿಗೆ ದೂರು. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ದ. ಕ. ಜಿಲ್ಲಾ ಕ್ಯಾಟರಿಂಗ್ ಮಾಲಕರ ಸಂಘ (ರಿ) ಮಂಗಳೂರು.

ಮಂಗಳೂರು:ಮಂಗಳೂರಿನಲ್ಲಿ 500 ಮತ್ತು ಇಡೀ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 2,000 ಅನಧಿಕೃತ ಕ್ಯಾಟರಿಂಗ್‍ಗಳಿದ್ದು, ಇದರಿಂದಾಗಿ ನೊಂದಾಯಿತ ಕ್ಯಾಟರಿಂಗ್ ಮಾಲಕರಿಗೆ ತುಂಬಾ ತೊಂದರೆ ಮತ್ತು ತೀವ್ರ ನಷ್ಟ ಉಂಟಾಗುತ್ತಿದೆ. ಈ ಬಗ್ಗೆ ಅನಧಿಕೃತ ಕ್ಯಾಟರಿಂಗ್‍ಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ವಿನಂತಿಸಿ ದ.ಕ. ಜಿಲ್ಲಾ ಕ್ಯಾಟರಿಂಗ್ ಮಾಲಕರ ಸಂಘ (ರಿ) ಮಂಗಳೂರು ಇವರು ಜಿಲ್ಲಾಧಿಕಾರಿ ಸಹಿತ ಮಂಗಳೂರು ಮಹಾನಗರ ಪಾಲಿಕೆಯ ಕಮೀಷನರ್, ಜಿಲ್ಲಾ ಆರೋಗ್ಯಾಧಿಕಾರಿ, ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯ ಎಲ್ಲಾ ಶಾಸಕರುಗಳಿಗೆ ಮನವಿ ಸಲ್ಲಿಸಿದ್ದಾರೆ. ಇದರ ಕುರಿತು ಮಂಗಳೂರು ಪ್ರೆಸ್ ಕ್ಲಬ್‍ನಲ್ಲಿ ಇಂದು (ನವೆಂಬರ್ 13ರಂದು) ಕರೆದಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾಹಿತಿ ನೀಡಿದ ದ.ಕ ಜಿಲ್ಲಾ ಕ್ಯಾಟರಿಂಗ್ ಮಾಲಕರ ಸಂಘ(ರಿ) ಮಂಗಳೂರು ಇದರ ಅಧ್ಯಕ್ಷ ಅಬ್ದುಲ್ ರಶೀದ್‍ರವರು ಜಿಲ್ಲೆಯಲ್ಲಿ ನೋಂದಾಯಿತ ಅಂದರೆ ಅಧಿಕೃತ 250 ಕ್ಯಾಟರಿಂಗ್‍ಗಳಿವೆ ಎಂದು ಹೇಳಿದರು. ನೋಂದಾಯಿತ ಕ್ಯಾಟರಿಂಗ್ ಮಾಲಕರಿಗೆ ಟ್ರೇಡ್ ಲೈಸನ್ಸ್ ಮತ್ತು ಎಫ್‍ಎಸ್‍ಎಸ್‍ಎಐ ರಿಜಿಸ್ಟ್ರೇಶನ್ ಪರವಾನಿಗೆ ಇದ್ದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯಿಂದ ಎಫ್‍ಎಸ್‍ಎಸ್‍ಎಐ ರಿಜಿಸ್ಟ್ರೇಶನ್ ಇದೆ. ಇದಕ್ಕಾಗಿ ವರ್ಷಕ್ಕೆ 20,000ದಿಂದ 50,000 ಸಾವಿರ ತನಕ ಟ್ರೇಡ್ ಲೈಸನ್ಸ್ ಶುಲ್ಕ ಮತ್ತು ರೂ. 2000ದವರೆಗೆ ಎಫ್‍ಎಸ್‍ಎಸ್‍ಎಐ ಲೈಸನ್ಸ್ ಗಾಗಿ ನೀಡಲಾಗುತ್ತದೆ. ಇಷ್ಟೆಲ್ಲ ಪರವಾನಿಗೆ ಮಾಡಿಕೊಂಡು ಗ್ರಾಹಕರಿಗೆ ಕೈಗೆಟಕುವ ದರದಲ್ಲಿ ಅತ್ಯಂತ ಗುಣಮಟ್ಟದ ಆಹಾರ ಪದಾರ್ಥಗಳನ್ನು ಅಧಿಕೃತ ಕ್ಯಾಟರಿಂಗ್ ಮಾಲಕರು ಪೂರೈಕೆ ಮಾಡುತ್ತಿದ್ದರೂ ಕೆಲವು 2000ಕ್ಕೂ ಅಧಿಕ ಅಕ್ರಮ ಮತ್ತು ಅನಧಿಕೃತ ಕ್ಯಾಟರಿಂಗ್ ಮಾಲಕರ ಹಾವಳಿಯಿಂದಾಗಿ ತುಂಬಾ ಸಂಕಷ್ಟಕ್ಕೆ ಒಳಗಾಗಬೇಕಾದ ಪರಿಸ್ಥಿತಿ ಒದಗಿ ಬಂದಿದೆ. ಈ ಬಗ್ಗೆ ತಕ್ಷಣ ಕಾನೂನುಕ್ರಮ ಕೈಗೊಂಡು ತಮಗೆ ನ್ಯಾಯ ದೊರಕಿಸಿಕೊಡಬೇಕೆಂದು ದ.ಕ. ಜಿಲ್ಲಾ ಕ್ಯಾಟರಿಂಗ್ ಮಾಲಕರ ಸಂಘ (ರಿ) ಸಂಬಂಧಪಟ್ಟ ಅಧಿಕಾರಿಗಳಿಗೆ ಮತ್ತು ಜನಪ್ರತಿನಿಧಿಗಳಿಗೆ ಮನವಿ ನೀಡಿ ವಿನಂತಿಸಿದೆ.ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು ಅಬ್ದುಲ್ ರಶೀದ್, ಗೌರವ ಅಧ್ಯಕ್ಷರು ಸುಧಾಕರ್ ಕಾಮತ್, ಮಾಜಿ ಅಧ್ಯಕ್ಷರು ರಾಜಗೋಪಾಲ್ ರೈ, ದೀಪಕ್ ಕೋಟ್ಯಾನ್, ಅನೀಸ್ ಶೇಕ್ ಮೊಹಮ್ಮದ್. ಉಪಾಧ್ಯಕ್ಷರು ವಿಜಯ್ ಕುಮಾರ್, ರಾಜೇಶ್ ಕೊಂಚಾಡಿ, ಪ್ರಧಾನ ಕಾರ್ಯದರ್ಶಿ ಕರುಣಾಕರ್ ಪಡಿಯಾರ್, ಖಜಾಂಚಿ ಪ್ರಕಾಶ್ ಲೋಬೊ, ಸ್ಥಾಪಕ ಸದಸ್ಯರು ಬಾಲಕೃಷ್ಣ ಕುಕ್ಯಾನ್, ಸಂಘಟನಾ ಕಾರ್ಯದರ್ಶಿ ದೇವಿ ಪ್ರಸಾದ ಶೆಟ್ಟಿ,ಕೇಟರಿಂಗ್ ಮಾಲಕರ ಸಂಘ ಬಂಟ್ವಾಳ ವಲಯದ ಅಧ್ಯಕ್ಷರು ನಾರಾಯಣ ಸುವರ್ಣ, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಪೂಜಾರಿ ಹಾಗೂ ಇತರ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.ಜಿಲ್ಲಾಧಿಕಾರಿಗೆ ದೂರು:ದ.ಕ. ಜಿಲ್ಲಾ ಕ್ಯಾಟರಿಂಗ್ ಅಸೋಸಿಯೇಷನ್ ವತಿಯಿಂದ ವಿವಿಧ ಬೇಡಿಕೆಗಳನ್ನು ಅಗ್ರಹಿಸಿ ದ.ಕ. ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಅವರಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಅಬ್ದುಲ್ ರಶೀದ್, ಗೌರವಾಧ್ಯಕ್ಷ ಸುಧಾಕರ ಕಾಮತ್, ಉಪಾಧ್ಯಕ್ಷ ವಿಜಯಕುಮಾರ್, ಕಾರ್ಯದರ್ಶಿ ಸುಧಾಕರ ಪಡಿವಾಳ್, ಮಾಜಿ ಅಧ್ಯಕ್ಷ ರಾಜಗೋಪಾಲ್ ರೈ ಹಾಗೂ ಸದಸ್ಯರು ಉಪಸ್ಥಿತಿ ಇದ್ದರು.

ಪ್ರಾದೇಶಿಕ ವಾರ್ತೆಗಳು

ಯಕ್ಷಾಂಗಣದ ತಾಳಮದ್ದಳೆ ಸಪ್ತಾಹ 2024 – ಸಂಘಟನಾ ಪರ್ವ

ಮಂಗಳೂರು: ‘ಯಕ್ಷಾಂಗಣ ಮಂಗಳೂರು’ ಯಕ್ಷಗಾನ ಚಿಂತನ – ಮಂಥನ ಮತ್ತು ಪ್ರದರ್ಶನ ವೇದಿಕೆ ಮತ್ತು ಕರ್ನಾಟಕ ಯಕ್ಷಭಾರತಿ ಪುತ್ತೂರು ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಕಲಾ ಸಂಭ್ರಮವಾಗಿ ನಡೆಸಲ್ಪಡುವ ಹನ್ನೆರಡನೇ ವರ್ಷದ ನುಡಿಹಬ್ಬ ‘ಯಕ್ಷಗಾನ ತಾಳಮದ್ದಳೆ ¸ ಸಪ್ತಾಹ – 2024’ ದ್ವಾದಶ ಸರಣಿಯು ಇದೇ 2024 ನವೆಂಬರ್ 11 ರಿಂದ 17ರ ವರೆಗೆ ಕದ್ರಿ ಶ್ರೀ ಮಂಜುನಾಥ ದೇವಾಲಯದ ರಾಜಾಂಗಣದಲ್ಲಿ ಜರಗಲಿದೆ. ‘ಸಂಘಟನಾ ಪರ್ವ’ ಎಂಬ ಹೆಸರಿನಲ್ಲಿ ಜಿಲ್ಲೆಯ ವಿವಿಧ ಯಕ್ಷಗಾನ ಸಂಘಗಳ ಸಹಕಾರದಿಂದ ಈ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.ನವೆಂಬರ 11 ರಿಂದ ಕ್ರಮವಾಗಿ ಹವ್ಯಾಸಿ ಬಳಗ ಕದ್ರಿ (ರಾಜಾ ದಂಡಕ), ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಕಲಾಸಂಘ ಬೆಟ್ಟಂಪಾಡಿ (ಕಚ – ದೇವಯಾನಿ), ಶ್ರೀ ಕಾಳಿಕಾಂಬಾ ಯಕ್ಷಗಾನ ಕಲಾ ಸೇವಾ ಸಂಘ, ಉಪ್ಪಿನಂಗಡಿ (ಸೈಂಧವ ವಧೆ), ಶ್ರೀ ವಾಣೀವಿಲಾಸ ಯಕ್ಷ ಬಳಗ, ಕಟೀಲು (ತ್ರಿಶಂಕು ಸ್ವರ್ಗ), ಅಂಬುರುಹ ಯಕ್ಷಸದನ ಪ್ರತಿಷ್ಠಾನ ಬೊಟ್ಟಿಕೆರೆ (ಬಿನದ ದಾಂಪತ್ಯ); ಶ್ರೀ ಚಾಮುಂಡೇಶ್ವರೀ ಯಕ್ಷಕೂಟ ಕಣಿಯೂರು ಕನ್ಯಾನ (ಸುದರ್ಶನೋಪಖ್ಯಾನ); ಕರ್ನಾಟಕ ಯಕ್ಷಭಾರತಿ ಪುತ್ತೂರು (ಸತೀ ಶಕುಂತಲೆ) ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸಹಕಾರದಲ್ಲಿ ‘ರೆಂಜೆ ಬನೊತ ಲೆಕ್ಯೆಸಿರಿ’ ಹೀಗೆ ವಿನೂತನ ಪ್ರಸಂಗಗಳು ಪ್ರಸ್ತುತಿಗೊಳ್ಳಲಿವೆ.

Scroll to Top