ಪ್ರಾದೇಶಿಕ ವಾರ್ತೆಗಳು

ಪ್ರಾದೇಶಿಕ ವಾರ್ತೆಗಳು

ಚಾಣಕ್ಯ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರಿಂದ ಅಭಿನಂದನೆ.

ಮಂಗಳೂರು, ಪಬ್ಲಿಕ್ ರಿಲೇಶನ್ ಸೊಸೈಟಿ ಒಫ್ ಇಂಡಿಯಾ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಚಾಣಕ್ಯ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಾಗಿರುವ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆ ಅವರು ಭಾನುವಾರ ಧರ್ಮಸ್ಥಳ ದಲ್ಲಿ ಅಭಿನಂದಿಸಿದರು. ಇನ್ನಷ್ಟು ಸಾಧನೆ ಗಳು ಆಗಲಿ ಎಂದು ಶುಭ ಹಾರೈಸಿದರು .

ಪ್ರಾದೇಶಿಕ ವಾರ್ತೆಗಳು

ಮಂಗಳೂರು: ಉಳಾಯಿಬೆಟ್ಟು ಕಿರುಸೇತುವೆ ಬದಿಯಲ್ಲಿ ತಾತ್ಕಾಲಿಕ ರಸ್ತೆ ನಿರ್ಮಾಣಕ್ಕೆ ಬೇಡಿಕೆ : ನವೆಂಬರ್ 13ರಂದು “ಸಾರ್ವಜನಿಕ ಪ್ರತಿಭಟನೆ..!

ಮಂಗಳೂರು: ತಾಲೂಕಿನ ಉಳಾಯಿಬೆಟ್ಟು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಸಾಲೆ ಮೇಲ್ಮನೆಯಲ್ಲಿರುವ, ಸದ್ಯ ಶಿಥಿಲಗೊಂಡಿದೆ ಎಂದು, ಘನ ವಾಹನ ಸಂಚಾರ ನಿಷೇಧಿಸಲ್ಪಟ್ಟಿರುವ ಉಳಾಯಿಬೆಟ್ಟುವಿನ ಕಿರು ಸೇತುವೆಗೆ ಪರ್ಯಾಯವಾಗಿ ಅಲ್ಲೇ ಪಕ್ಕದಲ್ಲಿ ತಾತ್ಕಾಲಿಕ ಮಣ್ಣಿನ ರಸ್ತೆ ನಿರ್ಮಿಸಲು ಸಾರ್ವಜನಿಕರು ನಿಶ್ಚಯಿಸಿರುತ್ತಾರೆ. ಆದರೆ ಉಳಾಯಿಬೆಟ್ಟು -ಪೆರ್ಮಂಕಿ-ಮಲ್ಲೂರು ತೀರಾ -ಬಿ.ಸಿ.ರೋಡ್ -ಅರ್ಕುಳ- ಅಡ್ಯಾರ್‌ಗೆ ರಾಷ್ಟ್ರೀಯ ಹೆದ್ದಾರಿ 169 ರಿಂದ ನೇರ ಸಂಪರ್ಕ ಹೊಂದಿರುವ ಈ ಕಿರು ಸೇತುವೆ, ನಿಷೇಧಗೊಂಡಿರುವ ಹಿನ್ನಲೆಯಲ್ಲಿ, ಈ ಭಾಗದ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು, ಮಹಿಳೆಯರು ಮತ್ತು ವಯೋವೃದ್ಧರ ಈ ಮಾರ್ಗದಲ್ಲಿ ಸಾರ್ವಜನಿಕ ಕಷ್ಟದಾಯಕವಾಗಿದೆ. ಕಿರು ಸೇತುವೆ ನಿಷೇಧದ ಬಳಿಕ ವಾಹನಗಳು (KSRTC ಬಸ್ಸುಗಳು ಮತ್ತು ಖಾಸಾಗಿ ಶಾಲಾ ಕಾಲೇಜು ಬಸ್ಸುಗಳು)ಸ್ಥಗಿತಗೊಂಡಿರುವುದೇ ಇದಕ್ಕೆ ಮುಖ್ಯ ಕಾರಣವಾಗಿದೆ ಎಂದು ಹೇಳಿದ್ದಾರೆ.ಈ ಬಾಗದಲ್ಲಿ ಕಿರು ಸೇತುವೆಗೆ ಪರ್ಯಾಯ ಮಣ್ಣಿನ ರಸ್ತೆ ನಿರ್ಮಿಸುವರೇ, ಜಿಲ್ಲಾಡಳಿತಕ್ಕೆ ಮೂರು ಬಾರಿ ಮನವಿ ಸಲ್ಲಿಸಲಾಗಿದ್ದು ಜೊತೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರೊಂದಿಗೆ ಖುದ್ದಾಗಿ ಸಮಸ್ಯೆಯ ಒಳಹೊರವುವನ್ನು ವಿವರಿಸಲಾಗಿತ್ತು.ಆದರೆ ಈವರೆಗೆ ಪರ್ಯಾಯ ವ್ಯವಸ್ಥೆಯ ಬಗ್ಗೆ ಯಾವುದೇ ಉತ್ತರ ಬಂದಿರುವುದಿಲ್ಲ. ಹಾಗಾಗಿ ಸ್ಥಳೀಯ ನಾಗರೀಕರು, ಶಾಲಾ ವಿದ್ಯಾರ್ಥಿಗಳು, ಮಹಿಳೆಯರು, ಕೂಲಿ ಕಾರ್ಮಿಕರು ಹಾಗೂ ಇತರ ಎಲ್ಲರೂ ಸೇರಿಕೊಂಡು ನವೆಂಬರ್ 13ರಂದು ರಾಷ್ಟ್ರೀಯ ಹೆದ್ದಾರಿ 169ರ ಪರಾರಿಯಲ್ಲಿ “ಸಾರ್ವಜನಿಕ ಪ್ರತಿಭಟನೆ” ನಡೆಸಲು ಉದ್ದೇಶಿಸಿದ್ದೇವೆ. ಈ ಸಾರ್ವಜನಿಕರು, ಎಲ್ಲಾ ಸಂಘ ಸಂಸ್ಥೆಗಳು ಪೂರ್ಣವಾಗಿ ಈಗಾಗಲೇ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.ಪತ್ರಿಕಾಗೋಷ್ಠಿಯಲ್ಲಿ ಇಸ್ಮಾಯಿಲ್,ಮಹಮ್ಮದ್ ಶರೀಫ್,ವಿಶ್ವನಾಥ್ ಶೆಟ್ಟಿ, ದೀನೇಶ್ ಪಲಿಮಾರ್,ದಿನೇಶ್ ಕುಮಾರ್,ಸಂತೋಷ್ ಪೆರ್ಮಂಕಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ಮತದಾನದಿಂದ ಪ್ರಜಾಪ್ರಭುತ್ವಕ್ಕೆ ಭದ್ರ ಬುನಾದಿ – ಪಿ.ಬಿ.ಹರೀಶ್ ರೈ

ಮಂಗಳೂರು: ನಗರದ ಕಾವೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಚುನಾವಣಾ ಸಾಕ್ಷರತಾ ಕ್ಲಬ್, ವಿದ್ಯಾರ್ಥಿ ಪರಿಷತ್ಮತ್ತು ಐಕ್ಯುಎಸಿ ಸಹಯೋಗದಲ್ಲಿ ನವ ಮತದಾರರ ನೋಂದಣಿ ವಿಶೇಷ ಅಭಿಯಾನ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ನಡೆಯಿತು.ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಮಾತನಾಡಿ ” ಸ್ವತಂತ್ರ ಭಾರತದಲ್ಲಿ ಯಶಸ್ವಿಯಾಗಿ ಸಾರ್ವತ್ರಿಕ ಚುನಾವಣೆಗಳು ನಡೆದಿದ್ದು, ಮತದಾನ ಪ್ರಜಾಪ್ರಭುತ್ವಕ್ಕೆ ಭದ್ರ ಬುನಾದಿ ಕಲ್ಪಿಸಿದೆ. ಭವಿಷ್ಯದ ರೂವಾರಿಗಳಾಗಿರುವ ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಬಲವರ್ಧನೆಗೆ ನಿರ್ಣಾಯಕ ಕೊಡುಗೆ ನೀಡಬೇಕು ಎಂದರು.ವಿದ್ಯಾರ್ಥಿಗಳು ಮತದಾರರಾಗಿ ನೋಂದಣಿಯಾಗುವುದರ ಜತೆಗೆ ಚುನಾವಣಾ ಸಾಕ್ಷರತಾ ಕ್ಲಬ್ ಮೂಲಕ ಮತದಾನದ ಬಗ್ಗೆ ಜನಸಾಮಾನ್ಯರಲ್ಲಿ ಇನ್ನಷ್ಟು ಜಾಗೃತಿ ಮೂಡಿಸಬೇಕು ಎಂದು ಅವರು ಹೇಳಿದರು.ಕಾಲೇಜಿನಪ್ರಾಂಶುಪಾಲೆ ಡಾ.ಗೀತಾ.ಎಂ.ಎಲ್. ಅಧ್ಯಕ್ಷತೆ ವಹಿಸಿದ್ದರು .ಐಕ್ಯುಎಸಿ ಸಂಯೋಜಕಿ ಡಾ.ತೆರೆಜ್ ಪಿರೇರಾ, ಚುನಾವಣಾ ಸಾಕ್ಷರತಾ ಕ್ಲಬ್ ನ ಸಂಯೋಜಕಿಪ್ರಮೀಳಾ ರಾವ್ .ಕೆ., ರಾಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಮಮತಾ .ಯು., ಕಾವೂರು ಸರ್ಕಾರಿ ಪ.ಪೂ.ಕಾಲೇಜಿನ ಉಪನ್ಯಾಸಕ ಸಚೇತ್ ಸುವರ್ಣ, ವಿದ್ಯಾರ್ಥಿ ಪ್ರತಿನಿಧಿ ರಕ್ಷಿತಾ ಉಪಸ್ಥಿತರಿದ್ದರು.ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಡಾ.ಸಂತೋಷ್ ಪಿಂಟೊ ಸ್ವಾಗತಿಸಿ, ವಿದ್ಯಾರ್ಥಿನಿ ಲಿಖಿತಾ ವಂದಿಸಿದರು . ವಿದ್ಯಾರ್ಥಿ ಪ್ರತಿನಿಧಿ ಪ್ರದೀಪ್ ಕಾರ್ಯಕ್ರಮ ನಿರೂಪಿಸಿದರು ………………………

ಪ್ರಾದೇಶಿಕ ವಾರ್ತೆಗಳು

ಕ್ಯಾನ್ಸರ್ ಮತ್ತು ಮಾನಸಿಕ ಆರೋಗ್ಯ ಕಲ್ಯಾಣ ಕುರಿತು ಜಾಗೃತಿ ಕಾರ್ಯಕ್ರಮ

ಮಂಗಳೂರು: ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘ ಇದರ ಮಹಿಳಾ ವಿಭಾಗ, ಕೆಎಂಸಿ ಆಸ್ಪತ್ರೆ ಮಂಗಳೂರು ಅವರೊಂದಿಗೆ ಸಹಯೋಗದಲ್ಲಿ, ಲಯನ್ಸ್ ಕ್ಲಬ್ ಮಂಗಳೂರು ನೇತ್ರಾವತಿ ಮತ್ತು ತಪಸ್ಯಾ ಫೌಂಡೇಶನ್ ಅವರ ಬೆಂಬಲದೊಂದಿಗೆ, ಮಹಿಳಾ ಸ್ತನ ಮತ್ತು ಗರ್ಭಾಶಯದ ಕ್ಯಾನ್ಸ‌ರ್ ಮತ್ತು ಮಾನಸಿಕ ಆರೋಗ್ಯ ಕಲ್ಯಾಣ ಕುರಿತು ಜಾಗೃತಿ ಕಾರ್ಯಕ್ರಮವನ್ನು ಯೆಯ್ಯಡಿಯ ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘದ ಸಭಾಂಗಣದಲ್ಲಿ ನಡೆಯಿತು. ಮಹಿಳೆಯರಲ್ಲಿ ಆರೋಗ್ಯದ ಮಹತ್ವದ ವಿಷಯಗಳ ಅರಿವು ಮೂಡಿಸುವುದು ಮತ್ತು ಆರೋಗ್ಯಕರ ಜೀವನಕ್ರಮವನ್ನು ಪ್ರೋತ್ಸಾಹಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು.ಡಾ. ಲಿನ್ಸೆಲ್, ಕೆಎಂಸಿ ಮಂಗಳೂರು “ಸ್ತನ ಮತ್ತು ಗರ್ಭಾಶಯದ ಕ್ಯಾನ್ಸ‌ರ್ ಮತ್ತು HPV ಲಸಿಕೆ ಜಾಗೃತಿ” ಕುರಿತು ಉಪನ್ಯಾಸ ನಡೆಸಿದರು. ಡಾ. ಪೂನಂ ಸಂತೋಷ್ ಕೆಎಂಸಿ ಮಂಗಳೂರು ಒತ್ತಡ ನಿರ್ವಹಣೆ ಮತ್ತು ಮಾನಸಿಕ ಆರೋಗ್ಯವನ್ನು ಬೆಳೆಸಲು ಅಗತ್ಯವಾದ ತಂತ್ರಗಳನ್ನು ಹಂಚಿಕೊಂಡರು.ಈ ಕಾರ್ಯಕ್ರಮವು ಮಹಿಳೆಯರಿಗೆ ಅವರ ಆರೋಗ್ಯದ ಬಗ್ಗೆ ಅಗತ್ಯ ಜ್ಞಾನವನ್ನು ವೃದ್ಧಿಸಲು ಅಮೂಲ್ಯವಾದ ಅವಕಾಶವನ್ನು ಒದಗಿಸಿತು. “ಆರೋಗ್ಯವು ಬಲವಾದ ಸಮುದಾಯದ ಮೂಲವಾಗಿದೆ ಎಂದು ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷರಾದ ವಿಶಾಲ್ ಎಲ್ ಸಾಲಿಯಾನ್ ಅವರು ಅಭಿಪ್ರಾಯಪಟ್ಟರು.ಕಾರ್ಯಕ್ರಮದಲ್ಲಿ ತಪಸ್ಯಾ ಫೌಂಡೇಶನ್ ಸ್ಥಾಪಕಿ ಮುಖ್ಯ ನಿಬಂಧಕಿ ಸಬಿತಾ ಆರ್. ಶೆಟ್ಟಿ ಮತ್ತು ಲಯನ್ಸ್ ಕ್ಲಬ್ ಮಂಗಳೂರು ನೇತ್ರಾವತಿಯ ಅಧ್ಯಕ್ಷೆ ನಿರ್ಮಲಾ ಪ್ರಮೋದ್ ಮತ್ತು ಡಿಸಿಐಎಎಮ್ ಮಹಿಳಾ ವಿಭಾಗದ ಮಾಜಿ ಅಧ್ಯಕ್ಷೆ ಶ್ಯಾಮಲಾ ಶಾಸ್ತ್ರಿ ಮತ್ತು ಕುಸುಮ ದೇವಾಡಿಗ ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ಶ್ರೀನಿವಾಸ್ ಇಂದಾಜೆಗೆ ಪಬ್ಲಿಕ್ ರಿಲೇಶನ್ ಕೌನ್ಸಿಲ್ ಒಫ್ ಇಂಡಿಯಾ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಚಾಣಕ್ಯ ರಾಷ್ಟ್ರೀಯ ಪ್ರಶಸ್ತಿ!

ಮಂಗಳೂರು: ನವ ದೆಹಲಿಯ ಪಬ್ಲಿಕ್ ರಿಲೇಶನ್ ಕೌನ್ಸಿಲ್ ಒಫ್ ಇಂಡಿಯಾ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಚಾಣಕ್ಯ ರಾಷ್ಟ್ರೀಯ ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ಕೇಂದ್ರ ವಿದ್ಯುತ್ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವಾಲಯದ ರಾಜ್ಯ ಸಚಿವ ಶ್ರೀಪಾದ್ ಎಸ್ಸೋ ನಾಯಕ್ ಪ್ರದಾನ ಮಾಡಿದರು.ಮಂಗಳೂರು ನಗರದ ಹೋಟೆಲ್ ಮೋತಿಮಹಲ್ ನಲ್ಲಿ ಪಬ್ಲಿಕ್ ರಿಲೇಶನ್ ಸೊಸೈಟಿ ಒಫ್ ಇಂಡಿಯಾ ಸಂಸ್ಥೆಯ ವಿಶ್ವ ಸ0ವಹನ ಪ್ರಶಸ್ತಿ ಪ್ರದಾನ ಸಮಾರಂಭ ದಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು.ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ಉತ್ತಮ ಸಾರ್ವಜನಿಕ ಸಂಪರ್ಕಕ್ಕಾಗಿ ನರೇಶ್ ಕುಮಾರ್ ಸ್ಮರಣಾರ್ಥ ಚಾಣಕ್ಯ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು.ಶ್ರೀನಿವಾಸ್ ನಾಯಕ್ ಇಂದಾಜೆ ಅವರು ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಬಳಿಕ ಬ್ರ್ಯಾಂಡ್ ಮಂಗಳೂರು, ಪತ್ರಕರ್ತರ ಗ್ರಾಮ ವಾಸ್ತವ್ಯದ ಮೂಲಕ ಸಮಾಜ ಮುಖಿ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಕುತ್ಲುರು ಸರಕಾರಿ ಶಾಲೆ ಅಭಿವೃದ್ಧಿ, ಮಂಗಳೂರು ಬಿಜೈ ಕಾಪಿಕಾಡ್ ಅಂಗನವಾಡಿ ಕೇಂದ್ರದ ಅಭಿವೃದ್ಧಿಗೂ ಶ್ರಮಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ಶ್ರೀಬ್ರಹ್ಮಸ್ಥಾನಂ ಕ್ಷೇತ್ರಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ವೈ. ಯನ್. ಸಾಲಿಯಾನ್ ಆಯ್ಕೆ.

ಮಂಗಳೂರು: ಮಂಗಳೂರು ನಗರದ ಬೋಳೂರಿನಲ್ಲಿ ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರು ಪ್ರಾಣ ಪ್ರತಿಷ್ಠೆಗೈದಿರುವ ವಿಶಿಷ್ಠ ದೇವಾಲಯ ಶ್ರೀ ಬ್ರಹ್ಮಸ್ಥಾನಂಕ್ಷೇತ್ರ. 2008ರಲ್ಲಿ ಸ್ಥಾಪಿಸಲ್ಪಟ್ಟ ಈ ದೇವಸ್ಥಾನದ ಅಭಿವೃದ್ಧಿ ಹಾಗೂ ಸಮರ್ಪಕ ನಿರ್ವಹಣೆಗಾಗಿ ನೂತನ ಕ್ಷೇತ್ರಾಭಿವೃದ್ಧಿ ಸಮಿತಿಯನ್ನು ಮಠದ ಮುಖ್ಯಸ್ಥರಾದ ಸ್ವಾಮಿನಿ ಮಂಗಳಾಮೃತ ಪ್ರಾಣ ರವರು ರಚಿಸಿರುತ್ತಾರೆ.ಡಾ.ಜೀವರಾಜ್ ಸೊರಕೆ ಗೌರವ ಸಲಹೆಗಾರರಾಗಿರುತ್ತಾರೆ.ಗೌರವಾಧ್ಯಕ್ಷರಾಗಿ ಶ್ರೀಮತಿ ಶ್ರುತಿ ಸನತ್ ಹೆಗ್ಡೆ, ಸಲಹೆಗಾರರಾಗಿ ಡಾ.ವಸಂತ ಕುಮಾರ್ ಪೆರ್ಲ ಮತ್ತು ಸೇವಾಸಮಿತಿಯ ಅಧ್ಯಕ್ಷ ಸುರೇಶ್ ಅಮೀನ್ ಸೇವೆ ಸಲ್ಲಿಸಲಿದ್ದಾರೆ. ಶ್ರೀ ಬ್ರಹ್ಮಸ್ಥಾನಂ ಕ್ಷೇತ್ರಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ವೈ.ಎನ್.ಸಾಲಿಯಾನ್,ಉಪಾಧ್ಯಕ್ಷರುಗಳಾಗಿ ನವೀನ್ ಪಿ ವಿ ಟಿ. ಮತ್ತು ಸುಧಾಕರ್ ಭಟ್.ಕಾರ್ಯದರ್ಶಿ ಡಾ.ದೇವದಾಸ್ ಪುತ್ರನ್ ಮತ್ತು ಕೋಶಾಧಿಕಾರಿಯಾಗಿ ಶಿಲ್ಪಾ ರೈ ಆಯ್ಕೆಯಾಗಿದ್ದಾರೆ. ಪ್ರವೀಣಚಂದ್ರ ಶರ್ಮ,ಟಿ.ಎ.ಅಶೋಕನ್, ರವಿ ಅಲೆವೂರಾಯ ಮತ್ತು ಮಹಾಬಲ ಚೌಟರವರು ಕಾರ್ಯಕಾರಿ ಸದಸ್ಯರರಾಗಿರುತ್ತಾರೆ ಎಂದು ಮಠದ ಪ್ರಕಟಣೆ ತಿಳಿಸಿದೆ.

ಪ್ರಾದೇಶಿಕ ವಾರ್ತೆಗಳು

ಅಸ್ತ್ರ ಸಂಸ್ಥೆಯಿಂದ “ಪ್ರಾಣಾಸ್ತ್ರ” ಟ್ರಸ್ಟ್ ಸ್ಥಾಪನೆ, ಆಂಬುಲೆನ್ಸ್ ಕೊಡುಗೆ.

ಮಂಗಳೂರು: “ಸುಮಾರು 5 ವರ್ಷಗಳ ಹಿಂದೆ ಸ್ಥಾಪಿಸಿರುವ ಅಸ್ತ್ರ ಅನ್ನುವ ಸಂಸ್ಥೆಯು ಇಂದು ಉದ್ಯಮದ ಜೊತೆಗೆ ಯುವ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಅನೇಕ ಕ್ರಿಕೆಟ್‌, ಕಬಡ್ಡಿ ಇನ್ನಿತರ ಕ್ರೀಡೆಗಳಲ್ಲಿ ತೊಡಗಿಸಿಕೊಂಡಿದ್ದು ತಮ್ಮ ಸಂಸ್ಥೆಯ ಲಾಭದ ಒಂದಂಶವನ್ನು ಸಮಾಜ ಸೇವೆಗಾಗಿ ಬಳಸುತ್ತಾ ಬಂದಿದ್ದೇವೆ. ನಮ್ಮ ಸಂಸ್ಥೆಯು 5ನೇ ವರ್ಷ ಪೂರೈಸಿರುವ ಈದಿನಗಳಲ್ಲಿ ಸಮಾಜಕ್ಕಾಗಿ ವಿಶೇಷ ಕೆಲಸವನ್ನು ಮಾಡಬೇಕು ಎನ್ನುವ ನಿಟ್ಟಿನಲ್ಲಿ ಕಡುಬಡವರಿಗಾಗಿ ಪ್ರಾಣಾಸ್ತ್ರ ಎಂಬ ಟ್ರಸ್ಟ್ ಮೂಲಕ ಈ ಸಂಸ್ಥೆ ಸಹಕರಿಸಲಿದೆ, ಇದರ ಜೊತೆಗೆ ಟ್ರಸ್ಟ್ ಹೆಸರಿನಲ್ಲಿ ನ.14ರಂದು ಉಚಿತ ಅಂಬ್ಯುಲೆನ್ಸ್ ವ್ಯವಸ್ಥೆಯನ್ನು ಮಾಡಿದ್ದೇವೆ“ ಎಂದು ಸಂಸ್ಥೆಯ ಸಿಇಒ ಲಂಚುಲಾಲ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. ”ಇದೇ ಸಂದರ್ಭದಲ್ಲಿ ಸೌಹಾರ್ದಯುತವಾಗಿ ಹಿಂದೂ ಮುಸ್ಲಿಂ ಕ್ರೈಸ್ತ ಧರ್ಮದ ಮೂರು ಬಡ ಕುಟುಂಬದಜೋಡಿಗೆ ಸಾಮೂಹಿಕ ಮದುವೆಯನ್ನು ಮಾಡಲು ನಿರ್ಧರಿಸಲಾಗಿದೆ. ಕಡುಬಡವರ ಮದುವೆಯ ಸಂಪೂರ್ಣ ಖರ್ಚು ಜೊತೆಗೆ ಜೀವನ ನಿರ್ವಹಣೆಗೆ 50000 ರೂ. ಕೊಡಲಾಗುವುದು, ಹಿಂದೂ ಜೋಡಿ ಮುಂದೆ ಬಂದಿದ್ದು ಮುಸ್ಲಿಂ, ಕ್ರೈಸ್ತ ಜೋಡಿ ಅವರಾಗಿಯೇ ಮುಂದೆ ಬಂದಲ್ಲಿ ಖುಷಿಯ ವಿಚಾರ. ಬಡವರ ಹಿತಕ್ಕಾಗಿ ಸಮಾಜ ಸೇವೆಗಾಗಿ ಮಹತ್ತರ ಕಾರ್ಯದಲ್ಲಿ ನಮ್ಮ ಸಂಸ್ಥೆಯು ತೊಡಗಿಕೊಂಡಿದ್ದು ಇದಕ್ಕೆ ಜನರು ಸಹಕಾರ ನೀಡಬೇಕು“ ಎಂದರು.ಪತ್ರಿಕಾಗೋಷ್ಟಿಯಲ್ಲಿ ಪ್ರಕಾಶ್ ಶೆಟ್ಟಿ ಧರ್ಮನಗರ, ಯತೀಶ್ ಪೂಜಾರಿ, ಚರಣ್ ರಾಜ್ ಬಂದ್ಯೋಡು ಮತ್ತಿತರರು ಉಪಸ್ಥಿತರಿದ್ದರು. ಚಿತ್ರಗಳು :ಸತೀಶ್ ಕಾಪಿಕಾಡ್

ಪ್ರಾದೇಶಿಕ ವಾರ್ತೆಗಳು

ಡಿ 7ರಂದು ಮುಂಬೈಯಲ್ಲಿ  ವಿಶ್ವಬಂಟರ ಸಮಾಗಮ

 ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಮುಂಬೈ ಬಂಟರ ಸಂಘದ ಸಹಯೋಗದಲ್ಲಿ  ಮುಂಬೈಯ ಕುರ್ಲಾ ಪೂರ್ವದ ಬಂಟರ ಭವನದಲ್ಲಿ  ಜಾಗತಿಕ ಮಟ್ಟದ  “ವಿಶ್ವ ಬಂಟರ ಸಮಾಗಮ”ಬೃಹತ್ ಕಾರ್ಯಕ್ರಮ ಡಿಸೆಂಬರ್ 7 ರಂದು ನಡೆಯಲಿದೆ.    ಕಳೆದ ವರ್ಷ ಉಡುಪಿಯಲ್ಲಿ ಎರಡು ದಿನಗಳ ವಿಶ್ವಮಟ್ಟದ ಬಂಟ ಸಮ್ಮಿಲನವನ್ನು ಆಯೋಜಿಸಿಕೊಂಡಿದ್ದು ಸುಮಾರು 75 ಸಾವಿರಕ್ಕೆ  ಮಿಕ್ಕಿ ಸಮಾಜ ಬಾಂಧವರು ಪಾಲ್ಗೊಂಡು ಯಶಸ್ವಿಯಾಗಿ ನಡೆದಿದೆ. ಮಂಬಯಿ ನಗರದಲ್ಲಿ 3 ವರ್ಷಗಳ ಹಿಂದೆ ಒಕ್ಕೂಟದ ಬಂಟ ಸಮ್ಮಿಲನ ಯಶಸ್ವಿಯಾಗಿ ನಡೆದಿದೆ. ಈ ವರ್ಷ ಮುಂಬೈ ಮಹಾನಗರದಲ್ಲಿ ಜಾಗತಿಕ ಮಟ್ಟದ ಬಂಟ ಸಮಾಜದ ಬಂಧುಗಳನ್ನು ಒಟ್ಟು  ಸೇರಿಸುವ ಮಹಾನ್ ಉದ್ದೇಶದೊಂದಿಗೆ ಡಿಸೆಂಬರ್ 7ರಂದು ಶನಿವಾರ ಕುರ್ಲಾಪೂರ್ವದ  ಬಂಟರ ಭವನದಲ್ಲಿ “ವಿಶ್ವ ಬಂಟರ ಸಮಾಗಮ” ಜಾಗತಿಕ ಮಟ್ಟದ ಕಾರ್ಯಕ್ರಮ  ಬೆಳಿಗ್ಗೆಯಿಂದ ಸಂಜೆವರೆಗೆ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಈ ಬೃಹತ್ ಕಾರ್ಯಕ್ರಮವನ್ನು ಮುಂಬೈ ಬಂಟರ ಸಂಘದ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿ ಅವರು ಉದ್ಘಾಟಿಸಲಿದ್ದಾರೆ, ಮುಖ್ಯ ಅತಿಥಿಯಾಗಿ ಒಕ್ಕೂಟದ ವಿಶೇಷ ಮಹಾ ನಿರ್ದೇಶಕರ.  ಆರ್ಗಾನಿಕ್ ಗ್ರೂಪ್ ಆಫ್ ಇಂಡಸ್ಟ್ರೀಸ್ ನ  ಸಿಎಂಡಿ  ತೋನ್ಸೆ  ಆನಂದ ಎಮ್.ಶೆಟ್ಟಿ, ಮುಂಬೈ ಹೇರಂಭ ಇಂಡಸ್ಟ್ರೀಸ್ ನ ಅಧ್ಯಕ್ಷ, ಮಹಾದಾನಿ ಕನ್ಯಾನ‌ ಸದಾಶಿವ ಶೆಟ್ಟಿ  ಪಾಲ್ಗೊಳ್ಳಲಿದ್ದು ಹಾಗೂ ಪ್ರತಿಷ್ಠಿತ ಉದ್ಯಮಿಗಳು ಸಮಾಜ ಸೇವಕರು ಜಗತ್ತಿನ ವಿವಿಧ ಬಂಟಸಂಘಗಳ ಅಧ್ಯಕ್ಷರು ಸೇರಿಕೊಳ್ಳಲಿದ್ದಾರೆ. ಸಂಜೆ ನಡೆಯಲಿರುವ ಸಮಾರೋಪ ಕಾರ್ಯಕ್ರಮವನ್ನು ಒಕ್ಕೂಟದ ಮಹಾದಾನಿ ಹೇರಂಬ ಇಂಡಸ್ಟ್ರೀಸ್‍ನ ಆಡಳಿತ ನಿರ್ದೇಶಕರಾದ  ಕನ್ಯಾನ ಸದಾಶಿವ ಶೆಟ್ಟಿ ಉದ್ಘಾಟಿಸಲಿದ್ದಾರೆ ಮುಖ್ಯ ಅತಿಥಿಯಾಗಿ ಎಮ್  ಆರ್ ಜಿ ಗ್ರೂಪ್  ಆಡಳಿತ ನಿರ್ದೇಶಕ ಡಾ. ಕೆ ಪ್ರಕಾಶ್ ಶೆಟ್ಟಿ ಪಾಲ್ಗೊಳ್ಳಲಿದ್ದಾರೆ ಹಾಗೂ ವಿಶ್ವದ ಬಂಟರ ಸಂಘಗಳ ನೂತನ ಅಧ್ಯಕ್ಷರುಗಳಿಗೆ ಸನ್ಮಾನ ನಡೆಯಲಿದೆ ಎಂದು ಐಕಳ ಹರೀಶ್ ಶೆಟ್ಟಿ ತಿಳಿಸಿದರು.ಮುಂಬೈ  ಮಹಾನಗರದ ಬಂಟರ ಸಂಘಗಳಿಗೆ ನೃತ್ಯ ಸ್ಪರ್ಧೆ ನಡೆಯಲಿದೆ.ಕಾರ್ಯಕ್ರಮದ ಯಶಸ್ಸಿಗೆ ವಿವಿಧ ಸಮಿತಿಗಳನ್ನು ರಚಿಸಲಾಗಿದೆ.ಕಾರ್ಯಕ್ರಮ  ಹೊಸತನ ನೀಡುವಲ್ಲಿ ರೂಪರೇಷೆಯನ್ನು ತಯಾರಿಸಲಾಗಿದೆ.ವಿಶ್ವಬಂಟರ ಸಮಾಗಮದಲ್ಲಿ ಬಂಟ ಸಮಾಜದ ಪ್ರಮುಖರು ಭಾಗವಹಿಸಲಿದ್ದಾರೆ. ವಿಶ್ವದಾದ್ಯಂತ ಇರುವ ಬಂಟರ ಸಂಘಗಳ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ.ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರನ್ನು ಸನ್ಮಾನಿಸಲಾಗುವುದು.‌ ಸಿನಿಮಾ ತಾರೆಯರು, ಧಾರ್ಮಿಕ‌ ಮುಖಂಡರು, ಉದ್ಯಮಿಗಳು, ರಾಜಕೀಯ ಮುಖಂಡರು, ಕೈಗಾರಿಕೋದ್ಯಮಿಗಳು, ಭಾಗವಹಿಸಲಿದ್ದಾರೆ.ನೃತ್ಯ ಸ್ಪರ್ಧೆಯ ಜೊತೆಗೆ ಆದರ್ಶದಂಪತಿ, ಮಿಸ್ಟರ್ ಬಂಟ್, ಮಿಸ್ ಬಂಟ್ ಕಾರ್ಯಕ್ರಮವೂ ಇದೆ.ಬೆಳಿಗ್ಗೆ ಮಹಾಸಭೆ- ಅಧಿವೇಶನ ನಡೆಯಲಿದೆ. ಬೆಳಿಗ್ಗೆಯಿಂದ ರಾತ್ರಿವರೆಗೆ ನಡೆಯುವ ಕಾರ್ಯಕ್ರಮಾದಲ್ಲಿ ಸುಮಾರು 5 ಸಾವಿರಕ್ಕೂ ಮಿಕ್ಕಿದ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.ಬೆಳಿಗ್ಗೆ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪೂಜೆ ನಡೆದು ಬಳಿಕ ಮೆರವಣಿಗೆಯ ಮೂಲಕ ಗಣ್ಯರನ್ನು ಸಮಾರಂಭಕ್ಕೆ ಕರೆದೊಯ್ಯಲಾಗುವುದು. ಈ ಅದ್ದೂರಿಯ ಬೃಹತ್ ಕಾರ್ಯಕ್ರಮದಲ್ಲಿ ಒಕ್ಕೂಟದ ವಿಶೇಷ ಮಹಾ ನಿರ್ದೇಶಕ  ತೋನ್ಸೆ ಆನಂದ್ ಎಂ. ಶೆಟ್ಟಿ, ಮಹಾ ನಿರ್ದೇಶಕ  ಡಾ. ಕೆ.ಪ್ರಕಾಶ್ ಶೆಟ್ಟಿ, ಮಹಾ-ನಿರ್ದೇಶಕ   ಶಶಿಧರ್ ಶೆಟ್ಟಿ ಬರೋಡ, ಮಹಾ-ನಿರ್ದೇಶಕಕೆ. ಎಂ. ಶೆಟ್ಟಿ ವಿ. ಕೆ. ಗ್ರೂಪ್ಸ್, ನಿರ್ದೇಶಕ ಕೆ.ಡಿ ಶೆಟ್ಟಿ ಮಹಾ-ನಿರ್ದೇಶಕ ರಾಜೇಶ್ ಎನ್. ಶೆಟ್ಟಿ ರಾಕ್ಷೀ  ಡೆವಲಪರ್ಸ್,  ಮಹಾ-ನಿರ್ದೇಶಕ  ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ , ನಿರ್ದೇಶಕ ರವಿ ಶೆಟ್ಟಿ ಅಂಕಲೇಶ್ವರ, ಮಹಾ-ನಿರ್ದೇಶಕ  ಅರವಿಂದ್ ಆನಂದ್ ಶೆಟ್ಟಿ , ಮಹಾ-ನಿರ್ದೇಶಕ ಅಶೋಕ್ ಎಸ್. ಶೆಟ್ಟಿ ಮೆರಿಟ್, ಮಹಾ-ನಿರ್ದೇಶಕ ರಾಜೇಂದ್ರ ವಿ. ಶೆಟ್ಟಿ  ಪಂಜುರ್ಲಿ ಗ್ರೂಪ್ಸ್, ನಿರ್ದೇಶಕ ಕೆ. ಡಿ. ಶೆಟ್ಟಿ, ನಿರ್ದೇಶಕ ರಘುರಾಮ್ ಕೆ. ಶೆಟ್ಟಿ, ನಿರ್ದೇಶಕ ಶ್ರೀಮತಿ ಉಮಕೃಷ್ಣ ಶೆಟ್ಟಿ, ನಿರ್ದೇಶಕ ಡಾ. ಆರ್. ಕೆ. ಶೆಟ್ಟಿ, ನಿರ್ದೇಶಕ ರವಿನಾಥ್ ವಿ. ಶೆಟ್ಟಿ ಅಂಕಲೇಶ್ವರ್, ನಿರ್ದೇಶಕ ಶಿವಚಂದ್ರ ಶೆಟ್ಟಿ, ನಿರ್ದೇಶಕ ಮಹೇಶ್ ಎಸ್. ಶೆಟ್ಟಿ, ನಿರ್ದೇಶಕ ಮುನಿಯಾಲ್ ಉದಯ್ ಕುಮಾರ್ ಶೆಟ್ಟಿ, ನಿರ್ದೇಶಕ ಸಂತೋಷ್ ಶೆಟ್ಟಿ ಪುಣೆ, ನಿರ್ದೇಶಕ ರತ್ನಾಕರ್ ಎಂ. ಶೆಟ್ಟಿ ವಸೈ, ನಿರ್ದೇಶಕ ಶಶಿಧರ್ ಶೆಟ್ಟಿ ಇನ್ನಂಜೆ,ಮಾಜಿ ಸಂಸದ ಗೋಪಾಲ ಶೆಟ್ಟಿ, ಎಸ್ ಸಿಡಿಸಿಸಿ ಬ್ಯಾಂಕ್ ನ‌ ಅಧ್ಯಕ್ಷ ಡಾ ಎಂಎನ್ ರಾಜೇಂದ್ರ ಕುಮಾರ್, ಡಾ ಎ ಜೆ ಶೆಟ್ಟಿ, ಡಾ ಎ ಸದಾನಂದ ಶೆಟ್ಟಿ, ಡಾ ಎಂ ಮೋಹನ್ ಆಳ್ವ, ಪಟ್ಲ ಸತೀಶ ಶೆಟ್ಟಿ, ಮಹಾ ಪೋಷಕರು, ಪೋಷಕರು, ದಾನಿಗಳು, ಗೌರವಾನ್ವಿತ ಆಡಳಿತ ಮಂಡಳಿ ಸದಸ್ಯರು, ಹಾಗೂ ಕಾರ್ಯಕಾರಿ ಸಮಿತಿ ಸರ್ವ ಸದಸ್ಯರುಗಳು  ಭಾಗವಹಿಸಲಿದ್ದಾರೆ.ಪತ್ರಿಕಾಗೋಷ್ಠಿಯಲ್ಲಿ ಐಕಳ ಹರೀಶ್ ಶೆಟ್ಟಿ ಅಧ್ಯಕ್ಷರು, ಕರ್ನಿರೆ ವಿಶ್ವನಾಥ ಶೆಟ್ಟಿ,ಉಪಾಧ್ಯಕ್ಷರು, ಜಯಕರ ಶೆಟ್ಟಿ ಇಂದ್ರಾಳಿ,ಗೌರವ ಕಾರ್ಯದರ್ಶಿ, ಉಳ್ತೂರು ಮೋಹನದಾಸ್ ಶೆಟ್ಟಿ ಕೋಶಾಧಿಕಾರಿ,ಚಂದ್ರಹಾಸ ಡಿ.ಶೆಟ್ಟಿ ಜೊತೆ ಕಾರ್ಯದರ್ಶಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟ(ri) ಮಂಗಳೂರು ಇವರು ಉಪಸ್ಥಿತರಿದ್ದರು.ಚಿತ್ರಗಳು: ಸತೀಶ್ ಕಾಪಿಕಾಡ್

ಪ್ರಾದೇಶಿಕ ವಾರ್ತೆಗಳು

‘ದೀಪಾವಳಿ ಬಾಂಧವ್ಯ ಬೆಸೆಯುವ ಹಬ್ಬ’ -ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ

ಮಂಗಳೂರು: ನಾಡಿನಾದ್ಯಂತ ಸಂಭ್ರಮ ಸಡಗರದಿಂದ ಆಚರಿಸುವ ದೀಪಾವಳಿ ಜನತೆಯನ್ನು ಒಂದಾಗಿಸಿ ಬಾಂಧವ್ಯ ಬೆಸೆಯುವ ಹಬ್ಬವಾಗಿದೆ. ಹಬ್ಬಗಳ ಸಾಮೂಹಿಕ ಆಚರಣೆ ನಮ್ಮ ದೈನಂದಿನ ಬದುಕಿಗೆ ಹೊಸ ಚೈತನ್ಯ ನೀಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಹೇಳಿದರು.ನಗರದ ಓಶಿಯನ್ ಪರ್ಲ್ ಸಭಾಂಗಣದಲ್ಲಿ ಭಾನುವಾರ ಪತ್ರಕರ್ತರ ಕುಟುಂಬದವರಿಗೆ ಆಯೋಜಿಸಿದ ದೀಪಾವಳಿ ಸ್ನೇಹ ಮಿಲನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ‘ ಬೆಳಗುವ ದೀಪದಲ್ಲಿ ನಾಳಿನ ಭರವಸೆಯ ಬೆಳಕಿದೆ. ಸಮೃದ್ಧಿ ಹಾಗೂ ನಾಡಿನ ಸಮಸ್ತ ಜನರಿಗೆ ಒಳಿತು ಬಯಸುವ ಜ್ಞಾನದ ದೀಪ ಪ್ರತಿಯೊಬ್ಬರ ಮನದಲ್ಲೂ ಬೆಳಗುವಂತಾಗಬೇಕು’ ಎಂದು ಅವರು ಹೇಳಿದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಇದೇ ಸಂದರ್ಭ ಜಿಲ್ಲಾ ರಾಜ್ಯೋತ್ಸವದಲ್ಲಿ ದ.ಕ.ಜಿಲ್ಲಾ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತರಾದ ಪುಷ್ಪರಾಜ್.ಬಿ.ಎನ್. ಮತ್ತು ರಾಜೇಶ್ ರಾವ್ ಇವರುಗಳನ್ನು ಸನ್ಮಾನಿಸಲಾಯಿತು.ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಜಿಲ್ಲಾ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ಉಪಸ್ಥಿತರಿದ್ದರು. ಲಾರೆನ್ಸ್ ಡಿಸೋಜಾ ಕಾರ್ಯಕ್ರಮ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

“ಯಕ್ಷಗಾನ ಮಕ್ಕಳ ಸ್ಮರಣಶಕ್ತಿಯ ಜೊತೆ ಜ್ಞಾನವನ್ನು ಹೆಚ್ಚಿಸುತ್ತದೆ“ -ಗಿರೀಶ್ ಎಂ. ಶೆಟ್ಟಿ ಕಟೀಲು. “ಯಕ್ಷಸಿರಿ” ದ್ವಿತೀಯ ವಾರ್ಷಿಕೋತ್ಸವ, ಯಕ್ಷಗಾನ ಬಯಲಾಟ ಪ್ರದರ್ಶನ

ಸುರತ್ಕಲ್: ಯಕ್ಷಗಾನ ತರಬೇತಿ ಕೇಂದ್ರ “ಯಕ್ಷಸಿರಿ“ ಇದರ ದ್ವಿತೀಯ ವಾರ್ಷಿಕೋತ್ಸವ ಕಾರ್ಯಕ್ರಮ ಶುಕ್ರವಾರ ಸಂಜೆ ಇಲ್ಲಿನ ಬಂಟರ ಭವನದಲ್ಲಿ ಜರುಗಿತು. ಕಾರ್ಯಕ್ರಮವನ್ನು ಸಂಘದ ಮಾಜಿ ಅಧ್ಯಕ್ಷ ಉಲ್ಲಾಸ್ ಆರ್ ಶೆಟ್ಟಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಸುರತ್ಕಲ್ ಬಂಟರ ಸಂಘದ ನಿರ್ದೇಶಕ, ಉದ್ಯಮಿ ಗಿರೀಶ್ ಎಂ.ಶೆಟ್ಟಿ ಕಟೀಲು ಅವರು, “ಯಕ್ಷಗಾನಕ್ಕೆ ಇಂದು ಬಹಳಷ್ಟು ಗೌರವವಿದೆ. ಮಕ್ಕಳು ಇಂದಿನ ಕಾಲದಲ್ಲಿ ಯಾಕೆ ಯಕ್ಷಗಾನ ಕಲಿಯಬೇಕು ಅನ್ನುವ ಬಗ್ಗೆ ನಾವು ಯೋಚಿಸಬೇಕು. ಯಾಕೆಂದರೆ ಈ ಕಲೆ ಎಲ್ಲರಿಗೂ ಒಲಿಯುವುದಿಲ್ಲ. ಯಕ್ಷಗಾನ ಮಕ್ಕಳ ಸ್ಮರಣಶಕ್ತಿಯ ಜೊತೆ ಜ್ಞಾನವನ್ನು ಹೆಚ್ಚಿಸುತ್ತದೆ. ಸುರತ್ಕಲ್ ನ ಮಕ್ಕಳು ಪುಣ್ಯವಂತರು. ಯಕ್ಷಗುರು ರಾಕೇಶ್ ರೈ ಅವರಂತಹ ಗುರು ಅವರಿಗೆ ಸಿಕ್ಕಿದ್ದಾರೆ. ಇಂದಿನ ಮಕ್ಕಳಿಗೆ ನಮ್ಮ ಸಂಸ್ಕೃತಿಯನ್ನು ಪರಿಚಯಿಸುವ ಇಂತಹ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸಬೇಕು“ ಎಂದರು. ಸಂಘದ ನಿಕಟಪೂರ್ವ ಅಧ್ಯಕ್ಷ ಉಲ್ಲಾಸ್ ಆರ್. ಶೆಟ್ಟಿ ಮಾತನಾಡಿ, “ಯಕ್ಷಗಾನಕ್ಕೆ ಜಾತಿ ಮತದ ಹಂಗಿಲ್ಲ. ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಯಕ್ಷಗಾನ ಕಲೆಗೆ ಮನ್ನಣೆ ಸಿಗುತ್ತಿದೆ. ಇದು ನಿಜಕ್ಕೂ ಖುಷಿ ಪಡುವ ವಿಚಾರ. ಕಲಾಮಾತೆಯ ಅನುಗ್ರಹವಿದ್ದಲ್ಲಿ ಕಲಾವಿದರು ಇಂದು ಯಕ್ಷಗಾನ ಕ್ಷೇತ್ರದಲ್ಲಿ ತಮ್ಮನ್ನು ತಾವು ಗುರುತಿಸಿಕೊಳ್ಳಬಹುದು. ಯಕ್ಷಗಾನ ಕಲೆಗೆ ಪಟ್ಲ ಫೌಂಡೇಶನ್ ನಂತಹ ಸಂಘಟನೆಗಳು ಸಾಕಷ್ಟು ಶ್ರಮವಹಿಸುತ್ತಿವೆ. ಸುರತ್ಕಲ್ ಬಂಟರ ಸಂಘ ಕೇವಲ ಬಂಟರಿಗೆ ಮಾತ್ರವಲ್ಲದೆ ಇಡೀ ಪರಿಸರದ ಮಕ್ಕಳಿಗೆ ಯಕ್ಷಗಾನ ಕಲಿಸಲು ಇಂತಹ ಕೇಂದ್ರವನ್ನು ಸ್ಥಾಪಿಸಿರುವುದು ಮೆಚ್ಚುವಂತಹ ವಿಚಾರ“ ಎಂದರು.ಉದ್ಯಮಿ ರಾಘವೇಂದ್ರ ರಾವ್ ಮಾತಾಡಿ, “ಸಣ್ಣ ಮಕ್ಕಳು ತಮ್ಮ ವಯಸ್ಸಿಗೂ ಮೀರಿ ತಮ್ಮಲ್ಲಿನ ಕಲೆಯನ್ನು ಸಾರ್ವಜನಿಕರ ಎದುರು ಪ್ರದರ್ಶನ ಮಾಡಿರುವುದು ಹೆಮ್ಮೆ ಪಡುವ ವಿಚಾರ. ಆಧುನಿಕ ಯುಗದಲ್ಲೂ ಇಂತಹ ಅರ್ಥಪೂರ್ಣ ಕಾರ್ಯಕ್ರಮಗಳು ನಡೆಯುತ್ತಿರಲಿ” ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಲೋಕಯ್ಯ ಶೆಟ್ಟಿ ಮುಂಚೂರು ಇವರು ಪರಿಸರದ ಎಲ್ಲಾ ಜಾತಿಯ ವಿದ್ಯಾರ್ಥಿಗಳಿಗೆ ಯಕ್ಷಗಾನದ ಅರಿವು ಮೂಡಿಸುವ ಬಗ್ಗೆ ಹಾಗೂ ಇಂದಿನ ಯುವ ಜನತೆಗೆ ಸಂಸ್ಕಾರ, ಸಂಸ್ಕೃತಿ, ಆಚಾರ ವಿಚಾರದ ತಿಳುವಳಿಕೆ ಬಗ್ಗೆ ಕಳೆದ ಮೂರು ವರ್ಷ ಗಳ ಹಿಂದೆ “ಯಕ್ಷ ಸಿರಿ “ತರಬೇತಿಯನ್ನು ಆರಂಭಿಸಿ ಇದೀಗ 90 ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಯಕ್ಷಗಾನದಲ್ಲಿ ಪರಿಣಿತರಾಗಿರುತಾರೆ ಎಂದು ಅವರು ತಿಳಿಸಿದರು.ಸುರತ್ಕಲ್ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಅಶೋಕ್ ಶೆಟ್ಟಿ ತಡಂಬೈಲ್‌ ಅವರು ಮಾತನಾಡಿ ಪ್ರತಿಭಾವಂತ ಮಕ್ಕಳಿಗೆ ಯಕ್ಷಸಿರಿ ಒಂದು ಉತ್ತಮ ವೇದಿಕೆ ಇದರ ಪ್ರಯೋಜನವನ್ನು ಮಕ್ಕಳು ಪಡೆದುಕೊಳ್ಳಬೇಕೆಂದು ಶುಭ ಹಾರೈಸಿದರು. ವೇದಿಕೆಯಲ್ಲಿ ಸುಭಾಷಿತ ನಗರ ಅಸೋಸಿಯೇಶನ್ ನ ಕೋಶಾಧಿಕಾರಿ ನರಸಿಂಹ ಸುವರ್ಣ, ಪಟ್ಲ ಫೌಂಡೇಶನ್ ಟ್ರಸ್ಟ್ ನ ಟ್ರಸ್ಟಿ ಧನಂಜಯ ಶೆಟ್ಟಿ ಕಟ್ಲ, ಎಚ್ ಪಿಸಿಎಲ್ ನ ಅಧಿಕಾರಿ ವಾಸು ನಾಯ್ಕ ಎಸ್, ಯಕ್ಷಗುರು ರಾಕೇಶ್ ರೈ ಅಡ್ಕ, ಸಂಘದ ನಿಕಟಪೂರ್ವ ಅಧ್ಯಕ್ಷ ಸುಧಾಕರ ಎಸ್. ಪೂಂಜ ಉಪಾಧ್ಯಕ್ಷ ಪುಷ್ಪರಾಜ ಶೆಟ್ಟಿ ಕುಡುಂಬೂರು, ಜೊತೆ ಕಾರ್ಯದರ್ಶಿ ಸುಜೀರ್ ಶೆಟ್ಟಿ ಸೂರಿಂಜೆ, ಮಹಿಳಾ ವೇದಿಕೆಯ ಅಧ್ಯಕ್ಷೆ ಭವ್ಯಾ ಎ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಯಕ್ಷಸಿರಿಯ ಸಂಘಟಕಿ ಕವಿತಾ ಪುಷ್ಪರಾಜ ಶೆಟ್ಟಿ ಅವರನ್ನು ಸಮಾರಂಭದಲ್ಲಿ ಗೌರವಿಸಲಾಯಿತು.ಸಂಘದ ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಸ್ವಾಗತಿಸಿದರು. ಕೋಶಾಧಿಕಾರಿ ಅವಿನಾಶ್ ಶೆಟ್ಟಿ ವಂದಿಸಿದರು. ಬಿಂದಿಯಾ ಶೆಟ್ಟಿ ಸನ್ಮಾನಿತರ ಪತ್ರ ವಾಚಿಸಿದರು.ವಿವಿಧ ವಿಭಾಗದಲ್ಲಿ ಸಾಧನೆ ಮಾಡಿದ ಯಕ್ಷಸಿರಿ ಕೇಂದ್ರದ 6 ಮಂದಿ ವಿದ್ಯಾರ್ಥಿಗಳನ್ನು ವೇದಿಕೆಯಲ್ಲಿ ಅತಿಥಿಗಳು ಸನ್ಮಾನಿಸಿದರು.ಅಭಿಜ್ಞಾ ಶೆಟ್ಟಿ ದೇವರನ್ನು ಸ್ತುತಿಸಿದರು.ಅಕ್ಷತಾ ನವೀನ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.ಬಳಿಕ ಯಕ್ಷಸಿರಿಯ ವಿದ್ಯಾರ್ಥಿಗಳು ಮತ್ತು ಕಲಾವಿದರ ಕೂಡುವಿಕೆಯೊಂದಿಗೆ“ಕೃಷ್ಣಂ ವಂದೇ ಜಗದ್ಗುರುಂ” ಯಕ್ಷಗಾನ ಬಯಲಾಟ ನಡೆಯಿತು.

Scroll to Top