ಪ್ರಾದೇಶಿಕ ವಾರ್ತೆಗಳು

ಪ್ರಾದೇಶಿಕ ವಾರ್ತೆಗಳು

ಮೇ 5ರಂದು ಕನ್ನಡ ಸಂಘ ಅಲ್ ಐನ್‌ನ ವಾರ್ಷಿಕೋತ್ಸವ

ಮಂಗಳೂರು : ಅರಬ್ ಸಂಯುಕ್ತ ಸಂಸ್ಥಾನದ ಕನ್ನಡ ಸಂಘ ಅಲ್ ಐನ್ ಇದರ 21ನೇ ವಾರ್ಷಿಕೋತ್ಸವ ಮೇ 5ರಂದು ಬೆಳಗ್ಗೆ 10ರಿಂದ ಅಲ್ ಐನ್‌ನ ಬ್ಲೂ ರಾಡಿಸನ್ಸ್ ಹೋಟೆಲ್‌ನಲ್ಲಿ ನಡೆಯಲಿದೆ. ವಾರ್ಷಿಕೋತ್ಸವದ ಅಂಗವಾಗಿ ಕನ್ನಡ ಸೇವಾ ಸಾಧಕರಿಗೆ ಪ್ರಶಸ್ತಿ ಪ್ರದಾನ, ಕನ್ನಡ ಶಾಲೆ ದುಬೈ ಹಾಗೂ ಅಲ್ ಐನ್ ಹೈಸ್ಕೂಲ್‌ನ ಕನ್ನಡ ಅಧ್ಯಾಪಕರಿಗೆ ಗೌರವ ಸಮರ್ಪಣೆ, ಪ್ರತಿಭಾ ಪುರಸ್ಕಾರ, ಅನಿವಾಸಿ ಕನ್ನಡಿಗರಿಂದ ವಿವಿಧ ಮನೋರಂಜನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಸಂಘ ಅಲ್ ಐನ್‌ನ ಮುಖ್ಯ ಸಂಘಟಕಯು.ಪಿ.ಹರೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ತೆಕ್ಕಾರು ದೇವರಗುಡ್ಡೆ ಶ್ರೀ ಗೋಪಾಲಕೃಷ್ಣ ದೇವಳದ ಶಿಲಾನ್ಯಾಸ ದೇವಸ್ಥಾನ ನಿರ್ಮಾಣದ ಮೂಲಕ ಊರಿನ ಪ್ರಗತಿ: ಬ್ರಹ್ಮಾನಂದ ಶ್ರೀ

ತೆಕ್ಕಾರು: ಭಗವಂತ ನಮ್ಮ ಅಂತರಾಳದಲ್ಲಿದ್ದಾರೆ ಎಂದು ವೇದ, ಉಪನಿಷತ್ತುಗಳು, ಗ್ರಂಥಗಳು ಹೇಳುತ್ತವೆ. ಇದನ್ನು ತಿಳಿಯುವುದು ಕಷ್ಟ ಇದನ್ನು ಇಂದು ತಿಳಿಯಪಡಿಸುವ ಕಾರ್ಯವನ್ನು ಶ್ರದ್ಧಾಕೇಂದ್ರಗಳು ಮಾಡುತ್ತಿವೆ. ಇದಕ್ಕಾಗಿ ಶ್ರದ್ಧಾಕೇಂದ್ರಗಳ ಅಭಿವೃದ್ಧಿಯನ್ನು ನಾವು ಮಾಡಬೇಕು ಎಂದು ನಮ್ಮ ಹಿರಿಯರು ನಮಗೆ ಹೇಳಿ ಕೊಟ್ಟಿದ್ದಾರೆ. ಭಗವಂತ ನಮ್ಮ ಹೃದಯದಲ್ಲಿ ಚೈತನ್ಯ ಸ್ವರೂಪಿಯಾಗಿ ಆತ್ಮ ಸ್ವರೂಪಿಯಾಗಿ ಇದ್ದಾನೆ. ಇದನ್ನು ತಿಳಿಯಲು ಜ್ಞಾನಯೋಗ, ತಪಸ್ಸು, ಅನುಷ್ಠಾನಗಳನ್ನು ಮಾಡಬೇಕು, ಅದು ತುಂಬಾ ಕಷ್ಟ, ಅದಕ್ಕಾಗಿ ಭಗವಂತನ ಹತ್ತಿರಕ್ಕೆ ಹೋಗುವ ಪ್ರಯತ್ನಗಳನ್ನು ಮಾಡಬೇಕು, ಇದಕ್ಕಾಗಿ ಇಂತಹ ದೇವಾಲಯಗಳ ನಿರ್ಮಾಣ ಅಗತ್ಯ, ಇದಕ್ಕೆ ಊರವರೆಲ್ಲ ಸಂಪೂರ್ಣ ಸಹಕಾರ ನೀಡಬೇಕು, ಸುಂದರ ದೇವಸ್ಥಾನ ನಿರ್ಮಾಣದ ಮೂಲಕ ಊರಿನ ಪ್ರಗತಿಗೂ ಭಕ್ತರ ಸಹಕಾರ ಅಗತ್ಯವಾಗಿದೆ ಎಂದು ಹೇಳಿದರು.ಮಂಗಳೂರು ಕರಾವಳಿ ಕಾಲೇಜು ಸಮೂಹ ಸಂಸ್ಥೆಗಳ ಸ್ಥಾಪಕಾಧ್ಯಕ್ಷ ಹಾಗೂ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಗಣೇಶ್ ರಾವ್ ಶಿಲಾನ್ಯಾಸ ನೆರವೇರಿಸಿದರು.ಈ ಸಂದರ್ಭದಲ್ಲಿ ಟ್ರಸ್ಟ್ ಸಂಚಾಲಕ ಉದ್ಯಮಿ ಲಕ್ಷö್ಮಣ ಭಟ್ರಬೈಲು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ತುಕರಾಮ್ ನಾಯಕ್ ನಾಗರಕೋಡಿ, ಬೆಳ್ತಂಗಡಿ ರಾವ್ ಅಸೋಸಿಯೇಟ್ಸ್ನ ಧನಂಜಯ ರಾವ್ ಉಪಸ್ಥಿತರಿದ್ದರು.ದೇವಿಪ್ರಸಾದ್ ಕಾರ್ಯಕ್ರಮ ನಿರೂಪಿಸಿ. ವಿಶ್ವ ಹಿಂದೂ ಪರಿಷತ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವೀನ್ ನೆರಿಯ ಸ್ವಾಗತಿಸಿ, ಬಾರ್ಯ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಪ್ರವೀಣ್ ರೈ ವಂದಿಸಿದರು. *ರೂ.೨ ಕೋಟಿ ವೆಚ್ಚದಲ್ಲಿ ದೇವಸ್ಥಾನ ನಿರ್ಮಾಣ*ಅಂದಾಜು ರೂ.೨ ಕೋಟಿ ವೆಚ್ಚದಲ್ಲಿ ದೇವಸ್ಥಾನ ನಿರ್ಮಾಣವಾಗಲಿದೆ. ಈ ಗ್ರಾಮದಲ್ಲಿ ಹುಟ್ಟಿದ ಋಣ ಮತ್ತು ತಂದೆ ತಾಯಿಯ ಆಶೀರ್ವಾದದಿಂದ ಈ ದೇವಸ್ಥಾನದ ಅಭಿವೃದ್ಧಿ ಗೆ ಸಹಕಾರ  ನೀಡುವುದಾಗಿ ತಿಳಿಸಿದರು.ಎಲ್ಲರೂ ತನು ಮನ ಧನದಿಂದ ಸಹಕರಿಸಿದರೆ. ಒಂದು ವರ್ಷದ ಒಳಗೆ ಈ ದೇವಸ್ಥಾನ ನಿರ್ಮಾಣವಾಗಲಿದೆ. ಈ ಎಲ್ಲ ಜೀರ್ಣೋದ್ದಾರ ಕಾರ್ಯಗಳು ಯಶಸ್ವಿಯಾಗಿ ನಡೆಯಲಿ.ಗಣೇಶ್ ರಾವ್ಗೌರವಾಧ್ಯಕ್ಷ ಜೀರ್ಣೋದ್ಧಾರ ಸಮಿತಿ, *ಅಭಿಯಾನ ಇವತ್ತಿನಿಂದ ಪ್ರಾರಂಭವಾಗಲಿ* ನಾಲ್ಕು ಗ್ರಾಮದ ಮಹಿಳೆಯರನ್ನು ಒಟ್ಟು ಸೇರಿಸಿ ಮಹಿಳಾ ಸಮಿತಿ ರಚನೆ ಮಾಡಿ ಹಣ ಸಂಗ್ರಹ ಅಭಿಯಾನ ಪ್ರಾರಂಭಿಸಿ. ಜನವರಿ ಮತ್ತು ಫೆಬ್ರವರಿ ತಿಂಗಳಲ್ಲಿ ಮನೆ ಮನೆ ಹೋಗಿ ಒಂದು ಮನೆಯಿಂದ ಕನಿಷ್ಠ ೨ಕೆಜಿ ಅಡಿಕೆ ಸಂಗ್ರಹಿಸಿ ಅಡಿಕೆ ಅಭಿಯಾನ ಪ್ರಾರಂಭಿಸಿ ಅಂದಾಜು ರೂ.೧೫ ಲಕ್ಷ ಸಂಗ್ರಹವಾಗಬಹುದು.ಭಜನೆ ಮಂಡಳಿ ಮಾಡಿಕೊಡು ಮನೆ ಮನೆಗೆ ಗೋಪಾಲಕೃಷ್ಣ ದೇವರ ಫೋಟೋ ಹಿಡಿದುಕೊಂಡು ಭಜನೆ ಮೂಲಕ ಅಭಿಯಾನ ಪ್ರಾರಂಭಿಸಿ ಹಣ ಸಂಗ್ರಹ ಮಾಡಬಹುದು. ಕೊಲ್ಲಿಯಲ್ಲಿ ನಡೆದ ಬ್ರಹ್ಮಕಲಶೋತ್ಸವದಲ್ಲಿ ಇದೇ ರೀತಿ ಮಾಡಿದ್ದೇವೆ. ಬಾರ್ಯ, ಪುತ್ತಿಲ, ಉಳಿಯ, ತೆಕ್ಕಾರು ಗ್ರಾಮದಲ್ಲಿ ೧೮೦ ಮನೆ ಇದೆ. ೨೦ ಮನೆ ವ್ಯಾಪ್ತಿಗೆ ಬೈಲುವಾರು ಸಮಿತಿ ರಚನೆ ಮಾಡಿ.ಧನಂಜಯ್ ರಾವ್ನ್ಯಾಯವಾದಿ ಬೆಳ್ತಂಗಡಿ

ಪ್ರಾದೇಶಿಕ ವಾರ್ತೆಗಳು

ಮೇ 7 ರ ಲೋಕಸಭಾ ಚುನಾವಣೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಾದ್ಯ0ತ ಪ್ರಚಾರಕರಾಗಿ ಬಿ. ರಮಾನಾಥ ರೈ ನೇತೃತ್ವದ ತಂಡ.

ಬೆಂಗಳೂರು: ಮೇ.7 ರಂದು ನಡೆಯಲಿರುವ ಲೋಕಸಭಾ ಚುನಾವಣೆಗೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ  ಪ್ರಚಾರಕರಾಗಿ  ಬಿ.ರಮಾನಾಥ ರೈ ರವರ ನೇತೃತ್ವದ  ತಂಡ ರಚನೆಯಾಗಿದೆ. ಸದಸ್ಯರನ್ನಾಗಿ ಮಂಗಳೂರಿನ ಮಾಜಿ ಮೇಯರ್ ಗಳಾದ  ಕೆ.ಅಶ್ರಫ್, ಶಶಿಧರ್ ಹೆಗ್ಡೆ, ಕಾರ್ಪೊರೇಟರ್ ನವೀನ್ ಡಿಸೋಜ, ರಮಾನಂದ ಬೋಳಾರ ರವರುಗಳನ್ನು ಕೆಪಿಸಿಸಿ ಅಧ್ಯಕ್ಷರ ಆದೇಶದ ಮೇರೆಗೆ ನೇಮಿಸಲಾಗಿದೆ.

ಪ್ರಾದೇಶಿಕ ವಾರ್ತೆಗಳು

“ಗಬ್ಬರ್ ಸಿಂಗ್” ಕರಾವಳಿ ಜಿಲ್ಲೆಯಾದ್ಯಂತ ತೆರೆಗೆ

ಮಂಗಳೂರು: ಮುತ್ತು ಗೋಪಾಲ್ ಫಿಲ್ಮ್ಸ್ ಬಾರ್ಕೂರು ಲಾಂಛನದಲ್ಲಿ ಚಂದ್ರಶೇಖರ ನಾನಿಲ್, ನಾಗೇಶ್ ಪೂಜಾರಿ ಅರ್ಪಿಸುವ ಸತೀಶ್ ಪೂಜಾರಿ ಬಾರ್ಕೂರು ನಿರ್ಮಾಣದ “ಗಬ್ಬರ್ ಸಿಂಗ್” ತುಳು ಚಲನ ಚಿತ್ರ ಮಂಗಳೂರಿನ ಭಾರತ್ ಸಿನಿಮಾಸ್ ಚಿತ್ರಮಂದಿರದಲ್ಲಿ ತೆರೆಕಂಡಿದೆ.ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಟ್ರಸ್ಟಿ ಎಂ ಶೇಖರ ಪೂಜಾರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಚಲನ ಚಿತ್ರಕ್ಕೆ ಶುಭ ಹಾರೈಸಿದರು. ಮುಖ್ಯ ಅತಿಥಿ ನಿರ್ಮಾಪಕ ನಿರ್ದೇಶಕ ಪ್ರಕಾಶ್ ಪಾಂಡೇಶ್ವರ್ ಮಾತನಾಡಿ ತುಳು ಸಿನಿಮಾ ತೆರೆಕಾಣದೆ ಕೆಲವು ಸಮಯ ಆಗಿದೆ. ಬೇಸಿಗೆ ಕಾಲದಲ್ಲಿ ತರೆಕಾಣುತ್ತಿರುವ ಗಬ್ಬರ್ ಸಿಂಗ್ ಸಿನಿಮಾ ಹಾಸ್ಯಭರಿತವಾಗಿದ್ದು ಪ್ರೇಕ್ಷಕರಿಗೆ ಸಂಪೂರ್ಣ ಮನರಂಜನೆ ಒದಗಿಸಿದೆ. ಭೋಜಾರಾಜ್ ವಾಮಂಜೂರು ಅವರ ಹಾಸ್ಯಕ್ಕೆ ಒತ್ತು ಕೊಟ್ಟ ಪಾತ್ರ ಮತ್ತು ಗಿರೀಶ್ ಶೆಟ್ಟಿಯವರ ಖಡಕ್ ವಿಲನ್ ಪಾತ್ರ, ನಾಯಕ ಶರಣ್ ಶೆಟ್ಟಿ, ನಾಯಕಿ ವೆನ್ಸಿಟಾ ಡಯಾಸ್ ಪಾತ್ರಗಳು ಗಮನ ಸೆಳೆಯುತ್ತದೆ ಎಂದರು.ಸಮಾರಂಭದಲ್ಲಿ ಡಾ ಮೆಲ್ವಿನ್ ಡಿ ಸೋಜಾ, ರಂಜಿತಾ ಹೇಮನಾಥ ಶೆಟ್ಟಿ ಕಾವು, ಭೋಜರಾಜ ವಾಮಂಜೂರು, ತುಳು ಚಲನ ಚಿತ್ರನಿರ್ಮಾಪಕರ ಸಂಘದ ಅಧ್ಯಕ್ಷ ಆರ್ ಧನರಾಜ್, ಉದ್ಯಮಿ ಗಿರೀಶ್ ಎಂ ಶೆಟ್ಟಿಕಟೀಲ್, ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ, ಮೋಹನ್ ಕೊಪ್ಪಲ, ತಮ್ಮಲಕ್ಷ್ಮಣ, ಮಧು ಸುರತ್ಕಲ್, ಚಂದ್ರಶೇಖರ ನಾನಿಲ್ ಹಳೆಯಂಗಡಿ, ಜಯಾನಂದ ಅಮೀನ್, ನಿರ್ಮಾಪಕ ಸತೀಶ್ ಪೂಜಾರಿ ಬಾರ್ಕೂರು, ನಟ ಶರಣ್ ಶೆಟ್ಟಿ, ನಟಿ ವೆನ್ಸಿಟಾ ಡಯಾಸ್, ರಾಹುಲ್ ಅಮೀನ್ ಮೊದಲಾದವರು ಉಪಸ್ಥಿತರಿದ್ದರು. ಲಕ್ಷ್ಮೀಶ ಸುವರ್ಣ ಕಾರ್ಯಕ್ರಮ‌ ನಿರ್ವಹಿಸಿದರುಮಂಗಳೂರಿನಲ್ಲಿ ರೂಪವಾಣಿ, ಭಾರತ್ ಸಿನಿಮಾಸ್, ಸಿನಿಪೊಲೀಸ್, ಪಿವಿಆರ್, ಉಡುಪಿಯಲ್ಲಿ ಕಲ್ಪನಾ ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್, ಸುರತ್ಕಲ್ ನಲ್ಲಿ ಸಿನಿಗ್ಯಾಲಕ್ಸಿ, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಕಾರ್ಕಳದಲ್ಲಿ ರಾಧಿಕಾ, ಪ್ಲಾನೆಟ್, ಪುತ್ತೂರಿನಲ್ಲಿ ಭಾರತ್ ಸಿನಿಮಾಸ್, ಬೆಳ್ತಂಗಡಿಯಲ್ಲಿ ಭಾರತ್ ಚಿತ್ರ ಮಂದಿರಗಳಲ್ಲಿ”ಗಬ್ಬರ್ ಸಿಂಗ್” ಸಿನಿಮಾ ತೆರೆ ಕಂಡಿದೆ.ಗಬ್ಬರ್ ಸಿಂಗ್ ತುಳು ಸಿನಿಮಾ ವಿಭಿನ್ನ ಕತೆಯನ್ನೊಳಗೊಂಡಿದ್ದು, ಉತ್ತರ ಪ್ರದೇಶದಲ್ಲಿ ನಡೆದ ಘಟನೆಯೊಂದನ್ನು ಆಧರಿಸಿ ಪ್ರೇಕ್ಷಕರಿಗೆ ಇಷ್ಟವಾಗುವ ರೀತಿಯಲ್ಲಿ ಕತೆಯನ್ನು ಹೆಣೆಯಲಾಗಿದೆ. ಉತ್ತಮ‌ ಕತೆ, ನವಿರಾದ ಹಾಸ್ಯದೊಂದಿಗೆ ಸಿನಿಮಾ ಚೆನ್ನಾಗಿ ಮೂಡಿ ಬಂದಿದೆ. ಸಿನಿಮಾದಲ್ಲಿ ಆರು ಹಾಡು, ನಾಲ್ಕು ಫೈಟ್ಸ್ ಇದೆ. ಸಿನಿಮಾಕ್ಕೆ ಸುರತ್ಕಲ್, ಚಿತ್ರಾಪುರ, ಬೈಕಂಪಾಡಿ ಮೊದಲಾದ ಪ್ರದೇಶಗಳಲ್ಲಿ ಸಿನಿಮಾಕ್ಕೆ ಮೂರು ಹಂತಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ನಾಯಕ ನಟನಾಗಿ ಶರಣ್ ಶೆಟ್ಟಿ ನಾಯಕಿಯಾಗಿ ವೆನ್ಸಿಟಾ ಅಭಿನಯಿಸಿದ್ದಾರೆ. ಸಮಾಜದಲ್ಲಿ ಅಶಾಂತಿ ಸೃಷ್ಟಿಯಾದಾಗ ಮತ್ತೆ ಶಾಂತಿ ನೆಲೆಸುವಂತೆ ಮಾಡುವ ಖಡಕ್ ಅಧಿಕಾರಿ ಪಾತ್ರದಲ್ಲಿ ಶರಣ್ ಶೆಟ್ಟಿ ಕಾಣಿಸಿಕೊಂಡಿದ್ದಾರೆ. “ಗಬ್ಬರ್ ಸಿಂಗ್” ಆ್ಯಕ್ಷನ್ ಥ್ರಿಲ್ಲರ್ ಫ್ಯಾಮಿಲಿ ಓರಿಯೆಂಟೆಡ್ ಫಿಲ್ಮ್ ಆಗಿದೆ. ಸಿನಿಮಾ ಕತೆ ಚಿತ್ರಕತೆ ಸತೀಶ್ ಪೂಜಾರಿ ಬಾರ್ಕೂರ್. ಮಧು ಸುರತ್ಕಲ್ ಸಂಭಾಷಣೆ.ಮುಖ್ಯ ಪಾತ್ರದಲ್ಲಿ ಕುಸೇಲ್ದರಸೆ ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಪ್ರಸನ್ನ ಶೆಟ್ಟಿ ಬೈಲೂರು, ಸಾಯಿಕೃಷ್ಣ, ಉಮೇಶ್ ಮಿಜಾರ್, ರವಿರಾಮ ಕುಂಜ, ಗಿರೀಶ್ ಎಂ. ಶೆಟ್ಟಿ ಕಟೀಲ್, ವೀಣಾ ಶೆಟ್ಟಿ ಉಡುಪಿ, ಅಥರ್ವ ಪ್ರಕಾಶ್, ಉದಯ ಆಳ್ವ ಇಡ್ಯಾ, ಸಂದೀಪ್ ಭಕ್ತ, ಕಿರಣ್ ಮಲ್ಪೆ, ಪೂರ್ಣಿಮಾ ಶೆಟ್ಟಿ, ಪವಿತ್ರ ಶೆಟ್ಟಿ,ಚಂದ್ರಹಾಸ ಶೆಟ್ಟಿ ಮಾಣಿ, ಸಂಪತ್ ಲೋಬೋ, ಆಶಾ ಶೆಟ್ಟಿ ಶಿಬರೂರು, ಲಹರಿ ಶೆಟ್ಟಿ ಪಡ್ರೆ, ಶಿಲ್ಪಾ ಶೆಟ್ಟಿ, ಭವ್ಯಾ ಶೆಟ್ಟಿ ಸುರತ್ಕಲ್ ಸಂತೋಷ್, ಚಂದ್ರಹಾಸ ಶೆಟ್ಟಿ ಕಪ್ಪೆಟ್ಟು, ಫ್ರಾಂಕಿ ಕೊಳಲಗಿರಿ, ಉಮೇಶ್ ಶೆಟ್ಟಿ ಹಾವಂಜೆ, ಬೇಬಿ ಆಧ್ಯಾ ಉಡುಪಿ ಮೊದಲಾದವರಿದ್ದಾರೆ. ಚಿತ್ರಗಳು :ಸತೀಶ್ ಕಾಪಿಕಾಡ್

ಪ್ರಾದೇಶಿಕ ವಾರ್ತೆಗಳು

ಸರ್ಕಾರಿ ಶಾಲಾ ಮಕ್ಕಳಿಗೆ ಯಕ್ಷ ಶಿಕ್ಷಣ- ಪಟ್ಲ ಸತೀಶ್ ಶೆಟ್ಟಿ

ಮಂಗಳೂರು : ಸಾಂಸ್ಕೃತಿಕ ಲೋಕಕ್ಕೆ ಅದ್ವಿತೀಯ ಕೊಡುಗೆ ನೀಡಿರುವ ಕರಾವಳಿಯ ಹೆಮ್ಮೆಯ ಯಕ್ಷಗಾನ ಕಲೆಯನ್ನು ಉಳಿಸಿ,ಬೆಳೆಸುವ ಮಹತ್ವದ ಜವಾಬ್ದಾರಿ ನಮ್ಮ ಮೇಲಿದೆ. ಈ ನಿಟ್ಟಿನಲ್ಲಿ ಸರ್ಕಾರಿ ಶಾಲೆಯ ಮಕ್ಕಳಿಗೆ ಯಕ್ಷ ಶಿಕ್ಷಣ ನೀಡಲು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮುಂದಾಗಿದೆ ಎಂದು ಟ್ರಸ್ಟ್‌ ನ ಸ್ಥಾಪಕಾಧ್ಯಕ್ಷ , ಪ್ರಸಿದ್ಧ ಭಾಗವತ ಪಟ್ಲ ಸತೀಶ್ ಶೆಟ್ಟಿ ಹೇಳಿದರು.ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಮಂಗಳವಾರ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ” ಈಗಾಗಲೇ 4 ಸಾವಿರಕ್ಕೂ ಅಧಿಕ ಮಕ್ಕಳಿಗೆ ತರಬೇತಿ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಅವರಿಗೆ ವೇದಿಕೆ ಒದಗಿಸುವ ಪ್ರಯತ್ನವೂ ನಡೆಯಲಿದೆ ಎಂದರು.ಈಗಾಗಲೇ ಆಳ್ವಾಸ್ ಶಿಕ್ಷಣ ಫೌಂಡೇಶನ್ ಸಹಯೋಗದಲ್ಲಿ ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ ಯಶಸ್ವಿಯಾಗಿದೆ.ಸರ್ಕಾರಿ ಶಾಲೆಯ ಮಕ್ಕಳಿಗೆ ಹೆಚ್ಚಿನ ಸೌಲಭ್ಯಗಳು ಇರುವುದಿಲ್ಲ. ಅವರಿಗೆ ಬಾಲ್ಯದಲ್ಲೇ ಯಕ್ಷಗಾನದ ಬಗ್ಗೆ ಜ್ಞಾನ ಹಾಗೂ ಅಭಿರುಚಿ ಮೂಡಿಸುವುದು ಟ್ರಸ್ಟ್ ನ ಉದ್ದೇಶವಾಗಿದೆ ಎಂದು ಅವರು ತಿಳಿಸಿದರು.ಹಿರಿಯ ಕಲಾವಿದರ ಪೈಕಿ ಕೆಲವರು ಶಾಲಾ ಶಿಕ್ಷಣ ಪಡೆಯದಿದ್ದರೂ ರಂಗದಲ್ಲಿ ಅದ್ಭುತ ಭಾಷಾ ಪಾಂಡಿತ್ಯ, ವಾಕ್ ಚಾತುರ್ಯದ ಮೂಲಕ ಪ್ರಸಿದ್ಧಿ ಸಂಪಾದಿಸಿದ್ದಾರೆ. ಅದುವೇ ಯಕ್ಷಗಾನದ ಕಲೆಗೆ ಇರುವ ಶಕ್ತಿ. ದಶಕಗಳ ಹಿಂದೆ ಯಕ್ಷಗಾನ ಕಲಾವಿದರು ಕನಿಷ್ಠ ಸಂಬಳ ಪಡೆದು ಮೇಳದಲ್ಲಿ ಕೆಲಸ ಮಾಡುತ್ತಿದ್ದರು. ಆದರೂತಮ್ಮ ಕುಟುಂಬದ ನಿರ್ವಹಣೆಯ ಜತೆ ಕಲೆಯನ್ನು ಬೆಳೆಸಿಕೊಂಡು ಬಂದಿದ್ದಾರೆ. ಕಲಾವಿದರು ಯಾವುದೇ ತೊಂದರೆ ಗೊಳಗಾದರೆ ಬದುಕು ಸಾಗಿಸುವುದೇ ಕಷ್ಟಕರವಾಗಿತ್ತು ಇಂತಹ ಸ್ಥಿತಿಯನ್ನು ಕಂಡು ಕಲಾವಿದರಿಗೆ ಯಾವುದಾದರೂ ರೀತಿಯಲ್ಲಿ ಸಹಾಯ ಮಾಡಬೇಕೆನ್ನುವ ಆಶಯ ಉಂಟಾಯಿತು.ದೇವರ ದಯೆಯಿಂದ ನನ್ನನ್ನು ಪ್ರೀತಿಸುವ ಯಕ್ಷಗಾನ ಕಲೆಯನ್ನು ಗೌರವಿಸುವ ದೊಡ್ಡ ಜನ ಸಮೂಹದ ಬೆಂಬಲ ನನಗೆ ದೊರೆಯಿತು.ಇದರಿಂದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಸ್ಥಾಪನೆ ಮಾಡಲಾಯಿತು ಎಂದು ಅವರು ಹೇಳಿದರು.ಕಳೆದ ಎಂಟು ವರ್ಷ ಗಳಲ್ಲಿ ಟ್ರಸ್ಟ್ ಮೂಲಕ 12 ಕೋಟಿ ರೂ.ನೆರವು ನೀಡಲು ಸಾಧ್ಯವಾಗಿದೆ. 27 ಅಶಕ್ತ ಕಲಾವಿದರಿಗೆ ಮನೆ ನಿರ್ಮಿಸಿ ಹಸ್ತಾಂತರಿಸಲಾಗಿದೆ. ಹಿರಿಯ ಯಕ್ಷಗಾನ ಕಲಾವಿದ ಪ್ರೊ.ಎಂ.ಎಲ್. ಸಾಮಗರು ಮಲ್ಪೆ ಬಳಿ ಸುಮಾರು ಅರ್ಧ ಎಕರೆ ಜಾಗ ದಾನ ನೀಡಿದ್ದು, ಇಲ್ಲಿ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ದಾನಿಗಳಾದ ಆರ್.ಎಸ್.ಶಾರದಾ ಪ್ರಸಾದ್- ನಳಿನಿ ಪ್ರಸಾದ್ ನೆರವಿನಿಂದ 20 ಮನೆಗಳನ್ನು ನಿರ್ಮಿಸಿ ‘ಪಟ್ಲ ಯಕ್ಷಾಶ್ರ ಯ’ಯೋಜನೆಯಡಿ ಕಲಾವಿದರಿಗೆ ವಿತರಿಸುವ ಮಹತ್ವದ ಯೋಜನೆ ಕಾರ್ಯಗತಗೊಳ್ಳಲಿದೆ ಎಂದು ಅವರು ತಿಳಿಸಿದರು.ಹಿರಿಯ ಪತ್ರಕರ್ತ ಯು. ಕೆ. ಕುಮಾರನಾಥ್ ಕಾರ್ಯಕ್ರಮ ಉದ್ಘಾಟಿಸಿದರು.ಮಂಗಳೂರು ಪ್ರೆಸ್‌ಕ್ಲಬ್ ನ ಅಧ್ಯಕ್ಷ ಪಿ. ಬಿ. ಹರೀಶ್ ರೈ, ಅಧ್ಯಕ್ಷ ಅಧ್ಯಕ್ಷ ತೆ ವಹಿಸಿದ್ದರು. ಸಮಾರಂಭದಲ್ಲಿದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ,ಪತ್ರಿಕಾ ಭವನ ಟ್ರಸ್ಟ್ ನ ಅಧ್ಯಕ್ಷ ರಾಮಕೃಷ್ಣ ಆರ್ ಕಾರ್ಯ ಕ್ರಮ ಸಂಯೋಜಕ ದಯಾ ಕುಕ್ಕಾಜೆ , ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ ಉಪಸ್ಥಿತರಿದ್ದರು. ಪ್ರೆಸ್ ಕ್ಲಬ್ ನ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಡಸ್ಥಳ ವಂದಿಸಿದರು. ಜಿತೇಂದ್ರ ಕುಂದೇಶ್ವರ ಕಾರ್ಯಕ್ರಮ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

“ಗಬ್ಬರ್ ಸಿಂಗ್” ಮೇ 3 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಗೆ

ಮಂಗಳೂರು: ಮುತ್ತು ಗೋಪಾಲ್ ಫಿಲ್ಮ್ಸ್ ಬಾರ್ಕೂರು ಲಾಂಛನದಲ್ಲಿ ತಯಾರಾದ ಗಬ್ಬರ್ ಸಿಂಗ್ ತುಳು ಚಲನ ಚಿತ್ರ ಮೇ 3 ರಂದು  ಶುಕ್ರವಾರ ಕರಾವಳಿ ಜಿಲ್ಲೆಯಾದ್ಯಂತ  ತೆರೆ ಕಾಣಲಿದೆ.ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಸಿನಿಮಾಸ್, ಸಿನಿಪೊಲೀಸ್,  ಪಿವಿಆರ್, ಉಡುಪಿಯಲ್ಲಿ ಕಲ್ಪನಾ ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್, ಸುರತ್ಕಲ್ ನಲ್ಲಿ ಸಿನಿಗ್ಯಾಲಕ್ಸಿ, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಕಾರ್ಕಳದಲ್ಲಿ ರಾಧಿಕಾ, ಪ್ಲಾನೆಟ್,  ಪುತ್ತೂರಿನಲ್ಲಿ ಭಾರತ್ ಸಿನಿಮಾಸ್, ಬೆಳ್ತಂಗಡಿಯಲ್ಲಿ ಭಾರತ್ ಚಿತ್ರ ಮಂದಿರಗಳಲ್ಲಿ”ಗಬ್ಬರ್ ಸಿಂಗ್” ಸಿನಿಮಾ ತೆರೆ ಕಾಣಲಿದೆ.ಗಬ್ಬರ್ ಸಿಂಗ್ ತುಳು ಸಿನಿಮಾ ವಿಭಿನ್ನ ಕತೆಯನ್ನೊಳಗೊಂಡಿದ್ದು, ಉತ್ತರ ಪ್ರದೇಶದಲ್ಲಿ ನಡೆದ ಘಟನೆಯೊಂದನ್ನು ಆಧರಿಸಿ ಪ್ರೇಕ್ಷಕರಿಗೆ ಇಷ್ಟವಾಗುವ ರೀತಿಯಲ್ಲಿ ಕತೆಯನ್ನು ಹೆಣೆಯಲಾಗಿದೆ. ಉತ್ತಮ‌ ಕತೆ, ನವಿರಾದ ಹಾಸ್ಯದೊಂದಿಗೆ ಸಿನಿಮಾ ಚೆನ್ನಾಗಿ ಮೂಡಿ ಬಂದಿದೆ. ಸಿನಿಮಾದಲ್ಲಿ ಆರು ಹಾಡು, ನಾಲ್ಕು ಫೈಟ್ಸ್ ಇದೆ. ಸಿನಿಮಾಕ್ಕೆ ಸುರತ್ಕಲ್, ಚಿತ್ರಾಪುರ, ಬೈಕಂಪಾಡಿ ಮೊದಲಾದ ಪ್ರದೇಶಗಳಲ್ಲಿ ಸಿನಿಮಾಕ್ಕೆ ಮೂರು ಹಂತಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ.  ನಾಯಕ ನಟನಾಗಿ ಶರಣ್ ಶೆಟ್ಟಿ ನಾಯಕಿಯಾಗಿ ವೆನ್ಸಿಟಾ ಅಭಿನಯಿಸಿದ್ದಾರೆ.  ಸಮಾಜದಲ್ಲಿ ಅಶಾಂತಿ ಸೃಷ್ಟಿಯಾದಾಗ ಮತ್ತೆ ಶಾಂತಿ ನೆಲೆಸುವಂತೆ ಮಾಡುವ ಖಡಕ್ ಅಧಿಕಾರಿ ಪಾತ್ರದಲ್ಲಿ ಶರಣ್ ಶೆಟ್ಟಿ ಕಾಣಿಸಿಕೊಂಡಿದ್ದಾರೆ.“ಗಬ್ಬರ್ ಸಿಂಗ್” ಆ್ಯಕ್ಷನ್ ಥ್ರಿಲ್ಲರ್ ಫ್ಯಾಮಿಲಿ ಓರಿಯೆಂಟೆಡ್ ಫಿಲ್ಮ್ ಆಗಿದೆ. ಸಿನಿಮಾ ಕತೆ ಚಿತ್ರಕತೆ ಸತೀಶ್ ಪೂಜಾರಿ ಬಾರ್ಕೂರ್, ನಿರ್ದೇಶನದ ಜವಾಬ್ದಾರಿಯನ್ನು ಪ್ರದೀಪ್ ವಹಿಸಿದ್ದಾರೆ. ಮಧು ಸುರತ್ಕಲ್ ಸಂಭಾಷಣೆ ರಚಿಸಿದ್ದಾರೆ. ಮುಖ್ಯ ಪಾತ್ರದಲ್ಲಿ ಕುಸೇಲ್ದರಸೆ ನವೀನ್ ಡಿ ಪಡೀಲ್, ಅರವಿಂದ ಬೋಳಾರ್,  ಭೋಜರಾಜ ವಾಮಂಜೂರು, ಪ್ರಸನ್ನ ಶೆಟ್ಟಿ ಬೈಲೂರು,  ಸಾಯಿಕೃಷ್ಣ, ಉಮೇಶ್ ಮಿಜಾರ್, ರವಿರಾಮ ಕುಂಜ, ಗಿರೀಶ್ ಎಂ. ಶೆಟ್ಟಿ ಕಟೀಲ್, ವೀಣಾ ಶೆಟ್ಟಿ ಉಡುಪಿ, ಅಥರ್ವ ಪ್ರಕಾಶ್, ಉದಯ ಆಳ್ವ ಇಡ್ಯಾ, ಸಂದೀಪ್ ಭಕ್ತ, ಕಿರಣ್ ಮಲ್ಪೆ, ಪೂರ್ಣಿಮಾ ಶೆಟ್ಟಿ, ಪವಿತ್ರ ಶೆಟ್ಟಿ,ಚಂದ್ರಹಾಸ ಶೆಟ್ಟಿ ಮಾಣಿ, ಸಂಪತ್ ಲೋಬೋ, ಆಶಾ ಶೆಟ್ಟಿ ಶಿಬರೂರು, ಲಹರಿ ಶೆಟ್ಟಿ ಪಡ್ರೆ, ಶಿಲ್ಪಾ ಶೆಟ್ಟಿ, ಭವ್ಯಾ ಶೆಟ್ಟಿ ಸುರತ್ಕಲ್ ಸಂತೋಷ್, ಚಂದ್ರಹಾಸ ಶೆಟ್ಟಿ ಕಪ್ಪೆಟ್ಟು, ಫ್ರಾಂಕಿ ಕೊಳಲಗಿರಿ, ಉಮೇಶ್ ಶೆಟ್ಟಿ ಹಾವಂಜೆ, ಬೇಬಿ ಆಧ್ಯಾ ಉಡುಪಿ ಮೊದಲಾದವರಿದ್ದಾರೆ.ಛಾಯಾಗ್ರಹಣ: ರವಿ ಸುವರ್ಣ, ಸಂಕಲನ: ಪ್ರಜ್ವಲ್ ಸುವರ್ಣ, ಕಲೆ: ವೆಂಕಟೇಶ್ ಬೆಂಗಳೂರು, ಸಂಗೀತ: ಡೊಲ್ಪಿನ್  ಕೊಳಲಗಿರಿ. ಹಿನ್ನಲೆ ಸಂಗೀತ: ಕಾರ್ತಿಕ್ ಮುಲ್ಕಿ, ಸಾಹಸ: ಅಲ್ಟಿಮೆಟ್ ಶಿವ್  ನೃತ್ಯ: ಅವಿನಾಶ್ ಬಂಗೇರ, ಶುಭಕಿರಣ್, ಮೇಕಪ್ ಪ್ರದೀಪ್, ವಸ್ತ್ರಾಲಂಕಾರ : ಶರತ್ ಬರ್ಕೆ, ಸಹ ನಿರ್ದೇಶನ: ಪುಷ್ಪರಾಜ ರೈ, ಜಯರಾಜ್, ಸಹಾಯ: ಭಾಗ್ಯರಾಜ್. ಗಬ್ಬರ್ ಸಿಂಗ್ ಮೇ 3ರಂದು ತೆರೆಕಾಣಲಿದೆ. *ಪ್ರೀಮಿಯರ್ ಶೋ**ಈಗಾಗಲೇ ಮಸ್ಕತ್, ಕತಾರ್ ಉಡುಪಿ, ಸುರತ್ಕಲ್ ನಲ್ಲಿ   ಗಬ್ನರ್ ಸಿಂಗ್ ಸಿನಿಮಾದ ಪ್ರೀಮಿಯರ್ ಶೋ ನಡೆದಿದೆ. ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಲಭಿಸಿದೆ. ಸಾಂಸಾರಿಕ ಕತೆಯ ಜೊತೆ ಇಲ್ಲಿ ಹಾಸ್ಯವೂ ಚೆನ್ನಾಗಿ ವಕ್೯ಹೌಟ್ ಆಗಿದೆ. ನವೀನ್ ಪಡೀಲ್, ಬೋಜರಾಜ್ ವಾಮಂಜೂರು, ಅರವಿಂದ ಬೋಳಾರ್, ಸಾಯಿಕೃಷ್ಣ, ಉಮೇಶ್ ಮಿಜಾರ್, ಪ್ರಸನ್ನ ಶೆಟ್ಟಿ ಬೈಲೂರು, ರವಿರಾಮ ಕುಂಜ ಇವರ ಹಾಸ್ಯ ಸಕ್ಕತ್ತಾಗಿದೆ. ಜೊತೆಗೆ ಗಿರೀಶ್ ಶೆಟ್ಟಿ ಕಟೀಲು, ವೀಣಾ ಶೆಟ್ಟಿ ಉಡುಪಿ, ಅಥರ್ವ ಪ್ರಕಾಶ್  ಮೊದಲಾದವರ ಪಾತ್ರಗಳೂ ಕೂಡಾ ಇಲ್ಲಿ ಪ್ರಾಮುಖ್ಯತೆಯನ್ನು ಪಡೆದಿದೆ ಎಂದು ನಿರ್ಮಾಪಕ ಸತೀಶ್ ಬಾರ್ಕೂರು ತಿಳಿಸಿದ್ದಾರೆ.* ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತಿಸತೀಶ್ ಪೂಜಾರಿ ಬಾರ್ಕೂರು ನಿರ್ಮಾಪಕನಟ ಭೋಜರಾಜ ವಾಮಂಜೂರುಮಧು ಸುರತ್ಕಲ್ಚಂದ್ರ ಶೇಖರ ನಾನಿಲ್ ಹಳೆಯಂಗಡಿನಟ ಶರಣ್ ಶೆಟ್ಟಿನಟಿ ವೆನ್ಸಿಟಾ ಚಿತ್ರಗಳು : ಸತೀಶ್ ಕಾಪಿಕಾಡ್

ಪ್ರಾದೇಶಿಕ ವಾರ್ತೆಗಳು

ಕಟೀಲ್ ಬಗ್ಗೆ ಪದ್ಮರಾಜ್ ಆರ್.ಹೇಳಿದ್ದೇನು?

ವಿಶೇಷ ವರದಿ: ಡಾ. ಅಶೋಕ್ ಶೆಟ್ಟಿ ಬಿ. ಎನ್.ಮಂಗಳೂರು : ಏಪ್ರಿಲ್ 26 ಶುಕ್ರವಾರ ಲೋಕಸಭೆ ಚುನಾವಣೆ ದಿವಸ ಲೇಡಿಹಿಲ್ ನ ಏಲೋಶಿಯಸ್ ವಿದ್ಯಾ ಸಂಸ್ಥೆ ಬಳಿ ಮತದಾನಕ್ಕೆ ಬಂದಿದ್ದ ನಳಿನ್ ಕುಮಾರ್ ಕಟೀಲ್ ಅವರನ್ನು ಕಂಡಾಗ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಕಟೀಲ್ ಕಾಲಿಗೆ ನಮಸ್ಕರಿಸಿದರು. ಇದು ಸಾಮಾಜಿಕ ಜಾಲ ತಾಣಗಳಲ್ಲಿ ದೊಡ್ಡ ಮಟ್ಟದಲ್ಲಿ ಸುದ್ದಿ ವೈರಲ್ ಆಯಿತು. ಈ ಬಗ್ಗೆ ಪತ್ರಕರ್ತರು ಪ್ರಶ್ನಿಸಿದಾಗ, ಇದರಲ್ಲಿ ತಪ್ಪೇನಿದೆ? ನಳಿನ್ ಕುಮಾರ್ ಕಟೀಲ್ ಅವರು ಒಬ್ಬ ಉತ್ತಮ ಮತ್ತು ಪ್ರಬುದ್ಧ ರಾಜಕಾರಣಿ. ನನಗಿಂತ ಹಿರಿಯರು. ಹಿರಿಯರ ಕಾಲಿಗೆ ನಮಸ್ಕರಿಸಿದರೆ ತಪ್ಪೇನಿದೆ? ಇಲ್ಲಿ, ಪಕ್ಷ ಭೇದವಿಲ್ಲ. ನನಗೆ ನಳಿನ್ ಕುಮಾರ್ ಕಟೀಲ್ ಅವರ ಬಗ್ಗೆ ಅಪಾರ ಗೌರವವಿದೆಯೆಂದು ಪದ್ಮರಾಜ್ ಅವರು ಹೇಳಿದ್ದಾರೆ. 2009 ರಲ್ಲಿ ಬಿ. ಜನಾರ್ಧನ ಪೂಜಾರಿಯವರ ಎದುರು ನಳಿನ್ ಕುಮಾರ್ ಕಟೀಲ್ ಅವರು ಎಂಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದಾಗ ಕಟೀಲ್ ಅವರು ಪೂಜಾರಿಯವರ ಕಾಲಿಗೆ ಬಿದ್ದು ನಮಸ್ಕರಿಸಿದರು. ಅವಾಗ ಕಟೀಲ್ ಪರ ಭಾರೀ ಜನ ಅಲೆ ಎದ್ದು ಕಟೀಲ್ ಗೆದ್ದಿದ್ದರು. ಪದ್ಮರಾಜ್ ಅವರು ಇದೇ ಫಾರ್ಮುಲಾವನ್ನು ಬಳಸಿರಬಹುದೇ ಅನ್ನುವುದು ಬಹು ಚರ್ಚಿತ ಪ್ರಶ್ನೆಯಾಗಿ ಉಳಿದಿದೆ. ಯಾವುದಕ್ಕೂ ಜೂನ್ 4 ರ ಫಲಿತಾಂಶ ಎಲ್ಲದ್ದಕ್ಕೂ ಉತ್ತರ ನೀಡಲಿದೆ.

ಪ್ರಾದೇಶಿಕ ವಾರ್ತೆಗಳು

ಅಶ್ಲೀಲ ವಿಡಿಯೋ ಪ್ರಕರಣ :ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣನನ್ನು ಉಚ್ಚಾಟಿಸಿ ಎಚ್. ಡಿ. ದೇವೇಗೌಡ ಆದೇಶ.

ಹಾಸನ : ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಿಲುಕಿರುವ ಪ್ರಜ್ವಲ್ ರೇವಣ್ಣನನ್ನು ಉಚ್ಚಾಟಿಸಿ ಜೆಡಿಎಸ್ ವರಿಷ್ಟ ಎಚ್. ಡಿ. ದೇವೇಗೌಡ ಅವರು ಆದೇಶ ಹೊರಡಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ಉತ್ತಮ ರೀತಿಯಲ್ಲಿ ಎಲ್ಲರಿಗೂ ತಲುಪುವಲ್ಲಿ ಅಭಿವೃದ್ಧಿಪಡಿಸಿವುದು ನನ್ನ ಧ್ಯೇಯ – ಕ್ಯಾ. ಬೃಜೇಶ್ ಚೌಟ

ಮಂಗಳೂರ: ಎಪ್ರಿಲ್ 27ರ ಶನಿವಾರ ಮಧ್ಯಾಹ್ನ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದೆ ಕ್ಯಾ. ಬೃಜೇಶ್ ಚೌಟ ಅವರು ಈ ಸಲ ಗೆಲುವು ನನ್ನದೇ. ಮೋದಿಯವರು ಮೂರನೇ ಬಾರಿಗೆ ಪ್ರಧಾನಿಯಾಗಿ ದೇಶದ ಸರ್ವಾಂಗೀಣ ಅಭಿವೃದ್ಧಿಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿದ್ದಾರೆ ಎಂದು ನುಡಿದರು. ಈ ಸಂದರ್ಭ ಅವರು ತನಗೆ ಸಹಕರಿಸಿದ ಬಿಜೆಪಿ ನಾಯಕರಿಗೆ, ಕಾರ್ಯಕರ್ತರಿಗೆ, ಮತದಾರರಿಗೆ, ಮಾಧ್ಯಮ ಮಿತ್ರರಿಗೆ ಧನ್ಯವಾದ ಸಲ್ಲಿಸಿದರು. ಪತ್ರಿಕಾಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಪಕ್ಷದ ಜಿಲ್ಲಾ ಚುನಾವಣಾ ಉಸ್ತುವಾರಿ ಕ್ಯಾ. ಗಣೇಶ್ ಕಾರ್ಣಿಕ್, ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ನಿತಿನ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

1 ಲಕ್ಷದ 20 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತೇನೆ : ಪದ್ಮರಾಜ್ ಆರ್.

ಮಂಗಳೂರು: ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಎಪ್ರಿಲ್ 27ರ ಶನಿವಾರ ಸಂಜೆ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪದ್ಮರಾಜ್ ಆರ್.ಅವರು ಜಿಲ್ಲಾ ಕಾಂಗ್ರೆಸ್ ನಾಯಕರಿಗೆ, ಕಾರ್ಯಕರ್ತರಿಗೆ ಮತದಾರರಿಗೆ, ಮಾಧ್ಯಮ ಮಿತ್ರರಿಗೆ ಧನ್ಯವಾದ ಸಲ್ಲಿಸಿದರು. ಈ ಸಂದರ್ಭ Mp mla’s ನ್ಯೂಸ್ ಕೇಳಿದ ಪ್ರಶ್ನೆಗೆ ನಾನು 1 ಲಕ್ಷದ 20 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತೇನೆ. ದ.ಕ. ಜಿಲ್ಲೆಯನ್ನು ಸಾಮರಸ್ಯ, ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುವಲ್ಲಿ ಸರ್ವ ಪ್ರಯತ್ನ ಮಾಡುತ್ತೇನೆ ಎಂದರು. ಮೊದಲಿಗೆ, ಮಾಜಿ ಮೇಯರ್ ಶಶಿಧರ ಹೆಗ್ಡೆಯವರು ಸ್ವಾಗತಿಸಿದರು. ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಬಿ. ರಮಾನಾಥ ರೈ, ಅಭಯಚಂದ್ರ ಜೈನ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಶುಭೋದಯ ಆಳ್ವ, ಮೊಹಮ್ಮದ್ ರಾಮಲ್ ಕಟ್ಟೆ ಉಪಸ್ಥಿತರಿದ್ದರು.

Scroll to Top