ಪ್ರಾದೇಶಿಕ ವಾರ್ತೆಗಳು

ಪ್ರಾದೇಶಿಕ ವಾರ್ತೆಗಳು

“90 ಎಮ್ ಎಲ್” ತುಳು ಸಿನಿಮಾ ಚಿತ್ರೀಕರಣ ಮುಕ್ತಾಯ

ಮಂಗಳೂರು: ಡಿ ಡಿ ಪ್ರೊಡಕ್ಷನ್ ಲಾಂಛನದಲ್ಲಿ ರಂಜಿತ್ ಸಿ ಬಜಾಲ್ ನಿರ್ದೇಶನದಲ್ಲಿ ಡೋಲ್ಪಿ ಡಿ ಸೋಜ ನಿರ್ಮಾಣದಲ್ಲಿ ತಯಾರಾದ “90 ಎಮ್ ಎಲ್” ತುಳು ಚಲನ ಚಿತ್ರದ ಚಿತ್ರೀಕರಣ ಸಂಪೂರ್ಣಗೊಂಡಿದೆ. ಸಿನಿಮಾವು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಚಿತ್ರೀಕರಣ ನಡೆದಿದೆ.ವಿನೀತ್ ಕುಮಾರ್ ಅಭಿನಯದ 90 ಎಮ್ ಎಲ್ ಸಿನಿಮಾದಲ್ಲಿ ರುಹಾನಿ ಶೆಟ್ಟಿ , ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ರೋಶನ್ ಶೆಟ್ಟಿ, ದೀಪಕ್ ರೈ ಪಾಣಾಜೆ, ಉಮೇಶ್ ಮಿಜಾರ್, ಪುಷ್ಪರಾಜ್ ಬೊಳ್ಳೂರು, ನಮಿತ , ಶೈಲಾಶ್ರೀ, ಧೃತಿ ನಟಿಸಿದ್ದಾರೆ. ರಂಜಿತ್ ಸಿ ಬಜಾಲ್ ಕಥೆ. ಚಿತ್ರಕಥೆ, ನಿರ್ದೇಶನ ಮಾಡಿದ್ದು, ಸಂಭಾಷಣೆ ತುಳಸಿದಾಸ್ ಮಂಜೇಶ್ವರ್, ಛಾಯಾಗ್ರಾಹಣ ಅರ್ಜುನ್ ಎಂವಿ, ಸಂಗೀತ ಸೃಜನ್ ಕುಮಾರ್ ತೋನ್ಸೆ, ಸಂಕಲನ ಸಚಿನ್ ರಾಮ್, ಪಿ ಆರ್ ಒ ಬಾಳ ಜಗನ್ನಾಥ ಶೆಟ್ಟಿ, ಡಿಸೈನ್ ಆಚಾರ್ಯ ಗುರು. 90 ಎಮ್ ಎಲ್ ತುಳು ಸಿನಿಮಾ ಪ್ರೇಕ್ಷಕರ ಅಭಿರುಚಿಗೆ ತಕ್ಕಂತೆ, ಹಾಸ್ಯ ಮನರಂಜನೆಯೊಂದಿಗೆ ಉತ್ತಮ ಕತೆಯನ್ನು ಒಳಗೊಂಡಿದೆ. ಖ್ಯಾತ ಕಲಾವಿದರು ಅಭಿನಯಿಸಿರುವ 90 ಎಮ್ ಎಲ್ ಸಿನಿಮಾ 2025 ರ ಒಳಗಡೆ ತೆರೆಕಾಣಲಿದೆ.

ಪ್ರಾದೇಶಿಕ ವಾರ್ತೆಗಳು

ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಎರಡು ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್ ಕೊಡುಗೆ

ಮಂಗಳೂರು, ಬೆಳ್ತಂಗಡಿ ತಾಲ್ಲೂಕಿನ ಕೊತ್ಲೂರು ಸರಕಾರಿ ಶಾಲೆಯ ಮಕ್ಕಳು ಶಾಲೆಯ ಆವರಣದಲ್ಲಿ ತಮ್ಮ ಕಲಿಕೆಯ ಭಾಗವಾಗಿ ತಾವೇ ಬೆಳೆಸಿದ ತರಕಾರಿ ಬೆಳೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾವೇರಿ ನಿವಾಸದಲ್ಲಿ ನೀಡಿ ಸಂಭ್ರಮಿಸಿದರು. ಮುಖ್ಯಮಂತ್ರಿಗಳು ಮಕ್ಕಳನ್ನು ಶ್ಲಾಘಿಸಿ ಶಾಲೆಗೆ ಎರಡು ಕಂಪ್ಯೂಟರ್ ಗಳನ್ಮು ಹಾಗೂ ಪ್ರೊಜೆಕ್ಟರ್ ಉಡುಗೊರೆಯಾಗಿ ನೀಡಿದರು.ಶಾಲೆಯ ಶಿಕ್ಷಕ ವೃಂದ ಮಕ್ಕಳ ಜೊತೆಗೆ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಮಚಂದ್ರ ಭಟ್, ಕಾಂಗ್ರೆಸ್ ಮುಖಂಡ ರಕ್ಷಿತ್ ಶಿವರಾಮ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸಹಭಾಗಿತ್ವದಲ್ಲಿ ಡಿಸೆಂಬರ್ 23 2018:ರಂದು ಕುತ್ಲುರು ಸರಕಾರಿ ಶಾಲೆಯಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಂಡಿತ್ತು.ಕಳೆದ ವಾರ ಕುತ್ಲುರು ಸರಕಾರಿ ಶಾಲೆಗೆ ಭೇಟಿ ನೀಡಿದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್ ಶಾಲೆಗೆ ಎರಡು ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್ ನೀಡುವುದಾಗಿ ಭರವಸೆ ನೀಡಿದ್ದರು. ಕೂಡಲೇ ಸ್ಪಂದಿಸಿ ಸರಕಾರಿ ಶಾಲೆಯ ಮಕ್ಕಳ ಬಹು ದಿನದ ಬೇಡಿಕೆ ಈಡೇರಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ಉಚಿತ ಶ್ರವಣ ತಪಾಸಣಾ ಶಿಬಿರ‌

ಮಂಗಳೂರು : ಟೀಮ್ ಈಶ್ವರ್ ಮಲ್ಪೆ ವತಿಯಿಂದ ದ.ಕ. ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ನಗರದ ಪತ್ರಿಕಾ ಭವನದಲ್ಲಿ ಹಮ್ಮಿಕೊಂಡ ಎರಡು ದಿನಗಳ ಉಚಿತ ಶ್ರವಣ ತಪಾಸಣಾ ಶಿಬಿರ ಹಾಗೂ ರಿಯಾಯಿತಿ ದರದಲ್ಲಿ ಶ್ರವಣ ಯಂತ್ರಗಳ ವಿತರಣೆ ಕಾರ್ಯಕ್ರಮ ಭಾನುವಾರ ಆರಂಭಗೊಂಡಿತು.ಶಿಬಿರದ ಫಲಾನುಭವಿ ಮರಿಯಮ್ಮ ಶಿಬಿರ ಉದ್ಘಾಟಿಸಿದರು.ಟೀಮ್ ಈಶ್ವರ್ ಮಲ್ಪೆ ತಂಡದ ಸಂಯೋಜಕ ಲವ ಬಂಗೇರ ಮಾತನಾಡಿ ” ಶ್ರವಣ ದೋಷ ಇರುವವರ ಜತೆ ಸಹಾನುಭೂತಿಯಿಂದ ವರ್ತಿಸಬೇಕು. ಅವರಿಗೆ ಮನೋ ಸ್ಥೈರ್ಯ ನೀಡಬೇಕು. ಶ್ರವಣ ಸಮಸ್ಯೆ ಇರುವವರಿಗೆ ನೆರವಾಗುವ ಉದ್ದೇಶದಿಂದ ಟೀಂ ಈಶ್ವರ್ ಮಲ್ಪೆ ಉಚಿತ ಶಿಬಿರ ಆಯೋಜಿಸುತ್ತಿದ್ದು , ಇದು 23ನೇ ಶಿಬಿರವಾಗಿದೆ ಎಂದರು.ಡಾ.ಅಂಕಿತ ಮಾತನಾಡಿ‌” ಹಿರಿಯ ನಾಗರಿಕರಿಗೆ ಶ್ರವಣ ಸಮಸ್ಯೆ ಸಾಮಾನ್ಯ. ಇಂತಹ ಸಂದರ್ಭದಲ್ಲಿ ಅವರಿಗೆ ಮಾನಸಿಕ ಬೆಂಬಲದ ಜೊತೆಗೆ ಶ್ರವಣ ಸಾಧನಗಳು ಸಹಕಾರಿಯಾಗಿದೆ ಎಂದರು.ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು.ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ಸ್ವಾಗತಿಸಿ, ಕಾರ್ಯಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ ವಂದಿಸಿದರು.‌ಕೋಶಾಧಿಕಾರಿ ಪುಷ್ಪರಾಜ್.ಬಿ.ಎನ್.ಕಾರ್ಯಕ್ರಮ ನಿರೂಪಿಸಿದರು.ನಗರದಪತ್ರಿಕಾ ಭವನದಲ್ಲಿ‌ ಏ.7ರಂದು‌‌ ಉಚಿತ ಶ್ರವಣ ತಪಾಸಣಾ ಶಿಬಿರ ನಡೆಯಲಿದ್ದು ಬೆಳಗ್ಗೆ 11ರೊಳಗೆ ಮೊಬೈಲ್ ಸಂಖ್ಯೆ 9902344399)ಸಂಪರ್ಕಿಸಿಹೆಸರು ನೋಂದಾಯಿಸಬಹುದು.ಪತ್ರಕರ್ತರ ಕುಟುಂಬದ ಸದಸ್ಯರು ಶಿಬಿರದ ಪ್ರಯೋಜನ ಪಡೆಯಬಹುದು‌

ಪ್ರಾದೇಶಿಕ ವಾರ್ತೆಗಳು

ಇಂದು ರೆಡ್ ಕ್ರಾಸ್ ಸೊಸೈಟಿಯಿಂದ ವಿಶ್ವ ಆರೋಗ್ಯ ದಿನಾಚರಣೆ

ಮಂಗಳೂರು : ಇಂಡಿಯನ್ರೆಡ್ ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕ, ಯೂತ್ ರೆಡ್ ಕ್ರಾಸ್ ಘಟಕ ಮಂಗಳೂರು ವಿ.ವಿ., ಯನೆಪೋಯ ಪರಿಗಣಿತ ವಿ.ವಿ. ಮತ್ತು ವಿ.ವಿ.ಕಾಲೇಜು ವತಿಯಿಂದ ವಿಶ್ವ ಆರೋಗ್ಯ ದಿನಾಚರಣೆ ಏ.7 ರಂದು ಬೆಳಗ್ಗೆ 9 ಕ್ಕೆ ನಗರದ ವಿ.ವಿ.ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ನಡೆಯಲಿದೆ.ರೆಡ್ ಕ್ರಾಸ್ ದ.ಕ.ಜಿಲ್ಲಾ ಸಮಿತಿಯ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ವಿ.ವಿ.ಕಾಲೇಜಿನ ಪ್ರಾಂಶುಪಾಲ ಪ್ರೊ.ಗಣಪತಿ ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ.ರೆಡ್ ಕ್ರಾಸ್ ಆರೋಗ್ಯ ಮತ್ತು ಪ್ರಥಮ ಚಿಕಿತ್ಸೆ ಉಪ ಸಮಿತಿ ಚೇರ್ಮನ್ ಡಾ.ಸಚ್ಚಿದಾನಂದ ರೈ, ಉಪಾಧ್ಯಕ್ಷ ಡಾ.ಸತೀಶ್ ರಾವ್, ಕಾರ್ಯದರ್ಶಿ ಕಿಶೋರ್ ಚಂದ್ರ ಹೆಗ್ಡೆ, ನಿರ್ದೇಶಕ ರಾದ ಡಾ.ಸುಮನ .ಬಿ., ಸಚೇತ್ ಸುವರ್ಣ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.ಯೇನೆಪೊಯ ಮೆಡಿಕಲ್ ಕಾಲೇಜಿನ ಅಸೋಸಿಯೇಟ್ ಪ್ರೊಫೆಸರ್ ಶ್ವೇತಾ ಪ್ರಭು ಮತ್ತು ಪ್ರತೀಕ್ಷಾ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ. ಮಂಗಳೂರು ವಿ.ವಿ.ಯ ಯೂತ್ ರೆಡ್ ಕ್ರಾಸ್ ನೋಡಲ್ ಅಧಿಕಾರಿ ಡಾ.ಗಾಯತ್ರಿ.ಎನ್., ಯೇನೆಪೊಯ ವಿ.ವಿ.ಯ ನೋಡಲ್ ಅಧಿಕಾರಿ ನಿತ್ಯಶ್ರೀ.ಬಿ.ವಿ. ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

ಪ್ರಾದೇಶಿಕ ವಾರ್ತೆಗಳು

ಶ್ರೀ ರಾಮಾಂಜನೇಯ ಭಜನಾ ಮಂದಿರದಲ್ಲಿ ಭಜನೋತ್ಸವ

ಮಂಗಳೂರು : ಅಶೋಕನಗರದ ಶ್ರೀ ರಾಮಾಂಜನೇಯ ಭಜನಾ ಮಂದಿರದಲ್ಲಿ ಶ್ರೀ ರಾಮನವಮಿ ಅಂಗವಾಗಿ ಭಾನುವಾರ 54ನೇ ವರ್ಷದ ಭಜನೋತ್ಸವ ನೆರವೇರಿತು.ಸಂಘದ ಸ್ಥಾಪಕ ಗೌರವಾಧ್ಯಕ್ಷ ಎಂ.ಸುಂದರ ಶೆಟ್ಟಿ ಮಾತನಾಡಿ ” ಶ್ರೀ ರಾಮಾಂಜನೇಯ ಭಜನಾ ಮಂದಿರ ಕಳೆದ ಆರು ದಶಕದಿಂದ ಧಾರ್ಮಿಕ, ಸಾಮಾಜಿಕ ಚಟುವಟಿಕೆಗಳ ಮೂಲಕ ಆಸ್ತಿಕ ಬಾಂಧವರನ್ನು ಒಗ್ಗೂಡಿಸುವ ಕಾರ್ಯದಲ್ಲಿ ನಿರತವಾಗಿದೆ” ಎಂದರು.ಧಾರ್ಮಿಕ ಮುಂದಾಳು ಮಾಧವ ಸುವರ್ಣ, ಸಂಜೀವ ರಾಮ್, ಉದ್ಯಮಿ ಸುಧಾಕರ ಆಳ್ವ, ಇಂಜಿನಿಯರ್ ಬಾಬಾ ಅಲಂಗಾರ್, ಹಿಂದೂ ಧಾರ್ಮಿಕ ಸೇವಾ ಸಂಘದ ಅಧ್ಯಕ್ಷ ಬಿ.ರಾಜ್‌ಗೋಪಾಲ್ ಶೆಟ್ಟಿ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಮಾಜಿ ಕಾರ್ಪೋರೇಟರ್ ಪದ್ಮನಾಭ ಅಮೀನ್, ಆಶಾ ಅಶೋಕನ್ ದೀಪ ಪ್ರಜ್ವಲನೆಗೊಳಿಸಿದರು.ಅರ್ಚಕ ರವಿಚಂದ್ರ ಶಿಬರೂರಾಯ, ಭಜನಾ ಮಂದಿರದ ಅಧ್ಯಕ್ಷ ಸತೀಶ ಪೂಜಾರಿ ಅಶೋಕ ನಗರ, ಉಪಾಧ್ಯಕ್ಷರಾದ ಸುಧಾಕರ.ಕೆ., ದಿನೇಶ ಸುವರ್ಣ, ಪ್ರಧಾನ ಕಾರ್ಯದರ್ಶಿ ರಿತೇಶ್.ಆರ್.ಕುಕ್ಯಾನ್, ಜತೆ ಕಾರ್ಯದರ್ಶಿಗಳಾದ ಪ್ರಸನ್ನ ಕೊಟ್ಟಾರಿ, ಮನೀಶ್ ಶೆಟ್ಟಿಗಾರ್, ಕೋಶಾಧಿಕಾರಿ ನಾರಾಯಣ ಕೋಡಿಕಲ್, ಸಂಘಟನಾ ಕಾರ್ಯದರ್ಶಿ ವಸಂತ್ ಪೂಜಾರಿ, ಪೂಜಾ ಸಂಯೋಜಕರಾದ ಗಣೇಶ್ ಶೆಣೈ, ಮನಮೋಹನ್ ದೇವಾಡಿಗ, ಭಜನಾ ಮಂದಿರ ಸೇವಾ ಟ್ರಸ್ಟ್ ನ ಅಧ್ಯಕ್ಷ ಸುರೇಶ್ ಕುಲಾಲ್, ಉಪಾಧ್ಯಕ್ಷ ಸತ್ಯರಂಜನ್ ರಾವ್, ಕೋಶಾಧಿಕಾರಿ ಬಿ.ಯಾದವ ಕುಂದರ್ ಮುಂತಾದವರು ಉಪಸ್ಥಿತರಿದ್ದರು.ಸೂರ್ಯೋದಯದಿಂದ ಸೂರ್ಯಾಸ್ತಮದವರೆಗೆ ವಿವಿಧ‌ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಿತು.ಶ್ರೀ ರಾಮಾಂಜನೇಯ ಭಜನಾ ಮಂದಿರದಲ್ಲಿ ಏ.7 ರಂದು ಬೆಳಗ್ಗೆ 10ರಿಂದ ಏಕಾದಶಿ ಪ್ರತಿಷ್ಠಾ ವರ್ಧಂತಿ ಕಲ್ಪೋಕ್ತ ಪೂಜೆ, ಕಲಶ ಶುದ್ದಿ, ಮಧ್ಯಾಹ್ನ 12ಕ್ಕೆ ಮಹಾಪೂಜೆ ಹಾಗೂ ಅನ್ನ ಸಂತರ್ಪಣೆ ನಡೆಯಲಿದೆ

ಪ್ರಾದೇಶಿಕ ವಾರ್ತೆಗಳು

ಕ್ರೈಸ್ತರ ಪವಿತ್ರವಾರದಲ್ಲಿ ಎಸೆಸೆಲ್ಸಿ ಪರೀಕ್ಷಾ ಮೌಲ್ಯಮಾಪನವನ್ನು ರದ್ದುಗೊಳಿಸಲು ದ. ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರಿಗೆ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಅಧ್ಯಕ್ಷರು ಆಲ್ವಿನ್ ಡಿ ಸೋಜಾರವರ ನಿಯೋಗ ಓತ್ತಾಯ

ಜಗತ್ತಿನಾದ್ಯಂತ ಕ್ರೈಸ್ತ ಸಮುದಾಯವು ಈ ಮಾಸವನ್ನು, ಪವಿತ್ರ ಮಾಸವೆಂದು ಪರಿಗಣಿಸಿ ಎರಡು ಸಾವಿರ ವರ್ಷಗಳ ಹಿಂದಿನಿಂದಲೂ ಆಚರಿಸಿ ಸಿಕೊಂಡು ಬಂದಿರುತ್ತೇವೆ, ಈ ತಿಂಗಳಲ್ಲಿ 40 ದಿವಸ ಉಪವಾಸವನ್ನು ನಡೆಸಿ ಚರ್ಚುಗಳಲ್ಲಿ ಪ್ರಾರ್ಥನೆ ಯನ್ನು ನಡೆಸುತ್ತಾ ಪಾಪ ಪರಿಹಾರಕ್ಕಾಗಿ ಪ್ರಾರ್ಥಿಸುವ ಸಂಪ್ರದಾಯವನ್ನು ಹಿಂದಿನಿಂದಲೂ ನಡೆದುಕೊಂಡು ಬoದಿದೆ. ಶುಕ್ರವಾರ ಗುಡ್ ಫ್ರೈಡೇ ಈ ದಿನ ನಾವು ನಂಬಿರುವಂತ ಯೇಸು ಕ್ರಿಸ್ತರನ್ನು ಶಿಲುಬೆಗೆ ಏರಿಸಿದ ದಿನ ಗುರುವಾರವು ಶುಭ ಗುರುವಾರ ಹಾಗೇ ಆದಿತ್ಯವಾರದಂದು ಯೇಸು ಕ್ರಿಸ್ತರು ಪುನರ್ ಜನ್ಮವಾದ ದಿನವನ್ನು ನಾವು ಆಚರಿಸಿಕೊಂಡು ಬಂದಿರುತ್ತೇವೆ, ಈ ವರ್ಷ ಎಸೆಸೆಲ್ಸಿ ಪರೀಕ್ಷೆ ಮುಗಿದು, ಅದರ ಮೌಲ್ಯ ಮಾಪನ ವನ್ನು 15-04-2025 ರಿಂದ ಹತ್ತು ದಿನ ಹಮ್ಮಿಕೊಂಡಿರುವುದು ಇಡೀ ಕ್ರೈಸ್ತ ಸಮುದಾಯಕ್ಕೆ ಬೇಸರ ತಂದಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಅತೀ ಹೆಚ್ಚಿನ ಕ್ರೈಸ್ತ ಶಿಕ್ಷಕರು ಇರುವುದರಿಂದಾಗಿ ಅವರಿಗೆ ಮೌಲ್ಯಮಾಪನಕ್ಕೆ ಹೋದರೆ ಈಸ್ಟರ್ ಹಬ್ಬ, ಗುಡ್ ಫ್ರೈಡೇ, ಶುಭ ಗುರುವಾರವನ್ನು ಆಚರಿಸಲು ಅಸಾಧ್ಯವಾಗಿರುವುದರಿಂದ ಈ ದಿನಾಂಕದಂದು ಅವರಿಗೆ ರಿಯಾಯತಿಯನ್ನು ಕೇಳಿಕೊಂಡು ನಮ್ಮ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ರವರಲ್ಲಿ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಅಧ್ಯಕ್ಷರಾದ ಆಲ್ವಿನ್ ಡಿ ಸೋಜಾರವರ ನೇತತ್ವದಲ್ಲಿ ನಿಯೋಗವು ತೆರಳಿ ಈ ದಿನದಂದು ಕ್ರೈಸ್ತ ಶಿಕ್ಷಕರಿಗೆ ರಜೆ ನೀಡಬೇಕೆಂದು ಕೇಳಿಕೊಂಡಾಗ ಅವರು ತಕ್ಷಣ ನಮ್ಮ ಮನವಿಗೆ ಸ್ಪಂದಿಸಿ ಬೋರ್ಡ್ ಡೈರೆಕ್ಟರ್ ರವರಿಗೆ ಬೆಂಗಳೂರಿಗೆ ಕರೆ ಮಾಡಿ ಅವರಿಗೆ ಈ ದಿನದಂದು ಗುರುವಾರ ಮತ್ತು ಶುಕ್ರವಾರದಂದು ರಜೆಯನ್ನು ನೀಡಬೇಕೆಂದು ಕೇಳಿಕೊಂಡಾಗ ಅವರು ಡಿಡಿಪಿಯಲ್ಲಿ ಹಾಗೂ ಅಧಿಕಾರಿ ವರ್ಗದವರಲ್ಲಿ ಸಮಾಲೋಚಿಸಿ ಈ ರಜೆಯನ್ನು ನೀಡುವುದಾಗಿ ಭರವಸೆ ಯನ್ನು ನೀಡಿರುತ್ತಾರೆ. ಆದ್ದರಿಂದ ಮಾನ್ಯ ದಿನೇಶ್ ಗುಂಡೂರಾವ್ ವರಿಗೆ ನಾವು ಈ ಮೂಲಕ ಅಭಿನಂದನೆಯನ್ನು ಸಲ್ಲಿಸು ತ್ತಿದ್ದೇವೆ.ಮನವಿ ಸಲ್ಲಿಸುವಾಗ ಉಪಸ್ಥಿತಿ ಇದ್ದವರು ಶ್ರೀ ಆಲ್ವಿನ್ ಡಿ ಸೋಜಾ, ಅಧ್ಯಕ್ಷರು ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.),ಮಾಜಿ ಅಧ್ಯಕ್ಷರಾದ ಪಾವ್ಲ್ ರೋಲ್ಫಿ ಡಿ ಕೋಸ್ತಾ, ಫೆಜಾರ್ ವಲಯ ಅಧ್ಯಕ್ಷರಾದ ಸಂತೋಷ್ ಡಿ ಸೋಜಾ ಹಾಗೂ ಸಿಟಿ ವಲಯ ಅಧ್ಯಕ್ಷರಾದ ಅರುಣ್ ಡಿ ಸೋಜಾ, ಕೇಂದ್ರೀಯ ಪ್ರಧಾನ ಕಾರ್ಯದರ್ಶಿ ಯಾದ ಆಲ್ವಿನ್ ಮೊಂತೆರೋರವರು ಉಪಸ್ಥಿತರಿದ್ದರು

ಪ್ರಾದೇಶಿಕ ವಾರ್ತೆಗಳು

ಓಜೋನ್ ಪದರದ ನಾಶ ತಡೆಯಬೇಕಾಗಿದೆ -ಗ್ರೀನ್ ಹೀರೋ ಆಫ್ ಇಂಡಿಯಾ ಆರ್ ಕೆ ನಾಯರ್ ಅಭಿಮತ

ಮಂಗಳೂರು,ಎ.4;ಭೂಮಿಯ ಮೇಲೆ ಸೂರ್ಯನ( ನೆರಳಾತೀತ ವಿಕಿರಣ )ವಿಷ ಕಿರಣಪ್ರವೇಶದಂತೆ ನಮ್ಮನ್ನು ರಕ್ಷಿಸುತ್ತಿರುವ ಓಜೋನ್ ಪದರಕ್ಕೆ ಹಾನಿಯಾಗುತ್ತಿದೆ.ಇದಕ್ಕೆ ಹಸಿರು ಪರಿಸರ ನಾಶ ಒಂದು ಪ್ರಮುಖ ಕಾರಣ.ಇದನ್ನು ತಡೆಯಲು ಕಾಡು ಬೆಳೆಸಬೇಕಾಗಿದೆ.ಹಸಿರು ಪರಿಸರವ ನ್ನು ಸಂರಕ್ಷಿಸ ಬೇಕಾಗಿದೆ ಎಂದು ಗ್ರೀನ್ ಹೀರೋ ಆಫ್ ಇಂಡಿಯಾ ಖ್ಯಾತಿಯ ಆರ್.ಕೆ. ನಾಯರ್ ತಿಳಿಸಿದ್ದಾರೆ.ಅವರು ನಗರದ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕ,ಸ್ವಸ್ತಿಕಾ ನ್ಯಾಷನಲ್ ಬ್ಯುಸಿನೆಸ್ ಸ್ಕೂಲ್ ಊರ್ವ,ಗ್ಲೋಬಲ್ ಗ್ರೀನ್ ಇಕೋ ಫೌಂಡೇಶನ್ ಇದರ ವತಿಯಿಂದ ಹಮ್ಮಿಕೊಂಡ ಪರಿಸರ ಸಂರಕ್ಷಣೆ ಮೈ ಪ್ಲಾನೆಟ್ ಮೈ ಪ್ರೈಡ್ ವಿಷಯದ ಬಗ್ಗೆ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು.ಬೇಸಗೆ ಬಿಸಿ ಹೆಚ್ಚುತ್ತಿರುವುದು, ಹವಾಮಾನ ಬದಲಾವಣೆ ಎಲ್ಲಾ ವೈಪರೀತ್ಯ ಗಳಿಗೂ ಹಸಿರು ಪರಿಸರ ನಾಶವಾಗುತ್ತಿ ರುವುದಕ್ಕೂ ನಿಕಟ ಸಂಬಂಧ ಇದೆ. ಪ್ರಕೃತಿ ತನ್ನ ಸಂರಕ್ಷಣೆ ಗಾಗಿ ತನ್ನದೆ ಆದ ವ್ಯವಸ್ಥೆ ನಿರ್ಮಿಸಿದೆ.ಈ ಬಗ್ಗೆ ಅರಿವಿನ ಕೊರತೆ ಯಿಂದ ನಾವು ನಮಗೆ ಅಪಾಯವನ್ನು ತಂದುಕೊಳ್ಳುತ್ತಿದ್ದೇವೆ. ಭೂಮಿಯ ಮೇಲೆ ಸೂರ್ಯನ ವಿಷ ಕಿರಣಪ್ರವೇಶದಂತೆ ಇರುವ ಓಜೋನ್ ಪದರ ನಮಗೆ ಮಳೆ ಬಿಸಿಲಿನಿಂದ ರಕ್ಷಿಸುವ ಕೊಡೆಯ ರೀತಿ ಇದೆ. ಪರಿಸರ ಹಾನಿ,ಕಾಡು ನಾಶವಾಗಿರುವ ಪ್ರದೇಶದಲ್ಲಿ ಅದಕ್ಕೆ ಹಾನಿ ಯಾಗಿದೆ. ಈ ವಿಷ ಕಿರಣಗಳು ಭೂಮಿ ಯನ್ನು ಪ್ರವೇಶಿಸಿದರೆ ಮನುಷ್ಯರಿಗೆ ಅಪಾಯವನ್ನುಂಟು ಮಾಡುತ್ತದೆ.ಅದರ ರಂಧ್ರ ವನ್ನು ಸರಿಪಡಿಸಲು ಹಸುರು ಪರಿಸರದ ಸಂರಕ್ಷಣೆ, ಪರಿಸರ ಸಮತೋಲನದ ಕೆಲಸಗಳನ್ನು ನಾವು ಜೊತೆಯಾಗಿ ನಮ್ಮ ಭೂಮಿಯನ್ನು ಉಳಿಸಿಕೊಳ್ಳಬೇಕಾಗಿದೆ ಎಂದು ಆರ್ ಕೆ ನಾಯರ್ ತಿಳಿಸಿದ್ದಾರೆ.ಉದಾಹರಣೆಗೆ ಎರೆಹುಳು ತನ್ನ ಕೆಲಸ ಮಾಡುತ್ತದೆ.ಮಣ್ಣನ್ನು ಫಲವತ್ತಾಗಿ ಮಾಡುತ್ತದೆ.ಅದೇ ರೀತಿ ಪರಿಸರ ಸಂರಕ್ಷಣೆ ನಮ್ಮ ಮೊದಲ ಆಧ್ಯತೆಯಾಗಬೇಕು.ಓದು ಮುಖ್ಯವಲ್ಲ, ಜ್ಞಾನ ಸಂಪಾದನೆ ಮುಖ್ಯ ಎಂದು ಆರ್ ಕೆ ನಾಯರ್ ವಿವರಿಸಿದರು.ಸಮಾರಂಭದಲ್ಲಿ ಸ್ವಸ್ತಿಕ್ ನ್ಯಾಷನಲ್ ಬ್ಯುಸಿನೆಸ್ ಸ್ಕೂಲ್ ಇದರ ಅಧ್ಯಕ್ಷ ರಾಘವೇಂದ್ರ ಹೊಳ್ಳ,ಪ್ರಾಂಶುಪಾಲೆ ಮಾಲಿನಿ ಹೆಬ್ಬಾರ್ ,ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನಾಸ್ವಸ್ತಿಕಾ ನ್ಯಾಷನಲ್ ಬ್ಯುಸಿನೆಸ್ ಸ್ಕೂಲ್ ಘಟಕದ ಸಂಯೋಜಕಿ ವಿದ್ಯಾ ಲಕ್ಷ್ಮೀ,ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ,ಉಪಾಧ್ಯಕ್ಷ ಭಾಸ್ಕರ ರೈ ಕೆ,ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್ , ಕಾರ್ಯ ಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ ಮೊದಲಾದವರು ಉಪಸ್ಥಿತ ರಿದ್ದರು.ರಕ್ಷಿತಾ ಕಾರ್ಯಕ್ರಮ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ಬಲ್ಮಠ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಪೊರ್ಲು- 2025 ಅನಾವರಣ

ಮಂಗಳೂರು ನಗರದ ಬಲ್ಮಠ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಿಶ್ವ ವಿದ್ಯಾನಿಲಯ ಮಟ್ಟದ ಸರಕಾರಿ ಪದವಿ ಕಾಲೇಜುಗಳ ಕರಾವಳಿ ಜನಪದ ಉತ್ಸವ ಪದ ನಲಿಕೆದ ಸಿಂಗಾರ 2025 ಎಂಬ ಕಾರ್ಯಕ್ರಮ ಅನಾವರಣಗೊಂಡಿತು.ಸರಕಾರಿ ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತದೆ. ಇದಕ್ಕೆ ಕಾರಣ ಇಲ್ಲಿರುವ ಉತ್ತಮ ಶಿಕ್ಷಕರು ಎಂದು ಕಾಂತಾರಾ ಸಿನಿಮಾ ಖ್ಯಾತಿಯ ಹಾಸ್ಯ ನಟ ದೀಪಕ್ ರೈ ಪಾಣಾಜೆ ಅವರು ಅಭಿಪ್ರಾಯ ಪಟ್ಟರು. ಅವರುಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಬಲ್ಮಠದಲ್ಲಿ ನಡೆದ ವಿಶ್ವವಿದ್ಯಾನಿಲಯ ಮಟ್ಟದ ಕರಾವಳಿ ಜನಪದ ಕಲೋತ್ಸವವನ್ನು ಉದ್ಘಾಟಿಸಿ ಬಳಿಕ ಸಮಾರಂಭದಲ್ಲಿ ಮಾತನಾಡಿದರು..ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಿಯಾ ತನಿಷ್ಕ್ ಪ್ರಾಂತೀಯ ಮುಖ್ಯಸ್ಥ ಕೆ ಪ್ರಸನ್ನ ಕುಮಾರ್ ರವರು ತುಳುನಾಡಿನ ಸಂಸ್ಕೃತಿಯನ್ನು ಜೀವಂತವಾಗಿರಿಸಲು ಶಾಲಾ ಕಾಲೇಜುಗಳಲ್ಲಿ ಇಂತಹ ಕಾರ್ಯಕ್ರಮಗಳು ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳ ಸಂಘಟನೆಗೆ ಸಹಕಾರ ಹಾಗೂ ಪ್ರೋತ್ಸಾಹ ನೀಡುತ್ತಿರುವಂತಹ ಈ ಕಾಲೇಜಿನ ಪ್ರಾಂಶುಪಾಲರು ಅಭಿನಂದನಾರ್ಹರು ಎಂದರು.ಕಾರ್ಯಕ್ರಮದ ಮತ್ತೋರ್ವ ಅತಿಥಿ ಮಂಗಳೂರು ಮಿರರ್ ಪತ್ರಿಕೆಯ ಸಂಪಾದಕ ಡಾ.ರಾಜೇಶ್ ಕದ್ರಿ ಅವರು ಮಾತನಾಡಿ ಜನಪದ ಕಲೆಗಳಿಗೆ ಅದರದೇ ಆದ ಸ್ಥಾನಮಾನಗಳಿವೆ. ನಾಡಿನ ಸಂಸ್ಕೃತಿಗೆ ಜನಪದ ಕಲೆಗಳು ಅನನ್ಯ ಕೊಡುಗೆಗಳನ್ನು ನೀಡಿದೆ.ಯಕ್ಷಗಾನ, ಭೂತಾರಾಧನೆ,ನಾಗರಾಧನೆ, ಕಂಬಳ,ಕೋಳಿ ಅಂಕ ಸೇರಿದಂತೆ ನಾಡಿನ ಪ್ರತಿಯೊಂದು ಭಾಗದಲ್ಲೂ ತಮ್ಮದೇ ಆದಂತಹ ವಿಶಿಷ್ಟ ಪೂರ್ಣ ಕಲೆಗಳಿವೆ .ಜನಪದವನ್ನು ಜನರಿಗೆ ಪರಿಚಯಿಸುವ ನಿಟ್ಟಿನಲ್ಲಿ ಇಂಥ ಕಾರ್ಯಕ್ರಮಗಳು ಬಹಳ ಉತ್ತಮವಾಗಿದೆ.ವಿದ್ಯಾರ್ಥಿಗಳು ದಿನದ ಹೆಚ್ಚು ಸಮಯವನ್ನು ಆನ್ಲೈನ್ ನಲ್ಲಿ ಕಳೆದು ಅಪಾಯಕ್ಕೆ ಸಿಲುಕದೆ ಈ ಮಣ್ಣಿನ ಸಂಸ್ಕೃತಿಯನ್ನು ಜೀವಂತ ವಾಗಿಡುವ ನಿಟ್ಟಿನಲ್ಲಿ ಉತ್ಸುಕರಾಗಬೇಕೆಂದರು.ಹಿರಿಯ ರಂಗ ನಿರ್ದೇಶಕ ಜಗನ್ ಪವಾರ್ ಜನಪದದ ಉಳಿವಿಗೆ ಈ ಕಾರ್ಯಕ್ರಮವು ಒಂದು ಉತ್ತಮ ವೇದಿಕೆಯಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸಿರುವ ಎಲ್ಲಾ ತಂಡಗಳು ವಿಜೇತ ಖಂಡಗಳೆಂದು ಪರಿಗಣಿಸಿಕೊಂಡು,ಸೋಲನ್ನು ಗೆಲುವಾಗಿ ಸ್ವೀಕರಿಸಿ, ಮುಂದಿನ ದಿನಗಳಲ್ಲಿ ಮತ್ತಷ್ಟು ಸಾಧನೆಯನ್ನು ಮಾಡುವ ಮೂಲಕ ಮತ್ತೆ ಎದ್ದು ನಿಲ್ಲಬೇಕುಯುವ ಪೀಳಿಗೆಯಿಂದ ಮಾತ್ರವೇ ಜನಪದ ಸಂಸ್ಕೃತಿಯು ಉಳಿಯಲು ಸಾಧ್ಯ ಎಂದರು.ವಿದ್ಯಾರ್ಥಿ ಸ್ನೇಹಿ ಪ್ರಾಂಶುಪಾಲ ಡಾ. ಜಗನ್ನಾಥ್ ಬಾಳ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದರು. ಯುವ ಪೀಳಿಗೆಗೆ ಜನಪದ ಸಂಸ್ಕೃತಿಯ ಅರಿವನ್ನು ಮೂಡಿಸುವ ನಿಟ್ಟಿನಲ್ಲಿ ಸರಕಾರಿ ಪದವಿ ಕಾಲೇಜುಗಳ ವಿದ್ಯಾರ್ಥಿಗಳನ್ನು ಒಂದೆಡೆ ಸೇರಿಸಿ ಈ ಮೂಲಕ ಅವರಲ್ಲಿರುವ ಪ್ರತಿಭೆಯನ್ನು ಗುರುತಿಸುವ ಕೆಲಸವನ್ನು ನಮ್ಮ ಕಾಲೇಜಿನಲ್ಲಿ ನಿರಂತರ ಗೊಳಿಸಲಾಗಿದೆ. ನನ್ನ ನಿವೃತ್ತಿಯ ಬಳಿಕವು ಪೊರ್ಲು ಎಂಬ ಜನಪದ ಸಂಸ್ಕೃತಿ ಇದೇ ರೀತಿಯಲ್ಲಿ ಮುಂದುವರಿಯಲಿ ಎಂದು ತಮ್ಮ ಆಶಯವನ್ನು ವ್ಯಕ್ತಪಡಿಸಿದರು.ಚುಟುಕು ಸಾಹಿತಿ ಅನಿತಾ ಕೆ.ಯವರು ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಉಪಸ್ಥಿತಿದ್ದರು.ಜಿಲ್ಲೆಯ ವಿವಿಧ ಪದವಿ ಕಾಲೇಜುಗಳಿಂದ ಬಂದಿದ್ದಂತಹ ಸುಮಾರು 12 ತಂಡಗಳು ಸಾಂಸ್ಕೃತಿಕ ಜನಪದ ವೈವಿಧ್ಯತೆಗಳನ್ನು ವೇದಿಕೆಯಲ್ಲಿ ಪ್ರದರ್ಶಿಸಿದವು.ದಿನಪೂರ್ತಿ ನಡೆದ ಪೊರ್ಲು ಜನಪದ ಸಂಭ್ರಮದ ಕಾರ್ಯಕ್ರಮಕ್ಕೆ ತೀರ್ಪುಗಾರರಾಗಿ ಆಗಮಿಸಿದ್ದ ಡಾ. ರಾಜೇಶ್ ಕದ್ರಿ, ಜಗನ್ ಪವಾರ್, ಅನಿತಾ ಕೆ ಸೇರಿದಂತೆ ಕರಾವಳಿ ಜನಪದ ಉತ್ಸವದ ಸಂಚಾಲಕಿ ಶ್ರೀಮತಿ ರೇಖಾ .ಕೆ, ಲಲಿತಗಳ ಸಂಘದ ಕಾರ್ಯದರ್ಶಿ ಕುಮಾರಿ ರಶ್ಮೀ, ಕುಮಾರಿ ಲಕ್ಷ, ತುಳು ಚಾವಡಿ ಕಾರ್ಯದರ್ಶಿ ಕುಮಾರಿ ದಿಶಾ ಸೇರಿದಂತೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಹಾಗೂ ಕಾರ್ಯಕ್ರಮದ ಪ್ರೋತ್ಸಾಹಕರು ಉಪಸ್ಥಿತರಿದ್ದರು.ಕಾರ್ಯಕ್ರಮದ ಕೊನೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜು, ವಾಮದಪದವು ತಂಡವು ಪ್ರಥಮ,ಸರಕಾರಿ ಪ್ರಥಮ ದರ್ಜೆ ಕಾಲೇಜು ಕಾರ್ ಸ್ಟ್ರೀಟ್ ದ್ವಿತೀಯ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು,ಬೆಳ್ತಂಗಡಿ ತೃತೀಯ ಸ್ಥಾನವನ್ನು ಪಡೆಯಿತು.ಇದಲ್ಲದೆ ಉತ್ತಮ ಸಾಧನೆಯನ್ನು ತೋರಿದ ಪ್ರತಿಭೆಗಳಿಗೆ ವೈಯುಕ್ತಿಕ ವಿಭಾಗದಲ್ಲಿ ಬಹುಮಾನವನ್ನು ನೀಡಿ ಪ್ರೋತ್ಸಾಹಿಸಲಾಯಿತು.ಕಾಲೇಜು ಲಲಿತ ಕಲಾಸಂಘ ಮತ್ತು ತುಳು ಚಾವಡಿಯ ಸಂಘಟಕರಾಗಿರುವ ಡಾ. ಚಂದ್ರಶೇಖರ್ .ಕೆ ಕಾರ್ಯಕ್ರಮದ ಉದ್ದೇಶ ಮತ್ತು ಸಫಲತೆಯ ಬಗ್ಗೆ ಮನ ಸೆಳೆಯುವಂತೆ ಪ್ರಾಸ್ತಾವಿಕವಾಗಿ ಮಾತನಾಡಿದರುಧನ್ಯಾಶ್ರೀ ಕಾರ್ಯಕ್ರಮ ನಿರೂಪಿಸಿದರು.ವರ್ಷಿತ ಧನ್ಯವಾದ ಸಮರ್ಪಿಸಿದರು.

ಪ್ರಾದೇಶಿಕ ವಾರ್ತೆಗಳು

ಕ್ರೀಡೆ ಪ್ರತಿಯೊಬ್ಬರ ಬದುಕಿನಲ್ಲಿ ಹೊಸ ಚೈತನ್ಯವನ್ನು ಮೂಡಿಸುತ್ತದೆ : ಐ ರಮಾನಂದ ಭಟ್. ಸುರತ್ಕಲ್ ನಲ್ಲಿ ಹಿರಿಯರ ಕ್ರಿಕೆಟ್ ಹಬ್ಬ

ಸುರತ್ಕಲ್: ಪ್ರತಿಯೊಬ್ಬರ ಬದುಕಿನಲ್ಲಿ ಹೊಸ ಚೈತನ್ಯವನ್ನು ಮೂಡಿಸುವ ಹೊಸ ಆಲೋಚನೆಗಳನ್ನು ಬೆಳೆಸುವ ಅವಿಭಾಜ್ಯ ಅಂಗ ಕ್ರೀಡೆ ಎಂದು ಇಡ್ಯಾ ಸುರತ್ಕಲ್ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಐ ರಮಾನಂದ್ ಭಟ್ ನುಡಿದರು. ಅವರು ಸುರತ್ಕಲ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್ ಸುರತ್ಕಲ್ ಆಶ್ರಯದಲ್ಲಿ ರಾಜ್ಯ ಮಟ್ಟದ ಹಿರಿಯರ ಕ್ರಿಕೆಟ್ ಹಬ್ಬ ಸೀಸನ್ 4 ಸುರತ್ಕಲ್ ಗೋವಿಂದದಾಸ ಕಾಲೇಜಿನ ಕ್ರೀಡಾಂಗಣದಲ್ಲಿ ಜರಗಿದ ಕ್ರಿಕೆಟ್ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮಂಗಳೂರು ಕರಾವಳಿ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕಾಧ್ಯಕ್ಷರಾದ ಎಸ್ ಗಣೇಶ್ ರಾವ್ ಮಾತನಾಡಿ ಜಾತಿ, ಮತ, ಪಕ್ಷ ಮರೆತು ಈ ಕ್ರೀಡೆಯಲ್ಲಿ ಹಿರಿಯಲ್ಲೆರೂ ಭಾಗವಹಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ. ಕ್ರೀಡೆಯ ಜೊತೆಗೆ ಸಮಾಜಮುಖಿ ಕೆಲಸಗಳನ್ನು ಮಾಡುತ್ತಿರುವ ಸುರತ್ಕಲ್ ಸ್ಪೋರ್ಟ್ಸ್ ಕ್ಲಬ್ ಅಭಿನಂದನೆ ಸಲ್ಲಿಸುತ್ತೇನೆ ಮುಂದೆಯೂ ಇಂತಹ ಕಾರ್ಯ ನಿರಂತರ ನಡೆಯಲಿ ಎಂದರು. ವೇದಿಕೆಯಲ್ಲಿ ಮಾಜಿ ಶಾಸಕ ಬಿ.ಎ,ಮೊಯಿದಿನ್ ಬಾವ, ಜ್ಯೋತಿಷ್ಯರಾದ ನಾಗೇಂದ್ರ ಭಾರದ್ವಾಜ್, ಮಂಗಳೂರು ಸಿಸಿಬಿ ಸಹಾಯಕ ಪೋಲಿಸ್ ಅಯುಕ್ತರಾದ ಮನೋಜ್ ಕುಮಾರ್ ನಾಯ್ಕ್, ದಕ್ಷಿಣ ಕನ್ನಡ ಜಿಲ್ಲಾ ಬಸ್ಸು ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ರಾಮಚಂದ್ರ ಪಿಲಾರು, ಮಂಗಳೂರು ಎಸ್ ಡಿ ಸಿ ಸಿ ಬ್ಯಾಂಕ್ ನ ಉಪಾಧ್ಯಕ್ಷರಾದ ವಿನಯಕುಮಾರ್ ಸೂರಿಂಜೆ, ನಿತಿನ್ ಹೆಗಡೆ ಕಾವರಮನೆ, ದಕ್ಷಿಣ ಕನ್ನಡ ಜಿಲ್ಲಾ ಮಾಜಿ ಸೈನಿಕರ ಸಂಘದ ಅಧ್ಯಕ್ಷರಾದ ಶ್ರೀಕಾಂತ್ ಶೆಟ್ಟಿ ಬಾಳ, ಎಂ,ಅರ್,ಪಿ,ಎಲ್ ಹಣಕಾಸು ವಿಭಾಗದ ಅಧಿಕಾರಿ ಅನಿಲ್ ಕುಮಾರ್, ಕರಾಟೆ ಶಿಕ್ಷಕ ಈಶ್ವರ ಕಟೀಲು, ಉದ್ಯಮಿ ರಮೇಶ್ ಶ್ರೇಯಾಸ್ , ಸುರತ್ಕಲ್ ಡಿ.ಕೆ,ಅಸೋಸಿಯೇಟ್ ಮಾಲಕರಾದ ದೇವೇಂದ್ರ ಕೆ ಶೆಟ್ಟಿ, ಕಾಟಿಪಳ್ಳ ದಂತ ವೈದ್ಯರಾದ ಡಾ!ಅರವಿಂದ್ ಭಟ್, ಸುರತ್ಕಲ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್ ನ ಅಧ್ಯಕ್ಷರಾದ ಮಹಾಬಲ ಪೂಜಾರಿ ಕಡಂಬೋಡಿ, ಸಂಚಾಲಕಾದ ಮನೋಹರ ಶೆಟ್ಟಿ ಸೂರಿಂಜೆ, ಉದ್ಯಮಿ ಅನಿಲ್ ಶೆಟ್ಟಿ ತೇವು ಸೂರಿಂಜೆ ಮುಂತಾದವರು ಉಪಸ್ಥಿತರಿದ್ದರು. ಕಾರ್ಯದರ್ಶಿ ಕಿರಣ್ ಅಚಾರ್ಯ ಸ್ವಾಗತಿಸಿ, ಗುರುರಾಜ್ ವಂದಿಸಿದರು.

ಪ್ರಾದೇಶಿಕ ವಾರ್ತೆಗಳು

‘ಮಹಾ ಪರ್ವ’ ಗ್ರಂಥ ಬಿಡುಗಡೆ. ಸಾಧನಶೀಲರ ಬದುಕು – ಬವಣೆ ನಾಳಿನ ಜನಾಂಗಕ್ಕೆ ಪಾಠ: ಕೃಷ್ಣ ಜೆ.ಪಾಲೆಮಾರ್

ಮಂಗಳೂರು: ‘ಸಾಧಕರ ಬದುಕಿನಲ್ಲಿ ಏಳು ಬೀಳುಗಳು ಸಹಜ. ಅವರ ಸಾಧನೆಯನ್ನು ಕೃತಿ ರೂಪದಲ್ಲಿ ದಾಖಲಿಸಿದರೆ ಅದು ಮುಂದಿನ ಪೀಳಿಗೆಗೆದಾರಿದೀಪವಾಗುತ್ತದೆ. ಹಾಗೆಯೇ ಅಂಥವರ ಬದುಕು ಬವಣೆಗಳಿಂದ ನಾಳಿನ ಜನಾಂಗ ಸಾಕಷ್ಟು ಪಾಠವನ್ನೂ ಕಲಿತಂತಾಗುವುದು’ ಎಂದು ಮಾಜಿ ಸಚಿವ ಕೃಷ್ಣ.ಜೆ.ಪಾಲೆಮಾರ್ ಹೇಳಿದರು.ಹರಿಕಥಾ ಪರಿಷತ್ ಮಂಗಳೂರು ಮತ್ತು ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಗರದ ಪ್ರೆಸ್‌ಕ್ಲಬ್‌ನಲ್ಲಿ ಎಪ್ರಿಲ್ 4,ಶುಕ್ರವಾರ ನಡೆದ ಸಮಾರಂಭದಲ್ಲಿ ಹರಿದಾಸ ‘ದೇವಕಿ ತನಯ’ ಮಹಾಬಲ ಶೆಟ್ಟಿ ಕೂಡ್ಲು ಅವರ ‘ಮಹಾಪರ್ವ’ ಅಭಿನಂದನಾ ಸಂಪುಟವನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು. ‘ಹರಿಕಥಾ ಕ್ಷೇತ್ರದಲ್ಲಿ ಅನನ್ಯ ಸೇವೆ ಸಲ್ಲಿಸಿರುವ ಮಹಾಬಲ ಶೆಟ್ಟಿ ಅವರ ಸಾಧನೆಗಳು ‘ಮಹಾಪರ್ವ’ ದಲ್ಲಿ ದಾಖಲಾಗಿದ್ದು, ಮುಂದಿನ ದಿನಗಳಲ್ಲಿ ಮನೆ ಮನ ತಲುಪಲು ಸಾಧ್ಯವಾಗಲಿದೆ. ಭವಿಷ್ಯದ ಜನಾಂಗದ ಸಾಧನೆಗೆ ಅದುವೇ ಸ್ಫೂರ್ತಿಯಾಗುವುದು’ ಎಂದು ಅವರು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಡಾ.ಹರಿಕೃಷ್ಣ ಪುನರೂರು ಮಾತನಾಡಿ ‘ಮಕ್ಕಳಿಗೂ ಹರಿಕಥೆ ಕಲಿಸಿ ಅವರನ್ನು ಹರಿದಾಸರನ್ನಾಗಿ ಮಾಡುವ ಮೂಲಕ ಮಹಾಬಲ ಶೆಟ್ಟಿಯವರು ಧರ್ಮಜಾಗೃತಿಯ ಕೆಲಸ ಮಾಡುತ್ತಿರುವುದು ಶ್ಲಾಘನೀಯ’ ಎಂದು ಹೇಳಿದರು.‘ಮಹಾಪರ್ವ’ ಸಂಪಾದಕ, ಸಾಹಿತಿ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಅವರು ಮಾತನಾಡಿ, ‘ಮಹಾಬಲ ಶೆಟ್ಟಿ ಅವರು ಅನೇಕ ಸಂಕಷ್ಟಗಳನ್ನು ಅನುಭವಿಸಿ ಸಾಧನೆಯ ಶಿಖರವೇರಿದ್ದಾರೆ. 50 ವರ್ಷಗಳ ಹರಿಕಥಾಯಾನ ಪೂರೈಸಿದ ಅಪರೂಪದ ಹರಿದಾಸರು. ಹರಿಕಥೆ ಕಲೆಯನ್ನು ಉಳಿಸಿ, ಬೆಳೆಸಲು ಪ್ರಥಮ ಬಾರಿಗೆ ಹರಿಕಥಾ ಪರಿಷತ್ ಹುಟ್ಟು ಹಾಕಿದ್ದಾರೆ. ಹಲವಾರು ಹರಿದಾಸರನ್ನು ಸೃಷ್ಟಿಸಿದ್ದಾರೆ. ಅವರಿಗೆ ಎಂಭತ್ತು ತುಂಬಿದ ಸಂದರ್ಭದಲ್ಲಿ ಅವರ ಬದುಕಿನ ಚಿತ್ರಣದೊಂದಿಗೆ ಹರಿಕಥೆ ಮತ್ತದರ ಸೋದರ ಕಲೆಗಳ ಬಗ್ಗೆ ವಿದ್ವಾಂಸರು ಬರೆದ ಮಹತ್ವದ ಲೇಖನಗಳನ್ನೊಳಗೊಂಡ ಅಭಿನಂದನಾ ಸಂಪುಟ ಒಂದು ಸಂಗ್ರಾಹ್ಯ ಗ್ರಂಥವಾಗಿ ಹೊರಬರುತ್ತಿದೆ’ ಎಂದರು..ಮಹಾಬಲ ಶೆಟ್ಟಿ ಕೂಡ್ಲು ಅವರು ಮಾತನಾಡಿ, ‘ಶೇಣಿ ಗೋಪಾಲಕೃಷ್ಣ ಭಟ್ ಅವರಿಂದಾಗಿ ಹರಿದಾಸನಾದೆ. ಹರಿಕಥೆ ನಶಿಸುವ ಕಲೆ ಅಲ್ಲ. ಅದು ಇನ್ನಷ್ಟು ಪ್ರಭಾವಶಾಲಿ ರೂಪದಲ್ಲಿ ಮೂಡಿಬರುವಂತಾಗಬೇಕು’ ಎಂದರು. ದ.ಕ ಜಿಲ್ಲಾ ಕಸಾಪ ಅಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್, ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ , ವಕೀಲ ಗುರುಪ್ರಸಾದ್ ಶೆಟ್ಟಿ ಮುಖ್ಯ ಅತಿಥಿಗಳಾಗಿದ್ದರು.ಹರಿಕಥಾ ಪರಿಷತ್‌ನ ಖಜಾಂಜಿ ಡಾ.ಎಸ್.ಪಿ.ಗುರುದಾಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಚಾಲಕ ಸುಧಾಕರ ರಾವ್ ಪೇಜಾವರ ಸ್ವಾಗತಿಸಿ, ಪ್ರೊ.ಜಿ.ಕೆ.ಭಟ್ ವಂದಿಸಿದರು. ಹರಿಕಥಾ ಪರಿಷತ್‌ ಕಾರ್ಯದರ್ಶಿ ತೋನ್ಸೆ ಪುಷ್ಕಳ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

Scroll to Top