ಪ್ರಾದೇಶಿಕ ವಾರ್ತೆಗಳು

ಪ್ರಾದೇಶಿಕ ವಾರ್ತೆಗಳು

ಭರವಸೆಯ ಬೆಳಕಾದ ಪದ್ಮರಾಜ್ ಆರ್. ಪೂಜಾರಿ

ಲೋಕಸಭೆ ಚುನಾವಣೆಯಲ್ಲಿ ಸೋತರೂ ಧೃತಿಗೆಡದೆ ಮತ್ತೆ ಸಮಾಜಮುಖಿ ಸೇವೆಯಲ್ಲಿ ತೊಡಗಿದ್ದಾರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷರಾದ ಪದ್ಮರಾಜ್ ಆರ್.ಪೂಜಾರಿ.ನಾನು ಬಡವರ ಕಣ್ಣೀರೊರೆಸುವ ಕಾರ್ಯ ಮಾಡಬೇಕು ಎನ್ನುವ ಮನದಾಸೆಯಿಂದ ಇತ್ತೀಚೆಗೆ ನಿಧನರಾದ ಕೊಡಿಪ್ಪಾಡಿ ಗ್ರಾಮದ ಬಟ್ರುಪ್ಪಾಡಿ ನಿವಾಸಿ, ಆಟೋಚಾಲಕ ದಿ.ಅನಿಲ್ ಪೂಜಾರಿಯವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳುವುದರ ಜತೆಗೆ, ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಗುರುಬೆಳದಿಂಗಳು ಫೌಂಡೇಶನ್ ಮೂಲಕ ಧನಸಹಾಯ ನೀಡಿ ನಾವು ನಿಮ್ಮೊಂದಿಗೆ ಇದ್ದೇವೆ ಎಂದು ಭರವಸೆಯ ಮಾತು ಹೇಳಿ ಮಾದರಿ ರಾಜಕಾರಣಿಯಾಗಿದ್ದಾರೆ.ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಡಾ.ರಾಜಾರಾಂ, ಹಿಂದುಳಿದ ವರ್ಗ ಬ್ಲಾಕ್ ಅಧ್ಯಕ್ಷ ಮೋಹನ್ ಗುರ್ಜಿನಡ್ಕ, ಕೊಡಿಪ್ಪಾಡಿ ವಲಯ ಅಧ್ಯಕ್ಷ ಕೇಶವಪೆಲತ್ತಡಿ, ಪ್ರವೀಣ್ ಶೆಟ್ಟಿ ಅಳಕೆಮಜಲು, ನೌಷಾದ್, ಯುವ ಕಾಂಗ್ರೆಸ್‌ ಅಧ್ಯಕ್ಷ ಶ್ರೀಪ್ರಸಾದ್‌ ಪಾಣಾಜೆ, ದಾಮೋದರ ಮುರ, ನಗರಸಭಾ ಸದಸ್ಯ ರಿಯಾಜ್ ಪರ್ಲಡ್ಕ, ಶರತ್ ಕೇಪುಳು, ಯಂಗ್ ಬ್ರಿಗೆಡ್ ರಾಜ್ಯಾಧ್ಯಕ್ಷ ಜುನೈದ್ ಪಿ.ಕೆ, ಮೆಸ್ಕಾಂ ಸಲಹಸ ಸಮಿತಿ ಸದಸ್ಯರಾದ ಚಂದ್ರಶೇಖರ ಕಲ್ಲಗುಡ್ಡೆ, ಚಂದ್ರ ಅರ್ಕ ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ದಕ್ಷಿಣ ಕನ್ನಡ ಲೋಕ ಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆ ಅಭೂತಪೂರ್ವ ಜಯ ದೊರೆತಿದೆ-ನಳಿನ್ ಕುಮಾರ್ ಕಟೀಲ್

ಮಂಗಳೂರು, ಜೂ.4: ದಕ್ಷಿಣ ಕನ್ನಡ ಲೋಕ ಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಮತ್ತೊಮ್ಮೆ ಅಭೂತಪೂರ್ವ ಜಯ ದೊರೆತಿದೆ ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ಮಾಧ್ಯಮ ಪ್ರತಿದಿನಗಳ ಜೊತೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಜಿಲ್ಲೆಯ ಅಭಿವೃದ್ಧಿ ಕಾರ್ಯಗಳು ಮುಂದೆ ಕ್ಯಾಬೃಜೇಶ್ ಚೌಟರ ನೇತೃತ್ವದಲ್ಲಿ ಎಲ್ಲರ ಸಹಕಾರದೊಂದಿಗೆ ಮುಂದುವರಿಯುವ ವಿಶ್ವಾಸವಿದೆ. ರಾಜ್ಯದಲ್ಲಿಯೂ ನಿರೀಕ್ಷೆ ಯಂತೆ ಬಿಜೆಪಿ 17ಕ್ಷೇತ್ರದಲ್ಲಿ ಜಯಗಳಿಸಿದೆ.ದೇಶದಲ್ಲಿ ಎನ್ ಡಿಎ ನೇತೃತ್ವದ ಸರಕಾರ ರಚನೆಯಾಗಲಿದೆ. 295 ಕ್ಷೇತ್ರ ಗಳಲ್ಲಿ ಮತದಾರರು ಎನ್ ಡಿಎ ಸರಕಾರವನ್ನು ಬೆಂಬಲಿಸಿದ್ದಾರೆ. ಇದರಿಂದಾಗಿ ಸರಳ ಬಹುಮತದೊಂದಿಗೆ ಮತ್ತೊಮ್ಮೆ ಎನ್ ಡಿಎ ಸರಕಾರ ಅಧಿಕಾರ ಪಡೆದಿದೆ.ಕೇರಳ ರಾಜ್ಯದಲ್ಲಿ ನಾನು ಚುನಾವಣಾ ಕೆಲಸಲ್ಲಿ ತೊಡಗಿಸಿಕೊಂಡಿರುತ್ತೇನೆ. ಈ ಬಾರಿ ಪ್ರಥಮ ಬಾರಿಗೆ ತ್ರಿಶೂರಿನಲ್ಲಿ ಬಿಜೆಪಿ ಖಾತೆ ತೆರೆದಿರುವುದಕ್ಕೆ ಕಾರಣರಾದ ಮತದಾರರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸುದ್ದಿ ಗಾರರಿಗೆ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ಕರಾವಳಿ ಹಿಂದುತ್ವದ ಭದ್ರಕೋಟೆ : -ಹರೀಶ್ ಪೂಂಜ.

ಬೆಳ್ತಂಗಡಿ : ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಜಿಯವರ ನೇತೃತ್ವದ ಎನ್. ಡಿ. ಎ. ಮೈತ್ರಿಕೂಟ ಮೂರನೇ ಬಾರಿಗೆ ಜನಾದೇಶ ಪಡೆದುಕೊಂಡಿದ್ದಕ್ಕೆ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಪ್ರಚಂಡ ಬಹುಮತದಿಂದ ವಿಜಯಶಾಲಿಗಳಾಗಿರುವುದಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸಂತಸ ವ್ಯಕ್ತಪಡಿಸಿದ್ದಾರೆ.ರಾಜ್ಯ ಕಾಂಗ್ರೆಸ್ ಸರ್ಕಾರ ಆಡಳಿತಯಂತ್ರ ದುರುಪಯೋಗಪಡಿಸಿಕೊಂಡು ಅಪವಾದ ಅಪಪ್ರಚಾರಗಳ ನಡುವೆ ನಡೆಸಿದ ಈ ಚುನಾವಣೆಯಲ್ಲಿ ಕರಾವಳಿಯ ಜನತೆ ಈ ಚುನಾವಣೆಯಲ್ಲಿ ಕಾಂಗ್ರೆಸ್ ನ್ನು ಸರಸಗಟಾಗಿ ತಿರಸ್ಕರಿಸಿ ಹಿಂದುತ್ವದ ಭದ್ರಕೋಟೆಯನ್ನು ಪುಡಿಗಟ್ಟಲು ಅಸಾಧ್ಯವೆಂಬ ಸಂದೇಶವನ್ನು ಸ್ಪಷ್ಟವಾಗಿ ನೀಡಿರುತ್ತಾರೆ.ಪ್ರಥಮ ಬಾರಿಗೆ ಲೋಕಸಭೆಯನ್ನು ಪ್ರವೇಶಸಲಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಅಭಿನಂದನೆಗಳನ್ನು ಸಲ್ಲಿಸಿ ಬೆಳ್ತಂಗಡಿಯಲ್ಲಿ 2019,2023 ಹಾಗೂ 2024 ರ ಸಾರ್ವತ್ರಿಕ ಲೋಕಸಭೆ ಚುನಾವಣೆಯಲ್ಲಿ ಸತತವಾಗಿ ಬಿಜೆಪಿಯ ಮತಗಳಿಕೆಯನ್ನು ಒಂದು ಲಕ್ಷಕ್ಕೂ ಮಿಗಿಲಾಗಿ ನೀಡಿ “ತ್ರೀಸ್ ರೀ ಬಾರ್ ಏಕ್ ಲಾಕ್ ಪಾರ್” ಮಾಡಿದ ಮತದಾರ ಬಾಂಧವರಿಗೆ ಶಾಸಕ ಹರೀಶ್ ಪೂಂಜ ಮನದಾಳದ ಕೃತಜ್ಞತೆಯನ್ನು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿರುತ್ತಾರೆ.

ಪ್ರಾದೇಶಿಕ ವಾರ್ತೆಗಳು

ಮಂಗಳೂರಿಗೆ ಚೌಟ ಉಡುಪಿಗೆ ಕೋಟ : ಕುಣಿದು ಘೋಷಣೆ ಕೂಗಿದ ಕೇಸರಿ ಕಾರ್ಯಕರ್ತರ ವಿಡಿಯೋ ಸಕತ್ತ್ ವೈರಲ್.

ಮಂಗಳೂರು : ಕೇಂದ್ರದಲ್ಲಿ ಮತ್ತೆ ಎನ್ ಡಿಎ ಗೆ ಬಹುಮತ, ಬಿಜೆಪಿ ಅಭ್ಯರ್ಥಿಗಳಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ್ ಪೂಜಾರಿಯವರು ಭರ್ಜರಿಯಾಗಿ ಜಯಭೇರಿ ಬಾರಿಸುತ್ತಿದ್ದಂತೆ ಎಲ್ಲೆಡೆ ಬಿಜೆಪಿ ಕಾರ್ಯಕರ್ತರ, ಹಿಂದೂ ಸಂಘಟನೆಗಳ ವಿಜಯೋತ್ಸವದ ಘೋಷಣೆ ಮುಗಿಲು ಮುಟ್ಟಿದೆ. ಅದರಲ್ಲಿಯೂ ಮಂಗಳೂರಿಗೆ ಚೌಟ. ಉಡುಪಿಗೆ ಕೋಟವೆಂಬ ಕೇಸರಿ ಕಾರ್ಯಕರ್ತರು ಕುಣಿದು ಘೋಷಣೆ ಕೂಗಿದ ದೃಶ್ಯ ಸಕತ್ತ್ ವೈರಲ್ ಆಗುತ್ತಿದೆ. ಈ ದೃಶ್ಯವನ್ನು ತುಳು ನ್ಯೂಸ್ ಕರ್ನಾಟಕ ವಿಡಿಯೋ ಮಾಡಿ ಬಿತ್ತರಿಸಿದೆ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಆ ವೈರಲ್ ವೀಡಿಯೋವನ್ನು ವೀಕ್ಷಿಸಬಹುದು. https://drive.google.com/file/d/1Xg0A_6dBmZh5WurrZ5p1s9pRolU1zsvG/view?usp=drive_link

ಪ್ರಾದೇಶಿಕ ವಾರ್ತೆಗಳು

ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಯ ವೇಗ ಹೆಚ್ಚಿಸಿದ್ದೇನೆ,1,80,000 ಕೋಟಿ ರೂ.ಅನುದಾನ ಜಿಲ್ಲೆಗೆ ದೊರಕಿದೆ- ನಳಿನ್ ಕುಮಾರ್ ಕಟೀಲ್.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಲೋಕ ಸಭಾ ಕ್ಷೇತ್ರದಲ್ಲಿ ರಾಷ್ಟ್ರೀಯ ಹೆದ್ಧಾರಿ, ರೈಲ್ವೇ, ಬಂದರು, ವಿಮಾನ ನಿಲ್ದಾಣ, ಸ್ಮಾರ್ಟ್ ಸಿಟಿ, ಆದರ್ಶ ಗ್ರಾಮ ಯೋಜನೆ ಸೇರಿದಂತೆ ಅಭಿವೃದ್ಧಿಗೆ ಕಳೆದ 15 ವರ್ಷಗಳಲ್ಲಿ 1,80,000 ಕೋಟಿ ರೂಪಾಯಿಯ ಅನುದಾನ ವೆಚ್ಚಮಾಡಲಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಈ ಜಿಲ್ಲೆಯ ಅಭಿವೃದ್ಧಿಗೆ ಶ್ರೀನಿವಾಸ ಮಲ್ಯರಿಂದ ಹಿಡಿದು ಬಳಿಕ ಬಂದ ಎಲ್ಲಾ ಸಂಸದರ ಶಾಸಕರ,ಸಚಿವರ ಕೊಡುಗೆ ಇದೆ. ಆ ಕಾರಣದಿಂದ ದಕ್ಷಿಣ ಕನ್ನಡ ಜಿಲ್ಲೆ ರಾಷ್ಟ್ರದ ಅತ್ಯಂತ ಹೆಚ್ಚು ಅಭಿವೃದ್ಧಿ ಶೀಲ ಜಿಲ್ಲೆಯಾಗಿ ಖ್ಯಾತಿ ಪಡೆದಿದೆ. 15 ವರ್ಷಗಳ ಕಾಲ ನನ್ನ ಅಧಿಕಾರಾವಧಿಯಲ್ಲಿ ಜಿಲ್ಲೆಯ ಅಭಿವೃದ್ಧಿ ಗೆ ವೇಗ ದೊರೆತಿದೆ.ಹಿಂದೆ ಸುರತ್ಕಲ್‌ನಲ್ಲಿ ಕೆಆರ್‍‌ಇಸಿ ಇತ್ತು. ಅದನ್ನು ಎನ್‌ಐಟಿಕೆ ಮಾಡಿ ಅಭಿವೃದ್ಧಿಪ ಡಿಸಲಾಗಿದೆ. ಮಂಗಳೂರು ಬಂದರನ್ನು ಸಂಪೂರ್ಣವಾಗಿ ಅಭಿವೃದ್ಧಿಪಡಿಸಲಾಗಿದೆ.ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು 4000 ಕೋಟಿ ರೂ ಅನುದಾನ ನೀಡಿ ಅಭಿವೃದ್ಧಿ ಯೋಜನೆಗೆ ಅವರೇ ಶಿಲಾನ್ಯಾಸ ಮಾಡಿದ್ದರು. ಈಗ ಮಾದರಿಯಾದ ಪೋರ್ಟ್ ಆಗಿದೆ.2010 ಬಳಿಕ ರಾಜ್ಯದ ಎರಡನೇ ದೊಡ್ಡ ವಿಮಾನ ನಿಲ್ದಾಣವಾಗಿದೆ.ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಈಗ 24 ಗಂಟೆ ಚಾಲನೆಯಲ್ಲಿದೆ. ನಾನು ಸಂಸದನಾದ ಆರಂಭದ ಹೊತ್ತಿಗೆ ಮಧ್ಯಾಹ್ನದ ವರೆಗೆ ಮಾತ್ರ ಕಾರ್ಯಾಚರಣೆ ಇತ್ತು.ಈಗ ಅಂತಾರಾಷ್ಟ್ರೀಯ ವಿಮಾನಗಳು ಹೋಗುತ್ತಿವೆ. ಹೊಸದಾಗಿ ಅದಾನಿ ಸಂಸ್ಥೆ 5200 ಕೋಟಿ ರೂ ವೆಚ್ಚದ ನೂತನ ರನ್ ವೇ ಯೋಜನೆ ಕೈ ಗೆತ್ತಿಕೊಂಡಿದೆ. ಮಂಗಳೂರು ಅಂತಾರಾ ಷ್ಟ್ರೀಯ ವಿಮಾನ ನಿಲ್ದಾಣ, ಬಂದರು,ರೈಲ್ವೇ ಅಭಿವೃದ್ಧಿ ಕಾರ್ಯಗಳು ಆಗಿದೆ. ಮಂಗಳೂರು ಪ್ರತ್ಯೇಕ ರೈಲ್ವೇ ವಿಭಾಗದ ಪ್ರಸ್ತಾಪವನ್ನು ಮಾಡಲಾಗಿದೆ. ಮಂಗಳೂರು ಸೆಂಟ್ರಲ್ ನಿಲ್ದಾಣ ವಿಶ್ವದರ್ಜೆಯ ನಿಲ್ದಾಣವಾಗಿ ಅಭಿವೃದ್ಧಿಯಾಗುತ್ತಿದೆ. ಎರಡು ಹೊಸ ಪ್ಲಾಟ್‌ಫಾರ್ಮ್‌ಗಳನ್ನು ನಿರ್ಮಿಸಿದ್ದೇವೆ. ಸುಬ್ರಹ್ಮಣ್ಯ ರೈಲ್ವೆ ನಿಲ್ದಾಣ 24 ಕೋಟಿ, ಬಂಟ್ವಾಳದ ರೈಲು ನಿಲ್ದಾಣ 25 ಕೋಟಿ ರೂ.ಗಳಲ್ಲಿ ಅಭಿವೃದ್ಧಿ ಆಗುತ್ತಿದೆ. ಮಂಗಳೂರು ಜಂಕ್ಷನ್ 350 ಕೋಟಿ ವೆಚ್ಚದಲ್ಲಿ ವಿಶ್ವದರ್ಜೆ ಉನ್ನತೀಕರಿಸುವ ಕಾಮಗಾರಿ ನಡೆದಿದೆ,ಸ್ಮಾರ್ಟ್ ಸಿಟಿ, ಅಮೃತ್ ಯೋಜನೆಗಳ ಅಡಿಯಲ್ಲಿ ಮಂಗಳೂರು ನಗರಕ್ಕೆ ಸಾವಿರಾರು ಕೋಟಿ ರೂ.ಗಳ ಅನುದಾನ ಬಂದಿದೆ.ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ಕಾಂಪ್ಲೆಕ್ಸ್, ಅಂತಾರಾಷ್ಟ್ರೀಯ ಮಟ್ಟದ ಈಜುಕೊಳ, ಕ್ರೀಡಾಂಗಣ ನಿರ್ಮಾಣ. ವಾಗಿದೆ. ಸರಕಾರಿ ವೆನ್ಲಾಕ್ ಆಸ್ಪತ್ರೆ ಅಭಿವೃದ್ಧಿಯಾಗಿದೆ. ಸಾಗರಮಾಲಾ ಯೋಜನೆಯಲ್ಲಿ ಅನುದಾನ ಕೊಟ್ಟಿದ್ದಾರೆ. ದೇಶದಲ್ಲಿ ಒಂದೇ ಒಂದು ಕೋಸ್ಟ್‌ಗಾರ್ಡ್ ತರಬೇತಿ ಕೇಂದ್ರ ಕೊಚ್ಚಿಯಲ್ಲಿ. ಇಂದು 1000 ಕೋಟಿ ವೆಚ್ಚ ಮಾಡಿ ಮಂಗಳೂರಿನಲ್ಲಿ ಕೋಸ್ಟ್‌ ಗಾರ್ಡ್ ತರಬೇತಿ ಕೇಂದ್ರ ಪ್ರಾರಂಭಿಸಲಾಗಿದೆ. ಅನಂತಕುಮಾರ್ ಅವರು ಸಚಿವರಾಗಿದ್ದಾಗ ಅನುಮತಿ ನೀಡಿದ ಪ್ಲಾಸ್ಟಿಕ್ ಪಾರ್ಕ್ ಈಗ ನಿರ್ಮಾಣವಾಗುತ್ತಿದೆ ಶೇ.80ರಷ್ಟು ಕಾಮಗಾರಿ ಪೂರ್ಣಗೊಂಡಿದೆ ಎಂದು ನಳಿನ್ ಮಾಹಿತಿ ನೀಡಿದರು. 1, 13,000 ಕೋಟಿ ರೂ.ಗಳನ್ನು ನರೇಂದ್ರ ಮೋದಿ ಸರಕಾರ ಈ ಜಿಲ್ಲೆಯ ಅಭಿವೃದ್ಧಿಗೆ ಕೊಟ್ಟಿದೆ. ಗ್ರಾಮಸ್ವರಾಜ್ಯದ ಕಲ್ಪನೆ ಅಡಿಯಲ್ಲಿ ಸಂಸದರ ಆದರ್ಶ ಗ್ರಾಮದ ಯೋಜನೆ ರೂಪಿಸಲಾಗಿದೆ. ಬಳ್ಪ ಇಂದು 60 ಕೋಟಿ ರೂ ವೆಚ್ಚದಲ್ಲಿ ಆದರ್ಶ ಗ್ರಾಮವಾಗಿ ಅಭಿವೃದ್ಧಿಯಾಗಿದ್ದು ಬಿಜೆಪಿ ಕಾಲದಲ್ಲಿ. ಜಲಜೀವನ್ ಮಿಷನ್ ಅಡಿಯಲ್ಲಿ 1,78,000 ನಳ್ಳಿಗಳ ಜೋಡಣೆ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಅಡಿಯಲ್ಲಿ 1,50,000 ರೈತರು ಫಲಾನುಭವಿಗಳಾಗಿದ್ದಾರೆ.2009ರಲ್ಲಿ ಪಾಸ್ ಪೋರ್ಟ್ ಸೇವಾ ಕೇಂದ್ರ ಆರಂಭವಾಗಿದೆ.100 ಜನೌಷಧಿ ಕೇಂದ್ರ ಆರಂಭ ವಾಗಿದೆ.ಎಂಆರ್ ಪಿಎಲ್ ಮೂರನೇ ಹಂತದವಿಸ್ತರಣೆ ಯೋಜನೆಯ ಕಾಮಗಾರಿ ಪ್ರಗತಿಯಲ್ಲಿದೆ. 3ಲಕ್ಷ ಜನರಿಗೆ ಮುದ್ರಾ ಯೋಜನೆಯಲ್ಲಿ ಸಾಲ ನೀಡಲಾಗಿದೆ. ಚಾರ್ಮಾಡಿ ಘಾಟ್ ರಸ್ತೆ 300 ಕೋಟಿ ರೂಪಾಯಿ ಯೋಜನೆ ಮಂಜೂರಾಗಿದೆ.ಶಿರಾಡಿ ಸುರಂಗ ಮಾರ್ಗ 2,500 ಕೋಟಿ ರೂ ಯೋಜನೆ ಡಿಪಿಆರ್ ಆಗಿದೆ.ಅಡ್ಡಹೊಳೆ -ಬಿಸಿರೋಡ್ ಕಾಮಗಾರಿ,ಬಿಜರ್ನಕಟ್ಟೆ ಸಾಣೂರು ರಸ್ತೆ ಕಾಮಗಾರಿ ಶೀಘ್ರ ಪೂರ್ಣ ಗೋಳ್ಳಲಿದೆ.ನಂತೂರು ಪ್ಲೈ ಓವರ್,ಕೆಪಿಟಿ ಪ್ಲೈ ಓವರ್ 360 ಕೋಟಿ ರೂಪಾಯಿ ಯೋಜನೆ ಟೆಂಡರ್ ಆಗಿದೆ. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗಾಗಿ ಜಿಲ್ಲೆ ಗೆ 17,000 ಕೋಟಿ ರೂಪಾಯಿ ಮಂಜೂರಾಗಿದೆ.ಮಂಗಳೂರಿನಲ್ಲಿ 75,000 ಗ್ಯಾಸ್ ಪೈಪ್ ಲೈನ್ ಮೂಲಕ ಸಂಪರ್ಕ ಕಲ್ಪಿಸಲಾಗಿದೆ.2ಲಕ್ಷ ಸಂಪರ್ಕದ ಗುರಿ ಇದೆ.ಬಿಎಸ್ ಎನ್ ಎಲ್ ನ ಹೊಸ ಟವರ್ ನಿರ್ಮಿಸಲಾಗಿದೆ ಎಂದು ತಾನು ಸಂಸದನಾಗಿದ್ದ ಅವಧಿಯಲ್ಲಿ ನಡೆದ ಯೋಜನೆಗಳ ಬಗ್ಗೆ ಮಾಧ್ಯಮ ಪ್ರತಿನಿಧಿ ಗಳಿಗೆ ಮಾಹಿತಿ ನೀಡಿದರು. ತಾನು ಮುಂದೆ ಪಕ್ಷ ವಹಿಸುವ ಕೆಲಸವನ್ನು ಮಾಡುತ್ತೇನೆ ಎಂದು ನಳಿನ್ ಕುಮಾರ್ ಕಟೀಲ್ ವಿವರಿಸಿದರು.ಮಾಧ್ಯಮ ಸಂವಾದ ಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರದಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಮಂಗಳೂ ರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಉಪಸ್ಥಿತರಿದ್ದರು. ವಿಜಯ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು,

ಪ್ರಾದೇಶಿಕ ವಾರ್ತೆಗಳು

ಮಕ್ಕಳ ಪ್ರತಿಭೆ ಪೋಷಿಸುವ ಹೊಣೆ ಪೋಷಕರದ್ದು: ಡಾ. ಎಂ.ಮೋಹನ ಆಳ್ವ, ರಿಷಿಕಾ ಕುಂದೇಶ್ವರಗೆ ಪತ್ರಕರ್ತ ಸಂಘದ ಗೌರವ ಸನ್ಮಾನ.

ಮಂಗಳೂರು: ಮಕ್ಕಳಲ್ಲಿ ಪ್ರತಿಭೆ ಗುರುತಿಸಿ ಸಂಸ್ಕೃತಿ, ಕಲೆ ಪೋಷಿಸುವ ಹೊಣೆ ಪೋಷಕರದ್ದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ. ಎಂ.ಮೋಹನ ಆಳ್ವ ಹೇಳಿದರು.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ವತಿಯಿಂದ ಪತ್ರಿಕಾಭವನದಲ್ಲಿ ಜೀ ಕನ್ನಡ ಡ್ರಾಮಾ ಜೂನಿಯರ್ಸ್ ಚಾಂಪಿಯನ್ ರಿಷಿಕಾ ಕುಂದೇಶ್ವರ ಅವರನ್ನು ಸನ್ಮಾನಿಸಿ ಮಾತನಾಡಿದರು.ನಮ್ಮ ನಾಡಿನ ಶಾಸ್ತ್ರೀಯ, ಜನಪದೀಯ ಕಲೆ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಮುಂದುವರಿಸಲು ಪೋಷಕರು ಪ್ರಯತ್ನಿಸಬೇಕು. ಎಳವೆಯಲ್ಲಿ ಹೆತ್ತವರ ಕಲಾ ಪೋಷಣೆ ಬಳಿಕ ಮಕ್ಕಳು ಪ್ರೌಢಾವಸ್ಥೆಯಲ್ಲಿ ಕಲೆಯನ್ನು ತ್ಯಜಿಸದೆ ಮುಂದುವರಿಸಬೇಕು. ಶಿಕ್ಷಣ ಸಂಸ್ಥೆಗಳೂ ಇದಕ್ಕೆ ಪ್ರೋತ್ಸಾಹ ನೀಡಬೇಕು ಎಂದರು. ಪೌರಾಣಿಕ, ವ್ಯಕ್ತಿಚಿತ್ರ, ಐತಿಹಾಸಿಕ, ಜನಪದೀಯ ಮತ್ತು ಕಾಮಿಡಿ ವಿಭಾಗದಲ್ಲಿ ಭಾವಾಭಿನಯದ ಮೂಲಕ ರಿಷಿಕಾ ಕನ್ನಡನಾಡಿನ ಜನರ ಮನಗೆದ್ದಿದ್ದಾಳೆ. ಶಿಕ್ಷಣದ ಜತೆ ಕಲಾ ವ್ಯವಸಾಯ ಮುಂದುವರಿಸಿ ಸಾಧನೆ ಮಾಡಬೇಕು ಎಂದು ಸಲಹೆ ಮಾಡಿದರು. ಚಲನಚಿತ್ರ ನಟ ಡಾ. ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ಮಾತನಾಡಿ, ಎಳವೆಯಿಂದಲೂ ರಿಷಿಕಾ ಪ್ರತಿಭೆಯನ್ನು ಗಮನಿಸಿದ್ದೇನೆ. ಯಕ್ಷಗಾನ ಕುಣಿತ, ಭಾಗವತಿಕೆ, ಶಾಸ್ತ್ರೀಯ ಸಂಗೀತ, ಪಾಶ್ಚಿಮಾತ್ಯ ಸಂಗೀತ ಎಲ್ಲದರಲ್ಲಿಯೂ ಪರಿಪೂರ್ಣತೆ ಇದೆ. ಎಲ್ಲ ರೀತಿಯ ಪಾತ್ರಗಳನ್ನು ಪರಕಾಯ ಪ್ರವೇಶಮಾಡಿ ಲೀಲಾಜಾಲವಾಗಿ ನಿರ್ವಹಿಸುತ್ತಾಳೆ. ಈಕೆ ಮುಂದೆ ರಾಷ್ಟ್ರ ಮಟ್ಟದಲ್ಲಿ ಮಿಂಚಿ ನಮ್ಮ ಊರಿಗೆ ಹೆಮ್ಮೆ ತರುತ್ತಾಳೆ ಎಂದರು. ಸಂಸದ ನಳಿನ್‌ ಕುಮಾರ್‌ ಕಟೀಲ್‌ ಮಾತನಾಡಿ, ಲೋಕಸಭಾ ಸದಸ್ಯನಾಗಿ ಕೊನೆಯ ದಿನ ನಾನು ಅದ್ಭುತ ಪ್ರತಿಭೆಯನ್ನು ಗೌರವಿಸುತ್ತಿರುವುದು ಅತ್ಯುತ್ತಮ ಕ್ಷಣ ಎಂದು ಬಣ್ಣಿಸಿದರು.ಸನ್ಮಾನ ಸ್ವೀಕರಿಸಿದ ರಿಷಿಕಾ ಕುಂದೇಶ್ವರ ಮಾತನಾಡಿ, ನಮ್ಮದು ಪತ್ರಕರ್ತರ ಕುಟುಂಬ, ಎಲ್ಲ ಪತ್ರಕರ್ತರು ಮನೆ ಮಗಳಂತೆ ನನಗೆ ಪ್ರೋತ್ಸಾಹ ನೀಡಿದರು. ಮನೆ ಮಂದಿಯ ಪ್ರೀತಿ ಈ ಸನ್ಮಾನದಲ್ಲಿ ಕಂಡೆ ಎಂದರು.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಮಾತನಾಡಿ, ಪತ್ರಕರ್ತರಿಗೆ ಜಾತಿ ಇಲ್ಲ. ಪತ್ರಕರ್ತರೇ ಒಂದು ಜಾತಿ, ಇಂದು ಪತ್ರಕರ್ತನ ಮಗಳಿಗೆ ಸನ್ಮಾನಿಸುವ ಮೂಲಕ ನಮ್ಮ ಸಮುದಾಯದ ಸನ್ಮಾನ ಎಂಬ ಭಾವ ಮೂಡುತ್ತಿದೆ ಎಂದರು.ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್‌ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು. ಅಶೋಕನಗರ ಎಸ್. ಡಿ. ಎಮ್. ಸ್ಕೂಲ್ ಸಂಚಾಲಕರಾದ ಶೃತಾ ಜಿತೇಶ್, ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ನಿಕಟಪೂರ್ವ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ. ಆರ್., ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಅಂತಾರಾಷ್ಟ್ರೀಯ ಜಾದೂಗಾರ ಗಣೇಶ್ ಕುದ್ರೋಳಿ, ಉಪಸ್ಥಿತರಿದ್ದರು. ನವೀನ್‌ ಶೆಟ್ಟಿ ಎಡ್ಮೆಮ್ಮಾರ್‌ ಕಾರ್ಯಕ್ರಮ ನಿರೂಪಿಸಿದರು. ಕೋಶಾಧಿಕಾರಿ ಪುಷ್ಪರಾಜ್‌ ಬಿ.ಎನ್.‌ ವಂದಿಸಿದರು.

ಪ್ರಾದೇಶಿಕ ವಾರ್ತೆಗಳು

ಅಂತಾರಾಷ್ಟ್ರೀಯ ಮುಟ್ಟಿನ ನೈಮರ್ಲ್ಯ ದಿನಾಚರಣೆ.

ಜೇವರ್ಗಿ: ಮೇ 29ರಂದು ಜೇವರ್ಗಿ ತಾಲ್ಲೂಕಿನ ಸಮುದಾಯ ಆರೋಗ್ಯ ಕೇಂದ್ರ, ನೆಲೋಗಿ ವ್ಯಾಪ್ತಿಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರ, ಮಂದೇವಾಲ್ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯತಿ ಆವರಣದಲ್ಲಿ ರಾಷ್ಟ್ರೀಯ ಕಿಶೋರ್ ಸ್ವಾಸ್ಥ್ಯ ಕಾರ್ಯಕ್ರಮ (RKSK) ದಡಿಯಲ್ಲಿ ಹದಿಹರೆಯದವರ ಆರೋಗ್ಯ ಮತ್ತು ಕ್ಷೇಮ ದಿನಾಚರಣೆ ಪ್ರಯುಕ್ತ ಅಂತರರಾಷ್ಟ್ರೀಯ ಮುಟ್ಟಿನ ನೈರ್ಮಲ್ಯ ದಿನಾಚರಣೆ ಹಮ್ಮಿಕೊಂಡಿತ್ತು. ಸದರಿ ಕಾರ್ಯಕ್ರಮದಲ್ಲಿ ಮಂದೇವಾಲ್ ಗ್ರಾಮ ಪಂಚಾಯತಿ ಅಧ್ಯಕ್ಷರಾದ ರಮೇಶ್ ಗೌಡ ಪಾಟೀಲ್ ರವರ ಜೊತೆಗೆ ಆರೋಗ್ಯ ಸಿಬ್ಬಂದಿಗಳು ಮತ್ತು KHPT ಸಿಬ್ಬಂದಿಗಳು ಸ್ನೇಹ ಕ್ಲಿನಿಕ್ ಪೋಸ್ಟರಗಳನ್ನು ಬಿಡುಗಡೆ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಹಾಗೂ ಹದಿಹರೆಯದ ಹೆಣ್ಣು ಮಕ್ಕಳು ಕಾರ್ಯಕ್ರಮಕ್ಕೆ ಬಂದ ಅತಿಥಿ ಗಣ್ಯರಿಗೆ ಕೆಂಪು ಬಣ್ಣದ ರಿಬ್ಬನ್ ಕಟ್ಟುವುದರ ಮೂಲಕ ಸ್ವಾಗತಿಸಿದರು. ಮಂದೇವಾಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಗಳಾದ ಡಾ.ರೇಣುಕಾದೇವಿ ದೇವರಮನಿರವರು ಹೆಣ್ಣು ಮಕ್ಕಳಲ್ಲಿ ಆಗುವ ಮಾಸಿಕ ಋತುಸ್ರಾವದ(ಮುಟ್ಟು) ಬಗ್ಗೆ ಕಿಶೋರಿಯರಿಗೆ ಚರ್ಚೆ ಮೂಲಕ ಸಮಗ್ರ ಮಾಹಿತಿ ನೀಡಿದರು. ಮಕ್ಕಳಿಗೆ ಪೌಷ್ಟಿಕ ಆಹಾರ ವ್ಯಯಕ್ತಿಕ ಶುಚಿತ್ವದ ಕುರಿತು RKSK ಆಪ್ತ ಸಮಾಲೋಚಕರಾದ ನಿಂಗಣ್ಣಗೌಡ ಎಸ್ ಪಾಟೀಲ್ ರವರು ತಿಳಿಸಿದರು. ಅದೇ ರೀತಿಯಾಗಿ KHPT ಸಂಸ್ಥೆಯ ಸಮುದಾಯ ಸಂಘಟಕರಾದ ಮತಿ ಮೇಘಾ ಅವರು ನಿರೂಪಣೆ ಮಾಡುತ್ತಾ ಹದಿ ಹರೆಯದ ಮಕ್ಕಳಿಗೆ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ಗ್ರಾಮ ಪಂಚಾಯತಿ ಉಪಾದ್ಯಕ್ಷರಾದ ಮತಿ ಲಕ್ಷ್ಮೀ ಮುದಗಲ್ ರವರು ವಂದಿಸಿದರು. ಸದರಿ ಕಾರ್ಯಕ್ರಮದಲ್ಲಿ PHCO ರಾದ ಶ್ರೀಮತಿ ಚಂದ್ರಕಲಾ ಹಚ್ಚಡ KHPT ಸಮುದಾಯ ಸಂಘಟಕಾರದ ಶ್ರೀಮತಿ ಈರಮ್ಮ , ಶ್ರೀಮತಿ ಸಾವಿತ್ರಿ ಮತ್ತು ಶ್ರೀಮತಿ ದಾನಮ್ಮ ಹಾಗೂ ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು ಮತ್ತು ಕಿಶೋರಿಯರ ಪಾಲಕರು ಮತ್ತು ಪೋಷಕರು ಭಾವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಪ್ರಾದೇಶಿಕ ವಾರ್ತೆಗಳು

ಅಂಗವೈಕಲ್ಯದಿಂದ ಕೂಡಿದ ಬಡವರಿಗೆ ನೆರವು ಶ್ಲಾಘನೀಯ -ಡಾ.ಎಂ.ಬಿ.ಬೋರ ಲಿಂಗಯ್ಯ

ಮಂಗಳೂರು : ವೆನ್ಲಾಕ್ ನಲ್ಲಿ ಸುಧಾರಿತ ಎಂಡೊ ಪ್ರೊಸ್ಥೆಟಿಕ್ ಸೆಂಟರ್ ಗೆ ಚಾಲನೆಮಂಗಳೂರು, ಮೇ.31;ದೇಶದಲ್ಲಿ ವಿವಿಧ ಕಾರಣದಿಂದ ಪ್ರತಿ ವರ್ಷ ಲಕ್ಷಾಂತರ ಮಂದಿ ಶಾಶ್ವತ ಅಂಗ ವಿಕಲರಾಗುತ್ತಾರೆ.ಈ ಅಂಗವಿಕಲತೆ ಆರ್ಥಿಕವಾಗಿ ಬಡವರಾಗಿರುವವರನ್ನು ಇನ್ನಷ್ಟು ಕಾಡುತ್ತದೆ ಇಂತಹ ಜನರಿಗೆ ಕೃತಕ ಅಂಗಗಳ ವಿತರಣೆಯನ್ನು ದೀರ್ಘ ಕಾಲದಿಂದ ವೆನ್ಲಾಕ್ ಸರಕಾರಿ ಆಸ್ಪತ್ರೆಯಲ್ಲಿ ಅರ್ಹರಿಗೆ ಉಚಿತವಾಗಿ ನೀಡುತ್ತಿರುವುದು ಮಹತ್ವದ ಶ್ಘಾಘನೀಯ ಕಾರ್ಯ ವೆಂದುಪಶ್ಚಿಮ ವಲಯದ ಪೊಲೀಸ್ ಮಹಾ ನಿರೀಕ್ಷಕ ಡಾ|ಎಂ.ಬಿ. ಬೋರ ಲಿಂಗಯ್ಯ ತಿಳಿಸಿದರು. ಅವರು ಲಯನ್ಸ್ ಸಂಸ್ಥೆಯ ವತಿಯಿಂದ ನಗರದ ವೆನ್ಲಾಕ್ ಆಸ್ಪತ್ರೆಯ ಲಿಂಬ್ ಸೆಂಟರ್‌ನಲ್ಲಿ ಶುಕ್ರವಾರ ಕೃತಕ ಅಂಗಾಂಗ ತಯಾರಿಯ ಸುಧಾರಿತ ಎಂಡೊ ಪ್ರೊಸ್ಥೆಟಿಕ್ ಸೆಂಟರನ್ನು ಉದ್ಘಾಟಿಸಿ ಮಾತನಾ ಡುತ್ತಿದ್ದರು.ಈ ಕೆಲಸದಲ್ಲಿ ತೊಡಗಿರುವ ಡಾ.ಶಾಂತರಾಮ ಶೆಟ್ಟಿಯವರ ನೇತೃತ್ವದ ತಂಡ ಹಾಗೂ ವೆನ್ಲಾಕ್ ನ ಲಯನ್ಸ್ ಲಿಂಬ್ ಸೆಂಟರ್ ನ ಕಾರ್ಯವನ್ನು ಅಭಿನಂದಿಸುವು ದಾಗಿ ತಿಳಿಸಿ ನೂತನ ಕೇಂದ್ರಕ್ಕೆ ಶುಭ ಹಾರೈಸಿದರು.ವೆನ್ಲಾಕ್ ಲಯನ್ಸ್ ಲಿಂಬ್ ಸೆಂಟರ್ ಕೇಂದ್ರದ ಅಧ್ಯಕ್ಷ ಡಾ| ಎಂ. ಶಾಂತಾರಾಮ ಶೆಟ್ಟಿ ಮಾತನಾಡುತ್ತಾ, ದೇಶದಲ್ಲಿ ಮುಂಬಯಿ,ಡೆಲ್ಲಿ, ಕೊಲ್ಕತ್ತಾ, ಬಿಟ್ಟರೆ ಮಂಗಳೂರಿನಲ್ಲಿ ಕೃತಕ ಅವಯವಗಳನ್ನು ನೀಡುವ ಲಿಂಬ್ ಸೆಂಟರ್ ನ್ನು ಲಯನ್ಸ್ ಸಂಸ್ಥೆಯ ಸಹಕಾರದೊಂದಿಗೆ 49 ವರ್ಷಗಳ ಹಿಂದೆ ಆರಂಭಿಸಲಾಗಿದೆ.ಇದುವರೆಗೆ ಸುಮಾರು 80ಸಾವಿರ ಜನರಿಗೆ ಕೃತಕ ಅಂಗಾಂಗಳನ್ನು ನೀಡಲಾಗಿದೆ ಈಗ ಈ ಕೇಂದ್ರ ಮೇಲ್ದರ್ಜೆಗೆ ಏರಿಸುವ ಮೂಲಕ ಇನ್ನಷ್ಟು ಜನರಿಗೆ ನೆರವಾಗಲಿದೆ ಈ ಯೋಜನೆಗೆ ನೆರವು ನೀಡಿದ ಲಯನ್ಸ್ ಸಂಸ್ಥೆಯ ಪದಾಧಿಕಾರಿಗಳೆಗೆ ಕೃತಜ್ಞತೆ ಸಲ್ಲಿಸುವುದಾಗಿ ಶಾಂತರಾ ಶೆಟ್ಟಿ ತಿಳಿಸಿದರು.ವೆನ್ಲಾಕ್ ಆಸ್ಪತ್ರೆಯ ವೈದ್ಯಾಧಿಕಾರಿ ಡಾ| ಜೆಸಿಂತಾ ಡಿ’ಸೋಜಾ ಮಾತನಾಡುತ್ತಾ, ಡಾ.ಶಾಂತಾ ರಾಮ ಶೆಟ್ಟಿಯವರ ನೇತೃತ್ವದಲ್ಲಿನ ಈ ಲಿಂಬ್ ಸೆಂಟರ್ ಮೂಲಕ ವೆನ್ಲಾಕ್ ನ ಬಹುತೇಕ ಅಂಗಾಂಗ ಕಳೆದು ಕೊಂಡ ಬಡವರು ತಮ್ಮ ಬದುಕಿನಲ್ಲಿ ನವಚೇತನ ಪಡೆಯುವಂತಾಗಿದೆ ಎಂದರು. ಲಯನ್ಸ್ ಗವರ್ನರ್ ಮೆಲ್ವಿನ್ ಡಿ’ಸೋಜಾ, ಮಾಜಿ ಲಯನ್ಸ್ ಗವರ್ನರ್ ಗಳಾದ ವಸಂತ ಶೆಟ್ಟಿ ,ಸಂಜಿತ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.ಸಮಾರಂಭದ ವೇದಿಕೆಯಲ್ಲಿ ಮಂಗಳೂರು ಲಯನ್ಸ್ ಕ್ಲಬ್ ಅಧ್ಯಕ್ಷ ಶೀನ ಪೂಜಾರಿ,ವೆನ್ಲಾಕ್ ಲಯನ್ಸ್ ಲಿಂಬ್ ಸೆಂಟರ್ ನ ಸಂಚಾಲಕ ಡಾ.ಕೆ.ಆರ್. ಕಾಮತ್,ವೆನ್ಲಾಕ್ ಲಿಂಬ್ ಸೆಂಟರ್ ನ ವ್ಯವಸ್ಥಾಪಕ ಸುರೇಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ವೆನ್ಲಾಕ್ವ ಲಯನ್ಸ್ ಲಿಂಬ್ ಸೆಂಟರ್ ನ ಕಾರ್ಯದರ್ಶಿ ಮುರಳೀಧರ ಲಮಾಣಿ ವಂದಿಸಿದರು.ಇದೇ ಸಂದರ್ಭದಲ್ಲಿ ಫಲಾನುಭವಿಗಳಿಗೆ ವೆನ್ಲಾಕ್ ಲಯನ್ಸ್ ಲಿಂಬ್ ಸೆಂಟರ್ ವತಿಯಿಂದ ಕೃತಕ ಅಂಗಾಂಗಗಳನ್ನು ಅತಿಥಿಗಳು ವಿತರಿಸಿದರು.

ಪ್ರಾದೇಶಿಕ ವಾರ್ತೆಗಳು

ಮಳೆಗಾಲದ ವಿಪತ್ತು ನಿರ್ವಹಣೆ ಸಂಪೂರ್ಣ ಸಜ್ಜು- ಮುಲ್ಲೈ ಮುಗಿಲನ್

ಮಂಗಳೂರು: ಜೂನ್ ಪ್ರಥಮ ವಾರದಲ್ಲೇ ಜಿಲ್ಲೆಯಾದ್ಯಂತ ಮುಂಗಾರು ಮಳೆ ಆರಂಭವಾಗುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ಮಳೆಗಾಲದವ ವಿಪತ್ತು ನಿರ್ವಹಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ನಡೆಸಲಾಗಿದೆ. ನೆರೆ, ಪ್ರವಾಹ, ಭೂಕುಸಿತ ಪ್ರದೇಶಗಳಲ್ಲಿ ಸಂಭವನೀಯ ಹಾನಿ ನಿಯಂತ್ರಣ ಹಾಗೂ ತುರ್ತು ರಕ್ಷಣಾ ಕಾರ್ಯಾಚರಣೆಗಾಗಿ ಎನ್‌ಡಿಆರ್‌ಎಫ್ (ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ) ತಂಡವು ಜೂ. 1ರಂದು ಜಿಲ್ಲೆಗೆ ಆಗಮಿಸಲಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ತಿಳಿಸಿದ್ದಾರೆ.ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಹಮ್ಮಿಕೊಂಡ ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಂಡ ಮಾಧ್ಯಮ ಸಂವಾದ ಹಾಗೂ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದರು.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಗಾಲದ ಸಿದ್ಧತೆಗಳ ಕುರಿತಂತೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ರಾಷ್ಟ್ರೀಯ ಪ್ರಾಕೃತಿಕ ವಿಕೋಪ ನಿರ್ವಹಣಾ ತಂಡದ ಜತೆಗೆ ರಾಜ್ಯ ತಂಡವೂ ಮಂಗಳೂರು ಮತ್ತು ಪುತ್ತೂರಿನಲ್ಲಿ ನಿಯೋಜಿಸಲಾಗುತ್ತಿದೆ ಎಂದು ತಿಳಿಸಿದರು. ಜಿಲ್ಲೆಯ 86 ಗ್ರಾಮಗಳನ್ನು ಸಂಭವನೀಯ ಪ್ರವಾಹ ಪೀಡಿತ, ಭೂಕುಸಿತ ಪ್ರದೇಶಗಳಾಗಿ ಗುರುತಿಸಲಾಗಿದ್ದು, ಈ ಗ್ರಾಮಗಳ ಒಟ್ಟು 90 ಪ್ರದೇಶಗಳಲ್ಲಿ ಪ್ರವಾಹ ಪೀಡಿತ ಹಾಗೂ 73 ಪ್ರದೇಶಗಳಲ್ಲಿ ಭೂಕುಸಿತ ಪ್ರದೇಶಗಳನ್ನು ಗುರುತಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 97 ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.ಭೂಕುಸಿತ, ಪ್ರವಾಹ, ಅಗ್ನಿ ಅವಘಡ ಸೇರಿದಂತೆ ಇತರ ಯಾವುದೇ ವಿಪತ್ತುಗಳು ಸಂಭವಿಸಿದ್ದಲ್ಲಿ ಸಮರ್ಪಕವಾಗಿ ಎದುರಿಸಲು ಜಿಲ್ಲಾ ಮಟ್ಟದಲ್ಲಿ ಮಾತ್ರವಲ್ಲದೆ, ಪ್ರತಿ ಗ್ರಾ.ಪಂ., ವಾರ್ಡ್ ಮಟ್ಟದಲ್ಲಿಯೂ ಇನ್‌ಸಿಡೆಂಟ್ ಕಮಾಂಡರ್‌ಗಳನ್ನು ನೇಮಕ ಮಾಡಲಾಗಿದೆ. ಇವರು ಸಂಭವನೀಯ ವಿಪತ್ತು ಪ್ರದೇಶಗಳನ್ನು ಮುಂಚಿತವಾಗಿ ಗುರುತಿಸಿ, ಸ್ಥಳೀಯವಾಗಿ ಲಭ್ಯವಿರುವ ಬೋಟ್, ಮರ ಕತ್ತರಿಸುವ ಯಂತ್ರ, ಹಗ್ಗ, ಜೆಸಿಬಿ, ಕ್ರೇನ್ ಮೊದಲಾದ ರಕ್ಷಣಾ ವ್ಯವಸ್ಥೆ, ಮಾನವ ಸಂಪನ್ಮೂಲವನ್ನು ಕ್ರೋಡೀ ಕರಿಸಿಕೊಂಡು ಸಿದ್ಧರಾಗಿರಲು ಸೂಚಿಸಲಾಗಿದೆ.ಜಿಲ್ಲೆಯಲ್ಲಿ ನುರಿತ ಈಜು ತಜ್ಞರು, ಮುಳುಗು ತಜ್ಞರನ್ನು ತಾಲೂಕು ಹಂತದಲ್ಲಿ ಗುರುತಿಸಲಾಗಿದೆ. ಉಳ್ಳಾಲ, ಸೋಮೇಶ್ವರ, ಮೊಗವೀರಪಟ್ಣ, ಪಣಂಬೂರ, ತಣ್ಣೀರುಬಾವಿ, ಸಸಿಹಿತ್ಲು ಮತ್ತು ಸುರತ್ಕಲ್ ಕಡಲ ಕಿನಾರೆಗಳಲ್ಲಿ ಜೂನ್‌ನಿಂದ ಸೆಪ್ಟಂಬರ್‌ ವರೆಗೆ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಲು ಗೃಹ ರಕ್ಷಕ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ವಿವರಿಸಿದರು.ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿ ತುರ್ತು ವಿಪತ್ತು ನಿರ್ವಹಣೆಗಾಗಿ 24×7 ನಿಯಂತ್ರಣ ಕೊಠಡಿ ತೆರೆಯಲಾಗಿದೆ. ಮನಪಾ, ಪೊಲೀಸ್ ಇಲಾಖೆ, ಅಗ್ನಿಶಾಮಕ, ಮೆಸ್ಕಾಂ ಇಲಾಖೆಯಲ್ಲಿಯೂ ಕೂಡಾ ತುರ್ತು ನಿರ್ವಹಣೆಗಾಗಿ ನಿಯಂತ್ರಣ ಕೊಠಡಿ ತೆರೆಯಲಾಗಿದೆ. ಮೆಸ್ಕಾಂಗೆ ಸಂಬಂಧಿಸಿದ ದೂರುಗಳಿಗೆ ಆರು ಗಂಟೆಯೊಳಗೆ ಸ್ಪಂದಿಸುವುದು ಹಾಗೂ 24 ಗಂಟೆಯೊಳಗೆ ವಿದ್ಯುತ್ ಪೂರೈಕೆ ಪುನರಾರಂಭಿಸುವ ಕುರಿತಂತೆ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ದ.ಕ. ಜಿಲ್ಲೆಯಲ್ಲಿ ಮುಂಗಾರು ಪೂರ್ವ ಪ್ರಾಕೃತಿಕ ವಿಕೋಪದಿಂದ ಒಟ್ಟು 124 ಮನೆಗಳು ಹಾನಿಗೊಳಗಾಗಿವೆ. ಸುಳ್ಯ ತಾಲೂಕಿನಲ್ಲಿ 3 ಮನೆಗಳು ಸಂಪೂರ್ಣವಾಗಿ ಹಾನಿಗೊಳಗಾಗಿದ್ದು, ವಿವಿಧ ತಾಲೂಕುಗಳಲ್ಲಿ ಒಟ್ಟು 16 ಮನೆಗಳು ತೀವ್ರವಾಗಿ ಹಾಗೂ 105 ಮನೆಗಳು ಭಾಗಶ: ಹಾನಿಗೊಳಗಾಗಿವೆ ಎಂದು ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಮಾಹಿತಿ ನೀಡಿದರು. ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಮುಂಜಾಗೃತಾ ಕ್ರಮ ವಹಿಸುವುದು ಹಾಗೂ ಆ್ಯಂಬಲೆನ್ಸ್ ಗಳನ್ನು ಸನ್ನದ್ಧವಾಗಿರಿಸಲು ಆರೋಗ್ಯ ಇಲಾಖೆಗೆ ಸೂಚನೆ,ಮೀನುಗಾರಿಕಾ ನಿಷೇಧ ಅವವಧಿಯಲ್ಲಿ ನಾಡದೋಣಿಗಳು ಸಮದ್ರ, ನದಿಗೆ ಹೋಗದಂತೆ ಕಟ್ಟನಿಟ್ಟಿನ ಕ್ರಮ ವಹಿಸಲು ಮೀನುಗಾರಿಕಾ ಇಲಾಖೆಗೆ ನಿರ್ದೇಶನ,ಘಾಟಿ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸಿದ್ದಲ್ಲಿ ವಾಹನಗಳು, ಜನಸಾಮಾನ್ಯರು ಆ ಪ್ರದೇಶಕ್ಕೆ ಪ್ರವೇಶಿಸುವ ಮುಂಚಿತವಾಗಿ ಮಾಹಿತಿ ಲಭ್ಯ ಹಾಗೂ ಬದಲಿ ರಸ್ತೆ ವ್ಯವಸ್ಥೆ ಕಲ್ಪಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸೂಚನೆ,ರಸ್ತೆ ಬದಿ, ಕಟ್ಟಡಗಳ ಮೇಲಿನ ಅಪಾಯಕಾರಿ ಜಾಹೀರಾತು ಫಲಕ, ಫ್ಲೆಕ್ಸ್ಗಳಿದ್ದಲ್ಲಿ ತೆರವಿಗೆ ಸ್ಥಳೀಯ ಸಂಸ್ಥೆಗಳಿಗೆ ನಿರ್ದೇಶನ.ಮತ ಎಣಿಕೆಗೆ ಸಕಲ ಸಿದ್ಧತೆ ಪೂರ್ಣಎಣಿಕೆ ಕೇಂದ್ರ ಪ್ರವೇಶಕ್ಕೆ 3 ಹಂತದ ತಪಾಸಣೆ : ಲೋಕಸಭಾ ಚುನಾವಣೆಗೆ ಸಂಬಂಧಿಸಿ ದ.ಕ. ಜಿಲ್ಲೆಯಲ್ಲಿ ಎಪ್ರಿಲ್ 26ರಂದು ನಡೆದಿದ್ದ ಮತದಾನದ ಮತ ಎಣಿಕೆ ಪ್ರಕ್ರಿಯೆಗೆ ಸಕಲ ಸಿದ್ಧತೆ ಪೂರ್ಣಗೊಳಿಸಲಾಗಿದೆ. ಸುರತ್ಕಲ್‌ನ ಎನ್‌ಐಟಿಕೆಯ ಸ್ಟ್ರಾಂಗ್ ರೂಂನಲ್ಲಿ ಬಿಗಿ ಭದ್ರತೆ, ಸಿಸಿ ಕಣ್ಗಾವಲಿನಲ್ಲಿ ಇರಿಸಲಾಗಿರುವ ಇವಿಎಂ ಹಾಗೂ ಅಂಚೆ ಮತಪತ್ರಗಳ ಎಣಿಕೆಯ ಸಂದರ್ಭ ಎಣಿಕೆ ಕೇಂದ್ರಕ್ಕೆ ಚುನಾವಣಾ ಆಯೋಗದ ಅಧಿಕೃತ ಗುರುತಿನ ಚೀಟಿಯವರಿಗೆ 3 ಹಂತದ ತಪಾಸಣೆಯೊಂದಿಗೆ ಪ್ರವೇಶ ದೊರೆಯಲಿದೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.ಮತ ಎಣಿಕೆ ಸಿದ್ಧತೆಗಳ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ, ಮತ ಎಣಿಕೆ ಕೇಂದ್ರದಲ್ಲಿ ಭದ್ರತಾ ಕೊಠಡಿಯು ಬೆಳಗ್ಗೆ 6ರಿಂದ 7ರ ಅವಧಿಯಲ್ಲಿ ತೆರೆಯಲಾಗುತ್ತದೆ ಎಂದರು.8ಕ್ಕೆ ಆರಂಭದಲ್ಲಿ ಅಂಚೆ ಮತಗಳ ಎಣಿಕೆ, ಬಳಿಕ ಇವಿಎಂ ಮತ ಎಣಿಕೆ 8.30ಕ್ಕೆ ಆರಂಭವಾಗಲಿದೆ. ಕೇಂದ್ರದ ಸುತ್ತಲು 100 ಮೀ. ಅಂತರದೊಳಗೆ ಯಾವುದೇ ವಾಹನಗಳಿಗೆ ಪ್ರವೇಶ ಇರುವುದಿಲ್ಲ. ಈ ವಲಯವನ್ನು ಪಾದಾಚಾರಿ ವಲಯ ಎಂದು ಘೋಷಿಸಲಾಗಿದೆ. ಮತ ಎಣಿಕೆ ಕೇದ್ರದ ಸುತ್ತ ಹಾಗೂ ಎಣಿಕೆ ಕೇಂದ್ರದ ಕೊಠಡಿಯೊಳಗೆ ಸಿಸಿಟಿವಿ ಕಣ್ಗಾವಲಿದೆ. ಎಣಿಕೆ ಪ್ರಕ್ರಿಯೆ ಶಾಂತಿಯುತ ಹಾಗೂ ಸುರಕ್ಷಿತವಾಗಿ ನಡೆಸಲು ಪ್ರತಿ ಎಣಿಕೆ ಮೇಜಿನ ಸಿಬ್ಬಂದಿ ಮತ್ತು ಏಜೆಂಟರ ಮಧ್ಯೆ ಸ್ಟೀಲ್ ಪ್ರೇಮ್ ಜಾಲರಿ ಅಳವಡಿಸಲಾಗಿದೆ. ಮತ ಎಣಿಕೆ ಕೇಂದ್ರಕ್ಕೆ ಚುನಾವಣಾ ಏಜೆಂಟರು ಬೆಳಗ್ಗೆ 6ರಿಂದ 7 ಗಂಟೆಯೊಳಗೆ ಪ್ರವೇಶಿಸಿರಬೇಕು. ಬಳಿಕ ಅವಕಾಶ ನೀಡಲಾಗದು ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು.ದ.ಕ. ಜಿಲ್ಲೆಯಲ್ಲಿ ಇವಿಎಂಗಳಲ್ಲಿ 1409653 ಮತಗಳು ಚಲಾವಣೆಯಾಗಿದ್ದು, ಮನೆಯಿಂದಲೇ ಮತದಾನ, ಸೇವಾ ಮತದಾರರು, ತುರ್ತು ಸೇವೆಯಲ್ಲಿರುವವರು ಸೇರಿದಂತೆ ಮತ ಪತ್ರಗಳ ಮೂಲಕ 8537 ಮತ ಚಲಾವಣೆಯಾಗಿದೆ. ಸೇವಾ ಮತದಾರರಿಗೆ ಒಟ್ಟು 536 ಮತಪತ್ರಗಳನ್ನು ಕಳುಹಿಸಲಾಗಿದ್ದು, ಈವರೆಗೆ 231 ಮತಪತ್ರಗಳು ಸ್ವೀಕೃತವಾಗಿದ್ದು, ಮತ ಎಣಿಕೆ ಆರಂಭಕ್ಕಿಂತ ಒಂದು ಗಂಟೆ ಮುಂಚಿತವಾಗಿ ಸ್ವೀಕೃತವಾಗುವ ಸೇವಾ ಮತದಾರರ ಮತಪತ್ರಗಳನ್ನು ಸ್ವೀಕರಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.ಇವಿಎಂಗಳ ಮತ ಎಣಿಕೆಯು ಪ್ರತಿ ವಿಧಾನಸಭಾ ಕ್ಷೇತ್ರವಾರು ಎಂಟು ಕೊಠಡಿಗಳಲ್ಲಿ ತಲಾ 14 ಟೇಬಲ್‌ಗಳಂತೆ ಒಟ್ಟು 112 ಟೇಬಲ್‌ಗಳಲ್ಲಿ ನಡೆಯಲಿದೆ. ಅಂಚೆ ಮತಪತ್ರಗಳ ಎಣಿಕೆಗೆ ಪ್ರತ್ಯೇಕ ಕೊಠಡಿ ಹಾಗೂ 20 ಟೇಬಲ್ ವ್ಯವಸ್ಥೆ ಮಾಡಲಾಗಿದೆ. ಇವಿಎಂ ಮತ ಎಣಿಕೆಗಾಗಿ ಚುನಾವಣಾಧಕಾರಿ ಹೊರತುಪಡಿಸಿ 8 ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಇವಿಎಂ, ಅಂಚೆ ಮತ ಪತ್ರ ಸೇರಿದಂತೆ ಎಣಿಕೆ ಕೇಂದ್ರದಲ್ಲಿ ಒಟ್ಟು 554 ಸಿಬ್ಬಂದಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ವಿವರ ನೀಡಿದರು.ಮತ ಎಣಿಕೆ ಕೇಂದ್ರಕ್ಕೆ ಈ ವಸ್ತುಗಳು ನಿಷೇಧ : ಮತ ಎಣಿಕೆ ಕೇಂದ್ರದೊಳಗೆ ಮೊಬೈಲ್, ಐಪ್ಯಾಡ್, ಕ್ಯಾಲ್ಕುಲೇಟರ್, ಕತ್ತರಿ, ಚೂರಿ, ಲೈಟರ್, ಬೆಂಕಿಪೊಟ್ಟಣ, ಇಲೆಕ್ಟಾçನಿಕ್ ವಸ್ತುಗಳು, ಶಸ್ತ್ರಾಸ್ತ್ರ, ಸ್ಪೋಟಕಗಳು ನಿಷೇಧಿಸಲ್ಪಟ್ಟಿದ್ದು, ಅಭ್ಯರ್ಥಿಗಳು ಅಥವಾ ಏಜೆಂಟರು ಕೇವಲ ಪೆನ್, ಹಾಳೆ ನೋಟ್‌ಪ್ಯಾಡ್ ಹಾಗೂ 17ಸಿ ಫಾರಂ ಮಾತ್ರವೇ ತಮ್ಮ ಕೊಂಡೊಯ್ಯಲು ಅವಕಾಶವಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.ಸುರತ್ಕಲ್‌ನ ಎನ್‌ಐಟಿಕೆಯ ಭದ್ರತಾ ಕೊಠಡಿಗೆ ಮೂರು ಪಾಳಿಯಲ್ಲಿ ಭದ್ರತೆ ಒದಗಿಸಲಾಗಿದೆ. ಪ್ರತೀ ಪಾಳಿಯಲ್ಲಿ ಸಿವಿಲ್ ಪೊಲೀಸರು, ರಾಜ್ಯ ಮೀಸಲು ಪೊಲೀಸ್ ಪಡೆಯ ಪೊಲೀಸರು ಮೂರು ಹಂತದಲ್ಲಿ ಭದ್ರತೆಯನ್ನು ಒದಗಿಸುತ್ತಿದ್ದಾರೆ. ಡಿಸಿಪಿ, ಎಸಿಪಿ ಸೇರಿದಂತೆ ಒಟ್ಟು 850 ಪೊಲೀಸ್ ಸಿಬ್ಬಂದಿ ಮತ ಎಣಿಕೆ ದಿನದಂದು ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಮಾಹಿತಿ ನೀಡಿದರು.ದೂರು ಸಲ್ಲಿಕೆಗೆ ಅವಕಾಶ : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮತ ಎಣಿಕೆಗೆ ಸಂಬAಧಿಸಿ ದೂರು ಸಲ್ಲಿಸಲು ಅಥವಾ ಮಾಹಿತಿ ಪಡೆಯಲು ಜೂ. 1ರಿಂದ ನಿಯಂತ್ರಣ ಕೊಠಡಿ ತೆರೆಯಲಾಗಿದೆ. ಸಾರ್ವಜನಿಕರು ಈ ಸಂಬAಧ 1950 ಸಹಾಯವಾಣಿಯನ್ನು ಸಂಪರ್ಕಿಸಬಹುದು.ಪಾರ್ಕಿಂಗ್ ವ್ಯವಸ್ಥೆ : ಅಭ್ಯರ್ಥಿ ಹಾಗೂ ಏಜೆಂಟರಿಗೆ ಪ್ರಮುಖ ದ್ವಾರದ ಮಹಿಳಾ ಹಾಸ್ಟೆಲ್ ಪಕ್ಕದಲ್ಲಿ.ಕೌಂಟಿಗ್ ಏಜೆಂಟ್ ಮತ್ತು ಮಾಧ್ಯಮ ಪ್ರತಿನಿಧಿಗಳಿಗೆ ಅಡ್ಕ ಸರ್ಕಲ್ ಬಳಿಯ ಸ್ಟೇಡಿಯಂ ಬಳಿ.ಭದ್ರತಾ ಕೊಠಡಿಯಲ್ಲಿ ದಾಖಲೆಗಳ ಠೇವಣಿ ವ್ಯವಸ್ಥೆಮಾಡಲಾಗಿದೆಮತ ಎಣಿಕೆ ಮುಕ್ತಾಯವಾದ ಬಳಿಕ ಮತಯಂತ್ರ ಮತ್ತು ಚುನಾವಣಾ ದಾಖಲೆಗಳ್ನು ಜಿಲ್ಲಾ ಭದ್ರತಾ ಕೊಠಡಿಯಲ್ಲಿ ಠೇವಣಿ ಇರಿಸಲಾಗುತ್ತದೆ.25 ದಿನಗಳವರೆಗೆ ಮತಯಂತ್ರಗಳ ಸಂರಕ್ಷಣೆಚುನಾವಣಾ ಫಲಿತಾಂಶದ ದಿನದಂತು ವಿಜಯೋತ್ಸವ ಆಚರಣೆ ಸಂದರ್ಭ ಸಿಡಿಮದ್ದು, ಪಟಾಕಿ ಸಿಡಿಸುವುದನ್ನು ಜೂ. 6ರ ಬೆಳಗ್ಗೆ 5ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ದ.ಕ. ಜಿಲ್ಲೆಯಾದ್ಯಂತ ನಿಷೇಧಿಸಿ ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದರುಸಂವಾದ ಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರಿನಿವಾಸ ನಾಯಕ್ ಇಂದಾಜೆ ಅಧ್ಯಕ್ಷ ತೆ ವಹಿಸಿದ್ದರು. ಪ್ರೆಸ್ ಕ್ಲಬ್ ಮಂಗಳೂರು ಅಧ್ಯಕ್ಷ ಪಿ.ಬಿ.ಹರೀಶ್ ರೈ ಉಪಸ್ಥಿತರಿದ್ದರು. ಪತ್ರಕರ್ತರ ಸಂಘದ ಪ್ರದಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು. ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ಸ್ವಾಗತಿಸಿದರು ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್ ಕಾರ್ಯಕ್ರಮ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ಆರ್ಯಭಟ ಇಂಟರ್‌ನ್ಯಾಷನಲ್ ಅವಾರ್ಡ್ ಗೆ ಮಿತ್ರಂಪಾಡಿ ಜಯರಾಮ ರೈ ಅಬುಧಾಬಿ ಆಯ್ಕೆ.

ಮಂಗಳೂರು: ಅಬುಧಾಬಿಯಲ್ಲಿರುವ ಪ್ರತಿಷ್ಠಿತ ಇಂಡಿಯಾ ಸೋಷಿಯಲ್ ಆ್ಯಂಡ್ ಕಲ್ಚರಲ್ ಸೆಂಟರ್‌ನ ಅಧ್ಯಕ್ಷರಾಗಿ ಇತ್ತೀಚೆಗಷ್ಟೇ ಆಯ್ಕೆಯಾಗಿದ್ದ ಮಿತ್ರಂಪಾಡಿ ಜಯರಾಮ ರೈ ಅಬುಧಾಬಿ ಇವರು ಪ್ರತಿಷ್ಠಿತ ‘ಆರ್ಯಭಟ ಇಂಟರ್‌ನ್ಯಾಷನಲ್ ಅವಾರ್ಡ್-2024’ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.ಜಯರಾಮ ರೈಯವರು ಮಾಡುತ್ತಿರುವ ಸಮಾಜ ಸೇವೆ ಮತ್ತು ಸಾಂಸ್ಕೃತಿಕ, ಸಾಹಿತ್ಯಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಗಾಗಿ, ಆರ್ಯಭಟ ಕಲ್ಚರಲ್ ಆರ್ಗನೈಸೇಷನ್ ಬೆಂಗಳೂರು ಇವರು ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ. ಜೂ. 23 ರಂದು ಬೆಂಗಳೂರು ಜೆ.ಸಿ. ರಸ್ತೆಯಲ್ಲಿರುವ ರವೀಂದ್ರ ಕಲಾ ಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.ಅರಬ್ ಸಂಯುಕ್ತ ಸಂಸ್ಥಾನದ ಅಬುಧಾಬಿಯಲ್ಲಿರುವ ಅನಿವಾಸಿ ಭಾರತೀಯರ ಭವ್ಯ ಸೌಧ ಇಂಡಿಯಾ ಸೋಷಿಯಲ್ ಆ್ಯಂಡ್ ಕಲ್ಚರಲ್ ಸೆಂಟರ್ ವಿಶ್ವದಲ್ಲೇ ಅನಿವಾಸಿ ಭಾರತೀಯರ ಅತ್ಯಂತ ದೊಡ್ಡ ಸಂಘಟನೆಯಾಗಿದೆ. ಇದರ 2024-25ನೇ ಸಾಲಿನ ಅಧ್ಯಕ್ಷರಾಗಿ ಮಿತ್ರಂಪಾಡಿ ಜಯರಾಮ ರೈಯವರು ಮೇ 13ರಂದು ನಡೆದ ಚುನಾವಣೆಯಲ್ಲಿ ಬಹುಮತದಿಂದ ಆಯ್ಕೆಯಾಗಿದ್ದರು. ಪ್ರಸ್ತುತ ಅಬುಧಾಬಿಯಲ್ಲಿರುವ ಬಿನ್ ಫರ್ದನ್ ಸಂಸ್ಥೆಯ ಸಿಎಫ್‌ಓ ಆಗಿ ಯಶಸ್ವಿ ಉದ್ಯಮಿಯಾಗಿರುವ ಮಿತ್ರಂಪಾಡಿ ಜಯರಾಮ ರೈಯವರು ಕೆದಂಬಾಡಿ ಗ್ರಾಮದ ಮಿತ್ರಂಪಾಡಿ ದಿ. ಮಿತ್ರಂಪಾಡಿ ಚೆನ್ನಪ್ಪ ರೈ ಮತ್ತು ಡಿಂಬ್ರಿಗುತ್ತು ಸರಸ್ವತಿ ರೈ ಅವರ ಪುತ್ರ.ಧಾರ್ಮಿಕ ಹಾಗೂ ಸಮಾಜಸೇವೆಯಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿರುವ ಇವರು ಗ್ರಾಮೀಣ ಭಾಗದಲ್ಲಿ ಕನ್ನಡ ಭಾಷೆಯ ಬಗ್ಗೆ ಜಾಗೃತಿಯನ್ನು ಮೂಡಿಸಿ ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಹಾಗೂ ಅವರನ್ನೂ ಸಾಹಿತ್ಯ ಕ್ಷೇತ್ರಕ್ಕೆ ಬರಮಾಡಿಕೊಳ್ಳುವ ನಿಟ್ಟಿನಲ್ಲಿ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಘಟಕದಿಂದ ನಡೆಸಲ್ಪಡುವ ‘ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ’ ಎಂಬ ಘೋಷ ವಾಕ್ಯದಲ್ಲಿ 22 ಗ್ರಾಮ ಪಂಚಾಯತ್ ವ್ಯಾಪ್ತಿಯ 32 ಗ್ರಾಮಗಳಲ್ಲಿ ಪ್ರತಿ ತಿಂಗಳು ನಡೆಯುವ ಸಾಹಿತ್ಯ ಸಂಭ್ರಮದ ಕಾರ್ಯಕ್ರಮದ ಮಹಾಪೋಷಕರಾಗಿದ್ದಾರೆಈ ಗ್ರಾಮ ಸಾಹಿತ್ಯ ಸಂಭ್ರಮದಲ್ಲಿ ‘ಕನ್ನಡದಲ್ಲೂ ಐಎಎಸ್ ಬರೆಯಿರಿ’ ಅಭಿಯಾನ, ಕವಿಗೋಷ್ಠಿ ಕಥಾಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಉಪನ್ಯಾಸ, ಸಾಧಕರಿಗೆ ಸನ್ಮಾನ ನಡೆಯುತ್ತಿದ್ದು, ಈಗಾಗಲೇ ಸುಮಾರು 5 ಸಾವಿರ ಪುಟಾಣಿ ಸಾಹಿತಿಗಳಿಗೆ ವೇದಿಕೆಯನ್ನು ಕಲ್ಪಿಸಿಕೊಟ್ಟ ಗೌರವ ಹಾಗೂ 50 ಸಾವಿರಕ್ಕೂ ಅಧಿಕ ಪ್ರೇಕ್ಷಕ ವರ್ಗ ವೀಕ್ಷಿಸಿ, ಆನಂದಿಸಿದ ಗೌರವ ಇವರಿಗೂ ಸಲ್ಲುತ್ತದೆ. ಕಳೆದ 25 ವರ್ಷಗಳಿಂದ ಅರಬ್ ರಾಷ್ಟ್ರದಲ್ಲೂ ಕನ್ನಡ ಸೇವೆ ಹಾಗೂ ಕನ್ನಡಿಗರ ಸೇವೆ ಮಾಡುತ್ತಿರುವ ಇವರು ಕನ್ನಡ ಭಾಷೆ ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟಿನಲ್ಲಿ ಅನೇಕ ಕಾರ್ಯಕ್ರಮಗಳಿಗೆ ಸಹಕಾರ ನೀಡುತ್ತಾ ಬಂದಿದ್ದಾರೆ. ಅರಬ್ ಸಂಯುಕ್ತ ಸಂಸ್ಥಾನದಲ್ಲಿ ಕರ್ನಾಟಕ ಪರ ಸಂಘಟನೆಗಳ ಆಶ್ರಯದಲ್ಲಿ ನಡೆಯುವ ವಿಶ್ವಕನ್ನಡ ಸಮ್ಮೇಳನ, ವಿಶ್ವ ತುಳು ಸಮ್ಮೇಳನ, ಕವಿ ಸಮ್ಮೇಳನ, ನಾಟಕ ಯಕ್ಷಗಾನ, ಸಂಗೀತ ರಸಮಂಜರಿ, ಇನ್ನಿತರ ಸಾಮಾಜಿಕ ಚಟುವಟಿಕೆಗಳಿಗೆ ನಿರಂತರ ಬೆಂಬಲ, ಪ್ರೋತ್ಸಾಹ ನೀಡುತ್ತಿದ್ದಾರೆ.ಜಯರಾಮ ರೈಯವರು ವಿವಿಧ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಇದೀಗ ಪ್ರತಿಷ್ಠಿತ ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಇವರು ಇಂಡಿಯಾ ಸೋಷಿಯಲ್ ಸೆಂಟರ್ ಟೋಸ್ಟ್ ಮಾಸ್ಟರ್ ಇಂಟಕ್ ನ್ಯಾಷನಲ್ ಅಬಧಾಬಿ ಇದರ ಸ್ಥಾಪಕಾಧ್ಯಕ್ಷರಾಗಿ, ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ.

Scroll to Top