ಪ್ರಾದೇಶಿಕ ವಾರ್ತೆಗಳು

ಪ್ರಾದೇಶಿಕ ವಾರ್ತೆಗಳು

ಬೆಳಗಾವಿಯಲ್ಲಿ ಹೋಟೆಲ್ ಕಾರ್ಮಿಕರಾಗಿದ್ದ ರಘುವೀರ ಶೆಟ್ಟಿ ನಿಧನ

ಬೆಳಗಾವಿ: ಬೆಳಗಾವಿಯಲ್ಲಿ ಹೋಟೆಲ್ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಕರಾವಳಿ ಮೂಲದ ವ್ಯಕ್ತಿಯೊಬ್ಬರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸುಮಾರು 45 ವರ್ಷ ವಯಸ್ಸಿನ ರಘುವೀರ ಶೆಟ್ಟಿ ಎಂಬುವವರು ಕಳೆದ ಎರಡು ವರ್ಷಗಳಿಂದ ಬೆಳಗಾವಿಯ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದರು. ಆದರೆ, ಹೊಟೇಲಿನಲ್ಲಿ ಕೆಲಸ ಮಾಡುತ್ತಿದ್ದಾಗ ಅವರು ನನಗೆ ಸಂಬಂಧಿಕರು ಇಲ್ಲ ಎಂದು ಹೇಳಿಕೊಂಡಿದ್ದು ಯಾರಾದರೂ ಇದ್ದರೆ ಬೆಳಗಾವಿ ಟಿಳಕವಾಡಿ ಪೊಲೀಸರನ್ನು ಸಂಪರ್ಕಿಸಬಹುದು.

ಪ್ರಾದೇಶಿಕ ವಾರ್ತೆಗಳು

ಮೂಲ್ಕಿಯ ಬಿಲ್ಲವ ಸಮಾಜ ಸೇವಾ ಸಂಘದ ನಾರಾಯಣಗುರು ಮಂದಿರಕ್ಕೆ ಯು.ಟಿ.ಖಾದರ್ ಭೇಟಿ ನೀಡಿ ಪ್ರಾರ್ಥನೆ. ‘ಸಮಾಜ ಸ್ಪಂದನೆಯೂ ದೇಶ ಸೇವೆಯಾಗಿದೆ’ : ಯು.ಟಿ.ಖಾದರ್.

ಮೂಲ್ಕಿ: ಸಮಾಜದ ಎಲ್ಲಾ ವರ್ಗದವರಲ್ಲಿಯೂ ಸೌಹಾರ್ದತೆಯ ಸಂದೇಶವನ್ನು ನೀಡಿದ ನಾರಾಯಣಗುರುಗಳು ಸಮಾನತೆ ಮತ್ತು ಮಾನವೀತಯತೆಯ ಪ್ರತೀಕವಾಗಿದ್ದಾರೆ. ಅವರ ಆದರ್ಶವನ್ನಿಟ್ಟುಕೊಂಡ ಬಿಲ್ಲವ ಸಂಘಟನೆಗಳು ಸಮಾಜ ಸ್ಪಂದನೆ ಮಾಡುವ ದೇಶಸೇವೆಯಂತೆ ಕೆಲಸ ನಿರ್ವಹಿಸುತ್ತಿದೆ. ಶಿಕ್ಷಣ, ಸಾಮಾಜಿಕ, ಸಾಂಸ್ಕೃತಿಕತೆಯ ಮೌಲ್ಯವನ್ನು ಎತ್ತಿ ಹಿಡಿಯುವ ಕೆಲಸ ನಿರ್ವಹಿಸಬೇಕು ಎಂದು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಹೇಳಿದರು.ಅವರು ಮೂಲ್ಕಿಯ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ನಡೆದ ಉನ್ನತ ಶಿಕ್ಷಣ ವಿದ್ಯಾರ್ಥಿವೇತನ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ವಾಮನ ಕೋಟ್ಯಾನ್ ನಡಿಕುದ್ರು ಅಧ್ಯಕ್ಷತೆಯನ್ನು ವಹಿಸಿದ್ದರು.ಈ ಸಂದರ್ಭದಲ್ಲಿ 14 ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ವಿದ್ಯಾರ್ಥಿ ವೇತನ ಹಾಗೂ 7 ವಿದ್ಯಾರ್ಥಿಗಳಿಗೆ ಒಟ್ಟು 1.5 ಲಕ್ಷ ರೂ.ಗಳ ವಿದ್ಯಾನಿಧಿಯನ್ನು ಹಸ್ತಾಂತರಿಸಲಾಯಿತು. ಯು. ಟಿ. ಖಾದರ್ ಅವರನ್ನು ಗೌರವಿಸಲಾಯಿತು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಶುಭಹಾರೈಸಿದರು.ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಕೆಪಿಸಿಸಿ ಕೋ-ಆರ್ಡಿನೇಟರ್ ಎಚ್.ವಸಂತ ಬೆರ್ನಾಡ್, ಕೆ.ಎಸ್.ರಾವ್ ನಗರ ಬಿಲ್ಲವ ಸಂಘದ ಅಧ್ಯಕ್ಷ ಮಹಾಬಲ ಸನಿಲ್, ಮೂಲ್ಕಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಸತೀಶ್ ಅಂಚನ್, ಬಿಲ್ಲವ ಸಂಘದ ಕಟ್ಟಡ ಸಮಿತಿ ಅಧ್ಯಕ್ಷ ಗೋಪಿನಾಥ ಪಡಂಗ, ಪ್ರಧಾನ ಕಾರ್ಯದರ್ಶಿ ಜಯಕುಮಾರ್ ಕುಬೆವೂರು, ಕೋಶಾಧಿಕಾರಿ ಚಂದ್ರಶೇಖರ ಕನ್ನಡರೆಬೆಟ್ಟು, ಶ್ರೀ ನಾರಾಯಣಗುರು ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕ ಹರೀಂದ್ರ ಸುವರ್ಣ, ಮಹಿಳಾ ಮಂಡಳಿ ಅಧ್ಯಕ್ಷೆ ಶಶಿಕಲಾ ಅಮೀನ್, ಸೇವಾದಳದ ದಳಪತಿ ಶಶಿಕಾಂತ ಸುವರ್ಣ ಮತ್ತಿತರರು ಇದ್ದರು. ನರೇಂದ್ರ ಕೆರೆಕಾಡು ಕಾರ್ಯಕ್ರಮ ನಿರೂಪಿಸಿದರು.ಕಾರ್ಯಕ್ರಮದ ಮೊದಲು ಸಂಘದ ನಾರಾಯಣಗುರು ಮಂದಿರಕ್ಕೆ ಯು.ಟಿ.ಖಾದರ್ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಪ್ರಾದೇಶಿಕ ವಾರ್ತೆಗಳು

ಮಂಗಳೂರು: ಕೆಲರಾಯ್ ಚರ್ಚ್ ನಲ್ಲಿ ಕ್ರೈಸ್ತ ಸಮುದಾಯದ ಜನೋತ್ಸವ

ಮಂಗಳೂರು: ಮಂಗಳೂರಿನ ಕೆಲರಾಯ್ ಸೈಂಟ್ ಆನ್ಸ್ ಚರ್ಚ್ ಮತ್ತು ಕ್ಯಾಥೊಲಿಕ್ ಸಭಾ ಕೆಲರಾಯ್ ಘಟಕದ ಜಂಟಿ ಆಶ್ರಯದಲ್ಲಿ ಕ್ರೈಸ್ತ ಸಮುದಾಯದ ಜನೋತ್ಸವ (ಲಾಯಿಕೋತ್ಸವ್ – 2025) ಸಪ್ಟೆಂಬರ್ 21 ರಂದು ಕೆಲರಾಯ್ ಗೋಲ್ಡನ್ ಜುಬಿಲಿ ಸಭಾಂಗಣದಲ್ಲಿ ನಡೆಯಲಿದೆ.ವಿವಿಧ ಸಂಘಟನೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಸಮಾಜ ಮುಖಿ ಕಾರ್ಯಕ್ರಮಗಳನ್ನು ನಡೆಸಲು ಮುಂದಾಳುತ್ವ ವಹಿಸಲು ಆಸಕ್ತಿ ಇರುವ ಕ್ರೈಸ್ತ ಸಮುದಾಯದ ಮುಖಂಡರಿಗೆ, ಯುವ ಜನರಿಗೆ ಮತ್ತು ರಾಜಕೀಯ ಕ್ಷೇತ್ರದಲ್ಲಿ ಆಸಕ್ತಿ ಇರುವವರಿಗೆ ತರಬೇತಿ, ಮಾಹಿತಿ ನೀಡುವುದು, ಸಮಾಲೋಚನೆ ನಡೆಸುವುದು ಮತ್ತು ಏಕತೆಯ ಬಗ್ಗೆ ಮಾಹಿತಿ ನೀಡುವುದು ಇದರ ಉದ್ದೇಶವಾಗಿದೆ. ಬೆಳಗ್ಗೆ 8.30 ರಿಂದ ಮಧ್ಯಾಹ್ನ 1 ಗಂಟೆ ತನಕ ನಡೆಯುವ ಈ ಕಾರ್ಯಕ್ರಮದಲ್ಲಿ ನೀರುಮಾರ್ಗ, ಬೊಂಡಂತಿಲ, ಉಳಾಯಿಬೆಟ್ಟು, ಮಲ್ಲೂರು, ಅಡ್ಯಾರ್, ಅರ್ಕುಳ, ಮೂಡುಶೆಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿ ಹಾಗೂ ಮಂಗಳೂರು ಮಹಾ ನಗರ ಪಾಲಿಕೆಯ ಪದವು, ವಾಮಂಜೂರು ವಾರ್ಡ್ ಗಳ ವ್ಯಾಪ್ತಿಗೆ ಬರುವ 5 ಚರ್ಚು ಗಳ (ಕೆಲರಾಯ್, ನೀರುಮಾರ್ಗ, ಪೆರ್ಮಾಯ್, ಪಾಲ್ದನೆ, ವಾಮಂಜೂರು) ಕ್ರೈಸ್ತ ಸಮುದಾಯದ ಚರ್ಚ್ ಪಾಲನಾ ಸಮಿತಿಯ ಸದಸ್ಯರು, ಕ್ಯಾಥೊಲಿಕ್ ಸಭಾ ಘಟಕಗಳ ಸದಸ್ಯರು, ಐ. ಸಿ. ವೈ. ಎಂ. ಸದಸ್ಯರು, ವಿವಿಧ ಮುಖಂಡರು ಹಾಗೂ ಆಸಕ್ತರು ಸೇರಿದಂತೆ ಸುಮಾರು 700 ಕ್ಕಿಂತ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಕೆಲರಾಯ್ ಚರ್ಚ್ ಧರ್ಮಗುರು ವಂದನೀಯ ಫಾ. ಸಿಲ್ವೆಸ್ಟರ್ ಡಿ’ ಕೋಸ್ಟಾ ಮತ್ತು ಕ್ಯಾಥೋಲಿಕ್ ಸಭಾ ಅಧ್ಯಕ್ಷ ಡೊಟ್ಟಿ ಬ್ರಾಗ್ಸ್ ಅವರು ತಿಳಿಸಿದ್ದಾರೆ. ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ನಿರ್ದೇಶಕ ವಂದನೀಯ ಫಾ. ಫೌಸ್ಟಿನ್ ಲೋಬೊ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ಪಾಲ್ದನೆ ಚರ್ಚ್ ನಲ್ಲಿ ಸ್ತ್ರೀ ಆಯೋಗ ಉದ್ಘಾಟನೆ

ಮಂಗಳೂರು: ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಸ್ತ್ರೀ ಆಯೋಗವನ್ನು ರಚಿಸಲಾಗಿದ್ದು, ಅದರ ಉದ್ಘಾಟನೆ ನೆರವೇರಿತು.ಉದ್ಘಾಟನಾ ಸಮಾರಂಭದಲ್ಲಿ ಚರ್ಚ್ ಧರ್ಮಗುರು ವಂದನೀಯ ಫಾ. ರಿಚಾರ್ಡ್ ಅಲೋಸಿಯಸ್ ಕುವೆಲ್ಲೊ ಅವರು ಭಾಗವಹಿಸಿ ಮಾತನಾಡಿ, ಸ್ತ್ರೀ ಆಯೋಗ ಘಟಕಕ್ಕೆ ಶುಭ ಹಾರೈಸಿದರು.ಘಟಕದ ಅಧ್ಯಕ್ಷರಾಗಿ ಶೀಲಾ ಡಿ ಸೋಜಾ, ಕಾರ್ಯದರ್ಶಿಯಾಗಿ ವೆಲೆಂಟಿನಾ ರೊಡ್ರಿಗಸ್, ಖಜಾಂಚಿಯಾಗಿ ಲಿಝೀ ಫೆರ್ನಾಂಡಿಸ್, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಪ್ರೆಸಿಲ್ಲಾ ಫೆರ್ನಾಂಡಿಸ್, ಶಾಂತಿ ಮೊಂತೇರೊ, ಶೋಭಾ ಸಿಕ್ವೇರಾ, ಜೂಲಿಯಾನಾ ಫೆರ್ನಾಂಡಿಸ್ ಅವರು ಆಯ್ಕೆಯಾಗಿದ್ದಾರೆ.ಉದ್ಘಾಟನಾ ಸಮಾರಂಭದಲ್ಲಿ ಚರ್ಚ್ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ಆಸ್ಟಿನ್ ಮೊಂತೇರೊ, ಸರ್ವ ಆಯೋಗಗಳ ಸಂಚಾಲಕ ಜೋಸ್ಲಿನ್ ಲೋಬೊ, ಸ್ತ್ರೀ ಆಯೋಗದ ಕೇಂದ್ರೀಯ ಸಮಿತಿಯ ಪ್ರತಿನಿಧಿಗಳಾಗಿ ಕಾರ್ಯದರ್ಶಿ ಅಮಿತಾ ಫ್ರಾಂಕ್ ಮತ್ತು ಕಾರ್ಯಕಾರಿ ಸಮಿತಿ ಸದಸ್ಯೆ ಉಷಾ ಫೆರ್ನಾಂಡಿಸ್ ಅವರು ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾದ ಮಂಗಳೂರಿನ ಶಿಕ್ಷಕಿ ಶ್ರೀಮತಿ ಐರಿನ್ ಲೀನಾ ಸಿಕ್ವೇರಾ

ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಮಂಗಳೂರಿನ ಶಿಕ್ಷಕಿ ಶ್ರೀಮತಿ ಐರಿನ್ ಲೀನಾ ಸಿಕ್ವೇರಾ ಇವರು ದಕ್ಷಿಣಕನ್ನಡ ಜಿಲ್ಲೆಯ ಕೆಥೋಲಿಕ್ ವಿದ್ಯಾ ಮಂಡಳಿಯ ಆಡಳಿತಕ್ಕೊಳಪಟ್ಟ ನಂತೂರು ಕೆಲ್ವರಿ ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕಿ ಶ್ರೀಮತಿ ಐರಿನ್ ಲೀನಾ ಸಿಕ್ವೇರಾ ಇವರು ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಿಕ್ಷಕ ಸಂಘ ಬೆಗಳೂರು ಇವರಿಂದ ನೀಡಲ್ಪಡುವ 2025-26ನೇಯ ಸಾಲಿನ ರಾಜ್ಯ ಮಟ್ಟದ ಉತ್ತಮ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಇತ್ತೀಚೆಗೆ ಹಾವೇರಿ ಜಿಲ್ಲೆಯ ರಾಣಿಬೆನ್ನೂರುನಲ್ಲಿ ನಡೆದ ಶಿಕ್ಷಕ ದಿನಾಚರಣೆ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನಸಭೆಯ ಉಪಸಭಾಧ್ಯಕ್ಷರಾದ ಗೌರವಾನ್ವಿತ ಶ್ರೀರುದ್ರಪ್ಪ ಲಮಾಣಿˌ ಸ್ಥಳೀಯ ಶಾಸಕರುˌ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಆಗಮಿಸಿದ ಸಾವಿರಾರು ಶಿಕ್ಷಕರ ಸಮ್ಮುಖದಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆಯ ರಚಿವರಾದ ಸನ್ಮಾನ್ಯ ಶ್ರೀ ಮಧು ಬಂಗಾರಪ್ಪನವರು ಪ್ರದಾನ ಮಾಡಿ ಶಿಕ್ಷಕಿ ನಿಸ್ವಾರ್ಥ ಸೇವೆಯನ್ನು ಶ್ಲಾಘಿಸಿ ಗೌರವಿಸಿದರು. ಶ್ರೀಮತಿ ಐರಿನ್ ಲೀನಾ ಸಿಕ್ವೇರಾ ಇವರು ಹಲವಾರು ವರ್ಷಗಳಿಂದ ಈ ಶಾಲೆಯ ಸರ್ವಾಂಗೀಣ ಬೆಳವಣಿಗೆಗಾಗಿ ನಿಸ್ವಾರ್ಥ ಸೇವೆಯನ್ನು ಸಲ್ಲಿಸಿದ್ದಾರೆ.ಇವರು ಕದ್ರಿ ಕೈಬಟ್ಟಲು ಎಂಬಲ್ಲಿಯ ನಿವಾಸಿಯಾಗಿದ್ದು ಫರ್ನ್ಸ್ ಸರ್ವಿಸ್ ಸಂಸ್ಥೆಯ ಮಾಲಕ ಶ್ರೀ ಟೈಟಸ್ ಫೆರ್ನಾಂಡಿಸ್ ಇವರ ಧರ್ಮಪತ್ನಿಯಾಗಿರುತ್ತಾರೆ.

ಪ್ರಾದೇಶಿಕ ವಾರ್ತೆಗಳು

ರಾಜ್ಯ ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ಎಸ್.ಜೆ.ಇ.ಸಿ. ಮಹಿಳಾ ತಂಡ ಚಾಂಪಿಯನ್

ಮಂಗಳೂರು: ವಾಮಂಜೂರಿನ ಸೈಂಟ್ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನ ಮಹಿಳಾ ಶಟ್ಲ್ ಬ್ಯಾಡ್ಮಿಂಟನ್ ತಂಡವು ಸಪ್ಟೆಂಬರ್ 11 ಮತ್ತು 12 ರಂದು ಮಂಡ್ಯದ ಪಿ.ಎಸ್. ಸಿ. ಇ. ನಲ್ಲಿ ನಡೆದ ವಿಟಿಯು ರಾಜ್ಯ ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ವಿಜೇತರ ಟ್ರೋಫಿಯನ್ನು ಪಡೆದುಕೊಳ್ಳುವ ಮೂಲಕ ಇತಿಹಾಸ ಸೃಷ್ಟಿಸಿತು. ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ ವಿಭಾಗದ ತೃತೀಯ ವರ್ಷದ ಟ್ರಿವಿಯಾ ಕ್ರೆಡಾ ವೇಗಸ್ ಅವರಿಗೆ ಪಂದ್ಯಾವಳಿಯ ಅತ್ಯುತ್ತಮ ಮಹಿಳಾ ಆಟಗಾರ್ತಿ ಪ್ರಶಸ್ತಿ ದೊರಕಿತು. ಕ್ರೀಡಾ ಶಿಕ್ಷಣ ನಿರ್ದೇಶಕಿ (ಪಿಇಡಿ) ವನೀಶಾ ವಿ. ರೊಡ್ರಿಗಸ್ ಮತ್ತು ಸಹಾಯಕ ಪಿಇಡಿ ಸುಧೀರ್ ಅವರ ಮಾರ್ಗದರ್ಶನದಲ್ಲಿ ತಂಡಗಳು ಶ್ರೇಷ್ಠ ಕೌಶಲ್ಯವನ್ನು ಪ್ರದರ್ಶಿಸಿದವು. ವಿಜೇತ ತಂಡವು ಟ್ರಿವಿಯಾ ಕ್ರೆಡಾ ವೇಗಸ್ , ತ್ರಿಶಾ ಕ್ಲಾರಿಸ್ ವೇಗಸ್, ಕ್ರಿಸ್ಟಲ್ ಡ್ಯಾಪ್ನಿ ಮೊಂತೇರೊ ಸೇರಿದಂತೆ ಅನೇಕ ವಿಭಾಗಗಳ ಪ್ರತಿಭಾನ್ವಿತ ಆಟಗಾರರನ್ನು ಒಳಗೊಂಡಿತ್ತು.

ಪ್ರಾದೇಶಿಕ ವಾರ್ತೆಗಳು

ಕೊಂಕಣಿ ಹಾಡುಗಾರಿಕೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

ಮಂಗಳೂರು: ಮಂಗಳೂರಿನ ಕೊಂಕಣಿ ನಾಟಕ ಸಭಾ ನಡೆಸಿದ 61 ನೇ ಕೊಂಕಣಿ ಹಾಡುಗಾರಿಕೆ ಸ್ಪರ್ಧೆಯಲ್ಲಿ ಪಾಲ್ದನೆ ನಿವಾಸಿ ರಾಜೇಶ್ ವೇಗಸ್ ಮತ್ತು ಸ್ಯಾಂಡ್ರಾ ವೇಗಸ್ ಅವರ ಪುತ್ರಿ ಟೀನಾ ಕ್ಯಾರಿಸ್ ವೇಗಸ್ ಅವರು 12 ರಿಂದ 15 ವರ್ಷ ವಯೋಮಿತಿ ವಿಭಾಗದಲ್ಲಿ ಸೋಲೋ ಹಾಡುವಿಕೆ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ಡಾ.ಎಂ.ಎನ್.ರಾಜೇಂದ್ರ ಕುಮಾರ್ ರವರಿಗೆ ಮಂಗಳೂರು ರತ್ನ ಪ್ರಶಸ್ತಿ ಪ್ರದಾನ

ಮಂಗಳೂರು, ಸೆ.20;ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳದ ಅಧ್ಯಕ್ಷ, ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಅಧ್ಯಕ್ಷ ಇಪ್ಕೋ ನವದೆಹಲಿಯ ನಿರ್ದೇಶಕ,ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿ., ಬೆಂಗಳೂರು ಇದರ ನಿರ್ದೇಶಕ, ಮೆನೇಜಿಂಗ್ ಟ್ರಸ್ಟಿ, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ (ರಿ)ನ ಮ್ಯಾನೇಜಿಂಗ್ ಟ್ರಸ್ಟಿಡಾ| ಎಂ. ಎನ್. ರಾಜೇಂದ್ರ ಕುಮಾ‌ರ್ ರವರಿಗೆ ವಿ ಆರ್ ಫ್ರೆಂಡ್ಸ್ ಯುನೈಟೆಡ್ ವತಿಯಿಂದ ‘ಮಂಗಳೂರು ರತ್ನ ‘ ಪ್ರಶಸ್ತಿ ನೀಡಿ ಶನಿವಾರ ಎಸ್ ಸಿಡಿಸಿಸಿ ಬ್ಯಾಂಕ್ ಸೌಧದಲ್ಲಿ ಗೌರವಿಸಲಾಯಿತು.ಈ ಸಂದರ್ಭ ದಲ್ಲಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ಬಲ್ಯೊಟ್ಟು, ವ್ಯವಸ್ಥಾಪಕ ನಿರ್ದೇಶಕರಾದ ಗೋಪಾಲಕೃಷ್ಣ ಭಟ್,ಉದ್ಯಮಿ ಜಯಪ್ರಕಾಶ್ ತುಂಬೆ,ವೀ ಆರ್ ಯುನೈಟೆಡ್ ಸಂಸ್ಥೆಯ ಅಧ್ಯಕ್ಷ ಆಜ್ಫರ್ ರಾಝಕ್, ಉಪಾಧ್ಯಕ್ಷ ಮನೋಜ್ ಕುಮಾರ್, ಕಾರ್ಯದರ್ಶಿ ನಿಶಾನ್ ಭಂಡಾರಿ, ಕೋಶಾಧಿಕಾರಿ ಸುದೇಶ್ ಭಂಡಾರಿ ಇರಾ, ಸಲಹೆಗಾರರಾದ ಶ್ರೀನಿವಾಸ್ ನಾಯಕ್ ಇಂದಾಜೆ, ದೀಪಕ್ ಪಿಲಾರ್, ನಿತಿನ್ ಶೆಟ್ಟಿ, ಸುಜಿತ್ ಭಂಡಾರಿ ಉಪಸ್ಥಿತರಿದ್ದರು.ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ಪೋಷಕರು ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಎಚ್ಚರ ವಹಿಸಲು ಕರೆ

ಮಂಗಳೂರು,ಮಕ್ಕಳ ಆರೋಗ್ಯದ ಕುರಿತು ಪೋಷಕರು ಹೆಚ್ಚಿನ ಗಮನ ಹಾಗೂ ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ತಿಳಿಸಿದರು.ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ವತಿಯಿಂದ ನಗರದ ಬಿಜೈ ಕಾಪಿಕಾಡ್ ಅಂಗನವಾಡಿ ಶಾಲೆಯಲ್ಲಿ ನಡೆದ ಪೋಷಣಾ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಕಾರ್ಯಕ್ರಮದಲ್ಲಿ ಕೆ ಎಂ ಸಿ ಆಸ್ಪತ್ರೆಯ ಡಾ ಶರಾವತಿ ಹಾಗೂ ಡಾ. ಎಲ್ಸ್ ಷಾ ಮಾಹಿತಿ ನೀಡಿದರು. ಶಾಲಾ ಮುಖ್ಯ ಗುರು ಲೀನಾ, ಸಿಆರ್ಪಿ ವಿನೋದ ಅಮೀನ್, ಬಾಲವಿಕಾಸ ಸಮಿತಿ ಅಧ್ಯಕ್ಷೆ ಸವಿತಾ, ಆರೋಗ್ಯ ಸಹಾಯಕಿಯರಾದ ಸುಮಿತ್ರಾ, ಭಾರತಿ, ಅಂಗನವಾಡಿ ಶಿಕ್ಷಕಿ ನಂದಾ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ಇಂದು ಡಾ. ಎ.ಸದಾನಂದ ಶೆಟ್ಟಿಯವರ ಹುಟ್ಟುಹಬ್ಬ.

ಮಂಗಳೂರು – ಇಂದು (ಸೆ.20) ಶ್ರೀದೇವಿ ಏಜುಕೇಶನ್ ಟ್ರಸ್ಟ್ ನ ಅಧ್ಯಕ್ಷ ಎ.ಸದಾನಂದ ಶೆಟ್ಟಿಯವರ ಹುಟ್ಟುಹಬ್ಬ. ನೇರ ನಡೆ ನುಡಿಯ ಕೊಡುಗೈ ದಾನಿ,ವಿಶ್ವ ಬಂಟರ ಸಮ್ಮೇಳನದ ಯಶಸ್ವಿ ಸಂಘಟಕ, ಕ್ರೀಡಾ ಕ್ಷೇತ್ರದ ಜನಪ್ರಿಯ ನಾಯಕರು,ಸಂಘಟಕರು, ಪೋಷಕರು, ಸೌಹಾರ್ದ ವ್ಯಕ್ತಿತ್ವದ ನಿಸ್ವಾರ್ಥ ನೇತಾರ, ಟಾಕ್ ಆಪ್ ದಿ ಟೌನ್,ಬಡವರ ಬಂಧು,ಬಂಟರ ಯಾನೆ ಮಾತೃ ಸಂಘದ ಮಾಜಿ ಅಧ್ಯಕ್ಷರು, ವರ್ಲ್ಡ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ನ ಅಧ್ಯಕ್ಷರು ,ಬಂಟ ಸಮಾಜದ ರಾಜಾ ಹುಲಿ ಡಾ. ಎ.ಸದಾನಂದ ಶೆಟ್ಟಿಯವರ ಹುಟ್ಟು ಹಬ್ಬಕ್ಕೆ Mp mla*s ನ್ಯೂಸ್ ಶುಭ ಹಾರೈಸುತ್ತದೆ

Scroll to Top