ಪ್ರಾದೇಶಿಕ ವಾರ್ತೆಗಳು

ಪ್ರಾದೇಶಿಕ ವಾರ್ತೆಗಳು

ಪಾಲ್ದನೆ ಚರ್ಚ್ ಧರ್ಮ ಗುರು ವಂದನೀಯ ಫಾ. ಆಲ್ಬನ್ ಡಿ ಸೋಜಾ ಅವರಿಗೆ ಸೆಕ್ಯುಲರ್ ಫ್ರಾನ್ಸಿಸ್ಕನ್ ಆರ್ಡರ್ ವತಿಯಿಂದ ಬೀಳ್ಕೊಡುಗೆ

ಮಂಗಳೂರು: ಮಂಗಳೂರು ನಗರದ ಪಾಲ್ದನೆ ಸಂತ ತೆರೆಸಾ ಚರ್ಚಿನ ಧರ್ಮಗುರು ಫಾ. ಆಲ್ಬನ್ ಡಿ ಸೋಜಾ ಅವರು ನಿವೃತ್ತಿ ಹೊಂದಿ ತೆರಳುತ್ತಿರುವ ಸಂದರ್ಭದಲ್ಲಿ ಅವರನ್ನು ಚರ್ಚಿನ ಸೆಕ್ಯುಲರ್ ಫ್ರಾನ್ಸಿಸ್ಕನ್ ಆರ್ಡರ್ (ತಿಸ್ರೀ ಓಡ್ಡ್) ವತಿಯಿಂದ ಬೀಳ್ಕೊಡುಗೆ ಸಮಾರಂಭ ನಡೆಯಿತು.ಮಂಗಳೂರು ಮತ್ತು ಅಖಿಲ ಕರ್ನಾಟಕ ಸೆಕ್ಯುಲರ್ ಫ್ರಾನ್ಸಿಸ್ಕನ್ ಆರ್ಡರ್ ಇದರ ಪ್ರಾಂತೀಯ ಆಧ್ಯಾತ್ಮಿಕ ನಿರ್ದೇಶಕ ವಂದನೀಯ ಫಾ. ಪ್ರಕಾಶ್ ಲೋಬೊ ಅವರು ನಿವೃತ್ತಿ ಹೊಂದಿದ ಫಾ. ಆಲ್ಬನ್ ಡಿ ಸೋಜಾ ಅವರ ನಿವೃತ್ತ ಜೀವನಕ್ಕೆ ಶುಭ ಹಾರೈಸಿದರು.ಕಾರ್ಯಕ್ರಮದಲ್ಲಿ ಪಾಲ್ದನೆ ಘಟಕದ ಅಧ್ಯಕ್ಷ ಹಾಗೂ ಮಾಜಿ ಸೈನಿಕ ಸ್ವೀಬರ್ಟ್ ಡಿ ಸೋಜಾ ಸ್ವಾಗತಿಸಿದರು. ಅಥಿತಿಗಳಾಗಿ ಪಾಲನಾ ಸಮಿತಿಯ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ಆಸ್ಟಿನ್ ಮೊಂತೇರೊ, ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.ಫಾ. ಆಲ್ಬನ್ ಡಿ ಸೋಜಾ ಅವರು ತನ್ನ ಸೇವಾವಧಿಯಲ್ಲಿ ಸಹಕರಿಸಿದ ಸಂಘದ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿದರು.

ಪ್ರಾದೇಶಿಕ ವಾರ್ತೆಗಳು

ಜೂ.27ರಂದು ಬೆಸೆಂಟ್ ಪ.ಪೂ.ಕಾಲೇಜಿನಲ್ಲಿ ಸಾಹಿತ್ಯ ಅಭಿರುಚಿ ಕಾರ್ಯಕ್ರಮ

ಮಂಗಳೂರು: ಅಮೃತ ಪ್ರಕಾಶ ಹಾಗೂ ಬೆಸೆಂಟ್ ಪ.ಪೂ.ಕಾಲೇಜಿನ ವತಿಯಿಂದ ಜೂ.27ರಂದು ಮಧ್ಯಾಹ್ನ 2.30ಕ್ಕೆಬೆಸೆಂಟ್ ಪ.ಪೂ.ಕಾಲೇಜಿನ ಸಭಾಂಗಣದಲ್ಲಿ ಸಾಹಿತ್ಯ ಅಭಿರುಚಿ ಕಾರ್ಯಕ್ರಮ ನಡೆಯಲಿದೆ.ಕಾಲೇಜಿನ ಪ್ರಾಂಶುಪಾಲ ಡಾ.ನಾಯಕ್ ರೂಪಸಿಂಗ್ ಅಧ್ಯಕ್ಷತೆ ವಹಿಸಲಿದ್ದಾರೆ. ಜನಪದ ವಿದ್ವಾಂಸ ಡಾ.ಗಣೇಶ್ ಅಮೀನ್ ಸಂಕಮಾರ್, ಲೇಖಕಿ ಡಾ. ಮೀನಾಕ್ಷಿ ರಾಮಚಂದ್ರ ಸಂಪನ್ಮೂಲ ವ್ಯಕ್ತಿಗಳಾಗಿ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ , ಜಾನಪದ ಪರಿಷತ್‌ನ ಜಿಲ್ಲಾಧ್ಯಕ್ಷ ಪಮ್ಮಿ ಕೊಡಿಯಾಲ್‌ಬೈಲ್ , ಯೋಗಗುರು ಜಗದೀಶ್ ಶೆಟ್ಟಿ ಬಿಜೈ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸಂಘಟಕಿ ಮಾಲತಿ ಶೆಟ್ಟಿ ಮಾಣೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ಜೂ.26ರಂದು ರೆಡ್‌ಕ್ರಾಸ್‌ನಿಂದಮಾದಕ ದ್ರವ್ಯ ವಿರೋಧಿ ದಿನಾಚರಣೆ

ಮಂಗಳೂರು: ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ರಾಮಕೃಷ್ಣ ಕಾಲೇಜು ಸಹಯೋಗದಲ್ಲಿ ಜೂ.26ರಂದು ಮಧ್ಯಾಹ್ನ 3ಕ್ಕೆ ಅಂತಾರಾಷ್ಟ್ರೀಯ ಮಾದಕ ದ್ರವ್ಯ ಮತ್ತು ಅಕ್ರಮ ಕಳ್ಳ ಸಾಗಾಣೆ ವಿರೋಧಿ ದಿನಾಚರಣೆ ಬಂಟ್ಸ್ ಹಾಸ್ಟೆಲ್‌ನ ಗೀತಾ ಎಸ್.ಎಂ.ಶೆಟ್ಟಿ ಸಭಾಂಗಣದಲ್ಲಿ ನಡೆಯಲಿದೆ.ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಫಾ.ಮುಲ್ಲರ್ ಮೆಡಿಕಲ್ ಕಾಲೇಜಿನ ಪ್ರೊ.ಡಾ.ಅರುಣ ಯಡಿಯಾಳ್, ಲೋಕಾಯುಕ್ತ ಡಿಎಸ್‌ಪಿ ಡಾ.ಗಾನ.ಪಿ.ಕುಮಾರ್ , ರಾಮಕೃಷ್ಣ ಕಾಲೇಜಿನ ಸಂಚಾಲಕ ಡಾ.ಸಂಜೀವ ರೈ, ಪ್ರಾಂಶುಪಾಲೆ ಡಾ.ಅನಸೂಯ ರೈ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ರೆಡ್‌ಕ್ರಾಸ್ ಜಿಲ್ಲಾ ಘಟಕದ ಕಾರ್ಯದರ್ಶಿ ಕಿಶೋರ್ ಚಂದ್ರ ಹೆಗ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ನಿರ್ಭೀತ ವರದಿಗಾರಿಕೆ ಇಲ್ಲದ ಪತ್ರಿಕೋದ್ಯಮ ಅರ್ಥಹೀನ: ಸುಧೀರ್ ಕುಮಾರ್ ರೆಡ್ಡಿ

ಮಂಗಳೂರು, ಜೂ.25: ಪತ್ರಿಕೋದ್ಯಮದ ಹೃದಯ ಬಡಿತವೇ ನಿರ್ಭೀತ ವರದಿಗಾರಿಕೆ. ನಿರ್ಭೀತ ವರದಿಗಾರಿಕೆ ಇಲ್ಲದ ಪತ್ರಿಕೋದ್ಯಮ ಅರ್ಥಹೀನ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಹೇಳಿದರು.ನಗರದ ಪ್ರೆಸ್‌ಕ್ಲಬ್‌ನಲ್ಲಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಬುಧವಾರ ಪತ್ರಕರ್ತ ವಿಜಯ ಕೋಟ್ಯಾನ್‌ರಿಗೆ ಪ್ರಸಕ್ತ ಸಾಲಿನ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.ರಷ್ಯಾದ ಪತ್ರಕರ್ತೆಯಾಗಿದ್ದ ಅನ್ನಾ ಪೊಲಿಟ್ಕೋವಸ್ಕಾಯರ ನಿರ್ಭೀತ ವರದಿಗಾರಿಕೆಯನ್ನು ಉಲ್ಲೇಖಿಸಿ ಮಾತನಾಡಿದ ಸುಧೀರ್ ರೆಡ್ಡಿ, ಭಾರತದಲ್ಲಿಯೂ ಅಂತಹ ಪತ್ರಕರ್ತರಿದ್ದಾರೆ. ತಾವು ಮಾಡುವ ಕೆಲಸದಲ್ಲಿ ನೈಜ ಉz್ದೆÃಶವಿದ್ದಾಗ ಧೈರ್ಯ ತಾನಾಗಿಯೇ ಬರುತ್ತದೆ. ಯಾವುದಕ್ಕೂ ಭಯ ಪಡುವ ಅಗತ್ಯ ಇರುವುದಿಲ್ಲ ಎಂದು ಪತ್ರಕರ್ತರಿಗೆ ಕಿವಿಮಾತು ಹೇಳಿದರು. ಬಹಳ ವರ್ಷಗಳ ಹಿಂದೆ ರುವಾಂಡದಲ್ಲಿ ನರಮೇಧ ನಡೆದಿತ್ತು. ಬಳಿಕ ಅಲ್ಲಿ ಸಮುದಾಯಗಳು ಪರಸ್ಪರ ಪ್ರತ್ಯೇಕಗೊಂಡಿದ್ದವು. ಒಬ್ಬರಿಗೊಬ್ಬರು ಮಾತುಕತೆಯೇ ಇರಲಿಲ್ಲ. ಆದರೆ ಅಲ್ಲಿನ ರೇಡಿಯೋ, ಮಾಧ್ಯಮ ಸುದ್ದಿಗಳು ಅಲ್ಲಿ ನಡೆಯುತ್ತಿದ್ದ ಒಳ್ಳೆಯತನವನ್ನು ಎತ್ತಿ ತೋರಿಸಿದವು. ನಿಧಾನಗತಿಯಲ್ಲಿ ಸಮುದಾಯಗಳ ನಡುವಿನ ಅನುಮಾನ ದೂರವಾಗಿ ಅಲ್ಲಿ ದುಷ್ಕರ್ಮಿಗಳನ್ನು ಬೇರ್ಪಡಿಸುವ ಕಾರ್ಯ ಆಗಿದೆ. ಅದೇ ಪ್ರಯತ್ನ ಇಲ್ಲಿಯೂ ಮಾಡಬಹುದು. ಆ ಧೈರ್ಯ, ಬದ್ಧತೆ ನಮಗೆ ಬೇಕಾಗಿದೆ.ಇಂತಹ ಪ್ರದೇಶದಲ್ಲಿ ನಾವು ಸಾಮಾನ್ಯವಾಗಿ ವರದಿಗಾರಿಕೆ ಮಾಡಬೇಕಾದರೆ ಏನು ಬೇಕು ಎಂಬುದನ್ನು ನಾವು ಅರಿಯಬೇಕು. ವರದಿಯನ್ನು ತಲುಪಿಸುವ ವೇಗಕ್ಕಿಂತ ನಿಖರತೆ ಮುಖ್ಯ. ಬಾಯಿಗೆ ಬಂದದ್ದನ್ನು ಹೇಳಿ ಬಿಟ್ಟು ಅದರಿಂದ ಇನ್ನೊಂದು ಅನ್ಯಾಯ ಆಗಲು ಅವಕಾಶ ನೀಡುವ ಬದಲು ಬರೆಯುವ ಸುದ್ದಿಯ ನಿಖರತೆ ಮುಖ್ಯವಾಗಿರುತ್ತದೆ. ಯಾವುದೇ ಸಮಸ್ಯೆಗಳ ಸಂದರ್ಭ ಸಮಾಜದಲ್ಲಿ ಸಮತೋಲನ ಕಾಯ್ದುಕೊಳ್ಳುವುದಕ್ಕಿಂತಲೂ ಸತ್ಯವನ್ನು ಎತ್ತಿ ತೋರಿಸುವುದು ಪ್ರಮುಖವಾಗಬೇಕು. ಸಮಾಜದಲ್ಲಿ ಸಮತೋಲನ ಕಾಯ್ದುಕೊಳ್ಳುವ ಉz್ದÉÃಶದಿಂದ ಆರೋಪಿ ಮತ್ತು ಸಂತ್ರಸ್ತರನ್ನು ಒಂದೇ ಆಗಿ ಪರಿಗಣಿಸಲಾಗದು. ಸತ್ಯದ ಬಗ್ಗೆ ಬರೆಯುವಾಗ ಸಮಸ್ಯೆ ಖಂಡಿತಾ ಬರುತ್ತದೆ. ಆದರೆ ಸತ್ಯ ಬರೆಯುವಾಗ ಯಾವುದೇ ರೀತಿಯ ಯಾವುದೇ ಭಯ ಬೇಡ. ಜತೆಗೆ ಸಹಾನುಭೂತಿ ಬರವಣಿಗೆಯಲ್ಲಿ ಇದ್ದಾಗ ಯಾರಿಗೂ ಸಮಸ್ಯೆ ಬರುವುದಿಲ್ಲ. ನಾನು ನನ್ನ ಆತ್ಮಸಾಕ್ಷಿಗೆ ಸಮಧಾನ ಹೇಳಬೇಕೆಂಬುದರ ಅರಿವಿದ್ದಾಗ ಯಾವುದೇ ಸಮಸ್ಯೆ ಎದುರಾಗದು. ಸಮಾಜವೂ ನಿಧಾನಕ್ಕೆ ಗುಣಮುಖವಾಗುತ್ತದೆ. ಬೆಳಕು ಬಂದಾಗ ಕತ್ತಲು ಮಾಯವಾಗುವಂತೆ, ಆ ಬೆಳಕು ಪತ್ರಿಕೋದ್ಯಮವಾಗಬೇಕು. ಆ ಶಕ್ತಿಯನ್ನು ಪತ್ರಕರ್ತರು ತುಂಬಿಲ್ಲವಾದರೆ, ಸಮಾಜದಲ್ಲಿನ ಕತ್ತಲು ಹೋಗದು. ಇದರಿಂದ ಶೇ. 98 ಜನ ಶೇ. 2ರಷ್ಟು ಜನರಿಂದ ತೊಂದರೆಗೆ ಒಳಗಾಗುವುದು ಮುಂದುವರಿಯುತ್ತಲೇ ಸಾಗುತ್ತದೆ ಎಂದು ಎಚ್ಚರಿಕೆಯ ನುಡಿಗನ್ನಾಡಿದರು.ಜಾಗೃತ ವರದಿಗಾರಿಕೆ, ಹೃದಯವಂತಿಕೆಯ ಪತ್ರಿಕೋದ್ಯಮ ನಮ್ಮ ಅಗತ್ಯ. ಅದ್ಯಾವ ತೊಂದರೆ, ಸಮಸ್ಯೆ ಆದರೂ ಮುಂದಿನ ದಿನಗಳಲ್ಲಾದರೂ ಶಾಶ್ವತ ಶಾಂತಿ ನೆಲೆಯಾಗಲೇಬೇಕು. ಆವಾಗ ತಿರುಗಿ ನೋಡಿದಾಗ ಶಾಂತಿಗೆ ಕಾರಣರಾದ ಪತ್ರಕರ್ತರು ಕಾಣಸಿಗಬೇಕು. ಆ ನಿಟ್ಟಿನಲ್ಲಿ ಪತ್ರಕರ್ತರು ಕಾರ್ಯ ನಿರ್ವಹಿಸಬೇಕು ಎಂದು ಅವರು ಸಲಹೆ ನೀಡಿದರು.ವೇದಿಕೆಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಖಾದರ್ ಷಾ, ಪತ್ರಿಕಾ ಭವನ ಟ್ರಸ್ಟ್ನ ಅಧ್ಯಕ್ಷ ರಾಮಕೃಷ್ಣ ಆರ್. ಉಪಸ್ಥಿತರಿದ್ದರು.ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಪ್ರಶಸ್ತಿ ವಿಜೇತರ ಬಗ್ಗೆ ಮಾತನಾಡಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ದ.. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ಇಂದಾಜೆ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘದ ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್. ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು.`ಮAಗಳೂರಿನ ಸಾಮುದಾಯಿಕ ರಚನೆ ಅತ್ಯಂತ ಸೂಕ್ಷö್ಮವಾಗಿರುವುದು ಇಲ್ಲಿ ಬಂದ ಮೇಲೆ ಅರ್ಥವಾಗಿದೆ. ಇಲ್ಲ ಒಬ್ಬರನ್ನು ಇನ್ನೊಬ್ಬರನ್ನು ಅನುಮಾನದಿಂದ ನೋಡುತ್ತಾರೆ. ಸತ್ಯಕ್ಕಿಂತ ಸುಳ್ಳು ಅತ್ಯಂತ ವೇಗವಾಗಿ ವ್ಯಾಪಿಸುತ್ತದೆ. ನಿಜ ನೂರು ಜನಕ್ಕೆ ಹೋದರೆ ಸುಳ್ಳು ಸಾವಿರ ಜನಕ್ಕೆ ತಲುಪುತ್ತದೆ. ನಿಜ ಒಂದು ಗಂಟೆಯಲ್ಲಿ ಪ್ರಯಾಣಿಸಿದರೆ, ಸುಳ್ಳು ಅರ್ಧ ಸೆಕೆಂಡ್‌ನಲ್ಲಿ ರವಾನೆಯಾಗುತ್ತದೆ. ನಾವು ಮಾತನಾಡುತ್ತಿರುವಂತೆಯೇ ಅದರ ವಿರುದ್ದವಾಗಿ ಸುಳ್ಳು ಸಿದ್ಧವಾಗಿರುತ್ತದೆ. ಯಾವುದು ನಿಜ, ಸುಳ್ಳು ಎಂದು ಜನಕ್ಕೆ ಅರ್ಥವಾಗುವಂತಿರುವುದಿಲ್ಲ. ಇಲ್ಲಿನ ಶೇ. 98 ಜನರಿಗೆ ಶೇ. 2ರಷ್ಟು ಮಂದಿಯಿAದ ಆಗುತ್ತಿರುವ ಸಮಸ್ಯೆ ಒಂದು ರೀತಿಯ ರೋಗವಾಗಿದೆ. ಇದನ್ನು ಪತ್ರಿಕೋದ್ಯಮದ ಮೂಲಕವೂ ಗುಣಪಡಿಸಬಹುದು. ಆ ನಿಟ್ಟಿನಲ್ಲಿ ಮಂಗಳೂರು ಪತ್ರಕರ್ತರು ನಡೆಸುತ್ತಿರುವ ಬ್ರಾಂಡ್ ಮಂಗಳೂರು ಕೂಡಾ ಈ ಚಿಕಿತ್ಸೆಯ ಒಂದು ಪ್ರಕ್ರಿಯೆ.’*ಸುಧೀರ್ ಕುಮಾರ್ ರೆಡ್ಡಿ, ಪೊಲೀಸ್ ಕಮಿಷನರ್, ಮಂಗಳೂರು.

ಪ್ರಾದೇಶಿಕ ವಾರ್ತೆಗಳು

ಗಿಡಗಳ ಸಂರಕ್ಷಣೆಗೆ ಸಾಮೂಹಿಕ ಜಾಗೃತಿ ಅಗತ್ಯ-ರಾಜೇಶ್ ಬಿ

ಮಂಗಳೂರು,ಜೂ.24;ಗಿಡಗಳ ಸಂರಕ್ಷಣೆಯ ಬಗ್ಗೆ ಸಾಮೂಹಿಕ ಜಾಗೃತಿ ಅಗತ್ಯ ವಿದೆ ಎಂದು ಮಂಗಳೂರು ವಲಯ ಅರಣ್ಯ ಅಧಿಕಾರಿ ರಾಜೇಶ್ ತಿಳಿಸಿದ್ದಾರೆ.ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮಾಚರಣೆಯ ಅಂಗವಾಗಿ ಅರಣ್ಯ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಸುರತ್ಕಲ್ ಕೋಡಿಕೆರೆ (ಎಸ್ ಟಿ ಪಿ )ಯಲ್ಲಿ ವನಮಹೋತ್ಸವ ಹಾಗೂ 50 ಗಿಡಗಳನ್ನು ನೆಡುವೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.ಜಾಗತಿಕ ತಾಪಮಾನ ಏರಿಕೆ,ಹವಾಮಾನದ ವೈಪರೀತ್ಯಗಳು ಸೇರಿದಂತೆ ಪರಿಸರದಲ್ಲಿನ ಸವಾಲುಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಲ್ಲಿ ಹಾಗೂ ಸಮಾಜದಲ್ಲಿ ಸಾಮಾಜಿಕ ವಾಗಿ ಜಾಗೃತಿ ಮೂಡಿಸಬೇಕಾಗಿದೆ. ಮಂಗಳೂರು ನಗರದಲ್ಲಿ 25ಸಾವಿರ ಗಿಡಗಳನ್ನು ಸಾರ್ವಜನಿಕರಿಗೆ ವಿತರಿಸಲಾಗಿದೆ ಮತ್ತು ಈ ಗಿಡಗಳನ್ನು ನೆಟ್ಟು ಸಂರಕ್ಷಣೆಯ ನಿಗಾವಹಿಸುವ ಬಗ್ಗೆ ಮಾಹಿತಿ ಸಂಗ್ರಹಿಸ ಲಾಗುತ್ತಿದೆ.ಈಗಾಗಲೇ ಸುಮಾರು 9000 ಗಿಡಗಳನ್ನು ಅರಣ್ಯ ಇಲಾಖೆ ಯವತಿಯಿಂದ ನೆಡಲಾಗಿದೆ.ಈ ನಿಟ್ಟಿನಲ್ಲಿ ಸಾಮೂಹಿಕ ಸಹಭಾಗಿತ್ವ ದ ಅಗತ್ಯವಿದೆ ಎಂದು ರಾಜೇಶ್ ತಿಳಿಸಿದ್ದಾರೆ.ಸಮಾರಂಭದಲ್ಲಿ ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ,ಕರ್ನಾಟಕ ರಾಜ್ಯ ಕಾರ್ಯ ನಿರತ ಪತ್ರಕರ್ತರ ಸಂಘದ ಕಾರ್ಯ ಕಾರಿ ಸಮಿತಿ ಸದಸ್ಯರಾದ ಜಗನ್ನಾಥ ಶೆಟ್ಟಿ ಬಾಳ, ಇಬ್ರಾಹಿಂ ಅಡ್ಕಸ್ಥಳ,ಸುರತ್ಕಲ್ ಅರಣ್ಯವಲಯದ ಉಪ ಅರಣ್ಯಾಧಿಕಾರಿ ಶ್ರವಣ್ ಕುಮಾರ್, ಸುರತ್ಕಲ್ ಬೀಟ್ ಅರಣ್ಯ ಅಧಿಕಾರಿ ಗಂಗಾಧರ್, ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇ 0ದ್ರ ಕುಂದೇಶ್ವರ,ಉಪಾಧ್ಯಕ್ಷ ಭಾಸ್ಕರ ರೈಕಟ್ಟಾ,ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್ ,ಕಾರ್ಯಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ,ಕೋಡಿಕೆರೆ ಎಸ್ ಟಿ ಪಿ ಗುತ್ತಿಗೆದಾರ ಶಾಂತರಾಜು ಮೊದಲಾದವರು ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ಮಂಗಳೂರು ಜಂಕ್ಷನ್ ಬಳಿ ಕಣ್ಣೂರು ಎಕ್ಸಪ್ರೆಸ್ ರೈಲು ಮೇಲೇರಗಿದ ದೈತ್ಯ ಮರ. ತಪ್ಪಿದ ಭಾರೀ ಅನಾಹುತ. ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಗಂಗಾಧರ್ ಗಾಂಧಿ ಸಹಿತ ನೂರಾರು ಪ್ರಯಾಣಿಕರು ಪಾರು

Breaking news ಬೆಂಗಳೂರು ಮಂಗಳೂರು ನಡುವೆ ಸಂಚರಿಸುತ್ತಿದ್ದ ಕಣ್ಣೂರು ಎಕ್ಸ್ಪ್ರೆಸ್ ರೈಲಿನ ಮೇಲೆ ಮಂಗಳೂರು ಜಂಕ್ಷನ್ ತಲುಪುವ ಸಂದರ್ಭದಲ್ಲಿ ಇಂದು ಮುಂಜಾನೆ ಪಡೀಲ್ ಸಮೀಪದಲ್ಲಿ ಮರವೊಂದು ರೈಲಿಗೆ ಒರಗಿದ ಪರಿಣಾಮ ಲೋಕೋ ಪೈಲೆಟ್ ದಿಡೀರ್ ರೈಲು ನಿಲ್ಲಿಸಿದ ಘಟನೆ ವರದಿಯಾಗಿದೆ. ತಕ್ಷಣ ಎಚ್ಚುತ್ತು ಕೊಂಡ ರೈಲುವೇ ಅಧಿಕಾರಿಗಳು ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿ ಪ್ರಯಾಣಿಕರ ಮೆಚ್ಚುಗೆಗೆ ಪಾತ್ರರಾದರು.ಈ ರೈಲಿನಲ್ಲಿ ಸಾಮಾಜಿಕ ಚಿಂತಕ NSCDF ಅಧ್ಯಕ್ಷ ಗಂಗಾಧರ್ ಗಾಂಧೀ ಸಂಚಾರಿಸುತ್ತಿದ್ದರು ಎನ್ನಲಾಗಿದೆ.

ಪ್ರಾದೇಶಿಕ ವಾರ್ತೆಗಳು

ಇಂದು ಸಂಜೆ 4ರಿಂದ 9.00ರ ತನಕ ಮಂಗಳೂರು ಟೌನ್‍ಹಾಲ್‍ನಲ್ಲಿ13ನೇ ಸೌಹಾರ್ದ ಸಂಗಮ

ಮಂಗಳೂರು: MPMLA’s ನ್ಯೂಸ್ ಮತ್ತು MPMLASNEWSTV 24×7 news portal ಇದರ ವತಿಯಿಂದ 13ನೇ ಸೌಹಾರ್ದ ಸಂಗಮವು ಜೂನ್ 24ರ ಮಂಗಳವಾರ ಸಂಜೆ 4.00ರಿಂದ 9.00ರ ತನಕ ಕುದ್ಮುಲ್ ರಂಗರಾವ್ ಪುರಭವನ (ಟೌನ್‍ಹಾಲ್) ಮಂಗಳೂರಿನಲ್ಲಿ ನಡೆಯಲಿದೆ. ಸೌಹಾರ್ದ ಸಂಗಮವನ್ನು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಮಾಜಿ ಸಚಿವ ಬಿ. ರಮಾನಾಥ ರೈ, ಇಂಟರ್‍ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟನ ಅಧ್ಯಕ್ಷ ಎ. ಸದಾನಂದ ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರು ಉದ್ಘಾಟಿಸಲಿದ್ದು, ಮಾಜಿ ಮೇಯರ್ ದಿವಾಕರ ಕದ್ರಿಯವರು ಸಭಾಧ್ಯಕ್ಷತೆ ವಹಿಸಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಅವರು ಸೌಹಾರ್ದ ಸಂದೇಶ ನೀಡಲಿದ್ದಾರೆ. ಸೌಹಾರ್ದ ಸಂಗಮದಲ್ಲಿ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್, ಮಾಜಿ ಸಂಸದ ನಳಿನ್‍ಕುಮಾರ್ ಕಟೀಲ್ ಮತ್ತು ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಅವರಿಗೆ ‘ಜನಸೇವಾ ಪ್ರಶಸ್ತಿ’ ನೀಡಿ ಗೌರವಿಸಲಾಗುವುದು. ಭಾರತೀಯ ರಿಸರ್ವ್ ಬ್ಯಾಂಕ್ ಉತ್ತರ ವಲಯದ ಮಾಜಿ ನಿರ್ದೇಶಕ ಸಹಕಾರ ರತ್ನ ಡಾ. ಅಗರಿ ನವೀನ್ ಭಂಡಾರಿಯವರಿಗೆ ‘ಸೌಹಾರ್ದ ರತ್ನ’ ಪ್ರಶಸ್ತಿ, ಇಂಡಿಯನ್ ಸೋಷಿಯಲ್ ಮತ್ತು ಕಲ್ಚರಲ್ ಸೆಂಟರ್ ಅಬುದಾಬಿಯ ಅಧ್ಯಕ್ಷ ಮಿತ್ರಂಪಾಡಿ ಜಯರಾಮ್ ರೈಯವರಿಗೆ ‘ಕರುನಾಡ ರತ್ನ’ ಪ್ರಶಸ್ತಿ, ಪುಣೆಯ ಖ್ಯಾತ ಮಕ್ಕಳ ತಜ್ಞ ಡಾ. ಸುಧಾಕರ ಶೆಟ್ಟಿಯವರಿಗೆ ‘ಸಮಾಜ ರತ್ನ’ ಪ್ರಶಸ್ತಿ, ರೋಹನ್ ಕಾರ್ಪೊರೇಶನ್ ಆಡಳಿತ ನಿರ್ದೇಶಕ ಡಾ. ರೋಹನ್ ಮೊಂತೆರೋ ಅವರಿಗೆ ‘ಉದ್ಯಮ ರತ್ನ’ ಪ್ರಶಸ್ತಿ, ಖ್ಯಾತ ಶಸ್ತ್ರ ಚಿಕಿತ್ಸಾ ತಜ್ಞ ಡಾ. ಶ್ರೀರಾಮ್ ಭಟ್ ಎಂ. ಅವರಿಗೆ ‘ವೈದ್ಯ ರತ್ನ’ ಪ್ರಶಸ್ತಿ, ಕೆ.ಎಂ.ಸಿ. ಮಂಗಳೂರಿನ ಅಸೋಸಿಯೇಟ್ ಪ್ರೊಫೆಸರ್ ಆಫ್ ಗ್ಯಾಸ್ಟ್ರೋ ಎಂಟರಾಲಜಿ ಡಾ. ಅನುರಾಗ್ ಜೆ. ಶೆಟ್ಟಿ ಅವರಿಗೆ ‘ಬೆಸ್ಟ್ ಡಾಕ್ಟರ್ಸ್ ಅವಾರ್ಡ್’, ಬಂಟ್ವಾಳ ಅನಂತಾಡಿಯ ಜನಪ್ರಿಯ ಗಿಡಮೂಲಿಕಾ ಆಯುರ್ವೇದ ನಾಟಿ ವೈದ್ಯ ಗಂಗಾಧರ ಕರಿಯ ಪಂಡಿತ್ ಅವರಿಗೆ ‘ಸೇವಾ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಕಾರ್ಯಕ್ರಮದಲ್ಲಿ ಮೂಡಬಿದ್ರೆ ಶಾಸಕ ಉಮಾನಾಥ್ ಎ. ಕೋಟ್ಯಾನ್, ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್, ಕೆಎಸ್‍ಆರ್‍ಟಿಸಿ ಡಿ.ಸಿ. ರಾಜೇಶ್ ಶೆಟ್ಟಿ, ಕರ್ನಾಟಕ ಸ್ಟೇಟ್ ಎಲೈಡ್ & ಹೆಲ್ತ್‍ಕೇರ್ ಕೌನ್ಸಿಲ್ ಅಧ್ಯಕ್ಷ ಡಾ. ಇಫ್ತಿಕಾರ್ ಅಲಿ, ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ, ಮಾಜಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ಮ್ಯಾನೇಜಿಂಗ್ ಡೈರೆಕ್ಟರ್ ವಿವೇಕ್ ಡಿ., ನ್ಯಾಯವಾದಿಗಳಾದ ಕೆ. ದಯಾನಂದ ರೈ, ಅರುಣ್ ಶೆಟ್ಟಿ, ಉದ್ಯಮಿ ಅಜಿತ್ ಚೌಟ, ಡಾ. ಸುಶಾಂತ್ ರೈ ಬೆಳ್ಳಿಪ್ಪಾಡಿ, ಎಂಸಿಸಿ ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ, ಎಂಸಿಎಫ್ ಲಿಮಿಟೆಡ್ ಎಚ್.ಆರ್.ನ ಡೆಪ್ಯೂಟಿ ಮೆನೇಜರ್ ದೀಕ್ಷಿತ್ ಶೆಟ್ಟಿ, ಕನ್ನಡ ಹಾಗೂ ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ. ಕರ್ನಾಟಕ ಜನಪದ ಪರಿಷತ್‍ನ ಜಿಲ್ಲಾಧ್ಯಕ್ಷ ಪ್ರವೀಣ್‍ಕುಮಾರ್ ಕೊಡಿಯಾಲ್‍ಬೈಲ್ ಮೊದಲಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್‍ನ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಪತ್ರಿಕಾ ಭವನದ ಅಧ್ಯಕ್ಷ ರಾಮಕೃಷ್ಣ ಆರ್., ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಚಲನಚಿತ್ರ ನಿರ್ದೇಶಕ-ಪತ್ರಿಕೋದ್ಯಮಿ ಪ್ರಕಾಶ್ ಪಾಂಡೇಶ್ವರ, ರಾಜ್ಯ ಪತ್ರಕರ್ತ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ್ ಶೆಟ್ಟಿ ಬಾಳ, ಸಹಕಾರಿ ನೌಕರರ ಸಹಕಾರ ಸಂಘ (ರಿ)ದ ಅಧ್ಯಕ್ಷ ಎಸ್. ಜಗದೀಶ್ಚಂದ್ರ ಸೂಟರ್‍ಪೇಟೆ, ನಮ್ಮ ಕುಡ್ಲ ಟಿ.ವಿ. ಚಾನೆಲ್‍ನ ಆಡಳಿತ ನಿರ್ದೇಶಕ ಲೀಲಾಕ್ಷ ಬಿ. ಕರ್ಕೆರ, ಯುವವಾಹಿನಿ ಕೇಂದ್ರ ಸಮಿತಿ ಮಾಜಿ ಅಧ್ಯಕ್ಷ ರಾಜೇಶ್ ಬಿ. ಮೊದಲಾದವರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಖ್ಯಾತ ಮೂತ್ರರೋಗ ತಜ್ಞ ಡಾ. ಸದಾನಂದ ಪೂಜಾರಿ, ನಿವೃತ್ತ ಸರಕಾರಿ ವೈದ್ಯಾಧಿಕಾರಿ ಡಾ. ಜೂಲಿಯಾನ್ ಸಲ್ಡಾನ, ನರರೋಗ ತಜ್ಞ ಡಾ. ಬಿ. ಶಿವಾನಂದ ಪೈ, ಡಿ. ದೇವರಾಜು ಅರಸು ರಾಜ್ಯ ಪ್ರಶಸ್ತಿ ಪುರಸ್ಕøತ ಸಮಾಜ ವಿಜ್ಞಾನಿ ಡಾ| ಎಂ. ಅಣ್ಣಯ್ಯ ಕುಲಾಲ್ ಉಳ್ತೂರು ಮೊದಲಾದವರು ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ.ಕಾರ್ಯಕ್ರಮದಲ್ಲಿ ಸುವರ್ಣ ಕರ್ನಾಟಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕನ್ನಡ ಮತ್ತು ತುಳು ಚಿತ್ರ ಹಿನ್ನಲೆ ಗಾಯಕ ಶ್ರೀ ರವೀಂದ್ರ ಪ್ರಭು ಮತ್ತು ಬಳಗದವರಿಂದ ‘ರಾಗ್ ರಂಗ್’ ‘ಸೌಹಾರ್ದ ಸಂಜೆ ಸುಗಮ ಸಂಗೀತ ರಸಮಂಜರಿ’ ಇದೆ. ಈ ಕಾರ್ಯಕ್ರಮಕ್ಕೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ದ.ಕ. ಮಂಗಳೂರು ಇದರ ಪ್ರಾಯೋಜಕತ್ವ ಇದೆ. ಕಾರ್ಯಕ್ರಮದಲ್ಲಿ ತುಳುನಾಡ ರತ್ನ ದಿನೇಶ್ ಅತ್ತಾವರ ನಿರ್ದೇಶನದಲ್ಲಿ ‘ಯುವಜಾಗೃತಿ’ ಎನ್ನುವ ಹಾಡು ನಾಟಕಗಳ ಸಮ್ಮಿಶ್ರಣ ವಿನೂತನ ಶೈಲಿಯ ಜಾಗೃತಿ ಕಾರ್ಯಕ್ರಮವು ರಂಗಚಲನ ಮಂಗಳೂರು ಇವರಿಂದ ಪ್ರದರ್ಶನಗೊಳ್ಳಲಿದೆ. ಕಾರ್ಯಕ್ರಮಕ್ಕೆ ಉಚಿತ ಪ್ರವೇಶವಿದ್ದು, ಜಿಲ್ಲೆಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ‘ಸೌಹಾರ್ದ ಸಂಗಮ’ವನ್ನು ಯಶಸ್ವಿಗೊಳಿಸಬೇಕೆಂದು ಕಾರ್ಯಕ್ರಮದ ಸಂಘಟಕ ಡಾ. ಅಶೋಕ್ ಶೆಟ್ಟಿ ಬಿ.ಎನ್.ರವರು ವಿನಂತಿಸಿದ್ದಾರೆ.ವಂದನೆಗಳೊಂದಿಗೆ,ಇತೀ ತಮ್ಮ ವಿಶ್ವಾಸಿ ಅಶೋಕ್ ಶೆಟ್ಟಿ ಬಿ.ಎನ್. ಕಾರ್ಯಕ್ರಮದ ವೀಡಿಯೋ ಆಮಂತ್ರಣವನ್ನು ಈ ಕೆಳಗಿನ ಲಿಂಕ್ ಮೂಲಕ‌ ನೋಡಬಹುದು https://drive.google.com/file/d/1eT-L-LaJELwURG4lFHFXW2Zb2-u7R_hL/view?usp=sharing

ಪ್ರಾದೇಶಿಕ ವಾರ್ತೆಗಳು

MCC Bank hosts NRI ‘Insights and Interactions’ meet in Dubai

Dubai, June 16: MCC Bank hosted a successful ‘Insights & Interactions’ event on June 15 at Winny’s Restaurant, Karama, Dubai.The programme was spearheaded by Dayan D’Souza, a prominent Mangalorean personality based in Dubai.Speaking on the occasion, Dayan mentioned about the current state of affairs of the banking and MCC Bank. Walter Nandalike, another well-known community leader from Mangaluru and also managing director of Daijiworld Media, spoke about uniting the community around a common goal.The event featured an engaging session with Anil Lobo, chairman of MCC Bank Ltd, who shared valuable insights with the attendees. Anil updated on the status of MCC Bank prior to and post him taking over the charge of the bank and growth they’ve experienced over the years. He took the attendees over the history of MCC Bank. He also shared his future plans on growing the bank through new branches and online presence. The gathering brought together community members for a memorable evening of learning and networking.The event saw attendance from leading entrepreneurs, socio-cultural volunteers from Dubai including Joseph Mathias, Stephen Menezes.Roshan D’Silva skillfully compered the event. Alwyn Pinto proposed vote of thanks.The event, organised in collaboration with MCC Bank Ltd, was well-received, with participants appreciating the informative discussions and warm hospitality.

ಪ್ರಾದೇಶಿಕ ವಾರ್ತೆಗಳು

ದುಬೈನಲ್ಲಿ ಎಂಸಿಸಿ ಬ್ಯಾಂಕ್ ಎನ್‌ಆರ್‌ಐ ‘ಅಂತರ್ದೃಷ್ಟಿ ಮತ್ತು ಸಂವಾದ’ ಸಭೆ

ದುಬೈ, ಜೂನ್ 16: ಎಂಸಿಸಿ ಬ್ಯಾಂಕ್ ಜೂನ್ 15ರಂದು ದುಬೈಯ ಕರಾಮಾದ ವಿಜಿ ರೆಸ್ಟೋರೆಂಟ್‌ನಲ್ಲಿ ‘ಅಂತರ್ದೃಷ್ಟಿ ಮತ್ತು ಸಂವಾದ’ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿತು. ಈ ಕಾರ್ಯಕ್ರಮವನ್ನು ದುಬೈನಲ್ಲಿ ನೆಲೆಸಿರುವ ಪ್ರಸಿದ್ಧ ಮಂಗಳೂರು ಮೂಲದ ವ್ಯಕ್ತಿ ಶ್ರೀ ಡಯಾನ್ ಡಿಸೋಜಾ ಇವರು ನಡೆಸಿದರು.ಕಾರ್ಯಕ್ರಮದಲ್ಲಿ ಮಾತನಾಡಿದ ಡಯಾನ್’ರವರು, ಪ್ರಸ್ತುತ ಬ್ಯಾಂಕಿಂಗ್ ಪರಿಸ್ಥಿತಿ ಮತ್ತು ಎಂಸಿಸಿ ಬ್ಯಾಂಕ್‌ನ ಸ್ಥಿತಿಗತಿಯ ಬಗ್ಗೆ ಪ್ರಸ್ತಾಪಿಸಿದರು. ಮಂಗಳೂರು ಮೂಲದ ಮತ್ತೊಬ್ಬ ಪ್ರಖ್ಯಾತ ಸಮುದಾಯ ನಾಯಕ ಹಾಗೂ ದಾಯ್ಜಿವರ್ಲ್ಡ್ ಮೀಡಿಯಾದ ವ್ಯವಸ್ಥಾಪಕ ನಿರ್ದೇಶಕ ವಾಲ್ಟರ್ ನಂದಳಿಕೆ, ಸಮುದಾಯವನ್ನು ಒಂದು ಗುರಿಯತ್ತ ಏಕಮತದಿಂದ ಒಗ್ಗೂಡಿಸುವ ಮಹತ್ವದ ಕುರಿತು ಮಾತನಾಡಿದರು.ನಂತರ ಎಂಸಿಸಿ ಬ್ಯಾಂಕ್ ಲಿಮಿಟೆಡ್‌ನ ಅಧ್ಯಕ್ಷ ಅನಿಲ್ ಲೋಬೊ ಅವರೊಂದಿಗೆ ವಿಚಾರ ವಿನಿಮಯ ನಡೆಯಿತು. ಅವರು ಬ್ಯಾಂಕ್‌ನ ಪ್ರಗತಿ, ಅಧ್ಯಕ್ಷ ಸ್ಥಾನ ಸ್ವೀಕರಿಸುವ ಮೊದಲು ಹಾಗೂ ನಂತರದ ಸ್ಥಿತಿ ಮತ್ತು ಆ ವರ್ಷಗಳಲ್ಲಿ ಕಂಡ ಅಭಿವೃದ್ಧಿಯ ಕುರಿತು ವಿವರಿಸಿದರು. ಅವರು ಎಂಸಿಸಿ ಬ್ಯಾಂಕ್‌ನ ಇತಿಹಾಸವನ್ನು ಸವಿವರವಾಗಿ ವಿವರಿಸಿದರು. ಜೊತೆಗೆ ಹೊಸ ಶಾಖೆಗಳ ಸ್ಥಾಪನೆ ಮತ್ತು ಆನ್‌ಲೈನ್ ಹಾಜರಾತಿ ಮೂಲಕ ಬ್ಯಾಂಕ್ ವಿಸ್ತರಣೆಯ ಭವಿಷ್ಯ ಯೋಜನೆಗಳನ್ನೂ ಹಂಚಿಕೊಂಡರು. ಈ ಕಾರ್ಯಕ್ರಮವು ದುಬೈಯ ವಿವಿಧ ಉದ್ಯಮಿಗಳು, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕ್ಷೇತ್ರದ ಸ್ವಯಂಸೇವಕರನ್ನು ಒಂದೆಡೆ ಸೇರಿಸಿ ಸಾರ್ಥಕವಾದ ಸಂವಾದ ಮತ್ತು ನೆಟ್’ವರ್ಕಿಂಗ್‌ಗೆ ವೇದಿಕೆಯಾಯಿತು.ಜೋಸೆಫ್ ಮಾಥಿಯಾಸ್, ಸ್ಟೀಫನ್ ಮಿನೇಜಸ್ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮವನ್ನು ರೋಶನ್ ಡಿಸಿಲ್ವಾ ನಿರ್ವಹಿಸಿದರೆ, ಆಲ್ವಿನ್ ಪಿಂಟೊ ಧನ್ಯವಾದ ನೀಡಿದರು.

ಪ್ರಾದೇಶಿಕ ವಾರ್ತೆಗಳು

ಯೋಗಾಭ್ಯಾಸದಿಂದ ಚೇತೋಹಾರಿ ಜೀವನ-ಜಿಲ್ಲಾ ಆಯುಷ್ ಅಧಿಕಾರಿ ಡಾ.ಮೊಹಮ್ಮದ್. ಇಕ್ಬಾಲ್ ಕೆ.

ಮಂಗಳೂರು: ಬದಲಾದ ಜೀವನಶೈಲಿ ಹಾಗೂ ವೃತ್ತಿ ಬದುಕಿನ ಒತ್ತಡದಿಂದ ಹೆಚ್ಚಿನವರು ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ.ಇದನ್ನು ನಿವಾರಣೆ ಮಾಡಲು ಕೆಲಸ ಮಧ್ಯೆ ಒಂದಷ್ಟು ಹೊತ್ತು ಸರಳ ಯೋಗದ ಮೂಲಕ ವಿರಾಮ ಪಡೆಯಬೇಕು. ಇದರಿಂದ ಚೇತೋಹಾರಿಯಾಗಿ ಕೆಲಸ ಮಾಡಬಹುದೆಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ಮೊಹಮ್ಮದ್. ಇಕ್ಬಾಲ್ ಕೆ. ಹೇಳಿದರು. ಮಂಗಳೂರು ಪ್ರೆಸ್ ಕ್ಲಬ್ ಮತ್ತು ದ.ಕ.ಜಿಲ್ಲಾ ಆಯುಷ್ ಇಲಾಖೆ ನಗರದ ಪತ್ರಿಕಾ ಭವನದಲ್ಲಿ ಬುಧವಾರ ಜಿಲ್ಲೆಯ ಪತ್ರಕರ್ತರಿಗೆ ನಡೆದ ವಿರಾಮ ಯೋಗದ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಜೂ.21ರಂದು ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗಾಗಿ ಪೂರ್ವಭಾವಿಯಾಗಿ ಸಾರ್ವಜನಿಕರಿಗೆ ಯೋಗ ತರಬೇತಿ ನೀಡಲಾಗುತ್ತಿದೆ. ಉದ್ಯೋಗಿಗಳಿಗೆ ಕೆಲಸದ ಸ್ಥಳದಲ್ಲಿಯೇ ಕುಳಿತು ಮಾಡುವ ಯೋಗಾಸನ ಹಾಗೂ ಪ್ರಾಣಾಯಾಮದ ತರಬೇತಿಗಳನ್ನು ಆಯೋಜಿಸಲಾಗುತ್ತಿದೆ. ಯೋಗಾಭ್ಯಾಸದೊಂದಿಗೆ ಪರಿಸರ ಸ್ವಚ್ಛತೆ ಹಾಗೂ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.ಶಾರದಾ ನ್ಯಾಚುರೋಪತಿ ಕಾಲೇಜಿನ ಕಲಿಕಾ ವೈದ್ಯೆಯರಾದ ಗಾಯತ್ರಿ ಮತ್ತು ಸುಜಿತಾ ವಿರಾಮ ಯೋಗ ಪ್ರಾತ್ಯಕ್ಷಿಕೆ ನೀಡಿದರು.ವೆನ್ಲಾಕ್ ಆಯುಷ್ ಆಸ್ಪತ್ರೆಯ ಯೋಗ ಮತ್ತು ಪ್ರಕೃತಿ ಚಿಕಿತ್ಸೆಯ ವೈದ್ಯಾಧಿಕಾರಿ ಡಾ.ಪ್ರಕಾಶ್.ಎ.ಜೆ. ಯೋಗ ಮತ್ತುಪ್ರಾಣಾಯಾಮದ ಬಗ್ಗೆ ಮಾಹಿತಿ ನೀಡಿದರು. ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು. ಉಳ್ಳಾಲ ತಾಲೂಕು ಆಯುಷ್ ಘಟಕದ ಆಡಳಿತ ವೈದ್ಯಾಧಿಕಾರಿ ಡಾ.ಸಹನಾ ಪಿ., ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ , ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಉಪಸ್ಥಿತರಿದ್ದರು. ಪ್ರೆಸ್ ಕ್ಲಬ್ ಉಪಾಧ್ಯಕ್ಷ ಮಹಮ್ಮದ್ ಆರಿಫ್ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು.

Scroll to Top