ಪ್ರಾದೇಶಿಕ ವಾರ್ತೆಗಳು

ಪ್ರಾದೇಶಿಕ ವಾರ್ತೆಗಳು

ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷರಾಗಿ ಪುಂಡಲೀಕ ಪೈ ಆಯ್ಕೆ

ಮಂಗಳೂರು: ಪತ್ರಿಕಾ ಭವನ ಟ್ರಸ್ಟ್ ಮಂಗಳೂರು ಇದರ ನೂತನ ಅಧ್ಯಕ್ಷರಾಗಿ ಪುಂಡಲೀಕ ಪೈ (ಅನ್ನು ಮಂಗಳೂರು) , ಪ್ರಧಾನ ಕಾರ್ಯದರ್ಶಿಯಾಗಿ ರವಿ ಪೊಸವಣಿಕೆ ಹಾಗೂ ಖಜಾಂಚಿಯಾಗಿ ಹರ್ಷ ಆಯ್ಕೆಯಾಗಿದ್ದಾರೆ. ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್.ಅವರಅಧ್ಯಕ್ಷತೆಯಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಪ್ರಧಾನ ಕಾರ್ಯದರ್ಶಿ ವೇಣುವಿನೋದ್ ವರದಿ ಹಾಗೂ ಲೆಕ್ಕಪತ್ರ ಮಂಡಿಸಿದರು. ಟ್ರಸ್ಟ್ ಸದಸ್ಯರಾದ ಕೆ. ಆನಂದ ಶೆಟ್ಟಿ, ಜಗನ್ನಾಥ ಶೆಟ್ಟಿ ಬಾಳ, ಪುಪ್ಪರಾಜ್. ಬಿ. ಎನ್.ದ. ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ. ಬಿ.ಹರೀಶ್ ರೈ ಉಪಸ್ಥಿತರಿದ್ದರು.ಪತ್ರಿಕಾ ಭವನ ಟ್ರಸ್ಟ್‌ನಿಂದ ಪತ್ರಕರ್ತರ ಆರೋಗ್ಯ ಸಮಸ್ಯೆಗೆ ನೆರವು ಮತ್ತು ಮೃತ ಪತ್ರಕರ್ತರ ಕುಟುಂಬಕ್ಕೆ ಪರಿಹಾರವಾಗಿ 7.47 ಲಕ್ಷ ರೂ. ನೆರವು ನೀಡಲಾಗಿದೆ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಮಹೋತ್ಸವದ ವರ್ಷಾಚರಣೆಯ ಕಾರ್ಯಕ್ರಮಗಳಿಗೆ ಒಟ್ಟು 5 ಲಕ್ಷ ರೂ. ಅನುದಾನ ನೀಡಲಾಗಿದೆ ಎಂದು ಟ್ರಸ್ಟ್ ಪ್ರಕಟಣೆ ತಿಳಿಸಿದೆ.

ಪ್ರಾದೇಶಿಕ ವಾರ್ತೆಗಳು

ಮಂಗಳೂರಿನಲ್ಲಿ ರಸ್ತೆ ಅಪಘಾತ ಮತ್ತು ಅಪರಾಧ ಪ್ರಕರಣಗಳಲ್ಲಿ ಇಳಿಕೆ -ಡಿಸಿಪಿ ರವಿಶಂಕರ್

ಮಂಗಳೂರು,ಆ.21;ಕಳೆದ ಒಂದು ವರ್ಷದ ಅಂಕಿಅಂಶಗಳನ್ನು ಗಮನಿಸಿದಾಗ ರಸ್ತೆ ಅಪಘಾತ ಮತ್ತು ಅಪರಾಧ ಪ್ರಕರಣಗಳಲ್ಲಿ ಸಾಕಷ್ಟು ಇಳಿಕೆಯಾಗಿರುವುದು ಉತ್ತಮ ಬೆಳವಣಿಗೆ ಎಂದು ಮಂಗಳೂರು ಉಪ ಪೊಲೀಸ್ ಆಯುಕ್ತ ರವಿಶಂಕರ್ ತಿಳಿಸಿದ್ದಾರೆ.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಹಾಗೂ ದಕ್ಷಿಣ ಕನ್ನಡ ಬಸ್ ಮಾಲಕರ ಸಂಘದ ವತಿಯಿಂದ ಮಂಗಳೂರು ಪತ್ರಿಕಾ ಭವನದಲ್ಲಿ ಗುರುವಾರ ಉಚಿತ ಖಾಸಗಿ ಬಸ್ ಪಾಸ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಪತ್ರಕರ್ತರು ತಮ್ಮ ವೃತ್ತಿ ಬದುಕಿನಲ್ಲಿ ಸಾಕಷ್ಟು ಸವಾಲುಗಳನ್ನು ಎದುರಿಸು ತ್ತಿದ್ದಾರೆ.ಈ ನಡುವೆ ಸತ್ಯ ಮತ್ತು ನ್ಯಾಯ ಪರದ ಜೊತೆ ಸಮಾಜದ ಧ್ವನಿಯಾಗಿ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿ ಕಾರ್ಯ ನಿರ್ವಹಿಸುತ್ತಿರುವುದನ್ನು ನಾನು ಗಮನಿಸಿದ್ದೇನೆ.ಸಮಾಜದ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ವರದಿಗಳ ಬಗ್ಗೆಯೂ ಸಾಕಷ್ಟು ಎಚ್ಚರಿಕೆ ವಹಿಸಿ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲೆಯ ಪತ್ರಕರ್ತರ ಹೊಣೆಗಾರಿಕೆ ಶ್ಲಾಘನೀಯ ಎಂದರು.ಮುಖ್ಯ ಅತಿಥಿಯಾಗಿ ಭಾಗವಹಿಸಿದ ಆರ್ ಟಿಒ ಶ್ರೀಧರ್ ಮಾತನಾಡುತ್ತಾ,ರಸ್ತೆ ಸುರಕ್ಷತಾ ನಿಯಮಗಳ ಪಾಲನೆ ಯೊಂದಿಗೆ ಚಾಲನೆ ಮಾಡುವುದು ಮುಖ್ಯ. ಜೊತೆಗೆ ಅಪಘಾತ ರಹಿತ ಚಾಲನೆಯೂ ಉತ್ತಮ ಮಾದರಿ ಎಂದು ಶುಭ ಹಾರೈಸಿ ದರು.ದಕ್ಷಿಣ ದಕ್ಷಿಣ ಕನ್ನಡ ಬಸ್ ಮಾಲಕರ ಸಂಘದ ಅಧ್ಯಕ್ಷ ಅಜೀಜ್ ಪರ್ತಿಪ್ಪಾಡಿ ಮಾತನಾಡುತ್ತಾ, ಜಿಲ್ಲೆಯ ಪತ್ರಕರ್ತರ ಸಮಾಜ ಮುಖಿ ಚಟುವ ಟಿಕೆಗಳು ಮತ್ತು ಅವರ ವೃತ್ತಿ ನಿಷ್ಠೆಯ ಬಗ್ಗೆ ಗೌರವವಿದೆ.ಆ ಕಾರಣದಿಂದ ನಮ್ಮ ಸ್ವ ಆಸಕ್ತಿಯಿಂದ ಅವರಿಗೆ ಉಚಿತ ಬಸ್ ಪಾಸ್ ನೀಡಲು ಮುಂದೆ ಬಂದಿರುವುದಾಗಿ ತಿಳಿಸಿದರು..ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು.ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ,ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು,ದಕ್ಷಿಣ ಕನ್ನಡ ಬಸ್ ಮಾಲಕರ ಸಂಘದ ಉಪಾಧ್ಯಕ್ಷ ರಾಮಚಂದ್ರ ನಾಯಕ್,ಪ್ರಧಾನ ಕಾರ್ಯದರ್ಶಿ ರಾಮಚಂದ್ರ ಪಿಲಾರ್,ಜೊತೆ ಕಾರ್ಯದರ್ಶಿ ರಾಜೇಶ್ ಟಿ,ಪೂರ್ವಾಧ್ಯಕ್ಷ ನೆಲ್ಸನ್ ಪಿರೇರಾ,ಪದಾಧಿಕಾರಿಗಳಾದ ಸಂಜ್ಯೋತಿ ಶೇಖ, ಮೊಹಿಸಿನ್ ನವಾಬ್, ಪವನ್ ಕುಮಾರ್,ಸುಚೇತನಾ ಕಾವೂರು, ಚಂದ್ರಕಲಾ,ಇಸ್ಮಾಯಿಲ್(ಇಚ್ಚಾಲಿ),,ಚಂದ್ರನ್,ಇಮ್ತಿಯಾಝ್,ರಂಜಿತ್,ರೋಶನ್ ಸಲ್ದಾನ,ಜಾಯ್ ರೋಡ್ರಿಗಸ್, ಆ್ಯರೋನ್, ರಾಜ್ ಕುಮಾರ್,ಜಯಂತ್ ಕುಮಾರ್ ಮೊದಲಾದ ವರು ಉಪಸ್ಥಿತರಿದ್ದರು.ಸಮಾರಂಭದಲ್ಲಿ ಅಪಘಾತ ರಹಿತ ಚಾಲನೆ ಮಾಡಿದ ಚಾಲಕರಾದ ಧರ್ಮಪಾಲ ಉಳ್ಳಾಲ್,ಮೋಹನ್ ಮತ್ತು ಅರುಣ್ ಕುಮಾರ್ ಅವರನ್ನು ಸನ್ಮಾನಿಸಲಾಯಿತು. ಶ,ಪ್ರಧಾನ ಕಾರ್ಯ ದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು.ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್ ಕಾರ್ಯಕ್ರಮ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷರಾಗಿ ಅನ್ನು ಮಂಗಳೂರು (ಪುಂಡಲೀಕ ಪೈ) ಅವಿರೋಧ ಆಯ್ಕೆ

ಮಂಗಳೂರು -ಅಗಸ್ಟ್ 20ರ ಮಂಗಳವಾರ ನಡೆದ ಪತ್ರಿಕಾ ಭವನ ಟ್ರಸ್ಟ್ ಸಭೆಯಲ್ಲಿ ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷರಾಗಿ ಅನ್ನು ಮಂಗಳೂರು (ಪುಂಡಲೀಕ ಪೈ) ಅವಿರೋಧ ಆಯ್ಕೆ ಆಗಿದ್ದಾರೆ. ಅನ್ನು ಮಂಗಳೂರು ಅವರು ಹಿರಿಯ ಪತ್ರಕರ್ತರಾಗಿದ್ದು, ಈ ಹಿಂದೆ ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷರಾಗಿ ಉತ್ತಮ ಅಡಳಿತ ನೀಡಿದ್ದರು.

ಪ್ರಾದೇಶಿಕ ವಾರ್ತೆಗಳು

ಯಕ್ಷಗಾನ ಕಲಾವಿದ ಸಂಜಯ ಕುಮಾರ್ ಶೆಟ್ಟಿ ಅವರಿಗೆ ‘ವಿಶ್ವ ಬಂಟ ಪ್ರತಿಷ್ಠಾನ ಪ್ರಶಸ್ತಿ’.ಆಗಸ್ಟ್ 23ರಂದು ಪ್ರಶಸ್ತಿ ಪ್ರದಾನ

ಮಂಗಳೂರು: ವಿಶ್ವ ಬಂಟ ಪ್ರತಿಷ್ಠಾನವು ಡಾ.ಡಿ.ಕೆ. ಚೌಟ ದತ್ತಿನಿಧಿಯಿಂದ ನೀಡುವ ಯಕ್ಷಗಾನ ಪ್ರಶಸ್ತಿಗೆ 2025ನೇ ಸಾಲಿನಲ್ಲಿ ತೆಂಕು ತಿಟ್ಟು ಯಕ್ಷಗಾನದ ಹೆಸರಾಂತ ಸ್ತ್ರೀವೇಷಧಾರಿ ಸಂಜಯ ಕುಮಾರ್ ಶೆಟ್ಟಿ ಗೋಣಿಬೀಡು ಆಯ್ಕೆಯಾಗಿದ್ದಾರೆ. ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಮಾಜಿ ಸದಸ್ಯ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಮತ್ತು ಬಡಗು ತಿಟ್ಟಿನ ಪಂಚ ಮೇಳಗಳ ಸಂಚಾಲಕ ಪಳ್ಳಿ ಕಿಶನ್ ಹೆಗ್ಡೆ ಅವರನ್ನೊಳಗೊಂಡ ಸಲಹಾ ಸಮಿತಿಯು ಈ ಪ್ರಶಸ್ತಿಗೆ ಅವರ ಹೆಸರನ್ನು ಶಿಫಾರಸು ಮಾಡಿದೆ. ಪ್ರಶಸ್ತಿಯು ರೂ.25,000/- ನಗದು ಹಾಗೂ ಪ್ರಮಾಣ ಫಲಕವನ್ನೊಳಗೊಂಡಿದೆ ಎಂದು ಪ್ರತಿಷ್ಠಾನದ ಕಾರ್ಯದರ್ಶಿ ಸಿಎ ವೈ.ಸುಧೀರ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.ಸಂಜಯ ಕುಮಾರ್ ಶೆಟ್ಟಿ ಗೋಣಿಬೀಡು:ಚಿಕ್ಕಮಂಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕು ಗೋಣಿಬೀಡಿನಲ್ಲಿ ದಿ.ಐತಪ್ಪ ಶೆಟ್ಟಿ ಮತ್ತು ಸುಂದರಿ ಶೆಟ್ಟಿ ದಂಪತಿಗೆ 1960 ಜೂನ್ 1ರಂದು ಜನಿಸಿದ ಸಂಜಯ ಕುಮಾರ್ ಶೆಟ್ಟಿ ಅವರು ತನ್ನ ಪ್ರೌಢಶಾಲಾ ವ್ಯಾಸಂಗ ಪೂರೈಸಿ ಧರ್ಮಸ್ಥಳ ಲಲಿತಕಲಾ ಕೇಂದ್ರದಲ್ಲಿ ದಿ.ಪಡ್ರೆ ಚಂದು ಅವರಿಂದ ಯಕ್ಷಗಾನ ನೃತ್ಯಾಭ್ಯಾಸ ಮಾಡಿದರು.16ನೇ ವಯಸ್ಸಿನಲ್ಲಿ ಪುತ್ತೂರು ಶೀನಪ್ಪ ಭಂಡಾರಿಯವರ ಆದಿ ಸುಬ್ರಹ್ಮಣ್ಯ ಮೇಳದಲ್ಲಿ ತಿರುಗಾಟ ಆರಂಭಿಸಿ, ಮುಂದೆ ಪುತ್ತೂರು, ಸುರತ್ಕಲ್, ಕರ್ನಾಟಕ, ಗಣೇಶಪುರ, ಮಂಗಳಾದೇವಿ, ಕುಂಟಾರು, ಎಡನೀರು, ಹೊಸನಗರ, ಬಪ್ಪನಾಡು, ಕೊಲ್ಲಂಗಾನ, ಮಲ್ಲ, ಬಾಚಕೆರೆ ಮುಂತಾದ ತೆಂಕುತಿಟ್ಟಿನ ವಿವಿಧ ಮೇಳಗಳಲ್ಲಿ ಕಲಾ ಸೇವೆ ಮಾಡಿದ್ದಾರೆ. ಶ್ರೀದೇವಿ, ದ್ರೌಪದಿ, ದಮಯಂತಿ, ಸುಭದ್ರೆ, ಸೀತೆ, ದಾಕ್ಷಾಯಿಣಿ, ಅಂಬೆ, ಚಿತ್ರಾಂಗದೆ, ಕಯಾದು, ಮೋಹಿನಿ, ಮೇನಕೆ, ತ್ರಿಲೋಕ ಸುಂದರಿ, ಸ್ವೈರಿಣಿ ಮೊದಲಾದವು ಅವರಿಗೆ ಹೆಸರು ತಂದ ಸ್ತ್ರೀಪಾತ್ರಳು. ತುಳು ಪ್ರಸಂಗಗಳಲ್ಲಿ ಕಿನ್ನಿದಾರು, ಸಿರಿ, ಸೋಮಲಾದೇವಿ, ಕಚ್ಚೂರ ಮಾಲ್ದಿ, ಗೆಜ್ಜೆ ಪೂಜೆಯ ತುಳಸಿ, ಎಲ್ಲೂರ ಮಲ್ಲಿ, ಕಾಡಮಲ್ಲಿಗೆಯ ತುಂಗೆ, ನಾಡ ಕೇದಗೆ, ನೀಲಾಂಬರಿ, ಸಿರಿ ಬಾಲೆ, ಪಲ್ಲವಿ, ಶ್ರೀಮತಿ … ಇತ್ಯಾದಿ ಪಾತ್ರಗಳಲ್ಲಿ ಸಂಜಯ ಕುಮಾರ್ ಶೆಟ್ಟಿ ಅವರು ತಮ್ಮ ಸ್ತ್ರೀ ವೇಷದ ಛಾಪನ್ನು ಮೂಡಿಸಿದ್ದಾರೆ. ಶ್ರೀರಾಮ, ಶ್ರೀಕೃಷ್ಣ, ಲಕ್ಷ್ಮಣ, ಅಯ್ಯಪ್ಪ, ಪರಶುರಾಮ, ಮನ್ಮಥ, ಲವ – ಕುಶ ಮುಂತಾದ ಪುಂಡುವೇಷಗಳಲ್ಲೂ ಅವರು ಪ್ರಸಿದ್ಧರು.ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಯಕ್ಷಗಾನ ಅಕಾಡೆಮಿಯ ಯಕ್ಷಸಿರಿ, ಉಡುಪಿ ಯಕ್ಷಗಾನ ಕಲಾರಂಗ, ಸ್ವಸ್ತಿಸಿರಿ, ರೋಟರಿ, ಅರುವ ಪ್ರತಿಷ್ಠಾನ, ಕದ್ರಿ ಹವ್ಯಾಸಿ ಬಳಗ, ಒಡಿಯೂರು ಗುರುದೇವಾನಂದ ಪ್ರಶಸ್ತಿಗಳಲ್ಲದೆ, ಬೋಳಾರ, ಪುಳಿಂಚ, ಶೇಣಿ ಜನ್ಮ ಶತಮಾನೋತ್ಸವ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಪಾತಾಳ – ಯಕ್ಷ ಮಂಗಳ ಪ್ರಶಸ್ತಿಗಳನ್ನು ಅವರು ಪಡೆದಿದ್ದಾರೆ. ಯಕ್ಷರಂಗದ ಚಿರಕನ್ನಿಕೆ, ಯಕ್ಷ ಮಿನುಗುತಾರೆ, ಯಕ್ಷ ಮಣಿಮೇಖಲಾ, ಯಕ್ಷ ಮಯೂರಿ, ಯಕ್ಷ ನಂದಿನಿ, ಯಕ್ಷ ನಾಟ್ಯ ಲಲಿತೆ ಮೊದಲಾದ ಬಿರುದುಗಳು ಅವರಿಗೆ ಸಂದಿವೆ. ಪ್ರಸ್ತುತ ವೃತ್ತಿ ಬದುಕಿನ ಅರ್ಧ ಶತಮಾನವನ್ನು ಪೂರೈಸಿರುವ ಅವರು ಈ ವರ್ಷ ತನ್ನ ಯಕ್ಷ ಯಾನದ ಸುವರ್ಣ ಸಂಭ್ರಮದಲ್ಲಿದ್ದಾರೆ.ಪತ್ನಿ ಪ್ರಫುಲ್ಲ ಸಂಜಯ್, ಪುತ್ರಿ ದೀಕ್ಷಾ, ಪುತ್ರರಾದ ದರ್ಶನ್ ಮತ್ತು ದಕ್ಷಿಣ್ ಅವರೊಂದಿಗೆ ಸುಖೀ ಜೀವನ ನಡೆಸುತ್ತಿರುವ ಯಕ್ಷ ಕಲಾವಿದ ಸಂಜಯ ಕುಮಾರ್ ಶೆಟ್ಟಿ ಗೋಣಿಬೀಡು ಅವರು ಮಂಗಳೂರಿನ ಬೆಂದೂರು ಬಳಿ ‘ಯಕ್ಷ ಭ್ರಮರ’ ನಿವಾಸದಲ್ಲಿ ನೆಲೆಸಿದ್ದಾರೆ.ಪ್ರಶಸ್ತಿ ಪ್ರದಾನ:ಆ.23ರಂದು ನಗರದ ಕರಂಗಲಪಾಡಿ ಎ.ಜೆ.ಗ್ರ್ಯಾಂಡ್ ಹೋಟೆಲ್‌ನಲ್ಲಿ ನಡೆಯುವ ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್‌ನ 29ನೇ ವಾರ್ಷಿಕ ಮಹಾಸಭೆಯಲ್ಲಿ ಟ್ರಸ್ಟ್ ಅಧ್ಯಕ್ಷ ಡಾ.ಎ.ಜೆ.ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

ಪ್ರಾದೇಶಿಕ ವಾರ್ತೆಗಳು

ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷರಾಗಿ ಅನ್ನು ಮಂಗಳೂರು (ಪುಂಡಲೀಕ ಪೈ) ಅವಿರೋಧ ಆಯ್ಕೆ

ಮಂಗಳೂರು -ಅಗಸ್ಟ್ 20ರ ಮಂಗಳವಾರ ನಡೆದ ಪತ್ರಿಕಾ ಭವನ ಟ್ರಸ್ಟ್ ಸಭೆಯಲ್ಲಿ ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷರಾಗಿ ಅನ್ನು ಮಂಗಳೂರು (ಪುಂಡಲೀಕ ಪೈ) ಅವಿರೋಧ ಆಯ್ಕೆ ಆಗಿದ್ದಾರೆ. ಅನ್ನು ಮಂಗಳೂರು ಅವರು ಹಿರಿಯ ಪತ್ರಕರ್ತರಾಗಿದ್ದು, ಈ ಹಿಂದೆ ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷರಾಗಿ ಉತ್ತಮ ಅಡಳಿತ ನೀಡಿದ್ದರು.

ಪ್ರಾದೇಶಿಕ ವಾರ್ತೆಗಳು

ಆ.23ರಂದು ಡಾ.ಎಂ.ಮೋಹನ ಆಳ್ವರಿಗೆ ‘ಎಮಿನೆಂಟ್ ಬಂಟ್ ಪರ್ಸನಾಲಿಟಿ’ ಅವಾರ್ಡ್

ಮಂಗಳೂರು : ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್‌ನ 29ನೇ ವಾರ್ಷಿಕ ಮಹಾಸಭೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಆ.23ರಂದು ನಗರದ ಎ.ಜೆ.ಗ್ರಾೃಂಡ್ ಹೋಟೆಲ್‌ನಲ್ಲಿ ನಡೆಯಲಿದೆ. ಬೆಳಗ್ಗೆ 11ಕ್ಕೆ ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್ ಅಧ್ಯಕ್ಷ ಡಾ.ಎ.ಜೆ.ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ವಾರ್ಷಿಕ ಮಹಾಸಭೆ ನಡೆಯಲಿದೆ. ಮಧ್ಯಾಹ್ನ 12ಕ್ಕೆ ಮೂಡುಬಿದಿರೆಯ ಆಳ್ವಾಸ್ ಎಜ್ಯುಕೇಶನ್ ಟ್ರಸ್ಟ್‌ನ ಚೇರ್ಮನ್ ಡಾ.ಎಂ.ಮೋಹನ ಆಳ್ವ ಅವರಿಗೆ ‘ಎಮಿನೆಂಟ್ ಬಂಟ್ ಪರ್ಸನಾಲಿಟಿ ಅವಾರ್ಡ್ ’ ಪ್ರದಾನ ಮಾಡಲಾಗುವುದು.ಹಿರಿಯ ಯಕ್ಷಗಾನ ಕಲಾವಿದ ಸಂಜಯ ಕುಮಾರ್ ಶೆಟ್ಟಿ ಗೋಣಿಬೀಡು ಅವರಿಗೆ ದಿ.ಡಾ.ಡಿ.ಕೆ.ಚೌಟ ದತ್ತಿನಿಧಿ ಪ್ರಶಸ್ತಿ, ಕೃಷಿ ಕ್ಷೇತ್ರದ ಸಾಧನೆಗಾಗಿ ಇಂದಿರಾ ಶೆಟ್ಟಿ ಅವರಿಗೆ ದಿ.ಎಣ್ಮಕಜೆ ಕಲಾವತಿ ಶೆಟ್ಟಿ ದತ್ತಿನಿಧಿ ಪ್ರಶಸ್ತಿ, ಸಿಎ ಅಂತಿಮ ಪರೀಕ್ಷೆಯಲ್ಲಿ 24ನೇ ರ‌್ಯಾಂಕ್ ಪಡೆದ ಸಿಎ ನಿಶ್ಚಲ್ ರೈ ಅವರಿಗೆ ಸಿಎ ವೈ.ಆರ್.ಶೆಟ್ಟಿ ದತ್ತಿನಿಧಿ ಪ್ರಶಸ್ತಿ ಹಾಗೂ ಸಿಎ ರಕ್ಷಾ. ಆರ್.ಶೆಟ್ಟಿ ಅವರಿಗೆ ಸಿಎ ಗೋಪಾಲ್.ಬಿ.ಶೆಟ್ಟಿ ದತ್ತಿನಿಧಿ ಪ್ರಶಸ್ತಿ ವಿತರಿಸಲಾಗುವುದೆಂದು ವಿಶ್ವ ಬಂಟ ಪ್ರತಿಷ್ಠಾನದ ಕಾರ್ಯದರ್ಶಿ ಸಿಎ ಸುಧೀರ್ ಕುಮಾರ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ಕಲ್ಲಡ್ಕ ಗಾಂಧಿ ಮೈದಾನದಲ್ಲಿ ಸ್ವಾತಂತ್ರೋತ್ಸವ ದಿನಾಚರಣೆ

79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಕಲ್ಲಡ್ಕ ಗಾಂಧಿ ಮೈದಾನದಲ್ಲಿ ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷರಾದ ಪದ್ಮನಾಭ ರೈ ಅವರು ಧ್ವಜಾರೋಹಣ ಮಾಡುವುದರ ಮೂಲಕ ನೆರವೇರಿಸಲಾಯಿತು. ಅಧ್ಯಕ್ಷತೆಯನ್ನು ಸೂರಜ್ ಬೀಡಿ ಮಾಲಕರಾದ ಹುಸೈನ್ ಕಲ್ಲಡ್ಕ ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಕಲ್ಲಡ್ಕ ಹಿರಿಯ ಪ್ರಾಥಮಿಕ ಶಾಲಾಭಿವೃದ್ಫಿ ಸಮಿತಿ ಅಧ್ಯಕ್ಷರಾದ ಮಧುಸೂದನ್ ಐತಲ್, ಮಾಜಿ ಪಂಚಾಯತ್ ಸದಸ್ಯರು ಹಿರಿಯ ಮುಖಂಡರಾದ ಅಬೂಬಕ್ಕರ್ ಮುರಾಬೈಲ್, ಬಂಟ್ವಾಳ nsui ಉಪಾಧ್ಯಕ್ಷರಾದ ಶ್ರೀವತ್ಸಹ ಶೆಣೈ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಕಿರಣ್ ಕಲ್ಲಡ್ಕ, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಮಹಮ್ಮದ್ ಶಾಫಿ ಹಾಗೂ ನರಸಿಂಹ ಮಡಿವಾಳ ಅವರು ಕಾರ್ಯಕ್ರಮವನ್ನು ನಿರ್ವಹಿಸಿದರು ಮತ್ತು ಅನೇಕ ಗಣ್ಯರು ಭಾಗವಹಿಸಿದರು.

ಪ್ರಾದೇಶಿಕ ವಾರ್ತೆಗಳು

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಸುಳ್ಳು ಅಪಪ್ರಚಾರದ ಬಗ್ಗೆ ಖಂಡನಾ ನಿರ್ಣಯ

ದಿನಾoಕ 17/8/25 ರಂದು ಬಿ. ಸಿ. ರೋಡ್ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ತುರ್ತು ಸಭೆ ಯಲ್ಲಿ ಖಂಡನಾ ನಿರ್ಣಯ ಕೈಗೊಂಡಿತು. ಪೂಜ್ಯ ಹೆಗ್ಗಡೆ ಯವರ ಚಿಂತನೆ,ಖ್ಯಾತಿ ಅವರಿಗೆ ಸಿಗುವ ಮನ್ನಣೆ ಸಹಿಸದ ಕೆಲವೊಂದು ಪಟ್ಟ ಬದ್ದ ಹಿತಾ ಶಕ್ತಿ ಗಳು ಜೈನ ಸಮಾಜ ಮತ್ತು ಜೈನ ಮುನಿಗಳ ಮೇಲೆ ಇಲ್ಲ ಸಲ್ಲದ ಆರೋಪ ಕೆಲವೊಂದು ಜನ ಸಮೂಹ ವ್ನು ಕ್ಷೇತ್ರ ದ ವಿರುದ್ದ ಎತ್ತಿ ಕಟ್ಟುವ ಮೂಲಕ ಜನ ಸಾಮಾನ್ಯರಲ್ಲಿ ಭಯ ಆತಂಕ ಉಂಟು ಮಾಡುತ್ತಿದೆ. ಈ ಸಭೆ ಯಲ್ಲಿ ವೀಕ್ಷಕರಾಗಿ ವೀರ್ ರಾಜೇಶ ಜೈನ್ ಮಂಗಳೂರು, ಮಿಲನ್ ಘಟಕದ ಉಪಾಧ್ಯಕ್ಷರು ಅದ ವೀರ್ ಸುದರ್ಶನ್ ಜೈನ್, ಕಾರ್ಯದರ್ಶಿ ವೀರ್ ಸುಭಾಷ್ ಜೈನ್ , ಜೈನ್ ಮಿಲನ್ ಅಧ್ಯಕ್ಷ ರಾದ ವೀರ್ ರಾಜೇಂದ್ರಜೈನ್ ಘಟನೆ ಯನ್ನು ಖಂಡಿಸಿತು. ಪಚ್ಚಾಜೆ ಜಿನರಾಜ ಅರಿಗರು ಭಾಗವಹಿಸಿ ಘಟನೆ ಯನ್ನು ಖಂಡಿಸಿದರು. ವೀರ್ ಜಯಕೀರ್ತಿ ಅವರು ಕಾರ್ಯಕ್ರಮ ನಿರೂಪಿಸಿ, ವೀರ್ ಸುಭಾಶ್ಚಂದ್ರ ಜೈನ್ ಧನ್ಯವಾದ ನೀಡಿದರು. ಸಮಾಜದ ಎಲ್ಲಾ ಜೈನ್ ಭಾಂದವರು ಒಕ್ಕರಲಿನಿಂದ ಸುಳ್ಳು ಅಪಪ್ರಚಾರ ವಿರುದ್ಧ ಖಂಡನಾ ನಿರ್ಣಯ ಕೈಗೊಂಡಿರು.

ಪ್ರಾದೇಶಿಕ ವಾರ್ತೆಗಳು

ಕರಂಬಾರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕರಂಬಾರು ಇಲ್ಲಿ 79 ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.ಕಾರ್ಯಕ್ರಮದ ಪ್ರಾರಂಭದಲ್ಲಿ ದಿವಂಗತ ರಾಮ ದೇವಾಡಿಗ ಅವರ ಸ್ಮರಣಾರ್ಥ ಕೊಡುಗೆಯಾಗಿ ನಿರ್ಮಿಸಲಾಗಿರುವ ಹೊಸ ಧ್ವಜಾಸ್ತಂಭವನ್ನು ಅವರ ಧರ್ಮಪತ್ನಿ ಸೀತಾ ದೇವಾಡಿಗರವರು ಉದ್ಘಾಟಿಸಿದರು.SDMC ಅಧ್ಯಕ್ಷರಾದ ಗುಣಪಾಲ್ ದೇವಾಡಿಗರವರು ಧ್ವಜಾರೋಹಣ ಮಾಡಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ದಿವಂಗತ ರಾಮ ದೇವಾಡಿಗರ ಸ್ಮರಣಾರ್ಥ ಶಾಲೆಗೆ ನೂತನ ಧ್ವಜಸ್ತಂಭವನ್ನುನಿರ್ಮಿಸಿ ಕೊಟ್ಟ ಸೀತಾ ದೇವಾಡಿಗ ಹಾಗೂ ಅವರ ಕುಟುಂಬವರ್ಗಕ್ಕೆ ಅಭಿನಂದನೆಗಳನ್ನು ಸಲ್ಲಿಸಿದರು.ಮುಖ್ಯ ಅತಿಥಿಗಳಾಗಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ದೇವಾಡಿಗ, ಕೋರ್ದಬ್ಬು ದೈವಸ್ಥಾನ ಕರಂಬಾರು ನ ಅಧ್ಯಕ್ಷರಾದ ಜಗನಾಥ್ ಸಾಲ್ಯಾನ್, ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಲಕ್ಷ್ಮಣ್ ಬಂಗೇರ, ನಮ್ಮ ಕ್ಲಿನಿಕ್ ಮಳವೂರಿನ ವೈದ್ಯಾಧಿಕಾರಿ ಡಾ! ಸಮೀಕ್ಷಾ ಡಿ. ಪಿ , ನಮ್ಮ ಜವನೆರ್ ಕರಂಬಾರು ಅಧ್ಯಕ್ಷರಾದ ರಮೇಶ್ ಸುವರ್ಣ, ಶ್ರೀ ದೇವಿ ಸ್ಪೋರ್ಟ್ಸ್ & ಗೇಮ್ಸ್ ಕ್ಲಬ್ ಅಧ್ಯಕ್ಷರಾದ ರವಿ ಶೆಟ್ಟಿ, ಓಂಕಾರ್ ಫ್ರೆಂಡ್ಸ್ ಕ್ಲಬ್ ಕೆಂಜಾರು ಕರಂಬಾರು ಅಧ್ಯಕ್ಷರಾದ ಮನೋಜ್ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ರಾಕೇಶ್ ಕುಂದರ್, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಆಚಾರ್ಯ, ಕೋಶಾಧಿಕಾರಿ ವಿನೋದ್ ಅರ್ಬಿ, ಖಜಾಂಚಿ ಮಿಥುನ್ ಪೂಜಾರಿ, ಶಾಲಾ SDMC ಉಪಾಧ್ಯಕ್ಷರಾದ ಲಾವಣ್ಯ, ಮಾಜಿ SDMC ಅಧ್ಯಕ್ಷರಾದ ರಾಘವೇಂದ್ರ ಮುಂತಾದವರು ಉಪಸ್ಥಿತರಿದ್ದರು.ಶಾಲಾ ಮುಖ್ಯ ಶಿಕ್ಷಕಿ ಉಷಾ ಕಿರಣ ಸ್ವಾಗತಿಸಿದರು, ಗೀತಾ ಟೀಚರ್ ನಿರೂಪಿಸಿ, ವಂದಿಸಿದರು.

ಪ್ರಾದೇಶಿಕ ವಾರ್ತೆಗಳು

ಜಾಗ ಮಾರಾಟಕ್ಕಿದೆ

ಮಂಗಳೂರು ವಿಮಾನ ನಿಲ್ದಾಣ ರಸ್ತೆಯ ಮಳವೂರು ಎಂಬಲ್ಲಿ ಸಮತಟ್ಟಾದ 8 ಸೆಂಟ್ಸ್ ಖಾಲಿ ಜಾಗವು ಮಾರಾಟಕ್ಕಿದೆ.ರಿಂಗ್ ಅಳವಡಿಸಿರುವ ಯಥೇಚ್ಛ ನೀರಿರುವ ಬಾವಿ, (ನೀರಿನ ಟ್ಯಾಂಕರ್ ಇಟ್ಟುಕೊಂಡು ವ್ಯವಹಾರ ನಡೆಸಬಹುದು) 3 ತೆಂಗು, 1 ಹಲಸು ಹಾಗೂ 3 ಮಾವಿನ ಮರಗಳು ಈ ಜಾಗದಲ್ಲಿರುತ್ತದೆ. ಭೂಮಿಗೆ ಸಂಬಂಧಿಸಿದ ಪ್ರಾಪರ್ಟಿ ಕಾರ್ಡ್, ಇ ಖಾತಾ ,ಸಿಂಗಲ್ ಸೈಟ್, ಸ್ಕೆಚ್ ಸೇರಿದಂತೆ ಅಗತ್ಯ ಕಾಗದ ಪತ್ರಗಳು ತಯಾರಿದೆ.ಸೆಂಟ್ಸೊಂದರ ಬೆಲೆ ರೂಪಾಯಿ 5 ಲಕ್ಷಗಳುಪ್ರಯೋಜನಗಳುಪ್ರಾಮಾಣಿಕ ಚೌಕಾಸಿಗೆ ಅವಕಾಶವಿದೆಬಜ್ಪೆ ಏರ್ ರ್ಪೋರ್ಟ್,ದೇವಿ ಕಾಲೇಜು, ಖಾಸಗಿ ವಿದ್ಯಾಸಂಸ್ಥೆಗಳು ವಿವಿಧ ಉದ್ಯಮ ಕಂಪನಿಗಳ ಮುಂತಾದ ಸಂಸ್ಥೆಗಳ ಸಿಬ್ಬಂದಿಗಳಿಗೆ ಪೇಯಿಂಗ್ ಗೆಸ್ಟ್ ಹಾಸ್ಟೆಲ್,ರೂಮ್ಸ್ , ವಸತಿ ಕಟ್ಟಡಗಳನ್ನು ನಿರ್ಮಿಸಿ ಬಾಡಿಗೆಗೆ ನೀಡಿದಲ್ಲಿ ಉತ್ತಮ ಲಾಭ ಗಳಿಸಬಹುದು.ಅಥವಾ ಲಾಭಗಳಿಸುವ ನಿಟ್ಟಿನಲ್ಲಿ ಷೇರ್ ಮಾರುಕಟ್ಟೆಯಲ್ಲಿ ಹಣ ತೊಡಗಿಸಿ ಕೊಳ್ಳುವಂತೆ ಖಾಲಿ ಜಾಗವನ್ನು ಖರೀದಿಸಿ ಇಟ್ಟುಕೊಳ್ಳುವವರಿಗೂ ಇದೊಂದು ಒಳ್ಳೆಯ ಲಾಭ ತಂದು ಕೊಡುವ ಪ್ರಾಪರ್ಟಿ.ಈಗಾಗಲೇ ಈ ಜಾಗಕ್ಕೆ ತಾಗಿಕೊಂಡಿರುವ ಸುಮಾರು 06 ಎಕರೆ ಜಾಗವನ್ನು ಉದ್ಯಮಿಗಳು ಖರೀದಿಸಿ ಲೇ ಔಟ್ ಮಾಡಿಕೊಂಡು ಮಾರಾಟಕ್ಕಿರುತ್ತಾರೆ.ಈ ಜಾಗವನ್ನು ಖರೀದಿಸಲು ಆಸಕ್ತಿ ಹೊಂದಿರುವವರು ಕರೆ ಅಥವಾ ವಾಟ್ಸಾಪ್ ಮಾಡಬಹುದು. 7026286925, 7760980911

Scroll to Top